Virat Kohli: ಕೊಹ್ಲಿಯ ಮೊದಲ ಅಂತಾರಾಷ್ಟ್ರೀಯ ಪಂದ್ಯಕ್ಕೆ ತುಂಬಿತು 16 ವರ್ಷ - Vistara News

ಕ್ರೀಡೆ

Virat Kohli: ಕೊಹ್ಲಿಯ ಮೊದಲ ಅಂತಾರಾಷ್ಟ್ರೀಯ ಪಂದ್ಯಕ್ಕೆ ತುಂಬಿತು 16 ವರ್ಷ

Virat Kohli: ವಿರಾಟ್​ ಕೊಹ್ಲಿ ಅವರು ಆಗಸ್ಟ್​ 18, 2008ರಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತ ತಂಡದ ಪರ ಪದಾರ್ಪಣೆ ಮಾಡಿದರು. ಆಗ ತಾನೆ ಅಂಡರ್​-19 ವಿಶ್ವಕಪ್​ ಗೆದ್ದಿದ್ದ ಅವರಿಗೆ ಸಚಿನ್​ ತೆಂಡೂಲ್ಕರ್​ ಮತ್ತು ವೀರೇಂದ್ರ ಸೆಹವಾಗ್​ ಅವರ ಅನುಪಸ್ಥಿತಿಯಲ್ಲಿ ಆರಂಭಿಕಾಗಿ ಆಡುವ ಅವಕಾಶ ನೀಡಲಾಗಿತ್ತು.

VISTARANEWS.COM


on

virat kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ, ದಾಖಲೆಗಳ ಸರದಾರ, ಕಿಂಗ್​ ಖ್ಯಾತಿಯ(king kohli) ವಿರಾಟ್​ ಕೊಹ್ಲಿ(Virat Kohli) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿರಿಸಿ ಇಂದಿಗೆ 16 ವರ್ಷ ತುಂಬಿದೆ. ಅವರ ಈ ಕ್ರಿಕೆಟ್​ ವೃತ್ತಿ ಬದುಕಿನಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದಾರೆ.

ಲಂಕಾ ವಿರುದ್ಧ ಪದಾರ್ಪಣೆ


ವಿರಾಟ್​ ಕೊಹ್ಲಿ ಅವರು ಆಗಸ್ಟ್​ 18, 2008ರಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತ ತಂಡದ ಪರ ಪದಾರ್ಪಣೆ ಮಾಡಿದರು. ಆಗ ತಾನೆ ಅಂಡರ್​-19 ವಿಶ್ವಕಪ್​ ಗೆದ್ದಿದ್ದ ಅವರಿಗೆ ಸಚಿನ್​ ತೆಂಡೂಲ್ಕರ್​ ಮತ್ತು ವೀರೇಂದ್ರ ಸೆಹವಾಗ್​ ಅವರ ಅನುಪಸ್ಥಿತಿಯಲ್ಲಿ ಆರಂಭಿಕಾಗಿ ಆಡುವ ಅವಕಾಶ ನೀಡಲಾಗಿತ್ತು. ತಮ್ಮ ಚೊಚ್ಚಲ ಪಂದ್ಯದಲ್ಲಿ ಅವರು 12 ರನ್​ ಗಳಿಸಿ ನುವಾನ್ ಕುಲಶೇಖರ ಅವರಿಗೆ ವಿಕೆಟ್​ ಒಪ್ಪಿಸಿದ್ದರು. ಆದರೆ ನಾಲ್ಕನೇ ಪಂದ್ಯದಲ್ಲಿ 54 ರನ್​ ಗಳಿಸಿ ತಮ್ಮ ಚೊಚ್ಚಲ ಅರ್ಧಶತಕವನ್ನು ಬಾರಿಸಿದ್ದರು. ಅವರು ಭಾರತ ತಂಡಕ್ಕೆ ಪದಾರ್ಪಣೆ ಮಾಡುವ ವೇಳೆ ಕೊಹ್ಲಿಗೆ 19 ವರ್ಷ. ಕೇವಲ 8 ಲಿಸ್ಟ್​ ಎ ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದರು.

ಡಿಸೆಂಬರ್ 24, 2009ರಲ್ಲಿ ಶ್ರೀಲಂಕಾ ವಿರುದ್ಧ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅವರು 111 ಎಸೆತಗಳಲ್ಲಿ 1 ಸಿಕ್ಸರ್​ ಹಾಗೂ 14 ಫೋರ್​ಗಳೊಂದಿಗೆ 107 ರನ್ ಬಾರಿಸಿ ಔಟಾದರು. ಇದು ಅವರ ಚೊಚ್ಚಲ ಅಂತಾರಾಷ್ಟ್ರೀಯ ಶತಕವಾಗಿತ್ತು.

ಅಮೋಘ ಸಾಧನೆ

35 ವರ್ಷದ ವಿರಾಟ್ ಕೊಹ್ಲಿ ಅವರು ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್​​ ಅವರ ಏಕದಿನ ಕ್ರಿಕೆಟ್​ನ ಸಾರ್ವಕಾಲಿಕ 49 ಶತಕದ ದಾಖಲೆಯನ್ನು ಮುರಿದಿದ್ದರು. ಈ ಮೂಲಕ ಏಕದಿನ ಕ್ರಿಕೆಟ್​ನೂತನ ಸಾಮ್ರಾಟನಾಗಿ ಹೊರಹೊಮ್ಮಿದ್ದರು. ಇದುವರೆಗೆ ಕೊಹ್ಲಿ ಒಟ್ಟು 295 ಏಕದಿನ ಪಂದ್ಯಗಳನ್ನು ಆಡಿದ್ದು 58.18 ರ ಸರಾಸರಿಯಲ್ಲಿ ಬ್ಯಾಟ್​ ಬೀಸಿ 13906 ರನ್ ಗಳಿಸಿದ್ದಾರೆ. ಇದರಲ್ಲಿ 50 ಶತಕ ಮತ್ತು 72 ಅರ್ಧಶತಕ ಒಳಗೊಂಡಿದೆ. ಬೌಲಿಂಗ್​ನಲ್ಲೂ 5 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ Virat Kohli: ಲಂಡನ್​ನ ಸಿಗ್ನಲ್​ನಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ನಿಂತ ಕೊಹ್ಲಿ; ವಿಡಿಯೊ ವೈರಲ್

ಟೆಸ್ಟ್​ನಲ್ಲಿ 113 ಪಂದ್ಯಗಳಲ್ಲಿ 8848 ರನ್ ಗಳಿಸಿದ್ದು, 29 ಶತಕ, 7 ದ್ವಿಶತಕ ಮತ್ತು 30 ಅರ್ಧಶತಕ ಸಿಡಿಸಿದ್ದಾರೆ. 254 ಅವರ ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ. 125 ಟಿ20 ಪಂದ್ಯವಾಡಿ 4188 ರನ್ ಬಾರಿಸಿದ್ದಾರೆ. ಇದರಲ್ಲಿ 38 ಅರ್ಧಶತಕ ಮತ್ತು 1 ಶತಕ ದಾಖಲಾಗಿದೆ. ಇತ್ತೀಚೆಗೆ ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್​ ಫೈನಲ್​ ಪಂದ್ಯವನ್ನಾಡುವ ಮೂಲಕ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಈಗ ಟೆಸ್ಟ್​ ಮತ್ತು ಏಕದಿನ ಮಾತ್ರ ಆಡುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sanju Samson: ಬಾಸ್ಕೆಟ್‌ ಬಾಲ್‌ ಕೋರ್ಟ್​ನಲ್ಲಿ ಫುಟ್ಬಾಲ್​ ಆಡಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್​

Sanju Samson: ಸಂಜು ಇದುವರೆಗೆ ಭಾರತ ಪರ 16 ಏಕದಿನ ಕ್ರಿಕೆಟ್​ ಪಂದ್ಯಗಳನ್ನಾಡಿ 510 ರನ್​ ಗಳಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 3 ಅರ್ಧಶತಕ ಬಾರಿಸಿದ್ದಾರೆ. 30 ಟಿ20 ಪಂದ್ಯ ಆಡಿ 444 ರನ್​ ಗಳಿಸಿದ್ದಾರೆ. 2 ಅರ್ಧಶತಕ ಒಳಗೊಂಡಿದೆ.

VISTARANEWS.COM


on

Sanju Samson
Koo

ತಿರುವನಂತಪುರಂ: ಟೀಮ್​ ಇಂಡಿಯಾದ(Team India) ಕ್ರಿಕೆಟಿಗ, ಕೇರಳ ಮೂಲದ ಸ್ಟಂಪರ್​ ಸಂಜು ಸ್ಯಾಮ್ಸನ್(Sanju Samson)​ ಅವರು ತಮ್ಮ ತವರಿನಲ್ಲಿ ಸ್ಥಳೀಯರೊಂದಿಗೆ ಬಾಸ್ಕೆಟ್​​ ಬಾಲ್​ ಕೋರ್ಟ್​ನಲ್ಲಿ ಫುಟ್​ಬಾಲ್​ ಆಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಸಂಜು ಟೀಮ್​ ಇಂಡಿಯಾದ ಅಭ್ಯಾಸದ ಜೆರ್ಸಿಯನ್ನು ತೊಟ್ಟು ತನ್ನ ಸ್ನೇಹಿತರೊಂದಿಗೆ ಬಾಸ್ಕೆಟ್​​​ ಬಾಲ್​ ಕೋರ್ಟ್​ನಲ್ಲಿ ಫುಟ್​ಬಾಲ್​ ಆಡುತ್ತಿರುವ ದೃಶ್ಯವನ್ನು ಈ ವಿಡಿಯೊದಲ್ಲಿ ಕಾಣಬಹುದಾಗಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ಪರ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್​ ನಿರೀಕ್ಷಿತ ಪ್ರದರ್ಶನವನ್ನು ತೋರುವಲ್ಲಿ ವಿಫಲರಾಗಿದ್ದರು. ಹೀಗಾಗಿ ಅವರಿಗೆ ಏಕದಿನ ಸರಣಿಯಿಂದ ಕೈಬಿಡಲಾಗಿತ್ತು. ಟಿ20 ವಿಶ್ವಕಪ್​ ತಂಡದ ಸದ್ಯರಾಗಿದ್ದರೂ ಕೂಡ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ. ಸಂಜು ಅವರು ಬಾಸ್ಕೆಟ್​​ ಬಾಲ್ ಕೋರ್ಟ್​ನಲ್ಲಿ ಫುಟ್​ಬಾಲ್​ ಆಡಿರುವ ಬಗ್ಗೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

ಬಡ ಮಕ್ಕಳಿಗೆ ನೆರವು


ವಿಶ್ವದ ಕ್ಯಾಶ್​ ರಿಚ್​ ಲೀಗ್​ಗಳಲ್ಲಿ ಒಂದಾದ ಐಪಿಎಲ್​ನಲ್ಲಿ ರಾಜಸ್ಥಾನ್​ ರಾಯಲ್ಸ್​(rajasthan royals) ಪರ ಆಡುತ್ತಿರುವ ಸಂಜು ಸ್ಯಾಮ್ಸನ್​ ಅವರು ಸದ್ಯ ಗಳಿಸುತ್ತಿರುವ 15 ಕೋಟಿ ವೇತನದಲ್ಲಿ ಯುವ ಮತ್ತು ಪ್ರತಿಭಾವಂತ ಕ್ರಿಕೆಟಿಗರಿಗೆ 2 ಕೋಟಿ ನೆರವಿನ ಹಸ್ತ ಚಾಚುತ್ತಿದ್ದಾರೆ. ಈ ಮೂಲಕ ಯುವ ಪ್ರತಿಭೆಗಳನ್ನು ಬೆಳಕಿಗೆ ತರುವಂತ ಕೆಲಸವನ್ನು ಮಾಡುತ್ತಿದ್ದಾರೆ. ಟೀಮ್​ ಇಂಡಿಯಾದಲ್ಲಿ ತಮಗೆ ಸರಿಯಾದ ಅವಕಾಶ ಸಿಗದಿದ್ದರೂ ಯುವ ಆಟಗಾರರು ಬೆಳಕಿಗೆ ಬರುವಲ್ಲಿ ಶ್ರಮಿಸುತ್ತಿರುವ ಅವರ ಗುಣವನ್ನು ನಿಜಕ್ಕೂ ಮೆಚ್ಚಲೇ ಬೇಕು.

ಸಂಜು ಇದುವರೆಗೆ ಭಾರತ ಪರ 16 ಏಕದಿನ ಕ್ರಿಕೆಟ್​ ಪಂದ್ಯಗಳನ್ನಾಡಿ 510 ರನ್​ ಗಳಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 3 ಅರ್ಧಶತಕ ಬಾರಿಸಿದ್ದಾರೆ. 30 ಟಿ20 ಪಂದ್ಯ ಆಡಿ 444 ರನ್​ ಗಳಿಸಿದ್ದಾರೆ. 2 ಅರ್ಧಶತಕ ಒಳಗೊಂಡಿದೆ. ಟೆಸ್ಟ್​ ಇದುವರೆಗೂ ಆಡಿಲ್ಲ. ಹೆಚ್ಚಾಗಿ ಐಪಿಎಲ್​ನಲ್ಲಿಯೇ ಆಡಿದ್ದಾರೆ. 167 ಪಂದ್ಯಗಳಿಂದ 3 ಶತಕ, 25 ಅರ್ಧಶತಕ ಒಳಗೊಂಡಂತೆ 4419 ರನ್​ ಬಾರಿಸಿದ್ದಾರೆ.

ಇದನ್ನೂ ಓದಿ MS Dhoni: ಅಭಿಮಾನಿಯ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ ಧೋನಿ; ಫೋಟೊ ವೈರಲ್​

ಬೌಲಿಂಗ್​ ನಡೆಸಿದ ಪಂತ್​


ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ರಿಷಭ್​ ಪಂತ್(Rishabh Pant)​ ಅವರು ದೆಹಲಿ ಪ್ರೀಮಿಯರ್ ಲೀಗ್ 2024 ರ(Delhi Premier League T20 2024) ಉದ್ಘಾಟನಾ ಆವೃತ್ತಿಯ ಪಂದ್ಯದಲ್ಲಿ ಬೌಲಿಂಗ್(rishabh pant bowling)​ ನಡೆಸುವ ಮೂಲಕ ಗಮನಸೆಳೆದಿದ್ದಾರೆ. ಪಂತ್​ ಬೌಲಿಂಗ್​ ನಡೆಸುವ ವಿಡಿಯೊ ವೈರಲ್(viral video)​ ಆಗಿದ್ದು, ಇದು ನೂತನ ಕೋಚ್​ ಗೌತಮ್​ ಗಂಭೀರ್(gautam gambhir)​ ಪ್ರಭಾವ ಎಂದು ನಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಪಂತ್ ಪಂದ್ಯದ ಅಂತಿಮ ಓವರ್​ ಬೌಲಿಂಗ್​ ನಡೆಸಿದರು. ಎದುರಾಳಿ ಸೌತ್​ ಡೆಲ್ಲಿ ತಂಡಕ್ಕೆ 6 ಎಸೆತಗಳಲ್ಲಿ ಗೆಲುವಿಗೆ ಒಂದು ರನ್​ ಬೇಕಿದ್ದಾಗ ಪಂತ್​ ಸ್ಪಿನ್​ ಬೌಲಿಂಗ್​ ನಡೆಸಿದರು. ಈ ಪಂದ್ಯದಲ್ಲಿ ಪಂತ್​ ತಂಡ 3 ವಿಕೆಟ್​ ಅಂತರದ ಸೋಲು ಕಂಡಿತು. ಮೊದಲು ಬ್ಯಾಟಿಂಗ್​ ನಡೆಸಿದ ಪಂತ್​ ಸಾರಥ್ಯದ ಪುರಾಣಿ ದಿಲ್ಲಿ ಸಿಕ್ಸ್​ ತಂಡ 197 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಸೌತ್​ ಡೆಲ್ಲಿ ತಂಡ 7 ವಿಕೆಟ್​ಗೆ 198 ರನ್​ ಬಾರಿಸಿ ಗೆಲುವು ಸಾಧಿಸಿತು.

Continue Reading

ಕ್ರೀಡೆ

MS Dhoni: ಅಭಿಮಾನಿಯ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ ಧೋನಿ; ಫೋಟೊ ವೈರಲ್​

MS Dhoni: ನಿವೃತ್ತಿ ಜೀವನವನ್ನು ಎಂಜಾಯ್‌ ಮಾಡುತ್ತಿರುವ ಧೋನಿ(MS Dhoni) ತಮ್ಮ ತವರಾದ ರಾಂಚಿಯಲ್ಲಿ ಆಗಾಗ ಕಾರು ಮತ್ತು ಬೈಕ್‌ಗಳ ಮೂಲಕ ಸವಾರಿ ಮಾಡುತ್ತಿರುತ್ತಾರೆ.

VISTARANEWS.COM


on

MS Dhoni
Koo

ರಾಂಚಿ: ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿ ಕೆಲವು ವರ್ಷಗಳು ಕಳೆದರೂ ಅಭಿಮಾನಿಗಳಿಗೆ ಅವರ ಮೇಲಿರುವ ಕ್ರೇಜ್​ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಧೋನಿಯ ಒಂದು ಆಟೋಗ್ರಾಫ್​ಗಾಗಿ ಈಗಲೂ ಅಭಿಮಾನಿಗಳು ಕಾದು ಕುಳಿತಿರುತ್ತಾರೆ.

ನಿವೃತ್ತಿ ಜೀವನವನ್ನು ಎಂಜಾಯ್‌ ಮಾಡುತ್ತಿರುವ ಧೋನಿ(MS Dhoni) ತಮ್ಮ ತವರಾದ ರಾಂಚಿಯಲ್ಲಿ ಆಗಾಗ ಕಾರು ಮತ್ತು ಬೈಕ್‌ಗಳ ಮೂಲಕ ಸವಾರಿ ಮಾಡುತ್ತಿರುತ್ತಾರೆ. ಹೀಗೆ ಜಾಲಿ ರೈಡ್‌ ಹೋಗುತ್ತಿದ್ದ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ಬಯಕೆಯಂತೆ ಅವರ ಬೈಕ್​ನ(Dhoni signs bike for a fan) ಹೈಡ್​ ಲೈಟ್​ ಬಳಿ ಧೋನಿ ತಮ್ಮ ಸಹಿ ಹಾಕಿ ಆಟೋಗ್ರಾಫ್‌ ನೀಡಿದ್ದಾರೆ. ಈ ಫೋಟೊ ವೈರಲ್‌(viral Photo) ಆಗಿದೆ. ಈ ಫೋಟೊ ಕಂಡ ನೆಟ್ಟಿಗರು ನೀವು ಅದೃಷ್ಟಶಾಲಿ ಎಂದು ಕಮೆಂಟ್‌ ಮಾಡಿದ್ದಾರೆ.

ಮೋಟಾಸೈಕಲ್​​ಗಳು ಹಾಗೂ ಕಾರುಗಳ ಬಗ್ಗೆ ಎಂಎಸ್ ಧೋನಿ ಅವರ ಕ್ರೇಜ್​ ಎಲ್ಲರಿಗೂ ತಿಳಿದಿದೆ. ಅವರು ತಮ್ಮ ಗ್ಯಾರೇಜ್​ನಲ್ಲಿ ಹಲವಾರು ಆಕರ್ಷಕ ವಾಹನಗಳ ಸಂಗ್ರಹವನ್ನು ಹೊಂದಿದ್ದಾರೆ. ಬಿಡುವಿನ ವೇಳೆಯಲ್ಲಿ ಧೋನಿ ತಮಗಿಷ್ಟವಾದ ಕಾರು ಮತ್ತು ಬೈಕ್​ಗಳನ್ನು ಓಡಿಸುವ ಹಲವು ವಿಡಿಯೊಗಳು ವೈರಲ್ ಆಗುತ್ತಿರುತ್ತದೆ. ಅವರ ಅಭಿಮಾನಿಗಳು ಈ ವಿಡಿಯೊವನ್ನು ತಮ್ಮ ಸಾಮಾಜಿಕ ಜಾಲತಾಣದ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಕೆಲವು ತಿಂಗಳ ಹಿಂದೆ ಧೋನಿ ಅವರು ಅಭಿಮಾನಿಯ ಬೈಕ್​ ಒಂದಕ್ಕೆ ಆಟೋಗ್ರಾಫ್ ಹಾಕುವ ಮೊದಲು ಬೈಕಿನ ಮುಂಭಾಗದ ಪ್ರದೇಶವನ್ನು ತಮ್ಮ ಟಿಶರ್ಟ್​ನಿಂದ ಒರೆಸಿ ಆ ಬಳಿಕ ಸಹಿ ಹಾಕಿದ್ದರು. ಬಳಿಕ ಧೋನಿ ಈ ಬೈಕ್​ ರೈಡ್​ ಮಾಡಿದ್ದರು.

ಮುಂದಿನ ಆವೃತ್ತಿ ಐಪಿಎಲ್​ನಲ್ಲಿ ಧೋನಿ ಅನ್​ಕ್ಯಾಪ್ಡ್​ ಆಟಗಾರ?


ವರದಿಯೊಂದರ ಪ್ರಕಾರ ಬಿಸಿಸಿಐ(BCCI) ಕನಿಷ್ಠ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಆಟಗಾರರನ್ನು ಅನ್‌ಕ್ಯಾಪ್ಡ್ ವಿಭಾಗದಲ್ಲಿ ಇರಿಸುವ ನಿಯಮವನ್ನು ಮರಳಿ ತರಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಧೋನಿ ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ Rohit Sharma : ಧೋನಿಯ ನಾಯಕತ್ವದ ದಾಖಲೆಯೊಂದನ್ನು ಮುರಿದ ರೋಹಿತ್ ಶರ್ಮಾ

ಅನ್‌ಕ್ಯಾಪ್ಡ್ ಆಟಗಾರನಿಗೆ ಫ್ರಾಂಚೈಸಿ ಕೇವಲ 4 ಕೋಟಿ ರೂ. ನೀಡಲಿದೆ. ಈ ನಿಯಮ ಜಾರಿಗೆ ಬಂದರೆ ಧೋನಿ ಇದೇ ಮೊತ್ತದಲ್ಲಿ ಚೆನ್ನೈಗಾಗಿ ಆಡುವುದನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಇದೇ ಮೊತ್ತಕ್ಕೆ ಚೆನ್ನೈ ತಂಡ ಧೋನಿಯನ್ನು ಮತ್ತೆ ರೀಟೈನ್​ ಮಾಡಿಕೊಳ್ಳಬಹುದು. 

ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

Continue Reading

ಕ್ರಿಕೆಟ್

Rishabh Pant: ಕೀಪಿಂಗ್​ ಬಿಟ್ಟು ಬೌಲಿಂಗ್​ ನಡೆಸಿದ ರಿಷಭ್​ ಪಂತ್​; ವಿಡಿಯೊ ವೈರಲ್​

Rishabh Pant: ಮುಂದಿನ ವರ್ಷ ನಡೆಯುವ ಐಪಿಎಲ್​ ಟರ್ನಿಯಲ್ಲಿ ಪಂತ್​ ಡೆಲ್ಲಿ ತಂಡದ ಬದಲು ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಪರ ಆಡಲಿದ್ದಾರೆ ಎನ್ನಲಾಗಿದೆ. ಪಂತ್​ ಡೆಲ್ಲಿ ತಂಡದ ಪರ ರಿಟೈನ್ ಆಸಕ್ತಿ ಹೊಂದಿಲ್ಲ ಎಂದು ಹೇಳಲಾಗಿದೆ. ಆದರೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

VISTARANEWS.COM


on

Rishabh Pant
Koo

ನವದೆಹಲಿ: ಟೀಮ್​ ಇಂಡಿಯಾದ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ರಿಷಭ್​ ಪಂತ್(Rishabh Pant)​ ಅವರು ದೆಹಲಿ ಪ್ರೀಮಿಯರ್ ಲೀಗ್ 2024 ರ(Delhi Premier League T20 2024) ಉದ್ಘಾಟನಾ ಆವೃತ್ತಿಯ ಪಂದ್ಯದಲ್ಲಿ ಬೌಲಿಂಗ್(rishabh pant bowling)​ ನಡೆಸುವ ಮೂಲಕ ಗಮನಸೆಳೆದಿದ್ದಾರೆ. ಪಂತ್​ ಬೌಲಿಂಗ್​ ನಡೆಸುವ ವಿಡಿಯೊ ವೈರಲ್(viral video)​ ಆಗಿದ್ದು, ಇದು ನೂತನ ಕೋಚ್​ ಗೌತಮ್​ ಗಂಭೀರ್(gautam gambhir)​ ಪ್ರಭಾವ ಎಂದು ನಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಪಂತ್ ಪಂದ್ಯದ ಅಂತಿಮ ಓವರ್​ ಬೌಲಿಂಗ್​ ನಡೆಸಿದರು. ಎದುರಾಳಿ ಸೌತ್​ ಡೆಲ್ಲಿ ತಂಡಕ್ಕೆ 6 ಎಸೆತಗಳಲ್ಲಿ ಗೆಲುವಿಗೆ ಒಂದು ರನ್​ ಬೇಕಿದ್ದಾಗ ಪಂತ್​ ಸ್ಪಿನ್​ ಬೌಲಿಂಗ್​ ನಡೆಸಿದರು. ಈ ಪಂದ್ಯದಲ್ಲಿ ಪಂತ್​ ತಂಡ 3 ವಿಕೆಟ್​ ಅಂತರದ ಸೋಲು ಕಂಡಿತು. ಮೊದಲು ಬ್ಯಾಟಿಂಗ್​ ನಡೆಸಿದ ಪಂತ್​ ಸಾರಥ್ಯದ ಪುರಾಣಿ ದಿಲ್ಲಿ ಸಿಕ್ಸ್​ ತಂಡ 197 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಸೌತ್​ ಡೆಲ್ಲಿ ತಂಡ 7 ವಿಕೆಟ್​ಗೆ 198 ರನ್​ ಬಾರಿಸಿ ಗೆಲುವು ಸಾಧಿಸಿತು.

ಪಂತ್​ ಅವರ ಬೌಲಿಂಗ್​ ಕಂಡ ನೆಟ್ಟಿಗರು ಇದು ನೂತನ ಕೋಚ್​ ಗಂಭೀರ್​ ಅವರ ಪ್ರಭಾವ ಎಂದು ಹೇಳಿದ್ದಾರೆ. ಹೌದು, ಗಂಭೀರ್​ ಭಾರತ ತಂಡದ ಕೋಚ್​ ಆದಾಗಿನಿಂದ ತಂಡ ಆಟಗಾರರು ಕೇಲವ ಬ್ಯಾಟಿಂಗ್​ ಮತ್ತು ಬೌಲಿಂಗ್​ಗೆ ಸೀಮಿತರಲ್ಲ ಎಲ್ಲ ಪಾತ್ರವನ್ನು ನಿಭಾಯಿಸಬೇಕು ಎಂಬ ನಿಯಮ ಜಾರಿಗೆ ತಂದಿದ್ದಾರೆ. ಇದೇ ಕಾರಣಕ್ಕೆ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ರಿಂಕು ಸಿಂಗ್​, ನಾಯಕ ಸೂರ್ಯಕುಮಾರ್​​ ಯಾದವ್ ಕೇವಲ ಬ್ಯಾಟಿಂಗ್​ ಮಾತ್ರವಲ್ಲದೆ​ ಬೌಲಿಂಗ್ ಕೂಡ ನಡೆಸಿದ್ದರು. ಏಕದಿನ ಸರಣಿಯಲ್ಲಿ ನಾಯಕ ರೋಹಿತ್​ ಶರ್ಮ ಕೂಡ ಬೌಲಿಂಗ್​ ನಡೆಸಿದ್ದರು.​ ಇದೀಗ ಪಂತ್​ ಕೂಡ ಬೌಲಿಂಗ್​ ಕಡೆ ಗಮನಹರಿಸಿದಂತಿದೆ.

ಇದನ್ನೂ ಓದಿ Rishabh Pant : ರಿಷಭ್​ ಪಂತ್​ಗೆ ವಿಶೇಷ ಸನ್ಮಾನ ಮಾಡಿದ ಡೆಲ್ಲಿ ಕ್ರಿಕೆಟ್ ಸಂಸ್ಥೆ

ಬ್ಯಾಟಿಂಗ್​ನಲ್ಲಿ ವಿಫಲವಾದ ಪಂತ್​

ಪಂತ್​ ಈ ಪಂದ್ಯದಲ್ಲಿ ಅತ್ಯಂತ ನಿಧಾನಗತಿಯ ಬ್ಯಾಟಿಂಗ್​ ಪ್ರದರ್ಶನ ತೋರಿದರು. 32 ಎಸೆತಗಳಲ್ಲಿ ಕೇವಲ 35 ರನ್ ಗಳಿಸಲಷ್ಟೇ ಶಕ್ತರಾದರು. ರಿಷಭ್ ಪಂತ್ ಅವರನ್ನು ಡಿಡಿಸಿಎ ಅಧ್ಯಕ್ಷ ಮತ್ತು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಸನ್ಮಾನಿಸಿದರು. 2024ರ ಟಿ 20 ವಿಶ್ವಕಪ್ ಗೆಲುವಿನಲ್ಲಿ ಪಂತ್​ ನೀಡಿದ ಕೊಡುಗೆಗಳಿಗಾಗಿ ಅವರನ್ನು ಗೌರವಿಸಲಾಯಿತು.

ಮುಂದಿನ ವರ್ಷ ನಡೆಯುವ ಐಪಿಎಲ್​ ಟರ್ನಿಯಲ್ಲಿ ಪಂತ್​ ಡೆಲ್ಲಿ ತಂಡದ ಬದಲು ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಪರ ಆಡಲಿದ್ದಾರೆ ಎನ್ನಲಾಗಿದೆ. ಪಂತ್​ ಡೆಲ್ಲಿ ತಂಡದ ಪರ ರಿಟೈನ್ ಆಸಕ್ತಿ ಹೊಂದಿಲ್ಲ ಎಂದು ಹೇಳಲಾಗಿದೆ. ಆದರೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಮಹೇಂದ್ರ ಸಿಂಗ್​ ಧೋನಿ ಮುಂದಿನ ವರ್ಷ ಐಪಿಎಲ್​ ಆಡುವುದು ಖಚಿತತೆ ಇಲ್ಲ. ಇಂಪ್ಯಾಕ್ಟ್​ ನಿಯಮ ಇದ್ದರೆ ಆಡುವುದಾಗಿ ಫ್ರಾಂಚೈಸಿ ಮೂಲಗಳು ಈಗಾಗಲೇ ಮಾಹಿತಿ ನೀಡಿದೆ. ಈ ಬಾರಿಯೇ ಧೋನಿ ನಿವೃತ್ತಿಯಾಗಬೇಕಿತ್ತು. ಆದರೆ ಅವರು ಇನ್ನೂ ನಿವೃತ್ತಿ ಪ್ರಕಟಿಸಿಲ್ಲ. ತಂಡದಲ್ಲಿ ಸೂಕ್ತ ವಿಕೆಟ್​ ಕೀಪರ್​ ಇಲ್ಲದ ಕಾರಣ ಧೋನಿ ತಮ್ಮ ಕಾಲು ನೋವಿನ ಮಧ್ಯೆಯೂ ಸಂಪೂರ್ಣವಾಗಿ ಕೀಪಿಂಗ್​ ನಡೆಸಿದ್ದರು. ಧೋನಿ ಸ್ಥಾನಕ್ಕೆ ಪಂತ್​ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯೊಂದು ಕಂಡುಬಂದಿದೆ.

Continue Reading

ಕ್ರೀಡೆ

WTC 2025: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪ್ರವೇಶಿಸಬೇಕಿದ್ದರೆ ಭಾರತಕ್ಕೆ ಇನೆಷ್ಟು ಗೆಲುವು ಬೇಕು?

WTC 2025: ಭಾರತ ಮುಂದಿನ ತಿಂಗಳು ಬಾಂಗ್ಲಾದೇಶ ವಿರುದ್ಧ 2 ಟೆಸ್ಟ್​ ಪಂದ್ಯವನ್ನಾಡುವ ಮೂಲಕ ಟೆಸ್ಟ್​ ಸರಣಿ ಆರಂಭಿಸಲಿದೆ. ಇದಾದ ಬಳಿಕ ನ್ಯೂಜಿಲ್ಯಾಂಡ್​ ಮತ್ತು ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನಾಡಲಿದೆ.

VISTARANEWS.COM


on

Koo

ಮುಂಬಯಿ: ಮುಂದಿನ ವರ್ಷ ನಡೆಯುವ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್(WTC 2025)​ ಟೂರ್ನಿಯ ಫೈನಲ್​ ಪ್ರವೇಶಿಸಲು ಎಲ್ಲ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈಗಾಗಲೇ ಎರಡು ಬಾರಿ ಟೆಸ್ಟ್​ ವಿಶ್ವಕಪ್​ ಫೈನಲ್‌ ತಲುಪಿರುವ ಭಾರತ ತಂಡ(Team India) ಈ ಬಾರಿ ಫೈನಲ್​ ಪ್ರವೇಶಿಸಬೇಕಿದ್ದರೆ ಎಷ್ಟು ಗೆಲುವು ಅಗತ್ಯ ಎನ್ನುವ ಮಾಹಿತಿ ಇಲ್ಲಿದೆ.

10 ಪಂದ್ಯ ಆಡಲಿದೆ ಭಾರತ


ಪೂರ್ವ ವೇಳಾಪಟ್ಟಿಯ ಪ್ರಕಾರ ಭಾರತ ಇನ್ನು 10 ಟೆಸ್ಟ್‌ ಪಂದ್ಯಗಳನ್ನು ಆಡಲಿದೆ. ಇದರಲ್ಲಿ ತವರಿನಲ್ಲಿ ಬಾಂಗ್ಲಾ ವಿರುದ್ಧ 2, ನ್ಯೂಜಿಲ್ಯಾಂಡ್ ವಿರುದ್ಧ 3, ಆಸ್ಟ್ರೇಲಿಯಾ ಪ್ರವಾಸದಲ್ಲಿ 5 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಈ 10 ಟೆಸ್ಟ್​ ಪಂದ್ಯಗಳ ಪೈಕಿ ಭಾರತ ಕನಿಷ್ಠ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ನೇರವಾಗಿ ಫೈನಲ್​ ಪ್ರವೇಶಿಸಲಿದೆ. ಓ ಮೂಲಕ ಸತತ ಮೂರನೇ ಬಾರಿಗೆ ಫೈನಲ್‌ಗೆ ಅರ್ಹತೆ ಪಡೆದ ಸಾಧನೆ ಮಾಡಲಿದೆ.

ಸದ್ಯ ಭಾರತ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಇದುವರೆಗೆ ಆಡಿದ 9 ಪಂದ್ಯಗಲ್ಲಿ 6 ಜಯ, 2 ಸೋಲು, 1 ಡ್ರಾ ಸಾಧಿಸಿ 68.51 ಗೆಲುವಿನ ಸರಾಸರಿಯೊಂದಿಗೆ ಮೊದಲ ಸ್ಥಾನದಲ್ಲಿದೆ. ಹಾಲಿ ಚಾಂಪಿಯನ್​ ಆಸ್ಟ್ರೇಲಿಯಾ 12 ಪಂದ್ಯಗಳಲ್ಲಿ 8 ಜಯ ದಾಖಲಿಸಿ, 62.5 ಗೆಲುವಿನ ಸರಾಸರಿಯನ್ನು ಹೊಂದಿದ್ದು, ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಉಳಿದ ಏಳು ಪಂದ್ಯಗಳಲ್ಲಿ 4 ಪಂದ್ಯ ಗೆದ್ದರೂ ಫೈನಲ್‌ ಪ್ರವೇಶಿಸಲಿದೆ. ಸದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಫೈನಲ್​ ಪ್ರವೇಶದ ತೀವ್ರ ಪೈಪೋಟಿ ಏರ್ಪಟ್ಟಿದೆ.

ಮೂರನೇ ಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್​ 6 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 36 ಅಂಕ ಗಳಿಸಿದೆ. ಶ್ರೀಲಂಕಾ 4, ದಕ್ಷಿಣ ಆಫ್ರಿಕಾ ಐದನೇ ಸ್ಥಾನದಲ್ಲಿದೆ. ಈ ತಂಡಗಳಿಗೆ ಫೈನಲ್​ ಪ್ರವೇಶಿಸಬೇಕಿದ್ದರೆ, ಕಿವೀಸ್​ 8 ರಲ್ಲಿ 6, ಪಾಕಿಸ್ತಾನ 9 ರಲ್ಲಿ 7, ಶ್ರೀಲಂಕಾ 9 ರಲ್ಲಿ 6, ಬಾಂಗ್ಲಾದೇಶ 9 ರಲ್ಲಿ 7, ದಕ್ಷಿಣ ಆಫ್ರಿಕಾ 8 ರಲ್ಲಿ 7 ಪಂದ್ಯಗಳನ್ನು ಗೆಲ್ಲಲೇ ಬೇಕು. ಆಗ ಮಾತ್ರ ಫೈನಲ್​ ಪ್ರವೇಶಿಸುವ ಅವಕಾಶ ಲಭಿಸಲಿದೆ.

ಇದನ್ನೂ ಓದಿ Team India: ಆಸೀಸ್​ ಪ್ರವಾಸದಲ್ಲಿ 2 ದಿನಗಳ ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಆಡಲಿದೆ ಭಾರತ ತಂಡ

ಭಾರತ ಟೆಸ್ಟ್​ ಸರಣಿ ವೇಳಾಪಟ್ಟಿ


ಭಾರತ ಮುಂದಿನ ತಿಂಗಳು ಬಾಂಗ್ಲಾದೇಶ ವಿರುದ್ಧ 2 ಟೆಸ್ಟ್​ ಪಂದ್ಯವನ್ನಾಡುವ ಮೂಲಕ ಟೆಸ್ಟ್​ ಸರಣಿ ಆರಂಭಿಸಲಿದೆ. ಇದಾದ ಬಳಿಕ ನ್ಯೂಜಿಲ್ಯಾಂಡ್​ ಮತ್ತು ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನಾಡಲಿದೆ.


ಬಾಂಗ್ಲಾದೇಶ ವಿರುದ್ಧ


ಸೆಪ್ಟೆಂಬರ್​-19 ಮೊದಲ ಟೆಸ್ಟ್​ ಪಂದ್ಯ. ತಾಣ: ಚೆನ್ನೈ

ಸೆಪ್ಟೆಂಬರ್​​-27 ದ್ವಿತೀಯ ಟೆಸ್ಟ್​. ತಾಣ; ಕಾನ್ಪುರ

ನ್ಯೂಜಿಲ್ಯಾಂಡ್​ ವಿರುದ್ಧ


ಅಕ್ಟೋಬರ್​-16 ಮೊದಲ ಟಿ20. ತಾಣ: ಬೆಂಗಳೂರು

ಅಕ್ಟೋಬರ್-24 ದ್ವಿತೀಯ ಟಿ20. ತಾಣ: ಪುಣೆ

ನವೆಂಬರ್​-1 ಮೂರನೇ ಟಿ20. ತಾಣ: ಮುಂಬಯಿ

ಆಸ್ಟ್ರೇಲಿಯಾ ವಿರುದ್ಧ


ಮೊದಲ ಟೆಸ್ಟ್: ನವೆಂಬರ್ 22-26, ಪರ್ತ್

ಎರಡನೇ ಟೆಸ್ಟ್: ಡಿಸೆಂಬರ್ 6-10, ಅಡಿಲೇಡ್ (ಪಿಂಕ್​ ಬಾಲ್​ ಟೆಸ್ಟ್​)

ಮೂರನೇ ಟೆಸ್ಟ್: ಡಿಸೆಂಬರ್ 14-18, ಬ್ರಿಸ್ಬೇನ್

ನಾಲ್ಕನೇ ಟೆಸ್ಟ್: ಡಿಸೆಂಬರ್ 26-30, ಮೆಲ್ಬೋರ್ನ್

ಐದನೇ ಟೆಸ್ಟ್: ಜನವರಿ 3-7, ಸಿಡ್ನಿ

Continue Reading
Advertisement
Sanju Samson
ಕ್ರೀಡೆ2 mins ago

Sanju Samson: ಬಾಸ್ಕೆಟ್‌ ಬಾಲ್‌ ಕೋರ್ಟ್​ನಲ್ಲಿ ಫುಟ್ಬಾಲ್​ ಆಡಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್​

Physical Abuse
ಪ್ರಮುಖ ಸುದ್ದಿ13 mins ago

Physical Abuse : 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 69 ವರ್ಷದ ಮುದುಕ

Champai Soren
ರಾಜಕೀಯ24 mins ago

Champai Soren: ಜಾರ್ಖಂಡ್‌ ರಾಜಕೀಯಲ್ಲಿ ಸಂಚಲನ; ಮಾಜಿ ಸಿಎಂ ಚಂಪೈ ಸೊರೆನ್ ಬಿಜೆಪಿ ಸೇರ್ಪಡೆ?

CM Siddaramaiah
ಪ್ರಮುಖ ಸುದ್ದಿ41 mins ago

CM Siddaramaiah : ಮುಡಾ ಆಘಾತದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮಂತ್ರಾಲಯಕ್ಕೆ ಭೇಟಿ

Heart attack
ಬೆಳಗಾವಿ45 mins ago

Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

MS Dhoni
ಕ್ರೀಡೆ51 mins ago

MS Dhoni: ಅಭಿಮಾನಿಯ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ ಧೋನಿ; ಫೋಟೊ ವೈರಲ್​

Congress Protest
ಕರ್ನಾಟಕ52 mins ago

Congress Protest: ರಾಜ್ಯಪಾಲರ ನಡೆಗೆ ಕೆರಳಿದ ಕಾಂಗ್ರೆಸ್ ಪಡೆ; ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

Physical Abuse
ದೇಶ1 hour ago

Physical Abuse: ಮತ್ತೊಂದು ಪೈಶಾಚಿಕ ಕೃತ್ಯ; ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

Kannada New Movie vaikuntha samaradhane movie
ಸ್ಯಾಂಡಲ್ ವುಡ್1 hour ago

Kannada New Movie: ಹೊಸ ಪ್ರತಿಭೆಗಳ ಸಿನಿಮಾ ‘ವೈಕುಂಠ ಸಮಾರಾಧನೆʼ; ಕನ್ನಡದಲ್ಲಿ ಹೀಗೊಂದು ಚಿತ್ರ!

Road Accident
ಚಿತ್ರದುರ್ಗ1 hour ago

Road Accident : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ; ರಕ್ತಕಾರಿ ಸತ್ತ ಸವಾರ, ಮತ್ತೊಬ್ಬ ಗಂಭೀರ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌