Lateral Entry : ಪ್ರಧಾನಿ ಮೋದಿ ಮಧ್ಯಪ್ರವೇಶ; ಲ್ಯಾಟರಲ್ ಎಂಟ್ರಿ ಮೂಲಕ ನೇಮಕಕ್ಕೆ ತಡೆ - Vistara News

ಪ್ರಮುಖ ಸುದ್ದಿ

Lateral Entry : ಪ್ರಧಾನಿ ಮೋದಿ ಮಧ್ಯಪ್ರವೇಶ; ಲ್ಯಾಟರಲ್ ಎಂಟ್ರಿ ಮೂಲಕ ನೇಮಕಕ್ಕೆ ತಡೆ

Lateral Entry : ಸಂವಿಧಾನದಲ್ಲಿ ಪ್ರತಿಪಾದಿಸಲಾಗಿರುವ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳ ಪ್ರಕಾರ ಮೀಸಲಾತಿಯ ನಿಯಮಗಳಿಗೆ ಹೊಂದಿಕೊಳ್ಳಲು ಲ್ಯಾಟರಲ್ ಎಂಟ್ರಿಯ ಅವಶ್ಯಕತೆಯಿತ್ತು ಎಂದು ಸಿಂಗ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವುದರಿಂದ ಇತಿಹಾಸ ಕಂಡಿರುವ ಅನ್ಯಾಯಗಳನ್ನು ಪರಿಹರಿಸುವ ಹಾಗೂ ಒಳಗೊಳ್ಳುವಿಕೆಯನ್ನು ಹೆಚ್ಚಿಸಲು ಸಾಧ್ಯ ಎಂಬುದು ಪ್ರಧಾನಿ ಮೋದಿಯವರ ಆಶಯವಾಗಿತ್ತು ಎಂಬುದಾಗಿ ಅವರು ಬರೆದಿದ್ದಾರೆ.

VISTARANEWS.COM


on

Lateral Entry
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರತಿಪಕ್ಷಗಳು ಮತ್ತು ಎನ್‌ಡಿಎ ಮಿತ್ರಪಕ್ಷವಾದ ಎಲ್‌ಜೆಪಿಯ ವಿರೋಧದ ಹಿನ್ನೆಲೆಯಲ್ಲಿ ಸಚಿವಾಲಯಗಳ ಉನ್ನತ ಹುದ್ದೆಗಳಿಗೆ ಲ್ಯಾಟರಲ್ ಎಂಟ್ರಿ (Lateral Entry ) ಕೊಡುವ ಜಾಹೀರಾತನ್ನು ರದ್ದುಗೊಳಿಸುವಂತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ಕೇಂದ್ರ ಲೋಕಸೇವಾ ಆಯೋಗಕ್ಕೆ (UPSC( ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನದ ಪ್ರಕಾರ ಜಿತೇಂದ್ರ ಸಿಂಗ್ ಯುಪಿಎಸ್ಸಿ ಅಧ್ಯಕ್ಷೆ ಪ್ರೀತಿ ಸುದನ್‌‌ ಅವರಿಗೆ ಪತ್ರ ಬರೆದಿದ್ದಾರೆ.

ಸಂವಿಧಾನದಲ್ಲಿ ಪ್ರತಿಪಾದಿಸಲಾಗಿರುವ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳ ಪ್ರಕಾರ ಮೀಸಲಾತಿಯ ನಿಯಮಗಳಿಗೆ ಹೊಂದಿಕೊಳ್ಳಲು ಲ್ಯಾಟರಲ್ ಎಂಟ್ರಿಯ ಅವಶ್ಯಕತೆಯಿತ್ತು ಎಂದು ಸಿಂಗ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವುದರಿಂದ ಇತಿಹಾಸ ಕಂಡಿರುವ ಅನ್ಯಾಯಗಳನ್ನು ಪರಿಹರಿಸುವ ಹಾಗೂ ಒಳಗೊಳ್ಳುವಿಕೆಯನ್ನು ಹೆಚ್ಚಿಸಲು ಸಾಧ್ಯ ಎಂಬುದು ಪ್ರಧಾನಿ ಮೋದಿಯವರ ಆಶಯವಾಗಿತ್ತು ಎಂಬುದಾಗಿ ಅವರು ಬರೆದಿದ್ದಾರೆ.

ಹುದ್ದೆಗಳನ್ನು ವಿಶೇಷ ಎಂದು ಪರಿಗಣಿಸಲಾಗಿರುವುದರಿಂದ ಮತ್ತು ಏಕ-ಕೇಡರ್ ಹುದ್ದೆಗಳಾಗಿ ನಿಗದಿ ಮಾಡಿರುವ ಕಾರಣ , ಈ ನೇಮಕಾತಿಗಳಲ್ಲಿ ಮೀಸಲಾತಿಗೆ ಯಾವುದೇ ಅವಕಾಶವಿಲ್ಲ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ಜಾಹೀರಾತನ್ನು ಕಾಂಗ್ರೆಸ್‌ ಪಕ್ಷ ಟೀಕಿಸಿತ್ತು. “ದಲಿತರು, ಒಬಿಸಿಗಳು ಮತ್ತು ಆದಿವಾಸಿಗಳ ಮೇಲಿನ ದಾಳಿ” ಎಂದು ತೀವ್ರವಾಗಿ ಖಂಡಿಸಿತ್ತು. ಜೈವಿಕವಲ್ಲದ ಪ್ರಧಾನಿಯ ಅಡಿಯಲ್ಲಿ ಕೆಲಸ ಮಾಡುವ ಕೇಂದ್ರ ಸಚಿವರೊಬ್ಬರು ದಿನಾಂಕವಿಲ್ಲದೆ ಸಾಂವಿಧಾನಿಕ ಪ್ರಾಧಿಕಾರಕ್ಕೆ ಬರೆದ ಪತ್ರ. ಇದು ಎಂತಹ ಕರುಣಾಜನಕ ಆಡಳಿತ” ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದರು.

45 ಹುದ್ದೆಗಳ ಭರ್ತಿಗೆ ಲ್ಯಾಟರಲ್ ಎಂಟ್ರಿ ಜಾಹೀರಾತು

ಕಳೆದ ವಾರ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) 45 ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಕೇಂದ್ರ ಸರ್ಕಾರದ ಇಲಾಖೆಗಳಿಗೆ ಖಾಸಗಿ ವಲಯ ಸೇರಿದಂತೆ ತಜ್ಞರನ್ನು ನೇಮಿಸುವ ಗುರಿಯನ್ನು ಇದು ಹೊಂದಿತ್ತು. ಈ ವಿಧಾನವನ್ನು 2017ರಲ್ಲಿ ನೀತಿ ಆಯೋಗ ಶಿಫಾರಸ್ಸು ಮಾಡಿತ್ತು. ಕೇಂದ್ರ ಸಚಿವಾಲಯಗಳಿಗೆ ಪ್ರತಿಭೆಗಳನ್ನು ಕರೆತರುವ ಉದ್ದೇಶ ಇದಾಗಿದೆ.

ಯುಪಿಎಸಿಯ ಈ ಘೋಷಣೆಯು ರಾಜಕೀಯ ಕೋಲಾಹಲವನ್ನು ಸೃಷ್ಟಿಸಿತ್ತು. ಕನಿಷ್ಠ ಎರಡು ಎನ್‌ಡಿಎ ಪಾಲುದಾರರಾದ ಜನತಾದಳ (ಯುನೈಟೆಡ್) ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ಎಲ್ಜೆಪಿ) ಈ ಕ್ರಮವನ್ನು ವಿರೋಧಿಸಿದ್ದವು.

“ಲ್ಯಾಟರ್‌‌ ಎಂಟ್ರಿ ದಲಿತರು, ಒಬಿಸಿಗಳು ಮತ್ತು ಆದಿವಾಸಿಗಳ ಮೇಲಿನ ದಾಳಿಯಾಗಿದೆ. ಬಿಜೆಪಿಯ ರಾಮರಾಜ್ಯದ ವಿಕೃತ ಆವೃತ್ತಿಯು ಸಂವಿಧಾನವನ್ನು ನಾಶಪಡಿಸಲು ಮತ್ತು ಬಹುಜನರಿಂದ ಮೀಸಲಾತಿಯನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತದೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ಇದನ್ನು ಓದಿ : HD Kumaraswamy : ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು 2ನೇ ಬಾರಿ ರಾಜ್ಯಪಾಲರ ಅನುಮತಿ ಕೋರಿದ ಎಸ್‌ಐಟಿ

ಬಿಜೆಪಿ ಮಿತ್ರ ಮತ್ತು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಕೂಡ ಮೀಸಲಾತಿ ಇಲ್ಲದೆ ಸರ್ಕಾರಿ ಹುದ್ದೆಗಳಲ್ಲಿ ನೇಮಕಾತಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. “ಯಾವುದೇ ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ನಿಬಂಧನೆಗಳು ಇರಬೇಕು.” ಎಂದು ಅವರು ಹೇಳಿದರು.

1970ರ ದಶಕದಿಂದಲೂ ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ಅವಧಿಯಲ್ಲಿ ಲ್ಯಾಟರ್‌‌ ಎಂಟ್ರಿ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿತ್ತು. ಈ ಕ್ರಮವು ಸೇವೆಗಳಲ್ಲಿ ಎಸ್ಸಿ / ಎಸ್ಟಿಗಳ ನೇಮಕಾತಿಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು. ಮನಮೋಹನ್ ಸಿಂಗ್ ಅವರನ್ನು 1976 ರಲ್ಲಿ ಲ್ಯಾಟರಲ್ ಎಂಟ್ರಿ ಮಾರ್ಗದ ಮೂಲಕ ಹಣಕಾಸು ಕಾರ್ಯದರ್ಶಿಯನ್ನಾಗಿ ಮಾಡಲಾಗಿತ್ತು ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

EXPLAINER

Vistara Explainer: ಪುಟ್ಟ ಹೆಣ್ಣುಮಕ್ಕಳ ಮೇಲೆ ಕಾಮುಕ ಅಟೆಂಡರ್‌ನಿಂದ ಅತ್ಯಾಚಾರದ ಬಳಿಕ ಬದ್ಲಾಪುರ ಉದ್ವಿಗ್ನ; ಏನಾಗ್ತಿದೆ ಅಲ್ಲಿ?

Vistara Explainer: ಬದ್ಲಾಪುರದ ಶಾಲೆಯೊಂದರಲ್ಲಿ ಶಿಶುವಿಹಾರದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಪುರುಷ ಅಟೆಂಡರ್‌ನಿಂದ ಲೈಂಗಿಕ ದೌರ್ಜನ್ಯ ನಡೆದಿತ್ತು. ಆರೋಪಿಯನ್ನು ಕಳೆದ ವಾರ ಬಂಧಿಸಲಾಗಿತ್ತು. ಮಂಗಳವಾರ, ಕ್ರೋಧತಪ್ತರಾದ ಪೋಷಕರು ಮತ್ತು ನಾಗರಿಕರು ಶಾಲೆಗೆ ನುಗ್ಗಿ ಶಾಲೆಯನ್ನು ಧ್ವಂಸಗೊಳಿಸಿದ್ದರು.

VISTARANEWS.COM


on

badlapur tension vistara explainer
Koo

ಥಾಣೆ: ಮಹಾರಾಷ್ಟ್ರದ ಥಾಣೆಯ ಬದ್ಲಾಪುರ ಎಂಬಲ್ಲಿನ ಕಿಂಡರ್‌ ಗಾರ್ಟನ್‌ ಶಾಲೆಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ (Physical Abuse) ಕೃತ್ಯ ನಡೆದ ನಂತರ ಪ್ರದೇಶದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಶಾಲೆಯ ಶೌಚಾಲಯದಲ್ಲಿ ಕಾಮುಕ ಅಟೆಂಡರನೊಬ್ಬ ಈ ಮಕ್ಕಳ ಮೇಲೆ ಅಮಾನುಷ ಕೃತ್ಯ ಎಸಗಿದ್ದಾನೆ. ಇದರ ಬಳಿಕ ಉದ್ವಿಗ್ನ ಪರಿಸ್ಥಿತಿ (Badlapur tension) ಉಂಟಾಗಿದ್ದು, ಹಲವೆಡೆ ಗಲಭೆ ತಲೆದೋರಿದೆ. ಈ ಕುರಿತ ವಿವರ (Vistara Explainer) ಇಲ್ಲಿದೆ.

ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಎಸಗಿದ ಆರೋಪದ ಮೇಲೆ ಬಂಧಿತ ಆರೋಪಿಯ ವಿರುದ್ಧ ಅತ್ಯಾಚಾರ ಆರೋಪ ದಾಖಲಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಂಗಳವಾರ ಪೊಲೀಸರಿಗೆ ಆದೇಶಿಸಿದ್ದಾರೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಿ ಪ್ರಕರಣವನ್ನು ಫಾಸ್ಟ್‌ ಟ್ರ್ಯಾಕ್‌ನಲ್ಲಿ ನಡೆಸಲಾಗುವುದು ಎಂದು ಸಿಎಂ ಹೇಳಿದ್ದಾರೆ. “ನಾನು ಥಾಣೆ ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದೇನೆ. ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ತ್ವರಿತವಾಗಿ ತನಿಖೆ ಮಾಡಿ ಆರೋಪಿ ಮೇಲೆ ಅತ್ಯಾಚಾರ ಯತ್ನ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಆರೋಪ ದಾಖಲಿಸುವಂತೆ ಸೂಚಿಸಿದ್ದೇನೆ” ಎಂದು ಅವರು ಹೇಳಿದರು.

ಬದ್ಲಾಪುರದಲ್ಲಿ ಏನಾಯ್ತು?

ಬದ್ಲಾಪುರದ ಶಾಲೆಯೊಂದರಲ್ಲಿ ಶಿಶುವಿಹಾರದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಪುರುಷ ಅಟೆಂಡರ್‌ನಿಂದ ಲೈಂಗಿಕ ದೌರ್ಜನ್ಯ ನಡೆದಿತ್ತು. ಆರೋಪಿಯನ್ನು ಕಳೆದ ವಾರ ಬಂಧಿಸಲಾಗಿತ್ತು. ಮಂಗಳವಾರ, ಕ್ರೋಧತಪ್ತರಾದ ಪೋಷಕರು ಮತ್ತು ನಾಗರಿಕರು ಶಾಲೆಗೆ ನುಗ್ಗಿ ಶಾಲೆಯನ್ನು ಧ್ವಂಸಗೊಳಿಸಿದ್ದರು. ಬೆಳಗ್ಗೆ 8.30ರಿಂದ ಬದ್ಲಾಪುರ ರೈಲು ನಿಲ್ದಾಣದಲ್ಲಿ ರೈಲ್‌ ರೋಕೋ ನಡೆಸಿ ರೈಲುಗಳನ್ನು ತಡೆದರು. ಪ್ರತಿಭಟನೆಯ ವೇಳೆ ಕೆಲ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು.

ಕಾಮುಕನ ಕೈಗೆ ಸಿಕ್ಕಿದ ಸಂತ್ರಸ್ತರು ಮೂರು ಮತ್ತು ನಾಲ್ಕು ವರ್ಷ ವಯಸ್ಸಿನವರು. ಈತ ಶಾಲೆಯ ಶೌಚಾಲಯದಲ್ಲಿ ದೌರ್ಜನ್ಯ ಎಸಗಿದ್ದಾನೆ. ಕೃತ್ಯಕ್ಕೆ ಸಂಬಂಧಿಸಿ ಪ್ರಾಂಶುಪಾಲರು, ತರಗತಿ ಶಿಕ್ಷಕಿ ಹಾಗೂ ಮಹಿಳಾ ಅಟೆಂಡರ್‌ನನ್ನು ಶಾಲೆಯ ಆಡಳಿತ ಮಂಡಳಿ ಅಮಾನತುಗೊಳಿಸಿದೆ.

ಆರೋಪಿ 23 ವರ್ಷದ ಪುರುಷ ಸ್ವಚ್ಛತಾ ಸಿಬ್ಬಂದಿ. ಬಾಲಕಿಯರು ಶೌಚಾಲಯ ಬಳಸಲು ಹೋದಾಗ ಹಲ್ಲೆ ನಡೆದಿದೆ. ಬಾಲಕಿಯರ ಶೌಚಾಲಯಕ್ಕೆ ಶಾಲೆಯಿಂದ ಮಹಿಳಾ ಸಿಬ್ಬಂದಿಯನ್ನು ನೇಮಿಸಿಲ್ಲ. ಆರೋಪಿ ಅಕ್ಷಯ್ ಶಿಂಧೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲಾಗಿತ್ತು. ಹಲ್ಲೆಗೊಳಗಾದ ಬಾಲಕಿ ತನ್ನ ಖಾಸಗಿ ಅಂಗದಲ್ಲಿ ನೋವಿನ ಕುರಿತು ದೂರು ನೀಡಿದಾಗ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಶೌಚಾಲಯಕ್ಕೆ ತೆರಳಿದ್ದ ವೇಳೆ ಆರೋಪಿ ತನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ಪೋಷಕರಿಗೆ ಆಕೆ ತಿಳಿಸಿದ್ದಾಳೆ. ಪೋಷಕರು ಹುಡುಗಿಯ ಸ್ನೇಹಿತೆಯ ಪೋಷಕರನ್ನು ಸಂಪರ್ಕಿಸಿದ್ದು, ಅವರೂ ತಮ್ಮ ಮಗಳಿಗೆ ಶಾಲೆಗೆ ಹೋಗಲು ಭಯವಾಗುತ್ತಿದೆ ಎಂದು ಹೇಳಿದ್ದಾರೆ. ನಂತರ ಪೋಷಕರು ಬಾಲಕಿಯರನ್ನು ಸ್ಥಳೀಯ ವೈದ್ಯರ ಬಳಿ ಪರೀಕ್ಷಿಸಿದಾಗ, ಇಬ್ಬರೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದು ಬೆಳಕಿಗೆ ಬಂದಿದೆ.

ಸಿಎಂಒ ಕ್ರಮದ ಭರವಸೆ

ಶಾಲೆಯ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿದರೆ ಕಾನೂನು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ. ಪ್ರಕರಣವನ್ನು ಅತ್ಯಂತ ತುರ್ತು ಮತ್ತು ದಕ್ಷತೆಯಿಂದ ನಿಭಾಯಿಸುವಂತೆ ಖಚಿತಪಡಿಸಿಕೊಳ್ಳಲು ಅವರು ಥಾಣೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ವಿದ್ಯಾರ್ಥಿಗಳನ್ನು ಬೆಂಬಲಿಸಲು ಮತ್ತು ರಕ್ಷಿಸಲು ವಿನ್ಯಾಸಗೊಳಿಸಲಾದ ಸಖಿ ಸಾವಿತ್ರಿ ಸಮಿತಿಗಳನ್ನು ಶಾಲೆಗಳಲ್ಲಿ ಸ್ಥಾಪಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಮುಖ್ಯಮಂತ್ರಿಗಳು ಪರಿಶೀಲನೆಗೆ ಕರೆ ನೀಡಿದ್ದಾರೆ.

ಶಾಲಾ ಸುರಕ್ಷತೆಯನ್ನು ಸುಧಾರಿಸುವ ಮತ್ತು ಭವಿಷ್ಯದ ದುರುಪಯೋಗವನ್ನು ತಡೆಗಟ್ಟುವ ಉದ್ದೇಶದಿಂದ, ಪ್ರತಿ ಶಾಲೆಯಲ್ಲೂ ದೂರು ಪೆಟ್ಟಿಗೆಗಳನ್ನು ಅಳವಡಿಸುವುದು, ವಿದ್ಯಾರ್ಥಿಗಳೊಂದಿಗೆ ಆಗಾಗ ಸಂವಹನ ನಡೆಸುವ, ಶಾಲಾ ಸಿಬ್ಬಂದಿಗಳ ಪರಿಶೀಲನೆ ಹೆಚ್ಚಿಸುವ ಮತ್ತಿತರ ಕ್ರಮಗಳನ್ನು ಸಿಎಂ ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: Stabbing Case: ಮುಸ್ಲಿಂ ಸಹಪಾಠಿಯಿಂದ ಇರಿತಕ್ಕೊಳಗಾದ ವಿದ್ಯಾರ್ಥಿ, ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡು ಅಸುನೀಗಿದ

Continue Reading

ದೇಶ

Viral News: ದರೋಡೆ, ಪಿಕ್‌ಪಾಕೆಟಿಂಗ್‌, ಕಳ್ಳತನವೇ ಸಬ್ಜೆಕ್ಟ್‌.. ಕ್ರಿಮಿನಲ್‌ಗಳಿಗಾಗಿಯೇ ಇಲ್ಲಿವೆ ಶಾಲೆಗಳು; ಫೀಸ್‌ ಕೇಳಿದ್ರೆ ಶಾಕ್‌ ಆಗೋದು ಗ್ಯಾರಂಟಿ

Viral News: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ ಸುಮಾರು 117 ಕಿ.ಮೀ ದೂರದಲ್ಲಿರುವ ಕಾದಿಯಾ, ಗುಲ್ಖೇದಿ ಮತ್ತು ಹುಲ್ಖೇದಿ ಎಂಬ ಗ್ರಾಮಗಳಲ್ಲಿ ಕಳ್ಳತನ, ರಾಬರಿ ಮತ್ತು ಡಕಾಯಿತಿ ತರಬೇತಿ ನೀಡಲಾಗುತ್ತಿದೆ. ಪೊಲೀಸರಿಗೆ ಈ ಬಗ್ಗೆ ಸಂಪೂರ್ಣವಾಗಿ ಅರಿವಿದ್ದರೂ, ನಿರ್ಭೀತಿಯಿಂದ ಈ ಶಾಲೆಗಳು ಖುಲ್ಲಾಂ ಖುಲ್ಲಾ ನಡೆಯುತ್ತಿದೆ. ಪೋಷಕರು ದೂರದೂರುಗಳಿಂದ ಮಕ್ಕಳನ್ನು ಇಲ್ಲಿಗೆ ಕಳುಹಿಸುತ್ತಿದ್ದಾರೆ.

VISTARANEWS.COM


on

Viral News
Koo

ಭೋಪಾಲ್‌: ಮಕ್ಕಳ ಭವಿಷ್ಯ ಉತ್ತಮವಾಗಿರಲಿ ಎಂದು ತಂದೆ ತಾಯಿಗಳು ಹೊಟ್ಟೆ ಬಟ್ಟೆ ಕಟ್ಟಿ ಮಕ್ಕಳನ್ನು ಇರೋದ್ರಲ್ಲೇ ಅತ್ಯುತ್ತಮ ಶಾಲೆ ಹುಡುಕಿ ಅಲ್ಲಿಗೆ ಸೇರಿಸ್ತಾರೆ(Viral News). ಮಕ್ಕಳು ಎಲ್ಲಿ ಅಡ್ಡ ದಾರಿ ಹಿಡಿತಾರೋ ಎಂಬ ಆತಂಕದಲ್ಲೇ ಅದೆಷ್ಟೇ ಖರ್ಚಾದ್ರೂ ನಮ್ಮ ಮಕ್ಕಳು ಅತ್ಯುತ್ತಮ ಶಾಲಾ ಕಾಲೇಜು(School)ಗಳಲ್ಲೇ ಓದಬೇಕೆನ್ನುವುದು ಎಲ್ಲಾ ಪೋಷಕರ ಕನಸು. ಆದರೆ ಇಲ್ಲೊಂದು ಕಡೆ ಮಕ್ಕಳಿಗೆ ಕಳ್ಳತನ, ಸುಲಿಗೆ, ರಾಬರಿ ಹೀಗೆ ಅಪರಾಧಗಳನ್ನೇ ಕಲಿಸಲೆಂದು ಶಾಲೆಗಳಿವೆ(Schools for Robbery). ಹೌದು ಇದನ್ನು ಕೇಳಿದ್ರೆ ನೀವು ಶಾಕ್‌ ಆಗೋದು ಗ್ಯಾರಂಟಿ. ಸುಲಭಕ್ಕೆ ನಂಬಲು ಸಾಧ್ಯವಾಗದಿದ್ದರೂ ಇಂತಹ ಶಾಲೆಗಳು ಇರುವುದು ನಿಜ. ಈ ಶಾಲೆಗಳು ಇರುವುದು ಮಧ್ಯಪ್ರದೇಶದ ಮೂರು ಕುಗ್ರಾಮಗಳಲ್ಲಿ. ಇಲ್ಲಿ ಕ್ರಿಮಿನಲ್‌ಗಳೇ ಕ್ರಿಮಿನಲ್‌ಗಳಿಗಾಗಿ ನಡೆಸುತ್ತಿರುವ ಶಾಲೆಗಳಿವೆ. ಇನ್ನು ಈ ಶಾಲೆಯ ಫೀಸ್‌ ಕೇಳಿದ್ರೆ ನೀವು ಹೌಹಾರೋದು ಗ್ಯಾರಂಟಿ.

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ ಸುಮಾರು 117 ಕಿ.ಮೀ ದೂರದಲ್ಲಿರುವ ಕಾದಿಯಾ, ಗುಲ್ಖೇದಿ ಮತ್ತು ಹುಲ್ಖೇದಿ ಎಂಬ ಗ್ರಾಮಗಳಲ್ಲಿ ಕಳ್ಳತನ, ರಾಬರಿ ಮತ್ತು ಡಕಾಯಿತಿ ತರಬೇತಿ ನೀಡಲಾಗುತ್ತಿದೆ. ಪೊಲೀಸರಿಗೆ ಈ ಬಗ್ಗೆ ಸಂಪೂರ್ಣವಾಗಿ ಅರಿವಿದ್ದರೂ, ನಿರ್ಭೀತಿಯಿಂದ ಈ ಶಾಲೆಗಳು ಖುಲ್ಲಾಂ ಖುಲ್ಲಾ ನಡೆಯುತ್ತಿದೆ. ಪೋಷಕರು ದೂರದೂರುಗಳಿಂದ ಮಕ್ಕಳನ್ನು ಇಲ್ಲಿಗೆ ಕಳುಹಿಸುತ್ತಿದ್ದಾರೆ.

ಯಾವ ರೀತಿಯ ತರಬೇತಿ?

12 ಅಥವಾ 13 ವರ್ಷ ವಯಸ್ಸಿನ ಮಕ್ಕಳನ್ನು ಅಪರಾಧ ಚಟುವಟಿಕೆಗಳಲ್ಲಿ ತರಬೇತಿ ನೀಡಲು ಅವರ ಪೋಷಕರು ಈ ಗ್ರಾಮಗಳಿಗೆ ಕಳುಹಿಸುತ್ತಾರೆ. ಪೋಷಕರು, ಗ್ಯಾಂಗ್ ನಾಯಕರನ್ನು ಭೇಟಿಯಾದ ನಂತರ, ತಮ್ಮ ಮಗುವಿಗೆ ಯಾರು ಅತ್ಯುತ್ತಮ “ಶಿಕ್ಷಣ” ನೀಡಬಹುದು ಎಂದು ನಿರ್ಧರಿಸುತ್ತಾರೆ. ಈ ಕಠೋರ ಪಠ್ಯಕ್ರಮದಲ್ಲಿ ದಾಖಲಾಗಲು, ಕುಟುಂಬಗಳು ₹ 2 ಲಕ್ಷದಿಂದ ₹ 3 ಲಕ್ಷದವರೆಗಿನ ಶುಲ್ಕವನ್ನು ಪಾವತಿಸುತ್ತವೆ. ಇಲ್ಲಿ ಮಕ್ಕಳಿಗೆ ಜೇಬುಗಳ್ಳತನ, ಜನಸಂದಣಿ ಇರುವ ಸ್ಥಳಗಳಲ್ಲಿ ಬ್ಯಾಗ್ ಕಸಿದುಕೊಳ್ಳುವುದು, ವೇಗವಾಗಿ ಓಡುವುದು, ಪೊಲೀಸರಿಂದ ತಪ್ಪಿಸಿಕೊಳ್ಳುವುದು, ಸಿಕ್ಕಿಬಿದ್ದರೆ ಹೊಡೆತಗಳನ್ನು ಸಹಿಸಿಕೊಳ್ಳುವುದು ಮುಂತಾದ ವಿವಿಧ ಅಪರಾಧ ಕೌಶಲ್ಯಗಳನ್ನು ಕಲಿಸಲಾಗುತ್ತದೆ. ಗ್ಯಾಂಗ್‌ನಲ್ಲಿ ಒಂದು ವರ್ಷ ಪೂರ್ಣಗೊಂಡ ನಂತರ, ಮಗುವಿನ ಪೋಷಕರು ಗ್ಯಾಂಗ್ ಲೀಡರ್‌ನಿಂದ ವಾರ್ಷಿಕ ₹ 3ಲಕ್ಷ ದಿಂದ ₹ 5 ಲಕ್ಷ ಹಣವನ್ನು ಪಡೆಯುತ್ತಾರೆ.

ಇತ್ತೀಚೆಗಷ್ಟೇ ಈ ಗ್ಯಾಂಗ್‌ ಅತಿದೊಡ್ಡ ಮೊತ್ತದ ಕಳ್ಳತನದ ಮೂಲದ ಭಾರೀ ಸುದ್ದಿಯಾಗಿತ್ತು. ಆಗಸ್ಟ್ 8 ರಂದು ಜೈಪುರದ ಹಯಾತ್ ಹೋಟೆಲ್‌ನಲ್ಲಿ ನಡೆದ ಅದ್ದೂರಿ ಡೆಸ್ಟಿನೇಶನ್ ವೆಡ್ಡಿಂಗ್ ವೇಳೆ ಅಪ್ರಾಪ್ತ ಕಳ್ಳನೊಬ್ಬ ₹ 1.5 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ₹ 1 ಲಕ್ಷ ನಗದು ಹೊಂದಿರುವ ಬ್ಯಾಗ್‌ನೊಂದಿಗೆ ಪರಾರಿಯಾಗಿದ್ದ.

ಕಳ್ಳತನ ಮಾಡಿದ ನಂತರ ಆತನ ಗ್ಯಾಂಗ್ ರಾಜ್‌ಗಢ್ ಜಿಲ್ಲೆಯ ಕಡಿಯಾ ಗ್ರಾಮಕ್ಕೆ ಪರಾರಿಯಾಗಿದೆ. ಅನುಮಾನವನ್ನು ಬಾರದಂತೆ ಕದ್ದ ಆಭರಣಗಳನ್ನು ತಕ್ಷಣ ಮಾರಾಟ ಮಾಡಿದ್ದಾರೆ. ನಂತರ ಧಾರ್ಮಿಕ ಯಾತ್ರೆಯಾದ ಕನ್ವರ್ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ತರಬೇತಿ ಬಳಿಕ ಮಕ್ಕಳ ಹರಾಜು

ಬೋಡಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಮ್‌ಕುಮಾರ್ ಭಗತ್ ಈ ಬಗ್ಗೆ ಮಾಹಿತಿ ನೀಡಿದ್ದು, “ಈ ಅಪರಾಧಿಗಳು ಬ್ಯಾಗ್ ಎಗರಿಸುವುದು, ಬ್ಯಾಂಕ್ ಕಳ್ಳತನದಲ್ಲಿ ಹೆಚ್ಚು ತರಬೇತಿ ಪಡೆದಿದ್ದಾರೆ.ಸಾಮಾನ್ಯವಾಗಿ 17 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರನ್ನು ತಮ್ಮ ಚಟುವಟಿಕೆಗಳನ್ನು ಕೈಗೊಳ್ಳಲು ಬಳಸಿಕೊಳ್ಳುತ್ತವೆ. ಈ ಗ್ರಾಮಗಳಲ್ಲಿ ಮಕ್ಕಳಿಗೆ ಕಳ್ಳತನ ತರಬೇತಿ ನೀಡಿ ಬಳಿಕ ಅವರನ್ನು ಪ್ರೊಫೆಶನಲ್‌ ಕಳ್ಳರನ್ನಾಗಿ ತಯಾರು ಮಾಡಲಾಗುತ್ತಿದೆ ಎಂದರು.

ಈ ಗ್ರಾಮಗಳ 300 ಕ್ಕೂ ಹೆಚ್ಚು ಮಕ್ಕಳು ವಿವಿಧ ರಾಜ್ಯಗಳಲ್ಲಿ ಮದುವೆ ಸಮಾರಂಭಗಳಲ್ಲಿ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ. ಈ ಗ್ಯಾಂಗ್‌ಗಳು ಹೆಚ್ಚು ಸಂಘಟಿತವಾಗಿವೆ, ತಮ್ಮ ಅಪರಾಧ ಕೃತ್ಯಕ್ಕಾಗಿ ತಂತ್ರಜ್ಞಾನಗಳನ್ನು ಬಳಸಿಕೊಳ್ಳುತ್ತಿವೆ. ಹಳ್ಳಿಯೊಳಗಿನ ಶ್ರೀಮಂತ ವ್ಯಕ್ತಿಗಳು ಹರಾಜು ಪ್ರಕ್ರಿಯೆಗಳ ಮೂಲಕ 1-2 ವರ್ಷಗಳವರೆಗೆ ಬಡ ಮಕ್ಕಳನ್ನು ಬಾಡಿಗೆಗೆ ಪಡೆಯುತ್ತಾರೆ, ಈ ಹರಾಜು ₹ 20 ಲಕ್ಷದವರೆಗೆ ತಲುಪುತ್ತದೆ. ಒಮ್ಮೆ ತರಬೇತಿ ಪಡೆದ ನಂತರ, ಈ ಮಕ್ಕಳು ಹೂಡಿಕೆಗಿಂತ ಐದರಿಂದ ಆರು ಪಟ್ಟು ಗಳಿಸುತ್ತಾರೆ, ನಂತರ ಅವರನ್ನು ಗ್ಯಾಂಗ್‌ಗಳಿಂದ ಬಿಡುಗಡೆ ಮಾಡಲಾಗುತ್ತದೆ.

ಇದನ್ನೂ ಓದಿ: Sharia Law: “ಅಮೆರಿಕನ್ನರ ಮೇಲೂ ಷರಿಯಾ ಕಾನೂನು ಹೇರಲಾಗುತ್ತದೆ…”; ಸಂಚಲನ ಮೂಡಿಸಿದ ವೈರಲ್‌ ವಿಡಿಯೋ

Continue Reading

ಪ್ರಮುಖ ಸುದ್ದಿ

Supreme Court: ʼಯುವತಿಯರು ಕಾಮಾಸಕ್ತಿ ನಿಯಂತ್ರಿಸಿಕೊಳ್ಳಿʼ ಎಂದ ನ್ಯಾಯಾಧೀಶರ ಸಲಹೆಗೆ ಕನಲಿದ ಸುಪ್ರೀಂ ಕೋರ್ಟ್!‌

Supreme Court: ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 20 ವರ್ಷಗಳ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ವೇಳೆ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೈಕೋರ್ಟ್ ವ್ಯಕ್ತಿಯನ್ನು ಖುಲಾಸೆಗೊಳಿಸಿತ್ತು. ಈ ವಿಷಯದ ವಿಚಾರಣೆಯ ಸಂದರ್ಭದಲ್ಲಿ, ಹೈಕೋರ್ಟ್ ತೀರ್ಪಿನಲ್ಲಿನ ಕೆಲವು ಪ್ಯಾರಾಗಳು “ಸಮಸ್ಯಾತ್ಮಕ” ಮತ್ತು ಅಂತಹ ತೀರ್ಪುಗಳನ್ನು ಬರೆಯುವುದು “ಸಂಪೂರ್ಣವಾಗಿ ತಪ್ಪು” ಎಂದು ಹೇಳಿತ್ತು.

VISTARANEWS.COM


on

Supreme Court
Koo

ನವದೆಹಲಿ: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಖುಲಾಸೆಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ (Kolkata high court) ಆದೇಶವನ್ನು ಸುಪ್ರೀಂ ಕೋರ್ಟ್ (Supreme Court) ಇಂದು ರದ್ದುಗೊಳಿಸಿದೆ. ಇದೇ ಪ್ರಕರಣದಲ್ಲಿ. “ಹದಿಹರೆಯದ ಹುಡುಗಿಯರು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು” ಎಂದು ನ್ಯಾಯಾಧೀಶರು ನೀಡಿದ ʼಸಲಹೆʼಯ ಬಗ್ಗೆ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದೆ.

ನ್ಯಾಯಾಧೀಶರಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರು ಇದ್ದ ನ್ಯಾಯಪೀಠ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣಗಳನ್ನು ವ್ಯವಹರಿಸುವ ಕುರಿತು ನ್ಯಾಯಾಂಗ ಅಧಿಕಾರಿಗಳಿಗೆ ಹಲವಾರು ನಿರ್ದೇಶನಗಳನ್ನು ನೀಡಿದೆ ಎಂದು ಹೇಳಿದರು. ಪೀಠದ ಪರವಾಗಿ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಓಕಾ, ನ್ಯಾಯಾಲಯಗಳು ತೀರ್ಪುಗಳನ್ನು ಹೇಗೆ ಬರೆಯಬೇಕು ಎಂಬುದರ ಬಗ್ಗೆಯೂ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್ 8ರಂದು ಸುಪ್ರೀಂ ಕೋರ್ಟ್ ಈ ತೀರ್ಪನ್ನು ಟೀಕಿಸಿತ್ತು. ಕೋಲ್ಕತ್ತಾ ಉಚ್ಚ ನ್ಯಾಯಾಲಯದ ಕೆಲವು ಅವಲೋಕನಗಳನ್ನು “ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ” ಎಂದು ಬಣ್ಣಿಸಿತ್ತು. ಹೈಕೋರ್ಟ್‌ನ ವಿಭಾಗೀಯ ಪೀಠವು ಮಾಡಿದ ಕೆಲವು ಅವಲೋಕನಗಳನ್ನು ಗಮನಕ್ಕೆ ತೆಗೆದುಕೊಂಡ ಪೀಠ, ತೀರ್ಪುಗಳನ್ನು ಬರೆಯುವಾಗ ನ್ಯಾಯಾಧೀಶರು “ಬೋಧನೆ” ಮಾಡಬಾರದು ಎಂದು ಹೇಳಿತು.

ಪಶ್ಚಿಮ ಬಂಗಾಳ ಸರ್ಕಾರ ಅಕ್ಟೋಬರ್ 18, 2023ರಂದು ಈ “ಆಕ್ಷೇಪಾರ್ಹ ಅವಲೋಕನಗಳನ್ನು” ಮಾಡಲಾದ ಉಚ್ಚ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿತ್ತು. ತನ್ನ ತೀರ್ಪಿನಲ್ಲಿ, “ಹದಿಹರೆಯದ ಹೆಣ್ಣುಮಕ್ಕಳು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು” ಎಂದಿದ್ದ ಪೀಠ, “ಅವರು ಎರಡು ನಿಮಿಷಗಳ ಲೈಂಗಿಕ ಆನಂದವನ್ನು ಅನುಭವಿಸಬಹುದು, ಆದರೆ ಸಮಾಜದ ದೃಷ್ಟಿಯಲ್ಲಿ ಹೆಚ್ಚಿನದನ್ನು ಕಳೆದುಕೊಳ್ಳುವವಳು” ಎಂದು ಹೇಳಿತ್ತು.

ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 20 ವರ್ಷಗಳ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ವೇಳೆ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೈಕೋರ್ಟ್ ವ್ಯಕ್ತಿಯನ್ನು ಖುಲಾಸೆಗೊಳಿಸಿತ್ತು. ಜನವರಿ 4ರಂದು ಈ ವಿಷಯದ ವಿಚಾರಣೆಯ ಸಂದರ್ಭದಲ್ಲಿ, ಹೈಕೋರ್ಟ್ ತೀರ್ಪಿನಲ್ಲಿನ ಕೆಲವು ಪ್ಯಾರಾಗಳು “ಸಮಸ್ಯಾತ್ಮಕ” ಮತ್ತು ಅಂತಹ ತೀರ್ಪುಗಳನ್ನು ಬರೆಯುವುದು “ಸಂಪೂರ್ಣವಾಗಿ ತಪ್ಪು” ಎಂದು ಹೇಳಿತ್ತು.

ಕಳೆದ ವರ್ಷ ಡಿಸೆಂಬರ್ 8ರಂದು ನೀಡಲಾದ ತನ್ನ ಆದೇಶದಲ್ಲಿ, ಉಚ್ಚ ನ್ಯಾಯಾಲಯವು ಮಾಡಿದ ಕೆಲವು ಅವಲೋಕನಗಳನ್ನು ಉಲ್ಲೇಖಿಸಿದ ಉನ್ನತ ನ್ಯಾಯಾಲಯವು, “ಮುಖ್ಯವಾಗಿ, ಈ ಅವಲೋಕನಗಳು ಭಾರತೀಯ ಸಂವಿಧಾನದ ಆರ್ಟಿಕಲ್ 21ರ ಜೀವನದ ಹಕ್ಕು, ವೈಯಕ್ತಿಕ ಸ್ವಾತಂತ್ರ್ಯದ ಅಡಿಯಲ್ಲಿ ಖಾತರಿಪಡಿಸಲಾದ ಹದಿಹರೆಯದವರ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತವೆ ಎಂದಿತ್ತು.

ಇದನ್ನೂ ಓದಿ:PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

Continue Reading

ಬೆಂಗಳೂರು

CM Siddaramaiah: ಹೊಟ್ಟೆಕಿಚ್ಚಿನಿಂದಾಗಿ ಬಿಜೆಪಿಯವರಿಂದ ನನ್ನ ವಿರುದ್ಧ ಸುಳ್ಳು ಆರೋಪ; ಸಿದ್ದರಾಮಯ್ಯ

ಭಾರತೀಯ ಜನತಾ ಪಕ್ಷದವರು (CM Siddaramaiah) ತಾವು ಹಿಂದುಳಿದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡವರ ಪರ ಎಂದು ಎಷ್ಟೇ ಹೇಳಿಕೊಂಡರೂ, ಅವರು ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರ ಇರಲು ಸಾಧ್ಯವೇ ಇಲ್ಲ. ಬಡವರಿಗೆ ಅವರು ಯಥಾ ಸ್ಥಿತಿಯಲ್ಲಿರಬೇಕು. ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಬಾರದು ಎಂದು ಬಯಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಕಾಂಗ್ರೆಸ್‌ ಪಕ್ಷ (Congress Party) ಅಸಮಾನತೆಯನ್ನು ಹೋಗಲಾಡಿಸಲು ಬಯಸುತ್ತದೆ. ಈಗಲೂ ಅಸಮಾನತೆ ವಿರುದ್ಧ ಹೋರಾಟ ಮಾಡುತ್ತಿದೆ. ಹಾಗಾಗಿ ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ. ಅಸಮಾನತೆ ವಿರುದ್ಧ ಕಾರ್ಯಕ್ರಮ ನೀಡುತ್ತೇನೆಂಬ ಕಾರಣಕ್ಕೇ ಬಿಜೆಪಿ (BJP) ನನ್ನನ್ನು ಸಹಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆರೋಪಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಅಂಗವಾಗಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಭಯ ನಾಯಕರಿಗೆ ಗೌರವ ಸಲ್ಲಿಸಿ ಮಾತನಾಡಿದ ಅವರು, ಈಗ ಗ್ಯಾರಂಟಿಗಳನ್ನು ಜಾರಿ ಮಾಡಿದ್ದಕ್ಕೆ ಹೊಟ್ಟೆಯುರಿಯಿಂದ ಮಾಡಬಾರದ್ದನ್ನೆಲ್ಲ ಮಾಡುತ್ತಿದ್ದಾರೆ. ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ರಾಜೀವ ಗಾಂಧಿ ಹಾಗೂ ದೇವರಾಜ ಅರಸರ ಬದುಕು-ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ರಾಜೀವ್‌ ಗಾಂಧಿಯವರು ಚಿಕ್ಕ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಆಧುನಿಕ ಭಾರತದ ಕನಸನ್ನು ಕಂಡಿದ್ದರು. ಯುವಜನತೆಯ ಮೇಲೆ ಅಪಾರ ವಿಶ್ವಾಸವಿಟ್ಟುಕೊಂಡಿದ್ದರು. ಅವರು ದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗೆ ಕಾರಣಕರ್ತರಾಗಿದ್ದರು. ಯಾವಾಗಲೂ ಸಾಮಾಜಿಕ ನ್ಯಾಯದ ಪರವಿದ್ದರು. ದೇಶದಲ್ಲಿ ಬದಲಾವಣೆ ಆಗಬೇಕು. ಸಮಾನ ಅವಕಾಶ ಸಿಗಬೇಕು ಎಂದು ಹಂಬಲಿಸಿದರು. ಯಾವುದೇ ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆ ಭೇದ ಮರೆತು, ಎಲ್ಲೇ ಇದ್ದರೂ ಭಾರತೀಯರು ಒಗ್ಗಟ್ಟಾಗಿರಬೇಕು ಎಂಬ ಕನಸನ್ನು ಕಂಡಿದ್ದರು.

ವಿಶೇಷವಾಗಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಪಾಲು ಸಿಗಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಸಂವಿಧಾನಕ್ಕೆ 73 ಮತ್ತು 74 ನೇ ತಿದ್ದುಪಡಿ ಜಾರಿಗೆ ತಂದರು. ಈ ದೇಶದಲ್ಲಿ ಏನಾದರೂ ಮಹಿಳೆಯರಿಗೆ ರಾಜಕೀಯದಲ್ಲಿ ಪಾಲು ಸಿಕ್ಕಿದ್ದರೆ, ಸಂವಿಧಾನಕ್ಕೆ ತಂದ ಈ ತಿದ್ದುಪಡಿಗಳು ಕಾರಣ ಎಂದು ಹೇಳ ಬಯಸುತ್ತೇನೆ ಎಂದು ತಿಳಿಸಿದರು.

ಭಾರತೀಯ ಜನತಾ ಪಕ್ಷದವರು ತಾವು ಹಿಂದುಳಿದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡವರ ಪರ ಎಂದು ಎಷ್ಟೇ ಹೇಳಿಕೊಂಡರೂ, ಅವರು ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರ ಇರಲು ಸಾಧ್ಯವೇ ಇಲ್ಲ. ಬಡವರಿಗೆ ಅವರು ಯಥಾ ಸ್ಥಿತಿಯಲ್ಲಿರಬೇಕು. ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಬಾರದು ಎಂದು ಬಯಸುತ್ತಾರೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ಇವತ್ತು ದೇಶದ ಸಂಪರ್ಕ ಕ್ಷೇತ್ರದಲ್ಲಿ ಆಗಿರುವ ಕ್ರಾಂತಿಗೆ ರಾಜೀವ ಗಾಂಧಿಯವರು ಕಾರಣ. ರಾಜೀವ ಗಾಂಧಿಯವರು ಯುವ ಶಕ್ತಿ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದರು. ಆದ್ದರಿಂದ ಮತದಾನದ ವಯಸ್ಸು 21 ರಿಂದ 18 ಕ್ಕೆ ಇಳಿಸಿದರು. ಅವರು ಇನ್ನೂ ಬದುಕಿರಬೇಕಾಗಿತ್ತು. ಅವರು ಇದ್ದಿದ್ದರೆ ದೇಶದಲ್ಲಿ ನಿಜವಾದ ಬದಲಾವಣೆ ಆಗಿರುತ್ತಿತ್ತು. ದೂರದೃಷ್ಟಿ, ದೇಶ, ಸಮಾಜದ ಬಗ್ಗೆ ಕಾಳಜಿ ಇದ್ದವರು, ಬಹಳ ಚಿಕ್ಕ ವಯಸ್ಸಿನಲ್ಲಿಯೇ ನಮ್ಮನ್ನು ಅಗಲಿದರು ಎಂದು ವಿಷಾದಿಸಿದರು.

ದೇವರಾಜ ಅರಸು ಅವರು 1972 ರಿಂದ ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು. ಅರಸು ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಹಾವನೂರ ಆಯೋಗ ರಚನೆ ಮಾಡಿ, ಹಿಂದುಳಿದವರಿಗೆ ಶಿಕ್ಷಣ ಉದ್ಯೋಗದಲ್ಲಿ ಮೀಸಲಾತಿ ಒದಗಿಸಿದರು. ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ರಾಜಕೀಯವಾಗಿ ಗುರುತಿಸಿ, ಅವರಿಗೆ ಚುನಾವಣೆಯಲ್ಲಿ ನಿಲ್ಲಲು ಅವಕಾಶ ಕೊಟ್ಟರು. ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವೇ ಇಲ್ಲ ಎಂದುಕೊಂಡವರೂ ವಿಧಾನಸೌಧ ಪ್ರವೇಶಿಸುವಂತೆ ಮಾಡಿದರು ಎಂದು ಸಿಎಂ ತಿಳಿಸಿದರು.

ಈ ಕುರಿತು ಪತ್ರಿಕೆಯಲ್ಲಿ ಓದಿದ ಘಟನೆಯೊಂದನ್ನು ನೆನಪಿಸಿಕೊಂಡ ಮುಖ್ಯಮಂತ್ರಿಗಳು, “ಅರಸು ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ, ಜಾಫರ್‌ ಷರೀಫ್‌ ಅವರಿಗೆ ಟಿಕೆಟ್‌ ಕೊಟ್ಟರು. ನಾಗರತ್ನಮ್ಮ ಅವರು ಜಟಕಾ ಗಾಡಿ ಓಡಿಸುವವರಿಗೆ ಟಿಕೆಟ್‌ ಕೊಡ್ತೀಯಲ್ಲ ಎಂದು ಕೇಳಿದರು. ನೋಡಮ್ಮಾ, ಇನ್ನು ಮೇಲೆ ಜಟಕಾ ಸಾಹೇಬರಿಗೆ, ಕ್ಷೌರ ಮಾಡುವವರಿಗೆ ಟಿಕೆಟ್‌ ಕೊಡೋದು, ಶೋಕಿ ಮಾಡುವವರಿಗಲ್ಲ ಎಂದು ಉತ್ತರಿಸಿದರಂತೆ” ಎಂದು ತಾವು ಓದಿದ್ದನ್ನು ಸ್ಮರಿಸಿದರು.

ಮಲ ಹೊರುವ ಪದ್ಧತಿ, ಜೀತ ಪದ್ಧತಿ ನಿಷೇಧ, ಸಾಲ ಮನ್ನಾ ಇಂತಹ ಅನೇಕ ಪ್ರಗತಿಪರ ಕಾನೂನುಗಳನ್ನು ಮಾಡಿದ ಅವರು, ಅರಸು ಮನೆತನದಲ್ಲಿ ಹುಟ್ಟಿದರೂ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡಿದರು ಎಂದು ತಿಳಿಸಿದರು.

ಇದನ್ನೂ ಓದಿ: Gold Rate Today: ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ; ಚಿನ್ನದ ದರ ಇಳಿಕೆ

ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ. ಜಾರ್ಜ್‌, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ ಹಾಗೂ ಇತರರು ಭಾಗವಹಿಸಿದ್ದರು.

Continue Reading
Advertisement
ವೈರಲ್ ನ್ಯೂಸ್7 mins ago

Road Rage Incident: ಒಳಗೆ ಮಗು ಇದೆ ಅಂದ್ರೂ ಬಿಡದ ಕಿಡಿಗೇಡಿ; ಕಾರಿನ ಗ್ಲಾಸ್‌ ಒಡೆದು ದಾಂಧಲೆ!

Fashion Show news
ಫ್ಯಾಷನ್19 mins ago

Fashion Show news: ವೈವಿಧ್ಯಮಯ ವಜ್ರಾಭರಣ ಧರಿಸಿ ಫ್ಯಾಷನ್‌ ಶೋನಲ್ಲಿ ಮಿಂಚಿದ ರೂಪದರ್ಶಿಯರು

Manu Bhaker Dance
ಕ್ರೀಡೆ26 mins ago

Manu Bhaker Dance: ‘ಕಾಲಾ ಚಷ್ಮಾ’ ಹಾಡಿಗೆ ವಿದ್ಯಾರ್ಥಿಗಳ ಜತೆ ಹೆಜ್ಜೆ ಹಾಕಿದ ಒಲಿಂಪಿಯನ್​ ಮನು ಭಾಕರ್​

KEA
ಕರ್ನಾಟಕ40 mins ago

KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

badlapur tension vistara explainer
EXPLAINER1 hour ago

Vistara Explainer: ಪುಟ್ಟ ಹೆಣ್ಣುಮಕ್ಕಳ ಮೇಲೆ ಕಾಮುಕ ಅಟೆಂಡರ್‌ನಿಂದ ಅತ್ಯಾಚಾರದ ಬಳಿಕ ಬದ್ಲಾಪುರ ಉದ್ವಿಗ್ನ; ಏನಾಗ್ತಿದೆ ಅಲ್ಲಿ?

DK Shivakumar
ಕಲಬುರಗಿ1 hour ago

DK Shivakumar: ಆರ್ಟಿಕಲ್ 371 ಜೆ ಜಾರಿಗೆ 10 ವರ್ಷ; ಸಂಭ್ರಮಾಚರಣೆಗೆ ಸರ್ಕಾರದ ಸಿದ್ಧತೆ

DK Shivakumar
ಕಲಬುರಗಿ1 hour ago

DK Shivakumar: ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ ಎಂದ ಡಿ.ಕೆ.ಶಿವಕುಮಾರ್!

Congress Protest
ಕರ್ನಾಟಕ1 hour ago

Congress Protest: ಪ್ರಧಾನಿ, ಗವರ್ನರ್‌ಗೆ ಬೆದರಿಕೆ; ಐವನ್ ಡಿಸೋಜಾ, ಜಮೀರ್‌, ರಕ್ಷಿತ್ ಶಿವರಾಮ್ ವಿರುದ್ಧ ದೂರು

Mosquitoes Bite
ಆರೋಗ್ಯ1 hour ago

World Mosquito Day: ಸೊಳ್ಳೆಗಳಿಗೂ ಒಂದು ದಿನ! ಇವುಗಳ ಕುರಿತ 7 ಸುಳ್ಳುಗಳಿಗೆ ಇಲ್ಲಿದೆ ಉತ್ತರ!

Naga Chaitanya Sobhita Dhulipala
ಸಿನಿಮಾ1 hour ago

Naga Chaitanya Sobhita Dhulipala: ನಾಗ ಚೈತನ್ಯ, ಶೋಭಿತಾ ಧೂಳಿಪಾಲ ನಿಶ್ಚಿತಾರ್ಥದಿಂದ ಅಕ್ಕಿನೇನಿ- ದಗ್ಗುಬಾಟಿ ಕುಟುಂಬದಲ್ಲಿ ಬಿರುಕು?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌