Drowned in water : ಬಾಲಕನ ಜೀವಕ್ಕೆ ಉರುಳಾದ ಪಂಪ್‌ ಸೆಟ್‌ ಕೇಬಲ್‌; ಕಾಲು ಜಾರಿ ನೀರುಪಾಲಾದ ವೃದ್ಧ - Vistara News

ರಾಯಚೂರು

Drowned in water : ಬಾಲಕನ ಜೀವಕ್ಕೆ ಉರುಳಾದ ಪಂಪ್‌ ಸೆಟ್‌ ಕೇಬಲ್‌; ಕಾಲು ಜಾರಿ ನೀರುಪಾಲಾದ ವೃದ್ಧ

Drowned in water : ರಾಯಚೂರಿನಲ್ಲಿ ಈಜಲು ನದಿಗೆ ಇಳಿದಾಗ ಪಂಪ ಸೆಟ್ ಕೇಬಲ್ ಕಾಲಿಗೆ ಸಿಲುಕಿ ಹೊರಬಾರಲು ಆಗದೆ ಬಾಲಕನೊರ್ವ ಮೃತಪಟ್ಟಿದ್ದಾನೆ. ಇತ್ತ ಉಡುಪಿಯಲ್ಲಿ ಹೊಳೆಗೆ ಕಪ್ಪೆ ಚಿಪ್ಪು ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿಯೊರ್ವ ಅಸುನೀಗಿದ್ದಾರೆ.

VISTARANEWS.COM


on

Drowned in water
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ತುಂಗಭದ್ರಾ ನದಿಯಲ್ಲಿ ಈಜಲು ಹೋದ (Drowned in water) ಬಾಲಕ ಮೃತಪಟ್ಟಿದ್ದಾನೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಘಟನೆ ನಡೆದಿದೆ. ವಿರೇಶ್ (13) ಮೃತ ದುರ್ದೈವಿ.

ವಿರೇಶ್‌ ಜಾತ್ರೆ ನಿಮಿತ್ತ ಚೀಕಲಪರ್ವಿ ಗ್ರಾಮಕ್ಕೆ ಬಂದಿದ್ದ. ಈ ವೇಳೆ ತನ್ನಿಬ್ಬರೂ ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ್ದ. ನದಿಗೆ ಇಳಿದಿರುವಾಗ ಪಂಪ ಸೆಟ್ ಕೇಬಲ್ ವಿರೇಶ್‌ನ ಕಾಲಿಗೆ ಸಿಲುಕಿದೆ. ಇದರಿಂದ ನೀರಿನಿಂದ ಹೊರಬಾರಲು ಆಗದೆ ಉಸಿರುಗಟ್ಟಿ ಮೃತಪಟ್ಟಿದ್ದಾನೆ.

ಸ್ಥಳೀಯರ ಸಹಾಯದಿಂದ ಮೃತ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮಾನ್ವಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

‌ಕಾಲು ಜಾರಿ ನೀರಿಗೆ ಬಿದ್ದು ವೃದ್ಧ ಸಾವು

ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಉಡುಪಿಯ ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕೋಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಾಸ್ತಾನ ಯಕ್ಷಿಮಠ ನಿವಾಸಿ ರಾಜು ಮರಕಾಲ (66) ಮೃತಪಟ್ಟವರು.

ನಿನ್ನೆ ಸಂಜೆ ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲೆಂದು ಹೋದವರು ಕಾಲು ಜಾರಿ ನೀರಿಗೆ ಬಿದ್ದು ಕಾಣೆಯಾಗಿದ್ದರು. ಶನಿವಾರ ಬೆಳಗ್ಗೆ ಸಾಸ್ತಾನ ಕೋಡಿ ಹೊಳೆಯಲ್ಲಿ ಶವ ತೇಲುತ್ತಿರುವುದು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೋಟ ಪೊಲೀಸರು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ದೋಣಿಯಲ್ಲಿ ಸಾಗಿ ಮೃತದೇಹವನ್ನು ಹೊರತೆಗೆದಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Heart Attack : ಮಲಗಿದ್ದಲೇ ಹೃದಯ ಸ್ತಬ್ಧ! ನಾಲ್ಕೈದು ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ರಾಯಚೂರಿನಲ್ಲಿ ಚಾವಣಿ ಕುಸಿತ ವಿದ್ಯಾರ್ಥಿಗಳಿಗೆ ಗಾಯ

ವಸತಿ ನಿಲಯದಲ್ಲಿ ಕೊಠಡಿ ಚಾವಣಿ ಪ್ಲಾಸ್ಟಿಂಗ್ ಲೇಯರ್ ಕುಸಿತದಿಂದಾಗಿ ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಯಚೂರು ತಾಲೂಕಿನ ಉಡಮಗಲ್ ಖಾನಾಪುರದಲ್ಲಿ ಘಟನೆ ನಡೆದಿದೆ. 8ನೇ ತರಗತಿ ವಿದ್ಯಾರ್ಥಿಗಳಾದ ಗುರುವೇಶ್, ಕಿರಣ್, ಕಾರ್ತಿಕ್‌ಗೆ ಗಾಯಗೊಂಡಿದ್ದಾರೆ. ಗ್ರಾಮದಲ್ಲಿನ ಬಿಸಿಎಂ ಪ್ರಿಮೆಟ್ರಿಕ್ ಬಾಲಕರ ವಸತಿನಿಲಯದಲ್ಲಿ ಘಟನೆ ನಡೆದಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆ.

ಬಸ್‌ಗೆ ಲಾರಿ ಡಿಕ್ಕಿ, ವಿದ್ಯಾರ್ಥಿ ಗಂಭೀರ

ಉಡುಪಿ: ಉಡುಪಿಯ ಕುಂದಾಪುರದಲ್ಲಿ ಬಸ್‌ಗೆ ಲಾರಿಯೊಂದು (Road Accident) ಡಿಕ್ಕಿ ಹೊಡೆದಿದೆ. ಓರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹಲವರಿಗೆ ಸಣ್ಣ-ಪುಣ್ಣ ಗಾಯಗೊಂಡಿದ್ದಾರೆ. ಉಡುಪಿಯ ತಲ್ಲೂರು ಪ್ರವಾಸಿ ಹೋಟೆಲ್‌ ಎದುರು ರಾಷ್ಟ್ರೀಯ ಹೆದ್ದಾರಿ 66ಯಲ್ಲಿ ಅಪಘಾತ ಸಂಭವಿಸಿದೆ.

ಖಾಸಗಿ ಬಸ್‌ಗೆ ಲಾರಿಯೊಂದು ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಬಸ್‌ನಲ್ಲಿರುವ ಹಲವು ಮಂದಿಗೆ ಗಾಯವಾಗಿದೆ. ಬೈಂದೂರ್‌ ನಿಂದ ಕುಂದಾಪುರದ ಕಡೆಗೆ ಬರುತ್ತಿದ್ದಾಗ ಅಪಘಾತ ನಡೆದಿದೆ. ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಬಸ್‌ ಚಾಲಕ ನಿಲ್ಲಿಸಲು ಹೋದಾಗ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಸ್ಕೂಲ್ ವಿದ್ಯಾರ್ಥಿ ಪ್ರಸಾದ್ ಗಂಭೀರ ಗಾಯಗೊಂಡಿದ್ದಾನೆ. ಅಪಘಾತದಲ್ಲಿ ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವೀಕೆಂಡ್‌ ಮೋಜಿಗೆ ಮಳೆ ಅಡ್ಡಿ; ಬೆಂಗಳೂರು ಸೇರಿ ಇಲ್ಲೆಲ್ಲ ನಾಳೆ ವರ್ಷಧಾರೆ

Karnataka weather Forecast : ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮಳೆಯು ಅಬ್ಬರಿಸಿದ್ದು, ಭಾನುವಾರಕ್ಕೂ ಹಲವೆಡೆ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Koo

ಬೆಂಗಳೂರು: ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಜಿಟಿ ಜಿಟಿ ಮಳೆಯಿಂದ (Rain News) ಶುರುವಾಗಿ ಸಂಜೆ ವೇಳೆಗೆ ಹಲವೆಡೆ ಸಾಧಾರಣ (Karnataka weather Forecast) ಮಳೆಯಾಗಿದೆ. ಮುಂಜಾವಿನ ಮಳೆಯಿಂದ ಜಾಗಿಂಗ್, ರನ್ನಿಂಗ್ ಹೋಗುವವರಿಗೆ ತೊಂದರೆ ಆಯಿತು.

ನಗರದ ಕೆ.ಆರ್.ಮಾರುಕಟ್ಟೆ, ಶಾಂತಿನಗರ, ಕೋರಮಂಗಲ, ಶಿವಾಜಿನಗರ, ಮಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಲ್ಲೇಶ್ವರಂ, ಶೇಷಾದ್ರಿಪುರಂ, ವಿಧಾನಸೌಧದಲ್ಲೂ ಮಳೆಯ ಸಿಂಚನವಾಗಿದೆ.

ಭಾರಿ ಮಳೆಗೆ ಕಾಳಿ ಸೇತುವೆ ಕುಸಿತದಿಂದಾಗಿ ಹೊಸ ಸೇತುವೆಯಲ್ಲಿ ಹೆಚ್ಚಾದ ವಾಹನ ದಟ್ಟಣೆ

ಉತ್ತರ ಕನ್ನಡದ ಕಾರವಾರದ ಕಾಳಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಸೇತುವೆ ಮೇಲೆ ವಾಹನ ದಟ್ಟಣೆ ಹೆಚ್ಚಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ನಿರ್ಮಿಸಲಾದ ಹೊಸ ಸೇತುವೆಯು ಕಾರವಾರ-ಗೋವಾ ಸಂಪರ್ಕಿಸಲಿದೆ.

ಒಂದೇ ಸೇತುವೆ ಮೇಲೆ ದ್ವಿಮುಖ ಸಂಚಾರದಿಂದ ವಾಹನ ದಟ್ಟಣೆ ಎದುರಾಗಿದ್ದು, ಒಂದರ ಹಿಂದೆ ಒಂದರಂತೆ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗೋವಾ-ಮಂಗಳೂರು ನಡುವಿನ ಸರಕು ಸಾಗಾಟಕ್ಕೆ ತೊಡಕು ಉಂಟಾಗಿದೆ. ಹೊಸ ಸೇತುವೆಗೆ ಬೀದಿದೀಪ ಅಳವಡಿಸದೇ ಐಆರ್‌ಬಿ ನಿರ್ಲಕ್ಷ್ಯ ವಹಿಸಿದ್ದು, ರಾತ್ರಿ ವೇಳೆ ವಾಹನ ಸಂಚಾರದಿಂದ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ. ಹೊಸ ಸೇತುವೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸವಾರರು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: Building Collapsed: ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಸಾಧಾರಣ ಮಳೆ ಸಾಧ್ಯತೆ

ನಾಳೆ ಭಾನುವಾರ ಕರಾವಳಿಯ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡು ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ ನೀಡಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಯಚೂರು

Road Accident : ಜವರಾಯನಂತೆ ಬಂದ ಟಾಟಾಏಸ್‌ ಚಾಲಕ; ಪಾದಯಾತ್ರೆ ಹೊರಟಿದ್ದ ತಾಯಿ ದುರ್ಮರಣ, ಮಗಳು ಗಂಭೀರ

Road Accident : ರಾಯಚೂರಿನಲ್ಲಿ ಪಾದಯಾತ್ರೆಗೆ ಹೊರಟಿದ್ದ ತಾಯಿ-ಮಗಳ ಮೇಲೆ ವಾಹನವೊಂದು ಡಿಕ್ಕಿ ಹೊಡೆದರೆ, ಇತ್ತ ದಾವಣಗೆರೆಯಲ್ಲಿ ಸ್ಪಿರಿಟ್‌ ತುಂಬಿದ್ದ ಟ್ಯಾಂಕರ್‌ ಪಲ್ಟಿ ಹೊಡೆದಿದೆ.

VISTARANEWS.COM


on

By

Road Accident
ಮೃತ ದುರ್ದೈವಿ ಭಾಗ್ಯಮ್ಮ
Koo

ರಾಯಚೂರು: ಬೆಳ್ಳಂ ಬೆಳಗ್ಗೆ ಪಾದಯಾತ್ರೆ ಹೊರಟಿದ್ದ ತಾಯಿ-ಮಗಳಿಗೆ ಟಾಟಾಏಸ್‌ ವಾಹನ ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ರಭಸಕ್ಕೆ ತಾಯಿ ದಾರುಣವಾಗಿ ಮೃತಪಟ್ಟರೆ, ಮಗಳಿಗೆ ಗಂಭೀರ ಗಾಯವಾಗಿದೆ. ರಾಯಚೂರಿನ ಲಿಂಗಸೂಗೂರು ತಾಲೂಕಿನ ನಾಗಲಾಪೂರು ಗ್ರಾಮ ಹೊರವಲಯದಲ್ಲಿ ಅಪಘಾತ ಸಂಭವಿಸಿದೆ.

ವ್ಯಾಸ ನಂದಿಹಾಳ ಗ್ರಾಮದ ನಿವಾಸಿ ಭಾಗ್ಯಮ್ಮ (35) ಅಪಘಾತದಲ್ಲಿ ಮೃತಪಟ್ಟವರು. ಭಾಗ್ಯಮ್ಮಳ ಮಗಳು ಸಾವು -ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ತಲೆಗೆ ಗಂಭೀರ ಗಾಯವಾಗಿದ್ದು, ಆಕೆಗೆ ಚಿಕಿತ್ಸೆ ಮುಂದುವರಿದಿದೆ.

ಛತ್ತರದ ಹನುಮಾನ್ ದೇವಸ್ಥಾನಕ್ಕೆ ತಾಯಿ-ಮಗಳು ಇಬ್ಬರೂ ಪಾದಯಾತ್ರೆ ಹೊರಟಿದ್ದರು. ಈ ವೇಳೆ ವೇಗವಾಗಿ ಬಂದ ವಾಹನವು ಇವರಿಬ್ಬರಿಗೂ ಗುದ್ದಿದೆ. ಕೆಳಗೆ ಬಿದ್ದವರೇ ಗಂಭೀರ ಗಾಯಗೊಂಡಿದ್ದರು. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Murder Case : ಬೆಂಗಳೂರಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ; ಬಾಳಸಂಗಾತಿ ಈಗ ಕೊಲೆಗಾರ್ತಿ

ದಾವಣಗೆರೆಯಲ್ಲಿ ಸ್ಪಿರಿಟ್ ತುಂಬಿದ ಟ್ಯಾಂಕರ್ ಪಲ್ಟಿ

ಸ್ಪಿರಿಟ್‌ ತುಂಬಿದ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಅಂಡರ್ ಪಾಸ್ ಸೇತುವೆಯಿಂದ ಕೆಳಗೆ ಪಲ್ಟಿಯಾಗಿದೆ. ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿ ಶಾಮಕ‌ ದಳದ ಸಿಬ್ಬಂದಿ ಹಾಗೂ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಕಡೆಯಿಂದ ಪೂನಾ ಕಡೆಗೆ ಹೋಗುತ್ತಿದ್ದ ಸ್ಪಿರಿಟ್ ತುಂಬಿದ ಟ್ಯಾಂಕರ್ ಏಕಾಏಕಿ ಹೆದ್ದಾರಿಯಿಂದ ಕೆಳಗೆ ಬಿದ್ದಿದೆ. ಸ್ಪಿರಿಟ್ ಸೋರಿಕೆ ಆಗುತ್ತಿರುವ ಕಾರಣ ಕೆಲ ಹೊತ್ತು ಹೆದ್ದಾರಿ ಸಂಚಾರ ಸ್ಥಗಿತಗೊಂಡಿತ್ತು. ಟ್ಯಾಂಕರ್ ಕೆಳಗೆ ಪಲ್ಟಿ ಆಗುತ್ತಿದ್ದಂತೆ ಬೇರೆ ಕಡೆ ಜಂಪ್ ಮಾಡಿ ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ ಬಚಾವ್ ಆಗಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಸೂಚನೆ; ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಈ ದಿನ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಲೆನಾಡು ಹಾಗೂ ಒಳನಾಡಿನಲ್ಲಿ ವಾತಾವರಣ ಹೇಗಿರಲಿದೆ? ಇಲ್ಲಿದೆ ಮಾಹಿತಿ

VISTARANEWS.COM


on

By

karnataka weather Forecast
Koo

ಬೆಂಗಳೂರು: ಆಗಸ್ಟ್‌ 10ರಂದು ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಮೈಸೂರು-ಮಂಡ್ಯದಲ್ಲೂ ಭಾರಿ ಮಳೆ

ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಸುರಿಯಲಿದೆ.

ಇದನ್ನೂ ಓದಿ: Theft Case : ಬೆಂಗಳೂರಿನಲ್ಲಿ ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯತಮ! ಮದುವೆಯಾಗಲು ಹೊರಟವರು ಜೈಲುಪಾಲು

ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಜಿಲ್ಲೆಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣವಾಗಿರಲಿದೆ.

ಬೆಂಗಳೂರಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28ºC ಮತ್ತು 21ºC ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ವಿಜಯಪುರದ ಹಲವೆಡೆ ಸುರಿದ ಭಾರಿ ಮಳೆ; ನಾಳೆಗೂ ಇದೆ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ವಾರಾಂತ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಇತ್ತ ಮಳೆ ಇಲ್ಲದೆ ಕಂಗಲಾಗಿದ್ದ ವಿಜಯಪುರದಲ್ಲಿ ಮಳೆಯಾದರೆ, ಕಲಬುರಗಿಯಲ್ಲಿ ನೀರು ನುಗ್ಗಿ ಜಮೀನುಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka weather Forecast
Koo

ವಿಜಯಪುರ: ಮಳೆ ಬಾರದೆ (Rain News) ಕಂಗಾಲಾಗಿದ್ದ ವಿಜಯಪುರ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಶುಕ್ರವಾರ ವಿಜಯಪುರ ಜಿಲ್ಲೆಯ ಹಲವೆಡೆ ಭಾರಿ ಮಳೆ ಸುರಿದಿದೆ. ಮಳೆ ಇಲ್ಲದೆ ತೊಗರಿ, ಮೆಕ್ಕೆಜೋಳ ಬೆಳೆ ಒಣಗುತ್ತಿತ್ತು. ವಿಜಯಪುರ ಜಿಲ್ಲೆಯ ಸಿಂದಗಿ, ಕೋರವಾರ, ಕೊಂಡಗೂಳಿ, ಜಾಲವಾದ, ಹಂಚಲಿ, ಸೇರಿದಂತರ ಹಲವೆಡೆ (Karnataka Weather Forecast) ಮಳೆಯಾಗಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಉಜನಿ ಜಲಾಶಯದಿಂದ ಭೀಮಾನದಿಗೆ ಬಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಕಲಬುರಗಿ ತಾಲೂಕಿನ ಹಾಗರಗುಂಡಗಿ, ಕೌಲಗಾ ಗ್ರಾಮದ ಸುತ್ತಲ್ಲಿ‌ಭಾರಿ ಪ್ರಮಾಣದ ಬೆಳೆ ಹಾನಿಯಾಗಿದೆ. ಹಾಗರಗುಂಡಗಿ ಗ್ರಾಮದ ಜಮೀನಿಗೆ ನೀರು ನುಗ್ಗಿದೆ. ಸರಿ ‌ಸುಮಾರು 500 ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕಬ್ಬು, ತೊಗರಿ , ಹೆಸರು ಬೆಳೆ ಭೀಮಾ ನೀರು ಪಾಲಾಗಿದ್ದು, ಮತ್ತಷ್ಟು ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಇದನ್ನೂ ಓದಿ: Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ವಾರಾಂತ್ಯದಲ್ಲಿ ಹಗುರ ಮಳೆ ಸಾಧ್ಯತೆ

ವಾರಾಂತ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 21° C ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Chetan Ahimsa
ಕರ್ನಾಟಕ1 min ago

Actor Chetan Ahimsa: ಸ್ವಂತ ಮನೆಯಿಲ್ಲ ಎಂದ ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್‌ ಅಹಿಂಸಾ ಕಿಡಿ

Hindu Population
ದೇಶ21 mins ago

Hindu Population: ಅಸ್ಸಾಂನಲ್ಲಿ ಹಿಂದುಗಳ ಸಂಖ್ಯೆ ಶೇ.10ರಷ್ಟು ಕುಸಿತ; ಲೆಕ್ಕ ಕೊಟ್ಟ ಹಿಮಂತ ಬಿಸ್ವಾ ಶರ್ಮಾ!

Kashmir Encounter
ದೇಶ43 mins ago

Kashmir Encounter: ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ; ಇಬ್ಬರು ಯೋಧರು ಹುತಾತ್ಮ

Parsis Olympics 2024
ಕ್ರೀಡೆ53 mins ago

Paris Olympics 2024 : ನಾಳೆ ಪ್ಯಾರಿಸ್​ ಒಲಿಂಪಿಕ್ಸ್​ ಸಮಾರೋಪ; ಎಲ್ಲಿ ಕಾರ್ಯಕ್ರಮ? ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಎಲ್ಲ ವಿವರ

BJP-JDS Padayatra
ಕರ್ನಾಟಕ1 hour ago

BJP-JDS Padayatra: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಲು ನಮ್ಮ ಹೋರಾಟ ಎಂದ ವಿಜಯೇಂದ್ರ

ಮಳೆ1 hour ago

Karnataka Weather : ವೀಕೆಂಡ್‌ ಮೋಜಿಗೆ ಮಳೆ ಅಡ್ಡಿ; ಬೆಂಗಳೂರು ಸೇರಿ ಇಲ್ಲೆಲ್ಲ ನಾಳೆ ವರ್ಷಧಾರೆ

ಪ್ರಮುಖ ಸುದ್ದಿ2 hours ago

Vinesh Phogat : ವಿನೇಶ್​ ಫೋಗಟ್​ಗೆ ಅನ್ಯಾಯವಾಗಿದೆ ಎಂದ ಆರ್​. ಅಶ್ವಿನ್​; ಅಥ್ಲೀಟ್​ಗಳ ಸಮಸ್ಯೆ ವಿವರಿಸಿದ ಸ್ಪಿನ್ನರ್​

TV Somanathan
ದೇಶ2 hours ago

TV Somanathan: ಸಂಪುಟ ಕಾರ್ಯದರ್ಶಿಯಾಗಿ ಸೋಮನಾಥನ್‌ ನೇಮಕ; ಯಾರಿವರು?

ಮೈಸೂರು2 hours ago

BJP-JDS Padayatra: ಬಂಡೆ ರೀತಿ ನಿಲ್ತೀನಿ ಎಂದು ನನ್ನ ಮೇಲೂ ಬಂಡೆ ಹಾಕಿದ್ರು: ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

Hindus in Bangla
ವಿದೇಶ2 hours ago

Hindus in Bangla: ಬಾಂಗ್ಲಾದಲ್ಲಿ ಹಿಂದೂ ಆಗಿರುವುದೇ ಅಪರಾಧ; ಕರಾಳ ದಿನ ನೆನಪಿಸಿಕೊಳ್ಳುವ ವಲಸಿಗರು; ವಿಡಿಯೊಗಳಿವೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌