Chamundi Hill: ಚಾಮುಂಡಿ ಬೆಟ್ಟದಲ್ಲಿ ಮೈಸೂರು ಅರಸರ ಅಧಿಕಾರ ಮೊಟಕು ಮಾಡಲು ಮುಂದಾದ ಕಾಯಿದೆಗೆ ಹೈಕೋರ್ಟ್‌ ಮಧ್ಯಂತರ ತಡೆ - Vistara News

ಪ್ರಮುಖ ಸುದ್ದಿ

Chamundi Hill: ಚಾಮುಂಡಿ ಬೆಟ್ಟದಲ್ಲಿ ಮೈಸೂರು ಅರಸರ ಅಧಿಕಾರ ಮೊಟಕು ಮಾಡಲು ಮುಂದಾದ ಕಾಯಿದೆಗೆ ಹೈಕೋರ್ಟ್‌ ಮಧ್ಯಂತರ ತಡೆ

Chamundi Hill: ರಾಜ್ಯ ಸರ್ಕಾರ ಜಾರಿ ಮಾಡಿರುವ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ-2024ರ ಹಲವು ಸೆಕ್ಷನ್‌ಗಳನ್ನು ಪ್ರಶ್ನಿಸಿ ಮೈಸೂರು ಒಡೆಯರ್‌ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ (Pramodadevi wadiyer) ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಪೀಠ, ಕಾಯಿದೆಯನ್ನು ಆ.22ರವರೆಗೆ ಜಾರಿಗೊಳಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

VISTARANEWS.COM


on

chamundi hill mysore high court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟ (Mysore Chamundi Hill) ಹಾಗೂ ಚಾಮುಂಡೇಶ್ವರಿ ದೇವಾಲಯದ (Chamundeshwari Temple) ದೇವಸ್ಥಾನದ ಅಭಿವೃದ್ಧಿ ಹಾಗೂ ನಿರ್ವಹಣೆಯಲ್ಲಿ ರಾಜಮನೆತನದವರ (Mysore dynasty) ಅಧಿಕಾರ ಮೊಟಕುಗೊಳಿಸುವ ‘ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ-2024’ ಜಾರಿಗೊಳಿಸದಂತೆ ರಾಜ್ಯ ಸರ್ಕಾರಕ್ಕೆ (Karnataka Govt) ನಿರ್ದೇಶಿಸಿ ಹೈಕೋರ್ಟ್‌ (Karnataka High Court) ಮಧ್ಯಂತರ ಆದೇಶ ನೀಡಿದೆ.

ರಾಜ್ಯ ಸರ್ಕಾರ ಜಾರಿ ಮಾಡಿರುವ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ-2024ರ ಹಲವು ಸೆಕ್ಷನ್‌ಗಳನ್ನು ಪ್ರಶ್ನಿಸಿ ಮೈಸೂರು ಒಡೆಯರ್‌ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ (Pramodadevi wadiyer) ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಪೀಠ, ಕಾಯಿದೆಯನ್ನು ಆ.22ರವರೆಗೆ ಜಾರಿಗೊಳಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮೈಸೂರು ಅರಮನೆ ಮುಜರಾಯಿ ಸಂಸ್ಥೆಯ ಮುಖ್ಯಸ್ಥರೂ ಆದ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿ ಮಾಡಿದೆ.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆಯ ಪ್ರಕಾರ, ಚಾಮುಂಡೇಶ್ವರಿ ಬೆಟ್ಟದ ಅಭಿವೃದ್ಧಿ, ದೇವಸ್ಥಾನದ ಆಡಳಿತ ನಿರ್ವಹಣೆ, ಪೂಜಾ ಕೈಂಕರ್ಯ ನಡೆಸಲು ಪ್ರಾಧಿಕಾರದ ರಚನೆ ಮಾಡಲಾಗುತ್ತದೆ. ಆ ಪ್ರಾಧಿಕಾರದ ರಚನೆಯ ಸಂಪೂರ್ಣ ಅಧಿಕಾರ ಸರ್ಕಾರಕ್ಕೆ ಸೇರಿರುತ್ತದೆ. ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಲಿದ್ದಾರೆ. ಪದಾಧಿಕಾರಿಗಳಾಗಿ ಸ್ಥಳೀಯ ಶಾಸಕರು, ಸಚಿವರು, ಸಂಸದರು ಹಾಗೂ ಅಧಿಕಾರಿಗಳು ಇರಲಿದ್ದಾರೆ.

ದೇವಸ್ಥಾನಕ್ಕೆ ಅರ್ಚಕರನ್ನು ನೇಮಕ ಮಾಡುವ ಅಧಿಕಾರವನ್ನು ಸರ್ಕಾರ ಹೊಂದಿರುತ್ತದೆ. ಪ್ರಾಧಿಕಾರದ ತೀರ್ಮಾನಗಳನ್ನು ಜಾರಿ ಮಾಡುವ ಹೊಣೆ ಕಾರ್ಯದರ್ಶಿಗೆ ನೀಡಲಾಗಿದೆ. ಆ ಮೂಲಕ ದೇವಸ್ಥಾನದ ನಿರ್ವಹಣೆ, ಜವಾಬ್ದಾರಿಗಳಲ್ಲಿ ಮೈಸೂರು ರಾಜಮನೆತನದವರು ಹೊಂದಿದ್ದ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಚಾಮುಂಡೇಶ್ವರಿಯು ಮೈಸೂರು ರಾಜಮನೆತನದ ದೇವತೆ. ಮೈಸೂರು ಮಹಾರಾಜರು ದೇವಸ್ಥಾನದ ಅಭಿವೃದ್ಧಿ, ನಿರ್ವಹಣೆ ಮತ್ತು ಪೂಜಾ ಕಾರ್ಯಗಳಲ್ಲಿ ಸದಾ ಪಾಲುದಾರರಾಗಿದ್ದಾರೆ. ಬೆಟ್ಟ ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಅಪಾರವಾಗಿ ಶ್ರಮಿಸಿದ್ದಾರೆ. ದೇವಸ್ಥಾನಕ್ಕೆ ತಮ್ಮ ಅಮೂಲ್ಯ ಹಾಗೂ ಬೆಳೆಬಾಳುವ ಆಭರಣ, ಭೂಮಿ ನೀಡಿದ್ದಾರೆ. ಹೀಗಿದ್ದರೂ, ದೇವಸ್ಥಾನದ ಆಡಳಿತದಿಂದ ರಾಜಮನೆತನದವರು ಹೊಂದಿರುವ ಅಧಿಕಾರ ಮೊಟಕುಗೊಳಿಸಲು ಸರ್ಕಾರ ಈ ಕಾಯಿದೆ ರೂಪಿಸಿ ಜಾರಿಗೆ ತರಲು ಉದ್ದೇಶಿಸಿದೆ. ಆದ್ದರಿಂದ ಕಾಯಿದೆಯನ್ನು ಸಂವಿಧಾನಬಾಹಿರ ಹಾಗೂ ಅಕ್ರಮ ಎಂಬುದಾಗಿ ಘೋಷಿಸಬೇಕು ಎಂದು ಪ್ರಮೋದಾ ದೇವಿ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ: Ram Charan: ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದ ರಾಮ್​ ಚರಣ್​!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Patanjali Ayurved Ads: ನ್ಯಾಯಾಂಗ ನಿಂದನೆ ಪ್ರಕರಣ ರದ್ದು; ಬಾಬಾ ರಾಮದೇವ್‌ಗೆ ಬಿಗ್‌ ರಿಲೀಫ್

Patanjali Ayurved Ads: ಆಧುನಿಕ ಔಷಧದ ವಿರುದ್ಧ ರಾಮ್‌ದೇವ್ ಮತ್ತು ಪತಂಜಲಿಯವರ ಅವಹೇಳನಕಾರಿ ಹೇಳಿಕೆಗಳ ವಿರುದ್ಧ 2022 ರಲ್ಲಿ ಸುಪ್ರೀಂ ಕೋರ್ಟ್‌ಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​​ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಜನರ ದಾರಿ ತಪ್ಪಿಸುವ ಜಾಹೀರಾತುಗಳನ್ನು ಹಿಂಪಡೆಯುವಂತೆ ಆದೇಶ ನೀಡಿತ್ತು. ಕೊರ್ಟ್‌ ಆದೇಶದಂತೆ ಪತಂಜಲಿ ತನ್ನ ಎಲ್ಲಾ ಜಾಹೀರಾತನ್ನು ವಾಪಸ್‌ ಪಡೆದಿದೆ. ಹೀಗಾಗಿ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ರದ್ದುಗೊಳಿಸಲಾಗಿದೆ.

VISTARANEWS.COM


on

Patanjali ads
Koo

ನವದೆಹಲಿ: ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಂಸ್ಥೆ (Patanjali Ayurved Ads) ಮುಖ್ಯಸ್ಥ ಬಾಬಾ ರಾಮದೇವ್‌ (Baba Ramdev) ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ (Acharya Balkrishna) ಅವರ ವಿರುದ್ಧದ ನ್ಯಾಯಾಂಗ ನಿಂದನೆ(contempt case) ಪ್ರಕರಣವನ್ನು ಸುಪ್ರೀಂಕೋರ್ಟ್‌(Supreme Court) ರದ್ದುಗೊಳಿಸಿದೆ.

ಆಧುನಿಕ ಔಷಧದ ವಿರುದ್ಧ ರಾಮ್‌ದೇವ್ ಮತ್ತು ಪತಂಜಲಿಯವರ ಅವಹೇಳನಕಾರಿ ಹೇಳಿಕೆಗಳ ವಿರುದ್ಧ 2022 ರಲ್ಲಿ ಸುಪ್ರೀಂ ಕೋರ್ಟ್‌ಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​​ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಜನರ ದಾರಿ ತಪ್ಪಿಸುವ ಜಾಹೀರಾತುಗಳನ್ನು ಹಿಂಪಡೆಯುವಂತೆ ಆದೇಶ ನೀಡಿತ್ತು. ಕೊರ್ಟ್‌ ಆದೇಶದಂತೆ ಪತಂಜಲಿ ತನ್ನ ಎಲ್ಲಾ ಜಾಹೀರಾತನ್ನು ವಾಪಸ್‌ ಪಡೆದಿದೆ. ಹೀಗಾಗಿ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ರದ್ದುಗೊಳಿಸಲಾಗಿದೆ.

ಏನಿದು ಪ್ರಕರಣ?

ಪತಂಜಲಿ ಸಂಸ್ಥೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು (IMA) ಅರ್ಜಿ ಸಲ್ಲಿಸಿದೆ. ಪತಂಜಲಿ ಸಂಸ್ಥೆಯು ಕೊರೊನಾ ನಿರೋಧಕ ಲಸಿಕೆ ಹಾಗೂ ಆಧುನಿಕ ಔಷಧ ಪದ್ಧತಿ ಬಗ್ಗೆ ಸುಳ್ಳು ಅಭಿಯಾನ ಆರಂಭಿಸಿದೆ. ಅಷ್ಟೇ ಅಲ್ಲ, ಅಲೋಪಥಿ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಜನರ ದಾರಿ ತಪ್ಪಿಸುವ ರೀತಿ ಪತಂಜಲಿ ಸಂಸ್ಥೆಯು ಜಾಹೀರಾತುಗಳನ್ನು ನೀಡುತ್ತಿದೆ. ಇದು ಡ್ರಗ್ಸ್‌ ಆ್ಯಂಡ್‌ ಮ್ಯಾಜಿಕ್‌ ರೆಮೆಡೀಸ್‌ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಐಎಂಎ ಅರ್ಜಿ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್‌ ಅಮಾನುಲ್ಲಾ ಅವರು ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ರೋಗಗಳ ನಿವಾರಣೆ ಕುರಿತು ಪತಂಜಲಿ ಸಂಸ್ಥೆಯು ಜನರ ದಾರಿತಪ್ಪಿಸುವ ರೀತಿ ಜಾಹೀರಾತು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಸಂಸ್ಥೆ ಸಹ ಸಂಸ್ಥಾಪಕ ಬಾಬಾ ರಾಮದೇವ್‌ ಹಾಗೂ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಬಾಬಾ ರಾಮದೇವ್‌ ಆಪ್ತ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧ ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ನೋಟಿಸ್‌ ಹೊರಡಿಸಿತ್ತು. ಇಷ್ಟಾದರೂ, ಬಾಬಾ ರಾಮದೇವ್‌ ಆಗಲಿ, ಆಚಾರ ಬಾಲಕೃಷ್ಣ ಆಗಲಿ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಕೆಂಡಾಮಂಡಲವಾದ ಸುಪ್ರೀಂ ಕೋರ್ಟ್‌, ಏಪ್ರಿಲ್‌ 2ರಂದು ಇಬ್ಬರೂ ಕೋರ್ಟ್‌ಗೆ ಖುದ್ದಾಗಿ ಹಾಜರಾಗಬೇಕು ಎಂದು ಸೂಚಿಸಿತ್ತು. ಹಾಗೆಯೇ, ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಯನ್ನೇಕೆ ಆರಂಭಿಸಬಾರದು ಎಂದು ಕುಟುಕಿತ್ತು. ಇದಾದ ಬಳಿಕ ಇಬ್ಬರೂ ಸುಪ್ರೀಂ ಕೋರ್ಟ್‌ಗೆ ಬೇಷರತ್‌ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ: Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Continue Reading

ಕರ್ನಾಟಕ

Muda Scam: ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸ್ವೀಕರಿಸದಂತೆ ಕೋರ್ಟ್‌ಗೆ ಅರ್ಜಿ

Muda Scam: ಸಿಎಂ ವಿರುದ್ಧ ಸ್ನೇಹಮಯಿ ಕೃಷ್ಣ ನೀಡಿದ್ದ ಅರ್ಜಿಯ ವಿಚಾರಣೆ ಪರಿಗಣನೆ ಸಂಬಂಧ ಈಗಾಗಲೇ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ. ಹೀಗಾಗಿ ಅರ್ಜಿ ಸ್ವೀಕರಿಸದಂತೆ ಆಲಂ ಪಾಷಾ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Muda Scam
Koo

ಬೆಂಗಳೂರು: ಮುಡಾ ನಿವೇಶನ ಹಗರಣಕ್ಕೆ (Muda Scam) ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸದಂತೆ ಕೋರಿ ಆಲಂ ಪಾಷಾ ಎಂಬುವವರು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಸ್ನೇಹಮಯಿ ಕೃಷ್ಣ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸದಂತೆ ಆಲಂ ಪಾಷಾ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಎಂ ವಿರುದ್ಧ ಸ್ನೇಹಮಯಿ ಕೃಷ್ಣ ನೀಡಿದ್ದ ಅರ್ಜಿಯ ವಿಚಾರಣೆ ಪರಿಗಣನೆ ಸಂಬಂಧ ಈಗಾಗಲೇ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ. ಹೀಗಾಗಿ ಅರ್ಜಿ ಸ್ವೀಕರಿಸದಂತೆ ಆಲಂ ಪಾಷಾ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಏನಿದು ಪ್ರಕರಣ?

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಮುಡಾದಿಂದ 14 ನಿವೇಶನಗಳನ್ನು ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಸೇರಿ ಐವರ ವಿರುದ್ಧ ಸಿಬಿಐ ಅಥವಾ ಬೇರಾವುದೇ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲು ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು 82ನೇ ಸಿಸಿಎಚ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಆ.8ರಂದು ಖಾಸಗಿ ದೂರು ಸಲ್ಲಿಸಿದ್ದರು.

ಸಿಎಂ ಸಿದ್ದರಾಮಯ್ಯನವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಸ್ವಜನಪಕ್ಷಪಾತ ತೋರಿ, ಮುಡಾ ವಿಚಾರದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಪತ್ನಿ ಹೆಸರಿಗೆ, ದೇವರಾಜು ಎನ್ನುವವರ ಹೆಸರಿಗೆ ಸುಳ್ಳು ದಾಖಲೆ ಸೃಷ್ಟಿ ಮಾಡಿ ನಿವೇಶನ ಪಡೆದುಕೊಂಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.

ಈ ಹಿಂದೆ ರಾಜ್ಯಪಾಲರು, ಕೆಲವು ಅಧಿಕಾರಿಗಳಿಗೆ ದೂರು ಅರ್ಜಿ ನೀಡಿದ್ದೆ, ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ 15 ಪುಟಗಳ ದೂರು, 300ಕ್ಕೂ ಹೆಚ್ಚು ದಾಖಲಾತಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದೇನೆ. ಸಿದ್ದರಾಮಯ್ಯನವರನ್ನು ಮೊದಲನೇ ಆರೋಪಿ, ಅವರ ಪತ್ನಿ ಎರಡನೇ ಆರೋಪಿ, ಸಂಬಂಧಿಕ ಮಲ್ಲಿಕಾರ್ಜುನ 3ನೇ ಮತ್ತು ದೇವರಾಜ್ ಎಂಬುವವರನ್ನು 4ನೇ ಆರೋಪಿಯನ್ನಾಗಿ ಮಾಡಲು ದೂರು ನೀಡಿದ್ದೇನೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದರು.

ಇಂದು ಕೋರ್ಟ್‌ ತೀರ್ಮಾನ

ಮುಡಾ ಹಗರಣ (MUDA Scam) ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಮಾನಿಸಲಿದೆ.

ಇದನ್ನೂ ಓದಿ | Chamundi Hill: ಚಾಮುಂಡಿ ಬೆಟ್ಟದಲ್ಲಿ ಮೈಸೂರು ಅರಸರ ಅಧಿಕಾರ ಮೊಟಕು ಮಾಡಲು ಮುಂದಾದ ಕಾಯಿದೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಕೋರ್ಟ್‌ನ ಈ ಆದೇಶವನ್ನು ಆಧರಿಸಿ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸಲಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ಕೋರ್ಟ್ ನೀಡುವ ಆದೇಶವನ್ನು ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ನೀಡಿರುವ ದೂರನ್ನು ಪರಿಗಣಿಸಿ ಅಭಿಯೋಜನೆಗೆ ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದಾರೆ. ನಾಳೆ ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಸಂಬಂಧ ನ್ಯಾಯಾಲಯವು ಆದೇಶ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣ ಒಂದು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಅಲ್ಲದೆ ಇತ್ತೀಚಿಗೆ ಬಿಜೆಪಿ ಮತ್ತು ಜೆಡಿಎಸ್ ಈ ಒಂದು ಹಗರಣವನ್ನು ಖಂಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆ ಕೂಡ ಮಾಡಿತ್ತು. ಇದಕ್ಕೆ ಕೌಂಟರ್ ಕೊಡಲು ಕಾಂಗ್ರೆಸ್ ಸಹ ಜನಾಂದೋಲನ ಸಭೆಯನ್ನು ಸಹ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Tungabhadra Dam: ಗೇಟ್‌ ರಿಪೇರಿಗಾಗಿ 60 ಟಿಎಂಸಿ ನೀರು ಖಾಲಿ, 8 ಜಿಲ್ಲೆಗಳ ರೈತರಿಗೆ ನೀರಿಲ್ಲ!

Tungabhadra Dam: ಎರಡನೇ ಬೆಳೆಗಿಂತ ಮೊದಲ ಬೆಳೆಗಾದರೂ ಸರಿಯಾಗಿ ನೀರು ಸಿಗುವುದೇ ಎಂಬ ಆತಂಕವೂ ರೈತರನ್ನು ಕಾಡುತ್ತಿದೆ. 60 ಟಿಎಂಸಿ ನೀರು ಖಾಲಿಯಾದ್ರೆ ಡ್ಯಾಂನಲ್ಲಿ ಉಳಿಯುವುದು ಕೇವಲ 45 ಟಿಎಂಸಿ ನೀರು ಮಾತ್ರ. ಇದರಲ್ಲಿ ಆಂಧ್ರಪ್ರದೇಶದ ಕೋಟಾ ಕೂಡಾ ಇದೆ.

VISTARANEWS.COM


on

Tungabhadra Dam
Koo

ವಿಜಯನಗರ: ಹೊಸಪೇಟೆಯ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರೆಸ್ಟ್‌ ಗೇಟ್ ಮುರಿದಿರುವುದು (Crest Gate Crash) ಮಳೆಗಾಲ ಮುಗಿಯುವ ಮುನ್ನವೇ ಕಲ್ಯಾಣ ಕರ್ನಾಟಕ (Kalyana Karntaka) ಭಾಗದ ಅನ್ನದಾತರಿಗೆ (Farmers) ಶಾಕ್ ನೀಡಿದೆ. ಕ್ರೆಸ್ಟ್‌ ಗೇಟ್‌ ಮುರಿದುದರಿಂದ ಸುಮಾರು 15 ಟಿಎಂಸಿಯಷ್ಟು (TMC) ನೀರು ಹರಿದುಹೋಗಿದ್ದು, ಭರ್ತಿಯಾಗಿದ್ದ ಜಲಾಶಯ ಅಷ್ಟರ ಮಟ್ಟಿಗೆ ಈಗ ಖಾಲಿಯಾಗಿದೆ. ಇದರ ಪರಿಣಾಮ ಮೂರು ರಾಜ್ಯಗಳ 8 ಜಿಲ್ಲೆಗಳ ಲಕ್ಷಾಂತರ ರೈತರು ತಮ್ಮ ಎರಡು ಬೆಳೆಗಳನ್ನು ಕಳೆದುಕೊಳ್ಳುವ ಅನುಮಾನ ಮೂಡಿದೆ.

ಹೊಸಪೇಟೆಯ ತುಂಗಭದ್ರಾ ಜಲಾಶಯದಿಂದ ಒಟ್ಟು ಹನ್ನೆರಡು ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಮೂರು ರಾಜ್ಯದ 8 ಜಿಲ್ಲೆಗಳಿಗೆ ಆಸರೆ ಆಗಿರುವ ತುಂಗಭದ್ರಾ ಜಲಾಶಯ ಕಲ್ಯಾಣ ಕರ್ನಾಟಕದ ಬಳ್ಳಾರಿ, ವಿಜಯನಗರ, ಕೊಪ್ಪಳ‌, ರಾಯಚೂರು, ಆಂಧ್ರ ಪ್ರದೇಶದ ಕರ್ನೂಲ್, ಅನಂತಪುರ, ಕಡಪ, ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಗಳಿಗೆ ಜೀವನಾಡಿ.

ಈ ಬಾರಿ ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಅಷ್ಟಾಗಿ ಮಳೆ ಆಗಿಲ್ಲ. ಆದರೆ ಡ್ಯಾಂ ತುಂಬಿದ್ದರಿಂದ ಕಾಲುವೆ ನೀರು ನಂಬಿಕೊಂಡು ರೈತು ಬಿತ್ತನೆ ಮಾಡಿದ್ದಾರೆ. ಬಳ್ಳಾರಿಯಲ್ಲಿ 70 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬಿತ್ತನೆ ಮಾಡಲಾಗಿದೆ. 80 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆ ಮಾಡಲಾಗಿದೆ.

ಆದರೆ ಗೇಟ್ ರಿಪೇರಿಗಾಗಿ 60 TMC ನೀರನ್ನು ಅಣೆಕಟ್ಟಿನಿಂದ ಖಾಲಿ ಮಾಡುವ ಅನಿವಾರ್ಯತೆ ಇದೆ. 105 TMC ಸಾಮರ್ಥ್ಯದ TB ಡ್ಯಾಂನಲ್ಲಿ 20 ಅಡಿ ನೀರು ಕುಗ್ಗಿಸಿ 60 TMCಯಷ್ಟು ನೀರನ್ನು‌ ಅಧಿಕಾರಿಗಳು ಖಾಲಿ ಮಾಡುತ್ತಿದ್ದಾರೆ. ಸೆಪ್ಟೆಂಬರ್ ತಿಂಗಳಿಂದ ಮಳೆ ಪ್ರಮಾಣ ಕುಗ್ಗಬಹುದು. ಹೀಗಾಗಿ ಖಾಲಿಯಾದ 60 ಟಿಎಂಸಿ ನೀರನ್ನು ಮತ್ತೆ ತುಂಬಿಸುವುದು ಕಷ್ಟಸಾಧ್ಯ. ಬೇಸಿಗೆಯಲ್ಲಿ ನಿರ್ವಹಣೆಗಾಗಿ ಡ್ಯಾಂ ತುಂಬಿಸುವುದು ಅಧಿಕಾರಿಗಳಿಗೆ ಸವಾಲು ಆಗುತ್ತದೆ. ಸೆಪ್ಟೆಂಬರ್ ಬಳಿಕ ಕಾಲುವೆ ನೀರು ಕೈಕೊಟ್ಟರೆ ಬೆಳೆಗಳು ಬಾಡುತ್ತವೆ. ಹೀಗಾಗಿ ಈ ಬಾರಿ ಬೆಳೆಗಳಿಗೆ‌ ಡ್ಯಾಂ ನೀರು ಸಿಗುವುದೇ ಅನುಮಾನ ಎಂಬಂತಾಗಿದೆ.

ಎರಡನೇ ಬೆಳೆಗಿಂತ ಮೊದಲ ಬೆಳೆಗಾದರೂ ಸರಿಯಾಗಿ ನೀರು ಸಿಗುವುದೇ ಎಂಬ ಆತಂಕವೂ ರೈತರನ್ನು ಕಾಡುತ್ತಿದೆ. 60 ಟಿಎಂಸಿ ನೀರು ಖಾಲಿಯಾದ್ರೆ ಡ್ಯಾಂನಲ್ಲಿ ಉಳಿಯುವುದು ಕೇವಲ 45 ಟಿಎಂಸಿ ನೀರು ಮಾತ್ರ. ಇದರಲ್ಲಿ ಆಂಧ್ರಪ್ರದೇಶದ ಕೋಟಾ ಕೂಡಾ ಇದೆ. ಹೀಗಾಗಿ ಕರ್ನಾಟಕ ಕೋಟಾ ಉಳಿಯುವುದು ಕೇವಲ ಇಪ್ಪತ್ತೈದು ಟಿಎಂಸಿ ನೀರು. ಇದರಲ್ಲಿಯೇ ಕುಡಿಯುವ ನೀರಿಗೆ ಹೆಚ್ಚಿನ ನೀರು ಇಟ್ಟುಕೊಳ್ಳುವುದರಿಂದ ರೈತರಿಗೆ ಇದೀಗ ಬೆಳೆಗೆ ನೀರು ಸಿಗುತ್ತಾ ಇಲ್ಲವೋ ಅನ್ನೋ ಆತಂಕ ಎದುರಾಗಿದೆ.

ತುಂಗಭದ್ರಾ ಜಲಾಶಯದ ನೀರಿನ ಮೇಲೆಯೇ ನಾಲ್ಕು ಜಿಲ್ಲೆಗಳ ಅನೇಕ ಪಟ್ಟಣ ಮತ್ತು ಗ್ರಾಮಗಳಿಗೆ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತದೆ. ಡ್ಯಾಂನಲ್ಲಿರೋ ನೀರು ಖಾಲಿಯಾದ್ರೆ ಕುಡಿಯುವ ನೀರಿಗೆ ಕೂಡಾ ತತ್ವಾರವಾಗುತ್ತದೆ. ಕಳೆದ ಬೇಸಿಗೆಯಲ್ಲಿ ಅನೇಕ ಕಡೆ ಕುಡಿಯಲು ಕೂಡಾ ನೀರು ಬಿಡದ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಮತ್ತೆ ಡ್ಯಾಂ ಖಾಲಿಯಾಗುತ್ತಿರುವುದರಿಂದ ಬೇಸಿಗೆಯಲ್ಲಿ ಈ ಬಾರಿ ಕೂಡಾ ತತ್ವಾರವಾಗೋ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಜಲಾಶಯದಿಂದ 15 ಟಿಎಂಸಿ ನೀರು ವ್ಯರ್ಥ; ಇಂದು ಸಿಎಂ ಸಿದ್ದರಾಮಯ್ಯ ಭೇಟಿ

Continue Reading

ಸ್ಯಾಂಡಲ್ ವುಡ್

Radhika Pandit: ಯಶ್‌-ರಾಧಿಕಾ ಪಂಡಿತ್‌ ಎಂಗೇಜ್‌ಮೆಂಟ್‌ಗೆ 8 ವರ್ಷ; ಇದು ನೂರು ಜನ್ಮದ ನಂಟು ಎಂದ ಮಿಸೆಸ್‌ ರಾಮಾಚಾರಿ

Radhika Pandit: ಸ್ಯಾಂಡಲ್‌ವುಡ್‌ನ ಕ್ಯೂಟ್‌ ಕಪಲ್‌ ಎಂದೇ ಜನಪ್ರಿಯವಾಗಿರುವ ಯಶ್‌ ಮತ್ತು ರಾಧಿಕಾ ಪಂಡಿತ್‌ ನಿಶ್ಚಿತಾರ್ಥ ನಡೆದು 8 ವರ್ಷ ಆಗಿದೆ. ಈ ಹಿನ್ನಲೆಯಲ್ಲಿ ರಾಧಿಕಾ ಪಂಡಿತ್‌ ಇನ್‌ಸ್ಟಾಗ್ರಾಮ್‌ನಲ್ಲಿ ಯಶ್‌ ಜತೆಗಿನ ಫೋಟೊ ಹಂಚಿಕೊಂಡು, ʼʼ8 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಾಲೇ ನನಗೆ 100 ಜನ್ಮದಲ್ಲೂ ನಿಮ್ಮನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ ಎಂಬುದು ತಿಳಿದಿತ್ತುʼʼ ಎಂದು ಬರೆದುಕೊಂಡಿದ್ದಾರೆ. ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

VISTARANEWS.COM


on

Radhika Pandit
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನ ಕ್ಯೂಟ್‌ ಕಪಲ್‌ ಎಂದೇ ಜನಪ್ರಿಯವಾಗಿರುವ ಯಶ್‌ ಮತ್ತು ರಾಧಿಕಾ ಪಂಡಿತ್‌ ನಿಶ್ಚಿತಾರ್ಥ ನಡೆದು 8 ವರ್ಷ ಆಗಿದೆ. ಈ ಹಿನ್ನಲೆಯಲ್ಲಿ ರಾಧಿಕಾ ಪಂಡಿತ್‌ (Radhika Pandit) ಇನ್‌ಸ್ಟಾಗ್ರಾಮ್‌ನಲ್ಲಿ ಯಶ್‌ ಜತೆಗಿನ ಫೋಟೊ ಹಂಚಿಕೊಂಡು, ʼʼ8 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಾಲೇ ನನಗೆ 100 ಜನ್ಮದಲ್ಲೂ ನಿಮ್ಮನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ ಎಂಬುದು ತಿಳಿದಿತ್ತುʼʼ ಎಂದು ಬರೆದುಕೊಂಡಿದ್ದಾರೆ.

2016ರ ಆಗಸ್ಟ್‌ 12ರಂದು ಗೋವಾದಲ್ಲಿ ಅದ್ಧೂರಿಯಾಗಿ ಯಶ್- ರಾಧಿಕಾ ನಿಶ್ಚಿತಾರ್ಥ ನೆರವೇರಿತ್ತು. ಬಳಿಕ ಅದೇ ವರ್ಷ ಡಿಸೆಂಬರ್‌ 9ರಂದು ಗೋವಾದಲ್ಲಿ ಸಪ್ತಪದಿ ಇವರು ಸಪ್ತಪದಿ ತುಳಿದಿದ್ದರು.

ಧಾರಾವಾಹಿಯಲ್ಲಿ ನಟಿಸುತ್ತಿದ್ದ ರಾಧಿಕಾ ಪಂಡಿತ್‌ 2008ರಲ್ಲಿ ತೆರೆಕಂಡ ʼಮೊಗ್ಗಿನ ಮನಸ್ಸುʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಪ್ರವೇಶಿಸಿದ್ದರು. ವಿಶೇಷ ಎಂದರೆ ಇದರಲ್ಲಿ ಯಶ್‌ ಕೂಡ ನಟಿಸಿದ್ದರು. ಮೊದಲ ಚಿತ್ರದಲ್ಲೇ ಮೋಡಿ ಮಾಡಿದ ಇವರು ಬಳಿಕ ʼಡ್ರಾಮʼ, ʼಮಿ. ಆ್ಯಂಡ್‌ ಮಿ. ರಾಮಾಚಾರಿʼ, ʼಸಂತು ಸ್ಟ್ರೈಟ್‌ ಫಾರ್ವರ್ಡ್‌ʼ ಮುಂತಾದ ಸಿನಿಮಾಗಳಲ್ಲಿ ಜತೆಯಾಗಿ ನಟಿಸಿದ್ದರು.

ಮಕ್ಕಳಾದ ಐರಾ ಹಾಗೂ ಯಥರ್ವ್ ಅವರೊಂದಿಗೆ ಸಾಕಷ್ಟು ಸಮಯ ಕಳೆಯುವ ಯಶ್‌ ಮತ್ತು ರಾಧಿಕಾ ಪಂಡಿತ್‌, ಕುಟುಂಬದೊಂದಿಗಿನ ಫೋಟೊಗಳನ್ನು ಆಗಾಗ ಶೇರ್‌ ಮಾಡುತ್ತಿರುತ್ತಾರೆ.

ಸದ್ಯ ಯಶ್‌ ಬಹು ನಿರೀಕ್ಷಿತ ‘ಟಾಕ್ಸಿಕ್‌’ ಚಿತ್ರದಲ್ಲಿ ನಿರತರಾಗಿದ್ದಾರೆ. ಮಕ್ಕಳ ಲಾಲನೆ-ಪಾಲನೆಯಲ್ಲಿ ತೊಡಗಿಸಿಕೊಂಡಿರುವ ರಾಧಿಕಾ ಪಂಡಿತ್‌ ಚಿತ್ರರಂಗಕ್ಕೆ ಯಾವಾಗ ಮರುಳುತ್ತಾರೆ ಎನ್ನುವ ಪ್ರಶ್ನೆಯನ್ನು ಅಭಿಮಾನಿಗಳು ಆಗಾಗ ಕೇಳುತ್ತಲೇ ಇರುತ್ತಾರೆ. ಆದರೆ ಅವರು ಇದುವರೆಗೆ ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

ರಾಧಿಕಾ ಪಂಡಿತ್‌ ಕೊನೆಯದಾಗಿ 2019ರಲ್ಲಿ ತೆರೆಕಂಡ ʼಆದಿ ಲಕ್ಷ್ಮೀ ಪುರಾಣʼ ಚಿತ್ರದಲ್ಲಿ ನಟಿಸಿದ್ದರು. ಇದರಲ್ಲಿ ನಿರೂಪ್‌ ಭಂಡಾರಿ ನಾಯಕನಾಗಿ ಅಭಿನಯಿಸಿದ್ದರು. ಇತ್ತೀಚೆಗೆ ಯಶ್‌ ಜತೆ ಜಾಹೀರಾತಿನಲ್ಲಿ ನಟಿಸಿದ್ದ ರಾಧಿಕಾ ಪಂಡಿತ್‌ ಸಿನಿಮಾಕ್ಕೆ ಬಣ್ಣ ಹಚ್ಚಿಲ್ಲ.

‘ನಂದಗೋಕುಲ’ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ರಾಧಿಕಾ ಪಂಡಿತ್, ಉತ್ತಮ ಕಥೆ ಸಿಕ್ಕರೆ ಮತ್ತೆ ಖಂಡಿತಾ ನಟಿಸುತ್ತೇನೆ ಎಂದು ಈ ಹಿಂದೆ ತಿಳಿಸಿದ್ದು, ಅವರ ಕಂಬ್ಯಾಕ್‌ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ ಎಂದೇ ಕರೆಯಲ್ಪಡುವ ರಾಧಿಕಾ ಪಂಡಿತ್‌ ಕೆಲವು ದಿನಗಳ ಹಿಂದೆ ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದರು. ಈ ವೇಳೆ ʼʼಮತ್ತೆ ನೀವು ಯಾವಾಗ ಚಿತ್ರದಲ್ಲಿ ನಟಿಸುತ್ತೀರಾ? ಬೆಳ್ಳಿ ತೆರೆಯಲ್ಲಿ ನಿಮ್ಮನ್ನು ನೋಡಲು ನಾವೆಲ್ಲ ಕಾತುರದಿಂದ ಕಾಯುತ್ತಿದ್ದೇವೆʼʼ ಎಂದು ಹೇಳಿದಾಗ ʼʼಸರಿಯಾದ ಸಮಯ ಬಂದಾಗʼʼ ಎಂದಷ್ಟೇ ಉತ್ತರಿಸಿ ಕುತೂಹಲ ಹೆಚ್ಚಿಸಿದ್ದಾರೆ.

ಇದನ್ನೂ ಓದಿ: Radhika Pandit: ನಟಿ ರಾಧಿಕಾ ಪಂಡಿತ್‌ ಕಮ್‌ ಬ್ಯಾಕ್‌ ಯಾವಾಗ? ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಸಿಕ್ತು ಉತ್ತರ

Continue Reading
Advertisement
Self harming
ಕರ್ನಾಟಕ50 seconds ago

Self harming : ಶಿವಮೊಗ್ಗದಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Patanjali ads
ದೇಶ7 mins ago

Patanjali Ayurved Ads: ನ್ಯಾಯಾಂಗ ನಿಂದನೆ ಪ್ರಕರಣ ರದ್ದು; ಬಾಬಾ ರಾಮದೇವ್‌ಗೆ ಬಿಗ್‌ ರಿಲೀಫ್

Gold Rate Today
ಚಿನ್ನದ ದರ15 mins ago

Gold Rate Today: ಮತ್ತೆ ಕೈ ಸುಡುತ್ತಿದೆ ಚಿನ್ನ; ಬಂಗಾರ ದರದಲ್ಲಿ ಇಂದು ಭಾರಿ ಏರಿಕೆ

ಬೆಂಗಳೂರು18 mins ago

Assault Case: ಪಾರ್ಕಿಂಗ್‌ ವಿಚಾರಕ್ಕೆ ಡಿಶುಂ ಡಿಶುಂ; ಮಹಿಳೆಗೆ ಕಪಾಳಮೋಕ್ಷ!

Muda Scam
ಕರ್ನಾಟಕ27 mins ago

Muda Scam: ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸ್ವೀಕರಿಸದಂತೆ ಕೋರ್ಟ್‌ಗೆ ಅರ್ಜಿ

Tungabhadra Dam
ಪ್ರಮುಖ ಸುದ್ದಿ38 mins ago

Tungabhadra Dam: ಗೇಟ್‌ ರಿಪೇರಿಗಾಗಿ 60 ಟಿಎಂಸಿ ನೀರು ಖಾಲಿ, 8 ಜಿಲ್ಲೆಗಳ ರೈತರಿಗೆ ನೀರಿಲ್ಲ!

Naga Chaitanya
ಸಿನಿಮಾ40 mins ago

Naga Chaitanya: ನಾಗ ಚೈತನ್ಯ-ಶೋಭಿತಾ ನಿಶ್ಚಿತಾರ್ಥದ ಫೋಟೊ ಹಂಚಿಕೊಂಡ ಸಮಂತಾ

Paris Paralympic 2024
ಕ್ರೀಡೆ50 mins ago

Paris Paralympic 2024: ಪ್ಯಾರಾಲಿಂಪಿಕ್ಸ್ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಹಾಲಿ ಚಾಂಪಿಯನ್‌ ಪ್ರಮೋದ್ ಭಗತ್‌ಗೆ ಅಮಾನತು ಶಿಕ್ಷೆ

kolkata doctor murder case
ದೇಶ50 mins ago

Kolkata Doctor Murder Case: ನೋ ಸೇಫ್ಟಿ…ನೋ ಡ್ಯೂಟಿ- ವೈದ್ಯೆ ಕೊಲೆ ಖಂಡಿಸಿ ದೇಶವ್ಯಾಪಿ ಭಾರೀ ಪ್ರತಿಭಟನೆ

borewell water More than 40 people suffer from vomiting after drinking borewell water
ಬೆಳಗಾವಿ55 mins ago

Borewell water : ಬೋರ್‌ವೆಲ್ ನೀರು ಕುಡಿದು 40ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌