D Devaraja Arasu birth Anniversary: ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರ; ಸಿದ್ದರಾಮಯ್ಯ ಆರೋಪ - Vistara News

ಬೆಂಗಳೂರು

D Devaraja Arasu birth Anniversary: ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರ; ಸಿದ್ದರಾಮಯ್ಯ ಆರೋಪ

ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರಗಳು ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. (D Devaraja Arasu Birth Anniversary) ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿ ಪಟ್ಟಭದ್ರರು ಇದನ್ನು ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

VISTARANEWS.COM


on

D Devaraja Arasu birth Anniversary
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಮಾಜದಲ್ಲಿ ಬಡತನ ಮತ್ತು ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. (D Devaraja Arasu birth Anniversary) ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಮೇಲು ಕೀಳು ಇರಬಾರದು. ಬಡವ ಬಲ್ಲಿದ ಇರಬಾರದು. ಜಾತಿ ವ್ಯವಸ್ಥೆ ಇರಬಾರದು, ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬದುಕಬೇಕು ಎಂಬುವುದೇ ಬಸವಾದಿ ಶರಣರ ಕನಸು. ಇದೇ ತತ್ವದ ಆಧಾರದ ಮೇಲೆ ಅಂಬೇಡ್ಕರ್‌ ಅವರು ಸಂವಿಧಾನ ರಚಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಹ ಈ ತತ್ವ ಸಿದ್ದಾಂತಗಳ ಆಧಾರದಲ್ಲಿ ಆಡಳಿತ ನಡೆಸಿ, ರಾಜ್ಯದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು.

ಇದನ್ನೂ ಓದಿ: CM Siddaramaiah: ಹೊಟ್ಟೆಕಿಚ್ಚಿನಿಂದಾಗಿ ಬಿಜೆಪಿಯವರಿಂದ ನನ್ನ ವಿರುದ್ಧ ಸುಳ್ಳು ಆರೋಪ; ಸಿದ್ದರಾಮಯ್ಯ

ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ ಕಾಳಜಿ ಹೊಂದಿದ್ದರು ಎಂದು ತಿಳಿಸಿದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲು ನಮ್ಮ ಸಂವಿಧಾನ ಒತ್ತು ನೀಡಿದೆ. ಇದೇ ಹಾದಿಯಲ್ಲಿ ಸಂವಿಧಾನಕ್ಕೆ ಬದ್ಧವಾಗಿ ನಾವು ಆಡಳಿತ ನಡೆಸುತ್ತಿದ್ದೇವೆ. ನೆಹರು ಕಾಲದಿಂದ ಇಂದಿನವರೆಗೂ ಅಸಮಾನನತೆಯ ಸಮಾಜವನ್ನು ತೊಡೆದು ಸಮ ಸಮಾಜ ನಿರ್ಮಾಣಕ್ಕಾಗಿ ನಿರಂತರವಾಗಿ ಪ್ರಯತ್ನಗಳನ್ನು ನಡೆಸಲಾಗಿದೆ ಎಂದರು.

ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಇನ್ನೂ ನಮ್ಮಲ್ಲಿ ಸಾಮಾಜಿಕ ಸಮಾನತೆ ಸಾಧ್ಯವಾಗಿಲ್ಲ. ಸಮಾನವಾಗಿ ಸಂಪತ್ತು ಹಂಚಿಕೆ ನಮಗೆ ಸಾಧ್ಯವಾಗಿಲ್ಲ. ವ್ಯಕ್ತಿಯನ್ನು ಜಾತಿ ಆಧಾರದಲ್ಲಿ ಗುರುತಿಸುವಂತಹ ವ್ಯವಸ್ಥೆ ಇನ್ನೂ ನಮ್ಮಲ್ಲಿ ಇದೆ. ಜನರನ್ನು ಅವರ ಪ್ರತಿಭೆ ಮೇಲೆ, ವ್ಯಕ್ತಿತ್ವದ ಮೇಲೆ ಗುರುತಿಸದೆ ಜಾತಿ ಆಧಾರದಲ್ಲಿ ಗುರುತಿಸಲಾಗುತ್ತಿದೆ. ಆದರೆ ಯಾರೂ ಕೂಡಾ ಜಾತಿ ಆಧಾರದಲ್ಲಿ ಸಮಾಜದಲ್ಲಿ ಪ್ರತಿಭಾವಂತ ಆಗಲು ಸಾಧ್ಯವಿಲ್ಲ. ಸರಿಯಾದ ಅವಕಾಶಗಳು ಸಿಕ್ಕಿದರೆ ಮಾತ್ರ ಪ್ರತಿಭಾವಂತ ಆಗಲು ಸಾಧ್ಯ. ಬಸವಾದಿ ಶರಣರು 800 ವರ್ಷಗಳ ಹಿಂದೆಯೇ ಸಮಾನತೆಗಾಗಿ ಸಾಮಾಜಿಕ ಕ್ರಾಂತಿಯನ್ನು ಮಾಡಿದರು. ಆದರೆ ಸಂಪೂರ್ಣ ಸಮ ಸಮಾಜ ನಿರ್ಮಾಣ ಇನ್ನೂ ಸಾಧ್ಯವಾಗಿಲ್ಲ ಎಂದರು.

ಇದನ್ನೂ ಓದಿ: Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ಪ್ರತಿಯೊಬ್ಬರಿಗೂ ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕದರೆ ಮಾತ್ರ ಜಾತಿ ವ್ಯವಸ್ಥೆ ಹೋಗಬಹುದು. ಇದಕ್ಕಾಗಿಯೇ ಅರಸು ಅವರು ದಲಿತರು, ಮಹಿಳೆಯರು, ರೈತರು, ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು ನೀಡಿದರು. ಮಲ ಹೊರುವ ಪದ್ಧತಿ ಸೇರಿದಂತೆ ಅನೇಕ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಿದರು. ಎಲ್ಲರಿಗೂ ಸಮಾನ ಅವಕಾಶ ಸಿಗಲು ಹಾವನೂರು ಅವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗದ ಆಯೋಗ ರಚನೆ ಮಾಡಿ, ಎಷ್ಟೇ ವಿರೋಧ ಇದ್ದರೂ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಿದರು. ಇದರಿಂದ ಹಿಂದುಳಿದ ವರ್ಗದವರಿಗೆ ಶಿಕ್ಷಣದಲ್ಲಿ ಮೀಸಲಾತಿ ಸಾಧ್ಯವಾಯಿತು. ತಳ ಸಮುದಾಯದವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲಗೊಳಿಸಲು ಎಷ್ಟೇ ವಿರೋಧ ಇದ್ದರೂ, ಜಾರಿಗೊಳಿಸಿದರು. ಹಿಂದುಳಿದವರಿಗೆ ಶೇ.38 ರಷ್ಟು ಮೀಸಲಾತಿ ಸಿಕ್ಕಿದ್ದರೆ ಅದಕ್ಕೆ ಅರಸು ಅವರೇ ಕಾರಣ ಎಂದು ತಿಳಿಸಿದರು.

ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರಗಳು ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿ ಪಟ್ಟಭದ್ರರು ಇದನ್ನು ವಿರೋಧಿಸುತ್ತಿದ್ದಾರೆ. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ನಾವು ಜಾತಿ ಗಣತಿ ಮಾಡಿದ್ದೇವೆ. ಜಾತಿ ಗಣತಿ ಮಾಡದೆ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಿಲ್ಲ. ಸಾಮಾಜಿಕ ನ್ಯಾಯ ಒದಗಿಸಲು ನಾವು ನಡೆಸುತ್ತಿರುವ ಪ್ರಯತ್ನಗಳಿಂದ ಹತಾಶರಾಗಿ ನನ್ನನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ಮಾಡುತ್ತಿದಾರೆ ಎಂದು ಆರೋಪಿಸಿದರು.

ನಾನು 1984ರಲ್ಲಿ ಮೊದಲ ಬಾರಿಗೆ ಮಂತ್ರಿಯಾದ ಬಳಿಕ ಕಳೆದ 40 ವರ್ಷಗಳಲ್ಲಿ ಇಂದಿನವರೆಗೆ ನನ್ನ ಜೀವನದಲ್ಲಿ ಯಾವುದೇ ಕಳಂಕವಿಲ್ಲ. ನಾನು ಯಾವುದೇ ತಪ್ಪು ಮಾಡದಿದ್ದರೂ ಈಗ ಕಪ್ಪು ಮಸಿ ಬಳಿಯಲು ನಿರಂತರ ಪ್ರಯತ್ನ ನಡೆಯುತ್ತಿದೆ. ಅಧಿಕಾರ ಇದ್ದರೂ, ಇಲ್ಲದಿದ್ದರೂ, ಸಾಮಾಜಿಕ ನ್ಯಾಯದ ವಿಷಯದಲ್ಲಿ, ನಂಬಿರುವ ಸಿದ್ಧಾಂತಗಳ ಕುರಿತು ಯಾವತ್ತೂ ರಾಜಿ ಮಾಡುವುದಿಲ್ಲ ಎಂದರು.

ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಖರ್ಚು ಮಾಡಲು ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಗೆ ತಿದ್ದುಪಡಿ ತಂದದ್ದು ನಮ್ಮ ಸರ್ಕಾರ. ಕೇಂದ್ರದಲ್ಲಿ ಈ ರೀತಿಯ ಕಾಯ್ದೆಯನ್ನು ಜಾರಿಗೆ ತರದೇ ಇಲ್ಲಿ ಅನುಷ್ಠಾನದ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ. ಈ ರೀತಿ ಟೀಕಿಸಲು ಅವರಿಗೆ ಯಾವುದೇ ನೈತಿಕ ಹಕ್ಕು ಇಲ್ಲ ಎಂದು ಸಿಎಂ ಹೇಳಿದರು.

ಇದನ್ನೂ ಓದಿ: KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಎಲೆಕ್ಟ್ರಾನಿಕ್‌ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ ಎಂದು ನಾಮಕರಣ ಮಾಡಲಾಗುವುದು. ಕರ್ನಾಟಕ ಏಕೀಕರಣ 1956 ನವಂಬರ್‌ 1 ರಂದೇ ಆಗಿದ್ದರೂ, 1973 ರಲ್ಲಿ ದೇವರಾಜ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿದರು. ಈ ಹಿನ್ನೆಲೆಯಲ್ಲಿಯೇ ನಾವು ಕರ್ನಾಟಕ ಸಂಭ್ರಮ ವರ್ಷಾಚರಣೆ ನಡೆಸುತ್ತಿದ್ದು, ನವೆಂಬರ್‌ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಕನ್ನಡ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧ ಮುಂಭಾಗದಲ್ಲಿ ನವೆಂಬರ್‌ 1 ರಂದು ಅನಾವರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Brahmashri Narayanaguru Jayanti: ಸಮ ಸಮಾಜದ ನಿರ್ಮಾಣ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ

ನಾರಾಯಣ ಗುರು (Brahmashri Narayanaguru Jayanti) ಅವರು ಈಡಿಗ ಜನಾಂಗದಲ್ಲಿ ಜನಿಸಿದ್ದರೂ, ಯಾವುದೇ ಧರ್ಮ, ಜಾತಿ, ಭಾಷೆಗೆ ಸೀಮಿತರಾಗಿದ್ದವರಲ್ಲ. ಅವರು ಬುದ್ಧ, ಬಸವ, ಕನಕದಾಸ ರೀತಿಯ ಸಂತರು. ಸಮಾಜದಲ್ಲಿ ಸುಧಾರಣೆ ಬಯಸಿ ಅದಕ್ಕಾಗಿ ಜೀವನವನ್ನು ಮುಡಿಪಾಗಿಟ್ಟವರು. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Brahmashri Narayanguru Jayanti
Koo

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಅವರು (Brahmashri Narayanaguru Jayanti) ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮ ಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ರವೀಂದ್ರಕಲಾ ಕ್ಷೇತ್ರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಸಮಾಜದಲ್ಲಿರುವ ಅಸಮಾನತೆಯನ್ನು ನಿವಾರಿಸಿ, ಸಾಮಾಜಿಕ ನ್ಯಾಯದ ಪರವಾದ ಸಮಾಜ ನಿರ್ಮಾಣಕ್ಕೆ ನಾವು ಬದ್ದರಾಗಿದ್ದೇವೆ. ಮನುಷ್ಯರಲ್ಲಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ನಾರಾಯಣ ಗುರುಗಳು ಹೇಳಿದರು. ಅದರಂತೆ ಪ್ರತಿಯೊಬ್ಬರೂ ಅನುಸರಿಸಿ ಬಾಳಲು ಪ್ರಯತ್ನಿಸಬೇಕು ಎಂದು ಅವರು ಕರೆ ನೀಡಿದರು.

ಇದನ್ನೂ ಓದಿ: World Senior Citizens Day: ವಿಶ್ವ ಹಿರಿಯ ನಾಗರಿಕರ ದಿನದ ಪ್ರಯುಕ್ತ ವೈದ್ಯರಿಂದ ಉಚಿತ ಸಮಾಲೋಚನೆ

ನಾರಾಯಣ ಗುರು ಅವರು ಈಡಿಗ ಜನಾಂಗದಲ್ಲಿ ಜನಿಸಿದ್ದರೂ, ಯಾವುದೇ ಧರ್ಮ, ಜಾತಿ, ಭಾಷೆಗೆ ಸೀಮಿತರಾಗಿದ್ದವರಲ್ಲ. ಅವರು ಬುದ್ಧ, ಬಸವ, ಕನಕದಾಸ ರೀತಿಯ ಸಂತರು. ಸಮಾಜದಲ್ಲಿ ಸುಧಾರಣೆ ಬಯಸಿ ಅದಕ್ಕಾಗಿ ಜೀವನವನ್ನು ಮುಡಿಪಾಗಿಟ್ಟವರು. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಗುತ್ತಿದೆ ಎಂದರು.

ಎಷ್ಟೆ ಕಷ್ಟ ಬಂದರೂ ನಾವು ನಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಇದುವೇ ನಾರಾಯಣ ಗುರುವಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದು ತಿಳಿಸಿದರು.

ಶೂದ್ರರಿಗೆ ದೇವಾಲಯ ಪ್ರವೇಶ ನಿರಾಕರಿಸಿದ ಸಂದರ್ಭದಲ್ಲಿ ಅದರ ವಿರುದ್ಧ ಸಂಘರ್ಷಕ್ಕಿಳಿಯದೆ, ನಾರಾಯಣ ಗುರು ಅವರು ಅವರದ್ದೇ ಆದ ದೇವಾಲಯ ನಿರ್ಮಿಸಲು ಹಾಗೂ ಅರ್ಚಕರನ್ನು ನೇಮಿಸಲು ಕರೆ ನೀಡಿದರು. ಈ ರೀತಿ ಕೇರಳದಲ್ಲಿ 60ಕ್ಕೂ ಅಧಿಕ ದೇವಾಲಯ ಕಟ್ಟಿದರು. ಕರಾವಳಿಯಲ್ಲೂ ದೇವಾಲಯಗಳನ್ನು ನಿರ್ಮಿಸಿದರು. ಪ್ರವೇಶ ನಿರಾಕರಿಸುವ ದೇವಾಲಯಗಳಿಗೆ ಹೋಗಲೇ ಬೇಡಿ ಎಂದು ಹೇಳಿ ಸರಳವಾಗಿ ಜನರಿಗೆ ಅರ್ಥವಾಗುವ ರೀತಿಯಲ್ಲಿ ಧರ್ಮವನ್ನು ಪ್ರತಿಪಾದಿಸಿದರು.

ಇದನ್ನೂ ಓದಿ: Toyota Kirloskar Motor: ರಾಮನಗರ ಜಿಲ್ಲೆಯಲ್ಲಿ 3 ಹೊಸ ನೀರು ಶುದ್ಧೀಕರಣ ಘಟಕ ಸ್ಥಾಪಿಸಿದ ಟಿಕೆಎಂ

ನಾರಾಯಣ ಗುರುಗಳು ಮೌಢ್ಯ, ಕಂದಾಚಾರಗಳ ವಿರುದ್ಧ ಬಸವಾದಿ ಶರಣರ ರೀತಿಯಲ್ಲಿ ಜಾಗೃತಿ ಮೂಡಿಸಿದರು. ಇಂದು ನಾವು ವಿದ್ಯಾವಂತರಾದರೂ ಮೌಢ್ಯಗಳನ್ನು ಬಿಟ್ಟಿಲ್ಲ. ವೈಜ್ಞಾನಿಕತೆ, ವೈಚಾರಿಕತೆ ಬೆಳೆಸಲು ಪ್ರಯತ್ನವೇ ಮಾಡಿಲ್ಲ. ಏನಾದರೂ ಕಷ್ಟ ಬಂದ ತಕ್ಷಣ ಮೌಢ್ಯಗಳಿಗೆ ಶರಣಾಗುತ್ತೇವೆ. ತಮ್ಮ ಸಂಕಷ್ಟಗಳಿಗೂ ಕರ್ಮ ಸಿದ್ದಾಂತದ ಕಾರಣ ಹೇಳುತ್ತೇವೆ. ಸಂಕಷ್ಟ ಬಂದಾಗ ಹಣೆಯಲ್ಲಿ ಬರೆದದ್ದು, ಹಿಂದಿನ ಜನ್ಮದ ಕರ್ಮ ಎಂದು ಹೇಳುವುದು ಸರಿಯಲ್ಲ. ಅದೆಲ್ಲಾ ಸುಳ್ಳು. ಮೌಢ್ಯ, ಗೊಡ್ಡು ಸಂಪ್ರದಾಯ, ಕಂದಾಚಾರಗಳನ್ನು ನಂಬಬೇಡಿ. ನಾರಾಯಾಣ ಗುರು, ಬಸವಣ್ಣ ಹೇಳಿದ ರೀತಿ ನಡೆಯಿರಿ. ಕರ್ಮ ಸಿದ್ಧಾಂತದ ವಿರುದ್ಧ ಬಸವಾದಿ ಶರಣರೂ ಬೋಧನೆ ಮಾಡಿದರು. ಆದ್ದರಿಂದಲೇ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ನಾವು ಘೋಷಿಸಿದ್ದೇವೆ.

ಕುವೆಂಪು ಅವರು, ಹುಟ್ಟುತ್ತಾ ಪ್ರತಿ ಮಗು ಕೂಡಾ ವಿಶ್ವ ಮಾನವರಾಗಿ ಹುಟ್ಟುತ್ತಾರೆ. ಆದರೆ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ. ಆದರೆ ಹಾಗೆ ಆಗಬಾರದು. ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Reliance Jio: ಜಿಯೋ ಟಿವಿ ಪ್ಲಸ್ 2 ಇನ್ 1 ಆಫರ್; ಒಂದೇ ಸಂಪರ್ಕದಲ್ಲಿ ನೋಡಿ ಎರಡು ಟಿವಿ!

ಈಡಿಗರ ಸಂಘದ ಆವರಣದಲ್ಲಿರುವ ವಿದ್ಯಾರ್ಥಿ ನಿಲಯ ಶಿಥಿಲವಾಗಿದ್ದು, ಅದರ ನವೀಕರಣಕ್ಕೆ ಅನುದಾನ ಒದಗಿಸಲಾಗುವುದು. ಈಡಿಗರ ಸಮುದಾಯ ಭವನಕ್ಕೂ ಅನುದಾನ ನೀಡಲಾಗುವುದು. ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದರು.

Continue Reading

ಬೆಂಗಳೂರು

Agritech India 2024: ಬೆಂಗಳೂರಿನಲ್ಲಿ ʼಅಗ್ರಿಟೆಕ್ ಇಂಡಿಯಾ 2024ʼಕ್ಕೆ ಆ. 22ರಂದು ಚಾಲನೆ

ದೇಶದ ಅತಿದೊಡ್ಡ ಕೃಷಿ ಮತ್ತು ಆಹಾರ ಉದ್ಯಮ ಮೇಳ ʼಅಗ್ರಿಟೆಕ್ ಇಂಡಿಯಾ 2024ʼ (Agritech India 2024) ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಗುರುವಾರ ಆರಂಭಗೊಳ್ಳಲಿದ್ದು, 3 ದಿನಗಳ ಕಾಲ ನಡೆಯಲಿರುವ ಈ ಬೃಹತ್ ಮೇಳವು ಆಗಸ್ಟ್‌ ‌22ರಂದು ಉದ್ಘಾಟನೆಗೊಳ್ಳಲಿದೆ. ಕೃಷಿ ಮತ್ತು ಆಹಾರ ಉದ್ಯಮ ಮೇಳವು 350 ಕ್ಕೂ ಹೆಚ್ಚು ಪ್ರದರ್ಶಕರನ್ನು ಒಳಗೊಂಡಿರುತ್ತದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Agritech India 2024
Koo

ಬೆಂಗಳೂರು: ದೇಶದ ಅತಿದೊಡ್ಡ ಕೃಷಿ ಮತ್ತು ಆಹಾರ ಉದ್ಯಮ ಮೇಳ ʼಅಗ್ರಿಟೆಕ್ ಇಂಡಿಯಾ 2024ʼ ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಗುರುವಾರ ಆರಂಭಗೊಳ್ಳಲಿದ್ದು, 3 ದಿನಗಳ ಕಾಲ ನಡೆಯಲಿರುವ ಈ ಬೃಹತ್ ಮೇಳವು (Agritech India 2024) ಆಗಸ್ಟ್‌ ‌22ರಂದು ಉದ್ಘಾಟನೆಗೊಳ್ಳಲಿದೆ. ಕೃಷಿ ಮತ್ತು ಆಹಾರ ಉದ್ಯಮ ಮೇಳವು 350 ಕ್ಕೂ ಹೆಚ್ಚು ಪ್ರದರ್ಶಕರನ್ನು ಒಳಗೊಂಡಿರುತ್ತದೆ. ಮೇಳಕ್ಕೆ ಅಂದಾಜು 25,000 ವ್ಯಾಪಾರ ಸಂದರ್ಶಕರು ಆಗಮಿಸುವ ನಿರೀಕ್ಷೆಯಿದೆ.

ಈ ಕುರಿತು ನಗರದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಮುಖ್ಯಸ್ಥರು ಹಾಗೂ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಮಾತನಾಡಿ, “ಅಗ್ರಿಟೆಕ್ ಈವೆಂಟ್‌ ಮಹಿಳಾ ಉದ್ಯಮಿಗಳಿಗೆ ಉತ್ತಮ ವೇದಿಕೆಯನ್ನು ನೀಡುತ್ತಿದೆ. ಮಹಿಳೆಯರು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಅವಕಾಶವನ್ನು ಈ ಬೃಹತ್‌ ಮೇಳವು ಒದಗಿಸಲಿದೆ. ಈ ಮೇಳದಲ್ಲಿ ಜಾಗತಿಕ ಮತ್ತು ರಾಷ್ಟ್ರೀಯ ಖರೀದಿದಾರರೊಂದಿಗೆ ಬಿ2ಬಿ ಸಭೆಗಳನ್ನು ಆಯೋಜಿಸಲಾಗುತ್ತದೆ. ಈ ಮೂಲಕ ಕರ್ನಾಟಕದ ಮಹಿಳಾ ಉದ್ಯಮಿಗಳಿಗೆ ತಮ್ಮ ಮಾರುಕಟ್ಟೆ ವ್ಯಾಪ್ತಿಯನ್ನು ವಿಸ್ತರಿಸಲು ಮತ್ತು ನಿಗದಿತ ಗ್ರಾಹಕರೊಂದಿಗೆ ಸಂಪರ್ಕ ಸಾಧಿಸಲು ಅವಕಾಶವನ್ನು ಒದಗಿಸುತ್ತದೆ. ವಿಶೇಷವಾಗಿ ಮಹಿಳಾ ಉದ್ಯಮಿಗಳನ್ನು ಬೆಂಬಲಿಸುವುದು ನಮ್ಮ ಉದ್ದೇಶವಾಗಿದ್ದು, 11 ರಾಜ್ಯಗಳಾದ್ಯಂತ 52 ಸಂಘಗಳು ಸೇರಿದಂತೆ 20,000 ಕ್ಕೂ ಹೆಚ್ಚು ಮಹಿಳಾ ಉದ್ಯಮಿಗಳ ಸಹಭಾಗಿತ್ವದಲ್ಲಿ ಈ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: World Senior Citizens Day: ವಿಶ್ವ ಹಿರಿಯ ನಾಗರಿಕರ ದಿನದ ಪ್ರಯುಕ್ತ ವೈದ್ಯರಿಂದ ಉಚಿತ ಸಮಾಲೋಚನೆ

ಉಬುಂಟು ಕನ್ಸೋರ್ಟಿಯಂ (ಒಕ್ಕೂಟ) ಕೃಷಿಯಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವಲ್ಲಿ ನಿರತವಾಗಿದೆ. ಅಲ್ಲದೆ ಮಹಿಳೆಯರಿಗೆ ಉದ್ಯಮದಲ್ಲಿ ತೊಡಗಿಕೊಳ್ಳಲು ಅಗತ್ಯ ತರಬೇತಿಯನ್ನು ನೀಡುತ್ತಾ ಬಂದಿದೆ ಎಂದು ಅವರು ವಿವರಿಸಿದರು.

ಈ ವೇಳೆ ಮೀಡಿಯಾ ಟುಡೇ ಪ್ರೈವೇಟ್ ಲಿಮಿಟೆಡ್‌ನ ಸಿಇಒ ಎನ್‌.ಬಿ. ನಖ್ವಿ ಮಾತನಾಡಿ, “ವಿವಿಧ ಕ್ಷೇತ್ರದಲ್ಲಿ ಮಹಿಳೆಯರು ಪ್ರಮುಖ ಪಾತ್ರವನ್ನು ವಹಿಸುತ್ತಿದ್ದಾರೆ. ಭಾರತದಾದ್ಯಂತ ಮಹಿಳೆಯರು ಹೂವು ಕೃಷಿ, ಹಸಿರುಮನೆ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರೆಲ್ಲರಿಗೂ ಈ ಅಗ್ರಿಟೆಕ್‌ ವೇದಿಕೆ ಉತ್ತಮ ಅವಕಾಶವನ್ನು ನೀಡುತ್ತಿದೆ. ಟರ್ಕಿ, ಚೀನಾ, ಜರ್ಮನಿ, ಥೈಲ್ಯಾಂಡ್, ಸ್ಪೇನ್, ನೆದರ್ಲ್ಯಾಂಡ್, ನೇಪಾಳ, ಶ್ರೀಲಂಕಾ, ಕುವೈತ್, ರಷ್ಯಾ, ತೈವಾನ್, ಫ್ರಾನ್ಸ್, ಇಟಲಿ, ಕೆನಡಾ, ಯುಎಇ, ಇಂಡೋನೇಷಿಯಾ, ಬಹ್ರೇನ್, ಸಿಂಗಾಪುರ್, ಇರಾನ್, ಆಸ್ಟ್ರೇಲಿಯಾ, ಭೂತಾನ್, ಮಲೇಷ್ಯಾ, ವಿಯೆಟ್ನಾಂ ಮತ್ತು ನ್ಯೂಜಿಲೆಂಡ್ ಸೇರಿದಂತೆ 25 ದೇಶಗಳ ಪ್ರತಿನಿಧಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದಾರೆ. ಈ ಮೂರು ದಿನಗಳ ಮೇಳವು ವ್ಯವಹಾರಗಳಿಗೆ ಸಂಪರ್ಕ ಸಾಧಿಸಲು ಮತ್ತು ಹೊಸ ಅವಕಾಶಗಳನ್ನು ಅನ್ವೇಷಿಸಲು, ವಲಯದಲ್ಲಿ ಬೆಳವಣಿಗೆ ಮತ್ತು ನಾವೀನ್ಯತೆಗೆ ಒಗ್ಗಿಕೊಳ್ಳಲು ಒಂದು ಅನನ್ಯ ಅವಕಾಶವನ್ನು ನೀಡುತ್ತದೆ ಎಂದರು.

ಮೀಡಿಯಾ ಟುಡೇ ಮುಖ್ಯ ಸಂಪಾದಕ ಜಾಫರ್ ನಖ್ವಿ ಮಾತನಾಡಿ, “ರೈತರನ್ನು ನೇರವಾಗಿ ಖರೀದಿದಾರರೊಂದಿಗೆ ಸಂಪರ್ಕಿಸಲು, ಮಧ್ಯವರ್ತಿಗಳ ಅಗತ್ಯವನ್ನು ನಿವಾರಿಸಲು ಅಗ್ರಿಟೆಕ್ ಅತ್ಯುತ್ತಮ ವೇದಿಕೆಯನ್ನು ಒದಗಿಸುತ್ತಿದೆ. ಅಗ್ರಿಟೆಕ್ ಇಂಡಿಯಾ 2024 ಕೃಷಿ ಮತ್ತು ಆಹಾರ ಪ್ರದರ್ಶನ ಮೇಳವು ಇಂಡಿಯಾ ಫುಡೆಕ್ಸ್ ಮತ್ತು ಗ್ರೇನ್ ಟೆಕ್ ಇಂಡಿಯಾ ಸಹಯೋಗದೊಂದಿಗೆ ನಡೆಯಲಿದ್ದು, ಕೃಷಿ ಮತ್ತು ಆಹಾರ ಉದ್ಯಮದ ಮೌಲ್ಯವನ್ನು ಪ್ರತಿಬಿಂಬಿಸುತ್ತದೆ. ಈ ಪ್ರದರ್ಶನವು ಆಹಾರ ಉತ್ಪನ್ನಗಳು, ಫ್ರೋಜನ್ ಆಹಾರಗಳು, ತಿಂಡಿಗಳು, ಬೇಕರಿ ವಸ್ತುಗಳು, ಅನುಕೂಲಕರ ಆಹಾರಗಳು, ಸಾವಯವ ಉತ್ಪನ್ನಗಳು, ತಾಜಾ ಹಣ್ಣುಗಳು, ಆಹಾರ ಚಿಲ್ಲರೆ ವ್ಯಾಪಾರ, ಡೈರಿ ಉತ್ಪನ್ನಗಳು, ಚಹಾ, ಕಾಫಿ ಮತ್ತು ಹಣ್ಣು ಆಧಾರಿತ ಪಾನೀಯಗಳನ್ನು ಒಳಗೊಂಡಂತೆ ವೈವಿಧ್ಯಮಯ ಆಹಾರ ವಲಯದ ವಿಭಾಗಗಳು ಪ್ರದರ್ಶನದಲ್ಲಿ ಇರಲಿವೆ. ಅದಲ್ಲದೆ ಈವೆಂಟ್ 13ನೇ ಡೈರಿಟೆಕ್ ಇಂಡಿಯಾ, ಪೌಲ್ಟ್ರಿ ಮತ್ತು ಜಾನುವಾರು ಎಕ್ಸ್ಪೋ ಮತ್ತು ಬೇಕರಿಟೆಕ್ ಇಂಡಿಯಾದೊಂದಿಗೆ ಏಕಕಾಲದಲ್ಲಿ ನಡೆಯಲಿದೆ. ಇದು ಫಾರ್ಮ್‌ನಿಂದ ಫೋರ್ಕ್‌ವರೆಗಿನ ಆಹಾರ ಉದ್ಯಮದ ಸಂಪೂರ್ಣ ಅವಲೋಕನವನ್ನು ನೀಡಲಿದೆ ಎಂದು ವಿವರಿಸಿದರು.

ಇದನ್ನೂ ಓದಿ: Kannada New Movie: ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ನಟ ಶರಣ್

ಆಗಸ್ಟ್ 22ರ (ಎರಡನೇ ದಿನ) ಕಾರ್ಯಕ್ರಮದಲ್ಲಿ “ವುಮೆನ್ ಇನ್ ಅಗ್ರಿಬಿಸಿನೆಸ್” – ಜಾಗತಿಕ ಸಮ್ಮೇಳನ, ಪ್ರದರ್ಶನ, ನೆಟ್ವರ್ಕಿಂಗ್ ಶೃಂಗಸಭೆ ಮತ್ತು ಪ್ರಶಸ್ತಿ ಸಮಾರಂಭವು ಕೃಷಿ ಮತ್ತು ಆಹಾರ ಕ್ಷೇತ್ರಗಳಲ್ಲಿನ ಮಹಿಳೆಯರ ಕೊಡುಗೆಗಳನ್ನು ಗೌರವಿಸಲಾಗುತ್ತದೆ. ಈ ಕಾರ್ಯಕ್ರಮವು ಮಹಿಳಾ ಉದ್ಯಮಿಗಳು ಮತ್ತು ವೃತ್ತಿಪರರಿಗೆ ಹೊಸ ಪರಿಚಯಗಳು ಮತ್ತು ಅವರ ವೈಯಕ್ತಿಕ ಸಾಧನೆಗಳನ್ನು ಪ್ರದರ್ಶಿಸಲು ಅಮೂಲ್ಯವಾದ ವೇದಿಕೆಯನ್ನು ನೀಡುತ್ತದೆ. ಆಗಸ್ಟ್ 23ರ ಅಂತಿಮ ದಿನದ ಮೇಳದಲ್ಲಿ ಧಾನ್ಯಗಳು ಮತ್ತು ಹಿಟ್ಟು ಮಿಲ್ಲಿಂಗ್ ಉದ್ಯಮದ ನೆಟ್ವರ್ಕಿಂಗ್ ಶೃಂಗಸಭೆಯನ್ನು ಏರ್ಪಡಿಸಲಾಗುತ್ತಿದೆ. ಧಾನ್ಯಗಳು ಮತ್ತು ಹಿಟ್ಟು ಮಿಲ್ಲಿಂಗ್ ಉದ್ಯಮದ ನಿರ್ದಿಷ್ಟ ಅಗತ್ಯಗಳನ್ನು ಈ ಮೇಳದಲ್ಲಿ ತಿಳಿಸಲಾಗುತ್ತದೆ. ಈ ಸಮ್ಮೇಳನದ ಅಧಿವೇಶನವು ಉದ್ಯಮದ ಮಧ್ಯಸ್ಥಗಾರರಿಗೆ ಎದುರಾಗುವ ಸವಾಲುಗಳು, ಅವಕಾಶಗಳು ಮತ್ತು ಹೊಸ ಸಾಧ್ಯತೆಗಳನ್ನು ಚರ್ಚಿಸಲು ವೇದಿಕೆಯನ್ನು ಒದಗಿಸುತ್ತದೆ.

ಆಗಸ್ಟ್ 22 ರಿಂದ 24, 2024ರವರೆಗೆ ಈ ಮೇಳವು ನಡೆಯಲಿದೆ. ಈ ವರ್ಷದ ಅಗ್ರಿಟೆಕ್ ಇಂಡಿಯಾ ಮೇಳವು ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಗುರುವಾರ ಆರಂಭಗೊಳ್ಳಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ ಬೃಹತ್ ಮೇಳವು ಆಗಸ್ಟ್‌‌22ರಂದು ಉದ್ಘಾಟನೆಗೊಳ್ಳಲಿದೆ. ಕೆನಡಾ, ಟರ್ಕಿ, ಚೀನಾ, ಜರ್ಮನಿ, ಇಟಲಿ, ಸ್ಪೇನ್, ಹಾಲೆಂಡ್, ರಷ್ಯಾ, ತೈವಾನ್, ಥೈಲ್ಯಾಂಡ್, ಸಿಂಗಾಪುರ್, ಇಂಡೋನೇಷ್ಯಾ, ನೇಪಾಳ ಮತ್ತು ಬ್ರೆಜಿಲ್ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳ ಉತ್ಪನ್ನಗಳು ಮತ್ತು ಸೇವೆಗಳ ಪ್ರದರ್ಶನವನ್ನು ನೀಡುವ ಮೂಲಕ ಹಿಂದಿನ ಎಲ್ಲಾ ಆವೃತ್ತಿಗಳನ್ನು ಮೀರಿಸುವ ಭರವಸೆ ಇದೆ.

ಇದನ್ನೂ ಓದಿ: Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು APEDA ನ ಜನರಲ್ ಮ್ಯಾನೇಜರ್ ವಿನಿತಾ ಸುಧಾಂಶು, ಬೆಂಗಳೂರಿನ ರಾಷ್ಟ್ರೀಯ ಜೀವನೋಪಾಯ ಮಿಷನ್ ನಿರ್ದೇಶಕಿ ಪಿ.ಐ. ಶ್ರೀವಿದ್ಯಾ, ಗ್ಲೋಬಲ್ ಅಗ್ರಿಸಿಸ್ಟಮ್ ಪ್ರೈವೇಟ್ ಲಿಮಿಟೆಡ್‌ನ ಅಧ್ಯಕ್ಷ ಗೋಕುಲ್ ಪಟ್ನಾಯಕ್, ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯ (CFTRI) ನಿರ್ದೇಶಕಿ ಡಾ. ಶ್ರೀದೇವಿ ಅನ್ನಪೂರ್ಣ ಸಿಂಗ್ ಮತ್ತು FSSAI ಸಲಹೆಗಾರ ಮತ್ತು ಕೋಡೆಕ್ಸ್ನ ಮಾಜಿ ಅಧ್ಯಕ್ಷ ಸಂಜಯ್ ದವೆ ಸೇರಿದಂತೆ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ಅವರು ನೀಡಿದರು.

Continue Reading

ಕರ್ನಾಟಕ

Reliance Jio: ಜಿಯೋ ಟಿವಿ ಪ್ಲಸ್ 2 ಇನ್ 1 ಆಫರ್; ಒಂದೇ ಸಂಪರ್ಕದಲ್ಲಿ ನೋಡಿ ಎರಡು ಟಿವಿ!

ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗೆ ಜಿಯೋ ಟಿವಿ ಪ್ಲಸ್ ಟೂ ಇನ್ ಒನ್ ಅನ್ನು ಪರಿಚಯಿಸಿದೆ. ಈ ಆಫರ್‌ನಲ್ಲಿ ಗ್ರಾಹಕರು ಈಗ ಒಂದೇ ಜಿಯೋ ಏರ್ ಫೈಬರ್ ಸಂಪರ್ಕದಿಂದ ಎರಡು ಟಿವಿಗಳನ್ನು ಒಂದೇ ಸಮಯದಲ್ಲಿ ನೋಡಬಹುದು/ಬಳಸಬಹುದು. ಈ ಯೋಜನೆಯ ಅಡಿಯಲ್ಲಿ ಗ್ರಾಹಕರು 800ಕ್ಕೂ ಹೆಚ್ಚು ಡಿಜಿಟಲ್ ಟಿವಿ ಚಾನೆಲ್‌ಗಳು ಮತ್ತು 13 ಒಟಿಟಿ ಅಪ್ಲಿಕೇಷನ್‌ಗಳ ಸೌಲಭ್ಯವನ್ನು ಪಡೆಯುತ್ತಾರೆ. ಈ ಸೇವೆಯು ಜಿಯೋ ಟಿವಿ ಪ್ಲಸ್ ಅಪ್ಲಿಕೇಷನ್ ಮೂಲಕ ಲಭ್ಯವಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Reliance Jio
Koo

ನವದೆಹಲಿ: ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗೆ ಜಿಯೋ ಟಿವಿ ಪ್ಲಸ್ ಟೂ ಇನ್ ಒನ್ ಅನ್ನು ಪರಿಚಯಿಸಿದೆ. ಈ ಆಫರ್‌ನಲ್ಲಿ ಗ್ರಾಹಕರು ಈಗ ಒಂದೇ ಜಿಯೋ ಏರ್ ಫೈಬರ್ ಸಂಪರ್ಕದಿಂದ ಎರಡು ಟಿವಿಗಳನ್ನು ಒಂದೇ ಸಮಯದಲ್ಲಿ ನೋಡಬಹುದು/ಬಳಸಬಹುದು. ಈ ಯೋಜನೆಯ ಅಡಿಯಲ್ಲಿ ಗ್ರಾಹಕರು 800ಕ್ಕೂ ಹೆಚ್ಚು ಡಿಜಿಟಲ್ ಟಿವಿ ಚಾನೆಲ್‌ಗಳು ಮತ್ತು 13 ಒಟಿಟಿ ಅಪ್ಲಿಕೇಷನ್‌ಗಳ ಸೌಲಭ್ಯವನ್ನು ಪಡೆಯುತ್ತಾರೆ. ಈ ಸೇವೆಯು ಜಿಯೋ ಟಿವಿ ಪ್ಲಸ್ ಅಪ್ಲಿಕೇಷನ್ ಮೂಲಕ ಲಭ್ಯವಿದೆ.

ಜಿಯೋ ಟಿವಿ ಪ್ಲಸ್ ಅಪ್ಲಿಕೇಷನ್ 10 ಭಾಷೆಗಳಲ್ಲಿ ಮತ್ತು 20 ವಿಭಾಗಗಳಲ್ಲಿ 800 ಡಿಜಿಟಲ್ ಟಿವಿ ಚಾನೆಲ್‌ಗಳಿಗೆ ಸಂಪರ್ಕವನ್ನು ಒದಗಿಸುತ್ತದೆ. ಅಷ್ಟೇ ಅಲ್ಲ, ಜತೆಗೆ ಬಳಕೆದಾರರು ಒಂದೇ ಲಾಗಿನ್‌ನಿಂದ 13 ಜನಪ್ರಿಯ ಒಟಿಟಿ ಅಪ್ಲಿಕೇಷನ್‌ಗಳನ್ನು ಬಳಸಬಹುದು.

ಇದನ್ನೂ ಓದಿ: World Senior Citizens Day: ವಿಶ್ವ ಹಿರಿಯ ನಾಗರಿಕರ ದಿನದ ಪ್ರಯುಕ್ತ ವೈದ್ಯರಿಂದ ಉಚಿತ ಸಮಾಲೋಚನೆ

ಜಿಯೋ ಟಿವಿ ಪ್ಲಸ್ ಅಪ್ಲಿಕೇಷನ್‌ನ ಪ್ರಮುಖ ವೈಶಿಷ್ಟ್ಯಗಳು ಏನೆಂದರೆ, ಒಂದೇ ಸೈನ್ -ಆನ್ ಆಯ್ಕೆ, ಸ್ಮಾರ್ಟ್ ಟಿವಿ ರಿಮೋಟ್ ಹೊಂದಾಣಿಕೆ ಮತ್ತು ವೈಯಕ್ತಿಕಗೊಳಿಸಿದ ಕಂಟೆಂಟ್ ಒಳಗೊಂಡಿದೆ. ಗ್ರಾಹಕರು ಸ್ಮಾರ್ಟ್ ಫಿಲ್ಟರ್‌ಗಳನ್ನು ಬಳಸಿಕೊಂಡು ಚಾನಲ್‌ಗಳನ್ನು ಸುಲಭವಾಗಿ ಹುಡುಕಬಹುದು, ಪ್ಲೇಬ್ಯಾಕ್ ವೇಗವನ್ನು ನಿಯಂತ್ರಿಸಬಹುದು ಮತ್ತು ಈ ಹಿಂದೆ ಪ್ರಸಾರವಾದ ಕಾರ್ಯಕ್ರಮಗಳನ್ನು ವೀಕ್ಷಿಸಬಹುದು. ಈ ಸೇವೆಯು ಎಲ್ಲ ಜಿಯೋ ಏರ್ ಫೈಬರ್ ಯೋಜನೆಗಳಲ್ಲಿ ಲಭ್ಯವಿದೆ. ಆದರೆ ಜಿಯೋ ಫೈಬರ್ ಪೋಸ್ಟ್‌ಪೇಯ್ಡ್‌ನಲ್ಲಿ, ಇದು ರೂ. 599, ರೂ. 899 ಮತ್ತು ಹೆಚ್ಚಿನ ಮೊತ್ತದ ಯೋಜನೆಗಳಲ್ಲಿ ಲಭ್ಯವಿದೆ. ಜಿಯೋ ಫೈಬರ್ ಪ್ರಿಪೇಯ್ಡ್‌ನಲ್ಲಿ ಇದು ರೂ. 999 ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ಯೋಜನೆಗಳಲ್ಲಿ ಲಭ್ಯವಿದೆ.

ಜಿಯೋ ಟಿವಿ ಅಪ್ಲಿಕೇಷನ್‌ನಲ್ಲಿ ಲಭ್ಯವಿರುವ ಪ್ರಮುಖ ಚಾನೆಲ್‌ಗಳು ಮತ್ತು ಒಟಿಟಿ ಅಪ್ಲಿಕೇಶನ್‌ಗಳಲ್ಲಿ ಜನಪ್ರಿಯ ನೆಟ್‌ವರ್ಕ್‌ಗಳಾದ ಕಲರ್ಸ್ ಟಿವಿ, ಸ್ಟಾರ್ ಪ್ಲಸ್ ಮತ್ತು ಝೀ ಟಿವಿಯನ್ನು ಒಳಗೊಂಡಿವೆ. ಇದರೊಂದಿಗೆ ಡಿಸ್ನಿ ಪ್ಲಸ್, ಹಾಟ್‌ಸ್ಟಾರ್, ಸೋನಿ ಲಿವ್ ಮತ್ತು ಜೀ ಫೈವ್‌ನಂತಹ ಒಟಿಟಿ ಪ್ಲಾಟ್‌ಫಾರ್ಮ್‌ಗಳು ಸಹ ದೊರೆಯುತ್ತವೆ.

ಇದನ್ನೂ ಓದಿ: Kannada New Movie: ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ನಟ ಶರಣ್

ಈ ಯೋಜನೆಯ ಲಾಭವನ್ನು ನೀವು ಕೂಡ ಪಡೆಯುವುದಕ್ಕಾಗಿ ನಿಮ್ಮ ಸ್ಮಾರ್ಟ್ ಟಿವಿಯ ಆಪ್ ಸ್ಟೋರ್‌ನಿಂದ ಜಿಯೋ ಟಿವಿ ಪ್ಲಸ್ (Jio TV Plus) ಅಪ್ಲಿಕೇಷನ್ ಅನ್ನು ಡೌನ್‌ಲೋಡ್ ಮಾಡಿ, ನಿಮ್ಮ ಜಿಯೋ ಫೈಬರ್ ಅಥವಾ ಜಿಯೋ ಏರ್ ಫೈಬರ್ ನೋಂದಾಯಿತ ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಮಾಡಿ ಮತ್ತು ದೊಡ್ಡ ಮಟ್ಟದ ಕಂಟೆಂಟ್ ಲೈಬ್ರರಿಯನ್ನು ತಕ್ಷಣವೇ ಆನಂದಿಸಲು ಪ್ರಾರಂಭಿಸಿ. ಈ ಆಫರ್‌ನೊಂದಿಗೆ, ಜಿಯೋ ಟಿವಿ ವೇಗವಾಗಿ ಬೆಳೆಯುತ್ತಿರುವ ಭಾರತದ ಅತಿದೊಡ್ಡ ಕಂಟೆಂಟ್ ಅಗ್ರಿಗೇಟರ್ ಪ್ಲಾಟ್‌ಫಾರ್ಮ್ ಆಗುತ್ತಿದೆ, ಯಾವುದೇ ಹೆಚ್ಚುವರಿ ಶುಲ್ಕಗಳು ಅಥವಾ ಸಂಪರ್ಕವಿಲ್ಲದೆ ಬಹು ಪ್ಲಾಟ್‌ಫಾರ್ಮ್‌ಗಳಲ್ಲಿ ಮನರಂಜನೆಗೆ ಯಾವುದೇ ಅಡೆತಡೆ ಇಲ್ಲದ ಸಂಪರ್ಕವನ್ನು ಒದಗಿಸುತ್ತದೆ.

Continue Reading

ಕರ್ನಾಟಕ

Kannada New Movie: ಟೀಸರ್‌ನಲ್ಲೇ ಕುತೂಹಲ ಮೂಡಿಸಿದೆ ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರ

ನಟ ರಿಷಿ ಅಭಿನಯದ, ನಿರ್ದೇಶಕ ನಂದೀಶ್ ನಿರ್ದೇಶನದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರದ (Kannada New Movie) ಟೀಸರ್ ಅನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದರು. ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಹಾಗೂ ಪ್ರಸ್ತುತ ತೆಲುಗು ಚಿತ್ರರಂಗದಲ್ಲೂ ಮನೆಮಾತಾಗಿರುವ ನಟ ರಿಷಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ‘ರುದ್ರ ಗರುಡ ಪುರಾಣ’ ಚಿತ್ರದ (Kannada New Movie) ಟೀಸರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ನಿರ್ದೇಶಕ ಜೇಕಬ್ ವರ್ಗೀಸ್, ಇತರರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದರು.

914 ವಿಮಾನ 1955ರಲ್ಲಿ ನ್ಯೂಯಾರ್ಕ್‌ನಿಂದ ಮಿಯಾನ್ ಸಿಟಿಗೆ ಹೊರಟಿದ್ದ ವಿಮಾನ ಮಿಸ್ ಆಗುತ್ತದೆ. ವಿಮಾನದ ಸುಳಿವು ಸಿಕ್ಕಿರುವುದಿಲ್ಲ. ಇದಾದ ಮೂವತ್ತು ವರ್ಷಗಳ (1985 ರಲ್ಲಿ) ನಂತರ ಮತ್ತೆ ಆ ವಿಮಾನ ವಾಪಸ್ ಬರುತ್ತದೆ ಅದು ಹೇಗೆ…? ಹಾಗೂ ಒಬ್ಬ ರಾಜ ಇಡೀ ಭೂಮಂಡಲನೇ ಗೆಲ್ಲಬೇಕು ಅಂತ ಆಸೆಯಿಂದ ತನ್ನ‌ ಪಕ್ಕದ ದೇಶದ ಮೇಲೆ ಯುದ್ದಕ್ಕೆ ಹೋಗಿ‌ ಲಕ್ಷಾಂತರ ಜನರನ್ನು ಕೊಂದು ಜಯ‌ ಸಾಧಿಸಿರುತ್ತಾನೆ.‌

ಯುದ್ಧ ಮುಗಿದ ಮೇಲೆ‌ ರಣರಂಗಕ್ಕೆ‌ ಹೋಗುತ್ತಾನೆ. ಅಲ್ಲಿ ಸಾಲುಸಾಲು ಹೆಣದ ರಾಶಿಗಳಿರುತ್ತಿದೆ.‌ ಸತ್ತಿದ್ದ ಸೈನಿಕನೊಬ್ಬನ ಮಾಂಸವನ್ನು ಮನುಷ್ಯನೊಬ್ಬ ತಿನ್ನುತ್ತಿರುತ್ತಾನೆ.‌ ಆ ಸಮಯಕ್ಕೆ‌ ರಾಜ ಅಲ್ಲಿಗೆ ಬರುತ್ತಾನೆ‌. ಆ‌ ಮನುಷ್ಯ ರಾಜನನ್ನು ಕುರಿತು, ಕ್ಷಮಿಸು ರಾಜ ನಾನು ನಿನ್ನ ಆಹಾರವನ್ನು ‌ತಿನ್ನುತ್ತಿದ್ದೇನೆ ಎನ್ನುತ್ತಾನೆ. ಆಗ ರಾಜ ನಾನು ನಿನ್ನ ಹಾಗೆ ನರಭಕ್ಷಕ ಅಲ್ಲ‌ ಎನುತ್ತಾನೆ.‌ ಆಗ ಆ ಮನುಷ್ಯ ಹಾಗಾದರೆ ಇಷ್ಟು ಜನರನ್ನು ಏಕೆ‌ ಸಾಯಿಸಿದಿಯಾ ಎಂದು ರಾಜನನ್ನು ಕೇಳುತ್ತಾನೆ?‌.‌ ಈ ಎರಡು ಉಪಕಥೆಗಳೇ ನಮ್ಮ‌ ಚಿತ್ರದ ಕಥೆಗೆ ಸ್ಫೂರ್ತಿ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ನಂದೀಶ್.

ನಮ್ಮ‌ ಸುತ್ತಮುತ್ತ ನಡೆಯುವ ಅನೇಕ ಸಮಸ್ಯೆಗಳನ್ನಿಟ್ಟುಕೊಂಡು ನಂದೀಶ್ ಈ ಚಿತ್ರದ ಕಥೆ ಮಾಡಿದ್ದಾರೆ. ಪುನೀತ್ ರಾಜಕುಮಾರ್ ಅವರ ನಿರ್ಮಾಣದ “ಕವಲುದಾರಿ” ಚಿತ್ರದ ನಂತರ ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ರುದ್ರ ನನ್ನ ಪಾತ್ರದ ಹೆಸರು ಎಂದರು ನಟ ರಿಷಿ.

ಇದು ನನ್ನ ಅಭಿನಯದ ಎರಡನೇ ಚಿತ್ರ.‌ ನನ್ನ‌ ಪಾತ್ರ ಕೂಡ ಚೆನ್ನಾಗಿದೆ‌ ಎಂದು ನಾಯಕಿ ಪ್ರಿಯಾಂಕ ಕುಮಾರ್‌ ತಿಳಿಸಿದರು. ‌

ಜೇಕಬ್ ವರ್ಗೀಸ್‌ ಹಾಗೂ ನಾನು ಸ್ನೇಹಿತರು. ಜೇಕಬ್ ಅವರ ಜತೆಗೆ ಕೆಲಸ ಮಾಡುತ್ತಿದ್ದಾಗಿನಿಂದಲೂ ನನಗೆ ನಂದೀಶ್ ಪರಿಚಯ.‌‌ ನಂದೀಶ್ ಈ ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ಅಭಿನಯಿಸಿದ್ದೇನೆ ಎಂದರು ನಟ ವಿನೋದ್ ಆಳ್ವಾ.

ಚಿತ್ರದಲ್ಲಿ ನಟಿಸಿರುವ ಕೆ.ಎಸ್ ಶ್ರೀಧರ್, ಗಿರೀಶ್ ಶಿವಣ್ಣ, ಶಿವರಾಜ ಕೆ.ಆರ್. ಪೇಟೆ, ಸಂಗೀತ ನಿರ್ದೇಶಕ ಕೆಪಿ, ಛಾಯಾಗ್ರಾಹಕ ಸಂದೀಪ್ ಕುಮಾರ್ ಹಾಗೂ ಸಂಭಾಷಣೆ ಬರೆದಿರುವ ರಘು ನಿಡವಳ್ಳಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಇದನ್ನೂ ಓದಿ: World Senior Citizens Day: ವಿಶ್ವ ಹಿರಿಯ ನಾಗರಿಕರ ದಿನದ ಪ್ರಯುಕ್ತ ವೈದ್ಯರಿಂದ ಉಚಿತ ಸಮಾಲೋಚನೆ

ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಶ್ವಿನಿ ಅವರ ಪತಿ ಲೋಹಿತ್ ಅವರು ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು.

Continue Reading
Advertisement
Brahmashri Narayanguru Jayanti
ಕರ್ನಾಟಕ2 hours ago

Brahmashri Narayanaguru Jayanti: ಸಮ ಸಮಾಜದ ನಿರ್ಮಾಣ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ

puttur stabbing case
ಕ್ರೈಂ2 hours ago

Stabbing Case: ಪುತ್ತೂರು ನಗರ ಉದ್ವಿಗ್ನತೆಗೆ ಕಾರಣವಾದ ವಿದ್ಯಾರ್ಥಿನಿಗೆ ಬ್ಲೇಡ್‌ ಇರಿತ ಪ್ರಕರಣ; ನಿಜಕ್ಕೂ ನಡೆದದ್ದೇನು?

Cincinnati Open
ಕ್ರೀಡೆ3 hours ago

ATP Cincinnati Open: ಚೊಚ್ಚಲ ಪ್ರಶಸ್ತಿ ಗೆದ್ದ ಜಾನಿಕ್‌ ಸಿನ್ನರ್‌, ಅರಿನಾ ಸಬಲೆಂಕಾ

students death
ಕ್ರೈಂ3 hours ago

Students Death: ಇಬ್ಬರು ಮಕ್ಕಳ ಜೀವ ಕಸಿದ ಮೊಬೈಲ್;‌ ತಂದೆ- ತಾಯಿ ಫೋನ್ ಕೊಡದಿದ್ದುದಕ್ಕೆ ಆತ್ಮಹತ್ಯೆ

Agritech India 2024
ಬೆಂಗಳೂರು3 hours ago

Agritech India 2024: ಬೆಂಗಳೂರಿನಲ್ಲಿ ʼಅಗ್ರಿಟೆಕ್ ಇಂಡಿಯಾ 2024ʼಕ್ಕೆ ಆ. 22ರಂದು ಚಾಲನೆ

ajmer pocso case
ಕ್ರೈಂ3 hours ago

Ajmer Pocso Case: 32 ವರ್ಷ ಹಿಂದಿನ ಅಜ್ಮೀರ್‌ ಪೋಕ್ಸೋ ಕೇಸ್‌ನಲ್ಲಿ 6 ಮಂದಿಗೆ ಜೀವಾವಧಿ ಶಿಕ್ಷೆ

Imran Khan
ವಿದೇಶ3 hours ago

Imran Khan: ಆಕ್ಸ್‌ಫರ್ಡ್ ವಿವಿ ಕುಲಪತಿಯಾಗಲು ಅರ್ಜಿ ಸಲ್ಲಿಸಿದ ಪಾಕ್‌ ಮಾಜಿ ಪ್ರಧಾನಿ!

Reliance Jio
ಕರ್ನಾಟಕ4 hours ago

Reliance Jio: ಜಿಯೋ ಟಿವಿ ಪ್ಲಸ್ 2 ಇನ್ 1 ಆಫರ್; ಒಂದೇ ಸಂಪರ್ಕದಲ್ಲಿ ನೋಡಿ ಎರಡು ಟಿವಿ!

Kannada New Movie
ಕರ್ನಾಟಕ4 hours ago

Kannada New Movie: ಟೀಸರ್‌ನಲ್ಲೇ ಕುತೂಹಲ ಮೂಡಿಸಿದೆ ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರ

EV charging
ಕರ್ನಾಟಕ4 hours ago

EV Charging: ಕರ್ನಾಟಕವೇ ಕಿಂಗ್;‌ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌