ಅನೈತಿಕ ಸಂಬಂಧದ ಶಂಕೆಗೆ ಬಲಿಯಾಯ್ತು ಐವರ ಜೀವ; ಪತ್ನಿ, ತಾಯಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ - Vistara News

ಕ್ರೈಂ

ಅನೈತಿಕ ಸಂಬಂಧದ ಶಂಕೆಗೆ ಬಲಿಯಾಯ್ತು ಐವರ ಜೀವ; ಪತ್ನಿ, ತಾಯಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ

Illicit Relationship: ಪತ್ನಿ ಪರಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ಆಕೆ, ತಮ್ಮ ಇಬ್ಬರು ಮಕ್ಕಳು, ತಾಯಿಯನ್ನು ಕತ್ತು ಕೊಯ್ದು ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಮೃತರನ್ನು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಚೇರಿಯಲ್ಲಿ ನಿಯೋಜಿಸಲಾಗಿದ್ದ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ನೀತು ಕುಮಾರಿ ಅವರ ಕುಟುಂಬ ಎಂದು ಗುರುತಿಸಲಾಗಿದೆ. ಪತ್ನಿ ನೀತು ಕುಮಾರಿ, ಮಕ್ಕಳಾದ 4 ವರ್ಷದ ಸಿಬು ಮತ್ತು 3 ವರ್ಷದ ಶ್ರೇಯಾ, ತಾಯಿಯನ್ನು ಕೊಂದ ಬಳಿಕ ಪಂಕಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಪಾಟ್ನಾ: ಪತ್ನಿ ಪರಪುರುಷನೊಂದಿಗೆ ಅನೈತಿಕ ಸಂಬಂಧ (Illicit Relationship) ಹೊಂದಿದ್ದಾಳೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ಆಕೆ, ತಮ್ಮ ಇಬ್ಬರು ಮಕ್ಕಳು, ತಾಯಿಯನ್ನು ಕತ್ತು ಕೊಯ್ದು ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೇಶವನ್ನೇ ಬೆಚ್ಚಿ ಬೀಳಿಸಿದ ಈ ಘಟನೆ ಬಿಹಾರದಲ್ಲಿ ನಡೆದಿದೆ. ಮೃತರನ್ನು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಚೇರಿಯಲ್ಲಿ ನಿಯೋಜಿಸಲಾಗಿದ್ದ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ನೀತು ಕುಮಾರಿ ಅವರ ಕುಟುಂಬ ಎಂದು ಗುರುತಿಸಲಾಗಿದೆ (Crime News).

ಬಿಹಾರದ ಭಾಗಲ್ಪುರ ಜಿಲ್ಲೆಯ ಪೊಲೀಸ್ ಲೈನ್‌ನಲ್ಲಿ ಈ ಘಟನೆ ನಡೆದಿದ್ದು ಪತ್ನಿ ನೀತು ಕುಮಾರಿ, ಮಕ್ಕಳಾದ 4 ವರ್ಷದ ಸಿಬು ಮತ್ತು 3 ವರ್ಷದ ಶ್ರೇಯಾ, ತಾಯಿಯನ್ನು ಕೊಂದ ಬಳಿಕ ಪಂಕಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ನೀತು ಕುಮಾರಿ ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಜಗಳವಾಡಿದ ಬಳಿಕ ಪಂಕಜ್‌ ಈ ಕೃತ್ಯ ಎಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಪಂಕಜ್‌ ಬರೆದ ಡೆತ್‌ ನೋಟ್‌ ಕೂಡ ಲಭಿಸಿದೆ.

ಡೆತ್‌ನೋಟ್‌ನಲ್ಲಿ ಏನಿದೆ?

ಪಂಕಜ್ ಬರೆದ ಡೆತ್‌ನೋಟ್ ಅನ್ನು ಪೊಲೀಸರು ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಪಂಕಜ್, ಆತ್ಮಹತ್ಯೆಗೂ ಮುನ್ನ ಪತ್ನಿ, ಇಬ್ಬರು ಮಕ್ಕಳು ಹಾಗೂ ತಾಯಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಭಾಗಲ್ಪುರ್ ಉಪ ಪೊಲೀಸ್ ಮಹಾನಿರೀಕ್ಷಕ (ಡಿಐಜಿ) ವಿವೇಕಾನಂದ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ʼʼಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಹಾಲಿನವನು ಮೃತದೇಹಗಳನ್ನು ಗುರುತಿಸಿ ಮಾಹಿತಿ ನೀಡಿದ್ದಾನೆ. ಪೊಲೀಸ್‌ ಕ್ವಾಟರ್ಸ್‌ನಲ್ಲಿ ಐವರ ಶವ ಕಂಡುಬಂದಿದ್ದು, ಈ ಪೈಕಿ ಪಂಕಜ್‌ನ ಮೃತದೇಹ ಸೀಲಿಂಗ್‌ ಫ್ಯಾನ್‌ನಲ್ಲಿ ನೇತಾಡಿಕೊಂಡಿತ್ತು. ಮೇಲ್ನೋಟಕ್ಕೆ ಇದು ಕೌಟುಂಬಿಕ ಕಲಹದಿಂದ ಸಂಭವಿಸಿದ ಘಟನೆ ಎನ್ನುವುದು ತಿಳಿದು ಬಂದಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆʼʼ ಎಂದು ತಿಳಿಸಿದ್ದಾರೆ.

ನೀತು ಕುಮಾರಿ 2015ರಿಂದ ಕಾನ್ಸ್‌ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೊಲೀಸ್‌ ಲೈನ್‌ನಲ್ಲಿರುವ ಕ್ವಾಟರ್ಸ್‌ನಲ್ಲಿ ಅವರು ಪತಿ ಪಂಕಜ್‌, ಇಬ್ಬರು ಮಕ್ಕಳು ಮತ್ತು ತಮ್ಮ ಅತ್ತೆಯೊಂದಿಗೆ ವಾಸವಾಗಿದ್ದರು. ವಿಶೇಷ ಎಂದರೆ ಇವರದ್ದು ಲವ್‌ ಮ್ಯಾರೇಜ್‌.

ಪದೇ ಪದೆ ಜಗಳ

ʼʼನೀತು ಕುಮಾರಿ ಪರ ಪುರುಷನೊಂದಿಗೆ ಅನೃತಿಕ ಸಂಬಂಧ ಹೊಂದಿದ್ದಾರೆ ಎಂದು ಪಂಕಜ್‌ಗೆ ಕೆಲವು ದಿನಗಳಿಂದ ಅನುಮಾನ ಕಾಡುತ್ತಿತ್ತು. ಇದೇ ವಿಚಾರವಾಗಿ ದಂಪತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಘಟನೆ ನಡೆಯುವ ಹಿಂದಿನ ದಿನವೂ ಇದೇ ರೀತಿ ಜಗಳವಾಡಿ ಪಂಕಜ್‌ ಹಲ್ಲೆ ನಡೆಸಲು ಮುಂದಾಗಿದ್ದ. ಆದರೆ ನೀತು ಕುಮಾರಿ ಈ ಬಗ್ಗೆ ಯಾವುದೇ ದೂರು ನೀಡಿರಲಿಲ್ಲʼʼ ಎಂದು ವಿವೇಕಾನಂದ ಅವರು ಘಟನೆ ಬಗ್ಗೆ ವಿವರಿಸಿದ್ದಾರೆ. ದಂಪತಿ ಮಧ್ಯೆ ಆಗಾಗ ಕ್ಲುಲ್ಲಕ ಕಾರಣಕ್ಕೆ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರೂ ತಿಳಿಸಿದ್ದಾರೆ.

ಇದನ್ನೂ ಓದಿ: Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

VISTARANEWS.COM


on

ಬೆಂಗಳೂರು: ನಗರದ ಜೈಲಿನಲ್ಲಿದ್ದುಕೊಂಡೇ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಗಳ ಎಸೆಗಲು ಸಂಚು ರೂಪಿಸಿದ್ದ ಲಷ್ಕರ್‌ ಎ ತೊಬ್ಯಾ ಸಂಪರ್ಕಿತ ಏಳು ಆರೋಪಿಗಳಿಗೆ ಎನ್‌ ಐ ಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ.
ಅಪರಾಧಿಗಳಾದ ಲಷ್ಕರ್‌ – ಎ-ತೊಯ್ಬಾ ಸಂಪರ್ಕಿತ ಉಗ್ರ ಟಿ.ನಾಸಿರ್‌ ನೇತೃತ್ವದಲ್ಲಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್ ಶಿಕ್ಷೆಗೆ ಗುರಿಯಾದವರು. ಪ್ರಕರಣದಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.
ಇವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದುಕೊಂಡೇ ಯುವಕರನ್ನು ಉಗ್ರವಾದದತ್ತ ಆಕರ್ಷಿಸಿ, ಮತಾಂತರಗೊಳಿಸಿ ದೇಶದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಕೋರ್ಟ್‌ ಏಳು ವರ್ಷ ಜೈಲು ಶಿಕ್ಷೆ ಸೇರಿದಂತೆ 48 ಸಾವಿರ ರೂಪಾಯಿ ದಂಡ ವಿಧಿಸಿದೆ.
2023ರ ಜುಲೈನಲ್ಲಿ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಈ ಬಗ್ಗೆ ಪ್ರಕರಣ ದಾಖಲಿಸಿತ್ತು. ಇವರು ಬೆಂಗಳೂರಿನಲ್ಲಿಯೂ ಉಗ್ರ ದಾಳಿಗಳನ್ನು ನಡೆಸುವ ಯೋಜನೆ ರೂಪಿಸಿದ್ದರು ಎಂಬುದು ಬಯಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.
2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಟಿ. ನಾಸೀರ್ ಅದಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಎಂಬುದು ಗಮನಾರ್ಹ. ಬಂಧಿತರಲ್ಲಿ ಸಲ್ಮಾನ್ ಖಾನ್ ಎಂಬಾತನನ್ನು ರುವಾಂಡಾ ಗಣರಾಜ್ಯದಿಂದ ಹಸ್ತಾಂತರದ ಮೂಲಕ ಭಾರತಕ್ಕೆ ತರಲಾಗಿತ್ತು.
ಈ ಪ್ರಕರಣದಲ್ಲಿ 11 ಮಂದಿ ಬಂಧಿತ ಆರೋಪಿಗಳು ಹಾಗೂ ಪರಾರಿಯಾಗಿರುವ ಜುನೈದ್ ಅಹ್ಮದ್ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

Continue Reading

ಅವಿಭಾಗೀಕೃತ

“ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

VISTARANEWS.COM


on

ಮುಂಬೈ: ಮಹಿಳಾ ಮೀಸಲಾತಿ ಕುರಿತು ಮುಂಬೈನಲ್ಲಿ ಬಿಜೆಪಿ ಪ್ರತಿಭಟನ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವರೊಬ್ಬರನ್ನು ಮಹಿಳೆಯೊಬ್ಬರು ಸಚಿವರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸಾಕಷ್ಟು ವೈರಲ್‌ ಆಗಿದೆ.
ಮುಂಬೈನ ವೊರ್ಲಿ ಪ್ರದೇಶದಲ್ಲಿ ಸಚಿವ ಗಿರೀಶ್ ಮಹಾಜನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ಅಡಚಣೆ ಉಂಟಾಗಿತ್ತು. ಇದರಿಂದ ರೊಚ್ಚಿಗೆದ್ದ ಈ ಮಹಿಳೆ ಸಚಿವರನ್ನು ಉದ್ದೇಶಿಸಿ ನಿಮ್ಮಿಂದಲೇ ಟ್ರಾಫಿಕ್ ಜ್ಯಾಮ್ ಉಂಟಾಗುತ್ತಿದ್ದು,ಫ್ರೆಂ ಹಿಯರ್.. ಗೆಟ್‌ ಔಟ್‌ ಎಂದು ನಿಂದಿಸಿದ್ದಾರೆ.
ಈ ರೀತಿ ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸುವ ಬದಲು ಸಮೀಪದ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಏನು ಸಮಸ್ಯೆ ಎಂದು ಪ್ರಶ್ನಿಸಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಈ ಮಹಿಳೆಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದಾಗ ಮಾತನಾಡಲು ನಿರಾಕರಿಸಿದ ಮಹಿಳೆ ತನ್ನೊಂದಿಗೆ ಯಾರೂ ಮಾತನಾಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಈ ವಿಡಿಯೊವನ್ನು ಹಂಚಿಕೊಂಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರ್ಷವರ್ಧನ್ ಸಪ್ನಲ್, ಮಹಿಳಾ ಮೀಸಲಾತಿ ಕುರಿತು ಆಡಳಿತ ಪಕ್ಷದ ಅಭಿಯಾನದ ನೈಜ ಮುಖವನ್ನು ಬಹಿರಂಗಪಡಿಸಿದೆ ಎಂದು
ಟೀಕಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಬಿಜೆಪಿ ಮಹಿಳೆಯರನ್ನು ದಾರಿ ತಪ್ಪಿಸುತ್ತಿದೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದು ಅದಕ್ಕಾಗಿ ಮಹಿಳಾ ಮೀತಿ ವಿಷಯವನ್ನು ಒಂದು ಸಾಧನವಾಗಿ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

Latest

ಇಡಿ ದಾಳಿ: ನಳಪಾಡ್‌ ಫಸ್ಟ್‌ ರಿಯಾಕ್ಷನ್‌ ಏನಿತ್ತು? ಅವರು ಕೊಟ್ಟ ಸ್ಪಷ್ಟನೆ ಏನು?

VISTARANEWS.COM


on

ಬೆಂಗಳೂರು: ನನ್ನ ಮೇಲೆ ನಡೆದ ಇಡಿ ದಾಳಿಗೂ ನನ್ನ ತಂದೆ, ಶಾಸಕ ಬಿಡಿಎ ಅಧ್ಯಕ್ಷರೂ ಆದ ಎನ್.ಎ. ಹ್ಯಾರಿಸ್‌ ಅವರಿಗೂ ಯಾವುದೇ ಸಂಬಂಧವಿಲ್ಲ. ನನ್ನ ಹಾಗೂ ನನ್ನ ತಮ್ಮನ ಮನೆಗಳ ಮೇಲೆ ದಾಳಿ ನಡೆದಿದೆ ಎಂದು ಯುವ ಕಾಂಗ್ರೆಸ್‌ ಮುಖಂಡ ನಳಪಾಡ್‌ ಸ್ಪಷ್ಟಪಡಿಸಿದ್ದಾರೆ. ಶ್ರೀಕಿ ಜತೆ ಬಿಟ್‌ ಕಾಯಿನ್‌ ಅವ್ಯವಹಾರ ನಡೆಸಿರುವುದಕ್ಕೆ ಸಂಬಂಧಪಟ್ಟಂತೆ ನಿನ್ನೆ ನಳಪಾಡ್‌ ಅವರ ಮೇಲೆ ಜಾರಿ ನಿರ್ಧೇಶನಾಲಯ ದಾಳಿ ನಡೆಸಿತ್ತು. ಇಂದು ಪ್ರತಿಕ್ರಿಯೆ ನೀಡಿದ ಅವರು, ಶ್ರೀಕಿ ನನಗೆ ಪರಿಚಯ ಇಲ್ಲ ಎಂದು ಹೇಳುವುದಿಲ್ಲ. ಶ್ರೀಕಿ ಜತೆಯಲ್ಲಿ ಕುಳಿತು ಊಟ ಮಾಡಿರಬಹುದು ಅಷ್ಟೇ. ನನ್ನ ತಂದೆ ಹ್ಯಾರಿಸ್‌ ಅವರಿಗೆ ಸಚಿವ ಹುದ್ದೆ ತಪ್ಪಿಸಲು ವಿಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ ಎಂದು ಹೇಳಿದ್ದಾರೆ.

Continue Reading

Latest

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

VISTARANEWS.COM


on

ಗುಜರಾತ್‌: ಗುಜರಾತ್‌ನಲ್ಲಿ ಪತ್ತೆಯಾದ ಈ ಬೃಹತ್ ಸೈಬರ್ ವಂಚನೆ ಪ್ರಕರಣವು ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಆತಂಕಕ್ಕೆ ತಳ್ಳಿದೆ. ಸುಮಾರು 2,500 ಕೋಟಿ ರೂ. ಮೊತ್ತದ ಈ ಹಗರಣದಲ್ಲಿ ಭಾಗಿಯಾಗಿದ್ದ 20 ಆರೋಪಿಗಳನ್ನು ರಾಜ್‌ಕೋಟ್ ಪೊಲೀಸರು ಬಂಧಿಸಿದ್ದು, ಇವರಲ್ಲಿ ಎಚ್.ಡಿಎಫ್.ಸಿ, ಯೆಸ್ ಮತ್ತು ಆಕ್ಸಿಸ್ ಬ್ಯಾಂಕ್‌ನಂತಹ ಪ್ರತಿಷ್ಠಿತ ಸಂಸ್ಥೆಗಳ ಅಧಿಕಾರಿಗಳೂ ಸೇರಿರುವುದು ಗಂಭೀರ ವಿಚಾರವಾಗಿದೆ.

ಈ ಬ್ಯಾಂಕ್ ಅಧಿಕಾರಿಗಳು ಸೈಬರ್ ಕ್ರಿಮಿನಲ್‌ಗಳೊಂದಿಗೆ ಶಾಮೀಲಾಗಿ, ನಕಲಿ ದಾಖಲೆಗಳನ್ನು ಬಳಸಿ ಸುಮಾರು 85ಕ್ಕೂ ಹೆಚ್ಚು ‘ಮ್ಯೂಲ್ ಅಕೌಂಟ್’ಗಳನ್ನು (ನಕಲಿ ಖಾತೆ) ತೆರೆದಿದ್ದರು. ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡುತ್ತಿದ್ದ ಇವರು, ವ್ಯವಸ್ಥೆಯಲ್ಲಿ ಬರುವ ಎಚ್ಚರಿಕೆಗಳನ್ನು (Internal Alerts) ಬೇಕೆಂದೇ ನಿರ್ಲಕ್ಷಿಸುತ್ತಿದ್ದರು. ಬಳಿಕ ಈ ಹಣವನ್ನು ಹವಾಲಾ ದಂಧೆಯ ಮೂಲಕ ಬೇರೆಡೆ ರವಾನಿಸಿ, ವಂಚಕರಿಂದ ದೊಡ್ಡ ಮೊತ್ತದ ಕಮಿಷನ್ ಪಡೆಯುತ್ತಿದ್ದರು.

ಗೊಂಡಲ್ ಮಾರ್ಕೆಟಿಂಗ್ ಯಾರ್ಡ್‌ನ ಕಂಪನಿಯೊಂದರ ಖಾತೆಯಲ್ಲಿ ನಡೆದ 200 ಕೋಟಿ ರೂ.ಗಳ ಸಂಶಯಾಸ್ಪದ ವ್ಯವಹಾರವು ಈ ಮಹಾ ಹಗರಣವನ್ನು ಬಯಲಿಗೆಳೆದಿದೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 535 ದೂರುಗಳು ದಾಖಲಾಗಿದ್ದು, 35 ನಕಲಿ ಸಂಸ್ಥೆಗಳನ್ನು ಪೊಲೀಸರು ಗುರುತಿಸಿದ್ದಾರೆ. ತನಿಖೆ ಮುಂದುವರಿದಂತೆ ಇನ್ನೂ ಹೆಚ್ಚಿನ ಬ್ಯಾಂಕ್ ನೌಕರರು ಸಿಕ್ಕಿಬೀಳುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading
Advertisement
Latest7 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest7 hours ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

Latest8 hours ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ9 hours ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest9 hours ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest10 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

Latest11 hours ago

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

Latest13 hours ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ14 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest14 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌