Paris Olympics 2024: ಇಂದು ಪ್ಯಾರಿಸ್​ ಒಲಿಂಪಿಕ್ಸ್​ ಕ್ರೀಡಾಕೂಟದ ಸಮಾರೋಪ; ಕಾರ್ಯಕ್ರಮದ ಎಲ್ಲ ವಿವರ ಇಲ್ಲಿದೆ - Vistara News

ಪ್ರಮುಖ ಸುದ್ದಿ

Paris Olympics 2024: ಇಂದು ಪ್ಯಾರಿಸ್​ ಒಲಿಂಪಿಕ್ಸ್​ ಕ್ರೀಡಾಕೂಟದ ಸಮಾರೋಪ; ಕಾರ್ಯಕ್ರಮದ ಎಲ್ಲ ವಿವರ ಇಲ್ಲಿದೆ

Paris Olympics 2024 : ಕಾರ್ಯಕ್ರಮಗಳ ನಿರ್ದಿಷ್ಟ ವಿವರಗಳು ಲಭ್ಯವಿಲ್ಲದಿದ್ದರೂ ಸಮಾರೋಪ ಸಮಾರಂಭದಲ್ಲಿ ಸ್ಟೇಡ್ ಡಿ ಫ್ರಾನ್ಸ್ ನಲ್ಲಿ ನಡೆಯಲಿದೆ ಎಂಬುದು ಖಾತರಿಯಾಗಿದೆ. 100 ಕ್ಕೂ ಹೆಚ್ಚು ಅಕ್ರೋಬ್ಯಾಟ್​ಗಳು ಮತ್ತು ವೈಮಾನಿಕ ಪ್ರದರ್ಶನ ಇದರ ಪ್ರಮುಖ ಹೈಲೈಟ್​. ನಟ ಟಾಮ್ ಕ್ರೂಸ್ 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್​​ ಸಮಾರೋಪದಲ್ಲಿ ಸ್ಕೈಡೈವಿಂಗ್ ಸ್ಟಂಟ್ ಮಾಡಲಿದ್ದಾರೆ ಎಂಬ ವದಂತಿಗಳಿವೆ. ಸಮಾರಂಭದಲ್ಲಿ ಸ್ನೂಪ್ ಡಾಗ್, ಬಿಲ್ಲಿ ಐಲಿಷ್ ಮತ್ತು ರೆಡ್ ಹಾಟ್ ಚಿಲ್ಲಿ ಪೆಪ್ಪರ್ಸ್ ತಂಡಗಳೂ ಕಾಣಿಸಿಕೊಳ್ಳಲಿವೆ ಎಂಬ ವರದಿಗಳು ಹೇಳಿವೆ.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜುಲೈ 26ರಂದು ಶುಭಾರಂಭಗೊಂಡ ಪ್ಯಾರಿಸ್ ಒಲಿಂಪಿಕ್ಸ್​ (Paris Olympics 2024) ಭಾನುವಾರ ಮುಕ್ತಾಯಗೊಳ್ಳಲಿದೆ. ಲೈವ್ ಸಂಗೀತ ಪ್ರದರ್ಶನಗಳು, ಕಲಾತ್ಮಕ ನೃತ್ಯಗಳು ಮತ್ತು ಸೀನ್ ನದಿಯ ಉದ್ದಕ್ಕೂ ಪ್ರಯಾಣಿಸಿದ ಕ್ರೀಡಾಪಟುಗಳು ಸೇರಿದಂತೆ ಉದ್ಘಾಟನಾ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲಾಗಿತ್ತು. ಅದೇ ರೀತಿಯಲ್ಲಿ ಸಮಾರೋಪದಲ್ಲಿಯೂ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳು ಆಯೋಜನೆಗೊಂಡಿವೆ ಎಂಬುದಾಗಿ ಪ್ಯಾರಿಸ್ ಒಲಿಂಪಿಕ್ಸ್ ಸಂಘಟನಾ ಸಮಿತಿ ಹೇಳಿದೆ.

ಕಾರ್ಯಕ್ರಮಗಳ ನಿರ್ದಿಷ್ಟ ವಿವರಗಳು ಲಭ್ಯವಿಲ್ಲದಿದ್ದರೂ ಸಮಾರೋಪ ಸಮಾರಂಭದಲ್ಲಿ ಸ್ಟೇಡ್ ಡಿ ಫ್ರಾನ್ಸ್ ನಲ್ಲಿ ನಡೆಯಲಿದೆ ಎಂಬುದು ಖಾತರಿಯಾಗಿದೆ. 100 ಕ್ಕೂ ಹೆಚ್ಚು ಅಕ್ರೋಬ್ಯಾಟ್​ಗಳು ಮತ್ತು ವೈಮಾನಿಕ ಪ್ರದರ್ಶನ ಇದರ ಪ್ರಮುಖ ಹೈಲೈಟ್​. ನಟ ಟಾಮ್ ಕ್ರೂಸ್ 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್​​ ಸಮಾರೋಪದಲ್ಲಿ ಸ್ಕೈಡೈವಿಂಗ್ ಸ್ಟಂಟ್ ಮಾಡಲಿದ್ದಾರೆ ಎಂಬ ವದಂತಿಗಳಿವೆ. ಸಮಾರಂಭದಲ್ಲಿ ಸ್ನೂಪ್ ಡಾಗ್, ಬಿಲ್ಲಿ ಐಲಿಷ್ ಮತ್ತು ರೆಡ್ ಹಾಟ್ ಚಿಲ್ಲಿ ಪೆಪ್ಪರ್ಸ್ ತಂಡಗಳೂ ಕಾಣಿಸಿಕೊಳ್ಳಲಿವೆ ಎಂಬ ವರದಿಗಳು ಹೇಳಿವೆ.

2024ರ ಪ್ಯಾರಿಸ್ ಒಲಿಂಪಿಕ್ಸ್ ಸಮಾರೋಪ ಬಗ್ಗೆ ಹೆಚ್ಚಿನ ವಿವರಗಳು ಇಲ್ಲಿವೆ.

2024ರ ಒಲಿಂಪಿಕ್ಸ್ ಸಮಾರೋಪ ಸಮಾರಂಭ ಯಾವಾಗ?

ಸಮಾರೋಪ ಸಮಾರಂಭ ಆಗಸ್ಟ್​​​ 11ರಂದು ಭಾನುವಾರ ನಡೆಯಲಿದೆ.

2024 ರ ಒಲಿಂಪಿಕ್ಸ್ ಮುಕ್ತಾಯ ಸಮಾರಂಭದ ಸಮಯವೇನು?

ಪ್ಯಾರಿಸ್​​ನ ಉತ್ತರಕ್ಕಿರುವ ಸ್ಟೇಡ್ ಡಿ ಫ್ರಾನ್ಸ್​ನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ಪ್ರಾರಂಭವಾಗಲಿದೆ. ಇದು ಸಂಜೆ 5:15 ರವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಸಮಾರಂಭ ಎಲ್ಲಿ ನಡೆಯಲಿದೆ?

ಸಮಾರೋಪ ಸಮಾರಂಭವು ಪ್ಯಾರಿಸ್ ನ ಸ್ಟೇಡ್ ಡಿ ಫ್ರಾನ್ಸ್ ಒಳಗೆ ನಡೆಯಲಿದೆ.

ಸಮಾರಂಭದ ಆತಿಥ್ಯ ವಹಿಸುವವರು ಯಾರು?

“ದಿ ಟುನೈಟ್ ಶೋ” ನಿರೂಪಕ ಜಿಮ್ಮಿ ಫಾಲನ್ ಮತ್ತು ದೀರ್ಘಕಾಲದ ಕ್ರೀಡಾ ನಿರೂಪಕ ಮೈಕ್ ಟಿರಿಕೊ ಈ ಕಾರ್ಯಕ್ರಮವನ್ನು ಆಯೋಜಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಏನೇನಿವೆ?

ಸಮಾರೋಪ ಸಮಾರಂಭವು ಆಯಾ ದೇಶಗಳ ಧ್ವಜಗಳ ಪರೇಡ್​ನೊಂದಿಗೆ ಪ್ರಾರಂಭವಾಗುತ್ತದೆ. ಇದರಲ್ಲಿ ಪ್ರತಿ ರಾಷ್ಟ್ರದ ಕ್ರೀಡಾಪಟುಗಳು ತಮ್ಮ ಧ್ವಜದೊಂದಿಗೆ ಕ್ರೀಡಾಂಗಣಕ್ಕೆ ಬರಲಿದ್ದಾರೆ. ಒಲಿಂಪಿಕ್ಸ್ ಗ್ರೀಸ್​ನಲ್ಲಿ ಹುಟ್ಟಿಕೊಂಡಿದ್ದರಿಂದ, ಗ್ರೀಕ್ ಧ್ವಜವು ಮೆರವಣಿಗೆಯನ್ನು ಮುನ್ನಡೆಸಲಿದೆ. ಆತಿಥೇಯ ದೇಶವು ಕೊನೆಯಲ್ಲಿ ಸಾಗಲಿದೆ ಅಂತಾರರಾಷ್ಟ್ರೀಯ ಒಲಿಂಪಿಕ್ ಸಮಿತಿ ತಿಳಿಸಿದೆ. ಪ್ಯಾರಿಸ್ ನಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಕೇಟಿ ಲೆಡೆಕಿ ಮತ್ತು ನಿಕ್ ಮೀಡ್ ಅಮೆರಿಕದ ಧ್ವಜ ಹೊತ್ತೊಯ್ಯಲಿದ್ದಾರೆ.

ಇದನ್ನೂ ಓದಿ: Vinesh Phogat : ವಿನೇಶ್​ ಫೋಗಟ್​ಗೆ ಅನ್ಯಾಯವಾಗಿದೆ ಎಂದ ಆರ್​. ಅಶ್ವಿನ್​; ಅಥ್ಲೀಟ್​ಗಳ ಸಮಸ್ಯೆ ವಿವರಿಸಿದ ಸ್ಪಿನ್ನರ್​

ಭಾರತದ ಧ್ವಜಧಾರಿಗಳು ಯಾರು?

ಪ್ಯಾರಿಸ್ ಒಲಿಂಪಿಕ್ಸ್ 2024 ರ ಸಮಾರೋಪ ಸಮಾರಂಭದಲ್ಲಿ ಪಿ.ಆರ್.ಶ್ರೀಜೇಶ್ ಮತ್ತು ಶೂಟರ್ ಮನು ಭಾಕರ್ ಅವರು ಭಾರತದ ಧ್ವಜ ಹೊತ್ತೊಯ್ಯಲಿದ್ದಾರೆ ಎಂದು ಟೀಮ್ ಇಂಡಿಯಾದ ಇತ್ತೀಚಿನ ಪ್ರಕಟಣೆ ತಿಳಿಸಿದೆ.

ಶ್ರೀಜೇಶ್ ಹಾಕಿ ತಂಡ ಕಂಚು ಗೆಲ್ಲುವಲ್ಲಿ ನಿರ್ಣಾಯಕರು. ಪ್ಯಾರಿಸ್​​ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದ ಮನು ಭಾಕರ್ ಈಗ ಧ್ವಜವನ್ನು ಹೊತ್ತೊಯ್ಯಲು ಆಯ್ಕೆಯಾಗಿದ್ದಾರೆ.

ಪದಕಗಳ ಪ್ರಧಾನ

ಭಾನುವಾರ ತಮ್ಮ ಸ್ಪರ್ಧೆಗಳನ್ನು ಮುಕ್ತಾಯಗೊಳಿಸುವ ಕ್ರೀಡಾಪಟುಗಳಿಗೆ ಸಮಾರೋಪ ಸಮಾರಂಭದಲ್ಲಿಯೇ ಅಂತಿಮ ಪದಕ ಪ್ರದಾನ ನಡೆಯಲಿದೆ. ಮಹಿಳೆಯರ ಮ್ಯಾರಥಾನ್, ಪುರುಷರ ಹ್ಯಾಂಡ್ಬಾಲ್, ಪುರುಷರ ವಾಟರ್ ಪೋಲೊ, ಪುರುಷರ ಮತ್ತು ಮಹಿಳೆಯರ ವೇಟ್ಲಿಫ್ಟಿಂಗ್, ಪುರುಷರ ಮತ್ತು ಮಹಿಳೆಯರ ಕುಸ್ತಿ, ಮಹಿಳಾ ಬ್ಯಾಸ್ಕೆಟ್​​ಬಾ ಲ್, ಮಹಿಳಾ ಪೆಂಟಾಥ್ಲಾನ್, ಮಹಿಳಾ ವಾಲಿಬಾಲ್ ಮತ್ತು ಪುರುಷರ ಮತ್ತು ಮಹಿಳೆಯರ ಸೈಕ್ಲಿಂಗ್ ಫೈನಲ್​ಗಳು ಭಾನುವಾರ ಕೊನೆಗೊಳ್ಳಲಿವೆ.

ಇದನ್ನೂ ಓದಿ: Smriti Mandhana : ವಿರಾಟ್​ ಕೊಹ್ಲಿ ಜತೆ ನನ್ನನ್ನು ಹೋಲಿಕೆ ಮಾಡಬೇಡಿ; ಸ್ಮೃತಿ ಮಂದಾನ ಮನವಿ

ಒಲಿಂಪಿಕ್​​ ಧ್ವಜ ಹಸ್ತಾಂತರ

ಬೇಸಿಗೆ ಕ್ರೀಡಾಕೂಟದ ಪ್ರಸ್ತುತ ಆತಿಥೇಯ ನಗರದ ಮೇಯರ್ ಒಲಿಂಪಿಕ್ ಧ್ವಜವನ್ನು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರ ಮಾಡಲಿದ್ದಾರೆ. ಅವರು ಅದನ್ನು ಮುಂದಿನ ಆತಿಥೇಯ ನಗರದ ಮೇಯರ್ ನೀಡುತ್ತಾರೆ. ಪ್ಯಾರಿಸ್ ಮೇಯರ್ ಅನ್ನೆ ಹಿಡಾಲ್ಗೊ ಒಲಿಂಪಿಕ್ ಧ್ವಜವನ್ನು ಐಒಸಿ ಅಧ್ಯಕ್ಷ ಥಾಮಸ್ ಬಾಚ್ ಅವರಿಗೆ ಹಸ್ತಾಂತರಿಸಲಿದ್ದಾರೆ. ನಂತರ ಅದನ್ನು ಲಾಸ್ ಏಂಜಲೀಸ್ ಮೇಯರ್ ಕರೆನ್ ಬಾಸ್ ಅವರಿಗೆ ನೀಡಲಿದ್ದಾರೆ.

2028 ರ ಬೇಸಿಗೆ ಕ್ರೀಡಾಕೂಟದ ಪೂರ್ವವೀಕ್ಷಣೆಯ ನಂತರ, ಒಲಿಂಪಿಕ್ ಜ್ವಾಲೆ ನಂದಿಸಲಾಗುವುದು. ಇದು 2024 ರ ಪ್ಯಾರಿಸ್ ಬೇಸಿಗೆ ಒಲಿಂಪಿಕ್ಸ್​ನ ಅಂತ್ಯವನ್ನು ಸೂಚಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Dog Meat: ಅಬ್ದುಲ್‌ ರಜಾಕ್‌ ಬಾಕ್ಸ್‌ನಲ್ಲಿದ್ದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ; ಹೈದರಾಬಾದ್‌ ಲ್ಯಾಬ್‌ ವರದಿ

Dog Meat: ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್‌ ರಜಾಕ್‌ ತರಿಸುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವೂ ಮಿಶ್ರಣವಾಗಿರುತ್ತದೆ ಎಂದು ಪುನೀತ್‌ ಕೆರೆಹಳ್ಳಿ ಸೇರಿ ಹಲವು ಆರೋಪಿಸಿದ್ದರು. ಹಾಗಾಗಿ, ಕೆಲ ಬಾಕ್ಸ್‌ಗಳಲ್ಲಿದ್ದ ಮಾಂಸದ ಸ್ಯಾಂಪಲ್‌ಅನ್ನು ಲ್ಯಾಬ್‌ಗೆ ಕಳುಹಿಸಲಾಗಿತ್ತು. ಈಗ ಅದರ ವರದಿ ಬಂದಿದ್ದು, ಬಾಕ್ಸ್‌ನಲ್ಲಿದ್ದಿದ್ದು ಕುರಿ ಮಾಂಸವೇ ಎಂಬುದು ಸಾಬೀತಾಗಿದೆ.

VISTARANEWS.COM


on

Dog meat
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ (Majestic Railway Station) ಪತ್ತೆಯಾಗಿರುವುದು ಕುರಿ ಮಾಂಸವೇ (mutton) ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್‌ ಹೇಳಿದ್ದಾರೆ. ಲ್ಯಾಬ್ ರಿಪೋರ್ಟ್‌ನಲ್ಲಿ (Lab Report) ಇದು ಕುರಿ ಮಾಂಸ ಎಂದು ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ. ಇದರ ಬೆನ್ನಲ್ಲೇ, ಹೈದರಾಬಾದ್‌ ಲ್ಯಾಬ್‌ ವರದಿ ಕೂಡ ಲಭ್ಯವಾಗಿದ್ದು, ಬಾಕ್ಸ್‌ನಲ್ಲಿದ್ದಿದ್ದು ಕುರಿ ಮಾಂಸವೇ ಎಂದು ಸ್ಪಷ್ಟಪಡಿಸಿದೆ. ಇದು ಕೂಡ ʼನಾಯಿ ಮಾಂಸ ವಿವಾದʼ (Dog Meat Controversy) ಎತ್ತಿರುವ ಪುನೀತ್‌ ಕೆರೆಹಳ್ಳಿ (Puneeth Kerehalli) ಬಳಗಕ್ಕೆ ಹಿನ್ನಡೆಯಾಗಿದೆ.

ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್‌ ರಜಾಕ್‌ ತರಿಸುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವೂ ಮಿಶ್ರಣವಾಗಿರುತ್ತದೆ ಎಂದು ಪುನೀತ್‌ ಕೆರೆಹಳ್ಳಿ ಸೇರಿ ಹಲವು ಆರೋಪಿಸಿದ್ದರು. ಹಾಗಾಗಿ, ಬಾಕ್ಸ್‌ನಲ್ಲಿದ್ದ ಮಾಂಸದ ಸ್ಯಾಂಪಲ್‌ಅನ್ನು ಹೈದರಾಬಾದ್‌ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಈಗ ಲ್ಯಾಬ್‌ ವರದಿ ಬಂದಿದ್ದು, ಅದು ಕುರಿ ಮಾಂಸವೇ ಎಂಬುದು ದೃಢವಾಗಿದೆ ಎಂದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ. ಅಲ್ಲಿಗೆ, ನಾಯಿ ಮಾಂಸ ವಿವಾದವು ಸತ್ವ ಕಳೆದುಕೊಂಡಂತಾಗಿದೆ.

Puneeth Kerehalli
Puneeth Kerehalli

ಜುಲೈ 26ರಂದು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ 86 ಬಾಕ್ಸ್‌ಗಳಷ್ಟು ರಾಜಸ್ಥಾನದಿಂದ ತರಿಸಿದ ಮಾಂಸದ ಬಾಕ್ಸ್‌ಗಳು ಪತ್ತೆಯಾಗಿದ್ದವು. ಇವುಗಳನ್ನು ಹೈದರಾಬಾದ್‌ನ ICAR ನ್ಯಾಷನಲ್ ಮೀಟ್ ರಿಸರ್ಚ್ ಇನ್ಸ್ಟಿಟ್ಯೂಟ್‌ನಲ್ಲಿ ಪರೀಕ್ಷೆ ಮಾಡಿಸಲಾಗಿದೆ. ಅದರಲ್ಲಿ S Ovis Aries ಎಂದು ಲ್ಯಾಬ್ ವರದಿಯಲ್ಲಿ ಬಂದಿದೆ. ಹಾಗೆಂದರೆ ಅದು ಕುರಿಯ ವೈಜ್ಞಾನಿಕ ಹೆಸರು. ಹೀಗಾಗಿ ಇದು ಕುರಿ ಮಾಂಸ ಎಂದು ಇಲಾಖೆ ಆಯುಕ್ತ ಶ್ರೀನಿವಾಸ್ ಅಧಿಕೃತವಾಗಿ ಹೇಳಿಕೆ ನೀಡಿದ್ದರು.

FSSAI ಗೈಡ್‌ಲೈನ್ಸ್ ಪ್ರಕಾರ ಉದ್ಯಮಿ ರಜಾಕ್ ಕೊಟ್ಟ ದಾಖಲೆ ಎಲ್ಲವೂ ಸರಿಯಾಗಿಯೇ ಇದೆ. ಪಶ್ಚಿಮ ಬಂಗಾಳ, ಗುಜರಾತ್, ರಾಜಸ್ಥಾನ ಸೇರಿದಂತೆ ಹಲವು ಕಡೆಯಿಂದ ನಗರಕ್ಕೆ ಮಾಂಸ ಆಮದಾಗುತ್ತಿದೆ. ಮೀನು, ಕುರಿ ಸೇರಿದಂತೆ ವಿವಿಧ ರೀತಿಯ ಮಾಂಸ ಆಮದಾಗುತ್ತಿದೆ. ಎಲ್ಲವನ್ನೂ ಆಹಾರ ಗುಣಮಟ್ಟ ಇಲಾಖೆ ಪರೀಕ್ಷೆ ಮಾಡಿದೆ. ಮುಂದೆಯೂ ಮಾಡುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

Continue Reading

ಪ್ರಮುಖ ಸುದ್ದಿ

Madhabi Puri Buch: ಅದಾನಿ ಹಗರಣದಲ್ಲಿ ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್‌ ಭಾಗಿ; ಯಾರಿವರು? ಹಿನ್ನೆಲೆ ಏನು?

Madhabi Puri Buch: ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ವರದಿ ಪ್ರಕಟಿಸಿ ಸಂಚಲನ ಸೃಷಿಸಿದ ಬಳಿಕ ಮತ್ತೊಂದು ಸ್ಫೋಟಕ ವರದಿ ಬಹಿರಂಗಪಡಿಸಿದೆ. ಗೌತಮ್‌ ಅದಾನಿ ಕಂಪನಿ ಹಗರಣದಲ್ಲಿ ಸೆಬಿ ಮುಖ್ಯಸ್ಥೆಯೇ ಬಾಗಿಯಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗಾದರೆ, ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್‌ ಯಾರು? ಅವರ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ.

VISTARANEWS.COM


on

Madhabi Puri Buch
Koo

ನವದೆಹಲಿ: ಗೌತಮ್‌ ಅದಾನಿ (Gautam Adani)  ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ (Hindenburg) ಸಂಸ್ಥೆಯು 2023ರ ಜನವರಿಯಲ್ಲಿ ವರದಿ ಪ್ರಕಟಿಸಿದ ದೇಶಾದ್ಯಂತ ಸಂಚಲ ಮೂಡಿಸಿದ ಬೆನ್ನಲ್ಲೇ ಹಿಂಡನ್‌ಬರ್ಗ್‌ ಮತ್ತೊಂದು ಸ್ಫೋಟಕ ವರದಿ ಬಹಿರಂಗಪಡಿಸಿದೆ. ವಿದೇಶದಲ್ಲಿ ಗೌತಮ್‌ ಅದಾನಿ ಹೊಂದಿರುವ ಕಂಪನಿಗಳಲ್ಲಿ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ (SEBI) ಮುಖ್ಯಸ್ಥೆ ಮಾಧಬಿ ಪುರಿ ಬುಚ್‌ ಅವರ ಪಾಲಿದೆ ಎಂದು ಸ್ಫೋಟಕ ವರದಿ ಬಹಿರಂಗಪಡಿಸಿದೆ. ಈಗ ಮಾಧಬಿ ಪುರಿ ಬುಚ್‌ ಯಾರು? ಅವರ ಹಿನ್ನೆಲೆ ಏನು? ಎಂಬ ವಿಷಯ ಮುನ್ನೆಲೆಗೆ ಬಂದಿದೆ.

ಮಾಧಬಿ ಪುರಿ ಬುಚ್‌ ಯಾರು?

ಮಾಧಬಿ ಪುರಿ ಬುಚ್‌ ಅವರ ವೃತ್ತಿಜೀವನವು ಅಮೋಘ ಇತಿಹಾಸ ಹೊಂದಿದೆ. 1996ರಲ್ಲಿ ಮುಂಬೈನಲ್ಲಿ ಜನಿಸಿದ ಅವರು, ಗಣಿತ, ಹಣಕಾಸಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ಹಾಗಾಗಿ ಅವರು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಅಹ್ಮದಾಬಾದ್‌ನಿಂದ ಎಂಬಿಎ ಪಡೆದಿದ್ದಾರೆ. 1989ರಲ್ಲಿ ಅವರು ಐಸಿಐಸಿಐ ಬ್ಯಾಂಕ್‌ ಸೇರುವ ಮೂಲಕ ಹಣಕಾಸು ಕ್ಷೇತ್ರದಲ್ಲಿ ವೃತ್ತಿ ಆರಂಭಿಸಿದರು.

ಚಾಣಾಕ್ಷತನಕ್ಕೆ ಹೆಸರಾಗಿರುವ ಮಾಧಬಿ ಪುರಿ ಬುಚ್‌ ಅವರು ಐಸಿಐಸಿಐ ಬ್ಯಾಂಕ್‌ನಲ್ಲಿ ಒಂದೊಂದೇ ಹುದ್ದೆಗಳನ್ನು ಏರುತ್ತ, 2009ರಲ್ಲಿ ಐಸಿಐಸಿಐ ಸೆಕ್ಯುರಿಟೀಸ್‌ನ ಎಂಡಿ ಹಾಗೂ ಸಿಇಒ ಆದರು. ಐಸಿಐಸಿಐ ತೊರೆದ ಅವರು ಶಾಂಘೈನಲ್ಲಿರುವ ನ್ಯೂ ಡೆವಲಪ್‌ಮೆಂಟ್‌ ಬ್ಯಾಂಕ್‌ನ ಕನ್ಸಲ್ಟಂಟ್‌ ಆಗಿ ನೇಮಕಗೊಂಡರು. ಇದಾದ ಬಳಿಕವೇ ಅವರಿಗೆ ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಸಂಪರ್ಕ ಬೆಳೆದವು ಎಂದು ಹೇಳಲಾಗುತ್ತಿದೆ. ನಂತರ ಭಾರತಕ್ಕೆ ಬಂದ ಅವರು 2022ರಲ್ಲಿ ಸೆಬಿ ಅಧ್ಯಕ್ಷೆಯಾಗಿಯೂ ನೇಮಕಗೊಂಡರು. ಆ ಮೂಲಕ ಮಾರುಕಟ್ಟೆ ನಿಯಂತ್ರಕ ಸಂಸ್ಥೆಗೆ ಮುಖ್ಯಸ್ಥೆಯಾದ ಮೊದಲ ಮಹಿಳೆ ಎನಿಸಿದರು. ಈಗ ಅವರ ವಿರುದ್ಧವೇ ಹಗರಣದ ಆರೋಪ ಕೇಳಿಬಂದಿದೆ.

ಹೊಸ ವರದಿಯಲ್ಲಿ ಏನಿದೆ?

ಅದಾನಿ ಗ್ರೂಪ್‌ ವಿದೇಶದಲ್ಲಿ ಹೊಂದಿರುವ ಕಂಪನಿಗಳ ಹಗರಣಗಳಲ್ಲಿ ಸೆಬಿ ಅಧ್ಯಕ್ಷೆಯಾಗಿರುವ ಮಾಧಬಿ ಪುರಿ ಬುಚ್‌ ಹಾಗೂ ಅವರ ಪತಿ ಧವಳ್‌ ಬುಚ್‌ ಅವರ ಪಾಲೂ ಇದೆ. ಕಂಪನಿಗಳಲ್ಲೂ ಇವರು ಷೇರುಗಳನ್ನು ಹೊಂದಿದ್ದಾರೆ. ವಿದೇಶದಲ್ಲಿ ಕಂಪನಿಗಳಿಂದ ಅಕ್ರಮವಾಗಿ ಪಡೆದುಕೊಂಡ ಹಣದಲ್ಲಿ ಇವರದ್ದೂ ಪಾಲಿದೆ. ಬರ್ಮುಡಾ ಹಾಗೂ ಮಾರಿಷಸ್‌ ಫಂಡ್‌ಗಳಲ್ಲಿ ಮಾಧಬಿ ಪುರಿ ಬುಚ್‌ ಹಾಗೂ ಧವಳ್‌ ಬುಚ್‌ ಅವರ ಪಾಲು ಇದೆ ಎಂಬುದಾಗಿ ಹಿಂಡನ್‌ಬರ್ಗ್‌ ಸಂಸ್ಥೆಯು ಸ್ಫೋಟಕ ವರದಿ ಬಯಲು ಮಾಡಿದೆ.

ಮಾಧಬಿ ಪುರಿ ಬುಚ್‌ ಅವರು 2015ರಿಂದಲೂ ಗೌತಮ್‌ ಅದಾನಿ ಕಂಪನಿಗಳಲ್ಲಿ ತಮ್ಮ ವೈಯಕ್ತಿಕ ಹಣವನ್ನು ಹೂಡಿಕೆ ಮಾಡಿಕೊಳ್ಳುತ್ತಲೇ ಬಂದಿದ್ದಾರೆ. ಗೌತಮ್‌ ಅದಾನಿ ಸಹೋದರ ವಿನೋದ್‌ ಅದಾನಿ ಅವರು ಭಾರತದ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ವಿದೇಶಿ ಕಂಪನಿಗಳಿಂದ ಸೈಫೊನಿಂಗ್‌ (ಕಂಪನಿಗಳಿಂದ ಅಕ್ರಮವಾಗಿ ಹಣ ಪಡೆಯುವುದು) ಮೂಲಕ ಹಣ ಪಡೆದಿದ್ದಾರೆ. ಇದರಲ್ಲಿ ಮಾಧಬಿ ಪುರಿ ಬುಚ್‌ ಅವರ ಪಾಲೂ ಇದೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: Hindenburg: ಅದಾನಿ ವಿದೇಶಿ ಕಂಪನಿಯಲ್ಲಿ ಸೆಬಿ ಅಧ್ಯಕ್ಷೆಯದ್ದೂ ಪಾಲು; ಹಿಂಡನ್‌ಬರ್ಗ್‌ ಮತ್ತೊಂದು ಸ್ಫೋಟಕ ವರದಿ

Continue Reading

ಭವಿಷ್ಯ

Dina Bhavishya : ಈ ರಾಶಿಯವರು ನಂಬಿದ ವ್ಯಕ್ತಿಗಳಿಂದ ಮೋಸ ಹೋಗುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ಸಪ್ತಮಿ ಅಹೋರಾತ್ರಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಶ್ಚಿಕ ರಾಶಿಯನ್ನು ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ. ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಅತಿರೇಕದ ಮಾತುಗಳು ಜಗಳ ಉಂಟುಮಾಡಬಹುದು ಮಾತಿನಲ್ಲಿ ಹಿಡಿತವಿರಲಿ. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಸಿಗಲಿದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರಾಗುವ ಸಾಧ್ಯತೆ ಇದೆ. ವೃಷಭ ರಾಶಿಯವರು ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (11-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ ಅಹೋರಾತ್ರಿ ವಾರ: ಭಾನುವಾರ
ನಕ್ಷತ್ರ: ಸ್ವಾತಿ 32:32 ಯೋಗ: ಶುಭ 15:47
ಕರಣ: ಗರಜ 15:47 ಅಮೃತಕಾಲ: ರಾತ್ರಿ 10:45 ರಿಂದ 12:32
ದಿನದ ವಿಶೇಷ: ತುಳಸಿದಾಸರ ಜಯಂತಿ

ಸೂರ್ಯೋದಯ : 06:07   ಸೂರ್ಯಾಸ್ತ : 06:43

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ. ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಅತಿರೇಕದ ಮಾತುಗಳು ಜಗಳ ಉಂಟುಮಾಡಬಹುದು ಮಾತಿನಲ್ಲಿ ಹಿಡಿತವಿರಲಿ. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಸಿಗಲಿದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ . ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಕೋಪದಿಂದ ಕಾರ್ಯದಲ್ಲಿ ಹಾನಿಯಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು:ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿ ಬರಲಿದೆ. ಕುಟುಂಬದಲ್ಲಿ ಹೊಸ ಭರವಸೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ, ಆರ್ಥಿಕ ಪ್ರಗತಿ ಇರಲಿದೆ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗಲಿದೆ. ಅವಶ್ಯಕ ವಸ್ತುಗಳ ಖರೀದಿ. ಅಷ್ಟೇ ಆರ್ಥಿಕ ಲಾಭ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ.
ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಹಳೆಯ ನೋವು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಇರಲಿ.ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಸಂಬಂಧಿಗಳೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

Natwar Singh: ವಿದೇಶಾಂಗ ವ್ಯವಹಾರಗಳ ಖಾತೆ ಮಾಜಿ ಸಚಿವ ನಟ್ವರ್‌ ಸಿಂಗ್‌ ನಿಧನ; ಗಣ್ಯರ ಸಂತಾಪ

Natwar Singh: ಸುದೀರ್ಘ ಅವಧಿಯಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ (Medanta Hospital) ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ನಟ್ವರ್‌ ಸಿಂಗ್‌ ಅವರು ಹಲವು ದಿನಗಳಿಂದಲೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.

VISTARANEWS.COM


on

natwar singh
Koo

ಗುರುಗ್ರಾಮ: ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಕೆ. ನಟ್ವರ್‌ ಸಿಂಗ್‌ (Natwar Singh) (95) ಅವರು ನಿಧನರಾಗಿದ್ದಾರೆ. ಸುದೀರ್ಘ ಅವಧಿಯಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ (Medanta Hospital) ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ನಟ್ವರ್‌ ಸಿಂಗ್‌ ಅವರು ಹಲವು ದಿನಗಳಿಂದಲೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಜೀವನದ ಕೊನೆಯ ಕ್ಷಣಗಳಲ್ಲಿ ಪುತ್ರ, ಶಾಸಕರೂ ಆಗಿರುವ ಜಗತ್‌ ಸಿಂಗ್‌ ಸೇರಿ ಹಲವು ಕುಟುಂಬಸ್ಥರು ಇದ್ದರು ಎಂದು ತಿಳಿದುಬಂದಿದೆ.

ಭಾರತೀಯ ವಿದೇಶಾಂಗ ಸೇವೆಗಳ ಅಧಿಕಾರಿಯಾಗಿ ಭಾರತದ ರಾಜತಾಂತ್ರಿಕತೆಗೆ ಅಪಾರ ಕೊಡುಗೆ ನೀಡಿದ ಅವರು ವಿದೇಶಾಂಗ ವ್ಯವಹಾರಗಳ ಸಚಿವರಾಗಿಯೂ ಹೆಚ್ಚಿನ ಸೇವೆ ಸಲ್ಲಿಸಿದ್ದಾರೆ. ನಟ್ವರ್‌ ಸಿಂಗ್‌ ಅವರು ಭಾರತ ಹಾಗೂ ಪಾಕಿಸ್ತಾನದ ನಡುವೆ ಸ್ನೇಹ, ಸಂಬಂಧ ಮೂಡಲು ಎರಡೂ ದೇಶಗಳು ಏಕರೂಪದ ವಿದೇಶಾಂಗ ನೀತಿಯನ್ನು ಹೊಂದಿರಬೇಕು ಎಂಬುದು ಅವರ ಅಭಿಪ್ರಾಯವಾಗಿತ್ತು. ದೇಶಕ್ಕೆ ಹಲವು ರೀತಿಯಲ್ಲಿ ಸೇವೆ ಸಲ್ಲಿಸಿದ ನಟ್ವರ್‌ ಸಿಂಗ್‌ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಜಗ್ಹೀನಾ ಗ್ರಾಮದಲ್ಲಿ 1929ರ ಮೇ 16ರಂದು ಜನಿಸಿದ ಅವರು ಗೋವಿಂಗ್‌ ಸಿಂಗ್‌ ಅವರ ಪ್ರಯಾಗ್‌ ಕೌರ್‌ ದಂಪತಿಯ ನಾಲ್ಕನೇ ಪುತ್ರ. ಅಜ್ಮೇರ್‌ ಹಾಗೂ ಗ್ವಾಲಿಯರ್‌ನಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಮುಗಿಸಿದ ಅವರು, ದೆಹಲಿಯ ಸೇಂಟ್‌ ಸ್ಟೀಫನ್ಸ್‌ ಕಾಲೇಜಿನಲ್ಲಿ ಪದವಿ ಪಡೆದರು. ಕೆಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಅವರು ಉನ್ನತ ಶಿಕ್ಷಣ ಪಡೆದರು.

ವಿದೇಶಾಂಗ ಸೇವೆಗಳಲ್ಲಿ ಅತೀವ ಆಸಕ್ತಿ ಹೊಂದಿದ್ದ ಅವರು 1953ರಲ್ಲಿ ಭಾರತೀಯ ವಿದೇಶಾಂಗ ಸೇವೆ (IFS) ಸೇರಿದರು. ಚೀನಾ, ನ್ಯೂಯಾರ್ಕ್‌, ಪೋಲ್ಯಾಂಡ್‌, ಇಂಗ್ಲೆಂಡ್‌, ಪಾಕಿಸ್ತಾನ, ಜಮೈಕಾ ಹಾಗೂ ಜಂಬಿಯಾದಲ್ಲಿ ಅವರು ಭಾರತದ ಪರವಾಗಿ ಹಲವು ರೀತಿಯಲ್ಲಿ ಕಾರ್ಯನಿರ್ವಹಿಸಿದರು. 1984ರಲ್ಲಿ ಐಎಫ್‌ಎಸ್‌ ತೊರೆದ ಅವರು ಕಾಂಗ್ರೆಸ್‌ ಸೇರಿದರು. ಇದೇ ವರ್ಷ ಲೋಕಸಭೆ ಪ್ರವೇಶಿಸಿದ ಅವರು 1986ರಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಸಹಾಯಕ ಸಚಿವರಾದರು.

1991ರಲ್ಲಿ ಕಾಂಗ್ರೆಸ್‌ ತೊರೆದ ಅವರು ಎನ್‌.ಡಿ.ತಿವಾರಿ ಹಾಗೂ ಅರ್ಜುನ್‌ ಸಿಂಗ್‌ ಅವರ ಜತೆಗೂಡಿ ಕಾಂಗ್ರೆಸ್‌ ತೊರೆದು, ಆಲ್‌ ಇಂಡಿಯಾ ಇಂದಿರಾ ಕಾಂಗ್ರೆಸ್‌ ಎಂಬ ಪಕ್ಷ ಸ್ಥಾಪಿಸಿದರು. 1998ರಲ್ಲಿ ಕಾಂಗ್ರೆಸ್‌ಗೆ ಮರಳಿದ ಅವರು 1998ರಲ್ಲಿ ಭರತ್‌ಪುರ ಲೋಕಸಭೆ ಕ್ಷೇತ್ರದಲ್ಲಿ ಗೆದ್ದು ಸಂಸತ್‌ ಪ್ರವೇಶಿಸಿದರು. 2002ರಲ್ಲಿ ರಾಜ್ಯಸಭೆ ಪ್ರವೇಶಿಸಿದ ಅವರು 2004ರಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರಾದರು.

ಇದನ್ನೂ ಓದಿ: Yamini Krishnamurthy: ಪದ್ಮವಿಭೂಷಣ ಪುರಸ್ಕೃತ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಇನ್ನಿಲ್ಲ

Continue Reading
Advertisement
Police Firing
ಕ್ರೈಂ10 mins ago

Police Firing: ಪೊಲೀಸರ ಮೇಲೆ ದಾಳಿ ನಡೆಸಿದ ರೌಡಿ ಕಾಲಿಗೆ ಗುಂಡೇಟು

Bangladesh Unrest
ವಿದೇಶ11 mins ago

Bangladesh Unrest: ಹಿಂದೂಗಳ ಮೇಲಿನ ದಾಳಿ ಖಂಡಿಸಿ ಬಾಂಗ್ಲಾದೇಶದಲ್ಲಿ ಭಾರೀ ಪ್ರತಿಭಟನೆ; ಅಮೆರಿಕ, ಯುಕೆಯಲ್ಲೂ ಧರಣಿ

Tharun Sudhir wedding live video is here
ಸ್ಯಾಂಡಲ್ ವುಡ್32 mins ago

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮದ ಲೈವ್‌ ವಿಡಿಯೊ ಇಲ್ಲಿದೆ ನೋಡಿ!

Shiva Rajkumar Bhairathi Ranagal Title Song Geetha SRK
ಸ್ಯಾಂಡಲ್ ವುಡ್49 mins ago

Shiva Rajkumar: ʻಭೈರತಿ ರಣಗಲ್ʼ ಟೈಟಲ್ ಸಾಂಗ್ ಔಟ್‌; ಸೆಪ್ಟೆಂಬರ್‌ನಲ್ಲಿ ತೆರೆಗೆ!

Women’s T20 World Cup
ಕ್ರೀಡೆ56 mins ago

Women’s T20 World Cup: ವಿಶ್ವಕಪ್​ ನಡೆಸಲು ಸೇನೆಯ ನೆರವು ಕೇಳಿದ ಬಾಂಗ್ಲಾ ಕ್ರಿಕೆಟ್​ ಮಂಡಳಿ

Jr NTR luxury watch at Hyderabad event
South Cinema1 hour ago

Jr NTR: ಸಿನಿಮಾ ಮುಹೂರ್ತದಲ್ಲಿ ಜ್ಯೂ. ಎನ್​ಟಿಆರ್ ಧರಿಸಿದ ವಾಚ್ ಬೆಲೆ ಕೇಳಿದರೆ ನೀವು ಬೆರಗಾಗೋದು ಖಚಿತ​!

Police Firing
ಕ್ರೈಂ1 hour ago

Police Firing: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು; ಕೊಲೆ ಆರೋಪಿ ಕಾಲಿಗೆ ಫೈರಿಂಗ್‌

Kejriwal Bungalow Case
ದೇಶ1 hour ago

Kejriwal Bungalow Case: ಕೇಜ್ರಿವಾಲ್‌ ಬಂಗಲೆ ನವೀಕರಣ ಅಕ್ರಮ; ಮೂವರು ಇಂಜಿನಿಯರ್‌ಗಳು ಸಸ್ಪೆಂಡ್‌

ಕ್ರೀಡೆ1 hour ago

Paris Olympics: ಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ​ಒಲಿಂಪಿಕ್ಸ್​ ಪದಕ!

Cyber Crime
ಕ್ರೈಂ2 hours ago

Cyber Crime: ಆನ್‌ಲೈನ್‌ ಹೂಡಿಕೆ ಹೆಸರಲ್ಲಿ ವಂಚನೆ; 1.53 ಕೋಟಿ ರೂ. ಕಳೆದುಕೊಂಡ ಟೆಕ್ಕಿ ದಂಪತಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌