PM Narendra Modi: ಬೆಂಗಳೂರಿಗೆ ಸಿಹಿ ಸುದ್ದಿ; ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಅಸ್ತು; ರಾಜ್ಯಕ್ಕೆ ಪ್ರಧಾನಿ ಮೋದಿ ವರಮಹಾಲಕ್ಷ್ಮಿ ಹಬ್ಬದ ಕೊಡುಗೆ - Vistara News

ಪ್ರಮುಖ ಸುದ್ದಿ

PM Narendra Modi: ಬೆಂಗಳೂರಿಗೆ ಸಿಹಿ ಸುದ್ದಿ; ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಅಸ್ತು; ರಾಜ್ಯಕ್ಕೆ ಪ್ರಧಾನಿ ಮೋದಿ ವರಮಹಾಲಕ್ಷ್ಮಿ ಹಬ್ಬದ ಕೊಡುಗೆ

PM Narendra Modi: ಉದ್ದೇಶಿತ ಕಾರಿಡಾರ್‌-1ರಡಿ ಜೆ.ಪಿ.ನಗರ 4ನೇ ಹಂತದಿಂದ ಹೊರವರ್ತುಲ ರಸ್ತೆ ಮೂಲಕ ಹೆಬ್ಬಾಳದ ಕೆಂಪಾಪುರದವರೆಗೆ 32.15 ಕಿ.ಮೀ ಉದ್ದದ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ. ಕಾರಿಡಾರ್‌-2ರಡಿ ಹೊಸಹಳ್ಳಿಯಿಂದ ಮಾಗಡಿ ರಸ್ತೆಯ ಕಡಬಗೆರೆವರೆಗೆ 12.50 ಕಿ.ಮೀ. ಉದ್ದದ ಮಾರ್ಗ ನಿರ್ಮಿಸಲಾಗುತ್ತಿದೆ.

VISTARANEWS.COM


on

namma metro pm narendra modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʼನಮ್ಮ ಮೆಟ್ರೋ’ದ (Namma Metro) ಬಹುನಿರೀಕ್ಷಿತ ಮೂರನೇ ಹಂತದ ಯೋಜನೆಗೆ ಕೇಂದ್ರ ಸಚಿವ ಸಂಪುಟ (Central Cabinet) ಶುಕ್ರವಾರ ಅನುಮೋದನೆ ನೀಡಿದೆ. ಈ ಮೂರನೇ ಹಂತದಲ್ಲಿ ಹೊಸದಾಗಿ ಎರಡು ಕಾರಿಡಾರ್‌ಗಳಲ್ಲಿ 44.65 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ. ಇದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ನೀಡಿರುವ ವರಮಹಾಲಕ್ಷ್ಮಿ (Varamahalkshmi Festival) ಹಬ್ಬದ ಕೊಡುಗೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಸಂತಸ ವ್ಯಕ್ತಪಡಿಸಿದ್ದಾರೆ.

“ಬಹು ನಿರೀಕ್ಷಿತ ₹15,611 ಕೋಟಿ ವೆಚ್ಚದ ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-3ರ ಎರಡು ಪಥಗಳ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಇದಕ್ಕಾಗಿ ನಾನು ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ. ಕೇಂದ್ರ ಸರಕಾರವು ಬೆಂಗಳೂರು ನಗರದ ಜನತೆಗೆ ನೀಡಿರುವ ವರ ಮಹಾಲಕ್ಷ್ಮೀ ಹಬ್ಬದ ಉಡುಗೊರೆ ಎಂದೇ ನಾನು ಭಾವಿಸಿದ್ದೇನೆ. ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಸಾಕಷ್ಟು ಉತ್ತೇಜನ ನೀಡುತ್ತಿರುವ ಮಾನ್ಯ ಪ್ರಧಾನಿಗಳಿಗೆ ನನ್ನ ಧನ್ಯವಾದಗಳು” ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಸಂಸದರಾದ ಬಸವರಾಜ ಬೊಮ್ಮಾಯಿ, ಪಿಸಿ ಮೋಹನ್, ತೇಜಸ್ವಿ ಸೂರ್ಯ ಕೂಡ ಇದನ್ನು ಸ್ವಾಗತಿಸಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಎಲ್ಲಿಂದ ಎಲ್ಲಿವರೆಗೆ ಮೆಟ್ರೋ ಮಾರ್ಗ?

ಉದ್ದೇಶಿತ ಕಾರಿಡಾರ್‌-1ರಡಿ ಜೆ.ಪಿ.ನಗರ 4ನೇ ಹಂತದಿಂದ ಹೊರವರ್ತುಲ ರಸ್ತೆ ಮೂಲಕ ಹೆಬ್ಬಾಳದ ಕೆಂಪಾಪುರದವರೆಗೆ 32.15 ಕಿ.ಮೀ ಉದ್ದದ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ. ಈ ಮಾರ್ಗದಲ್ಲಿ ಒಟ್ಟು 21 ನಿಲ್ದಾಣಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಜೆ.ಪಿ.ನಗರ 4ನೇ ಹಂತ-ಕೆಂಪಾಪುರ ಮೆಟ್ರೋ ಮಾರ್ಗವು ಕೆ.ಆರ್‌.ಪುರ-ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದೊಂದಿಗೆ ಸಂಪರ್ಕ ಬೆಸೆಯಲಿದೆ. ಅಲ್ಲದೆ, ಹಸಿರು ಬಣ್ಣದ ಮಾರ್ಗಕ್ಕೂ ಸಂಪರ್ಕ ಬೆಸೆಯಲಿದೆ. ಸಾರಕ್ಕಿ ಜಂಕ್ಷನ್‌ನಲ್ಲೂ ಇಂಟರ್‌ಚೇಂಜ್‌ ನಿಲ್ದಾಣ ನಿರ್ಮಾಣವಾಗುವ ಸಾಧ್ಯತೆಗಳಿವೆ.

ಕಾರಿಡಾರ್‌-2ರಡಿ ಹೊಸಹಳ್ಳಿಯಿಂದ ಮಾಗಡಿ ರಸ್ತೆಯ ಕಡಬಗೆರೆವರೆಗೆ 12.50 ಕಿ.ಮೀ. ಉದ್ದದ ಮಾರ್ಗ ನಿರ್ಮಿಸಲಾಗುತ್ತಿದೆ. ಈ ಮಾರ್ಗದಲ್ಲಿ ಒಟ್ಟು 9 ನಿಲ್ದಾಣಗಳು ಇರಲಿವೆ. ಈ ಮೆಟ್ರೋ ಯೋಜನೆಯು ಉಪನಗರ ರೈಲು, ಬಸ್‌ ನಿಲ್ದಾಣ, ಮೆಟ್ರೋ ನಿಲ್ದಾಣ ಸೇರಿದಂತೆ 9 ಕಡೆ ಸಂಪರ್ಕ ಕಲ್ಪಿಸುತ್ತದೆ. ಸುಮನಹಳ್ಳಿ ಜಂಕ್ಷನ್‌ನಲ್ಲಿ ಇಂಟರ್‌ಚೇಂಜ್‌ ನಿಲ್ದಾಣ ನಿರ್ಮಾಣವಾಗಲಿದೆ.

ಮೆಟ್ರೋ 3ನೇ ಹಂತದ ಯೋಜನೆಗೆ 15,611 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದ್ದು, 2029ಕ್ಕೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಮೆಟ್ರೋ 3ನೇ ಹಂತದಡಿ 44.65 ಕಿ.ಮೀ. ಮಾರ್ಗ ನಿರ್ಮಾಣದೊಂದಿಗೆ ಬೆಂಗಳೂರಿನ ಮೆಟ್ರೋ ಜಾಲವು 220.20 ಕಿ.ಮೀ.ಗೆ ವಿಸ್ತರಿಸಲ್ಪಡಲಿದೆ. ಈ ಬಹುನಿರೀಕ್ಷಿತ ಮೆಟ್ರೋ ಯೋಜನೆಗೆ ಕೇಂದ್ರ ಸಚಿವ ಸಂಪುಟವು ಒಪ್ಪಿಗೆ ಕೊಟ್ಟಿದೆ.

ಕಾರಿಡಾರ್‌-1ರಲ್ಲಿನ ನಿಲ್ದಾಣಗಳು

ಜೆ.ಪಿ.ನಗರ 4ನೇ ಹಂತ, ಜೆ.ಪಿ.ನಗರ 5ನೇ ಹಂತ, ಜೆ.ಪಿ.ನಗರ, ಕದಿರೇನಹಳ್ಳಿ, ಕಾಮಾಕ್ಯ ಬಸ್‌ ನಿಲ್ದಾಣ, ಹೊಸಕೆರೆಹಳ್ಳಿ ಕ್ರಾಸ್‌, ಪಿಇಎಸ್‌ ಕಾಲೇಜು, ಮೈಸೂರು ರಸ್ತೆಯ ನಾಗರಬಾವಿ ವೃತ್ತ, ವಿನಾಯಕ ಲೇಔಟ್‌, ಅಂಬೇಡ್ಕರ್‌ ಇನ್ಸ್‌ಟಿಟ್ಯೂಟ್‌ ಆಫ್‌ ಎಂಜಿನಿಯರಿಂಗ್‌ ಕಾಲೇಜು, ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್‌, ಸುಮನಹಳ್ಳಿ ಜಂಕ್ಷನ್‌, ಚೌಡೇಶ್ವರಿನಗರ, ಫ್ರೀಡಂ ಫೈಟರ್‌ ಕ್ರಾಸ್‌, ಕಂಠೀರವ ಸ್ಟುಡಿಯೋ, ಪೀಣ್ಯ, ಬಾಹುಬಲಿನಗರ, ಬಿಇಎಲ್‌ ವೃತ್ತ, ಪಟೇಲಪ್ಪ ಲೇಔಟ್‌, ಹೆಬ್ಬಾಳ, ಕೆಂಪಾಪುರ.

ಕಾರಿಡಾರ್‌-2ರಲ್ಲಿನ ನಿಲ್ದಾಣಗಳು

ಹೊಸಹಳ್ಳಿ, ಕೆಎಚ್‌ಬಿ ಕಾಲೋನಿ, ವಿನಾಯಕ ನಗರ, ಸುಮನಹಳ್ಳಿ ಜಂಕ್ಷನ್‌, ಸುಂಕದಕಟ್ಟೆ, ಹೇರೋಹಳ್ಳಿ, ಬ್ಯಾಡರಹಳ್ಳಿ, ಫಾರೆಸ್ಟ್‌ ಗೇಟ್‌, ಕಡಬಗೆರೆ.

ಇದನ್ನೂ ಓದಿ: Namma Metro: ಹಸಿರು ಮಾರ್ಗದಲ್ಲಿ ಇಂದಿನಿಂದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Government Employees: 7ನೇ ವೇತನ ಆಯೋಗ; ಸರ್ಕಾರಿ ನೌಕರರ ಸಂಘದಿಂದ ಇಂದು ಸಿಎಂ, ಡಿಸಿಎಂಗೆ ಸನ್ಮಾನ; Live ಇಲ್ಲಿದೆ

Government Employees: ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಎಲ್ಲ ಇಲಾಖೆಗಳ ವೃಂದ ಸಂಘಗಳ ವತಿಯಿಂದ ಇಂದು (ಆ. 17) ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ನಗರದ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ “ನಮ್ಮಭಿಮಾನದ ಅಭಿನಂದನಾ ಸಮಾರಂಭ” ಆಯೋಜಿಸಲಾಗಿದೆ.

VISTARANEWS.COM


on

Government Employees
Koo

ಬೆಂಗಳೂರು: ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಎಲ್ಲ ಇಲಾಖೆಗಳ ವೃಂದ ಸಂಘಗಳ ವತಿಯಿಂದ (Government Employees)‌ ಆ. 17ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ನಗರದ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ “ನಮ್ಮಭಿಮಾನದ ಅಭಿನಂದನಾ ಸಮಾರಂಭ” ಆಯೋಜಿಸಲಾಗಿದೆ.

ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧುಬಂಗಾರಪ್ಪ, ವಿಶೇಷ ಆಹ್ವಾನಿತರಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಆರ್ಥಿಕ ಇಲಾಖೆಯ (ಬಿ&ಆರ್) ಸರ್ಕಾರದ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ಆರ್ಥಿಕ ಇಲಾಖೆ (ವೆಚ್ಚ) ಯ ಸರ್ಕಾರದ ಕಾರ್ಯದರ್ಶಿ ಡಾ. ಎಂ.ಟಿ. ರೇಜು ಪಾಲ್ಗೊಳ್ಳುವರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ: PM Narendra Modi: ಬೆಂಗಳೂರಿಗೆ ಸಿಹಿ ಸುದ್ದಿ; ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಅಸ್ತು; ರಾಜ್ಯಕ್ಕೆ ಪ್ರಧಾನಿ ಮೋದಿ ವರಮಹಾಲಕ್ಷ್ಮಿ ಹಬ್ಬದ ಕೊಡುಗೆ

Continue Reading

Latest

Crorepati Sweeper: ಕಸ ಗುಡಿಸುವ ಕಾರ್ಮಿಕನ ಬಳಿ ಇತ್ತು ಐಷಾರಾಮಿ ಕಾರುಗಳು, ಕೋಟಿ ಮೌಲ್ಯದ ಆಸ್ತಿ! ಆತ ಸಂಪಾದಿಸಿದ್ದು ಹೇಗೆ?

Crorepati Sweeper: ವಿಭಾಗೀಯ ಆಯುಕ್ತರ ಕಚೇರಿಯಲ್ಲಿ ನೈರ್ಮಲ್ಯ ಕಾರ್ಮಿಕನಾಗಿ ನೇಮಕಗೊಂಡಿರುವ ಜೈಸ್ವಾಲ್ ಎಂಬುವವನ ಬಳಿ ಅಕ್ರಮವಾಗಿ ಸಂಪಾದಿಸಿದ ಐಷಾರಾಮಿ ಕಾರುಗಳು, ಕೋಟಿ ಮೌಲ್ಯದ ಆಸ್ತಿ ಇದೆ ಎಂಬ ಮಾಹಿತಿ ಹೊರಬಿದ್ದಿದೆ.ಆತ ಅಧಿಕೃತ ದಾಖಲೆಗಳನ್ನು ನಕಲಿ ಮಾಡುವ ಮೂಲಕ ಅಕ್ರಮ ಆಸ್ತಿಗಳನ್ನು ಸಂಪಾದಿಸಿದ್ದಾನೆ. ಆತನ ಬಳಿ ಅನೇಕ ಐಷಾರಾಮಿ ಕಾರುಗಳು ಇರುವುದು ತಿಳಿದು ಬಂದಿದೆ. ತನಿಖಾಧಿಕಾರಿಗಳು ಈಗ ಅವನ ಆದಾಯದ ಮೂಲವನ್ನು ಪರಿಶೀಲಿಸಲು ಬ್ಯಾಂಕ್ ಖಾತೆಯ ವಿವರಗಳನ್ನು ಕಲೆಹಾಕುತ್ತಿದ್ದಾರೆ. ದಾಖಲೆಗಳನ್ನು ಪಡೆದ ನಂತರ, ಆರೋಪಿ ನೈರ್ಮಲ್ಯ ಕಾರ್ಮಿಕ ಸಂತೋಷ್ ಕುಮಾರ್ ಜೈಸ್ವಾಲ್ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Crorepati Sweeper
Koo


ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನೈರ್ಮಲ್ಯ ಕಾರ್ಮಿಕ ಸಂತೋಷ್ ಜೈಸ್ವಾಲ್ ಎಂಬಾತನನ್ನು ನೋಡಿದರೆ ತುಂಬಾ ವಿನಮ್ರ ಸ್ವಭಾವದ ಪಾಪದ ವ್ಯಕ್ತಿ ಎಂಬ ಭಾವನೆ ಮೂಡುತ್ತದೆ. ಆದರೆ, ಇವನೊಬ್ಬ ಗೋಮುಖ ವ್ಯಾಘ್ರನಂತೆ. ಇವನ ಬಗ್ಗೆ ತನಿಖೆ ಮಾಡಿದ ಪೊಲೀಸರು ಆತನ ಅಸಲಿ ಮುಖ ನೋಡಿ ದಂಗಾಗಿದ್ದಾರೆ. ಯಾಕೆಂದರೆ ಜೈಸಲ್ ಅಕ್ರಮವಾಗಿ ಐಷಾರಾಮಿ ಕಾರುಗಳು, ಕೋಟಿ (Crorepati Sweeper) ಮೌಲ್ಯದ ಆಸ್ತಿಯನ್ನು ಹೊಂದಿದ್ದಾನೆ. ಆತ ಅಧಿಕೃತ ದಾಖಲೆಗಳನ್ನು ನಕಲಿ ಮಾಡುವ ಮೂಲಕ ಅಕ್ರಮ ಆಸ್ತಿಗಳನ್ನು ಸಂಪಾದಿಸಿದ್ದಾನೆ ಮತ್ತು ಆತನ ಬಳಿ ಅನೇಕ ಐಷಾರಾಮಿ ಕಾರುಗಳು ಇರುವುದು ತಿಳಿದುಬಂದಿದೆ.

ವಿಭಾಗೀಯ ಆಯುಕ್ತರ ಕಚೇರಿಯಲ್ಲಿ ನೈರ್ಮಲ್ಯ ಕಾರ್ಮಿಕರಾಗಿ ನೇಮಕಗೊಂಡಿರುವ ಜೈಸ್ವಾಲ್ ಮೊದಲು ನಜೀರ್ ಎಂಬ ಹೆಸರಿನಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದರಿಂದ ಈಗ ಆತನ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಜೈಸ್ವಾಲ್ ತನ್ನ ಆಸ್ತಿಗೆ ಸಂಬಂಧಪಟ್ಟ ಫೈಲ್‍ಗಳನ್ನು ತಿರುಚಿದ್ದಾನೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಆಗಿನ ಆಯುಕ್ತ ಯೋಗೇಶ್ವರ್ ರಾಮ್ ಮಿಶ್ರಾ ತನಿಖೆ ನಡೆಸಿದ್ದರು. ಅದರ ತನಿಖೆಯ ವರದಿ ಈಗ ಬಹಿರಂಗವಾದ ಕಾರಣ ಆತನನ್ನು ಅಮಾನತುಗೊಳಿಸಲಾಯಿತು ಮತ್ತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇದಲ್ಲದೆ, ಆರೋಪಿ ನೈರ್ಮಲ್ಯ ಕಾರ್ಮಿಕ ಕಾನೂನುಬಾಹಿರವಾಗಿ ಸ್ವಾಧೀನಪಡಿಸಿಕೊಂಡಿರುವ ಆಸ್ತಿಗಳ ಬಗ್ಗೆ ತನಿಖೆ ನಡೆಸುವಂತೆ ಸದರ್ ತಹಶೀಲ್ದಾರ್ ದೇವೇಂದ್ರ ಯಾದವ್ ಅವರಿಗೆ ಸೂಚನೆ ನೀಡಲಾಯಿತು. ಆಯುಕ್ತರಾಗಿದ್ದ ಯೋಗೇಶ್ವರ್ ರಾಮ್ ಮಿಶ್ರಾ ಅವರ ಆದೇಶದ ಮೇರೆಗೆ ಸದರ್ ತಹಶೀಲ್ದಾರ್ ಅವರು ಜೈಸ್ವಾಲ್ ಒಡೆತನದ ಐಷಾರಾಮಿ ವಾಹನಗಳ ಬಗ್ಗೆ ಮಾಹಿತಿ ಪಡೆಯಲು ಸಾರಿಗೆ ಅಧಿಕಾರಿಗೆ ಪತ್ರ ಬರೆದಿದ್ದರು. ಆಮೇಲೆ ದೇವಿಪಟನ್ ಮಂಡಲದ ಪ್ರಸ್ತುತ ಆಯುಕ್ತ ಶಶಿ ಭೂಷಣ್ ಲಾಲ್ ಸುಶೀಲ್ ಅವರು ಅಧಿಕಾರ ವಹಿಸಿಕೊಂಡ ನಂತರ ವಾಹನಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಹಾಯಕ ವಿಭಾಗೀಯ ಸಾರಿಗೆ ಅಧಿಕಾರಿಗೆ ಸೂಚನೆ ನೀಡಿದ್ದರು. ವಾಹನಗಳನ್ನು ಪರಿಶೀಲಿಸಿದ ನಂತರ ಸಹಾಯಕ ವಿಭಾಗೀಯ ಸಾರಿಗೆ ಅಧಿಕಾರಿ ಸಲ್ಲಿಸಿದ ವರದಿಯಲ್ಲಿ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ನೈರ್ಮಲ್ಯ ಕಾರ್ಮಿಕನು ಒಂದಲ್ಲ, ಒಂಬತ್ತು ಐಷಾರಾಮಿ ವಾಹನಗಳನ್ನು ಹೊಂದಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಮತ್ತು ಅವುಗಳು ಅವನ, ಅವನ ಸಹೋದರ ಮತ್ತು ಅವನ ಹೆಂಡತಿಯ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಆರೋಪಿ ಸಂತೋಷ್ ಜೈಸ್ವಾಲ್ ಸ್ವಿಫ್ಟ್ ಡಿಜೈರ್, ಎರ್ಟಿಗಾ ಮಾರುತಿ ಸುಜುಕಿ, ಮಹೀಂದ್ರಾ ಸ್ಕಾರ್ಪಿಯೋ, ಇನ್ನೋವಾ ಮತ್ತು ಮಹೀಂದ್ರಾ ಕ್ಸೈಲೋ ಹೊಂದಿದ್ದರೆ, ಅವರ ಸಹೋದರ ಉಮಾಶಂಕರ್ ಜೈಸ್ವಾಲ್ ಎರ್ಟಿಗಾ ಮಾರುತಿ ಸುಜುಕಿ ಮತ್ತು ಅವರ ಪತ್ನಿ ಬೇಬಿ ಜೈಸ್ವಾಲ್ ಟೊಯೋಟಾ ಇನ್ನೋವಾ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಇವಿಷ್ಟು ಮಾಹಿತಿ ಬಹಿರಂಗವಾದ ನಂತರ, ತನಿಖಾಧಿಕಾರಿಗಳು ಈಗ ಅವನ ಆದಾಯದ ಮೂಲವನ್ನು ಪರಿಶೀಲಿಸಲು ಬ್ಯಾಂಕ್ ಖಾತೆಯ ವಿವರಗಳನ್ನು ಕಲೆಹಾಕುತ್ತಿದ್ದಾರೆ. ದಾಖಲೆಗಳನ್ನು ಪಡೆದ ನಂತರ, ಆರೋಪಿ ನೈರ್ಮಲ್ಯ ಕಾರ್ಮಿಕ ಸಂತೋಷ್ ಕುಮಾರ್ ಜೈಸ್ವಾಲ್ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಿಸ್ತೂಲ್ ಹಿಡಿದು ಚಿನ್ನ ದೋಚಲು ಬಂದವರನ್ನು ಕೋಲು ಹಿಡಿದು ಓಡಿಸಿದ ಅಂಗಡಿ ಮಾಲೀಕ!

ಜೈಸ್ವಾಲ್ ಅವರು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಈ ನೈರ್ಮಲ್ಯ ಕಾರ್ಮಿಕನಾಗಿ ಕೆಲಸ ಮಾಡುವಾಗ ಜೈಸ್ವಾಲ್ ಕಡಿಮೆ ವೇತನದೊಂದಿಗೆ ಅಕ್ರಮ ಆಸ್ತಿಯನ್ನು ಹೇಗೆ ಸಂಪಾದಿಸಿದರು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

Continue Reading

Latest

Viral Video: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

Viral Video: ಮುಂಬೈನ ಈಶಾನ್ಯ ಉಪನಗರವಾದ ಮುಲುಂಡ್ ನಿವಾಸಿಯಾದ ರೀಮಾ ಮುಖೇಶ್ ಪಟೇಲ್ ಎಂಬುವವರು ಅಟಲ್ ಸೇತುವಿನ ಸುರಕ್ಷತಾ ತಡೆಗೋಡೆಯ ಮೇಲೆ ಕುಳಿತು ಸಮುದ್ರಕ್ಕೆ ಹಾರಿ ಜೀವಕಳೆದುಕೊಳ್ಳಲು ಪ್ರಯತ್ನಿಸಿದ್ದರು. ಆಗ ಅವರ ಕಾರಿನ ಡ್ರೈವರ್ ಸಮಯಕ್ಕೆ ಸರಿಯಾಗಿ ಅವರ ಕೈ ಹಿಡಿದುಕೊಂಡಿದ್ದಾನೆ. ನಂತರ ಗಸ್ತು ವಾಹನವು ಸ್ಥಳಕ್ಕೆ ಸರಿಯಾಗಿ ಬಂದು ಡ್ರೈವರ್‌ಗೆ ಅವಳನ್ನು ಹಿಡಿದು ಮೇಲೆಳೆಯಲು ಸಹಾಯ ಮಾಡಿದ್ದಾರೆ. ಈ ಕುರಿತ ವಿಡಿಯೊ ಇಲ್ಲಿದೆ.

VISTARANEWS.COM


on

Viral Video
Koo


ಮುಂಬೈ: ಮುಂಬೈನ ಅಟಲ್ ಸೇತು ಎಂದೂ ಕರೆಯಲ್ಪಡುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‍ನಿಂದ ಜಿಗಿಯಲು ಪ್ರಯತ್ನಿಸಿದ ಮಹಿಳೆಯನ್ನು ಕ್ಯಾಬ್ ಚಾಲಕ ಮತ್ತು ಪೊಲೀಸ್ ಸಿಬ್ಬಂದಿ ಶುಕ್ರವಾರ ಸಂಜೆ ರಕ್ಷಿಸಿದ್ದಾರೆ. ಈ ದೃಶ್ಯ ಅಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಚಾಲಕ ಮತ್ತು ಪೊಲೀಸರು ಮಹಿಳೆಯನ್ನು ಸುರಕ್ಷಿತವಾಗಿ ಎಳೆದೊಯ್ಯುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video)ಆಗಿದೆ.

ಮಹಿಳೆಯನ್ನು 56 ವರ್ಷದ ರೀಮಾ ಮುಖೇಶ್ ಪಟೇಲ್ ಎಂದು ಗುರುತಿಸಲಾಗಿದ್ದು, ಮುಂಬೈನ ಈಶಾನ್ಯ ಉಪನಗರವಾದ ಮುಲುಂಡ್ ನಿವಾಸಿ ಎಂಬುದಾಗಿ ತಿಳಿದುಬಂದಿದೆ. ವಿಡಿಯೊದಲ್ಲಿ, ಆಕೆ ಅಟಲ್ ಸೇತುವಿನ ಸುರಕ್ಷತಾ ತಡೆಗೋಡೆಯ ಮೇಲೆ ಕುಳಿತಿದ್ದಳು. ನಂತರ ಅವಳು ನದಿ ಹಾರಲು ಪ್ರಯತ್ನಿಸುತ್ತಾಳೆ. ಆಗ ಆಕೆಯ ಕಾರಿನ ಡ್ರೈವರ್ ಸಮಯಕ್ಕೆ ಸರಿಯಾಗಿ ಅವಳ ಕೈ ಹಿಡಿದುಕೊಂಡಿದ್ದಾನೆ. ನಂತರ ಗಸ್ತು ವಾಹನವು ಸ್ಥಳಕ್ಕೆ ಸರಿಯಾಗಿ ಬಂದು ಡ್ರೈವರ್‌ಗೆ ಅವಳನ್ನು ಹಿಡಿದು ಮೇಲೆಳೆಯಲು ಸಹಾಯ ಮಾಡಿದ್ದಾರೆ. ಒಂದು ನಿಮಿಷಕ್ಕೂ ಹೆಚ್ಚು ಕಾಲ ಡ್ರೈವರ್ ಹಾಗೂ ಪೊಲೀಸರು ಸಾಹಸ ಮಾಡಿ ಆಕೆಯನ್ನು ಮೇಲಕ್ಕೆ ಎಳೆದು ರಕ್ಷಿಸಿದ್ದಾರೆ.

“ಎಂಟಿಎಚ್ಎಲ್ ಅಟಲ್ ಸೇತುವಿನಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯನ್ನು ರಕ್ಷಿಸಲು ಕರ್ತವ್ಯದಲ್ಲಿದ್ದ ಅಧಿಕಾರಿಗಳಾದ ಲಲಿತ್ ಶಿರ್ಸಾತ್, ಕಿರಣ್ ಮಹ್ತ್ರೆ, ಯಶ್ ಸೋನಾವಾನೆ ಮತ್ತು ಮಯೂರ್ ಪಾಟೀಲ್ ಅವರು ತಕ್ಷಣ ಪ್ರತಿಕ್ರಿಯಿಸಿ ಹಳಿಯ ಮೇಲೆ ಹಾರಿ ಆಕೆಯನ್ನು ರಕ್ಷಿಸಿದ್ದಾರೆ” ಎಂದು ಮುಂಬೈ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಜೀವನವು ನಮಗೆ ಸಿಕ್ಕ ಉಡುಗೊರೆ ಅದನ್ನು ಗೌರವಿಸಿ ಮತ್ತು ಯಾವುದೇ ಸಂದಿಗ್ಧ ಪರಿಸ್ಥಿತಿಯಲ್ಲೂ ಅದನ್ನು ಕಳೆದುಕೊಳ್ಳಲು ಪ್ರಯತ್ನಿಸಬೇಡಿ. ನಿಮ್ಮ ಪ್ರೀತಿಪಾತ್ರರಿಂದ ದೂರವಾಗಬೇಡಿ ಎಂದು ಮುಂಬೈ ಪೊಲೀಸ್ ಆಯುಕ್ತರು ಪೋಸ್ಟ್ ಮಾಡಿ ನಾಗರಿಕರಲ್ಲಿ ವಿನಂತಿ ಮಾಡಿದ್ದಾರೆ.

ಇದನ್ನೂ ಓದಿ: ಅಪಹರಣಕಾರನಿಂದ ಪುಟ್ಟ ಮಗುವನ್ನು ರಕ್ಷಿಸಿದ ಸಾಕು ನಾಯಿ! ನಾಯಿಯ ಸಾಹಸದ ವಿಡಿಯೊ ನೋಡಿ

ಕಳೆದ ತಿಂಗಳು 38 ವರ್ಷದ ವ್ಯಕ್ತಿಯೊಬ್ಬರು ಸೇತುವೆಯಿಂದ ಜಿಗಿದು ಸಾವನ್ನಪ್ಪಿದ್ದರು. ಡೊಂಬಿವ್ಲಿ ನಿವಾಸಿಯಾಗಿದ್ದ ಎಂಜಿನಿಯರ್ ಕೆ.ಶ್ರೀನಿವಾಸ್ ಅವರು ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‍ನ ನವಾ ಶೇವಾ ಎಂಡ್‍ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಮ್ಮ ಕಾರನ್ನು ಪಾರ್ಕಿಂಗ್ ಮಾಡುತ್ತಿರುವುದನ್ನು ಸೇತುವೆಯ ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

CM Siddaramaiah: ಮುಡಾ ತನಿಖೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌; ಸಿಎಂಗೆ ಸಂಕಷ್ಟ

CM Siddaramaiah: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಇನ್ನೊಂದು ಸುತ್ತಿನ ರಾಜಕೀಯ ಕ್ಷೋಭೆಗೆ ನಾಂದಿ ಹಾಡಿದ್ದಾರೆ.

VISTARANEWS.COM


on

thawar chand gehlot cm siddaramaiah Governor versus state
Koo

ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಸಂಕಷ್ಟ ಬಿಗಡಾಯಿಸಿದೆ. ಪ್ರಾಸಿಕ್ಯೂಶನ್‌ಗೆ (Prosecution) ರಾಜ್ಯಪಾಲರು (Governor) ಇಂದು ಅನುಮತಿ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ (TJ Abraham) ಪ್ರಾಸಿಕ್ಯೂಶನ್‌ಗೆ ಅನುಮತಿ ಕೇಳಿದ್ದರು.

ದೂರುದಾರ ಅಬ್ರಹಾಂ ಅವರನ್ನು ಇಂದು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot), ಪ್ರಾಸಿಕ್ಯೂಶನ್‌ಗೆ ದೂರು ದಾಖಲಿಸಲು ಅನುಮತಿ ನೀಡಿದರು.

ಕಳೆದ ಒಂದು ವಾರದಿಂದ ರಾಜಭವನದ ನಡೆ ನಿಗೂಢವಾಗಿತ್ತು. ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಯಾವ ಕ್ರಮ ಜರುಗಿಸಲಿದ್ದಾರೆ ಎಂಬ ಕುತೂಹಲ ಇತ್ತು. ದಿಲ್ಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್‌ ಕಳೆದ ವಾರ ಬೆಂಗಳೂರಿಗೆ ಮರಳಿದ ಬಳಿಕ, ತಾವು ಕೊಟ್ಟಿದ್ದ ನೋಟೀಸ್‌ಗೆ ರಾಜ್ಯ ಸಚಿವ ಸಂಪುಟದ ಉತ್ತರ ಹಾಗೂ ಸಿಎಂ ಸಿದ್ದರಾಮಯ್ಯ ನೀಡಿದ್ದ ಉತ್ತರಗಳನ್ನು ಪರಿಶೀಲಿಸಿದ್ದರು. ದೂರುದಾರ ಟಿ.ಜೆ ಅಬ್ರಾಹಂ ಮೇಲೆಯೇ ದೂರುಗಳಿವೆ ಎಂದು ಸಚಿವ ಸಂಪುಟ ಆರೋಪಿಸಿತ್ತು. ಮುಡಾ ಹಗರಣದ ವಿಚಾರಣೆಗಾಗಿ ರಾಜ್ಯ ಸರಕಾರ ನ್ಯಾ| ದೇಸಾಯಿ ಅವರ ಆಯೋಗವನ್ನು ರಚಿಸಿದೆ.

ಜೊತೆಗೆ ಮೈಸೂರಿನ ಸ್ನೇಹಮಯಿ ಕೃಷ್ಣ ಎಂಬವರು ಸಿಎಂ ವಿರುದ್ಧ ಮತ್ತೂಂದು ದೂರು ಸಲ್ಲಿಸಿದ್ದರು. ಅಕ್ರಮ ಭೂ ಡಿನೋಟಿಫಿಕೇಶನ್‌ಗೆ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆಂದು ಆರೋಪಿಸಿದ್ದರು. ಜಿಲ್ಲಾಧಿಕಾರಿಯಿಂದ 15 ದಿನದಲ್ಲಿ ವರದಿ ಪಡೆದು ಸೂಕ್ತ ಕ್ರಮ ಜರಗಿಸುವಂತೆ ಕೋರಿದ್ದಾರೆ. ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ರಾಜ್ಯಪಾರು ಗಮನಿಸಿದ್ದರು.

ರಾಜ್ಯಪಾಲರ ಮುಂದಿನ ನಡೆಗಾಗಿ ದೂರುದಾರ ಅಬ್ರಹಾಂ ಕಾದಿದ್ದರು. ರಾಜ್ಯಪಾಲರು ಅನುಮತಿ ನೀಡದಿದ್ದರೆ ಸಿಬಿಐ ಅಥವಾ ಲೋಕಾಯುಕ್ತ ತನಿಖೆಗೆ ಕೋರುವ ಬಗ್ಗೆ ಕಾನೂನು ಸಲಹೆ ಪಡೆದುಕೊಂಡಿದ್ದರು. ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡದಿದ್ದರೂ ನೇರವಾಗಿ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಲು ಕೇಂದ್ರದ ಕಾಯಿದೆಗಳಲ್ಲಿ ಅವಕಾಶಗಳಿವೆಯೇ ಎಂಬುದನ್ನೂ ಪರಿಶೀಲಿಸಿದ್ದರು.

ರಾಜ್ಯಪಾಲರ ನೋಟೀಸ್‌ಗೆ ಒಂದು ಸಾಲಿನ ನಿರ್ಣಯ ಕಳಿಸಿದ ರಾಜ್ಯ ಸರ್ಕಾರ, ಅದಕ್ಕೆ ಸಂಬಂಧಿಸಿದಂತೆ 70 ದಾಖಲೆಗಳನ್ನು ರಾಜ್ಯಪಾಲರಿಗೆ ರವಾನಿಸಿತ್ತು. 1990ರ ದಶಕದಿಂದಲೂ ಇಲ್ಲಿಯವರೆಗೂ ದಾಖಲೆ ನೀಡಿರುವ ಸರ್ಕಾರ, ಸಿದ್ದರಾಮಯ್ಯ ಪತ್ನಿಗೆ ಆಸ್ತಿ ವರ್ಗಾವಣೆ ಹಾಗೂ ಗಿಫ್ಟ್ ಡೀಡ್ ಬಗ್ಗೆ ದಾಖಲೆ ಹಾಗೂ ಸಾಕ್ಷಿ ಸಮೇತ ವಿವರಣೆ ನೀಡಿದೆ. ಹಾಗೂ ದೂರುದಾರ ಅಬ್ರಹಾಂ ಬಗ್ಗೆಯೂ ಮಾಹಿತಿ ನೀಡಿದೆ. ಈ ದಾಖಲೆಗಳನ್ನು ರಾಜ್ಯಪಾಲರು ಪರಿಶೀಲನೆ ಮಾಡುತ್ತಿದ್ದಾರೆ.

ಇತ್ತ ಸಿಎಂ ಸಿದ್ದರಾಮಯ್ಯ ಅವರ 10 ಜನರ ಕಾನೂನು ಟೀಮ್ ಫುಲ್ ಆಕ್ಟೀವ್ ಆಗಿದೆ. ರಾಜ್ಯಪಾಲರ ನಡೆ ಪ್ರಶ್ನೆ ಮಾಡಿ ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನಪ್ರತಿನಿಧಿಗಳ ಹಾಗೂ ಲೋಕಾಯುಕ್ತ ಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ವರೆಗೂ ಹೋಗಲು ವಕೀಲರ ಟೀಮ್ ರೆಡಿಯಾಗಿದೆ. ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಅವರಿಂದಲೇ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಯುತ್ತಿದೆ.

ಮತ್ತೊಂದೆಡೆ ಈ ಪ್ರಕರಣವನ್ನು ಪ್ರತಿಷ್ಠೆಯ ಪ್ರಶ್ನೆಯಾಗಿ ತೆಗೆದುಕೊಂಡಿದ್ದ ಬಿಜೆಪಿ- ಜೆಡಿಎಸ್‌, ಬೆಂಗಳೂರಿನಿಂದ ಮೈಸೂರಿನ ವರೆಗೆ ಪಾದಯಾತ್ರೆ ನಡೆಸಿದ್ದವು. ದಾರಿಯುದ್ದಕ್ಕೂ ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದವು. ಸಿದ್ದರಾಮಯ್ಯ ರಾಜೀನಾಮೇ ನೀಡಬೇಕು ಎಂದು ಆಗ್ರಹಿಸಿದ್ದವು.

ಇದನ್ನೂ ಓದಿ: CM Siddaramaiah: ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

Continue Reading
Advertisement
Actor Nagabhushan birthday vidhyapathi promo Out
ಸ್ಯಾಂಡಲ್ ವುಡ್4 mins ago

Actor Nagabhushan: ನಾಗಭೂಷಣ್ ಬರ್ತ್‌ಡೇಗೆ ಡಾಲಿ ತಂಡದಿಂದ ಸ್ಪೆಷಲ್ ಗಿಫ್ಟ್‌; ನೋಡಿ ‘ವಿದ್ಯಾಪತಿ’ಯ ಕಿತಾಪತಿ!

Vinesh Phogat
ಕ್ರೀಡೆ5 mins ago

Vinesh Phogat: ತವರಿಗೆ ಮರಳಿದ ವಿನೇಶ್​​​ ಫೋಗಟ್​ಗೆ ಭರ್ಜರಿ ಸ್ವಾಗತ; ಅಭಿಮಾನಿಗಳನ್ನು ಕಂಡು ಕಣ್ಣೀರು

Government Employees
ಕರ್ನಾಟಕ22 mins ago

Government Employees: 7ನೇ ವೇತನ ಆಯೋಗ; ಸರ್ಕಾರಿ ನೌಕರರ ಸಂಘದಿಂದ ಇಂದು ಸಿಎಂ, ಡಿಸಿಎಂಗೆ ಸನ್ಮಾನ; Live ಇಲ್ಲಿದೆ

Viral Video
Latest26 mins ago

Viral Video: ಅಣೆಕಟ್ಟಿನ ಅಂಚಿನಲ್ಲಿ ನಿಂತು ಸ್ಟಂಟ್ ಮಾಡಿದ; ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡ!

Crorepati Sweeper
Latest32 mins ago

Crorepati Sweeper: ಕಸ ಗುಡಿಸುವ ಕಾರ್ಮಿಕನ ಬಳಿ ಇತ್ತು ಐಷಾರಾಮಿ ಕಾರುಗಳು, ಕೋಟಿ ಮೌಲ್ಯದ ಆಸ್ತಿ! ಆತ ಸಂಪಾದಿಸಿದ್ದು ಹೇಗೆ?

70th National Film Awards ational Award winner Madhyantara Short Movie
ಸ್ಯಾಂಡಲ್ ವುಡ್38 mins ago

70th National Film Awards: ಕನ್ನಡಕ್ಕೆ ಸಿಕ್ಕಿದ್ದು ಒಟ್ಟು 7 ಪ್ರಶಸ್ತಿಗಳು; ಜ್ಯೂರಿಗಳನ್ನೇ ಇಂಪ್ರೆಸ್‌ ಮಾಡಿದ ʻಮಧ್ಯಂತರʼ ಕಿರು ಚಿತ್ರ ಬಗ್ಗೆ ನಿಮಗೆಷ್ಟು ಗೊತ್ತು?

Viral Video
Latest38 mins ago

Viral Video: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

Kolkata Doctor Murder Case
ದೇಶ43 mins ago

Kolkata Doctor Murder Case: ಸಂತ್ರಸ್ತೆಯ ದೇಹದಲ್ಲಿ ಪತ್ತೆಯಾಗಿದ್ದು 150 ಗ್ರಾಂ ವೀರ್ಯವಲ್ಲ; ಸ್ಪಷ್ಟನೆ ನೀಡಿದ ವೈದ್ಯರು

Vinesh Phogat Emotional Post
ಕ್ರೀಡೆ47 mins ago

Vinesh Phogat Emotional Post: ಅಪ್ಪನ ಸಾವು, ತಾಯಿಗೆ ಕ್ಯಾನ್ಸರ್ ಇರುವ ವಿಚಾರ ತಿಳಿದು ಆಕಾಶವೇ ಕಳಚಿ ಬಿದ್ದಂತಾಗಿತ್ತು; ಭಾವುಕರಾದ ವಿನೇಶ್ ಫೋಗಟ್​​

Actor Yash wears a tiger locket during varamahalakshmi puja
ಸ್ಯಾಂಡಲ್ ವುಡ್1 hour ago

Actor Yash: ಯಶ್‌-ರಾಧಿಕಾ ವರಮಹಾಲಕ್ಷ್ಮಿ ಹಬ್ಬ ಬಲು ಜೋರು; ರಾಕಿಂಗ್‌ ಸ್ಟಾರ್‌ ಲಾಕೆಟ್ ಮೇಲೆ ಎಲ್ಲರ ಕಣ್ಣು!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌