Self Harming : ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ - Vistara News

ಹಾಸನ

Self Harming : ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ

Self Harming : ಹಾಸನದಲ್ಲಿ ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಏಕಾಏಕಿ ನಾಪತ್ತೆಯಾಗಿದ್ದರು. ಇದೀಗ ಹೇಮಾವತಿ ನಾಲೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಬಾಲಕಿಯ ಶವಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

VISTARANEWS.COM


on

Self Harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಘಟನೆ ನಡೆದಿದೆ. 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ದಂಪತಿ ಮೃತಪಟ್ಟಿದ್ದಾರೆ. ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಮೃತ ದುರ್ದೈವಿಗಳು.

ಶ್ರೀನಿವಾಸ್‌ ಕಾರು ಚಾಲಕರಾಗಿದ್ದರೆ, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶ್ರೀನಿವಾಸ್‌ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಕಳೆದ ಮಂಗಳವಾರ ಈ ಮೂವರು ಏಕಾಏಕಿ ಕಾಣಿಯಾಗಿದ್ದರು. ಸಂಬಂಧಿಗಳು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದರೆ ಇವರ ಸುಳಿವು ಸಿಕ್ಕಿರಲಿಲ್ಲ.

ಕುಟುಂಬಸ್ಥರು ನಂತರ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿನ್ನೆ ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.

ಅಗ್ನಿಶಾಮಕ ದಳದ‌ ಸಿಬ್ಬಂದಿ ಹಾಗೂ ಪೊಲೀಸರು ದಂಪತಿಯ ಶವವನ್ನು ಹೊರ ತೆಗೆದಿದ್ದಾರೆ. ಸದ್ಯ ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಎಸ್‌ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Bike Wheeling: ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ಹೈವೇಯಲ್ಲಿ ಡೆಡ್ಲಿ ವ್ಹೀಲಿಂಗ್‌!

ಬಾವಿಯಲ್ಲಿ ಅಪರಿಚಿತ ಶವ ಪತ್ತೆ

ಕಪಿಲೇಶ್ವರ ಮಂದಿರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಕುಡಿದ ಮತ್ತಿನಲ್ಲಿ ಬಾವಿಗೆ ಬಿದ್ದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ ಪಾಲಿಕೆಯ ಪೌರ ಕಾರ್ಮಿಕರು ಶುಚಿಗೊಳಿಸುವಾಗ ಶವ ಪತ್ತೆಯಾಗಿದೆ. ಮಾರ್ಕೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯದ ಹಲವೆಡೆ ಅಬ್ಬರಿಸಲಿದೆ ಗುಡುಗು ಸಹಿತ ಮಳೆ

Rain News : ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಭಾಗದಲ್ಲಿ ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ. ಈ ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಸುತ್ತಮುತ್ತಲೂ ಮಧ್ಯಮ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಕೋಲಾರ, ವಿಜಯನಗರದ ಒಂದೆರಡು ಕಡಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಾಧಾರಣದೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕೆಲವೊಮ್ಮೆ ಬಿಸಿಲ ಧಗೆಯು ಹೆಚ್ಚಿರಲಿದೆ.

ಇದನ್ನೂ ಓದಿ: Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

ಹುಡುಗಿಯರ ಮಾನ್ಸೂನ್‌ ಡ್ರೆಸ್‌ ಹೇಗಿರಬೇಕು? ಹೇಗಿರಬಾರದು?

ಮಾನ್ಸೂನ್‌ನಲ್ಲಿ ಹುಡುಗಿಯರು ಧರಿಸುವ (Monsoon Fashion do’s & don’ts) ಉಡುಪುಗಳು ನೋಡಲು ಆಕರ್ಷಕವಾಗಿದ್ದರಷ್ಟೇ ಸಾಲದು, ಧರಿಸಿದಾಗ ಕಂಫರ್ಟಬಲ್‌ ಆಗಿರಬೇಕು, ಎಲ್ಲದಕ್ಕಿಂತ ಹೆಚ್ಚಾಗಿ ಸೀಸನ್‌ಗೆ ತಕ್ಕಂತಿರಬೇಕು ಎನ್ನುತ್ತಾರೆ ಫ್ಯಾಷನಿಸ್ಟ್‌ಗಳು. ಸಮೀಕ್ಷೆಯೊಂದರ ಪ್ರಕಾರ, ಸಾಕಷ್ಟು ಹುಡುಗಿಯರು ಸ್ಟೈಲಿಶ್‌ ಆಗಿ ಕಾಣಿಸಲು ಮಾನ್ಸೂನ್‌ನಲ್ಲೂ ಸಮ್ಮರ್‌ ಫ್ಯಾಷನ್‌ವೇರ್‌ಗಳನ್ನು ಧರಿಸುತ್ತಾರಂತೆ. ಇನ್ನು, ಕೆಲವು ಯುವತಿಯರು ಮಾನ್ಸೂನ್‌ ಸೀಸನ್‌ನಲ್ಲಿ ಹೊದ್ದುಕೊಂಡಂತಿರುವ ಉಡುಪುಗಳನ್ನು ಧರಿಸುತ್ತಾರಂತೆ. ಆದರೆ, ಫ್ಯಾಷನಿಸ್ಟ್‌ಗಳ ಪ್ರಕಾರ, ಆಯಾ ವರ್ಗದ ಅನುಗುಣವಾಗಿ ಹುಡುಗಿಯರು ಧರಿಸುವ ಉಡುಪುಗಳು ಬದಲಾಗುತ್ತವಂತೆ. ಅದರಲ್ಲೂ, ಜೆನ್‌ ಜಿ ಹುಡುಗಿಯರು, ಯಾವುದೇ ಸೀಸನ್‌ ಟ್ರೆಂಡ್‌ ಫಾಲೋ ಮಾಡುವುದಿಲ್ಲ, ಬದಲಾಗಿ ತಮ್ಮದೇ ಆದ ಸ್ಟೈಲಿಶ್‌ ಮಾರ್ಗವನ್ನು ಹಿಡಿಯುತ್ತಾರಂತೆ. ಅಂದ ಹಾಗೆ, ಇದೆಲ್ಲಾ ಓಕೆ, ಹಾಗೆಂದು ಸೀಸನ್‌ಗೆ ವಿರುದ್ಧವಾಗಿ ಕಾಣಿಸುವುದು ದಿನಚರಿಯಾಗಬಾರದು! ಇದು ಆರೋಗ್ಯಕ್ಕೂ ಮಾರಕ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಹಾಗಾದಲ್ಲಿ, ಈ ಸೀಸನ್‌ನಲ್ಲಿ ಯಾವ ರೀತಿಯ ಡ್ರೆಸ್‌ಗಳು ಬೆಸ್ಟ್? ಯಾವುದು ನಾಟ್‌ ಓಕೆ ! ಎಂಬುದನ್ನು ಫ್ಯಾಷನಿಸ್ಟ್‌ಗಳು ಸಿಂಪಲ್ಲಾಗಿ ತಿಳಿಸಿದ್ದಾರೆ.

Monsoon Fashion

ಮಾನ್ಸೂನ್‌ ಡ್ರೆಸ್‌ಗಳು

ಮಳೆಗಾಲದಲ್ಲಿ ಟ್ರೆಂಡಿಯಾಗುವ ಜಾಕೆಟ್‌ ಡ್ರೆಸ್‌, ಕೋಟ್‌ ಡ್ರೆಸ್‌-ಫ್ರಾಕ್ಸ್, ಸ್ಕೆಟರ್‌ ಡ್ರೆಸ್, ಮಿಡಿ ಡ್ರೆಸ್‌, ಹೈ ವೇಸ್ಟ್ ಶಾಟ್ಸ್ ಆಯ್ಕೆ ಮಾಡಬಹುದು. ಇವು ಸ್ಟೈಲಿಶ್‌ ಆಗಿ ಕಾಣಿಸುವುದರ ಜೊತೆಗೆ ಟ್ರೆಂಡಿಯಾಗಿಯೂ ಬಿಂಬಿಸುತ್ತವೆ.

Monsoon Fashion

ಗಿಡ್ಡ ಪ್ಯಾಂಟ್‌ಗೆ ಓಕೆ ಹೇಳಿ

ಆಂಕೆಲ್‌ ಲೆಂಥ್‌, ಕ್ರಾಪ್ಡ್ ಪ್ಯಾಂಟ್‌, ಲೆಗ್ಗಿಂಗ್ಸ್, ಜೆಗ್ಗಿಂಗ್ಸ್, ಪುಶ್‌ ಬ್ಯಾಕ್‌ನಂತಹ ಪ್ಯಾಂಟ್‌ಗಳನ್ನು ಧರಿಸಬಹುದು. ಆದರೆ, ಯಾವುದೇ ಕಾರಣಕ್ಕೂ ಪಲ್ಹಾಜೋ, ಪ್ಯಾರಲಲ್‌, ಬೂಟ್‌ ಕಟ್‌, ಶರರಾ, ಘರಾರದಂತಹ ಅಗಲವಾದ ನೆಲಹಾಸುವಂತಹ ಪ್ಯಾಂಟ್‌ಗಳನ್ನು ಧರಿಸಬೇಡಿ.

Monsoon Fashion

ನೆಲ ಮುಟ್ಟುವ ಗೌನ್‌ಗಳನ್ನು ದೂರವಿಡಿ

ನಡೆಯುವಾಗ ನೆಲವನ್ನು ಮುಟ್ಟುವಂತಹ ಉದ್ದುದ್ದ ಮ್ಯಾಕ್ಸಿ, ಗೌನ್‌ಗಳಿಗೆ ಸದ್ಯಕ್ಕೆ ಬೈ ಹೇಳಿ. ಇವು ನೋಡಲು ಮಾತ್ರ ಆಕರ್ಷಕವಾಗಿ ಕಾಣಿಸುತ್ತವೆ. ಇವನ್ನು ನಿರ್ವಹಣೆ ಮಾಡುವುದು ಕಷ್ಟ.

Monsoon Fashion

ಭಾರವಿಲ್ಲದ ಲೈಟ್‌ವೈಟ್‌ ಉಡುಗೆ ಧರಿಸಿ

ಲೇಯರಿಂಗ್‌ ಹೆಸರಲ್ಲಿ ದಪ್ಪನೆಯ ಫ್ಯಾಬ್ರಿಕ್‌ನ ಉಡುಗೆಗಳು ಉಸಿರುಕಟ್ಟಿಸಬಹುದು. ಮಳೆಯಲ್ಲಿ ಒದ್ದೆಯಾದರಂತೂ ಕಿರಿಕಿರಿ ಎನಿಸಬಹುದು. ಇದನ್ನು ಅವಾಯ್ಡ್ ಮಾಡಲು, ಬೇಗನೇ ಒಣಗುವ ಲೈಟ್‌ವೈಟ್‌ ಡ್ರೆಸ್‌ಗಳಿಗೆ ಸೈ ಎನ್ನಿ.

ಹೆವಿ ಎಥ್ನಿಕ್‌ ಡಿಸೈನರ್‌ವೇರ್‌ ಅವಾಯ್ಡ್ ಮಾಡಿ

ಹೆವಿ ಎಥ್ನಿಕ್‌ವೇರ್‌ಗಳನ್ನು ಆವಾಯ್ಡ್ ಮಾಡಿ. ಎಥ್ನಿಕ್‌ವೇರ್‌ ಧರಿಸಲೇ ಬೇಕಿದ್ದಲ್ಲಿ ಆದಷ್ಟೂ ಆಂಕೆಲ್‌ ಲೆಂಥ್‌ ಡಿಸೈನರ್‌ವೇರ್ಸ್ ಸೆಲೆಕ್ಟ್ ಮಾಡಿ ಶಾರ್ಟ್ ಕುರ್ತಾ, ಆಂಕೆಲ್‌ ಲೆಂಥ್‌ ಚೂಡಿದಾರ್‌, ಸಲ್ವಾರ್‌ಗಳನ್ನು ಧರಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ ಮಳೆರಾಯ

Karnataka Weather Forecast : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ (Rain News) ರೈತರು ಕಂಗಲಾಗಿದ್ದಾರೆ. ಮಳೆಯ ಆರ್ಭಟಕ್ಕೆ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು ಜಮೀನುಗಳು ನೀರುಪಾಲಾಗಿವೆ.

VISTARANEWS.COM


on

By

karnataka Weather Forecast
Koo

ಹಾಸನ: ಮಳೆರಾಯ ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ್ದಾನೆ. ಮುಂದಿನ ಒಂದು ವಾರದಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ಹಾಸನದ ವಿವಿಧೆಡೆ ಕಳೆದ ರಾತ್ರಿಯಿಂದ ಧಾರಾಕಾರ ಮಳೆ ಸುರಿದಿದೆ. ಭಾರಿ ಮಳೆಗೆ ನಾಟಿ ಮಾಡಿದ್ದ ಭತ್ತದ ಸಸಿಗಳು ಕೊಚ್ಚಿ ಹೋಗಿವೆ. ಹಾಸನದ ಆಲೂರು ತಾಲೂಕಿನ ಬೆಂಬಳೂರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿದಿದೆ. ಭತ್ತದ ಗದ್ದೆಗಳಿಗೆ ಬಾರಿ ಪ್ರಮಾಣದ ನೀರು ನುಗ್ಗಿದೆ.

ನೀರಿನ‌ ರಭಸಕ್ಕೆ ಗದ್ದೆಯ ಬದುಗಳು ಕೊಚ್ಚಿ ಹೋಗಿವೆ. ನಾಟಿ ಮಾಡಲು ಸಿದ್ಧತೆ ನಡೆಸಿದ್ದ ರೈತರ ಆಸೆಗೆ ಮಳೆರಾಯ ತಣ್ಣೀರು ಎರಚಿದ್ದಾನೆ. ಐವತ್ತಕ್ಕೂ ಹೆಚ್ಚು ಎಕರೆ ಪ್ರದೇಶದ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದೆ. ಧಾರಾಕಾರ ಮಳೆಯಿಂದ ಕಂಗಾಲಾದ ರೈತರು ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: CM Siddaramaiah: ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ, ರೈತರಿಗೆ ತೊಂದರೆಯಾಗದಂತೆ ಕ್ರಮ: ಸಿಎಂ

ಸರ್ಕಾರಿ ಶಾಲೆ ಜಲಾವೃತ, ರಸ್ತೆಗಳೆಲ್ಲವೂ ಗುಂಡಿ ಮಯ

ನಿನ್ನೆ ಸುರಿದ ಮಳೆಗೆ ಸರ್ಕಾರಿ ಶಾಲೆಯೊಂದು ಜಲಾವೃತಗೊಂಡಿದೆ. ಬೆಂಗಳೂರಿನ ವರ್ತೂರಿನ ಸಿದ್ದಾಪುರ ಸರ್ಕಾರಿ ಶಾಲೆಯ ಆವರಣದ ಸುತ್ತಲೂ ಮಳೆ ನೀರು ನಿಂತಿತ್ತು. ಬೆಳಗ್ಗೆ ಶಾಲೆಗೆ ಬಂದ ಮಕ್ಕಳು, ಎರಡು ಗಂಟೆಗಳ‌ ಕಾಲ ಶಾಲಾ ಕೊಠಡಿಗಳು ಸ್ವಚ್ಚತೆ ಮಾಡಿದರು.

ಇತ್ತ ಮಳೆ ನಿಂತು ಹೋದಮೇಲೆ ಗುಂಡಿಗಳು ಬಿದ್ದಿವೆ. ಎರಡು ದಿನದಿಂದ ಸುರಿದ ಮಳೆಗೆ ಬೆಂಗಳೂರಿನ ಟೌನ್ ಹಾಲ್ ಎದುರೇ 50ಕ್ಕೂ ಹೆಚ್ಚು ರಸ್ತೆ ಗುಂಡಿ ಬಿದ್ದಿವೆ. ಬಿಬಿಎಂಪಿಯಿಂದ 500 ಮೀಟರ್ ದೂರದಲ್ಲಿರುವ ಟೌನ್ ಹಾಲ್‌ ಸುತ್ತಮುತ್ತ ಇರುವ ಗುಂಡಿಗಳು ಬೈಕ್ ಸವಾರರ ಪಾಲಿಗೆ ಮೃತ್ಯುಕೂಪವಾಗಿದೆ.

ಕ್ಯಾರೆ ಎನ್ನದ ಬಿಬಿಎಂಪಿ

ಗುಂಡಿ ಫೋಟೋ ತೆಗೆದು ಕಳಿಸಿ ಅಂದರೆ ಬಿಬಿಎಂಪಿ ಕೆಲಸ ಮುಗಿತಾ? ಕೇವಲ ಆ್ಯಪ್ ಮಾಡಿ ಕೈತೊಳೆದು ಕೊಳ್ಳುತ್ತಿದೆ. ಮೊಣಕಾಲು ಉದ್ದ ಗುಂಡಿ ಇದ್ದರೂ ಬಿಬಿಎಂಪಿ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಬೆಂಗಳೂರಿನ ಸಿಂಗಯ್ಯನಪಾಳ್ಯ ರಸ್ತೆಯ ಮಧ್ಯದಲ್ಲಿ ಯಮ ಸ್ವರೂಪಿ ಗುಂಡಿ ಬಿದ್ದಿದೆ. ಸ್ವಲ್ಪ ಎಚ್ಚರ ತಪ್ಪಿದ್ದರೂ, ಜೀವಕ್ಕೆ ಅಪಾಯ ಗ್ಯಾರಂಟಿ. ಇನ್‌ಸ್ಟಾಗ್ರಾಂ‌ಮ್‌ನಲ್ಲಿ ಪೋಸ್ಟ್ ಹಾಕಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Tungabhadra Dam: ಗೇಟ್‌ ರಿಪೇರಿಗಾಗಿ 60 ಟಿಎಂಸಿ ನೀರು ಖಾಲಿ, 8 ಜಿಲ್ಲೆಗಳ ರೈತರಿಗೆ ನೀರಿಲ್ಲ!

ನಾಳೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲೂ ಮಳೆಯು ಅಬ್ಬರಿಸಲಿದೆ. ಇತ್ತ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಸಾಥ್‌ ನೀಡಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

Theft case : ಹಾಸನದಲ್ಲಿ ಎಸ್ಟೇಟ್‌ ಮಾಲೀಕರ ಮನೆಯಲ್ಲಿ ಕಳ್ಳತನ; ಬಾಗಲಕೋಟೆಯಲ್ಲಿ ದರೋಡೆ ಮಾಡುವಾಗಲೇ ಖಾಕಿಗೆ ಲಾಕ್‌

Theft Case : ಹಾಸನದಲ್ಲಿ ಎಸ್ಟೇಟ್‌ ಮಾಲೀಕರ ಮನೆಗೆ ಕಳ್ಳರು ಕನ್ನ ಹಾಕಿದ್ದರೆ ಇತ್ತ ಬಾಗಲಕೋಟೆಯಲ್ಲಿ ದರೋಡೆಕೋರರ ಗ್ಯಾಂಗ್‌ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

VISTARANEWS.COM


on

By

theft case
Koo

ಹಾಸನ: ಎಸ್ಟೇಟ್‌ ಮಾಲೀಕರ ಮನೆಯಲ್ಲಿ ಕಳ್ಳರು (Theft Case) ತಮ್ಮ ಕೈಚಳಕ ತೋರಿಸಿದ್ದಾರೆ. ಸುಮಾರು ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಕಳ್ಳರು ಎಸ್ಕೇಪ್ ಕಾಲ್ಕಿತ್ತಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಎಸ್ಟೇಟ್‌ನಲ್ಲಿ ಘಟನೆ ನಡೆದಿದೆ.

ಸುಲೋಚನಾ ಪ್ರಕಾಶ ಎಂಬುವವರಿಗೆ ಸೇರಿದ ಮನೆಯಲ್ಲಿ ಕಳ್ಳತನವಾಗಿದೆ. ಇತ್ತೀಚೆಗಷ್ಟೇ ಸುಲೋಚನಾ ಅವರ ಪತಿ ಹಾಗೂ ಮಗ ಸಾವನ್ನಪ್ಪಿದ್ದರು. ಬೆಂಗಳೂರಿನಲ್ಲಿರುವ ಸೊಸೆ ಹಾಗೂ ಮೊಮ್ಮಕ್ಕಳನ್ನು ನೋಡಲು ತೆರಳಿದ್ದರು. ವಾಪಸ್‌ ಬಂದು ನೋಡಿದಾಗ ಮನೆ ಬೀಗ ಮುರಿದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕಳ್ಳರು ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ್ದಾರೆ.

ಬೀರುವಿನ ಲಾಕರ್ ಒಡೆದು ಹತ್ತು ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Gurmeet Ram Rahim: ಮತ್ತೆ ಜೈಲಿನಿಂದ ಹೊರಬಂದ ಗುರ್ಮೀತ್ ರಾಮ್​ ರಹೀಮ್​; ನಾಲ್ಕು ವರ್ಷಗಳಲ್ಲಿ 10ನೇ ಬಾರಿ ಪೆರೋಲ್‌!

ಬಾಗಲಕೋಟೆಯಲ್ಲಿ ಖತರ್ನಾಕ್‌ ದರೋಡೆಕೋರರ ಬಂಧನ

ಬಾಗಲಕೋಟೆ: ದಾರಿಹೋಕರಿಗೆ ಬೆದರಿಸಿ ದರೋಡೆ ನಡೆಸುತ್ತಿದ್ದ ಐವರು ಖದೀಮರ ಬಂಧನವಾಗಿದೆ. ಬಾಗಲಕೋಟೆಯ ಸಂಗಮ ಕ್ರಾಸ್‌ನಲ್ಲಿ ದರೋಡೆಗೆ ಸಂಚು ರೂಪಿಸಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.

ಈ ಗ್ಯಾಂಗ್‌ ಸಂಜೆ ವೇಳೆ ನಿರ್ಜನ ಪ್ರದೇಶದಲ್ಲಿ ರಸ್ತೆ ಬದಿ ತಮ್ಮದೇ ಎಕ್ಸ್‌ಯುವಿ 500 ವಾಹನ ನಿಲ್ಲಿಸಿಕೊಂಡು ಕಳ್ಳತನ ನಡೆಸುತ್ತಿದ್ದರು. ಒಬ್ಬಂಟಿಯಾಗಿ ಬರುವ ವಾಹನ ಚಾಲಕರನ್ನೇ ಟಾರ್ಗೆಟ್‌ ಮಾಡುತ್ತಿದ್ದರು. ವಾಹನಕ್ಕೆ ಅಡ್ಡಗಟ್ಟಿ ಏಕಾಏಕಿ ಕಾರದಪುಡಿ ಎರಚಿ ದಾಳಿ ಮಾಡುತ್ತಿದ್ದರು. ಬಳಿಕ ಚಾಲಕರ ಬಳಿ ಇರುವ ಹಣ, ಚಿನ್ನಾಭರಣವನ್ನು ಎಗರಿಸುತ್ತಿದ್ದರು.

ವಿಜಯಪುರ, ಬಾಗಲಕೋಟೆ, ನವಲಗುಂದಲ್ಲಿ ಕಳ್ಳತನ ನಡೆಸಿದ್ದ ಗ್ಯಾಂಗ್‌ ಅನ್ನು ಬಾಗಲಕೋಟೆ ಗ್ರಾಮಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಎಕ್ಸ್‌ಯುವಿ ವಾಹನ,1,51,000 ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ಖದೀಮರ ವಾಹನದಲ್ಲಿ ಕೊಡ್ಲಿ, ಖಡ್ಗ, ಕಾರದಪುಡಿ ಪತ್ತೆಯಾಗಿದೆ.

theft Case
theft Case

ಸಂಗಮ್ ಕ್ರಾಸ್ ಬಳಿ ಕಳ್ಳತನ ಯತ್ನದ ವೇಳೆ 6 ಜನರ ತಂಡ ಸಿಕ್ಕಿಬಿದ್ದಿದೆ. ಶ್ಯಾಮ ಯಮನಪ್ಪ ರತ್ನಾಕರ್, ಶ್ರೀಧರ್ ಹುಚ್ಚಪ್ಪ ಮಾದರ, ಸುರೇಶ್ ಸುಭಾಷ್ ಮಾದರ, ಸುನಿಲ್ ಸಿದ್ದಪ್ಪ ಮಾದರ ಹಾಗೂ ರಾಹುಲ್ ಸಿದ್ದಪ್ಪ ಮಾದರ ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೂ ಪರಾರಿಯಾಗಿರುವ ಆದಿತ್ಯ ಎಂಬಾತನಿಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ.

ಬಂಧಿತರೆಲ್ಲರೂ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿಟ್ನಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ. ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಈ ನಾಲ್ಕು ಜಿಲ್ಲೆಗಳಿಗೆ ಎಚ್ಚರಿಕೆ

Rain News: ಕರಾವಳಿ, ಮಲೆನಾಡು ಭಾಗದಲ್ಲಿ ವರುಣ ಸೈಲೆಂಟ್‌ ಆಗಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯು ವೈಲೆಂಟ್‌ ಆಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka Weather Forecast) ಸಾಧ್ಯತೆಯಿದ್ದು, ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮಧ್ಯಮ ಮಳೆಯಾದರೆ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಕೋಲಾರ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಮಧ್ಯಮದಿಂದ ಕೂಡಿದ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನಲ್ಲಿ ರಾಯಚೂರು, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಬೆಂಗಳೂರಲ್ಲಿ ವ್ಯಾಪಕ ಮಳೆ ಎಚ್ಚರಿಕೆ

ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Happy Independence day 2024
ಕ್ರೀಡೆ2 mins ago

Happy Independence day 2024: ಸ್ವಾತಂತ್ರ್ಯ ದಿನಾಚರಣೆಯಂದು ಒಲಿಂಪಿಯನ್​ಗಳನ್ನು ಭೇಟಿಯಾದ ಪ್ರಧಾನಿ ಮೋದಿ ಗೆ ಜೆರ್ಸಿ ಉಡುಗೊರೆ

Sbi Lending Rate
ದೇಶ5 mins ago

SBI Lending rate: SBI ಲೆಂಡಿಂಗ್‌ ದರದಲ್ಲಿ ಮತ್ತೆ ಏರಿಕೆ; ದುಬಾರಿಯಾಗಲಿದೆ EMI

Viral Video
Latest7 mins ago

Viral Video: ಮನೆಯ ಗೇಟ್ ಬಳಿ ಸಿಂಹಗಳು ಮತ್ತು ಸಾಕು ನಾಯಿಗಳ ಕಾದಾಟ; ಎದೆ ನಡುಗಿಸುವ ವಿಡಿಯೊ

ಕರ್ನಾಟಕ10 mins ago

Palestine Flag: ಕುಣಿಗಲ್‌ನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ!

Thangalaan Movie Review Pa Ranjith's Thangalaan
ಟಾಲಿವುಡ್11 mins ago

Thangalaan Movie: ಚಿಯಾನ್ ವಿಕ್ರಂ ‘ತಂಗಲಾನ್’ ಸಿನಿಮಾಗೆ ಮೆಚ್ಚುಗೆಯ ಮಹಾಪೂರ!

Lakshmi Hebbalkar
ಕರ್ನಾಟಕ12 mins ago

Lakshmi Hebbalkar: ದೇವರ ಹೆಸರಲ್ಲಿ‌ ಶಾಸಕ ಸುನಿಲ್ ಕುಮಾರ್ ರಾಜಕೀಯ; ಲಕ್ಷ್ಮೀ ಹೆಬ್ಬಾಳಕರ್ ಆರೋಪ

ಬೆಂಗಳೂರು22 mins ago

Physical Abuse : ಭೀಮಾ ಸಿನಿಮಾ ನೋಡಲು ಬಂದು ಲೇಡಿಸ್‌ ವಾಶ್‌ ರೂಂನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ!

Tungabhadra Dam
ಕರ್ನಾಟಕ53 mins ago

Tungabhadra Dam: ತುಂಗಭದ್ರಾ ಡ್ಯಾಂಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಚುರುಕು

Honey trap gang arrested in Bengaluru
ಬೆಂಗಳೂರು59 mins ago

Honey trap : ಮಿಸ್ ಕಾಲ್‌ನಲ್ಲೇ ಹುಡುಗರನ್ನು ಪಟಾಯಿಸುತ್ತಾಳೆ! ಮನೆಗೆ ಬಾ ಅಂತಾಳೆ ಸುಲಿಗೆ ಮಾಡ್ತಾಳೆ

Lakshmi Hebbalkar
ಕರ್ನಾಟಕ1 hour ago

Lakshmi Hebbalkar: ಯೋಜನೆಗಳು ನಿಲ್ಲದೆ ಮುಂದುವರಿಯಲಿವೆ; ಲಕ್ಷ್ಮೀ ಹೆಬ್ಬಾಳಕರ್ ‘ಗ್ಯಾರಂಟಿ’

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ7 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ7 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌