Vinesh Phogat: ಇಂದು ವಿನೇಶ್ ಫೋಗಟ್ ಬೆಳ್ಳಿ ಪದಕದ ತೀರ್ಪು ಪ್ರಕಟ - Vistara News

ಕ್ರೀಡೆ

Vinesh Phogat: ಇಂದು ವಿನೇಶ್ ಫೋಗಟ್ ಬೆಳ್ಳಿ ಪದಕದ ತೀರ್ಪು ಪ್ರಕಟ

Vinesh Phogat:ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿದ ಬೆನ್ನಲ್ಲೇ ವಿಶ್ವ ಕುಸ್ತಿ ಆಡಳಿತ ಮಂಡಳಿ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ತಮ್ಮ ನಿಯಮದಲ್ಲಿ ಬದಲಾವಣೆ ಮಾಡಲು ಮುಂದಾಗಿದೆ.

VISTARANEWS.COM


on

Vinesh Phogat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್: ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಅವರು ತಮ್ಮ 100 ಗ್ರಾಂ ಹೆಚ್ಚುವರಿ ತೂಕದ ಅನರ್ಹತೆಯನ್ನು ಪ್ರಶ್ನಿಸಿ ಕ್ರೀಡಾ ನ್ಯಾಯಮಂಡಳಿಗೆ ಸಲ್ಲಿಸಿರುವ ಮೇಲ್ಮನವಿಯ(Vinesh Phogat CAS Hearing) ತೀರ್ಪು (ಇಂದು) ಮಂಗಳವಾರ ಹೊರಳಬೀಳಲಿದೆ. ಪ್ಯಾರಿಸ್​ ಒಲಿಂಪಿಕ್ಸ್​ ಕುಸ್ತಿ ಫೈನಲ್​ ಪಂದ್ಯಕ್ಕೂ ಮುನ್ನ ದೇಹತೂಕ ಪರೀಕ್ಷೆಯಲ್ಲಿ 100 ಗ್ರಾಂ ಹೆಚ್ಚು ಕಂಡು ಬಂದ ಕಾರಣ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಇದರಿಂದ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಲಭಿಸುವ ಅವಕಾಶ ಕೈಜಾರಿತ್ತು.

ಅನರ್ಹ ಮಾಡಿದ್ದ ಬಗ್ಗೆ ಪ್ರಶ್ನಿಸಿ ವಿನೇಶ್ ಅವರು ತಮಗೆ ಜಂಟಿ ಬೆಳ್ಳಿ ಪದಕವನ್ನು ನೀಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರು. ಇದನ್ನು ಒಲಿಂಪಿಕ್ಸ್‌ನಲ್ಲಿರುವ ಕ್ರೀಡಾ ನ್ಯಾಯಮಂಡಳಿಯ ಹಂಗಾಮಿ ಪೀಠವು ವಿಚಾರಣೆ ನಡೆಸಿ ಒಲಿಂಪಿಕ್ಸ್​ ಮುಕ್ತಾಯಕ್ಕೂ ಮುನ್ನ ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು. ಆದರೆ 2 ಬಾರಿ ಈ ತೀರ್ಪು ಪ್ರಕಟ ಮುಂದೂಡಿಕೆಯಾಗಿತ್ತು. ಇದೀಗ ಇಂದು (ಆಗಸ್ಟ್​ 13) ಅಧಿಕೃತವಾಗಿ ತೀರ್ಪು ಪ್ರಕಟಿಸುವುದಾಗಿ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ(CAS) ತಿಳಿಸಿದೆ. ರಾತ್ರಿ 9:30ಕ್ಕೆ ಈ ತೀರ್ಪು ಪ್ರಕಟಗೊಳ್ಳಲಿದೆ. ಒಂದೊಮ್ಮೆ ವಿನೇಶ್​ಗೆ ಬೆಳ್ಳಿ ಪದಕ ನೀಡುವಂತೆ ತೀರ್ಪು ಪ್ರಕಟಗೊಂಡರೆ ಭಾರತದ ಪದಕ ಸಂಖ್ಯೆ 7ಕ್ಕೆ ಏರಲಿದೆ. ಜತೆಗೆ ವಿನೇಶ್​ ಐತಿಹಾಸಿಕ ಪದಕ ಗೆದ್ದ ಭಾರತೀಯ ಮಹಿಳಾ ಕುಸ್ತಿಪಟು ಎನ್ನುವ ಹಿರಿಮೆಗೂ ಪಾತ್ರರಾಗಲಿದ್ದಾರೆ.

ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದುಶ್ಪತ್ ಸಿಂಘಾನಿಯಾ ಸೇರಿದಂತೆ ವಿನೇಶ್ ಅವರ ವಕೀಲರು ವಿನೇಶ್​ ಪರ ವಾದ ಮಾಡಿದ್ದಾರೆ. ತೂಕ ಹೆಚ್ಚಳವು ದೇಹದ ನೈಸರ್ಗಿಕ ಚೇತರಿಕೆ ಪ್ರಕ್ರಿಯೆಯಿಂದಾಗಿ ಮತ್ತು ದೇಹ ನೋಡಿಕೊಳ್ಳುವುದು ಕ್ರೀಡಾಪಟುವಿನ ಮೂಲಭೂತ ಹಕ್ಕು ಎಂದು ವಾದಿಸಿದ್ದಾರೆ. ಸ್ಪರ್ಧೆಯ 1ನೇ ದಿನದಂದು ಆಕೆಯ ದೇಹದ ತೂಕವು ನಿಗದಿತ ಮಿತಿಗಿಂತ ಕಡಿಮೆಯಾಗಿತ್ತು. ಬಳಿಕ ಏಕಾಏಕಿ ಏರಿಕೆಯಾಗಿದೆ. ಅದು ವಂಚನೆಯಲ್ಲ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ Vinesh Phogat : ವಿನೇಶ್​ ಫೋಗಟ್ ಎಫೆಕ್ಟ್​​; ತೂಕದ ನಿಯಮಗಳ ಬದಲಾವಣೆಗೆ ವಿಶ್ವ ಕುಸ್ತಿ ಒಕ್ಕೂಟ ನಿರ್ಧಾರ?

ಸೆಮಿಫೈನಲ್​ ವೇಳೆ ವಿನೇಶ್​ 49.9 ಕೆಜಿ ತೂಕವಿದ್ದರು. 3 ಬೌಟ್‌ಗಳು ಮುಗಿಯುವ ವೇಳೆಗೆ ಶಕ್ತಿ ಕಾಪಾಡಿಕೊಳ್ಳಲು ಹೈ ಎನರ್ಜಿ ಆಹಾರ ಸೇವಿಸಿದ ಕಾರಣ ಅವರ ತೂಕ 2.8 ಕೆಜಿ ಹೆಚ್ಚಳವಾಗಿತ್ತು. ಈ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ ಪರೀಕ್ಷೆಗೆ ಕಳುಹಿಸಲಾಯಿತು. ಆದರೂ 100 ಗ್ರಾಂ ಹೆಚ್ಚಿದ್ದ ಕಾರಣ ಅನರ್ಹಗೊಂಡರು.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿದ ಬೆನ್ನಲ್ಲೇ ವಿಶ್ವ ಕುಸ್ತಿ ಆಡಳಿತ ಮಂಡಳಿ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ತಮ್ಮ ನಿಯಮದಲ್ಲಿ ಬದಲಾವಣೆ ಮಾಡಲು ಮುಂದಾಗಿದೆ. ತೂಕದ ನಿಯಮಗಳು ಸಂಪೂರ್ಣವಾಗಿ ಬದಲಾಗುವ ಸಾಧ್ಯತೆಯಿಲ್ಲವಾದರೂ, ಕ್ರೀಡಾಪಟುಗಳ ಸುರಕ್ಷತೆ ಮತ್ತು ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೆಲವು ಸಣ್ಣ ಮಾರ್ಪಾಡುಗಳನ್ನು ಮಾಡಲಾಗುವುದು ಎಂದು ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Ishan Kishan: ಬುಚ್ಚಿ ಬಾಬು ಕ್ರಿಕೆಟ್ ಟೂರ್ನಿ; ಜಾರ್ಖಂಡ್ ತಂಡಕ್ಕೆ ಇಶಾನ್ ಕಿಶನ್ ನಾಯಕ

Ishan Kishan: ದುಲೀಪ್‌ ಟ್ರೋಫಿ ಪಂದ್ಯಾವಳಿಯಲ್ಲಿಯೂ ಇಶಾನ್​ ಆಡುವ ಸಾಧ್ಯತೆ ಇದೆ. ಈ ಟೂರ್ನಿ ಸೆಪ್ಟೆಂಬರ್​ 5ರಿಂದ ಆರಂಭವಾಗಲಿದೆ.

VISTARANEWS.COM


on

Ishan Kishan
Koo

ರಾಂಚಿ: ರಣಜಿ ಆಡಲು ನಿರಾಕರಿಸಿದ್ದ ಕಾರಣದಿಂದಾಗಿ ಟೀಮ್​ ಇಂಡಿಯಾದಲ್ಲಿ ಅವಕಾಶ ವಂಚಿತರಾಗಿರುವ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಇಶಾನ್ ಕಿಶನ್(Ishan Kishan)​ ಮತ್ತೆ ದೇಶೀಯ ಕ್ರಿಕೆಟ್​ ಆಡಲು ಮುಂದಾಗಿದ್ದಾರೆ. ಆಗಸ್ಟ್ 15 ರಿಂದ ಆರಂಭವಾಗಲಿರುವ ಬುಚ್ಚಿ ಬಾಬು(Buchi Babu) ಕ್ರಿಕೆಟ್ ಟೂರ್ನಿಯಲ್ಲಿ ಜಾರ್ಖಂಡ್ ಪರ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಮತ್ತೆ ಭಾರತ ತಂಡಕ್ಕೆ ಕಮ್​ಬ್ಯಾಕ್​ ಮಾಡುವ ಪ್ರಯತ್ನ ಮಾಡಲಿದ್ದಾರೆ.

ಭಾರತದ ಮಾಜಿ ಕ್ರಿಕೆಟಿಗ ಮೊತವರಪು ವೆಂಕಟ ಮಹಿಪತಿ ನಾಯ್ಡು ಅವರ ಸ್ಮರಣಾರ್ಥವಾಗಿ ನಡೆಸುವ ಕ್ರಿಕೆಟ್​ ಟೂರ್ನಿ ಇದಾಗಿದೆ. ಭಾರತ ಪರ ಆಡುವ ವೇಳೆ ಇವರು ಬುಚ್ಚಿ ಬಾಬು ನಾಯ್ಡು ಎಂದೇ ಖ್ಯಾತಿ ಗಳಿಸಿದ್ದರು. ಹೀಗಾಗಿ ಈ ಟೂರ್ನಿಗೆ ಇದೇ ಹೆಸರನ್ನು ಇರಿಸಲಾಗಿದೆ. ಒಟ್ಟು 12 ತಂಡಗಳು ಈ ಟೂರ್ನಿಯಲ್ಲಿ ಆಡಲಿವೆ. ರಣಜಿ ಮಾದರಿಯಂತೆ 4 ದಿನಗಳ ಕಾಲ ನಡೆಯುವ ಟೂರ್ನಿ ಇದಾಗಿದೆ. 12 ತಂಡಗಳನ್ನು ತಲಾ ಮೂರರಂತೆ ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗುತ್ತದೆ.

ದುಲೀಪ್‌ ಟ್ರೋಫಿ ಪಂದ್ಯಾವಳಿಯಲ್ಲಿಯೂ ಇಶಾನ್​ ಆಡುವ ಸಾಧ್ಯತೆ ಇದೆ. ಈ ಟೂರ್ನಿ ಸೆಪ್ಟೆಂಬರ್​ 5ರಿಂದ ಆರಂಭವಾಗಲಿದೆ. ಪ್ರವಾಸಿ ಬಾಂಗ್ಲಾದೇಶ ವಿರುದ್ಧ ಭಾರತ ತಂಡ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿರುವ ಕಾರಣ ಭಾರತ ತಂಡದ ಅನೇಕ ಕ್ರಿಕೆಟಿಗರು ಕೂಡ ಈ ಬಾರಿ ದುಲೀಪ್‌ ಟ್ರೋಫಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ಟೆಸ್ಟ್‌ ತಂಡದ ಸಂಭಾವ್ಯ ಆಟಗಾರರಾದ ಶುಭಮನ್‌ ಗಿಲ್‌, ಶ್ರೇಯಸ್‌ ಅಯ್ಯರ್‌, ಕೆ.ಎಲ್‌. ರಾಹುಲ್‌, ರಿಷಭ್‌ ಪಂತ್‌, ರವೀಂದ್ರ ಜಡೇಜ, ಅಕ್ಷರ್‌ ಪಟೇಲ್‌, ಕುಲದೀಪ್‌ ಯಾದವ್‌ ಮೊದಲಾದವರೆಲ್ಲ ದುಲೀಪ್‌ ಟ್ರೋಫಿಯ ಕೆಲವು ಪಂದ್ಯಗಳಲ್ಲಿ ಆಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ Ishan Kishan: ಟೀಮ್​ ಇಂಡಿಯಾದಲ್ಲಿ ಇಶಾನ್ ಕಿಶನ್​ಗೆ ಬಾಗಿಲು ಬಂದ್​?

ಕಳೆದ ವರ್ಷ ನವೆಂಬರ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಸಂದರ್ಭದಲ್ಲಿ ಕಿಶನ್ ಕೊನೆಯದಾಗಿ ಭಾರತಕ್ಕಾಗಿ ಆಡಿದ್ದರು. ನಂತರದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾಗಿದ್ದರೂ ಕೂಡ ಅಂತಿಮ ಹಂತದಲ್ಲಿ ವೈಯಕ್ತಿಕ ಕಾರಣಗಳಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದರು. ಸ್ವಲ್ಪ ವಿರಾಮವನ್ನು ತೆಗೆದುಕೊಂಡ ಇಶಾನ್​ಗೆ ಅಂದಿನ ಕೋಚ್​ ದ್ರಾವಿಡ್​ ಮತ್ತು ಆಯ್ಕೆ ಸಮಿತಿ ರಣಜಿ ಟ್ರೋಫಿ ಪಂದ್ಯಗಳಲ್ಲಿ ಆಡುವಂತೆ ಸೂಚನೆ ನೀಡಿತ್ತು. ಆದರೆ ಇದನ್ನು ಇಶಾನ್​ ಕಡೆಗಣಿಸಿದ್ದರು. ಈ ಕಾರಣದಿಂದ ಬಿಸಿಸಿಐ ಅವರನ್ನು ಕೇಂದ್ರೀಯ ಗುತ್ತಿಗೆಯಿಂದಲೂ ಕೈಬಿಟ್ಟಿತ್ತು.

ಮಾನಸಿಕ ಒತ್ತಡದದಿಂದ ಬಳಲುತ್ತಿರುವುದಾಗಿ ಸುಳ್ಳು ಕಾರಣ ನೀಡಿ  ಮುಕೇಶ್‌ ಅಂಬಾನಿ(Mukesh Ambani) ಪುತ್ರ ಅನಂತ್‌ ಅಂಬಾನಿ(Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಅವರ ವಿವಾಹಪೂರ್ವ(Anant Ambani wedding) ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ದುಬೈನಲ್ಲಿಯೂ ಪಾರ್ಟಿ ಮಾಡಿ ಸಿಕ್ಕಿಬಿದ್ದಿದ್ದರು. ಇದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿತ್ತು.

ತಂಡಕ್ಕೆ ಆಯ್ಕೆ ಮಾಡದಿರುವುದರ ಕುರಿತು ಕೆಲ ದಿನಗಳ ಹಿಂದೆ ಪ್ರತಿಕ್ರಿಯೆ ನೀಡಿದ್ದ ಇಶಾನ್​, “ನಾನು ಬ್ರೇಕ್ ಪಡೆದಿದ್ದೆ, ನನ್ನ ಪ್ರಕಾರ ಇದು ಸಾಮಾನ್ಯ. ತಂಡಕ್ಕೆ ಕಮ್ ಬ್ಯಾಕ್ ಮಾಡಬೇಕಾದರೆ ದೇಶೀಯ ಕ್ರಿಕೆಟ್​ನಲ್ಲಿ ಪ್ರದರ್ಶನ ನೀಡಬೇಕು ಎಂಬ ನಿಯಮವಿದೆ ಎನ್ನುವುದು ನನಗೆ ತಿಳಿದಿದೆ. ಆದರೆ, ಅಂದು ನಾನು ಆಡುವ ಮನಸ್ಥಿತಿಯಲ್ಲಿ ಇರಲಿಲ್ಲ. ಹಿಗಾಗಿಯೇ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಬ್ರೇಕ್ ಪಡೆದಿದ್ದೆ. ಉತ್ತಮ ಫಾರ್ಮ್​ನಲ್ಲಿರುವಾಗ ಅಂತಾರಾಷ್ಟ್ರೀಯ ಕ್ರಿಕೆಟ್​ ಬಿಟ್ಟು ದೇಶೀಯ ಕ್ರಿಕೆಟ್​ನಲ್ಲಿ ಆಡಬೇಕು ಎನ್ನುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಇಂಡಿಯನ್ ಎಕ್ಸ್ ಪ್ರೆಸ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

Continue Reading

ಕ್ರೀಡೆ

Paris Paralympic 2024: ಪ್ಯಾರಾಲಿಂಪಿಕ್ಸ್ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಹಾಲಿ ಚಾಂಪಿಯನ್‌ ಪ್ರಮೋದ್ ಭಗತ್‌ಗೆ ಅಮಾನತು ಶಿಕ್ಷೆ

Paris Paralympic 2024: ಡೋಪಿಂಗ್ ವಿರೋಧಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಟೋಕಿಯೊ ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ ವಿಜೇತ, ಭಾರತದ ಪ್ರಮೋದ್ ಭಗತ್(Pramod Bhagat)ಅವರನ್ನು 18 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ. ಹೀಗಾಗಿ ಪ್ರಮೋದ್​ಗೆ ಈ ಬಾರಿಯ ಪ್ಯಾರಾಲಿಂಪಿಕ್ಸ್ ಕೈತಪ್ಪಿದೆ.

VISTARANEWS.COM


on

Paris Paralympic 2024
Koo

ನವದೆಹಲಿ: ಪ್ಯಾರಿಸ್​ ಪ್ಯಾರಾಲಿಂಪಿಕ್ಸ್(Paris Paralympic 2024) ಕ್ರೀಡಾಕೂಟ ಆರಂಭಕ್ಕೂ ಮುನ್ನವೇ ಭಾರತಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ. ಟೋಕಿಯೊ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್​ ಪುರುಷರ ಸಿಂಗಲ್ಸ್ ಎಸ್‌ಎಲ್ 3 ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಪ್ರಮೋದ್ ಭಗತ್(Pramod Bhagat) ಅವರನ್ನು 18 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ. ಹೀಗಾಗಿ ಪ್ರಮೋದ್​ಗೆ ಈ ಬಾರಿಯ ಪ್ಯಾರಾಲಿಂಪಿಕ್ಸ್ ಕೈತಪ್ಪಿದೆ. ಡೋಪಿಂಗ್ ವಿರೋಧಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ಈ ಶಿಕ್ಷೆ ವಿಧಿಸಲಾಗಿದೆ ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ (BWF) ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಮಾರ್ಚ್ 1, 2024 ರಂದು, ಕೋರ್ಟ್ ಆಫ್ ಆರ್ಬಿಟ್ರೇಶನ್ ಆಫ್ ಸ್ಪೋರ್ಟ್ (CAS) ಡೋಪಿಂಗ್ ವಿರೋಧಿ ವಿಭಾಗವು ಬಿಡಬ್ಲ್ಯುಎಫ್​ ಡೋಪಿಂಗ್ ವಿರೋಧಿ ನಿಯಮಗಳ ಉಲ್ಲಂಘನೆಯಲ್ಲಿ ಭಗತ್, 12 ತಿಂಗಳೊಳಗೆ ಮೂರು ಬಾರಿ ವಿಫಲರಾಗಿದ್ದಾರೆ ಎಂದು ಬಿಡಬ್ಲ್ಯುಎಫ್​ ತನ್ನ ಹೇಳಿಕೆಯಲ್ಲಿ ತಿಳಿಸಿದೆ. “ಭಗತ್ ತಮ್ಮ ಅಮಾನತಿನ ನಿರ್ಧಾರವನ್ನು ಪ್ರಶ್ನಿಸಿ ಜುಲೈ 29 ರಂದು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ(CAS)ಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಈ ಮನವಿಯನ್ನು ಸಿಎಎಸ್‌ ವಜಾಗೊಳಿಸಿದೆ.

ಇದನ್ನೂ ಓದಿ Paris Olympics 2024 : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯಿಂದ ಪ್ಯಾರಿಸ್ ಒಲಿಂಪಿಕ್ಸ್ ಸಾಧಕರಿಗೆ ಆತಿಥ್ಯ

ಮೂರು ಬಾರಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಗತ್‌ ಚಿನ್ನ ಗೆದ್ದಿದ್ದಾರೆ. ಕಳೆದ ಟೋಕಿಯೋದಲ್ಲಿಯೂ ಚಿನ್ನ ಗೆದ್ದಿದ್ದರು. ಆದರೆ, ಈ ಬಾರಿ ಅವರಿಗೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗುವುದಿಲ್ಲ. “ಇದು ಅತ್ಯಂತ ದುಃಖಕರ ಮತ್ತು ದುರದೃಷ್ಟಕರ ಸಂಗತಿ. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಖಚಿತವಾದ ಒಂದು ಪದಕ ಈ ಬಾರಿ ಕೈತಪ್ಪಿದೆ. ಭಗತ್‌ ಬಲಶಾಲಿಯಾಗಿ ಮರಳುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದು ಭಾರತದ ಪ್ಯಾರಾ-ಬ್ಯಾಡ್ಮಿಂಟನ್ ಮುಖ್ಯ ಕೋಚ್ ಗೌರವ್ ಖನ್ನಾ ಪಿಟಿಐಗೆ ತಿಳಿಸಿದ್ದಾರೆ.

ಐದನೇ ವಯಸ್ಸಿನಲ್ಲಿ ಎಡಗಾಲಿನ ಅಂಗವೈಕಲ್ಯಕ್ಕೆ ತುತ್ತಾಗಿ ಪೋಲಿಯೊಗೆ ಒಳಗಾದ ಭಗತ್ ಅವರು ಎರಡು ಬಾರಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತರಾಗಿದ್ದಾರೆ ಮತ್ತು ಅವರ ವಿಭಾಗದಲ್ಲಿ ಪ್ರಸ್ತುತ ವಿಶ್ವ ನಂ 3 ಆಗಿದ್ದಾರೆ.

Continue Reading

ಕ್ರೀಡೆ

Glenn Maxwell: ಮ್ಯಾಕ್ಸ್‌ವೆಲ್ ಖರೀದಿಗೆ 3 ಫ್ರಾಂಚೈಸಿಗಳ ಮಧ್ಯೆ ಪೈಪೋಟಿ

Glenn Maxwell: ಗ್ಲೆನ್​ ಮ್ಯಾಕ್ಸ್​ವೆಲ್​ ಅವರನ್ನು ಖರೀದಿಸಲು ಮmೂರು ಫ್ರಾಂಚೈಸಿಗಳಾದ ಡೆಲ್ಲಿ ಕ್ಯಾಪಿಟಲ್ಸ್​, ಪಂಜಾಬ್​ ಕಿಂಗ್ಸ್​ ಮತ್ತು ಮುಂಬೈ ಇಂಡಿಯನ್ಸ್​ ಪೈಪೋಟಿಗೆ ಬಿದ್ದಿದೆ ಎಂದು ವರದಿಯಾಗಿದೆ.

VISTARANEWS.COM


on

Glenn Maxwell
Koo

ಮುಂಬಯಿ: 18 ಆವೃತ್ತಿಯ ಐಪಿಎಲ್(IPL 2025)​ ಟೂರ್ನಿಯ ಆಟಗಾರರ ಮೆಗಾ ಹರಾಜಿಗೆ ಇನ್ನೂ 4 ತಿಂಗಳು ಬಾಕಿ ಇದ್ದರೂ ಕೂಡ ಎಲ್ಲ 10 ಫ್ರಾಂಚೈಸಿಗಳು ಈಗಿನಿಂದಲೇ ಪೂರ್ವ ತಯಾರಿ ಆರಂಭಿಸಿದೆ. ಯಾವ ಆಟಗಾರರನ್ನು ಉಳಿಸುವುದು? ಜತೆಗೆ ಯಾರನ್ನೆಲ್ಲ ಖರೀದಇ ಮಾಡಬಹುದೆಂಬ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿದೆ. ಇದೀಗ ಆಸ್ಟ್ರೇಲಿಯಾದ ಆಲ್​ರೌಂಡರ್​, ಆರ್​ಸಿಬಿ ಪರ ಆಡುವ ಗ್ಲೆನ್​ ಮ್ಯಾಕ್ಸ್​ವೆಲ್(Glenn Maxwell)​ ಅವರನ್ನು ಖರೀದಿಸಲು ಮೂರು ಫ್ರಾಂಚೈಸಿಗಳು ಪೈಪೋಟಿಗೆ ಬಿದ್ದಿದೆ ಎಂದು ವರದಿಯಾಗಿದೆ.

ಆರ್​ಸಿಬಿ ಈ ಬಾರಿ ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಂಡು ಉಳಿದೆಲ್ಲ ಆಟಗಾರರನ್ನು ತಂಡದಿಂದ ಕೈ ಬಿಡಲಿದೆ ಎಂದು ವರದಿಯಾದೆ. ಗ್ಲೆನ್​ ಮ್ಯಾಕ್ಸ್​ವೆಲ್​ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವ ಬಗ್ಗೆ ಒಲವು ತೋರಿಲ್ಲ ಎನ್ನಲಾಗಿದೆ. ಇದೇ ಕಾರಣಕ್ಕೆ ಕೆಲವು ದಿನಗಳ ಹಿಂದೆ ಮ್ಯಾಕ್ಸ್​ವೆಲ್​ ಆರ್​ಸಿಬಿಯ ಇನ್​ಸ್ಟಾಗ್ರಾಮ್​ ಖಾತೆಯನ್ನು ಅನ್​ಫಾಲೋ ಮಾಡಿದ್ದರು. ಮೂಲಗಳ ಪ್ರಕಾರ ಆರ್​ಸಿಬಿ ವಿರಾಟ್​ ಕೊಹ್ಲಿ, ಇಂಗ್ಲೆಂಡ್​ನ ವಿಲ್ ಜಾಕ್ಸ್​ ಮತ್ತು ಮೊಹಮ್ಮದ್​ ಸಿರಾಜ್​ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

ಈ ಬಾರಿಯ ಆವೃತ್ತಿಯಲ್ಲಿ ಮ್ಯಾಕ್ಸ್​ವೆಲ್​ ಆರ್​ಸಿಬಿ ಪರ ಅತ್ಯಂತ ಕಳಪೆ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆಡಿದ 10 ಪಂದ್ಯಗಳಲ್ಲಿ ಗಳಿಸಿದ್ದು ಕೇಲವ 52 ರನ್​ ಮಾತ್ರ. ಹೀಗಾಗಿ ಈ ಬಾರಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವುದು ಅಸಾಧ್ಯ. 2021 ರ ಐಪಿಎಲ್​ಗೂ ಮುನ್ನ ನಡೆದ ಹರಾಜಿನಲ್ಲಿ ಬರೋಬ್ಬರಿ 14.25 ಕೋಟಿ ರೂ. ಪಡೆದು ಆರ್​ಸಿಬಿ ತಂಡವನ್ನು ಸೇರಿದ್ದರು. ಇದೀಗ ಅವರನ್ನು ಈ ಬಾರಿಯ ಹರಾಜಿನಲ್ಲಿ ಖರೀದಿಸಲು ಮೂರು ತಂಡಗಳು ಪೈಪೋಟಿ ನಡೆಸಿವೆ ಎನ್ನಲಾಗಿದೆ. ಈ ತಂಡಗಳೆಂದರೆ ಡೆಲ್ಲಿ ಕ್ಯಾಪಿಟಲ್ಸ್​, ಪಂಜಾಬ್​ ಕಿಂಗ್ಸ್​ ಮತ್ತು ಮುಂಬೈ ಇಂಡಿಯನ್ಸ್​ ಎಂದು ತಿಳಿದುಬಂದಿದೆ. ಈ ಮೂರು ತಂಡಗಳ ಪರವಾಗಿಯೂ ಮ್ಯಾಕ್ಸ್​ವೆಲ್​ ಹಿಂದೆ ಆಡಿದ್ದರು.

ಇದನ್ನೂ ಓದಿ IPL 2025: ಫ್ರಾಂಚೈಸಿಗಳ ಒತ್ತಾಯಕ್ಕೆ ಮಣಿದು ಇಷ್ಟು ಆಟಗಾರರ ರಿಟೇನ್​ಗೆ ಅವಕಾಶ ನೀಡಲಿದೆ ಬಿಸಿಸಿಐ

ಟಿ20 ವಿಶ್ವಕಪ್​ ಟೂರ್ನಿಯಲ್ಲೂ ಮ್ಯಾಕ್ಸ್​ವೆಲ್​ ಅತ್ಯಂತ ಕಳಪೆ ಬ್ಯಾಟಿಂಗ್​ ಪ್ರದರ್ಶನ ತೋರಿದ ಕಾರಣದಿಂದ ಅವರಿಗೆ ಈ ಬಾರಿ ಹರಾಜಿನಲ್ಲಿ ದೊಡ್ಡ ಮೊತ್ತ ಸಿಗುವುದು ಅನುಮಾನ.

6 ಆಟಗಾರರ ರಿಟೇನ್​ಗೆ ಅವಕಾಶ?


ಫ್ರಾಂಚೈಸಿಗಳ ಒತ್ತಾಯಕ್ಕೆ ಮಣಿದು ಕೊನೆಗೂ ಬಿಸಿಸಿಐ(BCCI) ಮುಂದಿನ ಐಪಿಎಲ್(IPL 2025)​ ಮೆಗಾ(mega auction) ಹರಾಚಿನಲ್ಲಿ ಪ್ರತಿ ತಂಡಕ್ಕೆ ಗರಿಷ್ಠ 4ರ ಬದಲಾಗಿ 6 ಆಟಗಾರರನ್ನು ರಿಟೇನ್​ ಮಾಡಿಕೊಳ್ಳುವ ಅವಕಾಶ ಕಲ್ಪಿಸಿದೆ ಎಂದು ವರದಿಯಾಗಿದೆ. ಬಿಸಿಸಿಐ ಈ ಮುನ್ನ ಗರಿಷ್ಠ 4 ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ ನೀಡುವುದಾಗಿ ತಿಳಿಸಿತ್ತು. ಅಲ್ಲದೆ 2022ರಲ್ಲಿಯೂ 4 ಆಟಗಾರರ ರಿಟೇನ್​ ಅವಕಾಶ ನೀಡಿತ್ತು. ಈ ಬಾರಿ ಫ್ರಾಂಚೈಸಿಗಳು 8 ಆಟಗಾರರನ್ನು ರೀಟೆನ್​ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿತ್ತು. ಇದೀಗ ಬಿಸಿಸಿಐ 6 ಆಟಗಾರರ ರಿಟೇನ್​ಗೆ ಅವಕಾಶ ಕಲ್ಪಿಸಿದೆ ಎನ್ನಲಾಗಿದೆ.

Continue Reading

ಕ್ರೀಡೆ

Viral News: ಒಲಿಂಪಿಕ್ಸ್​ ಚಿನ್ನ ಗೆದ್ದ ಸಾಧಕನಿಗೆ ಎಮ್ಮೆ ಉಡುಗೊರೆ ಕೊಟ್ಟ ಮಾವ!

Viral News: ಚಿನ್ನ ಗೆದ್ದ ನದೀಮ್​ಗೆ ಪಾಕಿಸ್ತಾನ ಪ್ರಾಂತ್ಯದ ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ 10 ಕೋಟಿ ರೂ., ಸಿಂಧ್ ಸರ್ಕಾರ ಐದು ಕೋಟಿ ರೂ., ವಿಶ್ವ ಅಥ್ಲೀಟ್ ಫೆಡರೇಶನ್ ಒಂದು ಕೋಟಿ 40 ಲಕ್ಷ ಬಹುಮಾನ ಘೋಷಿಸಿದ್ದು, ಸಿಂಧ್ ಗವರ್ನರ್ ಕಮ್ರಾನ್ ತೆಸ್ಸೋರಿ, ಕ್ರಿಕೆಟಿಗ ಅಹ್ಮದ್ ಶೆಹಜಾದ್ ಮತ್ತು ಓರ್ಷ ಗಾಯಕ 30 ಲಕ್ಷಗಳನ್ನು ನೀಡಿದ್ದರು.

VISTARANEWS.COM


on

Viral News
Koo

ಕರಾಚಿ: ಸಾಮಾನ್ಯವಾಗಿ ಕ್ರೀಡೆಯಲ್ಲಿ ಪ್ರಶಸ್ತಿ ಗೆದ್ದಾಗ ಈ ಕ್ರೀಡಾಪಟುವಿಗೆ ನಗದು ಬಹುಮಾನ, ಕಾರು, ಬೈಕ್​ ಹೀಗೆ ಇತರ ಬೆಲೆ ಬಾಳುವ ವಸ್ತುಗಳನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ಆದರೆ, ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಜಾವೆಲಿನ್​ ಎಸೆತಗಾರ ಅರ್ಷದ್​ ನದೀಮ್​ಗೆ(Arshad Nadeem) ವಿಶೇಷ(Viral News) ಉಡುಗೊರೆಯೊಂದು ದೊರಕಿದೆ. ಅದು ಕೂಡ ಅವರ ಮಾವನಿಂದ.

ಹೌದು, ಅರ್ಷದ್​ಗೆ ಅವರ ಪತ್ನಿಯ ತಂದೆ(ಮಾವ) ಮಹಮ್ಮದ್​ ನವಾಜ್​ ಅವರು ಎಮ್ಮೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಹಮ್ಮದ್​ ನವಾಜ್​, “ನಮ್ಮ ಗ್ರಾಮದಲ್ಲಿ ಎಮ್ಮೆಯನ್ನು ಉಡುಗೊರೆಯಾಗಿ ನೀಡುವುದು ಶ್ರೇಷ್ಠ ಗೌರವವಾಗಿದೆ” ಎಂದು ಹೇಳಿದ್ದಾರೆ.

ಚಿನ್ನ ಗೆದ್ದ ನದೀಮ್​ಗೆ ಪಾಕಿಸ್ತಾನ ಪ್ರಾಂತ್ಯದ ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ 10 ಕೋಟಿ ರೂ., ಸಿಂಧ್ ಸರ್ಕಾರ ಐದು ಕೋಟಿ ರೂ., ವಿಶ್ವ ಅಥ್ಲೀಟ್ ಫೆಡರೇಶನ್ ಒಂದು ಕೋಟಿ 40 ಲಕ್ಷ ಬಹುಮಾನ ಘೋಷಿಸಿದ್ದು, ಸಿಂಧ್ ಗವರ್ನರ್ ಕಮ್ರಾನ್ ತೆಸ್ಸೋರಿ, ಕ್ರಿಕೆಟಿಗ ಅಹ್ಮದ್ ಶೆಹಜಾದ್ ಮತ್ತು ಓರ್ಷ ಗಾಯಕ 30 ಲಕ್ಷಗಳನ್ನು ನೀಡಿದ್ದರು.

ಪಾಕಿಸ್ತಾನದ ಪಂಜಾಬ್‌ನಲ್ಲಿರುವ ಮಿಯಾನ್‌ ಚಾನುವಿನಲ್ಲಿನ ಬಡ ಪಂಜಾಬಿ ಕುಟುಂಬದಲ್ಲಿ ಜನಿಸಿದ ಅರ್ಷದ್‌ ನದೀಮ್‌, ಇಂದು ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಬೇಕಾದರೆ ಅವರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ತಂದೆ ಮುಹಮ್ಮದ್‌ ಅಶ್ರಫ್‌ ಗಾರೆ ಮೇಸ್ತ್ರಿ ಆಗಿದ್ದ ಕಾರಣ, ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಅರ್ಷದ್‌ ನದೀಮ್‌ ಕೂಡ ತಂದೆಯ ಜತೆ ಗಾರೆ ಕೆಲಸವನ್ನು ಮಾಡಿದ್ದರು. ಇದರೆ ಜತೆಗೆ ಕ್ರೀಡೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಅರ್ಷದ್​ ಅವರು ರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹಲವು ಪದಕಗಳನ್ನು ಗೆದ್ದು ಕೊಟ್ಟರು ಕೂಡ ಪಾಕಿಸ್ತಾನ ಸರ್ಕಾರ ಅವರಿಗೆ ಕಿಂಚಿತ್ತು ಹಣಕಾಸಿಕ ನೆರವು ನೀಡಲೇ ಇಲ್ಲ. ಕಳೆದ ಟೋಕಿಯೋ ಒಲಿಂಪಿಕ್ಸ್‌ನಲ್ಲಿ, ಈ ಬಾರಿಯ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿಯೂ ನದೀಮ್ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಅವರಿಗೆ ಪಾಕ್‌ ಸರ್ಕಾರದಿಂದ ಯಾವುದೇ ಬೆಂಬಲ ಸಿಕ್ಕಿರಲಿಲ್ಲ. ಊರಿನ ಜನರಿಂದ ಸಿಕ್ಕ ಹಣಕಾಸಿಕ ನೆರವಿನಿಂದ ಟೋಕಿಯೊದಲ್ಲಿ ಪಾಲ್ಗೊಂಡಿದ್ದರು. ಅಲ್ಲಿ 5ನೇ ಸ್ಥಾನ ಪಡೆದಿದ್ದರು. ಈ ಬಾರಿ ಪ್ಯಾರಿಸ್​ನಲ್ಲಿ ಚಿನ್ನದ ಪದಕ ಗೆದ್ದು ಸಂಭ್ರಮಿಸಿದರು.

ಇದನ್ನೂ ಓದಿ Viral News : ಪತ್ನಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಭೀಕರವಾಗಿ ಕೊಂದ ಪತಿ

ಅರ್ಷದ್​ ನದೀಮ್​ (Arshad Nadeem)ಗೆ ಪ್ರೋತ್ಸಾಹವಾಗಿ ಪಾಕಿಸ್ತಾನ ಸರ್ಕಾರ ಕಿಂಚಿತ್ತು ಸಹಾಯ ಮಾಡದಿದ್ದರೂ ಕೂಡ ಇದೀಗ ಅವರಿಗೆ ಕೋಟಿಗಟ್ಟಲೇ ತೆರಿಗೆ ಕಟ್ಟುವಂತೆ ಸೂಚಿಸಿದೆ. ಸುಮಾರು 3 ರಿಂದ 6 ಕೋಟಿ ರೂ. ತೆರಿಗೆ ಪಾವತಿಸುವಂತೆ ನದೀಮ್​ಗೆ ಸೂಚಿಸುವ ಮೂಲಕ ಶಾಕ್​ ಕೊಟ್ಟಿದೆ.

ಫೆಡರಲ್ ಬೋರ್ಡ್ ಆಫ್ ರೆವೆನ್ಯೂ ನಿಯಮಗಳು ಹೇಳುವ ಪ್ರಕಾರ, ಆಟಗಾರರರು ಪಡೆದ ಬಹುಮಾನದ ಹಣಕ್ಕೆ ಸಂಬಂಧಿಸಿದಂತೆ ತೆರಿಗೆ ಪಾವತಿಸಬೇಕಾಗುತ್ತದೆ. ಅರ್ಷದ್​ ನದೀಮ್​ ಈವರೆಗೂ 20 ಕೋಟಿ ರೂ. ಬಹುಮಾನ ಮೊತ್ತವನ್ನು ಸ್ವೀಕರಿಸಿದ್ದು, ಈ ಮೊತ್ತಕ್ಕೆ ಅವರು ತೆರಿಗೆಯನ್ನು ಪಾವತಿಸಬೇಕಿದೆ. ಫೈಲರ್‌ಗಳು ಮತ್ತು ನಾನ್‌ಫೈಲರ್‌ಗಳಿಗೆ ತೆರಿಗೆ ದರ ವಿಭಿನ್ನವಾಗಿದೆ. ಫೈಲರ್‌ಗಳು ಒಟ್ಟು ಮೊತ್ತದ ಶೇಕಡಾ 15 ರಷ್ಟು ಪಾವತಿಸಬೇಕಾಗುತ್ತದೆ, ಆದರೆ ಫೈಲ್ ಮಾಡದವರು ಸ್ವೀಕರಿಸಿರುವ ಮೊತ್ತದ ಶೇಕಡಾ 30 ರಷ್ಟು ಪಾವತಿಸಬೇಕಾಗುತ್ತದೆ. ಅರ್ಷದ್ ತೆರಿಗೆ ಸಲ್ಲಿಸುವವರಾಗಿದ್ದರೆ, ಅವರು ಬಹುಮಾನದ ಮೊತ್ತದಲ್ಲಿ 3 ಕೋಟಿ ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ. ಒಂದು ವೇಳೆ ಇಲ್ಲವಾದಲ್ಲಿ 6 ಕೋಟಿ ರೂ. ಮೊತ್ತ ಪಾವತಿಸಬೇಕಾಗುತ್ತದೆ.

Continue Reading
Advertisement
Viral Video
Latest43 seconds ago

Viral Video: ಫುಟ್ಬಾಲ್ ಪಂದ್ಯದಲ್ಲಿ ಸೋತಿದ್ದಕ್ಕೆ ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ದೈಹಿಕ ಶಿಕ್ಷಕ; ವಿಡಿಯೊ ನೋಡಿ ಜನಾಕ್ರೋಶ

Ishan Kishan
ಕ್ರೀಡೆ5 mins ago

Ishan Kishan: ಬುಚ್ಚಿ ಬಾಬು ಕ್ರಿಕೆಟ್ ಟೂರ್ನಿ; ಜಾರ್ಖಂಡ್ ತಂಡಕ್ಕೆ ಇಶಾನ್ ಕಿಶನ್ ನಾಯಕ

Self harming
ಕರ್ನಾಟಕ9 mins ago

Self harming : ಶಿವಮೊಗ್ಗದಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Patanjali ads
ದೇಶ14 mins ago

Patanjali Ayurved Ads: ನ್ಯಾಯಾಂಗ ನಿಂದನೆ ಪ್ರಕರಣ ರದ್ದು; ಬಾಬಾ ರಾಮದೇವ್‌ಗೆ ಬಿಗ್‌ ರಿಲೀಫ್

Gold Rate Today
ಚಿನ್ನದ ದರ23 mins ago

Gold Rate Today: ಮತ್ತೆ ಕೈ ಸುಡುತ್ತಿದೆ ಚಿನ್ನ; ಬಂಗಾರ ದರದಲ್ಲಿ ಇಂದು ಭಾರಿ ಏರಿಕೆ

ಬೆಂಗಳೂರು26 mins ago

Assault Case: ಪಾರ್ಕಿಂಗ್‌ ವಿಚಾರಕ್ಕೆ ಡಿಶುಂ ಡಿಶುಂ; ಮಹಿಳೆಗೆ ಕಪಾಳಮೋಕ್ಷ!

Muda Scam
ಕರ್ನಾಟಕ35 mins ago

Muda Scam: ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸ್ವೀಕರಿಸದಂತೆ ಕೋರ್ಟ್‌ಗೆ ಅರ್ಜಿ

Tungabhadra Dam
ಪ್ರಮುಖ ಸುದ್ದಿ45 mins ago

Tungabhadra Dam: ಗೇಟ್‌ ರಿಪೇರಿಗಾಗಿ 60 ಟಿಎಂಸಿ ನೀರು ಖಾಲಿ, 8 ಜಿಲ್ಲೆಗಳ ರೈತರಿಗೆ ನೀರಿಲ್ಲ!

Naga Chaitanya
ಸಿನಿಮಾ47 mins ago

Naga Chaitanya: ನಾಗ ಚೈತನ್ಯ-ಶೋಭಿತಾ ನಿಶ್ಚಿತಾರ್ಥದ ಫೋಟೊ ಹಂಚಿಕೊಂಡ ಸಮಂತಾ

Paris Paralympic 2024
ಕ್ರೀಡೆ58 mins ago

Paris Paralympic 2024: ಪ್ಯಾರಾಲಿಂಪಿಕ್ಸ್ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಹಾಲಿ ಚಾಂಪಿಯನ್‌ ಪ್ರಮೋದ್ ಭಗತ್‌ಗೆ ಅಮಾನತು ಶಿಕ್ಷೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌