Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಮರಣೋತ್ತರ ಪರೀಕ್ಷೆ ವರದಿ ಬಹಿರಂಗ; ಶಾಕಿಂಗ್‌ ಸಂಗತಿ ಬಯಲು - Vistara News

ದೇಶ

Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಮರಣೋತ್ತರ ಪರೀಕ್ಷೆ ವರದಿ ಬಹಿರಂಗ; ಶಾಕಿಂಗ್‌ ಸಂಗತಿ ಬಯಲು

Kolkata Doctor Murder Case: ವರದಿಯಲ್ಲಿ, “ಆಕೆಯ ಕಣ್ಣು ಮತ್ತು ಬಾಯಿಯಿಂದ ರಕ್ತಸ್ರಾವ ಮತ್ತು ಮುಖದ ಮೇಲೆ ಗಾಯಗಳಾಗಿದ್ದವು. ಸಂತ್ರಸ್ತೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವೂ ಆಗಿತ್ತು. ಆಕೆಯ ಹೊಟ್ಟೆ, ಎಡಗಾಲು… ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು… ತುಟಿಗಳಲ್ಲಿ ಗಾಯಗಳಾಗಿವೆ ಎಂಬುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದುಬಂದಿದೆ.

VISTARANEWS.COM


on

Kolkata Doctor Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳ(West Bengal)ದ ಕೋಲ್ಕತ್ತಾ(Kolkata)ದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ(Kolkata Doctor Murder Case)ದಲ್ಲಿ ಇನ್ನಷ್ಟು ಆತಂಕಕಾರಿ ವಿವರಗಳು ಹೊರಬಿದ್ದಿವೆ. ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಸಂಜೋಯ್ ರಾಯ್, ಆಕೆಯ ಕನ್ನಡಕವನ್ನು ಒಡೆದುಹಾಕುವಷ್ಟು ಬಲವಾಗಿ ಹೊಡೆದಿದ್ದರಿಂದ ಆಕೆಯ ಕಣ್ಣುಗಳಿಗೆ ಗಾಜಿನ ಚೂರುಗಳು ಚುಚ್ಚಿದವು ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಯಲಾಗಿದೆ.

ವರದಿಯಲ್ಲಿ, “ಆಕೆಯ ಕಣ್ಣು ಮತ್ತು ಬಾಯಿಯಿಂದ ರಕ್ತಸ್ರಾವ ಮತ್ತು ಮುಖದ ಮೇಲೆ ಗಾಯಗಳಾಗಿದ್ದವು. ಸಂತ್ರಸ್ತೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವೂ ಆಗಿತ್ತು. ಆಕೆಯ ಹೊಟ್ಟೆ, ಎಡಗಾಲು… ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು… ತುಟಿಗಳಲ್ಲಿ ಗಾಯಗಳಾಗಿವೆ ಎಂಬುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದುಬಂದಿದೆ.

ಇಲ್ಲಿದೆ ಕೆಲವು ಪ್ರಮುಖ ಸಂಗತಿ

  1. ವೈದ್ಯೆಯ ಮೇಲೆ ಅತ್ಯಾಚಾರ ಕೊಲೆ ಎಸಗಿದ ನಂತರ ಸಂಜಯ್‌ ರಾಯ್‌ ಆಕೆಯ ಕತ್ತು ಹಿಸು ಕಿ ಕೊಲೆ ಮಾಡಿದ್ದಾನೆ. ಬೆಳಗ್ಗಿನ ಜಾವ 3ಗಂಟೆಯಿಂದ 5ಗಂಟೆ ನಡುವೆ ಈ ಕೃತ್ಯ ಎಸಗಿದ್ದಾನೆ.
  2. ಸಂಜಯ್‌ ರಾಯ್‌ ಅಶ್ಲೀಲ ಸಿನಿಮಾಗಳ ಗೀಳು ಇಟ್ಟುಕೊಂಡಿದ್ದ. ಆತ ಮೊಬೈಲ್‌ನಲ್ಲಿ ಅಂತಹ ವಿಡಿಯೋಗಳೇ ತುಂಬಿತ್ತು.
  3. 2019 ರಲ್ಲಿ ನಾಗರಿಕ ಸ್ವಯಂಸೇವಕರಾಗಿ ಕೋಲ್ಕತ್ತಾ ಪೊಲೀಸ್‌ಗೆ ಸೇರಿದ 33 ವರ್ಷದ ಆರೋಪಿ, ಕನಿಷ್ಠ ನಾಲ್ಕು ಬಾರಿ ವಿವಾಹವಾಗಿದ್ದನಂತೆ. ಈತನೋರ್ವ ಮಹಿಳಾ ಪೀಡಕನಾಗಿದ್ದ ಎನ್ನಲಾಗಿದೆ. ಈ ಹಿಂದೆ ತನ್ನ ಎಲ್ಲಾ ಪತ್ನಿಯರನ್ನು ದೈಹಿಕವಾಗಿ ಚಿತ್ರಹಿಂಸೆ ನೀಡಿದ್ದ.
  4. ಸಂಜೋಯ್ ರಾಯ್ ಮೊದಲ ಹೆಂಡತಿ ಬೆಹಾಲಾ ಮೂಲದವಳಾಗಿದ್ದರೆ, ಎರಡನೇ ಹೆಂಡತಿ ಪಾರ್ಕ್ ಸರ್ಕಸ್‌ನಿಂದ ಬಂದವಳು. ಬ್ಯಾರಕ್‌ಪುರದ ಹುಡುಗಿಯನ್ನು ಮೂರನೇ ಬಾರಿಗೆ ವಿವಾಹವಾಗಿದ್ದ. ಆದರೆ ಅದೂ ಕೂಡ ಹೆಚ್ಚು ಕಾಲ ಉಳಿಯಲಿಲ್ಲ. ನಂತರ ಅವರು ನಗರದ ಅಲಿಪುರ ಪ್ರದೇಶದ ಹುಡುಗಿಯನ್ನು ಮದುವೆಯಾಗಿದ್ದ ಎಂದು ನೆರೆಹೊರೆಯವರು ತಿಳಿಸಿದ್ದಾರೆ.
  5. ಇಷ್ಟೆಲ್ಲಾ ಆದರೂ ತನ್ನ ಮಗ ಅಮಾಯಕ, ಆತನ ವಿರುದ್ಧದ ಆರೋಪಗಳು ಸುಳ್ಳು ಎಂದು ಸಂಜಯ್‌ ರಾಯ್‌ ತಾಯಿ ಮಾಲತಿ ರಾಯ್‌ ಹೇಳಿದ್ದಾರೆ.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.
ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ(West Bengal)ದ ರಾಜಧಾನಿ ಕೋಲ್ಕತಾದಲ್ಲಿ ದೇಶವೇ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, 31 ವರ್ಷದ ಮಹಿಳಾ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಇಂದು ದೆಹಲಿ ಏಮ್ಸ್‌(AIIMS) ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್(FORDA) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.

ಇದನ್ನೂ ಓದಿ: Kolkata Doctor Murder Case: ʼಬೇಕಿದ್ದರೆ ಗಲ್ಲಿಗೇರಿಸಿʼ.. ವಿಚಾರಣೆ ವೇಳೆ ವೈದ್ಯೆಯ ಹಂತಕನ ಉಡಾಫೆ ಉತ್ತರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

PM Kisan Samman Nidhi: ಈ ದಿನಾಂಕದಂದು ಜಮೆ ಆಗಲಿದೆ ಕಿಸಾನ್‌ ಸಮ್ಮಾನ್‌ ನಿಧಿಯ 18ನೇ ಕಂತು; ಹೊಸದಾಗಿ ಅಪ್ಲೈ ಮಾಡುವ ವಿಧಾನ ಇಲ್ಲಿದೆ

PM Kisan Samman Nidhi: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ 2೦19ರಲ್ಲಿ ಜಾರಿಗೆ ತಂದ ಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 18ನೇ ಕಂತಿನ ಹಣ ನವೆಂಬರ್‌ನಲ್ಲಿ ಬಿಡುಗಡೆಯಾಗಲಿದೆ. 17ನೇ ಕಂತು ಜೂನ್‌ನಲ್ಲಿ ರಿಲೀಸ್‌ ಆಗಿತ್ತು. ಅಂದು ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ 9.26 ಕೋಟಿ ಫಲಾನುಭವಿಗಳ ಖಾತೆಗೆ 21,000 ಕೋಟಿ ರೂ. ಜಮೆ ಮಾಡಿದ್ದರು. ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಹೊಸದಾಗಿ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

PM Kisan Samman Nidhi
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ (PM Kisan Samman Nidhi) ಯೋಜನೆಯ 18ನೇ ಕಂತಿನ ಹಣ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ನವೆಂಬರ್‌ನಲ್ಲಿ ಫಲಾನುಭವಿಗಳ ಖಾತೆಗೆ 2 ಸಾವಿರ ರೂ. ಜಮೆ ಆಗಲಿದೆ. 17ನೇ ಕಂತು ಜೂನ್‌ನಲ್ಲಿ ರಿಲೀಸ್‌ ಆಗಿತ್ತು. 16ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು 2೦19ರಲ್ಲಿ ಜಾರಿಗೆ ತಂದಿದೆ (Money Guide).

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇ-ಕೆವೈಸಿ ಕಡ್ಡಾಯ

ಕಿಸಾನ್‌ ಸಮ್ಮಾನ್‌ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮೂಲಕ ಮಾಡಬಹುದು.

ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  •  ‘New Farmer Registration’ ಆಯ್ಕೆ ಮೇಲೆ ಕಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.

ಹೀಗೆ ಚೆಕ್‌ ಮಾಡಿ

ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್‌ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ಆಗ ಓಪನ್‌ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ರಿಜಿಸ್ಟ್ರೇಷನ್‌ ನಂಬರ್‌ ನಮೂದಿಸಿ, ಕ್ಯಾಪ್ಚ ಕೋಡ್‌ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ
  • ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್‌ ಮೇಲೆ ಮೂಡುತ್ತದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ಇದನ್ನೂ ಓದಿ: LIC New Plan For Youths: ಎಲ್‌ಐಸಿಯಿಂದ ಯುವ ಜನರಿಗಾಗಿ ಹೊಸ ವಿಮಾ ಯೋಜನೆ; ಏನಿದರ ವಿಶೇಷತೆ?

Continue Reading

ದೇಶ

SP Leader arrest: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ; ಸಮಾಜವಾದಿ ಪಕ್ಷದ ನಾಯಕ ಅರೆಸ್ಟ್‌

SP Leader arrest:ಕೆಲಸ ಕೊಡಿಸುವಂತೆ ಮನವಿ ಮಾಡಿಕೊಂಡು ನವಾಬ್‌ ಸಿಂಗ್‌ ಮನೆಗೆ ಮಹಿಳೆಯೊಬ್ಬಳು ತೆರಳಿದ್ದಳು. ಈ ವೇಳೆ ಆಕೆಯ ಜೊತೆ ಇದ್ದ ಬಾಲಕಿಗೆ ನವಾಬ್‌ ಸಿಂಗ್‌ ಕಿರುಕುಳ ನೀಡಿದ್ದಾನೆ. ಬಟ್ಟೆ ಬಿಚ್ಚುವಂತೆ ಬಾಲಕಿಗೆ ಒತ್ತಾಯಿಸಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ವೇಳೆ ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ನವಾಬ್‌ ಸಿಂಗ್‌ನನ್ನು ಅರೆಸ್ಟ್‌ ಮಾಡಿದ್ದಾರೆ.

VISTARANEWS.COM


on

SP leader arrested
Koo

ಲಖನೌ: 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ(Physical abuse)ಕ್ಕೆ ಯತ್ನಿಸಿದ ಆರೋಪದಲ್ಲಿ ಸಮಾಜವಾದಿ ಪಕ್ಷದ ನಾಯಕನನ್ನು ಅರೆಸ್ಟ್‌(SP Leader arrest) ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಎಸ್‌ಪಿ ನಾಯಕ ನವಾಬ್‌ ಸಿಂಗ್‌ ಯಾದವ್‌ ಬಂಧಿತ ಆರೋಪಿ. ಮಧ್ಯರಾತ್ರಿ ಪೊಲೀಸ್‌ ಸಹಾಯವಾಣಿ ಬಂದ ದೂರಿನಾಧಾರದಲ್ಲಿ ಪೊಲೀಸರು ರೇಡ್‌ ಮಾಡಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗುತ್ತಿದೆ.

ಕೆಲಸ ಕೊಡಿಸುವಂತೆ ಮನವಿ ಮಾಡಿಕೊಂಡು ನವಾಬ್‌ ಸಿಂಗ್‌ ಮನೆಗೆ ಮಹಿಳೆಯೊಬ್ಬಳು ತೆರಳಿದ್ದಳು. ಈ ವೇಳೆ ಆಕೆಯ ಜೊತೆ ಇದ್ದ ಬಾಲಕಿಗೆ ನವಾಬ್‌ ಸಿಂಗ್‌ ಕಿರುಕುಳ ನೀಡಿದ್ದಾನೆ. ಬಟ್ಟೆ ಬಿಚ್ಚುವಂತೆ ಬಾಲಕಿಗೆ ಒತ್ತಾಯಿಸಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ವೇಳೆ ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ನವಾಬ್‌ ಸಿಂಗ್‌ನನ್ನು ಅರೆಸ್ಟ್‌ ಮಾಡಿದ್ದಾರೆ.

ಸದ್ಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ತನ್ನ ವಿರುದ್ಧ ಪಿತೂರಿ ನಡೆಸಲಾಗಿದೆ ಎಂದು ದೂರಿದ್ದಾನೆ. ಇನ್ನು ನವಾಬ್ ಸಿಂಗ್ ವಿರುದ್ಧ ಆರೋಪ ಕೇಳಿಬರುತ್ತಿದ್ದಂತೆ ಆತನಿಂದ ಪಕ್ಷದ ನಾಯಕರು ಅಂತರ ಕಾಯ್ದುಕೊಂಡಿದ್ದಾರೆ. ಸಿಂಗ್ ಅವರು ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಕನೌಜ್ ಜಿಲ್ಲಾಧ್ಯಕ್ಷ ಕಲೀಂ ಖಾನ್ ಹೇಳಿದ್ದಾರೆ.

ಇದನ್ನೂ ಓದಿ: Kolkata Doctor Murder Case: ನೋ ಸೇಫ್ಟಿ…ನೋ ಡ್ಯೂಟಿ- ವೈದ್ಯೆ ಕೊಲೆ ಖಂಡಿಸಿ ದೇಶವ್ಯಾಪಿ ಭಾರೀ ಪ್ರತಿಭಟನೆ

Continue Reading

ಉದ್ಯೋಗ

Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

Indian Bank Recruitment 2024: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ತಮಿಳುನಾಡಿನ ಚೆನ್ನೈಯಲ್ಲಿ ಪ್ರಧಾನ ಕಚೇರಿ ಹೊಂದಿರುವ ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್‌ ಬ್ಯಾಂಕ್‌ 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋಕಲ್‌ ಬ್ಯಾಂಕ್‌ ಆಫೀಸರ್‌ ಹುದ್ದೆ ಇದಾಗಿದ್ದು, ಕರ್ನಾಟಕದಲ್ಲಿಯೂ ನೇಮಕಾತಿ ನಡೆಯಲಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 2.

VISTARANEWS.COM


on

Indian Bank Recruitment 2024
Koo

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ (Bank Jobs). ತಮಿಳುನಾಡಿನ ಚೆನ್ನೈಯಲ್ಲಿ ಪ್ರಧಾನ ಕಚೇರಿ ಹೊಂದಿರುವ ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್‌ ಬ್ಯಾಂಕ್‌ (Indian Bank) 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Bank Recruitment 2024). ಲೋಕಲ್‌ ಬ್ಯಾಂಕ್‌ ಆಫೀಸರ್‌ (Local Bank Officer) ಹುದ್ದೆ ಇದಾಗಿದ್ದು, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ವಿಶೇಷ ಎಂದರೆ ಕರ್ನಾಟಕದಲ್ಲಿಯೂ ನೇಮಕಾತಿ ನಡೆಯಲಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 2 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕರ್ನಾಟಕ-35, ತಮಿಳುನಾಡು / ಪುದುಚೇರಿ-160, ಆಂಧ್ರ ಪ್ರದೇಶ & ತೆಲಂಗಾಣ-50, ಮಹಾರಾಷ್ಟ್ರ-40, ಗುಜರಾತ್‌-15 ಹುದ್ದೆಗಳಿವೆ. ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷ ಚೇತನರಿಗೆ 10 ವರ್ಷ, ಮಾಜಿ ಯೋಧರಿಗೆ 5 ವರ್ಷಗಳ ರಿಯಾಯಿತಿ ಇದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 175 ರೂ. ಪಾವತಿಸಬೇಕು. ಉಳಿದ ಎಲ್ಲ ವಿಭಾಗದ ಅಭ್ಯರ್ಥಿಗಳು 1,000 ರೂ. ಅನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌. ಲಿಖಿತ / ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮಾಸಿಕ ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ 48,480 ರೂ. – 85,920 ರೂ. ಮಾಸಿಕ ವೇತನ ದೊರೆಯಲಿದೆ.

Indian Bank Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ibpsonline.ibps.in/iblbojul24/).
  • ಮೊಬೈಲ್‌ ನಂಬರ್‌, ಇಮೇಲ್‌ ವಿಳಾಸ ನೀಡಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಇಂಡಿಯನ್‌ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ: indianbank.inಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

Continue Reading

ದೇಶ

Patanjali Ayurved Ads: ನ್ಯಾಯಾಂಗ ನಿಂದನೆ ಪ್ರಕರಣ ರದ್ದು; ಬಾಬಾ ರಾಮದೇವ್‌ಗೆ ಬಿಗ್‌ ರಿಲೀಫ್

Patanjali Ayurved Ads: ಆಧುನಿಕ ಔಷಧದ ವಿರುದ್ಧ ರಾಮ್‌ದೇವ್ ಮತ್ತು ಪತಂಜಲಿಯವರ ಅವಹೇಳನಕಾರಿ ಹೇಳಿಕೆಗಳ ವಿರುದ್ಧ 2022 ರಲ್ಲಿ ಸುಪ್ರೀಂ ಕೋರ್ಟ್‌ಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​​ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಜನರ ದಾರಿ ತಪ್ಪಿಸುವ ಜಾಹೀರಾತುಗಳನ್ನು ಹಿಂಪಡೆಯುವಂತೆ ಆದೇಶ ನೀಡಿತ್ತು. ಕೊರ್ಟ್‌ ಆದೇಶದಂತೆ ಪತಂಜಲಿ ತನ್ನ ಎಲ್ಲಾ ಜಾಹೀರಾತನ್ನು ವಾಪಸ್‌ ಪಡೆದಿದೆ. ಹೀಗಾಗಿ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ರದ್ದುಗೊಳಿಸಲಾಗಿದೆ.

VISTARANEWS.COM


on

Patanjali ads
Koo

ನವದೆಹಲಿ: ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಂಸ್ಥೆ (Patanjali Ayurved Ads) ಮುಖ್ಯಸ್ಥ ಬಾಬಾ ರಾಮದೇವ್‌ (Baba Ramdev) ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ (Acharya Balkrishna) ಅವರ ವಿರುದ್ಧದ ನ್ಯಾಯಾಂಗ ನಿಂದನೆ(contempt case) ಪ್ರಕರಣವನ್ನು ಸುಪ್ರೀಂಕೋರ್ಟ್‌(Supreme Court) ರದ್ದುಗೊಳಿಸಿದೆ.

ಆಧುನಿಕ ಔಷಧದ ವಿರುದ್ಧ ರಾಮ್‌ದೇವ್ ಮತ್ತು ಪತಂಜಲಿಯವರ ಅವಹೇಳನಕಾರಿ ಹೇಳಿಕೆಗಳ ವಿರುದ್ಧ 2022 ರಲ್ಲಿ ಸುಪ್ರೀಂ ಕೋರ್ಟ್‌ಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​​ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಜನರ ದಾರಿ ತಪ್ಪಿಸುವ ಜಾಹೀರಾತುಗಳನ್ನು ಹಿಂಪಡೆಯುವಂತೆ ಆದೇಶ ನೀಡಿತ್ತು. ಕೊರ್ಟ್‌ ಆದೇಶದಂತೆ ಪತಂಜಲಿ ತನ್ನ ಎಲ್ಲಾ ಜಾಹೀರಾತನ್ನು ವಾಪಸ್‌ ಪಡೆದಿದೆ. ಹೀಗಾಗಿ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ರದ್ದುಗೊಳಿಸಲಾಗಿದೆ.

ಏನಿದು ಪ್ರಕರಣ?

ಪತಂಜಲಿ ಸಂಸ್ಥೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು (IMA) ಅರ್ಜಿ ಸಲ್ಲಿಸಿದೆ. ಪತಂಜಲಿ ಸಂಸ್ಥೆಯು ಕೊರೊನಾ ನಿರೋಧಕ ಲಸಿಕೆ ಹಾಗೂ ಆಧುನಿಕ ಔಷಧ ಪದ್ಧತಿ ಬಗ್ಗೆ ಸುಳ್ಳು ಅಭಿಯಾನ ಆರಂಭಿಸಿದೆ. ಅಷ್ಟೇ ಅಲ್ಲ, ಅಲೋಪಥಿ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಜನರ ದಾರಿ ತಪ್ಪಿಸುವ ರೀತಿ ಪತಂಜಲಿ ಸಂಸ್ಥೆಯು ಜಾಹೀರಾತುಗಳನ್ನು ನೀಡುತ್ತಿದೆ. ಇದು ಡ್ರಗ್ಸ್‌ ಆ್ಯಂಡ್‌ ಮ್ಯಾಜಿಕ್‌ ರೆಮೆಡೀಸ್‌ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಐಎಂಎ ಅರ್ಜಿ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್‌ ಅಮಾನುಲ್ಲಾ ಅವರು ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ರೋಗಗಳ ನಿವಾರಣೆ ಕುರಿತು ಪತಂಜಲಿ ಸಂಸ್ಥೆಯು ಜನರ ದಾರಿತಪ್ಪಿಸುವ ರೀತಿ ಜಾಹೀರಾತು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಸಂಸ್ಥೆ ಸಹ ಸಂಸ್ಥಾಪಕ ಬಾಬಾ ರಾಮದೇವ್‌ ಹಾಗೂ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಬಾಬಾ ರಾಮದೇವ್‌ ಆಪ್ತ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧ ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ನೋಟಿಸ್‌ ಹೊರಡಿಸಿತ್ತು. ಇಷ್ಟಾದರೂ, ಬಾಬಾ ರಾಮದೇವ್‌ ಆಗಲಿ, ಆಚಾರ ಬಾಲಕೃಷ್ಣ ಆಗಲಿ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಕೆಂಡಾಮಂಡಲವಾದ ಸುಪ್ರೀಂ ಕೋರ್ಟ್‌, ಏಪ್ರಿಲ್‌ 2ರಂದು ಇಬ್ಬರೂ ಕೋರ್ಟ್‌ಗೆ ಖುದ್ದಾಗಿ ಹಾಜರಾಗಬೇಕು ಎಂದು ಸೂಚಿಸಿತ್ತು. ಹಾಗೆಯೇ, ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಯನ್ನೇಕೆ ಆರಂಭಿಸಬಾರದು ಎಂದು ಕುಟುಕಿತ್ತು. ಇದಾದ ಬಳಿಕ ಇಬ್ಬರೂ ಸುಪ್ರೀಂ ಕೋರ್ಟ್‌ಗೆ ಬೇಷರತ್‌ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ: Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Continue Reading
Advertisement
Viral Video
ವೈರಲ್ ನ್ಯೂಸ್7 mins ago

Viral Video: ಅಬ್ಬಾ…ಈತ ಮನುಷ್ಯನೋ ರಾಕ್ಷಸನೋ..? ಪತ್ನಿಯ ಕಾಲುಗಳನ್ನು ಬೈಕ್‌ಗೆ ಕಟ್ಟಿ ರೋಡಲ್ಲಿ ಎಳೆದಾಡಿದ ಪಾಪಿ ಪತಿ-ವಿಡಿಯೋ ಇದೆ

Sunil Gavaskar
ಕ್ರೀಡೆ18 mins ago

Sunil Gavaskar: ಪದಕ ಗೆಲ್ಲಲು ವಿಫಲವಾದ ಲಕ್ಷ್ಯ ಸೇನ್ ವಿರುದ್ಧ ವಾಗ್ದಾಳಿ ನಡೆಸಿದ ಗಾವಸ್ಕರ್

PM Kisan Samman Nidhi
ಮನಿ-ಗೈಡ್30 mins ago

PM Kisan Samman Nidhi: ಈ ದಿನಾಂಕದಂದು ಜಮೆ ಆಗಲಿದೆ ಕಿಸಾನ್‌ ಸಮ್ಮಾನ್‌ ನಿಧಿಯ 18ನೇ ಕಂತು; ಹೊಸದಾಗಿ ಅಪ್ಲೈ ಮಾಡುವ ವಿಧಾನ ಇಲ್ಲಿದೆ

SP leader arrested
ದೇಶ1 hour ago

SP Leader arrest: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ; ಸಮಾಜವಾದಿ ಪಕ್ಷದ ನಾಯಕ ಅರೆಸ್ಟ್‌

Group Clash
ಕರ್ನಾಟಕ1 hour ago

Group Clash: ಅರಕೆರೆ ಶೆಡ್‌ನಲ್ಲಿ ದರ್ಶನ್ ಕಿರಿಕ್‌‌; ಯೂತ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕಾಗಿ‌ ನಡುರಸ್ತೆಯಲ್ಲೇ ಫೈಟ್

Tungabhadra Dam
ಹುಬ್ಬಳ್ಳಿ1 hour ago

Tungabhadra Dam: ಜಲಾಶಯ ನಿರ್ವಹಣೆ ಕುರಿತ ಕೇಂದ್ರ ಸಮಿತಿ ಸಲಹೆಯನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ; ಪ್ರಲ್ಹಾದ್‌ ಜೋಶಿ ಆರೋಪ

Kannada New Movie
ಬೆಂಗಳೂರು1 hour ago

Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

Murder Case
Latest1 hour ago

Murder Case: 90 ಲಕ್ಷ ರೂ. ಠೇವಣಿ ಎಗರಿಸಲು ವೃದ್ಧನ ಕೊಂದ ಮಹಿಳಾ ಬ್ಯಾಂಕ್‌ ಮ್ಯಾನೇಜರ್‌! ಪ್ಲ್ಯಾನ್‌ ಹೇಗಿತ್ತು ನೋಡಿ!

Murder case
ಚಿಕ್ಕೋಡಿ1 hour ago

Murder Case : ಕೆಲ್ಸ ಜಾಸ್ತಿ ಮನೆಗೆ ಬರಲ್ಲ ಎಂದವನು, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬೀದಿ ಹೆಣವಾದ

Vastu Tips
ಧಾರ್ಮಿಕ2 hours ago

Vastu Tips: ಈ ವಸ್ತುಗಳನ್ನು ಮನೆಯಲ್ಲಿಟ್ಟರೆ ಸಂತೋಷ, ಸಮೃದ್ಧಿ, ನೆಮ್ಮದಿ ಸಿಗುತ್ತವೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌