Sexual Abuse: ಕಾಶ್ಮೀರದಲ್ಲಿ ಹಿಂದೂ ಬಾಲಕಿ ಮೇಲೆ ಅತ್ಯಾಚಾರ; ಬೃಹತ್‌ ಪ್ರತಿಭಟನೆ - Vistara News

Latest

Sexual Abuse: ಕಾಶ್ಮೀರದಲ್ಲಿ ಹಿಂದೂ ಬಾಲಕಿ ಮೇಲೆ ಅತ್ಯಾಚಾರ; ಬೃಹತ್‌ ಪ್ರತಿಭಟನೆ

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿರುವ (Sexual Abuse) ಮಾರ್ವಾದಲ್ಲಿ 15 ವರ್ಷದ ಹಿಂದೂ ಬಾಲಕಿಯ ಮೇಲೆ ಮುಸ್ಲಿಂ ಹುಡುಗ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಬಂಧಿಸಲಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಆರೋಪಿ ಮತ್ತು ಅವರ ಕುಟುಂಬವನ್ನು ರಕ್ಷಿಸುತ್ತಿರುವುದಕ್ಕೆ ಸ್ಟೇಷನ್ ಹೌಸ್ ಅಧಿಕಾರಿ ಜಹೀರ್ ಇಕ್ಬಾಲ್ ಅವರನ್ನು ಅಮಾನತುಗೊಳಿಸಲಾಗಿದೆ.

VISTARANEWS.COM


on

Sexual Abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿರುವ ಮಾರ್ವಾದಲ್ಲಿ 15 ವರ್ಷದ ಹಿಂದೂ ಬಾಲಕಿಯ ಮೇಲೆ ಸ್ಥಳೀಯ ಯುವಕ ಅತ್ಯಾಚಾರ (Sexual Abuse) ಎಸಗಿದ್ದು, ಈ ಬಗ್ಗೆ ಅಧಿಕಾರಿಗಳು ಅತಿರೇಕವಾಗಿ ವರ್ತಿಸಿದ ಕಾರಣ ಈ ಪ್ರದೇಶದಲ್ಲಿ ಸನಾತನ ಧರ್ಮ ಸಭಾ ಸೇರಿದಂತೆ ಹಿಂದೂಗಳ ಬೃಹತ್ ಪ್ರತಿಭಟನೆಗೆ ಕಾರಣವಾಯಿತು. ಆಗಸ್ಟ್ 20ರಂದು ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಪ್ರಾರಂಭಿಸಲಾಗಿದೆ. ಸ್ಟೇಷನ್ ಹೌಸ್ ಅಧಿಕಾರಿ ಜಹೀರ್ ಇಕ್ಬಾಲ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಬಂಧಿಸಲಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಂತಿಯುತವಾಗಿ ಹೋಗುತಿದ್ದ ಮಹಿಳಾ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಲು ಆದೇಶಿಸಿದ ಎಸ್ಎಚ್ಒ ಜಹೀರ್ ಇಕ್ಬಾಲ್ ಅವರು ಆರೋಪಿ ಮತ್ತು ಅವರ ಕುಟುಂಬವನ್ನು ರಕ್ಷಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪೊಲೀಸರ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ ನಂತರ, ಎಸ್ ಡಿಎಂ ಸಂತ್ರಸ್ತೆಯ ಕುಗ್ರಾಮಕ್ಕೆ ತೆರಳಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿತು. ಇದರ ನಡುವೆ ಕೋಪಗೊಂಡ ಜನರು ಆರೋಪಿಯ ಮನೆಗೆ ನುಗ್ಗಿ ಬೆಂಕಿ ಹಚ್ಚಲು ಪ್ರಯತ್ನಿಸಿದರು. ಆಗ ಆರೋಪಿ ತನ್ನ ಕುಟುಂಬ ಸದಸ್ಯರೊಂದಿಗೆ ಅಲ್ಲಿಂದ ಓಡಿಹೋದನು.

9 ಮತ್ತು 10ನೇ ತರಗತಿಯ 12 ವಿದ್ಯಾರ್ಥಿಗಳಿಗೆ ಮಾರ್ವಾದಲ್ಲಿನ ತಮ್ಮ ಶಾಲೆಯನ್ನು ತಲುಪಲು ಕಾಡಿನ ಮೂಲಕ ನಡೆಯಬೇಕಾಗಿರುವುದರಿಂದ ಹಾಗೂ ಕಾಡು ಪ್ರಾಣಿಗಳಲ್ಲದೆ, ಮಾರ್ವಾದ ಕಾಡುಗಳಲ್ಲಿ ಇತರ ಸಂಭಾವ್ಯ ಅಪಾಯಗಳಿರುವ ಕಾರಣ ಆಡಳಿತವು ಇಬ್ಬರು ಶಿಕ್ಷಕರನ್ನು ಗ್ರಾಮಕ್ಕೆ ನಿಯೋಜಿಸಿದೆ ಎಂಬುದಾಗಿ ತಿಳಿದು ಬಂದಿದೆ. ಹಾಗೇ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದ 20ರಿಂದ 30 ಮಹಿಳೆಯರ ಗುಂಪನ್ನು ತಡೆದು ಸಮಾಧಾನಪಡಿಸಲಾಗಿದೆ. ಆದರೆ ಪ್ರತಿಭಟನೆಯ ವೇಳೆ ಒಬ್ಬ ಹುಡುಗಿ ಗಾಯಗೊಂಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ವಧುವಿನ ಮುಂದೆಯೇ ಆಕೆಯ ಸಹೋದರಿಗೆ ಕಿಸ್‌ ಕೊಟ್ಟ ವರ! ಮದುವೆಗೆ ಬಂದವರು ಕಕ್ಕಾಬಿಕ್ಕಿ!

ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಸನಾತನ ಧರ್ಮ ಸಭಾದ ನಿಯೋಗವು ಕಿಶ್ತ್ವಾರ್ ಜಿಲ್ಲಾಧಿಕಾರಿ ರಾಜೇಶ್ ಕುಮಾರ್ ಶಾವನ್ ಅವರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿತು. ಹಂಜೆಲ್ ಮತ್ತು ಚಂಜರ್ ಪ್ರದೇಶಗಳಲ್ಲಿನ ಹಿಂದೂ ಅಲ್ಪಸಂಖ್ಯಾತರಿಗೆ ಭದ್ರತೆ ನೀಡುವಂತೆ ಮತ್ತು ಬಾಲಕಿಯರು ಶಾಲೆಗೆ ಹೋಗಲು ಅರಣ್ಯ ಪ್ರದೇಶಗಳ ಮೂಲಕ ಹೆಚ್ಚು ದೂರ ಪ್ರಯಾಣಿಸದಂತೆ ಹೊಸ ಯೋಜನೆಯನ್ನು ಜಾರಿ ಮಾಡುವಂತೆ ಕೋರಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಸೈಕಲ್‌ ಮೇಲೆ ಶಾಲೆಗೆ ಹೋಗುತ್ತಿದ್ದ ಮಕ್ಕಳಿಬ್ಬರಿಗೆ ವಿದ್ಯುತ್‌ ಶಾಕ್‌; ಕ್ಯಾಮೆರಾದಲ್ಲಿ ಸೆರೆಯಾಯ್ತು ಘೋರ ದೃಶ್ಯ

ಬೀದಿಯಲ್ಲಿ ಜನರ ಕಣ್ಣ ಮುಂದೆಯೇ (Viral Video) ಈ ಘೋರ ದುರಂತ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ (Viral Video) ಆಗಿದೆ. ವಿದ್ಯಾರ್ಥಿಗಳಿಬ್ಬರು ವಿದ್ಯಾಸಾಗರ್ ಶಾಲೆಯಲ್ಲಿ 10 ಮತ್ತು 8ನೇ ತರಗತಿಯಲ್ಲಿ ಓದುತ್ತಿದ್ದು, ಬೆಳಗ್ಗೆ ಒಂದೇ ಸೈಕಲ್‍ನಲ್ಲಿ ಶಾಲೆಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇದರಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.

VISTARANEWS.COM


on

Viral Video
Koo


ಆಂಧ್ರಪ್ರದೇಶದ ಕಡಪದಲ್ಲಿ ಬುಧವಾರ ಬೆಳಗ್ಗೆ ಸೈಕಲ್‌ ಮೇಲೆ ಶಾಲೆಗೆ ತೆರಳುತ್ತಿದ್ದ ಇಬ್ಬರು ಪುಟ್ಟ ವಿದ್ಯಾರ್ಥಿಗಳು ವಿದ್ಯುತ್‌ ತಂತಿ ಸ್ಪರ್ಶಕ್ಕೆ ಒಳಗಾಗಿದ್ದಾರೆ. ಒಬ್ಬ ವಿದ್ಯಾರ್ಥಿ ಕೆಲವೇ ಕ್ಷಣಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಇಂಟರ್ನ್ಯಾಷನಲ್ ವೆಲ್ಫೇರ್ ಮಂಟಪಂ ಬಳಿಯ ಅಂಗಡಿ ಬೀದಿಯಲ್ಲಿ ಜನರ ಕಣ್ಣ ಮುಂದೆಯೇ ಈ ಘೋರ ದುರಂತ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ (Viral Video) ಆಗಿದೆ. ವಿದ್ಯಾರ್ಥಿಗಳಿಬ್ಬರು ವಿದ್ಯಾಸಾಗರ್ ಶಾಲೆಯಲ್ಲಿ 10 ಮತ್ತು 8ನೇ ತರಗತಿಯಲ್ಲಿ ಓದುತ್ತಿದ್ದು, ಬೆಳಗ್ಗೆ ಒಂದೇ ಸೈಕಲ್‍ನಲ್ಲಿ ಶಾಲೆಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇದರಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಇಬ್ಬರು ಹುಡುಗರು ಸೈಕಲ್‍ನಲ್ಲಿ ಬರುತ್ತಿರುವಾಗ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದು, ತಕ್ಷಣವೇ ಸೈಕಲ್‍ನಿಂದ ಕೆಳಗೆ ಬಿದ್ದಿದ್ದಾರೆ. ಕೆಲವು ಕ್ಷಣಗಳ ನಂತರ, ಒಬ್ಬ ವಿದ್ಯಾರ್ಥಿಯ ದೇಹಕ್ಕೆ ಮತ್ತು ಸೈಕಲ್ ಗೆ ಬೆಂಕಿ ಹೊತ್ತಿಕೊಂಡಿತು ಮತ್ತು ಇನ್ನೊಬ್ಬ ಹುಡುಗ ಅವನ ಪಕ್ಕದಲ್ಲಿ ಚಲನೆಯಿಲ್ಲದೆ ಬಿದ್ದಿದ್ದ.
ವರದಿಗಳ ಪ್ರಕಾರ, ವಿದ್ಯಾರ್ಥಿಗಳಲ್ಲಿ ಒಬ್ಬನನ್ನು ತನ್ವೀರ್ ಎಂದು ಗುರುತಿಸಲಾಗಿದ್ದು, ಆತ ತೀವ್ರ ಸುಟ್ಟಗಾಯಗಳಿಂದ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಅವನನ್ನು ಸ್ಥಳೀಯರು ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಈ ಭಯಾನಕ ಘಟನೆಯ ವಿಡಿಯೊವನ್ನು ನಬಿಲಾ ಜಮಾಲ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಕಾಮೆಂಟ್ ವಿಭಾಗದಲ್ಲಿ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆಯೊಂದಿಗೆ ಆ ವಿಡಿಯೊಗೆ ಬೇಸರದಿಂದ , ಕೋಪದಿಂದ, ಅಳುತ್ತಾ ಕಾಮೆಂಟ್ ಮಾಡಿದ್ದಾರೆ, “ನೀವು ಮನೆಯಿಂದ ಹೊರಗೆ ಬರದಿದ್ದರೆ ಇಂತಹ ದುರಂತ ನಡೆಯದೆ ಸುರಕ್ಷಿತವಾಗಿರುತ್ತಿದ್ದೀರಿʼʼ ಎಂದು ವೀಕ್ಷಕರೊಬ್ಬರು ದುಃಖಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲದ ಕಾರಣ ಅವರು ಇಂತಹ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ. ಮತ್ತೊಂದು ಕಾಮೆಂಟ್‌ನಲ್ಲಿ ಒಬ್ಬರು ನಿರ್ಲಕ್ಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ” ಇದು ತುಂಬಾ ದುಃಖಕರವಾಗಿದೆ. ಇಂಥ ದುರಂತ ಸಂಭವಿಸುವ ಮೊದಲು ಸುತ್ತಮುತ್ತಲಿನ ಜನ ವಿದ್ಯುತ್ ಇಲಾಖೆಗೆ ದೂರು ನೀಡಲು ಸಾಧ್ಯವಾಗಲಿಲ್ಲ ಏಕೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ:ಹೆಣ್ಣಿನ ಮೇಲೆ ಆಸೆಯಾದರೆ ನಮ್ಮ ಬಳಿ ಬನ್ನಿ; ಕಾಮುಕರಿಗೆ ಯುವತಿಯ ಮುಕ್ತ ಆಹ್ವಾನ!

ಈ ಘಟನೆಯು ಸಾರ್ವಜನಿಕ ಸುರಕ್ಷತೆ ಮತ್ತು ಮೂಲಸೌಕರ್ಯ ನಿರ್ವಹಣೆಯ ಬಗ್ಗೆ ಗಂಭೀರ ವಿಷಯವನ್ನು ಬೆಳಕಿಗೆ ತರುತ್ತದೆ. ಅಂತಹ ಜನನಿಬಿಡ ಸ್ಥಳಗಳಲ್ಲಿ ಕರೆಂಟ್ ತಂತಿ ಬಿದ್ದಿರುವುದು ಸ್ಥಳೀಯ ಅಧಿಕಾರಿಗಳು ಸರಿಯಾದ ಸಮಯದಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬುದನ್ನು ಸೂಚಿಸುತ್ತದೆ. ಇಂತಹ ದುರಂತಗಳನ್ನು ತಪ್ಪಿಸಲು ಜಾಗರೂಕತೆ ಮತ್ತು ತ್ವರಿತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಇಂತಹ ಸ್ಥಳಗಳಲ್ಲಿ ನಿಯಮಿತವಾಗಿ ಅಧಿಕಾರಿಗಳು ಕೆಲಸ ನಿರ್ವಹಿಸುವುದು ಮತ್ತು ತಪಾಸಣೆ ಮಾಡುತ್ತಿರುಬೇಕು ಎಂಬುದನ್ನು ತಿಳಿಸುತ್ತದೆ.

Continue Reading

ಸಿನಿಮಾ

Viral Video: ‘ಶೀಲಾ ಕಿ ಜವಾನಿ’ ಹಾಡಿಗೆ ಸಖತ್ ಆಗಿ ಸೊಂಟ ಬಳುಕಿಸಿದ ಬೆಡಗಿ! ವಿಡಿಯೊ ನೋಡಿ

‘ತೀಸ್ ಮಾರ್ ಖಾನ್’ ಚಿತ್ರದಲ್ಲಿ (Viral Video) ಕತ್ರಿನಾ ಕೈಫ್ ಅವರು ಸೊಂಟ ಬಳುಕಿಸಿದ ‘ಶೀಲಾ ಕಿ ಜವಾನಿ’ ಸಾಂಗ್ ಸೂಪರ್ ಹಿಟ್ ಆಗಿತ್ತು. ಅದರಲ್ಲಿ ನಟಿ ಕತ್ರಿನಾ ಕೈಫ್ ಡ್ಯಾನ್ಸ್ ಜನರು ಫುಲ್ ಫಿದಾ ಆಗಿದ್ದರು. ಇತ್ತೀಚೆಗೆ ಅನೇಕ ಜನರು ಈ ಹಾಡಿಗೆ ಮತ್ತೆ ಡ್ಯಾನ್ಸ್ ಮಾಡುತ್ತಾ ರೀಲ್ಗಳನ್ನು ಮಾಡುತ್ತಿದ್ದಾರೆ. ಇದೀಗ ಯುವತಿಯೊಬ್ಬಳು ಈ ಹಾಡಿಗೆ ಡ್ಯಾನ್ಸ್ ಮಾಡಿದ್ದು, ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದು ನಟಿ ಕತ್ರಿನಾ ಕೈಫ್ ಅವರ ಅಭಿನಯವನ್ನು ಮೀರಿಸಿದೆ ಎಂದು ಹಲವರು ಹೊಗಳಿದ್ದಾರೆ.

VISTARANEWS.COM


on

Viral Video
Koo


ಮುಂಬೈ: 2010ರ ಬಾಲಿವುಡ್ ಚಲನಚಿತ್ರ ‘ತೀಸ್ ಮಾರ್ ಖಾನ್’ ನಲ್ಲಿ ಕತ್ರಿನಾ ಕೈಫ್ ಅವರ ಪ್ರಸಿದ್ಧ ಹಾಡು ‘ಶೀಲಾ ಕಿ ಜವಾನಿ’ ಸೂಪರ್ ಹಿಟ್ ಆಗಿತ್ತು. ಅದರಲ್ಲಿ ನಟಿ ಕತ್ರಿನಾ ಕೈಫ್ ಡ್ಯಾನ್ಸ್ ಜನರಿಗೆ ಸಿಕ್ಕಾಪಟ್ಟೆ ಇಷ್ಟವಾಗಿ ಹಲವು ಪ್ರೇಕ್ಷಕರ ಗಮನ ತನ್ನ ಕಡೆಗೆ ಸೆಳೆದಿದ್ದರು. ಇತ್ತೀಚೆಗೆ ಅನೇಕ ಜನರು ಈ ಹಾಡಿಗೆ ಮತ್ತೆ ಡ್ಯಾನ್ಸ್ ಮಾಡುತ್ತಾ ರೀಲ್‍ಗಳನ್ನು ಮಾಡುತ್ತಿದ್ದಾರೆ. ಇದೀಗ ಯುವತಿಯೊಬ್ಬಳು ಈ ಹಾಡಿಗೆ ಡ್ಯಾನ್ಸ್ ಮಾಡಿದ್ದು, ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (viral Video) ಆಗಿದ್ದು, ಇದು ನಟಿ ಕತ್ರಿನಾ ಕೈಫ್ ಅವರ ಅಭಿನಯವನ್ನು ಮೀರಿಸಿದೆ ಎಂದು ಹಲವರು ಹೊಗಳಿದ್ದಾರೆ.

“ಅಬ್ ರೀಚಾರ್ಜ್ ಮೆಹೆಂಗಾ ನಹೀ ಲಗ್ತಾ ಹೈ” ಎಂಬ ಶೀರ್ಷಿಕೆಯೊಂದಿಗೆ ‘ಮೆಮ್ಸ್ಚೋರ್’ ಎಂಬ ಖಾತೆಯಿಂದ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೊದಲ್ಲಿ, ಹುಡುಗಿಯೊಬ್ಬಳು ಡ್ಯಾನ್ಸ್ ಸ್ಟುಡಿಯೋದಲ್ಲಿ ಡ್ಯಾನ್ಸ್ ಮಾಡುತ್ತಿರುವ ಇತರ ನೃತ್ಯಗಾರರೊಂದಿಗೆ ಡ್ಯಾನ್ಸ್ ಮಾಡುತ್ತಿರುವುದನ್ನು ತೋರಿಸುತ್ತದೆ. ಅವಳ ಒಂದೊಂದು ಸ್ಟೆಪ್ ತುಂಬಾ ಆಕರ್ಷಕವಾಗಿದ್ದು, ಅವುಗಳನ್ನು ನಿಭಾಯಿಸಲು ತುಂಬಾ ಕಷ್ಟಕರವಾಗಿದೆ, ಹಾಗೇ ವೀಕ್ಷಕರಿಗೆ ಅವಳ ಡ್ಯಾನ್ಸ್ ಬಿಟ್ಟು ಬೇರೆ ಕಡೆ ಕಣ್ಣುಗಳನ್ನು ಹಾಯಿಸುವುದು ಅಸಾಧ್ಯವಾಗಿದೆ ಎನ್ನಲಾಗಿದೆ.

ಈ ವಿಡಿಯೊಗೆ ಅನೇಕರು ಕಾಮೆಂಟ್ ಮಾಡುವ ಮೂಲಕ ಯುವತಿಯ ಡ್ಯಾನ್ಸ್ ಬಗ್ಗೆ ಹೊಗಳಿದ್ದಾರೆ. ಬಳಕೆದಾರರೊಬ್ಬರು “ಫುಲ್ ಪೈಸಾ ವಸೂಲ್ ಡ್ಯಾನ್ಸ್” ಎಂದು ಬರೆದಿದ್ದಾರೆ. ಇನ್ನೊಬ್ಬ ಬಳಕೆದಾರರು “ಹಾ ಅಬ್ ದಿನ್ ಭರ್ ಯಾಹಿ ಸಬ್ ದೇಖ್ನಾ ಪ್ಯಾಡ್ ರಾ ಹೈ” (ಹೌದು, ಈಗ ನಾವು ಈ ರೀತಿಯ ವಿಷಯಗಳನ್ನು ದಿನವಿಡೀ ನೋಡಬೇಕಾಗಿದೆ) ಎಂದು ಮತ್ತೊಬ್ಬರು ಬರೆದಿದ್ದಾರೆ. ಮೂರನೇ ಬಳಕೆದಾರರು “ಉತ್ತಮ ನೃತ್ಯ ಚಿಲ್ ಮೂಡ್” ಎಂದು ಕಾಮೆಂಟ್ ಮಾಡಿದ್ದಾರೆ. ನಾಲ್ಕನೇ ಬಳಕೆದಾರರು “ಯೇ ಬಾಧಿಯಾ ಥಾ ಭಾಯ್” (ಇದು ಅದ್ಭುತವಾಗಿದೆ) ಎಂದು ಉದ್ಗರಿಸಿದ್ದಾರೆ.

ಇದನ್ನೂ ಓದಿ: ಹೆಣ್ಣಿನ ಮೇಲೆ ಆಸೆಯಾದರೆ ನಮ್ಮ ಬಳಿ ಬನ್ನಿ; ಕಾಮುಕರಿಗೆ ಯುವತಿಯ ಮುಕ್ತ ಆಹ್ವಾನ!

ಬಾಲಿವುಡ್ ನಿರ್ದೇಶಕಿ ಫರಾ ಖಾನ್ ನಿರ್ದೇಶನದ ಸೂಪರ್ ಹಿಟ್ ‘ತೀಸ್ ಮಾರ್ ಖಾನ್’ 2010ರಲ್ಲಿ ಬಿಡುಗಡೆಯಾಗಿದೆ. ಅಕ್ಷಯ್ ಕುಮಾರ್ ಈ ಚಿತ್ರದ ನಾಯಕ ನಟನಾಗಿ ನಟಿಸಿದ್ದು, ಇವರಿಗೆ ಜೊತೆಯಾಗಿ ನಟಿ ಕತ್ರಿನಾ ಕೈಫ್ ನಟಿಸಿದ್ದಾರೆ. ನಿರ್ದೇಶಕಿ ಫರಾ ಖಾನ್ ಅವರ ಪತಿ ಶಿರಿಷ್ ಕುಂದರ್ ನಿರ್ಮಾಣ ಸಂಸ್ಥೆ ಹಾಗೂ ಅಕ್ಷಯ್ ನಿರ್ಮಾಣದ ಹರಿ ಓಂ ಪ್ರೊಡಕ್ಷನ್ ಈ ಚಿತ್ರಕ್ಕೆ ಬಂಡವಾಳ ಹಾಕಿದೆ. ಈ ಚಿತ್ರದ ಸೂಪರ್ ಹಿಟ್ ಹಾಡು ‘ಶೀಲಾ ಕಿ ಜವಾನಿ’ ಇದನ್ನು ಸುನಿಧಿ ಚೌಹಾಣ್ ಹಾಗೂ ವಿಶಾಲ್ ದಾದ್ಲಾನಿ ಹಾಡಿದ್ದಾರೆ. ಈ ಹಾಡಿನ ಸಾಹಿತ್ಯವನ್ನು ಸ್ವತಃ ದಾದ್ಲಾನಿಯವರೇ ಬರೆದಿದ್ದಾರೆ ಮತ್ತು ವಿಶಾಲ್ ಶೇಖರ್ ಅವರು ಸಂಗೀತಸಂಯೋಜನೆ ಮಾಡಿದ್ದಾರೆ. ಚಿತ್ರದ ನಿರ್ದೇಶಕಿ ಫರ್ ಖಾನ್ ಅವರು ನೃತ್ಯ ಸಂಯೋಜನೆ ಮಾಡಿದ್ದಾರೆ.

Continue Reading

ಬೆಂಗಳೂರು

Kannada New Movie: ವಿನೋದ್ ಪ್ರಭಾಕರ್ ಅಭಿನಯದ ʼಬಲರಾಮನ ದಿನಗಳುʼ ಚಿತ್ರ ತಂಡದಿಂದ ಬಿಗ್ ಅನೌನ್ಸ್‌ಮೆಂಟ್!

ಪದ್ಮಾವತಿ ಫಿಲಂಸ್ ನಿರ್ಮಾಣದ “ಆ ದಿನಗಳು” ಖ್ಯಾತಿಯ ಕೆ.ಎಂ. ಚೈತನ್ಯ ನಿರ್ದೇಶನದ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರ “ಬಲರಾಮನ ದಿನಗಳು” ಸಿನಿಮಾ (Kannada New Movie) ಬಗ್ಗೆ ಚಿತ್ರ ತಂಡದಿಂದ ಆಗಸ್ಟ್ 23 ರಂದು ಬಿಗ್ ಅನೌನ್ಸ್‌ಮೆಂಟ್ ಮಾಡಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಪದ್ಮಾವತಿ ಫಿಲಂಸ್ ನಿರ್ಮಾಣದ “ಆ ದಿನಗಳು” ಖ್ಯಾತಿಯ ಕೆ.ಎಂ. ಚೈತನ್ಯ ನಿರ್ದೇಶನದ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರ (Kannada New Movie) ʼಬಲರಾಮನ ದಿನಗಳುʼ ಸಿನಿಮಾ ಬಗ್ಗೆ ಚಿತ್ರ ತಂಡದಿಂದ ಬಿಗ್ ಅನೌನ್ಸ್‌ಮೆಂಟ್ ಮಾಡಲಿದೆ.

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ “ಬಲರಾಮನ ದಿನಗಳು” ಚಿತ್ರವನ್ನು ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ನಿರ್ಮಾಣ‌ ಮಾಡುತ್ತಿದ್ದಾರೆ. “ಆ ದಿನಗಳು” ಖ್ಯಾತಿಯ ಕೆ‌.ಎಂ.ಚೈತನ್ಯ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಇದನ್ನೂ ಓದಿ: Job market: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ; ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಮುಂದಾದ ಶೇ. 72ರಷ್ಟು ಕಂಪನಿಗಳು!

ಕೆಲವು ದಿನಗಳ ಹಿಂದಷ್ಟೇ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಈ ಚಿತ್ರದ ಮೊದಲ ಪೋಸ್ಟರ್ ಎಲ್ಲರ ಗಮನ ಸೆಳೆದಿತ್ತು. ಆಗಸ್ಟ್ 23 ರಂದು “ಬಲರಾಮನ ದಿನಗಳು” ಚಿತ್ರದ ಕುರಿತು ಬಿಗ್ ಅನೌನ್ಸ್‌ಮೆಂಟ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಅದೇನಿರಬಹುದೆಂಬ ಕುತೂಹಲ ಅಭಿಮಾನಿಗಳಿಗಿದೆ.

ಇದನ್ನೂ ಓದಿ: Home Remedies: ಮಕ್ಕಳನ್ನು ಕಾಡುವ ಶೀತ-ಕೆಮ್ಮಿಗೆ ಮನೆಯಲ್ಲೇ ಇದೆ ಉಪಶಮನ

ಒಟ್ಟಿನಲ್ಲಿ ಪದ್ಮಾವತಿ ಫಿಲಂಸ್ ನಿರ್ಮಾಣದ, ಕೆ.ಎಂ.ಚೈತನ್ಯ ಹಾಗೂ ವಿನೋದ್ ಪ್ರಭಾಕರ್ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಆರಂಭದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.

Continue Reading

ಕರ್ನಾಟಕ

HD Kumaraswamy: ಕಪ್ಪುಚುಕ್ಕೆ ಇಲ್ಲವೆನ್ನುವ ಸಿದ್ದರಾಮಯ್ಯ ವೈಟ್ನರ್ ಉಜ್ಜಿ ʼಕಪ್ಪುಚುಕ್ಕೆʼ ತೆಗೆದಿದ್ದೇಕೆ?; ಕುಮಾರಸ್ವಾಮಿ ಪ್ರಶ್ನೆ

40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ಸಿಎಂ ಸಿದ್ದರಾಮಯ್ಯನವರೇ, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ʼಎಕ್ಸ್‌ʼ ಖಾತೆಯಲ್ಲಿ ಕಿಡಿಕಾರಿದ್ದಾರೆ. ಮೂಡಾದಲ್ಲಿ ನೀವು, ನಿಮ್ಮ ಸಕುಟುಂಬ ಪರಿವಾರ ಸರ್ಕಾರಿ ಭೂಮಿಯನ್ನು ಹೇಗೆಲ್ಲ ಮುಕ್ಕಿತು ಎನ್ನುವುದಕ್ಕೆ ದಂಡಿದಂಡಿ ದಾಖಲೆಗಳೇ ಇವೆ. ನಿಮ್ಮ ಪಟಾಲಂ ಹೆಲಿಕಾಪ್ಟರ್‌ನಲ್ಲಿ ಕದ್ದು ಸಾಗಿಸಿದ ದಾಖಲೆಗಳು ಸುಳ್ಳಾ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

VISTARANEWS.COM


on

HD Kumaraswamy
Koo

ಬೆಂಗಳೂರು: 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಪ್ರಶ್ನಿಸಿದ್ದಾರೆ.

ಈ ಕುರಿತು ಎಕ್ಸ್‌ (ಟ್ವೀಟ್‌)ನಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ʼʼಸಿದ್ದಕರ್ಮಿ ಸಿದ್ದರಾಮಯ್ಯನವರೇ ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ ಉಳಿದು ಲೂಟಿ ಹೊಡೆಯಬೇಕೆನ್ನುವ ನಿಮ್ಮ ಧನದಾಹದ ಹಪಾಹಪಿಯನ್ನೂ ಅರ್ಥ ಮಾಡಿಕೊಳ್ಳಬಲ್ಲೆ. ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುವ ನಿಮ್ಮ ಪ್ರಾರಬ್ಧ ಎಂಥಾ ಕೀಳುಮಟ್ಟಕ್ಕೆ ಇಳಿದಿದೆ ಎನ್ನುವುದನ್ನೂ ಅರ್ಥ ಮಾಡಿಕೊಂಡಿದ್ದೇನೆ. ಎಷ್ಟೇ ಆದರೂ ನೀವು ಸಕಲ ಕಲೆಗಳ ಸಿದ್ದಕರ್ಮಿ, ಇಂಥ ಗಲೀಜು ಕೆಲಸ ನಿಮಗೆ ಬೆಣ್ಣೆಯಿಂದ ಬಂದ ವಿದ್ಯೆ!ʼʼ ಎಂದು ಗೇಲಿ ಮಾಡಿದ್ದಾರೆ.

ಸಾಯಿ ವೆಂಕಟೇಶ್ವರಕ್ಕೆ 550 ಎಕರೆ ಮಂಜೂರು ಮಾಡಿದ್ದೇನೆ ಎಂದು ಬೊಗಳೆ ಬಿಟ್ಟಿದ್ದೀರಿ. ನನ್ನ ಬರವಣಿಗೆ ಫೋರ್ಜರಿ ಆಗಿದೆ. ಪತ್ರಿಕೆಗಳ ವರದಿಗೆ ನಾನು ಉತ್ತರ ಕೊಡುತ್ತೇನೆ. ಪಲಾಯನವಾದ ನನ್ನ ಜಾಯಮಾನವಲ್ಲ. ಆದರೆ, ಆ ವರದಿಯನ್ನೇ ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ? 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: IND vs ENG Test Series 2025: ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಮೂಡಾದಲ್ಲಿ ನೀವು, ನಿಮ್ಮ ಸಕುಟುಂಬ ಪರಿವಾರ ಸರ್ಕಾರಿ ಭೂಮಿಯನ್ನು ಹೇಗೆಲ್ಲಾ ಮುಕ್ಕಿತು ಎನ್ನುವುದಕ್ಕೆ ದಂಡಿದಂಡಿ ದಾಖಲೆಗಳೇ ಇವೆ. ನಿಮ್ಮ ಪಟಾಲಂ ಹೆಲಿಕಾಪ್ಟರ್‌ನಲ್ಲಿ ಕದ್ದು ಸಾಗಿಸಿದ ದಾಖಲೆಗಳು ಸುಳ್ಳಾ? ಕಪ್ಪುಚುಕ್ಕೆಯನ್ನು ನಿಮ್ಮ ವೈಟ್ನರ್ ಅಳಿಸೀತಾ ಸಿದ್ದರಾಮಯ್ಯನವರೇ? ನನ್ನ ಸಹಿ ಇಲ್ಲ, ಟಿಪ್ಪಣಿಯೂ ಇಲ್ಲ ಅಂತೀರಿ. ಅಪ್ಪಣೆಯನ್ನಷ್ಟೇ ಕೊಟ್ಟಿದ್ದೀರಿ! 14 ಸೈಟಿಗೆ ₹62 ಕೋಟಿ ಪರಿಹಾರ ಕೇಳಲು ಹೇಳಿದ್ದು ಯಾವ ಟಿಪ್ಪಣಿ? ನಿಮ್ಮದು ನಾಲಿಗೆಯೋ.. ಇನ್ನೇನೋ.. ಆಚಾರವಿಲ್ಲದ ನಾಲಿಗೆ ನನ್ನ ತಟ್ಟೆಯತ್ತ ಚಾಚಿದೆ… ಸತ್ತ ಜೀವದ ರುಚಿ ನೆಕ್ಕಲು ಎಂದು ಎಚ್‌ಡಿಕೆ ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: Kannada New Movie: ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಟೀಸರ್ ರಿಲೀಸ್‌

ಮಿಸ್ಟರ್ ಸಿದ್ದರಾಮಯ್ಯ, ನಾನು ಕಾನೂನು ಪಂಡಿತ, ವಕೀಲ ಎನ್ನುತ್ತೀರಿ. 2011ರಲ್ಲಿ ಸುಪ್ರೀಂ ಕೋರ್ಟ್ SITಗೆ ಕೊಟ್ಟ ಆದೇಶವೇನು ಎಂದು ನಿಮಗೆ ಗೊತ್ತಿಲ್ಲವೇ? ನಾನು ವಕೀಲ.. ನಾನು ವಕೀಲ.. ಎಂದು ಪದೇಪದೆ ಹೇಳಬೇಡಿ ಎಂದು ಹಿಂದೆಯೇ ಸಲಹೆ ಮಾಡಿದ್ದೆ. ಬುದ್ಧಿಗೇಡಿಗಳಿಗೆ ಬುದ್ಧಿವಾದ ರುಚಿಸದು. ರಾಜ್ಯಪಾಲರಿಗೆ SIT ಬರೆದ ಪತ್ರ ಇಟ್ಟುಕೊಂಡು ನೀವು ಹಾರಾಟ ಮಾಡುತ್ತಿದ್ದೀರಿ. ಪತಂಗದ ಹಾರಾಟ ನೋಡಲಿಕ್ಕೆ ಚೆಂದ, ಕೆಳಗಿರುವ ಬೆಂಕಿಜ್ವಾಲೆ ಅದಕ್ಕೆ ಅರಿವಿರುವುದಿಲ್ಲ. ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಿಮ್ಮ ಆನಂದ ತಾತ್ಕಾಲಿಕ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಸುತ್ತಲೂ ಪಟಾಲಂ ಕಟ್ಟಿಕೊಂಡು, ಹೈಕಮಾಂಡ್ ಅನ್ನೇ ಕಾಲಕಸ ಮಾಡಿಕೊಂಡು, ನಂಬಿ ಕೈಹಿಡಿದವರ ಬೆನ್ನಿಗೆ ಚೂರಿ ಹಾಕಿ ಕುರ್ಚಿಗಾಗಿ ಪಾಲಿಟಿಕ್ಸ್ ಮಾಡುವ ನಿಮ್ಮ ದಿಕ್ಕೆಟ್ಟ ದುಸ್ಥಿತಿ ನನಗಿಲ್ಲ ಸಿದ್ದರಾಮಯ್ಯನವರೇ.. ನನ್ನ ರಾಜಕಾರಣ ನಿಮ್ಮಂತೆಯೇ ಹಣಕ್ಕೆ, ಅಧಿಕಾರಕ್ಕೆ ಅಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ನಾನು ನಾನೇ… ‘ಸೋತರೆ ಸೋಲಬೇಕು ಬಾಹುಬಲಿಯಂತೆ..’ ಆ ಮಹಾನ್ ವಿರಾಗಿಯೇ ನನ್ನ ಆದರ್ಶ. 20 ತಿಂಗಳ ಅಧಿಕಾರ,14 ತಿಂಗಳ ಸರ್ಕಾರ ತ್ಯಜಿಸುವಾಗಲೂ ನಾನು ನಿರ್ಭಾವುಕ. ಇದು ನಿಮಗೆ ಸಾಧ್ಯವೇ? ಗೌರವಾನ್ವಿತ ಪ್ರಧಾನಮಂತ್ರಿಗಳ ರಕ್ಷಣೆ ಪಡೆದುಕೊಳ್ಳುವ, ಅವರ ಗೌರವಕ್ಕೆ ಧಕ್ಕೆ ತರುವ ಕೆಲಸ ನಾನೆಂದೂ ಮಾಡಲಾರೆ. ನನ್ನನ್ನು ನಾನು ರಕ್ಷಣೆ ಮಾಡಿಕೊಳ್ಳುವುದೂ ಗೊತ್ತು. ನಿಮ್ಮ ದುಷ್ಟತನದ ಭಕ್ಷಣೆಯೂ ಗೊತ್ತು. ನನ್ನ ಪುರಾಣ ಕಂತುಗಳಲ್ಲಿ ಬರುತ್ತದೆ ಎನ್ನುವ ಸಿದ್ದರಾಮಯ್ಯನವರೇ.. ನಿಮ್ಮ ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ. ಸಾವಿರಾರು ಚಾಪ್ಟರುಗಳ ಪ್ಯಾನ್ ಇಂಡಿಯಾ ಸಿನಿಮಾವನ್ನೇ ಮಾಡಬಹುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: Job market: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ; ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಮುಂದಾದ ಶೇ. 72ರಷ್ಟು ಕಂಪನಿಗಳು!

ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ನಿಮ್ಮ ‘ಸಿದ್ಧಹಸ್ತ’ ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ಸ್‌ಟೇಬಲ್‌ಗಳು ಸಾಲುಗಟ್ಟಬೇಕಾಗುತ್ತದೆ ಹುಷಾರ್ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಎಕ್ಸ್‌ (ಟ್ವೀಟ್‌)ನಲ್ಲಿ ಬರೆದುಕೊಂಡಿದ್ದಾರೆ.

Continue Reading
Advertisement
Viral Video
Latest9 mins ago

Viral Video: ಸೈಕಲ್‌ ಮೇಲೆ ಶಾಲೆಗೆ ಹೋಗುತ್ತಿದ್ದ ಮಕ್ಕಳಿಬ್ಬರಿಗೆ ವಿದ್ಯುತ್‌ ಶಾಕ್‌; ಕ್ಯಾಮೆರಾದಲ್ಲಿ ಸೆರೆಯಾಯ್ತು ಘೋರ ದೃಶ್ಯ

Viral Video
ಸಿನಿಮಾ19 mins ago

Viral Video: ‘ಶೀಲಾ ಕಿ ಜವಾನಿ’ ಹಾಡಿಗೆ ಸಖತ್ ಆಗಿ ಸೊಂಟ ಬಳುಕಿಸಿದ ಬೆಡಗಿ! ವಿಡಿಯೊ ನೋಡಿ

Kannada New Movie
ಬೆಂಗಳೂರು23 mins ago

Kannada New Movie: ವಿನೋದ್ ಪ್ರಭಾಕರ್ ಅಭಿನಯದ ʼಬಲರಾಮನ ದಿನಗಳುʼ ಚಿತ್ರ ತಂಡದಿಂದ ಬಿಗ್ ಅನೌನ್ಸ್‌ಮೆಂಟ್!

HD Kumaraswamy
ಕರ್ನಾಟಕ25 mins ago

HD Kumaraswamy: ಕಪ್ಪುಚುಕ್ಕೆ ಇಲ್ಲವೆನ್ನುವ ಸಿದ್ದರಾಮಯ್ಯ ವೈಟ್ನರ್ ಉಜ್ಜಿ ʼಕಪ್ಪುಚುಕ್ಕೆʼ ತೆಗೆದಿದ್ದೇಕೆ?; ಕುಮಾರಸ್ವಾಮಿ ಪ್ರಶ್ನೆ

MonkeyPox
ಆರೋಗ್ಯ41 mins ago

MonkeyPox: ತೀವ್ರಗೊಳ್ಳುತ್ತಿದೆ ಮಂಕಿ ಪಾಕ್ಸ್; ಮತ್ತೊಮ್ಮೆ ಲಾಕ್‌ಡೌನ್ ಘೋಷಣೆ?

Monsoon Fashion
ಫ್ಯಾಷನ್43 mins ago

Monsoon Fashion: ಟೀನೇಜ್‌ ಹುಡುಗಿಯರ ಮಾನ್ಸೂನ್‌ ಸ್ಟೈಲಿಂಗ್‌‌‌ಗೆ ಸಾಥ್‌ ನೀಡುತ್ತಿರುವ 3 ಫ್ಯಾಷನ್‌ ವೇರ್ಸ್

Home Remedies For Cough And Cold
ಆರೋಗ್ಯ50 mins ago

Home Remedies: ಮಕ್ಕಳನ್ನು ಕಾಡುವ ಶೀತ-ಕೆಮ್ಮಿಗೆ ಮನೆಯಲ್ಲೇ ಇದೆ ಉಪಶಮನ

kolkata Doctor murder case
ದೇಶ1 hour ago

Kolkata Doctor Murder Case: ಟ್ರೈನಿ ವೈದ್ಯೆ ಕೊಲೆ ಪ್ರಕರಣ- ಪ್ರಧಾನಿ ಮೋದಿಗೆ ದಿಢೀರ್‌ ಪತ್ರ ಬರೆದ ಮಮತಾ ಬ್ಯಾನರ್ಜಿ

rishab shetty
ಸಿನಿಮಾ1 hour ago

Rishab Shetty : ಕಂಬಳ ಬಳಿಕ ಕಾಂತಾರ- 2ನಲ್ಲಿ ಕಳರಿ ಪಯಟ್ಟು ಪ್ರದರ್ಶನಕ್ಕೆ ಸಜ್ಜಾದ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ

Viral Video
Latest1 hour ago

Viral Video: ಶವಾಗಾರದಲ್ಲಿ ಶವಗಳ ಪಕ್ಕದಲ್ಲೇ ಲೈಂಗಿಕ ಕ್ರಿಯೆ! ಸಂಚಲನ ಮೂಡಿಸಿದೆ ಈ ವಿಡಿಯೊ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌