Karnataka Weather : ಮುಂದುವರಿದ ಮಳೆ ಅವಾಂತರ; ನಾಳೆ ಒಳನಾಡು, ಕರಾವಳಿಯಲ್ಲಿ ಅಬ್ಬರ - Vistara News

ಮಳೆ

Karnataka Weather : ಮುಂದುವರಿದ ಮಳೆ ಅವಾಂತರ; ನಾಳೆ ಒಳನಾಡು, ಕರಾವಳಿಯಲ್ಲಿ ಅಬ್ಬರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿದಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಕೊಪ್ಪಳ, ತುಮಕೂರು, ವಿಜಯಪುರ ಸುತ್ತಮುತ್ತ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಮೀನುಗಳು ಜಲಾವೃತಗೊಂಡಿದೆ.

VISTARANEWS.COM


on

karnataka weather Forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಳೆ ಬುಧವಾರ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಧರೆಗುರುಳಿದ ಮರ

ಇನ್ನೂ ಮಂಗಳವಾರವೂ ಮಳೆ ಅವಾಂತರ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ಹಲವೆಡೆ ಮಳೆಯು ಅಬ್ಬರಿಸಿತ್ತು. ವಿಧಾನಸೌಧ, ಶಿವಾಜಿನಗರ, ಕಬ್ಬನ್‌ಪಾರ್ಕ್‌,ಕಸ್ತೂರಬಾ ರಸ್ತೆ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಮಳೆಯಾಗಿದೆ. ಸದಾಶಿವನಗರ ಪೊಲೀಸ್ ಠಾಣೆ ಮುಂಭಾಗ ಮರವೊಂದು ಧರೆಗುರುಳಿದೆ. ಮರ ಬಿದ್ದ ಪರಿಣಾಮ ರಸ್ತೆಯಲ್ಲಿ ನಿಂತಿದ್ದ ಒಂದು ಕಾರು ಜಖಂಗೊಂಡಿದೆ. ಬಿಬಿಎಂಪಿ ಸಿಬ್ಬಂದಿ ಬರಲು ತಡವಾದ ಹಿನ್ನೆಲೆಯಲ್ಲಿ ಪೊಲೀಸರಿಂದಲೇ ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಬೃಹತ್ ಮರ ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಗ್ರಾಮಕ್ಕೆ ನುಗ್ಗಿದ ಹಳ್ಳದ ನೀರು

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರು ಗ್ರಾಮದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದವು. ಮಾರಾಟವಾಗಬೇಕಿದ್ದ ತರಕಾರಿಗಳು ಕೊಚ್ಚಿಹೋಗಿದ್ದು ಕಂಡು ವ್ಯಾಪಾರಸ್ಥರು ಕಣ್ಣೀರು ಹಾಕಿದರು. ಕೊಪ್ಪಳದ ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದ ಕೊಳ್ಳದ ಅಮರೇಶ್ವರ ದೇವಸ್ಥಾನ ಜಲಾವೃತಗೊಂಡಿತ್ತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದಲ್ಲದೇ ಜುಮಲಾಪುರದ ಸರಕಾರಿ ಪ್ರಾಥಮಿಕ ಶಾಲಾ ಆವರಣ ನದಿಯಂತಾಗಿತ್ತು.

ವಿಜಯನಗರದ ಹಂಪಿಯಲ್ಲೂ ಉತ್ತಮ ಮಳೆಯಾಗಿದೆ. ಹೊಸಪೇಟೆ ತಾಲೂಕಿನ ಹಂಪಿ ಸುತ್ತಮುತ್ತಲಿನ ಪ್ರದೇಶದ ಬಾಳೆ ತೋಟಕ್ಕೆ ಮಳೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಹೊಸಪೇಟೆ ತಾಲೂಕಿನ ಗುಂಡ್ಲಕೇರಿಯ ಬಳಿ ಇರುವ ಕಾಲುವೆಯ ಸೇತುವೆ ಮೇಲೆ ನೀರು ಹರಿದಿದೆ. ಸೀತಾರಾಮ್ ತಾಂಡ- ಕಮಲಾಪುರ ರಸ್ತೆಯ ಮಧ್ಯದ ಸೇತುವೆ, ಹಗರಿಬೊಮ್ಮನ ಹಳ್ಳಿ ತಾಲೂಕಿನ ಮುತ್ಕೂರು- ವಲ್ಲಭಾಪುರ ಸೇತುವೆ ಮುಳುಗಡೆಯಾಗಿದೆ.

ಹೊಸಪೇಟೆ ತಾಲೂಕಿನ ಭಾಗದ ಗ್ರಾಮಗಳಲ್ಲಿ ಭಾರೀ ಮಳೆಗೆ ಹತ್ತಿ, ಮೆಣಸಿನ ಕಾಯಿ ಬೆಳೆಗಳು ನೀರಿಗೆ ಆಹುತಿಯಾಗಿವೆ. ಧರ್ಮಸಾಗರ ಗ್ರಾಮದ ನಾಯಕರ ಹುಲಗಪ್ಪ ಎಂಬವರಿಗೆ ಸೇರಿದ ಜಮೀನಿನಲ್ಲಿ ಬೆಳೆದ ಬೆಳೆಯು ಮಳೆಗೆ ಕೊಚ್ಚಿ ಹೋಗಿದೆ. ರೈತ ನಾಯಕರ ಹುಲಗಪ್ಪ ಸಾಲಸೊಲ ಮಾಡಿ ಬೆಳೆಯನ್ನು ಬೆಳೆದಿದ್ದರು. ಇದೀಗ ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಜಮೀನುಗಳಿಗೆ ನೀರು ನುಗ್ಗಿದೆ.

ಇದನ್ನೂ ಓದಿ: Celina Jaitley: ಮರ್ಮಾಂಗ ತೋರಿಸಿದ ದುಷ್ಟ; ಟೀಕೆಗೆ ಒಳಗಾದದ್ದು ನಾನು: ಕರಾಳ ನೆನಪು ಬಿಚ್ಚಿಟ್ಟ ನಟಿ

ತುಮಕೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಒಂದೇ ದಿನಕ್ಕೆ ಜಯಮಂಗಲಿ ನದಿ ತುಂಬಿ ಹರಿದಿದೆ. ಪರಿಣಾಮ ಮಧುಗಿರಿ ತಾಲ್ಲೂಕಿನ ವೀರೇನಹಳ್ಳಿ -ಕಾಳೇನಹಳ್ಳಿ ರಸ್ತೆ ಜಲಾವೃತಗೊಂಡಿತ್ತು. ತುಮಕೂರಿನ ದೇವರಾಯನದುರ್ಗ ತಪ್ಪಲಲ್ಲಿ ಹುಟ್ಟುವ ಜಯಮಂಗಲಿ ನದಿ, ಕೊರಟಗೆರೆ, ಮಧುಗಿರಿ ಮಾರ್ಗವಾಗಿ ಆಂಧ್ರದ ಪರ್ಗಿ ಕೆರೆಗೆ ಸೇರಲಿದೆ. ಕಳೆದ ಎರಡು ವರ್ಷಗಳ ಹಿಂದೆ ಸುರಿದ ಮಳೆಗೆ ತುಂಬಿ ಹರಿದಿದ್ದ ಜಯಮಂಗಲಿ ನದಿ ಆ ನಂತರ ನೀರು ಖಾಲಿಯಾಗಿತ್ತು. ಇದೀಗ ರಾತ್ರಿ ಸುರಿದ ಧಾರಕಾರ ಮಳೆಗೆ ತುಂಬಿ ಹರಿಯುತ್ತಿದೆ. ಕೊರಟಗೆರೆ ಪಟ್ಟಣದ ಕನಕ ವೃತ್ತ ಬಳಿ 15ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿತ್ತು. ಶಿವಗಂಗಾ ಥಿಯೇಟರ್ ಬಳಿರುವ ಸಿಮೆಂಟ್ ಅಂಗಡಿಗೆ ಮುಳುಗಿ 200 ಹೆಚ್ಚು ಸಿಮೆಂಟ್ ಮೂಟೆಗಳು ನೀರುಪಾಲಾಗಿದ್ದವು.

ವರುಣನ ಆರ್ಭಟಕ್ಕೆ ಬಳ್ಳಾರಿಯ ಕಂಪ್ಲಿಯ ಅನ್ನ ದಾತರು ನಲುಗಿ ಹೋಗಿದ್ದಾರೆ. ಮಳೆ ನೀರು ನುಗ್ಗಿ ಜಮೀನುಗಳು ಹಳ್ಳಗಳಂತೆ ಗೋಚರಿಸುತ್ತಿದೆ. ಕಂಪ್ಲಿ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲೆಡೆ ಬೆಳಗಿನ ಜಾವ ಮಳೆಯಾಗಿದೆ. ಕಂಪ್ಲಿ ಪಟ್ಟಣ, ರಾಮಸಾಗರ, ದೇವಲಾಪುರ, ಮೆಟ್ರಿ, ದೇವಸಮುದ್ರ, ನಂ.10 ಮುದ್ದಾಪುರ, ಸಣಾಪುರ, ಬೆಳಗೋಡ್ ಹಾಳ್ ಸೇರಿ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ಪರಿಣಾಮ ಭತ್ತ, ಹೂ, ಬಾಳೆ, ಕಬ್ಬು, ಸೊಪ್ಪು ಸೇರಿದಂತೆ ನೂರಾರು ಹೆಕ್ಟರ್ ಬೆಳೆ ಜಲಾವೃತ‌ಗೊಂಡು ಹಾಳಾಗಿದೆ. ಲಕ್ಷಾಂತರ ರೂ ವ್ಯಯಿಸಿ ಬಿತ್ತನೆ ಮಾಡಿರುವ ರೈತರಲ್ಲಿ ಬೆಳೆ ನಷ್ಟದ ಆತಂಕ ಹೆಚ್ಚಾಗಿದೆ.

ರಾಜ್ಯ ಹೆದ್ದಾರಿ-29ರ ಮಾರೆಮ್ಮ ದೇವಸ್ಥಾನ ಬಳಿ ನೀರಿನ ರಭಸಕ್ಕೆ ರಸ್ತೆಯ ಕೆಳಭಾಗ ಕೊಚ್ಚಿ ಹೋಗಿದೆ. ಜವುಕು-ಜೀರಿಗನೂರು ಮತ್ತು ಚಿನ್ನಾಪುರ-ಮೆಟ್ರಿ ಸೇತುವೆ ಮೇಲೆ ನೀರು ಹರಿದು ‌ಸಂಪರ್ಕ ಕಡಿತಗೊಂಡಿದೆ. ದೇವಲಾಪುರ ಗ್ರಾಮದ ರಾಜನ ಮಟ್ಟಿಯ ಚರಂಡಿ ಭರ್ತಿಯಾಗಿ ಮನೆಗಳಿಗೆ ನೀರು ನುಗ್ಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಇಂದು ಭಾರಿ ಮಳೆ ಎಚ್ಚರಿಕೆ

Karnataka Weather Forecast : ಮುಕ್ಕಾಲು ಕರ್ನಾಟಕಕ್ಕೆ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದ ಕರಾವಳಿ ಪ್ರದೇಶದಿಂದ ಮಾಲ್ಡಿವ್ಸ್ ದ್ವೀಪದವರೆಗೆ 1.5 ಮತ್ತು 1.8ಕಿ.ಮೀ ಟ್ರಪ್ ಎದ್ದಿದೆ. ಇದರ ಪ್ರಭಾವದಿಂದಾಗಿ ಇಂದು ರಾಜ್ಯಾದ್ಯಂತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain news) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather Forecast) ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಮಳೆಯು ಅಬ್ಬರಿಸಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

karnataka weather Forecast
karnataka weather Forecast

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

karnataka weather Forecast
karnataka weather Forecast

ಆರೆಂಜ್ ಅಲರ್ಟ್‌

ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಸಣ್‌ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು; ನಾಳೆಗೂ ಅಲರ್ಟ್‌

Karnataka Weather Forecast : ಬೆಂಗಳೂರು, ದೊಡ್ಡಬಳ್ಳಾಪುರದಲ್ಲಿ ಸುರಿದ ಮಳೆಗೆ (Rain News) ರಸ್ತೆಗಳು ಜಲಾವೃತಗೊಂಡು ಅವಾಂತರವೇ ಸೃಷ್ಟಿಯಾಗಿದೆ. ಆಗಸ್ಟ್‌ 23ರವರೆಗೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಸೋಮವಾರ ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ (Bengaluru rain) ಸುರಿದಿದೆ. ಕೇವಲ10-15 ನಿಮಿಷ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತಗೊಂಡಿದ್ದವು. ಹೆಬ್ಬಾಳದ ರಸ್ತೆಗಳು ಕೆರೆಯಂತಾಗಿ ಸವಾರರು, ಸಾರ್ವಜನಿಕರು ಹೈರಣಾದರು. ಇತ್ತ ಮಳೆ ಕಡಿಮೆಯಾಗುತ್ತಿದ್ದಂತೆ ಸವಾರರು ಟ್ರಾಫಿಕ್‌ನಲ್ಲಿ (Karnataka Weather Forecast) ಸಿಲುಕಿದ್ದರು.

ಯಶವಂತಪುರ, ಹೆಬ್ಬಾಳ ಅಂಡರ್ ಪಾಸ್‌ನಲ್ಲಿ ವಾಹನಗಳು ನಿಂತಲ್ಲೇ ನಿಲ್ಲುವಂತಾಯಿತು. ಟ್ರಾಫಿಕ್ ಕ್ಲಿಯರ್ ಮಾಡಲು ಸಂಚಾರಿ ಪೊಲೀಸರು ಹರಸಾಹಸ ಪಟ್ಟರು. ಹೆಬ್ಬಾಳ ಸಂಪರ್ಕ ಕಲ್ಪಿಸುವ ಅಕ್ಕಪಕ್ಕದ ರಸ್ತೆಗಳು, ವಸಂತನಗರ, ರೈಲ್ವೆ ಪ್ಯಾರಲಲ್ ರಸ್ತೆ, ಪ್ಯಾಲೇಸ್ ಗುಟ್ಟಳ್ಳಿ ಸೇರಿದಂತೆ ಸುತ್ತಮುತ್ತ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಸಿಲಿಕಾನ್ ಸಿಟಿಯಲ್ಲಿ ಮಳೆಗೆ ಮರವೊಂದ ಧರೆಗುರುಳಿದೆ. ಸಂಜಯ್ ನಗರದಲ್ಲಿ ಕಾರಿನ ಮೇಲೆ ಬೃಹತ್ ಮರ ಬಿದ್ದಿದೆ. ಮರ ಉರುಳಿ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿತ್ತು. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇತ್ತ ದೊಡ್ಡಬಳ್ಳಾಪುರದಲ್ಲೂ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ರಸ್ತೆಯ ಮೇಲೆ ನೀರು ತುಂಬಿ ಹರಿದಿತ್ತು. ದೊಡ್ಡಬಳ್ಳಾಪುರದ ತಾಲೂಕು ಕಚೇರಿ, ತೇರಿನ ಬೀದಿ ಸರ್ಕಲ್ ಬಳಿ ವಾಹನ ಸವಾರರು ಪರದಾಡಿದರು. ಒಂದು ಅಡಿಗೂ‌ ಹೆಚ್ಚು ನೀರು ನಿಂತು, ಜತೆಗೆ ಚರಂಡಿ ನೀರೆಲ್ಲಾ ತುಂಬಿ ರಸ್ತೆಯ ಮೇಲೆ ಹರಿದಿತ್ತು. ತಾಲೂಕು ಕಚೇರಿಯ ಮುಂದೆಯೇ ರಸ್ತೆ ಅವ್ಯವಸ್ಥೆಗೊಂಡಿತ್ತು. ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಪರದಾಡಿದರು.

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ರಸ್ತೆಗಳು ನದಿಯಂತಾಗಿತ್ತು. ಬಾಳೆಹೊನ್ನೂರು-ಕಳಸ- ಕೊಟ್ಟಿಗೆಹಾರ ಸಂಪರ್ಕ ಕಡಿತಗೊಂಡಿತ್ತು. ಎನ್ ಆರ್ ಪುರ ತಾಲೂಕಿನ ಬನ್ನೂರು ಬಳಿ ರಸ್ತೆ ಮುಳುಗಡೆಯಾಗಿದೆ. ರಸ್ತೆಯ ಮೇಲೆ ರಭಸವಾಗಿ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋ ಮೀಟರ್ ಗಟ್ಟಲೆ ವಾಹನಗಳು ನಿಂತಲ್ಲೇ ನಿಂತಿವೆ.ವಿಜಯಪುರದ ನಾಲತವಾಡನಲ್ಲಿ ಭಾರಿ ಮಳೆಗೆ ಸಾರ್ವಜನಿಕರು, ಗ್ರಾಹಕರು ಪರದಾಡಿದರು. ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಮಾರ್ಕೆಟ್‌ಗೆ ಚರಂಡಿ ನೀರು ನುಗ್ಗಿತ್ತು.

ಇದನ್ನೂ ಓದಿ: Namma Metro : ನಾಳೆಯಿಂದ ಸೆಪ್ಟೆಂಬರ್‌ 11ರವರೆಗೂ ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ಮೆಟ್ರೋ ಓಡಾಟ ಬಂದ್‌!

ಬಾಗಲಕೋಟೆಯಲ್ಲಿ ಅಬ್ಬರಿಸಿದ ಮಳೆ

ತಡರಾತ್ರಿ ಬಾಗಲಕೋಟೆಯ ರಬಕವಿ ಬನಹಟ್ಟಿ ನಗರದಲ್ಲಿ ಮಳೆಯು ಅಬ್ಬರಿಸಿದೆ. ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದ್ದು, ಇಡೀ ಬನಹಟ್ಟಿ ನಗರ ನದಿಯಂತೆ ಕಂಡು ಬಂತು. ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ನಿದ್ದೆಗೆಟ್ಟು ಬಕೆಟ್ ಮೂಲಕ ನೀರು ಹೊರ ಹಾಕಿದರು. ಬ್ಯಾರೆಲ್, ಮನೆ ಮುಂಭಾಗದ ಬೈಕ್‌ಗಳು ಜಲಾವೃತಗೊಂಡಿದ್ದವು. 1 ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಬನಹಟ್ಟಿ ಜನರು ತತ್ತರಿಸಿ ಹೋಗಿದ್ದರು.

ಚಿಕ್ಕಮಗಳೂರಿನಲ್ಲಿ ನಿಲ್ಲದ ಮಳೆ ಅವಾಂತರ

ರಾತ್ರಿ ಸುರಿದ ಮಳೆಗೆ ಕೆರೆಯ ಏರಿ ಒಡೆದು ಜಮೀನಿಗೆ ನೀರು ನುಗ್ಗಿದ್ದರಿಂದ ಸುಮಾರು 30 ಎಕರೆ ಬೆಳೆ ನಾಶವಾಗಿದೆ. ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಜೋಳ, ರಾಗಿ ಸೇರಿದಂತೆ ಹಲವು ಬೆಳೆಗಳು ಕೊಚ್ಚಿ ಹೋಗಿವೆ. ಕೂಡಲೇ ಏರಿ ದುರಸ್ತಿ ಮಾಡಿ ನೀರು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಇತ್ತ ಚಿಕ್ಕಮಗಳೂರು ನಗರದ ಕಲ್ಲು ದೊಡ್ಡಿ ಬಡಾವಣೆಯ ಹಲವು ಮನೆಗಳಿಗೆ ನೀರು ನುಗ್ಗಿ ಪರದಾಟ ಅನುಭವಿಸಿದರು. ರಸ್ತೆ ನೀರು ಹಳ್ಳದಂತೆ ಮನೆಗೆ ನುಗ್ಗಿತ್ತು. ನೀರು ಹೊರ ಹಾಕಲಾಗದೆ ಜನರು ಪರದಾಡಿದರು. ಮನೆಯಲ್ಲಿದ್ದ ಆಹಾರ ಪದಾರ್ಥ ಹಾಗೂ ವಸ್ತುಗಳು ಹಾನಿಯಾಗಿದ್ದವು. ನಗರ ಸಭೆ ವಿರುದ್ಧ ಸ್ಥಳೀಯ ನಾಗರಿಕರು ಇಡಿ ಶಾಪ ಹಾಕಿದ್ದರು.

ಆಗಸ್ಟ್‌ 23ರವರಗೆ ಭಾರಿ ಮಳೆ ಎಚ್ಚರ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ (ಆ.19) ಆಗಸ್ಟ್ 23ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಅರಬ್ಬೀ ಸಮುದ್ರದ ಕರಾವಳಿ ಪ್ರದೇಶದಿಂದ ಮಾಲ್ಡಿವ್ಸ್ ದ್ವೀಪದವರೆಗೆ 1.5 ಮತ್ತು 1.8ಕಿ.ಮೀ ಟ್ರಪ್ ಎದ್ದಿದೆ. ಹೀಗಾಗಿ ಆಗಸ್ಟ್ 19 ರಿಂದ 23 ರ ವರೆಗೆ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಆಗಸ್ಟ್ 19 ಮತ್ತು 20 ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23 ರ ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು, ದಾವಣಗೆರೆ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಕೋಲಾರ್, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

Karnataka Weather Forecast
Karnataka Weather Forecast

ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

ಗುಡುಗು ಸಹಿತ ಮಳೆ

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಎಫೆಕ್ಟ್‌; ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ 20ಕ್ಕೂ ಹೆಚ್ಚು ಕುರಿಗಳು

Karnataka Weather Forecast : ಶನಿವಾರ ರಾತ್ರಿ ಸುರಿದ ಮಳೆಯು ಹಲವೆಡೆ ಅವಾಂತರವನ್ನೇ ಸೃಷ್ಟಿಸಿದೆ. ಭಾರಿ ಮಳೆಗೆ (Rain News) ಬೆಳೆಗಳು ಜಲಾವೃತಗೊಂಡು ರೈತರು ಕಂಗಲಾಗಿದ್ದಾರೆ.

VISTARANEWS.COM


on

By

Karnataka weather Forecast
Koo

ಯಾದಗಿರಿ ಜಿಲ್ಲೆಯಾದ್ಯಂತ ನಿನ್ನೆ ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ (Rain News) ಬೂದನೂರಿನ ಹಿರೇಹಳ್ಳ ತುಂಬಿ ಹರಿಯುತ್ತಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ 20ಕ್ಕೂ ಹೆಚ್ಚು ಕುರಿಗಳು ಕೊಚ್ಚಿ ಹೋಗಿವೆ. ಇತ್ತ ಹಿರೇಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ 50 ಕುರಿಗಳ ರಕ್ಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬೂದನೂರಿನ ಹಿರೇಹಳ್ಳದಲ್ಲಿ ಘಟನೆ (Karnataka Weather Forecast) ನಡೆದಿದೆ. ಬೂದನೂರ ಗ್ರಾಮದ ಸಾಮಯ್ಯ ಎಂಬ ಕುರುಗಾಯಿಗೆ ಸೇರಿದ್ದ ಕುರಿಗಳನ್ನು ಸಂಜೆ ಎಂದಿನಂತೆ ಹಳ್ಳ ದಾಟಿ ಬರುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಗ್ರಾಮಸ್ಥರ ಸಹಾಯದಿಂದ 50 ಕ್ಕೂ ಹೆಚ್ಚು ಕುರಿಗಳ ರಕ್ಷಣೆ ಮಾಡಲಾಗಿದೆ. 20 ಕ್ಕೂ ಹೆಚ್ಚು ಕುರಿಗಳು ಹಿರೇಹಳ್ಳದ ನೀರು ಪಾಲಾಗಿವೆ.

ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸುತ್ತಮುತ್ತ ಭಾನುವಾರ ಅರ್ಧ ಗಂಟೆಗೂ ಹೆಚ್ಚು ಸಮಯ ಧಾರಾಕಾರ ಮಳೆಯಾಗಿದೆ. ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಮಳೆ ಆರ್ಭಟ ಜೋರಾಗಿತ್ತು. ಮಳೆಗೆ ರಸ್ತೆ ಹಾಗೂ ಚರಂಡಿಗಳ ಮೇಲೆ ನೀರು ಹರಿದು ಮನೆಗಳತ್ತ ತೆರಳಲು ಜನರು ಪರದಾಡಿದ್ದರು. ರಾಜಧಾನಿ ಬೆಂಗಳೂರಿನ ಸುತ್ತಮುತ್ತಲೂ ಮಳೆಯಾಗಿದೆ.

ಚಿಕ್ಕಬಳ್ಳಾಪುರದಲಿ ಬಾಳೆ ತೋಟ ನಾಶ

ಇಡೀ ರಾತ್ರಿ ಸುರಿದ ಭಾರಿ ಮಳೆಗೆ ಬಾಳೆ ತೋಟ ನಾಶವಾಗಿದೆ. ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು ಹತ್ತು ಲಕ್ಷ ಬೆಲೆ ಬಾಳುವ 2500 ಬಾಳೆ ಗಿಡಗಳು ನಾಶವಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಬೀಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹನುಮಂತರಾಯಪ್ಪ ಎಂಬ ರೈತನಿಗೆ ಸೇರಿದ ಬಾಳೆ ತೋಟ ಫಸಲಿಗೆ ಬಂದಿದ್ದ ಬೆಳೆ ನೆಲಕಚ್ಚಿದೆ. ಇತ್ತ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಮೇಲೂರು ಗ್ರಾಮ ದೇವತೆ ಗಂಗಾದೇವಿ ದೇವಸ್ಥಾನ ಜಲಾವೃತಗೊಂಡಿದೆ. ಮನೆಗಳಿಗೆ ಹಾಗೂ ದೇವಸ್ಥಾನಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಅಧಿಕಾರಿಗಳಿಗೆ ಜನರು ಹಿಡಿಶಾಪ ಹಾಕಿದ್ದಾರೆ.

ತುಮಕೂರಿನಲ್ಲಿ ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

ತುಮಕೂರು ಜಿಲ್ಲೆಯ ಹಲವೆಡೆ ತಡರಾತ್ರಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಕ್ಕೆ ನೀರು ನುಗ್ಗಿ ರಸ್ತೆಗಳು ಜಲಾವೃತಗೊಂಡಿದೆ. ತುಮಕೂರು ನಗರ, ಗುಬ್ಬಿ, ಕುಣಿಗಲ್ ತಾಲೂಕಿನಲ್ಲಿ ಮಳೆಯಾಗಿದೆ. ತುಮಕೂರು ನಗರದ ಬನಶಂಕರಿಯಲ್ಲಿ ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರ ಪರದಾಟಬೇಕಾಯಿತು. ಹಲವಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ವಿಜಯಪುರದಲ್ಲಿ ಜಮೀನು ಜಲಾವೃತ

ಕಾಲುವೆಗೆ ನೀರು ಬಿಟ್ಟಿದ್ದರಿಂದ ಭೂಮಿಯ ಬದು ಒಡೆದು ಜಮೀನಿಗೆ ನೀರು ನುಗ್ಗಿದೆ. ಕಾಲುವೆ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರೈತರು ಬೆಳೆದ ಮುಂಗಾರು ಬೆಳೆಗಳಾದ ತೊಗರಿ, ಮೆಕ್ಕೆಜೋಳ ಸಂಪೂರ್ಣ ಜಲಾವೃತಗೊಂಡಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೊಟ್ಯಾಳ ಗ್ರಾಮದ ರೈತರ ಗೋಳು ಕೇಳುವವರು ಇಲ್ಲದಂತಾಗಿದೆ. ನೂರಾರು ಎಕರೆದಲ್ಲಿ ಬೆಳೆದ ಬೆಳೆ ಸಂಪೂರ್ಣಹಾನಿಯಾಗಿದೆ. ಕೂಡಲೇ ಕಾಲುವೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಜತೆಗೆ ನಾಶವಾದ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಮಳೆಗೆ ಧರೆಗುರುಳಿದ ಮರಗಳು

ನಿನ್ನೆ ಶನಿವಾರ ಸುರಿದ ಗಾಳಿ ಮಳೆಗೆ ಅಡಿಕೆ ಹಾಗೂ ತೆಂಗಿನ ಮರಗಳು ಧರೆಗುರುಳಿವೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಾಸಡಿ ಗ್ರಾಮ ಒಂದರಲ್ಲೇ 3 ಸಾವಿರಕ್ಕೂ ಅಧಿಕ ಅಡಿಕೆ ಮರ 200ಕ್ಕೂ ಅಧಿಕ ತೆಂಗಿನ ಮರಗಳು ಉರುಳಿ ಬಿದ್ದಿವೆ. ಫಲಕ್ಕೆ ಬಂದ ಅಡಿಕೆ ಮರ ಕಳೆದುಕೊಂಡ ರೈತರು ಗೋಳಾಡುತ್ತಿದ್ದಾರೆ. 16 ವರ್ಷಗಳ ಕಾಲ ಮಕ್ಕಳಂತೆ ಸಾಕಿದ್ದ ಅಡಿಕೆ ಮರ ಧರೆಗುರುಳಿದ್ದನ್ನು ಕಂಡು ರೈತರು ಕಣ್ಣೀರು ಹಾಕುತ್ತಿದ್ದಾರೆ. ರೈತರೂಂದಿಗೆ ಮಾಜಿ ಸಚಿವ ರೇಣುಕಾಚಾರ್ಯ ಬೆಳೆ ಹಾನಿ ತೋಟಗಳಿಗೆ ಭೇಟಿ ನೀಡಿದರು. ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು. ಬೆಳೆ ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ: POCSO Case: ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ಆಸೆ ತೋರಿಸಿ ಅತ್ಯಾಚಾರವೆಸಗಿದ ಕಾಮುಕ

ನಾಳೆ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಆ.19ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಇನ್ನೂ ದಕ್ಷಿಣ ಒಳನಾಡಿನ ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
EV charging
ಕರ್ನಾಟಕ2 seconds ago

EV Charging: ಕರ್ನಾಟಕವೇ ಕಿಂಗ್;‌ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ!

What is Lateral Entry?
ದೇಶ2 mins ago

What is Lateral Entry?: ಏನಿದು ಲ್ಯಾಟರಲ್ ಎಂಟ್ರಿ ವಿವಾದ? ಕಾಂಗ್ರೆಸ್‌ ಆರೋಪವೇನು? ಬಿಜೆಪಿಯ ವಾದವೇನು?

T20 World Cup
ಕ್ರಿಕೆಟ್6 mins ago

T20 World Cup: ಟಿ20 ವಿಶ್ವಕಪ್​ನ 3 ಪಿಚ್​ಗಳಿಗೆ ಕಳಪೆ ರೇಟಿಂಗ್​ ಕೊಟ್ಟ ಐಸಿಸಿ

Toyota Kirloskar Motor
ರಾಮನಗರ25 mins ago

Toyota Kirloskar Motor: ರಾಮನಗರ ಜಿಲ್ಲೆಯಲ್ಲಿ 3 ಹೊಸ ನೀರು ಶುದ್ಧೀಕರಣ ಘಟಕ ಸ್ಥಾಪಿಸಿದ ಟಿಕೆಎಂ

World Senior Citizens Day
ಬೆಂಗಳೂರು26 mins ago

World Senior Citizens Day: ವಿಶ್ವ ಹಿರಿಯ ನಾಗರಿಕರ ದಿನದ ಪ್ರಯುಕ್ತ ವೈದ್ಯರಿಂದ ಉಚಿತ ಸಮಾಲೋಚನೆ

KHIR City Project
ಬೆಂಗಳೂರು28 mins ago

KHIR City Project: ಬೆಂಗಳೂರಿನಲ್ಲಿ ನಾಲೆಜ್‌-ಹೆಲ್ತ್‌ ಸಿಟಿ ಮೊದಲ ಹಂತದ ಯೋಜನೆಗೆ ಸದ್ಯದಲ್ಲೇ ಚಾಲನೆ: ಎಂ.ಬಿ. ಪಾಟೀಲ

D Devaraja Arasu birth Anniversary
ಬೆಂಗಳೂರು33 mins ago

D Devaraja Arasu birth Anniversary: ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರ; ಸಿದ್ದರಾಮಯ್ಯ ಆರೋಪ

ICC Women’s T20 World Cup
ಕ್ರಿಕೆಟ್1 hour ago

ICC Women’s T20 World Cup: ಯುಎಇಗೆ ಸ್ಥಳಾಂತರಗೊಂಡ ಮಹಿಳಾ ಟಿ20 ವಿಶ್ವಕಪ್

Kailash Vijayvargiya
ಪ್ರಮುಖ ಸುದ್ದಿ1 hour ago

Kailash Vijayvargiya: 30 ವರ್ಷದಲ್ಲಿ ದೇಶದೊಳಗೆ ಅಂತರ್ಯುದ್ಧ, ಹಿಂದೂಗಳು ಬದುಕುವುದೇ ಕಷ್ಟ: ಕೈಲಾಶ್‌ ವಿಜಯ್‌ವರ್ಗೀಯ

Murder Case
ಕರ್ನಾಟಕ1 hour ago

Murder Case: ಬೆಳ್ತಂಗಡಿ ಬಳಿ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌