Mohammed Shami Comeback: ಟೀಮ್​ ಇಂಡಿಯಾಕ್ಕೆ ಮರಳುವ ಸೂಚನೆ ನೀಡಿದ ಶಮಿ; ಎನ್​ಸಿಎಯಲ್ಲಿ ಕಠಿಣ ಅಭ್ಯಾಸ - Vistara News

ಕ್ರಿಕೆಟ್

Mohammed Shami Comeback: ಟೀಮ್​ ಇಂಡಿಯಾಕ್ಕೆ ಮರಳುವ ಸೂಚನೆ ನೀಡಿದ ಶಮಿ; ಎನ್​ಸಿಎಯಲ್ಲಿ ಕಠಿಣ ಅಭ್ಯಾಸ

Mohammed Shami Comeback: ಎನ್​ಸಿಎಯಲ್ಲಿ(NCA) ಕಠಿಣ ಬ್ಯಾಟಿಂಗ್, ಬೌಲಿಂಗ್​​ ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಶಮಿ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Mohammed Shami comeback
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿ ಚೇತರಿಕೆ ಕಂಡಿರುವ ಮೊಹಮ್ಮದ್ ಶಮಿ(Mohammed Shami) ಮತ್ತೆ ಟೀಮ್​ ಇಂಡಿಯಾಕ್ಕೆ(Team India) ಕಮ್​ಬ್ಯಾಕ್​(Mohammed Shami Comeback) ಮಾಡುವ ನಿರೀಕ್ಷೆಯಲಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್​ಸಿಎ)ಯಲ್ಲಿ ಕಠಿಣ ಬೌಲಿಂಗ್ ಮತ್ತು ಜಿಮ್​ ವರ್ಕೌಟ್​​ ಮಾಡುತ್ತಿರುವ ವಿಡಿಯೊವನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮುಂದಿನ ತಿಂಗಳು ನಡೆಯುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಎನ್​ಸಿಎಯಲ್ಲಿ(NCA) ಕಠಿಣ ಬ್ಯಾಟಿಂಗ್, ಬೌಲಿಂಗ್​​ ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಶಮಿ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಮುಕ್ತಾಯ ಕಂಡಿದ್ದ ಲಂಕಾ ವಿರುದ್ಧದ ಸರಣಿಯಲ್ಲಿ ಶಮಿ ಆಡಲಿದ್ದಾರೆ ಎನ್ನಲಾಗಿತ್ತು. ಆದರೆ, ಶಮಿ ಇನ್ನೂ ಫಿಟ್​ನೆಸ್​ ಕ್ಲೀಯರೆನ್ಸ್​ ಪಡೆಯದ ಕಾರಣ ಅವರು ಲಂಕಾ ಸರಣಿಗೆ ಆಯ್ಕೆಯಾಗಿರಲಿಲ್ಲ. ದುಲೀಪ್​ ಟ್ರೋಫಿ ಟೂರ್ನಿಯಲ್ಲಿಯೂ ಶಮಿಗೆ ಬಿಸಿಸಿಐ ವಿಶ್ರಾಂತಿ ನೀಡಿದೆ.

ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತ್ತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು. ವಿಶ್ವಕಪ್​ ಬಳಿಕ ಶಮಿ ಇದುವರೆಗೂ ಯಾವುದೇ ಕ್ರಿಕೆಟ್​ ಪಂದ್ಯ ಆಡಿಲ್ಲ. ಗಾಯದಿಂದ ಸಂಪೂರ್ಣ ಚೇತರಿಕೆ ಕಂಡಿರುವ ಶಮಿ ಈಗಾಗಲೇ ಬೌಲಿಂಗ್​ ಅಭ್ಯಾಸ ಕೂಡ ಆರಂಭಿಸಿದ್ದಾರೆ. ಶೀಘ್ರದಲ್ಲೇ ಅವರು ಭಾರತ ತಂಡ ಸೇರುವಂತಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿಗೆ ಲಂಡನ್​ನಲ್ಲಿ ಪಾದದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ವಿಶ್ವಕಪ್​ ಬಳಿಕ ಶಮಿ ಇದುವರೆಗೂ ಯಾವುದೇ ಕ್ರಿಕೆಟ್​ ಪಂದ್ಯ ಆಡಿಲ್ಲ. ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಇದನ್ನೂ ಓದಿ Mohammed Shami : ಭಾರತ ತಂಡ ಬಿಟ್ಟು ಬೇರೆ ತಂಡಕ್ಕೆ ಮರಳಲು ಮೊಹಮ್ಮದ್ ಶಮಿ ನಿರ್ಧಾರ

ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Viral Video: ಜಸ್​ಪ್ರೀತ್​ ಬುಮ್ರಾಗಿಂತ ವೇಗವಾಗಿ ಬೌಲಿಂಗ್​ ನಡೆಸಿ ವಿಕೆಟ್ ಕಿತ್ತ ಶಾಲಾ ಬಾಲಕಿ; ವಿಡಿಯೊ ವೈರಲ್​​

Viral Video: ಫೀಮೇಲ್ ಕ್ರಿಕೆಟ್​ ಎನ್ನುವ ಟ್ವಿಟರ್​ ಎಕ್ಸ್​ ಖಾತೆಯಿಂದ ಪೋಸ್ಟ್ ಆಗಿರುವ ಈ ವಿಡಿಯೊದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬಳು ತನ್ನ ಶಾಲೆಯ ಸಮವಸ್ತ್ರದಲ್ಲೇ ಅತ್ಯಂತ ವೇಗದ ಬೌಲಿಂಗ್​ ನಡೆಸುವ ಮೂಲಕ ಬ್ಯಾಟರ್​ ಅನ್ನು ಕ್ಲೀನ್​ ಬೌಲ್ಟ್​ ಮಾಡಿದ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Koo

ಮುಂಬಯಿ: ಸಾಮಾಜಿಕ ಜಾಲತಾಣದಲ್ಲಿ ಹಲವು ವೈರಲ್​ ವಿಡಿಯೋಗಳು(Viral Video) ಹರಿದಾಡುತ್ತಿರುತ್ತವೆ. ಆದರೆ ಅವುಗಳಲ್ಲಿ ಕೆಲವೊಂದು ವಿಡಿಯೋಗಳು ವಿಶೇಷ ಕಾರಣದಿಂದಾಗಿ ಜನರ ಗಮನ ಸೆಳೆದುಬಿಡುತ್ತದೆ. ಇದೀಗ ಇತಂಹದ್ದೇ ವಿಡಿಯೊವೊಂದು ಕ್ರಿಕೆಟ್​ ಪ್ರಿಯರ ಮನಗೆದ್ದಿದೆ. ಶಾಲಾ ವಿದ್ಯಾರ್ಥಿಯೊಬ್ಬಳು ಜಸ್​ಪ್ರೀತ್​ ಬುಮ್ರಾ ಅವರಂತೆ ವೇಗದ ಬೌಲಿಂಗ್​ ನಡೆಸುತ್ತಿರುವ ವಿಡಿಯೊ ವೈರಲ್​ ಆಗಿದೆ.

ಫೀಮೇಲ್ ಕ್ರಿಕೆಟ್​ ಎನ್ನುವ ಟ್ವಿಟರ್​ ಎಕ್ಸ್​ ಖಾತೆಯಿಂದ ಪೋಸ್ಟ್ ಆಗಿರುವ ಈ ವಿಡಿಯೊದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬಳು ತನ್ನ ಶಾಲೆಯ ಸಮವಸ್ತ್ರದಲ್ಲೇ ಅತ್ಯಂತ ವೇಗದ ಬೌಲಿಂಗ್​ ನಡೆಸುವ ಮೂಲಕ ಬ್ಯಾಟರ್​ ಅನ್ನು ಕ್ಲೀನ್​ ಬೌಲ್ಟ್​ ಮಾಡುತ್ತಿರುವುದನ್ನು ಕಾಣಬಹುದು. ಅತ್ಯುತ್ತಮ ಲೆಂತ್​ ಮತ್ತು ಲೈನ್​ನಲ್ಲಿ ಬೌಲಿಂಗ್​ ನಡೆಸುವ ಈಕೆ ಭವಿಷ್ಯದ ಭಾರತ ಮಹಿಳಾ ತಂಡದ ಸ್ಟಾರ್(Indian Women’s Cricket team)​ ವೇಗಿ ಎಂದು ನೆಟ್ಟಿಗರು ಈಗಲೇ ಭವಿಷ್ಯ ನುಡಿಯಲಾರಂಭಿಸಿದ್ದಾರೆ.

ಕಳೆದ ವರ್ಷ ಹಳ್ಳಿ ಹುಡುಗಿಯೊಬ್ಬಳ ಬ್ಯಾಟಿಂಗ್​ ಕಂಡು ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್(sachin tendulkar)​ ಕೂಡ ಅಚ್ಚರಿಗೊಂಡಿದ್ದರು. ತೆಂಡೂಲ್ಕರ್​ ತಮ್ಮ ಟ್ವಿಟರ್​ನಲ್ಲಿ ಶೇರ್​ ಮಾಡಿ ಈ ಹುಡುಗಿಯ ಬ್ಯಾಟಿಂಗ್​ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿಮ್ಮ ಅತ್ಯದ್ಭುತ ಬ್ಯಾಟಿಂಗ್​ಗೆ ನಾನು ಮನಸೋತಿರುವೆ. ಇದೇ ರೀತಿ ಆಟ ಮುಂದುವರಿಸಿ ಮುಂದೊಂದು ದಿನ ಟೀಮ್​ ಇಂಡಿಯಾದಲ್ಲಿ ನೀವು ಕಾಣಿಸಿಕೊಳ್ಳುವಂತಾಗಲಿ ಎಂದು ಹಾರೈಸಿದ್ದರು.

ಹಳ್ಳಿ ಹುಡುಗಿಯ ಈ ಪರ್ಫೆಕ್ಟ್​ ಬ್ಯಾಟಿಂಗ್​ ಕಂಡು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಕೂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿ, ಹುಡುಗಿಯ ಬ್ಯಾಟಿಂಗ್​ ಕೊಂಡಾಡಿದ್ದರು. ಮಹಿಳೆಯರ ಕ್ರಿಕೆಟ್ ಬೆಳವಣಿಗೆಯ ಹಾದಿಯಲ್ಲಿದೆ ಎಂದು ಹೇಳಿದ್ದರು.

ಎಬಿಡಿ ವಿಲಿಯರ್ಸ್ ಶೈಲಿಯಲ್ಲೇ ಕ್ಯಾಚ್​ ಹಿಡಿದ ಇಂಗ್ಲೆಂಡ್​ ಆಟಗಾರ್ತಿ ಮ್ಯಾಡಿ ವಿಲಿಯರ್ಸ್


ಲಂಡನ್​: ವಿಶ್ವ ಕ್ರಿಕೆಟ್‌ನಲ್ಲಿ ಈಗಾಗಲೇ ಹಲವು ಅದ್ಭುತ ಕ್ಯಾಚ್‌ಗಳು(stunning catch) ದಾಖಲಾಗಿವೆ. ಆ ಸಾಲಿಗೆ ಇದೀಗ ಇಂಗ್ಲೆಂಡ್​ ತಂಡದ ಆಟಗಾರ್ತಿ ಮ್ಯಾಡಿ ವಿಲಿಯರ್ಸ್(Mady Villiers) ಸೇರ್ಪಡೆಗೊಂಡಿದ್ದಾರೆ. ‘ದಿ ಹಂಟ್ರೆಡ್​’ ಕ್ರಿಕೆಟ್(The Hundred)​ ಟೂರ್ನಿಯ ಪಂದ್ಯವೊಂದರಲ್ಲಿ ಮ್ಯಾಡಿ ವಿಲಿಯರ್ಸ್ ಯಾರೂ ಊಹಿಸದ ರೀತಿಯಲ್ಲಿ ಮೇಲಕ್ಕೆ ಜಂಪ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಒಂದನ್ನು ಹಿಡಿಯುವ ಮೂಲಕ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಸದ್ಯ ಈ ಕ್ಯಾಚ್​ನ ವಿಡಿಯೊ ವೈರಲ್​ ಆಗುತ್ತಿದ್ದು, ಮಹಿಳಾ ಕ್ರಿಕೆಟ್​ನಲ್ಲಿ ಕಂಡು ಬಂದ ಅತ್ಯದ್ಭುತ ಕ್ಯಾಚ್​ ಎಂದು ಕ್ರಿಕೆಟ್​ ಪಂಡಿತರು ಹೇಳಿದ್ದಾರೆ.

ಇದನ್ನೂ ಓದಿ Viral Video: ಕಂಬಕ್ಕೆ ಸಿಲುಕಿದ ತ್ರಿವರ್ಣ ಧ್ವಜ; ಮಿಂಚಂತೆ ಬಂದು ಧ್ವಜ ಬಿಡಿಸಿದ ಹಕ್ಕಿ; ಅಪರೂಪದ ಘಟನೆ!

ಓವಲ್‌ ಇನ್ವಿನ್ಸಿಬಲ್‌ ತಂಡದ ಪರವಾಗಿ ಆಡುತ್ತಿರುವ 25 ವರ್ಷದ ಮ್ಯಾಡಿ ವಿಲಿಯರ್ಸ್‌ 30ಯಾರ್ಡ್​ನಲ್ಲಿ ಫೀಲ್ಡಿಂಗ್​ ನಡೆಸುತ್ತಿದ್ದರು. ಈ ವೇಳೆ ಎದುರಾಳಿ ತಂಡದ ಆಟಗಾರ್ತಿ ಬೌಂಡರಿ ಕಡೆಗೆ ಬಾರಿಸಿದ ಚೆಂಡನ್ನು ಕಣ್ಣು ಮಿಟುಕಿಸುವಷ್ಟರಲ್ಲಿ ಮೇಲಕ್ಕೆ ಜಿಗಿದು ತನ್ನ ಎಡಗೈಯಿಂದ ಕ್ಯಾಚ್​ ಹಿಡಿದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಈ ಕ್ಯಾಚ್​ ಕಂಡ ಪ್ರೇಕ್ಷಕರು ಒಂದು ಕ್ಷಣ ದಂಗಾಗಿದ್ದಾರೆ. ಅತ್ತ ಕಾಮೆಂಟ್ರಿ ನಡೆಸುತ್ತಿದ್ದವರು, ಕ್ಯಾಚ್‌ ಆಫ್‌ ದಿ ಟೂರ್ನಮೆಂಟ್‌ ಎಂದು ಬಣ್ಣಿಸಿದ್ದಾರೆ. ಟ್ರೆಂಟ್‌ ರಾಕೆಟ್ಸ್‌ ತಂಡ ಆರಂಭಿ ಆಟಗಾರ್ತಿ ಬ್ರಯೋನಿ ಸ್ಮಿತ್ ಅವರ ಕ್ಯಾಚ್​ ಇದಾಗಿತ್ತು.

Continue Reading

ಕ್ರೀಡೆ

Pakistan Cricket: ಬಾಡಿಗೆ ಫ್ಲಡ್‌ಲೈಟ್‌ ಅಳವಡಿಸಿ ಚಾಂಪಿಯನ್‌ ಟ್ರೋಫಿ ನಡೆಸಲು ಮುಂದಾದ ಪಾಕಿಸ್ತಾನ

Pakistan Cricket:ಕೆಲವು ತಿಂಗಳ ಹಿಂದೆ ಲಾಹೋರ್​ ಕ್ರಿಕೆಟ್​ ಮೈದಾನದಲ್ಲಿ ಬೆಳೆದಿದ್ದ ಭಾರೀ ಗಾತ್ರದ ಹುಲ್ಲುಗಳನ್ನು ಕಟಾವು ಮಾಡುತ್ತಿರುವ ವಿಡಿಯೊ ವೈರಲ್​ ಆಗಿತ್ತು.

VISTARANEWS.COM


on

Pakistan Cricket
Koo

ಕರಾಚಿ: ಮುಂದಿನ ವರ್ಷ ನಡೆಯುವ ಚಾಂಪಿಯನ್‌ ಟ್ರೋಫಿಗಾಗಿ(champions trophy 2025) ಎಲ್ಲ ಸಿದ್ಧತೆ ಆರಂಭಿಸಿದ್ದೇವೆ ಎಂದು ಕಟು ಸತ್ಯ ಮರೆಮಾಚಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಪಾಕಿಸ್ತಾನ ಕ್ರಿಕೆಟ್(Pakistan Cricket)​ ಮಂಡಳಿಯ ಪರಿಸ್ಥಿತಿ ಕಂಡು ಇದೀಗ ನಗುವಂತಾಗಿದೆ. ಹೌದು, ತನ್ನ ಕ್ರೀಡಾಂಗಣಗಳನ್ನು ಸಿದ್ಧಪಡಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (Pakistan Cricket Board), ಕರಾಚಿ ಹಾಗೂ ಲಾಹೋರ್‌ ಕ್ರೀಡಾಂಗಣಗಳಿಗೆ ಫ್ಲಡ್‌ಲೈಟ್‌ಗಳನ್ನು ಬಾಡಿಗೆಗೆ ಪಡೆಯಲಿದೆ ಎಂದು ತಿಳಿದುಬಂದಿದೆ.

ಕರಾಚಿ ಹಾಗೂ ಲಾಹೋರ್‌ನಲ್ಲಿ ಈಗಾಗಲೇ ಇರುವ ಫ್ಲಡ್‌ಲೈಟ್‌ಗಳು ಹಳೆಯದಾಗಿವೆ. ಹೀಗಾಗಿ ಅಲ್ಲಿನ ಫ್ಲಡ್‌ಲೈಟ್‌ಗಳನ್ನು ಹಣ ಉಳಿತಾಯಕ್ಕಾಗಿ ಕ್ವೆಟ್ಟಾ ಹಾಗೂ ರಾವಲ್ಪಿಂಡಿ ಕ್ರೀಡಾಂಗಣಗಳಿಗೆ ಸ್ಥಳಾಂತರ ಮಾಡಿ, ಕರಾಚಿ ಹಾಗೂ ಲಾಹೋರ್‌ಗೆ ಬೇಕಾದ ಫ್ಲಡ್‌ಲೈಟ್‌ಗಳನ್ನು ಬಾಡಿಗೆಗೆ ಪಡೆಯಲು ಪಿಸಿಬಿ ಈಗಾಗಲೇ ಟೆಂಡರ್‌ ಕೂಡಾ ಆಹ್ವಾನಿಸಿದೆ ಎನ್ನಲಾಗಿದೆ. ಈ ವಿಚಾರ ತಿಳಿದ ನೆಟ್ಟಿಗರು ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.

ಕೆಲವು ತಿಂಗಳ ಹಿಂದೆ ಲಾಹೋರ್​ ಕ್ರಿಕೆಟ್​ ಮೈದಾನದಲ್ಲಿ ಬೆಳೆದಿದ್ದ ಭಾರೀ ಗಾತ್ರದ ಹುಲ್ಲುಗಳನ್ನು ಕಟಾವು ಮಾಡುತ್ತಿರುವ ವಿಡಿಯೊ ವೈರಲ್​ ಆಗಿತ್ತು. ಎಷ್ಟೇ ದಯನೀಯ ಪರಿಸ್ಥಿತಿಯ ಇದ್ದರೂ ಕೂಡ ಪಾಕ್​ ಬಡಾಯಿ ಕೊಚ್ಚಿಕೊಳ್ಳುತ್ತಿರುವುದನ್ನು ಮಾತ್ರ ನಿಲ್ಲಿಸುತ್ತಿಲ್ಲ.

ಚಾಂಪಿಯನ್ಸ್ ಟ್ರೋಫಿಯಲ್ಲಿ(ICC Champions Trophy) ಭಾರತ(champions trophy ind vs pak) ತಂಡ ಪಾಲ್ಗೊಳ್ಳಲಿದೆಯಾ? ಇಲ್ಲವಾ? ಎಂಬ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಇದುವರೆಗೂ ಈ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಲಭಿಸಿಲ್ಲ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಭಾರತ ಮತ್ತು ಪಾಕ್​ ನಡುವಣ ಪಂದ್ಯ ಮಾರ್ಚ್ 1 ರಂದು ಲಾಹೋರ್​ನಲ್ಲಿ ನಡೆಯಬೇಕಿದೆ.

ಇದನ್ನೂ ಓದಿ Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

ಒಂದೊಮ್ಮೆ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದೆ. ಕ್ರಿಕೆಟ್​ನಲ್ಲಿ ಟೀಮ್​ ಇಂಡಿಯಾಗೆ ಇರುವ ಕ್ರೇಜ್ ಮತ್ತು ಬೇಡಿಕೆ​ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್​ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್​ ಮೇಲೆ ಇರುವ ಕಳಂಕವೂ ದೂರವಾಗಲಿದೆ. ಅಲ್ಲದೆ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ.

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಪಿಸಿಬಿಯ ಮನವಿಗೆ ಐಸಿಸಿ ಸ್ಪಂದಿಸಿದ್ದು, ಹೈಬ್ರಿಡ್​ ಮಾದರಿಯ ಪಂದ್ಯಗಳಿಗೆ ಐಸಿಸಿ ಅನುಮತಿಸಿಲ್ಲ ಎಂದು ವರದಿಯಾಗಿದೆ. ಈ ವಿಚಾವಾಗಿ ಈಗಾಗಲೇ ಬಿಸಿಸಿಐ ಜತೆ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಒಟ್ಟಾರೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಭಾರತ ಚಾಂಪಿಯನ್ಸ್​ ಟ್ರೋಫಿ ಆಡುವ ಬಗ್ಗೆ ನಿರ್ಧಾರವಾಗಲಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.

Continue Reading

ಕ್ರೀಡೆ

Robin Uthappa: ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಬಿನ್ ಉತ್ತಪ್ಪಗೆ ಬಿಗ್ ರಿಲೀಫ್; ಜಾಮೀನು ರಹಿತ ವಾರೆಂಟ್​ಗೆ ಹೈಕೋರ್ಟ್ ತಡೆ

Robin Uthappa: ಉತ್ತಪ್ಪ ಅವರು 2022ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. 2006 ರಲ್ಲಿ ಇಂಗ್ಲೆಂಡ್‌ ವಿರುದ್ಧದ ಏಕದಿನ ಪಂದ್ಯದ ಮೂಲಕ ಭಾರತ ತಂಡಕ್ಕೆ ಪಾದರ್ಪಣೆ ಮಾಡಿದ ರಾಬಿನ್‌ ಉತ್ತಪ್ಪ, 46 ಏಕದಿನ ಪಂದ್ಯಗಳನ್ನು ಆಡಿದ್ದು, 934 ರನ್‌ ಗಳನ್ನು ಗಳಿಸಿದ್ದಾರೆ.

VISTARANEWS.COM


on

Robin Uthappa
Koo

ಮುಂಬಯಿ: ಚೆಕ್ ಬೌನ್ಸ್ ಪ್ರಕರಣದಲ್ಲಿ(Robin Uthappa cheque bounce case) ಟೀಮ್​ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ರಾಬಿನ್​ ಉತ್ತಪ್ಪ(Robin Uthappa) ಅವರಿಗೆ ಮ್ಯಾಜಿಸ್ಟ್ರೇಟ್ ನೀಡಿದ್ದ ಜಾಮೀನು ರಹಿತ ವಾರೆಂಟ್​ಗೆ ಮುಂಬೈ ಹೈಕೋರ್ಟ್ ತಡೆ ನೀಡಿದೆ. ಹೀಗಾಗಿ ಅವರು ನಿರಾಳರಾಗಿದ್ದಾರೆ. ಉತ್ತಪ್ಪ ವಿರುದ್ಧದ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು.

ನ್ಯಾಯಮೂರ್ತಿ ನೀಲಾ ಘೋಖಲೆ ನೇತೃತ್ವದ ಪೀಠ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದು, ಉತ್ತಪ್ಪ ಪರ ವಕೀಲರು ಸೆಪ್ಟೆಂಬರ್ 6ರೊಳಗೆ ವಿಚಾರಣೆಗೆ ಹಾಜರಾಗುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧದ ಜಾಮೀನು ರಹಿತ ಬಂಧನ ವಾರೆಂಟ್​​ಗೆ ತಡೆ ನೀಡಲಾಗಿದೆ.

ರಾಬಿನ್ ಉತ್ತಪ್ಪ ಮಧ್ಯವರ್ತಿ ಕಂಪನಿ ಮೂಲಕ ಸೆನಾಟರ್ ಪ್ರವೇಟ್ ಲಿಮಿಟೆಡ್ ಕಂಪನಿ ಜತೆ ಉಡುಪುಗಳ ರಾಯಭಾರಿಯಾಗಿ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಕಂಪನಿ ಜತೆ ಉತ್ತಪ್ಪ ಸಂಬಂಧ ಕಡಿದುಕೊಂಡಿದ್ದರು. ಆದರೆ, ಆ ಬಳಿಕ ನಡೆದ ಪತ್ರ ವ್ಯವಹಾರಗಳು ಉತ್ತಪ್ಪ ಗಮನಕ್ಕೆ ಬಂದಿರಲಿಲ್ಲ. ಸಮನ್ಸ್ ಮತ್ತು ವಾರಂಟ್‌ಗಳು ಸೆಂಟಾರಸ್‌ನ ನೋಂದಾಯಿತ ಕಚೇರಿಗೆ ಹೋಗುತ್ತಿದ್ದವು. ಹೀಗಾಗಿ ಉತ್ತಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಉತ್ತಪ್ಪ ಅವರು ಏಪ್ರಿಲ್ 28, 2024 ರಂದು ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಕರೆ ಮಾಡಿದಾಗ ಮಾತ್ರ ಬಾಕಿ ಇರುವ ಘೋಷಣೆ ಮತ್ತು ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿರುವುದು ತಿಳಿದುಕೊಂಡಿದ್ದಾರೆ.

ಇದನ್ನೂ ಓದಿ Viral Video: ಉತ್ತಪ್ಪಮ್‌ ಮೇಲೆ ಮೂಡಿದ ಕಲಾಕೃತಿ; ತಿನ್ನಲು ಮನಸ್ಸೇ ಬರದು ಎಂದ ನೆಟ್ಟಿಗರು

ನಂತರ ಉತ್ತಪ್ಪ ಜಾಮೀನು ರಹಿತ ವಾರೆಂಟ್ ರದ್ದುಗೊಳಿಸುವಂತೆ ಕೋರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಆದರೆ ಅವರ ವಿನಂತಿಯನ್ನು ತಿರಸ್ಕರಿಸಲಾಗಿತ್ತು. ಸದ್ಯ ಉತ್ತಪ್ಪ ಜಾಮೀನು ರಹಿತ ಬಂಧನ ವಾರೆಂಟ್​​ನಿಂದ ಮುಕ್ತರಾಗಿದ್ದಾರೆ.

ಉತ್ತಪ್ಪ ಅವರು 2022ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. 2006 ರಲ್ಲಿ ಇಂಗ್ಲೆಂಡ್‌ ವಿರುದ್ಧದ ಏಕದಿನ ಪಂದ್ಯದ ಮೂಲಕ ಭಾರತ ತಂಡಕ್ಕೆ ಪಾದರ್ಪಣೆ ಮಾಡಿದ ರಾಬಿನ್‌ ಉತ್ತಪ್ಪ, 46 ಏಕದಿನ ಪಂದ್ಯಗಳನ್ನು ಆಡಿದ್ದು, 934 ರನ್‌ ಗಳನ್ನು ಗಳಿಸಿದ್ದಾರೆ. 86 ಅವರ ಸರ್ವಾಧಿಕ ರನ್.‌ 2007 ರ ಟಿ-20 ವಿಶ್ವಕಪ್‌ ತಂಡಕ್ಕೆ ಆಯ್ಕೆಯಾಗಿದ್ದ ಉತ್ತಪ್ಪ ಪಾಕಿಸ್ತಾನ ವಿರುದ್ಧದ ಸಮಬಲಗೊಂಡ ಪಂದ್ಯದಲ್ಲಿ ಬಾಲ್‌ ಶೂಟೌಟ್​ನಲ್ಲಿ ಗೆಲ್ಲಲು ಪ್ರಧಾನ ಪಾತ್ರ ವಹಿಸಿದ್ದರು. 13 ಅಂತಾರಾಷ್ಟ್ರೀಯ ಟಿ-20 ಪಂದ್ಯವನ್ನಾಡಿರುವ ಅವರು, 118.01 ಸ್ಟ್ರೈಕ್‌ ರೇಟ್‌ ನೊಂದಿಗೆ 249 ರನ್‌ ಗಳಿಸಿದ್ದಾರೆ.

2015 ರಲ್ಲಿ ಕೊನೆಯ ಬಾರಿ ಜಿಂಬಾಬ್ಬೆ ವಿರುದ್ಧದ ಏಕದಿನ ಹಾಗೂ ಟಿ-20 ಯನ್ನು ಆಡಿದ್ದರು. ಐಪಿಎಲ್‌ ನಲ್ಲಿ ಮಂಬಯಿ, ಆರ್‌ ಸಿಬಿ, ಕೆಕೆಆರ್‌, ರಾಜಸ್ಥಾನ್‌ ರಾಯಲ್ಸ್‌, ಸಿಎಸ್‌ ಕೆ ಪರವಾಗಿ ಆಡಿದ್ದರು. ಐಪಿಎಲ್‌ ನಲ್ಲಿ 205 ಪಂದ್ಯವನ್ನಾಡಿ ಒಟ್ಟು 4952 ರನ್‌ ಗಳಿಸಿದ್ದಾರೆ.

Continue Reading

ಕ್ರೀಡೆ

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್‌ ಆತಿಥ್ಯಕ್ಕೆ ಮುಂದಾದ ಜಿಂಬಾಬ್ವೆ

ICC Women’s T20 World Cup: ಕ್ರಿಕ್ ​ಇನ್ಫೋ ವರದಿಯ ಪ್ರಕಾರ ಜಿಂಬಾಬ್ವೆ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯ ಆತಿಥ್ಯವಹಿಸಿಕೊಳ್ಳಲು ಆಸಕ್ತಿ ಹೊಂದಿದೆ ಎಂದು ತಿಳಿಸಿದೆ.

VISTARANEWS.COM


on

ICC Women's T20 World Cup
Koo

ಮುಂಬಯಿ: ಬಾಂಗ್ಲಾದೇಶದಲ್ಲಿ(bangladesh violence)  ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಅಲ್ಲಿನ ನಾಗರೀಕರು ನಡೆಸುತ್ತಿರುವ ಪ್ರತಿಭಟನೆ, ಗಲಭೆಗಳಿಂದ ಸಂಭವಿಸಿರುವ ಬಿಕ್ಕಟ್ಟಿನಿಂದಾಗಿ ಮುಂಬರುವ ಮಹಿಳಾ ಟಿ20 ವಿಶ್ವಕಪ್‌(ICC Women’s T20 World Cup) ಪಂದ್ಯಾವಳಿಯನ್ನು ಆಯೋಜಿಸಲು ಐಸಿಸಿ ಪರ್ಯಾಯ ಸ್ಥಳವನ್ನು ಹುಡುಕುತ್ತಿದ್ದ ವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಈ ಪಂದ್ಯಾವಳಿಗೆ ಭಾರತ ಆತಿಥ್ಯ ವಹಿಸುವುದಿಲ್ಲ ಎಂದು ಹೇಳಿದ್ದರು. ಇದೀಗ ಜಿಂಬಾಬ್ವೆ ಟೂರ್ನಿಯ ಆತಿಥ್ಯ ವಹಿಸಿಕೊಳ್ಳಲು ಸಿದ್ಧವಾಗಿದೆ ಎಂದು ವರದಿಯಾಗಿದೆ.

ಕ್ರಿಕ್ ​ಇನ್ಫೋ ವರದಿಯ ಪ್ರಕಾರ ಜಿಂಬಾಬ್ವೆ ಟೂರ್ನಿಯ ಆತಿಥ್ಯವಹಿಸಿಕೊಳ್ಳಲು ತಮ್ಮ ಆಸಕ್ತಿಯನ್ನು ಐಸಿಸಿಗೆ ವ್ಯಕ್ತಪಡಿಸಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಗುರುವಾರವಷ್ಟೇ ಮಾಧ್ಯಮವೊಂದರ ಜತೆ ಮಾತನಾಡಿದ್ದ ಜಯ್‌ ಶಾ, “ಮಹಿಳಾ ಟಿ20 ವಿಶ್ವಕಪ್‌ ಆಯೋಜನೆಗೆ ಐಸಿಸಿ ನಮ್ಮನ್ನು ಸಂಪರ್ಕಿಸಬಹುದು. ಆದರೆ ನಾನು ಇದನ್ನು ನಿರಾಕರಿಸುತ್ತೇನೆ ಎಂದಿದ್ದರು. 

ಕೆಲ ದಿನಗಳ ಹಿಂದೆ ಬಾಂಗ್ಲಾದೇಶ ಕ್ರಿಕೆಟ್​ ಮಂಡಳಿ ಸೇನಾ ಮುಖ್ಯಸ್ಥ ಜನರಲ್‌ ವಕಾರ್‌ ಜಮಾನ್‌ ಅವರಿಗೆ ಪತ್ರ ಬರೆದು, ಬಾಂಗ್ಲಾದೇಶದಲ್ಲಿ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ನಡೆಸಿಕೊಡಲು ಸಹಾಯ ಮಾಡಬೇಕು ಎಂದು ಕೋರಿತ್ತು. ಸದ್ಯಕ್ಕೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸುವಂತೆ ಕಾಣುತ್ತಿಲ್ಲ ಹೀಗಾಗಿ ಐಸಿಸಿ ಪರ್ಯಾಯ ಸ್ಥಳದ ಹುಡುಕಾಟ ನಡೆಸುತ್ತಿದೆ. ಮೂಲ ವೇಳಾಪಟ್ಟಿಯ ಪ್ರಕಾರ ಈ ಟೂರ್ನಿ ಅಕ್ಟೋಬರ್‌ನಲ್ಲಿ ಆರಂಭಗೊಳ್ಳಬೇಕು.

ಶೇಕ್‌ ಹಸೀನಾ ಅವರು ರಾಜೀನಾಮೆ ನೀಡಿ ಪಲಾಯನ ಮಾಡಿದ ಬಳಿಕ ನಡೆದ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮನೆಗಳು, ವ್ಯವಹಾರಗಳು ಮತ್ತು ದೇವಾಲಯಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರದಲ್ಲಿ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 45 ಜನರು ಗಾಯಗೊಂಡಿದ್ದಾರೆ. ಬಾಂಗ್ಲಾದೇಶದ 17 ಕೋಟಿ ಜನಸಂಖ್ಯೆಯ ಸುಮಾರು 8 ಪ್ರತಿಶತ ಹಿಂದೂಗಳಿದ್ದಾರೆ. ಇವರು ಸಾಂಪ್ರದಾಯಿಕವಾಗಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರು. ಹೀಗಾಗಿ ಇವರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎನ್ನಲಾಗಿದೆ.

ನೊಬೆಲ್ ಪ್ರಶಸ್ತಿ ವಿಜೇತ ಅರ್ಥ ಶಾಸ್ತ್ರಜ್ಞ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಗುರುವಾರ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ನೇಮಿಸಲಾಯಿತು. ಸಂವಿಧಾನದ ಅಡಿಯಲ್ಲಿ, 90 ದಿನಗಳಲ್ಲಿ ಚುನಾವಣೆಯನ್ನು ನಡೆಸಬೇಕಾಗಿದೆ. ಆದರೆ ಯೂನಸ್ ಹಾಗೂ ಮಿಲಿಟರಿ ಮತ್ತು ಅಧ್ಯಕ್ಷರು, ಚುನಾವಣೆಗಳು ಯಾವಾಗ ನಡೆಯುತ್ತವೆ ಎಂಬುದರ ಕುರಿತು ಪ್ರತಿಕ್ರಿಯಿಸಿಲ್ಲ.

Continue Reading
Advertisement
Kundapura Kannada Habba
ಕರ್ನಾಟಕ4 mins ago

Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

NPS News
ಕರ್ನಾಟಕ8 mins ago

NPS News: ಹೊಸ ಪಿಂಚಣಿ ರದ್ದುಗೊಳಿಸಲು ಸಮಿತಿ ಪುನರ್‌ ರಚನೆ; ಎನ್‌ಪಿಎಸ್‌ ನೌಕರರ ಸಂಘ ವಿರೋಧ

ಪ್ರಮುಖ ಸುದ್ದಿ48 mins ago

7th pay commission : 7ನೇ ವೇತನ ಆಯೋಗ ಜಾರಿ ಬಳಿಕ ನೌಕರರ ಸಂಬಳ ಏರಿಕೆ ಎಷ್ಟು? ಅಧಿಕೃತ ಪಟ್ಟಿ ಬಿಡುಗಡೆ

Prabhas New Film
ಸಿನಿಮಾ1 hour ago

Prabhas New Film: ಹೊಸ ಯುದ್ಧ ಶುರು; ಪ್ರಭಾಸ್ ಅಭಿನಯದ ಮುಂದಿನ ಚಿತ್ರ ಸುಳಿವು!

NPS
ಬೆಂಗಳೂರು1 hour ago

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ

TJ Abraham
ಪ್ರಮುಖ ಸುದ್ದಿ2 hours ago

TJ Abraham : ಎಸ್ಎಂ ಕೃಷ್ಣರಿಂದ ಹಿಡಿದು ಸಿದ್ದರಾಮಯ್ಯವರೆಗೆ; ಕರ್ನಾಟಕ ರಾಜಕೀಯದ ದೊಡ್ಡ ಹುಲಿಗಳನ್ನೇ ಬೋನಿಗೆ ಬೀಳಿಸಿದ ಟಿ ಜೆ ಅಬ್ರಾಹಂ

Positive Pay System
ವಾಣಿಜ್ಯ2 hours ago

Positive Pay System: ಏನಿದು ಪಾಸಿಟಿವ್‌ ಪೇ ಸಿಸ್ಟಮ್‌? ಚೆಕ್ ಪಾವತಿ ಸುರಕ್ಷಿತಗೊಳಿಸುವುದು ಹೇಗೆ?

Dog attack
ವೈರಲ್ ನ್ಯೂಸ್3 hours ago

Dog Attack: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Kannada New Movie
ಬೆಂಗಳೂರು3 hours ago

Kannada New Movie: ಮಂಸೋರೆ ನಿರ್ದೇಶನದ ʼದೂರ ತೀರ ಯಾನʼ ಟೈಟಲ್ ಟೀಸರ್ ರಿಲೀಸ್‌

pralhad Joshi
ಬೆಂಗಳೂರು4 hours ago

Pralhad Joshi: ಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗಿಯೇ ಇದೆ; ಪ್ರಲ್ಹಾದ್‌ ಜೋಶಿ ಸಮರ್ಥನೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌