Glenn Maxwell: ಮ್ಯಾಕ್ಸ್‌ವೆಲ್ ಖರೀದಿಗೆ 3 ಫ್ರಾಂಚೈಸಿಗಳ ಮಧ್ಯೆ ಪೈಪೋಟಿ - Vistara News

ಕ್ರೀಡೆ

Glenn Maxwell: ಮ್ಯಾಕ್ಸ್‌ವೆಲ್ ಖರೀದಿಗೆ 3 ಫ್ರಾಂಚೈಸಿಗಳ ಮಧ್ಯೆ ಪೈಪೋಟಿ

Glenn Maxwell: ಗ್ಲೆನ್​ ಮ್ಯಾಕ್ಸ್​ವೆಲ್​ ಅವರನ್ನು ಖರೀದಿಸಲು ಮmೂರು ಫ್ರಾಂಚೈಸಿಗಳಾದ ಡೆಲ್ಲಿ ಕ್ಯಾಪಿಟಲ್ಸ್​, ಪಂಜಾಬ್​ ಕಿಂಗ್ಸ್​ ಮತ್ತು ಮುಂಬೈ ಇಂಡಿಯನ್ಸ್​ ಪೈಪೋಟಿಗೆ ಬಿದ್ದಿದೆ ಎಂದು ವರದಿಯಾಗಿದೆ.

VISTARANEWS.COM


on

Glenn Maxwell
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: 18 ಆವೃತ್ತಿಯ ಐಪಿಎಲ್(IPL 2025)​ ಟೂರ್ನಿಯ ಆಟಗಾರರ ಮೆಗಾ ಹರಾಜಿಗೆ ಇನ್ನೂ 4 ತಿಂಗಳು ಬಾಕಿ ಇದ್ದರೂ ಕೂಡ ಎಲ್ಲ 10 ಫ್ರಾಂಚೈಸಿಗಳು ಈಗಿನಿಂದಲೇ ಪೂರ್ವ ತಯಾರಿ ಆರಂಭಿಸಿದೆ. ಯಾವ ಆಟಗಾರರನ್ನು ಉಳಿಸುವುದು? ಜತೆಗೆ ಯಾರನ್ನೆಲ್ಲ ಖರೀದಇ ಮಾಡಬಹುದೆಂಬ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿದೆ. ಇದೀಗ ಆಸ್ಟ್ರೇಲಿಯಾದ ಆಲ್​ರೌಂಡರ್​, ಆರ್​ಸಿಬಿ ಪರ ಆಡುವ ಗ್ಲೆನ್​ ಮ್ಯಾಕ್ಸ್​ವೆಲ್(Glenn Maxwell)​ ಅವರನ್ನು ಖರೀದಿಸಲು ಮೂರು ಫ್ರಾಂಚೈಸಿಗಳು ಪೈಪೋಟಿಗೆ ಬಿದ್ದಿದೆ ಎಂದು ವರದಿಯಾಗಿದೆ.

ಆರ್​ಸಿಬಿ ಈ ಬಾರಿ ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಂಡು ಉಳಿದೆಲ್ಲ ಆಟಗಾರರನ್ನು ತಂಡದಿಂದ ಕೈ ಬಿಡಲಿದೆ ಎಂದು ವರದಿಯಾದೆ. ಗ್ಲೆನ್​ ಮ್ಯಾಕ್ಸ್​ವೆಲ್​ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವ ಬಗ್ಗೆ ಒಲವು ತೋರಿಲ್ಲ ಎನ್ನಲಾಗಿದೆ. ಇದೇ ಕಾರಣಕ್ಕೆ ಕೆಲವು ದಿನಗಳ ಹಿಂದೆ ಮ್ಯಾಕ್ಸ್​ವೆಲ್​ ಆರ್​ಸಿಬಿಯ ಇನ್​ಸ್ಟಾಗ್ರಾಮ್​ ಖಾತೆಯನ್ನು ಅನ್​ಫಾಲೋ ಮಾಡಿದ್ದರು. ಮೂಲಗಳ ಪ್ರಕಾರ ಆರ್​ಸಿಬಿ ವಿರಾಟ್​ ಕೊಹ್ಲಿ, ಇಂಗ್ಲೆಂಡ್​ನ ವಿಲ್ ಜಾಕ್ಸ್​ ಮತ್ತು ಮೊಹಮ್ಮದ್​ ಸಿರಾಜ್​ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

ಈ ಬಾರಿಯ ಆವೃತ್ತಿಯಲ್ಲಿ ಮ್ಯಾಕ್ಸ್​ವೆಲ್​ ಆರ್​ಸಿಬಿ ಪರ ಅತ್ಯಂತ ಕಳಪೆ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆಡಿದ 10 ಪಂದ್ಯಗಳಲ್ಲಿ ಗಳಿಸಿದ್ದು ಕೇಲವ 52 ರನ್​ ಮಾತ್ರ. ಹೀಗಾಗಿ ಈ ಬಾರಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವುದು ಅಸಾಧ್ಯ. 2021 ರ ಐಪಿಎಲ್​ಗೂ ಮುನ್ನ ನಡೆದ ಹರಾಜಿನಲ್ಲಿ ಬರೋಬ್ಬರಿ 14.25 ಕೋಟಿ ರೂ. ಪಡೆದು ಆರ್​ಸಿಬಿ ತಂಡವನ್ನು ಸೇರಿದ್ದರು. ಇದೀಗ ಅವರನ್ನು ಈ ಬಾರಿಯ ಹರಾಜಿನಲ್ಲಿ ಖರೀದಿಸಲು ಮೂರು ತಂಡಗಳು ಪೈಪೋಟಿ ನಡೆಸಿವೆ ಎನ್ನಲಾಗಿದೆ. ಈ ತಂಡಗಳೆಂದರೆ ಡೆಲ್ಲಿ ಕ್ಯಾಪಿಟಲ್ಸ್​, ಪಂಜಾಬ್​ ಕಿಂಗ್ಸ್​ ಮತ್ತು ಮುಂಬೈ ಇಂಡಿಯನ್ಸ್​ ಎಂದು ತಿಳಿದುಬಂದಿದೆ. ಈ ಮೂರು ತಂಡಗಳ ಪರವಾಗಿಯೂ ಮ್ಯಾಕ್ಸ್​ವೆಲ್​ ಹಿಂದೆ ಆಡಿದ್ದರು.

ಇದನ್ನೂ ಓದಿ IPL 2025: ಫ್ರಾಂಚೈಸಿಗಳ ಒತ್ತಾಯಕ್ಕೆ ಮಣಿದು ಇಷ್ಟು ಆಟಗಾರರ ರಿಟೇನ್​ಗೆ ಅವಕಾಶ ನೀಡಲಿದೆ ಬಿಸಿಸಿಐ

ಟಿ20 ವಿಶ್ವಕಪ್​ ಟೂರ್ನಿಯಲ್ಲೂ ಮ್ಯಾಕ್ಸ್​ವೆಲ್​ ಅತ್ಯಂತ ಕಳಪೆ ಬ್ಯಾಟಿಂಗ್​ ಪ್ರದರ್ಶನ ತೋರಿದ ಕಾರಣದಿಂದ ಅವರಿಗೆ ಈ ಬಾರಿ ಹರಾಜಿನಲ್ಲಿ ದೊಡ್ಡ ಮೊತ್ತ ಸಿಗುವುದು ಅನುಮಾನ.

6 ಆಟಗಾರರ ರಿಟೇನ್​ಗೆ ಅವಕಾಶ?


ಫ್ರಾಂಚೈಸಿಗಳ ಒತ್ತಾಯಕ್ಕೆ ಮಣಿದು ಕೊನೆಗೂ ಬಿಸಿಸಿಐ(BCCI) ಮುಂದಿನ ಐಪಿಎಲ್(IPL 2025)​ ಮೆಗಾ(mega auction) ಹರಾಚಿನಲ್ಲಿ ಪ್ರತಿ ತಂಡಕ್ಕೆ ಗರಿಷ್ಠ 4ರ ಬದಲಾಗಿ 6 ಆಟಗಾರರನ್ನು ರಿಟೇನ್​ ಮಾಡಿಕೊಳ್ಳುವ ಅವಕಾಶ ಕಲ್ಪಿಸಿದೆ ಎಂದು ವರದಿಯಾಗಿದೆ. ಬಿಸಿಸಿಐ ಈ ಮುನ್ನ ಗರಿಷ್ಠ 4 ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ ನೀಡುವುದಾಗಿ ತಿಳಿಸಿತ್ತು. ಅಲ್ಲದೆ 2022ರಲ್ಲಿಯೂ 4 ಆಟಗಾರರ ರಿಟೇನ್​ ಅವಕಾಶ ನೀಡಿತ್ತು. ಈ ಬಾರಿ ಫ್ರಾಂಚೈಸಿಗಳು 8 ಆಟಗಾರರನ್ನು ರೀಟೆನ್​ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿತ್ತು. ಇದೀಗ ಬಿಸಿಸಿಐ 6 ಆಟಗಾರರ ರಿಟೇನ್​ಗೆ ಅವಕಾಶ ಕಲ್ಪಿಸಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Duleep Trophy: 14 ವರ್ಷಗಳ ಬಳಿಕ ದುಲೀಪ್‌ ಟ್ರೋಫಿ ಆಡಲಿದ್ದಾರೆ ವಿರಾಟ್​ ಕೊಹ್ಲಿ?

Duleep Trophy: ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್​ ಸರಣಿ ಸೆಪ್ಟೆಂಬರ್​ 19ರಿಂದ ಆರಂಭಗೊಳ್ಳಲಿದೆ. ದುಲೀಪ್‌ ಟ್ರೋಫಿ ಸೆಪ್ಟೆಂಬರ್ 5ರಿಂದ ಶುರುವಾಗಲಿದೆ. ಹೀಗಾಗಿ ಭಾರತ ತಂಡದ ಹಿರಿಯ ಆಟಗಾರರಿಗೆ ಕನಿಷ್ಠ 2 ಪಂದ್ಯಗಳನ್ನು ಆಡುವ ಅವಕಾಶ ಸಿಗಬಹುದು.

VISTARANEWS.COM


on

Duleep Trophy
Koo

ಮುಂಬಯಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ದೇಶೀಯ ಕ್ರಿಕೆಟ್​ ಟೂರ್ನಿಯಾದ ದುಲೀಪ್‌ ಟ್ರೋಫಿಯಲ್ಲಿ(Duleep Trophy) ಟೀಮ್‌ ಇಂಡಿಯಾದ ಬಹುತೇಕ ಟೆಸ್ಟ್‌ ಆಟಗಾರರು ಆಡಲಿದ್ದಾರೆ ಎಂದು ಈಗಾಗಲೇ ವರದಿಯಾಗಿತ್ತು. ಇದೀಗ ನಾಯಕ ರೋಹಿತ್​ ಶರ್ಮ(Rohit Sharma) ಮತ್ತು ವಿರಾಟ್​ ಕೊಹ್ಲಿ(Virat Kohli) ಕೂಡ ಆಡಲಿದ್ದಾರೆ ಎನ್ನಲಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್​ ಆಟಗಾರರು ವಿರಾಮದ ವೇಳೆ ದೇಶೀಯ ಕ್ರಿಕೆಟ್​ನಲ್ಲಿ ಆಡಬೇಕೆಂಬುದು ಬಿಸಿಸಿಐ ನಿಲುವಾಗಿದ್ದು, ಇದೇ ಕಾರಣದಿಂದ ಸೀನಿಯರ್​ ಆಟಗಾರರು ಕೂಡ ದೇಶೀಯ ಕ್ರಿಕೆಟ್​ ಆಡಲು ಸಜ್ಜಾಗಿದ್ದಾರೆ. ಯಾರ್ಕರ್‌ ಸ್ಪೆಷಲಿಸ್ಟ್‌ ಜಸ್‌ಪ್ರೀತ್‌ ಬುಮ್ರಾ, ಹಿರಿಯ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿ‌ನ್‌, ಗಾಯಾಳಾಗಿರುವ ವೇಗಿ ಮೊಹಮ್ಮದ್‌ ಶಮಿ ಅವರಿಗೆ ಬಿಸಿಸಿಐ ರಿಯಾಯಿತಿ ನೀಡಿದೆ.

ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಸ್ಥಿರ ಫಾರ್ಮ್​ ಕಂಡುಕೊಳ್ಳುವ ನಿಟ್ಟಿನಲ್ಲಿ ಬಿಸಿಸಿಐ ಈಗಾಗಲೇ ಎಲ್ಲ ಆಟಗಾರರಿಗೂ ದೇಶೀಯ ಟೂರ್ನಿಯಲ್ಲಿ ಪೂರ್ತಿ ಸರಣಿ ಆಡದೇ ಹೋದರೂ ಕೆಲವು ಪಂದ್ಯಗಳಲ್ಲಾದರೂ ಆಡಬೇಕು ಎಂದು ಸೂಚನೆ ನೀಡಿತ್ತು. ಕೊಹ್ಲಿ ಕಳೆದ ಲಂಕಾ ಏಕದಿನ ಸರಣಿಯಲ್ಲಿ ಆಡಿದ ಎಲ್ಲ ಮೂರು ಪಂದ್ಯಗಳಲ್ಲಿಯೂ ಘೋರ ಬ್ಯಾಟಿಂಗ್​ ವೈಫಲ್ಯ ಕಂಡಿದ್ದರು. ಟೆಸ್ಟ್‌ ತಂಡದ ಸಂಭಾವ್ಯ ಆಟಗಾರರಾದ ಶುಭಮನ್‌ ಗಿಲ್‌, ಶ್ರೇಯಸ್‌ ಅಯ್ಯರ್‌, ಕೆ.ಎಲ್‌. ರಾಹುಲ್‌, ರಿಷಭ್‌ ಪಂತ್‌, ರವೀಂದ್ರ ಜಡೇಜ, ಅಕ್ಷರ್‌ ಪಟೇಲ್‌, ಕುಲದೀಪ್‌ ಯಾದವ್‌ ಮೊದಲಾದವರೆಲ್ಲ ದುಲೀಪ್‌ ಟ್ರೋಫಿಯ ಕೆಲವು ಪಂದ್ಯಗಳಲ್ಲಿ ಆಡಲಿದ್ದಾರೆ ಎಂದು ತಿಳಿದು ಬಂದಿದೆ.

ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್​ ಸರಣಿ ಸೆಪ್ಟೆಂಬರ್​ 19ರಿಂದ ಆರಂಭಗೊಳ್ಳಲಿದೆ. ದುಲೀಪ್‌ ಟ್ರೋಫಿ ಸೆಪ್ಟೆಂಬರ್ 5ರಿಂದ ಶುರುವಾಗಲಿದೆ. ಹೀಗಾಗಿ ಭಾರತ ತಂಡದ ಹಿರಿಯ ಆಟಗಾರರಿಗೆ ಕನಿಷ್ಠ 2 ಪಂದ್ಯಗಳನ್ನು ಆಡುವ ಅವಕಾಶ ಸಿಗಬಹುದು.

ಇದನ್ನೂ ಓದಿ Maharaja Trophy 2024: ಮಹಾರಾಜ ಟಿ20 ಕ್ರಿಕೆಟ್​ ಟೂರ್ನಿ ಆರಂಭಕ್ಕೆ ಒಂದು ದಿನ ಬಾಕಿ; ತಂಡಗಳ ವಿವರ ಹೀಗಿದೆ

14 ವರ್ಷದ ಹಿಂದಿನ ಕೊಹ್ಲಿಯ ಟ್ವೀಟ್ ವೈರಲ್​​


ಈ ಬಾರಿಯ ದುಲೀಪ್ ಟ್ರೋಫಿಯಲ್ಲಿ ಭಾರತ ತಂಡದ ಹಿರಿಯ ಆಟಗಾರರು ಆಡುತ್ತಾರೆ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ವಿರಾಟ್​ ಕೊಹ್ಲಿ ಅವರು 14 ವರ್ಷಗಳ ಹಿಂದೆ ಮಾಡಿದ್ದ ಟ್ವೀಟ್​ ಒಂದು ಈಗ ವೈರಲ್​ ಆಗಿದೆ. ಹೌದು, ವಿರಾಟ್​ ಕೊಹ್ಲಿ ಕೊನೆಯ ಬಾರಿಗೆ ದುಲೀಪ್​ ಟ್ರೋಫಿ ಆಡಿದ್ದು 2010ರಲ್ಲಿ. ಆಗ ಕೊಹ್ಲಿ ದುಲೀಪ್​ ಟ್ರೋಫಿ ಆಡುತ್ತಿರುವ ನನಗೆ ಶುಭ ಹಾರೈಸಿ ಎಂದು ಬರೆದುಕೊಂಡಿದ್ದರು. ಈ ಟ್ವಿಟ್​ ಇದೀಗ ವೈರಲ್​ ಆಗಿದೆ. ಇದಕ್ಕೆ ಕಾರಣ ಕೊಹ್ಲಿ 14 ವರ್ಷಗಳ ಬಳಿಕ ಮತ್ತೆ ದುಲೀಪ್​ ಟ್ರೋಫಿ ಆಡಲು ಸಿದ್ಧವಾಗಿರುವುದು.

ರೋಹಿತ್​ ಶರ್ಮ ಅವರು ಕೊನೆಯ ಬಾರಿಗೆ ದುಲೀಪ್​ ಟ್ರೋಫಿ ಆಡಿದ್ದು 2016ರಲ್ಲಿ. ಅವರು ಕೂಡ ಈ ಬಾರಿ ದುಲೀಪ್​ ಟ್ರೋಫಿ ಆಡಲಿದ್ದಾರೆ ಎನ್ನಲಾಗಿದೆ. ಇತ್ತೀಚೆಗಷ್ಟೇ ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಸೋಲಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರೋಹಿತ್​, “ದೇಶೀಯ ಕ್ರಿಕೆಟ್ ಆಡುವುದು ಬಹಳ ಮುಖ್ಯ. ನಾವು ಮುಖ್ಯವಾಗಿ ಟೆಸ್ಟ್ ಮತ್ತು ಏಕದಿನ ಸರಣಿಗೆ ದೇಶೀಯ ಕ್ರಿಕೆಟ್​ ಪ್ರದರ್ಶನ ನೋಡಿ ಆಟಗಾರರನ್ನು ಆಯ್ಕೆ ಮಾಡಬೇಕಾಗಿದೆ. ನಮ್ಮ ದೇಶೀಯ ಕ್ರಿಕೆಟ್, ಭಾರತೀಯ ಕ್ರಿಕೇಟ್‌ನ ಬೆನ್ನೆಲುಬು” ಎಂದು ಹೇಳಿದ್ದರು.

Continue Reading

ಕ್ರೀಡೆ

Maharaja Trophy 2024: ಮಹಾರಾಜ ಟಿ20 ಕ್ರಿಕೆಟ್​ ಟೂರ್ನಿ ಆರಂಭಕ್ಕೆ ಒಂದು ದಿನ ಬಾಕಿ; ತಂಡಗಳ ವಿವರ ಹೀಗಿದೆ

Maharaja Trophy 2024: ಮೂರನೇ ಆವೃತ್ತಿಯ ಮಹಾರಾಜ ಕ್ರಿಕೆಟ್​ ಟೂರ್ನಿ ಆಗಸ್ಟ್​ 15 ರಿಂದ ಪಂದ್ಯಾವಳಿ ಆರಂಭವಾಗಿ ಸೆಪ್ಟೆಂಬರ್​ 1ರ ತನಕ ನಡೆಯಲಿದೆ.

VISTARANEWS.COM


on

Maharaja Trophy 2024
Koo

ಬೆಂಗಳೂರು: ಇದೇ ಆಗಸ್ಟ್​ 15ರಿಂದ ಆರಂಭಗೊಳ್ಳಲಿರುವ 3ನೇ ಆವೃತ್ತಿಯ ಮಹಾರಾಜ ಟ್ರೋಫಿ(Maharaja Trophy) ಕ್ರಿಕೆಟ್​ ಪಂದ್ಯಾವಳಿಕ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. ಜತೆಗೆ ಟೂರ್ನಿಗೆ ಬೇಕಾದ ಎಲ್ಲ ಸಿದ್ಧತೆ ಕೂಡ ಬಹುತೇಕ ಪೂರ್ಣಗೊಂಡಿದೆ. ಎಲ್ಲ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 6 ತಂಡಗಳ ಆಟಗಾರರ(Maharaja Trophy squads) ಪಟ್ಟಿ ಇಲ್ಲಿದೆ.

ಮಂಗಳೂರು ಡ್ರಾಗನ್ಸ್

ರೋಹನ್ ಪಾಟೀಲ್, ಪಾರಸ್ ಗುರ್ಬಕ್ಸ್ ಆರ್ಯ, ಸಿದ್ಧಾರ್ಥ್ ಕೆವಿ, ನಿಕಿನ್ ಜೋಸ್, ಶ್ರೇಯಸ್ ಗೋಪಾಲ್, ಧೀರಜ್ ಜೆ ಗೌಡ, ದರ್ಶನ್ ಎಂಬಿ, ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ, ತುಷಾರ್ ಸಿಂಗ್, ಲಂಕೇಶ್ ಕೆಎಸ್, ಸಮರ್ಥ್ ನಾಗರಾಜ್, ಸಂಕಲ್ಪ್ ಎಸ್ಎಸ್, ಅಭಿಲಾಷ್ ರಾವ್, ನಿಶ್ಚಿತ್ ಶೆಟ್ಟಿ, ನಿಶ್ಚಿತ್ ಶೆಟ್ಟಿ ಗೌಡ, ಪ್ರಣವ್ ಭಾಟಿಯಾ, ಸಂಜಯ್ ಅಶ್ವಿನ್, ಸಾಗರ್ ಸೋಲಂಕಿ.

ಬೆಂಗಳೂರು ಬ್ಲಾಸ್ಟರ್ಸ್

ಶುಭಾಂಗ್ ಹೆಗ್ಡೆ, ಮಯಾಂಕ್ ಅಗರ್ವಾಲ್, ಮೊಹ್ಸಿನ್ ಖಾನ್, ಸೂರಜ್ ಅಹುಜಾ, ಅನಿರುಧಾ ಜೋಶಿ, ನವೀನ್ ಎಂಜಿ, ಪ್ರತೀಕ್ ಜೈನ್, ಚೇತನ್ ಎಲ್ಆರ್, ಮೇಲು ಕ್ರಾಂತಿ ಕುಮಾರ್, ಸಂತೋಖ್ ಸಿಂಗ್, ಆದಿತ್ಯ ಗೋಯಲ್, ರಕ್ಷಿತ್ ಎಸ್, ವರುಣ್ ರಾವ್ ಟಿಎನ್, ನಿರಂಜನ್ ನಾಯ್ಕ್, ಲವಿಶ್ ಕಶಾಲ್ ವರುಣ್ ಕುಮಾರ್ ಎಚ್.ಸಿ, ಶಿಖರ್ ಶೆಟ್ಟಿ, ಭೀಮ್ ರಾವ್ ನವಲೆ.

ಗುಲ್ಬರ್ಗ ಮಿಸ್ಟಿಕ್ಸ್

ದೇವದತ್ತ್ ಪಡಿಕ್ಕಲ್, ವೈಶಾಕ್ ವಿಜಯ್​ ಕುಮಾರ್, ಸ್ಮರಣ್ ಆರ್, ಅನೀಶ್ ಕೆವಿ, ಪ್ರವೀಣ್ ದುಬೆ, ಲುವ್ನಿತ್ ಸಿಸೋಡಿಯಾ, ಶರತ್ ಬಿಆರ್, ಆದಿತ್ಯ ನಾಯರ್, ಮೋನಿಶ್ ರೆಡ್ಡಿ, ಶರಣ್ ಗೌಡ್, ಯಶೋವರ್ಧನ್ ಪರಂತಪ್, ನಾಥನ್ ದ್ಮೆಲ್ಲೋ ಜೋಕಿಮ್, ಫೈಜಾನ್ ರಿಯಾಜ್, ರೈಟ್‌ಕಾಲ್, ರೈಟ್‌ಕಾಲ್ ಅಭಿಷೇಕ್ ಪ್ರಭಾಕರ್, ಪೃಥ್ವಿ ಶೇಖಾವತ್, ಶಿಮೊನ್ ಲೂಯಿಜ್.

ಇದನ್ನೂ ಓದಿ Maharaja Trophy schedule: ಮಹಾರಾಜ ಟ್ರೋಫಿಯ ವೇಳಾಪಟ್ಟಿ ಪ್ರಕಟ; ಆಗಸ್ಟ್​ 15ರಿಂದ ಟೂರ್ನಿ ಆರಂಭ

ಹುಬ್ಬಳ್ಳಿ ಟೈಗರ್ಸ್


ಮನೀಶ್ ಪಾಂಡೆ, ಶ್ರೀಜಿತ್ ಕೆ.ಎಲ್, ವಿಧ್ವತ್ ಕಾವೇರಪ್ಪ, ಮನ್ವಂತ್ ಕುಮಾರ್ ಎಲ್, ಕೆಸಿ ಕಾರಿಯಪ್ಪ , ಮೊಹಮ್ಮದ್ ತಾಹಾ, ತಿಪ್ಪಾ ರೆಡ್ಡಿ, ಕಾರ್ತಿಕೇಯ ಕೆಪಿ, ಕುಮಾರ್ ಎಲ್ಆರ್, ಆದರ್ಶ್ ಪ್ರಜ್ವಲ್, ಕೃತಿಕ್ ಕೃಷ್ಣ, ಅನೀಶ್ವರ್ ಗೌತಮ್, ಮಾಧವ್ ಪ್ರಕಾಶ್ ಬಜಾಜ್, ಶ್ರೀಶ ಎಸ್ ಅಕಾಹರ್, ದಮನ್ ದೇಪಹಾರ್, ಸಿಂಗ್, ಮಿತ್ರಕಾಂತ್ ಯಾದವ್, ನಿಶ್ಚಿತ್ ಪೈ, ರಿಷಿ ಬೋಪಣ್ಣ.

ಮೈಸೂರು ವಾರಿಯರ್ಸ್

ಕರುಣ್ ನಾಯರ್, ಕಾರ್ತಿಕ್ ಸಿಎ, ಮನೋಜ್ ಭಾಂಡಗೆ, ಕಾರ್ತಿಕ್ ಎಸ್ ಯು, ಸುಚಿತ್ ಜೆ, ಗೌತಮ್ ಕೆ, ವಿದ್ಯಾಧರ್ ಪಾಟೀಲ್, ವೆಂಕಟೇಶ್ ಎಂ, ಹರ್ಷಿಲ್ ಧರ್ಮಾನಿ, ಗೌತಮ್ ಮಿಶ್ರಾ, ಧನುಷ್ ಗೌಡ, ಸಮಿತ್ ದ್ರಾವಿಡ್, ದೀಪಕ್ ದೇವಾಡಿಗ, ಸುಮಿತ್ ಕುಮಾರ್, ಸ್ಮಯನ್ ಶ್ರೀವಾಸ್ತವ, ಜಾಸ್ಪರ್ ಇಜೆ , ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸರ್ಫರಾಜ್ ಅಶ್ರಫ್.

ಶಿವಮೊಗ್ಗ ಲಯನ್ಸ್

ಅಭಿನವ್ ಮನೋಹರ್, ನಿಹಾಲ್ ಉಳ್ಳಾಲ್, ಕೌಶಿಕ್ ವಿ, ಶಿವರಾಜ್ ಎಸ್, ಪ್ರದೀಪ್ ಟಿ, ಹಾರ್ದಿಕ್ ರಾಜ್, ಧ್ರುವ ಪ್ರಭಾಕರ್, ಆನಂದ್ ದೊಡ್ಡಮನಿ, ರಾಜವೀರ್ ವಾಧ್ವಾ, ಅವಿನಾಶ್ ಡಿ, ಧೀರಜ್ ಮೋಹನ್, ಭರತ್ ಧುರಿ, ಆದಿತ್ಯ ವಿಶ್ವ ಕರ್ಮ, ಆದಿತ್ಯ ಮಣಿ, ರೋಹಿತ್ ಕೆ. ನವೀನ್, ಶರತ್ ಎಚ್.ಎಸ್, ಮೋಹಿತ್ ಬಿ.ಎ.

Continue Reading

ಕ್ರೀಡೆ

Sunil Gavaskar: ಪದಕ ಗೆಲ್ಲಲು ವಿಫಲವಾದ ಲಕ್ಷ್ಯ ಸೇನ್ ವಿರುದ್ಧ ವಾಗ್ದಾಳಿ ನಡೆಸಿದ ಗಾವಸ್ಕರ್

Sunil Gavaskar: ಲಕ್ಷ್ಯ ಸೇನ್​ ಮಹತ್ವದ ಪಂದ್ಯದ ವೇಳೆ ಏಕಾಗ್ರತೆಯನ್ನು ಕಾಯ್ದುಕೊಳ್ಳುವಲ್ಲಿ ಎಡವಿದ್ದೇ ಸೋಲಿಗೆ ಕಾರಣ ಎಂದು ಮಾಜಿ ಕ್ರಿಕೆಟಿ ಸುನೀಲ್​ ಗವಾಸ್ಕರ್​ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

Sunil Gavaskar
Koo

ಮುಂಬಯಿ: ಪ್ಯಾರಿಸ್‌ ಒಲಿಂಪಿಕ್ಸ್‌(Paris Olympics 2024) ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಸೆಮಿ ಫೈನಲ್​ ಪಂದ್ಯದ ತನಕ ಉತ್ತಮವಾಗಿ ಆಡಿ ಪದಕ ಭರಸವೆ ಮೂಡಿಸಿದ್ದ ಲಕ್ಷ್ಯ ಸೇನ್(Lakshya Sen)​ ಸೆಮಿ ಮತ್ತು ಕಂಚಿನ ಪದಕ ಸ್ಪರ್ಧೆಯಲ್ಲಿ ನಿರಾಶಾದಾಯಕ ಪ್ರದರ್ಶನ ತೋರುವ ಮೂಲಕ ಸೋಲು ಕಂಡು ಪದಕ ವಂಚಿತರಾಗಿದ್ದರು. ಇದೀಗ ಮಾಜಿ ಕ್ರಿಕೆಟಿಗ ಸುನೀಲ್​ ಗವಾಸ್ಕರ್(Sunil Gavaskar) ಅವರು ಲಕ್ಷ್ಯ ಸೇನ್​ ಸೋಲಿಗೆ ಕಾರಣ ಏನೆಂಬುದನ್ನು ತಿಳಿಸಿದ್ದಾರೆ.​ ಮಹತ್ವದ ಪಂದ್ಯದ ವೇಳೆ ಏಕಾಗ್ರತೆಯನ್ನು ಕಾಯ್ದುಕೊಳ್ಳುವಲ್ಲಿ ಎಡವಿದ್ದೇ ಸೋಲಿಗೆ ಕಾರಣ ಎಂದಿದ್ದಾರೆ.

ಕೆಳ ದಿನಗಳ ಹಿಂದಷ್ಟೇ ಭಾರತೀಯ ಬ್ಯಾಡ್ಮಿಂಟನ್ ತಂಡದ ಮುಖ್ಯ ಕೋಚ್ ಪ್ರಕಾಶ್ ಪಡುಕೋಣೆ ಕನಿಷ್ಠ 1 ಪದಕವನ್ನು ಕೂಡ ಗೆಲ್ಲಲಾಗದ ಬ್ಯಾಡ್ಮಿಂಟನ್​ ತಂಡದ ಬಗ್ಗೆ ವಾಗ್ದಾಳಿ ನಡೆಸಿದ್ದರು. ಇದೀಗ ಪಡುಕೋಣೆ ಅವರಿಗೆ ಸುನೀಲ್​ ಗವಾಸ್ಕರ್​ ಕೂಡ ಬೆಂಬಲಕ್ಕೆ ನಿಂತಿದ್ದಾರೆ. ಪ್ರಕಾಶ್ ಪಡುಕೋಣೆ ಹೇಳಿಕೆಯನ್ನು ಬೆಂಬಲಿಸಿರುವ ಸುನೀಲ್ ಗಾವಸ್ಕರ್, ಲಕ್ಷ್ಯಸೇನ್​ರಂತಹ ಆಟಗಾರರ ದುರ್ಬಲ ಮನಸ್ಥಿತಿಯು ಮಹತ್ವದ ಘಟ್ಟದಲ್ಲಿ ಬ್ಯಾಡ್ಮಿಂಟನ್​ನಲ್ಲಿ ಪದಕ ನಷ್ಟಕ್ಕೆ ಕಾರಣವಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ Sunil Gavaskar Birthday: 60 ಓವರ್‌ ಆಡಿ 36 ರನ್‌ ಗಳಿಸಿದ್ದ ಗವಾಸ್ಕರ್‌, 88 ಚೆಂಡಿನಲ್ಲಿ ಸೆಂಚುರಿ ಬಾರಿಸಿದರು!

“ಆಟಗಾರರು ತಾವೇ ಮುಂದೆ ಬಂದು ಪದಕ ಗೆಲ್ಲಲುವ ಮನಸ್ಸು ಮಾಡಬೇಕು. ಉನ್ನತ ಮಟ್ಟದಲ್ಲಿ ಪ್ರದರ್ಶನ ನೀಡಲು ಅಗತ್ಯವಿರುವ ಎಲ್ಲಾ ಬೆಂಬಲ ಮತ್ತು ಹಣಕಾಸು ಭಾರತೀಯ ಆಟಗಾರರಿಗೆ ನೀಡಲಾಗುತ್ತಿದೆ. ನಮ್ಮ ಆಟಗಾರರಿಗೆ ಸೌಲಭ್ಯಗಳು ಮತ್ತು ಹಣದ ಕೊರತೆಯಿದ್ದ ಹಿಂದಿನ ದಿನಗಳಂತೆ ಈಗ ಆ ಪರಿಸ್ಥಿತಿ ಇಲ್ಲ” ಎಂದು ಹೇಳುವ ಮೂಲಕ ಬ್ಯಾಡ್ಮಿಂಟನ್​ ಆಟಗಾರರ ವೈಫಲ್ಯದ ಬಗ್ಗೆ ವಾಗ್ದಾಳಿ ನಡೆಸಿದ್ದರು.

“ಲಕ್ಷ್ಯ ಉತ್ತಮವಾಗಿ ಆಡಿದ್ದರು. ಸೋಲಿನೀಂದ ಸಹಜವಾಗಿ ನಾನು ಸ್ವಲ್ಪ ನಿರಾಶೆಗೊಂಡಿದ್ದೇನೆ. ಅವರು ಸೆಮಿಫೈನಲ್​ನಲ್ಲಿಯೂ ಉತ್ತಮವಾಗಿ ಆಡಿದ್ದರು. ಆದರೆ ಅಂಗಣದೊಳಗಿನ ಓಡಾಟ ಅವರಿಗೆ ಸಾಧ್ಯವಾಗಲಿಲ್ಲ, ಆ ನಿಟ್ಟಿನಲ್ಲಿ ಅವರು ಕೆಲಸ ಮಾಡಬೇಕಾಗಿದೆ” ಎಂದು ಪಡುಕೋಣೆ ಅಸಮಾಧಾನ ಹೊರಹಾಕಿದ್ದರು.

ಪುರುಷರ ಸಿಂಗಲ್ಸ್​ನ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ 22 ವರ್ಷದ ಲಕ್ಷ್ಯ ಸೇನ್ ಮಲೇಷ್ಯಾದ ಲೀ ಜಿ ಜಿಯಾ ವಿರುದ್ಧ 21-13, 16-21, 11-21 ಅಂತರದಲ್ಲಿ ಸೋತು ನಿರಾಸೆ ಮೂಡಿಸಿದ್ದರು. ಇದಕ್ಕೂ ಮುನ್ನ ನಡೆದಿದ್ದ ಸೆಮಿಫೈನಲ್​ ಪಂದ್ಯದಲ್ಲಿ ಡೆನ್ಮಾರ್ಕ್‌ನ ವಿಕ್ಟರ್‌ ಅಕ್ಸೆಲ್ಸೆನ್‌(Viktor Axelsen) ವಿರುದ್ಧ 20-22 21-14 ನೇರ ಗೇಮ್​ಗಳ ಅಂತರದಿಂದ ಸೋಲು ಕಂಡಿದ್ದರು. 

Continue Reading

ಕ್ರೀಡೆ

Manu Bhaker-Neeraj Chopra: ನೀರಜ್​ ಚೋಪ್ರಾ ಜತೆ ಮದುವೆ ವದಂತಿ; ಸ್ಪಷ್ಟನೆ ನೀಡಿದ ಮನು ಭಾಕರ್​ ತಂದೆ

Manu Bhaker-Neeraj Chopra: ಮನು ತಾಯಿ ನೀರಜ್​ರನ್ನು ತನ್ನ ಸ್ವಂತ ಮಗನಂತೆ ಕಾಣುತ್ತಾರೆ. ಹೀಗಾಗಿ ನೀರಜ್​ ಜತೆ ತುಂಬಾ ಆತ್ಮೀಯವಾಗಿ ಕಾಣಿಸಿಕೊಂಡರು ಎಂದು ಹೇಳುವ ಮೂಲಕ ಮನು ಭಾಕರ್​ ಅವರ ತಂದೆ ನೀರಜ್​ ಜತೆಗಿನ ಮದುವೆಯ ಕುರಿತ ವದಂತಿಗಳಿಗೆ ತೆರೆ ಎಳೆದಿದ್ದಾರೆ.

VISTARANEWS.COM


on

Manu Bhaker-Neeraj Chopra
Koo

ನವದೆಹಲಿ: ಪ್ಯಾರಿಸ್ ಒಲಿಂಪಿಕ್‌(Paris Paralympic 2024) ಬೆಳ್ಳಿ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ(Manu Bhaker-Neeraj Chopra) ಹಾಗೂ ಶೂಟಿಂಗ್​ನಲ್ಲಿ ಅವಳಿ ಕಂಚಿನ ಪದಕ ಗೆದ್ದ ಮನು ಭಾಕರ್ ಮಧ್ಯೆ ಪ್ರೇಮಾಂಕುರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಾಗಿತ್ತು. ಇವರಿಬ್ಬರು ಆತ್ಮೀಯವಾಗಿ ಮಾತನಾಡುತ್ತಿರುವ ವಿಡಿಯೊ ಭಾರೀ ಚರ್ಚೆಗೆ ಗ್ರಾಸವಾಗಿತ್ತು,. ಅಲ್ಲದೆ ಮನು(Manu Bhaker) ತಾಯಿ ಕೂಡ ನೀರಜ್​ ಜತೆ ಕಾಣಿಸಿಕೊಂಡಿದ್ದ ಕಾರಣ ನೀರಜ್​-ಮನು ಮಧ್ಯೆ ಪ್ರೀತಿ ಇರುವುದು ಖಚಿತ ಎನ್ನಲಾಗಿತ್ತು. ಇದೇ ವಿಚಾರವಾಗಿ ಇದೀಗ ಮನು ಭಾಕರ್​ ತಂದೆ(Manu Bhaker Father) ರಾಮ್ ಕಿಶನ್(Ram Kishan) ಸ್ಪಷ್ಟನೆ ನೀಡಿದ್ದಾರೆ.

ಮಗಳ(ಮನು ಭಾಕರ್​) ಮದುವೆ ವಿಚಾರವಾಗಿ ಹರಿದಾಡುತ್ತಿರುವ ವದಂತಿಗಳಿಗೆ ಪ್ರತಿಕ್ರಿಯೆ ನೀಡಿರುವ ತಂದೆ ರಾಮ್ ಕಿಶನ್, “ನನ್ನ ಮಗಳು ಇನ್ನೂ ಚಿಕ್ಕ ವಯಸ್ಸಿನವಳು. ಈಗ ವಿವಾಹವಾಗುವ ವಯಸ್ಸು ಕೂಡ ಅವಳದ್ದಲ್ಲ. ಸದ್ಯ ಮದುವೆ ಬಗ್ಗೆ ಯಾವ ಯೋಚನೆಯೂ ಇಲ್ಲ. ಮನು ತಾಯಿ ನೀರಜ್​ರನ್ನು ತನ್ನ ಸ್ವಂತ ಮಗನಂತೆ ಕಾಣುತ್ತಾರೆ. ಹೀಗಾಗಿ ನೀರಜ್​ ಜತೆ ತುಂಬಾ ಆತ್ಮೀಯವಾಗಿ ಕಾಣಿಸಿಕೊಂಡರು” ಎಂದು ಹೇಳುವ ಮೂಲಕ ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಮನು ಭಾಕರ್​ ಅವರ ತಾಯಿ ನೀರಜ್(Neeraj Chopra)​ ಜತೆ ಮಾತನಾಡುತ್ತಾ ನೀರಜ್​ ಅವರ ಕೈಯನ್ನು ತನ್ನ ತಲೆ ಮೇಲೆ ಇರಿಸಿ ಏನೋ ಪ್ರಮಾಣ ಮಾಡುತ್ತಿರುವಂತೆ ವಿಡಿಯೊದಲ್ಲಿ ಕಂಡುಬಂದಿತ್ತು. ನೀರಜ್​ ಮತ್ತು ಮನು ಮಾತುಕತೆ ನಡೆಸುತ್ತಿದ್ದ ವೇಳೆ ಅಲ್ಲಿದ್ದ ಅನೇಕ ಅಥ್ಲೀಟ್​ಗಳು ಇವರಿಬ್ಬರನ್ನು ಬೆರಗು ಕಣ್ಣಿನಿಂತ ನೋಡುತ್ತಾ ನಿಂತಿದ್ದರು. ಈ ವಿಡಿಯೊಗಳು ಭಾರೀ ವೈರಲ್​ ಆದ ಕಾರಣ ಈ ಜೋಡಿ ಮುಂದೊಂದು ದಿನ ವಿವಾಹವಾಗುವುದು ಖಚಿತ ಎಂದು ನೆಟ್ಟಿಗರು ಹೇಳಲಾರಂಭಿಸಿದ್ದರು.

ಇದನ್ನೂ ಓದಿ Neeraj Chopra : ನೀರಜ್ ಚೋಪ್ರಾ ಭೇಟಿಯಾದ ಫುಟ್ಬಾಲ್ ತಂಡದ ನಾಯಕ ಸುನೀಲ್ ಛೆಟ್ರಿ

ಟೋಕಿಯೊ ಒಲಿಂಪಿಕ್ಸ್​ನಲ್ಲಿ ಅಭೂತಪೂರ್ವ ಸಾಧನೆ ಮಾಡಿ ಚಿನ್ನದ ಪದಕ ಗೆದ್ದಿದ್ದ ಚೋಪ್ರಾ ಪ್ಯಾರಿಸ್​ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಸತತ ಎರಡು ಒಲಿಂಪಿಕ್ ಪದಕಗಳನ್ನು ಗೆದ್ದ ಭಾರತದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಎಂಬ ದಾಖಲೆ ಬರೆದಿದ್ದಾರೆ.

ನೀರಜ್​ ಚೋಪ್ರಾ(Neeraj Chopra) ಅವರು ತವರಿಗೆ ಮರಳುವುದು ಕೊಂಚ ತಡವಾಗಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ನೀರಜ್​ ತಮ್ಮ ಗಾಯಕ್ಕೆ ಶಸ್ತ್ರಚಿಕಿತ್ಸೆಯ(neeraj chopra surgery) ಕುರಿತು ವೈದ್ಯರಿಂದ ಸಲಹೆ ಪಡೆಯಲು ಪ್ಯಾರಿಸ್‌ನಿಂದ ನೇರವಾಗಿ ಜರ್ಮನಿಗೆ ತೆರಳಿದ್ದಾರೆ. ಹೀಗಾಗಿ ಅವರು ಭಾರತಕ್ಕೆ ಮರಳುವುದು ವಿಳಂಬವಾಗಲಿದೆ.

ಕುಟುಂಬದ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ನೀರಜ್​ ಸುಮಾರು ಒಂದು ತಿಂಗಳ ನಂತರ ಭಾರತಕ್ಕೆ ಮರಳಬಹುದು ಎನ್ನಲಾಗಿದೆ. ‘ನೀರಜ್​ ಜರ್ಮನಿಯಲ್ಲಿ ವೈದ್ಯರನ್ನು ಭೇಟಿಯಾಗಲಿದ್ದಾರೆಂಬುದು ತಿಳಿದಿದೆ. ಆದರೆ, ಉಳಿದ ಯಾವುದೇ ಮಾಹಿತಿಗಳು ಗೊತ್ತಿಲ್ಲ’ ಎಂದು ನೀರಜ್ ಸಂಬಂಧಿಯೊಬ್ಬರು ಪಿಟಿಐಗೆ ಮಾಹಿ ನೀಡಿದ್ದಾರೆ.

10 ಮೀ. ಏರ್‌ ಪಿಸ್ತೂಲ್‌ ವೈಯಕ್ತಿಕ ಸ್ಪರ್ಧೆಯಲ್ಲಿ ಕಂಚು ಗೆಲ್ಲುವ ಮೂಲಕ ಮನು ಭಾಕರ್‌ ಭಾರತದ ಪದಕ ಖಾತೆ ತೆರೆದಿದ್ದರು. ಬಳಿಕ ಸರಬ್ಜೋತ್‌ ಸಿಂಗ್‌ ಜತೆಗೂಡಿ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ಡಬಲ್ಸ್‌ನಲ್ಲೂ ಕಂಚಿಗೆ ಗುರಿ ಇರಿಸಿದ್ದರು. ಈ ಮೂಲಕ ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದ ಭಾರತದ ಮೊದಲ ಕ್ರೀಡಾಪಟು ಎನಿಸಿಕೊಂಡಿದ್ದರು.

Continue Reading
Advertisement
Duleep Trophy
ಕ್ರೀಡೆ1 min ago

Duleep Trophy: 14 ವರ್ಷಗಳ ಬಳಿಕ ದುಲೀಪ್‌ ಟ್ರೋಫಿ ಆಡಲಿದ್ದಾರೆ ವಿರಾಟ್​ ಕೊಹ್ಲಿ?

kolkata doctor murder case
ದೇಶ36 mins ago

Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ಪ್ರಮುಖ ಸುದ್ದಿ36 mins ago

Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

Janhvi Kapoor
ಸಿನಿಮಾ46 mins ago

Janhvi Kapoor: ಇಂದು ನಟಿ ಶ್ರೀದೇವಿ ಜನ್ಮದಿನ; ಬಾಯ್‌ಫ್ರೆಂಡ್‌ ಜತೆ ತಿರುಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಜಾಹ್ನವಿ ಕಪೂರ್‌

Bengaluru Police
ಬೆಂಗಳೂರು51 mins ago

Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

Maharaja Trophy 2024
ಕ್ರೀಡೆ52 mins ago

Maharaja Trophy 2024: ಮಹಾರಾಜ ಟಿ20 ಕ್ರಿಕೆಟ್​ ಟೂರ್ನಿ ಆರಂಭಕ್ಕೆ ಒಂದು ದಿನ ಬಾಕಿ; ತಂಡಗಳ ವಿವರ ಹೀಗಿದೆ

ಕರ್ನಾಟಕ1 hour ago

Kundapra Kannada Habba : ಬೆಂಗಳೂರಿನ ಅರಮನೆ ಮೈದಾನದಲ್ಲಿ 2 ದಿನ ಅದ್ಧೂರಿ ‘ಕುಂದಾಪ್ರ ಕನ್ನಡ ಹಬ್ಬ’

Independence day 2024
ದೇಶ1 hour ago

Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

Bangladesh Unrest
ವಿದೇಶ1 hour ago

Bangladesh Unrest: ಬಾಂಗ್ಲಾ ಹಿಂದೂಗಳ ಪರ ಸೋಶಿಯಲ್‌ ಮೀಡಿಯಾ ಅಭಿಯಾನ; All eyes on hindus ಭಾರೀ ಟ್ರೆಂಡ್!

Road Accident
ಬೆಂಗಳೂರು1 hour ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ! ಬೈಕ್‌, ಕಾರುಗಳಿಗೆ ಡಿಕ್ಕಿ ಹೊಡೆದ ಬಿಎಂಟಿಸಿ; ನರಳಾಡಿದ ಸವಾರರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌