Kolkata Doctor Murder Case: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ಏನಿರುತ್ತೆ? ಏನಿರಲ್ಲ? - Vistara News

ದೇಶ

Kolkata Doctor Murder Case: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ಏನಿರುತ್ತೆ? ಏನಿರಲ್ಲ?

Kolkata Doctor Murder Case: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಕೊಲೆಯನ್ನು ಖಂಡಿಸಿ ಇಂದು ದೇಶಾದ್ಯಂತ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ತುರ್ತು ವೈದ್ಯಕೀಯ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಹಿಂತೆಗೆದುಕೊಳ್ಳುವುದಾಗಿ ಭಾರತೀಯ ವೈದ್ಯಕೀಯ ಸಂಘ ಘೋಷಿಸಿದೆ.

VISTARANEWS.COM


on

Kolkata Doctor Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಕೊಲೆಯ (Kolkata Doctor Murder Case) ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ಭುಗಿಲೆದ್ದಿದ್ದು, ಭಾರತೀಯ ವೈದ್ಯಕೀಯ ಸಂಘ (Indian Medical Association) ಇಂದು (ಆಗಸ್ಟ್ 17) ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ತುರ್ತು ವೈದ್ಯಕೀಯ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ.

ಸರ್ಕಾರಿ ಮತ್ತು ಖಾಸಗಿ ಆಸ್ಫತ್ರೆಗಳ ಓಪಿಡಿ ಬಂದ್ ಇರಲಿದ್ದು, ಎಮರ್ಜೆನ್ಸಿ ರೋಗಿಗಳಿಗೆ ಮಾತ್ರ ಚಿಕಿತ್ಸೆ ಸಿಗಲಿದೆ‌. ಎಲ್ಲ ವೈದ್ಯರು ಓಪಿಡಿ ಸೇವೆಗಳಿಗೆ ಹಾಜರಾಗದೆ ಪ್ರತಿಭಟನೆ ನಡೆಸಲಿದ್ದಾರೆ. ಇನ್ನು ಸರ್ಕಾರಿ ವೈದ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಎಮರ್ಜೆನ್ಸಿ ಸೇವೆಯನ್ನ ಮಾತ್ರ ನೀಡಲಿದ್ದಾರೆ.

ಐಎಂಎ ಮುಂದಿಟ್ಟ 5 ಬೇಡಿಕೆ

ಭಾರತೀಯ ವೈದ್ಯಕೀಯ ಸಂಘ ಶುಕ್ರವಾರ 5 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದೆ.

  • ವೈದ್ಯರ ಕರ್ತವ್ಯದ ಅವಧಿ ಮತ್ತು ಅವರು ಜೀವನ ರೀತಿಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಆರ್‌ಜಿ ಕರ್‌ ಆಸ್ಪತ್ರೆಯ ಸಂತ್ರಸ್ತೆ 36 ಗಂಟೆಗಳ ಕಾಲ ಕರ್ತವ್ಯ ನಿರ್ಶಿವಹಿಸಿದ್ದರು ಮತ್ತು ವಿಶ್ರಾಂತಿ ಪಡೆಯಲು ಅವರಿಗೆ ಸುರಕ್ಷಿತ ಸ್ಥಳಗಳ ಕೊರತೆ ಇತ್ತು. ಈ ಬಗ್ಗೆಯೂ ಗಮನ ಹರಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘ ಆಗ್ರಹಿಸಿದೆ.
  • 1897ರ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ 2023ರಲ್ಲಿ ಮಾಡಿದ ತಿದ್ದುಪಡಿಗಳನ್ನು 2019ರ ಉದ್ದೇಶಿತ ಆಸ್ಪತ್ರೆ ಸಂರಕ್ಷಣಾ ಮಸೂದೆಗೆ ಸೇರಿಸಬೇಕು. ಇದರಿಂದ 25 ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಕಾನೂನಿಗೆ ಇನ್ನಷ್ಟು ಬಲ ತುಂಬಿದಂತಾಗುತ್ತದೆ. ಕೋವಿಡ್ -19ರ ಸಮಯದಲ್ಲಿ ಜಾರಿಗೆ ತಂದ ಸುಗ್ರೀವಾಜ್ಞೆ ಈ ಪರಿಸ್ಥಿತಿಯಲ್ಲಿ ಸೂಕ್ತವಾಗಿದೆ ಎಂದು ಐಎಂಎ ಸೂಚಿಸಿದೆ.
  • ಆರ್‌ಜಿ ಕರ್ ಆಸ್ಪತ್ರೆಯ ಆವರಣದಲ್ಲಿ ನಡೆದ ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಜತೆಗೆ ನಿರ್ದಿಷ್ಟ ಕಾಲಮಿತಿಯೊಳಗೆ ನಿಖರವಾದ ಮತ್ತು ವೃತ್ತಿಪರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಐಎಂಎ ಒತ್ತಾಯಿಸಿದೆ.
  • ಎಲ್ಲ ಆಸ್ಪತ್ರೆಗಳ ಭದ್ರತಾ ಪ್ರೋಟೋಕಾಲ್‌ಗಳನ್ನು ವಿಮಾನ ನಿಲ್ದಾಣದಲ್ಲಿರುವಂತೆ ಜಾರಿಗೊಳಿಸಬೇಕು. ಆಸ್ಪತ್ರೆಗಳನ್ನು ಸುರಕ್ಷಿತ ವಲಯಗಳಾಗಿ ಘೋಷಿಸಬೇಕು. ಸಿಸಿಟಿವಿ ಕ್ಯಾಮೆರಾಗಳು, ಭದ್ರತಾ ಸಿಬ್ಬಂದಿಯ ನಿಯೋಜನೆ ಮುಂತಾದ ಅಗತ್ಯ ಕ್ರಮ ಜಾರಿಯಾಗಬೇಕು ಎಂದು ಮನವಿ ಮಾಡಲಾಗಿದೆ.
  • ಕ್ರೌರ್ಯಕ್ಕೆ ಅನುಗುಣವಾಗಿ ದುಃಖಿತ ಕುಟುಂಬಕ್ಕೆ ಸೂಕ್ತ ಮತ್ತು ಘನತೆಯ ಪರಿಹಾರವನ್ನು ಒದಗಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘ ಬೇಡಿಕೆ ಇಟ್ಟಿದೆ.

ಇಂದು ಲಭ್ಯವಿರುವ ಸೇವೆಗಳು

ತುರ್ತು ಚಿಕಿತ್ಸೆ, ಮೆಡಿಕಲ್ ಶಾಪ್ಸ್, ಇನ್ ಪೇಷೆಂಟ್ ಸೇವೆ, ಹೆರಿಗೆ ಮತ್ತು ಎಮರ್ಜೆನ್ಸಿ ಸರ್ಜರಿ.

ಲಭ್ಯವಿಲ್ಲದ ಸೇವೆಗಳು

ಓಪಿಡಿ, ಡಯಾಲಿಸಿಸ್, ಕ್ಲಿನಿಕ್ ಸೇವೆ, ಮಕ್ಕಳ ಓಪಿಡಿ, ಡೆಂಟಲ್ ಸರ್ವಿಸ್.

ಇದನ್ನೂ ಓದಿ: Kolkata Doctor murder case: ವೈದ್ಯೆ ಕೊಲೆ ಕೇಸ್‌; ಪ್ರತಿಭಟನಾಕಾರರ ಮೇಲೆ ವಾಹನ ಹರಿಸಲು ಪೊಲೀಸ್‌ ಯತ್ನ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Bridge Collapse: 9 ವರ್ಷಗಳಿಂದ ನಿರ್ಮಾಣವಾಗುತ್ತಿರುವ ಸೇತುವೆ 3ನೇ ಬಾರಿ ಕುಸಿದು ಬಿತ್ತು; ವಿಡಿಯೊ ನೋಡಿ

Bridge Collapse: ಬಿಹಾರದಲ್ಲಿ ಸೇತುವೆ ಕುಸಿತದ ಸರಣಿಗೆ ಇನ್ನೊಂದು ಸೇರ್ಪಡೆಯಾಗಿದೆ. ಕಳೆದ 9 ವರ್ಷಗಳಿಂದ ನಿರ್ಮಾಣವಾಗುತ್ತಲೇ ಇರುವ ಸೇತುವೆಯೊಂದು 3ನೇ ಬಾರಿ ಕುಸಿದು ಬಿದ್ದಿದೆ. ಬಿಹಾರದ ಭಾಗಲ್ಪುರದ ಸುಲ್ತಂಗಂಜ್‌-ಅಗುವಾನಿ ಘಾಟ್‌ನಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಶನಿವಾರ (ಆಗಸ್ಟ್‌ 17) ಬೆಳಿಗ್ಗೆ ಕುಸಿದು ಗಂಗಾ ನದಿ ಪಾಲಾಗಿದೆ. ನಿರ್ಮಾಣ ಹಂತದ ಸೇತುವೆಯ 9 ಮತ್ತು 10ನೇ ಕಂಬಗಳ ನಡುವಿನ ಭಾಗ ಕುಸಿದು ಬಿದ್ದಿದೆ. ಖಗರಿಯಾ ಮತ್ತು ಭಾಗಲ್ಪುರ ಜಿಲ್ಲೆಗಳನ್ನು ಸಂಪರ್ಕಿಸಲು ಸೇತುವೆ ನಿರ್ಮಿಸಲಾಗುತ್ತಿದೆ.

VISTARANEWS.COM


on

Bridge Collapse
Koo

ಪಟನಾ: ಬಿಹಾರದಲ್ಲಿ ಸೇತುವೆ ಕುಸಿತ (Bridge Collapse)ದ ಸರಣಿಗೆ ಇನ್ನೊಂದು ಸೇರ್ಪಡೆಯಾಗಿದೆ. ಕಳೆದ 9 ವರ್ಷಗಳಿಂದ ನಿರ್ಮಾಣವಾಗುತ್ತಲೇ ಇರುವ ಸೇತುವೆಯೊಂದು 3ನೇ ಬಾರಿ ಕುಸಿದು ಬಿದ್ದಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ (Viral Video).

ಬಿಹಾರದ ಭಾಗಲ್ಪುರದ ಸುಲ್ತಂಗಂಜ್‌-ಅಗುವಾನಿ ಘಾಟ್‌ನಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಶನಿವಾರ (ಆಗಸ್ಟ್‌ 17) ಬೆಳಿಗ್ಗೆ ಕುಸಿದು ಗಂಗಾ ನದಿ ಪಾಲಾಗಿದೆ. ಅದೃಷ್ಟವಶಾತ್‌ ಯಾರಿಗೂ ಗಾಯಗಳಾಗಿಲ್ಲ. ಗಮನಾರ್ಹ ಅಂಶ ಎಂದರೆ ಈ ಸೇತುವೆಯನ್ನೂ ಕಳೆದ 9 ವರ್ಷಗಳಿಂದ ನಿರ್ಮಿಸಲಾಗುತ್ತಿದ್ದು ಇನ್ನೂ ಪೂರ್ಣವಾಗಿಲ್ಲ. ಅಲ್ಲದೆ ಈ ಸೇತುವೆಯ ಕೆಲವೊಂದು ಭಾಗಗಳು ಈ ಹಿಂದೆ ಎರಡು ಬಾರಿ ಕುಸಿದು ಬಿದ್ದಿದ್ದವು.

ನಿರ್ಮಾಣ ಹಂತದ ಸೇತುವೆಯ 9 ಮತ್ತು 10ನೇ ಕಂಬಗಳ ನಡುವಿನ ಭಾಗ ಕುಸಿದು ಬಿದ್ದಿದೆ. ಖಗರಿಯಾ ಮತ್ತು ಭಾಗಲ್ಪುರ ಜಿಲ್ಲೆಗಳನ್ನು ಸಂಪರ್ಕಿಸಲು ಸೇತುವೆ ನಿರ್ಮಿಸಲಾಗುತ್ತಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕನಸಿನ ಪ್ರಾಜೆಕ್ಟ್‌ ಇದಾಗಿದ್ದು, ಈ ಪ್ರದೇಶದ ನಿರ್ಣಾಯಕ ಕೊಂಡಿಯಾದ ವಿಕ್ರಮಶಿಲಾ ಸೇತುವೆ ಮೇಲಿನ ಸಂಚಾರ ದಟ್ಟಣೆಯನ್ನು ನಿವಾರಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಎಸ್‌.ಪಿ.ಸಿಂಗ್ಲಾ ಕಂಪೆನಿ ಈ ಸೇತುವೆ ಕಾಮಗಾರಿ ಕೈಗೆತ್ತಿಕೊಂಡಿದ್ದು, ಸದ್ಯ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸೇತುವೆ ಕುಸಿತದ ಇತಿಹಾಸ

ಈ ಹಿಂದೆ ಇದೇ ಸೇತುವೆ 2022ರ ಏಪ್ರಿಲ್‌ 27ರಂದು ಮೊದಲ ಬಾರಿ ಕುಸಿದು ಬಿದ್ದಿತ್ತು. ಅದಾಗಿ ಸುಮಾರು ಒಂದು ವರ್ಷದ ಬಳಿಕ ಅಂದರೆ 2023ರ ಜೂನ್‌ 4ರಂದು ಎರಡನೇ ಬಾರಿ ಸೇತುವೆ ಕುಸಿದಿತ್ತು. ಈ ವೇಳೆ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ನೀರು ಪಾಲಾಗಿದ್ದರು.

2014ರ ಫೆಬ್ರವರಿ 23ರಂದು 3.16 ಕಿ.ಮೀ ಉದ್ದದ ಈ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಕಾಮಗಾರಿಯನ್ನು 2015ರ ಮಾರ್ಚ್ 9ರಂದು ಆರಂಭಿಸಲಾಗಿತ್ತು. ಬಿಹಾರ ಸರ್ಕಾರವು ಈ ಯೋಜನೆಗೆ 1,710 ಕೋಟಿ ರೂ.ಗಳನ್ನು ನಿಗದಿಪಡಿಸಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಇದೂ ಒಂದು. ಅದಾಗ್ಯೂ ನಿರ್ಮಾಣ ಆರಂಭವಾಗಿ ಸುಮಾರು 9 ವರ್ಷಗಳ ನಂತರವೂ ಸೇತುವೆ ಅಪೂರ್ಣವಾಗಿ ಉಳಿದಿದೆ.

17 ದಿನದಲ್ಲಿ 10 ಸೇತುವೆ ಕುಸಿತ

ಕಳೆದ ಕೆಲವು ದಿನಗಳಿಂದ ಬಿಹಾರದಲ್ಲಿ ಸೇತುವೆಗಳು ಕುಸಿದು ಬೀಳುತ್ತಿದ್ದು, ದೇಶಾದ್ಯಂತ ಚರ್ಚೆ ಹುಟ್ಟು ಹಾಕಿದೆ. ಕಳೆದ ತಿಂಗಳು 17 ದಿನಗಳಲ್ಲಿ 10 ಸೇತುವೆಗಳು ಕುಸಿದು ಬಿದ್ದಿದ್ದವು. ಸಣ್ಣ ಮಳೆಯಾದರೂ ಸೇತುವೆಗಳು ಕುಸಿಯುವುದು, ನಿರ್ಮಾಣ ಹಂತದಲ್ಲಿರುವಾಗಲೇ ಸೇತುವೆಗಳು ಧರೆಗುರುಳುವ ಪ್ರಕರಣಗಳು ಜಾಸ್ತಿಯಾಗಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಜನ ಬಿಹಾರ ಸರ್ಕಾರದ (Bihar Government) ವಿರುದ್ಧ ಮುಗಿಬಿದ್ದಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ.

ಬಿಹಾರ ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಸೇತುವೆಗಳು ಕುಸಿಯುತ್ತಿರುವುದಕ್ಕೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಆಕ್ರೋಶ ವ್ಯಕ್ತಪಡಿಸಿದ್ದರು. “ಬಿಹಾರದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸುದ್ದಿಯಾಗುತ್ತಲೇ ಇವೆ. ಕಳೆದ 9 ದಿನಗಳಲ್ಲಿಯೇ ಇಂತಹ 5 ಪ್ರಕರಣಗಳು ಬೆಳಕಿಗೆ ಬಂದಿವೆ. ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರವು ಸೇತುವೆ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಹಾಗೂ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಜನರ ದುಡ್ಡು ಹೀಗೆ ನೀರು ಪಾಲಾಗುತ್ತಿದ್ದರೂ ಮುಖ್ಯಮಂತ್ರಿಯು ಗಾಢ ನಿದ್ದೆಯಲ್ಲಿದ್ದಾರೆ” ಎಂದು ಟೀಕಿಸಿದ್ದರು.

ಇದನ್ನೂ ಓದಿ: Bridge Collapse: ಬಿಹಾರದಲ್ಲಿ ಮತ್ತೆರಡು ಸೇತುವೆ ಕುಸಿತ; 15 ದಿನಗಳಲ್ಲಿ ಇದು 7ನೇ ಪ್ರಕರಣ!

Continue Reading

ದೇಶ

Physical Abuse: ದೇಶದಲ್ಲಿ ಪ್ರತಿ ಗಂಟೆಗೊಮ್ಮೆ 4 ಮಹಿಳೆಯರ ಮೇಲೆ ಅತ್ಯಾಚಾರ; ಬೆಚ್ಚಿಬೀಳಿಸುವ ಅಂಕಿ-ಅಂಶ ಬಹಿರಂಗ

Physical Abuse: ದೇಶದಲ್ಲಿ ಸರಾಸರಿ ಪ್ರತಿ ಗಂಟೆಗೊಮ್ಮೆ 4 ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಎನ್ನುವ ವಿಚಾರ ಬೆಳಕಿಗೆ ಬಂದಿದೆ. 2017 ಮತ್ತು 2022ರ ಅಂಕಿ-ಅಂಶಗಳ ಪ್ರಕಾರ ಪ್ರತಿ ದಿನ ಸುಮಾರು 86 ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ಪರಿಚಿತರಿಂದಲೇ ದೌರ್ಜನ್ಯ ನಡೆದಿದೆ ಎನ್ನುವುದು ಮತ್ತುಷ್ಟು ಭಯ ಹುಟ್ಟು ಹಾಕಿದೆ. ಪ್ರತಿ ಗಂಟೆಗೊಮ್ಮೆ ನಡೆಯುವ ನಾಲ್ಕು ಅತ್ಯಾಚಾರ ಪ್ರಕರಣಗಳ ಪೈಕಿ ಮೂರರಲ್ಲಿ ಪರಿಚಿತ ವ್ಯಕ್ತಿಯೇ ದೌರ್ಜನ್ಯ ಎಸಗಿರುವುದನ್ನು ಅಂಕಿ-ಅಂಶ ಬಹಿರಂಗಪಡಿಸಿದೆ.

VISTARANEWS.COM


on

Physical Abuse
Koo

ನವದೆಹಲಿ: ಕೋಲ್ಕಾತ್ತಾದ ಆರ್‌ಜಿ ಕರ್‌ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಜತೆಗೆ ಮಹಿಳೆಯರ ಸುರಕ್ಷತೆ ಬಗ್ಗೆ ಅನುಮಾನ ಹುಟ್ಟುವಂತೆ ಮಾಡಿದೆ. ಈ ಮಧ್ಯೆ ಬೆಚ್ಚಿ ಬೀಳಿಸುವ ಅಂಶವೊಂದು ಬಹಿರಂಗಗೊಂಡಿದ್ದು, ದೇಶದಲ್ಲಿ ಸರಾಸರಿ ಪ್ರತಿ ಗಂಟೆಗೊಮ್ಮೆ 4 ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ (Physical Abuse) ಎನ್ನುವ ವಿಚಾರ ಬೆಳಕಿಗೆ ಬಂದಿದೆ. 2017 ಮತ್ತು 2022ರ ಅಂಕಿ-ಅಂಶಗಳ ಪ್ರಕಾರ ಪ್ರತಿ ದಿನ ಸುಮಾರು 86 ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ಪರಿಚಿತರಿಂದಲೇ ದೌರ್ಜನ್ಯ ನಡೆದಿದೆ ಎನ್ನುವುದು ಮತ್ತುಷ್ಟು ಭಯ ಹುಟ್ಟು ಹಾಕಿದೆ.

ಪ್ರತಿ ಗಂಟೆಗೊಮ್ಮೆ ನಡೆಯುವ ನಾಲ್ಕು ಅತ್ಯಾಚಾರ ಪ್ರಕರಣಗಳ ಪೈಕಿ ಮೂರರಲ್ಲಿ ಪರಿಚಿತ ವ್ಯಕ್ತಿಯೇ ದೌರ್ಜನ್ಯ ಎಸಗಿರುವುದನ್ನು ಅಂಕಿ-ಅಂಶ ಬಹಿರಂಗಪಡಿಸಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (National Crime Records Bureau-NCRB)ದ ವಾರ್ಷಿಕ ವರದಿಯ ಪ್ರಕಾರ, 2017 ಮತ್ತು 2022ರ ನಡುವೆ ಭಾರತದಲ್ಲಿ ಒಟ್ಟು 1.89 ಲಕ್ಷ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಕನಿಷ್ಠ 1.79 ಲಕ್ಷ ಪ್ರಕರಣಗಳಲ್ಲಿ ಅತ್ಯಾಚಾರಿ ಪರಿಚಿತ ವ್ಯಕ್ತಿಯೇ ಆಗಿದ್ದು, 9,670 ಪ್ರಕರಣಗಳಲ್ಲಿ ಸಂತ್ರಸ್ತೆಗೆ ಅತ್ಯಾಚಾರಿಯ ಬಗ್ಗೆ ಮಾಹಿತಿ ಇರಲಿಲ್ಲ.

ಸಂತ್ರಸ್ತರ ಪೈಕಿ 18ರಿಂದ 30 ವರ್ಷದೊಳಗಿನವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅಂದರೆ 1.89 ಲಕ್ಷ ಸಂತ್ರಸ್ತೆಯರ ಪೈಕಿ ಈ ವಯೋಮಾನದವರ ಸಂಖ್ಯೆ 1.13 ಲಕ್ಷ. ಇನ್ನು ಪ್ರತಿದಿನ ದಾಖಲಾಗಿ 86 ಪ್ರಕರಣಗಳಲ್ಲಿ 52 ಮಂದಿ 18ರಿಂದ 30 ವರ್ಷದೊಳಗಿನವರು.

ಉದ್ಯೋಗ ಸ್ಥಳದಲ್ಲಿ ಪರಿಸ್ಥಿತಿ ಹೇಗಿದೆ?

ಭಾರತದಾದ್ಯಂತ ವರದಿಯಾದ ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳು ಬಹಳ ಕಡಿಮೆಯಾದರೂ ಈ ಅಂಕಿ-ಅಂಶಗಳೂ ಗಾಬರಿ ತರಿಸುತ್ತವೆ. ಪ್ರತಿದಿನ ಸರಾಸರಿ ಓರ್ವ ಮಹಿಳೆ ಉದ್ಯೋಗದ ಸ್ಥಳ ಅಥವಾ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳವನ್ನು ಎದುರಿಸುತ್ತಾರೆ ಎನ್‌ಸಿಆರ್‌ಬಿ ತಿಳಿಸಿದೆ. ಎನ್‌ಸಿಆರ್‌ಬಿ 2014ರಿಂದ ಕಚೇರಿಗಳಲ್ಲಿ ನಡೆಯುತ್ತಿರುವ ಮಹಿಳೆಯರ ವಿರುದ್ಧದ ದೌರ್ಜನ್ಯ ಪ್ರಕರಣಗಳ ಮಾಹಿತಿ ಕಲೆ ಹಾಕುತ್ತಿದೆ.

ಆರಂಭದ ವರ್ಷಗಳಲ್ಲಿ (2014, 2015) ಎರಡು ವಿಭಾಗಗಳ ಮೂಲಕ ಈ ಅಂಕಿ ಅಂಶವನ್ನು ಕಲೆ ಹಾಕಲಾಗುತ್ತಿತ್ತು. ಕಚೇರಿಗಳಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ಎನ್ನುವ ಎರಡು ವಿಭಾಗಗಳನ್ನು ಮಾಡಿ ಮಾಹಿತಿ ಸಂಗ್ರಹಿಸಲಾಗುತ್ತಿತ್ತು. ಬಳಿಕ ಇವೆರಡನ್ನು ಸಂಯೋಜಿಸಿ ʼಉದ್ಯೋಗದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯʼ ಒಂಬ ಒಂದೇ ವಿಭಾಗದಲ್ಲಿ ಮಾಹಿರಿ ಸಂಗ್ರಹಿಸಿಡಲಾಗುತ್ತಿದೆ.

2014-2022ರ ಮಧ್ಯೆ ಉದ್ಯೋಗದ ಸ್ಥಳಗಳಲ್ಲಿ ಕನಿಷ್ಠ 4,231 ಲೈಂಗಿಕ ದೌರ್ಜನ್ಯ ಪ್ರಕರಗಳು ವರದಿಯಾಗಿವೆ. ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳ ಸಂಖ್ಯೆ ಕಡಿಮೆ ದಾಖಲಾದರೆ ಕೆಲಸಕ್ಕೆ ಸಂಬಂಧಿಸಿದ ಇತರ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದಿದೆ. 2017ರ ನಂತರ ಪ್ರತಿ ವರ್ಷ 400ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.

2014, 2015 ಮತ್ತು 2016ರಲ್ಲಿ ಎನ್‌ಸಿಆರ್‌ಬಿ ಮೇಲಾಧಿಕಾರಿಗಳು ಮತ್ತು ಸಹೋದ್ಯೋಗಿಗಳಿಂದ ನಡೆದ ಅತ್ಯಾಚಾರಗಳ ಸಂಖ್ಯೆಯನ್ನು ಬಹಿರಂಗಪಡಿಸಿದೆ. ಮೂರು ವರ್ಷಗಳಲ್ಲಿ ಇಂತಹ 1,795 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ನಂತರ ಈ ವರದಿಯಲ್ಲಿ ಮೇಲಾಧಿಕಾರಿಗಳು, ಸಹೋದ್ಯೋಗಿಗಳ ಜತೆಗೆ ಕುಟುಂಬ ಸದಸ್ಯರು ಮತ್ತು ಸ್ನೇಹಿತರನ್ನು ಸೇರಿಸಲಾಯಿತು.

ಕಾನೂನು ಏನು ಹೇಳುತ್ತದೆ?

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ 2013ರ ಪ್ರಕಾರ 10ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಎಲ್ಲ ಕಚೇರಿ / ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳದ ದೂರುಗಳನ್ನು ಸ್ವೀಕರಿಸಲು ಆಂತರಿಕ ಸಮಿತಿಗಳನ್ನು (Internal Committees) ರಚಿಸುವುದನ್ನು ಕಡ್ಡಾಯ. ಸಂತ್ರಸ್ತ ಮಹಿಳೆ ಅಥವಾ ಆಕೆಯ ಪರವಾಗಿ ಆಪ್ತರು ಲೈಂಗಿಕ ಕಿರುಕುಳದ ಲಿಖಿತ ದೂರು ಸಲ್ಲಿಸಬಹುದು.

ಇದನ್ನೂ ಓದಿ: Kolkata Doctor Murder Case: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ಏನಿರುತ್ತೆ? ಏನಿರಲ್ಲ?

Continue Reading

ಸ್ಯಾಂಡಲ್ ವುಡ್

70th National Film Awards: ಕನ್ನಡಕ್ಕೆ ಸಿಕ್ಕಿದ್ದು ಒಟ್ಟು 7 ಪ್ರಶಸ್ತಿಗಳು; ಜ್ಯೂರಿಗಳನ್ನೇ ಇಂಪ್ರೆಸ್‌ ಮಾಡಿದ ʻಮಧ್ಯಂತರʼ ಕಿರು ಚಿತ್ರ ಬಗ್ಗೆ ನಿಮಗೆಷ್ಟು ಗೊತ್ತು?

70th National Film Awards: ನಾನ್ ಫೀಚರ್ ವಿಭಾಗದಲ್ಲಿ ‘ಮಧ್ಯಂತರ’ ಕಿರುಚಿತ್ರ ಬಹುವಾಗಿ ಗಮನ ಸೆಳೆದಿದೆ. ಪ್ರಶಸ್ತಿ ಘೋಷಿಸಿದ ಜ್ಯೂರಿಗಳು ಸಹ ‘ಮಧ್ಯಂತರ’ ಸಿನಿಮಾವನ್ನು ಬಹುವಾಗಿ ಕೊಂಡಾಡಿದ್ದಾರೆ. ಈ ಸಿನಿಮಾ ವಿಶೇಷತೆ ಏನು ತಿಳಿಯಲು ಮುಂದೆ ಓದಿ..

VISTARANEWS.COM


on

70th National Film Awards ational Award winner Madhyantara Short Movie
Koo

ಬೆಂಗಳೂರು: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು (70th National Film Awards) ಘೋಷಣೆಯಾಗಿವೆ. ಫೀಚರ್‌ ಫಿಲ್ಮ್ಸ್‌ ವಿಭಾಗದಲ್ಲಿ ಕನ್ನಡ ಚಿತ್ರರಂಗಕ್ಕೆ ಒಟ್ಟು ನಾಲ್ಕು ಪ್ರಶಸ್ತಿಗಳು ಲಭಿಸಿವೆ. ಅತ್ಯುತ್ತಮ ಪ್ರಾದೇಶಿಕ ಚಿತ್ರಗಳ ಪೈಕಿ ‘ಅತ್ಯುತ್ತಮ ಕನ್ನಡ ಸಿನಿಮಾ’ ಪ್ರಶಸ್ತಿ ‘ಕೆಜಿಎಫ್‌ ಚಾಪ್ಟರ್ 2’ ಪಾಲಾಗಿದೆ. ‘ಕೆಜಿಎಫ್ ಚಾಪ್ಟರ್‌ 2’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದವರು ನಿರ್ದೇಶಕ ಪ್ರಶಾಂತ್ ನೀಲ್‌. ಚಿತ್ರವನ್ನ ನಿರ್ಮಿಸಿದವರು ಹೊಂಬಾಳೆ ಫಿಲ್ಮ್ಸ್. ನಾನ್ ಫೀಚರ್ ವಿಭಾಗದಲ್ಲಿ ‘ಮಧ್ಯಂತರ’ ಕಿರುಚಿತ್ರ ಬಹುವಾಗಿ ಗಮನ ಸೆಳೆದಿದೆ. ಪ್ರಶಸ್ತಿ ಘೋಷಿಸಿದ ಜ್ಯೂರಿಗಳು ಸಹ ‘ಮಧ್ಯಂತರ’ ಸಿನಿಮಾವನ್ನು ಬಹುವಾಗಿ ಕೊಂಡಾಡಿದ್ದಾರೆ. ಈ ಸಿನಿಮಾ ವಿಶೇಷತೆ ಏನು ತಿಳಿಯಲು ಮುಂದೆ ಓದಿ..

ಮಧ್ಯಂತರ ಕಿರು ಚಿತ್ರ

ಇದು ಸಿನಿಮಾ ಪ್ರೇಮಿಗಳಿಬ್ಬರ ಕಥೆ. ಬಂಟ್ವಾಳದ ದಿನೇಶ್ ಅವರು ಸ್ವತಃ ಸಿನಿಮಾ ಪ್ರಿಯರು. 27 ವರ್ಷಗಳಿಂದಲೂ ಅವರು ಮನೊರಂಜನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.2022ರ ಮಾರ್ಚ್ ತಿಂಗಳಲ್ಲಿ ‘ಮಧ್ಯಂತರ’ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದರು ದಿನೇಶ್ ಶೆಣೈ.ಸಿನಿಮಾದ ನಿರೂಪಣೆ ತಮಾಷೆಯ ಧಾಟಿಯಲ್ಲಿದ್ದರೂ ಗಂಭೀರವಾದ ವಸ್ತು ವಿಷಯ ಒಳಗೊಂಡಿದೆ. ಮುಖ್ಯ ಪಾತ್ರದಲ್ಲಿ ದಾವಣಗೆರೆಯ ವೀರೇಶ್ ಹಾಗೂ ರಂಗಭೂಮಿ ಹಿನ್ನೆಲೆಯ ಅಜಯ್ ನೀನಾಸಂ ನಟಿಸಿದ್ದಾರೆ.

70th National Film Awards : ಕನ್ನಡಿಗರಿಗೆ ಹೆಮ್ಮೆ ತಂದ ರಿಷಭ್​ ಶೆಟ್ಟಿ, ಕೆಜಿಎಫ್​​; ಮಲಯಾಳಂನ ‘ಆಟಂ’ ಅತ್ಯುತ್ತಮ ಸಿನೆಮಾ; ಸಂಪೂರ್ಣ ಲಿಸ್ಟ್‌ ಇಲ್ಲಿದೆಇದನ್ನೂ ಓದಿ:

ಹೋಟೆಲ್ ಸಪ್ಲೈಯರ್​ಗಳಾಗಿ ಕೆಲಸ ಮಾಡುವ ಇಬ್ಬರಿಗೆ ಸಿನಿಮಾ ಅಂದರೆ ಪಂಚ ಪ್ರಾಣ. ಡಾ ರಾಜ್​ಕುಮಾರ್ ಇವರ ಬಲು ಮೆಚ್ಚಿನ ನಟ. ಸಿನಿಮಾ ನೋಡಿ ಬಂದು ಅದನ್ನು ಗೆಳೆಯರ ಬಳಿ ಹೇಳುವುದು ಇವರ ಮೆಚ್ಚಿನ ಅಭ್ಯಾಸ. ಇದೇ ಪ್ರತಿಭೆಯಿಂದ ಇವರು ಸಿನಿಮಾ ನಿರ್ಮಾಣಕ್ಕೂ ಇಳಿಯುತ್ತಾರೆ. ನಿರ್ಮಾಪಕನಿಗೆ ಇವರು ಹೇಳಿದ ಕತೆಯೊಂದು ಒಪ್ಪಿಗೆ ಆಗಿಬಿಡುತ್ತದೆ. ಮುಂದೇನು? ಎಂದು ತಿಳಿಯಲು ಕಿರು ಚಿತ್ರ ನೋಡಬೇಕು.

16 ಎಂಎಂ ಕ್ಯಾಮೆರಾ ನಲ್ಲಿ ಕೊಡಾಕ್ ರೀಲ್ಸ್​ ಬಳಸಿ ಚಿತ್ರೀಕರಣ ಮಾಡಲಾಗಿದೆ. ಬಳಿಕ ಡಿಜಿಟಲ್‌ ಅಲ್ಲಿ ಕನ್ವರ್ಟ್‌ ಮಾಡಲಾಗಿದೆ. 11 ದಿನದಲ್ಲಿ ಸಿನಿಮಾದ ಚಿತ್ರೀಕರಣವನ್ನು ದಿನೇಶ್ ಪೂರ್ತಿ ಮಾಡಿದ್ದಾರೆ.

ಉಳಿದ ಪ್ರಶಸ್ತಿಗಳು

ಅತ್ಯುತ್ತಮ ಆಕ್ಷನ್ ಡೈರೆಕ್ಷನ್ ಪ್ರಶಸ್ತಿ ಅರ್ಥಾತ್ ಬೆಸ್ಟ್ ಸ್ಟಂಟ್ ಕೊರಿಯೋಗ್ರಫಿ ಅವಾರ್ಡ್‌ ಸಹ ‘ಕೆಜಿಎಫ್‌ ಚಾಪ್ಟರ್ 2’ ಸಿನಿಮಾದ ಪಾಲಾಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರಕ್ಕೆ Anbariv ಸ್ಟಂಟ್ಸ್‌ ಕೊರಿಯೋಗ್ರಫಿ ಮಾಡಿದ್ದರು. ಇದೀಗ Anbariv ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ.ಇನ್ನೂ ಅತ್ಯುತ್ತಮ ನಟ ಪ್ರಶಸ್ತಿ ರಿಷಬ್ ಶೆಟ್ಟಿ ಅವರಿಗೆ ಒಲಿದು ಬಂದಿದೆ. ‘ಕಾಂತಾರ’ ಚಿತ್ರದಲ್ಲಿನ ಆಕ್ಟಿಂಗ್‌ಗಾಗಿ ರಿಷಬ್ ಶೆಟ್ಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರ ‘ಭರಪೂರ ಮನರಂಜನೆ ನೀಡುವ ಅತ್ಯುತ್ತಮ ಜನಪ್ರಿಯ ಚಿತ್ರ’ ಪ್ರಶಸ್ತಿ ಸಿಕ್ಕಿದೆ.

ನಾನ್ ಫೀಚರ್‌ ಫಿಲ್ಮ್ಸ್ ವಿಭಾಗದಲ್ಲಿ ಕನ್ನಡ ಚಿತ್ರರಂಗಕ್ಕೆ ಒಟ್ಟು 3 ಪ್ರಶಸ್ತಿಗಳು ಲಭಿಸಿವೆ. ‘ಅತ್ಯುತ್ತಮ ಸಂಕಲನ’ ಪ್ರಶಸ್ತಿಗೆ ‘ಮಧ್ಯಂತರ’ ಚಿತ್ರಕ್ಕಾಗಿ ಸಂಕಲನಕಾರ (ಎಡಿಟರ್) ಸುರೇಶ್ ಅರಸ್‌ ಭಾಜನರಾಗಿದ್ದಾರೆ.ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಚಲನಚಿತ್ರ ಪ್ರಶಸ್ತಿ ಕನ್ನಡದ ‘ರಂಗ ವೈಭೋಗ’ ಚಿತ್ರದ ಪಾಲಾಗಿದೆ. ಈ ಚಿತ್ರವನ್ನ ಸುನೀಲ್ ಪುರಾಣಿಕ್ ನಿರ್ಮಿಸಿ, ನಿರ್ದೇಶಿಸಿದ್ದಾರೆ.

Continue Reading

ದೇಶ

Kolkata Doctor Murder Case: ಸಂತ್ರಸ್ತೆಯ ದೇಹದಲ್ಲಿ ಪತ್ತೆಯಾಗಿದ್ದು 150 ಗ್ರಾಂ ವೀರ್ಯವಲ್ಲ; ಸ್ಪಷ್ಟನೆ ನೀಡಿದ ವೈದ್ಯರು

Kolkata Doctor Murder Case: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕ್ರೂರವಾಗಿ ಕೊಲೆಗೀಡಾದ ಟ್ರೈನಿ ವೈದ್ಯೆಯ ದೇಹದ ಮೇಲೆ 150 ಗ್ರಾಂ ವೀರ್ಯ ಕಂಡು ಬಂದಿದೆ ಎನ್ನುವ ಸುದ್ದಿಯನ್ನು ವೈದ್ಯರೊಬ್ಬರು ನಿರಾಕರಿಸಿದ್ದಾರೆ. ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಲಾದ 150 ಗ್ರಾಂ ಎನ್ನುವುದು ಗರ್ಭಾಶಯದ ತೂಕವೇ ಹೊರತು ಯಾವುದೇ ದ್ರವದ ತೂಕವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

Kolkata Doctor Murder Case
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ (Kolkata Doctor Murder Case) ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಸಂತ್ರಸ್ತೆಯ ದೇಹದಲ್ಲಿ 150 ಗ್ರಾಂ ವೀರ್ಯ ಕಂಡು ಬಂದಿದೆ ಎನ್ನುವ ಸುದ್ದಿಯನ್ನು ವೈದ್ಯರೊಬ್ಬರು ನಿರಾಕರಿಸಿದ್ದಾರೆ. ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಲಾದ 150 ಗ್ರಾಂ ಎನ್ನುವುದು ಗರ್ಭಾಶಯದ ತೂಕವೇ ಹೊರತು ಯಾವುದೇ ದ್ರವದ ತೂಕವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮೃತ ವೈದ್ಯೆಯ ಶರೀರದಲ್ಲಿ 150 ಗ್ರಾಂ ವೀರ್ಯ ಪತ್ತೆಯಾಗಿದೆ ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ತಿಳಿಸಲಾಗಿದೆ ಎನ್ನುವ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಮರಣೋತ್ತರ ವರದಿಯು ಉಲ್ಲೇಖಿಸಲಾದ 150 ಗ್ರಾಂ ಸಂತ್ರಸ್ತೆಯ ಆಂತರಿಕ ಅವಯವ ವಿಶೇಷವಾಗಿ ಗರ್ಭಾಶಯದ ತೂಕವನ್ನು ಸೂಚಿಸುತ್ತದೆಯೇ ಹೊರತು ಅದು ಯಾವುದೇ ದ್ರವದ ತೂಕವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವೈದ್ಯರ ಸ್ಪಷ್ಟನೆಯಲ್ಲಿ ಏನಿದೆ?

ʼʼಇಂತಹ ಪ್ರಕರಣಗಳಲ್ಲಿ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಒಳ ಅಂಗಗಳ ತೂಕವನ್ನು ಉಲ್ಲೇಖಿಸಲಾಗುತ್ತದೆ. ಹೀಗಾಗಿ 150 ಗ್ರಾಂ ಎನ್ನುವುದು ಗರ್ಭಾಶಯದ ಅಳತೆಯಾಗಿದೆ. ಅಲ್ಲದೆ ಘಟನೆ ನಡೆದ ಸುಮಾರು 5 ಗಂಟೆಗಳ ಬಳಿಕ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಭೇಟಿ ನೀಡಿದ್ದರು. ಹೀಗಾಗಿ ಅಷ್ಟು ದೀರ್ಘ ಸಮಯಗಳ ಕಾಲ ಯಾವುದೇ ದ್ರವ ವಸ್ತು ಅದೇ ಸ್ಥಿತಿಯಲ್ಲಿ ಉಳಿಯಲು ಸಾಧ್ಯವಿಲ್ಲʼʼ ಎಂದು ವೈದ್ಯರು ತಿಳಿಸಿದ್ದಾರೆ. “ಡಿಎನ್ಎ ಪರೀಕ್ಷೆಯ ವರದಿ ಹೊರ ಬಂದ ಬಳಿಕ ಎಲ್ಲ ಗೊಂದಲಗಳಿಗೆ ಉತ್ತರ ಸಿಗಲಿದೆʼʼ ಎಂದು ಅವರು ವಿವರಿಸಿದ್ದಾರೆ.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್‌ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್‌ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.

ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಆಗಸ್ಟ್‌ 9 ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ; ಏಮ್ಸ್‌ ವೈದ್ಯರ ಪ್ರೊಟೆಸ್ಟ್‌-ಪ್ರಾಂಶುಪಾಲರು ರಿಸೈನ್‌

ಅತ್ಯಾಚಾರಕ್ಕೊಳಗಾಗಿ ಕೊಲೆಯಾದ 31 ವರ್ಷದ ವೈದ್ಯೆಯ ದೇಹದಲ್ಲಿ ಅತೀ ಕ್ರೂರವಾಗಿ ಹಲ್ಲೆ ನಡೆಸಿದ್ದನ್ನು ಸೂಚಿಸುವ ಅನೇಕ ಗಾಯದ ಗುರುತುಗಳಿವೆ ಎನ್ನುವುದನ್ನು ಮರಣೋತ್ತರ ಪರೀಕ್ಷೆಯ ವರದಿ ಬಹಿರಂಗಪಡಿಸಿತ್ತು. ʼʼಸಂತ್ರಸ್ತೆಯ ಕಣ್ಣು ಮತ್ತು ಬಾಯಿಯಿಂದ ರಕ್ತಸ್ರಾವವಾಗಿತ್ತು. ಮುಖ ಮತ್ತು ಉಗುರುಗಳ ಮೇಲೆ ಗಾಯಗಳಾಗಿವೆ. ಸಂತ್ರಸ್ತೆಯ ಖಾಸಗಿ ಭಾಗಗಳಿಂದಲೂ ರಕ್ತಸ್ರಾವವಾಗಿದೆ. ಮಾತ್ರವಲ್ಲ ಹೊಟ್ಟೆ, ಎಡಗಾಲಿಗೆ ಗಾಯಗಳಾಗಿವೆ. ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು ತುಟಿ ಹೀಗೆ ಎಲ್ಲ ಅಂಗಗಳಲ್ಲಿಯೂ ಗಾಯದ ಗುರುತುಗಳಿವೆʼʼ ಎಂದು ವರದಿ ತಿಳಿಸಿತ್ತು.

Continue Reading
Advertisement
Bridge Collapse
ವೈರಲ್ ನ್ಯೂಸ್18 mins ago

Bridge Collapse: 9 ವರ್ಷಗಳಿಂದ ನಿರ್ಮಾಣವಾಗುತ್ತಿರುವ ಸೇತುವೆ 3ನೇ ಬಾರಿ ಕುಸಿದು ಬಿತ್ತು; ವಿಡಿಯೊ ನೋಡಿ

Manu Bhaker
ಕ್ರೀಡೆ35 mins ago

Manu Bhaker: 3 ತಿಂಗಳ ರಜೆಯಲ್ಲಿ ಭರತನಾಟ್ಯ, ಕುದುರೆ ಸವಾರಿ, ಸ್ಕೇಟಿಂಗ್ ಕಲಿಯಲಿದ್ದಾರೆ ಮನು ಭಾಕರ್

Physical Abuse
ದೇಶ1 hour ago

Physical Abuse: ದೇಶದಲ್ಲಿ ಪ್ರತಿ ಗಂಟೆಗೊಮ್ಮೆ 4 ಮಹಿಳೆಯರ ಮೇಲೆ ಅತ್ಯಾಚಾರ; ಬೆಚ್ಚಿಬೀಳಿಸುವ ಅಂಕಿ-ಅಂಶ ಬಹಿರಂಗ

Actor Nagabhushan birthday vidhyapathi promo Out
ಸ್ಯಾಂಡಲ್ ವುಡ್2 hours ago

Actor Nagabhushan: ನಾಗಭೂಷಣ್ ಬರ್ತ್‌ಡೇಗೆ ಡಾಲಿ ತಂಡದಿಂದ ಸ್ಪೆಷಲ್ ಗಿಫ್ಟ್‌; ನೋಡಿ ‘ವಿದ್ಯಾಪತಿ’ಯ ಕಿತಾಪತಿ!

Vinesh Phogat
ಕ್ರೀಡೆ2 hours ago

Vinesh Phogat: ತವರಿಗೆ ಮರಳಿದ ವಿನೇಶ್​​​ ಫೋಗಟ್​ಗೆ ಭರ್ಜರಿ ಸ್ವಾಗತ; ಅಭಿಮಾನಿಗಳನ್ನು ಕಂಡು ಕಣ್ಣೀರು

Government Employees
ಕರ್ನಾಟಕ2 hours ago

Government Employees: 7ನೇ ವೇತನ ಆಯೋಗ; ಸರ್ಕಾರಿ ನೌಕರರ ಸಂಘದಿಂದ ಇಂದು ಸಿಎಂ, ಡಿಸಿಎಂಗೆ ಸನ್ಮಾನ; Live ಇಲ್ಲಿದೆ

Viral Video
Latest2 hours ago

Viral Video: ಅಣೆಕಟ್ಟಿನ ಅಂಚಿನಲ್ಲಿ ನಿಂತು ಸ್ಟಂಟ್ ಮಾಡಿದ; ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡ!

Crorepati Sweeper
Latest2 hours ago

Crorepati Sweeper: ಕಸ ಗುಡಿಸುವ ಕಾರ್ಮಿಕನ ಬಳಿ ಇತ್ತು ಐಷಾರಾಮಿ ಕಾರುಗಳು, ಕೋಟಿ ಮೌಲ್ಯದ ಆಸ್ತಿ! ಆತ ಸಂಪಾದಿಸಿದ್ದು ಹೇಗೆ?

70th National Film Awards ational Award winner Madhyantara Short Movie
ಸ್ಯಾಂಡಲ್ ವುಡ್2 hours ago

70th National Film Awards: ಕನ್ನಡಕ್ಕೆ ಸಿಕ್ಕಿದ್ದು ಒಟ್ಟು 7 ಪ್ರಶಸ್ತಿಗಳು; ಜ್ಯೂರಿಗಳನ್ನೇ ಇಂಪ್ರೆಸ್‌ ಮಾಡಿದ ʻಮಧ್ಯಂತರʼ ಕಿರು ಚಿತ್ರ ಬಗ್ಗೆ ನಿಮಗೆಷ್ಟು ಗೊತ್ತು?

Viral Video
Latest2 hours ago

Viral Video: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌