Teachers Protest: ಶಿಕ್ಷಣ ಇಲಾಖೆ ವಿರುದ್ಧ ಸಮರ ಸಾರಿದ ಶಿಕ್ಷಕರು; ಇಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ - Vistara News

ಬೆಂಗಳೂರು

Teachers Protest: ಶಿಕ್ಷಣ ಇಲಾಖೆ ವಿರುದ್ಧ ಸಮರ ಸಾರಿದ ಶಿಕ್ಷಕರು; ಇಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ

Teachers Protest: ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 48 ಸಾವಿರ ಶಾಲೆಗಳು ನಾಳೆ ಬಂದ್ ಆಗಲಿವೆ. ಶಾಲೆಗಳಿಗೆ ಸಾಮೂಹಿಕ ಗೈರು ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕರು ನಿರ್ಧಾರ ಮಾಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿಕ್ಷಣ ಇಲಾಖೆ ವಿರುದ್ಧ ಶಿಕ್ಷಕರು ಸಮರ ಸಾರಿದ್ದಾರೆ (Teachers Protest). ಜುಲೈ 12ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ರಾಜ್ಯದ ವಿವಿಧೆಡೆಯಿಂದ ಸುಮಾರು 1.30 ಲಕ್ಷ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 48 ಸಾವಿರ ಶಾಲೆಗಳು ನಾಳೆ ಬಂದ್ ಆಗಲಿವೆ. ಶಾಲೆಗಳಿಗೆ ಸಾಮೂಹಿಕ ಗೈರು ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕರು ನಿರ್ಧಾರ ಮಾಡಿದ್ದಾರೆ. ಶಿಕ್ಷಕರು ಅನೇಕ ಬಾರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲಾಖೆ ಮೊರೆ ಹೋಗಿದ್ದರು. ಸಚಿವರ ಭೇಟಿಯಿಂದಲೂ ನಿರಾಸೆ ಉಂಟಾಗಿದ್ದರಿಂದ ಬೀದಿಗಿಳಿಯಲು ನಿರ್ಧರಿಸಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಿಂದ ಶಿಕ್ಷಕರು ಭಾಗಿಯಾಗುವ ಸಾಧ್ಯತೆ ಇದೆ. ಇತ್ತ ನಾಳೆ ಶಾಲೆ ಬಂದ್ ಮಾಡದಂತೆ ಇಲಾಖೆಯಿಂದ ಆದೇಶ ಹೊರಡಿಸಿದೆ. ಆದರೆ, ಇಲಾಖೆಯ ಆದೇಶಕ್ಕೂ ಕ್ಯಾರೆ ಎನ್ನದೇ 1.30 ಲಕ್ಷ ಶಿಕ್ಷಕರಿಂದ ಪ್ರತಿಭಟನ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ನಾಗೇಶ್ ಮಾಹಿತಿ ನೀಡಿದ್ದಾರೆ.

ಸರ್ಕಾರ 2017ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 8ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5 ಕ್ಕೆ ಹಿಂಬಡ್ತಿ ನೀಡಿದೆ. ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. 2016ಕ್ಕಿಂತ ಮುಂಚೆ ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ಈ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು ಎಂಬುದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯಾಗಿದೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮುಂಚೆ ನೇಮಕಾತಿ ಹೊಂದಿದ ಹಾಗೂ ಬಿ.ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು, ತದನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು, ಈ ಮುಂಚಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಶಿಕ್ಷಕರು ಒತ್ತಾಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Tungabhadra Dam: ರಾಜ್ಯದ ಎಲ್ಲ ಡ್ಯಾಮ್‌ಗಳ ಪರಿಶೀಲನೆಗೆ ಸಮಿತಿ ರಚನೆ: ಡಿ.ಕೆ. ಶಿವಕುಮಾರ್ ಸುಳಿವು

Tungabhadra Dam: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಘಟನೆಯ ಬಳಿಕ ಸರ್ಕಾರ ಎಚ್ಚೆತ್ತುಕೊಂಡಿದ್ದು, ಎಲ್ಲ ಡ್ಯಾಮ್‌ಗಳ ಗುಣಮಟ್ಟ ಪರಿಶೀಲನೆಗೆ ಸಮಿತಿ ರಚಿಸಲು ಮುಂದಾಗಿದೆ. ತಜ್ಞರ ನೇತೃತ್ವದಲ್ಲಿ ಪರಿಶೀಲನೆ ಸಮಿತಿ ರಚಿಸುವ ಸಾಧ್ಯತೆ ಇದೆ. ಸಮಿತಿ ಅಣೆಕಟ್ಟುಗಳನ್ನು ಪರಿಶೀಲಿಸಿದ ಬಳಿಕ ವಾಸ್ತವಾಂಶವನ್ನು ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುಳಿವು ನೀಡಿದ್ದಾರೆ.

VISTARANEWS.COM


on

Tungabhadra Dam
Koo

ಬೆಂಗಳೂರು: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು, ಅಪಾರ ಪ್ರಮಾಣದ ನೀರು ವ್ಯರ್ಥವಾಗುತ್ತಿದೆ. ಜತೆಗೆ ನದಿಪಾತ್ರಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಇದೀಗ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಎಲ್ಲ ಡ್ಯಾಮ್‌ಗಳ ಗುಣಮಟ್ಟ ಪರಿಶೀಲನೆಗೆ ಸಮಿತಿ ರಚಿಸಲು ಮುಂದಾಗಿದೆ. ತಜ್ಞರ ನೇತೃತ್ವದಲ್ಲಿ ಪರಿಶೀಲನೆ ಸಮಿತಿ ರಚಿಸುವ ಸಾಧ್ಯತೆ ಇದೆ. ಸಮಿತಿ ಅಣೆಕಟ್ಟುಗಳನ್ನು ಪರಿಶೀಲಿಸಿದ ಬಳಿಕ ವಾಸ್ತವಾಂಶವನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಈ ಬಗ್ಗೆ ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸುಳಿವು ನೀಡಿದ್ದಾರೆ.

ಕ್ರಮ ಕೈಗೊಂಡಿದ್ದೇವೆ

ತುಂಗಭದ್ರಾ ಡ್ಯಾಮ್‌ಗೆ ಭೇಟಿ ನೀಡಿರುವ ವಿಚಾರದ ಬಗ್ಗೆ ಮಾತನಾಡಿದ ಡಿಕೆಶಿ, ʼʼಟಿಬಿ ಡ್ಯಾಮ್‌ಗೆ ಹೋಗಿದ್ದೆ. ದುರಸ್ತಿಗೆ ಕ್ರಮ ತೆಗೆದುಕೊಂಡಿದ್ದೇವೆ. ಜತೆಗೆ ಯಾರಿಗೂ ತೊಂದರೆಯಾಗದಂತೆ ತಕ್ಷಣವೇ ಮುಂಜಾಗ್ರತೆ ವಹಿಸಲಾಗಿದೆ. ದುರಸ್ತಿ ಕುರಿತು ಎಲ್ಲ ಗುತ್ತಿಗೆದಾರರ ಜತೆ ಮಾತಾಡಿದ್ದೇನೆ. ಡ್ಯಾಮ್‌ನ ಸ್ಕೆಚ್‌ ಕಳಿಸಿಕೊಟ್ಟಿದ್ದೇವೆ. ನಾಲ್ಕೈದು ದಿನಗಳಲ್ಲಿ ದುರಸ್ತಿಯಾಗಲಿದೆʼʼ ಎಂದು ತಿಳಿಸಿದ್ದಾರೆ.

ನಾಳೆ ಸಿಎಂ ಭೇಟಿ

ʼʼನಾಳೆ (ಆಗಸ್ಟ್‌ 13) ಮುಖ್ಯಮಂತ್ರಿ ಸಿದ್ದರಾಮಯ್ಯ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ. ನಾನು ತಂತ್ರಜ್ಞರೊಂದಿಗೆ ಚರ್ಚೆ ನಡೆಸಿದ್ದೇನೆ. ಯಾರು ಗಾಬರಿ ಪಡಬೇಕಿಲ್ಲ. ಬಹಳ ಅಪಾಯಕಾರಿ ಪರಿಸ್ಥಿತಿ ಇದ್ದಿದ್ದಂತೂ ಹೌದು. ಡ್ಯಾಂನ 70 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹೀಗೆ ಆಗಿದೆ. ಸುರಕ್ಷತೆ ಖಚಿತಪಡಿಸಲು ಒಂದು ತಂಡ ಮಾಡಿ ಎಲ್ಲ ಡ್ಯಾಮ್‌ಗಳಿಗೂ ಕಳಿಸಿ ಕೊಡುತ್ತಿದ್ದೇವೆʼʼ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ʼʼನಾಳೆ ಅಥವಾ ನಾಡಿದ್ದು ತಜ್ಞರ ಸಮಿತಿ ರಚನೆ ಮಾಡುತ್ತೇವೆ. ಆ ಸಮಿತಿ ಎಲ್ಲ ಡ್ಯಾಮ್‌ಗಳಿಗೂ ತೆರಳಲಿದೆ. ಬೇರೆ ಕಡೆ ಎರಡೆರಡು ಆಯ್ಕೆ ಇದೆ. ಅಂದರೆ ಒಂದು ಗೇಟ್‌ಗೆ ಎರಡು ಲಿಂಕ್ ಇದ್ದಾವೆ. ಆದರೆ ತುಂಗಭದ್ರಾ ಡ್ಯಾಮ್‌ನಲ್ಲಿ ಒಂದೇ ಚೈನ್‌ ಇತ್ತು. ಅದು ಈಗ ತುಂಡಾಗಿದೆ. 55-60 ಟಿಎಂಸಿ ನೀರು ಉಳಿಸುವ ವ್ಯವಸ್ಥೆ ಆಗುತ್ತಿದೆʼʼ ಎಂದು ಅವರು ವಿವರಿಸಿದ್ದಾರೆ.

ಆರೋಪಕ್ಕೆ ತಿರುಗೇಟು

ಡ್ಯಾಮ್‌ಗೆ ಸರ್ಕಾರ ತಕ್ಕ ಮಾನ್ಯತೆ ಕೊಟ್ಟಿಲ್ಲ ಎಂಬ ಆರೋಪಕ್ಕೆ ಉತ್ತರಿಸಿದ ಡಿಕೆಶಿ, ʼʼಆರೋಪಗಳನ್ನು ಮಾಡುವವರು,
ರಾಜಕೀಯ ಮಾತನಾಡುವವರು ಏನು ಬೇಕಾದರೂ ಹೇಳಲಿ. ವಾಸ್ತವಾಂಶ ಬೇರೆಯದೇ ಇದೆ. ತುಂಗಭದ್ರಾ ಡ್ಯಾಮ್ ಅನ್ನು ಸರ್ಕಾರ ಕಂಟ್ರೋಲ್ ಮಾಡಲ್ಲ. ಅದಕ್ಕೆ ಆದ ಸಮಿತಿ ಇದೆ. ನಾವು ಅದರ ಸದಸ್ಯರು ಅಷ್ಟೇʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

ಇನ್ನು ಇದೇ ವೇಳೆ ಬೆಂಗಳೂರು ನಗರದಲ್ಲಿ ಸುರಿದ ಭಾರಿ ಮಳೆಯಿಂದ ಆದ ಅವಾಂತರಗಳ ಬಗ್ಗೆ ಮಾತನಾಡಿದ ಅವರು, ʼʼಬೆಂಗಳೂರಿನಲ್ಲಿರುವ ಯಾವ ಕೆರೆಗಳೂ ತುಂಬಿಲ್ಲ. ಹೀಗಾಗಿ ಮಳೆ ಬರಬೇಕು. ಅಪಾರ್ಟ್‌ಮೆಂಟ್​​ಗಳಿಗೆ ನೀರು ನುಗ್ಗಿದ್ದರೆ ಅದನ್ನು ಸರಿ ಮಾಡೋಣ. ಕನಕಪುರ, ಮಾಗಡಿ, ಚನ್ನಪಟ್ಟಣ, ತುಮಕೂರು, ಕುಣಿಗಲ್, ಕೋಲಾರ ಸುತ್ತಮುತ್ತಲೂ ಮಳೆ ಬಂದಿಲ್ಲ. ಹೀಗಾಗಿ ಉತ್ತಮ ಮಳೆಯಾಗಬೇಕುʼʼ ಎಂದು ಹೇಳಿದ್ದಾರೆ.

ರೈತರ ಒಂದು ಬೆಳೆಗಾದರೂ ನೀರನ್ನು ಉಳಿಸುತ್ತೇವೆ

ಭಾನುವಾರ ಜಲಾಶಯಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದ್ದ ಡಿಕೆಶಿ, ʼʼಜಲಾಶಯದಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಿದೆ. ಗೇಟನ್ನು ಮತ್ತೆ ಹಾಕಬೇಕೆಂದರೆ ಒತ್ತಡ ಕಡಿಮೆ ಮಾಡಬೇಕಿದೆ. ಜಲಾಶಯದಲ್ಲಿ 150 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು. ಜಲಾಶಯಕ್ಕೆ ಒಳಹರಿವು 28,000 ಕ್ಯೂಸೆಕ್ ಇದೇ. ಕನಿಷ್ಠ ನಮ್ಮ ರೈತರಿಗೆ ಒಂದು ಬೆಳಗಾದರೂ ಒದಗಿಸುವಷ್ಟು ನೀರನ್ನು ಉಳಿಸಿಕೊಳ್ಳುತ್ತೇವೆ. ನಮ್ಮ ರೈತರು ಆತಂಕ ಪಡಬೇಕಾಗಿಲ್ಲ. ಸರ್ಕಾರ ನಿಮ್ಮ ಜತೆಗಿದೆ” ಎಂದು ತಿಳಿಸಿದ್ದರು.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

Karnataka Rain : ನಿನ್ನೆ ಮಧ್ಯರಾತ್ರಿ ಸುರಿದ ಮಳೆಗೆ (Bengaluru Rain) ನಾನಾ ಅವಾಂತರವೇ ಸೃಷ್ಟಿಯಾಗಿದೆ. ಬೆಂಗಳೂರು-ಹೊಸೂರು ಹೆದ್ದಾರಿ ಹಾಗೂ ಡ್ಯಾಡಿಸ್ ಗಾರ್ಡನ್ ಲೇಔಟ್‌ ಜಲಾವೃತಗೊಂಡಿದೆ. ಜನರು ಹೊರಬರಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ.

VISTARANEWS.COM


on

By

karnataka rain weather forecast
Koo

ಬೆಂಗಳೂರು ಗ್ರಾಮಾಂತರ: ಕಳೆದ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ (Karnataka Rain) ಬೆಂಗಳೂರು ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ನಾಲ್ಕೈದು ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಗೆ (Bengaluru rain) ಬೆಂಗಳೂರು-ಹೊಸೂರು ಹೈವೆ ಕೆರೆಯಂತಾಗಿದೆ. ಬೆಂಗಳೂರು ಹೊಸೂರು ಹೆದ್ದಾರಿಯ ಸಿಲ್ಕ್ ಬೊರ್ಡ್ ಜಂಕ್ಷನ್‌ನಲ್ಲಿ ಮೂರ್ನಾಲ್ಕು ಅಡಿಗಳಷ್ಟು ಮಳೆ ನೀರು ನಿಂತಿದೆ.

ಜಲಾವೃತಗೊಂಡ ರಸ್ತೆಯ ನೀರಿನಲ್ಲಿಯೇ ಜನರು ಓಡಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹೆದ್ದಾರಿ ಜಲಾವೃತದಿಂದಾಗಿ ಸೋಮವಾರ ಬೆಳಗ್ಗೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್‌ ಜತೆಗೆ ಕೆರೆಯಂತಾದ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು. ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಹೊರಹೋಗಲು ಯಾವುದೇ ಸೂಕ್ತ ವ್ಯವಸ್ಥೆ ಇಲ್ಲ. ಇದರಿಂದಾಗಿ ರಸ್ತೆಯೆಲ್ಲ ಜಲಾವೃತಗೊಂಡಿತ್ತು. ಪ್ರತಿ ಬಾರಿ ಮಳೆ ಬಂದಾಗ ಸಿಲ್ಕ್ ಬೋರ್ಡ್ ಜಂಕ್ಷನ್‌ ಜಲಾವೃತಗೊಳ್ಳಲಿದೆ.

ಇದನ್ನೂ ಓದಿ: Heavy Rain: ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಅಬ್ಬರ; ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ

ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಭಾರಿ ಮಳೆಗೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಹೆಬ್ಬಗೋಡಿಯ ಕಮ್ಮಸಂದ್ರದ ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ ಹಾಕಲಾಗಿದೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಬಡಾವಣೆ ಸಂಪೂರ್ಣ ಜಲಾವೃತಗೊಂಡಿದೆ. ಮನೆಯಿಂದ ಹೊರಬರಲಾಗದೆ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಮನೆಗಳಿರುವ ಡ್ಯಾಡಿಸ್ ಗಾರ್ಡನ್ ಲೇಔಟ್‌ನಲ್ಲಿ ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ಅವಾಂತರವೇ ಸೃಷ್ಟಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ತಂಡ ದೌಡಾಯಿಸಿದ್ದು, ನಿವಾಸಿಗಳನ್ನು ಸುರಕ್ಷಿತವಾಗಿ ಮನೆಯಿಂದ ಹೊರಕರೆತರುತ್ತಿದ್ದಾರೆ.

ಕಾಲೇಜು ಆವರಣದಲ್ಲಿ ಜಲಾವೃತ

ಬೆಂಗಳೂರು ಗ್ರಾಮಾಂತರದ ಆನೇಕಲ್ ಪಟ್ಟಣದ ಗೋಪಾಲರಾಜು ಕಾಲೇಜು ಜಲಾವೃತಗೊಂಡಿದೆ. ಬೆಳಗಿನ ಜಾವ ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಪರದಾಡಿದರು. ಆನೇಕಲ್ ಪಟ್ಟಣದ ಏಕೈಕ ಸರ್ಕಾರಿ ಡಿಗ್ರಿ ಕಾಲೇಜು ಇದಾಗಿದ್ದು, ಮಳೆಗೆ ಕಾಲೇಜು ಒಳಗಡೆ ಹೋಗಲು ಆಗದೆ ವಿದ್ಯಾರ್ಥಿಗಳು ಸಂಕಷ್ಟ ಎದುರಿಸಿದ್ದರು. ಪುರಸಭೆ ಅಧಿಕಾರಿಗಳು ಸರಿಪಡಿಸಿ ಕೊಡುವಂತೆ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder Case: ಅಟ್ಟಾಡಿಸಿಕೊಂಡು ಹೋಗಿ ಮಾರಾಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್‌ನ ಕೊಲೆ

Murder Case: ನಟೋರಿಯಸ್ ರೌಡಿ ಶೀಟರ್ ಉಳ್ಳಾಲದ ಕಡಪ್ಪಾರ‌ ಸಮೀರ್‌ನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿದೆ. ಟಾರ್ಗೆಟ್‌ ಇಲ್ಯಾಸ್‌ ಕೊಲೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸಮೀರ್‌ನನ್ನು ದುಷ್ಕರ್ಮಿಗಳ ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ಮಾಡಿದೆ. ಈ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಎಂಬಲ್ಲಿ ಭಾನುವಾರ (ಆಗಸ್ಟ್‌ 11) ರಾತ್ರಿ ನಡೆದಿದೆ.

VISTARANEWS.COM


on

Murder Case
Koo

ಮಂಗಳೂರು: ನಟೋರಿಯಸ್ ರೌಡಿ ಶೀಟರ್ ಉಳ್ಳಾಲದ ಕಡಪ್ಪಾರ‌ ಸಮೀರ್‌ನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿದ್ದು, ದುಷ್ಕರ್ಮಿಗಳ ಅಟ್ಟಹಾಸಕ್ಕೆ ಮಂಗಳೂರು ಬೆಚ್ಚಿ ಬಿದ್ದಿದೆ. ಟಾರ್ಗೆಟ್‌ ಇಲ್ಯಾಸ್‌ ಕೊಲೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸಮೀರ್‌ನನ್ನು ದುಷ್ಕರ್ಮಿಗಳ ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ಮಾಡಿದೆ. ಈ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಎಂಬಲ್ಲಿ ಭಾನುವಾರ (ಆಗಸ್ಟ್‌ 11) ರಾತ್ರಿ ನಡೆದಿದೆ (Murder Case).

ಸಮೀರ್‌ ಕಾರಿನಲ್ಲಿ ತಾಯಿ ಮತ್ತು ಕುಟುಂಬದ ಸದಸ್ಯರೊಂದಿಗೆ ಕಲ್ಲಾಪುವಿನ ರೆಸ್ಟೋರೆಂಟ್‌ಗೆ ಊಟಕ್ಕೆಂದು ಆಗಮಿಸಿದ್ದ ವೇಳೆ ತಂಡ ದಾಳಿ ನಡೆಸಿದೆ. ಸಮೀರ್‌ನನ್ನು ಹಿಂಬಾಲಿಸಿಕೊಂಡು ಬಂದಿದ್ದ ತಂಡ ತಲವಾರಿನಿಂದ ಹಲ್ಲೆ ನಡೆಸಿದೆ. ಕೂಡಲೇ ತಪ್ಪಿಸಿಕೊಳ್ಳಲು ಸಮೀರ್‌ ಸ್ಥಳದಿಂದ ಓಡಿದ್ದಾನೆ. ಇಷ್ಟಕ್ಕೆ ಸುಮ್ಮನಾಗದ ಐವರಿದ್ದ ತಂಡ ಆತನನ್ನು ಅಟ್ಟಾಡಿಸಿಕೊಂಡು ಹೋಗಿ ತಲವಾರಿನಿಂದ ಕಡಿದು ಹತ್ಯೆ ಮಾಡಿದೆ. ಸದ್ಯ ಹತ್ಯೆ ನಡೆಸಿ ಪರಾರಿಯಾದ ಗುಂಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇತ್ತೀಚೆಗೆ ಮಂಗಳೂರು ಕಾರಾಗೃಹದಲ್ಲಿ ಸಮೀರ್‌ ಮೇಲೆ ಸಹ ಕೈದಿಗಳಿಂದ ದಾಳಿ‌ ನಡೆದಿತ್ತು. ವಾರದ ಹಿಂದೆ ಜಾಮೀನಿನ ಮೇಲೆ ಜೈಲಿನಿಂದ ಆತ ಹೊರ ಬಂದಿದ್ದ. ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. 2018ರಲ್ಲಿ ರೌಡಿಶೀಟರ್‌ ಟಾರ್ಗೆಟ್‌ ಇಲ್ಯಾಸ್‌ನನ್ನು ಜೆಪ್ಪುವಿನ ಫ್ಲ್ಯಾಟ್‌ ಒಂದರಲ್ಲಿ ಇದೀಗ ಕೊಲೆಯಾದ ಶಮೀರ್‌, ದಾವುದ್‌, ರಿಯಾಝ್‌, ಅಬ್ದುಲ್‌ ಖಾದರ್‌, ಉಮ್ಮರ್‌ ನವಾಫ್‌, ಮೊಹಮ್ಮದ್‌ ನಝೀರ್‌, ನೌಷಾದ್‌, ಅಝ್ಗರ್‌ ಆಲಿ ಮತ್ತಿತರರು ಸೇರಿ ಹತ್ಯೆ ನಡೆಸಿದ್ದರು.

ಬೋರ್‌ವೆಲ್ ಲಾರಿ ಚಾಲಕನೊಬ್ಬನ ಶವ ಪತ್ತೆ

ಬೆಂಗಳೂರು: ಪರಪ್ಪನ ಅಗ್ರಹಾರದ ಎಸಿಇಎಸ್ ಲೇಔಟ್‌ನಲ್ಲಿ ಭಾನುವಾರ ರಾತ್ರಿ ಬೋರ್‌ವೆಲ್ ಲಾರಿ ಚಾಲಕನೊಬ್ಬನ ಶವ ಪತ್ತೆಯಾಗಿದೆ. ತಮಿಳುನಾಡಿನ ತಿರ್ಚಿ ಮೂಲದ ಸುರೇಶ್ (43) ಕೊಲೆಯಾದ ವ್ಯಕ್ತಿ.

ನಿನ್ನೆ ರಾತ್ರಿ ಸುಮಾರು 11:30ರ ಸುಮಾರಿಗೆ ನಡೆದಿರುವ ಹತ್ಯೆ ಶಂಕೆ ವ್ಯಕ್ತವಾಗಿದೆ. ಮುಖದ ಮೇಲೆ ಕಬ್ಬಿಣದ ರಾಡ್ ನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎನ್ನುವುದು ತಿಳಿದು ಬಂದಿಲ್ಲ ಈ ಬಗ್ಗೆ ತನಿಖೆ ನಡೆಯುತ್ತಿದೆ. ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆಟ್ರೋಲ್ ಕಳ್ಳರ ಹಾವಳಿ

ಆನೇಕಲ್: ಪಟ್ಟಣದಲ್ಲಿ ಪೆಟ್ರೋಲ್ ‌ಕಳ್ಳರ ಹಾವಳಿ ಆರಂಭವಾಗಿದೆ. ಬೆಂಗಳೂರು ಹೊರವಲಯದ ಆನೇಕಲ್‌ ಪಟ್ಟಣದ ವಿವರ್ಸ್ ಕಾಲೋನಿಯಲ್ಲಿ ಭಾನುವಾರ ರಾತ್ರಿ 15 ಬೈಕ್‌ಗಳಿಂದ ಪೆಟ್ರೋಲ್ ಕಳವು ಮಾಡಲಾಗಿದೆ. ಮನೆಗಳ ಬಳಿ ನಿಲ್ಲಿಸಿದ್ದ ಬೈಕ್‌ಗಳಿಂದ ಕಳ್ಳ ಪೆಟ್ರೋಲ್ ಕದ್ದಿದ್ದಾನೆ. ಇಡೀ ಏರಿಯಾ ಸುತ್ತಾಡಿ ಸಿಕ್ಕ ಸಿಕ್ಕ ಗಾಡಿಗಳಿಂದ ಪೆಟ್ರೋಲ್‌ ಎಗರಿಸಿದ್ದಾನೆ. ಪೆಟ್ರೋಲ್ ಕಳ್ಳನ ಕೈ ಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: Theft Case : ಲಡ್ಡು ಬಂದು ಬಾಯಿಗೆ ಬಿತ್ತು! ಕೀ ಸಮೇತ ಸ್ಕೂಟರ್‌ ಬಿಟ್ಟು ಹೋದ ಮಹಿಳೆ, ಕ್ಷಣಾರ್ಧದಲ್ಲೇ ಎಗರಿಸಿದ ಚಾಲಾಕಿ

Continue Reading

ಮಳೆ

Heavy Rain: ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಅಬ್ಬರ; ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ

Heavy Rain: ಬೆಂಗಳೂರಿನಲ್ಲಿ ಬಿಡುವು ಪಡೆದುಕೊಂಡಿದ್ದ ಮಳೆ ಮತ್ತೆ ಅಬ್ಬರಿಸತೊಡಗಿದೆ. ಮಧ್ಯರಾತ್ರಿಯಿಂದಲೇ ಧಾರಾಕಾರವಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಮೆಜೆಸ್ಟಿಕ್​​, ಓಕಳಿಪುರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್​​ ಸರ್ಕಲ್, ಟೌನ್​ಹಾಲ್, ಕೆ.ಆರ್​.ಮಾರ್ಕೆಟ್​​, ತ್ಯಾಗರಾಜನಗರ, ಜಯನಗರ, ಹನುಮಂತನಗರ, ಶ್ರೀನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್​​, ಹೆಬ್ಬಾಳ, ಯಲಹಂಕ, ಕೆ.ಆರ್​.ಪುರಂ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ರಸ್ತೆಗಳು ಜಲಾವೃತಗೊಂಡಿವೆ.

VISTARANEWS.COM


on

Heavy Rain
Koo

ಬೆಂಗಳೂರು: ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವು ಪಡೆದುಕೊಂಡಿದ್ದ ಮಳೆ ಮತ್ತೆ ಅಬ್ಬರಿಸತೊಡಗಿದೆ. ಮಧ್ಯರಾತ್ರಿಯಿಂದಲೇ ಧಾರಾಕಾರವಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ (Heavy Rain).

ಮೆಜೆಸ್ಟಿಕ್​​, ಓಕಳಿಪುರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್​​ ಸರ್ಕಲ್, ಟೌನ್​ಹಾಲ್, ಕೆ.ಆರ್​.ಮಾರ್ಕೆಟ್​​, ತ್ಯಾಗರಾಜನಗರ, ಜಯನಗರ, ಹನುಮಂತನಗರ, ಶ್ರೀನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್​​, ಹೆಬ್ಬಾಳ, ಯಲಹಂಕ, ಕೆ.ಆರ್​.ಪುರಂ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ರಸ್ತೆಗಳು ಜಲಾವೃತಗೊಂಡಿವೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ವಾಹನ ಸವಾರರು ಪರದಾಡುವಂತಾಗಿದೆ.

ಮ್ಯಾನ್ ಹೋಲ್‌ಗೆ ಬಿದ್ದ ಕಾರುಗಳು

ಸಿಲ್ಕ್ ಬೋರ್ಡ್ ಸಿಗ್ನಲ್ ಬಳಿ ಭಾರಿ ಮಳೆಯಿಂದ ತೆರೆದುಕೊಂಡಿದ್ದ ಮ್ಯಾನ್‌ಹೋಲ್‌ಗೆ ಎರಡು ಕಾರುಗಳು ಬಿದ್ದಿದ್ದು, ಸ್ವಲ್ಪದರಲ್ಲಿ ಭಾರಿ ಅನಾಹುತ ತಪ್ಪಿದೆ. ಕಾರಿನಲ್ಲಿ ಇರಬ್ಬರನ್ನು ರಕ್ಷಿಸಲಾಗಿದೆ.

ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ನೀರು ತುಂಬಿದ ಹಿನ್ನೆಲೆಯಲ್ಲಿ ವಾಹನ ಸವಾರರ ಪರದಾಡಿದರು. ನೀರಿನಲ್ಲಿ ಆ್ಯಂಬುಲೆನ್ಸ್, ವ್ಯಾನ್, ಆಟೋ ಸಿಲುಕಿ ಹಾಕಿಕೊಂಡಿತ್ತು. ದಿಢೀರ್ ‌ಮಳೆಯಿಂದಾಗಿ‌ ನಗರದ ಬಹುತೇಕ ರಸ್ತೆಗಳು ಕೆರೆಯಾಗಿ ಪರಿವರ್ತನೆಯಾಗಿದೆ. ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ‌ಮುಂಭಾಗದ ರಸ್ತೆ ‌ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದ್ದು, ಸುಮಾರು ‌ಎರಡು ಅಡಿಯಷ್ಟು ನೀರು ನಿಂತಿದೆ. ನೀರು ಸರಾಗವಾಗಿ ಹರಿದು ಹೋಗದೇ ವಾಹನ ಸವಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಜಲ ದಿಗ್ಬಂಧನ

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ನೀರು ತುಂಬಿ ದಿಗ್ಬಂಧನ ಪರಿಸ್ಥಿತಿ ಏರ್ಪಟ್ಟಿದೆ. ಚಿಕ್ಕಪೇಟೆ, ಸುಲ್ತಾನ್ ಪೇಟೆ, ಬಳೇ ಪೇಟೆ, ಕಾಟನ್ ಪೇಟೆ ರಸ್ತೆ ಸಂಪೂರ್ಣ ಜಾಲವೃತವಾಗಿದೆ. ಸುಲ್ತಾನ್ ಪೇಟೆ ಮುಖ್ಯ ರಸ್ತೆ ಸಂಪೂರ್ಣ ರಸ್ತೆ ಬಂದ್ ಆಗಿದ್ದು, ಅಂಗಡಿ ಮುಗ್ಗಟ್ಟುಗಳಿಗೆ ನೀರು ನುಗ್ಗಿದೆ. ಪುಲಕೇಶಿ‌ ನಗರದ ಎನ್.ಸಿ. ಕಾಲೋನಿಯಲ್ಲಿ ಮನೆಗಳು ಜಲಾವೃತಗೊಂಡಿವೆ. ಮೂವತ್ತು ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ.

ಮಾರತಹಳ್ಳಿ ಬಳಿ ಅಪಾರ್ಟ್‌ಮೆಂಟ್‌ನ ಬೇಸ್‌ಮೆಂಟ್‌ನ ಗೋಡೆ ಒಡೆದಿದ್ದು, ಕೂದಲೆಳೆಯ ಅಂತರದಲ್ಲಿ‌ ಮನೆ ಮಂದಿ ಪಾರಾಗಿದ್ದಾರೆ. ಇತ್ತ ಕೆ.ಆರ್​.ಮಾರ್ಕೆಟ್​ನ ರಸ್ತೆಗಳೂ ಕೆಸರಿನಿಂದ ಕೂಡಿದ್ದು, ವ್ಯಾಪಾರ ವಹಿವಾಟಿಗೆ ತೊಂದರೆ ಎದುರಾಗಿದೆ.

ಭಾರಿ ಮಳೆಯ ಮುನ್ಸೂಚನೆ

ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಯಚೂರು, ಚಿಕ್ಕಬಳ್ಳಾಪುರ, ಮೈಸೂರು ರಾಮನಗರ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಗುಡುಗು ಸಹಿತ ಮಳೆ ಬರುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Karnataka weather : ಬೆಂಗಳೂರಿಗೆ ಭಾರಿ ಮಳೆ ಎಚ್ಚರಿಕೆ; ಚಾಮರಾಜನಗರ, ರಾಮನಗರಕ್ಕೆ ಯೆಲ್ಲೋ ಅಲರ್ಟ್‌

Continue Reading
Advertisement
submarines
ದೇಶ9 mins ago

Submarines: ಎರಡು ಪರಮಾಣು ಜಲಾಂತರ್ಗಾಮಿ ನೌಕೆಗಳಿಗಾಗಿ ಕೇಂದ್ರಕ್ಕೆ ಭಾರತೀಯ ನೌಕಾಪಡೆ ಮನವಿ

Urfi Javed 'LED Display Top' On Mumbai Streets
ಬಾಲಿವುಡ್34 mins ago

Urfi Javed: ಎಲ್ಇಡಿ ಡಿಸ್ಪ್ಲೇ ಇಂದ ಮಾನ ಮುಚ್ಚಿಕೊಂಡು ಬಂದ ಉರ್ಫಿ ಜಾವೇದ್!

Tungabhadra Dam
ಬೆಂಗಳೂರು49 mins ago

Tungabhadra Dam: ರಾಜ್ಯದ ಎಲ್ಲ ಡ್ಯಾಮ್‌ಗಳ ಪರಿಶೀಲನೆಗೆ ಸಮಿತಿ ರಚನೆ: ಡಿ.ಕೆ. ಶಿವಕುಮಾರ್ ಸುಳಿವು

Self Harming
ಚಿತ್ರದುರ್ಗ1 hour ago

Self Harming : ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ

Pushpa 2 Leela offered to do special song in Pushpa 2
ಟಾಲಿವುಡ್2 hours ago

Pushpa 2: ಪುಷ್ಪ 2 ಚಿತ್ರದಲ್ಲಿ ಇರಲಿದ್ದಾರಂತೆ ಈ ಕನ್ನಡದ ಹೀರೋಯಿನ್​?

Hindenburg Report
ದೇಶ2 hours ago

Hindenburg Report: ಷೇರು ಮಾರುಕಟ್ಟೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿಗೆ ಬಿಜೆಪಿ ಟಾಂಗ್‌

karnataka rain weather forecast
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

Gold Rate Today
ಚಿನ್ನದ ದರ2 hours ago

Gold Rate Today: ಮತ್ತೆ ಹೆಚ್ಚಾಯ್ತು ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Tungabhadra Dam
ಕರ್ನಾಟಕ2 hours ago

Tungabhadra Dam: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ; ನದಿಪಾತ್ರದ ಗ್ರಾಮಗಳಲ್ಲಿ ಡಂಗುರ ಸಾರಿ ಎಚ್ಚರಿಕೆ

Physical abuse
ದೇಶ3 hours ago

Physical Abuse: 70 ವರ್ಷದ ಮುಸ್ಲಿಂ ಧರ್ಮ ಗುರು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡುವಾಗ ಸಿಕ್ಕಿ ಬಿದ್ದ! ವಿಡಿಯೊ ಇದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌