Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ - Vistara News

ಕರ್ನಾಟಕ

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ

Karnataka Weather: ಆ.16ರಂದು ಕೂಡ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

Karnataka Weather
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಗಸ್ಟ್ 15ರಂದು ಗುರುವಾರ ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಮೈಸೂರು, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.

ಇನ್ನು ಉತ್ತರ ಕನ್ನಡ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಮತ್ತು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಅದೇ ರೀತಿ ಆ.16ರಂದು ಕೂಡ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಹಾವೇರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆ.17ರವರೆಗೆ ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಹವಾಮಾನ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿ.ಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ | Multivitamins: ನಮಗೆ ವಿಟಮಿನ್‌ ಪೂರಕಗಳು ಅಗತ್ಯವೆಂದು ತಿಳಿಯುವುದು ಹೇಗೆ?

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 22° C ಆಗಿರಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ; ಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ

Independence Day 2024: ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಗ್ಯಾರಂಟಿ ಮುಂದುವರಿಯಲಿದೆ ಎಂದು ಎರಡೆರಡು ಬಾರಿ ಒತ್ತಿ ಹೇಳಿದರು.

VISTARANEWS.COM


on

Independence Day 2024
Koo

ಬೆಂಗಳೂರು: ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ  (Siddaramaiah) ಅವರು, ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮತ್ತೊಮ್ಮೆ ಭರವಸೆ ನೀಡಿದರು (Independence Day 2024).

ʼʼಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಸಮಸ್ತ ಜನರ ಬದುಕಿಗೆ ಒಂದು ಆರ್ಥಿಕ ಭದ್ರತೆಯನ್ನು ಒದಗಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಈ ಯೋಜನೆ ಮುಂದುವರಿಯಲಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಸವಳಿದು ಹೋಗಿರುವ ಜನರ ಬದುಕಿಗೆ ಈ ಯೋಜನೆಗಳು ನೆಮ್ಮದಿ ತಂದಿವೆ. ಈ ಯೋಜನೆಗಳ ಮೂಲಕ ಸಂಪತ್ತಿನ ಮರುಹಂಚಿಕೆಗೆ ಒತ್ತು ನೀಡುತ್ತಲೇ ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರವಾದ ರೀತಿಯಲ್ಲಿ ಹೆಚ್ಚಿಸಲು ಕೂಡಾ ಅಷ್ಟೇ ಬದ್ಧತೆಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಆರ್ಥಿಕ ಬೆಳವಣಿಗೆ ಮತ್ತು ಆರ್ಥಿಕ ಸಮಾನತೆಯನ್ನು ಸಾಧಿಸುವುದರ ಜತೆಗೆ ಈ ನೆಲದ ಸಾಮಾಜಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಪರಂಪರೆಯನ್ನು ಮುಂದುವರಿಸಿ ಕರ್ನಾಟಕವನ್ನು ನಿಜ ಅರ್ಥದಲ್ಲಿ ‘ಸರ್ವ ಜನಾಂಗದ ಶಾಂತಿಯ ತೋಟ’ವನ್ನಾಗಿ ರೂಪಿಸಲು ನಾವು ಕಾರ್ಯತತ್ಪರಾಗಿದ್ದೇವೆʼʼ ಎಂದು ಅವರು ತಿಳಿಸಿದರು.

ʼʼನಮ್ಮ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದಾಗಿ ಮಾಸಿಕ ಸರಾಸರಿ 4,000-5,000 ರೂ.ಗಳಷ್ಟು ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಭಿಸುತ್ತಿದೆ. ಇದು ಹಲವು ಕಾರಣಗಳಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ನೀಡುವ Universal Basic Income ಪರಿಕಲ್ಪನೆ. ಮುಂದುವರಿದ ರಾಷ್ಟ್ರಗಳಲ್ಲಿ ಆರ್ಥಿಕವಾಗಿ ಅಶಕ್ತ ವರ್ಗಗಳಿಗೆ ನೆರವಾಗಲು ಜಾರಿಗೊಳಿಸಲಾಗುತ್ತಿರುವ ಇಂತಹ ಯೋಜನೆಯೊಂದನ್ನು ಅತೀ ದೊಡ್ಡ ಮಟ್ಟದಲ್ಲಿ ಸಾಕಾರಗೊಳಿಸುತ್ತಿರುವ ರಾಜ್ಯ ಕರ್ನಾಟಕ. ಈ ಬಗ್ಗೆ ನಮಗೆ ಹೆಮ್ಮೆ ಇದೆʼʼ ಎಂದು ಸಿಎಂ ಹೇಳಿದರು.

ʼʼಈ ಯೋಜನೆಗಳು ಮುಂದುವರಿಯಲಿವೆ. ಮಾತ್ರವಲ್ಲ, ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ನಾವು ಉತ್ತರಿಸಲಿದ್ದೇವೆ. ಈ ಯೋಜನೆಗಳ ವ್ಯಾಪ್ತಿಯೊಳಗೆ ಹೊಸ ಆವಿಷ್ಕಾರಗಳನ್ನು ನಡೆಸಿ ಅವುಗಳು ಫಲಾನುಭವಿಗಳಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯ ಕ್ರಮಗಳನ್ನು ಕೈಗೊಳ್ಳಲು ನಾವು ಉದ್ಯುಕ್ತರಾಗಿದ್ದೇವೆ. ಉದಾಹರಣೆಗೆ ʼಗೃಹಲಕ್ಷ್ಮೀʼ ಯೋಜನೆಯಡಿ ಫಲಾನುಭವಿ ಕುಟುಂಬಗಳ ಯಜಮಾನಿ ಮಹಿಳೆಯರಿಗೆ ಈಗ ಮಾಸಿಕ 2,000 ರೂ. ನೆರವು ನೀಡುತ್ತಿದ್ದೇವೆ. ಈ ಫಲಾನುಭವಿಗಳನ್ನು ಸ್ತ್ರೀ-ಶಕ್ತಿ ಮಹಿಳಾ ಸ್ವಸಹಾಯ ಸಂಘಗಳಾಗಿ ಸಂಘಟಿಸುವ ಮೂಲಕ ಅವರಿಗೆ ವಿವಿಧ ಹಣಕಾಸು ಸಂಸ್ಥೆಗಳಿಂದ ಆರ್ಥಿಕ ನೆರವು ಒದಗಿಸಿ ವರಮಾನ ತರುವ ವಿವಿಧ ಚಟುವಟಿಕೆಗಳಲ್ಲಿ ಅವರನ್ನು ತೊಡಗಿಸುವ ಯೋಚನೆ ಇದೆ. ಅದೇ ರೀತಿ ಯುವನಿಧಿಯ ಫಲಾನುಭವಿಗಳಿಗೆ ಕೌಶಾಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಕ್ರಮ ವಹಿಸಲಾಗುತ್ತಿದೆʼʼ ಎಂದು ಸಿದ್ದರಾಮಯ್ಯ ವಿವರಿಸಿದರು.

“ಶಕ್ತಿ ಯೋಜನೆʼಯಡಿ ಮಹಿಳೆಯರು 270 ಕೋಟಿ ಟ್ರಿಪ್ ಉಚಿತ ಪ್ರಯಾಣ ಸೌಲಭ್ಯ ಪಡೆಯುವ ಮೂಲಕ 6,541 ಕೋಟಿ ರೂ.ಗಳಷ್ಟು ಪ್ರಯಾಣ ವೆಚ್ಚ ಉಳಿತಾಯ ಮಾಡಿದ್ದಾರೆ. ‘ಗೃಹಲಕ್ಷ್ಮೀ ಯೋಜನೆ’ಯಡಿ 1.20 ಕೋಟಿ ಮಹಿಳೆಯರಿಗೆ ಈ ವರೆಗೆ 25,259 ಕೋಟಿ ರೂ.ಗಳನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. ‘ಅನ್ನಭಾಗ್ಯ ಯೋಜನೆ’ಯಡಿ ಹೆಚ್ಚುವರಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ ಕೇಂದ್ರದ ಅಸಹಕಾರದಿಂದಾಗಿ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡಲಾಗುತ್ತಿದೆ. ಈ ವರೆಗೆ 1.16 ಕೋಟಿ ಪಡಿತರ ಚೀಟಿಗಳ 4.08 ಕೋಟಿ ಫಲಾನುಭವಿಗಳಿಗೆ 7,763 ಕೋಟಿ ರೂ. ನೆರವನ್ನು ನೇರವಾಗಿ ವರ್ಗಾಯಿಸಲಾಗಿದೆ. ಉಚಿತವಾಗಿ 200 ಯೂನಿಟ್ ವರೆಗೆ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಯ ಸೌಲಭ್ಯವನ್ನು 1.60 ಕೋಟಿ ಕುಟುಂಬಗಳು ಪಡೆದುಕೊಳ್ಳುತ್ತಿವೆ. ಈ ಯೋಜನೆಗಾಗಿ 8,844 ಕೋಟಿ ರೂ. ವೆಚ್ಚ ಮಾಡಲಾಗಿದೆ. ‘ಯುವನಿಧಿ ಯೋಜನೆ’ಯಡಿ 1.31 ಲಕ್ಷ ಪದವಿ/ಡಿಪ್ಲೊಮಾ ಪಡೆದ ನಿರುದ್ಯೋಗಿಗಳಿಗೆ ನೆರವು ನೀಡಲಾಗುತ್ತಿದ್ದು ಇದಕ್ಕಾಗಿ 91 ಕೋಟಿ ರೂ.ಗಳನ್ನು ಭರಿಸಲಾಗಿದೆʼʼ ಎಂದು ಸಿದ್ದರಾಮಯ್ಯ ತಿಳಿಸಿದರು.

ʼʼನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಎರಡು ಮುಂಗಾರು ಹಂಗಾಮುಗಳಲ್ಲಿ ರಾಜ್ಯ ಸಂಪೂರ್ಣ ವಿಭಿನ್ನ ಪರಿಸ್ಥಿತಿಯನ್ನು ಎದುರಿಸಿದೆ. ಕಳೆದ ವರ್ಷ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾದರೆ, ಈ ಬಾರಿ ಅತಿವೃಷ್ಟಿಗೆ ಒಳಗಾಗಿದೆ. ಕೇಂದ್ರ ಸರ್ಕಾರವು ಬರ ಪರಿಹಾರದ ಮೊತ್ತವನ್ನು ತಡವಾಗಿ ನೀಡಿದರೂ, ರಾಜ್ಯದಲ್ಲಿ ಬರದಿಂದಾಗಿ ಜನರಿಗೆ ಹೆಚ್ಚಿನ ಅನಾನುಕೂಲಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಲಾಯಿತು. ಎನ್‍ಡಿಆರ್‌ಎಫ್‌ ಅಡಿ ಪರಿಹಾರ ಬಿಡುಗಡೆಯಾಗುವ ಮೊದಲೇ ರಾಜ್ಯ ಸರ್ಕಾರ ಬರಗಾಲದಿಂದ ಬಾಧಿತರಾದ ಪ್ರತಿ ರೈತರಿಗೆ 2,000 ರೂ. ವರೆಗೆ ಒಟ್ಟು 636.45 ಕೋಟಿ ರೂ.ಗಳ ಮಧ್ಯಂತರ ಪರಿಹಾರವನ್ನು ವಿತರಿಸಿದೆ. ಒಟ್ಟಾರೆಯಾಗಿ ಬೆಳೆ ನಷ್ಟ ಅನುಭವಿಸಿದ 38,58,737 ರೈತರಿಗೆ 3454.66 ಕೋಟಿ ರೂ. ಬೆಳೆಹಾನಿ ಪರಿಹಾರವನ್ನು ಎನ್‍ಡಿಆರ್‌ಎಫ್‌ ಅಡಿ ವಿತರಿಸಲಾಗಿದೆ. ಇದರೊಂದಿಗೆ 17.88 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ ಜೀವನ ನಿರ್ವಹಣೆಗಾಗಿ ಒಟ್ಟು 512.83 ಕೋಟಿ ರೂ. ಗಳಷ್ಟು ಜೀವನೋಪಾಯ ಪರಿಹಾರ ವಿತರಿಸಲಾಗಿದೆʼʼ ಎಂದು ಸಿದ್ದರಾಮಯ್ಯ ವಿವರಿಸಿದರು.

ʼʼಪ್ರವಾಹ ಪೀಡಿತ ಜಿಲ್ಲೆಗಳಿಗೆ ನಾನು ಸ್ವತಃ ಭೇಟಿ ನೀಡಿದ್ದೇನೆ. ನಮ್ಮ ಸಚಿವರೂ ಜಿಲ್ಲೆಗಳಲ್ಲಿದ್ದು ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಜೀವಹಾನಿ, ಜಾನುವಾರುಗಳ ಸಾವು ಹಾಗೂ ಮನೆ ಹಾನಿಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವಂತೆ ಸೂಚಿಸಲಾಗಿದೆ. ಮನೆ ಕಳೆದುಕೊಂಡವರಿಗೆ 1.2 ಲಕ್ಷ ರೂ. ಪರಿಹಾರದೊಂದಿಗೆ ಮನೆ ಹಂಚಿಕೆ ಮಾಡಲು ಕ್ರಮ ವಹಿಸುತ್ತಿದ್ದೇವೆʼʼ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: Independence day 2024: ವಿಕಸಿತ ಭಾರತ @2047 ಎಂಬುದು ಕೇವಲ ಪದಗಳಲ್ಲ..140 ಕೋಟಿ ಜನರ ಸಂಕಲ್ಪ-ಪ್ರಧಾನಿ ಮೋದಿ

Continue Reading

ಬೆಂಗಳೂರು

Independence Day 2024: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ; ಡಿಕೆಶಿ ಭರವಸೆ

Independence Day 2024: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ ಎಂದು ಭರವಸೆ ನೀಡಿದರು. ʼʼರಾಜ್ಯದ ಜನತೆಯನ್ನು ಹಸಿವಿನಿಂದ ಮುಕ್ತ ಮಾಡಬೇಕು ಎನ್ನುವುದೇ ನಮ್ಮ ಗುರಿ. ಇಂದಿರಾಗಾಂಧಿ ಸೇರಿದಂತೆ ಕಾಂಗ್ರೆಸ್ ಕಾಲದಲ್ಲಿ ಕೊಟ್ಟ ಕಾರ್ಯಕ್ರಮಗಳು ಜನರದ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿದೆ. ಕಾಂಗ್ರೆಸ್‌ಗೆ ಮಾತ್ರ ಇಂತಹ ಕಾರ್ಯಕ್ರಮಗಳನ್ನು ಜಾರಿ ಮಾಡಲು ಸಾಧ್ಯʼʼ ಎಂದು ತಿಳಿಸಿದರು.

VISTARANEWS.COM


on

Independence Day 2024
Koo

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂ‍ಭ್ರಮ ಮನೆ ಮಾಡಿದೆ (Independence Day 2024). ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ ಎಂದು ಭರವಸೆ ನೀಡಿದರು.

ʼʼರಾಜ್ಯದ ಜನತೆಯನ್ನು ಹಸಿವಿನಿಂದ ಮುಕ್ತ ಮಾಡಬೇಕು ಎನ್ನುವುದೇ ನಮ್ಮ ಗುರಿ. ಇಂದಿರಾಗಾಂಧಿ ಸೇರಿದಂತೆ ಕಾಂಗ್ರೆಸ್ ಕಾಲದಲ್ಲಿ ಕೊಟ್ಟ ಕಾರ್ಯಕ್ರಮಗಳು ಜನರದ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿದೆ. ಕಾಂಗ್ರೆಸ್‌ಗೆ ಮಾತ್ರ ಇಂತಹ ಕಾರ್ಯಕ್ರಮಗಳನ್ನು ಜಾರಿ ಮಾಡಲು ಸಾಧ್ಯ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಮತ್ತೊಮ್ಮೆ ನಾನು ಘೋಷಣೆ ಮಾಡುತ್ತಿದ್ದೇನೆ. ಮುಖ್ಯಮಂತ್ರಿ ಈ ಬಗ್ಗೆ ಭರವಸೆ ನೀಡಿದ್ದಾರೆ. ಹಾಗಾಗಿ ಈ ಘೋಷಣೆ ಮಾಡುತ್ತಿದ್ದೇನೆʼʼ ಎಂದು ಡಿಕೆಶಿ ತಿಳಿಸಿದರು.

ʼʼಸ್ವಾತಂತ್ರ್ಯೋತ್ಸವ ಎಂದರೆ ಹಿಂದೆ ಹೇಗಿದ್ವಿ ಈಗ ಹೇಗಿದ್ದೇವೆ ಎನ್ನುವುದನ್ನು ತಿಳಿಸುವ ದಿನ. ಸ್ವಾತಂತ್ರ್ಯ ಹಿನ್ನೆಲೆಯನ್ನು ನಾವು ಚರ್ಚೆ ಮಾಡದೇ ಇದ್ದರೆ ತಪ್ಪಾಗುತ್ತದೆ. ಸ್ವಾತಂತ್ರ್ಯಕ್ಕೆ ಬೆಲೆ ಕಟ್ಟಿ ಪಡೆಯಲು ಸಾಧ್ಯವಿಲ್ಲ. ದ್ವೇಷ ಅಸೂಯೆಯಿಂದ ಕೂಡಿದರೆ ಅದು ಸ್ವಾತಂತ್ರ್ಯ ಅಲ್ಲ ಅಂತ ನೆಹರೂ ಹೇಳಿದ್ದರು. ಸ್ವಾತಂತ್ರ್ಯಕ್ಕೆ ಹೋರಾಡಿದ ಪಕ್ಷದಲ್ಲಿ ನಾವೆಲ್ಲ ಇದ್ದೇವೆ ಎಂಬುದೇ ಹೆಮ್ಮೆʼʼ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ʼʼನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸುವವರು ನಮ್ಮ ನಡುವೆ ಇದ್ದಾರೆ. 6.50 ಲಕ್ಷ ಜನ ಕಾಂಗ್ರೆಸ್ಸಿಗರು ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಸ್ವಾತಂತ್ರ್ಯವನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕಾಗಿದೆ. ಮಹಾತ್ಮ ಗಾಂಧೀಜಿ ಅವರು ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು 100 ವರ್ಷ ಆಗಿದೆ. ಇದಕ್ಕಾಗಿ ಸರ್ಕಾರ ಮತ್ತು ಪಕ್ಷ ಎರಡೂ ಸೇರಿ ವಿವಿಧ ಕಾರ್ಯಕ್ರಮ ರೂಪಿಸಲಿದೆʼʼ ಎಂದು ವಿವರಿಸಿದರು.

ʼʼದೇಶಕ್ಕೆ ಕಾಂಗ್ರೆಸ್‌ನ ಕೊಡುಗೆ ಏನು ಎಂದು ಹಲವರು ಕೇಳುತ್ತಾರೆ. ಆದರೆ ದೇಶಕ್ಕಾಗಿ ಕಾಂಗ್ರೆಸ್ ಕೊಡುಗೆ ನೀಡಿದ ಸಂಸ್ಥೆಗಳನ್ನು ಅವರೇ ಮಾರಾಟ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ದೇಶದ್ರೋಹಿಗಳ ಪರವಾಗಿ ನಿಂತು ದೇಶಪ್ರೇಮ ಪಾಠ ಮಾಡುವವರು ನಮ್ಮ ನಡುವೆ ಇದ್ದಾರೆʼʼ ಎಂದು ಡಿಕೆಶಿ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: Independence Day 2024: ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ; Live ಇಲ್ಲಿ ವೀಕ್ಷಿಸಿ

Continue Reading

ಕರ್ನಾಟಕ

Independence Day 2024: ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ; Live ಇಲ್ಲಿ ವೀಕ್ಷಿಸಿ

Independence Day 2024: ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದ್ದು, ಅದಕ್ಕಾಗಿ ಸಿದ್ಧತೆ ಕೈಗೊಳ್ಳಲಾಗಿದೆ. ಬೆಳಿಗ್ಗೆ 8.58ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮೈದಾನದಕ್ಕೆ ಆಗಮಿಸಲಿದ್ದು, 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಲೈವ್‌ ಇಲ್ಲಿ ವೀಕ್ಷಿಸಿ.

VISTARANEWS.COM


on

Koo

ಬೆಂಗಳೂರು: ಇಂದು ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ (Independence Day 2024). ಈ ಪ್ರಯುಕ್ತ ರಾಜ್ಯದಲ್ಲಿಯೂ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದ್ದು, ಅದಕ್ಕಾಗಿ ಸಿದ್ಧತೆ ಕೈಗೊಳ್ಳಲಾಗಿದೆ. ಬೆಳಿಗ್ಗೆ 8.58ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮೈದಾನದಕ್ಕೆ ಆಗಮಿಸಲಿದ್ದು, 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಧ್ವಜಾರೋಹಣ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಿಸಿ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ನಂತರ ಈ ಬಾರಿ ಅಂಗಾಂಗ ದಾನ ಮಾಡಿದ 64 ಕುಟುಂಬ ಸದಸ್ಯರನ್ನು ಸನ್ಮಾನಿಸಲಿದ್ದಾರೆ. ಜತೆಗೆ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಿದ್ದಾರೆ.

1,150 ಮಂದಿಯಿಂದ ಪಥಸಂಚಲನ

ಇನ್ನು ಈ ಬಾರಿ ಕೆಎಸ್‌ಆರ್‌ಪಿ, ಸಿಆರ್‌ಪಿಎಫ್, ಬಿಎಸ್‌ಎಫ್, ಗೋವಾ ಪೊಲೀಸ್ ತಂಡ ಸೇರಿದಂತೆ ವಿವಿಧ ಇಲಾಖೆಯ 35 ತುಕಡಿಯಗಳ 1,150 ಮಂದಿಯಿಂದ ಪಥ ಸಂಚಲನ ನೆರವೇರಲಿದೆ. ನಗರದ ವಿವಿಧ ಶಾಲೆಗಳ 1,450 ವಿದ್ಯಾರ್ಥಿಗಳು ಹಾಗೂ 400 ಎನ್‌ಎಸ್ಎಸ್‌ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ರಂಗೇರಲಿದೆ.

ಪೊಲೀಸರಿಂದ ಭದ್ರತೆ

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಣೆಕ್ ಷಾ ಮೈದಾನದ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮಾಣೆಕ್ ಷಾ ಮೈದಾನದ ಸುತ್ತ 1,583 ಪೊಲೀಸರನ್ನು ನಿಯೋಜಿಸಲಾಗಿದೆ. ಭದ್ರತೆಗಾಗಿ 10 ಡಿಸಿಪಿ, 17 ಎಸಿಪಿ, 43 ಪೊಲೀಸ್‌ ಅಧಿಕಾರಿಗಳು, 112 ಪಿಎಸ್‌ಐ, 62 ಎಎಸ್ಐ, 511 ಎಚ್‌ಸಿ, ಪಿಸಿ, 72 ಮಹಿಳಾ ಪೊಲೀಸರು ಕಣ್ಗಾವಲು ಇರಿಸಿದ್ದಾರೆ. ಇನ್ನು ಸಂಚಾರ ವ್ಯವಸ್ಥೆಯ ನಿಯಂತ್ರಣಕ್ಕೆ 3 ಡಿಸಿಪಿ, 6 ಎಸಿಪಿ, 19 ಪೊಲೀಸ್‌ ಅಧಿಕಾರಿಗಳು, 32 ಮಹಿಳಾ ಪಿಎಸ್‌ಐ, 111 ಎಎಸ್‌ಐ, 430 ಎಚ್‌ಸಿ, ಪಿಸಿಗಳನ್ನು ನಿಯೋಜಿಸಲಾಗಿದೆ.

100 ಸಿಸಿ ಕ್ಯಾಮೆರಾ ವ್ಯವಸ್ಥೆ

ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ 100 ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಮೂರು ಬ್ಯಾಗೇಜ್ ಸ್ಕ್ಯಾನರ್, 100 ಕೆಎಸ್‌ಆರ್‌ಪಿ ಮತ್ತು ಸಿಆರ್‌ ತುಕಡಿ, ಎರಡು ಅಗ್ನಿ ಶಾಮಕ ವಾಹನ, ಎರಡು ಆ್ಯಂಬುಲೆನ್ಸ್ ವಾಹನ, 1 ಕ್ಷಿಪ್ರ ಕಾರ್ಯಾಚರಣೆ ಪಡೆ, ಬಾಂಬ್‌ ನಿಷ್ಕ್ರಿಯ ದಳ ತಂಡಗಳನ್ನೂ ಸಜ್ಜುಗೊಳಿಸಲಾಗಿದೆ. ಅಲ್ಲದೆ ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದು, ಅಗತ್ಯ ಬಂದೊಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಖಾಕಿ ಪಡೆ ಮುನ್ನಚ್ಚರಿಕೆ ವಹಿಸಿದೆ.

ರಾಜ್ಯದ 20 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಘೋಷಣೆ

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಜ್ಯದ ಹಲವು ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ (President’s Medal) ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರ (India Govt) ಈ ಘೋಷಣೆ ಹೊರಡಿಸಿದೆ. ರಾಜ್ಯದ 20 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ ಒಲಿದಿದೆ. ಇಬ್ಬರು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಅತ್ಯುತ್ತಮ ಸೇವಾ ಪದಕ ಘೋಷಣೆಯಾಗಿದೆ. ಐಎಸ್‌ಡಿ, ಎಡಿಜಿಪಿ ಎಂ. ಚಂದ್ರಶೇಖರ್ ಹಾಗೂ ಅಗ್ನಿಶಾಮಕ ದಳದ ಸೀನಿಯರ್ ಕಮಾಂಡರ್ ಬಸವಲಿಂಗಪ್ಪ ಅವರಿಗೆ ಅತ್ಯುತ್ತಮ ಸೇವಾ ಪದಕ ಘೋಷಿಸಲಾಗಿದೆ.

ಇದನ್ನೂ ಓದಿ: Independence day 2024: ಕೆಂಪು ಕೋಟೆ ಮೇಲೆ ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವದ ಭಾಷಣದ Live ಇಲ್ಲಿ ವೀಕ್ಷಿಸಿ

Continue Reading

ದೇಶ

Reliance Foundation: ಡಿಗ್ರಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ರಿಲಯನ್ಸ್ ಫೌಂಡೇಷನ್‌ನಿಂದ ವಿದ್ಯಾರ್ಥಿ ವೇತನ

Reliance Foundation: ರಿಲಯನ್ಸ್ ಫೌಂಡೇಷನ್‌ನಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ವೇತನವನ್ನು ವಿತರಿಸುವುದಕ್ಕಾಗಿ ಅರ್ಜಿಗಳನ್ನು ಕರೆದಿರುವುದಾಗಿ ಘೋಷಣೆ ಮಾಡಿದೆ. ಈ ಮೂಲಕವಾಗಿ ಭಾರತದಾದ್ಯಂತ ಪದವಿ ಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ 5,100 ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ, ಬೆಂಬಲಿಸಿ, ಮಾರ್ಗದರ್ಶನ ನೀಡಲಾಗುತ್ತದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Reliance Foundation
Koo

ಮುಂಬೈ: ರಿಲಯನ್ಸ್ ಫೌಂಡೇಷನ್‌ನಿಂದ (Reliance Foundation) 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ವೇತನವನ್ನು ವಿತರಿಸುವುದಕ್ಕಾಗಿ ಅರ್ಜಿಗಳನ್ನು ಕರೆದಿರುವುದಾಗಿ ಘೋಷಣೆ ಮಾಡಿದೆ. ಈ ಮೂಲಕವಾಗಿ ಭಾರತದಾದ್ಯಂತ ಪದವಿ ಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ 5,100 ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ, ಬೆಂಬಲಿಸಿ, ಮಾರ್ಗದರ್ಶನ ನೀಡಲಾಗುತ್ತದೆ.

ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನದ ಗುರಿಯು, ಭಾರತ ಬೆಳವಣಿಗೆ ಗಾಥೆಯನ್ನು ಮುನ್ನಡೆಸುವುದರಲ್ಲಿ ಮುಂಚೂಣಿಯಲ್ಲಿ ಇರುವುದಕ್ಕೆ ಯುವ ಜನರನ್ನು ಸಬಲಗೊಳಿಸುವುದು, ಉತ್ಕೃಷ್ಟತೆಯನ್ನು ಪೋಷಿಸುವ ಗುರಿಯನ್ನು ಇರಿಸಿಕೊಂಡಿದೆ., ಆ ಮೂಲಕ ಆರ್ಥಿಕ ಹೊರೆಯಿಲ್ಲದೆ ತಮ್ಮ ಅಧ್ಯಯನವನ್ನು ಮುಂದುವರಿಸಲು ಸಬಲಗೊಳಿಸುತ್ತದೆ.

ಇದನ್ನೂ ಓದಿ: Director of ED: ಜಾರಿ ನಿರ್ದೇಶನಾಲಯ ಪೂರ್ಣಾವಧಿ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ

ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ಸ್ಕಾಲರ್‌ಶಿಪ್‌ಗಳು ನವಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿರುವ, ಭವಿಷ್ಯಕ್ಕೆ ಉಪಯುಕ್ತವಾದ ಎಂಜಿನಿಯರಿಂಗ್, ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನ ಈ ವಿಷಯಗಳಲ್ಲಿ ವ್ಯಾಸಂಗ ಮಾಡುತ್ತಿರುವ 100 ಅಸಾಧಾರಣ- ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುತ್ತದೆ. ಎಲ್ಲ ವಿದ್ಯಾರ್ಥಿ ವೇತನಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಆರ್ಥಿಕ ಸ್ಥಿತಿಯ ಆಧಾರದ ಮೇಲೆ ನೀಡಲಾಗುತ್ತದೆ ಮತ್ತು ಪದವಿ ಕಾರ್ಯಕ್ರಮಗಳ ಅವಧಿಯನ್ನು ಒಳಗೊಂಡಿರುತ್ತದೆ. ಸಮಾಜದ ಪ್ರಯೋಜನಕ್ಕಾಗಿ ದೊಡ್ಡದಾಗಿ ಯೋಚಿಸುವ, ಹಸಿರು ಮತ್ತು ಡಿಜಿಟಲ್ ಚಿಂತನೆ ಮಾಡುವ ಅಸಾಧಾರಣ ಪ್ರತಿಭೆಗಳನ್ನು ಗುರುತಿಸಲು ಮತ್ತು ಬೆಳವಣಿಗೆಗೆ ನೆರವು ನೀಡುವುದಕ್ಕಾಗಿ ಈ ಉಪಕ್ರಮವನ್ನು ರೂಪಿಸಲಾಗಿದೆ.

ಸಮಗ್ರವಾದ ಬೆಂಬಲ ಹಾಗೂ ಉದಾರವಾದ ಹಣಕಾಸಿನ ಅನುದಾನದ ಮೂಲಕವಾಗಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಹಾಗೂ ವೃತ್ತಿಪರ ಆಕಾಂಕ್ಷೆಯನ್ನು ಈಡೇರಿಸಿಕೊಳ್ಳುವುದಕ್ಕೆ ಈ ವಿದ್ಯಾರ್ಥಿವೇತನವು ನೆರವು ನೀಡುತ್ತದೆ. ಮೊದಲ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಾಗಿದ್ದು, ಭಾರತದೊಳಗೆ ಇರುವಂಥ ಶಿಕ್ಷಣ ಸಂಸ್ಥೆಯಿಂದ ಪೂರ್ಣಾವಧಿಗೆ, ನಿಯಮಿತ ಶಿಕ್ಷಣ ಪಡೆಯುತ್ತಿರುವಂತವರು ಅರ್ಜಿ ಸಲ್ಲಿಸುವುದಕ್ಕೆ ಅರ್ಹರಾಗಿರುತ್ತಾರೆ.

ಅಂಕ- ಆರ್ಥಿಕ ಸ್ಥಿತಿಯ ಮಾನದಂಡ

ರಿಲಯನ್ಸ್ ಫೌಂಡೇಷನ್ ಪದವಿ ಶಿಕ್ಷಣ ಪಡೆಯುತ್ತಿರುವವರಿಗೆ ನೀಡುವ ವಿದ್ಯಾರ್ಥಿ ವೇತನವು ಪ್ರತಿಭಾವಂತ ವಿದ್ಯಾರ್ಥಿಗಳು ಯಶಸ್ವಿ ವೃತ್ತಿಪರರಾಗುವ ತಮ್ಮ ಕನಸು ನನಸಾಗಿಸಿಕೊಳ್ಳುವುದಕ್ಕೆ ಮತ್ತು ಭಾರತದ ಭವಿಷ್ಯದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಅವರ ಸಾಮರ್ಥ್ಯವನ್ನು ಹೊರತರುವುದಕ್ಕೆ ಪ್ರಯತ್ನಿಸುತ್ತದೆ. ಪದವಿ ಕಾಲೇಜು ಶಿಕ್ಷಣಕ್ಕಾಗಿ ಅಂಕ- ಆರ್ಥಿಕ ಸ್ಥಿತಿಯ ಮಾನದಂಡದ ಆಧಾರದ ಮೇಲೆ 5,000 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು.

ಇದನ್ನೂ ಓದಿ: Album Song: ಅನಿವಾಸಿ ಕನ್ನಡಿಗರ ‘ಹನಿ ಹನಿ’ ಆಲ್ಬಂ ಸಾಂಗ್ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

ಪದವಿ ವಿದ್ಯಾರ್ಥಿಗಳಿಗೆ ರೂ. 2 ಲಕ್ಷ

ಈ ಅನುದಾನದ ಜತೆಗೆ ರೂ. 2 ಲಕ್ಷ ಪದವಿ ವಿದ್ಯಾರ್ಥಿಗಳಿಗೆ ಮತ್ತು ರೂ. 6 ಲಕ್ಷ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ರಿಲಯನ್ಸ್ ಫೌಂಡೇಷನ್ ಸ್ಕಾಲರ್‌ಶಿಪ್‌ಗಳು ವಿದ್ಯಾರ್ಥಿಗಳು ಮಾರ್ಗದರ್ಶನ ಪಡೆಯುವುದಕ್ಕೆ, ವೃತ್ತಿಪರ ಬೆಳವಣಿಗೆ ಜತೆಗೆ ವೃತ್ತಿ ಸಲಹೆಗಾಗಿ ಉದ್ಯಮದ ನಾಯಕರು ಮತ್ತು ತಜ್ಞರ ಜತೆಗೆ ಸಂವಹನಕ್ಕೆ ಅವಕಾಶ ದೊರಕಿಸುತ್ತದೆ. ಕೌಶಲಗಳನ್ನು ಹೆಚ್ಚಿಸಲು ಕಾರ್ಯಾಗಾರಗಳು, ಸೆಮಿನಾರ್‌ಗಳು ಮತ್ತು ಕಾರ್ಯಕ್ರಮಗಳ ಮೂಲಕ ನಾಯಕತ್ವದ ಅಭಿವೃದ್ಧಿ ಅವಕಾಶಗಳು, ಜತೆಗೆ ಸಮುದಾಯದ ತೊಡಗಿಸಿಕೊಳ್ಳುವಿಕೆಯೊಂದಿಗೆ ಸೇವೆ ಹಾಗೂ ಪ್ರಚಾರ ಕಾರ್ಯಕ್ರಮಗಳ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ.

ಶಿಕ್ಷಣ ಎಂಬುದು ರಿಲಯನ್ಸ್ ಫೌಂಡೇಷನ್‌ನ ಮಾಡುತ್ತಿರುವುದರಲ್ಲಿಯೇ ಅತ್ಯಂತ ಪ್ರಮುಖ ಕೆಲಸವಾಗಿದೆ. 2022ರ ಡಿಸೆಂಬರ್ ನಲ್ಲಿ ರಿಲಯನ್ಸ್ ಸಂಸ್ಥಾಪಕ-ಅಧ್ಯಕ್ಷ ಧೀರೂಭಾಯಿ ಅಂಬಾನಿ ಅವರ 90ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಮಾತನಾಡಿ, ಮುಂದಿನ 10 ವರ್ಷಗಳಲ್ಲಿ ರಿಲಯನ್ಸ್ ಫೌಂಡೇಷನ್‌ನ ಹೆಚ್ಚುವರಿ ಬದ್ಧತೆಯಾಗಿ 50,000 ಸ್ಕಾಲರ್‌ಶಿಪ್‌ಗಳನ್ನು ಘೋಷಿಸಿದರು, ಇದು ಭಾರತದ ಅತಿದೊಡ್ಡ ಖಾಸಗಿ ವಿದ್ಯಾರ್ಥಿವೇತನವಾಗಿದೆ. ಅಂದಿನಿಂದ, ಪ್ರತಿ ವರ್ಷ 5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಇಲ್ಲಿಯವರೆಗೆ, ರಿಲಯನ್ಸ್ 23,000 ಉನ್ನತ ಶಿಕ್ಷಣ ವಿದ್ಯಾರ್ಥಿವೇತನವನ್ನು ಒದಗಿಸಿದೆ. ರಿಲಯನ್ಸ್ ಫೌಂಡೇಷನ್‌ನಿಂದ ಮಾರ್ಗದರ್ಶನ ಹಾಗೂ ವಿದ್ಯಾರ್ಥಿವೇತನ ಪಡೆದಂತ ಪ್ರತಿಭಾವಂತರು ಲಾಭದಾಯಕ ವೃತ್ತಿಗಳು ಮತ್ತು ಶೈಕ್ಷಣಿಕ ಹಾಗೂ ವೃತ್ತಿಪರ ಪ್ರಯಾಣ ಪ್ರಾರಂಭಿಸಿದ್ದಾರೆ. ಈ ವರ್ಷದ ಅರ್ಜಿ ಆಹ್ವಾನವು ಪ್ರತಿಭಾವಂತ ವಿದ್ಯಾರ್ಥಿಗಳ ಮತ್ತೊಂದು ಸಮೂಹಕ್ಕೆ ಈ ಲಾಭದಾಯಕ ಪ್ರಯಾಣದಿಂದ ಪ್ರಯೋಜನ ಪಡೆಯುವ ಅವಕಾಶವನ್ನು ದೊರಕಿಸುತ್ತದೆ.

ಇದನ್ನೂ ಓದಿ: Government Employees: ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ.17ಕ್ಕೆ ಅಭಿನಂದನಾ ಸಮಾರಂಭ, ಕಾರ್ಯಾಗಾರ: ಸಿ.ಎಸ್. ಷಡಾಕ್ಷರಿ

ಅರ್ಜಿ ಸಲ್ಲಿಕೆ ಹೇಗೆ?

ವಿದ್ಯಾರ್ಥಿಗಳು www.scholarships.reliancefoundation.org ಈ ವೆಬ್ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಪದವಿ ವಿದ್ಯಾರ್ಥಿಗೆ ಅರ್ಹತೆ ಮತ್ತು ಆರ್ಥಿಕ ಹಿನ್ನೆಲೆಯ ಮೌಲ್ಯಮಾಪನವನ್ನು ಒಳಗೊಂಡಿದೆ. ಸ್ನಾತಕೋತ್ತರ ಪದವಿ ವಿದ್ಯಾರ್ಥಿವೇತನಕ್ಕಾಗಿ, ಶೈಕ್ಷಣಿಕ ಸಾಧನೆಗಳು, ವೈಯಕ್ತಿಕ ಹೇಳಿಕೆಗಳು ಮತ್ತು ಸಂದರ್ಶನಗಳು ಈ ಎಲ್ಲವೂ ಭಾರತದಾದ್ಯಂತದ ಪ್ರತಿಭೆಗಳನ್ನು ಗುರುತಿಸಲು ಸ್ಪರ್ಧಾತ್ಮಕ ಆಯ್ಕೆ ಪ್ರಕ್ರಿಯೆಯ ಭಾಗವಾಗಿದೆ. ಅರ್ಜಿಗಳನ್ನು ಸಲ್ಲಿಸುವುದಕ್ಕೆ 6ನೇ ಅಕ್ಟೋಬರ್ 2024 ಅಂತಿಮ ದಿನಾಂಕವಾಗಿದೆ ಎಂದು ತಿಳಿಸಿದೆ.

Continue Reading
Advertisement
Independence Day 2024
ಕರ್ನಾಟಕ43 seconds ago

ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ; ಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ

Independence Day 2024
ದೇಶ10 mins ago

Independence Day 2024: ಜಾತ್ಯಾತೀತ ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

Golden Star Ganesh Krishnam Pranaya Sakhi review
ಸ್ಯಾಂಡಲ್ ವುಡ್19 mins ago

Golden Star Ganesh: ಹೇಗಿದೆ “ಕೃಷ್ಣಂ ಪ್ರಣಯ ಸಖಿ” ಸಿನಿಮಾ? ಫ್ಯಾನ್ಸ್‌ ಹೇಳೋದೇನು?

Independence Day 2024
ಬೆಂಗಳೂರು58 mins ago

Independence Day 2024: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ; ಡಿಕೆಶಿ ಭರವಸೆ

Independence Day 2024
ಪ್ರಮುಖ ಸುದ್ದಿ1 hour ago

Independence day 2024: ವಿಕಸಿತ ಭಾರತ @2047 ಎಂಬುದು ಕೇವಲ ಪದಗಳಲ್ಲ..140 ಕೋಟಿ ಜನರ ಸಂಕಲ್ಪ-ಪ್ರಧಾನಿ ಮೋದಿ

Kannada New Movie Naane Krishna Naane Shaam Video Song Sanjith Hegde
ಸ್ಯಾಂಡಲ್ ವುಡ್1 hour ago

Kannada New Movie: ದಿನಕರ್ ತೂಗುದೀಪ್ ನಿರ್ದೇಶನದ ʻರಾಯಲ್ʼ ಸಿನಿಮಾ ಮೊದಲ ಹಾಡು ರಿಲೀಸ್!

Health Tips
ಆಹಾರ/ಅಡುಗೆ1 hour ago

Health Tips: ಮತ್ತೆ ಮತ್ತೆ ಬಿಸಿ ಮಾಡಿ ಸೇವಿಸುವುದರಿಂದ ಇವು ದೇಹಕ್ಕೆ ವಿಷವಾಗಬಹುದು ಎಚ್ಚರ!

Kangana Ranaut Emergency trailer PM Indira Gandhi as a Shakespearean tragedy
ಸಿನಿಮಾ1 hour ago

Kangana Ranaut: ʻಎಮರ್ಜೆನ್ಸಿʼ ಟ್ರೈಲರ್‌ ಔಟ್‌; ಕಂಗನಾ ರಣಾವತ್‌ಗೆ ರಾಷ್ಟ್ರ ಪ್ರಶಸ್ತಿ ಫಿಕ್ಸ್‌ ಅಂದ್ರು ಫ್ಯಾನ್ಸ್‌!

ಕರ್ನಾಟಕ2 hours ago

Independence Day 2024: ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ; Live ಇಲ್ಲಿ ವೀಕ್ಷಿಸಿ

Kolkata Doctor Murder Case
ದೇಶ2 hours ago

Kolkata Doctor Murder Case: ಟ್ರೈನಿ ವೈದ್ಯೆಯ ಹತ್ಯೆ-ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಭಾರೀ ಲಾಠಿಚಾರ್ಜ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ7 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ7 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ7 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌