Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ - Vistara News

ಕರ್ನಾಟಕ

Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

Teachers Recruitment: ಶಿಕ್ಷಕರ ಕೊರತೆ ನೀಗಿಸಲು ಈ ಶೈಕ್ಷಣಿಕ ವರ್ಷಾರಂಭದಲ್ಲೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಅನುದಾನಿತ ಶಾಲೆಗಳಲ್ಲಿ 2016ರಿಂದ 2020ರ ವರೆಗೆ ಖಾಲಿ ಇರುವ ಶಿಕ್ಷಕರ ಭರ್ತಿಗೆ ಆದೇಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಹುದ್ದೆಗಳ ಭರ್ತಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

VISTARANEWS.COM


on

Teachers Recruitment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ತೀವ್ರ ಒತ್ತಾಯಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 12 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ (Teachers Recruitment) ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿರುವ ಸಚಿವರು, ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 12 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದ್ದು, ಅನುಮತಿ ಸಿಕ್ಕ ನಂತರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ತಕ್ಷಣಕ್ಕೆ ಸಮಸ್ಯೆ ಪರಿಹರಿಸಲು ಈ ಶೈಕ್ಷಣಿಕ ವರ್ಷಾರಂಭದಲ್ಲೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಅನುದಾನಿತ ಶಾಲೆಗಳಲ್ಲಿ 2016ರಿಂದ 2020ರ ವರೆಗೆ ಖಾಲಿ ಇರುವ ಶಿಕ್ಷಕರ ಭರ್ತಿಗೆ ಆದೇಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಹುದ್ದೆಗಳ ಭರ್ತಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು, 1,008 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಕೇವಲ 28 ದಿನಗಳಲ್ಲಿ 32 ಸಾವಿರ ಮಕ್ಕಳು ದಾಖಲಾಗುವ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮುಂದಿನ ವರ್ಷದ ವೇಳೆಗೆ ಇನ್ನೂ 500 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಲಿದೆ ಎಂದಿದ್ದಾರೆ.

ಇದಕ್ಕೂ ಮುನ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ‘ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | KPSC Exam: ಆ.25ರಂದು 384 ಗೆಜೆಟೆಡ್‌ ಹುದ್ದೆಗಳ ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

ಶಿಕ್ಷಕರ ಬೇಡಿಕೆಗಳ ಬಗ್ಗೆ ಸಿಎಂ ಜತೆ ಚರ್ಚೆ

ಶಿಕ್ಷಕರ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಿಕ್ಷಕರಿಂದ ಕೆಲ ಬೇಡಿಕೆಗಳಿವೆ. ನಾಲ್ಕೈದು ದಿನಗಳ ಹಿಂದೆ ಸಭೆ ಕರೆದಿದ್ದೆ. ನಾವು ಪ್ರತಿಭಟನೆ ಕರೆದುಬಿಟ್ಟಿದ್ದೀವಿ, ಹೀಗಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ. ನಾನು ಹೋಗಿ ಮನವಿ ಪಡೆದು ಬಳಿಕ ಏನು ಮಾಡಬೇಕೋ ಪರಿಶೀಲನೆ ಮಾಡುತ್ತೇನೆ. ಇದು ನನ್ನ ಅವಧಿಯಲ್ಲಿ ಆಗಿರುವ ಸಮಸ್ಯೆಯಲ್ಲ. 2017ರಲ್ಲಿ ಆಗಿರೋ ವಿಚಾರ ಇದು, ಆಗಲೇ ಇವರು ಸ್ವಲ್ಪ ಒತ್ತಡ ಹಾಕಬೇಕಿತ್ತು. ಆದರೆ ಇಲ್ಲಿಯವರೆಗೂ ಅದು ಎಳೆದುಕೊಂಡು ಬಂದಿದೆ. ಅದು ನನ್ನ ಮಟ್ಟದಲ್ಲಿ ಅನ್ನೋಕ್ಕಿಂತ, ಮುಖ್ಯಮಂತ್ರಿ ಮಟ್ಟದಲ್ಲಿ ನಿರ್ಧಾರ ಆಗೋ ವಿಚಾರ. ಆದಷ್ಟು ಬೇಗ ಈ ಬಗ್ಗೆ ತೀರ್ಮಾನ ಮಾಡುತ್ತೇವೆ. ಅವರಿಗೆ ನಿವೃತ್ತಿ ಸಮಯದಲ್ಲಿ ಪ್ರಮೋಷನ್ ಆಗೋ ಆಸೆ ಇರುತ್ತೆ. ಹೀಗಾಗಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Pralhad Joshi: ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ; ಪ್ರಲ್ಹಾದ್‌ ಜೋಶಿ

Pralhad Joshi: ಪಿಎಂ ಸೂರ್ಯ ಘರ್ ಯೋಜನೆಯಡಿ ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ, ಮಾದರಿ ಸೌರ ಗ್ರಾಮ ಅನುಷ್ಠಾನಕ್ಕೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಕಾರ್ಯಾಚರಣೆ ಮಾರ್ಗಸೂಚಿ ಸಹ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Pralhad Joshi
Koo

ನವದೆಹಲಿ: ಪಿಎಂ ಸೂರ್ಯ ಘರ್ ಯೋಜನೆಯಡಿ ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ. ಮಾದರಿ ಸೌರ ಗ್ರಾಮ ಅನುಷ್ಠಾನಕ್ಕೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಕಾರ್ಯಾಚರಣೆ ಮಾರ್ಗಸೂಚಿ ಸಹ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಿಸಲು ಬೊಮ್ಮಾಯಿ ಆಗ್ರಹ

800 ಕೋಟಿ ರೂ. ನಿಗದಿ

ದೇಶಾದ್ಯಂತ ಪ್ರತಿ ಜಿಲ್ಲೆಗೆ ಒಂದು ಮಾದರಿ ಸೌರ ಗ್ರಾಮವನ್ನು ರಚಿಸಲು ಒತ್ತು ನೀಡಿದ್ದು, ಇದಕ್ಕಾಗಿ ಒಟ್ಟು ರೂ. 800 ಕೋಟಿ ಆರ್ಥಿಕ ವೆಚ್ಚವನ್ನು ನಿಗದಿಪಡಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮಾದರಿ ಗ್ರಾಮಕ್ಕೆ 1 ಕೋಟಿ ನೆರವು

ಸೌರ ಮಾದರಿ ಗ್ರಾಮದಲ್ಲಿ ಪ್ರತಿ ಜಿಲ್ಲೆಯ ವಿಜೇತ ಗ್ರಾಮವು ಕೇಂದ್ರದಿಂದ ಹಣಕಾಸು ನೆರವಾಗಿ ರೂ. 1 ಕೋಟಿ ಅನುದಾನ ಪಡೆಯುತ್ತದೆ ಎಂದು ಮಾಹಿತಿ ನೀಡಿರುವ ಸಚಿವ ಪ್ರಲ್ಹಾದ್‌ ಜೋಶಿ, ಸೌರಶಕ್ತಿ ಅಳವಡಿಕೆಯನ್ನು ಉತ್ತೇಜಿಸುವ ಮತ್ತು ಗ್ರಾಮ ಸಮುದಾಯಗಳನ್ನು ಸ್ವಾವಲಂಬಿಯಾಗಿಸುವ ನಿಟ್ಟಿನಲ್ಲಿ ಈ ಹೆಜ್ಜೆ ಇರಿಸಿ ಮಾದರಿ ಸೌರ ಗ್ರಾಮ ರಚಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

ಸೌರ ಮೇಲ್ಛಾವಣಿಯ ಸೂರ್ಯ ಘರ್ ಯೋಜನೆ 75,021 ಕೋಟಿ ರೂ. ವೆಚ್ಚವನ್ನು ಹೊಂದಿದ್ದು, 2026-27ರ ಆರ್ಥಿಕ ವರ್ಷದವರೆಗೆ ಅನ್ವಯಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಾರ್ಗಸೂಚಿ ವಿವರ

ಮಾದರಿ ಸೌರ ಗ್ರಾಮವೆಂದು ಪರಿಗಣಿಸಲು, ಗ್ರಾಮವು 5,000 (ವಿಶೇಷ ವರ್ಗದ ರಾಜ್ಯಗಳಿಗೆ 2,000) ಜನಸಂಖ್ಯೆಯುಳ್ಳ ಕಂದಾಯ ಗ್ರಾಮವಾಗಿರಬೇಕು.

ಆಯ್ಕೆ ಪ್ರಕ್ರಿಯೆ ಸ್ಪರ್ಧಾತ್ಮಕವಾಗಿದ್ದು, ಅಲ್ಲಿ ಜಿಲ್ಲಾ ಮಟ್ಟದ ಸಮಿತಿಯು (DLC) ಸಂಭಾವ್ಯ ಅಭ್ಯರ್ಥಿಯ ಘೋಷಣೆಯ ನಂತರ 6 ತಿಂಗಳ ನಂತರ ಸ್ಥಾಪಿಸಲಾದ ಒಟ್ಟಾರೆ ವಿತರಿಸಿದ ನವೀಕರಿಸಬಹುದಾದ ಶಕ್ತಿ (RE) ಸಾಮರ್ಥ್ಯದ ಮೇಲೆ ಗ್ರಾಮಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ.

ಅತಿ ಹೆಚ್ಚು ಆರ್‌ಇ ಸಾಮರ್ಥ್ಯ ಹೊಂದಿರುವ ಪ್ರತಿ ಜಿಲ್ಲೆಯ ವಿಜೇತ ಗ್ರಾಮಕ್ಕೆ ರೂ.1 ಕೋಟಿ ಕೇಂದ್ರ ಹಣಕಾಸು ನೆರವು ಸಿಗಲಿದೆ.

ಇದನ್ನೂ ಓದಿ: Namma Metro: ಹಸಿರು ಮಾರ್ಗದಲ್ಲಿ ಆ.13ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

ಈ ಯೋಜನೆಯ ಅನುಷ್ಠಾನವನ್ನು ರಾಜ್ಯ/UT ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಏಜೆನ್ಸಿಯು ಜಿಲ್ಲಾ ಮಟ್ಟದ ಸಮಿತಿಯ (DLC) ಮೇಲ್ವಿಚಾರಣೆಯಲ್ಲಿ ಮಾಡುತ್ತದೆ. ಆಯ್ದ ಗ್ರಾಮಗಳು ಸೌರಶಕ್ತಿ-ಚಾಲಿತ ಸಮುದಾಯಗಳಿಗೆ ಪರಿಣಾಮಕಾರಿಯಾಗಿ ಪರಿವರ್ತನೆಯಾಗುವುದನ್ನು ಖಚಿತಪಡಿಸುತ್ತದೆ ಮತ್ತು ದೇಶದಾದ್ಯಂತ ಇತರ ಹಳ್ಳಿಗಳಿಗೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತದೆ.

Continue Reading

ಕರ್ನಾಟಕ

CM Siddaramaiah: 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ಚಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ; ಸಿದ್ದರಾಮಯ್ಯ ಮಹತ್ವದ ಘೋಷಣೆ

CM Siddaramaiah: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6599 ಗ್ರಾಮ‌ಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದೇವೆ ಎಂದರು.

ಜ್ಞಾನ ವಿಕಾಸ ಕೇವಲ ಶಾಲಾ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಶಾಲೆಗಳ ಹೊರಗೂ ಕಲಿಕೆ ಅಗತ್ಯ. ಸಾವಿರಾರು ವರ್ಷಗಳ ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಸಮುದಾಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಿದೆ. ನಾವು 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಡು ವರ್ಷಗಳಾದರೂ ನೂರಕ್ಕೆ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಇದನ್ನು ಸಾಧಿಸುವ ದಿಕ್ಕಿನಲ್ಲಿ ನಾವು ಶ್ರಮಿಸಬೇಕಿದೆ ಎಂದರು.

ಇದನ್ನೂ ಓದಿ: Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

ಮೌಢ್ಯ, ಕಂದಾಚಾರಗಳು ತೊಲಗಬೇಕಾದರೆ ಓದು ಮುಖ್ಯ. ಮೌಢ್ಯದ ಕಾರಣದಿಂದ ಗ್ರಾಮೀಣ ಜನರ ಬದುಕು ಬಹಳ ಹಿಂದುಳಿಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪ್ರತಿಯೊಬ್ಬ ಯುವಕ, ಯುವತಿಯರು ಹಾಗೂ ಮಕ್ಕಳು ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಂಡು ಜ್ಞಾನಾರ್ಜನೆ ಮಾಡಬೇಕು. ಇದೇ ಅಂಬೇಡ್ಕರ್ ಅವರ ಕನಸಾಗಿತ್ತು ಎಂದು ಸಿಎಂ ತಿಳಿಸಿದರು.

ಜ್ಞಾನ ಪಡೆಯುವುದು ಎಂದರೆ ಮನುಷ್ಯರಾಗಿ ಬಾಳುವುದು. ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟುತ್ತಾರೆ. ಸಾಮಾಜಿಕ ಪ್ರಭಾವದಿಂದ ಬೆಳೆಯುತ್ತಾ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎಂದು ಕುವೆಂಪು ಅವರು ಹೇಳಿದ್ದಾರೆ. ಆದ್ದರಿಂದ ಬೆಳೆಯುತ್ತಲೂ ನಾವು ವಿಶ್ವ ಮಾನವರಾಗಿ ಉಳಿಯುವಂತಹ ಪ್ರಯತ್ನ ಮಾಡಬೇಕು. ಆಗ ಮಾತ್ರ ಮಾನವನ ಹುಟ್ಟು ಸಾರ್ಥಕ ಆಗುತ್ತದೆ ಎಂದರು.

ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದಲೇ ಗ್ರಾಮ ಮಟ್ಟದಲ್ಲೂ ಉತ್ತಮ ಗ್ರಂಥಾಲಯಗಳನ್ನು ಆರಂಭಿಸುತ್ತಿದೆ ಎಂದು ತಿಳಿಸಿದ ಅವರು, ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಇದನ್ನೂ ಓದಿ: Government Employees Sports: ಆ.17ರಿಂದ 19ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ‌ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.

Continue Reading

ನೋಟಿಸ್ ಬೋರ್ಡ್

Namma Metro: ಹಸಿರು ಮಾರ್ಗದಲ್ಲಿ ಆ.13ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Namma Metro: ನಾಗಸಂದ್ರದಿಂದ ಮಾದಾವರ (BIEC)ವರೆಗಿನ ರೀಚ್-3ರ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಮಯದಲ್ಲಿ ವ್ಯತ್ಯಯ ವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.

VISTARANEWS.COM


on

Namma Metro
Koo

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಆ.13ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ತಿಳಿಸಿದೆ.

ನಾಗಸಂದ್ರದಿಂದ ಮಾದಾವರ (BIEC)ವರೆಗಿನ ರೀಚ್-3ರ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಮಯದಲ್ಲಿ ವ್ಯತ್ಯಯ ವಾಗಲಿದ್ದು, ಇದರ ವಿವರ ಈ ಕೆಳಕಂಡಂತಿವೆ.

  1. ಆ. 13ರಂದು ಕೊನೆಯ ರೈಲು ಸೇವೆ ರಾತ್ರಿ 11ಕ್ಕೆ ಬದಲಾಗಿ 10 ಗಂಟೆಯವರೆಗೆ.
  2. ಆ. 14ರಂದು ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭ ಮತ್ತು ಕೊನೆಯ ರೈಲು ಸೇವೆ ರಾತ್ರಿ 11ಕ್ಕೆ ಬದಲಾಗಿ 10 ಗಂಟೆಯವರೆಗೆ.
  3. ಆ. 15ರಂದು ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭ

ನಾಗಸಂದ್ರ ನಿಲ್ದಾಣದಿಂದ ಆ.13 ಮತ್ತು 14 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಗಂಟೆಯ ಬದಲಾಗಿ 10.00 ಗಂಟೆಗೆ ಕೊನೆಗೊಳ್ಳುತ್ತದೆ. ಆ.14 ಮತ್ತು 15ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆಯು ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭವಾಗುತ್ತದೆ.
ಆದಾಗ್ಯೂ ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಆ.13 ಮತ್ತು 14ರಂದು ರಾತ್ರಿ 11.12 ಗಂಟೆಯವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ. ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆಯು ಆ.14 ಮತ್ತು 15ರಂದು ಬೆಳಗ್ಗೆ 5ಕ್ಕೆ ಪ್ರಾರಂಭವಾಗುತ್ತದೆ. ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಇದನ್ನೂ ಓದಿ | Namma Metro Ticket Price Hike: ಮೆಟ್ರೋ ಟಿಕೆಟ್‌ ದರದ ಮೇಲೆ ಕೈ ಇಟ್ರೋ! ಬೆಂಗಳೂರು ಜನರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ?

ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕೆ ನಮ್ಮ ಮೆಟ್ರೋ ಸಾಥ್

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕೆ ನಮ್ಮ ಮೆಟ್ರೋ ಸಾಥ್ ನೀಡಿದೆ. ಆಗಸ್ಟ್ 15,17 ಹಾಗೂ 18ರಂದು ಟೋಕನ್ ಬದಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್ ನೀಡಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ. 30 ರೂ. ರಿಟರ್ನ್ ಟಿಕೆಟ್ ಮೂಲಕ ಯಾವುದೇ ನಿಲ್ದಾಣಕ್ಕೂ ಪ್ರಯಾಣದ ಅನುಕೂಲವಾಗಲಿದೆ. ಪ್ರಯಾಣಿಕರು ಟೋಕನ್ ಬದಲಿಗೆ ಪರ್ಯಾಯ ವ್ಯವಸ್ಥೆ ಬಳಸಲು ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

ಲಾಲ್‌ಬಾಗ್ ನಲ್ಲಿ ಆಯೋಜಿಸಲಾಗಿರುವ ತೋಟಗಾರಿಕಾ ಫಲಪುಷ್ಪ ಪ್ರದರ್ಶನದ ಹಿನ್ನಲೆಯಲ್ಲಿ, ನಮ್ಮ ಮೆಟ್ರೋದಿಂದ ಆ. 15, 17 ಮತ್ತು 18ರಂದು ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ತ್ವರಿತ ಪ್ರಯಾಣಕ್ಕಾಗಿ ಬೆಳಗ್ಗೆ 10 ರಿಂದ ರಾತ್ರಿ 8ರವರೆಗೆ ಟೋಕನ್‌ಗಳ ಬದಲಿಗೆ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 30 ರೂ.ಗೆ ವಿತರಿಸಲಾಗುತ್ತದೆ.

ಇದನ್ನೂ ಓದಿ | HD Deve Gowda: ದೆಹಲಿ ಮೆಟ್ರೋದಲ್ಲಿ ಸಂಚರಿಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳು ಖರೀದಿಸಿದ ದಿನದಂದು ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಮಾನ್ಯವಾಗಿರುತ್ತದೆ. ಸಾರ್ವಜನಿಕರು ಟೋಕನ್, ಕಾರ್ಡ್, ಕ್ಯೂಆರ್ ಟಿಕೆಟ್‌ಗಳ ಮೂಲಕ ಲಾಲ್‌ಬಾಗ್ ನಿಲ್ದಾಣಕ್ಕೆ ಪ್ರಯಾಣಿಸಬಹುದು ಹಾಗೂ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಹಿಂತಿರುಗಲು ಟೋಕನ್‌ಗಳ ಬದಲಿಗೆ ಪೇಪರ್ ಟಿಕೆಟ್, ಕಾರ್ಡ್, ಮತ್ತು ಕ್ಯೂಆರ್ ಟಿಕೆಟ್ ಮೂಲಕ ಮಾತ್ರ ಪ್ರಯಾಣಿಸಬಹುದು. ಮೇಲಿನ ದಿನಾಂಕಗಳಲ್ಲಿ ಮತ್ತು ಅವಧಿಯಲ್ಲಿ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಟೋಕನ್‌ಗಳನ್ನು ನೀಡಲಾಗುವುದಿಲ್ಲ. ಟಿಕೆಟ್‌ಗಳನ್ನು ಖರೀದಿಸಲು ಕಾಯುವ ಸಮಯವನ್ನು ತಪ್ಪಿಸಲು ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮುಂಚಿತವಾಗಿ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಬೇಕು ಎಂದು ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

    Continue Reading

    ಕರ್ನಾಟಕ

    Lakshmi Hebbalkar: ಹಾಲಕೆರೆ ಮಠದ ಬೆಳ್ಳಿ ರಥೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

    Lakshmi Hebbalkar: ಗದಗ ಜಿಲ್ಲೆಯ ರೋಣ ತಾಲೂಕಿನ ಹಾಲಕೆರೆ ಮಠದ ಬೆಳ್ಳಿ ರಥೋತ್ಸವಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸೋಮವಾರ ಚಾಲನೆ ನೀಡಿದರು.

    VISTARANEWS.COM


    on

    Lakshmi Hebbalkar
    Koo

    ರೋಣ: ಗದಗ ಜಿಲ್ಲೆಯ ರೋಣ ತಾಲೂಕಿನ ಹಾಲಕೆರೆ ಮಠದ ಬೆಳ್ಳಿ ರಥೋತ್ಸವಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar), ಸೋಮವಾರ ಚಾಲನೆ ನೀಡಿದರು.

    ಹಾಲಕೆರೆ ಮಠದ ಜಗದ್ಗುರು ಮುಪ್ಪಿನ ಬಸವಲಿಂಗ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ವಳಬಳ್ಳಾರಿ ಸುವರ್ಣಗಿರಿ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ, ಸಂತೆಕಲ್ಲೂರಿನ ಘನಮಠೇಶ್ವರ ಮಠದ ಗುರುಬಸವ ಸ್ವಾಮೀಜಿ, ನೀಲಗುಂದದ ಪ್ರಭುಲಿಂಗ ಸ್ವಾಮೀಜಿ, ಕರೇಗುಡ್ಡ ಮಹಾಂತೇಶ್ವರ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ವಳಬಳ್ಳಾರಿ ಸುವರ್ಣಗಿರಿ ವಿರಕ್ತ ಮಠದ ಬಸವಲಿಂಗ ಸ್ವಾಮೀಜಿ, ಖೇಳಗಿ ಶ್ರೀ ಶಿವಲಿಂಗೇಶ್ವರಮಠದ ಶಿವಲಿಂಗ ಸ್ವಾಮೀಜಿ, ಸೋಮಸಮುದ್ರದ ಸಿದ್ದಲಿಂಗ ದೇಶಿಕರು, ಶ್ರೀಧರಗಡ್ಡೆಯ ಮರಿಕೊಟ್ಟೂರು ದೇಶಿಕರು, ರೋಣ ಅಕ್ಕನಬಳಗದ ಅಧ್ಯಕ್ಷೆ ಅನ್ನಪೂರ್ಣ ಜಿ. ಪಾಟೀಲ, ಹಾಲಕೆರೆ ಕೆ.ವಿ.ಜಿ ಬ್ಯಾಂಕಿನ ಮ್ಯಾನೇಜರ್ ಕದಿರಿ ಶ್ರೀರಿತಾ, ವೀಣಾ ಪಾಟೀಲ್, ಅನ್ನಪೂರ್ಣ ಪಾಟೀಲ, ಕಮಲಾ ಹುನಗುಂದ, ಹಾಲಕೆರೆ ಮಠದ ಭಕ್ತರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

    ಇದನ್ನೂ ಓದಿ: NIRF 2024 Rank: ದೇಶದಲ್ಲೇ ಮದ್ರಾಸ್ ಐಐಟಿ ಬೆಸ್ಟ್; ಬೆಂಗಳೂರಿನ ಐಐಎಸ್‌ಸಿ ನೆಕ್ಸ್ಟ್;‌ ಇಲ್ಲಿದೆ ಪೂರ್ಣ ಪಟ್ಟಿ

    ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಕ್ಕಮಹಾದೇವಿ ಮಾತೃ ಬಳಗಕ್ಕೆ ಸಹ ಚಾಲನೆ ನೀಡಿದರು.

    Continue Reading
    Advertisement
    ಪ್ರಮುಖ ಸುದ್ದಿ30 mins ago

    Train Accident : ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲಿನ ಎರಡು ಬೋಗಿ

    Pralhad Joshi
    ದೇಶ45 mins ago

    Pralhad Joshi: ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ; ಪ್ರಲ್ಹಾದ್‌ ಜೋಶಿ

    CM Siddaramaiah
    ಕರ್ನಾಟಕ48 mins ago

    CM Siddaramaiah: 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ಚಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ; ಸಿದ್ದರಾಮಯ್ಯ ಮಹತ್ವದ ಘೋಷಣೆ

    Independence day speech in Kannada
    ದೇಶ52 mins ago

    Independence day speech in Kannada: ವಿದ್ಯಾರ್ಥಿಗಳಿಗಾಗಿ ಇಲ್ಲಿದೆ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧ ಭಾಷಣ!

    S Jaishankar's Maldives visit
    ಪ್ರಮುಖ ಸುದ್ದಿ53 mins ago

    S Jaishankar’s Maldives visit : ಚೀನಾ ವಿರುದ್ಧ ಭಾರತಕ್ಕೆ ರಾಜತಾಂತ್ರಿಕ ಗೆಲುವು, 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟುಕೊಟ್ಟ ಮಾಲ್ಡೀವ್ಸ್​​

    Manu Bhaker
    ಕ್ರೀಡೆ1 hour ago

    Manu Bhaker : ಮದುವೆಯಾಗ್ತೀರಾ ಹೇಗೆ? ನೀರಜ್​ ಚೋಪ್ರಾ- ಮನು ಭಾಕರ್​ ಭೇಟಿಯ ವಿಡಿಯೊ ವೈರಲ್ ಮಾಡಿದ ನೆಟ್ಟಿಗರು

    Namma Metro
    ನೋಟಿಸ್ ಬೋರ್ಡ್1 hour ago

    Namma Metro: ಹಸಿರು ಮಾರ್ಗದಲ್ಲಿ ಆ.13ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

    Lakshmi Hebbalkar
    ಕರ್ನಾಟಕ2 hours ago

    Lakshmi Hebbalkar: ಹಾಲಕೆರೆ ಮಠದ ಬೆಳ್ಳಿ ರಥೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

    NIRF 2024 Rank
    ಶಿಕ್ಷಣ2 hours ago

    NIRF 2024 Rank: ದೇಶದ ಟಾಪ್‌ 10 ಮೆಡಿಕಲ್‌ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ನಂ.4; ಫಾರ್ಮಸಿಯಲ್ಲಿ ರಾಜ್ಯದ 2 ಕಾಲೇಜುಗಳಿಗೆ ಸ್ಥಾನ

    Paris Olympics 2024
    ಪ್ರಮುಖ ಸುದ್ದಿ2 hours ago

    Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಸಿಕ್ಕಿದ ಕೋಟಿಗಟ್ಟಲೆ ಬಹುಮಾನಗಳ ವಿವರ ಇಲ್ಲಿದೆ

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ11 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ9 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka Weather Forecast
    ಮಳೆ4 days ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ4 days ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ4 days ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು6 days ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ6 days ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ1 week ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ1 week ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ2 weeks ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ2 weeks ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ2 weeks ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    ಟ್ರೆಂಡಿಂಗ್‌