Police Firing: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು; ಕೊಲೆ ಆರೋಪಿ ಕಾಲಿಗೆ ಫೈರಿಂಗ್‌ - Vistara News

ಕ್ರೈಂ

Police Firing: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು; ಕೊಲೆ ಆರೋಪಿ ಕಾಲಿಗೆ ಫೈರಿಂಗ್‌

Police Firing: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಕೊಲೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಲಾಗಿದೆ. ಗುಂಡೇಟು ತಗುಲಿದ ರೌಡಿಶೀಟರ್ ಮುತ್ತುರಾಜ ಅಲಿಯಾಸ್ ‌ಡಕ್ಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

VISTARANEWS.COM


on

Police Firing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಪೊಲೀಸರ ಗುಂಡಿನ ಸದ್ದು ಮೊಳಗಿದೆ (Police Firing). ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಕೊಲೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಲಾಗಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮರಕ್ಷಣೆಗಾಗಿ ಹಲಗೂರು ಸರ್ಕಲ್ ಇನ್ಸ್‌ಪೆಕ್ಟರ್‌ ಶ್ರೀಧರ್ ಫೈರಿಂಗ್‌ ಮಾಡಿದ್ದು, ಗುಂಡೇಟು ತಗುಲಿದ ರೌಡಿಶೀಟರ್ ಮುತ್ತುರಾಜ ಅಲಿಯಾಸ್ ‌ಡಕ್ಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆ ವಿವರ

ಕಾರ್ಯಾಚರಣೆ ಬಗ್ಗೆ ಮಂಡ್ಯದಲ್ಲಿ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ಜುಲೈ 30ರಂದು ಕಾಂತರಾಜು ಎಂಬಾತನ ಕೊಲೆಯಾಗಿತ್ತು. ಆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸಿಪಿಐ ಶ್ರೀಧರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು.

ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಬಂಧನವಾಗಿತ್ತು. ತನಿಖೆ ವೇಳೆ ಕಾಂತರಾಜು ಕೊಲೆಗೆ ರೌಡಿಶೀಟರ್‌ ಡಕ್ಕ ಸುಪಾರಿ ನೀಡಿದ್ದಾಗಿ ಬಂಧಿತರು ಬಾಯ್ಬಿಟ್ಟಿದ್ದರು. ಮುತ್ತುರಾಜ್ ಸೂಚನೆ ಮೇರೆಗೆ ಕೊಲೆ ನಡೆಸಿರುವುದಾಗಿ ಅವರು ಹೇಳಿಕೆ ನೀಡಿದ್ದರು. ಹೀಗಾಗಿ ಸಿಪಿಐ ಶ್ರೀಧರ್ ಮತ್ತುವರ ತಂಡ ಡಕ್ಕನನ್ನು ಬಂಧಿಸಲು ಮುಂದಾಗಿತ್ತು. ಆತ ಚಿಕ್ಕಮಲಗೂಡು ಬಳಿ ಇರುವ ಬಗ್ಗೆ ಮಾಹಿತಿ ಲಭಿಸಿ ಅಲ್ಲಿಗೆ ತೆರಳಿದ್ದರು.

ಬೈಕ್‌ನಲ್ಲಿ ತೆರಳುತ್ತಿದ್ದ ಡಕ್ಕನ್ನು ಹಿಡಿಯಲು ಸಿಪಿಐ ಶ್ರೀಧರ್ ಮತ್ತು ತಂಡ ಮುಂದಾಯಿತು. ಈ ವೇಳೆ
ಬೈಕ್ ಬೀಳಿಸಿ ಆತ ಓಡಲು ಮುಂದಾಗಿದ್ದ. ತಡೆಯಲು ಮುಂದಾದ ಪೇದೆ ಮೇಲೆ ಡ್ರ್ಯಾಗನ್‌ನಿಂದ ಹಲ್ಲೆ ನಡೆಸಿದ್ದ.
ಏರ್‌ಫೈರ್ ವಾರ್ನಿಂಗ್‌ಗೂ ಡಕ್ಕ‌ ಬಗ್ಗಿರಲಿಲ್ಲ. ಕೊನೆಗೆ ಸ್ವಯಂ ರಕ್ಷಣೆಗಾಗಿ ಸಿಪಿಐ ಶ್ರೀಧರ್‌ ಫೈರಿಂಗ್ ನಡೆಸಿದ್ದರು. ಈ ವೇಳೆ ಡಕ್ಕನ ಬಲಗಾಲಿಗೆ ಗುಂಡೇಟು ತಗುಲಿದೆ ಎಂದು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

11 ಪ್ರಕರಣದಲ್ಲಿ ಆರೋಪಿ

3 ಕೊಲೆ, 3 ಕೊಲೆಗೆ ಯತ್ನ, 2 ರಾಬರಿ ಪ್ರಕರಣ ಸೇರಿ ಡಕ್ಕನ ವಿರುದ್ಧ 11 ಪ್ರಕರಣ ದಾಖಲಾಗಿದೆ. ಹುಡುಗರ ಗುಂಪು ಕಟ್ಟಿಕೊಂಡು 2019ರಿಂದಲೂ ಈತ ರೌಡಿಸಂ ನಡೆಸುತ್ತಿದ್ದ. ಇಸ್ಪೀಟ್‌ ಆಡಿಸುವ ದಂಧೆಗೂ ಇಳಿದಿದ್ದ. ಡಕ್ಕನ ಗ್ಯಾಂಗ್‌ ಸದಸ್ಯರಿಗೂ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇದನ್ನೂ ಓದಿ: Drowned in water : ಬಾಲಕನ ಜೀವಕ್ಕೆ ಉರುಳಾದ ಪಂಪ್‌ ಸೆಟ್‌ ಕೇಬಲ್‌; ಕಾಲು ಜಾರಿ ನೀರುಪಾಲಾದ ವೃದ್ಧ

ದರೋಡೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ದರೋಡೆ ಪ್ರಕರಣದ ಆರೋಪಿ ಸೋನು ನಾಯಕ್ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದರು. ಹುಬ್ಬಳ್ಳಿ ಉಪನಗರದ ಠಾಣೆ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ್ ಅವರಿಂದ ಫೈರಿಂಗ್ ನಡೆದಿತ್ತು. ಕಳ್ಳತನ, ದರೋಡೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಸೋನು ನಾಯಕ್ ಮೇಲೆ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ತಪ್ಪಿಸಿಕೊಂಡು ಹೋಗುತ್ತಿದ್ದ ವೇಳೆ ಆತನ ವೇಳೆ ಫೈರಿಂಗ್‌ ಮಾಡಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರವಾಡ

Assault Case : ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತರು

Assault Case : ಧಾರವಾಡದಲ್ಲಿ ಅಪರಿಚಿತ ಗ್ಯಾಂಗ್‌ವೊಂದು ಚಾಕು ಹಿಡಿದು ಅಂಜುಮನ್‌ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಬೆದರಿಕೆ ಹಾಕಿದೆ. ಕುಟುಂಬಸ್ಥರೊಂದಿಗೆ ಅಸಭ್ಯವಾಗಿ ವರ್ತಿಸಿ ಕಾಲ್ಕಿತ್ತಿದ್ದಾರೆ.

VISTARANEWS.COM


on

By

assault case
Koo

ಧಾರವಾಡ: ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮನೆಗೆ ನುಗ್ಗಿ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿದ್ದಾರೆ. 10ಕ್ಕೂ ಹೆಚ್ಚು ಅಪರಿಚಿತ ಯುವಕರು ಹಲ್ಲೆಗೆ (assault case) ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಅಪರಿಚಿತ ಗ್ಯಾಂಗ್‌ ಮೊದಲು ಅಂಜುಮನ್ ಸಂಸ್ಥೆಯ ಕಚೇರಿಗೆ ತೆರಳಿ ಹಲ್ಲೆಗೆ ಮುಂದಾಗಿದ್ದಾರೆ. ಆದರೆ ಅಲ್ಲಿ ಇಸ್ಮಾಯಿಲ್‌ ಇಲ್ಲದ ಕಾರಣ ಮನೆಗೆ ನುಗ್ಗಿದ್ದಾರೆ. ಚಾಕು ಹಿಡಿದುಕೊಂಡು ಮನೆಗೆ ನುಗ್ಗಿದ ಯುವಕರು, ಇಸ್ಮಾಯಿಲ್ ತಮಟಗಾರ್ ಮನೆಯಲ್ಲಿ ಇಲ್ಲದ ಕಾರಣ ಅವರ ಮನೆಯವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.

ಇಸ್ಮಾಯಿಲ್ ಕೊಲ್ಲಲು ಬಂದಿದ್ದೇವೆ ಎಂದು ಕಿರುಚಾಡುತ್ತಿದ್ದರಂತೆ. ಲಂಗೋಟಿ ಜಮಾದಾರ್ ಗಲ್ಲಿ, ಅಂಜುಮನ್ ಹಾಸ್ಟೆಲ್ ಬಳಿ ಹಲ್ಲೆಗೆ ಸ್ಕೆಚ್ ಹಾಕಿದ್ದರು ಎನ್ನಲಾಗಿದೆ. ಸದ್ಯ ಇಸ್ಮಾಯಿಲ್ ಇಲ್ಲದ ಕಾರಣಕ್ಕೆ ಮನೆಯವರೊಂದಿಗೆ ಜಗಳ ತೆಗೆದಿದ್ದಾರೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಶಹರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Bear Attack : ರೈತನ ಮೇಲೆ ಡೆಡ್ಲಿ ಅಟ್ಯಾಕ್‌ ಮಾಡಿ ಕೊಂದು ಹಾಕಿದ ಕರಡಿ

ಕಾರು ಚಾಲಕನ ಮುಖಕ್ಕೆ‌ ಉಗಿದು, ಗೂಂಡಾಗಿರಿ ಮಾಡಿದ ಆಟೋ ಡೈವರ್‌

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಗೂಂಡಾಗಿರಿ (Assault Case) ತೋರಿಸಿದ್ದಾನೆ. ಕಾರು ಚಾಲಕನ ಮುಖಕ್ಕೆ ಉಗಿದು ಬಳಿಕ ಕಾರಿನ ಮಿರರ್‌ ಹೊಡೆದು ಹಾಕಿದ್ದಾನೆ. ಬೆಂಗಳೂರಿನ ಮಾರತಹಳ್ಳಿಯ ಯಮಲೂರು ಸಿಗ್ನಲ್ ಬಳಿ ಆಗಸ್ಟ್ 5ರಂದು ಈ ಘಟನೆ ನಡೆದಿದೆ.

ಕ್ಷುಲ್ಲಕ ವಿಚಾರಕ್ಕೆ ಕಾರು ಚಾಲಕ ಹಾಗೂ ಆಟೋ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಕಾರು ಚಾಲಕ ವಿಡಿಯೊ ರೆಕಾರ್ಡ್‌ ಮಾಡುತ್ತಿರುವುದನ್ನು ನೋಡಿದ ಆತ ಆಟೋದಿಂದ ಇಳಿದು ಬಂದವನೇ ಅವಾಚ್ಯ ಶಬ್ಧಗಳಿಂದ ನಿಂದಿಸಲು ಶುರು ಮಾಡಿದ್ದಾನೆ. ಬಳಿಕ ಕಾರು ಚಾಲಕ ಮುಖಕ್ಕೆ ಉಗಿದು, ಕಾರಿಗೆ ಹೊಡೆದು, ಮಿರರ್‌ ಕಿತ್ತು ಹಾಕಿದ್ದಾನೆ.

ಕಾರು ಚಾಲಕ ಅಲೆಕ್ಸ್ ಬೋಬಿ ವೆಂಪಲ ಎಂಬಾತ ಈ ಸಂಬಂಧ ದೂರು ನೀಡಿದ್ದರು. ಆಟೋ ಚಾಲಕನ ಅನುಚಿತ ವರ್ತನೆ ಬಗ್ಗೆ ಎಚ್ಎಲ್‌ಎಲ್ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿತ್ತು. ಕಾರು ಚಾಲಕ‌ ದೂರಿನ ಮೇಲೆ ಆಟೋ ಚಾಲಕನ ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ. ಚಾಲಕನ ವಿರುದ್ಧ ಬಿ.ಎನ್.ಎಸ್ ಸೆಕ್ಷನ್ 126(2), 324(4), 351(2), 352 ಅಡಿ ಎಫ್.ಐ.ಆರ್ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Serial Killer: ಚಿಕ್ಕಮ್ಮನ ಮೇಲಿನ ದ್ವೇಷಕ್ಕೆ 9 ಅಮಾಯಕ ಮಹಿಳೆಯರನ್ನು ಕೊಂದ! ಇಲ್ಲಿದೆ ವಿಲಕ್ಷಣ ಹಂತಕನ unusual story!

Serial Killer: ಹಂತಕ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿದ ಬಳಿಕ ಅವರ ಬಳಿಯಿಂದ ಬಿಂದಿ ಮತ್ತು ಲಿಪ್‌ಸ್ಟಿಕ್‌ ಅನ್ನು ಎತ್ತಿಡುತ್ತಿದ್ದ ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಇದೀಗ ಆತನ ಹೆಡೆಮುರಿ ಕಟ್ಟಿರುವ ಪೊಲೀಸರು ಈ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Serial Killer
Koo

ಲಖನೌ: ಉತ್ತರಪ್ರದೇಶ(Uttar Pradesh)ದಲ್ಲಿ ಅರೆಸ್ಟ್‌ ಆಗಿರುವ ಸೀರಿಯಲ್‌ ಕಿಲ್ಲರ್‌(Serial Killer)ಬಗ್ಗೆ ಅನೇಕ ವಿಚಾರಗಳು ಬಯಲಾಗುತ್ತಿದೆ. ಈತನ ಪತ್ತೆಗಾಗಿ 22 ಪೊಲೀಸರ ತಂಡ ಬಲೆ ಬೀಸಿತ್ತು. ಮತ್ತು ಬರೋಬ್ಬರಿ 1.50 ಲಕ್ಷ ಮೊಬೈಲ್‌ ಫೋನ್‌ ನಂಬರ್‌ಗಳನ್ನು ಟ್ರ್ಯಾಕ್‌ ಮಾಡಲಾಗಿದೆ. ಇನ್ನು ಕಿರುಕುಳ ನೀಡುತ್ತಿದ್ದ ಚಿಕ್ಕಮ್ಮನ ಮೇಲಿನ ದ್ವೇಷಕ್ಕೆ 9 ಅಮಾಯಕ ಮಹಿಳೆಯರನ್ನು ಕೊಂದಿದ್ದಾನೆ ಎಂಬ ವಿಚಾರ ತನಿಖೆ ವೇಳೆ ಬಯಲಾಗಿದೆ.

ಜೂನ್ 2023 ಮತ್ತು ಜುಲೈ 2024 ರ ನಡುವೆ ಬರೇಲಿ ಶಾಹಿ ಮತ್ತು ಶಿಶ್‌ಗಢ ಪೊಲೀಸ್ ವೃತ್ತದ ಅಡಿಯಲ್ಲಿ ಸುಮಾರು ಒಂಬತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡು ಸೈಕೋ ಕಿಲ್ಲರ್ ಅನ್ನು ನಾವು ಬಂಧಿಸಿದ್ದೇವೆ. ನಾವು 22 ತಂಡಗಳನ್ನು ರಚಿಸಿದ್ದೇವೆ ಮತ್ತು ಆತನನ್ನು ಪತ್ತೆಹಚ್ಚಲು ‘ತಲಾಶ್’ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೆವು ಎಂದು ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಹೇಳಿದ್ದಾರೆ. ಬಂಧಿತನನ್ನು 38 ವರ್ಷದ ಕುಲದೀಪ್‌ ಕುಮಾರ್‌ ಗಂಗ್ವಾರ್‌ ಎಂದು ಗುರುತಿಸಲಾಗಿದೆ.

ಕೊಲೆ ಮಾಡಿ ಬಿಂದಿ, ಲಿಪ್‌ಸ್ಟಿಕ್‌ ಎತ್ತಿಡುತ್ತಿದ್ದ

ಇನ್ನು ಕೊಲೆಗಾರ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿದ ಬಳಿಕ ಅವರ ಬಳಿಯಿಂದ ಬಿಂದಿ ಮತ್ತು ಲಿಪ್‌ಸ್ಟಿಕ್‌ ಅನ್ನು ಎತ್ತಿಡುತ್ತಿದ್ದ ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಇದೀಗ ಆತನ ಹೆಡೆಮುರಿ ಕಟ್ಟಿರುವ ಪೊಲೀಸರು ಈ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕುಲದೀಪ್‌ ಬಾಲ್ಯ ಅಷ್ಟೊಂದು ಸುಖಮಯವಾಗಿರಲಿಲ್ಲ. ತಾಯಿ ಬಾಲ್ಯದಲ್ಲೇ ಸಾವನ್ನಪ್ಪಿದ ಬಳಿಕ ತಂದೆ ಇನ್ನೊಂದು ಮದುವೆಯಾಗಿದ್ದ. ಮಲತಾಯಿಯ ಕಿರುಕುಳದಿಂದ ಬೇಸತ್ತಿದ್ದ ಕುಲದೀಪ್‌ಗೆ ಮಹಿಳೆಯರ ಮೇಲೆ ಒಂದು ರೀತಿಯ ದ್ವೇಷ ಬೆಳೆದಿತ್ತು ಎಂಬುದು ಪೊಲೀಸ್‌ ತನಿಖೆ ವೇಳೆ ಬಯಲಾಗಿದೆ. ಸದ್ಯ ಆತನನ್ನು ವೈದ್ಯಕೀಯ ಚಿಕಿತ್ಸೆಗೊಳಪಡಿಸಲಾಗಿದೆ.

ಇದನ್ನೂ ಓದಿ: Serial Killer: 9 ಮಹಿಳೆಯರ ಕೊಂದ ಸರಣಿ ಹಂತಕ ಸೆರೆ; ಆತ ಹೇಗೆ ಕೊಲೆ ಮಾಡುತ್ತಿದ್ದ? ವಿಡಿಯೊ ಇಲ್ಲಿದೆ

Continue Reading

ತುಮಕೂರು

Murder Case : ಮಧ್ಯರಾತ್ರಿಲಿ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

Murder Case : ತುಮಕೂರಿನಲ್ಲಿ ವೃದ್ಧೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ದುಷ್ಕರ್ಮಿಗಳು ಚಿನ್ನಾಭರಣ ಕದ್ದು ಪರಾರಿ ಆಗಿದ್ದಾರೆ. ಆನೇಕಲ್‌ನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ.

VISTARANEWS.COM


on

By

murder case
Koo

ತುಮಕೂರು/ಬೆಂಗಳೂರು ಗ್ರಾಮಾಂತರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವೃದ್ಧೆಯೊಬ್ಬರ ಬರ್ಬರ (Murder Case) ಕೊಲೆಯಾಗಿದೆ. ಮದ್ದಮ್ಮ (68) ಮೃತ ದುರ್ದೈವಿ. ತುಮಕೂರಿನ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಜೋಗಯ್ಯನ ಪಾಳ್ಯದಲ್ಲಿ ಘಟನೆ ನಡೆದಿದೆ.

ಮದ್ದಮ್ಮ ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ದೇವರ ಉತ್ಸವ ಮುಗಿಸಿಕೊಂಡು ರಾತ್ರಿ ಮನೆಗೆ ತೆರಳುತ್ತಿದ್ದರು. ಈ ವೇಳೆ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ನಂತರ ಆಕೆಯ ಮೈ ಮೇಲೆ ಇದ್ದ ಚಿನ್ನದ ಸರ ಕದ್ದಿದ್ದಾರೆ. ಬಳಿಕ ಶವವನ್ನು ನಿರ್ಮಾಣ ಹಂತದ ಕಟ್ಟಡದ ಬಳಿ ಎಸೆದು ಪರಾರಿ ಆಗಿದ್ದಾರೆ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶಿರಾ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Murder Case : ಬೆಂಗಳೂರಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ; ಬಾಳಸಂಗಾತಿ ಈಗ ಕೊಲೆಗಾರ್ತಿ

ಆನೇಕಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಶಿಲೀಂಧ್ರದೊಡ್ಡಿ ಬಳಿ ಘಟನೆ ನಡೆದಿದೆ. ಬೆಂಗಳೂರಿನ ಕೊಣನಕುಂಟೆ ನಿವಾಸಿ ಅಮರನಾಥ (43) ಮೃತ ದುರ್ದೈವಿ.

ಅಮರನಾಥ ಹೊಸ ಪಂಚೆ ಖರೀದಿಸಿ ಅದರಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

Hidden Camera: ದೊಡ್ಡ ದೊಡ್ಡ ಹೋಟೆಲ್‌, ಕೆಫೆಗಳಲ್ಲಿ ವಾಶ್‌ರೂಮ್‌ ಬಳಸುವ ಮುನ್ನ ನೂರು ಸಲ ಯೋಚನೆ ಮಾಡಿ.. ಯಾಕೆಂದರೆ ನಿಮಗೆ ಗೊತ್ತಿಲ್ಲದಂತೆ ನಿಮ್ಮ ವಿಡಿಯೊ ರೆಕಾರ್ಡ್‌ ಆಗುತ್ತಿರಬಹುದು. ಸದ್ಯ ಇಂತಹದ್ದೆ ಒಂದು ಘಟನೆ ಪ್ರಸಿದ್ಧ ಕಾಫಿ ಶಾಪ್‌ನಲ್ಲಿ ನಡೆದಿದೆ.

VISTARANEWS.COM


on

By

Hidden camera
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕೆಲವು ಕಿಡಿಗೇಡಿಗಳ ಕೃತ್ಯಕ್ಕೆ ಹೆಣ್ಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಹೋಟೆಲ್‌, ಕಾಫಿ ಶಾಪ್‌, ಶಾಪಿಂಗ್‌ ಮಾಲ್‌ನ ಟ್ರಯಲ್‌ ರೂಮ್‌ನಿಂದ ಹಿಡಿದು ವಾಶ್‌ ರೂಮ್‌ನಲ್ಲಿ ಹಿಡನ್‌ ಕ್ಯಾಮೆರಾಗಳನ್ನು (Hidden Camera) ಇಟ್ಟು, ಹೆಣ್ಮಕ್ಕಳ ವಿಡಿಯೊ ಮಾಡಿಕೊ‌ಳ್ಳುವ ಗ್ಯಾಂಗ್‌ ಇದೆ. ಸದ್ಯ ಬೆಂಗಳೂರು ನಗರದ ಬಿಇಎಲ್ ರಸ್ತೆಯಲ್ಲಿರುವ ಪ್ರಸಿದ್ಧ ಥರ್ಡ್ ವೇವ್ ಕಾಫಿ ಕೆಫೆಯ (Third Wave Coffee cafe) ಲೇಡಿಸ್‌ ವಾಶ್‌ ರೂಮ್‌ನ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆಯಾಗಿದೆ. ಸುಮಾರು 2 ಗಂಟೆಗಳ ಕಾಲ ಮೊಬೈಲ್‌ ಕ್ಯಾಮೆರಾದಲ್ಲಿ ವಿಡಿಯೊ ರೆಕಾರ್ಡ್‌ ಆಗಿದೆ.

ಥರ್ಡ್‌ ವೇವ್‌ ಕಾಫಿ ಕೆಫೆ ಸಿಬ್ಬಂದಿಯೇ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಕೆಫೆ ಸಿಬ್ಬಂದಿಯೇ ಮೊಬೈಲ್ ಫೋನ್ ಅನ್ನು ಮಹಿಳಾ ಶೌಚಾಲಯದಲ್ಲಿ ಬಚ್ಚಿಟ್ಟಿದ್ದು, ಸುಮಾರು ಎರಡು ಗಂಟೆಗಳ ಕಾಲ ವಿಡಿಯೊ ರೆಕಾರ್ಡಿಂಗ್ ಆಗಿದೆ ಎಂದು ‘ಗ್ಯಾಂಗ್ಸ್ ಆಫ್ ಸಿನಿಪುರ್’ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮಗೆ ಆದ ಅನುಭವವನ್ನು ಹಂಚಿಕೊಂಡಿದ್ದಾರೆ.

“ನಾನು ಬೆಂಗಳೂರಿನ ಥರ್ಡ್ ವೇವ್ ಕಾಫಿ ಕೆಫೆಗೆ ಹೋಗಿದ್ದೆ. ಶೌಚಾಲಯದ ಸೀಟಿಗೆ ಎದುರಾಗಿ ಇರುವ ಕಸದ ಬುಟ್ಟಿಯಲ್ಲಿ ಮೊಬೈಲ್‌ ಫೋನ್‌ ಅಡಗಿಸಿಟ್ಟಿರುವುದು ಕಂಡು ಬಂತು. ಫೋನ್‌ ಫ್ಲೈಟ್‌ ಮೋಡ್‌ನಲ್ಲಿ ಇದ್ದ ಕಾರಣಕ್ಕೆ ಯಾರಿಗೂ ಗೊತ್ತಾಗಿಲ್ಲ. ಡಸ್ಟ್‌ಬೀನ್‌ನಲ್ಲಿ ಸಣ್ಣದೊಂದು ರಂಧ್ರ ಮಾಡಿ, ಫೋನ್‌ ಇಟ್ಟು ಕ್ಯಾಮೆರಾ ಆನ್‌ ಮಾಡಲಾಗಿತ್ತು. ಇದನ್ನೂ ಸೂಕ್ಷ್ಮವಾಗಿ ಗಮನಿಸಿದಾಗ ಫೋನ್‌ ಇರುವುದು ಗೊತ್ತಾಗಿದೆ. ಆ ಫೋನ್‌ ಅಲ್ಲಿನ ಸಿಬ್ಬಂದಿಯದ್ದು ಎಂದು ಗೊತ್ತಾಯಿತು ಎಂದು ತಿಳಿಸಿದ್ದಾರೆ.

Hidden camera
Hidden camera

ಇಂತಹ ಕೆಫೆಗಳು ಅಥವಾ ರೆಸ್ಟೋರೆಂಟ್‌ಗಳು ಎಷ್ಟೇ ಪ್ರಸಿದ್ಧವಾಗಿದ್ದರೂ, ಇವತ್ತಿನಿಂದ ನಾನು ಯಾವುದೇ ವಾಶ್ ರೂಮ್‌ ಬಳಸಬೇಕಾದರೂ ನೂರು ಸಲ ಯೋಚನೆ ಮಾಡುತ್ತೇನೆ. ನೀವೂ ಕೂಡ ಹುಷಾರಾಗಿ ಎಂದು ಇನ್ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಿಬ್ಬಂದಿಯನ್ನು ವಜಾ ಮಾಡಿದ ಥರ್ಡ್‌ ವೇವ್‌ ಕಾಫಿ ಕೆಫೆ

ಸೋಶಿಯಲ್‌ ಮೀಡಿಯಾದಲ್ಲಿ ಈ ಘಟನೆ ಕುರಿತು ಥರ್ಡ್‌ ವೇವ್‌ ಕಾಫಿ ಕೆಫೆ ಎಕ್ಸ್‌ನಲ್ಲಿ ಕ್ಷಮೆ ಕೇಳಿ ಪೋಸ್ಟ್‌ ಮಾಡಿದೆ. ಬಿಇಎಲ್‌ ರಸ್ತೆಯಲ್ಲಿರುವ ಕಫೆಯಲ್ಲಿ ನಡೆದಿರುವ ಈ ಘಟನೆಗೆ ವಿಷಾದಿಸುತ್ತೇವೆ. ನಮ್ಮ ಸಿಬ್ಬಂದಿಯನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಲಾಗಿದೆ. ಜತೆಗೆ ಗ್ರಾಹಕರ ಸುರಕ್ಷತೆಗಾಗಿ ಮತ್ತಷ್ಟು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

Hidden camera
Hidden camera

ಕ್ಯಾಮೆರಾ ಇಟ್ಟ ಕಾಮುಕ ಅರೆಸ್ಟ್‌

ಕ್ಯಾಮೆರಾ ಕಂಡೊಡನೆ ಗಾಬರಿಯಾದ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೃತ್ಯದ ಸ್ಥಳಕ್ಕಾಗಮಿಸಿದ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜತೆಗೆ ಭದ್ರಾವತಿ ಮೂಲದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಕೊಂಡಿದ್ದು ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಕಾಫಿ ಶಾಪ್‌ನಲ್ಲಿ ಕಾಫಿ ಮೇಕರ್ ಆಗಿದ್ದ ಮನೋಜ್ (23) ಎಂಬಾತನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಫೋನ್ ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ವಿಜಯನಗರ15 mins ago

Tungabhadra Dam: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; ಅಧಿಕಾರಿಗಳ ಜತೆ ಸಭೆ

assault case
ಧಾರವಾಡ50 mins ago

Assault Case : ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತರು

Serial Killer
ದೇಶ1 hour ago

Serial Killer: ಚಿಕ್ಕಮ್ಮನ ಮೇಲಿನ ದ್ವೇಷಕ್ಕೆ 9 ಅಮಾಯಕ ಮಹಿಳೆಯರನ್ನು ಕೊಂದ! ಇಲ್ಲಿದೆ ವಿಲಕ್ಷಣ ಹಂತಕನ unusual story!

Kannada New Movie Gopilola cinema Song Out
ಸ್ಯಾಂಡಲ್ ವುಡ್1 hour ago

Kannada New Movie: `ಗೋಪಿಲೋಲ’ ಸಿನಿಮಾದ ಎರಡನೇ ಹಾಡು ರಿಲೀಸ್ !

Job Alert
ಉದ್ಯೋಗ1 hour ago

Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

murder case
ತುಮಕೂರು2 hours ago

Murder Case : ಮಧ್ಯರಾತ್ರಿಲಿ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

Abhinav Bindra
ಕ್ರೀಡೆ2 hours ago

Abhinav Bindra: ‘ಒಲಿಂಪಿಕ್‌ ಆರ್ಡರ್‌’ ಗೌರವ ಸ್ವೀಕರಿಸಿದ ಅಭಿನವ್‌ ಬಿಂದ್ರಾ

Teachers Protest
ಕರ್ನಾಟಕ2 hours ago

Teachers Protest: ಶಿಕ್ಷಣ ಇಲಾಖೆ ವಿರುದ್ಧ ಸಮರ ಸಾರಿದ ಶಿಕ್ಷಕರು; ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ

Bear attack
ಹಾಸನ2 hours ago

Bear Attack : ರೈತನ ಮೇಲೆ ಡೆಡ್ಲಿ ಅಟ್ಯಾಕ್‌ ಮಾಡಿ ಕೊಂದು ಹಾಕಿದ ಕರಡಿ

Viral Video
ವೈರಲ್ ನ್ಯೂಸ್2 hours ago

Viral Video: ಸಾಧುಗಳಂತೆ ನಟಿಸಿ ಜನರನ್ನು ದೋಚುತ್ತಿದ್ದ ಖದೀಮರು; ಸಾರ್ವಜನಿಕರಿಂದ ಗೂಸಾ! ವಿಡಿಯೋ ಇದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌