Namma Metro: ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ; ಶೀಘ್ರದಲ್ಲೇ ವಾಣಿಜ್ಯ ಸೇವೆ - Vistara News

ಕರ್ನಾಟಕ

Namma Metro: ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ; ಶೀಘ್ರದಲ್ಲೇ ವಾಣಿಜ್ಯ ಸೇವೆ

Namma Metro: ಆ.17ರಂದು ರೀಚ್-3ರ ಎತ್ತರಿಸಿದ ಮಾರ್ಗದಲ್ಲಿನ -ನಾಗಸಂದ್ರದಿಂದ ಮಾದಾವರೆಗಿನ 3.14 ಕಿ.ಮೀ ನಡುವೆ (ರೋಲ್ಲಿಂಗ್ ಸ್ಟಾಕ್) ಮೆಟ್ರೋ ರೈಲು ಮೂಲಕ ಮೊದಲ ಪರೀಕ್ಷಾರ್ಥ ಸಂಚಾರ ನಡೆದಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಸಿರು ಮಾರ್ಗದ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದಲ್ಲಿ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ ನಡೆಸಲಾಗಿದ್ದು, ಈ ಬಗ್ಗೆ ಬಿಎಂಆರ್‌ಸಿಎಲ್‌ ಮಾಹಿತಿ ಹಂಚಿಕೊಂಡಿದ್ದು, ಈ ಮಾರ್ಗವು ಶೀಘ್ರದಲ್ಲೇ ಸಾರ್ವಜನಿಕರ ಬಳಕೆಗೆ ಮುಕ್ತವಾಗುವ ಸಾಧ್ಯತೆ ಇದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ನಮ್ಮ ಮೆಟ್ರೋ, ಆ.17ರಂದು ರೀಚ್-3ರ ಎತ್ತರಿಸಿದ ಮಾರ್ಗದಲ್ಲಿನ -ನಾಗಸಂದ್ರದಿಂದ ಮಾದಾವರೆಗಿನ 3.14 ಕಿ.ಮೀ ನಡುವೆ (ರೋಲ್ಲಿಂಗ್ ಸ್ಟಾಕ್) ಮೆಟ್ರೋ ರೈಲು ಮೂಲಕ ಮೊದಲ ಪರೀಕ್ಷಾರ್ಥ ಸಂಚಾರ ನಡೆದಿದೆ. ಕನಿಷ್ಠ 5 ಕಿ.ಮೀ ಮತ್ತು ಗರಿಷ್ಠ 35 ಕಿ.ಮೀ ವೇಗದಲ್ಲಿ ಪರೀಕ್ಷಾರ್ಥ ಸಂಚಾರ ನಡೆಸಲಾಯಿತು.

ನಾಗಸಂದ್ರ-ಮಾದಾವರ ನಡುವಿನ ಮೂರು ಕಿ.ಮೀ. ಮೆಟ್ರೋ ಕಾಮಗಾರಿ 2017 ರಲ್ಲಿ ಪ್ರಾರಂಭವಾಯಿತು. 2019 ರ ಮಧ್ಯದ ವೇಳೆಗೆ ಕಾಮಗಾರಿ ಮುಗಿಸುವ ಗುರಿ ಹೊಂದಿತ್ತಾದರೂ, ಭೂಸ್ವಾಧೀನದಲ್ಲಿ ವಿಳಂಬವಾದ ಕಾರಣ ಕಾಮಗಾರಿ ವಿಳಂಬವಾಗುತ್ತಲೇ ಸಾಗಿತು. ಭೂಸ್ವಾಧೀನ ಸಮಸ್ಯೆಗಳು, ವಿಶೇಷವಾಗಿ ನೈಸ್‌ ರಸ್ತೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿನ ವಿಳಂಬ ಮತ್ತು ಕೋವಿಡ್ ಸಾಂಕ್ರಾಮಿಕ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಕಾರಣಗಳಾಗಿವೆ.

ಇದನ್ನೂ ಓದಿ | Road Accident: ಭೀಕರ ರಸ್ತೆ ಅಪಘಾತ; ಖಾಸಗಿ ಬಸ್‌-ಟೆಂಪೊ ಡಿಕ್ಕಿಯಾಗಿ 10 ಮಂದಿ ಸಾವು

ಪ್ರಾಯೋಗಿಕ ಸಂಚಾರ ಇನ್ನು ಕೆಲ ದಿನಗಳು ನಡೆಯಲಿದ್ದು, ಸೆಪ್ಟೆಂಬರ್‌ ಮೊದಲ ವಾರದಲ್ಲಿ ಸಂಚಾರ ಆರಂಭವಾಗುವ ಸಾಧ್ಯತೆಗಳಿವೆ. ಅಥವಾ ಅಕ್ಟೋಬರ್‌ 2 ರಂದು ಗಾಂಧಿ ಜಯಂತಿಯಂದು ಉದ್ಘಾಟನೆ ಮಾಡುವ ಸಾಧ್ಯತೆ ಇದೆ. ಈ ಮಾರ್ಗದಲ್ಲಿ ನಾಗಸಂದ್ರ, ಮಂಜುನಾಥ ನಗರ, ಜಿಂದಾಲ್‌, ಮಾದಾವರ ಮೆಟ್ರೋ ನಿಲ್ದಾಣ ಬರಲಿದೆ.

ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಬೆಂಗಳೂರು: ಬೆಂಗಳೂರಿನಲ್ಲೇ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ನಮ್ಮ ಮೆಟ್ರೋ (Namma Metro)ದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ (Assistant Security Officer) ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ (Bangalore Metro Rail Corporation Limited) ಅರ್ಜಿ ಆಹ್ವಾನಿಸಿದೆ (BMRCL Recruitment 2024). ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 9 (Job Alert).

ಹುದ್ದೆಗಳ ವಿವರ ಮತ್ತು ಅರ್ಹತೆ

ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆ ಇದಾಗಿದ್ದು, ಜೂನಿಯರ್ ಕಮಿಷನ್ಡ್ ಶ್ರೇಣಿಯಲ್ಲಿ ಸೇವೆಯಲ್ಲಿರುವ ಅಥವಾ ನಿವೃತ್ತ ಸಿಬ್ಬಂದಿ, ಅಧಿಕಾರಿ / ಸುಬೇದಾರ್ ಮೇಜರ್ / ಸುಬೇದಾರ್ / ಮಾಸ್ಟರ್ ಚೀಫ್ ಪೆಟ್ಟಿ, ಆಫೀಸರ್ / ಮಾಸ್ಟರ್ ವಾರಂಟ್ ಆಫೀಸರ್ / ವಾರಂಟ್ ಆಫೀಸರ್ ಅಥವಾ ತತ್ಸಮಾನ, ರಕ್ಷಣಾ ಸೇವೆಯಲ್ಲಿ ಇದ್ದವರು, ಇನ್ಸ್‌ಪೆಕ್ಟರ್‌ / ಸಬ್ ಇನ್ಸ್‌ಪೆಕ್ಟರ್‌ / ಎಎಸ್ಐ ಅಥವಾ ತತ್ಸಮಾನ ಶ್ರೇಣಿಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದವರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಗರಿಷ್ಠ ವಯೋಮಿತಿ 62 ವರ್ಷ. ಗಮನಿಸಿ, ಇದು ಗುತ್ತಿಗೆ ಆಧಾರಿತ ಉದ್ಯೋಗವಾಗಿದ್ದು, 60 ವರ್ಷಕ್ಕಿಂತ ಕೆಳಗಿರುವವರನ್ನು 3 ವರ್ಷಕ್ಕೆ ಮತ್ತು 60 ವರ್ಷಕ್ಕಿಂತ ಮೇಲಿರುವವರನ್ನು 1 ವರ್ಷಕ್ಕೆ ನೇಮಕ ಮಾಡಿಕೊಳ್ಳಲಾಗುತ್ತದೆ. ಉದ್ಯೋಗ ನಿರ್ವಹಿಸುವ ರೀತಿಯನ್ನು ನೋಡಿಕೊಂಡು ಗುತ್ತಿಗೆ ಮುಂದಿರಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ದೈಹಿಕ ಪರೀಕ್ಷೆ, ಅರ್ಹತೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ 60 ವರ್ಷದೊಳಗಿನವರಿಗೆ 32,950 ರೂ. ಮತ್ತು 60 ವರ್ಷ ದಾಟಿದವರಿಗೆ 30,000 ರೂ. ಮಾಸಿಕ ವೇತನ ನೀಡಲಾಗುತ್ತದೆ.

BMRCL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

CM Siddaramaiah: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ‌ಅನುಮತಿ ಕೊಟ್ಟ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ಕರ್ನಾಟಕ ರಾಜ್ಯಪಾಲರ ನಡೆ ವಿರುದ್ಧವಾಗಿ ದೆಹಲಿ ಮಟ್ಟದಲ್ಲಿ ಹೋರಾಟ ನಡೆಸುವ ಕುರಿತು ವರಿಷ್ಠರ ಜತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ ಹೋಗುತ್ತಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದಾಗಿದ್ದಾರೆ. ಈಗಾಗಲೇ ಸಿಎಂ ಬೆಂಬಲಕ್ಕೆ ನಿಲ್ಲಲು ಸಚಿವರು ಹಾಗೂ ಶಾಸಕರಿಗೆ ಹೈ ಕಮಾಂಡ್ ಸೂಚನೆ ಕೊಟ್ಟಿರುವ ಹಿನ್ನೆಲೆಯಲ್ಲಿ ಆ.23ರಂದು ಕೈ ವರಿಷ್ಠರ ಭೇಟಿಯಾಗಲು ಸಿಎಂ, ನವ ದೆಹಲಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ‌ಅನುಮತಿ ಕೊಟ್ಟ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ಕರ್ನಾಟಕ ರಾಜ್ಯಪಾಲರ ನಡೆ ವಿರುದ್ಧವಾಗಿ ದೆಹಲಿ ಮಟ್ಟದಲ್ಲಿ ಹೋರಾಟ ನಡೆಸುವ ಕುರಿತು ವರಿಷ್ಠರ ಜತೆ ಚರ್ಚೆ ನಡೆಸಲು ಸಿಎಂ ತೆರಳುತ್ತಿದ್ದಾರೆ.

ಇದನ್ನೂ ಓದಿ | Manipur Bomb Blast: ಮಾಜಿ ಶಾಸಕನ ಮನೆಯಲ್ಲಿ ಬಾಂಬ್‌ ಬ್ಲಾಸ್ಟ್‌; ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ

ದೇಶದಲ್ಲಿ ಬಿಜೆಪಿಯೇತರ ಹಾಗೂ ಕಾಂಗ್ರೆಸ್ ಪರವಿರುವ ಸರ್ಕಾರದ ಸಿಎಂಗಳ ಬೆಂಬಲದೊಂದಿಗೆ ರಾಷ್ಟ್ರಪತಿಗೆ ದೂರು ನೀಡುವ ಕುರಿತು ಸಿಎಂ ಚರ್ಚೆ ನಡೆಸಲಿದ್ದಾರೆ. ಕರ್ನಾಟಕದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಹಾಗೂ ವರಿಷ್ಠರ ಭೇಟಿ ವೇಳೆ ಮತ್ತೊಮ್ಮೆ ಮುಡಾದಲ್ಲಿ ನನ ಪಾತ್ರವಿಲ್ಲ ಎಂದು ಮನವರಿಕೆ ಮಾಡಿಕೊಡಲು ಸಿಎಂ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.

ಪ್ರಾಸಿಕ್ಯೂಷನ್‌ ಸಂಕಷ್ಟ; ಸಿಎಂ ನಾಳಿನ ಬಳ್ಳಾರಿ, ಮಂತ್ರಾಲಯ ಪ್ರವಾಸ ರದ್ದು

ಬೆಂಗಳೂರು: ಆ. 19ರಂದು ನಿಗದಿಯಾಗಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬಳ್ಳಾರಿ ಜಿಲ್ಲಾ ಪ್ರವಾಸ ಮತ್ತು ಮಂತ್ರಾಲಯ ಭೇಟಿ ಕಾರ್ಯಕ್ರಮಗಳು ರದ್ದಾಗಿದೆ. ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ನಡೆಸಲು ನಾಳಿನ ಕಾರ್ಯಕ್ರಮಗಳನ್ನು ಸಿಎಂ ರದ್ದು ಮಾಡಿದ್ದಾರೆ.

ಇದನ್ನೂ ಓದಿ | V Somanna : ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಸಂಸದರ ಕಚೇರಿ ಉದ್ಘಾಟಿಸಿದ ವಿ ಸೋಮಣ್ಣ

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಸಿಎಂ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಅಲ್ಲದೇ ನಾಳೆ ಹೈಕೋರ್ಟ್‌ನಲ್ಲಿ ಸಿಎಂ ಪರವಾಗಿ ಅಭಿಷೇಕ್ ‌ಮನು ಸಿಂಘ್ವಿ, ಕಪಿಲ್ ಸಿಬಲ್ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ನಾಳೆ ಬೆಳಗ್ಗೆ ಬೆಂಗಳೂರಿಗೆ ಸಿಂಘ್ವಿ ಮತ್ತು ಸಿಬಲ್ ಆಗಮಿಸಲಿದ್ದಾರೆ. ಸೋಮವಾರ ಬೆಳಗ್ಗೆ ವಕೀಲರ ಜೊತೆಗೆ ಸಿಎಂ‌ ಸಿದ್ದರಾಮಯ್ಯ ಸುದೀರ್ಘ ಚರ್ಚೆ ಹಿನ್ನೆಲೆಯಲ್ಲಿ ನಾಳಿನ ಬಳ್ಳಾರಿ ಜಿಲ್ಲೆ ಮತ್ತು ಮಂತ್ರಾಲಯ ಭೇಟಿಯನ್ನು ಸಿಎಂ ರದ್ದು ಮಾಡಿದ್ದಾರೆ.

Continue Reading

ಬೆಂಗಳೂರು ಗ್ರಾಮಾಂತರ

Zika Virus : ಆನೇಕಲ್‌ನಲ್ಲಿ ಆರು ಮಂದಿಗೆ ಝಿಕಾ ವೈರಸ್ ಪತ್ತೆ; 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಜೋನ್‌

Zika Virus : ಡೆಂಗ್ಯೂ (Dengue Virus) ಬಳಿಕ ಇದೀಗ ರಾಜ್ಯದಲ್ಲಿ ಝಿಕಾ ವೈರಸ್‌ ಭೀತಿ ಶುರುವಾಗಿದೆ. ಆನೇಕಲ್‌ನಲ್ಲಿ ಡೆಂಗ್ಯೂ ರ‍್ಯಾಂಡಮ್‌ ಟೆಸ್ಟ್‌ ವೇಳೆ ಆರು ಮಂದಿಗೆ ಝಿಕಾ ಸೋಂಕು ಕಾಣಿಸಿಕೊಂಡಿದೆ.

VISTARANEWS.COM


on

By

zika Virus
ಸಾಂದರ್ಭಿಕ ಚಿತ್ರ
Koo

ಆನೇಕಲ್‌: ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಆರು ಮಂದಿ ರೋಗಿಗಳಲ್ಲಿ ಝಿಕಾ ವೈರಸ್ (Zika Virus) ಪತ್ತೆಯಾಗಿದೆ. ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಆರು‌ ಮಂದಿಗೆ ಚಳಿ, ಜ್ವರ ಮತ್ತು ಮೈಕೈ ನೋವಿನಿಂದ ಡೆಂಗ್ಯೂ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಡೆಂಗ್ಯೂ ರ‍್ಯಾಂಡಮ್‌ ಟೆಸ್ಟ್ ವೇಳೆ ಝಿಕಾ ವೈರಸ್ ಪತ್ತೆಯಾಗಿದೆ. ಸದ್ಯ ಮನೆಯಲ್ಲಿ ಎಲ್ಲರೂ ವಿಶ್ರಾಂತಿ ಪಡೆಯುತ್ತಿದ್ದಾರೆ. ಝಿಕಾ ವೈರಸ್ ಪತ್ತೆ ಹಿನ್ನೆಲೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ.

ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದ 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ಆಗದಂತೆ ಕ್ರಮವಹಿಸಲಾಗಿದ್ದು, ಫಾಗಿಂಗ್, ಲಾರ್ವ ನಾಶ ಸೇರಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ ರವಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:Karnataka Weather : ಭಾರಿ ಮಳೆ ಎಫೆಕ್ಟ್‌; ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ 20ಕ್ಕೂ ಹೆಚ್ಚು ಕುರಿಗಳು

ರೋಗದ ಲಕ್ಷಣಗಳೇನು?

ಕಣ್ಣು ಕೆಂಪಾಗುವಿಕೆ, ತಲೆ ನೋವು, ವಿಪರೀತ ಜ್ವರ, ಕೀಲುಗಳಲ್ಲಿ ನೋವು, ಗಂಧೆಗಳು, ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳಲಿದೆ.

ಝಿಕಾ ವೈರಸ್ ತಡೆಗಟ್ಟಲು ಏನು ಮಾಡಬೇಕು?

1) ನೀರು ಶೇಖರಣಾ ಪರಿಕರಗಳನ್ನು (ಟ್ಯಾಂಕ್‌, ಟಬ್‌ ಇತ್ಯಾದಿ) ಮುಚ್ಚಿಡಬೇಕು. ಅಲ್ಲದೆ, ವಾರಕ್ಕೊಮ್ಮೆ ಅವುಗಳನ್ನು ಸ್ವಚ್ಛಗೊಳಿಸಬೇಕು.
2) ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಜತೆಗೆ ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು.
3) ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಮಕ್ಕಳು, ವಯೋವೃದ್ಧರು ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಬೇಕು.
4) ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು.
5) ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತದೆ.

ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Govt Employees: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ; ಕ್ರೀಡಾ ಮನೋಭಾವದಿಂದ ಭಾಗವಹಿಸಲು ಸಿ.ಎಸ್. ಷಡಾಕ್ಷರಿ ಮನವಿ

Govt Employees: ಬೆಂಗಳೂರು ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು-2024ಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಚಾಲನೆ ನೀಡಿದರು.

VISTARANEWS.COM


on

Govt Employees
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (Govt Employees) ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವ 2023-24ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಶನಿವಾರ ಚಾಲನೆ ನೀಡಲಾಯಿತು. ಮೂರು ದಿನಗಳ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಉದ್ಘಾಟಿಸಿದರು.

ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಸಿ.ಎಸ್. ಷಡಾಕ್ಷರಿ ಅವರು, ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ತಾವೆಲ್ಲರೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಅತ್ಯಂತ ಉತ್ಸುಕತೆಯಿಂದ ಭಾಗವಹಿಸಿದ್ದೀರಿ. ನಮ್ಮ ಅವಧಿಯಲ್ಲಿ ಇದು 5ನೇ ರಾಜ್ಯ ಮಟ್ಟದ ಕ್ರೀಡಾಕೂಟವಾಗಿದ್ದು, ಈ ಹಿಂದೆ ಎರಡು ವರ್ಷಗಳಿಗೊಮ್ಮೆ ಕ್ರೀಡಾಕೂಟವನ್ನು ನಡೆಸಲಾಗುತ್ತಿತ್ತು. ನಾನು ರಾಜ್ಯಾಧ್ಯಕ್ಷರಾದ ನಂತರ ಪ್ರತಿ ವರ್ಷ ಕ್ರೀಡಾಕೂಟಗಳನ್ನು ನಡೆಸಲು ಸರ್ಕಾರದ ಮೇಲೆ ಒತ್ತಡ ತಂದದ್ದಲ್ಲದೇ ಕ್ರೀಡಾ ಕೂಟದ ಅನುದಾನವನ್ನು 50 ಲಕ್ಷ ದಿಂದ 3 ಕೋಟಿಗೆ ಹೆಚ್ಚಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಪಡೆಯುವ ಮೂಲಕ ವಿಶಿಷ್ಟ ರೀತಿಯನ್ನು ಕ್ರೀಡಾಕೂಟವನ್ನು ನಡೆಸೋಣವೆಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಎಲ್ಲಾ ಕ್ರೀಡಾಪಟುಗಳಿಗೆ ಮೂರು ದಿನಗಳ ಕಾಲ ಶುಚಿ-ರುಚಿಯಾದ ಊಟ- ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದ್ದು, ಕ್ರೀಡಾಕೂಟದಲ್ಲಿ ಎಲ್ಲರೂ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಕ್ರೀಡಾಪಟುಗಳಲ್ಲಿ ಮನವಿ ಮಾಡಿದರು.

ಇದನ್ನೂ ಓದಿ | Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗ್ಗೆ ಅರಮನೆ ಮೈದಾನದಲ್ಲಿ ಬೆಂಗಳೂರಿನಲ್ಲಿ ಸಂಘದ ವತಿಯಿಂದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ಆಯೋಜಿಸಲಾಗಿದ್ದ “ನಮ್ಮಭಿಮಾನದ ಅಭಿನಂದನೆ” ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿ, ಮುಖ್ಯಮಂತ್ರಿಗಳು ಸಂಘದ ಈ ಕಾರ್ಯವನ್ನು ಶ್ಲಾಘಿಸಿದ್ದನ್ನು ಹಾಗೂ ಸಂಘದ ಪ್ರಮುಖ ಬೇಡಿಕೆಗಳಾದ 1) ಹಳೇ ಪಿಂಚಣಿ ಯೋಜನೆ ಮಾರು ಜಾರಿ 2) ಆರೋಗ್ಯ ಸಂಜೀವಿನಿ ಯೋಜನೆ ಶೀಘ್ರ ಅನುಷ್ಠಾನ ಹಾಗೂ 3) ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಂಬಂಧಿಸಿದಂತೆ ಸರ್ಕಾರದ ಬದ್ಧತೆಯನ್ನು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಆರ್ ಚೇತನ್‌ ಮಾತನಾಡಿ, ಕ್ರೀಡಾಪಟುಗಳು ಉತ್ಸುಕತೆಯಿಂದ ಭಾಗವಹಿಸಿದ್ದೀರಿ. ಸೋಲು ಮತ್ತು ಗೆಲುವನ್ನು ಸಮನಾಗಿ ಸ್ವೀಕರಿಸಿ ಎಲ್ಲರೂ ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟದ ಕ್ರೀಡೆಗಳಿಗೆ ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ಉತ್ತಮ ಕೀರ್ತಿ ತನ್ನಿರಿ ಎಂದು ಶುಭ ಹಾರೈಸಿದರು.

ಇದಕ್ಕೂ ಮೊದಲು ಯುವ ಸಬಲೀಕಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಆರ್. ಚೇತನ್ ಅವರು ಧ್ವಜಾರೋಣ ನೆರವೇರಿಸಿದರು. ಉಪಾಧ್ಯಕ್ಷರಾದ ನರಸಿಂಹರಾಜುರವರು ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಮುಗಿದ ನಂತರ ಸಂಜೆ. 6.30ಕ್ಕೆ ಸರಿಗಮ ಖ್ಯಾತಿಯ ಶ್ರೀ ಕಂಬದ ರಂಗಯ್ಯ ಮತ್ತು ತಂಡದವರಿಂದ “ಸಂಗೀತ ರಸ ಸಂಜೆ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರಾಜ್ಯ ಎಲ್ಲಾ ಜಿಲ್ಲೆಗಳು ಮತ್ತು ಸಚಿವಾಲಯ ಸೇರಿದಂತೆ ಸುಮಾರು 11000 ಸರ್ಕಾರಿ ನೌಕರರ ಕ್ರೀಡಾಪಟುಗಳು ಕ್ರೀಡೆಗಳಿಗೆ ನೋಂದಾಯಿಸಿಕೊಂಡಿದ್ದರು. 77 ವಿವಿಧ ವೈಯಕ್ತಿಕ ಮತ್ತು ಗುಂಪು ಕ್ರೀಡೆಗಳು ಹಾಗೂ 18 ಸಾಂಸ್ಕೃತಿಕ, ಸಂಗೀತ ಜನಪದ ಸ್ಪರ್ಧೆಗಳು ನಡೆಯಲಿವೆ. ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಉತ್ತಮ ಊಟದ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ.

ಕ್ರೀಡಾಕೂಟಗಳನ್ನು ಸಂಘಟಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು, ಸರ್ಕಾರಿ ಶಾಲಾ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರುಗಳೂ ಸೇರಿದಂತೆ ಸುಮಾರು 400ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರೀಡೆ ಮತ್ತು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುವುದು. ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ, ಟ್ರೋಪಿ, ಕ್ರೀಡಾ ಬ್ಯಾಗ್‌ಗಳನ್ನು ವಿತರಿಸಲಾಗುತ್ತದೆ.

ಇದನ್ನೂ ಓದಿ | Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ ಉದ್ಯೋಗಾವಕಾಶ; 391 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಕಾರ್ಯಕ್ರಮದಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕರಾದ ಕೆ. ಶಶಿಕಲಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಿ. ಬಳ್ಳಾರಿ, ಗೌರವಾಧ್ಯಕ್ಷರಾದ ಬಿ.ಎಚ್.ವೆಂಕಟೇಶಯ್ಯ, ಹಿರಿಯ ಉಪಾಧ್ಯಕ್ಷರುಗಳಾದ ಎಂ.ವಿ. ರುದ್ರಪ್ಪ, ಬಸವರಾಜು, ರಾಜ್ಯ ಖಜಾಂಚಿಗಳಾದ ಡಾ. ಎಸ್. ಸಿದ್ದರಾಮಣ್ಣ ರಾಜ್ಯ ಕಾರ್ಯದರ್ಶಿಗಳಾದ ಡಾ. ನೆಲ್ಕುದ್ರಿ ಸದಾನಂದಪ್ಪ ಸೇರಿ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ರಾಜ್ಯ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

Continue Reading

ಮಳೆ

Karnataka Weather : ಭಾರಿ ಮಳೆ ಎಫೆಕ್ಟ್‌; ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ 20ಕ್ಕೂ ಹೆಚ್ಚು ಕುರಿಗಳು

Karnataka Weather Forecast : ಶನಿವಾರ ರಾತ್ರಿ ಸುರಿದ ಮಳೆಯು ಹಲವೆಡೆ ಅವಾಂತರವನ್ನೇ ಸೃಷ್ಟಿಸಿದೆ. ಭಾರಿ ಮಳೆಗೆ (Rain News) ಬೆಳೆಗಳು ಜಲಾವೃತಗೊಂಡು ರೈತರು ಕಂಗಲಾಗಿದ್ದಾರೆ.

VISTARANEWS.COM


on

By

Karnataka weather Forecast
Koo

ಯಾದಗಿರಿ ಜಿಲ್ಲೆಯಾದ್ಯಂತ ನಿನ್ನೆ ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ (Rain News) ಬೂದನೂರಿನ ಹಿರೇಹಳ್ಳ ತುಂಬಿ ಹರಿಯುತ್ತಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ 20ಕ್ಕೂ ಹೆಚ್ಚು ಕುರಿಗಳು ಕೊಚ್ಚಿ ಹೋಗಿವೆ. ಇತ್ತ ಹಿರೇಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ 50 ಕುರಿಗಳ ರಕ್ಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬೂದನೂರಿನ ಹಿರೇಹಳ್ಳದಲ್ಲಿ ಘಟನೆ (Karnataka Weather Forecast) ನಡೆದಿದೆ. ಬೂದನೂರ ಗ್ರಾಮದ ಸಾಮಯ್ಯ ಎಂಬ ಕುರುಗಾಯಿಗೆ ಸೇರಿದ್ದ ಕುರಿಗಳನ್ನು ಸಂಜೆ ಎಂದಿನಂತೆ ಹಳ್ಳ ದಾಟಿ ಬರುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಗ್ರಾಮಸ್ಥರ ಸಹಾಯದಿಂದ 50 ಕ್ಕೂ ಹೆಚ್ಚು ಕುರಿಗಳ ರಕ್ಷಣೆ ಮಾಡಲಾಗಿದೆ. 20 ಕ್ಕೂ ಹೆಚ್ಚು ಕುರಿಗಳು ಹಿರೇಹಳ್ಳದ ನೀರು ಪಾಲಾಗಿವೆ.

ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸುತ್ತಮುತ್ತ ಭಾನುವಾರ ಅರ್ಧ ಗಂಟೆಗೂ ಹೆಚ್ಚು ಸಮಯ ಧಾರಾಕಾರ ಮಳೆಯಾಗಿದೆ. ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಮಳೆ ಆರ್ಭಟ ಜೋರಾಗಿತ್ತು. ಮಳೆಗೆ ರಸ್ತೆ ಹಾಗೂ ಚರಂಡಿಗಳ ಮೇಲೆ ನೀರು ಹರಿದು ಮನೆಗಳತ್ತ ತೆರಳಲು ಜನರು ಪರದಾಡಿದ್ದರು. ರಾಜಧಾನಿ ಬೆಂಗಳೂರಿನ ಸುತ್ತಮುತ್ತಲೂ ಮಳೆಯಾಗಿದೆ.

ಚಿಕ್ಕಬಳ್ಳಾಪುರದಲಿ ಬಾಳೆ ತೋಟ ನಾಶ

ಇಡೀ ರಾತ್ರಿ ಸುರಿದ ಭಾರಿ ಮಳೆಗೆ ಬಾಳೆ ತೋಟ ನಾಶವಾಗಿದೆ. ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು ಹತ್ತು ಲಕ್ಷ ಬೆಲೆ ಬಾಳುವ 2500 ಬಾಳೆ ಗಿಡಗಳು ನಾಶವಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಬೀಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹನುಮಂತರಾಯಪ್ಪ ಎಂಬ ರೈತನಿಗೆ ಸೇರಿದ ಬಾಳೆ ತೋಟ ಫಸಲಿಗೆ ಬಂದಿದ್ದ ಬೆಳೆ ನೆಲಕಚ್ಚಿದೆ. ಇತ್ತ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಮೇಲೂರು ಗ್ರಾಮ ದೇವತೆ ಗಂಗಾದೇವಿ ದೇವಸ್ಥಾನ ಜಲಾವೃತಗೊಂಡಿದೆ. ಮನೆಗಳಿಗೆ ಹಾಗೂ ದೇವಸ್ಥಾನಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಅಧಿಕಾರಿಗಳಿಗೆ ಜನರು ಹಿಡಿಶಾಪ ಹಾಕಿದ್ದಾರೆ.

ತುಮಕೂರಿನಲ್ಲಿ ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

ತುಮಕೂರು ಜಿಲ್ಲೆಯ ಹಲವೆಡೆ ತಡರಾತ್ರಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಕ್ಕೆ ನೀರು ನುಗ್ಗಿ ರಸ್ತೆಗಳು ಜಲಾವೃತಗೊಂಡಿದೆ. ತುಮಕೂರು ನಗರ, ಗುಬ್ಬಿ, ಕುಣಿಗಲ್ ತಾಲೂಕಿನಲ್ಲಿ ಮಳೆಯಾಗಿದೆ. ತುಮಕೂರು ನಗರದ ಬನಶಂಕರಿಯಲ್ಲಿ ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರ ಪರದಾಟಬೇಕಾಯಿತು. ಹಲವಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ವಿಜಯಪುರದಲ್ಲಿ ಜಮೀನು ಜಲಾವೃತ

ಕಾಲುವೆಗೆ ನೀರು ಬಿಟ್ಟಿದ್ದರಿಂದ ಭೂಮಿಯ ಬದು ಒಡೆದು ಜಮೀನಿಗೆ ನೀರು ನುಗ್ಗಿದೆ. ಕಾಲುವೆ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರೈತರು ಬೆಳೆದ ಮುಂಗಾರು ಬೆಳೆಗಳಾದ ತೊಗರಿ, ಮೆಕ್ಕೆಜೋಳ ಸಂಪೂರ್ಣ ಜಲಾವೃತಗೊಂಡಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೊಟ್ಯಾಳ ಗ್ರಾಮದ ರೈತರ ಗೋಳು ಕೇಳುವವರು ಇಲ್ಲದಂತಾಗಿದೆ. ನೂರಾರು ಎಕರೆದಲ್ಲಿ ಬೆಳೆದ ಬೆಳೆ ಸಂಪೂರ್ಣಹಾನಿಯಾಗಿದೆ. ಕೂಡಲೇ ಕಾಲುವೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಜತೆಗೆ ನಾಶವಾದ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಮಳೆಗೆ ಧರೆಗುರುಳಿದ ಮರಗಳು

ನಿನ್ನೆ ಶನಿವಾರ ಸುರಿದ ಗಾಳಿ ಮಳೆಗೆ ಅಡಿಕೆ ಹಾಗೂ ತೆಂಗಿನ ಮರಗಳು ಧರೆಗುರುಳಿವೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಾಸಡಿ ಗ್ರಾಮ ಒಂದರಲ್ಲೇ 3 ಸಾವಿರಕ್ಕೂ ಅಧಿಕ ಅಡಿಕೆ ಮರ 200ಕ್ಕೂ ಅಧಿಕ ತೆಂಗಿನ ಮರಗಳು ಉರುಳಿ ಬಿದ್ದಿವೆ. ಫಲಕ್ಕೆ ಬಂದ ಅಡಿಕೆ ಮರ ಕಳೆದುಕೊಂಡ ರೈತರು ಗೋಳಾಡುತ್ತಿದ್ದಾರೆ. 16 ವರ್ಷಗಳ ಕಾಲ ಮಕ್ಕಳಂತೆ ಸಾಕಿದ್ದ ಅಡಿಕೆ ಮರ ಧರೆಗುರುಳಿದ್ದನ್ನು ಕಂಡು ರೈತರು ಕಣ್ಣೀರು ಹಾಕುತ್ತಿದ್ದಾರೆ. ರೈತರೂಂದಿಗೆ ಮಾಜಿ ಸಚಿವ ರೇಣುಕಾಚಾರ್ಯ ಬೆಳೆ ಹಾನಿ ತೋಟಗಳಿಗೆ ಭೇಟಿ ನೀಡಿದರು. ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು. ಬೆಳೆ ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ: POCSO Case: ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ಆಸೆ ತೋರಿಸಿ ಅತ್ಯಾಚಾರವೆಸಗಿದ ಕಾಮುಕ

ನಾಳೆ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಆ.19ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಇನ್ನೂ ದಕ್ಷಿಣ ಒಳನಾಡಿನ ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
CM Siddaramaiah
ಕರ್ನಾಟಕ58 mins ago

CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

zika Virus
ಬೆಂಗಳೂರು ಗ್ರಾಮಾಂತರ1 hour ago

Zika Virus : ಆನೇಕಲ್‌ನಲ್ಲಿ ಆರು ಮಂದಿಗೆ ಝಿಕಾ ವೈರಸ್ ಪತ್ತೆ; 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಜೋನ್‌

Food Poisoning
ದೇಶ2 hours ago

Food Poisoning: ಶಾಲೆಯಲ್ಲಿ ಕೊಟ್ಟ ಬಿಸ್ಕೇಟ್‌ ಸೇವಿಸಿ ಬರೋಬ್ಬರಿ 80 ವಿದ್ಯಾರ್ಥಿಗಳು ಅಸ್ವಸ್ಥ

Govt Employees
ಕರ್ನಾಟಕ2 hours ago

Govt Employees: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ; ಕ್ರೀಡಾ ಮನೋಭಾವದಿಂದ ಭಾಗವಹಿಸಲು ಸಿ.ಎಸ್. ಷಡಾಕ್ಷರಿ ಮನವಿ

Kolkata Doctor Murder Case
ದೇಶ2 hours ago

Kolkata Doctor murder case: ಟ್ರೈನಿ ವೈದ್ಯೆ ಕೊಲೆ ಪ್ರಕರಣ; ಸ್ವಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌

Karnataka weather Forecast
ಮಳೆ3 hours ago

Karnataka Weather : ಭಾರಿ ಮಳೆ ಎಫೆಕ್ಟ್‌; ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ 20ಕ್ಕೂ ಹೆಚ್ಚು ಕುರಿಗಳು

U19 Women’s T20 World Cup
ಕ್ರೀಡೆ3 hours ago

U-19 Women’s T20 World Cup; ಅಂಡರ್-19 ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ವಿಂಡೀಸ್​ ಮೊದಲ ಎದುರಾಳಿ

Prabhas-Hanu Iman Esmail Trending
ಟಾಲಿವುಡ್3 hours ago

Actor Prabhas: ಪ್ರಭಾಸ್ ಜತೆ ರೀಲ್ಸ್ ರಾಣಿ ಇಮಾನ್ ಇಸ್ಮಾಯಿಲ್ ರೊಮ್ಯಾನ್ಸ್‌!

Indian origin family killed
ವಿದೇಶ3 hours ago

Indian origin family killed: ಟೆಕ್ಸಾಸ್‌ನಲ್ಲಿ ಭೀಕರ ಅಪಘಾತ; ಭಾರತೀಯ ಮೂಲದ ದಂಪತಿ, ಮಗಳು ದುರ್ಮರಣ

CM Siddaramaiah
ಕರ್ನಾಟಕ3 hours ago

CM Siddaramaiah: ಪ್ರಾಸಿಕ್ಯೂಷನ್‌ ಸಂಕಷ್ಟ; ಸಿಎಂ ನಾಳಿನ ಬಳ್ಳಾರಿ, ಮಂತ್ರಾಲಯ ಪ್ರವಾಸ ರದ್ದು

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌