Dengue Fever: ಡೆಂಗ್ಯುವಿಗೆ ಬೆಂಗಳೂರಿನಲ್ಲಿ ಹೆಡ್‌ ಕಾನ್ಸ್‌ಟೇಬಲ್‌ ಬಲಿ, 11ಕ್ಕೇರಿದ ಸಾವಿನ ಸಂಖ್ಯೆ - Vistara News

ಬೆಂಗಳೂರು

Dengue Fever: ಡೆಂಗ್ಯುವಿಗೆ ಬೆಂಗಳೂರಿನಲ್ಲಿ ಹೆಡ್‌ ಕಾನ್ಸ್‌ಟೇಬಲ್‌ ಬಲಿ, 11ಕ್ಕೇರಿದ ಸಾವಿನ ಸಂಖ್ಯೆ

Dengue Fever: ರಾಜ್ಯದಲ್ಲಿ ಇದುವರೆಗೂ 10 ಜನ ಡೆಂಗ್ಯೂಗೆ ಬಲಿಯಾಗಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ನಾಲ್ವರು, ಶಿವಮೊಗ್ಗದಲ್ಲಿ ಇಬ್ಬರು, ಹಾಸನದಲ್ಲಿ ಇಬ್ಬರು, ಧಾರವಾಡ ಮತ್ತು ಹಾವೇರಿಯಲ್ಲಿ ಒಂದೊಂದು ಸಾವಾಗಿದೆ.

VISTARANEWS.COM


on

dengue fever death bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯಲ್ಲಿ (Bangalore) ಡೆಂಗ್ಯು ಜ್ವರದಿಂದ (Dengue Fever) ಬಳಲುತ್ತಿದ್ದ ಹೆಡ್ ಕಾನ್‌ಸ್ಟೇಬಲ್ (Head Constable) ಒಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ, ಬೆಂಗಳೂರಿನಲ್ಲಿ ಡೆಂಗ್ಯುವಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದೆ. ರಾಜ್ಯದಲ್ಲಿ ಇದುವರೆಗೆ 11 ಮಂದಿ ಡೆಂಗ್ಯು ಜ್ವರದಿಂದ (Dengue Death) ಮೃತಪಟ್ಟಿದ್ದಾರೆ.

ಇನ್‌ಫ್ಯಾಂಟ್ರಿ ರಸ್ತೆಯ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ CCRB (ಸಿಟಿ ಕ್ರೈಂ ರೆಕಾರ್ಡ್ಸ್ ಬ್ಯೂರೋ) ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮಶೇಖರ್, ಡೆಂಗ್ಯು ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.

ರಾಜ್ಯದಲ್ಲಿ (Karnataka) ಡೆಂಗ್ಯೂ (Dengue fever) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಇಲ್ಲಿಯವರೆಗೂ ರಾಜ್ಯದಲ್ಲಿ 19,923 ಡೆಂಗ್ಯೂ ಪ್ರಕರಣ ದಾಖಲಾಗಿ 20 ಸಾವಿರ ಸನಿಹದತ್ತ ಮುನ್ನುಗ್ಗುತ್ತಿದೆ. ರಾಜ್ಯದಲ್ಲಿ ಇದುವರೆಗೂ 10 ಜನ ಡೆಂಗ್ಯೂಗೆ ಬಲಿಯಾಗಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ನಾಲ್ವರು, ಶಿವಮೊಗ್ಗದಲ್ಲಿ ಇಬ್ಬರು, ಹಾಸನದಲ್ಲಿ ಇಬ್ಬರು, ಧಾರವಾಡ ಮತ್ತು ಹಾವೇರಿಯಲ್ಲಿ ಒಂದೊಂದು ಸಾವಾಗಿದೆ. ಜೊತೆಗೆ ಪ್ರತಿನಿತ್ಯ ಮೂನ್ನೂರರ ಸನಿಹಕ್ಕೆ ಕೇಸ್ ದಾಖಲಾಗುತ್ತಿವೆ. ಮಂಗಳವಾರ 259 ಡೆಂಗ್ಯೂ ಕೇಸ್ ದಾಖಲಾಗಿವೆ. ಬೆಂಗಳೂರು, ಧಾರವಾಡ, ಹಾವೇರಿ ಸೇರಿದಂತೆ ಎಂಟಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎರಡಂಕಿಯಲ್ಲಿ ಕೇಸ್ ದಾಖಲಾಗುತ್ತಿದೆ.

ಆರೋಗ್ಯ ಸಚಿವರ ಸೂಚನೆ

ರಾಜ್ಯದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು (Dengue Fever) ಕಂಡುಬಂದಿರುವ 10 ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಉಪನಿರ್ದೇಶಕರು ತೆರಳಿ ಭೇಟಿ ನೀಡಿ, ಮೇಲ್ವಿಚಾರಣೆ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜತೆ ಕಳೆದ ವಾರ ಸಭೆ ನಡೆಸಿದ್ದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು.

ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಇಷ್ಟರೊಳಗೆ ಡೆಂಗ್ಯೂ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಮುಖ ಕಂಡುಬರಬೇಕಿತ್ತು. ಪ್ರಕರಣಗಳು ವರದಿಯಾಗುತ್ತಿರುವುದನ್ನು ನೋಡಿದರೆ ಇನ್ನೂ ಎರಡು ತಿಂಗಳು ನಾವು ಅಲರ್ಟ್ ಆಗಿರಬೇಕು. ಹೀಗಾಗಿ ಜಿಲ್ಲಾಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಹಕಾರ ನೀಡಿ ಡೆಂಗ್ಯೂ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮ ಅಭಿಯಾನದ ರೀತಿಯಲ್ಲಿ ನಡೆಯಬೇಕು. ಜನರಲ್ಲಿ ಡೆಂಗ್ಯೂ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಆದರೆ ಡೆಂಗ್ಯೂ ಹತೋಟಿಗೆ ತರುವ ಕ್ರಮಗಳು ಸ್ಥಳದಲ್ಲಿ ಅನುಷ್ಠಾನಗೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಶೇಷವಾಗಿ ಆರೋಗ್ಯ ಇಲಾಖೆಯ ಉಪ ನಿರ್ದೇಶಕರ ಮಟ್ಟದ ಅಧಿಕಾರಿಗಳು ಡೆಂಗ್ಯೂ ಹೆಚ್ಚಿರುವ ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಟಿ ಮೇಲ್ವಿಚಾರಣೆ ನಡೆಸುವಂತೆ ಸಚಿವರು ಸೂಚನೆ ನೀಡಿದರು. ಕೇವಲ ಭೇಟಿ ಕೊಡುವುದಲ್ಲ. ಎರಡು ಮೂರು ದಿನಗಳವರೆಗೆ ಸ್ಥಳದಲ್ಲೇ ಇದ್ದು ಮಾನಿಟರ್ ಮಾಡಬೇಕು. ಸ್ಥಳದಲ್ಲಿ ಡೆಂಗ್ಯೂ ನಿಯಂತ್ರಣ ಕ್ರಮಗಳು ಅನುಷ್ಠಾನ ಆಗುತ್ತಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಇದನ್ನೂ ಓದಿ: Dengue Fever: ಡೆಂಗ್ಯೂ ಜ್ವರ ಕಡಿಮೆ ಆದ ಮೇಲೆ ಎಚ್ಚರ ತಪ್ಪಿದರೆ ಪ್ರಾಣಾಪಾಯ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Karnataka Nataka Akademi Award: ಉ.ಕ ಜಿಲ್ಲೆಯ ಮೂವರು ಕಲಾವಿದರಿಗೆ ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Karnataka Nataka Akademi Award: ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಯಲ್ಲಾಪುರ ತಾಲೂಕಿನ ಇಬ್ಬರು ಸೇರಿದಂತೆ ಜಿಲ್ಲೆಯ ಒಟ್ಟು ಮೂವರು ಕಲಾವಿದರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಗಿರಿಜಾ ಸಿದ್ದಿ, ಬಾಚನಳ್ಳಿ ಗ್ರಾಮದ ಸುರೇಶ ರಾಮಚಂದ್ರ ಸಿದ್ದಿ ಹಾಗೂ ನಿವೃತ್ತ ಶಿಕ್ಷಕ ಮಂಜುನಾಥ ತಿಮ್ಮಣ್ಣ ಭಟ್ಟ ಅವರ ಕಲಾ ಸೇವೆಯನ್ನು ಗಮನಿಸಿ, ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

VISTARANEWS.COM


on

Karnataka Nataka Akademi Award
Koo

ಯಲ್ಲಾಪುರ: ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು ತಾಲೂಕಿನ ಇಬ್ಬರು ಸೇರಿದಂತೆ ಜಿಲ್ಲೆಯ ಒಟ್ಟು ಮೂವರು ಕಲಾವಿದರು ಪ್ರಶಸ್ತಿಗೆ (Karnataka Nataka Akademi Award) ಭಾಜನರಾಗಿದ್ದಾರೆ.

ತಾಲೂಕಿನ ಮಂಚಿಕೇರಿಯ ಗಿರಿಜಾ ಸಿದ್ದಿ, ಬಾಚನಳ್ಳಿ ಗ್ರಾಮದ ಸುರೇಶ ರಾಮಚಂದ್ರ ಸಿದ್ದಿ ಹಾಗೂ ನಿವೃತ್ತ ಶಿಕ್ಷಕ ಮಂಜುನಾಥ ತಿಮ್ಮಣ್ಣ ಭಟ್ಟ ಅವರ ಕಲಾ ಸೇವೆಯನ್ನು ಗಮನಿಸಿ, ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.

ಗಿರಿಜಾ ಸಿದ್ದಿ

ಮಂಚಿಕೇರಿಯ ಅಣಲೇಸರ ಗ್ರಾಮದ ಗಿರಿಜಾ ಸಿದ್ದಿ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪರಶುರಾಮ ಗಿರಗೋಲಿ ಸಿದ್ದಿ ಹಾಗೂ ಲಕ್ಷ್ಮಿ ಸಿದ್ದಿಯವರ ಪುತ್ರಿಯಾಗಿದ್ದಾರೆ. ನೀನಾಸಮ್ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪಡೆದ ಸಿದ್ದಿ ಸಮುದಾಯದ ಪ್ರಥಮ ಮಹಿಳೆಯಾಗಿ ಹೊರಹೊಮ್ಮಿದರು. ಎರಡು ವರ್ಷಗಳ ಕಾಲ ನೀನಾಸಮ್ ತಿರುಗಾಟದ ನಟಿಯಾಗಿ, ವಸ್ತ್ರ ವಿನ್ಯಾಸಕಿಯಾಗಿ ಹಿನ್ನಲೆ ಗಾಯಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. ರಂಗಭೂಮಿಯ ಹಲವು ವಿಭಾಗಗಳಾದ ವಸ್ತ್ರ ವಿನ್ಯಾಸ, ರಂಗ ಸಜ್ಜಿಕೆ, ಪ್ರಸಾಧನ, ಮುಂತಾದವುಗಳಲ್ಲಿ ಹಲವು ವರ್ಷಗಳಿಂದ ಕನ್ನಡ ರಂಗಭೂಮಿಯಲ್ಲಿ ದುಡಿಯುತ್ತಿದ್ದಾರೆ.

ಕನ್ನಡ ಸಿನಿಮಾ ಲೋಕದಲ್ಲಿಯೂ ಸಹ ತಮ್ಮನ್ನು ತಾವು ತಮ್ಮ ಗಾಯನದೊಂದಿಗೆ ಗುರುತಿಸಿಕೊಂಡಿದ್ದಾರೆ. ದುನಿಯಾ ವಿಜಯ ನಿರ್ದೇಶನದ ‘ಸಲಗ’, ಪ್ರಿಯಾಂಕ ಉಪೇಂದ್ರ ನಟನೆಯ “ಉಗ್ರಾವತಾರ’ ಇತ್ತೀಚೆಗೆ ಬಿಡುಗಡೆಯಾದ “ಬ್ಲಿಂಕ್” ಸಿನಿಮಾಗಳಲ್ಲಿ ಹಿನ್ನಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಸಲಗ ಸಿನಿಮಾದ ‘ಟಿಣಿಂಗ್ ಮಿಣಿಂಗ್ ಟಿಶ್ಯ’ ಮತ್ತು ಉಗ್ರಾವತಾರ ಸಿನಿಮಾದ ‘ಬರ್ತಾಳ್ ಬರ್ತಾಳ್’ ಹಾಡಿಗೆ ಚಂದನವನ ಉತ್ತಮ ಗಾಯಕಿ ಪ್ರಶಸ್ತಿಗಳು ದೊರೆತಿವೆ.

ಸುರೇಶ ರಾಮಚಂದ್ರ ಸಿದ್ದಿ

ಸುರೇಶ ರಾಮಚಂದ್ರ ಸಿದ್ದಿ ಅವರು ಮಂಚಿಕೇರಿಯ ಬಾಚನಳ್ಳಿ ಗ್ರಾಮದ ಇವರ ತಂದೆ ರಾಮಚಂದ್ರ ಪುಟ್ಟಾ ಸಿದ್ದಿ ಸಣ್ಣಾಟದ ಕಲಾವಿದರಾಗಿದ್ದರಿಂದ ಅವರಿಂದ ಬಳುವಳಿಯಾಗಿ ಕುಣಿತ, ಸಂಗೀತ, ವಾದ್ಯ ನುಡಿಸುವಿಕೆಯನ್ನು ಕಲಿತರು. ಕೌಟುಂಬಿಕ ಮತ್ತು ಆರ್ಥಿಕ ಸಮಸ್ಯೆಯಿಂದ ಶಾಲೆಯ ಮೆಟ್ಟಿಲನ್ನೇ ಹತ್ತದ ಇವರು ತಮ್ಮ ಚಿಕ್ಕ ವಯಸ್ಸಿನಿಂದ ಕೃಷಿಯೊಂದಿಗೆ ಸಂಗ್ಯಾ-ಬಾಳ್ಯಾದ ನಟರಾಗಿ ಮತ್ತು ಹಿಮ್ಮೇಳದ ಭಾಗವತರಾಗಿದ್ದಾರೆ.

ಕರ್ನಾಟಕದ ಪ್ರಮುಖ ನಿರ್ದೇಶಕರ ನಾಟಕಗಳಲ್ಲಿ ನಟರಾಗಿ, ವಾದಕರಾಗಿ ಕೆಲಸ ಮಾಡಿದ್ದಾರೆ. ಸಿದ್ದಿ ಡಮಾಮಿ ವಾದಕರಾಗಿ ಕರ್ನಾಟಕದ ಹಲವಾರು ಕಡೆ ತಮ್ಮ ತಂಡದ ಮೂಲಕ ಪ್ರದರ್ಶನ ನೀಡಿದ್ದಾರೆ. ಅವರು ಕಾಕನಕೋಟೆ, ಅಗ್ನಿವರ್ಣ, ಸತ್ತವರ ಕಥೆ ಅಲ್ಲ, ಮಿಸ್ಟರ್ ಪುಂಟಿಲಾ, ಕೋಟೆಮನೆ ಪೊಲೀಸ್ ಸ್ಟೇಷನ್, ಚೋರಚರಣದಾಸ, ತ್ರಿಪೆನ್ನಿ ಓಪೇರಾ, ಕಂತು, ಬೆಟ್ಟದ ಅರಸು, ಸೂರ್ಯಶಿಕಾರಿ ಮುಂತಾದ ಪ್ರಮುಖ ನಾಟಕಗಳಲ್ಲಿ ನಟರಾಗಿ ಹಾಗೂ ವಾದಕರಾಗಿ ಕೆಲಸ ಮಾಡಿದ್ದಾರೆ. ಹವ್ಯಾಸಿ ರಂಗಭೂಮಿಯಲ್ಲಿ ನಟರಾಗಿಯೂ, ವಾದಕರಾಗಿಯೂ ಕಾರ್ಯ ನಿರ್ವಹಿಸುತ್ತಾ, ತಮ್ಮ ಕುಟುಂಬದೊಂದಿಗೆ ಕೃಷಿ ಕಾಯಕ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ.

ಮಂಜುನಾಥ ತಿಮ್ಮಣ್ಣ ಭಟ್ಟ

1944 ರಲ್ಲಿ ಜನಿಸಿದ ಮಂಜುನಾಥ ತಿಮ್ಮಣ್ಣ ಭಟ್ಟ ಅವರು, 33 ವರ್ಷಗಳ ಕಾಲ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 5ನೇ ತರಗತಿಯಲ್ಲಿದ್ದಾಗ ರಂಗಭೂಮಿಗೆ ಪ್ರವೇಶಿಸಿ 20ಕ್ಕೂ ಅಧಿಕ ಏಕಾಂಕ ನಾಟಕಗಳಲ್ಲಿ ಅಭಿನಯ ಮಾಡಿರುತ್ತಾರೆ. ಹೊನ್ನಾವರದ ನವಿಲಗೋಣ ಗ್ರಾಮದ ಪ್ರಸಿದ್ಧ ನಾಟಕಕಾರರಾದ ರಾಮಚಂದ್ರ ಗಣೇಶ ಭಟ್ಟರಮಕ್ಕಿ ಇವರ ಶಿಷ್ಯರಾಗಿ ಅನೇಕ ವರ್ಷಗಳ ಕಾಲ ಕೆಲಸ ಮಾಡಿದ್ದಾರೆ.

ರಂಗ ನಟ, ನಿರ್ದೇಶಕರಲ್ಲದೇ ‘ಸ್ತ್ರೀ’ ವೇಷದಲ್ಲಿ ಕೂಡ ತಾಯಿ ಪಾತ್ರವನ್ನು ಹಲವಾರು ನಾಟಕಗಳಲ್ಲಿ ನಿರ್ವಹಿಸಿದ್ದಾರೆ. ಕಥಾನಾಯಕ, ಖಳನಾಯಕ, ಹಾಸ್ಯಪಾತ್ರ, ಪೋಷಕ ಪಾತ್ರ ಹೀಗೆ ಹಲವಾರು ವಿಭಿನ್ನ ಪಾತ್ರಗಳಲ್ಲಿ ಮತ್ತು ವಿಭಾಗಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.

ಈ ಮೂವರ ಸಾಧನೆಗೆ ಮಂಚಿಕೇರಿ ರಂಗಸಮೂಹದ ಅಧ್ಯಕ್ಷ ರಾಮಕೃಷ್ಣ ಭಟ್ಟ ದುಂಡಿ, ಕಲಾವಿದ ಎಂ.ಕೆ. ಭಟ್ ಯಡಳ್ಳಿ ಹಾಗೂ ರಂಗ ಸಮೂಹದ ಎಲ್ಲ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Continue Reading

ಬೆಂಗಳೂರು

Bengaluru Power Cut: ಆ.11ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Bengaluru Power Cut: ಬೆಂಗಳೂರು ನಗರದ 66/11 ಕೆ.ವಿ ಅಬ್ಬಿಗೆರೆ ಎಂಯುಎಸ್‌ಎಸ್‌ 2 ನೇ ರನ್ 11ಕೆವಿ 1000 sqmm ಕೇಬಲ್ ಟಿಆರ್‌-1 ರಿಂದ ಬ್ಯಾಂಕ್-1 ಮತ್ತು ಟಿಆರ್‌-2 ರಿಂದ ಬ್ಯಾಂಕ್-2 ಗೆ ಐಸೊಲೇಟರ್ ಕೆಲಸ ಮತ್ತು ವಾರ್ಷಿಕ ನಿರ್ವಹಣೆಗಾಗಿ, 11ಕೆವಿ ಬ್ರೇಕರ್, ಬಸ್ ಜಿಒಎಸ್‌ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಆ.11 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

VISTARANEWS.COM


on

Bengaluru power cut
Koo

ಬೆಂಗಳೂರು: ನಗರದ 66/11 ಕೆ.ವಿ ಅಬ್ಬಿಗೆರೆ ಎಂಯುಎಸ್‌ಎಸ್‌ 2 ನೇ ರನ್ 11ಕೆವಿ 1000 sqmm ಕೇಬಲ್ ಟಿಆರ್‌-1 ರಿಂದ ಬ್ಯಾಂಕ್-1 ಮತ್ತು ಟಿಆರ್‌-2 ರಿಂದ ಬ್ಯಾಂಕ್-2 ಗೆ ಐಸೊಲೇಟರ್ ಕೆಲಸ ಮತ್ತು ವಾರ್ಷಿಕ ನಿರ್ವಹಣೆಗಾಗಿ, 11ಕೆವಿ ಬ್ರೇಕರ್, ಬಸ್ ಜಿಒಎಸ್‌ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಆ.11 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಇದನ್ನೂ ಓದಿ: Kannada New Movie: ಸಾಮಾಜಿಕ ಕಳಕಳಿಯ ‘ವಿಕಾಸ ಪರ್ವ’ಕ್ಕೆ ಸಾಥ್ ನೀಡಿದ ಪ್ರಣಯರಾಜ

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ರಾಘವೇಂದ್ರ ಲೇಔಟ್, ಕಮ್ಮಗೊಂಡನಹಳ್ಳಿ, ಧನಪಾಲ್ ಲೇಔಟ್, ಶೆಟ್ಟಿಹಳ್ಳಿ, ಲಕ್ಷ್ಮೀಪುರ ಕ್ರಾಸ್, ಲಕ್ಷ್ಮೀಪುರ ಗ್ರಾಮ, ಶ್ರೀರಾಮ್ ಸಮೀಕ್ಷಾ ಅಪಾರ್ಟ್‌ಮೆಂಟ್, ಸಿಂಗಾಪುರ, ಭದ್ರಸ್ವಾಮಿ ಲೇಔಟ್, ಸಿಂಗಾಪುರ ಗಾರ್ಡನ್, ಅಬ್ಬಿಗೆರೆ ಗ್ರಾಮ, ನಿಸರ್ಗ ಲೇಔಟ್, ಲಕ್ಷ್ಮಿ ದೇವಸ್ಥಾನ ರಸ್ತೆ, ಕೆಂಪೇಗೌಡ ಉದ್ಯಾನ, ಕುವೆಂಪುನಗರ, ವಿಶ್ವೇಶ್ವರಯ್ಯ ಲೇಔಟ್‌, ವಡೇರಹಳ್ಳಿ, ಎಚ್.ವಿ.ವಿ. ಲೇಔಟ್‌, ಕಾನ್ಶಿರಾಮನಗರ, ನೇತಾಜಿ ಲೇಔಟ್, ಸೆವೆನ್ ಹಿಲ್ಸ್ ಕೌಂಟಿ, ಲಕ್ಷ್ಮೀಪುರ ಮುಖ್ಯ ರಸ್ತೆ, ಬ್ರಿಗೇಡ್ ಅಪಾರ್ಟ್‌ಮೆಂಟ್, ಐಸಿಟಿಎಸ್, ಕೆರೆಗುಡ್ಡದಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: Reliance Industries: ರಿಲಯನ್ಸ್ ಕಂಪನಿಯಿಂದ ಸರ್ಕಾರಕ್ಕೆ 1.86 ಲಕ್ಷ ಕೋಟಿ ರೂ. ತೆರಿಗೆ ಪಾವತಿ!

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

ಬೆಂಗಳೂರು

Kannada New Movie: ‘ಕೇದಾರ್ ನಾಥ್ ಕುರಿಫಾರಂ’ ಚಿತ್ರದ ಟ್ರೇಲರ್, ಹಾಡುಗಳು ರಿಲೀಸ್‌

Kannada New Movie: “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ, ಜೆ.ಕೆ. ಮೂವೀಸ್ ಲಾಂಛನದಲ್ಲಿ ಕೆ.ಎಂ. ನಟರಾಜ್ ನಿರ್ಮಿಸಿರುವ, ಶೀನು ಸಾಗರ್ ನಿರ್ದೇಶನದ “ಕೇದಾರ್ ನಾಥ್ ಕುರಿಫಾರಂ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಜೆ.ಕೆ. ಮೂವೀಸ್ ಲಾಂಛನದಲ್ಲಿ ಕೆ.ಎಂ. ನಟರಾಜ್ ನಿರ್ಮಿಸಿರುವ, ಶೀನು ಸಾಗರ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ “ಕೇದಾರ್ ನಾಥ್ ಕುರಿಫಾರಂ” ಚಿತ್ರದ (Kannada New Movie) ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕಣ್ಣೂರ್ ಜಗದೀಶ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಬಳಿಕ ಮಾತನಾಡಿದ ನಿರ್ದೇಶಕ ಶೀನು ಸಾಗರ್, ನಾನು “ದುನಿಯಾ” ಸೂರಿ ಅವರ ನಿರ್ದೇಶನದ ಚಿತ್ರಗಳಲ್ಲಿ ನಟನಾಗಿ ಹಾಗೂ ಸಹಾಯಕ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದೆ. ಛಾಯಾಗ್ರಾಹಕ ಸತ್ಯ ಹೆಗಡೆ ಅವರ ಬಳಿ ಛಾಯಾಗ್ರಹಣ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದೆ. ನಿರ್ದೇಶಕನಾಗಿ ಇದು ಎರಡನೇ ಚಿತ್ರ. ನಾನು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ಕಥೆ, ಸಂಭಾಷಣೆ ಹಾಗೂ ಸಹ ನಿರ್ದೇಶನ ರಾಜೇಶ್ ಸಾಲುಂಡಿ ಅವರದು. ಇದು ಪಕ್ಕಾ ಗ್ರಾಮೀಣ ಸೊಗಡಿನ ಸಿನಿಮಾ‌.

ಕಾಮಿಡಿ ಥ್ರಿಲ್ಲರ್ ಜಾನರ್‌ನ ಕಥಾ ಹಂದರ ಹೊಂದಿರುವ ಈ ಚಿತ್ರ ನೂರು ರೂಪಾಯಿ ಕೊಟ್ಟು ಟಿಕೆಟ್ ಪಡೆದ ಪ್ರೇಕ್ಷಕನಿಗೆ ಯಾವುದೇ ರೀತಿಯ ಬೇಸರ ಮಾಡದೆ ಮನೋರಂಜನೆಯ ಮಹಾಪೂರವನ್ನೇ ಹರಿಸುತ್ತದೆ. ರಿಯಾಲಿಟಿ ಶೋ ಮೂಲಕ ಗಮನ ಸೆಳೆದಿದ್ದ ಮಡೆನೂರ್ ಮನು ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಿರ್ಮಾಪಕ ಕೆ.ಎಂ. ನಟರಾಜ್ ಈ ಚಿತ್ರವನ್ನು ಆಗಸ್ಟ್ 30 ರಂದು ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ ಎಂದು ನಿರ್ದೇಶಕ ಶೀನು ಸಾಗರ್ ತಿಳಿಸಿದರು.

“ಕಾಲೇಜ್ ಕುಮಾರ”, “ಜಾನ್ ಜಾನಿ ಜನಾರ್ದನ್” ಚಿತ್ರಗಳಿಗೆ ಸಹ ನಿರ್ಮಾಪಕನಾಗಿದ್ದೆ. ನಿರ್ಮಾಪಕನಾಗಿ ಇದು ಮೊದಲ ಚಿತ್ರ. ನಾಯಕಿಯ ತಂದೆಯ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ನಟರಾಜ್.

“ಕಾಮಿಡಿ ಕಿಲಾಡಿಗಳು” ರಿಯಾಲಿಟಿ ಶೋ ನ ನಂತರ ನಾನು ನಟಿಸಿರುವ ಮೊದಲ ಚಿತ್ರವಿದು. ಹಳ್ಳಿ ಸೊಗಡಿನ ಈ ಚಿತ್ರದಲ್ಲಿ ಮನೋರಂಜನೆಗೆ ಬರವಿಲ್ಲ. ಮಂಜು ನನ್ನ ಪಾತ್ರದ ಹೆಸರು ಎಂದು ಮಡೆನೂರ್ ಮನು ತಿಳಿಸಿದರು.

ಇದನ್ನೂ ಓದಿ: Reliance Industries: ರಿಲಯನ್ಸ್ ಕಂಪನಿಯಿಂದ ಸರ್ಕಾರಕ್ಕೆ 1.86 ಲಕ್ಷ ಕೋಟಿ ರೂ. ತೆರಿಗೆ ಪಾವತಿ!

ಈ ಸಂದರ್ಭದಲ್ಲಿ ನಾಯಕಿ ಶಿವಾನಿ ಹಾಗೂ ನಟ ಮುತ್ತು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನೃತ್ಯ ನಿರ್ದೇಶಕ ನಾಗಭೂಷಣ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Book Release: ಬೆಂಗಳೂರಿನಲ್ಲಿ ಆ.10ರಂದು “ಆ ಮಧುರ ಕ್ಷಣಗಳು” ಪುಸ್ತಕ ಲೋಕಾರ್ಪಣೆ

Book Release: ಸ್ನೇಹ ಬುಕ್ ಹೌಸ್ ಪ್ರಕಟಿಸಿರುವ ಲೇಖಕಿ ರಮಾ ಶರ್ಮ ಅವರ ಚೊಚ್ಚಲ ಕೃತಿ “ಆ ಮಧುರ ಕ್ಷಣಗಳು” (ಒಂದು ಮಧುರಾನುಭವ) ಎಂಬ ಪುಸ್ತಕ ಲೋಕಾರ್ಪಣೆ ಸಮಾರಂಭವು ಬೆಂಗಳೂರು ನಗರದ ಕುಮಾರ ಕೃಪ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್‌ನಲ್ಲಿ ಆ.10 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

VISTARANEWS.COM


on

Book Release
Koo

ಬೆಂಗಳೂರು: ಸ್ನೇಹ ಬುಕ್ ಹೌಸ್ ಪ್ರಕಟಿಸಿರುವ ಲೇಖಕಿ ರಮಾ ಶರ್ಮ ಅವರ ಚೊಚ್ಚಲ ಕೃತಿ “ಆ ಮಧುರ ಕ್ಷಣಗಳು” (ಒಂದು ಮಧುರಾನುಭವ) ಎಂಬ ಪುಸ್ತಕ ಲೋಕಾರ್ಪಣೆ (Book Release) ಸಮಾರಂಭವು ಬೆಂಗಳೂರು ನಗರದ ಕುಮಾರ ಕೃಪ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್‌ನಲ್ಲಿ ಆ.10 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಜರುಗಲಿದೆ.

ಇದನ್ನೂ ಓದಿ: Toyota: ಗ್ರಾಮೀಣ ಯುವ ಜನತೆಗೆ ಟೊಯೊಟಾದಿಂದ ಉತ್ತಮ ತರಬೇತಿ, ಶಿಕ್ಷಣ; ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶ್ಲಾಘನೆ

ಕಾರ್ಯಕ್ರಮದಲ್ಲಿ ಸಾಹಿತಿ ಡಾ. ಜಯಂತಿ ಮನೋಹರ್ ಪುಸ್ತಕ ಲೋಕಾರ್ಪಣೆ ಮಾಡುವರು. ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಬಿ.ಎಲ್. ಶಂಕರ್ ಅಧ್ಯಕ್ಷತೆ ವಹಿಸುವರು. ಲೇಖಕಿ ಗಿರೀಜಾ ರೈಕ್ವಾ ಪುಸ್ತಕ ಪರಿಚಯ ಮಾಡುವರು.

ಇದನ್ನೂ ಓದಿ: Train services: ಎಡಕುಮೇರಿಯಲ್ಲಿ ದುರಸ್ಥಿ ಪೂರ್ಣ; ರೈಲುಗಳ ಪುನರ್‌ ಆರಂಭವಾದರೂ ವೇಗದ ಮಿತಿಗೆ ನಿರ್ಬಂಧ

ಸಮಾರಂಭದಲ್ಲಿ ಚಿತ್ರಕಲಾ ಪರಿಷತ್ತಿನ ಕಾರ್ಯದರ್ಶಿ ಶಶಿಧರ್ ರಾವ್ ಹಾಗೂ ಲೇಖಕಿ ರಮಾ ಶರ್ಮ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಾಶಕರಾದ ಕೆ.ಬಿ. ಪರಶಿವಪ್ಪ ಪ್ರಕಣಣೆಯಲ್ಲಿ ತಿಳಿಸಿದ್ದಾರೆ.

Continue Reading
Advertisement
Oats or Quinoa
ಆರೋಗ್ಯ36 mins ago

Oats or Quinoa: ಓಟ್ಸ್‌, ಕಿನೊವಾ- ಇವೆರೆಡರಲ್ಲಿ ಯಾವುದು ಬೆಸ್ಟ್?

Waqf Bill
ದೇಶ58 mins ago

Waqf Bill: ವಕ್ಫ್‌ ಕಾಯ್ದೆಗೆ ತಿದ್ದುಪಡಿ; 21 ಸದಸ್ಯರ ಸಮಿತಿ ರಚಿಸಿದ ಕೇಂದ್ರ, ಓವೈಸಿ, ತೇಜಸ್ವಿ ಸೂರ್ಯಗೆ ಸ್ಥಾನ

Neeraj Chopra
ಕ್ರೀಡೆ58 mins ago

Neeraj Chopra : ವಿನೇಶ್ ಪೋಗಟ್​​ಗೆ ಅನರ್ಹತೆ ಬಗ್ಗೆ ಮಾತನಾಡಿದ ನೀರಜ್ ಚೋಪ್ರಾ; ಏನಂದ್ರು ಅವರು?

LOve case
ಬಾಗಲಕೋಟೆ1 hour ago

Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

Muda Scam
ಪ್ರಮುಖ ಸುದ್ದಿ1 hour ago

Muda Scam: ಸಿಎಂ ವಿರುದ್ಧದ ಖಾಸಗಿ ದೂರಿನ ಅರ್ಜಿ ವಿಚಾರಣೆ; ಆ.13ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Israel-Hamas War
ವಿದೇಶ1 hour ago

Israel-Hamas War: ಪುತ್ರರ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! ಯಾಕೆ ಹೀಗೆ?

Karnataka Nataka Akademi Award
ಉತ್ತರ ಕನ್ನಡ2 hours ago

Karnataka Nataka Akademi Award: ಉ.ಕ ಜಿಲ್ಲೆಯ ಮೂವರು ಕಲಾವಿದರಿಗೆ ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Duniya Vijay bheema movie review
ಸ್ಯಾಂಡಲ್ ವುಡ್2 hours ago

Duniya Vijay: ಹೇಗಿದೆ ‘ಭೀಮ’ ಸಿನಿಮಾ? ಪ್ರೇಕ್ಷಕರು ಹೇಳೋದೇನು?

Bengaluru power cut
ಬೆಂಗಳೂರು2 hours ago

Bengaluru Power Cut: ಆ.11ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Kannada New Movie
ಬೆಂಗಳೂರು2 hours ago

Kannada New Movie: ‘ಕೇದಾರ್ ನಾಥ್ ಕುರಿಫಾರಂ’ ಚಿತ್ರದ ಟ್ರೇಲರ್, ಹಾಡುಗಳು ರಿಲೀಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 day ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 day ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 day ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌