Dina Bhavishya : ಈ ರಾಶಿಯವರು ನಂಬಿದ ವ್ಯಕ್ತಿಗಳಿಂದ ಮೋಸ ಹೋಗುವಿರಿ - Vistara News

ಭವಿಷ್ಯ

Dina Bhavishya : ಈ ರಾಶಿಯವರು ನಂಬಿದ ವ್ಯಕ್ತಿಗಳಿಂದ ಮೋಸ ಹೋಗುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ಸಪ್ತಮಿ ಅಹೋರಾತ್ರಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ವೃಶ್ಚಿಕ ರಾಶಿಯನ್ನು ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ. ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಅತಿರೇಕದ ಮಾತುಗಳು ಜಗಳ ಉಂಟುಮಾಡಬಹುದು ಮಾತಿನಲ್ಲಿ ಹಿಡಿತವಿರಲಿ. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಸಿಗಲಿದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರಾಗುವ ಸಾಧ್ಯತೆ ಇದೆ. ವೃಷಭ ರಾಶಿಯವರು ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (11-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ ಅಹೋರಾತ್ರಿ ವಾರ: ಭಾನುವಾರ
ನಕ್ಷತ್ರ: ಸ್ವಾತಿ 32:32 ಯೋಗ: ಶುಭ 15:47
ಕರಣ: ಗರಜ 15:47 ಅಮೃತಕಾಲ: ರಾತ್ರಿ 10:45 ರಿಂದ 12:32
ದಿನದ ವಿಶೇಷ: ತುಳಸಿದಾಸರ ಜಯಂತಿ

ಸೂರ್ಯೋದಯ : 06:07   ಸೂರ್ಯಾಸ್ತ : 06:43

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ. ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಅತಿರೇಕದ ಮಾತುಗಳು ಜಗಳ ಉಂಟುಮಾಡಬಹುದು ಮಾತಿನಲ್ಲಿ ಹಿಡಿತವಿರಲಿ. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಸಿಗಲಿದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ . ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಕೋಪದಿಂದ ಕಾರ್ಯದಲ್ಲಿ ಹಾನಿಯಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು:ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿ ಬರಲಿದೆ. ಕುಟುಂಬದಲ್ಲಿ ಹೊಸ ಭರವಸೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ, ಆರ್ಥಿಕ ಪ್ರಗತಿ ಇರಲಿದೆ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗಲಿದೆ. ಅವಶ್ಯಕ ವಸ್ತುಗಳ ಖರೀದಿ. ಅಷ್ಟೇ ಆರ್ಥಿಕ ಲಾಭ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ.
ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಹಳೆಯ ನೋವು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಇರಲಿ.ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಸಂಬಂಧಿಗಳೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಫುಲ್‌ ಟೆನ್ಷನ್‌; ದಿನದ ಮಟ್ಟಿಗೆ ಖರ್ಚು ಹೆಚ್ಚು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ತುಲಾ ರಾಶಿಯಿಂದ ಶನಿವಾರ ಸಂಜೆ 06:33ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣ ಇರಲಿದೆ. ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ವೃಷಭ ರಾಶಿಯವರು ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ಸದೃಢವಾಗಿ ಇರುವಿರಿ. ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯ ದಿನದ ಕೊನೆಯಲ್ಲಿ ಹದಗೆಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಷಷ್ಠಿ 29:44 ವಾರ: ಶನಿವಾರ
ನಕ್ಷತ್ರ: ಚಿತ್ತಾ 29:47 ಯೋಗ: ಸಾಧ್ಯ 14:50
ಕರಣ: ಕೌಲವ 16:30 ಅಮೃತಕಾಲ: ರಾತ್ರಿ 10:35ರಿಂದ 12:24
ದಿನದ ವಿಶೇಷ: ಕಲ್ಕಿ ಜಯಂತಿ, ಶ್ರಾವಣ ಶನಿವಾರ, ಷಷ್ಠಿ

ಸೂರ್ಯೋದಯ : 06:07   ಸೂರ್ಯಾಸ್ತ : 06:43

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣ ಇರಲಿದೆ. ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ:6

Horoscope Today

ವೃಷಭ: ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ಸದೃಢವಾಗಿ ಇರುವಿರಿ. ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯ ದಿನದ ಕೊನೆಯಲ್ಲಿ ಹದಗೆಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ:5

Horoscope Today

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಆರೋಗ್ಯ ಕಾಳಜಿ ಇರಲಿ . ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಇರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಇರಲಿದೆ. ಜವಾಬ್ದಾರಿಗಳು ಹೆಚ್ಚಾಗಲಿದೆ, ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದಲ್ಲಿ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಇರಲಿದೆ. ಹಣಕಾಸು,ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕ ಲಾಭ.ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಮಾಡುವಿರಿ. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ವ್ಯಾಪಾರ ವ್ಯವಹಾರ ಸಾಧಾರಣವಾಗಿರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ . ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು:ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಉತ್ಸಾಹಭರಿತ ಜೀವನ. ಆರ್ಥಿಕವಾಗಿ ಲಾಭ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ.ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಇರಲಿದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಿಂದ ಒತ್ತಡ ಇರಲಿದೆ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣ. ದಿಢೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Bhavishya: ಅಂಗೈಯಲ್ಲಿರುವ ʼಹೃದಯ ರೇಖೆಗಳುʼ ನಿಮ್ಮ ವ್ಯಕ್ತಿತ್ವ ಏನೆಂದು ಹೇಳುತ್ತವೆ; ಚೆಕ್‌ ಮಾಡಿ ನೋಡಿ!

Bhavishya: ಅಂಗೈಯಲ್ಲಿ ಮೂರು ವಿಧದ ಹೃದಯ ರೇಖೆಗಳಿರುತ್ತವೆ. ಎರಡೂ ಕೈಗಳನ್ನು ಒಟ್ಟಿಗೆ ತಂದಾಗ ಕೆಲವರಲ್ಲಿ ಹೃದಯ ರೇಖೆಗಳು ಜೋಡಿಸುತ್ತವೆ. ಇನ್ನು ಕೆಲವರ ಎಡಗೈಯ ಹೃದಯ ರೇಖೆಯು ಬಲಗೈಗಿಂತ ಹೆಚ್ಚಾಗಿರುತ್ತದೆ. ಮತ್ತೆ ಕೆಲವರ ಬಲಗೈಯ ಹೃದಯ ರೇಖೆಯು ಎಡಗೈಗಿಂತ ಹೆಚ್ಚಾಗಿರುತ್ತದೆ. ಈ ಹೃದಯ ರೇಖೆಯು ಏನು ಹೇಳುತ್ತದೆ? ಇದರಿಂದ ಗೊತ್ತಾಗುವುದೇನು? ನಮ್ಮ ವ್ಯಕ್ತಿತ್ವವನ್ನು ಇವು ಹೇಗೆ ಸೂಚಿಸುತ್ತವೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Bhavishya
Koo

ಹಸ್ತ ನೋಡಿ ಭವಿಷ್ಯ (Bhavishya) ಹೇಳುವವರೂ ಇದ್ದಾರೆ, ಇದನ್ನು ಕುತೂಹಲದಿಂದ ಕೇಳುವವರೂ ಇದ್ದಾರೆ. ಅಂಗೈಲಿರುವ ರೇಖೆಗಳು (Palm line) ನಮ್ಮ ವ್ಯಕ್ತಿತ್ವವನ್ನು ದರ್ಶಿಸುತ್ತದೆ. ಅದೇ ರೀತಿ ನಮ್ಮ ಭವಿಷ್ಯ ಯಾವ ರೀತಿ ಇರಲಿದೆ ಎಂಬುದನ್ನು ಹೇಳುತ್ತದೆ. ಅದರಲ್ಲೂ ಮುಖ್ಯವಾಗಿ ಹಸ್ತದಲ್ಲಿರುವ ಹೃದಯ ರೇಖೆಯು (Heart line) ಗುಪ್ತ ವ್ಯಕ್ತಿತ್ವದ ಲಕ್ಷಣಗಳನ್ನು (Hidden Personality) ಬಹಿರಂಗಪಡಿಸುತ್ತದೆ. ಹಸ್ತದ ಮೇಲಿನ ಶಿರೋನಾಮೆಯ ಮೇಲಿರುವ ಹೃದಯ ರೇಖೆಯು ಭಾವನಾತ್ಮಕ ಸ್ವಭಾವ, ಮನೋಧರ್ಮ, ಜೀವನದ ಕಡೆಗೆ ದೃಷ್ಟಿಕೋನ ಮತ್ತು ವೃತ್ತಿಯ ಒಲವುಗಳ ಬಗ್ಗೆ ಬಹಿರಂಗಪಡಿಸುತ್ತದೆ.

ಅಂಗೈಯಲ್ಲಿ ಮೂರು ವಿಧದ ಹೃದಯ ರೇಖೆಗಳಿರುತ್ತವೆ. ಎರಡೂ ಕೈಗಳನ್ನು ಒಟ್ಟಿಗೆ ತಂದಾಗ ಹೃದಯ ರೇಖೆಯು ಜೋಡಿಸುತ್ತದೆ. ಕೆಲವರ ಎಡಗೈಯ ಹೃದಯ ರೇಖೆಯು ಬಲಗೈಗಿಂತ ಹೆಚ್ಚಾಗಿರುತ್ತದೆ ಮತ್ತು ಇನ್ನು ಕೆಲವರ ಬಲಗೈಯ ಹೃದಯ ರೇಖೆಯು ಎಡಗೈಗಿಂತ ಹೆಚ್ಚಾಗಿರುತ್ತದೆ. ಈ ಹೃದಯ ರೇಖೆಯು ಏನು ಹೇಳುತ್ತದೆ ಎಂಬ ಮಾಹಿತಿ ಇಲ್ಲಿದೆ.


ಎರಡೂ ಕೈಗಳ ಹೃದಯ ರೇಖೆ ಒಂದೇ ರೀತಿ ಇದ್ದರೆ ಏನು?

ಎರಡೂ ಕೈಗಳ ಹೃದಯ ರೇಖೆಗಳು ಸಂಪೂರ್ಣವಾಗಿ ಜೋಡಿಸಿದರೆ ನೀವು ಸಾಮರಸ್ಯ ಮತ್ತು ಸಮತೋಲಿತ ಸ್ವಭಾವವನ್ನು ಹೊಂದಿರುವಿರಿ ಎಂದು ತಿಳಿಸುತ್ತದೆ. ಶಾಂತ ಮತ್ತು ಭಾವನಾತ್ಮಕವಾಗಿ ಸ್ಥಿರವಾಗಿರುತ್ತೀರಿ. ದಯೆ, ಸಹಾನುಭೂತಿ ಮತ್ತು ವಿಶ್ವಾಸಾರ್ಹರು. ಅಚಲ ಬೆಂಬಲಕ್ಕೆ ಹೆಸರುವಾಸಿಯಾಗಿರುವ ನೀವು ಉತ್ತಮ ಸ್ನೇಹಿತನಾಗಿರುತ್ತೀರಿ.

ಜೀವನ ಮತ್ತು ವೃತ್ತಿಜೀವನದಲ್ಲಿ ಸ್ಥಿರ ಮತ್ತು ಪ್ರಾಯೋಗಿಕ ವಿಧಾನವನ್ನು ಹೊಂದುವ ಸಾಧ್ಯತೆಯಿದೆ. ಸಮಾಲೋಚನೆ, ಬೋಧನೆ, ಮಾನವ ಸಂಪನ್ಮೂಲ, ಸಾಮಾಜಿಕ ಕೆಲಸ, ವ್ಯಾಪಾರ, ಹಣಕಾಸು ಅಥವಾ ಕಾನೂನಿನಂತಹ ವೃತ್ತಿಗಳಲ್ಲಿ ತೊಡಗಿಕೊಳ್ಳುತ್ತೀರಿ.

ನೀವು ಅತ್ಯುತ್ತಮ ಕೇಳುಗನಾಗಿರುತ್ತೀರಿ. ಅರ್ಥಪೂರ್ಣ ಸಂಬಂಧಗಳನ್ನು ಹುಡುಕುತ್ತೀರಿ ಮತ್ತು ಸಾಮಾನ್ಯವಾಗಿ ನಿಷ್ಠಾವಂತ ಮತ್ತು ವಿಶ್ವಾಸಾರ್ಹ ಪಾಲುದಾರರಾಗಿ ಕಾಣುತ್ತೀರಿ.

ವೃತ್ತಿ ಆಯ್ಕೆಗಳಲ್ಲಿ ಶಿಕ್ಷಣ, ಆರೋಗ್ಯ, ಆಡಳಿತ, ಹಣಕಾಸು, ಗ್ರಾಹಕ ಸೇವೆ, ಸಮಾಜ ಕಾರ್ಯ, ಯೋಜನಾ ಸಮನ್ವಯ, ಪರಿಸರ ಸೇವೆಗಳು, ಕಾರ್ಪೊರೇಟ್ ತರಬೇತಿ ಮತ್ತು ಸಮುದಾಯ ನಿರ್ವಹಣೆ ಸೇರಿವೆ.


ಎಡಗೈಯ ಹೃದಯ ರೇಖೆಯು ಬಲಗೈಗಿಂತ ಹೆಚ್ಚಾಗಿದ್ದರೆ?

ಎಡಗೈಯ ಹೃದಯ ರೇಖೆಯು ಬಲಗೈಗಿಂತ ಹೆಚ್ಚಿದ್ದರೆ ನೀವು ಅರ್ಥಗರ್ಭಿತ, ಸೃಜನಶೀಲ, ಸಾಹಸಮಯ ಮತ್ತು ಹೊಂದಿಕೊಳ್ಳುವ ವ್ಯಕ್ತಿತ್ವವನ್ನು ಹೊಂದಿರುವಿರಿ ಎಂಬುದನ್ನು ತೋರಿಸುತ್ತದೆ. ಸ್ವಾವಲಂಬಿ ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಇಷ್ಟಪಡುತ್ತೀರಿ. ಸ್ವಂತ ಮಾರ್ಗವನ್ನು ರೂಪಿಸುವ ಬಲವಾದ ಬಯಕೆ ನಿಮ್ಮಲ್ಲಿ ಇರುತ್ತದೆ.

ರೋಮಾಂಚಕ ಸ್ವಭಾವವು ನಿಮ್ಮನ್ನು ವರ್ಚಸ್ವಿ ಮತ್ತು ಕಾಂತೀಯವಾಗಿಸುತ್ತದೆ. ಇದು ಆಗಾಗ ಜನರನ್ನು ನಿಮ್ಮ ಕಡೆಗೆ ಸೆಳೆಯುತ್ತದೆ. ಆದರೂ ನೀವು ಆಯ್ದ ಕೆಲವರೊಂದಿಗೆ ಮಾತ್ರ ಬಲವಾದ ಸಂಬಂಧಗಳನ್ನು ಬೆಳೆಸುತ್ತೀರಿ.

ವೃತ್ತಿಜೀವನದಲ್ಲಿ ನೀವು ಮಹತ್ವಾಕಾಂಕ್ಷೆಯನ್ನು ಹೊಂದಿರುತ್ತೀರಿ. ಅಪಾಯಗಳನ್ನು ತೆಗೆದುಕೊಳ್ಳಲು ಹೆದರುವುದಿಲ್ಲ. ಯಾವಾಗಲೂ ಹೊಸ ಅನುಭವಗಳನ್ನು ಬಯಸುತ್ತೀರಿ. ಈ ಹೃದಯ ರೇಖೆಯನ್ನು ಹೊಂದಿರುವ ಬರಹಗಾರರು ತಮ್ಮ ಆಕರ್ಷಕ ಕಥೆ ಹೇಳುವಿಕೆಗೆ ಹೆಸರುವಾಸಿಯಾಗಬಹುದು. ಸ್ವತಂತ್ರ ಮತ್ತು ಸೃಜನಶೀಲ ಸ್ವಭಾವವು ನಿಮ್ಮನ್ನು ಕಲೆಗಳು, ಮನರಂಜನೆ ಅಥವಾ ವೈಯಕ್ತಿಕ ಅಭಿವ್ಯಕ್ತಿಗೆ ಅನುಮತಿಸುವ ಕ್ಷೇತ್ರಗಳಲ್ಲಿ ವೃತ್ತಿಜೀವನದ ಕಡೆಗೆ ಕರೆದೊಯ್ಯುತ್ತದೆ.

ಭಾವನಾತ್ಮಕವಾಗಿ ನೀವು ಅಭಿವ್ಯಕ್ತಿಶೀಲರಾಗಿರುತ್ತೀರಿ. ಕಾಳಜಿ ವಹಿಸುವವರಿಗೆ ನೀವು ತೀವ್ರವಾಗಿ ನಿಷ್ಠರಾಗಿರುತ್ತೀರಿ. ಆದರೆ ಅವರ ಏಕಾಂತತೆಯನ್ನು ಗೌರವಿಸುತ್ತೀರಿ. ಸ್ವಾತಂತ್ರ್ಯವು ಶ್ಲಾಘನೀಯವಾಗಿದ್ದರೂ ಇದು ಕೆಲವೊಮ್ಮೆ ಸಂಬಂಧಗಳಲ್ಲಿ ಸವಾಲುಗಳಿಗೆ ಕಾರಣವಾಗಬಹುದು.

ಸೃಜನಾತ್ಮಕ ಕಲೆಗಳು, ಮನರಂಜನೆ, ಮಾರ್ಕೆಟಿಂಗ್, ಸಾಮಾಜಿಕ ಮಾಧ್ಯಮ, ಪ್ರಯಾಣ ಮತ್ತು ಪ್ರವಾಸೋದ್ಯಮ, ಫ್ಯಾಷನ್, ಮಾರಾಟ, ಈವೆಂಟ್ ಯೋಜನೆ, ಬರವಣಿಗೆ, ಪತ್ರಿಕೋದ್ಯಮ ಮತ್ತು ಸಾರ್ವಜನಿಕ ಸಂಬಂಧಗಳ ವೃತ್ತಿ ಕ್ಷೇತ್ರದಲ್ಲಿ ನೀವು ಹೆಚ್ಚಿನ ಸಾಧನೆ ಮಾಡಬಲ್ಲವರಾಗಿರುತ್ತೀರಿ.


ಬಲಗೈಯ ಹೃದಯ ರೇಖೆಯು ಎಡಗೈಗಿಂತ ಹೆಚ್ಚಾಗಿದ್ದರೆ?

ಬಲಗೈಯ ಹೃದಯ ರೇಖೆಯು ಎಡಗೈಗಿಂತ ಹೆಚ್ಚಿದ್ದರೆ ನೀವು ಪ್ರಾಯೋಗಿಕ, ಭಾವನಾತ್ಮಕವಾಗಿ ಬುದ್ಧಿವಂತ, ವಿಶ್ಲೇಷಣಾತ್ಮಕ, ತಾರ್ಕಿಕ ಮತ್ತು ವಾಸ್ತವಿಕ ವ್ಯಕ್ತಿತ್ವವನ್ನು ಹೊಂದಿರುವಿರಿ ಎಂಬುದನ್ನು ಸೂಚಿಸುತ್ತದೆ. ನಿಮ್ಮ ಸ್ವಭಾವವು ನಿಮ್ಮನ್ನು ವಿಶ್ವಾಸಾರ್ಹರನ್ನಾಗಿ ಮಾಡುತ್ತದೆ. ಬಲವಾದ ಜವಾಬ್ದಾರಿಯ ಪ್ರಜ್ಞೆಯೊಂದಿಗೆ. ನೀವು ಬಲವಾದ ಆದರ್ಶವಾದಿ ಮತ್ತು ಮಾನವೀಯ ಗುಣಗಳನ್ನು ಹೊಂದಿರಬಹುದು.

ವೃತ್ತಿಜೀವನದಲ್ಲಿ ಶಿಸ್ತುಬದ್ಧತೆಗೆ ಗಮನಹರಿಸುತ್ತೀರಿ. ಆಗಾಗ್ಗೆ ಸ್ಪಷ್ಟ ಗುರಿಗಳನ್ನು ಹೊಂದಿಸಿ ಅವುಗಳನ್ನು ಸಾಧಿಸಲು ಶ್ರದ್ಧೆಯಿಂದ ಕೆಲಸ ಮಾಡುತ್ತೀರಿ.

ಇದನ್ನೂ ಓದಿ: Shravan 2024: ಇಂದಿನಿಂದ ಶ್ರಾವಣ ಶುಭಾರಂಭ; ಈ ತಿಂಗಳ ವಿಶೇಷ ಏನು?

ಭಾವನೆಗಳನ್ನು ಖಾಸಗಿಯಾಗಿ ಇರಿಸಿಕೊಳ್ಳಲು ಬಯಸುತ್ತೀರಿ. ಭಾವನೆಗಳನ್ನು ಬಹಿರಂಗವಾಗಿ ವ್ಯಕ್ತಪಡಿಸುವುದು ನಿಮಗೆ ಸವಾಲಾಗಬಹುದು. ಪ್ರೀತಿಸುವವರಿಗೆ ನಿಷ್ಠರಾಗಿರುವಿರಿ. ಸಂಬಂಧಗಳು ನಂಬಿಕೆ ಮತ್ತು ಪರಸ್ಪರ ಗೌರವದ ಮೇಲೆ ನಿರ್ಮಾಣವಾಗುತ್ತದೆ.

ವೃತ್ತಿ ಕ್ಷೇತ್ರಗಳಲ್ಲಿ ತಂತ್ರಜ್ಞಾನ, ಕಾನೂನು, ಹಣಕಾಸು, ಎಂಜಿನಿಯರಿಂಗ್, ಸಂಶೋಧನೆ, ಐಟಿ, ಡೇಟಾ ವಿಶ್ಲೇಷಣೆ, ನವೀಕರಿಸಬಹುದಾದ ಶಕ್ತಿ, ಕೃಷಿ ಮತ್ತು ಆರೋಗ್ಯ ವಿಜ್ಞಾನ ನಿಮಗೆ ಹೊಂದಿಕೆಯಾಗುತ್ತದೆ.

Continue Reading

ಭವಿಷ್ಯ

Dina Bhavishya : ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ; ವಾತಾವರಣ ಹದಗೆಡದಂತೆ ಜಾಗ್ರತೆ ವಹಿಸಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ತುಲಾ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಮಿಥುನ ರಾಶಿಯವರು ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (09-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಪಂಚಮಿ 27:13 ವಾರ: ಶುಕ್ರವಾರ
ನಕ್ಷತ್ರ: ಹಸ್ತಾ 26:43 ಯೋಗ: ಸಿದ್ಧಿ 13:43
ಕರಣ: ಭವ 13:54 ಅಮೃತಕಾಲ: ರಾತ್ರಿ 07:57ರಿಂದ 09:45
ದಿನದ ವಿಶೇಷ: ನಾಗರ ಪಂಚಮಿ

ಸೂರ್ಯೋದಯ : 06:07   ಸೂರ್ಯಾಸ್ತ : 06:43

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಇರಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ. ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರು-ಪೇರಾಗಲಿದೆ. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯವಸ್ತುಗಳ ಖರೀದಿ ಖರ್ಚು ಇರಲಿದೆ. ಅಮೂಲ್ಯ ವಸ್ತುಗಳ ಕುರಿತು ಗಮನ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ಇರಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಧಾರ್ಮಿಕ

Vastu Tips: ಕನ್ನಡಿಯನ್ನು ಮನೆಯ ಎಲ್ಲೆಂದರಲ್ಲಿ ಇಡಬೇಡಿ! ನಕಾರಾತ್ಮಕ ಶಕ್ತಿ ಆಹ್ವಾನಿಸಬೇಡಿ!

ಕನ್ನಡಿ ಪ್ರತಿಯೊಂದು ಮನೆಯಲ್ಲೂ ಇರುತ್ತದೆ. ಅದನ್ನು ನಾವು ಅಲಂಕಾರದ ಉದ್ದೇಶಗಳಿಗಾಗಿ ಹೆಚ್ಚಾಗಿ ಬಳಸುತ್ತೇವೆ. ಆದರೆ ಈ ಕನ್ನಡಿಯನ್ನು ಸರಿಯಾಗಿ ಇಡದೇ ಇದ್ದರೆ ಅದು ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸಬಹುದು ಎನ್ನುತ್ತದೆ ವಾಸ್ತು ನಿಯಮ. ಕನ್ನಡಿಗೆ ಮನೆಯಲ್ಲಿ ಯಾವ ರೀತಿ ವಾಸ್ತು ತತ್ತ್ವಗಳಿವೆ (Vastu Tips) ಎಂಬುದರ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Vastu Tips
Koo

ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು (Positive energy) ತುಂಬಿಸಲು, ಜೀವನದಲ್ಲಿ ಸಮೃದ್ಧಿ, ಸಂತೋಷವನ್ನು ತರಲು ವಾಸ್ತು ಶಾಸ್ತ್ರದಲ್ಲಿ (Vastu Tips) ಕೆಲವೊಂದು ನಿಯಮಗಳನ್ನು ಮಾಡಲಾಗಿದೆ. ನಂಬಿಕೆಯೇ ಇದರ ಆಧಾರವಾಗಿದೆ. ಅಲಂಕಾರಕ್ಕಾಗಿ ಅಥವಾ ಅಗತ್ಯಕ್ಕಾಗಿ ಮನೆಯಲ್ಲಿ ಇಡುವ ಕೆಲವೊಂದು ವಸ್ತುಗಳು ಮನೆಗೆ ಶಕ್ತಿ ತುಂಬುತ್ತವೆ. ಅದು ಸಕಾರಾತ್ಮಕ ಫಲಿತಾಂಶ ಬೀರಲು ವಾಸ್ತು ನಿಯಮಕ್ಕೆ (vastu shastra) ಅನುಸಾರವಾಗಿ ಅವುಗಳನ್ನು ಇಡುವುದು ಮುಖ್ಯವಾಗಿರುತ್ತದೆ.

ಕನ್ನಡಿ ಪ್ರತಿಯೊಂದು ಮನೆಯಲ್ಲೂ ಇರುತ್ತದೆ. ಅದನ್ನು ನಾವು ಅಲಂಕಾರದ ಕಾರ್ಯಗಳಿಗಾಗಿ ಬಳಸುತ್ತೇವೆ. ಈ ಕನ್ನಡಿಯನ್ನು ಸರಿಯಾಗಿ ಇಡದೇ ಇದ್ದರೆ ಅದು ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸಬಹುದು ಎನ್ನುತ್ತದೆ ವಾಸ್ತು ನಿಯಮ. ಹಾಗಾದರೆ ಕನ್ನಡಿಗೆ ಮನೆಯಲ್ಲಿ ಯಾವ ರೀತಿ ವಾಸ್ತು ತತ್ತ್ವಗಳಿವೆ ಎಂಬುದನ್ನು ತಿಳಿಯೋಣ.


ಸೂಕ್ತ ಪ್ರದೇಶ

ಡ್ರೆಸ್ಸಿಂಗ್ ರೂಮ್ ಮತ್ತು ವಾಶ್‌ರೂಮ್ ಹೊರತುಪಡಿಸಿ ಡೈನಿಂಗ್ ಟೇಬಲ್‌ಗೆ ಎದುರಾಗಿ ಡೈನಿಂಗ್ ಏರಿಯಾದಲ್ಲಿ ಕನ್ನಡಿಯನ್ನು ಇರಿಸಬಹುದು. ಇದನ್ನು ಈ ಪ್ರದೇಶದಲ್ಲಿ ಇರಿಸುವ ಮುಖ್ಯ ಉದ್ದೇಶ ಇಡೀ ಕುಟುಂಬವು ಒಟ್ಟಿಗೆ ರಾತ್ರಿ ಊಟವನ್ನು ಮಾಡುವಾಗ ಅದು ಕನ್ನಡಿಯಲ್ಲಿ ಪ್ರತಿಫಲಿಸಬೇಕು. ಇದು ಮನೆಯಲ್ಲಿ ಸಮೃದ್ಧಿಯನ್ನು ತರುತ್ತದೆ ಮತ್ತು ಕುಟುಂಬ ಸದಸ್ಯರಲ್ಲಿ ಪ್ರೀತಿಯನ್ನು ಹೆಚ್ಚಿಸುತ್ತದೆ.

ಸ್ವಚ್ಛತೆ ಕಾಪಾಡಿ

ಕನ್ನಡಿಯನ್ನು ಎಲ್ಲಿ ಇರಿಸಿದರೂ ಅದನ್ನು ಸ್ವಚ್ಛವಾಗಿ ಇರಿಸಬೇಕು. ಇಲ್ಲದಿದ್ದರೆ ಅದು ನಕಾರಾತ್ಮಕತೆಯನ್ನು ಆಕರ್ಷಿಸಬಹುದು. ಕನ್ನಡಿಯ ಮೇಲೆ ಯಾವುದೇ ಸ್ಟಿಕ್ಕರ್‌ಗಳನ್ನು ಅಂಟಿಸಬಾರದು.


ಮಲಗುವ ಕೋಣೆ

ಮಾಸ್ಟರ್ ಬೆಡ್‌ರೂಮ್‌ನ ದಕ್ಷಿಣ ಅಥವಾ ನೈಋತ್ಯ ದಿಕ್ಕಿನಲ್ಲಿ ಕನ್ನಡಿಯನ್ನು ಇರಿಸಬಹುದು. ಕನ್ನಡಿಯನ್ನು ಮಲಗುವ ಕೋಣೆಯಲ್ಲಿ ಎಲ್ಲೆಂದರಲ್ಲಿ ಇರಿಸಿದರೆ ನಕಾರಾತ್ಮಕ ಶಕ್ತಿಗಳನ್ನು ಆಕರ್ಷಿಸುತ್ತದೆ. ಹಾಗಾಗಿ ಎಚ್ಚರಿಕೆಯಿಂದ ಇರಿಸಬೇಕು.

ಕನ್ನಡಿಯನ್ನು ಇಡುವ ಸ್ಥಳ

ಕನ್ನಡಿಯನ್ನು ಯಾವಾಗಲೂ ಪೂರ್ವ, ಉತ್ತರ ಅಥವಾ ಪಶ್ಚಿಮ ಗೋಡೆಗಳ ಮೇಲೆ ಇಡಬೇಕು.

ಇದನ್ನೂ ಓದಿ: Vastu Tips: ಶಾಂತಿ, ನೆಮ್ಮದಿ, ಸಮೃದ್ಧಿಯಲ್ಲಿ ಮನೆಯ ಕರ್ಟನ್‌ಗಳ ಪಾತ್ರವೂ ಇರುತ್ತದೆ!


ಆಕಾರ ಹೇಗಿರಬೇಕು?

ವಾಸ್ತು ಪ್ರಕಾರ ಕನ್ನಡಿಯ ಚದರ ಮತ್ತು ಆಯತಾಕಾರದ ಆಕಾರಗಳನ್ನು ಹೊಂದಿರಬೇಕು. ಯಾಕೆಂದರೆ ಅವುಗಳು ಸುತ್ತಲೂ ಸಮವಾಗಿ ಶಕ್ತಿಯನ್ನು ಹರಡುತ್ತವೆ. ಕನ್ನಡಿಗೆ ವೃತ್ತದ ಆಕಾರವನ್ನು ಶ್ರೇಷ್ಠವೆಂದು ಪರಿಗಣಿಸಲಾಗುವುದಿಲ್ಲ.

ಮುರಿದ ಕನ್ನಡಿ

ಕನ್ನಡಿಯು ಎಷ್ಟೇ ದುಬಾರಿಯಾಗಿದ್ದರೂ ಅದು ಒಂದು ಬದಿಯಿಂದ ಒಡೆದರೆ ತಕ್ಷಣ ಅದನ್ನು ಎಸೆಯಬೇಕು. ಯಾಕೆಂದರೆ ಒಡೆದ ಕನ್ನಡಿಯನ್ನು ಮನೆಯಲ್ಲಿ ಇಡುವುದು ಶುಭವಲ್ಲ.

Continue Reading
Advertisement
Police Firing
ಕ್ರೈಂ10 mins ago

Police Firing: ಪೊಲೀಸರ ಮೇಲೆ ದಾಳಿ ನಡೆಸಿದ ರೌಡಿ ಕಾಲಿಗೆ ಗುಂಡೇಟು

Bangladesh Unrest
ವಿದೇಶ10 mins ago

Bangladesh Unrest: ಹಿಂದೂಗಳ ಮೇಲಿನ ದಾಳಿ ಖಂಡಿಸಿ ಬಾಂಗ್ಲಾದೇಶದಲ್ಲಿ ಭಾರೀ ಪ್ರತಿಭಟನೆ; ಅಮೆರಿಕ, ಯುಕೆಯಲ್ಲೂ ಧರಣಿ

Tharun Sudhir wedding live video is here
ಸ್ಯಾಂಡಲ್ ವುಡ್32 mins ago

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮದ ಲೈವ್‌ ವಿಡಿಯೊ ಇಲ್ಲಿದೆ ನೋಡಿ!

Shiva Rajkumar Bhairathi Ranagal Title Song Geetha SRK
ಸ್ಯಾಂಡಲ್ ವುಡ್49 mins ago

Shiva Rajkumar: ʻಭೈರತಿ ರಣಗಲ್ʼ ಟೈಟಲ್ ಸಾಂಗ್ ಔಟ್‌; ಸೆಪ್ಟೆಂಬರ್‌ನಲ್ಲಿ ತೆರೆಗೆ!

Women’s T20 World Cup
ಕ್ರೀಡೆ55 mins ago

Women’s T20 World Cup: ವಿಶ್ವಕಪ್​ ನಡೆಸಲು ಸೇನೆಯ ನೆರವು ಕೇಳಿದ ಬಾಂಗ್ಲಾ ಕ್ರಿಕೆಟ್​ ಮಂಡಳಿ

Jr NTR luxury watch at Hyderabad event
South Cinema1 hour ago

Jr NTR: ಸಿನಿಮಾ ಮುಹೂರ್ತದಲ್ಲಿ ಜ್ಯೂ. ಎನ್​ಟಿಆರ್ ಧರಿಸಿದ ವಾಚ್ ಬೆಲೆ ಕೇಳಿದರೆ ನೀವು ಬೆರಗಾಗೋದು ಖಚಿತ​!

Police Firing
ಕ್ರೈಂ1 hour ago

Police Firing: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು; ಕೊಲೆ ಆರೋಪಿ ಕಾಲಿಗೆ ಫೈರಿಂಗ್‌

Kejriwal Bungalow Case
ದೇಶ1 hour ago

Kejriwal Bungalow Case: ಕೇಜ್ರಿವಾಲ್‌ ಬಂಗಲೆ ನವೀಕರಣ ಅಕ್ರಮ; ಮೂವರು ಇಂಜಿನಿಯರ್‌ಗಳು ಸಸ್ಪೆಂಡ್‌

ಕ್ರೀಡೆ1 hour ago

Paris Olympics: ಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ​ಒಲಿಂಪಿಕ್ಸ್​ ಪದಕ!

Cyber Crime
ಕ್ರೈಂ2 hours ago

Cyber Crime: ಆನ್‌ಲೈನ್‌ ಹೂಡಿಕೆ ಹೆಸರಲ್ಲಿ ವಂಚನೆ; 1.53 ಕೋಟಿ ರೂ. ಕಳೆದುಕೊಂಡ ಟೆಕ್ಕಿ ದಂಪತಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌