Snake Bite: ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಸಾವು - Vistara News

ಕರ್ನಾಟಕ

Snake Bite: ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಸಾವು

Snake Bite: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಘಟನೆ ನಡೆದಿದೆ. ಗದ್ದೆಯಲ್ಲಿ ಮೇವು ತರಲು ಹೋಗಿದ್ದ ವೇಳೆ ಪೊದೆಯಲ್ಲಿದ್ದ ಹಾವು, ಬಾಣಂತಿಗೆ ಕಚ್ಚಿದೆ.

VISTARANEWS.COM


on

Snake Bite
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಮೃತಪಟ್ಟಿರುವ ಘಟನೆ (Snake Bite) ಜಿಲ್ಲೆಯ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗದ್ದೆಯಲ್ಲಿ ಮೇವು ತರಲು ತೆರಳಿದ್ದ ವೇಳೆ ಹಾವು ಕಚ್ಚಿದ್ದರಿಂದ ದುರಂತ ಸಂಭವಿಸಿದೆ.

ರಂಜಿತಾ (22) ಮೃತಪಟ್ಟ ಯುವತಿ. ಗದ್ದೆಯಲ್ಲಿ ಮೇವು ತರಲು ಹೋಗಿದ್ದ ವೇಳೆ ಪೊದೆಯಲ್ಲಿದ್ದ ಹಾವು, ಬಾಣಂತಿಗೆ ಕಚ್ಚಿದೆ. ಆದರೆ, ಈ ಬಗ್ಗೆ ಯುವತಿ ಗಮನಕ್ಕೆ ಬಂದಿಲ್ಲ. ಕೆಲಹೊತ್ತಿನ ಬಳಿಕ ಕುಟುಂಬಸ್ಥರು ನೋಡಿದಾಗ ಗದ್ದೆಯಲ್ಲಿ ರಂಜಿತಾ ಕುಸಿದು ಬಿದ್ದಿದ್ದಳು. ತಕ್ಷಣ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರಂಜಿತಾ ಮೃತಪಟ್ಟಿದ್ದಾಳೆ.

ಮೃತ ರಂಜಿತಾ 3 ವರ್ಷದ ಹೆಣ್ಣು ಹಾಗೂ 4 ತಿಂಗಳ ಹಸುಗೂಸು ಹೊಂದಿದ್ದಳು. ಆಸ್ಪತ್ರೆಯ ಶವಾಗಾರದ ಬಳಿ ಮೃತಳ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ | Road Accident : ಪ್ರತ್ಯೇಕ ಅಪಘಾತದಲ್ಲಿ ಆರು ಬೈಕ್‌ ಸವಾರರ ದುರ್ಮರಣ; ಓರ್ವನಿಗೆ ಗಂಭೀರ ಗಾಯ

ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

LOve case
LOve case

ಬಾಗಲಕೋಟೆ: ಮದುವೆಗೆ ಪೋಷಕರು ವಿರೋಧಿಸಿದಕ್ಕೆ ಪ್ರೇಮಿಗಳಿಬ್ಬರು (Love Case) ನೇಣಿಗೆ ಶರಣಾಗಿದ್ದಾರೆ. ಬಾಗಲಕೋಟೆಯ ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದಲ್ಲಿ ಘಟನೆ ನಡೆದಿದೆ.

ಸಚಿನ್ ದಳವಾಯಿ, ಪ್ರಿಯಾ ಮಡಿವಾಳರ ಮೃತ ಪ್ರೇಮಿಗಳು. ಇವರಿಬ್ಬರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಮನೆಯಲ್ಲಿ ಇವರಿಬ್ಬರ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಇದರಿಂದ ಮನನೊಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ.

ಮಹಾಲಿಂಗಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ .ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಆರು ಬೈಕ್‌ ಸವಾರರ ದುರ್ಮರಣ; ಓರ್ವನಿಗೆ ಗಂಭೀರ ಗಾಯ

ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಶಿವಮೊಗ್ಗ: ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ(12), ಸಂಪದ (6) ಮೃತರು.

ಗುರುವಾರ ರಾತ್ರಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಿಂದ ಮೃತದೇಹಗಳನ್ನು ಹೊರತೆಗೆದು ನಗರ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: ಕಾರ್ಪೊರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಿಎಸ್‌ಆರ್ ಹಣ ವಿನಿಯೋಗಿಸಲಿ: ದಿನೇಶ್ ಗುಂಡೂರಾವ್

Bengaluru News: ಆರೋಗ್ಯ ಕ್ಷೇತ್ರಕ್ಕೆ ಕಾರ್ಪೊರೇಟ್ ಕಂಪನಿಗಳು ಸಿಎಸ್‌ಆರ್‌ ಹಣ ಬಳಕೆಗೆ ಹೆಚ್ವಿನ ಆದ್ಯತೆ ನೀಡಬೇಕು ಎಂದು ತಿಳಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕದಲ್ಲಿ ಮಂಗನ ಕಾಯಿಲೆ ಹಾವಳಿ ಮೂರು ನಾಲ್ಕು ಜಿಲ್ಲೆಗಳಲ್ಲಿದೆ. ಕಾಯಿಲೆಗೆ ವ್ಯಾಕ್ಸಿನ್ ತಯಾರಿಸಬಹುದಾಗಿದ್ದು, ರಿಸರ್ಚ್ ವರ್ಕ್‌ಗಳಿಗೆ ಸಿಎಸ್‌ಆರ್ ವಿನಿಯೋಗವಾಗಬೇಕು ಎಂದು ಹೇಳಿದ್ದಾರೆ.

VISTARANEWS.COM


on

Bengaluru News
Koo

ಬೆಂಗಳೂರು: ಆರೋಗ್ಯ ಕ್ಷೇತ್ರಕ್ಕೆ ಕಾರ್ಪೊರೇಟ್ ಕಂಪನಿಗಳು ಸಿಎಸ್‌ಆರ್‌ ಹಣ ಬಳಕೆಗೆ ಹೆಚ್ವಿನ ಆದ್ಯತೆ ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. (Bengaluru News) ಬೆಂಗಳೂರಿನಲ್ಲಿ ಇಂದು ಸಿ-ಕ್ಯಾಂಪ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಪೊರೇಟ್ ಕಂಪನಿಗಳ ಫೌಂಡೆಶನ್ಸ್ ರೌಂಡಟೇಬಲ್ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಿಎಸ್‌ಆರ್ ಯೋಜನೆಗಳ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಹಲವು ಸುಧಾರಣೆ ತರಬಹುದು.‌ ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru Power Cut: ಆ.11ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಜನಸಾಮಾನ್ಯರ ಆರೋಗ್ಯ ಕಾಪಾಡುವತ್ತ ಹಲವು ಕಾರ್ಯಕ್ರಮಗಳನ್ನು ಇಲಾಖೆ ಹಮ್ಮಿಕೊಳ್ಳುತ್ತಿರುತ್ತದೆ. ವಿಶೇಷವಾಗಿ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಜನರ ಆರೋಗ್ಯ ರಕ್ಷಣೆಯತ್ತ ಹೆಚ್ವಿನ ಗಮನ ಹರಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಜನರ ತಪಾಸಣೆ ನಡೆಯಲಿದೆ. ಔಷಧಿಗಳು ಮನೆಬಾಗಿಲಿಗೆ ತಲುಪಲಿವೆ. ಈ ಯೋಜನೆಯಿಂದ ಸಾಕಷ್ಟು ಬದಲಾವಣೆಯನ್ನು ನಾವು ನಿರೀಕ್ಷಿಸುತ್ತಿದ್ದು, ಇಂಥಹ ದೊಡ್ಡ ಯೋಜನೆಯಲ್ಲಿ ಕಾರ್ಪೊರೇಟ್ ಕಂಪನಿಗಳು ಸಹ ಸಿಎಸ್‌ಆರ್ ಮೂಲಕ ತಮ್ಮ ಸೇವೆ ಸಲ್ಲಿಸಬಹುದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಗೃಹ ಆರೋಗ್ಯ ಕಾರ್ಯಕ್ರಮದಲ್ಲಿ ಅಗತ್ಯ ತಂತ್ರಜ್ಞಾನ ಒದಗಿಸುವತ್ತ ಕಂಪನಿಗಳು ತಮ್ಮ ಸಿಎಸ್‌ಆರ್ ಫಂಡ್ ವಿನಿಯೋಗಿಸಬಹುದು. ಅಲ್ಲದೇ ಕೆಎಫ್.ಡಿ ಯಂಥಹ ರೋಗಗಳಿಗೆ ಇಂದು ವ್ಯಾಕ್ಸಿನ್ ತಯಾರಿಸುವ ಅಗತ್ಯತೆ ಇದೆ. ಕರ್ನಾಟಕದಲ್ಲಿ ಮಂಗನ ಕಾಯಿಲೆ ಹಾವಳಿ ಮೂರು ನಾಲ್ಕು ಜಿಲ್ಲೆಗಳಲ್ಲಿದೆ. ಕಾಯಿಲೆಗೆ ವ್ಯಾಕ್ಸಿನ್ ತಯಾರಿಸಬಹುದಾಗಿದ್ದು, ರಿಸರ್ಚ್ ವರ್ಕ್‌ಗಳಿಗೆ ಸಿಎಸ್‌ಆರ್ ವಿನಿಯೋಗವಾಗಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಆ.10ರಂದು “ಆ ಮಧುರ ಕ್ಷಣಗಳು” ಪುಸ್ತಕ ಲೋಕಾರ್ಪಣೆ

ಸಭೆಯಲ್ಲಿ ಇನ್ಫೋಸಿಸ್ ಫೌಂಡೇಶನ್, ಯುಸೈಡ್, ಜಿ.ಇ. ಹೆಲ್ತ್ ಕೇರ್, ಬಾಷ್ ಗ್ಲೋಬಲ್ ಸಾಫ್ಟ್‌ವೇರ್ ಟೆಕ್ನಾಲಜೀಸ್, ಅಸ್ಟ್ರಜೆನಕಾ, ಬಯೋಕಾನ್ ಫೌಂಡೇಶನ್, ಎಚ್‌ಸಿಎಲ್ ಫೌಂಡೇಶನ್, ಇಂಟೆಲ್ ಕಾರ್ಪೊರೇಶನ್, ಯುನಿಸೆಫ್, ಮೈಕ್ರೋ ಲ್ಯಾಬ್, , ಅಂಥೆಮ್ ಬಯೋಸೈನ್ಸ್, ಸತ್ವ ಕನ್ಸಲಿಂಗ್, ವೋಲ್ಲೋ ಗ್ರೂಪ್ ಇಂಡಿಯಾ, ಆಶ್ರಯ ಹಸ್ತ ಟ್ರಸ್ಟ್, ಜೆ.ಎಸ್.ಡಬ್ಲ್ಯೂ. ಫೌಂಡೇಶನ್, ಲಿವ್ ಲವ್ ಲಾಫ್ ಫೌಂಡೇಶನ್, ಸ್ವಾಸ್ತ್ ಅಲೈಯನ್ಸ್ – ಆಕ್ಸ್ ಫಾರ್ ಹೆಲ್ತ್, ಕೋಲ್ಲೇಟ್ ಪಾಮೋಲಿವ್, ಸೀಮೆನ್ಸ್ ಹೆಲ್ತಿನಿಯರ್ಸ್ ಹಾಗೂ ಇತರೆ ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.

ಕಳೆದ ವರ್ಷ ನಡೆದ ಮೊದಲ ರೌಂಡಟೇಬಲ್ ಸಭೆಯಲ್ಲಿ ಸುಮಾರು 21 ಕೋಟಿಯಷ್ಟು ಸಿಎಸ್‌ಆರ್ ಫಂಡ್ ವಿಭಿನ್ನ ಆರೋಗ್ಯ ಸೇವೆಗಳಿಗೆ ವಿನಿಯೋಗಿಸುವಲ್ಲಿ ಯಶಸ್ವಿಯಾಗಿತ್ತು. ಫೆಬ್ರವರಿ 2024 ರಲ್ಲಿ ಇನ್ಫೋಸಿಸ್ ಫೌಂಡೇಶನ್ ಸಹಯೋಗದೊಂದಿಗೆ, ತಾಯಿಯ ಮತ್ತು ನವಜಾತ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ 4 ವರ್ಷದ ಯೋಜನೆ, ಪ್ರಾಜೆಕ್ಟ್ ಅರ್ಲಿ ಲೈಫ್ ಅನ್ನು ಪ್ರಾರಂಭಿಸಲಾಯಿತು. ಕರ್ನಾಟಕದ ಧಾರವಾಡ ಮತ್ತು ಬಳ್ಳಾರಿ ಜಿಲ್ಲೆಗಳಿಂದ ಪ್ರಾರಂಭಿಸಿ ಜಿಲ್ಲಾ ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಾದ್ಯಂತ ಗರ್ಭಿಣಿಯರ ಆರೋಗ್ಯ ಮೇಲ್ವಿಚಾರಣೆಯನ್ನು ಹೆಚ್ಚಿಸಲು ಅತ್ಯಾಧುನಿಕ ಭ್ರೂಣ ಮೇಲ್ವಿಚಾರಣಾ ತಂತ್ರಜ್ಞಾನವನ್ನು ನಿಯೋಜಿಸಲಾಗಿದೆ.

ಮೂಲಸೌಕರ್ಯಗಳ ಮೇಲೆ ಅವಲಂಬಿತವಲ್ಲದ, ಕಂಟಿನ್ಯೂ ಆಸ್ ಪಾಸಿಟಿವ್ ಏರ್ವೇ ಪ್ರೆಷರ್ ಸಿಸ್ಟಮ್ಸ್ (ಧನಾತ್ಮಕ ವಾಯುಮಾರ್ಗದ ಒತ್ತಡ ವ್ಯವಸ್ಥೆಗಳ ನಿರಂತರ ಸೇವೆ) ಗಳನ್ನೂ ಸಹ ನಿಯೋಜಿಸಲಾಗಿದೆ. ಇದು ಉಸಿರಾಟದ ತೊಂದರೆ ಇರುವ ನವಜಾತ ಶಿಶುಗಳಿಗೆ, ಕೃತಕ ಅಥವಾ ಅಕ್ರಮಣಾಕಾರಿ ವಾತಾಯನವಿಲ್ಲದ, ಉಸಿರಾಟದ ಬೆಂಬಲವನ್ನು ಒದಗಿಸುತ್ತದೆ.

ಇದನ್ನೂ ಓದಿ: Kannada New Movie: ಸಾಮಾಜಿಕ ಕಳಕಳಿಯ ‘ವಿಕಾಸ ಪರ್ವ’ಕ್ಕೆ ಸಾಥ್ ನೀಡಿದ ಪ್ರಣಯರಾಜ

ಅಲ್ಲದೆ, ಮತ್ತೊಂದು ಲೋಕೋಪಕಾರಿ ಪ್ರಯತ್ನದ ಭಾಗವಾಗಿ, ಕರ್ನಾಟಕ ರಾಜ್ಯ ದೃಷ್ಟಿ ಆರೈಕೆ ಕಾರ್ಯಕ್ರಮದ ಅಡಿಯಲ್ಲಿ, ಎಲ್ಲಾ ರೆಟಿನೋಪತಿಗಳು ಮತ್ತು ಪಾಯಿಂಟ್ ಆಫ್ ಕೇರ್ ಡಿಜಿಟಲ್ ಸ್ಟೀನಿಂಗ್ ಸಾಧನಗಳಿಗೆ ಕೃತಕ ಬುದ್ಧಿಮತ್ತೆ (AI) ಆಧಾರಿತ ಸ್ಟೀನಿಂಗ್ ಅನ್ನು ಒಳಗೊಂಡಿರುವ ಆರೋಗ್ಯಕ್ಕಾಗಿ ಆಕ್ಟ್ ನೊಂದಿಗೆ ಸಮಗ್ರ ಕಣ್ಣಿನ ಆರೈಕೆ ಕಾರ್ಯಕ್ರಮವನ್ನು, ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಂಧತ್ವ ಮತ್ತು ದೃಷ್ಟಿಹೀನತೆಯ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕಾರ್ಯಕ್ರಮದ ಆಶಾ ಕಿರಣ, ಏನ್ ಪಿ ಸಿ ಬಿ ವಿ ಐ, ರಾಜ್ಯದ 11 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದೆ. ಈ ಆರೋಗ್ಯ ಸೇವೆಗಳು ಹಾಗೂ ಪರಿಹಾರಗಳು ಇಲ್ಲಿಯವರೆಗೆ 2.4 ಲಕ್ಷ ಜನರ ಮೇಲೆ ನೇರವಾಗಿ ಧನಾತ್ಮಕ ಪರಿಣಾಮ ಬೀರಿವೆ. ಇಂದು ನಡೆದ ಎರಡನೇ ರೌಂಡಟೇಬಲ್ ಸಭೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳಿಗೆ ಆದ್ಯತೆ ನೀಡಲು ಚರ್ಚೆ ನಡೆಸಲಾಯಿತು.‌

Continue Reading

ಕರ್ನಾಟಕ

NEET UG 2024: ಯುಜಿ ನೀಟ್: ಆ.12, 13ಕ್ಕೆ ದಾಖಲಾತಿ ಪರಿಶೀಲನೆ

NEET UG 2024: ಹೊಸದಾಗಿ ನೋಂದಣಿ ಮಾಡಿರುವ ಅಭ್ಯರ್ಥಿಗಳು ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ದಾಖಲಾತಿ ಪರಿಶೀಲನೆಗೆ ಆಗಸ್ಟ್ 12 ಅಥವಾ 13ರಂದು ಹಾಜರಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ಯುಜಿನೀಟ್-2024ಕ್ಕೆ (NEET UG 2024) ಹೊಸದಾಗಿ ನೋಂದಣಿ ಮಾಡಿರುವ ಕ್ಲಾಸ್ ಎ ಮತ್ತು ಕ್ಲಾಸ್ ವೈ ಅಭ್ಯರ್ಥಿಗಳಿಗೆ ಪರಿಶೀಲನಾ ಪತ್ರವನ್ನು (ವೆರಿಫಿಕೇಶನ್ ಸ್ಲಿಪ್) ಪ್ರಾಧಿಕಾರದ ವೆಬ್‌ಸೈಟಿನ ಸೂಕ್ತ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ಸೂಚಿಸಿದೆ.

ಒಂದು ವೇಳೆ ಎ ಮತ್ತು ಕ್ಲಾಸ್ ವೈ ಅಭ್ಯರ್ಥಿಗಳು ಯುಜಿ ನೀಟ್- 24ಕ್ಕೆ ಹೊಸದಾಗಿ ನೋಂದಣಿ ಮಾಡಿಸಿಕೊಂಡಿದ್ದು, ಎನ್ ಆರ್ ಐ-ವಾರ್ಡ್ ಎಂದು ಕ್ಲೇಮ್ ಮಾಡಿದ್ದಲ್ಲಿ ಅಥವಾ ಪ್ರವರ್ಗ 2ರಿಂದ ಪ್ರವರ್ಗ 8ರ ಅಡಿಯಲ್ಲಿ ಬೆಂಗಳೂರಿನ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜಿನಲ್ಲಿ ಕ್ಲೇಮ್ ಮಾಡಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಇಲ್ಲಿನ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ದಾಖಲಾತಿ ಪರಿಶೀಲನೆಗೆ ಆಗಸ್ಟ್ 12 ಅಥವಾ 13ರಂದು ಹಾಜರಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುಜಿ ನೀಟ್-2024ಕ್ಕೆ ಹೊಸದಾಗಿ ನೋಂದಣಿ ಮಾಡಿರುವ ಕ್ಲಾಸ್ ಬಿ, ಸಿ, ಡಿ, ಇ, ಎಫ್, ಜಿ, ಎಚ್, ಐ, ಜೆ, ಕೆ, ಎಲ್, ಎಂ, ಎನ್ ಮತ್ತು ಒ ಅಭ್ಯರ್ಥಿಗಳು ಹಾಗೂ ಒಸಿಐ/ ಪಿಐಒ / ಎನ್ ಆರ್ ಐ / ವಿದೇಶ ಪ್ರಜೆ ಅಭ್ಯರ್ಥಿಗಳು ಕೆಇಎ ಕಚೇರಿಗೆ ದಾಖಲಾತಿ ಪರಿಶೀಲನೆಗೆ ಆಗಸ್ಟ್ 12 ಅಥವಾ 13ರಂದು ಹಾಜರಾಗಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ದಾಖಲೆಗಳ ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳ ಬಗ್ಗೆ ತಿಳಿಯಲು ಯುಜಿ ನೀಟ್-2024 ಮಾಹಿತಿ ಪುಸ್ತಕ ನೋಡಬಹುದು ಎಂದು ಹೇಳಲಾಗಿದೆ. ಆ.7ರಿಂದ 9ರವರೆಗೆ ನಡೆದ ದಾಖಲಾತಿ ಪರಿಶೀಲನೆಗೆ ಹಾಜರಾಗದಿದ್ದವರು ಕೂಡ ಈ ಮೇಲಿನ ದಿನಗಳಂದು ಭೇಟಿ ಕೊಡಬಹುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ | Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಮತ್ತೆ ಮುಂದೂಡಿಕೆ; ಯಾವಾಗ ಪ್ರಕಟ?

KCET Mock Allotment 2024
KCET Mock Allotment 2024

ಬೆಂಗಳೂರು: ಯುಜಿಸಿಇಟಿ 2024ರ (UGCET 2024) ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶ ಬಿಡುಗಡೆ ಮತ್ತೆ ಮುಂದೂಡಿಕೆಯಾಗಿದೆ. ಆಗಸ್ಟ್ 9ರ ಸಂಜೆ ಫಲಿತಾಂಶ (KCET Mock Allotment 2024) ಬಿಡುಗಡೆ ಮಾಡುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿತ್ತು. ಆದರೆ, ಇದೀಗ ಮತ್ತೆ ಒಂದು ದಿನ ಮುಂದೂಡಲಾಗಿದೆ. ಈ ಕುರಿತು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

ಎಂಜಿನಿಯರಿಂಗ್ (Engineering) ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ (UGCET 2024) ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಆ.10ರಂದು ಸಂಜೆ 6 ಗಂಟೆಗೊಳಗೆ ಕೆಇಎ (KEA) ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.

ಅಭ್ಯರ್ಥಿಗಳಿಗೆ ತಮ್ಮ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿತ್ತು. ಎಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜುಗಳ ಆಯ್ಕೆ ಆಪ್ಷನ್‌ ಮೂಲಕ ನಡೆದಿದೆ. ಇಂದು ಅಣಕು ಸೀಟು ಹಂಚಿಕೆ ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಇದನ್ನೂ ಓದಿ | Job Vacancies: ಸಾವಿರ ಮಹಿಳಾ ಪೊಲೀಸ್ ಕಾನ್‌‌ಸ್ಟೇಬಲ್ ಹುದ್ದೆಗಳಿಗೆ ಲಕ್ಷಕ್ಕೂ ಹೆಚ್ಚು ಅರ್ಜಿ! ಫುಟ್‌‌ಪಾತ್‌‌ನಲ್ಲೇ ಮಲಗಿದ್ದ ಮಹಿಳಾ ಅಭ್ಯರ್ಥಿಗಳು

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು. ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿತ್ತು. ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

Continue Reading

ಬೆಂಗಳೂರು

Bengaluru News: ಬೃಹತ್‌ ಜನಾಂದೋಲನಕ್ಕೆ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಬೆಂಬಲ

Bengaluru News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಮೈಸೂರಿನಲ್ಲಿ ಆ.9 ರಂದು ಶುಕ್ರವಾರ ನಡೆಯುವ ಬೃಹತ್‌ ಜನಾಂದೋಲನ ಸಮಾವೇಶಕ್ಕೆ ನಾವೂ ಸೇರಿದಂತೆ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ದಲಿತರು, ಅಲೆಮಾರಿ ಬುಡಕಟ್ಟು ಜನಾಂಗದವರು ಹಾಗೂ ಪ್ರವರ್ಗ-1 ಮತ್ತು ಪ್ರವರ್ಗ-2 ಒಟ್ಟು 197 ಜಾತಿಗಳ ಪ್ರತಿನಿಧಿಗಳು ಸೇರಿದಂತೆ ಸಮುದಾಯಗಳ ಎಲ್ಲರೂ ಸ್ವ ಇಚ್ಛೆಯಿಂದ ಭಾಗವಹಿಸುತ್ತಿದ್ದು, ನಾವೂ ಸಹ ಬೆಂಬಲ ಸೂಚಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ. ವೇಣುಗೋಪಾಲ್‌ ತಿಳಿಸಿದ್ದಾರೆ.

VISTARANEWS.COM


on

Bengaluru News
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಮೈಸೂರಿನಲ್ಲಿ ಆ.9ರಂದು ಶುಕ್ರವಾರ ನಡೆಯುವ ಬೃಹತ್‌ ಜನಾಂದೋಲನ ಸಮಾವೇಶಕ್ಕೆ ನಾವೂ ಸೇರಿದಂತೆ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ದಲಿತರು, ಅಲೆಮಾರಿ ಬುಡಕಟ್ಟು ಜನಾಂಗದವರು ಹಾಗೂ ಪ್ರವರ್ಗ-1 ಮತ್ತು ಪ್ರವರ್ಗ-2 ಒಟ್ಟು 197 ಜಾತಿಗಳ ಪ್ರತಿನಿಧಿಗಳು ಸೇರಿದಂತೆ ಸಮುದಾಯಗಳ ಎಲ್ಲರೂ ಸ್ವ ಇಚ್ಛೆಯಿಂದ ಭಾಗವಹಿಸುತ್ತಿದ್ದು, ನಾವೂ ಸಹ ಬೆಂಬಲ ಸೂಚಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ. ವೇಣುಗೋಪಾಲ್‌ (Bengaluru News) ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೌರವಕ್ಕೆ ಧಕ್ಕೆ ತರಬೇಕು ಎಂಬ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್‌ ನವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

ಇದನ್ನೂ ಓದಿ: Bengaluru Power Cut: ಆ.11ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಆರ್‌ಟಿಐ ಕಾರ್ಯಕರ್ತನ ಮೂಲಕ ರಾಜ್ಯಪಾಲರಿಗೆ ದೂರು ನೀಡಿಸಿ, ಪ್ರಾಸಿಕ್ಯೂಷನ್‌ ಗೆ ಮುಂದಾಗಿರುವುದು ಕಾನೂನು ಬಾಹಿರವಾಗಿದೆ ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಈ ಕುರಿತು ರಾಜ್ಯಪಾಲರನ್ನು ಭೇಟಿಯಾಗಿ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಎರಡು ಅವಧಿಯಲ್ಲಿ ಜನಪರ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅವರ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆಯಿಲ್ಲದಂತೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಬಸವಣ್ಣನವರ ತತ್ವದಂತೆ ಸೇವೆ ಸಲ್ಲಿಸಿದ್ದಾರೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವ ರಾಜ್ಯಪಾಲರು ಏಕಪಕ್ಷೀಯವಾಗಿ ವರ್ತಿಸಬಾರದು ಎಂದು ಮನವಿ ಮಾಡಿದರು.

ಇದನ್ನೂ ಓದಿ: Karnataka weather : ವಿಜಯಪುರದ ಹಲವೆಡೆ ಸುರಿದ ಭಾರಿ ಮಳೆ; ನಾಳೆಗೂ ಇದೆ ಅಲರ್ಟ್‌

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಸಂಘಟನಾ ಕಾರ್ಯದರ್ಶಿ ಎನ್‌.ಶಿವಶಂಕರ್‌ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

KCET Mock Allotment 2024: ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಮತ್ತೆ ಮುಂದೂಡಿಕೆ; ಯಾವಾಗ ಪ್ರಕಟ?

KCET Mock Allotment 2024: ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಫಲಿತಾಂಶ ಬಿಡುಗಡೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ.

VISTARANEWS.COM


on

KCET Mock Allotment 2024
Koo

ಬೆಂಗಳೂರು: ಯುಜಿಸಿಇಟಿ 2024ರ (UGCET 2024) ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶ ಬಿಡುಗಡೆ ಮತ್ತೆ ಮುಂದೂಡಿಕೆಯಾಗಿದೆ. ಆಗಸ್ಟ್ 9ರ ಸಂಜೆ ಫಲಿತಾಂಶ (KCET Mock Allotment 2024) ಬಿಡುಗಡೆ ಮಾಡುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿತ್ತು. ಆದರೆ, ಇದೀಗ ಮತ್ತೆ ಒಂದು ದಿನ ಮುಂದೂಡಲಾಗಿದೆ. ಈ ಕುರಿತು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

ಎಂಜಿನಿಯರಿಂಗ್ (Engineering) ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ (UGCET 2024) ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಆ.10ರಂದು ಸಂಜೆ 6 ಗಂಟೆಗೊಳಗೆ ಕೆಇಎ (KEA) ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.

ಅಭ್ಯರ್ಥಿಗಳಿಗೆ ತಮ್ಮ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿತ್ತು. ಎಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜುಗಳ ಆಯ್ಕೆ ಆಪ್ಷನ್‌ ಮೂಲಕ ನಡೆದಿದೆ. ಇಂದು ಅಣಕು ಸೀಟು ಹಂಚಿಕೆ ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು. ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿತ್ತು. ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಇದನ್ನೂ ಓದಿ: Karnataka Weather : ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

ವಿವಿಧ ಕಂಡಿಕೆಗಳಡಿ ಕ್ಲೇಮ್ ಮಾಡಿದವರಿಗೆ ಆ.9ರವರೆಗೆ ದಾಖಲೆ ಪರಿಶೀಲನೆ

ಅರ್ಹತಾ ಕಂಡಿಕೆಗಳಾದ ಬಿ, ಸಿ, ಡಿ, ಐ, ಜೆ, ಕೆ, ಎಲ್, ಎಂ, ಎನ್- ಕ್ಲೇಮ್ ಮಾಡಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರು ನಿಗದಿತ ದಿನಾಂಕಗಳಂದು ದಾಖಲೆಗಳ ಪರಿಶೀಲನೆಗೆ ಹಾಜರಾಗದೇ ಇದ್ದರೆ ಅಂತಹವರು ಆಗಸ್ಟ್ 9ರವರೆಗೆ ಕೆಇಎ ಕಚೇರಿಗೆ ಖುದ್ದು ಹಾಜರಾಗಿ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳದೇ ಇದ್ದಲ್ಲಿ ಅಂತಹವರು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹರಾಗುವುದಿಲ್ಲ.

ಸಿಇಟಿ ಪರಿಶೀಲನಾ ಅರ್ಜಿಯೇ ಸಾಕು

ಈ ಮೇಲ್ಕಂಡ ಕಂಡಿಕೆಗಳಲ್ಲಿ ದಾಖಲೆಗಳ ಪರಿಶೀಲನೆ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಆಯಾ ದಿನವೇ ಪರಿಶೀಲನಾ ಪತ್ರ (ವೆರಿಫಿಕೇಷನ್ ಸ್ಲಿಪ್) ನೀಡಿದ್ದು, ಅದನ್ನೇ ಯುಜಿನೀಟ್ ಪ್ರವೇಶಕ್ಕೂ ಬಳಸಬಹುದು. ಯುಜಿಸಿಇಟಿ ಅರ್ಜಿಗೆ ಯುಜಿನೀಟ್ ರೋಲ್ ಸಂಖ್ಯೆಯನ್ನು ಲಿಂಕ್ ಮಾಡಬೇಕು ಮತ್ತು ಅರ್ಜಿ ಪ್ರತಿಯನ್ನು ಮುದ್ರಣ ಮಾಡಿಕೊಳ್ಳಬೇಕು. ಅಂತಹವರು ಯುಜಿನೀಟ್ ವೆರಿಫಿಕೇಷನ್ ಸ್ಲಿಪ್ ಡೌನ್ ಲೋಡ್ ಮಾಡಿಕೊಳ್ಳುವ ಅಗತ್ಯ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಯುಜಿಸಿಇಟಿ ವೆರಿಫಿಕೇಷನ್ ಸ್ಲಿಪ್ ನಲ್ಲಿ ಮುದ್ರಿತವಾಗಿರುವ ಸೀಕ್ರೆಟ್ ಕೀ ಮತ್ತು ಅರ್ಜಿ ಸಂಖ್ಯೆಯನ್ನೇ ನಮೂದಿಸಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಇಚ್ಛೆಗಳನ್ನು (ಆಪ್ಷನ್) ದಾಖಲಿಸಬಹುದು. ಇದಕ್ಕೆ ಸದ್ಯದಲ್ಲೇ ಪೋರ್ಟಲ್ ಅನ್ನು ತೆರೆಯಲಾಗುವುದು. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್ ಗೆ ಭೇಟಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
PMAY
ದೇಶ39 mins ago

PMAY: ನಗರ ಪ್ರದೇಶಗಳ ಬಡವರಿಗೆ ಕೇಂದ್ರ ಸರ್ಕಾರ ಗುಡ್‌ ನ್ಯೂಸ್;‌ 1 ಕೋಟಿ ಮನೆ ನಿರ್ಮಾಣಕ್ಕೆ ಕೇಂದ್ರ ಅಸ್ತು

Arshad Nadeem
ಪ್ರಮುಖ ಸುದ್ದಿ51 mins ago

Arshad Nadeem : ಒಲಿಂಪಿಕ್ಸ್ ದಾಖಲೆಯೊಂದಿಗೆ ಬಂಗಾರ ಗೆದ್ದ ಅರ್ಷದ್ ನದೀಮ್​ಗೆ ಪಾಕ್​ ಪ್ರಧಾನಿ ಕೊಟ್ಟ ಬಹುಮಾನ ಕೇವಲ 3 ಲಕ್ಷ ರೂಪಾಯಿ!

Plane Crash
ಪ್ರಮುಖ ಸುದ್ದಿ1 hour ago

Plane Crash: ವಿಮಾನ ಪತನ; 62 ಪ್ರಯಾಣಿಕರು ಸೇರಿ ಎಲ್ಲ 70 ಮಂದಿಯ ದುರ್ಮರಣ, Videoಗಳು ಇವೆ

Aman Sehrawat
ಪ್ರಮುಖ ಸುದ್ದಿ1 hour ago

Aman sehrawat : ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್​​; ಭಾರತದ ಒಲಿಂಪಿಕ್ಸ್ ಪದಕಗಳ ಸಂಖ್ಯೆ 6ಕ್ಕೆ ಏರಿಕೆ

Creamy Layer
ದೇಶ2 hours ago

Creamy Layer: ಎಸ್‌ಸಿ, ಎಸ್‌ಟಿಗೆ ಕೆನೆಪದರ ಮೀಸಲಾತಿ ಇಲ್ಲ; ಸುಪ್ರೀಂ ಆದೇಶದ ಬೆನ್ನಲ್ಲೇ ಕೇಂದ್ರ ಸ್ಪಷ್ಟನೆ

Bengaluru News
ಕರ್ನಾಟಕ2 hours ago

Bengaluru News: ಕಾರ್ಪೊರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಿಎಸ್‌ಆರ್ ಹಣ ವಿನಿಯೋಗಿಸಲಿ: ದಿನೇಶ್ ಗುಂಡೂರಾವ್

Tarsem Singh
ದೇಶ3 hours ago

Tarsem Singh: ಎನ್‌ಐಎ ಪ್ರಮುಖ ಕಾರ್ಯಾಚರಣೆ; ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್‌ ಸಿಂಗ್ ಬಂಧನ!

Vinesh Phogat
ಕ್ರೀಡೆ3 hours ago

Vinesh Phogat : ವಿನೇಶ್​​ಗೆ ಬೆಳ್ಳಿ ಪದಕ ಕೊಡಲು ಸಾಧ್ಯವಿಲ್ಲ; ಒಲಿಂಪಿಕ್ಸ್​​ ಸಂಸ್ಥೆ ಮುಖ್ಯಸ್ಥ ಥಾಮಸ್ ಬಾಕ್​ ಸ್ಪಷ್ಟನೆ

ಕರ್ನಾಟಕ3 hours ago

NEET UG 2024: ಯುಜಿ ನೀಟ್: ಆ.12, 13ಕ್ಕೆ ದಾಖಲಾತಿ ಪರಿಶೀಲನೆ

Paris Olympics 2024
ಕ್ರೀಡೆ3 hours ago

Paris Olympics 2024 : ಲೈಂಗಿಕ ಕಿರುಕುಳದ ಆರೋಪದ ಮೇಲೆ ಈಜಿಪ್ಟ್​​ ಮೊಹಮ್ಮದ್ ಎಲ್ಸಯೀದ್ ಅರೆಸ್ಟ್​​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 day ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 day ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 day ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ7 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌