Rave Party: ರೇವ್‌ ಪಾರ್ಟಿ ಮೇಲೆ ಪೊಲೀಸರ ದಾಳಿ; ಅಪ್ರಾಪ್ತರು ಸೇರಿ 39 ವಿದ್ಯಾರ್ಥಿಗಳ ವಶ - Vistara News

ದೇಶ

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸರ ದಾಳಿ; ಅಪ್ರಾಪ್ತರು ಸೇರಿ 39 ವಿದ್ಯಾರ್ಥಿಗಳ ವಶ

Rave Party: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉತ್ತರ ಪ್ರದೇಶದ ಪೊಲೀಸರು ರೇವ್‌ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿ ಅಪ್ರಾಪ್ತರು ಸೇರಿ ಸುಮಾರು 39 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ನೋಯ್ಡಾ ಸೆಕ್ಟರ್-94ರ ಐಷಾರಾಮಿ ಸೊಸೈಟಿಯ ಫ್ಲ್ಯಾಟ್‌ನಲ್ಲಿ ರೇವ್‌ ಪಾರ್ಟಿ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು. ʼʼಬಂಧಿತರು ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರ ವಿದ್ಯಾರ್ಥಿಗಳು. ಅವರ ವಯಸ್ಸು 16ರಿಂದ 20 ವರ್ಷʼʼ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Rave Party
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉತ್ತರ ಪ್ರದೇಶದ ಪೊಲೀಸರು ರೇವ್‌ ಪಾರ್ಟಿ (Rave Party)ಯೊಂದರ ಮೇಲೆ ದಾಳಿ ನಡೆಸಿ ಅಪ್ರಾಪ್ತರು ಸೇರಿ ಸುಮಾರು 39 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ನೋಯ್ಡಾ ಸೆಕ್ಟರ್-94ರ ಐಷಾರಾಮಿ ಸೊಸೈಟಿಯ ಫ್ಲ್ಯಾಟ್‌ನಲ್ಲಿ ರೇವ್‌ ಪಾರ್ಟಿ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು.

ʼʼಸೂಪರ್‌ನೋವಾ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ಆಯೋಜಿಸಲಾಗಿತ್ತು. ಈ ವೇಳೆ ಫ್ಲ್ಯಾಟ್‌ನಲ್ಲಿ ಅನೇಕ ಮದ್ಯದ ಬಾಟಲಿ ಪತ್ತೆಯಾಗಿದೆ. ಬಂಧಿತರು ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರ ವಿದ್ಯಾರ್ಥಿಗಳು. ಅವರ ವಯಸ್ಸು 16ರಿಂದ 20 ವರ್ಷʼʼ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ ಫ್ಲ್ಯಾಟ್‌ನಿಂದ ಹೆಚ್ಚಿನ ಸಂಖ್ಯೆಯ ಹರಿಯಾಣ ಲೇಬಲ್ ಮಾಡಿದ ಮದ್ಯದ ಬಾಟಲಿಗಳು ಮತ್ತು ಹುಕ್ಕಾಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆಯ ಸಮಯದಲ್ಲಿ, ವಿದ್ಯಾರ್ಥಿಗಳನ್ನು ವಾಟ್ಸ್‌ಆ್ಯಪ್‌ ಮೂಲಕ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂಬ ವಿಚಾರ ತಿಳಿದುಬಂದಿದೆ. ಪ್ರವೇಶ ಶುಲ್ಕವು ಪ್ರತಿ ಮಹಿಳೆಗೆ 500 ರೂ., ಜೋಡಿಗೆ 800 ರೂ. ಮತ್ತು ಪುರುಷರಿಗೆ 1,000 ರೂ. ನಿಗದಿಪಡಿಸಲಾಗಿತ್ತು. 6 ಗಂಟೆಗೆ ಪಾರ್ಟಿ ನಡೆಯಲಿದೆ ಎಂದು ವಾಟ್ಸ್‌ಆ್ಯಪ್‌ ಸಂದೇಶದಲ್ಲಿ ತಿಳಿಸಲಾಗಿತ್ತು.

ಪಾನಮತ್ತ ವಿದ್ಯಾರ್ಥಿಗಳು ಪಾರ್ಟಿ ಮಾಡಿದ ಬಳಿಕ ಅತಿರೇಕದಿಂದ ವರ್ತಿಸಿ ಗಲಾಟೆ ಮಾಡಿದ್ದಾರೆ ಎನ್ನುವ ದೂರು ಕೇಳಿ ಬಂದಿದೆ. ಎಲ್ಲೆಂದರಲ್ಲಿ ಬಾಟಲಿ ಎಸೆದು ರಾದ್ಧಾಂತ ಮಾಡಿದ್ದಾರೆ ಎಂದು ಅಕ್ಕ ಪಕ್ಕದ ಫ್ಲ್ಯಾಟ್‌ ನಿವಾಸಿಗಳು ಆರೋಪಿಸಿದ್ದಾರೆ.

ಎಲ್ವಿಶ್‌ ಯಾದವ್‌ ವಿರುದ್ಧ ಎಫ್‌ಐಆರ್‌

ಕಳೆದ ವರ್ಷ ನವೆಂಬರ್‌ನಲ್ಲಿ ಪಾರ್ಟಿಯೊಂದರಲ್ಲಿ ಹಾವಿನ ವಿಷವನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಎನ್‌ಜಿಒದಿಂದ ದೂರು ಬಂದ ಹಿನ್ನಲೆಯಲ್ಲಿ ನೋಯ್ಡಾ ಪೊಲೀಸರು ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಹಿಂದಿ  ಬಿಗ್‌ಬಾಸ್ ಒಟಿಟಿ ಸೀಸನ್‌ 2 ಸ್ಪರ್ಧೆಯ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ಹೆಸರೂ ಇತ್ತು. ಬಳಿಕ ಎಲ್ವಿಶ್ ಯಾದವ್ ಹೆಸರನ್ನು ಎಫ್ಐಆರ್‌ನಲ್ಲಿ ಸೇರಿಸಲಾಗಿತ್ತು. ಆದರೆ 26 ವರ್ಷದ ಯೂಟ್ಯೂಬರ್ ತನ್ನ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ತನಿಖೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ.

ವಿದೇಶಿ ಪ್ರಜೆಗಳಿಗೂ ಆತಿಥ್ಯ ನೀಡಿದ ರೇವ್ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಕೆಲವರು ಹಾವಿನ ವಿಷವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪಿಗಳಿಂದ ಐದು ನಾಗರಹಾವು ಸೇರಿದಂತೆ ಒಂಬತ್ತು ಹಾವುಗಳು ಹಾಗೂ 20 ಎಂ.ಎಲ್‌. ಹಾವಿನ ವಿಷವನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ವಶಪಡಿಸಿಕೊಂಡ ಹಾವುಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿತ್ತು. ವಿವಿಧ ಸ್ಥಳಗಳಿಂದ ಹಾವುಗಳನ್ನು ಹಿಡಿದು ಅವುಗಳ ವಿಷವನ್ನು ಹೊರತೆಗೆಯುತ್ತಿದ್ದರು. ಅದನ್ನು ಎಲ್ವಿಶ್ ಯಾದವ್‌ ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗಿತ್ತು.

ಇದನ್ನೂ ಓದಿ: Elvish Yadav: ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ಗೆ ಮತ್ತೆ ಸಂಕಷ್ಟ; ಎಲ್ವಿಶ್‌ ವಿರುದ್ಧ ಇಡಿ ಕೇಸ್‌

ಪ್ರಾಣಿ ಹಕ್ಕುಗಳಿಗಾಗಿ ಹೋರಾಟ ನಡೆಸುವ ಗುಂಪು ಪಿಎಫ್ಎ (People For Animals) ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಪಿಎಫ್ಎ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಮೇನಕಾ ಗಾಂಧಿ ಈ ಬಗ್ಗೆ ಮಾತನಾಡಿ, ಎಲ್ವಿಶ್‌ ಯಾದವ್ ಹಾವಿನ ವಿಷವನ್ನು ಅಕ್ರಮವಾಗಿ ಮಾರಾಟ ಮಾಡುವ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Independence day 2024: ಮೊದಲ ಸ್ವಾತಂತ್ರ್ಯೋತ್ಸವದಲ್ಲಿ ಗಾಂಧೀಜಿಯೇ ಭಾಗವಹಿಸಲಿಲ್ಲ! ಇಲ್ಲಿವೆ ಸ್ವಾತಂತ್ರ್ಯ ದಿನಾಚರಣೆಯ ಕುತೂಹಲಕರ ಸಂಗತಿಗಳು

ಸರಿಸುಮಾರು 200 ವರ್ಷಗಳ ಬ್ರಿಟಿಷ್ ಆಳ್ವಿಕೆಯ ಬಳಿಕ ಭಾರತ ಅಂತಿಮವಾಗಿ 1947ರ ಆಗಸ್ಟ್15ರಂದು ಸ್ವಾತಂತ್ರ್ಯವನ್ನು ಪಡೆಯಿತು. ಇದರ ಹಿಂದೆ ಸಾಕಷ್ಟು ಮಂದಿಯ ತ್ಯಾಗ ಬಲಿದಾನದ ಕಥೆಗಳಿವೆ. 78ನೇ ಸ್ವಾತಂತ್ರ್ಯ ದಿನಾಚರಣೆಯ (Independence day 2024) ಸಂದರ್ಭದಲ್ಲಿ ನಾವು ತಿಳಿದುಕೊಳ್ಳಬೇಕಾದ ಕೆಲವು ಕೂತಹಲಕಾರಿ ಸಂಗತಿಗಳು ಇಂತಿವೆ.

VISTARANEWS.COM


on

By

Independence Day 2024
Koo

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ (World’s largest democracy country) ಭಾರತದಲ್ಲಿ ಸ್ವಾತಂತ್ರ್ಯ ದಿನವು (Independence Day of India) ರಾಷ್ಟ್ರದ ಎಲ್ಲಾ ರಾಜ್ಯಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ ಹಬ್ಬವಾಗಿದೆ (National festival). ಆಗಸ್ಟ್ 15ರಂದು ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನವನ್ನು (Independence day 2024) ಆಚರಿಸಲು ಸಿದ್ಧತೆ ನಡೆಸುತ್ತಿರುವಾಗ ಸ್ವಾತಂತ್ರ್ಯ ದಿನದ ಕುರಿತು ನಾವು ತಿಳಿದುಕೊಳ್ಳಬೇಕಿರುವ ಕೆಲವು ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ.


ಮೊದಲ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಾತ್ಮ ಗಾಂಧಿ ಭಾಗವಹಿಸಿಲ್ಲ!

ದೆಹಲಿಯಲ್ಲಿ ನಡೆದ ಮೊದಲ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಮಹಾತ್ಮಾ ಗಾಂಧಿಗೆ ಸಾಧ್ಯವಾಗಲಿಲ್ಲ. 1947ರ ಆಗಸ್ಟ್ 15ರಂದು ದೇಶವು ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯವನ್ನು ಆಚರಿಸಿದಾಗ ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಬಂಗಾಳದಲ್ಲಿ ನಡೆಯುತ್ತಿರುವ ಹಿಂದೂ-ಮುಸ್ಲಿಂ ಗಲಭೆಗಳನ್ನು ಕೊನೆಗೊಳಿಸಲು ಉಪವಾಸ ಆಚರಣೆಯಲ್ಲಿ ತೊಡಗಿದ್ದರು.


ತ್ರಿವರ್ಣ ಧ್ವಜದ ಮೂಲ

ಭಾರತದ ರಾಷ್ಟ್ರಧ್ವಜವಾಗಿರುವ ತ್ರಿವರ್ಣ ಧ್ವಜವು ಸ್ವರಾಜ್ ಧ್ವಜವನ್ನು ಆಧರಿಸಿದೆ. ಇದನ್ನು ಮಚಲಿಪಟ್ಟಣಂನ ರೈತರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿಂಗಲಿ ವೆಂಕಯ್ಯ ಅವರು ರೂಪಿಸಿದ್ದರು.


ರಾಷ್ಟ್ರಗೀತೆ ಅಂಗೀಕಾರ

ಭಾರತ ಸ್ವಾತಂತ್ರ್ಯ ಗಳಿಸಿದ ಮೂರು ವರ್ಷಗಳ ಅನಂತರ ಭಾರತದ ರಾಷ್ಟ್ರಗೀತೆಯನ್ನು ಅಂಗೀಕರಿಸಲಾಯಿತು. ಸ್ವಾತಂತ್ರ್ಯದ ಸಮಯದಲ್ಲಿ ಭಾರತವು ಅಧಿಕೃತ ರಾಷ್ಟ್ರಗೀತೆಯನ್ನು ಹೊಂದಿರಲಿಲ್ಲ. ಜನ ಗಣ ಮನವನ್ನು 1911ರಲ್ಲಿ ಬರೆಯಲಾಯಿತು. ಆದರೂ ಇದನ್ನು ಅಧಿಕೃತವಾಗಿ ಅಂಗೀಕರಿಸಿದ್ದು 1950ರ ಜನವರಿ 24ರಂದು.


ಆಗಸ್ಟ್ 15 ಏಕೆ?

ಭಾರತದ ಕೊನೆಯ ಬ್ರಿಟಿಷ್ ವೈಸರಾಯ್ ಮತ್ತು ದೇಶದ ಮೊದಲ ಗವರ್ನರ್ ಜನರಲ್ ಆಗಿದ್ದ ಲಾರ್ಡ್ ಮೌಂಟ್ ಬ್ಯಾಟನ್ ಅವರು ಆಗಸ್ಟ್ 15 ಅನ್ನು ಭಾರತದ ಸ್ವಾತಂತ್ರ್ಯವನ್ನು ಘೋಷಿಸಲು ಆಯ್ಕೆ ಮಾಡಿದರು. 1948ರ ಜೂನ್ ನೊಳಗೆ ಭಾರತೀಯರಿಗೆ ಅಧಿಕಾರವನ್ನು ವರ್ಗಾಯಿಸಲು ಬ್ರಿಟಿಷ್ ಪಾರ್ಲಿಮೆಂಟ್ ಅವರಿಗೆ ಅಧಿಕಾರವನ್ನು ನೀಡಿತು. ಆದರೂ ರಕ್ತಪಾತ ಮತ್ತು ಗಲಭೆಗಳನ್ನು ತಪ್ಪಿಸಲು ಅವರು ಅದನ್ನು 1947ರ ಆಗಸ್ಟ್ 15ಕ್ಕೆ ಮುಂದೂಡಿದರು. ಮಿತ್ರ ಪಡೆಗಳ ದಾಳಿಗೆ ಮಣಿದು ಜಪಾನ್ ಶರಣಾದ ಎರಡನೇ ವಾರ್ಷಿಕೋತ್ಸವದ ನೆನಪಿಗಾಗಿ ಅವರು ಈ ದಿನವನ್ನು ಆರಿಸಿಕೊಂಡರು ಎಂದು ಹೇಳಲಾಗುತ್ತದೆ.


ಪಾಕಿಸ್ತಾನಕ್ಕೆ ಸ್ವಾತಂತ್ರ್ಯ

ಕೊನೆಯ ಬ್ರಿಟಿಷ್ ವೈಸರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಅವರು ಸಮಾರಂಭದಲ್ಲಿ ಪಾಲ್ಗೊಳ್ಳಬೇಕೆಂದು ಪಾಕಿಸ್ತಾನವು ಆಗಸ್ಟ್ 14ರಂದು ತನ್ನ ಸ್ವಾತಂತ್ರ್ಯ ದಿನವನ್ನು ಆಚರಿಸಿತ್ತು. ಅವಿಭಜಿತ ಭಾರತದ ಕೊನೆಯ ವೈಸರಾಯ್ ಆಗಿ ಮೌಂಟ್ ಬ್ಯಾಟನ್ ಎರಡೂ ದೇಶಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವಂತೆ ಮಾಡಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.

ಇದನ್ನೂ ಓದಿ: New Railway Projects: 24,657 ಕೋಟಿ ರೂ. ಮೊತ್ತದ 8 ರೈಲು ಯೋಜನೆಗಳಿಗೆ ಅನುಮೋದನೆ

ಐದು ದೇಶಗಳಿಗೆ ಸ್ವಾತಂತ್ರ್ಯ

ವಿಭಿನ್ನ ವರ್ಷಗಳಲ್ಲಿ ಸ್ವಾತಂತ್ರ್ಯವನ್ನು ಪಡೆದಿರುವ ಬಹರೈನ್ , ಉತ್ತರ ಕೊರಿಯಾ, ದಕ್ಷಿಣ ಕೊರಿಯಾ, ಕಾಂಗೋ ಗಣರಾಜ್ಯ ಮತ್ತು ಲಿಚ್ಟೆನ್‌ಸ್ಟೈನ್ ಈ ಐದು ಇತರ ದೇಶಗಳು ಆಗಸ್ಟ್ 15ರಂದು ಭಾರತದೊಂದಿಗೆ ತಮ್ಮ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತವೆ.

Continue Reading

ಪ್ರಮುಖ ಸುದ್ದಿ

Trainee Doctor: ವೈದ್ಯೆಯ ಕೊಂದ ಆರೋಪಿಯನ್ನು ಹಿಡಿದುಕೊಟ್ಟ ಬ್ಲ್ಯೂಟೂತ್‌ ಹೆಡ್‌ಫೋನ್; ಹೇಗಂತೀರಾ?

Trainee Doctor: ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಮಹಿಳೆಯು ಅಧ್ಯಾಯನ ಮಾಡುತ್ತಿದ್ದರು. ಇದೇ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶುಕ್ರವಾರ ಬೆಳಗ್ಗೆ ಮಹಿಳೆಯ ಶವವು ಪತ್ತೆಯಾಗಿದೆ. ಮರಣೋತ್ತರ ವರದಿ ಬಳಿಕ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬಯಲಾಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಆದರೆ, ಈ ಕೊಲೆಯ ಆರೋಪಿಯನ್ನು ಬಂಧಿಸಲು ಒಂದು ಬ್ಲ್ಯೂಟೂತ್‌ ಹೆಡ್‌ಫೋನ್‌ ಎಂದರೆ ನಂಬಲೇಬೇಕು.

VISTARANEWS.COM


on

Trainee Doctor
Koo

ಕೋಲ್ಕೊತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕೊತಾ ಸರ್ಕಾರಿ ಆಸ್ಪತ್ರೆಯಲ್ಲಿ ಟ್ರೈನಿ ಮಹಿಳಾ ವೈದ್ಯೆಯ (Kolkata Trainee Doctor) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟೂ ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ಮಹಿಳಾ ವೈದ್ಯೆಯ ಹತ್ಯೆಗೂ ಮುನ್ನವೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿತ್ತು ಎಂಬ ಮಾಹಿತಿಯು ಮರಣೋತ್ತರ ಪರೀಕ್ಷೆ ವರದಿಯಲ್ಲಿ (Post Mortem Report) ಬಹಿರಂಗವಾಗಿದೆ. ಇದರ ಬೆನ್ನಲ್ಲೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಈ ಆರೋಪಿಯ ಬಂಧನಕ್ಕೆ ಕಾರಣವಾಗಿದ್ದು ಒಂದು ಬ್ಲ್ಯೂಟೂತ್‌ ಹೆಡ್‌ಸೆಟ್‌ ಎಂಬುದು ಗಮನಾರ್ಹ ಸಂಗತಿಯಾಗಿದೆ.

ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ 31 ವರ್ಷದ ಮಹಿಳೆಯು ಕಳೆದ ಗುರುವಾರ (ಆಗಸ್ಟ್‌ 8) ಆರ್‌ ಕೆ ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಅಧ್ಯಯನ ಮಾಡಲು ಹೋಗಿದ್ದ ಹತ್ಯೆಗೀಡಾಗಿದ್ದರು. ಶುಕ್ರವಾರ ಬೆಳಗ್ಗೆ ಮಹಿಳಾ ವೈದ್ಯೆಯ ಶವವು ಅರೆಬೆತ್ತಲೆ ಪತ್ತೆಯಾಗಿದೆ. ಶವ ಪತ್ತೆಯಾದ ಜಾಗದಲ್ಲಿ ಬ್ಲ್ಯೂಟೂತ್‌ ಹೆಡ್‌ಫೋನ್‌ ಒಂದು ಪತ್ತೆಯಾಗಿದ್ದು, ಅದರ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಯನ್ನು ಬಂಧಿಸಿದ್ದು ಹೇಗೆ?

ಕೊಲೆ ಪ್ರಕರಣ ಬಯಲಾದ ಬಳಿಕ ಪೊಲೀಸರು ಎಲ್ಲ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಕೊಲೆ ನಡೆದ ಸೆಮಿನಾರ್‌ ಹಾಲ್‌ ಬಳಿಯಲ್ಲಿ ಸಂಜಯ್‌ ರಾಯ್‌ ಎಂಬ ಆರೋಪಿಯು ಅದೇ ರಾತ್ರಿ ಸಂಶಯಾಸ್ಪದವಾಗಿ ಓಡಾಡಿದ್ದಾನೆ. ಅಲ್ಲದೆ, ಶುಕ್ರವಾರ ಬೆಳಗಿನ ಜಾವ ಆಸ್ಪತ್ರೆಯಿಂದ ಹೊರಹೋಗಿದ್ದಾರೆ. ಇದಾದ ಬಳಿಕ ಶಂಕಿತ ಆರೋಪಿಗಳ ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊಬೈಲ್‌ಗಳನ್ನು ವಶಪಡಿಸಿಕೊಂಡು, ಆ ಬ್ಲ್ಯೂಟೂತ್‌ ಹೆಡ್‌ಫೋನ್‌ ಜತೆ ಪೇರ್‌ (Pair) ಮಾಡಿದ್ದಾರೆ. ಆಗ ಸಂಜಯ್‌ ರಾಯ್‌ನ ಮೊಬೈಲ್‌ ಹೆಡ್‌ಫೋನ್‌ಗೆ ಕನೆಕ್ಟ್‌ ಆಗಿದೆ.

“ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಮಹಿಳೆಯು ಅಧ್ಯಾಯನ ಮಾಡುತ್ತಿದ್ದರು. ಇದೇ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶುಕ್ರವಾರ ಬೆಳಗ್ಗೆ ಮಹಿಳೆಯ ಶವವು ಪತ್ತೆಯಾಗಿದೆ. ಮರಣೋತ್ತರ ವರದಿ ಬಳಿಕ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿ ವಿರುದ್ಧ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ” ಎಂದು ಕೋಲ್ಕೊತಾ ಪೊಲೀಸ್‌ ಆಯುಕ್ತ ವಿನೀತ್‌ ಕುಮಾರ್‌ ಗೋಯಲ್‌ ಈಗಾಗಲೇ ತಿಳಿಸಿದ್ದಾರೆ.

ಇದನ್ನೂ ಓದಿ: Murder Case : ಬೆಂಗಳೂರಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ; ಬಾಳಸಂಗಾತಿ ಈಗ ಕೊಲೆಗಾರ್ತಿ

Continue Reading

ದೇಶ

Hindu Population: ಅಸ್ಸಾಂನಲ್ಲಿ ಹಿಂದುಗಳ ಸಂಖ್ಯೆ ಶೇ.10ರಷ್ಟು ಕುಸಿತ; ಲೆಕ್ಕ ಕೊಟ್ಟ ಹಿಮಂತ ಬಿಸ್ವಾ ಶರ್ಮಾ!

Hindu Population: ಅಸ್ಸಾಂ ಹಾಗೂ ಬಾಂಗ್ಲಾದೇಶದ ಜನಸಂಖ್ಯೆಯಲ್ಲಿ ಬದಲಾವಣೆಯಾಗಿರುವ ಕುರಿತು 2011ರ ಜನಗಣತಿಯ ಮಾಹಿತಿಯೇ ಹೇಳುತ್ತದೆ ಎಂಬುದಾಗಿ ಹಿಮಂತ ಬಿಸ್ವಾ ಶರ್ಮಾ ಅವರು ಮತ್ತೆ ಹಿಂದುಗಳ ಜನಸಂಖ್ಯೆ ಕುಂಠಿತವಾಗಿರುವ ಕುರಿತ ಚರ್ಚೆಗೆ ಇಂಬು ನೀಡಿದ್ದಾರೆ.

VISTARANEWS.COM


on

Hindu Population
Koo

ದಿಸ್ಪುರ: ಭಾರತದಲ್ಲಿ ಕೆಲ ದಶಕಗಳಿಂದ ಹಿಂದುಗಳ ಜನಸಂಖ್ಯೆಯು (Hindu Population) ಕಡಿಮೆಯಾಗಿದೆ ಎಂಬ ವರದಿಗಳು ಇತ್ತೀಚೆಗೆ ಕೇಳಿಬಂದು, ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ಇದರ ಬೆನ್ನಲ್ಲೇ, ಅಸ್ಸಾಂನಲ್ಲಿ ಹಿಂದುಗಳ ಜನಸಂಖ್ಯೆಯು ಕಡಿಮೆಯಾಗಿದೆ ಎಂಬುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತಿಳಿಸಿದ್ದಾರೆ. ಇದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

“ಅಸ್ಸಾಂ ಹಾಗೂ ಬಾಂಗ್ಲಾದೇಶದ ಜನಸಂಖ್ಯೆಯಲ್ಲಿ ಬದಲಾವಣೆಯಾಗಿರುವ ಕುರಿತು 2011ರ ಜನಗಣತಿಯ ಮಾಹಿತಿಯೇ ಹೇಳುತ್ತದೆ. ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್‌ನಲ್ಲೂ ಇದೇ ಪರಿಸ್ಥಿತಿ ಇದೆ. ಜನಗಣತಿ ದಾಖಲೆ ಪ್ರಕಾರ, ಅಸ್ಸಾಂನಲ್ಲಿ 1951ರಿಂದ 2011ರ ಅವಧಿಯಲ್ಲಿ ಹಿಂದು ಜನಸಂಖ್ಯೆಯ ಪ್ರಮಾಣವು ಶೇ.9.23ರಷ್ಟು ಕಡಿಮೆಯಾಗಿದೆ. ಬಾಂಗ್ಲಾದೇಶದಲ್ಲಂತೂ ಹಿಂದುಗಳ ಸ್ಥಿತಿ ಕಷ್ಟಕರವಾಗಿದ್ದು, ಶೇ.13.5ಕ್ಕೆ ಇಳಿಕೆಯಾಗಿದೆ” ಎಂಬುದಾಗಿ ವರದಿ ತಿಳಿಸಿದೆ.

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದಾಳಿ ನಡೆಸುತ್ತಿರುವ ಕುರಿತು ಮಾತನಾಡಿದ ಅವರು, “ಬಾಂಗ್ಲಾದೇಶದಲ್ಲಿ ಹಿಂದುಗಳ ಸ್ಥಿತಿಯು ಚಿಂತಾಜನಕವಾಗಿದೆ. ಗಾಜಾದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸಲಾಗಿದೆ ಎಂಬುದಾಗಿ ದೇಶದಲ್ಲಿ ಪ್ರತಿಭಟನೆ ನಡೆಸಿದರು. ಆದರೆ, ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ಆಗುತ್ತಿರುವ ದಾಳಿಗಳ ಕುರಿತು ಪ್ರತಿಪಕ್ಷಗಳ ನಾಯಕರು ಮಾತನಾಡುವುದಿಲ್ಲ. ಜಗತ್ತಿನ ಮುಸ್ಲಿಮರ ಬಗ್ಗೆ ಕಾಳಜಿ ತೋರುವ ಕಾಂಗ್ರೆಸ್‌, ಹಿಂದುಗಳ ಬಗ್ಗೆ ಯಾವುದೇ ಕಾಳಜಿ ತೋರುವುದಿಲ್ಲ” ಎಂದರು.

ಕೆಲ ದಿನಗಳ ಹಿಂದೆಯೂ ಹಿಮಂತ ಬಿಸ್ವಾ ಶರ್ಮಾ ಅವರು ಹಿಂದುಗಳ ಕುರಿತು ಮಾತನಾಡಿದ್ದರು. “ಹಿಂದುಗಳಿಂದ ದೇಶದಲ್ಲಿ ಕೋಮುವಾದ ಸೃಷ್ಟಿಯಾಗುವುದಿಲ್ಲ. ದೇಶದಲ್ಲಿ ಬಾಂಗ್ಲಾದೇಶ ಮೂಲದ ಧರ್ಮವು (ಇಸ್ಲಾಂ) ಕೋಮುವಾದ ಸೃಷ್ಟಿಸುತ್ತದೆ. ಇದಕ್ಕೆ ಲೋಕಸಭೆ ಚುನಾವಣೆಯೇ ಸಾಕ್ಷಿಯಾಗಿದೆ” ಎಂದು ಅವರು ಹೇಳಿದ್ದರು. ಅಸ್ಸಾಂನಲ್ಲಿ ಯಾವ ಧರ್ಮದವರು ಯಾವ ಪಕ್ಷಕ್ಕೆ ಮತ ನೀಡಿದ್ದಾರೆ ಎಂಬುದನ್ನು ವಿಶ್ಲೇಷಿಸುತ್ತ ಅವರು ಹೀಗೆ ಹೇಳಿದ್ದರು.

ಇದನ್ನೂ ಓದಿ: Himanta Sarma: ಹಿಂದು ಅಲ್ಲ, ಆ ಒಂದು ಧರ್ಮದಿಂದ ಕೋಮುವಾದ ಸೃಷ್ಟಿ ಎಂದ ಹಿಮಂತ ಶರ್ಮಾ! ಯಾವುದದು?

Continue Reading

ದೇಶ

Kashmir Encounter: ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ; ಇಬ್ಬರು ಯೋಧರು ಹುತಾತ್ಮ

Kashmir Encounter: ಅನಂತನಾಗ್‌ ಜಿಲ್ಲೆಯ ಅಲ್ಹಾನ್‌ ಗಡೋಲೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಆರಂಭಿಸಿದ್ದರು. ಇದೇ ವೇಳೆ ಉಗ್ರರು ಕೂಡ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

VISTARANEWS.COM


on

Kashmir Encounter
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಸೈನಿಕರನ್ನು ಗುರಿಯಾಗಿಸಿ ದಾಳಿ ಮಾಡುವುದನ್ನು ಉಗ್ರರು ಮುಂದುವರಿಸಿದ್ದು, ಅನಂತನಾಗ್‌ ಜಿಲ್ಲೆಯಲ್ಲಿ (Anantnag District) ನಡೆದ ಗುಂಡಿನ ಚಕಮಕಿಯಲ್ಲಿ (Kashmir Encounter) ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಗುಂಡಿನ ಚಕಮಕಿಯ ವೇಳೆ ಇಬ್ಬರು ನಾಗರಿಕರು ಕೂಡ ಗಾಯಗೊಂಡಿದ್ದಾರೆ. ಇದಾದ ಬಳಿಕವೂ ಭದ್ರತಾ ಸಿಬ್ಬಂದಿಯು ಎನ್‌ಕೌಂಟರ್‌ ನಡೆದ ಜಾಗವನ್ನು ಸುತ್ತುವರಿದಿದ್ದು, ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಅನಂತನಾಗ್‌ ಜಿಲ್ಲೆಯ ಅಲ್ಹಾನ್‌ ಗಡೋಲೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಆರಂಭಿಸಿದ್ದರು. ಇದೇ ವೇಳೆ ಉಗ್ರರು ಕೂಡ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ. ಇದಾದ ಬಳಿಕವೇ ಹೆಚ್ಚಿನ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ.

“ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿರುವ ಜತೆಗೆ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದಾಗ್ಯೂ, ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಮುಂದುವರಿಸಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದ ಉಗ್ರರಾಗಿರಬಹುದು ಎಂದು ಶಂಕಿಸಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿರುವ ಕಾರಣ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಲೇ ಇರುತ್ತಾರೆ. ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದವು. ಇದಾದ ನಂತರವೂ ಉಗ್ರರ ದಾಳಿಗಳು ಮುಂದುವರಿದಿವೆ. ಸೈನಿಕರು, ಸೇನಾ ನೆಲಗಳು, ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: Terrorist Attack: ಕುಪ್ವಾರ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮ: ಪಾಕ್‌ ಉಗ್ರನನ್ನು ಹೊಡೆದುರುಳಿಸಿದ ಸೇನೆ

Continue Reading
Advertisement
Paris Olympics 2024
ಪ್ರಮುಖ ಸುದ್ದಿ2 mins ago

Paris Olympics 2024 : ವಿನೇಶ್ ಫೋಗಟ್​ ಬೆಳ್ಳಿ ಪದಕದ ಮನವಿ ತೀರ್ಪು ಭಾನುವಾರಕ್ಕೆ ಮುಂದೂಡಿಕೆ

BJP-JDS Padayatra
ಕರ್ನಾಟಕ23 mins ago

BJP-JDS Padayatra: ಪರಿಶಿಷ್ಟ, ಒಬಿಸಿಯವರಿಗೆ ಕಾಂಗ್ರೆಸ್‌ನಿಂದ ಸದಾ ಅಪಮಾನ; ಪ್ರಲ್ಹಾದ್‌ ಜೋಶಿ

Independence Day 2024
ದೇಶ27 mins ago

Independence day 2024: ಮೊದಲ ಸ್ವಾತಂತ್ರ್ಯೋತ್ಸವದಲ್ಲಿ ಗಾಂಧೀಜಿಯೇ ಭಾಗವಹಿಸಲಿಲ್ಲ! ಇಲ್ಲಿವೆ ಸ್ವಾತಂತ್ರ್ಯ ದಿನಾಚರಣೆಯ ಕುತೂಹಲಕರ ಸಂಗತಿಗಳು

Shira News
ತುಮಕೂರು35 mins ago

Shira News: ಶ್ರಾವಣದ ಮೊದಲ ಶನಿವಾರ; ಶಿರಾ ತಾಲೂಕಿನಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ

Jitesh Sharma
ಕ್ರೀಡೆ46 mins ago

Jitesh Sharma : ಟೆಕಿ ಜತೆ ಎಂಗೇಜ್ಮೆಂಟ್​ ಮಾಡಿಕೊಂಡ ಜಿತೇಶ್ ಶರ್ಮಾ

Trainee Doctor
ಪ್ರಮುಖ ಸುದ್ದಿ1 hour ago

Trainee Doctor: ವೈದ್ಯೆಯ ಕೊಂದ ಆರೋಪಿಯನ್ನು ಹಿಡಿದುಕೊಟ್ಟ ಬ್ಲ್ಯೂಟೂತ್‌ ಹೆಡ್‌ಫೋನ್; ಹೇಗಂತೀರಾ?

Actor Chetan Ahimsa
ಕರ್ನಾಟಕ2 hours ago

Actor Chetan Ahimsa: ಸ್ವಂತ ಮನೆಯಿಲ್ಲ ಎಂದ ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್‌ ಅಹಿಂಸಾ ಕಿಡಿ

Hindu Population
ದೇಶ2 hours ago

Hindu Population: ಅಸ್ಸಾಂನಲ್ಲಿ ಹಿಂದುಗಳ ಸಂಖ್ಯೆ ಶೇ.10ರಷ್ಟು ಕುಸಿತ; ಲೆಕ್ಕ ಕೊಟ್ಟ ಹಿಮಂತ ಬಿಸ್ವಾ ಶರ್ಮಾ!

Kashmir Encounter
ದೇಶ3 hours ago

Kashmir Encounter: ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ; ಇಬ್ಬರು ಯೋಧರು ಹುತಾತ್ಮ

Parsis Olympics 2024
ಕ್ರೀಡೆ3 hours ago

Paris Olympics 2024 : ನಾಳೆ ಪ್ಯಾರಿಸ್​ ಒಲಿಂಪಿಕ್ಸ್​ ಸಮಾರೋಪ; ಎಲ್ಲಿ ಕಾರ್ಯಕ್ರಮ? ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಎಲ್ಲ ವಿವರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌