Hindenburg Report: ಷೇರು ಮಾರುಕಟ್ಟೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿಗೆ ಬಿಜೆಪಿ ಟಾಂಗ್‌ - Vistara News

ದೇಶ

Hindenburg Report: ಷೇರು ಮಾರುಕಟ್ಟೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿಗೆ ಬಿಜೆಪಿ ಟಾಂಗ್‌

Hindenburg Report: ಪ್ರತಿಪಕ್ಷದ ನಾಯಕ ಈಗ ಬಹಿರಂಗವಾಗಿ ಭಾರತೀಯ ಷೇರು ಮಾರುಕಟ್ಟೆಯ ನೈಜತೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತಿದ್ದಾರೆ. ನಮ್ಮ ಆರ್ಥಿಕತೆಯ ಮೇಲಿನ ವಿಶ್ವಾಸವನ್ನು ಹಾಳುಮಾಡುವ ಈ ಅಬ್ಬರದ ಪ್ರಯತ್ನವು ರಾಹುಲ್ ಗಾಂಧಿಯವರ ನಿಜವಾದ ಉದ್ದೇಶವನ್ನು ಬಹಿರಂಗಪಡಿಸುತ್ತದೆ, ಇದು ಭಾರತದ ವಿನಾಶವಲ್ಲದೆ ಬೇರೇನೂ ಅಲ್ಲ ಎಂದು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಪೋಸ್ಟ್ ಮಾಡಿದ್ದಾರೆ.

VISTARANEWS.COM


on

Hindenburg Report
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸೆಬಿ ಅಧ್ಯಕ್ಷೆ(SEBI President) ಮಾಧಾಬಿ ಬುಚ್ ವಿರುದ್ಧ ಯುಎಸ್ ಶಾರ್ಟ್ ಸೆಲ್ಲರ್ ಹಿಂಡೆನ್​ಬರ್ಗ್​​ ರಿಸರ್ಚ್ ಮಾಡಿರುವ ಹೊಸ ವರದಿ(Hindenburg Report) ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿಕೆ ನೀಡಿರುವ ಬೆನ್ನಲ್ಲೇ ಬಿಜೆಪಿ ಕಿಡಿ ಕಾರಿದೆ. ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರತಿಪಕ್ಷದ ನಾಯಕ ಈಗ ಬಹಿರಂಗವಾಗಿ ಭಾರತೀಯ ಷೇರು ಮಾರುಕಟ್ಟೆಯ ನೈಜತೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತಿದ್ದಾರೆ. ನಮ್ಮ ಆರ್ಥಿಕತೆಯ ಮೇಲಿನ ವಿಶ್ವಾಸವನ್ನು ಹಾಳುಮಾಡುವ ಈ ಅಬ್ಬರದ ಪ್ರಯತ್ನವು ರಾಹುಲ್ ಗಾಂಧಿಯವರ ನಿಜವಾದ ಉದ್ದೇಶವನ್ನು ಬಹಿರಂಗಪಡಿಸುತ್ತದೆ, ಇದು ಭಾರತದ ವಿನಾಶವಲ್ಲದೆ ಬೇರೇನೂ ಅಲ್ಲ ಎಂದು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಪೋಸ್ಟ್ ಮಾಡಿದ್ದಾರೆ.

ಹಿಂಡೆನ್‌ಬರ್ಗ್ ಮಾಡಿರುವ ಆರೋಪಗಳಿಗೆ ಯಾವುದೇ ಆಧಾರಗಳಿಲ್ಲ ಎಂದು ಸುಪ್ರೀಂ ಕೋರ್ಟ್ ನೇಮಿಸಿದ ತಜ್ಞರ ಸಮಿತಿಯೇ ಹೇಳಿದೆ. ಜನವರಿ 3, 2024 ರಂದು, ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್, ಸೆಬಿಯಿಂದ ಯಾವುದೇ ಉದ್ದೇಶಪೂರ್ವಕ ಉಲ್ಲಂಘನೆ ಮಾಡಿಲ್ಲ ಎಂದು ಮಾಳವಿಯಾ ಹೇಳಿದ್ದಾರೆ..

ಸೆಬಿ ಅಧ್ಯಕ್ಷರು ಇನ್ನೂ ಏಕೆ ರಾಜೀನಾಮೆ ನೀಡಿಲ್ಲ ಎಂದು ದೇಶಾದ್ಯಂತದ ಹೂಡಿಕೆದಾರರು ತಿಳಿಯಲು ಬಯಸುತ್ತಾರೆ ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ. “ದೇಶಾದ್ಯಂತದ ಪ್ರಾಮಾಣಿಕ ಹೂಡಿಕೆದಾರರು ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸೆಬಿ ಅಧ್ಯಕ್ಷೆ ಮಾಧಾಬಿ ಪುರಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ? ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ ಯಾರು ಜವಾಬ್ದಾರರು. ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷರು ಅಥವಾ ಗೌತಮ್ ಅದಾನಿಯೇ? ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಸ್ವಯಂಪ್ರೇರಿತವಾಗಿ ಪರಿಶೀಲಿಸುತ್ತದೆಯೇ ಎಂದು ರಾಹುಲ್​ ಹೇಳಿದ್ದಾರೆ. “ಜೆಪಿಸಿ ತನಿಖೆಗೆ ಪ್ರಧಾನಿ ಮೋದಿ ಏಕೆ ಹೆದರುತ್ತಾರೆ ಎಂಬುದು ಸ್ಪಷ್ಟವಾಗಿದೆ. ಅದು ಸತ್ಯ ಬಹಿರಂಗಪಡಿಸಬಹುದು ಎಂಬುದು ಸ್ಪಷ್ಟವಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: Hindenburg Report : ಮೋದಿ ಹೆದರುತ್ತಿದ್ದಾರೆ; ಹಿಂಡೆನ್​ಬರ್ಗ್​ ವರದಿ ಉಲ್ಲೇಖಿಸಿ ಸೆಬಿ, ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kolkata Doctor Murder Case: ʼಬೇಕಿದ್ದರೆ ಗಲ್ಲಿಗೇರಿಸಿʼ.. ವಿಚಾರಣೆ ವೇಳೆ ವೈದ್ಯೆಯ ಹಂತಕನ ಉಡಾಫೆ ಉತ್ತರ

Kolkata Doctor Murder Case: ಹಂತಕ ರಾಯ್ ಕೋಲ್ಕತ್ತಾ ಪೊಲೀಸರೊಂದಿಗೆ ನಾಗರಿಕ ಸ್ವಯಂಸೇವಕರಾಗಿ ಕೆಲಸ ಮಾಡಿದ್ದ. ನಾಗರಿಕ ಸ್ವಯಂಸೇವಕರು ಟ್ರಾಫಿಕ್ ನಿರ್ವಹಣೆ ಮತ್ತು ವಿಪತ್ತು ಪ್ರತಿಕ್ರಿಯೆ ಸೇರಿದಂತೆ ವಿವಿಧ ರೀತಿಯ ಕೆಲಸಗಳಲ್ಲಿ ಪೊಲೀಸರಿಗೆ ಸಹಾಯ ಮಾಡಲು ನೇಮಕಗೊಂಡ ಗುತ್ತಿಗೆ ಸಿಬ್ಬಂದಿಯಾಗಿದ್ದ. 2019 ರಲ್ಲಿ ಕೋಲ್ಕತ್ತಾ ಪೊಲೀಸರ ವಿಪತ್ತು ನಿರ್ವಹಣಾ ಗುಂಪಿಗೆ ಸ್ವಯಂಸೇವಕನಾಗಿ ಸೇವೆ ಸೇರಿಕೊಂಡಿದ್ದ ಎನ್ನಲಾಗಿದೆ.

VISTARANEWS.COM


on

Kolkata Doctor Murder Case
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ(Kolkata) ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ(Kolkata Doctor Murder Case) ಮಾಡಿದ ಆರೋಪಿ ಸಂಜೋಯ್ ರಾಯ್ ಆಸ್ಪತ್ರೆಯ ಉದ್ಯೋಗಿ ಅಲ್ಲ, ಆದರೆ ಕ್ಯಾಂಪಸ್‌ನ ಕಟ್ಟಡಗಳಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಎಂಬ ಸಂಗತಿ ತನಿಖೆ ವೇಳೆ ಇದೀಗ ಬೆಳಕಿಗೆ ಬಂದಿದೆ.

ಹಂತಕ ರಾಯ್ ಕೋಲ್ಕತ್ತಾ ಪೊಲೀಸರೊಂದಿಗೆ ನಾಗರಿಕ ಸ್ವಯಂಸೇವಕರಾಗಿ ಕೆಲಸ ಮಾಡಿದ್ದ. ನಾಗರಿಕ ಸ್ವಯಂಸೇವಕರು ಟ್ರಾಫಿಕ್ ನಿರ್ವಹಣೆ ಮತ್ತು ವಿಪತ್ತು ಪ್ರತಿಕ್ರಿಯೆ ಸೇರಿದಂತೆ ವಿವಿಧ ರೀತಿಯ ಕೆಲಸಗಳಲ್ಲಿ ಪೊಲೀಸರಿಗೆ ಸಹಾಯ ಮಾಡಲು ನೇಮಕಗೊಂಡ ಗುತ್ತಿಗೆ ಸಿಬ್ಬಂದಿಯಾಗಿದ್ದ. 2019 ರಲ್ಲಿ ಕೋಲ್ಕತ್ತಾ ಪೊಲೀಸರ ವಿಪತ್ತು ನಿರ್ವಹಣಾ ಗುಂಪಿಗೆ ಸ್ವಯಂಸೇವಕನಾಗಿ ಸೇವೆ ಸೇರಿಕೊಂಡಿದ್ದ ಎನ್ನಲಾಗಿದೆ.

ನಂತರ ಪೊಲೀಸ್ ಕಲ್ಯಾಣ ವಿಭಾಗಕ್ಕೆ ವರ್ಗಾವಣೆಗೊಂಡಿದ್ದ. ಬಳಿಕ ಆತ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪೊಲೀಸ್ ಹೊರಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಹೀಗಾಗಿ ಆ ಎಲ್ಲಾ ವಿಭಾಗಗಳಿಗೆ ಪ್ರವೇಶಕ್ಕೆ ಅನುಮತಿ ಆತನಿಗಿತ್ತು. ಇನ್ನು ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ರೋಗಿಗಳಿಂದ ಹೆಚ್ಚು ಹಣ ಪಡೆದು ಅದನ್ನು ನೀಡುವುದು ಹೀಗೆ ಹಲವು ದಂಧೆಗಳಲ್ಲಿ ಆತ ಭಾಗಿಯಾಗಿದ್ದ ಎನ್ನಲಾಗಿದೆ.

ಪಶ್ಚಾತ್ತಾಪ ಇಲ್ಲ, ಬೇಕಿದ್ದರೆ ಗಲ್ಲಿಗೇರಿಸಿ

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಪೊಲೀಸರು ಅವರನ್ನು ಪ್ರಶ್ನಿಸಲು ಪ್ರಾರಂಭಿಸಿದ ಕೂಡಲೇ ರಾಯ್ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಆತನಿಗೆ ಯಾವುದೇ ಪಶ್ಚಾತ್ತಾಪ ಇಲ್ಲ. ಅಲ್ಲದೇ ನೀವು ಬಯಸಿದರೆ ನನ್ನನ್ನು ಗಲ್ಲಿಗೇರಿಸಿ” ಎಂದು ಅಸಡ್ಡೆಯಿಂದ ಉತ್ತರ ಕೊಟ್ಟಿದ್ದಾನೆ. ಇನ್ನು ಆತನ ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ವಿಡಿಯೋಗಳಿಂದ ತುಂಬಿತ್ತು ಎಂದು ತಿಳಿದುಬಂದಿದೆ.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.

ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ(West Bengal)ದ ರಾಜಧಾನಿ ಕೋಲ್ಕತಾದಲ್ಲಿ ದೇಶವೇ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, 31 ವರ್ಷದ ಮಹಿಳಾ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಇಂದು ದೆಹಲಿ ಏಮ್ಸ್‌(AIIMS) ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್(FORDA) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.

ಇದನ್ನೂ ಓದಿ: ಕಣ್ಣು, ಬಾಯಿಯಿಂದ ರಕ್ತಸ್ರಾವ, ಕುತ್ತಿಗೆ ಮೂಳೆ ತುಂಡು: ಹತ್ಯೆಯಾದ ಟ್ರೈನಿ ವೈದ್ಯೆಯ ಮರಣೋತ್ತರ ಪರೀಕ್ಷಾ ವರದಿಯಲ್ಲಿದೆ ಬೆಚ್ಚಿ ಬೀಳಿಸುವ ಸತ್ಯ

Continue Reading

ದೇಶ

Independence Day 2024: ಮನೆಮನೆಯಲ್ಲೂ ಉಲ್ಲಾಸ, ಉತ್ಸಾಹ ತುಂಬುವ ಸ್ವಾತಂತ್ರ್ಯೋತ್ಸವದ ಹಿನ್ನೋಟ

ಸ್ವಾತಂತ್ರ್ಯ ದಿನಾಚರಣೆಯು ಭಾರತವನ್ನು ಬ್ರಿಟಿಷ್ ಆಳ್ವಿಕೆಯಿಂದ ಮುಕ್ತಗೊಳಿಸಲು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುತ್ತದೆ. 1947ರ ಆಗಸ್ಟ್ 15ರಂದು ಭಾರತವನ್ನು ಬ್ರಿಟಿಷ್ ಸಾಮ್ರಾಜ್ಯಶಾಹಿಯಿಂದ ಮುಕ್ತಗೊಳಿಸಲಾಯಿತು. 78ನೇ ಸ್ವಾತಂತ್ರ್ಯ ದಿನಾಚರಣೆಯ (Independence day 2024) ಈ ಸಂದರ್ಭದಲ್ಲಿ ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ಹೇಗೆ ಆಚರಿಸಲಾಗುತ್ತದೆ ಮತ್ತು ಇದರ ಇತಿಹಾಸದ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Independence day 2024
Koo

ಭಾರತದಾದ್ಯಂತ 78ನೇ ಸ್ವಾತಂತ್ರ್ಯ ದಿನಕ್ಕೆ (Independence day 2024) ಕ್ಷಣಗಣನೆ ಆರಂಭವಾಗಿದೆ. “ವಿಕಸಿತ ಭಾರತ” (Viksit Bharat) ಸಂದೇಶದೊಂದಿಗೆ ಈ ಬಾರಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ಭಾರತದ 100ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅಂದರೆ 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತಿಸುವ ಕೇಂದ್ರ ಸರ್ಕಾರದ ಗುರಿಯನ್ನು ಇದು ಪ್ರತಿಬಿಂಬಿಸುತ್ತದೆ.

ಸ್ವಾತಂತ್ರ್ಯ ದಿನಾಚರಣೆಯು ಭಾರತವನ್ನು ಬ್ರಿಟಿಷ್ ಆಳ್ವಿಕೆಯಿಂದ ಮುಕ್ತಗೊಳಿಸಲು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ಎಲ್ಲಾ ತ್ಯಾಗಗಳನ್ನು ನೆನಪಿಸುತ್ತದೆ. 1947ರ ಆಗಸ್ಟ್ 15ರಂದು ಭಾರತವನ್ನು ಬ್ರಿಟಿಷ್ ಸಾಮ್ರಾಜ್ಯಶಾಹಿಯಿಂದ ಮುಕ್ತಗೊಳಿಸಲಾಯಿತು ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾದ ಮತ ಆಧಾರಿತ ವ್ಯವಸ್ಥೆಯಾಗಿ ಪರಿವರ್ತಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ಹೇಗೆ ಆಚರಿಸಲಾಗುತ್ತದೆ, ಇದರ ಇತಿಹಾಸದ ಕುರಿತ ಹಿನ್ನೋಟ ಇಲ್ಲಿದೆ.

ಇತಿಹಾಸ ಅವಲೋಕನ


ಕಠಿಣ ಹೋರಾಟದ ಬಳಿಕ 1947ರ ಆಗಸ್ಟ್ 15ರಂದು ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಮೊದಲ ಬಾರಿಗೆ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು. ಇದು ಭಾರತದಲ್ಲಿ 200 ವರ್ಷಗಳಷ್ಟು ಹಳೆಯದಾದ ಬ್ರಿಟಿಷರ ಆಳ್ವಿಕೆಯನ್ನು ಅಧಿಕೃತವಾಗಿ ಕೊನೆಗೊಳಿಸಿತು.

ಬ್ರಿಟಿಷ್ ಆಳ್ವಿಕೆಯಲ್ಲಿ ಪ್ರತಿಯೊಬ್ಬ ಭಾರತೀಯನನ್ನು ಗುಲಾಮರಂತೆ ಪರಿಗಣಿಸಲಾಗುತ್ತಿತ್ತು. ವಾಕ್ ಸ್ವಾತಂತ್ರ್ಯ ಇರಲಿಲ್ಲ. ಬ್ರಿಟಿಷ್ ಶಿಬಿರಗಳಲ್ಲಿ ಭಾರತೀಯ ಹೋರಾಟಗಾರರನ್ನು ಕ್ರೌರ್ಯದಿಂದ ನಡೆಸಿಕೊಳ್ಳಲಾಗುತ್ತಿತ್ತು. ರೈತರು ಬೆಳೆಗಳನ್ನು ಬೆಳೆಯಲು ಸಾಧ್ಯವಾಗದೆ ಹಸಿವಿನಿಂದ ಬಳಲುತ್ತಿದ್ದರು ಮತ್ತು ಗಣನೀಯ ಭೂ ತೆರಿಗೆಯನ್ನು ಪಾವತಿಸಬೇಕಾಗಿತ್ತು.


ಇಂತಹ ಪರಿಸ್ಥಿತಿಯಲ್ಲಿ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಪ್ರಯತ್ನವಿಲ್ಲದೆ ಭಾರತವು ಸ್ವಾತಂತ್ರ್ಯವನ್ನು ಗಳಿಸಲು ಸಾಧ್ಯವಾಗುತ್ತಿರಲಿಲ್ಲ. ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡಲು ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಮೌಲಾನಾ ಅಬುಲ್ ಕಲಾಂ ಆಜಾದ್, ಸರ್ದಾರ್ ಪಟೇಲ್ ಮತ್ತು ಗೋಪಾಲಬಂಧು ದಾಸ್, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಅಶ್ಫಾಕುಲ್ಲಾ ಖಾನ್ ಅವರಂತಹ ಅನೇಕ ನಾಯಕರು ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಪುರುಷರು ಮಾತ್ರವಲ್ಲ ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಹಲವಾರು ಮಹಿಳೆಯರೂ ಮಹತ್ವದ ಪಾತ್ರ ವಹಿಸಿದ್ದಾರೆ. ಸಾವಿತ್ರಿಬಾಯಿ ಫುಲೆ, ಮಹಾದೇವಿ ವರ್ಮಾ, ಕ್ಯಾಪ್ಟನ್ ಲಕ್ಷ್ಮಿ ಸೆಹಗಲ್, ರಾಣಿ ಲಕ್ಷ್ಮೀಬಾಯಿ ಮತ್ತು ಬಸಂತಿ ದೇವಿ ಸೇರಿದಂತೆ ಇನ್ನು ಅನೇಕರು ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟಿದ್ದರು.

‘ಒಳ್ಳೆಯ’ ಬ್ರಿಟಿಷ್ ಆಡಳಿತಗಾರರೂ ಇದ್ದರು!

ಎಲ್ಲಾ ಬ್ರಿಟಿಷರು ಕೆಟ್ಟವರಾಗಿರಲಿಲ್ಲ. ಕೆಲವರು ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ಇವರಲ್ಲಿ ವಾರೆನ್ ಹೇಸ್ಟಿಂಗ್ಸ್ ಅವರು ನ್ಯಾಯಾಲಯದ ಸುಧಾರಣೆಗಳನ್ನು ಅಭಿವೃದ್ಧಿಪಡಿಸಿದರು. ಭಾರತೀಯ ರಾಷ್ಟ್ರೀಯತೆಯನ್ನು ಬೆಂಬಲಿಸಿದ ಫ್ರೆಡಾ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರಾರಂಭಿಸಿದ ಅಲನ್ ಆಕ್ಟೇವಿಯನ್ ಹ್ಯೂಮ್ ಇವರಲ್ಲಿ ಪ್ರಮುಖರು.

ಯಾಕೆ ಸ್ವಾತಂತ್ರ್ಯ ದಿನಾಚರಣೆ?

ಭಾರತವು 200 ವರ್ಷಗಳ ಸುದೀರ್ಘ ಹೋರಾಟದ ಬಳಿಕ ಸ್ವಾತಂತ್ರ್ಯವನ್ನು ಸಾಧಿಸಿತು. 1947ರ ಆಗಸ್ಟ್ 15ರಂದು ಬ್ರಿಟಿಷರಿಂದ ಸಂಪೂರ್ಣ ಸ್ವಾತಂತ್ರ್ಯವನ್ನು ಗಳಿಸಿತು. ಅದಕ್ಕಾಗಿಯೇ ಭಾರತ ಅಥವಾ ವಿದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ಭಾರತೀಯ ಪ್ರಜೆಯ ಹೃದಯದಲ್ಲಿ ಈ ದಿನವು ಪ್ರಾಮುಖ್ಯತೆಯನ್ನು ಪಡೆದಿದೆ. ಈ ದಿನ ಪ್ರತಿಯೊಬ್ಬ ಭಾರತೀಯನೊಳಗೆ ದೇಶಭಕ್ತಿಯನ್ನು ಉದ್ದೀಪಿಸುತ್ತದೆ. ಪ್ರಸ್ತುತ ಪೀಳಿಗೆಗೆ ತಮ್ಮ ಸ್ವಾತಂತ್ರ್ಯದ ಹಿಂದಿರುವ ವ್ಯಕ್ತಿಗಳ ಹೋರಾಟಗಳನ್ನು ಅರ್ಥಮಾಡಿಕೊಳ್ಳುವಂತೆ ಮಾಡುತ್ತದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಪರಿಚಯಿಸಿಕೊಳ್ಳುವಂತೆ ಮಾಡುತ್ತದೆ.


ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಏನು?

ಬ್ರಿಟಿಷರ ಆಳ್ವಿಕೆಯಿಂದ ನಾವು ಮುಕ್ತವಾದ ಬಳಿಕ ಸ್ವಾತಂತ್ರ್ಯ ದಿನವು ದೇಶಕ್ಕೆ ಸಕಾರಾತ್ಮಕ ಐತಿಹಾಸಿಕ ಘಟನೆಯ ಸಾಕ್ಷಿಯಾಗಿದೆ. ಇದು ದೇಶದಾದ್ಯಂತ ವಿವಿಧ ಜಾತಿ. ಧರ್ಮ, ಜನಾಂಗದ ವ್ಯಕ್ತಿಗಳನ್ನು ಒಂದುಗೂಡಿಸುತ್ತದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತದೆ. ಭಾರತದ ಮೂಲಭೂತ ತತ್ವ ಮತ್ತು ಶಕ್ತಿಯನ್ನು ಅರ್ಥಮಾಡಿಸುತ್ತದೆ. ಭಾರತವು ಈ ಭೂಮಿಯ ಮೇಲಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಸ್ವಾತಂತ್ರ್ಯ ದಿನಾಚರಣೆಯು ಪ್ರತಿಯೊಬ್ಬ ಭಾರತೀಯ ಪ್ರಜೆಯ ಜೀವನದಲ್ಲಿ ಒಂದು ಪ್ರಮುಖ ದಿನವಾಗಿದೆ. ಇದು ನಮ್ಮ ಮಾತೃಭೂಮಿಯನ್ನು ಬ್ರಿಟಿಷ್ ಆಳ್ವಿಕೆಯಿಂದ ಮುಕ್ತಗೊಳಿಸಲು ತಮ್ಮ ಜೀವನವನ್ನು ತ್ಯಾಗ ಮಾಡಿದ ಮತ್ತು ಹೋರಾಡಿದ ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸುತ್ತದೆ.


ಸ್ವಾತಂತ್ರ್ಯ ದಿನದ ಚಟುವಟಿಕೆಗಳು ಏನೇನು?

ತ್ರಿವರ್ಣ ಧ್ವಜಾರೋಹಣ ಸ್ವಾತಂತ್ರ್ಯ ದಿನಾಚರಣೆಯ ಕೇಂದ್ರ ಬಿಂದು. ದೆಹಲಿಯ ಕೆಂಪು ಕೋಟೆಯ ಮೇಲೆ ದೇಶದ ಪ್ರಧಾನಮಂತ್ರಿಯವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಕಳೆದ ವರ್ಷದ ಸರ್ಕಾರದ ಸಾಧನೆಗಳನ್ನು ಕೇಂದ್ರೀಕರಿಸುವ ಭಾಷಣ ಮಾಡುತ್ತಾರೆ.

ಇದನ್ನೂ ಓದಿ: Hindus in Bangla: ಬಾಂಗ್ಲಾದಲ್ಲಿ ಹಿಂದೂ ಆಗಿರುವುದೇ ಅಪರಾಧ; ಕರಾಳ ದಿನ ನೆನಪಿಸಿಕೊಳ್ಳುವ ವಲಸಿಗರು; ವಿಡಿಯೊಗಳಿವೆ

ಇನ್ನೂ ಗಮನಹರಿಸಬೇಕಾದ ವಿಷಯಗಳನ್ನು ಪ್ರಸ್ತಾಪಿಸುತ್ತಾರೆ. ಮತ್ತಷ್ಟು ಅಭಿವೃದ್ಧಿ ಪ್ರಯತ್ನಗಳಿಗೆ ಕರೆ ನೀಡುತ್ತಾರೆ. ಈ ಸಂದರ್ಭದಲ್ಲಿ ವಿದೇಶಿ ಗಣ್ಯರನ್ನು ಸಹ ಆಹ್ವಾನಿಸಲಾಗುತ್ತದೆ.
ಇದೇ ಸಂದರ್ಭದಲ್ಲಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲೂ ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ರಾಷ್ಟ್ರಧ್ವಜ ಹಾರಿಸುತ್ತಾರೆ. ಶಾಲೆ, ಕಾಲೇಜು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲೂ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಗುತ್ತದೆ.

Continue Reading

ದೇಶ

Kolkata Doctor Murder Case: ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ; ಏಮ್ಸ್‌ ವೈದ್ಯರ ಪ್ರೊಟೆಸ್ಟ್‌-ಪ್ರಾಂಶುಪಾಲರು ರಿಸೈನ್‌

Kolkata Doctor Murder Case: ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಕಿರಿಯ ವೈದ್ಯರು, ಇಂಟರ್ನ್‌ಗಳು ಮತ್ತು ಸ್ನಾತಕೋತ್ತರ ಪ್ರಶಿಕ್ಷಣಾರ್ಥಿಗಳು ಸತತ ನಾಲ್ಕನೇ ದಿನವೂ ಮುಷ್ಕರ ಮುಂದುವರಿಸಿದ್ದರಿಂದ ಪಶ್ಚಿಮ ಬಂಗಾಳದಾದ್ಯಂತ ಆಸ್ಪತ್ರೆ ಸೇವೆಗಳು ಸೋಮವಾರ ಅಸ್ತವ್ಯಸ್ತಗೊಂಡವು.

VISTARANEWS.COM


on

kolkata doctor murder case
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳ(West Bengal)ದ ರಾಜಧಾನಿ ಕೋಲ್ಕತಾ(Kolkata)ದಲ್ಲಿ ದೇಶವೇ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, 31 ವರ್ಷದ ಮಹಿಳಾ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ(Kolkata Doctor Murder Case) ಪ್ರಕರಣ ಖಂಡಿಸಿ ಇಂದು ದೆಹಲಿ ಏಮ್ಸ್‌(AIIMS) ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್(FORDA) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.

ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಕಿರಿಯ ವೈದ್ಯರು, ಇಂಟರ್ನ್‌ಗಳು ಮತ್ತು ಸ್ನಾತಕೋತ್ತರ ಪ್ರಶಿಕ್ಷಣಾರ್ಥಿಗಳು ಸತತ ನಾಲ್ಕನೇ ದಿನವೂ ಮುಷ್ಕರ ಮುಂದುವರಿಸಿದ್ದರಿಂದ ಪಶ್ಚಿಮ ಬಂಗಾಳದಾದ್ಯಂತ ಆಸ್ಪತ್ರೆ ಸೇವೆಗಳು ಸೋಮವಾರ ಅಸ್ತವ್ಯಸ್ತಗೊಂಡವು.

ಏತನ್ಮಧ್ಯೆ, ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಘೋಷ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ಸಾಮಾಜಿಕ ಮಾಧ್ಯಮದಲ್ಲಿ ನನ್ನ ಮಾನಹಾನಿಯಾಗುತ್ತಿದೆ.ಮೃತ ವೈದ್ಯೆ ನನ್ನ ಮಗಳಿದ್ದಂತೆ. ಒಬ್ಬ ಪೋಷಕರಾಗಿ, ನಾನು ರಾಜೀನಾಮೆ ನೀಡುತ್ತೇನೆ…ಭವಿಷ್ಯದಲ್ಲಿ ಇಂತಹ ದುರ್ಘಟನೆಗಳು ನಡೆಯಬಾರದು” ಎಂದು ಹೇಳಿದ್ದಾರೆ.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.

ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Trainee Doctor: ವೈದ್ಯೆಯ ಕೊಂದ ಆರೋಪಿಯನ್ನು ಹಿಡಿದುಕೊಟ್ಟ ಬ್ಲ್ಯೂಟೂತ್‌ ಹೆಡ್‌ಫೋನ್; ಹೇಗಂತೀರಾ?

Continue Reading

ದೇಶ

Kangana Ranaut: ರಾಹುಲ್‌ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ; ಕಂಗನಾ ರಾಣಾವತ್‌ ಹೀಗೆ ಹೇಳಿದ್ದೇಕೆ?

Kangana Ranaut: ʼʼರಾಹುಲ್ ಗಾಂಧಿ ದೇಶವನ್ನು ಮತ್ತು ದೇಶದ ಭದ್ರತೆ ಹಾಗೂ ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಕಹಿ ಮತ್ತು ವಿಷ ತುಂಬಿದ ವ್ಯಕ್ತಿ. ಪ್ರಧಾನಿಯಾಗಲು ಸಾಧ್ಯವಾಗದಿದ್ದರೆ ಈ ರಾಷ್ಟ್ರವನ್ನು ನಾಶಪಡಿಸಬೇಕು ಎನ್ನುವುದು ಅವರ ಯೋಚನೆ. ಇದೇ ಕಾರಣಕ್ಕೆ ನಮ್ಮ ಷೇರುಪೇಟೆಯನ್ನು ಗುರಿಯಾಗಿಸಿಕೊಂಡ ಹಿಂಡನ್‌ಬರ್ಗ್‌ ಅನ್ನು ಬೆಂಬಲಿಸುತ್ತಿದ್ದಾರೆʼʼ ಎಂದುಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಾಣಾವತ್‌ (Kangana Ranaut) ಮತ್ತೊಮ್ಮೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಕಿಡಿಕಾರಿದ್ದಾರೆ. ಹಿಂಡನ್‌ಬರ್ಗ್‌ನ ಹೊಸ ವರದಿಯಲ್ಲಿ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ (SEBI) ಮುಖ್ಯಸ್ಥೆ ಮಾಧಬಿ ಪುರಿ ಬುಚ್‌ (Madhabi Puri Buch) ಅವರು ವಿದೇಶದಲ್ಲಿ ಗೌತಮ್‌ ಅದಾನಿ ಹೊಂದಿರುವ ಕಂಪನಿಗಳಲ್ಲಿ ಪಾಲು ಹೊಂದಿದ್ದಾರೆ ಎಂದು ಆರೋಪಿಸಿದ್ದು, ಇದನ್ನು ಅನುಮೋದಿಸಿದ ರಾಹುಲ್ ಗಾಂಧಿ ವಿರುದ್ಧ ಕಂಗನಾ ವಾಗ್ದಾಳಿ ನಡೆಸಿ ʼʼಅತ್ಯಂತ ಅಪಾಯಕಾರಿ ವ್ಯಕ್ತಿʼʼ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಕಂಗನಾ ಅವರು, ʼʼರಾಹುಲ್ ಗಾಂಧಿ ದೇಶವನ್ನು ಮತ್ತು ದೇಶದ ಭದ್ರತೆ ಹಾಗೂ ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಕಹಿ ಮತ್ತು ವಿಷ ತುಂಬಿದ ವ್ಯಕ್ತಿ. ಪ್ರಧಾನಿಯಾಗಲು ಸಾಧ್ಯವಾಗದಿದ್ದರೆ ಈ ರಾಷ್ಟ್ರವನ್ನು ನಾಶಪಡಿಸಬೇಕು ಎನ್ನುವುದು ಅವರ ಯೋಚನೆ. ಇದೇ ಕಾರಣಕ್ಕೆ ನಮ್ಮ ಷೇರುಪೇಟೆಯನ್ನು ಗುರಿಯಾಗಿಸಿಕೊಂಡ ಹಿಂಡನ್‌ಬರ್ಗ್‌ ಅನ್ನು ಬೆಂಬಲಿಸುತ್ತಿದ್ದಾರೆʼʼ ಎಂದು ಕಂಗನಾ ಹೇಳಿದ್ದಾರೆ.

ಜೀವನ ಪರ್ಯಂತ ಪ್ರತಿಪಕ್ಷದಲ್ಲೇ ಕೂರಲು ಸಜ್ಜಾಗಿ ಎಂದು ರಾಹುಲ್‌ ಗಾಂಧಿಗೆ ಕರೆ ನೀಡಿದ ಕಂಗನಾ, ʼʼರಾಹುಲ್‌ ಗಾಂಧಿ ನೀವು ಜೀವನ ಪರ್ಯಂತ ಪ್ರತಿಪಕ್ಷದಲ್ಲೇ ಕುಳಿತುಕೊಳ್ಳಬೇಕು ಮತ್ತು ಈಗಿನಂತೆ ಈ ರಾಷ್ಟ್ರದ ಜನರ ವೈಭವ, ಪ್ರಗತಿ ಮತ್ತು ರಾಷ್ಟ್ರೀಯತೆಯನ್ನು ಅನುಭವಿಸಲು ಸಜ್ಜಾಗಿ. ದೇಶದ ಜನತೆ ಎಂದಿಗೂ ನಿಮ್ಮನ್ನು ತಮ್ಮ ನಾಯಕ ಎಂದು ಒಪ್ಪಿಕೊಳ್ಳುವುದಿಲ್ಲ. ಗೌರವಕ್ಕೆ ನೀವು ಅನರ್ಹ ವ್ಯಕ್ತಿʼʼ ಎಂದು ಕಂಗನಾ ಖಾರವಾಗಿಯೇ ಬರೆದುಕೊಂಡಿದ್ದಾರೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಹಿಂಡನ್‌ಬರ್ಗ್‌ ವರದಿ ಬಗ್ಗೆ ರಾಹುಲ್‌ ಗಾಂಧಿ ಹೇಳಿದ್ದೇನು?

ಅದಾನಿ ಗ್ರೂಪ್‌ ವಿದೇಶದಲ್ಲಿ ಹೊಂದಿರುವ ಕಂಪನಿಗಳ ಹಗರಣಗಳಲ್ಲಿ ಸೆಬಿ ಅಧ್ಯಕ್ಷೆಯಾಗಿರುವ ಮಾಧಬಿ ಪುರಿ ಬುಚ್‌ ಹಾಗೂ ಅವರ ಪತಿ ಧವಳ್‌ ಬುಚ್‌ ಅವರ ಪಾಲೂ ಇದೆ. ಕಂಪನಿಗಳಲ್ಲೂ ಇವರು ಷೇರುಗಳನ್ನು ಹೊಂದಿದ್ದಾರೆ. ವಿದೇಶದಲ್ಲಿ ಕಂಪನಿಗಳಿಂದ ಅಕ್ರಮವಾಗಿ ಪಡೆದುಕೊಂಡ ಹಣದಲ್ಲಿ ಇವರದ್ದೂ ಪಾಲಿದೆ. ಬರ್ಮುಡಾ ಹಾಗೂ ಮಾರಿಷಸ್‌ ಫಂಡ್‌ಗಳಲ್ಲಿ ಮಾಧಬಿ ಪುರಿ ಬುಚ್‌ ಹಾಗೂ ಧವಳ್‌ ಬುಚ್‌ ಅವರ ಷೇರಿದೆ ಎಂದು ಆಗಸ್ಟ್‌ 10ರಂದು ಬಿಡುಗಡೆ ಮಾಡುದ ತನ್ನ ವರದಿಯಲ್ಲಿ ಹಿಂಡನ್‌ಬರ್ಗ್‌ ಸಂಸ್ಥೆ ಆರೋಪಿಸಿತ್ತು.

ಬಳಿಕ ಈ ಬಗ್ಗೆ ರಾಹುಲ್‌ ಗಾಂಧಿ ಪೋಸ್ಟ್‌ ಹಂಚಿಕೊಂಡು, ʼʼಹಿಂಡೆನ್​ಬರ್ಗ್​​ ರಿಸರ್ಚ್ ಮಾಡಿರುವ ಹೊಸ ವರದಿ ಕಳವಳ ಮೂಡಿಸುವಂತಿದೆ. ಸೆಬಿಯ ಸಮಗ್ರತೆಗೆ ಹಾನಿ ಮಾಡಲಾಗಿದೆ. ಈ ಆರೋಪಗಳ ವಿರುದ್ಧ ಜಂಟಿ ಸಂಸದೀಯ ಸಮಿತಿ ತನಿಖೆಗೆ ಪ್ರಧಾನಿ ನರೇಂದ್ರ ಮೋದಿ ಏಕೆ ಹೆದರುತ್ತಾರೆ ಎಂಬುದನ್ನು ಈ ವರದಿ ಸ್ಪಷ್ಟವಾಗಿ ಸೂಚಿಸುತ್ತದೆʼʼ ಎಂದು ಹೇಳಿದ್ದರು.

ʼʼಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊಂದಿರುವ ಸೆಬಿಯು ಅದರ ಅಧ್ಯಕ್ಷರ ವಿರುದ್ಧದ ಆರೋಪಗಳನ್ನು ನಿರ್ಲಕ್ಷಿಸುತ್ತಿದೆ. ದೇಶಾದ್ಯಂತದ ಪ್ರಾಮಾಣಿಕ ಹೂಡಿಕೆದಾರರು ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸೆಬಿ ಅಧ್ಯಕ್ಷೆ ಮಾಧಾಬಿ ಪುರಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ? ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ ಯಾರು ಜವಾಬ್ದಾರರು. ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷರು ಅಥವಾ ಗೌತಮ್ ಅದಾನಿಯೇ? ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಸ್ವಯಂಪ್ರೇರಿತವಾಗಿ ಪರಿಶೀಲಿಸುತ್ತದೆಯೇ?ʼʼ ಎಂದು ರಾಹುಲ್​ ಪ್ರಶ್ನಿಸಿದ್ದರು.

ಇದನ್ನೂ ಓದಿ: Hindenburg: ಅದಾನಿ ವಿದೇಶಿ ಕಂಪನಿಯಲ್ಲಿ ಸೆಬಿ ಅಧ್ಯಕ್ಷೆಯದ್ದೂ ಪಾಲು; ಹಿಂಡನ್‌ಬರ್ಗ್‌ ಮತ್ತೊಂದು ಸ್ಫೋಟಕ ವರದಿ

Continue Reading
Advertisement
Annayya Serial rishab shetty support
ಕಿರುತೆರೆ4 mins ago

Annayya Serial: ‘ಅಣ್ಣಯ್ಯ’ ಧಾರಾವಾಹಿಗೆ ರಿಷಬ್ ಶೆಟ್ಟಿ ಸಾಥ್‌; ಕಾರಣವೇನು?

Vinesh Phogat
ಪ್ರಮುಖ ಸುದ್ದಿ6 mins ago

Vinesh Phogat : ವಿನೇಶ್​ ಫೋಗಟ್ ಎಫೆಕ್ಟ್​​; ತೂಕದ ನಿಯಮಗಳ ಬದಲಾವಣೆಗೆ ವಿಶ್ವ ಕುಸ್ತಿ ಒಕ್ಕೂಟ ನಿರ್ಧಾರ?

DK Shivakumar
ಕರ್ನಾಟಕ13 mins ago

DK Shivakumar: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

Varamahalakshmi Festival 2024
Latest22 mins ago

Varamahalakshmi Festival 2024 : ವರಮಹಾಲಕ್ಷ್ಮಿ ಹಬ್ಬದ ದಿನ ಸುಲಭವಾಗಿ ಮಾಡಬಹುದಾದ ರುಚಿಕರ ಖಾದ್ಯಗಳಿವು; ವಿಡಿಯೊಗಳಿವೆ

Meghana Gaonkar workout get slim
ಸ್ಯಾಂಡಲ್ ವುಡ್25 mins ago

Meghana Gaonkar:  ಸಣ್ಣಗಾದ ಮೇಘನಾ ಗಾಂವ್ಕರ್; ನಟಿಯ ವರ್ಕೌಟ್ ಫೋಟೊ ವೈರಲ್‌!

Road Accident
ಬೆಂಗಳೂರು34 mins ago

Road Accident : ಟಿಪ್ಪರ್ ಲಾರಿಗೆ ಸಿಲುಕಿ ಸವಾರ ದುರ್ಮರಣ; ಬಸ್ ಪಲ್ಟಿಯಾಗಿ 13 ಪ್ರಯಾಣಿಕರು ಗಂಭೀರ

Kolkata Doctor Murder Case
ದೇಶ46 mins ago

Kolkata Doctor Murder Case: ʼಬೇಕಿದ್ದರೆ ಗಲ್ಲಿಗೇರಿಸಿʼ.. ವಿಚಾರಣೆ ವೇಳೆ ವೈದ್ಯೆಯ ಹಂತಕನ ಉಡಾಫೆ ಉತ್ತರ

Bangladesh Unrest
ವಿದೇಶ48 mins ago

Bangladesh Unrest: ಬಾಂಗ್ಲಾದಲ್ಲಿ 1971ರ ಪಾಕ್‌ ಸೇನೆ ಶರಣಾಗತಿ ಬಿಂಬಿಸುವ ಪ್ರತಿಮೆ ಧ್ವಂಸ; ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡ

paris Olympics 2024
ಪ್ರಮುಖ ಸುದ್ದಿ52 mins ago

Paris Olympics 2024 : ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡಕ್ಕೆ ಎಫ್ಐಎಚ್ ರ್ಯಾಂಕಿಂಗ್​ನಲ್ಲಿ 2 ಸ್ಥಾನ ಏರಿಕೆ

techie missing in Bengaluru
ಬೆಂಗಳೂರು1 hour ago

Techie Missing: ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌! ಪತಿಯನ್ನು ಹುಡುಕಿಕೊಡಿ ಎಂದು ಅಂಗಲಾಚಿದ ಪತ್ನಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌