Actor Suriya: ಸೂರ್ಯಗೆ ಸೆಟ್‌ನಲ್ಲಿ ಗಾಯ: ಆರೋಗ್ಯ ಸ್ಥಿತಿ ಹೇಗಿದೆ? - Vistara News

ಕಾಲಿವುಡ್

Actor Suriya: ಸೂರ್ಯಗೆ ಸೆಟ್‌ನಲ್ಲಿ ಗಾಯ: ಆರೋಗ್ಯ ಸ್ಥಿತಿ ಹೇಗಿದೆ?

Actor Suriya: ಮಾರ್ಚ್ 28 ರಂದು ಸೂರ್ಯ 44 ರ ಫಸ್ಟ್ ಲುಕ್ ಪೋಸ್ಟರ್ ಅನ್ನು ಸೂರ್ಯ ಬಿಡುಗಡೆ ಮಾಡಿದರು. ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ.

VISTARANEWS.COM


on

Actor Suriya minor injury while shooting for film
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ (Actor Suriya) ಅವರ ಮುಂಬರುವ ಚಿತ್ರದ ಶೂಟಿಂಗ್ ವೇಳೆ ನಟ ಸೂರ್ಯ ಅವರ ತಲೆಗೆ ಗಾಯವಾಗಿದೆ. ಈ ಘಟನೆಯ ನಂತರ ತಾತ್ಕಾಲಿಕವಾಗಿ ಸೂರ್ಯ 44 ಚಿತ್ರದ ಶೂಟಿಂಗ್‌ವನ್ನು ( Karthik Subbaraj) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸೂರ್ಯ ಸಿನಿಮಾದ ತಂಡದವರೂ ಸಾಕಷ್ಟು ಎಚ್ಚರಿಕೆ ವಹಿಸಿದ್ದರು. ಆದಾಗ್ಯೂ ಅವಘಡ ಸಂಭವಿಸಿದೆ. ಈಗ ಸೂರ್ಯ ಚೇತರಿಕೆಕಂಡಿದ್ದಾರೆ. ಈ ಬಗ್ಗೆ ನಿರ್ಮಾಪಕ ರಾಜಶೇಖರ್ ಪಾಂಡಿಯನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ನಿರ್ಮಾಪಕ ರಾಜಶೇಖರ್ ಪಾಂಡಿಯನ್ ಅವರು ಎಕ್ಸ್ ನಲ್ಲಿ ನಟನ ಯೋಗಕ್ಷೇಮದ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಿದರು. ʻʻನಟನಿಗೆ ಸಣ್ಣ ಗಾಯವಾಗಿದೆ. ದಯವಿಟ್ಟು ಚಿಂತಿಸಬೇಡಿ, ಸೂರ್ಯ ಅಣ್ಣ ನಿಮ್ಮೆಲ್ಲರ ಪ್ರೀತಿ ಮತ್ತು ಪ್ರಾರ್ಥನೆಯೊಂದಿಗೆ ಸಂಪೂರ್ಣವಾಗಿ ಚೆನ್ನಾಗಿದ್ದಾರೆʼʼಎಂದು ಬರೆದುಕೊಂಡಿದ್ದಾರೆ.

ಈ ಘಟನೆ ಬಗ್ಗೆ ಕೇಳಿ ಸೂರ್ಯ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ವ್ಯಕ್ತವಾಗಿತ್ತು. ಆದರೆ, ಈಗ ನಿರ್ಮಾಪಕರು ಈ ಬಗ್ಗೆ ಮಾಹಿತಿ ಕೊಟ್ಟ ಬಳಿಕ ಎಲ್ಲರೂ ನಿಟ್ಟುಸಿರು ಬಿಡುವಂತೆ ಆಗಿದೆ. ಅವರು ಬೇಗ ಚೇತರಿಕೆ ಕಂಡು ಮತ್ತೆ ಶೂಟಿಂಗ್ ಸೆಟ್ ಸೇರಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಮಾರ್ಚ್ 28 ರಂದು ಸೂರ್ಯ 44 ರ ಫಸ್ಟ್ ಲುಕ್ ಪೋಸ್ಟರ್ ಅನ್ನು ಸೂರ್ಯ ಬಿಡುಗಡೆ ಮಾಡಿದರು. ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ.

ಇದನ್ನೂ ಓದಿ: IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

ʻಕಂಗುವʼ ಸಿನಿಮಾ

ಈಗಾಗಲೇ ಸೂರ್ಯ ಅಭಿನಯದ ಕಂಗುವ ಸಿನಿಮಾ (Kanguva vs Alia Bhatt) ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. “ಕಂಗುವ” ಪ್ರೇಕ್ಷಕರಿಗೆ ಹೆಚ್ಚು ನಿರೀಕ್ಷಿತ ಚಿತ್ರವಾಗಿದೆ. ಶಿವ ನಿರ್ದೇಶನದ ಈ ಚಿತ್ರದಲ್ಲಿ ಸೂಪರ್‌ಸ್ಟಾರ್ ಸೂರ್ಯ ಸಂಪೂರ್ಣವಾಗಿ (Kanguva Movie) ಹೊಸ ಅವತಾರದಲ್ಲಿ ನಟಿಸಿದ್ದಾರೆ. ಮೂರು ಅವತಾರದಲ್ಲಿ ಸೂರು ಮಿಂಚುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಸೂರ್ಯ ಅವರ ಪ್ರತಿಯೊಂದು ಪಾತ್ರವು ಹಿಂದೆಂದೂ ನೋಡಿರದ ವಿಭಿನ್ನ ಲುಕ್‌ ಇರಲಿದೆ ಎಂದಿದ್ದಾರೆ.

ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.

ಮೂಲಗಳ ಪ್ರಕಾರ ಅಮೆಜಾನ್‌ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Thangalaan Movie: ಬಹುನಿರೀಕ್ಷಿತ ʼತಂಗಲಾನ್‍ʼ ಚಿತ್ರಕ್ಕೆ ʼಕಾಂತಾರʼ ಸ್ಫೂರ್ತಿ ಎಂದ ಚಿಯಾನ್‌ ವಿಕ್ರಮ್‌!

Thangalaan Movie: ಜ್ಞಾನವೇಲ್ ರಾಜ್ ನಿರ್ಮಾಣದ ಪಾ. ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್ʼ ಚಿತ್ರವು ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಬ್ರಿಟೀಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಆಧರಿಸಿ ಈ ಚಿತ್ರ ಮಾಡಲಾಗಿದೆ. ಈ ಸಿನಿಮಾದಲ್ಲಿ ವಿಕ್ರಮ್, ಮಾಳವಿಕಾ ಮೋಹನನ್, ಪಾರ್ವತಿ, ಬ್ರಿಟೀಷ್‍ ನಟ ಡೇನಿಯಲ್‍ ಮತ್ತಿತರರು ನಟಿಸಿದ್ದಾರೆ.

VISTARANEWS.COM


on

Thangalan Movie
Koo

ಬೆಂಗಳೂರು: ಜ್ಞಾನವೇಲ್ ರಾಜ್ ನಿರ್ಮಾಣದ,‌ ಪಾ ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್ʼ ಚಿತ್ರವು (Thangalaan Movie) ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಬ್ರಿಟೀಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಚಿತ್ರ ಮಾಡಿದ್ದಾರೆ “ಕಬಾಲಿ” ಖ್ಯಾತಿಯ ನಿರ್ದೇಶಕ ಪಾ ರಂಜಿತ್‍. ಈ ಚಿತ್ರದಲ್ಲಿ ವಿಕ್ರಮ್, ಮಾಳವಿಕಾ ಮೋಹನನ್, ಪಾರ್ವತಿ, ಬ್ರಿಟೀಷ್‍ ನಟ ಡೇನಿಯಲ್‍ ಮುಂತಾದವರು ನಟಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ವಿಕ್ರಮ್‍, ‘ನಾನು ಇದುವರೆಗೂ “ಅನ್ನಿಯನ್”, “ಪಿತಾಮಗನ್” ಸೇರಿದಂತೆ ಹಲವು ಚಿತ್ರಗಳಲ್ಲಿ ವಿಭಿನ್ನವಾದ ಪಾತ್ರಗಳನ್ನು ಮಾಡಿದ್ದೇನೆ. ಆದರೆ ‘ತಂಗಲಾನ್‍’ ಚಿತ್ರಕ್ಕೆ ಹೋಲಿಸಿದರೆ ಅದು ಶೇ. 8ರಷ್ಟು ಮಾತ್ರ. ಇದು ನನ್ನ ಜೀವನದ ಅತ್ಯಂತ ಕಷ್ಟಕರವಾದ ಚಿತ್ರ. ಪ್ರತಿ ದೃಶ್ಯಕ್ಕೂ ನಾವು ಸಾಕಷ್ಟು ಕಷ್ಟಪಟ್ಟಿದ್ದೇವೆ. ಚಿತ್ರೀಕರಣ ಸಮಯದಲ್ಲಿ ಸಾಕಷ್ಟು ಏಟು ಬಿದ್ದಿವೆ. ರೊಮ್ಯಾಂಟಿಕ್‍ ದೃಶ್ಯಗಳು ಸಹ ಕಷ್ಟವಾಗಿತ್ತು. ನಾವು ನಮಗೆ ಗೊತ್ತಿಲ್ಲದ ಪಾತ್ರಗಳಾಗುವುದೇ ನಿಜವಾದ ಕಷ್ಟ. ಬ್ರಿಟಿಷರ ಆಳ್ವಿಕೆ ಸಮಯದಲ್ಲಿ ಏನಾಗಿದ್ದರಿಬಹುದು? ಆಗಿನ ಬುಡಕಟ್ಟು ಜನಾಂಗದವರು ಹೇಗಿದ್ದಿರಬಹುದು ಎಂದು ನಮಗೆ ಗೊತ್ತಿಲ್ಲ. ಹಾಗಾಗಿ, ಯಾವ ದೃಶ್ಯವೂ ಸುಲಭವಾಗಿರಲಿಲ್ಲ. ಇಲ್ಲಿ ನಾವು ಅವರ ತರಹ ನಟನೆ ಮಾಡಬೇಕು ಎಂಬುದಕ್ಕಿಂತ, ಅವರ ತರಹ ಇರಬೇಕಿತ್ತು. ಈ ಚಿತ್ರಕ್ಕಾಗಿ ಒಂದು ಶತಕದ ಹಿಂದಕ್ಕೆ ಹೋಗುವಂತಾಯಿತು ಎಂದು ತಿಳಿಸಿದರು.

ಇದನ್ನೂ ಓದಿ: Vinesh Phogat: ವಿನೇಶ್​ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

ಈ ಚಿತ್ರದ ಪಾತ್ರಕ್ಕಾಗಿ ವಿಕ್ರಮ್‍ ಆರು ತಿಂಗಳ ತಯಾರಿ ನಡೆಸಿದ್ದಾರಂತೆ ಹಾಗೂ ತುಂಬಾ ತೂಕವನ್ನು ಕಳೆದುಕೊಂಡಿದ್ದಾರಂತೆ. ದೈಹಿಕವಾಗಿ ಬದಲಾಗುವುದಕ್ಕಿಂತ ಮಾನಸಿಕವಾಗಿ ಬದಲಾಗುವುದು ಬಹಳ ಕಷ್ಟವಾಗಿತ್ತು. ಪ್ರತಿ ದಿನ ನಾಲ್ಕೈದು ಗಂಟೆಗಳ ಕಾಲ ಮೇಕಪ್‍ ಹಾಕಿಕೊಳ್ಳಬೇಕಿತ್ತು ಎಂದು ಚಿತ್ರೀಕರಣ ಸಮಯದ ಅನುಭವವನ್ನು ವಿಕ್ರಮ್ ಹಂಚಿಕೊಂಡರು.

ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಮಾಡುವುದಕ್ಕೆ ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರʼ ದೊಡ್ಡ ಸ್ಫೂರ್ತಿ ಎಂದು ತಿಳಿಸಿದ ಚಿಯಾನ್ ವಿಕ್ರಮ್, ಉತ್ತಮ ಕಂಟೆಂಟ್ ಇದ್ದರೆ ಜಗತ್ತಿನ ಯಾವ ಮೂಲೆಗೆ ಬೇಕಾದರೂ ತೆಗೆದುಕೊಂಡು ಹೋಗಬಹುದು ಎನ್ನುವುದನ್ನು ಆ ಚಿತ್ರ ತೋರಿಸಿತು ಎಂದರು.

ಇದನ್ನೂ ಓದಿ: Repo Rate: ಗೃಹಸಾಲದ ಇಎಂಐ ಭಾರ ಇಳಿಕೆ ಇಲ್ಲ; ರೆಪೋ ದರ ಯಥಾಸ್ಥಿತಿ

ಚಿತ್ರ ಸಾಗಿ ಬಂದ ಬಗ್ಗೆ ನಿರ್ದೇಶಕ ಪಾ. ರಂಜಿತ್ ವಿವರಿಸಿದರು. “ನಾನು ಮತ್ತು ವರಲಕ್ಷ್ಮೀ” ಕನ್ನಡ ಚಿತ್ರದಲ್ಲಿ ನಟಿಸಿದ್ದನ್ನು ನೆನಪಿಸಿಕೊಂಡ ನಟಿ ಮಾಳವಿಕ ಮೋಹನನ್ “ತಂಗಲಾನ್” ಚಿತ್ರದ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ಹಾಲಿವುಡ್ ನಟ ಡೇನಿಯಲ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಈ ಚಿತ್ರ ಪ್ರತಿಷ್ಠಿತ ಕೆ.ವಿ‌.ಎನ್ ಸಂಸ್ಥೆಯ ಮೂಲಕ ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ‌.

Continue Reading

ಕಾಲಿವುಡ್

Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

Actor Dhanush: ಇಲ್ಲಿಯವೆರೆಗೆ ಸಿನಿಮಾಗೆ ಯಾವುದೇ ಸಿನಿಮಾಗಳ ಸ್ಪರ್ಧೆ ಇರಲಿಲ್ಲ. ಆದರೆ ಮುಂದಿನ ವಾರು ಬಾಲಿವುಡ್‌ ಮೂರು ಸಿನಿಮಾಗಳು, ‘ಸ್ತ್ರೀ 2’, ‘ಖೇಲ್ ಖೇಲ್ ಮೇ’ ಮತ್ತು ‘ವೇದಾ’ ತೆರೆಗೆ ಬರುತ್ತಿವೆ. ಅದೇ ರೀತಿ ದಕ್ಷಿಣ ಭಾರತದ ಸಿನಿಮಾಗಳಾದ ತಂಗಲಾನ್‌, ‘ರಘುತಾತ’, ‘ಡಬಲ್ ಐಸ್ಮಾರ್ಟ್’, ‘ಮಿಸ್ಟರ್ ಬಚ್ಚನ್’ ಕೂಡ ತೆರೆಗೆ ಬರುತ್ತಿದೆ.

VISTARANEWS.COM


on

Actor Dhanush Raayan set for OTT release
Koo

ಬೆಂಗಳೂರು: ಧನುಷ್ (Actor Dhanush) ಬರೆದು ನಿರ್ದೇಶಿಸಿರುವ ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ʻರಾಯನ್ʼ ಸಿನಿಮಾವನ್ನು ಕಲಾನಿಧಿ ಮಾರನ್ನಿ ರ್ಮಿಸಿದ್ದಾರೆ. ಸಿನಿಮಾ ರಿಲೀಸ್‌ ಆಗಿ ಭಾರತದಲ್ಲಿ 80.20 ಕೋಟಿ ಕಲೆಕ್ಷನ್‌ ಮಾಡಿದೆ. ಇದೀಗ ಚಿತ್ರವು ಶೀಘ್ರದಲ್ಲೇ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಚಿತ್ರದ ಅಧಿಕೃತ ಸ್ಟ್ರೀಮಿಂಗ್ ಹಕ್ಕು ಪ್ರೈಮ್ ವಿಡಿಯೋ ಮತ್ತು ಸನ್ ಪಿಕ್ಚರ್ಸ್‌ ತೆಗೆದುಕೊಂಡಿದೆ.

ಚಿತ್ರವು ಆಗಸ್ಟ್ 30 ರೊಳಗೆ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಅಂದರೆ ತಿಂಗಳ ಕೊನೆಯ ವಾರದಲ್ಲಿ, ಥಿಯೇಟ್ರಿಕಲ್ ಬಿಡುಗಡೆಯಾದ ನಾಲ್ಕು ವಾರಗಳ ನಂತರ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಇಲ್ಲ. ಈಗಾಗಲೇ ದೇಶೀಯ ಬಾಕ್ಸ್ ಆಫೀಸ್‌ನಲ್ಲಿ 12 ದಿನಗಳ ನಂತರ 80.20 ಕೋಟಿ ನಿವ್ವಳವನ್ನು ಸಂಗ್ರಹಿಸಿದೆ ಎಂದು ವರದಿಯಾಗಿದೆ. ವಿಶ್ವದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ಇದುವರೆಗೆ 126.75 ಕೋಟಿ ರೂ. ಆಗಿದೆ.

ಇಲ್ಲಿಯವೆರೆಗೆ ಸಿನಿಮಾಗೆ ಯಾವುದೇ ಸಿನಿಮಾಗಳ ಸ್ಪರ್ಧೆ ಇರಲಿಲ್ಲ. ಆದರೆ ಮುಂದಿನ ವಾರು ಬಾಲಿವುಡ್‌ ಮೂರು ಸಿನಿಮಾಗಳು, ‘ಸ್ತ್ರೀ 2’, ‘ಖೇಲ್ ಖೇಲ್ ಮೇ’ ಮತ್ತು ‘ವೇದಾ’ ತೆರೆಗೆ ಬರುತ್ತಿವೆ. ಅದೇ ರೀತಿ ದಕ್ಷಿಣ ಭಾರತದ ಸಿನಿಮಾಗಳಾದ ತಂಗಲಾನ್‌, ‘ರಘುತಾತ’, ‘ಡಬಲ್ ಐಸ್ಮಾರ್ಟ್’, ‘ಮಿಸ್ಟರ್ ಬಚ್ಚನ್’ ಕೂಡ ತೆರೆಗೆ ಬರುತ್ತಿದೆ.

‘ಕಲ್ಕಿ 2898 AD’ ಕೂಡ ಅದೇ ಸಮಯದಲ್ಲಿ ಪ್ರೈಮ್ ವಿಡಿಯೊದಲ್ಲಿ ಪ್ರೀಮಿಯರ್ ಆಗಲಿದೆ ಎಂದು ವರದಿಯಾಗಿದೆ. ಪ್ರಭಾಸ್ ಅಭಿನಯದ ಚಿತ್ರವು ಆಗಸ್ಟ್ 23 ರಂದು ಒಟಿಟಿಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Akshay Kumar: ಅಕ್ಷಯ್ ಕುಮಾರ್ ಸಿನಿಮಾ ಹಾಡಿಗೆ ಹೊಸ ಟಚ್‌ ಕೊಟ್ಟ ʻಹೇ ಬೇಬಿʼ ಖ್ಯಾತಿಯ ರಿತೇಶ್, ಫರ್ದೀನ್ ಖಾನ್; ವಿಡಿಯೊ ವೈರಲ್‌!

ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ಎಸ್‌ಜೆ ಸೂರ್ಯ, ಪ್ರಕಾಶ್ ರಾಜ್, ದುಶಾರ ವಿಜಯನ್ ಮತ್ತು ಸೆಲ್ವರಾಘವನ್ ಪ್ರಮುಖ ಪಾತ್ರಗಳಲ್ಲಿ ಇದ್ದಾರೆ. ಚಿತ್ರವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ ‘A’ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಸನ್ ಪಿಕ್ಚರ್ಸ್‌ಗಾಗಿ ಕಲಿನಿತಿ ಮಾರನ್ ನಿರ್ಮಿಸಿರುವ ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ಸಂಯೋಜನೆ, ಓಂ ಪ್ರಕಾಶ್ ಅವರ ಛಾಯಾಗ್ರಹಣ ಮತ್ತು ಪ್ರಸನ್ನ ಜಿಕೆ ಸಂಕಲನವಿದೆ.

ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ರಾಯನ್‌’ (Raayan). ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದರು. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ. ಧನುಷ್‌ ಕೊನೆಯದಾಗಿ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಕಾಣಿಸಿಕೊಂಡರು. ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಚಿತ್ರದಲ್ಲಿ ಶಿವ ರಾಜ್‌ಕುಮಾರ್, ಪ್ರಿಯಾಂಕಾ ಮೋಹನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್ ಮತ್ತು ಮೂರ್ ಪ್ರಮುಖ ಪಾತ್ರಗಳಲ್ಲಿದ್ದರು.

ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ.

Continue Reading

ಕಾಲಿವುಡ್

Chiyaan Vikram: ವೇದಿಕೆಯಲ್ಲೇ ನಿರೂಪಕಿ ಸುಮಾಗೆ ಕಿಸ್ ಕೊಟ್ಟ ಖ್ಯಾತ ನಟ!

Chiyaan Vikram: ಏಕಾಏಕಿ ನಟ ನಿರೂಪಕಿ ಕೈಗೆ ಮುತ್ತು ಕೊಟ್ಟಾಗ ಸುಮಾ ಆತನಿಗೆ ಒಂದಷ್ಟು ತೆಲುಗು ಸಾಲುಗಳನ್ನು ಹೇಳಿಕೊಟ್ಟರು, ಅದನ್ನು ಹೇಳಿ ಡೇನಿಯಲ್ ಚಪ್ಪಾಳೆ ಗಿಟ್ಟಿಸಿದರು. ಈ ವೇಳೆ ಸುಮಾ ಶೇಕ್ ಹ್ಯಾಂಡ್ ಮಾಡಿ ಆತನನ್ನು ಬೀಳ್ಕೊಡಲು ಹೊರಟರು.

VISTARANEWS.COM


on

Chiyaan Vikram danie caltagirone kissed hand on stage
Koo

ಬೆಂಗಳೂರು:  ಕಾಲಿವುಡ್‌ ನಟ ಚಿಯಾನ್ ವಿಕ್ರಮ್ (Chiyaan Vikram) ನಟನೆಯ ʻʻತಂಗಲಾನ್‌ʼʼ ಚಿತ್ರ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ನಿರ್ದೇಶಕ ಪಾ ರಂಜಿತ್, ‘ತಾಂಗಾಲನ್’ ಸಿನಿಮಾ ನಿರ್ದೇಶನ ಮಾಡಿದ್ದು ಪ್ರತಿಭಾವಂತ ನಟ ಚಿಯಾನ್ ವಿಕ್ರಂ, ‘ತಂಗಾಲನ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ನಿಜವಾದ ‘ಕೆಜಿಎಫ್’ ಕತೆ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರ ಆಗಸ್ಟ್‌ 15ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ಸಿನಿಮಾ ಪ್ರಿ ರಿಲೀಸ್ ಈವೆಂಟ್ ನಡೆಯಿತು.

ಚಿತ್ರದಲ್ಲಿ ಹಾಲಿವುಡ್ ನಟ ಡೇನಿಯಲ್ ಕ್ಯಾಲ್ಟಗಿರೋನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ತಂಗಲಾನ್’ ವೇದಿಕೆಯಲ್ಲಿ ಹಾಲಿವುಡ್ ನಟ ಡೇನಿಯಲ್ ಕ್ಯಾಲ್ಟಗಿರೋನ್ ಇದ್ದಕ್ಕಿದಂತೆ ಸುಮಾ ಕೈಗೆ ಮುತ್ತಿಟ್ಟಿದ್ದಾರೆ. ಇದರಿಂದ ಒಂದು ಕ್ಷಣ ಶಾಕ್ ಆಗಿದ್ದ ಸುಮಾ ಬಳಿಕ ತಮಾಷೆಯಾಗಿ ಅದನ್ನು ತಿಳಿಗೊಳಿಸಿದ್ದಾರೆ.

ಏಕಾಏಕಿ ನಟ ನಿರೂಪಕಿ ಕೈಗೆ ಮುತ್ತು ಕೊಟ್ಟಾಗ ಸುಮಾ ಆತನಿಗೆ ಒಂದಷ್ಟು ತೆಲುಗು ಸಾಲುಗಳನ್ನು ಹೇಳಿಕೊಟ್ಟರು, ಅದನ್ನು ಹೇಳಿ ಡೇನಿಯಲ್ ಚಪ್ಪಾಳೆ ಗಿಟ್ಟಿಸಿದರು. ಈ ವೇಳೆ ಸುಮಾ ಶೇಕ್ ಹ್ಯಾಂಡ್ ಮಾಡಿ ಆತನನ್ನು ಬೀಳ್ಕೊಡಲು ಹೊರಟರು.

ಡೇನಿಯಲ್ ಆಕೆಯ ಕೈಗೆ ಮುತ್ತು ಕೊಟ್ಟಿದ್ದಾರೆ. ರಾಜಾ ನಮ್ಮ ಸಹೋದರ ಇವರು. ರಾಖಿ ಹಬ್ಬ ಬರುತ್ತಿದೆ. ‘ಅಣ್ಣಯ್ಯ’ ಎಂದು ಹಾಡು ಹಾಡಿ ತಮಾಷೆಯಾಗಿ ಹೇಳಿದರು. ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

ಕೋಲಾರದ ಚಿನ್ನದ ಗಣಿ ಕಾರ್ಮಿಕರ ಜೀವನದ ಸುತ್ತ ಸುತ್ತುವ ನೈಜ ಘಟನೆಗಳಿಂದ ಪ್ರೇರಿತವಾದ ʻʻತಂಗಲಾನ್‌ʼʼನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಚಿಯಾನ್‌ ವಿಕ್ರಮ್‌. ಪಾ ರಂಜಿತ್ ನಿರ್ದೇಶನದ ಚಿತ್ರದಲ್ಲಿ ವಿಕ್ರಮ್‌ ಬುಡಕಟ್ಟಿನ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ತಂಗಲಾನ್‌ನಲ್ಲಿನ ಈ ಪಾತ್ರಕ್ಕಾಗಿಯೇ ವಿಕ್ರಮ್ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಬ್ರಿಟಿಷರು ಹಾಗೂ ಬುಡಕಟ್ಟು ಸಮಾಜದ ನಡುವೆ ನಡೆಯುವ ಸಂಘರ್ಷವನ್ನು ʻತಂಗಲಾನ್‌ʼʼ ಹೇಳುತ್ತಿದೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ನಟ ಚಿಯಾನ್ ವಿಕ್ರಮ್ ಜತೆ ಪಾರ್ವತಿ ಮೆನನ್‌, ಮಾಳವಿಕಾ ಮೋಹನ್‌ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಕೆಜಿಎಫ್‌ ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಲ್ಪನಿಕ ಕಥೆಯನ್ನು ಕಟ್ಟಿಕೊಟ್ಟರೆ, ಕೆಜಿಎಫ್‌ನ ನಿಜವಾದ ಕಥೆಯನ್ನು ನಿರ್ದೇಶಕ ಪಾ. ರಂಜಿತ್‌ ಹೇಳಲು ಹೊರಟ್ಟಿದ್ದಾರೆ ಎಂದು ಈ ಮುಂಚೆ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೂಲಕ ಹೊಸ ಕಥೆಯನ್ನು ಹೇಳಲು ಹೊರಟ್ಟಿದ್ದಾರೆ ರಂಜಿತ್‌.

ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಸ್ಟುಡಿಯೋ ಗ್ರೀನ್ ಮತ್ತು ನೀಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ತಂಗಲಾನ್’ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಪಾರ್ವತಿ ತಿರುವೋತ್ತು, ಮಾಳವಿಕಾ ಮೋಹನನ್, ಪಶುಪತಿ, ಡೇನಿಯಲ್ ಕಾಲ್ಟಗಿರೋನ್ ಮತ್ತು ಇನ್ನೂ ಅನೇಕರು ಇದ್ದಾರೆ. ಜಿವಿ ಪ್ರಕಾಶ್ ಕುಮಾರ್ ಚಿತ್ರಕ್ಕೆ ಸಂಗೀತವನ್ನು ರಚಿಸಿದ್ದಾರೆ.

ಅಣ್ಣಿಯಾನ್ ನಟ ಚಿತ್ರನಿರ್ಮಾಪಕ ಎಸ್‌ಯು ಅರುಣ್ ಕುಮಾರ್ ಅವರೊಂದಿಗೆ ತಾತ್ಕಾಲಿಕವಾಗಿ ʻಚಿಯಾನ್ 62ʼ ಎಂಬ ಯೋಜನೆಯಲ್ಲಿ ಕೆಲಸ ಮಾಡಲಿದ್ದಾರೆ. ಚಿತ್ರದಲ್ಲಿ ಎಸ್ ಜೆ ಸೂರ್ಯ ಮತ್ತು ಸೂರಜ್ ವೆಂಜರಮೂಡು ಪ್ರಮುಖ ಭಾಗಗಳಲ್ಲಿದ್ದಾರೆ.

ಈ ಚಿತ್ರವನ್ನು HR ಎಂಟರ್‌ಟೈನ್‌ಮೆಂಟ್‌ನ ಬ್ಯಾನರ್‌ನಡಿಯಲ್ಲಿ ಶಿಬು ಥಮೀನ್ಸ್ ಮತ್ತು ರಿಯಾ ಶಿಬು ನಿರ್ಮಿಸಿಲಿದ್ದಾರೆ.

Continue Reading

ಒಟಿಟಿ

Indian 2 Ott: ಇಂಡಿಯನ್ 2 ಒಟಿಟಿ ಸ್ಟ್ರೀಮಿಂಗ್ ಡೇಟ್ ಅನೌನ್ಸ್!

Indian 2 Ott: ಇಂಡಿಯನ್ 2 ಚಿತ್ರವೂ ಜುಲೈ ತಿಂಗಳಲ್ಲಿ ವಿಶ್ವದಾದ್ಯಂತ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಂಡಿತು. ಆದರೆ ಹೆಚ್ಚಾಗಿ ನಕಾರಾತ್ಮಕ ವಿಮರ್ಶೆಗಳೇ ಕೇಳಿ ಬಂದಿವೆ. ಬರವಣಿಗೆ, ಅತಿಯಾದ ಉದ್ದ, ಭವ್ಯತೆಗೆ ಹೆಚ್ಚಿನ ಒತ್ತು ಧ್ವನಿಮುದ್ರಿಕೆ ಕುರಿತು ಆಕ್ಷೇಪ ಕೇಳಿ ಬಂದಿದ್ದರೂ ಕಮಲ್ ಹಾಸನ್ ಅಭಿನಯಕ್ಕೆ ಮಾತ್ರ ಭಾರಿ ಮೆಚ್ಚುಗೆ ಗಳಿಸಿದೆ.

VISTARANEWS.COM


on

Indian 2 Ott release official date announced
Koo

ಬೆಂಗಳೂರು: ಇಂಡಿಯನ್ 2 (Indian 2 OTT Release) ಜುಲೈ 12 ಚಿತ್ರಮಂದಿರಗಳಲ್ಲಿ (movie theater) ಬಿಡುಗಡೆಯಾಗಿತ್ತು. ಕಮಲ್ ಹಾಸನ್ (kamal hasan), ಸಿದ್ಧಾರ್ಥ್, ಎಸ್.ಜೆ. ಸೂರ್ಯ ಮತ್ತು ರಾಕುಲ್ ಪ್ರೀತ್ ಸಿಂಗ್ ನಟಿಸಿರುವ ಈ ಚಿತ್ರವು ವಿಮರ್ಶಕರು, ಅಭಿಮಾನಿಗಳಿಂದ ನಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು. ಚಿತ್ರವು ಜುಲೈ 12 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.ಈ ಚಿತ್ರವು ಈಗ ಆಗಸ್ಟ್ 9 ರಂದು ಜನಪ್ರಿಯ OTT ಕಂಪನಿ ನೆಟ್‌ಫ್ಲಿಕ್ಸ್ ಮೂಲಕ ಪ್ರೇಕ್ಷಕರನ್ನು ತಲುಪಲಿದೆ. ಭಾರತೀಯಾಡು 2 ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಮನರಂಜನೆ ನೀಡಲಿದೆ.

ಇಂಡಿಯನ್ 2 ಚಿತ್ರವೂ ಜುಲೈ ತಿಂಗಳಲ್ಲಿ ವಿಶ್ವದಾದ್ಯಂತ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಂಡಿತು. ಆದರೆ ಹೆಚ್ಚಾಗಿ ನಕಾರಾತ್ಮಕ ವಿಮರ್ಶೆಗಳೇ ಕೇಳಿ ಬಂದಿವೆ. ಬರವಣಿಗೆ, ಅತಿಯಾದ ಉದ್ದ, ಭವ್ಯತೆಗೆ ಹೆಚ್ಚಿನ ಒತ್ತು ಧ್ವನಿಮುದ್ರಿಕೆ ಕುರಿತು ಆಕ್ಷೇಪ ಕೇಳಿ ಬಂದಿದ್ದರೂ ಕಮಲ್ ಹಾಸನ್ ಅಭಿನಯಕ್ಕೆ ಮಾತ್ರ ಭಾರಿ ಮೆಚ್ಚುಗೆ ಗಳಿಸಿದೆ.

ಆರು ಗಂಟೆಗಳಿಗೂ ಹೆಚ್ಚು ಅವಧಿಯ ಚಲನಚಿತ್ರ ಇದಾಗಿದ್ದು, ಎರಡು ಭಾಗಗಳಾಗಿ ವಿಭಜಿಸಲಾಗಿದೆ. ಇಂಡಿಯನ್ 2ನ ಮುಂದುವರಿದ ಭಾಗ ಇಂಡಿಯನ್ 3 ಚಿತ್ರವನ್ನು 2025ರಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: Krishnam Pranaya Sakhi: ಕೃಷ್ಣಂ ಪ್ರಣಯ ಸಖಿ ಸಿನಿಮಾದ 4ನೇ ಹಾಡು ಔಟ್;‌ ರೊಮ್ಯಾಂಟಿಕ್‌ ಸಾಂಗ್ ಇಲ್ಲಿ ಕೇಳಿ!

ಇಂಡಿಯನ್ 2 ಸಿನಿಮಾ ಕಮಲ್ ಹಾಸನ್ ಅವರ ಕೊನೆಯ ಚಿತ್ರ ʻವಿಕ್ರಮ್ʼ ಕ್ಕಿಂತ ಕಡಿಮೆ ಗಳಿಕೆ ಕಂಡಿದೆ. 2022 ರಲ್ಲಿ ವಿಕ್ರಮ್‌ ಸಿನಿಮಾ ತನ್ನ ಆರಂಭಿಕ ದಿನದಂದು 28 ಕೋಟಿ ರೂ. ಗಳಿಕೆ ಕಂಡಿತ್ತು. ವಿಕ್ರಮ್ ಸಕಾರಾತ್ಮಕ ವಿಮರ್ಶೆಗಳನ್ನು ಪಡೆದಿತ್ತು. ವಿಶ್ವಾದ್ಯಂತ 430 ಕೋಟಿ ರೂ. ಗಳಿಕೆ ಕಂಡಿತ್ತು. ಅದಕ್ಕೂ ಮೊದಲು, ಕಮಲ್ ಹಾಸನ್ ಕೊನೆಯದಾಗಿ 2018 ರ ವಿಶ್ವರೂಪಂ ಚಿತ್ರದಲ್ಲಿ ನಟಿಸಿದ್ದರು. ಇಂಡಿಯನ್ 2’ ಸಿನಿಮಾಗೆ ಮೊದಲ ದಿನ ಕೇವಲ 26 ಕೋಟಿ ರೂಪಾಯಿ ಗಳಿಕೆ ಆಗಿದೆ. ಕಮಲ್ ಹಾಸನ್ ಅವರಂಥ ಸಿನಿಮಾಗೆ ಇದು ತುಂಬಾನೇ ಸಣ್ಣ ಮೊತ್ತ.

ಕೆಲವೊಮ್ಮೆ ಸಿನಿಮಾ ಉತ್ತಮವಾಗಿ ಇರದೇ ಇದ್ದರೂ ಹೀರೋಗಳ ಪಾತ್ರದಿಂದ ಸಿನಿಮಾ ಇಷ್ಟ ಆಗುತ್ತದೆ. ಆದರೆ, ‘ಇಂಡಿಯನ್ 2’ ಚಿತ್ರದಲ್ಲಿ ಕಮಲ್ ಹಾಸನ್ ವಿವಿಧ ಗೆಟಪ್​ನಲ್ಲಿ ಬರೋದಷ್ಟೇ ಹೊರತು ಮತ್ತಿನ್ನೇನೂ ಇಲ್ಲ ಎಂದು ಫ್ಯಾನ್ಸ್ ಮಾತನಾಡಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಊರ್ಮಿಳಾ ಮಾತೋಂಡ್ಕರ್ ಮತ್ತು ಮನೀಶಾ ಕೊಯಿರಾಲಾ ಕೂಡ ನಟಿಸಿದ್ದಾರೆ.

ಸ್ಯಾಕ್‌ನಿಲ್ಕ್ ಪ್ರಕಾರ, ಇಂಡಿಯನ್ 2 ತಮಿಳು ಆವೃತ್ತಿಗೆ ಒಟ್ಟಾರೆ 55% ಆಕ್ಯುಪೆನ್ಸಿಯನ್ನು ಹೊಂದಿತ್ತು, ಹೆಚ್ಚು ರಾತ್ರಿ ಪ್ರದರ್ಶನಗಳಿಂದ ಬಂದಿದೆ. ಚೆನ್ನೈ ಶೇ 68ರಷ್ಟು , ಹಿಂದಿ ಶೇ 11 ರಷ್ಟು ಆಕ್ಯುಪೆನ್ಸಿ , ಮುಂಬೈ ಮತ್ತು ದೆಹಲಿ-ಎನ್‌ಸಿಆರ್ ಕ್ರಮವಾಗಿ ಶೇ. 12.5ರಷ್ಟು ​​ಮತ್ತು ಶೇ. 8ರಷ್ಟು ಆಕ್ಯುಪೆನ್ಸಿ ಇತ್ತು. ಚಿತ್ರದ ತೆಲುಗು ಆವೃತ್ತಿಯು ಉತ್ತಮ ಪ್ರದರ್ಶನ ನೀಡಿದೆ. ಶೇ. 58ರಷ್ಟು ಆಕ್ಯುಪೆನ್ಸಿ ಇತ್ತು ಎನ್ನಲಾಗಿದೆ. ಕಮಲ್ ಹಾಸನ್ ಇತ್ತೀಚೆಗೆ ಕಲ್ಕಿ 2898 ಎಡಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಇದು ಜಾಗತಿಕವಾಗಿ 1000 ಕೋಟಿ ರೂ. ಕಲೆಕ್ಷನ್‌ ಮಾಡಿದೆ.

ಚಿತ್ರದಲ್ಲಿ ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರ್ವಾಲ್, ಎಸ್.ಜೆ.ಸೂರ್ಯ, ಪ್ರಿಯಾ ಭವಾನಿ ಶಂಕರ್, ನೆಡುಮುಡಿ ವೇಣು, ವಿವೇಕ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ಸಮುದ್ರಕನಿ, ಬಾಬಿ ಸಿಂಹ, ಬ್ರಹ್ಮಾನಂದಂ, ವೆನ್ನೆಲ ಕಿಶೋರ್, ಜಾಕಿರ್ ಹುಸೇನ್, ಗುರು ಸೋಮಸುಂದರಾಮ್, ದೆಹಲಿ, ಗುರು ಸೋಮಸುಂದರಾಮ್ ಮಿಶ್ರಾ, , ಜಯಪ್ರಕಾಶ್, ಮನೋಬಾಲಾ, ಮತ್ತು ಅಶ್ವಿನಿ ತಂಗರಾಜ್ ಇದ್ದಾರೆ.

Continue Reading
Advertisement
Actor Chetan Ahimsa
ಕರ್ನಾಟಕ7 mins ago

Actor Chetan Ahimsa: ಸ್ವಂತ ಮನೆಯಿಲ್ಲ ಎಂದ ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್‌ ಅಹಿಂಸಾ ಕಿಡಿ

Hindu Population
ದೇಶ27 mins ago

Hindu Population: ಅಸ್ಸಾಂನಲ್ಲಿ ಹಿಂದುಗಳ ಸಂಖ್ಯೆ ಶೇ.10ರಷ್ಟು ಕುಸಿತ; ಲೆಕ್ಕ ಕೊಟ್ಟ ಹಿಮಂತ ಬಿಸ್ವಾ ಶರ್ಮಾ!

Kashmir Encounter
ದೇಶ49 mins ago

Kashmir Encounter: ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ; ಇಬ್ಬರು ಯೋಧರು ಹುತಾತ್ಮ

Parsis Olympics 2024
ಕ್ರೀಡೆ59 mins ago

Paris Olympics 2024 : ನಾಳೆ ಪ್ಯಾರಿಸ್​ ಒಲಿಂಪಿಕ್ಸ್​ ಸಮಾರೋಪ; ಎಲ್ಲಿ ಕಾರ್ಯಕ್ರಮ? ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಎಲ್ಲ ವಿವರ

BJP-JDS Padayatra
ಕರ್ನಾಟಕ1 hour ago

BJP-JDS Padayatra: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಲು ನಮ್ಮ ಹೋರಾಟ ಎಂದ ವಿಜಯೇಂದ್ರ

ಮಳೆ1 hour ago

Karnataka Weather : ವೀಕೆಂಡ್‌ ಮೋಜಿಗೆ ಮಳೆ ಅಡ್ಡಿ; ಬೆಂಗಳೂರು ಸೇರಿ ಇಲ್ಲೆಲ್ಲ ನಾಳೆ ವರ್ಷಧಾರೆ

ಪ್ರಮುಖ ಸುದ್ದಿ2 hours ago

Vinesh Phogat : ವಿನೇಶ್​ ಫೋಗಟ್​ಗೆ ಅನ್ಯಾಯವಾಗಿದೆ ಎಂದ ಆರ್​. ಅಶ್ವಿನ್​; ಅಥ್ಲೀಟ್​ಗಳ ಸಮಸ್ಯೆ ವಿವರಿಸಿದ ಸ್ಪಿನ್ನರ್​

TV Somanathan
ದೇಶ2 hours ago

TV Somanathan: ಸಂಪುಟ ಕಾರ್ಯದರ್ಶಿಯಾಗಿ ಸೋಮನಾಥನ್‌ ನೇಮಕ; ಯಾರಿವರು?

ಮೈಸೂರು2 hours ago

BJP-JDS Padayatra: ಬಂಡೆ ರೀತಿ ನಿಲ್ತೀನಿ ಎಂದು ನನ್ನ ಮೇಲೂ ಬಂಡೆ ಹಾಕಿದ್ರು: ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

Hindus in Bangla
ವಿದೇಶ2 hours ago

Hindus in Bangla: ಬಾಂಗ್ಲಾದಲ್ಲಿ ಹಿಂದೂ ಆಗಿರುವುದೇ ಅಪರಾಧ; ಕರಾಳ ದಿನ ನೆನಪಿಸಿಕೊಳ್ಳುವ ವಲಸಿಗರು; ವಿಡಿಯೊಗಳಿವೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌