Manish Pandey: ಮತ್ತೆ ಆರ್​ಸಿಬಿ ಸೇರುವ ಬಯಕೆ ವ್ಯಕ್ತಪಡಿಸಿದ ಮನೀಷ್​ ಪಾಂಡೆ - Vistara News

ಕ್ರಿಕೆಟ್

Manish Pandey: ಮತ್ತೆ ಆರ್​ಸಿಬಿ ಸೇರುವ ಬಯಕೆ ವ್ಯಕ್ತಪಡಿಸಿದ ಮನೀಷ್​ ಪಾಂಡೆ

Manish Pandey: 2009ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಮನೀಷ್‌ ಪಾಂಡೆ, ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದರು. ಶತಕ ಬಾರಿಸುವು ಮೂಲಕ ಈ ಸಾಧನೆ ಮಾಡಿದ ಮೊದಲ ಆನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು.

VISTARANEWS.COM


on

Manish Pandey
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆ.ಎಲ್​ ರಾಹುಲ್(kl rahul)​ ಅವರು ಮುಂದಿನ ಆವೃತ್ತಿಯ ಐಪಿಎಲ್​ನಲ್ಲಿ(IPL 2025) ತಮ್ಮ ತವರು ತಂಡವಾದ ಆರ್​ಸಿಬಿ(RCB) ಪರ ಆಡಬೇಕು ಎಂಬ ಬಯಕ್ಕೆಯನ್ನು ಈಗಾಗಲೇ ವ್ಯಕ್ಯಪಡಿಸಿದ್ದರು. ಇದೀಗ ಈ ಸಾಲಿಗೆ ಮತೋರ್ವ ಕನ್ನಡಿಗ ಆಟಗಾರ ಮನೀಷ್​ ಪಾಂಡೆ(Manish Pandey) ಸೇರ್ಪಡೆಗೊಂಡಿದ್ದಾರೆ. ಆರ್​ಸಿಬಿ ಪರ ಮತ್ತೆ ಆಡುವ ಆಸೆ ಇದೆ ಎಂದಿದ್ದಾರೆ.

ಪ್ರಸಕ್ತ ಸಾಗುತ್ತಿರುವ ಮಹಾರಾಜ ಕ್ರಿಕೆಟ್​ ಟೂರ್ನಿಯಲ್ಲಿ ಆಡುತ್ತಿರುವ ಮನೀಷ್​ ಪಾಂಡೆ, ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ಈ ವಿಚಾರವನ್ನು ತೆರೆದಿಟ್ಟಿದ್ದಾರೆ. ತವರಾದ ಆರ್​ಸಿಬಿ ಪರ ಮತ್ತೊಮ್ಮೆ ಆಡುವ ಅವಕಾಶಕ್ಕಾಗಿ ಕಾಯುತ್ತಿರುವೆ. ಕೊಹ್ಲಿಯ ಜತೆಗೆ ಬ್ಯಾಟಿಂಗ್​ ನಡೆಸುವ ಆಸೆ ಇದೆ. ನಾನು ಮಾತ್ರವಲ್ಲ, ಕರ್ನಾಟಕದ ಎಲ್ಲಾ ಕ್ರಿಕೆಟಿಗರು ಒಮ್ಮೆಯಾದರೂ ಆರ್​ಸಿಬಿ ಪರ ಆಡುವ ಕನಸು ಕಾಣುತಿದ್ದಾರೆ ಎನ್ನುವ ಮೂಲಕ ಆರ್​ಸಿಬಿ ಪರ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಇದುವರೆಗೆ 7 ಐಪಿಎಲ್ ತಂಡಗಳ ಪರ ಆಡಿರುವ ಪಾಂಡೆ ಈ ಬಾರಿಯ ಆಟಗಾರರ ಹಾರಜಿಗೆ ಮುನ್ನ ಕೆಕೆಆರ್ ತಂಡದಿಂದ ರಿಲೀಸ್ ಆಗುವುದು ಬಹುತೇಕ ಖಚಿತ.

2009ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಮನೀಷ್‌ ಪಾಂಡೆ, ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದರು. ಶತಕ ಬಾರಿಸುವು ಮೂಲಕ ಈ ಸಾಧನೆ ಮಾಡಿದ ಮೊದಲ ಆನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು. ಇದುವರೆಗೂ 171 ಐಪಿಎಲ್​ ಪಂದ್ಯಗಳನ್ನಾಡಿದ ಅವರು ಒಂದು ಶತಕ ಹಾಗೂ 22 ಅರ್ಧಶತಕ ಬಾರಿಸಿದ್ದಾರೆ. ಒಟ್ಟು 3850 ರನ್ ಗಳಿಸಿದ್ದಾರೆ. ಇದರಲ್ಲಿ ಅಜೇಯ 114 ರನ್‌ ಗರಿಷ್ಠ ಮೊತ್ತವಾಗಿದೆ. ಈ ಬಾರಿ ಕೆಕೆಆರ್​ ಪರ ಕೇವಲ 1 ಪಂದ್ಯ ಆಡಿ 42 ರನ್​ ಬಾರಿಸಿದ್ದರು.

ಇದನ್ನೂ ಓದಿ Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

2015ರಲ್ಲಿ ಜಿಂಬಾಬ್ವೆ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯನ್ನಾಡುವ ಮೂಲಕ ಟೀಮ್​ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ ಮನೀಷ್‌, ಇದುವರೆಗೂ 29 ಏಕದಿನ ಮತ್ತು 39 ಟಿ20 ಕ್ರಿಕೆಟ್​ ಪಂದ್ಯಗಳನ್ನಾಡಿದ್ದಾರೆ. ಏಕದಿನದಲ್ಲಿ 566 ರನ್​ ಮತ್ತು ಟಿ20ಯಲ್ಲಿ 709 ರನ್​ ಬಾರಿಸಿದ್ದಾರೆ. ಏಕದಿನದಲ್ಲಿ ಒಂದು ಶತಕ ಮತ್ತು 2 ಅರ್ಧಶತಕ ಒಳಗೊಂಡಿದೆ. 2021ರಲ್ಲಿ ಶ್ರೀಲಂಕಾ ವಿರುದ್ಧ ಕೊಪನೆಯ ಬಾರಿ ಏಕದಿನ ಪಂದ್ಯವನ್ನಾಡಿದ್ದರು. ಇದಾದ ಬಳಿಕ ಫಾರ್ಮ್​ ಕಳೆದುಕೊಂಡು ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್​ ಜತೆಗೆ ಚುರುಕಿನ ಫೀಲ್ಡಿಂಗ್​ಗೆ ಇವರು ಹೆಸರುವಾಸಿ.

ಮತ್ತೆ ಆರ್​ಸಿಬಿಗೆ ರಾಹುಲ್​?

ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. ಇದೀಗ ಕೊಹ್ಲಿ ಮತ್ತೆ ರಾಹುಲ್​ ಅವರನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಳ್ಳಲು ಫ್ರಾಂಚೈಸಿ ಜತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rishabh Pant: ‘ಕಬಾಲಿ ಡಾ’, ‘ನೆರಪ್ಪು ಡಾ’; ತಲೈವಾ ರಜನಿಕಾಂತ್​ಗೆ ಸಡ್ಡು ಹೊಡೆದ ರಿಷಭ್​ ಪಂತ್​

Rishabh Pant: ರಿಷಭ್​ ಪಂತ್​ ಅವರು ರಜನಿಕಾಂತ್ ಶೈಲಿಯಲ್ಲೇ ಫೋಟೊ ಶೂಟ್​ ಮಾಡಿಸಿದನ್ನು ನೋಡುವಾಗ ಪಂತ್​ ಮುಂದಿನ ಆವೃತ್ತಿಯಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಪರ ಆಡುವುದು ಬಹುತೇಕ ಖಚಿತ ಎನ್ನುವ ಸುಳಿವು ಬಿಟ್ಟುಕೊಟ್ಟಂತಿದೆ

VISTARANEWS.COM


on

Rishabh Pant
Koo

ನವದೆಹಲಿ: ಟೀಮ್​ ಇಂಡಿಯಾದ ಸ್ಟಾರ್​ ಕ್ರಿಕೆಟಿಗ ರಿಷಭ್​ ಪಂತ್​(Rishabh Pant)​ ಅವರು ‘ತಲೈವಾ’ ಖ್ಯಾತಿಯ ಸ್ಟಾರ್​ ನಟ, ರಜನಿಕಾಂತ್(Star Actor Rajinikanth) ಅವರ ಶೈಲಿಯಲ್ಲೇ ಫೋಟೊ ಶೂಟ್​ ಮಾಡಿಸಿಕೊಂಡಿದ್ದಾರೆ. 2016ರಲ್ಲಿ ತೆರೆ ಕಂಡ ಕಬಾಲಿ ಸಿನಿಮಾದಲ್ಲಿ ರಜನಿಕಾಂತ್ ಅವರು ಸೋಫಾದ ರೀತಿಯ ಕುರ್ಚಿಯೊಂದರಲ್ಲಿ ಕುಳಿತ ಶೈಲಿಯಲ್ಲೇ ಪಂತ್​ ಕೂಡ ಕುಳಿತು ಫೋಟೊ(Thalaiva Look Rishabh Pant) ತೆಗೆಸಿಕೊಂಡಿದ್ದಾರೆ. ಈ ಫೋಟೊವನ್ನು ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿರುವ ಪಂತ್​ ‘ತಲೈವಾ’ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಫೋಟೊ ವೈರಲ್​ ಆಗುತ್ತಿದೆ.

ರಿಷಭ್​ ಪಂತ್​ ಅವರು ರಜನಿಕಾಂತ್ ಶೈಲಿಯಲ್ಲೇ ಫೋಟೊ ಶೂಟ್​ ಮಾಡಿಸಿದನ್ನು ನೋಡುವಾಗ ಪಂತ್​ ಮುಂದಿನ ಆವೃತ್ತಿಯಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಪರ ಆಡುವುದು ಬಹುತೇಕ ಖಚಿತ ಎನ್ನುವ ಸುಳಿವು ಬಿಟ್ಟುಕೊಟ್ಟಂತಿದೆ. ಕೆಲವು ದಿನಗಳ ಹಿಂದೆಯೇ ಪಂತ್​ ಡೆಲ್ಲಿ ತಂಡದ ಪರ ರಿಟೈನ್ ಆಸಕ್ತಿ ಹೊಂದಿಲ್ಲ ಅವರು ಚೆನ್ನೈ ತಂಡ ಸೇರಲಿದ್ದಾರೆ ಎನ್ನಲಾಗಿತ್ತು. ಇದೀಗ ತಲೈವಾ ಎಂದು ರಜನಿಕಾಂತ್ ಶೈಲಿಯಲ್ಲೇ ಫೋಟೊ ತೆಗೆಸಿಕೊಂಡಿರುವುದನ್ನು ನೋಡುವಾಗ ಈ ವರದಿ ಸತ್ಯವಾದಂತೆ ತೋರುತ್ತಿದೆ.

ಮಹೇಂದ್ರ ಸಿಂಗ್​ ಧೋನಿ ಮುಂದಿನ ವರ್ಷ ಐಪಿಎಲ್​ ಆಡುವುದು ಖಚಿತತೆ ಇಲ್ಲ. ಇಂಪ್ಯಾಕ್ಟ್​ ನಿಯಮ ಇದ್ದರೆ ಆಡುವುದಾಗಿ ಫ್ರಾಂಚೈಸಿ ಮೂಲಗಳು ಈಗಾಗಲೇ ಮಾಹಿತಿ ನೀಡಿದೆ. ಈ ಬಾರಿಯೇ ಧೋನಿ ನಿವೃತ್ತಿಯಾಗಬೇಕಿತ್ತು. ಆದರೆ ಅವರು ಇನ್ನೂ ನಿವೃತ್ತಿ ಪ್ರಕಟಿಸಿಲ್ಲ. ತಂಡದಲ್ಲಿ ಸೂಕ್ತ ವಿಕೆಟ್​ ಕೀಪರ್​ ಇಲ್ಲದ ಕಾರಣ ಧೋನಿ ತಮ್ಮ ಕಾಲು ನೋವಿನ ಮಧ್ಯೆಯೂ ಸಂಪೂರ್ಣವಾಗಿ ಕೀಪಿಂಗ್​ ನಡೆಸಿದ್ದರು. ಧೋನಿ ಸ್ಥಾನಕ್ಕೆ ಪಂತ್​ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯೊಂದು ಕಂಡುಬಂದಿದೆ.

ಮಹೇಂದ್ರ ಸಿಂಗ್​ ಧೋನಿ ಮನೆಯ ಯಾವುದೇ ವಿಶೇಷ ಕಾರ್ಯಕ್ರಮದಲ್ಲೂ, ರಿಷಭ್​ ಪಂತ್​ ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಅಣ್ಣನ ಸ್ಥಾನದಲ್ಲಿ ನಿಂತು ಧೋನಿ ಅವರು ಪಂತ್​ಗೆ ಸಲಹೆ ನೀಡುತ್ತಾರೆ. ಪಂತ್​ ಕೂಡ ಧೋನಿ ಪರಿವಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಧೋನಿಯೇ ಪಂತ್​ ಅವರನ್ನು ಸಿಎಸ್​ಕೆ ತಂಡಕ್ಕೆ ಆಹ್ವಾನಿಸಬಹುದು. ಪಂತ್​ ಚೆನ್ನೈ ಸೇರಿದರೆ ಕೀಪಿಂಗ್​ ನಡೆಸಬಹುದು. ಧೋನಿ ಇಂಪ್ಯಾಕ್ಟ್​ ಆಟಗಾರನಾಗಿ ಬ್ಯಾಟಿಂಗ್​ ಮಾತ್ರ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ Rishabh Pant: ಕೀಪಿಂಗ್​ ಬಿಟ್ಟು ಬೌಲಿಂಗ್​ ನಡೆಸಿದ ರಿಷಭ್​ ಪಂತ್​; ವಿಡಿಯೊ ವೈರಲ್​

ಬೌಲಿಂಗ್​ ನಡೆಸಿದ್ದ ಪಂತ್​


ಕೆಲ ದಿನಗಳ ಹಿಂದಷ್ಟೇ ರಿಷಭ್​ ಪಂತ್​ ದೆಹಲಿ ಪ್ರೀಮಿಯರ್ ಲೀಗ್ 2024 ರ(Delhi Premier League T20 2024) ಉದ್ಘಾಟನಾ ಆವೃತ್ತಿಯ ಪಂದ್ಯದಲ್ಲಿ ಬೌಲಿಂಗ್(rishabh pant bowling)​ ನಡೆಸುವ ಮೂಲಕ ಗಮನಸೆಳೆದಿದ್ದರು. ಪಂತ್ ಪಂದ್ಯದ ಅಂತಿಮ ಓವರ್​ನಲ್ಲಿ ಎದುರಾಳಿ ಸೌತ್​ ಡೆಲ್ಲಿ ತಂಡಕ್ಕೆ 6 ಎಸೆತಗಳಲ್ಲಿ ಗೆಲುವಿಗೆ ಒಂದು ರನ್​ ಬೇಕಿದ್ದಾಗ ಸ್ಪಿನ್​ ಬೌಲಿಂಗ್​ ನಡೆಸಿದ್ದರು. ಬೌಲಿಂಗ್​ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು.

Continue Reading

ಕ್ರೀಡೆ

Mohammed Shami: ರಣಜಿ ಟೂರ್ನಿಗೆ ಮೊಹಮ್ಮದ್ ಶಮಿ ಲಭ್ಯ?

Mohammed Shami: “ಶಮಿ ಅವರು ತಮ್ಮ ಶಸ್ತ್ರಚಿಕಿತ್ಸೆಯ ನಂತರ ಮೊದಲ ಬಾರಿಗೆ ಕಳೆದ ತಿಂಗಳು ಬೌಲಿಂಗ್ ಪುನರಾರಂಭಿಸಿದ್ದಾರೆ. ಆಸ್ಟ್ರೇಲಿಯಾ ಸರಣಿಯಲ್ಲಿ ಶಮಿ ಆಡುತ್ತಾರೋ ಇಲ್ಲವೋ ಎಂಬುದು ಅವರ ಫಿಟ್‌ನೆಸ್‌ಗೆ ಸಂಬಂಧಿಸಿದ್ದು ಮತ್ತು ಎನ್‌ಸಿಎ ವರದಿಯ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಶಾ ಎಎನ್‌ಐಗೆ ತಿಳಿಸಿದ್ದಾರೆ.

VISTARANEWS.COM


on

Mohammed Shami
Koo

ಮುಂಬಯಿ: ಟೀಮ್​ ಇಂಡಿಯಾದ ವೇಗಿ ಮೊಹಮ್ಮದ್ ಶಮಿ(Mohammed Shami) ಅವರು ಮುಂಬರುವ ರಣಜಿ ಟ್ರೋಫಿ(ranji trophy) ಕ್ರಿಕೆಟ್ ಟೂರ್ನಿಯಲ್ಲಿ ಬಂಗಾಳ ತಂಡದ ಪರ ಆಡಲಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ನಡೆದಿದ್ದ ಏಕದಿನ ಕ್ರಿಕೆಟ್​ ಟೂರ್ನಿ ಬಳಿಕ ಹಿಮ್ಮಡಿಯ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಶಮಿ ಯಾವುದೇ ಕ್ರಿಕೆಟ್​ ಟೂರ್ನಿ ಆಡಿಲ್ಲ.

ಸದ್ಯ ಬೆಂಗಳೂರಿನ ಎನ್​ಸಿಯಲ್ಲಿ ಪುನಶ್ಚೇತನ ಮತ್ತು ಫಿಟ್‌ನೆಸ್‌ ಆರೈಕೆಯಲ್ಲಿರುವ ಶಮಿ ಅಕ್ಟೋಬರ್‌ ತಿಂಗಳಲ್ಲಿ ಶುರುವಾಗಲಿರುವ ರಣಜಿ ಟ್ರೋಫಿ ಟೂರ್ನಿಯಲ್ಲಿ ಆಡುವ ಸಾಧ್ಯತೆ ಇದೆ. ಉತ್ತರ ಪ್ರದೇಶ (ಅ.11ರಿಂದ) ಮತ್ತು ಬಿಹಾರ (ಅ. 18ರಿಂದ)ವಿರುದ್ಧದ ಪಂದ್ಯಗಳಲ್ಲಿ ಅವರು ಆಡುಬಹುದು. ಈ ಮೂಲಕ ಭಾರತ ತಂಡಕ್ಕೆ ಕಮ್​ಬ್ಯಾಕ್​ ಮಾಡುವ ನಿರೀಕ್ಷೆಯಲ್ಲಿದ್ದಾರೆ.

ಶಮಿ ಕಮ್​ಬ್ಯಾಕ್​ ಬಗ್ಗೆ ಜಯ್​ ಶಾ ಹೇಳಿದ್ದೇನು?


ಈ ವರ್ಷದ ಕೊನೆಯಲ್ಲಿ ನಡೆಯುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ವೇಗಿ ಮೊಹಮ್ಮದ್ ಶಮಿ ಭಾಗವಹಿಸುವ ಕುರಿತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ವರದಿಯ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ(jay shah) ಹೇಳಿದ್ದಾರೆ.

“ಶಮಿ ಅವರು ತಮ್ಮ ಶಸ್ತ್ರಚಿಕಿತ್ಸೆಯ ನಂತರ ಮೊದಲ ಬಾರಿಗೆ ಕಳೆದ ತಿಂಗಳು ಬೌಲಿಂಗ್ ಪುನರಾರಂಭಿಸಿದ್ದಾರೆ. ಆಸ್ಟ್ರೇಲಿಯಾ ಸರಣಿಯಲ್ಲಿ ಶಮಿ ಆಡುತ್ತಾರೋ ಇಲ್ಲವೋ ಎಂಬುದು ಅವರ ಫಿಟ್‌ನೆಸ್‌ಗೆ ಸಂಬಂಧಿಸಿದ್ದು ಮತ್ತು ಎನ್‌ಸಿಎ ವರದಿಯ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಶಾ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ Mohammed Shami Comeback: ಟೀಮ್​ ಇಂಡಿಯಾಕ್ಕೆ ಮರಳುವ ಸೂಚನೆ ನೀಡಿದ ಶಮಿ; ಎನ್​ಸಿಎಯಲ್ಲಿ ಕಠಿಣ ಅಭ್ಯಾಸ

ಶಮಿ ಆಸ್ಟ್ರೇಲಿಯಾದಲ್ಲಿ ಉತ್ತಮ ಟೆಸ್ಟ್ ದಾಖಲೆಯನ್ನು ಹೊಂದಿದ್ದಾರೆ, ಎಂಟು ಪಂದ್ಯಗಳಲ್ಲಿ 32.16 ಸರಾಸರಿಯಲ್ಲಿ 6/56 ರ ಅತ್ಯುತ್ತಮ ಅಂಕಿ ಅಂಶಗಳೊಂದಿಗೆ 31 ವಿಕೆಟ್‌ಗಳನ್ನು ಪಡೆದಿದ್ದಾರೆ. ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಎರಡು ಬಾರಿ ಐದು ವಿಕೆಟ್‌ ಕಿತ್ತ ಸಾಧನೆ ಮಾಡಿದ್ದಾರೆ. ಮುಂದಿನ ವರ್ಷ ಚಾಂಪಿಯನ್ಸ್​ ಟ್ರೋಫಿ ಕೂಡ ನಡೆಯುವ ಕಾರಣ ಶಮಿ ಅವರ ಪಾತ್ರ ನಿರ್ಣಾಯಕ ಹೀಗಾಗಿ ಬಿಸಿಸಿಐ ಶಮಿಯನ್ನು ಆತುರದಿಂದ ಆಡಿಸಲು ಮುಂದಾಗುವುದು ಅನುಮಾನ. ಸಂಪೂರ್ಣ ಚೇತರಿಕೆಯ ಬಳಿಕವೇ ಅವರಿಗೆ ಆಡುವ ಅವಕಾಶ ಕಲ್ಪಿಸಬಹುದು.

34 ವರ್ಷದ ಶಮಿ ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

Continue Reading

ಕ್ರಿಕೆಟ್

Darius Visser: ಒಂದೇ ಓವರ್​ನಲ್ಲಿ 39 ರನ್​ ಚಚ್ಚಿ ಯುವರಾಜ್​ ಸಿಂಗ್​ ದಾಖಲೆ ಮುರಿದ ಡೇರಿಯಸ್ ವಿಸ್ಸರ್

Darius Visser: ಡೇರಿಯಸ್ ವಿಸ್ಸರ್ ಒಂದೇ ಓವರ್​ನಲ್ಲಿ 39 ರನ್​ ಗಳಿಸುವ ಮೂಲಕ ದಿಗ್ಗಜ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ. ಸದ್ಯ ಸಿಕ್ಸರ್​ಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಆಟಗಾರನ ಈ ಸಾಧನೆಗೆ ಹಲವು ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

VISTARANEWS.COM


on

Darius Visser
Koo

ಮುಂಬಯಿ: ಸಮೋವಾದ (Samoa) 28 ವರ್ಷದ ಡೇರಿಯಸ್ ವಿಸ್ಸರ್ (Darius Visser) ಟಿ20 ಕ್ರಿಕೆಟ್​ನಲ್ಲಿ ನೂತನ ದಾಖಲೆಯೊಂದನ್ನು ಬರೆದಿದ್ದಾರೆ. ಒಂದೇ ಓವರ್​ನಲ್ಲಿ 39 ರನ್​ ಸಿಡಿಸುವ ಮೂಲಕ ಯುವರಾಜ್​ ಸಿಂಗ್(Yuvraj Singh),​ ಕೈರನ್​ ಪೊಲಾರ್ಡ್​, ದೀಪೇಂದ್ರ ಸಿಂಗ್ ಐರಿ ಮತ್ತು ನಿಕೋಲಸ್ ಪೂರನ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಮಂಗಳವಾರ ನಡೆದ 2026ರ ಟಿ20 ವಿಶ್ವಕಪ್(ICC Men’s T20 World Cup) ಪ್ರಾದೇಶಿಕ ಅರ್ಹತಾ (2026 World Cup regional qualifier) ಸುತ್ತಿನ ವನುವಾಟು (Vanuatu) ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ವಿಸ್ಸರ್‌ ಈ ದಾಖಲೆಯನ್ನು ನಿರ್ಮಿಸಿದ್ದಾರೆ. ಯುವರಾಜ್​ ಸಿಂಗ್​ ಅವರು 2007ರಲ್ಲಿ ನಡೆದಿದ್ದ ಚೊಚ್ಚಲ ಟಿ20 ವಿಶ್ವಕಪ್​ ಟೂರ್ನಿಯ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್ ಅವರ ಓವರ್​ನಲ್ಲಿ 6 ಎಸೆತಗಳಿಗೆ 6 ಸಿಕ್ಸರ್​ ಬಾರಿಸಿ 36 ರನ್​ ಕಲೆ ಹಾಕಿದ್ದರು. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 6 ಎಸೆತಗಳಿಗೆ 6 ಸಿಕ್ಸರ್​ ಸಿಡಿಸಿದ್ದ ಮೊದಲ ನಿದರ್ಶನ ಇದಾಗಿತ್ತು. ಇದಾದ ಬಳಿಕ ಹಲವು ಆಟಗಾರು ಈ ಸಾಧನೆ ಮಾಡಿದ್ದರು.

ಇದೀಗ ಡೇರಿಯಸ್ ವಿಸ್ಸರ್ ಒಂದೇ ಓವರ್​ನಲ್ಲಿ 39 ರನ್​ ಗಳಿಸುವ ಮೂಲಕ ದಿಗ್ಗಜ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ. ಸದ್ಯ ಸಿಕ್ಸರ್​ಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಆಟಗಾರನ ಈ ಸಾಧನೆಗೆ ಹಲವು ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ Yuvraj Singh : ಅಂಗವಿಕಲರಂತೆ ರೀಲ್ಸ್​ ಮಾಡಿದ ಯುವರಾಜ್​, ಹರ್ಭಜನ್​ ಸಿಂಗ್ ವಿರುದ್ಧ ದೂರು ದಾಖಲು

ಅಪಿಯಾದ ಗಾರ್ಡನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಸಮೋವ ತಂಡ ಕೇವಲ 10 ರನ್​ಗಳಿಸುವಷ್ಟರಲ್ಲಿ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕ್ರೀಸಿಗಿಳಿದ ಡೇರಿಯಸ್ ವಿಸ್ಸರ್ ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ ಕೇವಲ 62 ಎಸೆತಗಳಲ್ಲಿ 132 ರನ್​ ಚಚ್ಚಿದರು. ಅವರ ಈ ಸ್ಫೋಟಕ ಬ್ಯಾಟಿಂಗ್ ಇನಿಂಗ್ಸ್​ ವೇಳೆ ಬರೋಬ್ಬರಿ 14 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.​

ಎದುರಾಳಿ ತಂಡದ ನಲಿನ್ ನಿಪಿಕೊ ಎಸೆದ 15ನೇ ಓವರ್​ನಲ್ಲಿ ಸಿಡಿದು ನಿಂತ ವಿಸ್ಸರ್ 39 ರನ್​ ಕಲೆ ಹಾಕುವ ಮೂಲಕ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಓವರ್​ನ ಮೊದಲ ಮೂರು ಎಸೆತಗಳನ್ನು ಸಿಕ್ಸರ್​ಗಟ್ಟಿದ ವಿಸ್ಸರ್, 4ನೇ ಎಸೆತವನ್ನು ಕೂಡ ಸಿಕ್ಸರ್​ಗಟ್ಟಿದ್ದರು. ಆ ಎಸೆತ ನೋಬಾಲ್​ ಆಗಿದ್ದರಿಂದ ಅದರ ಲಾಭ ಪಡೆದ ವಿಸ್ಸೆರ್​ ಮರು ಎಸೆತದಲ್ಲಿ ಮತ್ತೊಂದು ಸಿಕ್ಸರ್​ ಬಾರಿಸಿದರು. 5ನೇ ಎಸೆತದಲ್ಲಿ ಯಾವುದೇ ರನ್ ಬಾರದಿದ್ದರೂ ಅಂತಿಮ ಎಸೆತದಲ್ಲಿ ಮತ್ತೆ ಸಿಕ್ಸರ್​ ಬಾರಿಸಿದರು. ಈ ಎಸೆತ ಕೂಡ ನೋ ಬಾಲ್ ಆಗಿದ್ದರಿಂದ ಮುಂದಿನ ಎಸೆತದಲ್ಲಿ ಮತ್ತೊಂದು ಸಿಕ್ಸರ್​ ದಾಖಲಾಯಿತು. ಇದು ಕೂಡ ನೋ ಬಾಲ್​ ಆದ ಕಾರಣ ಕೊನೆಯ ಎಸೆತದಲ್ಲಿ ಭರ್ಜರಿ ಸಿಕ್ಸ್ ಬಾರಿಸುದರೊಂದಿಗೆ ಒಟ್ಟು 39 ರನ್​ ಕಲೆಹಾಕಿದ್ದರು. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ದಾಖಲೆ ಡೇರಿಯಸ್ ವಿಸ್ಸರ್ ಪಾಲಾಗಿದೆ.

Continue Reading

ಕ್ರೀಡೆ

Yuvraj Singh : ಶೀಘ್ರದಲ್ಲೇ ತೆರೆಗೆ ಬರಲಿದೆ ಯುವರಾಜ್ ಸಿಂಗ್‌ ಬಯೋಪಿಕ್‌

Yuvraj Singh : ಯುವರಾಜ್ ಸಿಂಗ್ ಅವರ ಜೀವನವು ಗೆಲುವು ಮತ್ತು ಉತ್ಸಾಹದ ಕತೆಯಾಗಿದೆ. ಭರವಸೆಯ ಕ್ರಿಕೆಟಿಗನಿಂದ ಹಿಡಿದು ಕ್ರಿಕೆಟ್ ನಾಯಕನಾಗಿ ನಂತರ ನಿಜ ಜೀವನದಲ್ಲಿ ನಾಯಕನಾಗಿ ಸಾಗಿದ ಅವರ ಪ್ರಯಾಣವು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ. ಹೇಳಬೇಕಾದ ಮತ್ತು ಕೇಳಬೇಕಾದ ಕಥೆಯನ್ನು ದೊಡ್ಡ ಪರದೆಗೆ ತರಲು ಮತ್ತು ಅವರ ಅಸಾಧಾರಣ ಸಾಧನೆಗಳನ್ನು ತೋರಿಸಲು ನಮಗೆ ಖುಷಿಯಿದೆ ಎಂದು ಸಿನಿಮಾ ತಂಡ ಹೇಳಿದೆ.

VISTARANEWS.COM


on

Yuvraj Singh
Koo

ನವದೆಹಲಿ: ಯುವರಾಜ್ ಸಿಂಗ್ (Yuvraj Singh) ಅವರ ಎಲ್ಲಾ ಅಭಿಮಾನಿಗಳಿಗೆ ಒಂದು ಖುಷಿಯ ಸುದ್ದಿ ಇದೆ. ಕ್ಯಾನ್ಸರ್‌ ವಿರುದ್ಧ ಹೋರಾಡಿ ಜಯಿಸಿದ ಭಾರತದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ಯುವರಾಜ್ ಸಿಂಗ್ ಅವರ ಬಯೋಪಿಕ್ ನಿರ್ಮಾಣವಾಗುತ್ತಿದೆ. ಅನಾರೋಗ್ಯದಿಂದ ಹಿಡಿದು ವಿಶ್ವಕಪ್ ಎತ್ತುವವರೆಗೆ, ಯುವರಾಜ್ ಅವರ ಪ್ರಯಾಣವು ಸ್ಫೂರ್ತಿದಾಯಕವಾಗಿದ್ದು ಅದು ಈ ಸಿನಿಮಾ ಕತೆಯಾಗಲಿದೆ. ವೆರೈಟಿ ವರದಿಯ ಪ್ರಕಾರ, ಟಿ-ಸೀರೀಸ್‌‌‌ನ ಭೂಷಣ್ ಕುಮಾರ್ ಮತ್ತು 200 ನಾಟ್ ಔಟ್ ಸಿನೆಮಾದ ರವಿ ಭಾಗ್‌ಚಂದ್ಕಾ ಈ ಬಯೋಪಿಕ್‌‌ಗೆ ಜೀವ ತುಂಬಲಿದ್ದಾರೆ. ಸಿನಿಮಾ ತಂಡ ಪಾತ್ರವರ್ಗವನ್ನು ಇನ್ನೂ ಅಂತಿಮಗೊಳಿಸಿಲ್ಲ.

ಯುವರಾಜ್ ಸಿಂಗ್ ಅವರ ಜೀವನವು ಗೆಲುವು ಮತ್ತು ಉತ್ಸಾಹದ ಕತೆಯಾಗಿದೆ. ಭರವಸೆಯ ಕ್ರಿಕೆಟಿಗನಿಂದ ಹಿಡಿದು ಕ್ರಿಕೆಟ್ ನಾಯಕನಾಗಿ ನಂತರ ನಿಜ ಜೀವನದಲ್ಲಿ ನಾಯಕನಾಗಿ ಸಾಗಿದ ಅವರ ಪ್ರಯಾಣವು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ. ಹೇಳಬೇಕಾದ ಮತ್ತು ಕೇಳಬೇಕಾದ ಕಥೆಯನ್ನು ದೊಡ್ಡ ಪರದೆಗೆ ತರಲು ಮತ್ತು ಅವರ ಅಸಾಧಾರಣ ಸಾಧನೆಗಳನ್ನು ತೋರಿಸಲು ನಮಗೆ ಖುಷಿಯಿದೆ ಎಂದು ಸಿನಿಮಾ ತಂಡ ಹೇಳಿದೆ.

ರವಿ ಭಾಗ್ಚಂದ್ಕಾ ಯುವರಾಜ್ ಸಿಂಗ್ ಅವರನ್ನು “ಎಲ್ಲಾ ಅರ್ಥದಲ್ಲೂ ನಿಜವಾದ ದಂತಕಥೆ” ಎಂದು ಕರೆದಿದ್ದಾರೆ. ಯುವರಾಜ್ ಹಲವು ವರ್ಷಗಳಿಂದ ನನ್ನ ಆತ್ಮೀಯ ಸ್ನೇಹಿತ. ಅವರ ನಂಬಲಾಗದ ಕ್ರಿಕೆಟ್ ಪ್ರಯಾಣವನ್ನು ಸಿನಿಮೀಯ ಅನುಭವವಾಗಿ ಪರಿವರ್ತಿಸಲು ಮುಂದಾಗಿದ್ದು, ನಮ್ಮ ಬಗ್ಗೆ ನಂಬಿಕೆ ಹೊಂದಿರುವುದಕ್ಕೆ ಖುಷಿಯಿದೆ ಎಂದು ಹೇಳಿದ್ದಾರೆ. . ಯುವಿ ಕೇವಲ ವಿಶ್ವ ಚಾಂಪಿಯನ್ ಮಾತ್ರವಲ್ಲ, ಪ್ರತಿಯೊಂದು ಅರ್ಥದಲ್ಲೂ ನಿಜವಾದ ದಂತಕಥೆ ಎಂದು ಅವರು ಹೇಳಿದ್ದಾರೆ.

ಯುವರಾಜ್ ಸಿಂಗ್ ಅವರು ಈ ಚಿತ್ರವು ತಮ್ಮದೇ ಆದ ಸವಾಲುಗಳನ್ನು ಹೊಂದಿದೆ. ಅದಾಗ್ಯೂ ಇತರರಿಗೆ ಸ್ಫೂರ್ತಿ ನೀಡಲು ಬಯಸುತ್ತೇವೆ ಎಂದು ಅವರು ಒತ್ತಿ ಹೇಳಿದರು. “ನನ್ನ ಕಥೆಯನ್ನು ಭೂಷಣ್ ಜಿ ಮತ್ತು ರವಿ ಅವರು ವಿಶ್ವದಾದ್ಯಂತ ನನ್ನ ಲಕ್ಷಾಂತರ ಅಭಿಮಾನಿಗಳಿಗೆ ತಲುಪಿಸಲಿದ್ದಾರೆ. ಎಲ್ಲಾ ಏರಿಳಿತಗಳ ನಡುವೆಯೂ ಕ್ರಿಕೆಟ್ ನನ್ನ ದೊಡ್ಡ ಪ್ರೀತಿ ಮತ್ತು ಶಕ್ತಿಯ ಮೂಲವಾಗಿದೆ. ಈ ಚಿತ್ರವು ಇತರರಿಗೆ ತಮ್ಮದೇ ಆದ ಸವಾಲುಗಳನ್ನು ಜಯಿಸಲು ಮತ್ತು ಅವರ ಕನಸುಗಳನ್ನು ಅಚಲ ಉತ್ಸಾಹದಿಂದ ಮುಂದುವರಿಸಲು ಸ್ಫೂರ್ತಿಯಾಗಲಿ ಎಂದು ನಾನು ಭಾವಿಸುತ್ತೇನೆ, “ಎಂದು ಯುವರಾಜ್‌ ಸಿಂಗ್‌ ಹೇಳಿದರು.

ಇದನ್ನೂ ಓದಿ: Bheema Box Office Collection : ಎರಡನೇ ವಾರಾಂತ್ಯದಲ್ಲೂ ಮುನ್ನುಗ್ಗಿದ್ದ ಭೀಮ; 20 ಕೋಟಿ ರೂ. ಕಲೆಕ್ಷನ್‌

ಯುವರಾಜ್ ಸಿಂಗ್ ತಮ್ಮ 13ನೇ ವಯಸ್ಸಿನಲ್ಲಿ ಪಂಜಾಬ್‌‌ನ ಅಂಡರ್-16 ಕ್ರಿಕೆಟ್ ತಂಡದ ಪರ ಆಡುವ ಮೂಲಕ ಪಾದಾರ್ಪಣೆ ಮಾಡಿದ್ದರು. 2007 ರ ಟಿ 20 ವಿಶ್ವಕಪ್ ನಲ್ಲಿ, ಯುವರಾಜ್ ಇಂಗ್ಲೆಂಡ್ ನ ಸ್ಟುವರ್ಟ್ ಬ್ರಾಡ್ ವಿರುದ್ಧ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಗಳನ್ನು ಹೊಡೆಯುವ ಮೂಲಕ ಇತಿಹಾಸ ಬರೆದಿದ್ದರು. ಯುವರಾಜ್ 2019 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ.

Continue Reading
Advertisement
ವೈರಲ್ ನ್ಯೂಸ್2 mins ago

Road Rage Incident: ಒಳಗೆ ಮಗು ಇದೆ ಅಂದ್ರೂ ಬಿಡದ ಕಿಡಿಗೇಡಿ; ಕಾರಿನ ಗ್ಲಾಸ್‌ ಒಡೆದು ದಾಂಧಲೆ!

Fashion Show news
ಫ್ಯಾಷನ್14 mins ago

Fashion Show news: ವೈವಿಧ್ಯಮಯ ವಜ್ರಾಭರಣ ಧರಿಸಿ ಫ್ಯಾಷನ್‌ ಶೋನಲ್ಲಿ ಮಿಂಚಿದ ರೂಪದರ್ಶಿಯರು

Manu Bhaker Dance
ಕ್ರೀಡೆ21 mins ago

Manu Bhaker Dance: ‘ಕಾಲಾ ಚಷ್ಮಾ’ ಹಾಡಿಗೆ ವಿದ್ಯಾರ್ಥಿಗಳ ಜತೆ ಹೆಜ್ಜೆ ಹಾಕಿದ ಒಲಿಂಪಿಯನ್​ ಮನು ಭಾಕರ್​

KEA
ಕರ್ನಾಟಕ35 mins ago

KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

badlapur tension vistara explainer
EXPLAINER57 mins ago

Vistara Explainer: ಪುಟ್ಟ ಹೆಣ್ಣುಮಕ್ಕಳ ಮೇಲೆ ಕಾಮುಕ ಅಟೆಂಡರ್‌ನಿಂದ ಅತ್ಯಾಚಾರದ ಬಳಿಕ ಬದ್ಲಾಪುರ ಉದ್ವಿಗ್ನ; ಏನಾಗ್ತಿದೆ ಅಲ್ಲಿ?

DK Shivakumar
ಕಲಬುರಗಿ1 hour ago

DK Shivakumar: ಆರ್ಟಿಕಲ್ 371 ಜೆ ಜಾರಿಗೆ 10 ವರ್ಷ; ಸಂಭ್ರಮಾಚರಣೆಗೆ ಸರ್ಕಾರದ ಸಿದ್ಧತೆ

DK Shivakumar
ಕಲಬುರಗಿ1 hour ago

DK Shivakumar: ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ ಎಂದ ಡಿ.ಕೆ.ಶಿವಕುಮಾರ್!

Congress Protest
ಕರ್ನಾಟಕ1 hour ago

Congress Protest: ಪ್ರಧಾನಿ, ಗವರ್ನರ್‌ಗೆ ಬೆದರಿಕೆ; ಐವನ್ ಡಿಸೋಜಾ, ಜಮೀರ್‌, ರಕ್ಷಿತ್ ಶಿವರಾಮ್ ವಿರುದ್ಧ ದೂರು

Mosquitoes Bite
ಆರೋಗ್ಯ1 hour ago

World Mosquito Day: ಸೊಳ್ಳೆಗಳಿಗೂ ಒಂದು ದಿನ! ಇವುಗಳ ಕುರಿತ 7 ಸುಳ್ಳುಗಳಿಗೆ ಇಲ್ಲಿದೆ ಉತ್ತರ!

Naga Chaitanya Sobhita Dhulipala
ಸಿನಿಮಾ1 hour ago

Naga Chaitanya Sobhita Dhulipala: ನಾಗ ಚೈತನ್ಯ, ಶೋಭಿತಾ ಧೂಳಿಪಾಲ ನಿಶ್ಚಿತಾರ್ಥದಿಂದ ಅಕ್ಕಿನೇನಿ- ದಗ್ಗುಬಾಟಿ ಕುಟುಂಬದಲ್ಲಿ ಬಿರುಕು?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌