Tungabhadra Dam: ತುಂಗಭದ್ರಾ ಜಲಾಶಯದಿಂದ 15 ಟಿಎಂಸಿ ನೀರು ವ್ಯರ್ಥ; ಇಂದು ಸಿಎಂ ಸಿದ್ದರಾಮಯ್ಯ ಭೇಟಿ - Vistara News

ಪ್ರಮುಖ ಸುದ್ದಿ

Tungabhadra Dam: ತುಂಗಭದ್ರಾ ಜಲಾಶಯದಿಂದ 15 ಟಿಎಂಸಿ ನೀರು ವ್ಯರ್ಥ; ಇಂದು ಸಿಎಂ ಸಿದ್ದರಾಮಯ್ಯ ಭೇಟಿ

Tungabhadra Dam: ಆಡಂಬರದಿಂದ ಇರಬೇಕಾದ ಜಲಾಶಯದಲ್ಲೀಗ ನೀರವ ಮೌನ ಕವಿದಿದ್ದು, ಇಂದು ನಡೆಯಬೇಕಿದ್ದ ಸಿಎಂ ಬಾಗಿನ ಕಾರ್ಯಕ್ರಮ ರದ್ದಾಗಿದೆ. ಆದರೆ ಸಿಎಂ ಭೇಟಿ ನೀಡಿ ಕ್ರೆಸ್ಟ್‌ ಗೇಟ್‌ ಅನಾಹುತ ಪರಿಶೀಲನೆ ನಡೆಸಲಿದ್ದಾರೆ.

VISTARANEWS.COM


on

tungabhadra dam 19 crest gate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್‌ ಗೇಟ್ (Tungabhadra Dam Crest gate) ಕಿತ್ತು ಹೋದ (Crest gate crash) ಪರಿಣಾಮ ಅನ್ಯಾಯವಾಗಿ 15 ಟಿಎಂಸಿ (TMC) ನೀರು ಯಾವ ಉಪಯೋಗಕ್ಕೂ ಬಾರದೆ ನದಿಪಾಲಾಗಿದೆ. ಇಂದು ನಡೆಯಬೇಕಿದ್ದ ಸಿಎಂ ಬಾಗಿನ ಕಾರ್ಯಕ್ರಮ ರದ್ದುಪಡಿಸಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ (CM Siddaramaiah) ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಲಿದ್ದಾರೆ.

ತುಂಗಭದ್ರಾ ಜಲಾಶಯ 105.788 ಟಿಎಂಸಿ ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಭರಪೂರ ಮಳೆಯ ಪರಿಣಾಮ ಡ್ಯಾಮ್‌ ಪೂರ್ತಿಯಾಗಿ ತುಂಬಿತ್ತು. ಗೇಟ್ ಕೊಚ್ಚಿಹೋದ ದಿನ 105.788 ಟಿಎಂಸಿ ನೀರು ಸಂಗ್ರಹ ಇತ್ತು. ಅಂದಿನಿಂದ ಸದ್ಯದವರೆಗೆ 14ರಿಂದ 15 ಟಿಎಂಸಿಗೂ ಅಧಿಕ ನೀರು ನದಿ ಪಾಲಾಗಿದೆ. ಗೇಟ್ ಕಿತ್ತುಹೋಗಿದ್ದರಿಂದ ಯಾವುದೇ ಉಪಯೋಗಕ್ಕೆ ಬಾರದೇ ಜಲಾಶಯದ ನೀರು ಹರಿದುಹೋಗಿದೆ.

ತುಂಗಭದ್ರಾ ಜಲಾಶಯಕ್ಕೆ ಒಳಹರಿವು 35 ಸಾವಿರ ಕ್ಯೂಸೆಕ್ ಇದ್ದರೆ, ಹೊರಹರಿವು 1.09 ಲಕ್ಷ ಇದೆ. 105788 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲೀಗ 91 ಟಿಎಂಸಿ ನೀರು ಸಂಗ್ರಹವಾಗಿದೆ.

ಚೈನ್ ಲಿಂಕ್ ಕಟ್ ಆದಾಗಿನಿಂದ ಇಲ್ಲಿಯವರೆಗೆ ಟಿಬಿ ಬೋರ್ಡ್ ಯಾವುದೇ ದುರಸ್ತಿಗೆ ಮುಂದಾಗಿಲ್ಲ. 19ನೇ ಗೇಟ್‌ ಪೂರ್ತಿ ಹಾಳಾಗಿದ್ದು, ಹೊಸ ಗೇಟ್ ಕೂರಿಸಬೇಕು ಅಂದರೆ ಜಲಾಶಯದ ಅರ್ಧ ನೀರು ಖಾಲಿ ಆಗಲೇಬೇಕು. ಆಗ ಮಾತ್ರ ಗೇಟ್ ದುರಸ್ತಿ ಮಾಡೋದಕ್ಕೆ ಸಾಧ್ಯ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಅಂದರೆ ಮುಂದಿನ ಮೇ ತಿಂಗಳವರೆಗೂ ಇದರ ದುರಸ್ತಿ ಮಾಡಲು ಸಾದ್ಯವಿಲ್ಲದಾಗಿದೆ.

2022ರಲ್ಲೂ 19ನೇ ಗೇಟ್‌ಗೆ ಬಂದಿತ್ತು ಕಂಟಕ

2022ರಲ್ಲೂ 19ನೇ ಗೇಟ್‌ನಲ್ಲಿ ದೋಷ ಕಂಡುಬಂದಿತ್ತು. ತಾಂತ್ರಿಕ ದೋಷ ಕಂಡುಬಂದದ್ದರಿಂದ ಆ ಗೇಟ್ ಮೂಲಕ ನೀರು ಬಿಡುವುದನ್ನು ಸ್ಥಗಿತಗೊಳಿಸಲಾಗಿತ್ತು. ದೋಷ ನಿವಾರಿಸಿ, ಗೇಟ್ ಉಪಯೋಗಿಸಬೇಡಿ ಎಂದು ತಂತ್ರಜ್ಞರು ಸೂಚನೆ ಕೊಟ್ಟಿದ್ದರು. ಕಳೆದ ವರ್ಷ ಬರಗಾಲದಿಂದ ತುಂಗಭದ್ರಾ ಜಲಾಶಯ ತುಂಬಲೇ ಇಲ್ಲ. ಆಗ ಗೇಟ್‌ ಸರಿಪಡಿಸಲು ಸೂಕ್ತವಾದ ಕಾಲವಾಗಿತ್ತು. ಆದರೆ ತೊಂದರೆ ಬಗ್ಗೆ ಎಚ್ಚೆತ್ತುಕೊಂಡು ಸೂಕ್ತ ನಿರ್ವಹಣೆ ಮಾಡಿ ಕ್ರಮ ಕೈಗೊಳ್ಳಬೇಕಿದ್ದ ಅಧಿಕಾರಿಗಳು ಏನೂ ಮಾಡಿರಲಿಲ್ಲ.

ಮುಂಜಾಗ್ರತೆ ಕೈಗೊಂದು ಗೇಟ್ ಸರಿಯಾಗಿ ದುರಸ್ತಿ ಮಾಡಿಸಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ. ಇದು ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಹೊಣಿಗೇಡಿತನದ ಪರಿಣಾಮ. ದಿವ್ಯ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ತಲೆದಂಡ ಆಗಬೇಕು ಎಂದು ರೈತ ಸಂಘಟನೆಗಳು, ಅನ್ನದಾತರು, ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇಂದು ಸಿಎಂ ತುಂಗಭದ್ರಾ ಜಲಾಶಯ ವೀಕ್ಷಣೆ

ಇಂದು ಸಿಎಂ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಭೇಟಿ ನೀಡಿ ಚೈನ್ ಲಿಂಕ್ ಕಟ್ ಆಗಿ ಹಾನಿಗೊಳಗಾದ ಗೇಟ್ ಮತ್ತು ಜಲಾಶಯ ಪರಿಶೀಲಿಸಲಿದ್ದಾರೆ. ಬೆಳಗ್ಗೆ 11.00ಕ್ಕೆ HAL ವಿಮಾನ ನಿಲ್ದಾಣದಿಂದ ಟೇಕಾಫ್‌ ಆಗಲಿರುವ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್‌, 12.15ಕ್ಕೆ ಕೊಪ್ಪಳ ತಾಲೂಕಿನ ಗಿಣಗೇರಾ ಹೆಲಿಪ್ಯಾಡ್‌ಗೆ ತಲುಪಲಿದೆ. ಬಳಿಕ ರಸ್ತೆ ಮಾರ್ಗವಾಗಿ 12.30ಕ್ಕೆ ಹೊಸಪೇಟೆ ಬಳಿಯಿರುವ ತುಂಗಭದ್ರಾ ಜಲಾಶಯಕ್ಕೆ ಬರಲಿದ್ದಾರೆ.

ಜಲಾಶಯ ವೀಕ್ಷಣೆ ಬಳಿಕ ಹೊಸಪೇಟೆಯ ವೈಕುಂಠ ಅತಿಥಿ ಗೃಹದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಗೇಟ್ ಯಾಕೆ ಸಮಸ್ಯೆ ಆಯ್ತು, ದುರಸ್ತಿ ಮಾಡುವುದು ಹೇಗೆ ಇತ್ಯಾದಿ ಮಾಹಿತಿ ಪಡೆಯಲಿದ್ದಾರೆ. ನಂತರ ಮಾಜಿ ಸಂಸದ ಸಂಗಣ್ಣ ಕರಡಿ ಮನೆಗೆ ಊಟಕ್ಕೆ ತೆರಳಲಿದ್ದಾರೆ. ಸಂಜೆ 4ಕ್ಕೆ ಬೆಂಗಳೂರಿಗೆ ಮರಳಲಿದ್ದಾರೆ.

ಸಿಎಂ ಬಾಗಿನ ಇಲ್ಲ

ಆಡಂಬರದಿಂದ ಇರಬೇಕಾದ ಜಲಾಶಯದಲ್ಲೀಗ ನೀರವ ಮೌನ ಕವಿದಿದ್ದು, ಇಂದು ನಡೆಯಬೇಕಿದ್ದ ಸಿಎಂ ಬಾಗಿನ ಕಾರ್ಯಕ್ರಮ ರದ್ದಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮದುವಣಗಿತ್ತಿಯಂತೆ ಜಲಾಶಯ ಸಿಂಗಾರಗೊಳ್ಳಬೇಕಿತ್ತು. ವರ್ಷದಲ್ಲಿ ಎರಡನೇ ಬಾರಿ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿ ಆಗಿತ್ತು. ಮೂರು ದಿನದ ಮೊದಲೇ ಸಿಎಂ ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ ಕಾರ್ಯಕ್ರಮ ನಿಗದಿ ಆಗಿತ್ತು. ಬಾಗಿನ ಅರ್ಪಣೆಗೆ ಅಧಿಕಾರಿಗಳು ಭಾರಿ ಸಿದ್ಧತೆ ಮಾಡಿಕೊಂಡಿದ್ದರು.

ಆದರೆ ಜಲಾಶಯದ ಕ್ರೆಸ್ಟ್‌ ಗೇಟ್ ಕಿತ್ತುಹೋಗಿದ್ದರಿಂದ ಬಾಗಿನ ಅರ್ಪಣೆಗೆ ಬ್ರೇಕ್‌ ಬಿದ್ದಿದೆ. ಅಳವಡಿಸಿದ್ದ ಬ್ಯಾನರ್, ಫ್ಲೆಕ್ಸ್‌ಗಳ ತೆರವು ಮಾಡಲಾಗಿದೆ. ಡೆಕೋರೇಷನ್‌ಗೆ ತಂದ ವಸ್ತುಗಳನ್ನು ಟಿಬಿ ಬೋರ್ಡ್, ಜಿಲ್ಲಾಡಳಿತ ರಾಶಿ ಹಾಕಿದೆ. ಡ್ಯಾಂ ಸಿಂಗಾರಗೊಳಿಸಲು ತಂದಿದ್ದ ಪ್ಲಾಸ್ಟಿಕ್ ಶಾಮಿಯಾನ, ಆನೆ ಮೂರ್ತಿಗಳು, ಶಿಲ್ಪಕಲಾ ರೀತಿಯ ಕಂಬಗಳು ಹಾಗೆಯೇ ಬಿದ್ದಿವೆ. ಡ್ಯಾಂನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಿಸಲು ಬೊಮ್ಮಾಯಿ ಆಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Independence Day 2024: ಸ್ವಾತಂತ್ರ್ಯ ದಿನಾಚರಣೆಗೆ ಮಾಣಿಕ್‌ ಷಾ ಮೈದಾನ ಸಿದ್ಧ; ಪಾರ್ಕಿಂಗ್‌ ಮತ್ತಿತರ ವಿವರ ಇಲ್ಲಿದೆ

Independence Day 2024: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಿಳಿಸುವ ವಿಶೇಷ ಕಾರ್ಯಕ್ರಮ ಪ್ರದರ್ಶನವಿರಲಿದೆ. ಮಲ್ಲಕಂಬ, ಪ್ಯಾರಾ ಮೋಟರ್ ಹಾಗೂ ಮೋಟಾರು ಸೈಕಲ್ ಪ್ರದರ್ಶನ ನಡೆಯಲಿದೆ. ಅಂಗಾಂಗ ದಾನ ಮಾಡಿದ 64 ಕುಟುಂಬಗಳಿಗೆ ಮುಖ್ಯಮಂತ್ರಿಗಳಿಂದ ಪ್ರಶಂಸಾ ಪತ್ರ ಸಲ್ಲಲಿದೆ.

VISTARANEWS.COM


on

Independence Day 2024
Koo

ಬೆಂಗಳೂರು: ಆಗಸ್ಟ್ 15ರಂದು ನಡೆಯಲಿರುವ ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನ ಆಚರಣೆಗೆ (Independence Day 2024) ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಅಂದು ಬೆಳಗ್ಗೆ 8.58ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದ ಧ್ವಜಾರೋಹಣ (Flag Hoisting) ನಡೆಯಲಿದೆ. ಆಗಮಿಸುವ ಗಣ್ಯರಿಗೆ, ಅತಿಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್‌ (Parking) ಇತ್ಯಾದಿ ವಿವರಗಳು ಇಲ್ಲಿವೆ.

ಸ್ವಾತಂತ್ರ್ಯ ದಿನಾಚರಣೆಯ ಸಿದ್ಧತೆ ಕುರಿತು ಮಾಣೆಕ್‌ಷಾ ಮೈದಾನದಲ್ಲಿ (Manekshaw Parade Ground) ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ (Tushar Girinath) ಹಾಗೂ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೆಚ್ಚಿನ ಮಾಹಿತಿ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಬಳಿಕ ತೆರೆದ ಜೀಪ್‌ನಲ್ಲಿ ಪರೇಡ್ ಪರಿವೀಕ್ಷಣೆ ಮಾಡಲಿದ್ದು, ಒಟ್ಟು 1150 ಜನ ಪರೇಡ್‌ನಲ್ಲಿ ಭಾಗಿಯಾಗಲಿದ್ದಾರೆ. ಕೆಎಸ್ಆರ್‌ಪಿ, ಸಿಆರ್‌ಎಫ್, ಬಿಎಸ್‌ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಡಾಗ್ ಸ್ಕ್ವಾಡ್, ಹೋಂ ಗಾರ್ಡ್ ಸೇರಿದಂತೆ 35 ತುಕಡಿಗಳಿಂದ ಪರೇಡ್ ನಡೆಯಲಿದೆ. ಏಳು ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತದೆ.

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಿಳಿಸುವ ವಿಶೇಷ ಕಾರ್ಯಕ್ರಮ ಪ್ರದರ್ಶನವಿರಲಿದೆ. ಮಲ್ಲಕಂಬ, ಪ್ಯಾರಾ ಮೋಟರ್ ಹಾಗೂ ಮೋಟಾರು ಸೈಕಲ್ ಪ್ರದರ್ಶನ ನಡೆಯಲಿದೆ. ಅಂಗಾಂಗ ದಾನ ಮಾಡಿದ 64 ಕುಟುಂಬಗಳಿಗೆ ಮುಖ್ಯಮಂತ್ರಿಗಳಿಂದ ಪ್ರಶಂಸಾ ಪತ್ರ ಸಲ್ಲಲಿದೆ.

ಮಾಣಿಕ್ ಷಾ ಮೈದಾನಕ್ಕೆ ಬಂದೋಬಸ್ತ್ ಒದಗಿಸಲಾಗುತ್ತಿದ್ದು, 100ಕ್ಕು ಹೆಚ್ಚು ಸಿಸಿಟಿವಿ ಕಣ್ಗಾವಲು ಹಾಗೂ 2 ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ ಮಾಡಲಾಗುತ್ತಿದೆ. ಆಂಬ್ಯುಲೆನ್ಸ್‌ಗಳ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿಗಳ ಹಾಗೂ ಅಗ್ನಿಶಾಮಕ ವಾಹನಗಳ ನಿಯೋಜನೆ ಮಾಡಲಾಗುತ್ತದೆ.

ಒಂದು ವಾರದ ಹಿಂದಿನಿಂದಲೇ ಮೈದಾನ ಮಾತ್ರವಲ್ಲದೆ ಭದ್ರತೆ ಏರ್ಪಾಡು ಮಾಡಲಾಗಿದೆ. 10 ಡಿಸಿಪಿ, 17 ಎಸಿಪಿ, 42 ಇನ್ಸ್ಪೆಕ್ಟರ್, 112 ಪಿಎಸೈ, 62 ಎಎಎಐ, 511 ಹೆಚ್‌ಸಿಪಿಸಿ, 72 ಮಹಿಳಾ ಸಿಬ್ಬಂದಿಗಳು, ಟ್ರಾಫಿಕ್ ಸಿಬ್ಬಂಧಿಗಳು ಸೇರಿ 1583 ಪೊಲೀಸರ ನಿಯೋಜನೆ ಮಾಡಲಾಗಿದೆ. 10 ಕೆಎಸ್ಆರ್‌ಪಿ, ‌1 ಡಿ‌-ಸ್ವಾಟ್, ಕ್ಯೂಆರ್‌ಟಿ ನೇಮಕ ಮಾಡಲಾಗಿದೆ. ಬಾಂಬ್ ಸ್ಕ್ವಾಡ್‌ಗಳು ಕೂಡ ಕಾರ್ಯ ನಿರ್ವಹಿಸಲಿವೆ.

ವಾಹನ ನಿಲುಗಡೆ ಎಲ್ಲಿ?

1) ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್‌ಗಳಲ್ಲಿ ನಿಗದಿಪಡಿಸಿದ ಗೇಟ್‌ಗಳಲ್ಲಿ ಇಳಿದು ಕೊಳ್ಳುವುದು ಹಾಗೂ ಪಾಸ್‌ನಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ ಕೋರಲಾಗಿದೆ.

2) ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ., ಕ್ಯೂ.ಆರ್.ಟಿ, ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

3) ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ-4 ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗಧಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.

ವಾಹನ ನಿಲುಗಡೆ ನಿಷಿದ್ಧ ರಸ್ತೆಗಳು:

1) ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ.
2) ಕಬ್ಬನ್‌ ರಸ್ತೆ, ಸಿ.ಟಿ.ಓ. ವೃತ್ತದಿಂದ ಕೆ.ಆರ್.ರಸ್ತೆ & ಕಬ್ಬನ್‌ರಸ್ತೆ ಜಂಕ್ಷನ್ ವರೆಗೆ.
3) ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತ ದಿಂದ ಕ್ಲೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷಿದ್ಧ

ಕಾರ್ಯಕ್ರಮಕ್ಕೆ ಬರುವವರು ಇವುಗಳನ್ನು ತರುವಂತಿಲ್ಲ:

ಸಿಗರೇಟ್, ಬೆಂಕಿ ಪೆಟ್ಟಿಗೆ, ಹರಿತವಾದ ವಸ್ತು ಹಾಗೂ ಚಾಕು-ಚೂರಿಗಳು, ಕರಪತ್ರಗಳು, ಕಪ್ಪು ಕರವಸ್ತ್ರಗಳು, ಬಣ್ಣದ ದ್ರಾವಣಗಳು, ತಿಂಡಿ, ತಿನಿಸುಗಳು, ವಿಡಿಯೋ ಮತ್ತು ಸ್ಟಿಲ್‌ ಕ್ಯಾಮರಾಗಳು, ಮದ್ಯದ ಬಾಟಲ್‌ಗಳು/ಮಾದಕ ವಸ್ತುಗಳು, ನೀರಿನ ಬಾಟಲ್‌ಗಳು ಹಾಗೂ ಕ್ಯಾನ್‌ಗಳು, ಕೊಡೆ, ಶಸ್ತ್ರಾಸ್ತ್ರಗಳು, ಪಟಾಕಿ ಮತ್ತು ಸ್ಫೋಟಕ ವಸ್ತುಗಳು.

ಹೊಟೇಲ್‌ಗಳಲ್ಲಿ ಭದ್ರತೆ ಹೆಚ್ಚಳ

ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲಾ ಹೊಟೇಲ್ ಮಾಲೀಕರ ಜೊತೆ ಸಭೆ ನಡೆಸಲಾಗಿದ್ದು, ಶಂಕಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇಡಬೇಕು. ಏನೇ ವಿಚಾರವಿದ್ದರೂ ಪೊಲೀಸರಿಗೆ ಮಾಹಿತಿ ನೀಡಬೇಕು. ಹಾಗು ಪರಿಶಿಲನೆಗೆ ಸಹಕಾರ ನೀಡಬೇಕು ಎಂದು ದಯಾನಂದ್‌ ತಿಳಿಸಿದ್ದಾರೆ.

Continue Reading

ಉದ್ಯೋಗ

Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

Indian Bank Recruitment 2024: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ತಮಿಳುನಾಡಿನ ಚೆನ್ನೈಯಲ್ಲಿ ಪ್ರಧಾನ ಕಚೇರಿ ಹೊಂದಿರುವ ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್‌ ಬ್ಯಾಂಕ್‌ 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋಕಲ್‌ ಬ್ಯಾಂಕ್‌ ಆಫೀಸರ್‌ ಹುದ್ದೆ ಇದಾಗಿದ್ದು, ಕರ್ನಾಟಕದಲ್ಲಿಯೂ ನೇಮಕಾತಿ ನಡೆಯಲಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 2.

VISTARANEWS.COM


on

Indian Bank Recruitment 2024
Koo

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ (Bank Jobs). ತಮಿಳುನಾಡಿನ ಚೆನ್ನೈಯಲ್ಲಿ ಪ್ರಧಾನ ಕಚೇರಿ ಹೊಂದಿರುವ ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್‌ ಬ್ಯಾಂಕ್‌ (Indian Bank) 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Bank Recruitment 2024). ಲೋಕಲ್‌ ಬ್ಯಾಂಕ್‌ ಆಫೀಸರ್‌ (Local Bank Officer) ಹುದ್ದೆ ಇದಾಗಿದ್ದು, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ವಿಶೇಷ ಎಂದರೆ ಕರ್ನಾಟಕದಲ್ಲಿಯೂ ನೇಮಕಾತಿ ನಡೆಯಲಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 2 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕರ್ನಾಟಕ-35, ತಮಿಳುನಾಡು / ಪುದುಚೇರಿ-160, ಆಂಧ್ರ ಪ್ರದೇಶ & ತೆಲಂಗಾಣ-50, ಮಹಾರಾಷ್ಟ್ರ-40, ಗುಜರಾತ್‌-15 ಹುದ್ದೆಗಳಿವೆ. ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷ ಚೇತನರಿಗೆ 10 ವರ್ಷ, ಮಾಜಿ ಯೋಧರಿಗೆ 5 ವರ್ಷಗಳ ರಿಯಾಯಿತಿ ಇದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 175 ರೂ. ಪಾವತಿಸಬೇಕು. ಉಳಿದ ಎಲ್ಲ ವಿಭಾಗದ ಅಭ್ಯರ್ಥಿಗಳು 1,000 ರೂ. ಅನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌. ಲಿಖಿತ / ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮಾಸಿಕ ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ 48,480 ರೂ. – 85,920 ರೂ. ಮಾಸಿಕ ವೇತನ ದೊರೆಯಲಿದೆ.

Indian Bank Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ibpsonline.ibps.in/iblbojul24/).
  • ಮೊಬೈಲ್‌ ನಂಬರ್‌, ಇಮೇಲ್‌ ವಿಳಾಸ ನೀಡಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಇಂಡಿಯನ್‌ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ: indianbank.inಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

Continue Reading

ಕರ್ನಾಟಕ

Muda Scam: ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಿದ ಸ್ನೇಹಮಯಿ ಕೃಷ್ಣ

Muda Scam: ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ರಾಜ್ಯಪಾಲರ ಹೆಸರಿನಲ್ಲಿ ಪರಿತ್ಯಾಜನ ಪತ್ರವನ್ನು ನೊಂದಾಯಿಸಿಕೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿ, ಮುಡಾ ಅಧಿಕಾರಿಗಳನ್ನು ವಜಾ ಮಾಡಬೇಕು ಎಂದು ರಾಜ್ಯಪಾಲರಿಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.

VISTARANEWS.COM


on

Muda Scam
Koo

ಬೆಂಗಳೂರು: ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ಗೆ ಖಾಸಗಿ ದೂರು ನೀಡಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು, ಇದೀಗ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಿದ್ದಾರೆ. ಪ್ರಕರಣದಲ್ಲಿ ಮತ್ತೊಂದು ಕಾನೂನುಬಾಹಿರ ಕೃತ್ಯ ನಡೆದಿದೆ. ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ರಾಜ್ಯಪಾಲರ ಹೆಸರಲ್ಲಿ ಪರಿತ್ಯಾಜನಾ ಪತ್ರ ನೀಡಲಾಗಿದೆ ಎಂದು ಆರೋಪಿಸಿರುವ ಅವರು, ಸಂಬಂಧಪಟ್ಟ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಪತ್ರ ಬರೆದಿರುವ ಅವರು, ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ರಾಜ್ಯಪಾಲರ ಹೆಸರಿನಲ್ಲಿ ಪರಿತ್ಯಾಜನ ಪತ್ರವನ್ನು ನೊಂದಾಯಿಸಿಕೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಎಫ್‌ಡಿಎ ಕೆ.ಸಿ.ಉಮೇಶ್ ಹಾಗೂ ಸಂಬಂಧಪಟ್ಟ ಇತರೆ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಬೇಕು ಹಾಗೂ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 223 ಮತ್ತು ಇತರೆ ಸೂಕ್ತ ಕಲಂಗಳ ಪ್ರಕಾರ ಮೊಕದ್ದಮೆ ದಾಖಲಿಸಬೇಕು. ಅಲ್ಲದೇ ಮುಡಾದಿಂದ ನಿಮ್ಮ ಪರವಾಗಿ ನೋಂದಾಯಿಸಿಕೊಂಡಿರುವ ಎಲ್ಲಾ ಪರಿತ್ಯಾಜನ ಪತ್ರಗಳನ್ನು ಕೂಡಲೇ ರದ್ದು ಪಡಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ತುರ್ತು ಸೂಚನೆ ನೀಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು, ತಮ್ಮ ಕುಟುಂಬದವರ ಹೆಸರಿನಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿಸಿಕೊಂಡು, ಮುಡಾದಿಂದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿರುವ ಬಗ್ಗೆ ಈಗಾಗಲೇ ನಿಮ್ಮನ್ನೂ ಸೇರಿದಂತೆ ಹಲವು ತನಿಖಾ ಸಂಸ್ಥೆಗಳಿಗೆ ದೂರರ್ಜಿಗಳನ್ನು ನೀಡಿದ್ದೇನೆ. ಆನಂತರ ನ್ಯಾಯಾಲಯದಲ್ಲಿ ಖಾಸಾಗಿ ದೂರರ್ಜಿಯನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯನವರ ಪತ್ನಿ ಬಿ.ಎಂ. ಪಾರ್ವತಿರವರು 2021ರ ನ.25ರಂದು ನಿಮ್ಮ ಪರವಾಗಿ “ಪ್ರಾಧಿಕಾರ”ದ ಪ್ರಥಮ ದರ್ಜೆ ಸಹಾಯಕರಾದ ಕೆ.ಸಿ.ಉಮೇಶ್‌ರವರ ಹೆಸರಿಗೆ, ಮೈಸೂರು ಜಿಲ್ಲೆ ಮತ್ತು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೆ ನಂ.464 ರ 3.16 ಎಕರೆ ಜಮೀನಿಗೆ ಸಂಬಂಧಿಸಿದಂತೆ ಪರಿತ್ಯಾಜನ ಪತ್ರವನ್ನು ನೊಂದಣಿ ಮಾಡಿಕೊಟ್ಟಿರುವ ದಾಖಲೆಯು ಲಭ್ಯವಾಗಿತ್ತು.

ಇದನ್ನೂ ಓದಿ | Chamundi Hill: ಚಾಮುಂಡಿ ಬೆಟ್ಟದಲ್ಲಿ ಮೈಸೂರು ಅರಸರ ಅಧಿಕಾರ ಮೊಟಕು ಮಾಡಲು ಮುಂದಾದ ಕಾಯಿದೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಸ್ಥಳೀಯ ಸಂಸ್ಥೆಗಳು, ವ್ಯವಸಾಯ ಜಮೀನುಗಳಲ್ಲಿನ ಜಾಗವನ್ನು ರಸ್ತೆಯೆಂದು ಭೂ ಮಾಲೀಕರು ಪರಿತ್ಯಾಜನ ಪತ್ರದ ಮೂಲಕ ನೀಡಿದಲ್ಲಿ, ಅಂತಹ ಜಾಗಗಳನ್ನು ಹಸ್ತಾಂತರಿಸಿಕೊಳ್ಳಬಾರದು ಎಂದು ಸ್ಪಷ್ಟವಾಗಿ ಕಾನೂನಿನಲ್ಲಿದೆ. ಆದರೆ, ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಮುಡಾ ಪ್ರಥಮ ದರ್ಜೆ ಸಹಾಯಕ ಕೆ.ಸಿ ಉಮೇಶ್‌, ನಿಮ್ಮ ಪರವಾಗಿ ಬಿ.ಎಂ.ಪಾರ್ವತಿ ಅವರಿಂದ ಪರಿತ್ಯಾಜನ ಪತ್ರವನ್ನು ನೋಂದಣಿ ಮಾಡಿಕೊಂಡಿದ್ದಾರೆ. ನಿಮ್ಮ ಹೆಸರಿನಲ್ಲಿ ಈ ಕಾನೂನು ಬಾಹಿರ ಕೃತ್ಯ ನಡೆದಿರುವುದರಿಂದ ಈ ವಿಚಾರವನ್ನು ತಾವು ಗಂಭೀರವಾಗಿ ಪರಿಗಣಿಸಿ, ಕೂಡಲೇ ಆ ಪರಿತ್ಯಾಜನ ಪತ್ರವನ್ನು ನಿಮ್ಮ ಪರವಾಗಿ ನೋಂದಣಿ ಮಾಡಿಸಿಕೊಂಡಿರುವ ಕೆ.ಸಿ.ಉಮೇಶ್ (ಇವರು ಸಿದ್ದರಾಮಯ್ಯನವರ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದಾರೆಂಬ ಮಾಹಿತಿಯೂ ಇದೆ) ಮತ್ತು ಇತರೆ ಸಂಬಂಧಪಟ್ಟ ಅಧಿಕಾರಿಗಳನ್ನು ವಜಾಗೊಳಿಸಬೇಕು ಹಾಗೂ ಇದೇ ರೀತಿಯಲ್ಲಿ ಮುಡಾದಿಂದ ನಿಮ್ಮ ಪರವಾಗಿ ನೋಂದಣಿ ಮಾಡಿಕೊಂಡಿರುವ ಎಲ್ಲಾ ಪರಿತ್ಯಾಜನ ಪತ್ರಗಳನ್ನು ರದ್ದು ಪಡಿಸುವಂತೆ ಸ್ನೇಹಮಹಿ ಕೃಷ್ಣ ಕೋರಿದ್ದಾರೆ.

Continue Reading

ದೇಶ

Patanjali Ayurved Ads: ನ್ಯಾಯಾಂಗ ನಿಂದನೆ ಪ್ರಕರಣ ರದ್ದು; ಬಾಬಾ ರಾಮದೇವ್‌ಗೆ ಬಿಗ್‌ ರಿಲೀಫ್

Patanjali Ayurved Ads: ಆಧುನಿಕ ಔಷಧದ ವಿರುದ್ಧ ರಾಮ್‌ದೇವ್ ಮತ್ತು ಪತಂಜಲಿಯವರ ಅವಹೇಳನಕಾರಿ ಹೇಳಿಕೆಗಳ ವಿರುದ್ಧ 2022 ರಲ್ಲಿ ಸುಪ್ರೀಂ ಕೋರ್ಟ್‌ಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​​ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಜನರ ದಾರಿ ತಪ್ಪಿಸುವ ಜಾಹೀರಾತುಗಳನ್ನು ಹಿಂಪಡೆಯುವಂತೆ ಆದೇಶ ನೀಡಿತ್ತು. ಕೊರ್ಟ್‌ ಆದೇಶದಂತೆ ಪತಂಜಲಿ ತನ್ನ ಎಲ್ಲಾ ಜಾಹೀರಾತನ್ನು ವಾಪಸ್‌ ಪಡೆದಿದೆ. ಹೀಗಾಗಿ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ರದ್ದುಗೊಳಿಸಲಾಗಿದೆ.

VISTARANEWS.COM


on

Patanjali ads
Koo

ನವದೆಹಲಿ: ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಂಸ್ಥೆ (Patanjali Ayurved Ads) ಮುಖ್ಯಸ್ಥ ಬಾಬಾ ರಾಮದೇವ್‌ (Baba Ramdev) ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ (Acharya Balkrishna) ಅವರ ವಿರುದ್ಧದ ನ್ಯಾಯಾಂಗ ನಿಂದನೆ(contempt case) ಪ್ರಕರಣವನ್ನು ಸುಪ್ರೀಂಕೋರ್ಟ್‌(Supreme Court) ರದ್ದುಗೊಳಿಸಿದೆ.

ಆಧುನಿಕ ಔಷಧದ ವಿರುದ್ಧ ರಾಮ್‌ದೇವ್ ಮತ್ತು ಪತಂಜಲಿಯವರ ಅವಹೇಳನಕಾರಿ ಹೇಳಿಕೆಗಳ ವಿರುದ್ಧ 2022 ರಲ್ಲಿ ಸುಪ್ರೀಂ ಕೋರ್ಟ್‌ಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​​ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಜನರ ದಾರಿ ತಪ್ಪಿಸುವ ಜಾಹೀರಾತುಗಳನ್ನು ಹಿಂಪಡೆಯುವಂತೆ ಆದೇಶ ನೀಡಿತ್ತು. ಕೊರ್ಟ್‌ ಆದೇಶದಂತೆ ಪತಂಜಲಿ ತನ್ನ ಎಲ್ಲಾ ಜಾಹೀರಾತನ್ನು ವಾಪಸ್‌ ಪಡೆದಿದೆ. ಹೀಗಾಗಿ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ರದ್ದುಗೊಳಿಸಲಾಗಿದೆ.

ಏನಿದು ಪ್ರಕರಣ?

ಪತಂಜಲಿ ಸಂಸ್ಥೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು (IMA) ಅರ್ಜಿ ಸಲ್ಲಿಸಿದೆ. ಪತಂಜಲಿ ಸಂಸ್ಥೆಯು ಕೊರೊನಾ ನಿರೋಧಕ ಲಸಿಕೆ ಹಾಗೂ ಆಧುನಿಕ ಔಷಧ ಪದ್ಧತಿ ಬಗ್ಗೆ ಸುಳ್ಳು ಅಭಿಯಾನ ಆರಂಭಿಸಿದೆ. ಅಷ್ಟೇ ಅಲ್ಲ, ಅಲೋಪಥಿ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಜನರ ದಾರಿ ತಪ್ಪಿಸುವ ರೀತಿ ಪತಂಜಲಿ ಸಂಸ್ಥೆಯು ಜಾಹೀರಾತುಗಳನ್ನು ನೀಡುತ್ತಿದೆ. ಇದು ಡ್ರಗ್ಸ್‌ ಆ್ಯಂಡ್‌ ಮ್ಯಾಜಿಕ್‌ ರೆಮೆಡೀಸ್‌ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಐಎಂಎ ಅರ್ಜಿ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್‌ ಅಮಾನುಲ್ಲಾ ಅವರು ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ರೋಗಗಳ ನಿವಾರಣೆ ಕುರಿತು ಪತಂಜಲಿ ಸಂಸ್ಥೆಯು ಜನರ ದಾರಿತಪ್ಪಿಸುವ ರೀತಿ ಜಾಹೀರಾತು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಸಂಸ್ಥೆ ಸಹ ಸಂಸ್ಥಾಪಕ ಬಾಬಾ ರಾಮದೇವ್‌ ಹಾಗೂ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಬಾಬಾ ರಾಮದೇವ್‌ ಆಪ್ತ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧ ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ನೋಟಿಸ್‌ ಹೊರಡಿಸಿತ್ತು. ಇಷ್ಟಾದರೂ, ಬಾಬಾ ರಾಮದೇವ್‌ ಆಗಲಿ, ಆಚಾರ ಬಾಲಕೃಷ್ಣ ಆಗಲಿ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಕೆಂಡಾಮಂಡಲವಾದ ಸುಪ್ರೀಂ ಕೋರ್ಟ್‌, ಏಪ್ರಿಲ್‌ 2ರಂದು ಇಬ್ಬರೂ ಕೋರ್ಟ್‌ಗೆ ಖುದ್ದಾಗಿ ಹಾಜರಾಗಬೇಕು ಎಂದು ಸೂಚಿಸಿತ್ತು. ಹಾಗೆಯೇ, ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಯನ್ನೇಕೆ ಆರಂಭಿಸಬಾರದು ಎಂದು ಕುಟುಕಿತ್ತು. ಇದಾದ ಬಳಿಕ ಇಬ್ಬರೂ ಸುಪ್ರೀಂ ಕೋರ್ಟ್‌ಗೆ ಬೇಷರತ್‌ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ: Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Continue Reading
Advertisement
Viral Video
ವೈರಲ್ ನ್ಯೂಸ್10 mins ago

Viral Video: ಅಬ್ಬಾ…ಈತ ಮನುಷ್ಯನೋ ರಾಕ್ಷಸನೋ..? ಪತ್ನಿಯ ಕಾಲುಗಳನ್ನು ಬೈಕ್‌ಗೆ ಕಟ್ಟಿ ರೋಡಲ್ಲಿ ಎಳೆದಾಡಿದ ಪಾಪಿ ಪತಿ-ವಿಡಿಯೋ ಇದೆ

Sunil Gavaskar
ಕ್ರೀಡೆ21 mins ago

Sunil Gavaskar: ಪದಕ ಗೆಲ್ಲಲು ವಿಫಲವಾದ ಲಕ್ಷ್ಯ ಸೇನ್ ವಿರುದ್ಧ ವಾಗ್ದಾಳಿ ನಡೆಸಿದ ಗಾವಸ್ಕರ್

PM Kisan Samman Nidhi
ಮನಿ-ಗೈಡ್33 mins ago

PM Kisan Samman Nidhi: ಈ ದಿನಾಂಕದಂದು ಜಮೆ ಆಗಲಿದೆ ಕಿಸಾನ್‌ ಸಮ್ಮಾನ್‌ ನಿಧಿಯ 18ನೇ ಕಂತು; ಹೊಸದಾಗಿ ಅಪ್ಲೈ ಮಾಡುವ ವಿಧಾನ ಇಲ್ಲಿದೆ

SP leader arrested
ದೇಶ1 hour ago

SP Leader arrest: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ; ಸಮಾಜವಾದಿ ಪಕ್ಷದ ನಾಯಕ ಅರೆಸ್ಟ್‌

Group Clash
ಕರ್ನಾಟಕ1 hour ago

Group Clash: ಅರಕೆರೆ ಶೆಡ್‌ನಲ್ಲಿ ದರ್ಶನ್ ಕಿರಿಕ್‌‌; ಯೂತ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕಾಗಿ‌ ನಡುರಸ್ತೆಯಲ್ಲೇ ಫೈಟ್

Tungabhadra Dam
ಹುಬ್ಬಳ್ಳಿ1 hour ago

Tungabhadra Dam: ಜಲಾಶಯ ನಿರ್ವಹಣೆ ಕುರಿತ ಕೇಂದ್ರ ಸಮಿತಿ ಸಲಹೆಯನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ; ಪ್ರಲ್ಹಾದ್‌ ಜೋಶಿ ಆರೋಪ

Kannada New Movie
ಬೆಂಗಳೂರು1 hour ago

Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

Murder Case
Latest1 hour ago

Murder Case: 90 ಲಕ್ಷ ರೂ. ಠೇವಣಿ ಎಗರಿಸಲು ವೃದ್ಧನ ಕೊಂದ ಮಹಿಳಾ ಬ್ಯಾಂಕ್‌ ಮ್ಯಾನೇಜರ್‌! ಪ್ಲ್ಯಾನ್‌ ಹೇಗಿತ್ತು ನೋಡಿ!

Murder case
ಚಿಕ್ಕೋಡಿ1 hour ago

Murder Case : ಕೆಲ್ಸ ಜಾಸ್ತಿ ಮನೆಗೆ ಬರಲ್ಲ ಎಂದವನು, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬೀದಿ ಹೆಣವಾದ

Vastu Tips
ಧಾರ್ಮಿಕ2 hours ago

Vastu Tips: ಈ ವಸ್ತುಗಳನ್ನು ಮನೆಯಲ್ಲಿಟ್ಟರೆ ಸಂತೋಷ, ಸಮೃದ್ಧಿ, ನೆಮ್ಮದಿ ಸಿಗುತ್ತವೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌