Independence Day 2024: ನಾಡಿನೆಲ್ಲೆಡೆ 78ನೇ ಸ್ವಾತಂತ್ರ್ಯ ದಿನಾಚರಣೆ; ಸಂಭ್ರಮದ ಕ್ಷಣಗಳು ಇಲ್ಲಿವೆ - Vistara News

ಕರ್ನಾಟಕ

Independence Day 2024: ನಾಡಿನೆಲ್ಲೆಡೆ 78ನೇ ಸ್ವಾತಂತ್ರ್ಯ ದಿನಾಚರಣೆ; ಸಂಭ್ರಮದ ಕ್ಷಣಗಳು ಇಲ್ಲಿವೆ

Independence Day 2024: ದೇಶದಾದ್ಯಂತ ಗುರುವಾರ 78ನೇ ಸ್ವಾತಂತ್ರ್ಯ ದಿನ ಆಚರಣೆ ಮಾಡಲಾಗಿದೆ. ಅದೇ ರೀತಿ ಕರ್ನಾಟಕದ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಸಂಘ-ಸಂಸ್ಥೆಗಳಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ಸ್ವಾತಂತ್ರ್ಯದ ಹಬ್ಬ ಆಚರಿಸಲಾಗಿದೆ.

VISTARANEWS.COM


on

Independence Day 2024
ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಧ್ವಜಾರೋಹಣ ನೆರವೇರಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day 2024) ಗುರುವಾರ ಸಂಭ್ರಮದಿಂದ ಆಚರಿಸಲಾಗಿದೆ. ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಸಂಘ-ಸಂಸ್ಥೆಗಳಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ಸ್ವಾತಂತ್ರ್ಯದ ಹಬ್ಬ ಆಚರಿಸಲಾಗಿದೆ. ಅಲ್ಲದೇ ದೇಶದ ಸ್ವಾತಂತ್ಯಕ್ಕಾಗಿ ಹೋರಾಡಿದ ಮಹಾನ್‌ ನಾಯಕರನ್ನು ಸ್ಮರಿಸುವ ಮೂಲಕ ಗೌರವ ಅರ್ಪಿಸಲಾಗಿದೆ.

ಶಾಲಾ-ಕಾಲೇಜುಗಳಲ್ಲಿ ಮಕ್ಕಳು ದೇಶಭಕ್ತಿ ಗೀತೆಗಳನ್ನು ಹಾಡಿ, ಸ್ವಾತಂತ್ರ್ಯ ಯೋಧರ ಕೊಡುಗೆಗಳನ್ನು ಸ್ಮರಿಸಿದರು. ಇನ್ನು ವಿದ್ಯಾರ್ಥಿಗಳು ಮಹಾತ್ಮ ಗಾಂಧಿ, ಸುಭಾಷ್‌ ಚಂದ್ರಬೋಸ್‌, ಭಗತ್‌ ಸಿಂಗ್‌, ಡಾ.ಬಿ.ಆರ್‌.ಅಂಬೇಡ್ಕರ್‌, ಜವಾಹರ್‌ಲಾಲ್‌ ನೆಹರು, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರ ವೇಷ ಭೂಷಣ ಧರಿಸಿ ಗಮನ ಸೆಳೆದರು. ಮೆರವಣಿಗೆ ನಡೆಸಿ, ಸಿಹಿ ಹಂಚುವ ಮೂಲಕ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ. ಇನ್ನು ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿದ್ದಾರೆ.

ದುಬೈನಲ್ಲೂ ಸ್ವಾತಂತ್ರ್ಯ ಹಬ್ಬದ ಸಂಭ್ರಮ

ದುಬೈನಲ್ಲೂ ಭಾರತೀಯರಿಂದ ಸ್ವಾತಂತ್ರ್ಯ ದಿನ ಆಚರಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೂಲದ ಫರ್ವೆಜ್ ಹಾಗೂ ಕುಟುಂಬದಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ.

ಧಾರವಾಡದ ಆರ್.ಎನ್. ಶೆಟ್ಟಿ ಮೈದಾನದಲ್ಲಿ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಧ್ವಜಾರೋಹಣ ನೆರವೇರಿಸಿದರು.

ಇದನ್ನೂ ಓದಿ | ಭೂಕುಸಿತ ಸಂಭವಿಸಬಹುದಾದ 1,351 ಗ್ರಾಮಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ; ಸ್ವಾತಂತ್ರೋತ್ಸವ ಭಾಷಣದಲ್ಲಿ ಸಿದ್ದರಾಮಯ್ಯ

ಚಿತ್ರದುರ್ಗದ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಡಿ.ಸುಧಾಕರ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳ 30 ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಸಚಿವ ಮಂಕಾಳು ವೈದ್ಯ ಅವರು ಮಹಾತ್ಮ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಧ್ವಜಾರೋಹಣ ನೆರವೇರಿಸಿದರು.
ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಧ್ವಜಾರೋಹಣ ನೆರವೇರಿಸಿದರು.
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಶರಣ ಬಸಪ್ಪಗೌಡ ದರ್ಶನಾಪುರ ಧ್ವಜಾರೋಹಣ ನೆರವೇರಿಸಿದರು.
ಕೋಲಾರ ನಗರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ರಾಷ್ಟ್ರ ಧ್ವಜಾರೋಹಣ ಮಾಡಿದರು.
ಚಾಮರಾಜನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಧ್ವಜಾರೋಹಣ ನೆರವೇರಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಸದ ಡಾ.ಸುಧಾಕರ್‌, ಸಚಿವ ಕೆ.ಎಚ್‌.ಮುನಿಯಪ್ಪ ಭಾಗಿಯಾಗಿದ್ದರು.

ಇದನ್ನೂ ಓದಿ | Independence Day 2024: ಹೊಸ ದಾಖಲೆ ಸೃಷ್ಟಿಸಿದೆ ಕೆಂಪುಕೋಟೆಯಲ್ಲಿನ ಮೋದಿ ಭಾಷಣದ ಅವಧಿ!

ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಶಿವಾನಂದ ಪಾಟೀಲ್‌ ಧ್ವಜಾರೋಹಣ ನೆರವೇರಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru Roads: ರಸ್ತೆ ಗುಂಡಿ ಮುಚ್ಚುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರಿಂದಲೇ ಮನವಿ!

Bengaluru Roads: ಬೆಂಗಳೂರಿನ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡ್‌ನ ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

VISTARANEWS.COM


on

Bengaluru Roads
Koo

ಬೆಂಗಳೂರು: ಸಚಿವರು ಸೂಚಿಸಿದರೆ ಯಾವುದೇ ಕೆಲಸ, ನಿಗದಿತ ಅವಧಿಯೊಳಗೆ ತ್ವರಿತವಾಗಿ ಮುಗಿಯುತ್ತದೆ. ಆದರೆ, ರಾಜಧಾನಿ ರಸ್ತೆಗಳ (Bengaluru Roads) ದುಸ್ಥಿತಿ ನೋಡಿ ದುರಸ್ತಿ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರೇ ಮನವಿ ಮಾಡಿರುವುದು ಕಂಡುಬಂದಿದೆ. ಹೀಗಾಗಿ ಇದು ಸರ್ಕಾರದ ಅಸಹಾಯಕತೆಯೋ? ಅಥವಾ ಸಚಿವರ ಅಸಹಾಯಕತೆಯೋ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಹೌದು, ನಗರದ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡ್‌ನ ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ಅವರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೊವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಬಿಬಿಎಂಪಿ ಆಯುಕ್ತರು ಅಥವಾ ಬಿಎಂಆರ್‌ಸಿಎಲ್‌ ಎಂಡಿ ಯಾರಾದರೂ ಆಗಲಿ, ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ತಿ ಮಾಡಿ, ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ಸಚಿವರು ಮನವಿ ಮಾಡಿದ್ದಾರೆ.

ರಸ್ತೆ ಗುಂಡಿ ಮುಚ್ಚುವಂತೆ ಸಾಮಾಜಿಕ ಜಾಲತಾಣದ ಮೂಲಕ ಅಧಿಕಾರಿಗಳಿಗೆ ಸಚಿವರು ಮನವಿ ಮಾಡಿರುವುದರಿಂದ ಇದು ಸರ್ಕಾರದ ಅಸಹಾಯಕತೆಯೋ? ಅಥವಾ ಸಚಿವರ ಅಸಹಾಯಕತೆಯೋ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಅತ್ತ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭಾಷಣ ಮಾಡುತ್ತಾರೆ. ಇತ್ತ ನೇರವಾಗಿ ಡಿ.ಕೆ.ಶಿವಕುಮಾರ್‌ಗೆ ಹೇಳಲಾಗದೆ, ಬಿಡಲಾಗದೇ ಸಚಿವರು ಒದ್ದಾಡುತ್ತಿದ್ದಾರೆ. ಮತ್ತೊಂದೆಡೆ ಸಾರ್ವಜನಿಕರ ಸಮಸ್ಯೆ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಕಣ್ಣೆತ್ತಿ ನೋಡುತ್ತಿಲ್ಲ ಎಂದು ಸಾರ್ವಜನಿಕರು ಅರೋಪಿಸಿದ್ದಾರೆ.

ಇದನ್ನೂ ಓದಿ | Bomb Threat: ಅಸ್ಸಾಂನ 19 ಕಡೆಗಳಲ್ಲಿ ಬಾಂಬ್‌ ಇರಿಸಿ, ಬಳಿಕ ನಿಷ್ಕ್ರೀಯಗೊಳಿಸುವಂತೆ ಮನವಿ ಮಾಡಿದ ಉಲ್ಫಾ ಉಗ್ರರು

ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ; ಸಿದ್ದರಾಮಯ್ಯ

Sangolli Rayanna Jayanthi

ಬೆಂಗಳೂರು: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜಯಂತ್ಯುತ್ಸವ (Sangolli Rayanna Jayanthi) ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಪ್ರಯುಕ್ತ ಇಂದು ನಗರದ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಸಂಗೊಳ್ಳಿ ರಾಯಣ್ಣನವರು ಸ್ವಾತಂತ್ರ್ಯೋತ್ಸವ ದಿನವಾದ ಆಗಸ್ಟ್ 15 ರಂದು ಜನಿಸಿದ್ದು, ಅವರು ಗಣರಾಜ್ಯೋತ್ಸವ ದಿನವಾದ ಜನವರಿ 26 ರಂದು ಹುತಾತ್ಮರಾದದ್ದು ವಿಶಿಷ್ಟ. ಮಹಾನ್ ರಾಷ್ಟ್ರಪ್ರೇಮಿ ಸಂಗೊಳ್ಳಿ ರಾಯಣ್ಣನವರ ಬದುಕು ನಮಗೆಲ್ಲರಿಗೂ ಸ್ಫೂರ್ತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: SBI Lending rate: SBI ಲೆಂಡಿಂಗ್‌ ದರದಲ್ಲಿ ಮತ್ತೆ ಏರಿಕೆ; ದುಬಾರಿಯಾಗಲಿದೆ EMI

ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಶ್ರೀಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಮಳೆ

Karnataka Rain: ಗಂಗಾವತಿಯಲ್ಲಿ ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು; ಭತ್ತದ ಗದ್ದೆಗಳಿಗೆ ಹಾನಿ

Karnataka Rain: ಗಂಗಾವತಿಯಲ್ಲಿ ಬುಧವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಗೆ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾದರೆ, ಮಳೆ ನೀರಿನಿಂದ ಅಪಾರ ಪ್ರಮಾಣದ ಭತ್ತದ ಗದ್ದೆಗಳಿಗೆ ಹಾನಿಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Karnataka Rain
Koo

ಗಂಗಾವತಿ: ಬುಧವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಗೆ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾದರೆ, ಮಳೆ (Karnataka Rain) ನೀರಿನಿಂದ ಅಪಾರ ಪ್ರಮಾಣದ ಭತ್ತದ ಗದ್ದೆಗಳಿಗೆ ಹಾನಿಯಾಗಿದೆ.

ತಾಲೂಕಿನ ಗ್ರಾಮೀಣ ಭಾಗದಲ್ಲಿ ಈಗಷ್ಟೆ ಭತ್ತ ನಾಟಿ ಮಾಡಲಾಗಿದ್ದ ಸಾವಿರಾರು ಎಕರೆ ಪ್ರದೇಶದಲ್ಲಿ ಹೊಲ-ಗದ್ದೆಗಳಲ್ಲಿ ಅಪಾರ ಪ್ರಮಾಣ ಮಳೆ ನೀರು ನಿಂತು ಹಾನಿಯಾಗಿದೆ. ಸಸಿಮಡಿಗಳು ಮಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ.

ಆನೆಗೊಂದಿ, ಮಲ್ಲಾಪುರ, ಸಣಾಪುರ, ರಾಂಪುರ, ಸಂಗಾಪುರ, ಕಣಿವೆ ಆಂಜನೇಯ ದೇಗುಲ, ಗಂಗಾವತಿ, ಅಯೋಧ್ಯೆ, ಢಣಾಪುರ, ಚಿಕ್ಕಜಂತಕಲ್, ಬಸವಪಟ್ಟಣ, ವಡ್ಡರಹಟ್ಟಿ, ಮರಳಿ, ಕಲ್ಗುಡಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಭತ್ತದ ಗದ್ದೆಗಳು ನಾಶವಾಗಿವೆ.

ಇದನ್ನೂ ಓದಿ: Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

ಬುಧವಾರ ರಾತ್ರಿಯಿಂದ ಆರಂಭವಾದ ಮಳೆ ಬೆಳಗಿನ ಜಾವದವರೆಗೂ ನಿರಂತರ ಸುರಿದಿದೆ. ಹೀಗಾಗಿ ಗಂಗಾವತಿ ನಗರದ ಸುತ್ತಲೂ ಇರುವ ಬೆಟ್ಟದ ಪ್ರದೇಶದಿಂದ ಅಪಾರ ಪ್ರಮಾಣ ಮಳೆ ನೀರು ಜನವಸತಿ ಪ್ರದೇಶಕ್ಕೆ ಹರಿದು ಹಾನಿ ಸಂಭವಿಸಿದೆ.

ನಗರದ ಕಿಲ್ಲಾ ಏರಿಯಾ, ಹಿರೇಜಂತಕಲ್, ಮಹೆಬೂಬನಗರ, ಅಂಗಡಿಸಂಗಣ್ಣ ಕ್ಯಾಂಪ್, ರಾಮಲಿಂಗೇಶ್ವರ ಕ್ಯಾಂಪ್, ನೀಲಕಂಠೇಶ್ವರ ಕ್ಯಾಂಪ್, ಎಚ್ಆರ್‌ಎಸ್‌ ಕಾಲೋನಿ, ಗೌಸೀಯಾ ಕಾಲೋನಿ ಸೇರಿದಂತೆ ಕೊಳಚೆ ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿ ದವಸ-ಧಾನ್ಯ ಹಾನಿಯಾಗಿವೆ ಎಂದು ತಿಳಿದುಬಂದಿದೆ.

ಇದರ ಜತೆ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ನಂಬರ್ 19 ಕಿತ್ತು ಹೋಗಿರುವ ಕಾರಣಕ್ಕೆ ಜಲಾಶಯದ ಭದ್ರತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಎಸ್ಕೇಪ್ ಛಾನಲ್ ಮೂಲಕ ಹರಿಸಿದ್ದರ ಪರಿಣಾಮ ಅಪಾರ ಪ್ರಮಾಣದ ನೀರು ಗಂಗಾವತಿ ನಗರ ಪ್ರದೇಶಕ್ಕೆ ನುಗ್ಗಿದೆ. ಪರಿಣಾಮ ನಗರದ ದುರುಗಮ್ಮನ ಹಳ್ಳ ತುಂಬಿ ಹರಿಯುತ್ತಿದ್ದು, ಸಮೀಪದ ರಸ್ತೆಗಳು ಕೂಡ ಜಲಾವೃತವಾಗಿವೆ. ಇನ್ನು ಕಣಿವೆ ಆಂಜನೇಯ ದೇವಸ್ಥಾನದ ಸುತ್ತಲಿನ ಹೊಲಗಳಲ್ಲಿ ಅಪಾರ ಪ್ರಮಾಣ ಮಳೆ ನೀರು ರಭಸವಾಗಿ ಹರಿದ ಪರಿಣಾಮ ಭೂಮಿಯ ಸಾರ ಉಳ್ಳ ಮೇಲ್ಮೈ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಕೇವಲ ಮರಳು, ಕಲ್ಲು ಬಂಡೆಯ ಅವಶೇಷಗಳು ಉಳಿದುಕೊಂಡಿದೆ.

72 ಎಂ.ಎಂ. ಮಳೆ

ಬುಧವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯ ಪ್ರಮಾಣ ದಾಖಲೆ ನಿರ್ಮಿಸಿದೆ. ಗಂಗಾವತಿ ಮಳೆ ಮಾಪನ ಕೇಂದ್ರದಲ್ಲಿ ದಾಖಲಾದ ಮಾಹಿತಿ ಪ್ರಕಾರ ಗಂಗಾವತಿಯಲ್ಲಿ ಒಂದೇ ದಿನ ರಾತ್ರಿ ಒಟ್ಟು 72.5 ಮಿ.ಮೀ. ಪ್ರಮಾಣದಷ್ಟು ಮಳೆಯಾಗಿದೆ.

ಇತ್ತೀಚಿನ ವರ್ಷದಲ್ಲಿ ಒಂದೇ ದಿನ ಇಷ್ಟು ಮಳೆಯಾಗಿದ್ದು ಐತಿಹಾಸಿಕ ದಾಖಲೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಮರಳಿ ಮಳೆ ಮಾಪನ ಕೇಂದ್ರದಲ್ಲಿ 26.3 ಮಿ.ಮೀ. ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬುಧವಾರ ರಾತ್ರಿ ಸುರಿದ ಅಪಾರ ಪ್ರಮಾಣ ಮಳೆಗೆ ಮನೆ, ಮತ್ತು ಹೊಲ-ಗದ್ದೆಗಳಿಗೆ ಹಾನಿಯಾಗಿರುವ ಪ್ರಾಥಮಿಕ ಮಾಹಿತಿ ಇದೆ. ಹಾನಿಯ ಕುರಿತು ಮತ್ತಷ್ಟು ಮಾಹಿತಿ ಸಂಗ್ರಹಿಸಲಾಗುವುದು ಎಂದು ತಹಸೀಲ್ದಾರ್ ಯು. ನಾಗರಾಜ್ ತಿಳಿಸಿದ್ದಾರೆ.

Continue Reading

ಮಳೆ

Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

Karnataka Weather Forecast: ವರಮಹಾಲಕ್ಷ್ಮಿ ಹಬ್ಬದ (Varamahalakshim Fest) ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಎಲ್ಲ ಸಾಧ್ಯತೆಯೂ ಇದೆ. ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
ಜಲಾವೃತಗೊಂಡ ಸರ್ಕಾರಿ ಪ್ರಾಥಮಿಕ ಶಾಲೆ.. ನಿಂತ ನೀರಲ್ಲೇ ಧ್ವಜಾರೋಹಣ ಮಾಡಿದ ಮಕ್ಕಳು
Koo

ಚಿಕ್ಕೋಡಿ: ಗುರುವಾರ ಸಂಜೆ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮಳೆ (Rain news) ಅಬ್ಬರ ಜೋರಾಗಿತ್ತು. ಚಿಕ್ಕೋಡಿ, ನಿಪ್ಪಾಣಿ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಕಳೆದ ಒಂದು ವಾರದಿಂದ ವಿರಾಮ ನೀಡಿದ್ದ ಮಳೆ (karnataka weather Forecast) ಅಬ್ಬರಿಸಿತ್ತು.

ಶಾಲಾ ಆವರಣದಲ್ಲಿ ನಿಂತ ನೀರು

ರಾತ್ರಿ ಸುರಿದ ಮಳೆಯು ಅವಾಂತರವೇ ಸೃಷ್ಟಿಯಾಗಿದೆ. ಶಾಲಾ ಆವರಣದಲ್ಲಿ ನಿಂತ ನೀರಲ್ಲೇ ವಿದ್ಯಾರ್ಥಿಗಳು ಧ್ವಜಾರೋಹಣ ನೆರವೇರಿಸಿದರು. ಬಾಗಲಕೋಟೆಯ ಜಮಖಂಡಿಯ ಲಿಂಗದಕಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಇತ್ತ ನಿನ್ನೆ ಬುಧವಾರ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳೆಗಳು ಜಲಾವೃತಗೊಂಡಿತ್ತು. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗುಂಡಾ ಗ್ರಾಮ ಹೊಲಗಳಿಗೆ ಹಳ್ಳದ ನೀರು ನುಗ್ಗಿತ್ತು. ರೈತ ಬಸವರಾಜ್ ಎಂಬುವವರಿಗೆ ಸೇರಿದ ನಾಲ್ಕೈದು ಎಕರೆ ಜಮೀನು ಜಲಾವೃತಗೊಂಡಿದೆ. ಹಿರೆಹಳ್ಳ ಒಡೆದು ಜಮೀನಿಗೆ ನೀರು ನುಗ್ಗಿದ ಪರಿಣಾಮ ಬೋರ್ ವೆಲ್ ಪೈಪ್ ಗಳು ಸೇರಿ ಮೆಕ್ಕೆಜೋಳ ಬೆಳೆ ಕೊಚ್ಚಿ ಹೋಗಿದೆ. ಮಳೆಗಾಲದಲ್ಲಿ ಹಳ್ಳದ ಮೂಲಕ ಗಣಿ ತ್ಯಾಜ್ಯ ಸಹ ಹರಿದು ಬಂದು ಜಮೀನುಗಳಲ್ಲಿ ಶೇಕರಣೆ ಆಗುತ್ತಿದೆ. ಇದರಿಂದಾಗಿ ಭೂಮಿ ಬೆಳೆ ಬೆಳೆಯಲು ಯೋಗ್ಯ ಇಲ್ಲದಂತಾಗಿದೆ.

ಇತ್ತ ಭಾರಿ ಮಳೆಯಿಂದ ನಾಗಲಾಪುರ ಹಳ್ಳ ಮೈದುಂಬಿ ಹರಿಯುತ್ತಿದ್ದು, ನಾಗಲಾಪೂರ- ಬ್ಯಾಲಕುಂದಿ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದ 5 ಹಳ್ಳಿಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಸೇತುವೆ ಮೇಲ್ಭಾಗದಲ್ಲಿ 7 ಅಡಿಗಳಷ್ಟು ಹರಿಯುತ್ತಿರುವ ನೀರಿನಿಂದಾಗಿ ನಾಗಲಾಪುರ, ನಾಗಲಾಪುರ ತಾಂಡಾ, ಬ್ಯಾಲಕುಂದಿ, ಗೊಲ್ಲರಹಳ್ಳಿ ಹಾಗೂ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಈ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ

ಶುಕ್ರವಾರದಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾಸನ, ಬಳ್ಳಾರಿ, ತುಮಕೂರು, ಮೈಸೂರು, ಕೊಡಗು ಜಿಲ್ಲೆಗಳಲ್ಲೂ ಪ್ರತ್ಯೇಕವಾಗಿ ಭಾರಿ ವರ್ಷಾಧಾರೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Electric Shock: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ಹೋಗುವಾಗ ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು

Electric Shock: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಎಚ್. ಕಾವಲ್ ಬಳಿ ಅವಘಡ ನಡೆದಿದೆ. ಕೆಇಬಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ವಿದ್ಯಾರ್ಥಿ ಸಾವಾಗಿದೆ ಎಂದು ಪೋಷಕರು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

Electric Shock
Koo

ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ತೆರಳುವಾಗ ವಿದ್ಯುತ್ ತಗುಲಿ 2ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ (Electric Shock) ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಎಚ್. ಕಾವಲ್ ಬಳಿ ನಡೆದಿದೆ. ಹೇಮಂತ್ (8) ಮೃತ ವಿದ್ಯಾರ್ಥಿ.

ಎಚ್.ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹೇಮಂತ್ 2ನೇ ತರಗತಿ ಓದುತ್ತಿದ್ದ. ಇಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ ಶಾಲೆಗೆ ವಿದ್ಯಾರ್ಥಿ ತೆರಳಿದ್ದ. ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುವಾಗ ರಸ್ತೆ ಭಾಗದಲ್ಲಿ ಅಳವಡಿಸಿದ್ದ ವಿದ್ಯುತ್ ಕಂಬದ ವೈರ್‌ ತಗುಲಿ ಬಾಲಕ ಸ್ಥಳದಲ್ಲೇ ಸಾವು ಮೃತಪಟ್ಟಿದ್ದಾನೆ.

ಹಲವು ಬಾರಿ ವಿದ್ಯುತ್ ಕಂಬ ಸರಿಪಡಿಸುವಂತೆ ಕೆಇಬಿ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಆದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಕೆಇಬಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ವಿದ್ಯಾರ್ಥಿ ಸಾವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಮೃತ ಹೇಮಂತ್ ಪೋಷಕರು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಅವರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು. ಕೆಇಬಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Palestine Flag: ಕುಣಿಗಲ್‌ನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ!

ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಆನೇಕಲ್‌: ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಶಾಕ್‌ನಿಂದ (Electric shock) ಯುವ ಎಂಜಿನಿಯರ್ ಮೃತಪಟ್ಟಿದ್ದಾರೆ. ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ನಿವಾಸಿ ಎಂಜಿನಿಯರ್ ಕೌಶಿಕ್ (27) ಮೃತ ದುರ್ದೈವಿ.

ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ಕೌಶಿಕ್‌ಗೆ ವಿದ್ಯುತ್ ತಗುಲಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ಅವರನ್ನು ನಾರಾಯಣ ಹೆಲ್ತ್ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಂಪನಿಯಲ್ಲಿ ಕೆಲಸ ಮಾಡಬೇಕಾದರೆ ಯಾವುದೇ ಸುರಕ್ಷತೆ ಇಲ್ಲದಿರುವುದೇ ಈ ದುರ್ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಮೂರು ತಿಂಗಳಿಂದ ವರ್ಕ್ ಪ್ರೆಷರ್ ಜಾಸ್ತಿ ಇತ್ತು. ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹೋದರೆ ರಾತ್ರಿ 12ಕ್ಕೆ ವಾಪಸ್‌ ಆಗುತ್ತಿದ್ದರು. ವರ್ಕ್ ಲೋಡ್ ಜಾಸ್ತಿ ಇದ್ದು, ವಿಶ್ರಾಂತಿ ಇಲ್ಲದೆ ಕೆಲಸ ಮಾಡುತ್ತಿದ್ದ. ನಿನ್ನೆ ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹೋದ ಮಗ ಈಗ ಹೆಣವಾಗಿದ್ದಾನೆ. ರಾತ್ರಿ 10 ಗಂಟೆಗೆ ಫೋನ್ ಮಾಡಿದಾಗ ತಡವಾಗುತ್ತೆ ಬರುತ್ತೇನೆ ಎಂದಿದ್ದ. 11:30 ರ ಸುಮಾರಿಗೆ ಸಂಬಂಧಿಕರು ಆಸ್ಪತ್ರೆ ಬಳಿ ಕರೆ ತಂದರು. ನನಗೆ ನನ್ನ ಮಗ ಬೇಕು, ವಾಪಸ್ ತಂದು ಕೊಡಿ ಎಂದು ತಾಯಿ ಸುಜಾತಾ ಮಗನ ನೆನೆದು ಕಣ್ಣೀರು ಹಾಕಿದರು.

ಇದನ್ನೂ ಓದಿ: Physical Abuse : ಭೀಮಾ ಸಿನಿಮಾ ನೋಡಲು ಬಂದು ಲೇಡಿಸ್‌ ವಾಶ್‌ ರೂಂನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ!

ದಾವಣಗೆರೆಯಲ್ಲಿ ಅನುಮಾನನಾಸ್ಪಾದ ರೀತಿಯಲ್ಲಿ ಮಹಿಳೆ ಸಾವು

Electric shock
Electric shock

ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ಇದೆ. ಸುಮಲತಾ (30) ಮೃತ ದುರ್ದೈವಿ. ದಾವಣಗೆರೆ ನಗರದ ವಿವೇಕಾನಂದ ಬಡಾವಣೆಯ ಮನೆಯಲ್ಲಿ ಘಟನೆ ನಡೆದಿದೆ. ಪತಿ ಶಿವಮೂರ್ತಿ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಸುಮಲತಾಳನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಮೃತ ಸಂಬಂಧಿಕರು ಆರೋಪಿಸಿದ್ದಾರೆ. ಇತ್ತ ಪತಿ ಶಿವಮೂರ್ತಿ ಅನಾರೋಗ್ಯದ ಕಾರಣ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದು, ಶಿವಮೂರ್ತಿ ಕುಟುಂಬ ಸದಸ್ಯರು ನಾಪತ್ತೆಯಾಗಿದ್ದಾರೆ.

ಕಳೆದ ಹನ್ನೆರಡು ವರ್ಷಗಳ ಹಿಂದೆ ಸುಮಲತಾ ಹಾಗೂ ಶಿವಮೂರ್ತಿ ಮದುವೆ ಆಗಿದ್ದರು. ಶಿವಮೂರ್ತಿ ಮೊದಲ ಪತ್ನಿ ನಿಧನದ ನಂತರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಸುಮಲತಾಳ ಅನ್ನು ಮದುವೆ ಆಗಿದ್ದ. ಮೊದಲ ಪತ್ನಿಯ ಮೂವರು ಮಕ್ಕಳು, ಸುಮಲತಾ ಹಾಗೂ ಪತಿ ಶಿವಮೂರ್ತಿ ಒಂದೇ ಮನೆಯಲ್ಲಿ ವಾಸವಿದ್ದರು. ಮಕ್ಕಳು ದೊಡ್ಡವರಾದ ಬಳಿಕ ಶಿವಮೂರ್ತಿ ಪತ್ನಿ ಸುಮಲತಾಳಿಗೆ ಕಿರುಕುಳ‌ ನೀಡಲು ಶುರು ಮಾಡಿದ್ದ ಎನ್ನಲಾಗಿದೆ. ಸದ್ಯ ಆತ ಬರುವ ತನಕ ಶವ ತೆಗೆದುಕೊಂಡು ಹೋಗಲ್ಲ ಎಂದು ಸುಮಲತಾಳ ಸಂಬಂಧಿಕರು ಪಟ್ಟು ಹಿಡಿದಿದ್ದರು. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bengaluru Roads
ಕರ್ನಾಟಕ13 mins ago

Bengaluru Roads: ರಸ್ತೆ ಗುಂಡಿ ಮುಚ್ಚುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರಿಂದಲೇ ಮನವಿ!

Wildlife
ಪರಿಸರ13 mins ago

Wildlife: ಹುಟ್ಟಿದ ತಕ್ಷಣ ತಾಯಿಯನ್ನೇ ಕೊಂದು ತಿನ್ನುವ ಜೀವಿ ಇದು!

Karnataka Rain
ಮಳೆ20 mins ago

Karnataka Rain: ಗಂಗಾವತಿಯಲ್ಲಿ ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು; ಭತ್ತದ ಗದ್ದೆಗಳಿಗೆ ಹಾನಿ

Gold Rate
ಪ್ರಮುಖ ಸುದ್ದಿ22 mins ago

Gold Rate : ಬೆಲೆ ಏರಿಕೆ ಪರಿಣಾಮ; ಏಪ್ರಿಲ್-ಜುಲೈನಲ್ಲಿ ಚಿನ್ನದ ಆಮದು ಶೇ.4.23ರಷ್ಟು ಇಳಿಕೆ

Viral Video
Latest27 mins ago

‌Richard Lugner: ಇತ್ತೀಚೆಗಷ್ಟೆ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯಾಧೀಶ ಇನ್ನಿಲ್ಲ!

Viral News
Latest35 mins ago

Viral News: ಈತ 610 ಕೆಜಿ ಇದ್ದ, ಈಗ 63 ಕೆಜಿಗೆ ಇಳಿದಿದ್ದಾನೆ! 30 ವೈದ್ಯರ ತಂಡದ ಕಾರ್ಯಾಚರಣೆ!

Sexual Abuse
Latest42 mins ago

Sexual Abuse: ಲೈಂಗಿಕ ಕಿರುಕುಳ ನೀಡಿದವನನ್ನು ನಡು ರಸ್ತೆಯಲ್ಲಿ ಥಳಿಸಿದ ಅಕ್ಕತಂಗಿ; ವಿಡಿಯೊ ವೈರಲ್

Paris Paralympics
ಪ್ರಮುಖ ಸುದ್ದಿ59 mins ago

Paris Paralympics : ಪ್ಯಾರಾಲಿಂಪಿಕ್ಸ್​​ನಲ್ಲಿ 12 ಕ್ರೀಡೆಗಳಲ್ಲಿ ಭಾಗವಹಿಸಲಿದೆ ಭಾರತ

karnataka Weather Forecast
ಮಳೆ1 hour ago

Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

Electric Shock
ಕರ್ನಾಟಕ2 hours ago

Electric Shock: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ಹೋಗುವಾಗ ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌