Hindenburg Report : ಸೆಬಿ ಅಧ್ಯಕ್ಷರ ವಜಾಗೆ ಆಗ್ರಹಿಸಿದ ಕಾಂಗ್ರೆಸ್​ನಿಂದ ಆಗಸ್ಟ್​​ 22ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ - Vistara News

ಪ್ರಮುಖ ಸುದ್ದಿ

Hindenburg Report : ಸೆಬಿ ಅಧ್ಯಕ್ಷರ ವಜಾಗೆ ಆಗ್ರಹಿಸಿದ ಕಾಂಗ್ರೆಸ್​ನಿಂದ ಆಗಸ್ಟ್​​ 22ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ

Hindenburg Report : ದೇಶದಲ್ಲಿ ಈಗ ನಡೆಯುತ್ತಿರುವ ಅತಿದೊಡ್ಡ ಹಗರಣಗಳಲ್ಲೊಂದನ್ನು ಹಿಂಡೆನ್​ಬರ್ಗ್​​ ಬಹಿರಂಗಪಡಿಸಿದೆ. ಅದಾನಿ ಮತ್ತು ಸೆಬಿಗೆ ಸಂಬಂಧಿಸಿದ ಹಗರಣದ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ಜೈರಾಮ್ ರಮೇಶ್ ಹೇಳಿದರು. ಅದಾನಿ ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ಪಕ್ಷದ ನಾಯಕತ್ವ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಅವರು ಹೇಳಿದರು.

VISTARANEWS.COM


on

Hindenburg Report
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೆಬಿ ಅಧ್ಯಕ್ಷರು ಮತ್ತು ಅದಾನಿ ಗ್ರೂಪ್ ನಡುವೆ ಸಂಬಂಧವಿದೆ ಎಂದು ಆರೋಪಿಸಿ ಅಮೆರಿಕ ಮೂಲಕ ಶಾರ್ಟ್ ಸೆಲ್ಲರ್​ ಸಂಸ್ಥೆ ಹಿಂಡೆನ್​​ಬರ್ಗ್ (Hindenburg Report) ಮಾಡಿರುವ ​​ವರದಿಯ ವಿರುದ್ಧ ಆಗಸ್ಟ್ 22 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಮಂಗಳವಾರ ಘೋಷಿಸಿದೆ. ವರದಿಯ ಆರೋಪಗಳ ಹಿನ್ನೆಲೆಯಲ್ಲಿ ಸೆಬಿ ಅಧ್ಯಕ್ಷ ಸ್ಥಾನದಿಂದ ಮಾಧಾಬಿ ಬುಚ್ ಅವರನ್ನು ತೆಗೆದುಹಾಕಬೇಕೆಂದು ಕಾಂಗ್ರೆಸ್​ ಒತ್ತಾಯಿಸುತ್ತಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ರಾಜ್ಯ ಮುಖ್ಯಸ್ಥರ ಸಭೆಯ ನಂತರ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಈ ಘೋಷಣೆ ಮಾಡಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಮಲ್ಲಿಕಾರ್ಜುನ ಖರ್ಗೆ ವಹಿಸಿದ್ದರು.

ದೇಶದಲ್ಲಿ ಈಗ ನಡೆಯುತ್ತಿರುವ ಅತಿದೊಡ್ಡ ಹಗರಣಗಳಲ್ಲೊಂದನ್ನು ಹಿಂಡೆನ್​ಬರ್ಗ್​​ ಬಹಿರಂಗಪಡಿಸಿದೆ. ಅದಾನಿ ಮತ್ತು ಸೆಬಿಗೆ ಸಂಬಂಧಿಸಿದ ಹಗರಣದ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ಜೈರಾಮ್ ರಮೇಶ್ ಹೇಳಿದರು. ಅದಾನಿ ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ಪಕ್ಷದ ನಾಯಕತ್ವ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಅವರು ಹೇಳಿದರು.

ಈ ವಿಷಯದ ಬಗ್ಗೆ ಎರಡು ವಿಷಯಗಳಿಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ನಾವು ಸರ್ವಾನುಮತದಿಂದ ನಿರ್ಧರಿಸಿದ್ದೇವೆ. ಒಂದು ಅದಾನಿ ಮೆಗಾ ಹಗರಣದ ಬಗ್ಗೆ ಜೆಪಿಸಿ ತನಿಖೆ ನಡೆಸಬೇಕು. ಇದರಲ್ಲಿ ಪ್ರಧಾನಿ ಸಂಪೂರ್ಣವಾಗಿ ಭಾಗಿಯಾಗಿದ್ದಾರೆ. ಷೇರು ಮಾರುಕಟ್ಟೆ ನಿಯಂತ್ರಣವು ಈಗ ತೀವ್ರವಾಗಿ ಸ್ವಜನಪಕ್ಷಪಾತ ನಡೆಸಿರುವುದು ಕಂಡುಬಂದಿದೆ. ಜೈರಾಮ್ ರಮೇಶ್ ಹೇಳಿದರು.

ಹಿಂಡೆನ್​ಬರ್ಗ್​ ರಿಸರ್ಚ್ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸೆಬಿ ಮತ್ತು ಅದರ ಮುಖ್ಯಸ್ಥ ಮಾಧಾಬಿ ಬುಚ್ ವಿರುದ್ಧ ಆರೋಪ ಮಾಡಿದ ಬಳಿಕ ಕಾಂಗ್ರೆಸ್ ಸಂಸದೀಯ ತನಿಖೆಗೆ ಒತ್ತಾಯಿಸಿದೆ.

ಇದನ್ನೂ ಓದಿ: Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

ಅದಾನಿ ಮನಿ ಸ್ಪೋನಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ವಿದೇಶಿ ಸಂಸ್ಥೆಗಳಲ್ಲಿ ಸೆಬಿ ಮುಖ್ಯಸ್ಥೆ ಮಾಧಾಬಿ ಪುರಿ ಬುಚ್ ಮತ್ತು ಅವರ ಪತಿ ಪಾಲನ್ನು ಹೊಂದಿದ್ದಾರೆ ಎಂದು ಹಿಂಡೆನ್​ಬರ್ಗ್​​ ರಿಸರ್ಚ್ ಹೇಳಿದೆ. ಆದರೆ ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಗ್ರೂಪ್ ಆಫ್ ಕಂಪನಿಗಳಿಗೆ ಪಕ್ಷಪಾತ ಮಾಡಿರುವ ಆರೋಪಗಳನ್ನು ಸೆಬಿ, ಮಾಧಾಬಿ ಬುಚ್ ಮತ್ತು ಅವರ ಪತಿ ನಿರಾಕರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Vinesh Phogat : ವಿನೇಶ್​ ಪೋಗಟ್​ ಅನರ್ಹತೆ ತೀರ್ಪು ಆಗಸ್ಟ್​​​ 16ಕ್ಕೆ ಮುಂದೂಡಿಕೆ

Vinesh Phogat : ಫೋಗಟ್ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಮತ್ತು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ನಡುವಿನ ಪ್ರಕರಣದ ತೀರ್ಪನ್ನು ಮತ್ತಷ್ಟು ವಿಳಂಬಗೊಳಿಸುವುದಾಗಿ ನ್ಯಾಯಾಲಯ ಮಂಗಳವಾರ ಅಧಿಕೃತ ಪತ್ರಿಕಾ ಪ್ರಕಟಣೆಯ ಮೂಲಕ ಪ್ರಕಟಿಸಿದೆ.

VISTARANEWS.COM


on

Vinesh Phogat
Koo

ಬೆಂಗಳೂರು: ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್​ (Vinesh Phogat ) ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಆಘಾತಕಾರಿ ಎದುರಿಸಿದ ಅನರ್ಹತೆಯ ಕುರಿತ ವ್ಯಾಜ್ಯದ ತೀರ್ಪನ್ನು ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ (ಸಿಎಎಸ್) ಮತ್ತಷ್ಟು ಮುಂದೂಡಿಕೆ ಮಾಡಿದೆ. ಕ್ರೀಡಾ ನ್ಯಾಯಾಲಯವು ಈ ವಿಷಯದ ಬಗ್ಗೆ ವಿಸ್ತರಣೆಯನ್ನು ಕೇಳಿರುವುದು ಇದು ಮೂರನೇ ಬಾರಿ. ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್​​ನ ಫೈನಲ್​ಗೆ ಮೊದಲು ತಮ್ಮನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿದ್ದರು. ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ಜಂಟಿ ಬೆಳ್ಳಿ ಪದಕವನ್ನು ನೀಡುವಂತೆ ಮನವಿ ಮಾಡಿದ್ದರು. ಹೀಗಾಗಿ ಭಾರತೀಯ ಕ್ರೀಡಾಭಿಮಾನಿಗಳು ತೀರ್ಪಿಗಾಗಿ ಮತ್ತಷ್ಟು ಕಾಯುವಂತಾಗಿದೆ.

ಫೋಗಟ್ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಮತ್ತು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ನಡುವಿನ ಪ್ರಕರಣದ ತೀರ್ಪನ್ನು ಮತ್ತಷ್ಟು ವಿಳಂಬಗೊಳಿಸುವುದಾಗಿ ನ್ಯಾಯಾಲಯ ಮಂಗಳವಾರ ಅಧಿಕೃತ ಪತ್ರಿಕಾ ಪ್ರಕಟಣೆಯ ಮೂಲಕ ಪ್ರಕಟಿಸಿದೆ.

ವಿನೇಶ್ ಫೋಗಟ್ ಅವರ ಮನವಿ ಏನು?

ಐಒಸಿಯ ಅನರ್ಹತೆಯನ್ನು ರದ್ದುಗೊಳಿಸುವಂತೆ ಮತ್ತು ಫೈನಲ್​​ನಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ವಿನೇಶ್ ಆರಂಭದಲ್ಲಿ ಸಿಎಎಸ್​​ನ ತಾತ್ಕಾಲಿಕ ಪೀಠವನ್ನು ಕೋರಿದ್ದರು. ಸಿಎಎಸ್​​ನ ತಾತ್ಕಾಲಿಕ ಪೀಠವು ತನ್ನ ತೀರ್ಪನ್ನು ತ್ವರಿತವಾಗಿ ನೀಡಲು ಸಾಧ್ಯವಾಗಲಿಲ್ಲ. ಫೈನಲ್ ನಿಗದಿಯಾಗಿದ್ದ ಗುರುವಾರ ಸಂಜೆಗೆ ಮೊದಲು ವಾದಗಳನ್ನು ಆಲಿಸಲು ಅದಕ್ಕೆ ಸಾಧ್ಯವಾಗಿರಲಿಲ್ಲ. ನಂತರ ವಿನೇಶ್ ತನ್ನ ಮನವಿಯಲ್ಲಿ ಅನರ್ಹತೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಜಂಟಿ ಬೆಳ್ಳಿ ಪದಕ ನೀಡಬೇಕು ಎಂದು ಕೋಡಿದ್ದರು. ಆದಾಗ್ಯೂ, ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ಮುಖ್ಯಸ್ಥ ನೆನಾಡ್ ಲಾಲೋವಿಕ್ ಅವರು ಅದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಿನೇಶ್ ಅವರ ಬಗ್ಗೆ ಸಹಾನುಭೂತಿ ಇದೆ. ಆದರೆ ಭಾರತೀಯ ಕುಸ್ತಿಪಟುವನ್ನು ಅನರ್ಹಗೊಳಿಸುವ ಮೊದಲು ನಿಯಮಗಳನ್ನು ಪಾಲಿಸಲಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: Natasa Stankovic : ‘ಹೊಸ ಹೆಸರನ್ನು ಪಡೆಯುತ್ತಿದ್ದೇನೆ’; ಕುತೂಹಲ ಮೂಡಿಸಿದ ನತಾಶಾ ಸ್ಟಾಂಕೊವಿಕ್​ ಹೊಸ ಪೋಸ್ಟ್​​​

ಭಾರತೀಯ ಒಲಿಂಪಿಕ್ ಅಸೋಸಿಯೇಷನ್​ ಮುಖ್ಯಸ್ಥೆ ಪಿ.ಟಿ.ಉಷಾ ಅವರು ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ದಿನ್​ಶ್ವಾ ಪರ್ಡಿವಾಲಾ ಅವರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಎದುರಾದ ಟೀಕೆಗಳಿಗೆ ಉತ್ತರ ಕೊಟ್ಟರು. ತೂಕ ನಿಯಂತರಣ ಕ್ರೀಡಾಪಟು ಮತ್ತು ಅವರ ತರಬೇತುದಾರರ ಜವಾಬ್ದಾರಿಯಾಗಿದೆ ಎಂದು ಉಷಾ ಹೇಳಿದ್ದರು. ಒಲಿಂಪಿಕ್ ಕ್ರೀಡಾಕೂಟದಲ್ಲಿ ಎರಡು ದಿನಗಳ ತೂಕದ ನ್ಯಾಯೋಚಿತತೆಯ ಬಗ್ಗೆ ಪ್ರಶ್ನೆಗಳು ಈ ವೇಳೆ ಎದ್ದಿತು. ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ತನ್ನ ನಿಯಮಗಳನ್ನು ಮರುಪರಿಶೀಲಿಸಬೇಕು ಮತ್ತು ಎರಡನೇ ದಿನದಂದು ತೂಕಕ್ಕೆ 1 ಕೆ.ಜಿ ತೂಕ ಹೆಚ್ಚುವರಿ ಅವಕಾಶ ನೀಡಬೇಕು ಎಂದು ಅಮೆರಿಕದ ಕುಸ್ತಿ ಶ್ರೇಷ್ಠ ಜೋರ್ಡಾನ್ ಬರ್ರೋಸ್ ಸೇರಿದಂತೆ ಹಲವರುಒತ್ತಾಯಿಸಿದ್ದರಯ. ನೀಡುವ ರಿಪೆಚೇಜ್ ಸ್ವರೂಪವನ್ನು ಹೊಂದುವ ಬದಲು ಇಬ್ಬರೂ ಸೆಮಿಫೈನಲ್ ಸ್ಪರ್ಧಿಗಳಿಗೆ ಒಲಿಂಪಿಕ್ ಪದಕಗಳನ್ನು ನೀಡಬೇಕು ಎಂದು ಅವರು ಹೇಳಿದ್ದರು.

Continue Reading

ಕರ್ನಾಟಕ

Cauvery Water Dispute: ಕಾವೇರಿ ನೀರು ನಿಗದಿಗಿಂತ ಹೆಚ್ಚು ಹರಿಸಿದರೂ ತಮಿಳುನಾಡು ಆಕ್ಷೇಪ!

Cauvery Water Dispute: ಕಾವೇರಿ ನೀರು ನಿಯಂತ್ರಣ ಸಮಿತಿಯು ಆ.11ರಂದು ನಿಗದಿಪಡಿಸಿದ ನೀರಿನ ಹರಿವಾದ 56.73 ಟಿಎಂಸಿಗೆ ಬದಲಾಗಿ153.802 ಟಿಎಂಸಿ ನೀರು ಕರ್ನಾಟಕದಿಂದ ತಮಿಳುನಾಡಿಗೆ ಹರಿದಿದೆ. ಹೆಚ್ಚುವರಿ ನೀರು ಹರಿದರೂ ಕೂಡ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದೆ.

VISTARANEWS.COM


on

Cauvery Water Dispute
Koo

ಬೆಂಗಳೂರು: ನಿಗದಿಗಿಂತ ಹೆಚ್ಚು ಕಾವೇರಿ ನೀರು (Cauvery Water Dispute) ಹರಿಸಿದರೂ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿರುವುದು ಕಂಡುಬಂದಿದೆ. ನವ ದೆಹಲಿಯಲ್ಲಿ ಮಂಗಳವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) 101ನೇ ಸಭೆಯಲ್ಲಿ ಕರ್ನಾಟಕದ ವಿರುದ್ಧ ತಮಿಳುನಾಡು ಅಧಿಕಾರಿಗಳು ಅಸಮಾಧಾನ ಹೊರಹಾಕಿದ್ದಾರೆ. ಈ ಬಾರಿಯೂ ಕರ್ನಾಟಕವು ತನ್ನ ಜಲಾಶಯಗಳು ತುಂಬಿದ ನಂತರವಷ್ಟೇ ನೀರನ್ನು ಹರಿಸಿದೆ ಎಂದು ತಿಳಿಸಿದೆ.

ಆ.11ರಂದು ನಿಗದಿಪಡಿಸಿದ ನೀರಿನ ಹರಿವಾದ 56.73 ಟಿಎಂಸಿಗೆ ಬದಲಾಗಿ ಬಿಳಿಗುಂಡ್ಲುವಿನಲ್ಲಿ 153.802 ಟಿಎಂಸಿ ನೀರು ಹರಿದಿದೆ. ಬಿಳಿಗುಂಡ್ಲುವಿನಲ್ಲಿ ಹರಿದ ಹೆಚ್ಚುವರಿ ನೀರಿನ ಪ್ರಮಾಣವನ್ನು ಮುಂಬರುವ ತಿಂಗಳುಗಳಲ್ಲಿ ಕರ್ನಾಟಕ ರಾಜ್ಯವು ಹರಿಸಬೇಕಾದ ನೀರಿನ ಮೊತ್ತಕ್ಕೆ ಜಮೆ ಮಾಡಿಕೊಳ್ಳಬೇಕು. ಮುಂದಿನ ಮಾನ್ಸೂನ್ ತಿಂಗಳುಗಳಲ್ಲಿಯೂ ಒಳ್ಳೆಯ ಮಳೆಯ ನಿರೀಕ್ಷೆ ಇದ್ದು, ಎರಡೂ ರಾಜ್ಯದ ರೈತರು ಸಹ ಲಾಭ ಪಡೆದುಕೊಳ್ಳಬಹುದೆಂದು ಆಶಿಸುತ್ತೇವೆ ಎಂದು ಸಭೆಯಲ್ಲಿ ಕರ್ನಾಟಕ ತಿಳಿಸಿದೆ.

ಇದಕ್ಕೆ ತಮಿಳುನಾಡು ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಬಿಳಿಗುಂಡ್ಲುವಿನಲ್ಲಿ ಹರಿದ ನೀರಿನ ಪ್ರಮಾಣವು ಕರ್ನಾಟಕದ ಜಲಾಶಯಗಳಲ್ಲಿನ ಹೆಚ್ಚುವರಿ ನೀರಿನ ಪ್ರಮಾಣವಾಗಿರುತ್ತದೆ. ಈ ಬಾರಿಯೂ ಕರ್ನಾಟಕ ರಾಜ್ಯವು ತನ್ನ ಜಲಾಶಯಗಳು ತುಂಬಿದ ನಂತರವಷ್ಟೇ ನೀರನ್ನು ಹರಿಸಿದೆ ಎಂದು ತಿಳಿಸಿದ್ದಾರೆ.

    1992ರ ಏ.3ರ ಕಾವೇರಿ ನ್ಯಾಯಾಧಿಕರಣದ ಆದೇಶದಂತೆ ಒಂದು ವಾರದಲ್ಲಿ ಹರಿಸಬೇಕಾದ ನೀರಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ, ಅದನ್ನು ಮುಂಬರುವ ವಾರಗಳಲ್ಲಿ ಹರಿಸಬೇಕು. ಆದ್ದರಿಂದ, ಕರ್ನಾಟಕ ರಾಜ್ಯವು ತನ್ನ ಜಲಾಶಯಗಳು ಭರ್ತಿ ಆಗುವವರೆಗೆ ನಿರೀಕ್ಷಿಸಿ ಹೆಚ್ಚುವರಿ ನೀರನ್ನು ಹರಿಸಲು ಕಾಯುವ ಹಾಗಿಲ್ಲ ಎಂದು ತಮಿಳುನಾಡು ಅಧಿಕಾರಿಗಳು ಹೇಳಿದ್ದಾರೆ.

    ಕರ್ನಾಟಕವು ಹೆಚ್ಚುವರಿ ನೀರು ಹರಿಸಿರುವುದರಿಂದ ಕಾವೇರಿ ಜಲ ನಿಯಂತ್ರಣ ಸಮಿತಿಯಲ್ಲಿ (CWRC) ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಅಂತಿಮವಾಗಿ ಯಾವುದೇ ರೀತಿಯ ನಿರ್ಣಯ, ಆದೇಶ ಮಾಡದೆ ಸಭೆಯು ಮುಕ್ತಾಯಗೊಂಡಿದೆ.

    ಇದನ್ನೂ ಓದಿ | Government Employees: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಆ.17ರಂದು ವಿಶೇಷ ಸಾಂದರ್ಭಿಕ ರಜೆ

    ಗೇಟ್‌ ರಿಪೇರಿಗಾಗಿ 60 ಟಿಎಂಸಿ ನೀರು ಖಾಲಿ, 8 ಜಿಲ್ಲೆಗಳ ರೈತರಿಗೆ ನೀರಿಲ್ಲ!

    ವಿಜಯನಗರ: ಹೊಸಪೇಟೆಯ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರೆಸ್ಟ್‌ ಗೇಟ್ ಮುರಿದಿರುವುದು (Crest Gate Crash) ಮಳೆಗಾಲ ಮುಗಿಯುವ ಮುನ್ನವೇ ಕಲ್ಯಾಣ ಕರ್ನಾಟಕ (Kalyana Karntaka) ಭಾಗದ ಅನ್ನದಾತರಿಗೆ (Farmers) ಶಾಕ್ ನೀಡಿದೆ. ಕ್ರೆಸ್ಟ್‌ ಗೇಟ್‌ ಮುರಿದುದರಿಂದ ಸುಮಾರು 15 ಟಿಎಂಸಿಯಷ್ಟು (TMC) ನೀರು ಹರಿದುಹೋಗಿದ್ದು, ಭರ್ತಿಯಾಗಿದ್ದ ಜಲಾಶಯ ಅಷ್ಟರ ಮಟ್ಟಿಗೆ ಈಗ ಖಾಲಿಯಾಗಿದೆ. ಇದರ ಪರಿಣಾಮ ಮೂರು ರಾಜ್ಯಗಳ 8 ಜಿಲ್ಲೆಗಳ ಲಕ್ಷಾಂತರ ರೈತರು ತಮ್ಮ ಎರಡು ಬೆಳೆಗಳನ್ನು ಕಳೆದುಕೊಳ್ಳುವ ಅನುಮಾನ ಮೂಡಿದೆ.

    ಹೊಸಪೇಟೆಯ ತುಂಗಭದ್ರಾ ಜಲಾಶಯದಿಂದ ಒಟ್ಟು ಹನ್ನೆರಡು ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಮೂರು ರಾಜ್ಯದ 8 ಜಿಲ್ಲೆಗಳಿಗೆ ಆಸರೆ ಆಗಿರುವ ತುಂಗಭದ್ರಾ ಜಲಾಶಯ ಕಲ್ಯಾಣ ಕರ್ನಾಟಕದ ಬಳ್ಳಾರಿ, ವಿಜಯನಗರ, ಕೊಪ್ಪಳ‌, ರಾಯಚೂರು, ಆಂಧ್ರ ಪ್ರದೇಶದ ಕರ್ನೂಲ್, ಅನಂತಪುರ, ಕಡಪ, ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಗಳಿಗೆ ಜೀವನಾಡಿ.

    ಈ ಬಾರಿ ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಅಷ್ಟಾಗಿ ಮಳೆ ಆಗಿಲ್ಲ. ಆದರೆ ಡ್ಯಾಂ ತುಂಬಿದ್ದರಿಂದ ಕಾಲುವೆ ನೀರು ನಂಬಿಕೊಂಡು ರೈತು ಬಿತ್ತನೆ ಮಾಡಿದ್ದಾರೆ. ಬಳ್ಳಾರಿಯಲ್ಲಿ 70 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬಿತ್ತನೆ ಮಾಡಲಾಗಿದೆ. 80 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆ ಮಾಡಲಾಗಿದೆ.

    ಆದರೆ ಗೇಟ್ ರಿಪೇರಿಗಾಗಿ 60 TMC ನೀರನ್ನು ಅಣೆಕಟ್ಟಿನಿಂದ ಖಾಲಿ ಮಾಡುವ ಅನಿವಾರ್ಯತೆ ಇದೆ. 105 TMC ಸಾಮರ್ಥ್ಯದ TB ಡ್ಯಾಂನಲ್ಲಿ 20 ಅಡಿ ನೀರು ಕುಗ್ಗಿಸಿ 60 TMCಯಷ್ಟು ನೀರನ್ನು‌ ಅಧಿಕಾರಿಗಳು ಖಾಲಿ ಮಾಡುತ್ತಿದ್ದಾರೆ. ಸೆಪ್ಟೆಂಬರ್ ತಿಂಗಳಿಂದ ಮಳೆ ಪ್ರಮಾಣ ಕುಗ್ಗಬಹುದು. ಹೀಗಾಗಿ ಖಾಲಿಯಾದ 60 ಟಿಎಂಸಿ ನೀರನ್ನು ಮತ್ತೆ ತುಂಬಿಸುವುದು ಕಷ್ಟಸಾಧ್ಯ. ಬೇಸಿಗೆಯಲ್ಲಿ ನಿರ್ವಹಣೆಗಾಗಿ ಡ್ಯಾಂ ತುಂಬಿಸುವುದು ಅಧಿಕಾರಿಗಳಿಗೆ ಸವಾಲು ಆಗುತ್ತದೆ. ಸೆಪ್ಟೆಂಬರ್ ಬಳಿಕ ಕಾಲುವೆ ನೀರು ಕೈಕೊಟ್ಟರೆ ಬೆಳೆಗಳು ಬಾಡುತ್ತವೆ. ಹೀಗಾಗಿ ಈ ಬಾರಿ ಬೆಳೆಗಳಿಗೆ‌ ಡ್ಯಾಂ ನೀರು ಸಿಗುವುದೇ ಅನುಮಾನ ಎಂಬಂತಾಗಿದೆ.

    ಎರಡನೇ ಬೆಳೆಗಿಂತ ಮೊದಲ ಬೆಳೆಗಾದರೂ ಸರಿಯಾಗಿ ನೀರು ಸಿಗುವುದೇ ಎಂಬ ಆತಂಕವೂ ರೈತರನ್ನು ಕಾಡುತ್ತಿದೆ. 60 ಟಿಎಂಸಿ ನೀರು ಖಾಲಿಯಾದ್ರೆ ಡ್ಯಾಂನಲ್ಲಿ ಉಳಿಯುವುದು ಕೇವಲ 45 ಟಿಎಂಸಿ ನೀರು ಮಾತ್ರ. ಇದರಲ್ಲಿ ಆಂಧ್ರಪ್ರದೇಶದ ಕೋಟಾ ಕೂಡಾ ಇದೆ. ಹೀಗಾಗಿ ಕರ್ನಾಟಕ ಕೋಟಾ ಉಳಿಯುವುದು ಕೇವಲ ಇಪ್ಪತ್ತೈದು ಟಿಎಂಸಿ ನೀರು. ಇದರಲ್ಲಿಯೇ ಕುಡಿಯುವ ನೀರಿಗೆ ಹೆಚ್ಚಿನ ನೀರು ಇಟ್ಟುಕೊಳ್ಳುವುದರಿಂದ ರೈತರಿಗೆ ಇದೀಗ ಬೆಳೆಗೆ ನೀರು ಸಿಗುತ್ತಾ ಇಲ್ಲವೋ ಅನ್ನೋ ಆತಂಕ ಎದುರಾಗಿದೆ.

    ಇದನ್ನೂ ಓದಿ | Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

    ತುಂಗಭದ್ರಾ ಜಲಾಶಯದ ನೀರಿನ ಮೇಲೆಯೇ ನಾಲ್ಕು ಜಿಲ್ಲೆಗಳ ಅನೇಕ ಪಟ್ಟಣ ಮತ್ತು ಗ್ರಾಮಗಳಿಗೆ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತದೆ. ಡ್ಯಾಂನಲ್ಲಿರೋ ನೀರು ಖಾಲಿಯಾದ್ರೆ ಕುಡಿಯುವ ನೀರಿಗೆ ಕೂಡಾ ತತ್ವಾರವಾಗುತ್ತದೆ. ಕಳೆದ ಬೇಸಿಗೆಯಲ್ಲಿ ಅನೇಕ ಕಡೆ ಕುಡಿಯಲು ಕೂಡಾ ನೀರು ಬಿಡದ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಮತ್ತೆ ಡ್ಯಾಂ ಖಾಲಿಯಾಗುತ್ತಿರುವುದರಿಂದ ಬೇಸಿಗೆಯಲ್ಲಿ ಈ ಬಾರಿ ಕೂಡಾ ತತ್ವಾರವಾಗೋ ಸಾಧ್ಯತೆ ಹೆಚ್ಚಾಗಿದೆ.

      Continue Reading

      ಪ್ರಮುಖ ಸುದ್ದಿ

      Sheikh Hasina : ಬಾಂಗ್ಲಾದಿಂದ ಪಲಾಯನ ಮಾಡಿದ ಬಳಿಕ ಮೊದಲ ಬಾರಿ ಹೇಳಿಕೆ ನೀಡಿದ ಶೇಖ್​ ಹಸೀನಾ

      Sheikh Hasina : ರಾಷ್ಟ್ರಪಿತ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ನಾಯಕತ್ವದಲ್ಲಿ ನಾವು ಸ್ವತಂತ್ರ ರಾಷ್ಟ್ರವಾಗಿ ಸ್ವಾಭಿಮಾನವನ್ನು ಗಳಿಸಿದ್ದೆವು. ಸ್ವಯಂ ಗುರುತನ್ನು ಪಡೆದುಕೊಂಡಿದ್ದೆವು. ಸ್ವತಂತ್ರ ದೇಶವನ್ನು ಪಡೆದಿದ್ದೇವೆ. ಈಗ ಅವರನ್ನು ತೀವ್ರವಾಗಿ ಅವಮಾನಿಸಲಾಗಿದೆ” ಎಂದು ಹಸೀನಾ ತಮ್ಮ ಮಗ ಸಜೀಬ್ ವಾಜೀದ್ ಮೂಲಕ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

      VISTARANEWS.COM


      on

      Sheikh Hasina
      Koo

      ಬೆಂಗಳೂರು ; ಬಾಂಗ್ಲಾದೇಶ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡು ಬಳಿಕ ಅಲ್ಲಿಂದ ಪರಾರಿಯಾಗಿ ಭಾರತಕ್ಕೆ ಬಂದಿರುವ ಪ್ರಧಾನಿ ಶೇಖ್ ಹಸೀನಾ (Sheikh Hasina) ಮಂಗಳವಾರ ತಮ್ಮ ಮೊದಲ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅವಾಮಿ ಲೀಗ್ ವಿರುದ್ಧದ ದಂಗೆಯನ್ನು ತನ್ನ ತಂದೆ, ಬಾಂಗ್ಲಾದೇಶದ ಸ್ಥಾಪಕ ಅಧ್ಯಕ್ಷ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಮತ್ತು ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಅನೇಕ ಹುತಾತ್ಮರಿಗೆ ಮಾಡಿದ ಗಂಭೀರ ಅವಮಾನ ಎಂದು ಹೇಳಿಕೆ ನೀಡಿದ್ದಾರೆ.

      ರಾಷ್ಟ್ರಪಿತ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ನಾಯಕತ್ವದಲ್ಲಿ ನಾವು ಸ್ವತಂತ್ರ ರಾಷ್ಟ್ರವಾಗಿ ಸ್ವಾಭಿಮಾನವನ್ನು ಗಳಿಸಿದ್ದೆವು. ಸ್ವಯಂ ಗುರುತನ್ನು ಪಡೆದುಕೊಂಡಿದ್ದೆವು. ಸ್ವತಂತ್ರ ದೇಶವನ್ನು ಪಡೆದಿದ್ದೇವೆ. ಈಗ ಅವರನ್ನು ತೀವ್ರವಾಗಿ ಅವಮಾನಿಸಲಾಗಿದೆ” ಎಂದು ಹಸೀನಾ ತಮ್ಮ ಮಗ ಸಜೀಬ್ ವಾಜೀದ್ ಮೂಲಕ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

      ಅವರು ಲಕ್ಷಾಂತರ ಹುತಾತ್ಮರ ತ್ಯಾಗವನ್ನು ಅವಮಾನಿಸಿದ್ದಾರೆ. ನಾನು ದೇಶವಾಸಿಗಳಿಂದ ನ್ಯಾಯವನ್ನು ಬಯಸುತ್ತೇನೆ” ಎಂದು ಹಸೀನಾ ಬಾಂಗ್ಲಾದೇಶದ ಪ್ರಧಾನಿ ಹುದ್ದೆಯಿಂದ ಹೊರಹಾಕಿದ ಹಿಂದಿನ ಶಕ್ತಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಶೇಖ್ ಮುಜಿಬುರ್ ರಹಮಾನ್ ಅವರ ಹತ್ಯೆಯಾದ ದಿನದ ವಾರ್ಷಿಕೋತ್ಸವದ ನೆನಪಿಗಾಗಿ ಆಗಸ್ಟ್ 15 ರಂದು ರಾಷ್ಟ್ರೀಯ ಶೋಕಾಚರಣೆ ದಿನ ಆಚರಿಸುವಂತೆ ಅವಾಮಿ ಲೀಗ್ ಮುಖ್ಯಸ್ಥರು ಬಾಂಗ್ಲಾದೇಶದ ಪ್ರಜೆಗಳನ್ನು ಒತ್ತಾಯಿಸಿದ್ದಾರೆ.

      ಆಗಸ್ಟ್ 15 ರಂದು ರಾಷ್ಟ್ರೀಯ ಶೋಕ ದಿನವನ್ನು ಸೂಕ್ತ ಘನತೆ ಮತ್ತು ಗಂಭೀರತೆಯಿಂದ ಆಚರಿಸುವಂತೆ ನಾನು ನಿಮಗೆ ಮನವಿ ಮಾಡುತ್ತೇನೆ. ಬಂಗಬಂಧು ಭವನದಲ್ಲಿ ಹೂವಿನ ಹಾರಗಳನ್ನು ಅರ್ಪಿಸುವ ಮೂಲಕ ಮತ್ತು ಪ್ರಾರ್ಥಿಸುವ ಮೂಲಕ ಎಲ್ಲರಿಗೂ ಪ್ರಾರ್ಥಿಸಿ” ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಅವರು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

      ಇದನ್ನೂ ಓದಿ: Arshad Nadeem : ಲಷ್ಕರ್ ಉಗ್ರನ ಜತೆ ಕಾಣಿಸಿಕೊಂಡ ಪಾಕಿಸ್ತಾನದ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಅರ್ಷದ್​ ನದೀಮ್​!

      “ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಪೊಲೀಸರು, ಪತ್ರಕರ್ತರು, ಸಾಂಸ್ಕೃತಿಕ ಕಾರ್ಯಕರ್ತರು ಮತ್ತು ಮುಗ್ಧ ಪ್ರೇಕ್ಷಕರು ಭಯೋತ್ಪಾದನೆ ಮತ್ತು ಹಿಂಸಾಚಾರದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ನನ್ನಂತೆ, ಪ್ರೀತಿಪಾತ್ರರನ್ನು ಕಳೆದುಕೊಂಡ ನೋವಿನೊಂದಿಗೆ ಬದುಕುತ್ತಿರುವವರಿಗೆ ನನ್ನ ಆಳ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದು ಹಸೀನಾ ಹೇಳಿದ್ದಾರೆ.

      ದೇಶದಲ್ಲಿ ನಡೆಯುತ್ತಿರುವ ಹತ್ಯೆಗಳು ಮತ್ತು ವಿಧ್ವಂಸಕ ಕೃತ್ಯಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಸೀನಾ ಒತ್ತಾಯಿಸಿದ್ದಾರೆ. ಬಾಂಗ್ಲಾದೇಶದ ಪ್ರಧಾನಿಯಾಗಿ ಶೇಖ್ ಹಸೀನಾ ಅವರ 15 ವರ್ಷಗಳ ಅಧಿಕಾರಾವಧಿ ಆಗಸ್ಟ್ 5 ರಂದು ಹಠಾತ್ತನೆ ಕೊನೆಗೊಂಡಿತು. ಪ್ರಸ್ತುತ, ಹಸೀನಾ ಭಾರತದಲ್ಲಿ ಸುರಕ್ಷಿತ ಸ್ಥಳದಲ್ಲಿದ್ದಾರೆ ಎಂದು ವರದಿಯಾಗಿದೆ.

      Continue Reading

      ಪ್ರಮುಖ ಸುದ್ದಿ

      Physical Abuse : ತಪಾಸಣೆಗೆ ಬಂದ ರೋಗಿಗಳಿಬ್ಬರನ್ನು ಅತ್ಯಾಚಾರ ಮಾಡಿದ ಸರ್ಕಾರಿ ವೈದ್ಯ; ಜೂನಿಯರ್​ ವೈದ್ಯರ ಪೆಟ್ಟು ತಿಂದು ಐಸಿಯು ಸೇರಿದ ಆರೋಪಿ

      Physical Abuse : ಮಂಗಳಬಾಗ್ ಪೊಲೀಸ್ ಠಾಣೆಗೆ ಸೋಮವಾರ ಇಬ್ಬರು ರೋಗಿಗಳಿಂದ ಲಿಖಿತ ದೂರು ನೀಡಿದ್ದರು. ಅದರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ” ಎಂದು ಕಟಕ್ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಎಡಿಸಿಪಿ ಅನಿಲ್ ಮಿಶ್ರಾ) ತಿಳಿಸಿದ್ದಾರೆ. ನಿವಾಸಿ ವೈದ್ಯರ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂವರು ಸದಸ್ಯರ ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ.

      VISTARANEWS.COM


      on

      Physical Abuse
      Koo

      ಕಟಕ್: ಕೋಲ್ಕತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಮಹಿಳಾ ವೈದ್ಯೆಯನ್ನು ಭೀಕರವಾಗಿ ಅತ್ಯಾಚಾರ ಮತ್ತು ಕೊಲೆ ಮಾಡಿರುವ ಬಗ್ಗೆ ರಾಷ್ಟ್ರವ್ಯಾಪಿ ಆಕ್ರೋಶದ ವ್ಯಕ್ತಗೊಳ್ಳುತ್ತಿರುವ ನಡುವೆಯೇ ಒಡಿಶಾದ ಕಟಕ್​​ನ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ರೋಗಿಗಳಿಬ್ಬರಿಗೆ ಅಲ್ಲಿನ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿದ (Physical Abuse) ಪ್ರಕರಣ ನಡೆದಿದೆ. ಆದರೆ, ವಿಷಯ ತಿಳಿದ ತಕ್ಷಣವೇ ಜೂನಿಯರ್ ವೈದ್ಯರುಗಳು ಆತನಿಗೆ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಆತ ಐಸಿಯು ಸೇರಿದ್ದಾನೆ.

      ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ತಾಯಿ ಮತ್ತು ಚಿಕ್ಕಮ್ಮ ಶುಕ್ರವಾರ ತಪಾಸಣೆಗಾಗಿ ಹೃದ್ರೋಗ ವಿಭಾಗಕ್ಕೆ ಹೋಗಿದ್ದಾಗ ಆರೋಪಿ ವೈದ್ಯ ಕೃತ್ಯ ಎಸಗಿದ್ದಾನೆ. ಇಬ್ಬರು ಮಹಿಳೆಯರಿಗೆ ಎಕೋಕಾರ್ಡಿಯೋಗ್ರಾಮ್​ಗೆ ಸಲಹೆ ನೀಡಲಾಗಿತ್ತು ಕಾರ್ಡಿಯಾಲಜಿ ಎಂಡಿ ವಿದ್ಯಾರ್ಥಿಯಾಗಿರುವ ಪುರುಷ ವೈದ್ಯ ಇಸಿಜಿ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. .

      ವಿಷಯ ತಿಳಿದ ಕಿರಿಯ ವೈದ್ಯರ ಸಂಘದ ಸದಸ್ಯರು ಆರೋಪಿ ವೈದ್ಯನಿಗೆ ಚೆನ್ನಾತಿ ಥಳಿಸಿದ್ದಾರೆ. ಅವರಿಗೆ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಅದೇ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯರು ಆರಂಭದಲ್ಲಿ ಪ್ರಕರಣ ದಾಖಲಿಸಲು ಹಿಂಜರಿದಿದ್ದರು. ವೈದ್ಯಕೀಯ ಕಾಲೇಜಿನ ಹಿರಿಯ ವೈದ್ಯರು ಮಧ್ಯಪ್ರವೇಶಿಸಿ ಹಾಗೆ ಮಾಡಲು ಮನವೊಲಿಸಿದ ನಂತರ ಅವರು ಎಫ್ಐಆರ್ ದಾಖಲಿಸಿದ್ದಾರೆ.

      ಮಂಗಳಬಾಗ್ ಪೊಲೀಸ್ ಠಾಣೆಗೆ ಸೋಮವಾರ ಇಬ್ಬರು ರೋಗಿಗಳಿಂದ ಲಿಖಿತ ದೂರು ನೀಡಿದ್ದರು. ಅದರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ” ಎಂದು ಕಟಕ್ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಎಡಿಸಿಪಿ ಅನಿಲ್ ಮಿಶ್ರಾ) ತಿಳಿಸಿದ್ದಾರೆ. ನಿವಾಸಿ ವೈದ್ಯರ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂವರು ಸದಸ್ಯರ ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ. ಆರೋಪಿಯನ್ನು ರೋಗಿಗಳ ಕೆಲವು ಸಂಬಂಧಿಕರು ಥಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಸಂಬಂಧ ಪೊಲೀಸರಿಗೆ ಯಾವುದೇ ದೂರು ಬಂದಿಲ್ಲ ಎಂದು ಮಿಶ್ರಾ ಹೇಳಿದರು.

      ಸಿಆರ್ಪಿಸಿಯ ಸೆಕ್ಷನ್ 161 ಮತ್ತು 164 ರ ಅಡಿಯಲ್ಲಿ ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಆಗಸ್ಟ್ 11ರಂದು ಈ ಘಟನೆ ನಡೆದಿದೆ. ಅತ್ಯಾಚಾರ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಪ್ರಕರಣವು ಸೂಕ್ಷ್ಮವಾಗಿರುವುದರಿಂದ, ನಾವು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಬಯಸುವುದಿಲ್ಲ ಹೆಚ್ಚುವರಿ ಡಿಸಿಪಿ ಅನಿಲ್ ಮಿಶ್ರಾ ಹೇಳಿದ್ದಾರೆ.

      ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

      ಧಾರವಾಡ: ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ (Physical abuse) ಎಸಗಿರುವ ಘಟನೆ ಧಾರವಾಡ ನಗರದಲ್ಲಿ ನಡೆದಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಅದನ್ನು ವಿಡಿಯೊ ಮಾಡಿಕೊಂಡಿದ್ದಾನೆ.

      ಇದನ್ನೂ ಓದಿ: Hindenburg Report : ಸೆಬಿ ಅಧ್ಯಕ್ಷರ ವಜಾಗೆ ಆಗ್ರಹಿಸಿದ ಕಾಂಗ್ರೆಸ್​ನಿಂದ ಆಗಸ್ಟ್​​ 22ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ

      ಆಗಸ್ಟ್ 8 ರಂದು ಲಾಡ್ಜ್ ಒಂದಕ್ಕೆ ಕರೆದುಕೊಂಡು ಹೋಗಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಹಲವು ವಾಟ್ಸ್‌ಆ್ಯಪ್ ಗ್ರೂಪ್‌ಗೂ ಹಾಕಿದ್ದು, ಹಲವರು ಬೇರೆ ಗ್ರೂಪ್‌ಗೆ ಶೇರ್‌ ಮಾಡಿದ್ದಾರೆ.

      ಸದ್ಯ ಯುವಕನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜತೆಗೆ ಬೇರೆ ಬೇರೆ ಗ್ರೂಪ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಸದ್ಯ ದೌರ್ಜನ್ಯ ಎಸಗಿದ ಆರೋಪಿ ಮೇಲೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

      Continue Reading
      Advertisement
      Vinesh Phogat
      ಪ್ರಮುಖ ಸುದ್ದಿ5 mins ago

      Vinesh Phogat : ವಿನೇಶ್​ ಪೋಗಟ್​ ಅನರ್ಹತೆ ತೀರ್ಪು ಆಗಸ್ಟ್​​​ 16ಕ್ಕೆ ಮುಂದೂಡಿಕೆ

      Cauvery Water Dispute
      ಕರ್ನಾಟಕ17 mins ago

      Cauvery Water Dispute: ಕಾವೇರಿ ನೀರು ನಿಗದಿಗಿಂತ ಹೆಚ್ಚು ಹರಿಸಿದರೂ ತಮಿಳುನಾಡು ಆಕ್ಷೇಪ!

      Sheikh Hasina
      ಪ್ರಮುಖ ಸುದ್ದಿ32 mins ago

      Sheikh Hasina : ಬಾಂಗ್ಲಾದಿಂದ ಪಲಾಯನ ಮಾಡಿದ ಬಳಿಕ ಮೊದಲ ಬಾರಿ ಹೇಳಿಕೆ ನೀಡಿದ ಶೇಖ್​ ಹಸೀನಾ

      Natasa Stankovic
      ಕ್ರಿಕೆಟ್1 hour ago

      Natasa Stankovic : ‘ಹೊಸ ಹೆಸರನ್ನು ಪಡೆಯುತ್ತಿದ್ದೇನೆ’; ಕುತೂಹಲ ಮೂಡಿಸಿದ ನತಾಶಾ ಸ್ಟಾಂಕೊವಿಕ್​ ಹೊಸ ಪೋಸ್ಟ್​​​

      Government Employees
      ಕರ್ನಾಟಕ1 hour ago

      Government Employees: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಆ.17ರಂದು ವಿಶೇಷ ಸಾಂದರ್ಭಿಕ ರಜೆ

      Physical Abuse
      ಪ್ರಮುಖ ಸುದ್ದಿ2 hours ago

      Physical Abuse : ತಪಾಸಣೆಗೆ ಬಂದ ರೋಗಿಗಳಿಬ್ಬರನ್ನು ಅತ್ಯಾಚಾರ ಮಾಡಿದ ಸರ್ಕಾರಿ ವೈದ್ಯ; ಜೂನಿಯರ್​ ವೈದ್ಯರ ಪೆಟ್ಟು ತಿಂದು ಐಸಿಯು ಸೇರಿದ ಆರೋಪಿ

      Independence day 2024
      ತಂತ್ರಜ್ಞಾನ3 hours ago

      Independence Day 2024: ವಾಟ್ಸ್‌ಆಪ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸ್ಟಿಕ್ಕರ್‌, ಮೆಸೆಜ್‌, ಇಮೇಜ್‌ ಪಡೆಯುವುದು ಹೇಗೆ?

      Manu Bhaker
      ಪ್ರಮುಖ ಸುದ್ದಿ3 hours ago

      Manu Bhaker : ಶೂಟಿಂಗ್​​ನಿಂದ ಬ್ರೇಕ್ ತೆಗೆದುಕೊಂಡ ಮನು ಭಾಕರ್​​, ಡೆಲ್ಲಿಯಲ್ಲಿ ನಡೆಯುವ ವಿಶ್ವಕಪ್​ಗೆ ಅಲಭ್ಯ

      Muda Scam
      ಕರ್ನಾಟಕ3 hours ago

      Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

      Lakshmi Hebbalkar
      ಕರ್ನಾಟಕ3 hours ago

      Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

      Sharmitha Gowda in bikini
      ಕಿರುತೆರೆ10 months ago

      Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

      Kannada Serials
      ಕಿರುತೆರೆ10 months ago

      Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

      Bigg Boss- Saregamapa 20 average TRP
      ಕಿರುತೆರೆ10 months ago

      Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

      Kannada Serials
      ಕಿರುತೆರೆ11 months ago

      Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

      galipata neetu
      ಕಿರುತೆರೆ9 months ago

      Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

      Kannada Serials
      ಕಿರುತೆರೆ10 months ago

      Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

      Bigg Boss' dominates TRP; Sita Rama fell to the sixth position
      ಕಿರುತೆರೆ10 months ago

      Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

      geetha serial Dhanush gowda engagement
      ಕಿರುತೆರೆ8 months ago

      Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

      Kannada Serials
      ಕಿರುತೆರೆ11 months ago

      Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

      varun
      ಕಿರುತೆರೆ9 months ago

      Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

      karnataka Weather Forecast
      ಮಳೆ5 days ago

      Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

      Bellary news
      ಬಳ್ಳಾರಿ5 days ago

      Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

      Maravoor bridge in danger Vehicular traffic suspended
      ದಕ್ಷಿಣ ಕನ್ನಡ5 days ago

      Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

      Wild Animals Attack
      ಚಿಕ್ಕಮಗಳೂರು1 week ago

      Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

      Karnataka Weather Forecast
      ಮಳೆ1 week ago

      Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

      assault case
      ಬೆಳಗಾವಿ1 week ago

      Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

      karnataka rain
      ಮಳೆ1 week ago

      Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

      karnataka Rain
      ಮಳೆ2 weeks ago

      Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

      Karnataka Rain
      ಮಳೆ2 weeks ago

      Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

      karnataka Rain
      ಮಳೆ2 weeks ago

      Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

      ಟ್ರೆಂಡಿಂಗ್‌