Karnataka Weather : ಭಾರಿ ಮಳೆ ಎಫೆಕ್ಟ್‌; ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ 20ಕ್ಕೂ ಹೆಚ್ಚು ಕುರಿಗಳು - Vistara News

ಮಳೆ

Karnataka Weather : ಭಾರಿ ಮಳೆ ಎಫೆಕ್ಟ್‌; ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ 20ಕ್ಕೂ ಹೆಚ್ಚು ಕುರಿಗಳು

Karnataka Weather Forecast : ಶನಿವಾರ ರಾತ್ರಿ ಸುರಿದ ಮಳೆಯು ಹಲವೆಡೆ ಅವಾಂತರವನ್ನೇ ಸೃಷ್ಟಿಸಿದೆ. ಭಾರಿ ಮಳೆಗೆ (Rain News) ಬೆಳೆಗಳು ಜಲಾವೃತಗೊಂಡು ರೈತರು ಕಂಗಲಾಗಿದ್ದಾರೆ.

VISTARANEWS.COM


on

Karnataka weather Forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ ಜಿಲ್ಲೆಯಾದ್ಯಂತ ನಿನ್ನೆ ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ (Rain News) ಬೂದನೂರಿನ ಹಿರೇಹಳ್ಳ ತುಂಬಿ ಹರಿಯುತ್ತಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ 20ಕ್ಕೂ ಹೆಚ್ಚು ಕುರಿಗಳು ಕೊಚ್ಚಿ ಹೋಗಿವೆ. ಇತ್ತ ಹಿರೇಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ 50 ಕುರಿಗಳ ರಕ್ಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬೂದನೂರಿನ ಹಿರೇಹಳ್ಳದಲ್ಲಿ ಘಟನೆ (Karnataka Weather Forecast) ನಡೆದಿದೆ. ಬೂದನೂರ ಗ್ರಾಮದ ಸಾಮಯ್ಯ ಎಂಬ ಕುರುಗಾಯಿಗೆ ಸೇರಿದ್ದ ಕುರಿಗಳನ್ನು ಸಂಜೆ ಎಂದಿನಂತೆ ಹಳ್ಳ ದಾಟಿ ಬರುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಗ್ರಾಮಸ್ಥರ ಸಹಾಯದಿಂದ 50 ಕ್ಕೂ ಹೆಚ್ಚು ಕುರಿಗಳ ರಕ್ಷಣೆ ಮಾಡಲಾಗಿದೆ. 20 ಕ್ಕೂ ಹೆಚ್ಚು ಕುರಿಗಳು ಹಿರೇಹಳ್ಳದ ನೀರು ಪಾಲಾಗಿವೆ.

ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸುತ್ತಮುತ್ತ ಭಾನುವಾರ ಅರ್ಧ ಗಂಟೆಗೂ ಹೆಚ್ಚು ಸಮಯ ಧಾರಾಕಾರ ಮಳೆಯಾಗಿದೆ. ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಮಳೆ ಆರ್ಭಟ ಜೋರಾಗಿತ್ತು. ಮಳೆಗೆ ರಸ್ತೆ ಹಾಗೂ ಚರಂಡಿಗಳ ಮೇಲೆ ನೀರು ಹರಿದು ಮನೆಗಳತ್ತ ತೆರಳಲು ಜನರು ಪರದಾಡಿದ್ದರು. ರಾಜಧಾನಿ ಬೆಂಗಳೂರಿನ ಸುತ್ತಮುತ್ತಲೂ ಮಳೆಯಾಗಿದೆ.

ಚಿಕ್ಕಬಳ್ಳಾಪುರದಲಿ ಬಾಳೆ ತೋಟ ನಾಶ

ಇಡೀ ರಾತ್ರಿ ಸುರಿದ ಭಾರಿ ಮಳೆಗೆ ಬಾಳೆ ತೋಟ ನಾಶವಾಗಿದೆ. ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು ಹತ್ತು ಲಕ್ಷ ಬೆಲೆ ಬಾಳುವ 2500 ಬಾಳೆ ಗಿಡಗಳು ನಾಶವಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಬೀಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹನುಮಂತರಾಯಪ್ಪ ಎಂಬ ರೈತನಿಗೆ ಸೇರಿದ ಬಾಳೆ ತೋಟ ಫಸಲಿಗೆ ಬಂದಿದ್ದ ಬೆಳೆ ನೆಲಕಚ್ಚಿದೆ. ಇತ್ತ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಮೇಲೂರು ಗ್ರಾಮ ದೇವತೆ ಗಂಗಾದೇವಿ ದೇವಸ್ಥಾನ ಜಲಾವೃತಗೊಂಡಿದೆ. ಮನೆಗಳಿಗೆ ಹಾಗೂ ದೇವಸ್ಥಾನಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಅಧಿಕಾರಿಗಳಿಗೆ ಜನರು ಹಿಡಿಶಾಪ ಹಾಕಿದ್ದಾರೆ.

ತುಮಕೂರಿನಲ್ಲಿ ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

ತುಮಕೂರು ಜಿಲ್ಲೆಯ ಹಲವೆಡೆ ತಡರಾತ್ರಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಕ್ಕೆ ನೀರು ನುಗ್ಗಿ ರಸ್ತೆಗಳು ಜಲಾವೃತಗೊಂಡಿದೆ. ತುಮಕೂರು ನಗರ, ಗುಬ್ಬಿ, ಕುಣಿಗಲ್ ತಾಲೂಕಿನಲ್ಲಿ ಮಳೆಯಾಗಿದೆ. ತುಮಕೂರು ನಗರದ ಬನಶಂಕರಿಯಲ್ಲಿ ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರ ಪರದಾಟಬೇಕಾಯಿತು. ಹಲವಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ವಿಜಯಪುರದಲ್ಲಿ ಜಮೀನು ಜಲಾವೃತ

ಕಾಲುವೆಗೆ ನೀರು ಬಿಟ್ಟಿದ್ದರಿಂದ ಭೂಮಿಯ ಬದು ಒಡೆದು ಜಮೀನಿಗೆ ನೀರು ನುಗ್ಗಿದೆ. ಕಾಲುವೆ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರೈತರು ಬೆಳೆದ ಮುಂಗಾರು ಬೆಳೆಗಳಾದ ತೊಗರಿ, ಮೆಕ್ಕೆಜೋಳ ಸಂಪೂರ್ಣ ಜಲಾವೃತಗೊಂಡಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೊಟ್ಯಾಳ ಗ್ರಾಮದ ರೈತರ ಗೋಳು ಕೇಳುವವರು ಇಲ್ಲದಂತಾಗಿದೆ. ನೂರಾರು ಎಕರೆದಲ್ಲಿ ಬೆಳೆದ ಬೆಳೆ ಸಂಪೂರ್ಣಹಾನಿಯಾಗಿದೆ. ಕೂಡಲೇ ಕಾಲುವೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಜತೆಗೆ ನಾಶವಾದ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಮಳೆಗೆ ಧರೆಗುರುಳಿದ ಮರಗಳು

ನಿನ್ನೆ ಶನಿವಾರ ಸುರಿದ ಗಾಳಿ ಮಳೆಗೆ ಅಡಿಕೆ ಹಾಗೂ ತೆಂಗಿನ ಮರಗಳು ಧರೆಗುರುಳಿವೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಾಸಡಿ ಗ್ರಾಮ ಒಂದರಲ್ಲೇ 3 ಸಾವಿರಕ್ಕೂ ಅಧಿಕ ಅಡಿಕೆ ಮರ 200ಕ್ಕೂ ಅಧಿಕ ತೆಂಗಿನ ಮರಗಳು ಉರುಳಿ ಬಿದ್ದಿವೆ. ಫಲಕ್ಕೆ ಬಂದ ಅಡಿಕೆ ಮರ ಕಳೆದುಕೊಂಡ ರೈತರು ಗೋಳಾಡುತ್ತಿದ್ದಾರೆ. 16 ವರ್ಷಗಳ ಕಾಲ ಮಕ್ಕಳಂತೆ ಸಾಕಿದ್ದ ಅಡಿಕೆ ಮರ ಧರೆಗುರುಳಿದ್ದನ್ನು ಕಂಡು ರೈತರು ಕಣ್ಣೀರು ಹಾಕುತ್ತಿದ್ದಾರೆ. ರೈತರೂಂದಿಗೆ ಮಾಜಿ ಸಚಿವ ರೇಣುಕಾಚಾರ್ಯ ಬೆಳೆ ಹಾನಿ ತೋಟಗಳಿಗೆ ಭೇಟಿ ನೀಡಿದರು. ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು. ಬೆಳೆ ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ: POCSO Case: ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ಆಸೆ ತೋರಿಸಿ ಅತ್ಯಾಚಾರವೆಸಗಿದ ಕಾಮುಕ

ನಾಳೆ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಆ.19ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಇನ್ನೂ ದಕ್ಷಿಣ ಒಳನಾಡಿನ ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lightning Strike: ಮಿಂಚು ಹೊಡೆದು 9 ಸಾವು; 12 ಮಂದಿಗೆ ಗಾಯ

Lightning Strike: ಒಡಿಶಾದ ವಿವಿಧ ಭಾಗಗಳಲ್ಲಿ ಶನಿವಾರ ಮಿಂಚು ಹೊಡೆದು ಸುಮಾರು 9 ಮಂದಿ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಮಯೂರ್‌ಭಂಜ್‌, ಬಾಲಸೊರೆ ಮತ್ತು ಭದ್ರಕ್‌ ಜಿಲ್ಲೆಗಳಲ್ಲಿ ತಲಾ ಇಬ್ಬರು ಮತ್ತು ಕೈಂಜ್ಹರ್‌, ಧೆನ್ಕನಲ್‌ ಮತ್ತು ಗಂಜಮ್‌ ಜಿಲ್ಲೆಗಳಲ್ಲಿ ತಲಾ ಒಬ್ಬರು ಅಸುನೀಗಿದ್ದಾರೆ.

VISTARANEWS.COM


on

Lightning Strike
Koo

ಭುವನೇಶ್ವರ: ಒಡಿಶಾದ ವಿವಿಧ ಭಾಗಗಳಲ್ಲಿ ಶನಿವಾರ ಮಿಂಚು ಹೊಡೆದು (Lightning Strike) ಸುಮಾರು 9 ಮಂದಿ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಮಯೂರ್‌ಭಂಜ್‌, ಬಾಲಸೊರೆ ಮತ್ತು ಭದ್ರಕ್‌ ಜಿಲ್ಲೆಗಳಲ್ಲಿ ತಲಾ ಇಬ್ಬರು ಮತ್ತು ಕೈಂಜ್ಹರ್‌, ಧೆನ್ಕನಲ್‌ ಮತ್ತು ಗಂಜಮ್‌ ಜಿಲ್ಲೆಗಳಲ್ಲಿ ತಲಾ ಒಬ್ಬರು ಅಸುನೀಗಿದ್ದಾರೆ.

ಘಟನೆಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಜತೆಗೆ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಬಾರ್ಪಾಲಿ ಬ್ಲಾಕ್‌ನ ಮುನುಪಾಲಿ ಗ್ರಾಮದ ಬಳಿಯ ಹೊಲದಲ್ಲಿ ಸಿಡಿಲು ಬಡಿದು 12 ಜನರು ಗಾಯಗೊಂಡಿದ್ದಾರೆ ಎಂದು ಬಾರ್ಗರ್ ಜಿಲ್ಲೆಯ ವರದಿ ತಿಳಿಸಿದೆ. ಗಾಯಗೊಂಡ 12 ಜನರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಕಿ-ಅಂಶಗಳ ಪ್ರಕಾರ ಒಡಿಶಾದಲ್ಲಿ ಕಳೆದ ಐದು ವರ್ಷಗಳಲ್ಲಿ ಸಿಡಿಲು ಬಡಿದು 10,741 ಮಂದಿ ಮೃತಪಟ್ಟಿದ್ದಾರೆ. ಮಿಂಚಿನ ಹೊಡೆತದಿಂದ ಅತೀ ಹೆಚ್ಚಿನ ಸಾವು ಒಡಿಶಾದಲ್ಲಿ ಸಂಭವಿಸುತ್ತದೆ. ಎರಡನೇ ಸ್ಥಾನದಲ್ಲಿ ಮಧ್ಯಪ್ರದೇಶ ಇದೆ.

ಹಿಮಾಚಲ ಪ್ರದೇಶದಲ್ಲಿ ಮುಂದುವರಿದ ಮಳೆ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆ ಮುಂದಿವರಿದಿದೆ. ಆಗಸ್ಟ್‌ 23ರವರೆಗೆ ಧಾರಾಕಾರವಾಗಿ ಮಳೆಯಾಗಲಿದ್ದು, 5 ಜಿಲ್ಲೆಗಳಲ್ಲಿ ಪ್ರವಾಹ ಎದುರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಚಂಬ, ಕಂಗ್ರ, ಮಂಡಿ, ಶಿಮ್ಲಾ ಮತ್ತು ಸಿರ್ಮುವಾರ್‌ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಭೀಕರ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಆಗಸ್ಟ್ 23ರವರೆಗೆ ರಾಜ್ಯದ ಬಯಲು, ಬೆಟ್ಟ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಉನಾ, ಬಿಲಾಸ್ಪುರ, ಹಮೀರ್ಪುರ್, ಕಾಂಗ್ರಾ, ಸೋಲನ್, ಶಿಮ್ಲಾ ಮತ್ತು ಸಿರ್ಮುವಾರ್‌ನ ಪ್ರತ್ಯೇಕ ಸ್ಥಳಗಳಲ್ಲಿ ನಾಳೆ ಭಾರಿ ಮಳೆಯಾಗಲಿದೆ. ಈ ಮಾನ್ಸೂನ್ ಋತುವಿನಲ್ಲಿ ಇದುವರೆಗೆ 215 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 33ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದಾರೆ. ಶಿಮ್ಲಾ ವಲಯದಲ್ಲಿ ಅತಿ ಹೆಚ್ಚು 83 ರಸ್ತೆಗಳು ಸೇರಿದಂತೆ ರಾಜ್ಯಾದ್ಯಂತ ಒಟ್ಟು 194 ರಸ್ತೆಗಳು ಇನ್ನೂ ದುರಸ್ತಿಯಾಗಿಲ್ಲ. ಇದಲ್ಲದೆ ನಿರಂತರ ಮಳೆಯಿಂದಾಗಿ 4,764 ನೀರು ಸರಬರಾಜು ಯೋಜನೆಗಳ ಮೇಲೆ ಪರಿಣಾಮ ಬೀರಿದೆ.

ಮಧ್ಯಪ್ರದೇಶದಲ್ಲಿಯೂ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿಯೂ ಇದುವರೆಗೆ ಉತ್ತಮ ಮಳೆ ಸುರಿದಿದೆ. ಆಗಸ್ಟ್ 19ರಿಂದ ರಾಜ್ಯದಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಸೂಚಿಸಿದ್ದಾರೆ. ಸದ್ಯ ರಾಜ್ಯದ ಅಣೆಕಟ್ಟುಗಳು ಮತ್ತು ಕೊಳಗಳಲ್ಲಿನ ನೀರಿನ ಮಟ್ಟವು ಗರಿಷ್ಠ ಪ್ರಮಾಣದಲ್ಲಿದೆ. ಕೋಲಾರ, ಬನ್ಸಾಗರ್, ಕುಂಡಲಿಯಾ, ಬರ್ಗಿ, ಇಂದಿರಾ ಸಾಗರ್, ಓಂಕಾರೇಶ್ವರ, ಕಲಿಯಸೊಟ್, ಭದ್ರಭಡ, ಕೆರವ ಮತ್ತು ಇತರ ಅಣೆಕಟ್ಟುಗಳು ಬಹುತೇಕ ಭರ್ತಿಯಾಗಿವೆ.

ಇದನ್ನೂ ಓದಿ: Cloudburst: ಮೇಘಸ್ಫೋಟದಿಂದ ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ; 40ಕ್ಕೂ ಹೆಚ್ಚು ಮಂದಿ ನಾಪತ್ತೆ

Continue Reading

ಮಳೆ

Karnataka Weather : ಭಾರಿ ಮಳೆ ಹಿನ್ನೆಲೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ (Rain News) ಮಾಡಲಾಗಿದೆ. ಕೆಲವೊಮ್ಮೆ ಗಾಳಿ ವೇಗವು ಬೀಸಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಇಂದು ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಚದುರಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್‌ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Dina Bhavishya: ಈ ರಾಶಿಯವರಿಗೆ ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Weather: ಇಂದು ಹಾಸನ, ಮೈಸೂರು, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 22° C ಆಗಿರಬಹುದು

VISTARANEWS.COM


on

Karnataka Weather
Koo

ಬೆಂಗಳೂರು: ಆ. 17ರಂದು ಹಾಸನ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೃಷ್ಣಾ ಜಲಾನಯನ ಪ್ರದೇಶದದಲ್ಲಿ ಆಗಸ್ಟ್ 21 ರವರೆಗೆ ಹಗುರದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. ಇನ್ನು ಕಾವೇರಿ ಜಲಾನಯನ ಪ್ರದೇಶದಲ್ಲಿ ಆಗಸ್ಟ್ 19 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.

ಆ.24ರವರೆಗೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ. ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 20 ರವರೆಗೆ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 23 ರವರೆಗೆ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ ಆ. 18ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚು. ದಕ್ಷಿಣ ಒಳನಾಡುನ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡುನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಪರಿಸ್ಥಿತಿ ಆ.21ರವರೆಗೆ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ | Bangalore Rain: ರಾಜಧಾನಿಯ ಹಲವೆಡೆ ಅಬ್ಬರಿಸಿದ ವರುಣ; ಆಟೋ ಮೇಲೆ ಮರ ಬಿದ್ದು ಚಾಲಕ ಸೇರಿ ಮೂವರಿಗೆ ಗಾಯ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 22° C ಆಗಿರಬಹುದು

Continue Reading

ಮಳೆ

Bangalore Rain: ರಾಜಧಾನಿಯ ಹಲವೆಡೆ ಅಬ್ಬರಿಸಿದ ವರುಣ; ಆಟೋ ಮೇಲೆ ಮರ ಬಿದ್ದು ಚಾಲಕ ಸೇರಿ ಮೂವರಿಗೆ ಗಾಯ

Bangalore Rain: ಬೆಂಗಳೂರಿನ ವಿಜಯನಗರದ ಎಂ.ಸಿ.ಲೇಔಟ್‌ನಲ್ಲಿ ಬೃಹತ್ ಮರ ಬಿದ್ದಿದ್ದರಿಂದ ಆಟೋ ಜಖಂಗೊಂಡಿದೆ. ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ.

VISTARANEWS.COM


on

Bangalore Rain
Koo

ಬೆಂಗಳೂರು: ರಾಜಧಾನಿಯ ಬಹುಕೇಕ ಕಡೆ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು. ಮೆಜೆಸ್ಟಿಕ್, ವಿಜಯನಗರ, ಯಶವಂತಪುರ, ವಸಂತ ನಗರ ಸುತ್ತಮುತ್ತ ಧಾರಾಕಾರ ಮಳೆ (Bangalore Rain) ಸುರಿದಿದ್ದು, ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೃಹತ್ ಮರವೊಂದು ಆಟೋ ಮೇಲೆ‌ ಬಿದ್ದಿದೆ. ಇದರಿಂದ ಚಾಲಕ ಸೇರಿ ಮೂವರಿಗೆ ಗಾಯಗಳಾಗಿವೆ.

ವಿಜಯನಗರದ ಎಂ.ಸಿ.ಲೇಔಟ್‌ನಲ್ಲಿ ಬೃಹತ್ ಮರ ಬಿದ್ದಿದ್ದರಿಂದ ಆಟೋ ಜಖಂಗೊಂಡಿದೆ. ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ‌‌ ಬಿಬಿಎಂಪಿ ಸಿಬ್ಬಂದಿ ಭೇಟಿ ನೀಡಿ ಮರ ತೆರವುಗೊಳಿಸುತ್ತಿದ್ದಾರೆ.

ಇನ್ನು ಶುಕ್ರವಾರ ರಾತ್ರಿ ಭಾರಿ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮೋರಿಯಲ್ಲಿ ಕಸ ತೆಗೆದ ಪುಟಾಣಿ ಮಕ್ಕಳು

ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ ಸುರಿದಾಗ ಚರಂಡಿ ಅವ್ಯವಸ್ಥೆಯಿಂದ ರಸ್ತೆಗಳು ಜಲಾವೃತವಾಗುತ್ತವೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ಪುಟಾಣಿ ಮಕ್ಕಳು ಮಾಡಿದ್ದಾರೆ. ಸತತ ಮಳೆಯಿಂದ ರಸ್ತೆಯಲ್ಲಿ ಮಳೆ ನೀರು ತುಂಬಿದ್ದರಿಂದ ಜಯನಗರ ಈಸ್ಟ್ ಎಂಡ್ ಬಳಿ ಮೋರಿಯಲ್ಲಿದ್ದ ಕಸವನ್ನು ಪುಟಾಣಿ ಮಕ್ಕಳು ತೆಗೆದು ಕ್ಲೀನ್‌ ಮಾಡಿದ್ದಾರೆ.

ಪ್ರತಿ ಬಾರಿ ಮಳೆಯಾದಾಗ ತಮ್ಮ ಮನೆಗಳ ಮುಂಭಾಗ ಇದೇ ರೀತಿ ನೀರು ನಿಲ್ಲುತ್ತದೆ. ಬಿಬಿಎಂಪಿಗೆ ಹಲವು ಭಾರಿ ಫೋನ್ ಮಾಡಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಮೋರಿಯಲ್ಲಿದ್ದ ಕಸವನ್ನು ತೆಗೆದು ರಸ್ತೆಯಲ್ಲಿ ಓಡಾಡಲು ಮಕ್ಕಳು ಅನುಕೂಲ ಮಾಡಿಕೊಟ್ಟಿದ್ದಾರೆ.

ಇದನ್ನು ಓದಿ | Lifestyle Tips: ಆರೋಗ್ಯಕರ ಒತ್ತಡರಹಿತ ಜೀವನಕ್ಕೆ ಸರಳ ಸಪ್ತಸೂತ್ರಗಳು!

ಶನಿವಾರ ಹಾಸನ, ಮೈಸೂರು ಸೇರಿ ವಿವಿಧೆಡೆ ಭಾರಿ ಮಳೆ ಮುನ್ಸೂಚನೆ

ಆ.17ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಹಾಸನ,
ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡುನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅದೇ ರೀತಿ ಆ.18ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚು. ದಕ್ಷಿಣ ಒಳನಾಡುನ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡುನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಪರಿಸ್ಥಿತಿ ಆ.21ರವರೆಗೆ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 22° C ಆಗಿರಬಹುದು

Continue Reading
Advertisement
Vastu Tips
ಧಾರ್ಮಿಕ3 seconds ago

Vastu Tips: ಮಲಗುವ ದಿಕ್ಕು ಸತಿಪತಿ ನಡುವಿನ ವಿರಸಕ್ಕೆ ಕಾರಣ ಆಗಬಹುದು!

Kundapura Kannada Habba 2024
ಕರ್ನಾಟಕ12 mins ago

Kundapura Kannada Habba 2024: ಕುಂದಾಪ್ರ ಕನ್ನಡ ಅಧ್ಯಯನ ಪೀಠಕ್ಕೆ ಸದ್ಯದಲ್ಲೇ ಸಮಿತಿ ರಚನೆ: ಜಯಪ್ರಕಾಶ ಹೆಗ್ಡೆ

Physical Abuse
ಕರ್ನಾಟಕ31 mins ago

Physical Abuse: ಕಿಡ್ನ್ಯಾಪ್ ಮಾಡಿ ಮಹಿಳೆ ಮೇಲೆ ಅತ್ಯಾಚಾರ, ಮಗನ ಮೇಲೂ ಹಲ್ಲೆ; 9 ಆರೋಪಿಗಳ ಅರೆಸ್ಟ್‌

Champai Soren
ದೇಶ52 mins ago

Champai Soren: ನನ್ನ ಎದುರು ಮೂರು ಆಯ್ಕೆಗಳಿವೆ; ಬಿಜೆಪಿ ಸೇರ್ಪಡೆ ಬಗ್ಗೆ ಚಂಪೈ ಸೊರೆನ್‌ ಹೇಳಿದ್ದೇನು? ಇಲ್ಲಿದೆ ಡಿಟೇಲ್ಸ್‌

Zika Virus Case
ಕರ್ನಾಟಕ2 hours ago

Zika Virus: ಡೆಂಗ್ಯೂ ಮಧ್ಯೆ ಝಿಕಾ ವೈರಸ್‌ ಆತಂಕ; ಸೋಂಕು ತಡೆಗೆ ಮಾರ್ಗಸೂಚಿ ಪ್ರಕಟ

CAA Act
ದೇಶ2 hours ago

CAA Act: CAA ಕಾಯ್ದೆಯಡಿಯಲ್ಲಿ 188 ಪಾಕಿಸ್ತಾನಿ ನಿರಾಶ್ರಿತರಿಗೆ ಭಾರತೀಯ ಪೌರತ್ವ ಭಾಗ್ಯ

CM Siddaramaiah
ಕರ್ನಾಟಕ3 hours ago

CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

zika Virus
ಬೆಂಗಳೂರು ಗ್ರಾಮಾಂತರ3 hours ago

Zika Virus : ಆನೇಕಲ್‌ನಲ್ಲಿ ಆರು ಮಂದಿಗೆ ಝಿಕಾ ವೈರಸ್ ಪತ್ತೆ; 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಜೋನ್‌

Food Poisoning
ದೇಶ3 hours ago

Food Poisoning: ಶಾಲೆಯಲ್ಲಿ ಕೊಟ್ಟ ಬಿಸ್ಕೇಟ್‌ ಸೇವಿಸಿ ಬರೋಬ್ಬರಿ 80 ವಿದ್ಯಾರ್ಥಿಗಳು ಅಸ್ವಸ್ಥ

Govt Employees
ಕರ್ನಾಟಕ4 hours ago

Govt Employees: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ; ಕ್ರೀಡಾ ಮನೋಭಾವದಿಂದ ಭಾಗವಹಿಸಲು ಸಿ.ಎಸ್. ಷಡಾಕ್ಷರಿ ಮನವಿ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌