Tungabhadra Dam: ಒಂದು ವಾರದಲ್ಲಿ ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿಯಾಗಲಿದೆ ಎಂದ ಡಿ.ಕೆ.ಶಿವಕುಮಾರ್‌ - Vistara News

ಕರ್ನಾಟಕ

Tungabhadra Dam: ಒಂದು ವಾರದಲ್ಲಿ ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿಯಾಗಲಿದೆ ಎಂದ ಡಿ.ಕೆ.ಶಿವಕುಮಾರ್‌

Tungabhadra Dam: ಮೊದಲು ಯಾರು ಟಿಬಿ ಡ್ಯಾಂ ಗೇಟ್ ರೆಡಿ ಮಾಡಿದ್ದರೋ ಅವರಿಗೆ ಹೇಳಿದ್ದೇವೆ. ನಾವೆಲ್ಲರೂ ಶತಪ್ರಯತ್ನ ಮಾಡಿ ನೀರು ಉಳಿಸುವ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

Tungabhadra Dam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ತುಂಗಭದ್ರಾ ಜಲಾಶಯದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿದ್ದು ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದೆ. ಹೀಗಾಗಿ ಜಲಾಶಯಕ್ಕೆ (Tungabhadra Dam) ಜಲಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿ, ಆದಷ್ಟು ಬೇಗ ಡ್ಯಾಂ ಗೇಟ್ ದುರಸ್ತಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಡಿ.ಕೆ. ಶಿವಕುಮಾರ್ ಮಾತನಾಡಿ, ಡ್ಯಾಂ ಬಗ್ಗೆ ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಡ್ಯಾಂ ಮೇಲೆ ನಿಂತು ಸಂಪೂರ್ಣವಾಗಿ ವೀಕ್ಷಣೆ ಮಾಡಿದ್ದೇನೆ. ರಾತ್ರಿ ವೇಳೆ 10 ಗೇಟ್ ಕಾರ್ಯ ನಿರ್ವಹಣೆ ಮಾಡುತ್ತಿದ್ದವು. ಗೇಟ್ ನಂಬರ್ 19ರ ಚೈನ್ ಕಟ್ ಆಗಿ ಗೇಟ್ ಕಳಚಿ ಬಿದ್ದಿದೆ. ಹೀಗಾಗಿ ವಿಜಯನಗರ ಬಳ್ಳಾರಿಯ ಎಲ್ಲಾ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎಂದು ತಿಳಿಸಿರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

ಮೊದಲು ರೈತರನ್ನು ಬದುಕಿಸಬೇಕು, ರೈತರನ್ನು ಉದ್ಧಾರ ಮಾಡೋದಕ್ಕೆ ಅನೇಕ ಕಾರ್ಯಕ್ರಮ ಹಾಕಿಕೊಂಡಿದ್ದೇವೆ. ತುಂಗಭದ್ರಾ ಜಲಾಶಯವು 105 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ನೀರು ಹೆಚ್ಚಿಗೆ ಇದ್ದಿದ್ದರಿಂದ ನೀರನ್ನು ನದಿಗೆ ಬಿಡಲಾಗಿದೆ. ಒಂದೇ ಗೇಟ್‌ನಲ್ಲಿ ಹೆಚ್ಚು ನೀರು ಹೋದಾಗ ಸಮಸ್ಯೆ ಆಗುತ್ತೆ, ಹೀಗಾಗಿ 98 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಒಂದೇ ಗೇಟ್‌ನಲ್ಲಿ 35 ಸಾವಿರ ಕ್ಯೂಸೆಕ್ ಹೋಗುತ್ತಿದೆ ಎಂದರು.

ಮಲೆನಾಡು ಭಾಗದಲ್ಲಿ ಮತ್ತೆ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ. ಅಕ್ಟೋಬರ್ ಅಷ್ಟೋತ್ತಿಗೆ ಮತ್ತೆ 60 ಟಿಎಂಸಿ ನೀರು ಜಲಾಶಯಕ್ಕೆ ಬರುವ ಸಾಧ್ಯತೆ ಇದೆ. 5 ಟಿಎಂಸಿಯಷ್ಟು ನೀರು ಈಗಾಗಲೇ ಹರಿದು ಹೋಗಿದೆ. ಟೆಕ್ನಿಕಲ್ ಟೀಂ, ನುರಿತ ತಂತ್ರಜ್ಞ ನಾರಾಯಣ ಸೇರಿ ಜೆಎಸ್‌ಡಬ್ಲ್ಯು ಮತ್ತಿತರರ ಸಹಾಯ ಕೇಳಿದ್ದೇವೆ. ಆದಷ್ಟು ಬೇಗ ಗೇಟ್ ದುರಸ್ತಿ ಮಾಡೋದಕ್ಕೆ ಹೇಳಲಾಗಿದೆ ಎಂದು ತಿಳಿಸಿದರು.

ಮೊದಲು ಯಾರು ಟಿಬಿ ಡ್ಯಾಂ ಗೇಟ್ ರೆಡಿ ಮಾಡಿದ್ದರೋ ಅವರಿಗೆ ಹೇಳಿದ್ದೇವೆ. ನಾವೆಲ್ಲರೂ ಶತಪ್ರಯತ್ನ ಮಾಡಿ ನೀರು ಉಳಿಸುವ ಕೆಲಸ ಮಾಡುತ್ತೇವೆ. ಯಾವುದೇ ರಾಜಕಾರಣ ಮಾಡದೇ ನೀರು ಉಳಿಸುವ ಕೆಲಸ ಮಾಡುತ್ತೇವೆ. ಎಲ್ಲೆಲ್ಲಿ ನೀರು ಉಳಿಸೋದಕ್ಕೆ ಸಾಧ್ಯ, ಅಲ್ಲಿ ಕೆಲಸ ಮಾಡುತ್ತೇವೆ. ಆಂಧ್ರ, ತೆಲಂಗಾಣ ರಾಜ್ಯದ ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ರೈತರನ್ನ ಮೊದಲು ಉಳಿಸುವ ಪ್ರಯತ್ನವನ್ನು ಮಾಡುತ್ತೇವೆ ಎಂದರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

8 ತಿಂಗಳಿನಿಂದ ಟಿಬಿ ಡ್ಯಾಂಗೆ ಮುಖ್ಯ ಎಂಜಿನಿಯರ್ ನೇಮಕ ಆಗಿಲ್ಲ ಅನ್ನೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಾನು ಯಾರ ಮೇಲೂ ದೂರುವುದಿಲ್ಲ, ಮೊದಲು ಗೇಟ್ ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಒಂದು ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Tungabhadra Dam: ತುಂಗಭದ್ರಾ ಡ್ಯಾಂ ಗೇಟು ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿ.ಕೆ. ಶಿವಕುಮಾರ್

Tungabhadra Dam: ಸದ್ಯ ತುಂಗಭದ್ರಾ ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ. 19ನೇ ಗೇಟ್ ಒಂದರಲ್ಲಿಯೇ 35 ಸಾವಿರ ಕ್ಯೂಸೆಕ್ ನೀರು ಹೊರಹೋಗುತ್ತಿದೆ. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

Tungabhadra Dam
Koo

ವಿಜಯನಗರ: ತುಂಗಭದ್ರಾ ಅಣೆಕಟ್ಟಿನ (Tungabhadra Dam) ಹಾನಿಗೊಳಗಾದ 19ನೇ ಗೇಟನ್ನು ದುರಸ್ತಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ನಮ್ಮ ತುಂಗಭದ್ರಾ ನೀರಾವರಿ ನಿಗಮದಲ್ಲಿಯೂ ಉತ್ತಮ ತಂತ್ರಜ್ಞರಿದ್ದಾರೆ. ಅಲ್ಲದೇ ಗುತ್ತಿಗೆದಾರ ಸಂಸ್ಥೆಗಳಾದ ಕೃಷ್ಣಯ್ಯ, ನಾರಾಯಣ ಹಾಗೂ ಹಿಂದುಸ್ಥಾನ್ ಸಂಸ್ಥೆಯ ತಂಡಗಳು ಈಗಾಗಲೇ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ತಂತ್ರಜ್ಞರಿಗೆ ಈಗಾಗಲೇ ಅಣೆಕಟ್ಟಿನ ವಿನ್ಯಾಸ ನಕ್ಷೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಭಾನುವಾರ ಮಧ್ಯಾಹ್ನ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಘಟನೆ ಅತ್ಯಂತ ದುಃಖಕರ. ಶನಿವಾರ ರಾತ್ರಿ ಜಲಾಶಯದ 10 ಗೇಟ್‌ಗಳನ್ನು ತೆರೆಯಲಾಗಿತ್ತು. ಏಕಾಏಕಿ ಜಲಾಶಯದ 19ನೇ ಗೇಟಿನ ಚೈನ್ ಲಿಂಕ್ ತುಂಡಾದ ಹಿನ್ನೆಲೆ ಎಲ್ಲಾ ಗೇಟ್ ತೆರೆದು ಅಣೆಕಟ್ಟಿನ ಮೇಲಿನ ಒತ್ತಡ ಕಡಿಮೆ ಮಾಡಲಾಗಿದೆ ಎಂದರು.

ಸದ್ಯ ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ. 19ನೇ ಗೇಟ್ ಒಂದರಲ್ಲಿಯೇ 35 ಸಾವಿರ ಕ್ಯೂಸೆಕ್ ನೀರು ಹೊರಹೋಗುತ್ತಿದೆ. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ| Tungabhadra Dam: ಒಂದು ವಾರದಲ್ಲಿ ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿಯಾಗಲಿದೆ ಎಂದ ಡಿ.ಕೆ.ಶಿವಕುಮಾರ್‌

ರೈತರ ಒಂದು ಬೆಳೆಗಾದರೂ ನೀರನ್ನು ಉಳಿಸುತ್ತೇವೆ

ಜಲಾಶಯದಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಿದೆ. ಗೇಟನ್ನು ಮತ್ತೆ ಹಾಕಬೇಕೆಂದರೆ ಒತ್ತಡ ಕಡಿಮೆ ಮಾಡಬೇಕಿದೆ. ಜಲಾಶಯದಲ್ಲಿ 150 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು. ಜಲಾಶಯಕ್ಕೆ ಒಳಹರಿವು 28,000 ಕ್ಯೂಸೆಕ್ ಇದೇ. ಕನಿಷ್ಠ ನಮ್ಮ ರೈತರಿಗೆ ಒಂದು ಬೆಳಗಾದರೂ ಒದಗಿಸುವಷ್ಟು ನೀರನ್ನು ಉಳಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.

ಅಣೆಕಟ್ಟಿನ ಪ್ರಮುಖ ಮೂರು ಕಾಲುವೆಗಳಿಗೆ ನೀರನ್ನು ಹರಿಸಲು 115 ಟಿಎಂಸಿ ನೀರಿನ ಅವಶ್ಯಕತೆ ಇದೆ. ಇದೆಲ್ಲವನ್ನು ಲೆಕ್ಕಾಚಾರ ಹಾಕಿ ರೈತರನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಪಕ್ಕದ ರಾಜ್ಯಗಳಿಗೆ ಈಗಾಗಲೇ 25 ಟಿಎಂಸಿ ನೀರನ್ನು ಕೊಡಲಾಗಿದೆ. ಇನ್ನೂ 90 ಟಿಎಂಸಿ ನೀರನ್ನು ಕೊಡಬೇಕಾಗಿದೆ. ಮೂರು ರಾಜ್ಯಗಳು ಒಟ್ಟಿಗೆ ಸೇರಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ. ರೈತರು ಆತಂಕಕ್ಕೆ ಒಳಗಾಗಬೇಡಿ ಎಂದರು.

ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ಈ ಮೂರು ರಾಜ್ಯಗಳ ರೈತರಿಗೆ ಬಹುಮುಖ್ಯವಾದ ಜಲಾಶಯ ಇದಾಗಿದೆ. ನಮ್ಮ ಕರ್ನಾಟಕದ 12 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವನ್ನು ಇದು ಹೊಂದಿದೆ. ಕೊಪ್ಪಳ, ರಾಯಚೂರು, ಬಳ್ಳಾರಿ ಸೇರಿದಂತೆ ಅನೇಕ ಜಿಲ್ಲೆಗಳು ಇದರಿಂದ ಲಾಭ ಪಡೆಯುತ್ತಿವೆ. ನಮ್ಮ ರೈತರು ಆತಂಕ ಪಡಬೇಕಾಗಿಲ್ಲ ಸರ್ಕಾರ ನಿಮ್ಮ ಜೊತೆಗಿದೆ” ಎಂದು ತಿಳಿಸಿದರು.

ಇದು 60 ರಿಂದ 70 ವರ್ಷ ಹಳೆಯ ಜಲಾಶಯವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ನಾನು ಯಾವ ಅಧಿಕಾರಿಗಳನ್ನೂ ದೂರುವುದಿಲ್ಲ. ದೇಶದ ಸಂಪತ್ತನ್ನು ಕಾಪಾಡಬೇಕಿದೆ. ಅಣೆಕಟ್ಟಿನ ಎರಡು ಕಿಲೋಮೀಟರ್ ಸುತ್ತಳತೆಯಲ್ಲಿ ತಂತ್ರಜ್ಞರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಹೊರತುಪಡಿಸಿ ಜನಪ್ರತಿನಿಧಿಗಳಿಗೂ ಸಹ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದರು.

ಬಾಗಿನ ಅರ್ಪಣೆ ಮುಂದೂಡಿಕೆ

ಆ.13 ರಂದು ಅಣೆಕಟ್ಟು ತುಂಬಿದ ಹಿನ್ನೆಲೆಯಲ್ಲಿ ನಾನು, ಸಿಎಂ ಬಾಗಿನ ಅರ್ಪಿಸುವ ಕಾರ್ಯಕ್ರಮವಿತ್ತು. ಈಗ ಅದನ್ನು ಮುಂದೂಡಲಾಗಿದೆ. ಮೊದಲು ಅಣೆಕಟ್ಟಿನ ಸುರಕ್ಷತೆ ನಮಗೆ ಮುಖ್ಯವಾಗಿದೆ ಎಂದರು.

ದುರಸ್ತಿಗೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಪ್ರಶ್ನೆ ಕೇಳಿದಾಗ, ನಮ್ಮ ಅಧಿಕಾರಿಗಳು ಪ್ರತಿಕ್ಷಣವೂ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ. ಈ ಘಟನೆ ಆದ ಕ್ಷಣದಿಂದ ತ್ವರಿತವಾಗಿ ಕೆಲಸ ಮಾಡುತ್ತಿದ್ದಾರೆ. ಯಾರ ನಿರ್ಲಕ್ಷ್ಯತೆಯಿಂದಲೂ ಈ ಅವಘಡ ನಡೆದಿಲ್ಲ. ಆಕಸ್ಮಿಕವಾಗಿ ಈ ಘಟನೆ ನಡೆದಿದೆ ಎಂದು ಹೇಳಿದರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; ಅಧಿಕಾರಿಗಳ ಜತೆ ಸಭೆ

ಇತರೆ ಜಲಾಶಯಗಳನ್ನು ಪರಿಶೀಲಿಸಲಾಗುತ್ತದೆಯೇ ಎಂದು ಕೇಳಿದಾಗ, ಬೇರೆ ಜಲಾಶಯಗಳಲ್ಲಿ ರೋಪ್ ಹಾಗೂ ಚೈನ್ ಎರಡು ವ್ಯವಸ್ಥೆ ಮಾಡಲಾಗಿರುತ್ತದೆ. ಈ ಜಲಾಶಯವನ್ನು ವಿನ್ಯಾಸ ಮಾಡುವಾಗ ಚೈನ್ ವ್ಯವಸ್ಥೆ ಮಾಡಿದ್ದಾರೆ. ಮೊದಲು ಇಲ್ಲಿನ ಸಮಸ್ಯೆ ಪರಿಹರಿಸಿ ಆನಂತರ ಇತರೆಡೆ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

Continue Reading

ಬೆಂಗಳೂರು

Yakshagana Dance : ಯಕ್ಷಗಾನ ಕಲೆ ಪುರುಷರಿಗಷ್ಟೇ ಸೀಮಿತವಲ್ಲ: ಡಾ. ಧರಣೀದೇವಿ ಮಾಲಗತ್ತಿ

Yakshagana Dance : ಸ್ವತಃ “ಶರಸೇತು ಬಂಧ” ಎಂಬ ಮಹಿಳಾ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಆಂಜನೇಯನ ಪಾತ್ರವಹಿಸಿ ಅರ್ಥಗಾರಿಕೆ ಮಾಡಿದ ಧರಣೀದೇವಿ ಅವರು, ಭಾಗವತಿಕೆಯಲ್ಲಿ, ಚೆಂಡೆ ವಾದನದಲ್ಲಿ, ಮುಮ್ಮೇಳ ಕಲಾವಿದರಾಗಿ ಬಹಳ ಹಿಂದಿನಿಂದಲೂ ಮಹಿಳೆಯರು ಅವರದೇ ಛಾಪು ಮೂಡಿಸಿದ್ದಾರೆ. ಬಣ್ಣದ ವೇಷದಲ್ಲೂ ತೊಡಗಿಸಿಕೊಂಡು, ಆಯಾ ಪಾತ್ರಕ್ಕೆ ಅನುಗುಣವಾದ ಧ್ವನಿಯನ್ನೂ ನೀಡಿ ಪಾತ್ರಕ್ಕೆ ನ್ಯಾಯ ಒದಗಿಸಿದ ನಿದರ್ಶನಗಳು ಇವೆ ಎಂದು ಹೇಳಿದರು.

VISTARANEWS.COM


on

Yakshagana Dance
Koo

ಬೆಂಗಳೂರು: ಯಕ್ಷಗಾನ (Yakshagana Dance) ಕೇವಲ ಪುರುಷರಿಗಷ್ಟೇ ಸೀಮಿತವಾಗಿಲ್ಲ. ಈ ರಂಗದಲ್ಲಿ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಮಹಿಳೆಯರೂ ಹಂತಹಂತವಾಗಿ ಪಾಲ್ಗೊಂಡು ಪುರುಷರಂತೆಯೇ ಸಾಧನೆ ಮಾಡಿದ್ದಾರೆ ಹಾಗೂ ಮಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಡಾ. ಧರಣೀದೇವಿ ಮಾಲಗತ್ತಿ (Dharanidevi Malagatti) ಅಭಿಪ್ರಾಯಪಟ್ಟಿದ್ದಾರೆ.

ಅವರು ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆ ಶನಿವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಏರ್ಪಡಿಸಿದ್ದ ಯಕ್ಷಗಾನ ಉತ್ಸವ-೨೦೨೪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸ್ವತಃ “ಶರಸೇತು ಬಂಧ” ಎಂಬ ಮಹಿಳಾ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಆಂಜನೇಯನ ಪಾತ್ರವಹಿಸಿ ಅರ್ಥಗಾರಿಕೆ ಮಾಡಿದ ಧರಣೀದೇವಿ ಅವರು, ಭಾಗವತಿಕೆಯಲ್ಲಿ, ಚೆಂಡೆ ವಾದನದಲ್ಲಿ, ಮುಮ್ಮೇಳ ಕಲಾವಿದರಾಗಿ ಬಹಳ ಹಿಂದಿನಿಂದಲೂ ಮಹಿಳೆಯರು ಅವರದೇ ಛಾಪು ಮೂಡಿಸಿದ್ದಾರೆ. ಬಣ್ಣದ ವೇಷದಲ್ಲೂ ತೊಡಗಿಸಿಕೊಂಡು, ಆಯಾ ಪಾತ್ರಕ್ಕೆ ಅನುಗುಣವಾದ ಧ್ವನಿಯನ್ನೂ ನೀಡಿ ಪಾತ್ರಕ್ಕೆ ನ್ಯಾಯ ಒದಗಿಸಿದ ನಿದರ್ಶನಗಳು ಇವೆ ಎಂದು ಹೇಳಿದರು.

ಯಕ್ಷಗಾನದ ಬೇರು ಆಳವಾಗಿದೆ ಹಾಗೂ ಎಂದಿಗೂ ಅದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲಿದೆ. ಹಾಗಾಗಿ ಯಕ್ಷಗಾನವನ್ನು ಉಳಿಸಿಕೊಳ್ಳಬೇಕು, ಯಕ್ಷಗಾನ ಅವನತಿಯತ್ತ ಸಾಗುತ್ತಿದೆ ಎಂಬಂತಹ ಮಾತುಗಳಿಗೆ ಆಸ್ಪದವಿಲ್ಲ. ಯಕ್ಷಗಾನ ವಿಶ್ವದೆಲ್ಲೆಡೆ ಪಸರಿಸಿದ್ದು, ಈ ಕಲೆ ಯಾವ ಕಾಲಕ್ಕೂ ಪ್ರಸ್ತುತ ಎಂದು ಧರಣೀದೇವಿ ವಿಶ್ಲೇಷಿಸಿದರು.
ಶರಸೇತು ಬಂಧ ತಾಳಮದ್ದಲೆಯಲ್ಲಿ ಭಾಗವಹಿಸಿದ ಅವರು, ಹನುಮಂತನ ತನ್ನ ಪಾತ್ರ ಪರಿಚಯ ಮಾಡುತ್ತಾ, ವಾಯುಪುತ್ರ, ರಾಮಭಕ್ತ ಎಂಬ ಹೆಸರುಗಳಿವೆ. ಆದರೆ ತಾನು ತನ್ನ ತಾಯಿಯ ಹೆಸರಿನಿಂದಲೂ ಗುರುತಿಸಿಕೊಂಡು ಅಂಜನಾ ಸುತ ಅಥವಾ ಆಂಜನೇಯ ಎಂದೂ ಹೆಸರಿದೆ ಎಂದು ಹೇಳುವ ಮೂಲಕ ತನ್ನ ಕರಾವಳಿಯ ತಾಯಿಯ ಕುಟುಂಬದ ಆಧಾರಿತ ಅಳಿಯಕಟ್ಟು ಸಂಪ್ರದಾಯವನ್ನು ಪರೋಕ್ಷವಾಗಿ ನೆನಪಿಸಿದರು.

ಇದನ್ನೂ ಓದಿ: Actor Darshan: ಹೋಮ-ಹವನ ಮಾಡ್ತಿರೋದು ದರ್ಶನ್‌ ಬಿಡುಗಡೆಗಾಗಿ ಅಲ್ಲ: ರಾಕ್‌ಲೈನ್ ವೆಂಕಟೇಶ್

ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆಯ ನಿರ್ದೇಶಕಿ ಗೌರಿ ಕೆ. ಅವರು ಮಾತನಾಡಿ, ಸಂಸ್ಥೆ 26 ವರ್ಷಗಳಿಂದ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಉಚಿತವಾಗಿ ತರಬೇತಿ ನೀಡುತ್ತಾ ಬೆಳೆಯುತ್ತಿದೆ. ಈಗ ವಿದ್ಯಾರ್ಥಿವೇತನ ಮೂಲಕ ೧೨ ಮಹಿಳೆಯರಿಗೆ ಯಕ್ಷಗಾನ ತರಬೇತಿ ನೀಡುವ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದರು.

ಯಕ್ಷಗಾನ ಉತ್ಸವ 2024

ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು ಸಂಸ್ಥೆಯ ವತಿಯಿಂದ ‘ಯಕ್ಷಗಾನ ಉತ್ಸವ-2024’ ಗುರುಗಳಾದ ಶ್ರೀನಿವಾಸ ಸಾಸ್ತಾನ ಮತ್ತು ಕೆ. ಗೌರಿ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ನಡೆದ ಯಕ್ಷಗಾನ ವೇಷಭೂಷಣ ಹಾಗೂ ಮುಖವರ್ಣಿಕೆ ಕಮ್ಮಟ ಕಾರ್ಯಕ್ರಮವನ್ನು ತುಳುವರೆಂಕುಲು ಕಾರ್ಯದರ್ಶಿಗಳು, ಮಟ್ಟಿ ರಾಮಚಂದ್ರ ರಾವ್ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಅತಿಥಿಗಳಾಗಿ ಖ್ಯಾತ ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ, ಸಂಪನ್ಮೂಲ ವ್ಯಕ್ತಿಗಳಾಗಿ ರಾಜೇಶ್ ಆಚಾರ್, ಶಂಕರ್ ಹೊಸೂರು, ಉಮೇಶ್ ರಾಜ್, ಸಂಸ್ಥೆಯ ಯಕ್ಷಗಾನ ಗುರು ಮತ್ತು ನಿರ್ದೇಶಕರು ಕೆ. ಗೌರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಂತರ ಸಂಸ್ಥೆಯ ಕಲಾವಿದೆಯರಿಂದ ಯಕ್ಷಗಾನದ ಕಥಾಭಾಗದ ಮೊದಲು ನಡೆಯುವ ರಂಗಕ್ರಿಯೆಯಾದ ಯಕ್ಷಗಾನ ಪೂರ್ವರಂಗ ಪ್ರದರ್ಶನ, ಕುಶಲವ ಕಾಳಗ, ಜಾಂಬವತಿ ಕಲ್ಯಾಣ ಯಕ್ಷಗಾನ ಪ್ರಸಂಗ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಸುಬ್ರಹ್ಮಣ್ಯ ನಾವುಡ, ವಿಶ್ವನಾಥ ಶೆಟ್ಟಿ, ವಿನಯ್ ರಾಜೀವ್ ಶೆಟ್ಟಿ, ನರಸಿಂಹ ಆಚಾರ್, ಸಂಪತ್ ಆಚಾರ್ಯ, ಸುಬ್ರಹ್ಮಣ್ಯ ಗಾಣಿಗ ಐರೋಡಿ, ಕಾರ್ತಿಕ್ ಧಾರೇಶ್ವರ್. ಮುಮ್ಮೇಳದಲ್ಲಿ ಕಲಾವಿದೆಯರಾಗಿ ಕೆ ಗೌರಿ, ಆಶಾ ರಾಘವೇಂದ್ರ, ಅನ್ನಪೂರ್ಣೇಶ್ವರಿ ಕಟೀಲು, ಶ್ವೇತಾ ನವೀನ್, ಲಕ್ಷ್ಮೀ ರಾವ್, ಶಶಿಕಲಾ, ಸುಮಾ ಅನಿಲ್ ಕುಮಾರ್, ಮನಸ್ವಿ, ಚೈತ್ರ ಕೋಟ, ಚೈತ್ರ ಭಟ್, ದೀಕ್ಷಾ ಭಟ್, ಸೌಜನ್ಯ ನಾವುಡ, ರಕ್ಷಾ ಅನಂತ್, ಸಹನಾ ಅನಿಲ್ ಕುಮಾರ್, ಧೃತಿ ಅಮ್ಮೆಂಬಳ, ಸಹನ್ಯ ಚಿನ್ಮಯಿ, ಕೃತಿ ಅಮ್ಮೆಂಬಳ, ಗಗನ ಅನಿಲ್ ಕುಮಾರ್, ಯಾದ್ವಿಯುತಿ, ಸಾನ್ವಿ, ಸಹನಾ, ಶ್ರೀನಿಧಿ, ಮಹಾಲಕ್ಷ್ಮಿ ವಿವಿಧ ಪಾತ್ರಗಳಲ್ಲಿ ಮಿಂಚಿದರು.

ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣೀ ದೇವಿ ಮಾಲಗಿತ್ತಿ, ಅಶ್ವಿನಿ ಆಚಾರ್, ಸಾವಿತ್ರಿ ಶಾಸ್ತ್ರಿ ಇವರ ಅರ್ಥಗಾರಿಕೆಯಲ್ಲಿ ಯಕ್ಷಗಾನ ತಾಳಮದ್ದಳೆ- ಶರಸೇತು ಬಂಧ ನಡೆಯಿತು. ತಾಳಮದ್ದಳೆಯಲ್ಲಿ ಹಿಮ್ಮೇಳ ಕಲಾವಿದರಾಗಿ ಕುಮಾರಿ ಅನರ್ಘ್ಯ ಟಿ.ಪಿ, ಪೃಥ್ವಿ ಬಡೆಕ್ಕಿಲ, ಶಿಖಿನ್ ಶರ್ಮ ಭಾಗವಹಿಸಿದರು.

Continue Reading

ಕರ್ನಾಟಕ

Road Accident: ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಟೆಂಪೋಗೆ ಕ್ಯಾಂಟರ್‌ ಡಿಕ್ಕಿ; ಮೂವರ ದುರ್ಮರಣ, ಐವರ ಸ್ಥಿತಿ ಗಂಭೀರ

Road Accident: ಮೃತ ಕಾರ್ಮಿಕರೆಲ್ಲಾ ಉತ್ತರ ಕರ್ನಾಟಕ ಮೂಲದವರು ಎಂದು ತಿಳಿದುಬಂದಿದೆ. ನೆಲಮಂಗಲ ಸಂಚಾರ ಪೊಲೀಸರು ಧಾವಿಸಿ, ಕ್ರೇನ್ ಮುಖಾಂತರ ವಾಹನಗಳನ್ನು ತೆರವು ಮಾಡಿಸಿದ್ದಾರೆ.

VISTARANEWS.COM


on

Road Accident
Koo

ನೆಲಮಂಗಲ: ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಗೇಟ್ ಬಳಿ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಟೆಂಪೋಗೆ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿಯಾಗಿ ಮೂವರು ಕಾರ್ಮಿಕರು ಮೃತಪಟ್ಟು, ಐವರಿಗೆ ಗಂಭೀರ ಗಾಯಗಳಾಗಿವೆ.

ಕಾರ್ಮಿಕರೆಲ್ಲಾ ಉತ್ತರ ಕರ್ನಾಟಕ ಮೂಲದವರು ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ 407 ಟೆಂಪೋದಲ್ಲಿದ್ದ ಕಾರ್ಮಿಕರು ಮತ್ತು ವಸ್ತಗಳು ಚೆಲ್ಲಾ ಪಿಲ್ಲಿಯಾಗಿ ರಸ್ತೆ ಬಿದ್ದಿವೆ. ಇದರಿಂದ ಕೆಲಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಧಾವಿಸಿ, ಕ್ರೇನ್ ಮುಖಾಂತರ ವಾಹನಗಳನ್ನು ತೆರವು ಮಾಡಿಸಿದರು.

ಇದನ್ನೂ ಓದಿ | Theft Case : ಲಡ್ಡು ಬಂದು ಬಾಯಿಗೆ ಬಿತ್ತು! ಕೀ ಸಮೇತ ಸ್ಕೂಟರ್‌ ಬಿಟ್ಟು ಹೋದ ಮಹಿಳೆ, ಕ್ಷಣಾರ್ಧದಲ್ಲೇ ಎಗರಿಸಿದ ಚಾಲಾಕಿ

ಮಧ್ಯರಾತ್ರಿಯಲಿ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

murder case
murder case

ತುಮಕೂರು/ಬೆಂಗಳೂರು ಗ್ರಾಮಾಂತರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವೃದ್ಧೆಯೊಬ್ಬರ ಬರ್ಬರ (Murder Case) ಕೊಲೆಯಾಗಿದೆ. ಮದ್ದಮ್ಮ (68) ಮೃತ ದುರ್ದೈವಿ. ತುಮಕೂರಿನ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಜೋಗಯ್ಯನ ಪಾಳ್ಯದಲ್ಲಿ ಘಟನೆ ನಡೆದಿದೆ.

ಮದ್ದಮ್ಮ ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ದೇವರ ಉತ್ಸವ ಮುಗಿಸಿಕೊಂಡು ರಾತ್ರಿ ಮನೆಗೆ ತೆರಳುತ್ತಿದ್ದರು. ಈ ವೇಳೆ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ನಂತರ ಆಕೆಯ ಮೈ ಮೇಲೆ ಇದ್ದ ಚಿನ್ನದ ಸರ ಕದ್ದಿದ್ದಾರೆ. ಬಳಿಕ ಶವವನ್ನು ನಿರ್ಮಾಣ ಹಂತದ ಕಟ್ಟಡದ ಬಳಿ ಎಸೆದು ಪರಾರಿ ಆಗಿದ್ದಾರೆ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶಿರಾ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Murder Case : ಬೆಂಗಳೂರಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ; ಬಾಳಸಂಗಾತಿ ಈಗ ಕೊಲೆಗಾರ್ತಿ

ಆನೇಕಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಶಿಲೀಂಧ್ರದೊಡ್ಡಿ ಬಳಿ ಘಟನೆ ನಡೆದಿದೆ. ಬೆಂಗಳೂರಿನ ಕೊಣನಕುಂಟೆ ನಿವಾಸಿ ಅಮರನಾಥ (43) ಮೃತ ದುರ್ದೈವಿ.

ಅಮರನಾಥ ಹೊಸ ಪಂಚೆ ಖರೀದಿಸಿ ಅದರಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Theft Case : ಲಡ್ಡು ಬಂದು ಬಾಯಿಗೆ ಬಿತ್ತು! ಕೀ ಸಮೇತ ಸ್ಕೂಟರ್‌ ಬಿಟ್ಟು ಹೋದ ಮಹಿಳೆ, ಕ್ಷಣಾರ್ಧದಲ್ಲೇ ಎಗರಿಸಿದ ಚಾಲಾಕಿ

Theft Case : ಫಟಾಫಟ್‌ ಅಂತ ತರಕಾರಿ ತಂದು ಬಿಡೋಣಾ ಅಂತ ಹೋದ ಮಹಿಳೆಯೊಬ್ಬರು ಕೀ ಸಮೇತ ಸ್ಕೂಟರ್‌ ಬಿಟ್ಟು ಹೋಗಿದ್ದರು. ಇದೇ ವೇಳೆ ಅನಾಚಕ್‌ ಆಗಿ ಬಂದ ಕಳ್ಳನೊಬ್ಬ ಕ್ಷಣಾರ್ಧದಲ್ಲೇ ಸ್ಕೂಟರ್‌ ಎಗರಿಸಿ ಕಾಲ್ಕಿತ್ತಿದ್ದಾನೆ.

VISTARANEWS.COM


on

By

theft Case
Koo

ಬೆಂಗಳೂರು: ಮಹಿಳೆಯೊಬ್ಬರು ಕೀ ಸಮೇತ ಸ್ಕೂಟರ್ ನಿಲ್ಲಿಸಿ ತರಕಾರಿ ತರಲು ಹೋಗಿದ್ದರು. ಇದೇ ವೇಳೆ ಅದೇ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಕಳ್ಳನಿಗೆ (Theft Case) ಬಾಯಿಗೆ ಬಂದು ಲಡ್ಡು ಬಿದ್ದಂತೆ ಆಗಿತ್ತು. ಸ್ಕೂಟರ್‌ ಸುತ್ತಮುತ್ತ ಗಮನಿಸಿದವನೇ ಅತ್ತಿಂದಿತ್ತ ಓಡಾಡುತ್ತಾ ಬಳಿಕ ಕ್ಷಣಾರ್ಧದಲ್ಲಿ ಸ್ಕೂಟರ್‌ ಎಗರಿಸಿಕೊಂಡು ಪರಾರಿ ಆಗಿದ್ದಾನೆ.

ಬೆಂಗಳೂರಿನ ಹೆಬ್ಬಾಳದ ಚೋಳನಹಳ್ಳಿ ಮಿನಿ ಮಾರ್ಟ್ ಮುಂಭಾಗ ಮಹಿಳೆಯೊಬ್ಬರು ಸ್ಕೂಟರ್ ನಿಲ್ಲಿಸಿದ್ದರು. ತರಕಾರಿ ಖರೀದಿಸಿ ವಾಪಸ್ ಬರುವುದರೊಳಗೆ ಸ್ಕೂಟರ್‌ ಮಾಯವಾಗಿತ್ತು. ಮಹಿಳೆ ಸ್ಕೂಟರ್‌ನಲ್ಲೇ ಕೀ ಬಿಟ್ಟು ತರಕಾರಿ ತರಲು ಹೋದಾಗ, ಇದನ್ನೂ ಗಮನಿಸಿದ ಕಳ್ಳ ಸ್ಟಾರ್ಟ್ ಮಾಡಿಕೊಂಡು ಹೋಗಿದ್ದಾನೆ. ಸ್ಕೂಟರ್ ಕದಿಯುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: Theft Case : ಪಾರ್ಟ್‌ ಟೈಂ ಕ್ಯಾಬ್‌ ಡೈವರ್‌, ಫುಲ್‌ ಟೈಂ ಕಳ್ಳತನಕ್ಕೆ ಇಳಿದ ಖರ್ತನಾಕ್‌ ಕಳ್ಳ

ಆನೇಕಲ್‌ನಲ್ಲಿ ರೆಡ್‌ ಹ್ಯಾಂಡ್‌ ಸಿಕ್ಕಿ ಬಿದ್ದ ಕಳ್ಳ

ಸೈಕಲ್ ಶಾಪ್‌ಗೆ ಕನ್ನ ಹಾಕಲು ಹೋದ ಕಳ್ಳನೊಬ್ಬ ರೆಡ್ ಹ್ಯಾಂಡ್ ಆ‌ಗಿ ಸಿಕ್ಕಿ ಬಿದ್ದಿದ್ದಾನೆ. ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ ಘಟನೆ ನಡೆದಿದೆ. ಸಾಹಿಲ್ ಶರೀಫ್ ಎಂಬುವವರಿಗೆ ಸೇರಿದ ಬೈಸಿಕಲ್ ಜೋನ್ ಎಂಬ ಸೈಕಲ್ ಶಾಪ್‌ಗೆ ಇಬ್ಬರು ಖತರ್ನಾಕ್‌ ಕಳ್ಳರು ಒಮಿನಿ ಕಾರಿನಲ್ಲಿ ಬಂದಿದ್ದಾರೆ.

ಈ ಹಿಂದೆ ಇದೇ ಸೈಕಲ್ ಶಾಪ್‌ನಲ್ಲಿ ಕಳ್ಳತನವಾಗಿತ್ತು. ಇದರಿಂದಾಗಿ ರಾತ್ರಿ ವೇಳೆ ಅಂಗಡಿ ಮಾಲೀಕ, ಕೆಲಸಗಾರ ಅಂಗಡಿಯಲ್ಲೇ ಮಲಗುತ್ತಿದ್ದರು. ರಾತ್ರಿ ಅಂಗಡಿಯ ಮೇಲ್ಛಾವಣಿಯ ಶೀಟ್ ಕಟ್ ಮಾಡಿ ಕಳ್ಳತನಕ್ಕೆ ಮುಂದಾಗಿದ್ದರು.

ಅಂಗಡಿಯಲ್ಲಿ ಸೌಂಡ್ ಆಗುತ್ತಿರುವುದನ್ನು ಕಂಡು ಸಿಸಿಟಿವಿ ಪರಿಶೀಲನೆ ಮಾಡಿದಾಗ ಕಳ್ಳರ ಕೈಚಳಕ ಕಂಡು ಶಾಕ್ ಆದರು. ಕೂಡಲೇ ಸುತ್ತಮುತ್ತಲಿನ ಸ್ಥಳೀಯರ ಸಹಾಯ ಪಡೆದು ಓರ್ವನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮತ್ತೊಬ್ಬ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಸಿಕ್ಕಿಬಿದ್ದ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಿದ್ದು, ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
PR Sreejesh
ಕ್ರೀಡೆ10 mins ago

PR Sreejesh : ಮಲ್ಲು ಸ್ಟೈಲಲ್ಲಿ ಮುಂಡು ಉಟ್ಟು ಐಫೆಲ್ ಟವರ್ ಮುಂದೆ ಫೋಟೋ ತೆಗಿಸಿಕೊಂಡ ಪಿ.ಆರ್​ ಶ್ರೀಜೇಶ್​​

Vinesh Phogat
ಕ್ರೀಡೆ32 mins ago

Vinesh Phogat : ವಿನೇಶ್​ಗೆ ಬೆಳ್ಳಿಯ ಪದಕ ನೀಡಬೇಕು; ಸೌರವ್​ ಗಂಗೂಲಿ ಆಗ್ರಹ

Tungabhadra Dam
ಕರ್ನಾಟಕ34 mins ago

Tungabhadra Dam: ತುಂಗಭದ್ರಾ ಡ್ಯಾಂ ಗೇಟು ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿ.ಕೆ. ಶಿವಕುಮಾರ್

Paris Olympics 2024
ಕ್ರೀಡೆ1 hour ago

Paris Olympics 2024 : ನಮ್ಮ ರಾಜಕಾರಣಿಗಳು ಕ್ರೀಡಾಕ್ಷೇತ್ರದಲ್ಲೂ ರಾಜಕೀಯ ಮಾಡ್ತಾರೆ; ಉಕ್ರೇನ್​ ಸಂಸದ ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದಾರೆ!

Yakshagana Dance
ಬೆಂಗಳೂರು2 hours ago

Yakshagana Dance : ಯಕ್ಷಗಾನ ಕಲೆ ಪುರುಷರಿಗಷ್ಟೇ ಸೀಮಿತವಲ್ಲ: ಡಾ. ಧರಣೀದೇವಿ ಮಾಲಗತ್ತಿ

Road Accident
ಕರ್ನಾಟಕ2 hours ago

Road Accident: ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಟೆಂಪೋಗೆ ಕ್ಯಾಂಟರ್‌ ಡಿಕ್ಕಿ; ಮೂವರ ದುರ್ಮರಣ, ಐವರ ಸ್ಥಿತಿ ಗಂಭೀರ

Bomb threat
ಪ್ರಮುಖ ಸುದ್ದಿ2 hours ago

Bomb threat : ಏರ್​ಪೋರ್ಟ್​​ ಬ್ಯಾಗ್ ಚೆಕಿಂಗ್​ ವೇಳೆ ತಮಾಷೆಗೆ ‘ಬಾಂಬ್​ ಇದೆ’ ಅಂದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು!

theft Case
ಬೆಂಗಳೂರು2 hours ago

Theft Case : ಲಡ್ಡು ಬಂದು ಬಾಯಿಗೆ ಬಿತ್ತು! ಕೀ ಸಮೇತ ಸ್ಕೂಟರ್‌ ಬಿಟ್ಟು ಹೋದ ಮಹಿಳೆ, ಕ್ಷಣಾರ್ಧದಲ್ಲೇ ಎಗರಿಸಿದ ಚಾಲಾಕಿ

Tungabhadra Dam
ಪ್ರಮುಖ ಸುದ್ದಿ3 hours ago

Tungabhadra Dam: ಟಿಬಿ ಡ್ಯಾಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ; ಶೀಘ್ರ ಕ್ರಸ್ಟ್ ಗೇಟ್ ದುರಸ್ತಿಗೆ ವಿಜಯೇಂದ್ರ ಆಗ್ರಹ

veg vs non veg
ಪ್ರಮುಖ ಸುದ್ದಿ3 hours ago

veg vs non veg : ಮಕ್ಕಳ ಬಾಕ್ಸ್​​ನಲ್ಲಿ ಮಾಂಸಾಹಾರ ಕಳುಹಿಸಬಾರದು; ವಿವಾದ ಸೃಷ್ಟಿಸಿದ ಶಾಲೆಯ ನೋಟಿಸ್​​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌