KPSC Exams : ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿ ಪ್ರಕಟ - Vistara News

ಬೆಂಗಳೂರು

KPSC Exams : ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

KPSC Exam : ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರ ವಿವರ ಹೀಗಿದೆ

VISTARANEWS.COM


on

KPSC announces competitive exam schedule for various posts recruitment process
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC Exam) ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗಾಗಿ ಕಳೆದ ಮಾರ್ಚ್‌ 13ರಂದು ಅಧಿಸೂಚನೆ ಹೊರಡಿಸಿತ್ತು. ಇದೀಗ ಅದಕ್ಕೆ ಸಂಬಂಧಿಸಿದಂತೆ ಪರೀಕ್ಷಾ ವೇಳಾಪಟ್ಟಿಯನ್ನು (Time Table) ಪ್ರಕಟಿಸಿದೆ.

ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ, ಜಲಸಂಪನ್ಮೂಲ ಇಲಾಖೆ, ಅಂತರ್ಜಲ ನಿರ್ದೇಶನಾಲಯ, ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಆಯುಷ್ ಇಲಾಖೆಯಲ್ಲಿನ ಹೋಮಿಯೋಪತಿ, ಪದವಿ ಪೂರ್ವ ವಿದ್ಯಾರ್ಹತೆಯ ವಿವಿಧ ಇಲಾಖೆ, ಹೀಗೆ ಹಲವು ಇಲಾಖೆಗಳ ಗ್ರೂಪ್‌ ಎ, ಗ್ರೂಪ್‌ ಬಿ, ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧ, ಇದೀಗ ಕೆಪಿಎಸ್‌ಸಿ ನೇಮಕ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವೇಳಾಪಟ್ಟಿ ಬಿಡುಗಡೆ ಮಾಡಿದೆ.

KPSC announces competitive exam schedule for various posts recruitment process
KPSC announces competitive exam schedule for various posts recruitment process

ವೇಳಾಪಟ್ಟಿ ಹೀಗಿದೆ…

1) ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಬಾಯ್ಲರುಗಳ ಸಹಾಯಕ ನಿರ್ದೇಶಕರು 03 ಹುದ್ದೆಗಳು (ಉಳಿಕೆ ಮೂಲ ವೃಂದ)ಕ್ಕೆ- ಸೆಪ್ಟೆಂಬರ್‌ 18ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
2) ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂ ವಿಜ್ಞಾನಿ (ಉಳಿಕೆ ಮೂಲ ವೃಂದ) – 10 ಹುದ್ದೆಗಳು- ಸೆಪ್ಟೆಂಬರ್‌ 19 ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
3) ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳು (ಉಳಿಕೆ ಮೂಲ ವೃಂದ) ಸೆಪ್ಟೆಂಬರ್‌ 26 ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
4) ಕಾರ್ಖಾನೆಗಳು, ಬಾಯ್ಲರ್‌ಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು 07 ಹುದ್ದೆಗಳು (ಉಳಿಕೆ ಮೂಲ ವೃಂದ) ಸೆಪ್ಟೆಂಬರ್‌ 27 ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
5) ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರು 24 ಹುದ್ದೆಗಳು (ಉಳಿಕೆ ಮೂಲ ವೃಂದ) ಅಕ್ಟೋಬರ್‌ 5ರಂದು ಪರೀಕ್ಷೆ ನಡೆಯಲಿದೆ.
6) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ-1) 92 ಹುದ್ದೆಗಳು (ಉಳಿಕೆ ಮೂಲ ವೃಂದ) ಅಕ್ಟೋಬರ್‌ 6 ರಂದು ಪರೀಕ್ಷೆ ನಡೆಯಲಿದೆ.

KPSC announces competitive exam schedule for various posts recruitment process
KPSC announces competitive exam schedule for various posts recruitment process
KPSC announces competitive exam schedule for various posts recruitment process
KPSC announces competitive exam schedule for various posts recruitment process
KPSC announces competitive exam schedule for various posts recruitment process
KPSC announces competitive exam schedule for various posts recruitment process

ಕೆಸೆಟ್- 2024ಕ್ಕೆ ಅರ್ಜಿ ಸಲ್ಲಿಸಲು ಆ.28ರವರೆಗೆ ವಿಸ್ತರಣೆ

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್- 24)ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ಆಗಸ್ಟ್ 28ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಆ.22 ಕೊನೆ ದಿನವಾಗಿತ್ತು. ಸಾರ್ವಜನಿಕರ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, ಆ.30ರೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಅರ್ಹತಾ ನಿಬಂಧನೆ, ಪರೀಕ್ಷಾ ದಿನಾಂಕ ಇತ್ಯಾದಿ ವಿವರಗಳಿಗೆ ಜುಲೈ 13ರಂದು ಹೊರಡಿಸಿದ್ದ ಅಧಿಸೂಚನೆಯನ್ನು ನೋಡುವಂತೆ ತಿಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kannada New Movie: ಮುಖದಲ್ಲಿ ರಕ್ತ, ಕೈಯಲ್ಲಿ ಲಾಂಗ್; ಮಾಸ್ ಅವತಾರದಲ್ಲಿ ನಿರೂಪ್ ಭಂಡಾರಿ

ನಿರೂಪ್ ಭಂಡಾರಿ ಇದೀಗ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ರಕ್ತಸಿಕ್ತ ಮುಖ, ಕೈಯಲ್ಲಿ ಲಾಂಗ್ ಹಿಡಿದು ನಿರೂಪ್ ಕ್ಯಾಮೆರಾ ಎದುರಿಸಿದ್ದಾರೆ. ಇದು ಯಾವ ಚಿತ್ರಕ್ಕಾಗಿ ಅಂತೀರಾ? ನಿರೂಪ್ ‘ಅತಿಕಾಯʼ ಎನ್ನುವ ಹೊಸ ಸಿನಿಮಾದಲ್ಲಿ (Kannada New Movie) ಕಾಣಿಸಿಕೊಳ್ಳುತ್ತಿದ್ದು ಸಿಕ್ಕಾಪಟ್ಟೆ ರಗಡ್ ಆಗಿ ದರ್ಶನ ಕೊಡಲು ಸಜ್ಜಾಗಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಚಾಕೋಲೆಟ್ ಬಾಯ್, ಲವರ್ ಬಾಯ್ ಗೆಟಪ್‌ನಲ್ಲಿ ಮಿಂಚುತ್ತಿದ್ದ ನಿರೂಪ್ ಭಂಡಾರಿ ಇದೀಗ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ರಕ್ತಸಿಕ್ತ ಮುಖ, ಕೈಯಲ್ಲಿ ಲಾಂಗ್ ಹಿಡಿದು ನಿರೂಪ್ ಕ್ಯಾಮೆರಾ ಎದುರಿಸಿದ್ದಾರೆ. ಇದು ಯಾವ ಚಿತ್ರಕ್ಕಾಗಿ ಅಂತೀರಾ? ನಿರೂಪ್ ‘ಅತಿಕಾಯʼ ಎನ್ನುವ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು ಸಿಕ್ಕಾಪಟ್ಟೆ ರಗಡ್ ಆಗಿ ದರ್ಶನ ಕೊಡಲು ಸಜ್ಜಾಗಿದ್ದಾರೆ.

ಅಂದಹಾಗೆ ಅತಿಕಾಯ ಸಿನಿಮಾ, ನಾಗರಾಜ್ ಪೀಣ್ಯ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಈ ಹಿಂದೆ ʼಪದೇಪದೇʼ, ʼನಮಕ್‌ಹರಾಮ್ʼ ಮೊದಲಾದ ವಿಭಿನ್ನ ರೀತಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ ನಾಗರಾಜ್ ಪೀಣ್ಯ, ಸಣ್ಣ ಗ್ಯಾಪ್‌ನ ಬಳಿಕ ‘ಅತಿಕಾಯʼನಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಬಾರಿ ಹೊಸ ರೀತಿಯ ಕಥೆ ಸಿದ್ಧಪಡಿಸಿಕೊಂಡು ಅಖಾಡಕ್ಕಿಳಿದಿರುವ ನಾಗರಾಜ್, ಈಗಾಗಲೇ ಮೊದಲ ಹಂತದ ಶೂಟಿಂಗ್ ಮುಗಿಸಿದ್ದಾರೆ. ಮತ್ತೊಂದು ಹಂತದ ಚಿತ್ರೀಕರಣಕ್ಕೆ ಅಣಿಯಾಗುತ್ತಿದೆ ಚಿತ್ರತಂಡ.

ಈವರೆಗೂ ಬೆಂಗಳೂರಿನ ಜನಜಂಗುಳಿ ಪ್ರದೇಶಗಳಲ್ಲೇ ಬಹುತೇಕ ಚಿತ್ರೀಕರಣ ನಡೆಸಲಾಗಿದ್ದು, ನೈಜವಾಗಿ ಮೂಡಿಬರಬೇಕೆಂಬ ಕಾರಣದಿಂದ ರಿಯಲಿಸ್ಟಿಕ್ ಆಗಿಯೇ ಶೂಟ್ ಮಾಡಲಾಗಿದೆಯಂತೆ.

ಇದೀಗ ಚಿತ್ರದ ಫಸ್ಟ್‌ಲುಕ್ ಬಿಡುಗಡೆ ಮಾಡಲಾಗಿದ್ದು, ನಿರೂಪ್ ಮಾಸ್ ಗೆಟಪ್ ಅನಾವರಣಗೊಂಡಿದೆ. ನಿರೂಪ್ ಅವರ ಈ ಲುಕ್ ನೋಡಿ ಸಿನಿ ಅಭಿಮಾನಿಗಳು ಕೂಡ ಅಚ್ಚರಿಗೊಂಡಿದ್ದಾರೆ.

ʼಈ ಚಿತ್ರಕ್ಕಾಗಿ ನಿರೂಪ್ ಭಂಡಾರಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ವರ್ಕೌಟ್ ಮಾಡಿ ದೇಹ ದಂಡಿಸಿದ್ದಾರೆ. ಪಾತ್ರಕ್ಕಾಗಿ ಗೆಟಪ್ ಸಹ ಬದಲಾಯಿಸಿಕೊಂಡಿದ್ದಾರೆ. ಅವರು ಈವರೆಗೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ‘ಅತಿಕಾಯʼ ಮೂಲಕ ಎಂಟ್ರಿ ಕೊಡಲಿದ್ದಾರೆ ಎಂಬುದು ವಿಶೇಷ. ಡೈಲಾಗ್ ಡೆಲಿವರಿ ಕೂಡ ಭಿನ್ನವಾಗಿರಲಿದೆ. ಒಟ್ಟಾರೆ ಅವರು ಔಟ್ ಆಂಡ್ ಔಟ್ ಬದಲಾದ ರೂಪದಲ್ಲಿ ಕಾಣಸಿಗುತ್ತಾರೆ. ಸಿನಿಮಾ ಕೂಡ ತುಂಬಾ ರಗಡ್ ಆಗಿರಲಿದೆʼ ಎಂದು ವಿವರಿಸುತ್ತಾರೆ ನಿರ್ದೇಶಕ ನಾಗರಾಜ್ ಪೀಣ್ಯ.

ಇದನ್ನೂ ಓದಿ: IND vs ENG Test Series 2025: ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಉದಯಲೀಲ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಶ್ರೀನಿವಾಸ್ ಪಿ. ಬಾಬು ಸಂಕಲನ, ಸತೀಶ್ ಆರ್ಯನ್ ಸಂಗೀತ ಸಂಯೋಜಿಸುತ್ತಿದ್ದಾರೆ.

Continue Reading

ಬೆಂಗಳೂರು

CM Siddaramaiah: ಬುಡಕ್ಕೆ ನೀರು ಬಂದಾಗ ಬಿಜೆಪಿ ನಾಯಕರಿಗೆ ಜಾತಿ ನೆನಪಾಗುತ್ತದೆ! ಸಿದ್ದರಾಮಯ್ಯ ಗೇಲಿ

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್‌ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು ʼದಲಿತ ಗುರಾಣಿʼ ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ಎಕ್ಸ್‌(ಟ್ವೀಟ್‌) ನಲ್ಲಿ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್‌ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು “ದಲಿತ ಗುರಾಣಿ” ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಟೀಕಿಸಿದ್ದಾರೆ.

ಗುರುವಾರ ಈ ಕುರಿತು ಎಕ್ಸ್‌(ಟ್ವೀಟ್‌)ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ನನ್ನ ಕೆಲವು ಸರಳ ಪ್ರಶ್ನೆಗಳಿವೆ ಎಂದಿದ್ದಾರೆ.

ಇದನ್ನೂ ಓದಿ: Gold Rate Today: ಸುವರ್ಣಪ್ರಿಯರಿಗೆ ಸಿಹಿ ಸುದ್ದಿ; ಇಂದೂ ಚಿನ್ನದ ದರದಲ್ಲಿ ಇಳಿಕೆ

ಮೊದಲನೆಯದಾಗಿ, ದಲಿತ ಸಮುದಾಯಕ್ಕೆ ಸೇರಿರುವ ಥಾವರಚಂದ್ ಗೆಹ್ಲೋಟ್‌ ಅವರ ಬಗ್ಗೆ ನಿಮ್ಮಲ್ಲಿ ಅಷ್ಟೊಂದು ಗೌರವ ಮತ್ತು ಅಭಿಮಾನವಿದ್ದರೆ ಕೇಂದ್ರ ಸಚಿವ ಸಂಪುಟದಲ್ಲಿರಬೇಕಾಗಿದ್ದ ಅವರನ್ನು ಇಲ್ಲಿ ತಂದು ‘‘ಪಂಜರದ ಗಿಣಿʼ ಯನ್ನಾಗಿ ಯಾಕೆ ಮಾಡಿದ್ದೀರಿ? ‘‘ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮʼ ಸೇರುವಷ್ಟು ವಯಸ್ಸಾಗದೆ ಇದ್ದರೂ ಅವರ ಸಕ್ರಿಯ ರಾಜಕೀಯ ಜೀವನವನ್ನು ಯಾಕೆ ಮೊಟಕುಗೊಳಿಸಿದಿರಿ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವ ಸ್ಥಾನದಿಂದ ವಂಚಿತರನ್ನಾಗಿ ಮಾಡಿ, ತಮ್ಮ ರಾಜಕೀಯ ವಿರೋಧಿಗಳ ವಿರುದ್ಧದ ದ್ವೇಷದ ರಾಜಕಾರಣಕ್ಕೆ ದಲಿತ ಸಮುದಾಯದ ನಾಯಕನನ್ನು ದುರ್ಬಳಕೆ ಮಾಡಿಕೊಳ್ಳುವುದು ಆ ಸಮುದಾಯಕ್ಕೆ ಮಾಡುವ ಅನ್ಯಾಯ-ಅವಮಾನ ಅಲ್ಲವೇ? ಬಿಜೆಪಿ ನಾಯಕರೇ, ದಲಿತ ನಾಯಕರೊಬ್ಬರನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ? ಎಂದು ಕೇಳಿದ್ದಾರೆ.

ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ. ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯೊಳಗಿನ ‘ಸಂಘಿ ಮನಸ್ಸು’ ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು. ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು ಎಂದು ಆರೋಪಿಸಿದ್ದಾರೆ.

ದಲಿತ ಸಮುದಾಯದಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡಿ ಕಲಿಯಿರಿ ಎಂದು ಸಿಎಂ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: IND vs ENG Test Series 2025: ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ನಿಮಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೆ ಥಾವರಚಂದ್ ಗೆಹ್ಲೋತ್ ಅವರ ಮೇಲೆ ಕೆಟ್ಟ ಕೆಲಸ ಮಾಡಲು ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Continue Reading

ಬೆಳಗಾವಿ

Belgavi News : ಪರಿಹಾರ ನೀಡಲು ವಿಳಂಬ; ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ರೈತರು!

Belgavi News : ಸಾಂಬ್ರಾ ವಿಮಾನ ನಿಲ್ದಾಣ ವಿಸ್ತರಣೆ ಕಾಮಗಾರಿಗಾಗಿ ರೈತರು ಕಳೆದ 2008ರಲ್ಲಿ 270 ಎಕರೆ ಜಮೀನು ಕೊಟ್ಟಿದ್ದರು. ಆದರೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕೆ ನ್ಯಾಯವಾದಿಗಳ ಸಮ್ಮುಖದಲ್ಲೇ ಎಸಿ ಕಚೇರಿಯಲ್ಲಿನ ವಸ್ತುಗಳನ್ನು ರೈತರು ಹೊತ್ತೊಯ್ದರು.

VISTARANEWS.COM


on

By

Belgavi News
Koo

ಬೆಳಗಾವಿ: ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕೆ ರೈತರು (Belgavi News) ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ಘಟನೆ ನಡೆದಿದೆ. ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿನ ಉಪವಿಭಾಗಧಿಕಾರಿ ಕಚೇರಿಯಲ್ಲಿ ಘಟನೆ ನಡೆದಿದೆ. ನ್ಯಾಯಾಲಯದ ಆದೇಶದ ಮೇರೆಗೆ ಎಸಿ ಪೀಠೋಪಕರಣಗಳನ್ನು ರೈತರು ಜಪ್ತಿ ಮಾಡಿದ್ದಾರೆ.

ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ವಿಸ್ತರಣೆ ಕಾಮಗಾರಿಗಾಗಿ ರೈತರು ಕಳೆದ 2008ರಲ್ಲಿ 270 ಎಕರೆ ಜಮೀನು ಕೊಟ್ಟಿದ್ದರು. ಪ್ರತಿ ಎಕರೆಗೆ ಸರ್ಕಾರದಿಂದ ಕೇವಲ 2 ಲಕ್ಷ ಪರಿಹಾರ ನೀಡುವಂತೆ ಆದೇಶ ಹೊರಡಿಸಲಾಗಿತ್ತು. ಹೆಚ್ಚಿನ ಪರಿಹಾರ ಕೋರಿ 2011ರಲ್ಲಿ ರೈತರು ಕೋರ್ಟ್ ಮೊರೆಹೋಗಿದ್ದರು. ಬೆಳಗಾವಿಯ ಹಿರಿಯ ಶ್ರೇಣಿಯ ಸಿವಿಲ್‌ ನ್ಯಾಯಾಲಯದಲ್ಲಿ ದಾವೆ ರೈತರು ಹೂಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರತಿ ಗುಂಟೆಗೆ ₹40 ಸಾವಿರದಂತೆ ಪರಿಹಾರ ನೀಡುವಂತೆ 2018ರಲ್ಲಿಯೇ ಆದೇಶ ಹೊರಡಿಸಿತ್ತು.

ಇತ್ತ ಸಕಾಲಕ್ಕೆ ಪರಿಹಾರ ಕೊಡದಿದ್ದಾಗ ರೈತರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು. ರೈತರಿಗೆ ತಕ್ಷಣವೇ ನ್ಯಾಯಯುತ ಪರಿಹಾರ ನೀಡುವಂತೆ 2021ರಲ್ಲಿ ಮತ್ತೊಮ್ಮೆ ಕೋರ್ಟ್ ಆದೇಶ ಹೊರಡಿಸಿತ್ತು. ಆಗಲೂ ಪರಿಹಾರ ನೀಡದಿದ್ದರಿಂದ ಬೆಳಗಾವಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿನ ವಸ್ತು ಜಪ್ತಿ ಮಾಡುವಂತೆ ಕೋರ್ಟ್ ಸೂಚನೆ ನೀಡಿತ್ತು.

ಜಮೀನು ಕೊಟ್ಟ ಇನ್ನೂ 20 ರೈತರಿಗೆ 8 ಕೋಟಿ ಪರಿಹಾರ ಬಾಕಿ ಇದೆ. ಪರಿಹಾರ ಸಿಗದ ಹಿನ್ನೆಲೆ ನ್ಯಾಯವಾದಿಗಳ ಸಮ್ಮುಖದಲ್ಲೇ ಎಸಿ ಕಚೇರಿಯಲ್ಲಿನ ವಸ್ತುಗಳನ್ನು ರೈತರು ಹೊತ್ತೊಯ್ದರು. ಕಂಪ್ಯೂಟರ್‌, ಕುರ್ಚಿಗಳು, ಪ್ರಿಂಟರ್‌ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಲಾಯಿತು.

Belgavi news
Belgavi news

ಇದನ್ನೂ ಓದಿ: Road Accident : ಬಂಗಾರಪೇಟೆಯಲ್ಲಿ ವ್ಹೀಲಿಂಗ್ ಹಾವಳಿಗೆ ಅರ್ಚಕ ಬಲಿ; ರಸ್ತೆ ದಾಟುತ್ತಿದ್ದವನಿಗೆ ಕಾರು ಡಿಕ್ಕಿ

ಶಿರಡಿ ಸಾಯಿ 3ನೇ ಅವತಾರ ಬಾಬ ಹೆಸರಿನಲ್ಲಿ ವಂಚನೆ

ಬಾಬಾ ಭಕ್ತೆಯಾಗಿರುವ ಅಮೇರಿಕಾದ ವಿಜ್ಞಾನಿಗೆ ಬಾಬಾ ಆಪ್ತರು ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಸಾಯಿಬಾಬರ ಮೂರನೇ ಅವತಾರ ಎಂದೇ ಬಿಂಬಿತರಾಗಿರುವ ಪ್ರೇಮಸಾಯಿ ಅವರ ಹೆಸರಿನಲ್ಲಿ ವಂಚನೆ ನಡೆದಿದೆ. ವಂಚನೆ ದೂರು ದಾಖಲಿಸಿದಕ್ಕೆ ವಿಜ್ಞಾನಿ ಕಂ ಡಾಕ್ಟರ್ ಮೇಲೆ ಹಲ್ಲೆ ನಡೆಸಲಾಗಿದೆ.

ಬಾಬಾ ಆಪ್ತರು ಪ್ರೇಮಸಾಯಿ ಉಚಿತ ವೈದ್ಯ ಚಿಕಿತ್ಸಾಲಯದಲ್ಲಿ ಉಚಿತ ಚಿಕಿತ್ಸೆ ಕಾರ್ಯಕ್ರಮಕ್ಕೆ ಫಂಡಿಂಗ್ ಮಾಡಲು ಕೇಳಿದ್ದರು. ವಿಜ್ಞಾನಿ ಡಾ. ಸಾಯಿಕುಮಾರಿ ಎಂಬುವವರು ಬಳಿ ಸಿದ್ದೇಗೌಡ , ಸಿಂಧು ಹಾಗು ಇನ್ನಿತರರು ದೇಣಿಗೆ ಕೇಳಿದ್ದರು. ಈ ಕಾರ್ಯಕ್ರಮದಿಂದ ಪ್ರಭಾವಿತಳಾಗಿದ್ದ ಸಾಯಿಕುಮಾರಿ ಸುಮಾರು 1,99,000 ಸಾವಿರ ರೂ. ದೇಣಿಗೆ ನೀಡಿದ್ದರು.

ಈ ನಡುವೆ ಪ್ರೇಮಸಾಯಿ ಬಾಬ ಚನ್ನಪಟ್ಟಣಕ್ಕೆ ಭೇಟಿ ನೀಡಿದಾಗ ವಿಜ್ಞಾನಿ ಸಾಯಿಕುಮಾರಿ ಭೇಟಿಯಾಗಿದ್ದರು. ಈ ವೇಳೆ ದೇಣಿಗೆ ನೀಡಿರುವುದಾಗಿ ಹೇಳಿದ್ದರು. ಆದರೆ ಬಾಬಾಗೆ ಇದರ ಬಗ್ಗೆ ವಿಚಾರವೂ ಗೊತ್ತಿಲ್ಲ. ಬಾಬಾ ಅವರಿಗೆ ಗೊತ್ತಾಗದ ರೀತಿಯಲ್ಲಿ ಅವರ ಹೆಸರಿಲ್ಲಿ ದೇಣಿಗೆ ಸಂಗ್ರಹಿಸಿದ್ದು ತಿಳಿದಿದೆ. ಈ ಬಗ್ಗೆ ಚನ್ನಪಟ್ಟಣದಲ್ಲಿ ಪ್ರೇಮಸಾಯಿ ದೂರು ದಾಖಲಿಸಿದ್ದರು.

ಇದೇ ವಿಚಾರವಾಗಿ ಕೆಂಗೇರಿಯ ಮನೆಗೆ ಬಂದ ಬಾಬಾ ಆಪ್ತರು ವಿಜ್ಞಾನಿ ಪ್ರೇಮಾಸಾಯಿ ಮೇಲೆ ಹಲ್ಲೆ ನಡೆಸಿದ್ದಾರೆ. ದೂರು ವಾಪಾಸ್ ಪಡೆಯುವಂತೆ ಬೆದರಿಸಿದ್ದಾರೆ. ಸದ್ಯ ವಂಚನೆ ಸಂಬಂಧ ಚನ್ನಪಟ್ಟಣದಲ್ಲಿ ಹಾಗೂ ಹಲ್ಲೆ ಸಂಬಂಧ ಕೆಂಗೇರಿಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Gold Rate Today: ಸುವರ್ಣಪ್ರಿಯರಿಗೆ ಸಿಹಿ ಸುದ್ದಿ; ಇಂದೂ ಚಿನ್ನದ ದರದಲ್ಲಿ ಇಳಿಕೆ

ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ದರ (Gold Rate Today) ಹಾಗೂ ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

VISTARANEWS.COM


on

gold rate today
Koo

ಬೆಂಗಳೂರು: ಸತತವಾಗಿ ಏರಿಕೆಯಾಗಿದ್ದ ಚಿನ್ನದ ದರ ಕಳೆದ ಎರಡು ದಿನಗಳಿಂದ ಇಳಿಕೆ ಕಾಣುತ್ತಿದೆ (Gold Rate Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 30 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 33 ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,680 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,287 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,440 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,800 ಮತ್ತು ₹ 6,68,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 58,296 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 72,870 ಮತ್ತು ₹ 7,28,700 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,695₹ 7,297
ಮುಂಬೈ₹ 6,680₹ 7,287
ಬೆಂಗಳೂರು₹ 6,680₹ 7,287
ಚೆನ್ನೈ₹ 6,680₹ 7,287

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ. ಬೆಳ್ಳಿ 1 ಗ್ರಾಂಗೆ ₹ 86 ಹಾಗೂ 8 ಗ್ರಾಂಗೆ ₹ 688 ಇದೆ. 10 ಗ್ರಾಂ ₹ 860 ಹಾಗೂ 1 ಕಿಲೋಗ್ರಾಂ ₹ 86,000 ಬೆಲೆ ಬಾಳುತ್ತದೆ.

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್‌ಮಾರ್ಕ್‌ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್‌ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇನನ್ನೂ ಓದಿ: Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Continue Reading
Advertisement
Kannada New Movie
ಬೆಂಗಳೂರು2 mins ago

Kannada New Movie: ಮುಖದಲ್ಲಿ ರಕ್ತ, ಕೈಯಲ್ಲಿ ಲಾಂಗ್; ಮಾಸ್ ಅವತಾರದಲ್ಲಿ ನಿರೂಪ್ ಭಂಡಾರಿ

CM Siddaramaiah
ಬೆಂಗಳೂರು9 mins ago

CM Siddaramaiah: ಬುಡಕ್ಕೆ ನೀರು ಬಂದಾಗ ಬಿಜೆಪಿ ನಾಯಕರಿಗೆ ಜಾತಿ ನೆನಪಾಗುತ್ತದೆ! ಸಿದ್ದರಾಮಯ್ಯ ಗೇಲಿ

Jammu-Kashmir Election
ದೇಶ10 mins ago

Jammu-Kashmir Election: ರಂಗೇರಿದ ಚುನಾವಣೆ- ಫಾರೂಖ್‌ ಭೇಟಿಯಾದ ರಾಹುಲ್‌, ಖರ್ಗೆ; ಕಾಂಗ್ರೆಸ್‌-NC ಮೈತ್ರಿ ಕನ್ಫರ್ಮ್‌

Lung Cancer
ಆರೋಗ್ಯ13 mins ago

Lung Cancer: ಸಿಗರೇಟ್ ಮಾತ್ರವಲ್ಲ, ಶ್ವಾಸಕೋಶದ ಕ್ಯಾನ್ಸರ್‌‌ಗೆ ಇನ್ನೂ ಹಲವು ಕಾರಣಗಳಿವೆ!

Archana Kamath
ಕ್ರೀಡೆ53 mins ago

Archana Kamath: 24ನೇ ವಯಸ್ಸಿಗೆ ಟೇಬಲ್ ಟೆನಿಸ್​ಗೆ ವಿದಾಯ ಹೇಳಿದ ಕನ್ನಡತಿ, ಒಲಿಂಪಿಯನ್​ ಅರ್ಚನಾ ಕಾಮತ್

Belgavi News
ಬೆಳಗಾವಿ59 mins ago

Belgavi News : ಪರಿಹಾರ ನೀಡಲು ವಿಳಂಬ; ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ರೈತರು!

Kolkata Doctor murder case
ದೇಶ1 hour ago

Kolkata Doctor murder case: 36 ಗಂಟೆಗಳ ಶಿಫ್ಟ್‌ನಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸುವುದು ಅಮಾನವೀಯ- ಸುಪ್ರೀಂ ಅಭಿಪ್ರಾಯ

IND vs ENG Test Series 2025
ಕ್ರೀಡೆ2 hours ago

IND vs ENG Test Series 2025: ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

sexual abuse
ದೇಶ2 hours ago

Badlapur Horror: ಶಾಲೆಗಳೇ ಸುರಕ್ಷಿತ ಸ್ಥಳವಲ್ಲದಿದ್ದ ಮೇಲೆ ಶಿಕ್ಷಣದ ಹಕ್ಕಿಗೆ ಅರ್ಥವೇನಿದೆ? ಬಾಂಬೆ ಹೈಕೋರ್ಟ್‌ ಗರಂ

Road Accident
ಕೋಲಾರ2 hours ago

Road Accident : ಬಂಗಾರಪೇಟೆಯಲ್ಲಿ ವ್ಹೀಲಿಂಗ್ ಹಾವಳಿಗೆ ಅರ್ಚಕ ಬಲಿ; ರಸ್ತೆ ದಾಟುತ್ತಿದ್ದವನಿಗೆ ಕಾರು ಡಿಕ್ಕಿ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌