Bangladesh Unrest: ಶೇಖ್‌ ಹಸೀನಾ ಓಡಿ ಬಂದ ಬಳಿಕ ಬಾಂಗ್ಲಾದೇಶದಲ್ಲಿ 232 ಜನರ ಕಗ್ಗೊಲೆ, ಹಿಂದೂಗಳೇ ಟಾರ್ಗೆಟ್ - Vistara News

ವಿದೇಶ

Bangladesh Unrest: ಶೇಖ್‌ ಹಸೀನಾ ಓಡಿ ಬಂದ ಬಳಿಕ ಬಾಂಗ್ಲಾದೇಶದಲ್ಲಿ 232 ಜನರ ಕಗ್ಗೊಲೆ, ಹಿಂದೂಗಳೇ ಟಾರ್ಗೆಟ್

Bangladesh Unrest: ಈ ವಾರದ ಆರಂಭದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಿರ್ಗಮನದ ನಂತರ ದೇಶದ ಹಿಂದೂ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರಕ್ಕೆ ಪ್ರತಿಕ್ರಿಯೆಯಾಗಿ ಶುಕ್ರವಾರ, ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನೂರಾರು ಜನ ಹಿಂದೂಗಳ ಪ್ರತಿಭಟನೆ ನಡೆಸಿದರು.

VISTARANEWS.COM


on

Bangladesh Unrest hindus protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಕಳೆದ ಮೂರು ದಿನಗಳಲ್ಲಿ ಬಾಂಗ್ಲಾದೇಶದಾದ್ಯಂತ (Bangladesh Unrest) ನಡೆದ ವಿವಿಧ ದಾಳಿಗಳು ಮತ್ತು ಘರ್ಷಣೆಗಳಲ್ಲಿ (Bangladesh violence) ಕನಿಷ್ಠ 232 ಜನರು ಸಾವನ್ನಪ್ಪಿದ್ದಾರೆ. ಹೆಚ್ಚಾಗಿ ಅಲ್ಲಿನ ಅಲ್ಪಸಂಖ್ಯಾತ ಹಿಂದೂ (Hindus) ಸಮುದಾಯವನ್ನೇ ಗುರಿಯಾಗಿಸಿ ದಾಳಿಗಳು ನಡೆಯುತ್ತಿವೆ. ಅಮಾಯಕ ಹಿಂದೂಗಳ ಮೇಲೆ ಹಲ್ಲೆ, ಅತ್ಯಾಚಾರಗಳು (hindus protest) ನಿರಂತರವಾಗಿವೆ.

ಅಲ್ಲಿನ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರು ಆಗಸ್ಟ್ 5ರಂದು ರಾಜೀನಾಮೆ ನೀಡಿ ಭಾರತಕ್ಕೆ (India) ಪಲಾಯನ ಮಾಡಿದ್ದರು. ಅವರ ಪದಚ್ಯುತಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಕಳೆದ ಮೂರು ವಾರಗಳಿಂದ ಬಾಂಗ್ಲಾದೇಶದಲ್ಲಿ ನಡೆದ ತೀವ್ರ ಮತ್ತು ರಕ್ತಸಿಕ್ತ ಸರ್ಕಾರಿ ವಿರೋಧಿ ಪ್ರತಿಭಟನೆಗಳು ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾಯಿತು.

ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ (Muhammad Yunus) ನೇತೃತ್ವದ ಮಧ್ಯಂತರ ಸರ್ಕಾರ ದೇಶದ ಆಡಳಿತವನ್ನು ವಹಿಸಿಕೊಂಡಿದೆ. ವರದಿಗಳು ತಿಳಿಸುವಂತೆ ಇದುವರೆಗೆ 469 ಜನ ಗಲಭೆಗಳಲ್ಲಿ ಸತ್ತಿದ್ದಾರೆ. ಸ್ಥಳೀಯ ಮಾಧ್ಯಮಗಳು ಹೇಳುವಂತೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳಿಗೆ ತೀವ್ರ ಕಿರುಕುಳ ಸೃಷ್ಟಿಸಲಾಗುತ್ತಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಯಭೀತರಾದ ಬಾಂಗ್ಲಾದೇಶಿಗಳು ಅಕ್ರಮವಾಗಿ ಭಾರತಕ್ಕೆ ದಾಟಲು ಹಲವಾರು ಪ್ರಯತ್ನಗಳನ್ನು ನಡೆಸಿದರು. ಆದರೆ ಅವರನ್ನು ಬಿಎಸ್‌ಎಫ್‌ ಹಿಮ್ಮೆಟ್ಟಿಸಿದೆ.

ಬಾಂಗ್ಲಾದೇಶದ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ, ಶೇಖ್ ಹಸೀನಾ ಅವರು ದೇಶದಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದೆ. ಶೇಖ್‌ ಹಸೀನಾಗೆ ಆಶ್ರಯ ನೀಡಿರುವ ಹಿನ್ನೆಲೆಯಲ್ಲಿ, ಭಾರತವು ತನ್ನ ನೆರೆಹೊರೆಯವರೊಂದಿಗೆ ಸಂಬಂಧವನ್ನು ಹಾಳುಮಾಡುವ ಅಪಾಯದಲ್ಲಿದೆ ಎಂದು ಎಚ್ಚರಿಸಿದೆ.

ಜುಲೈ 16 ಮತ್ತು ಆಗಸ್ಟ್ 4ರ ನಡುವಿನ ಮೀಸಲಾತಿ ವಿರೋಧಿ ವಿದ್ಯಾರ್ಥಿ ಚಳುವಳಿಗಳ ವೇಳೆ ಒಟ್ಟು 328 ಸಾವುಗಳು ವರದಿಯಾಗಿವೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಹೀಗಾಗಿ, ಕಳೆದ 23 ದಿನಗಳಲ್ಲಿ ಒಟ್ಟು ಸಾವಿನ ಸಂಖ್ಯೆ 560 ಕ್ಕೆ ತಲುಪಿದೆ.

ಈ ವಾರದ ಆರಂಭದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಿರ್ಗಮನದ ನಂತರ ದೇಶದ ಹಿಂದೂ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರಕ್ಕೆ ಪ್ರತಿಕ್ರಿಯೆಯಾಗಿ ಶುಕ್ರವಾರ, ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನೂರಾರು ಜನ ಹಿಂದೂಗಳ ಪ್ರತಿಭಟನೆ ನಡೆಸಿದರು. ಮುಸ್ಲಿಂ ಬಹುಸಂಖ್ಯಾತ ಬಾಂಗ್ಲಾದೇಶದಲ್ಲಿ ಹಿಂದೂ ಮನೆಗಳು, ವ್ಯಾಪಾರಗಳು ಮತ್ತು ದೇವಾಲಯಗಳ ಮೇಲೆ ದಾಳಿ ನಡೆದಿದೆ. ಇವುಗಳಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನ್ನಪ್ಪಿ ಕನಿಷ್ಠ 45 ಮಂದಿ ಗಾಯಗೊಂಡರು.

ಬಾಂಗ್ಲಾದೇಶದ 17 ಕೋಟಿ ಜನಸಂಖ್ಯೆಯ ಸುಮಾರು 8 ಪ್ರತಿಶತ ಹಿಂದೂಗಳಿದ್ದಾರೆ. ಇವರು ಸಾಂಪ್ರದಾಯಿಕವಾಗಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರು. ಇದು ಕಳೆದ ತಿಂಗಳು ಕೋಟಾ ವಿರೋಧಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಹಿಂಸಾತ್ಮಕ ಘರ್ಷಣೆಯ ನಂತರ ಮುಸ್ಲಿಮರ ಕೋಪದ ಕೇಂದ್ರಬಿಂದುವಾಗಿದೆ.

ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಗುರುವಾರ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ನೇಮಿಸಲಾಯಿತು. ಸಂವಿಧಾನದ ಅಡಿಯಲ್ಲಿ, 90 ದಿನಗಳಲ್ಲಿ ಚುನಾವಣೆಯನ್ನು ನಡೆಸಬೇಕಾಗಿದೆ. ಆದರೆ ಯೂನಸ್ ಹಾಗೂ ಮಿಲಿಟರಿ ಮತ್ತು ಅಧ್ಯಕ್ಷರು, ಚುನಾವಣೆಗಳು ಯಾವಾಗ ನಡೆಯುತ್ತವೆ ಎಂಬುದರ ಕುರಿತು ಪ್ರತಿಕ್ರಿಯಿಸಿಲ್ಲ.

ಇದನ್ನೂ ಓದಿ: Muhammad Yunus: ಹಿಂದುಗಳನ್ನು ಮೊದಲು ರಕ್ಷಿಸಿ; ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ಗೆ ಮೋದಿ ಆಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Hindenburg: ಶೀಘ್ರದಲ್ಲೇ ಭಾರತದಲ್ಲಿ ಬಹುದೊಡ್ಡ ಸಂಚಲನ ಸೃಷ್ಟಿಯಾಗಲಿದೆ; ಹೊಸದೊಂದು ಬಾಂಬ್‌ ಸಿಡಿಸಿದ ಹಿಂಡನ್‌ಬರ್ಗ್‌

Hindenburg: ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ವರದಿ ಪ್ರಕಟಿಸಿ ಸಂಚಲನ ಸೃಷಿಸಿದ ಬಳಿಕ ಮತ್ತೊಂದು ಬಾಂಬ್‌ ಸಿಡಿಸಲು ಮುಂದಾಗಿದೆ. ʼʼಶೀಘ್ರದಲ್ಲೇ ಭಾರತದಲ್ಲಿ ಏನೋ ಬಹುದೊಡ್ಡ ಬದಲಾವಣೆ ನಡೆಯಲಿದೆʼʼ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದೆ.

VISTARANEWS.COM


on

Hindenburg
Koo

ವಾಷಿಂಗ್ಟನ್‌: ಗೌತಮ್‌ ಅದಾನಿ (Gautam Adani)  ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ (Hindenburg) ಸಂಸ್ಥೆಯು 2023ರ ಜನವರಿಯಲ್ಲಿ ವರದಿ ಪ್ರಕಟಿಸಿದ ದೇಶಾದ್ಯಂತ ಸಂಚಲ ಮೂಡಿಸಿತ್ತು. ಇದೀಗ ಮತ್ತೊಮ್ಮೆ ಭಾರತ ಕೇಂದ್ರೀತ ವರದಿ ಪ್ರಕಟಿಸುವುದಾಗಿ ಘೋಷಿಸಿದೆ. ಈ ಬಗ್ಗೆ ಶನಿವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೂಚನೆ ನೀಡಿದೆ. ʼʼಶೀಘ್ರದಲ್ಲೇ ಭಾರತದಲ್ಲಿ ಏನೋ ಬಹುದೊಡ್ಡ ಬದಲಾವಣೆ ನಡೆಯಲಿದೆʼʼ (Something big soon India) ಎಂದು ಸಂಸ್ಥೆ ಬರೆದುಕೊಂಡಿದೆ. ಅದಾನಿ ಗ್ರೂಪ್ ಆಂತರಿಕ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯಲ್ಲಿ ನಿಯಮ ಉಲ್ಲಂಘನೆಗಳನ್ನು ಮಾಡುತ್ತಿದೆ ಎಂದು ಆರೋಪಿಸಿ ಹಿಂಡನ್‌ಬರ್ಗ್‌ ವರದಿ ಪ್ರಕಟಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಮತ್ತೊಂದು ಬಾಂಬ್‌ ಸಿಡಿಸಲು ಸಜ್ಜಾಗಿದೆ.

2023ರ ಜನವರಿಯಲ್ಲಿ ಅದಾನಿ ಗ್ರೂಪ್ ಕುರಿತ ವರದಿ ಪ್ರಕಟವಾದ ಬಳಿಕ ಅದರ ಷೇರುಗಳ ಮೌಲ್ಯ ಗಣನೀಯವಾಗಿ ಕುಸಿದಿದ್ದವು. ಆದಾಗ್ಯೂ ಅದಾನಿ ಗ್ರೂಪ್ ಈ ಆರೋಪಗಳನ್ನು ನಿರಾಕರಿಸಿತ್ತು.

ಹಿಂಡನ್‌ಬರ್ಗ್‌ ವರದಿಯಲ್ಲಿ ಏನಿತ್ತು?

ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಪ್ರಕಟಿಸಿದ ವರದಿಯು ದೇಶದಲ್ಲಿ ವ್ಯಾಪಕ ಚರ್ಚೆ ಹುಟ್ಟು ಹಾಕಿತ್ತು. “ಹೂಡಿಕೆದಾರರಿಗೆ ಅದಾನಿ ಗ್ರೂಪ್‌ ವಂಚನೆ ಮಾಡದೆ. ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್‌ ಷೇರು ಮೌಲ್ಯಗಳನ್ನು ಹೆಚ್ಚು ತೋರಿಸಿರುವುದು ವಂಚನೆಯಾಗಿದೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದಾದ ಬಳಿಕ ಅದಾನಿ ಗ್ರೂಪ್‌ ಷೇರು ಮೌಲ್ಯವು ದಿಢೀರನೆ ಕುಸಿದು ಭಾರಿ ನಷ್ಟವಾಗಿತ್ತು. ಅಲ್ಲದೆ ಅದಾನಿ ಗ್ರೂಪ್‌ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು.

ಹಿಂಡನ್‌ಬರ್ಗ್‌ ವರದಿ ಕುರಿತು ತನಿಖೆಯಾಗಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಹಲವರು ಮೊರೆ ಹೋಗಿದ್ದರು. ಅಲ್ಲದೆ ಅದಾನಿ ಗ್ರೂಪ್‌ ಅಕ್ರಮ ಪತ್ತೆಹಚ್ಚುವಲ್ಲಿ ಸೆಬಿ ವಿಫಲವಾಗಿದೆ. ಹಾಗಾಗಿ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ಹಾಗಾಗಿ ಸರ್ವೋಚ್ಚ ನ್ಯಾಯಾಲಯವು 2023ರ ಮಾರ್ಚ್‌ನಲ್ಲಿ ಸೆಬಿ ತನಿಖೆ ಮೇಲೆ ನಿಗಾ ಇರಿಸಲು, ತನಿಖೆಯಲ್ಲಿ ದೋಷ ಪತ್ತೆಹಚ್ಚಲು ಆರು ಸದಸ್ಯರ ತನಿಖಾ ಸಮಿತಿ ರಚಿಸಿತ್ತು. ಇದಾದ ಎರಡು ತಿಂಗಳ ಬಳಿಕ ಸೆಬಿಯು ಸುಪ್ರೀಂ ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಿತ್ತು. “ಅದಾನಿ ಗ್ರೂಪ್‌ ವಂಚನೆ ಮಾಡಿದೆ ಎಂಬುದನ್ನು ಸಾಬೀತುಪಡಿಸಲು ಈ ಹಂತದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ” ಎಂದು ಉಲ್ಲೇಖಿಸಿತ್ತು.

ಇದನ್ನೂ ಓದಿ: Gautam Adani : ಎನ್​ಡಿಟಿವಿ ಆಯ್ತು; ಈಗ ಸುದ್ದಿ ಸಂಸ್ಥೆ ಐಎಎನ್​ಎಸ್​ ಅದಾನಿ ಪಾಲು

ಗೌತಮ್‌ ಅದಾನಿ-ಹಿಂಡನ್‌ಬರ್ಗ್‌ ವರದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಬಿ ನಡೆಸುತ್ತಿರುವ ತನಿಖೆಯ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿತ್ತು. “ಸೆಬಿಯು ತನಿಖೆ ಹಾಗೂ ನಿಯಂತ್ರಕ ಸಂಸ್ಥೆಯಾಗಿರುವುದರಿಂದ ಅದರ ತನಿಖೆಯಲ್ಲಿ ಸುಪ್ರೀಂ ಕೋರ್ಟ್‌ ಹಸ್ತಕ್ಷೇಪ ಮಾಡಲು ಆಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್‌ ತಿಳಿಸಿತ್ತು. ಇದರಿಂದಾಗಿ ಗೌತಮ್‌ ಅದಾನಿ ನೇತೃತ್ವದ ಗ್ರೂಪ್‌ಗೆ ರಿಲೀಫ್‌ ಸಿಕ್ಕಿತ್ತು.

Continue Reading

Latest

Sexual Abuse: ತನ್ನ ಹಸ್ತಮೈಥುನದ ವಿಡಿಯೊ ಕಳುಹಿಸಿ ವಿದ್ಯಾರ್ಥಿಯನ್ನು ಕಾಮದ ಬಲೆಗೆ ಸಿಲುಕಿಸಿದ್ದ ಶಿಕ್ಷಕಿಯ ಬಂಧನ!

Sexual Abuse: ಶಿಕ್ಷಕರ ಬಗ್ಗೆ ವಿದ್ಯಾರ್ಥಿಗಳಿಗೆ ಗೌರವವಿರುತ್ತದೆ. ಆದರೆ ಇಲ್ಲೊಬ್ಬ ಶಿಕ್ಷಕಿ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ವಿದ್ಯಾರ್ಥಿಯನ್ನೇ ಬಳಸಿಕೊಂಡಿದ್ದಾಳೆ. ಆಸ್ಟ್ರೇಲಿಯಾದ ನೈಋತ್ಯ ಸಿಡ್ನಿಯಲ್ಲಿರುವ ಲುರ್ನಿಯಾ ಹೈಸ್ಕೂಲ್ ನಲ್ಲಿ 17 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 30 ವರ್ಷದ ಶಿಕ್ಷಕಿ ತೈಲಾ ಬ್ರೇಲಿಯನ್ನು ಬಂಧಿಸಲಾಗಿದೆ.ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಕ್ಕೆ ಹಾಗೂ ವಿದ್ಯಾರ್ಥಿಯ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Sexual Abuse
Koo


ಶಿಕ್ಷಕರನ್ನು ದೇವರಿಗೆ ಹೋಲಿಸುತ್ತಾರೆ. ಯಾಕೆಂದರೆ ಅವರು ತಮ್ಮ ವಿದ್ಯೆಯನ್ನು ಶಿಷ್ಯರಿಗೆ ಧಾರೆ ಎರೆಯುವ ಮೂಲಕ ಅವರನ್ನು ಉನ್ನತ ಮಟ್ಟಕ್ಕೆ ಕರೆದುಕೊಂಡು ಹೋಗುತ್ತಾರೆ. ಹಾಗಾಗಿ ಶಿಕ್ಷಕರ ಬಗ್ಗೆ ವಿದ್ಯಾರ್ಥಿಗಳಿಗೆ ಗೌರವವಿರುತ್ತದೆ. ಆದರೆ ಇಲ್ಲೊಬ್ಬ ಶಿಕ್ಷಕಿ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ವಿದ್ಯಾರ್ಥಿಯನ್ನೇ ಬಳಸಿಕೊಂಡಿದ್ದಾಳೆ. ಆಸ್ಟ್ರೇಲಿಯಾದ ನೈಋತ್ಯ ಸಿಡ್ನಿಯಲ್ಲಿರುವ ಲುರ್ನಿಯಾ ಹೈಸ್ಕೂಲ್ ನಲ್ಲಿ 17 ವರ್ಷದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ (Sexual Abuse) ನೀಡಿದ ಆರೋಪದ ಮೇಲೆ 30 ವರ್ಷದ ಶಿಕ್ಷಕಿ ತೈಲಾ ಬ್ರೇಲಿಯನ್ನು ಬಂಧಿಸಲಾಗಿದೆ.

ತನ್ನ ಅಧಿಕಾರವನ್ನು ದುರಪಯೋಗಪಡಿಸಿಕೊಂಡು ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಕ್ಕೆ ಹಾಗೂ ವಿದ್ಯಾರ್ಥಿಯ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಮಂಗಳವಾರದಂದು ಶಿಕ್ಷಕಿ ಬ್ರೇಲಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿದ ಶಿಕ್ಷಕಿ, ವಿದ್ಯಾರ್ಥಿಗೆ ಅಶ್ಲೀಲ ವಿಡಿಯೊಗಳನ್ನು ಕಳುಹಿಸುವುದು ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಕಾರಣ ತಾನು ಜೈಲಿಗೆ ಹೋಗುತ್ತಿದ್ದೇನೆ. ಇದರಿಂದ ತಾನು ತನ್ನ ಕುಟುಂಬ, ತನ್ನ ಪತಿ ಮತ್ತು ತನ್ನ ಕೆಲಸವನ್ನು ಕಳೆದುಕೊಳ್ಳಬೇಕಾಗಿದೆ ಎನ್ನುವುದನ್ನು ಒಪ್ಪಿಕೊಂಡಿದ್ದಾಳೆ.

ಜುಲೈ ಆರಂಭದಲ್ಲಿ ವಿದ್ಯಾರ್ಥಿಯನ್ನು ಸ್ನ್ಯಾಪ್‍ಚಾರ್ಟ್‍ನಲ್ಲಿ ಪರಿಚಯ ಮಾಡಿಕೊಂಡ ಶಿಕ್ಷಕಿ ಬ್ರೇಲಿ ಆತನೊಂದಿಗೆ ಅನೈತಿಕ ಸಂಬಂಧ ಹೊಂದಲು ಯೋಜನೆ ಮಾಡಿದ್ದಾಳೆ ಮತ್ತು ಜುಲೈ ಆರಂಭದಲ್ಲಿ ಇವರು ಒಬ್ಬರಿಗೊಬ್ಬರು ಮೆಸೇಜ್ ಕಳುಹಿಸಲು ಪ್ರಾರಂಭಿದರು. ಅಲ್ಲದೇ ಆರೋಪಿ ಶಿಕ್ಷಕಿ ನಗ್ನವಾಗಿ ಮತ್ತು ಹಸ್ತಮೈಥುನ ಮಾಡಿಕೊಳ್ಳುವ ತನ್ನ ಹಲವಾರು ಪೋಟೊಗಳು ಮತ್ತು ವಿಡಿಯೊಗಳನ್ನು ವಿದ್ಯಾರ್ಥಿಗೆ ಕಳುಹಿಸಿದ್ದಾಳೆ. ಹಾಗೇ ವಿದ್ಯಾರ್ಥಿ ಕೂಡ ತನ್ನ ಹಲವಾರು ಪೋಟೊ ಮತ್ತು ವಿಡಿಯೊವನ್ನು ಕಳುಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಆರೋಪಿ ಹದಿಹರೆಯದ ವಿದ್ಯಾರ್ಥಿಯನ್ನು ತನ್ನ ಉತ್ತರ ವೊಲ್ಲೊಂಗಾಂಗ್ ಮನೆಗೆ ಕರೆದಿದ್ದಾಳೆ, ಅಲ್ಲಿ ಅವಳು ಅವನನ್ನು ಮಹಡಿಯ ಕೋಣೆಗೆ ಕರೆದೊಯ್ದು ಹಸ್ತಮೈಥುನ ಮಾಡಿಕೊಳ್ಳುವ ಮೂಲಕ ಆತನನ್ನು ಉದ್ರೇಕಿಸಿದಳು. ಒಂದು ವಾರದ ನಂತರ, ಅವರು ಬ್ರೇಲಿಯ ಕಾರಿನಲ್ಲಿ ಲೈಂಗಿಕ ಕ್ರಿಯೆ ನಡೆಸಿದರು ಎಂದು ಆರೋಪಿಸಲಾಗಿದೆ. ಬ್ರೇಲಿಯನ್ನು ಸಂತೋಷಪಡಿಸಲು ಆಗಾಗ ಅಶ್ಲೀಲ ಪೋಟೊಗಳನ್ನು ಕಳುಹಿಸಲು ಹೇಳುತ್ತಿದ್ದಳು. ಇದರಿಂದ ತಾನು ಒತ್ತಡಕ್ಕೊಳಗಾಗಿದ್ದೇನೆ ಎಂದು ವಿದ್ಯಾರ್ಥಿ ನಂತರ ಪೊಲೀಸರಿಗೆ ತಿಳಿಸಿದ್ದಾನೆ. ಅಷ್ಟೇ ಅಲ್ಲದೇ ಬ್ರೇಲಿ ಸಾಮಾಜಿಕ ಮಾಧ್ಯಮದ ಮೂಲಕ ಮೂವರು ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ, ಆದರೆ ಸದ್ಯ ಅವಳು ಕೇವಲ ಒಬ್ಬನೊಂದಿಗೆ ಮಾತ್ರ ಸಂಬಂಧ ಹೊಂದಿರುವ ಆರೋಪಗಳನ್ನು ಎದುರಿಸುತ್ತಿದ್ದಾಳೆ ಎನ್ನಲಾಗಿದೆ.

ಇದನ್ನೂ ಓದಿ:  ಪ್ರಣಯಕ್ಕೆ ಡಿಸ್ಟರ್ಬ್‌ ಆಯಿತೆಂದು ಕೋಪಗೊಂಡ ಪ್ರಿಯತಮ ಮಹಿಳೆಯ ಮಗುವನ್ನು ನೆಲಕ್ಕೆ ಬಡಿದು ಕೊಂದ!

ಈ ಪ್ರಕರಣ ಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿದ್ದಾಗ ಬ್ರೇಲಿಯನ್ನು ಅವರ ಕುಟುಂಬವು ಬೆಂಬಲಿಸಿತು. ಆದರೆ ವಿದ್ಯಾರ್ಥಿಗಳ ಸುರಕ್ಷತೆಗೆ ತನ್ನ ಬದ್ಧತೆಯನ್ನು ಒತ್ತಿಹೇಳಿರುವ ಶಿಕ್ಷಣ ಇಲಾಖೆ ಅವಳ ತಪ್ಪಿಗೆ ಬಾಕಿ ಇರುವ ವೇತನ ನೀಡದೆ ಅಮಾನತುಗೊಳಿಸಿದೆ. ವಾರಕ್ಕೆ ಮೂರು ಬಾರಿ ಪೊಲೀಸ್ ಠಾಣೆಗೆ ಬಂದು ಸಹಿ ಮಾಡುವಂತೆ ಮತ್ತು ಸಾಮಾಜಿಕ ಮಾಧ್ಯಮದಿಂದ ದೂರವಿರುವುದು ಸೇರಿದಂತೆ ಕಠಿಣ ಷರತ್ತುಗಳ ಅಡಿಯಲ್ಲಿ ಬ್ರೈಲಿಗೆ ಜಾಮೀನು ನೀಡಲಾಯಿತು.

Continue Reading

ವಿದೇಶ

Israel attack: ಗಾಜಾದ ವಸತಿ ಶಾಲೆ ಮೇಲೆ ಇಸ್ರೇಲ್ ದಾಳಿ; 100ಕ್ಕೂ ಹೆಚ್ಚು ಮಂದಿ ಸಾವು

Israel attack: ವಸತಿ ಶಾಲೆಯಲ್ಲಿ ಆಶ್ರಯ ಪಡೆದಿರುವ ಜನರು ಪ್ರಾರ್ಥನೆ ನಡೆಸುತ್ತಿದ್ದಾಗ ಇಸ್ರೇಲ್ ದಾಳಿ ನಡೆಸಿದೆ. ಇದು ಸಾವುನೋವುಗಳ ಸಂಖ್ಯೆಯಲ್ಲಿ ತ್ವರಿತ ಹೆಚ್ಚಳಕ್ಕೆ ಕಾರಣವಾಯಿತು ಎಂದು ಗಾಜಾ ಸರ್ಕಾರಿ ಮಾಧ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. 10 ತಿಂಗಳ ಕಾಲ ಇಸ್ರೇಲ್ ದಾಳಿಯಿಂದಾಗಿ ಗಾಜಾದಲ್ಲಿ 40,000ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ. ಕಳೆದ ಅಕ್ಟೋಬರ್ 7ರಂದು ಪ್ಯಾಲೇಸ್ಟಿನಿಯನ್ ಉಗ್ರರು ಇಸ್ರೇಲ್‌‌ನೊಳಗೆ ನುಗ್ಗಿ ಸುಮಾರು 1,200 ಜನರನ್ನು ಕೊಂದು 250 ಜನರನ್ನು ಒತ್ತೆಯಾಳುಗಳಾಗಿ ಅಪಹರಿಸಿದ್ದರು.

VISTARANEWS.COM


on

By

Israel Attack
Koo

ಪೂರ್ವ ಗಾಜಾದಲ್ಲಿ (eastern Gaza) ಸ್ಥಳಾಂತರಗೊಂಡ ಜನರು ವಾಸವಾಗಿರುವ ವಸತಿ ಶಾಲೆಯನ್ನು (housing school) ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ (Israel attack) 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಹಮಾಸ್ (hamas) ನಡೆಸುತ್ತಿರುವ ಗಾಜಾ ಸರ್ಕಾರಿ ಮಾಧ್ಯಮ ಕಚೇರಿಯ ಪ್ರಕಾರ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಈ ದಾಳಿ ಸಂಭವಿಸಿದೆ ಎನ್ನಲಾಗಿದೆ.

ವಸತಿ ಶಾಲೆಯಲ್ಲಿ ಆಶ್ರಯ ಪಡೆದಿರುವ ಜನರು ಫಜ್ರ್ ಪ್ರಾರ್ಥನೆಯನ್ನು ನಿರ್ವಹಿಸುತ್ತಿದ್ದ ಜನರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ. ಇದು ಸಾವುನೋವುಗಳ ಸಂಖ್ಯೆಯಲ್ಲಿ ತ್ವರಿತ ಹೆಚ್ಚಳಕ್ಕೆ ಕಾರಣವಾಯಿತು ಎಂದು ಗಾಜಾ ಸರ್ಕಾರಿ ಮಾಧ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಹಿಂದಿನ ವಾರದಲ್ಲಿ ಗಾಜಾದಾದ್ಯಂತ ನಾಲ್ಕು ಶಾಲೆಗಳ ಮೇಲೆ ದಾಳಿ ನಡೆಸಿದ ಅನಂತರ ಈ ದಾಳಿಗಳು ನಡೆದಿವೆ. ಆಗಸ್ಟ್ 4 ರಂದು ಗಾಜಾ ನಗರದಲ್ಲಿ ಸ್ಥಳಾಂತರಗೊಂಡ ಜನರಿಗೆ ಆಶ್ರಯವಾಗಿ ಕಾರ್ಯನಿರ್ವಹಿಸುತ್ತಿರುವ ಎರಡು ಶಾಲೆಗಳ ಮೇಲೆ ಇಸ್ರೇಲ್ ದಾಳಿ ನಡೆಸಿದೆ. 30 ಮಂದಿ ಸಾವನ್ನಪ್ಪಿದರು ಮತ್ತು ಹಲವಾರು ಮಂದಿ ಗಾಯಗೊಂಡರು. ಹಿಂದಿನ ದಿನ, ಗಾಜಾ ನಗರದ ಹಮಾಮಾ ಶಾಲೆಯ ಮೇಲೆ ಇಸ್ರೇಲ್ ದಾಳಿ ನಡೆಸಿ 17 ಜನರನ್ನು ಕೊಂದಿತ್ತು.


ಆಗಸ್ಟ್ 1ರಂದು, ದಲಾಲ್ ಅಲ್-ಮುಘ್ರಾಬಿ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 15 ಜನರು ಸಾವನ್ನಪ್ಪಿದರು.
ಇಸ್ರೇಲ್ ಗಾಜಾದಾದ್ಯಂತ ಶಾಲೆಗಳು ಸೇರಿದಂತೆ ಕಟ್ಟಡಗಳ ಮೇಲೆ ದಾಳಿಗಳನ್ನು ನಡೆಸುತ್ತಿದೆ. ಕಳೆದ ಅಕ್ಟೋಬರ್‌ನಲ್ಲಿ ಪ್ಯಾಲೇಸ್ಟಿನಿಯನ್ ವಿರುದ್ಧ ಪೂರ್ಣ ಪ್ರಮಾಣದ ಮಿಲಿಟರಿ ದಾಳಿಯನ್ನು ಇಸ್ರೇಲ್ ಪ್ರಾರಂಭಿಸಿದ ಅನಂತರ “ಹಮಾಸ್ ಕಮಾಂಡ್ ಕಂಟ್ರೋಲ್ ಸೆಂಟರ್” ನಿಂದ ಕಾರ್ಯನಿರ್ವಹಿಸುವ ಆವರಣದಲ್ಲಿ “ಭಯೋತ್ಪಾದಕರು” ಇದ್ದಾರೆ ಎಂದು ಇಸ್ರೇಲ್ ಪ್ರತಿಪಾದಿಸುತ್ತಿದೆ.

ಇದನ್ನೂ ಓದಿ: Bangladesh Unrest: ಶೇಖ್‌ ಹಸೀನಾ ಓಡಿ ಬಂದ ಬಳಿಕ ಬಾಂಗ್ಲಾದೇಶದಲ್ಲಿ 232 ಜನರ ಕಗ್ಗೊಲೆ, ಹಿಂದೂಗಳೇ ಟಾರ್ಗೆಟ್


10 ತಿಂಗಳ ಕಾಲ ಇಸ್ರೇಲ್ ದಾಳಿಯಿಂದಾಗಿ ಗಾಜಾದಲ್ಲಿ 40,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ. ಕಳೆದ ಅಕ್ಟೋಬರ್ 7ರಂದು ಪ್ಯಾಲೇಸ್ಟಿನಿಯನ್ ಉಗ್ರರು ಇಸ್ರೇಲ್‌‌ನೊಳಗೆ ನುಗ್ಗಿ ಸುಮಾರು 1,200 ಜನರನ್ನು ಕೊಂದು 250 ಜನರನ್ನು ಒತ್ತೆಯಾಳುಗಳಾಗಿ ಅಪಹರಿಸಿದ್ದರು.

Continue Reading

ಪ್ರಮುಖ ಸುದ್ದಿ

Arshad Nadeem : ಒಲಿಂಪಿಕ್ಸ್ ದಾಖಲೆಯೊಂದಿಗೆ ಬಂಗಾರ ಗೆದ್ದ ಅರ್ಷದ್ ನದೀಮ್​ಗೆ ಪಾಕ್​ ಪ್ರಧಾನಿ ಕೊಟ್ಟ ಬಹುಮಾನ ಕೇವಲ 3 ಲಕ್ಷ ರೂಪಾಯಿ!

Arshad Nadeem : ಗೆಲುವಿನೊಂದಿಗೆ ಪಾಕಿಸ್ತಾನ ಒಲಿಂಪಿಕ್ಸ್​ನಲ್ಲಿ ತನ್ನ ಮೊದಲ ವೈಯಕ್ತಿಕ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಈ ಹಿಂದೆ ಪಾಕಿಸ್ತಾನ 1960, 1968 ಮತ್ತು 1984ರಲ್ಲಿ ಹಾಕಿಯಲ್ಲಿ ಕೇವಲ ಮೂರು ಒಲಿಂಪಿಕ್ ಚಿನ್ನದ ಪದಕಗಳನ್ನು ಗೆದ್ದಿತ್ತು. ನದೀಮ್ ಅವರ ಗೆಲುವು ಆಟಗಾರ ಮತ್ತು ಪಾಕಿಸ್ತಾನ ಎರಡಕ್ಕೂ ಮಹತ್ವದ ಮೈಲಿಗಲ್ಲಾಗಿದೆ.

VISTARANEWS.COM


on

Arshad Nadeem
Koo

ನವದೆಹಲಿ: ಒಲಿಂಪಿಕ್ ನಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಪಾಕಿಸ್ತಾನ ಜಾವೆಲಿನ್ ಎಸೆತಗಾರ ಅರ್ಷದ್​ ನದೀಮ್​ಗೆ (Arshad Nadeem) ಅಲ್ಲಿನ ಪ್ರಧಾನಿ ಘೋಷಿಸಿರುವ ಬಹುಮಾನ ಮೊತ್ತ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಪ್ರಧಾನಿ ಶೆಹಬಾಜ್ ಷರೀಫ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದ ಪುರುಷರ ಫೈನಲ್ನಲ್ಲಿ ನದೀಮ್ 92.97 ಮೀಟರ್ ಜಾವೆಲಿನ್ ಎಸೆತದಲ್ಲಿ ದಾಖಲೆ ನಿರ್ಮಿಸುವ ಮೂಲಕ 32 ವರ್ಷಗಳ ನಂತರ ಪಾಕಿಸ್ತಾನದ ಮೊದಲ ಒಲಿಂಪಿಕ್ ಚಿನ್ನದ ಪದಕವನ್ನು ನದೀಮ್ ತಂದುಕೊಟ್ಟಿದ್ದರು. ಆದರೂ ಅವರಿಗೆ ಕೊಟ್ಟಿರುವುದು ಕೇವಲ 3 ಲಕ್ಷ ಭಾರತೀಯ ರೂಪಾಯಿ.

ಗೆಲುವಿನೊಂದಿಗೆ ಪಾಕಿಸ್ತಾನ ಒಲಿಂಪಿಕ್ಸ್​ನಲ್ಲಿ ತನ್ನ ಮೊದಲ ವೈಯಕ್ತಿಕ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಈ ಹಿಂದೆ ಪಾಕಿಸ್ತಾನ 1960, 1968 ಮತ್ತು 1984ರಲ್ಲಿ ಹಾಕಿಯಲ್ಲಿ ಕೇವಲ ಮೂರು ಒಲಿಂಪಿಕ್ ಚಿನ್ನದ ಪದಕಗಳನ್ನು ಗೆದ್ದಿತ್ತು. ನದೀಮ್ ಅವರ ಗೆಲುವು ಆಟಗಾರ ಮತ್ತು ಪಾಕಿಸ್ತಾನ ಎರಡಕ್ಕೂ ಮಹತ್ವದ ಮೈಲಿಗಲ್ಲಾಗಿದೆ.

ಪಾಕ್ ಪ್ರಧಾನಿಯಿಂದ ಅವಮಾನ; ಡ್ಯಾನಿಶ್ ಕನೇರಿಯಾ

ಒಲಿಂಪಿಕ್ಸ್​ನಲ್ಲಿ ಐತಿಹಾಸಿಕ ವಿಜಯದ ಹೊರತಾಗಿಯೂ, ನದೀಮ್​​ಗೆ ಪ್ರಧಾನಿಯವರು 10 ಲಕ್ಷ ಪಾಕಿಸ್ತಾನ ರೂಪಾಇ (ಸುಮಾರು 3 ಲಕ್ಷ ಭಾರತ ರೂಪಾಯಿ) ನೀಡಿದರು. ಅಷ್ಟು ಕಡಿಮೆ ಮೊತ್ತ ಕೊಟ್ಟ ಹೊರತಾಗಿಯೂ ಚೆಕ್​ ನೀಡುವ ಚಿತ್ರವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಶರೀಫ್ ತಮ್ಮ ಅಭಿನಂದನಾ ಪೋಸ್ಟ್​ನಲ್ಲಿ “ಶಹಬ್ಬಾಸ್​ ಅರ್ಷದ್​ ಇತಿಹಾಸ ಸೃಷ್ಟಿ ಮಾಡಿದ್ದೀರಿ. ಪಾಕಿಸ್ತಾನದ ಮೊದಲ ಒಲಿಂಪಿಕ್ ಜಾವೆಲಿನ್ ಚಾಂಪಿಯನ್​ ನೀವು. ದೇಶಕ್ಕೆ ಹೆಮ್ಮೆ ತಂದಿದ್ದಿರಿ ಎಂದು ಬರೆದುಕೊಂಡಿದ್ದಾರೆ.

ಪಾಕಿಸ್ತಾನ ಪ್ರಧಾನಿ ನದೀಮ್​​ ನೀಡಿದ ಗೌರವದ ಬಗ್ಗೆ ಪ್ರತಿಕ್ರಿಯಿಸಿದ ಕನೇರಿಯಾ, ಈ ಮೊತ್ತವನ್ನು ಒಲಿಂಪಿಕ್ ಚಿನ್ನದ ಪದಕ ವಿಜೇತ ಮತ್ತು ಅವರ ಗಮನಾರ್ಹ ಸಾಧನೆಗೆ ಅಗೌರವ ಎಂದು ಕರೆದಿದ್ದಾರೆ. ಇತರ ದೇಶಗಳು ತಮ್ಮ ಒಲಿಂಪಿಕ್ ಹೀರೋಗಳಿಗೆ ನೀಡುವ ಬಹುಮಾನದ ಮೊತ್ತಕ್ಕೆ ಹೋಲಿಸಿದರೆ ಬಹುಮಾನದ ಮೊತ್ತ ಏನೂ ಅಲ್ಲ ಪಾಕಿಸ್ತಾನದ ಮಾಜಿ ಸ್ಪಿನ್ನರ್ ಹೇಳಿದ್ದಾರೆ.

ನದೀಮ್​​ಗೆ ಉತ್ತಮ ಮಾನ್ಯತೆ ನೀಡುವಂತೆ ಕನೇರಿಯಾ ಆಗ್ರಹ

2024ರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ನದೀಮ್ ಕೂಡ ಸುಮಾರು 42 ಲಕ್ಷ ರೂ.ಗಳನ್ನು ಬಹುಮಾನವಾಗಿ ಪಡೆಯುತ್ತಾರೆ. ಅಂಥದ್ದರಲ್ಲಿ ಕೇವಲ 10 ಲಕ್ಷ ರೂಪಾಯಿ ಘೋಷಿಸಿದ್ದೀರಿ. ಅದರಲ್ಲಿ 243,069 ರೂಪಾಯಿ ಪ್ಯಾರಿಸ್​ಗೆ ಹೋಗುವ ವಿಮಾನದ ಟಿಕೆಟ್​ಗೆ ಇದೆ ಎಂದು ಕನೇರಿಯಾ ಹೇಳಿದ್ದಾರೆ.

ಒಲಿಂಪಿಕ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಸಾಧನೆಗಾಗಿ ನದೀಮ್ ಅವರಿಗೆ ಹೆಚ್ಚು ಬಹುಮಾನವನ್ನು ನೀಡುವಂತೆ ಅವರು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ. ಕನೇರಿಯಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. “ಮಾನ್ಯ ಪ್ರಧಾನ ಮಂತ್ರಿಯವರೇ, ಕನಿಷ್ಠ ಆಕರ್ಷಕ ಅಭಿನಂದನೆಗಳನ್ನು ಸಲ್ಲಿಸಿ. ನೀವು ನೀಡಿದ ಸಣ್ಣ ಮೊತ್ತದ ಚಿತ್ರವನ್ನು ತೆಗೆಯಿರಿ. ಈ ಮೊತ್ತವು ತುಂಬಾ ಸಣ್ಣದು. ಅವರಿಗೆ ವಿಮಾನ ಟಿಕೆಟ್ ಗಳನ್ನು ಸಹ ಖರೀದಿಸಲು ಸಾಧ್ಯವಿಲ್ಲ. ಅರ್ಷದ್ ಅವರ ಶ್ರಮವನ್ನು ಪರಿಗಣಿಸಿದರೆ ಇದು ಅವರಿಗೆ ಮತ್ತು ರಾಷ್ಟ್ರಕ್ಕೆ ಮಾಡಿದ ಅವಮಾನ” ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಕಂಚಿನ ಪದಕ ಗೆದ್ದಿರುವ ಸ್ಪರ್ಧಿಗಳಿಗೆ ಆಯಾ ರಾಜ್ಯಗಳೇ ಕೋಟಿ ಕೋಟಿ ರೂಪಾಯಿ ಬಹುಮಾನ ನೀಡುತ್ತಿದೆ. ಅಂಥದ್ದರಲ್ಲಿ ಪಾಕಿಸ್ತಾನದ ಪ್ರಧಾನಿ ಕೇವಲ 10 ಲಕ್ಷ ರೂಪಾಯಿ ಕೊಟ್ಟು ಟೀಕೆಗೆ ಒಳಗಾಗಿದ್ದಾರೆ.

Continue Reading
Advertisement
Heart attack
ಉಡುಪಿ2 mins ago

Heart Attack : ಮಲಗಿದ್ದಲೇ ಹೃದಯ ಸ್ತಬ್ಧ! ನಾಲ್ಕೈದು ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Paris Olympics
ಪ್ರಮುಖ ಸುದ್ದಿ13 mins ago

Paris Olympics Medal Table: ಪಾಕಿಸ್ತಾನ 1 ಪದಕ ಗೆದ್ದರೂ ಪದಕ ಪಟ್ಟಿಯಲ್ಲಿ ಮೇಲೆ, ಭಾರತ 6 ಪದಕ ಗೆದ್ದರೂ ಕೆಳಗೆ ಏಕೆ?

John Abraham slams actors for endorsing paan masala
ಬಾಲಿವುಡ್22 mins ago

John Abraham : ನಾನು ಸಾವನ್ನು ಮಾರಲ್ಲ ಎಂದು ಶಾರುಖ್ ಖಾನ್, ಅಜಯ್ ದೇವಗನ್‌ಗೆ ಪರೋಕ್ಷವಾಗಿ ತಿರುಗೇಟು ಕೊಟ್ಟ ಜಾನ್ ಅಬ್ರಹಾಂ!

ಚಿನ್ನದ ದರ31 mins ago

Gold Rate Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

Viral Video
Latest40 mins ago

Viral Video: ವೇಗವಾಗಿ ಬಂದು ಅಪ್ಪಳಿಸಿದ ಸ್ಕಾರ್ಪಿಯೋ; ಒಂದೇ ಕುಟುಂಬದ ಮೂವರು ಪಾರಾಗಿದ್ದೇ ಅಚ್ಚರಿ!

anganawadi worker
ಕೊಪ್ಪಳ46 mins ago

Anganawadi workers: ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ಅಂಗನವಾಡಿ ಶಿಕ್ಷಕಿ, ಸಹಾಯಕಿ ವಜಾ!

Hindenburg
ವಾಣಿಜ್ಯ56 mins ago

Hindenburg: ಶೀಘ್ರದಲ್ಲೇ ಭಾರತದಲ್ಲಿ ಬಹುದೊಡ್ಡ ಸಂಚಲನ ಸೃಷ್ಟಿಯಾಗಲಿದೆ; ಹೊಸದೊಂದು ಬಾಂಬ್‌ ಸಿಡಿಸಿದ ಹಿಂಡನ್‌ಬರ್ಗ್‌

Indian Men’s Hockey Team
ಕ್ರೀಡೆ1 hour ago

Indian Men’s Hockey Team: ತವರಿಗೆ ಮರಳಿದ ಕಂಚು ವಿಜೇತ ಭಾರತ ಹಾಕಿ ತಂಡ; ದಿಲ್ಲಿಯಲ್ಲಿ ಭರ್ಜರಿ ಸ್ವಾಗತ

Road Accident
ರಾಯಚೂರು1 hour ago

Road Accident : ಜವರಾಯನಂತೆ ಬಂದ ಟಾಟಾಏಸ್‌ ಚಾಲಕ; ಪಾದಯಾತ್ರೆ ಹೊರಟಿದ್ದ ತಾಯಿ ದುರ್ಮರಣ, ಮಗಳು ಗಂಭೀರ

Sexual Abuse
Latest1 hour ago

Sexual Abuse: ತನ್ನ ಹಸ್ತಮೈಥುನದ ವಿಡಿಯೊ ಕಳುಹಿಸಿ ವಿದ್ಯಾರ್ಥಿಯನ್ನು ಕಾಮದ ಬಲೆಗೆ ಸಿಲುಕಿಸಿದ್ದ ಶಿಕ್ಷಕಿಯ ಬಂಧನ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌