Karnataka Weather : ಕರಾವಳಿಯಲ್ಲಿ ರಭಸವಾಗಿ ಬೀಸಲಿದೆ ಗಾಳಿ; ಸಾಧಾರಣ ಮಳೆ ಸಾಧ್ಯತೆ - Vistara News

ಮಳೆ

Karnataka Weather : ಕರಾವಳಿಯಲ್ಲಿ ರಭಸವಾಗಿ ಬೀಸಲಿದೆ ಗಾಳಿ; ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ಕರಾವಳಿಯ ಸಮುದ್ರ ತೀರದಲ್ಲಿ ಗಾಳಿ ವೇಗ ಹೆಚ್ಚಾಗಿರಲಿದ್ದು, ಮಲೆನಾಡು ಹಾಗೂ ಒಳನಾಡಿನಲ್ಲಿ ಹಗುರದಿಂದ ಸಾಧಾರಣ (Rain News) ಮಳೆಯಾಗಲಿದೆ.

VISTARANEWS.COM


on

karnataka weather forecast
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲಿ ಹಗುರದಿಂದ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 , ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Weather: ಅಲೆಗಳ ಅಬ್ಬರಕ್ಕೆ ಅಂಕೋಲಾದಲ್ಲಿ ಕೊಚ್ಚಿ ಹೋದ ಮನೆ; ಭಾರಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬಂಡೆಗಳು

ಯೆಲ್ಲೋ ಅಲರ್ಟ್‌

ಗುಡಗು ಸಹಿತ ಭಾರಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್‌ 24ರಂದು ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather: ಅಲೆಗಳ ಅಬ್ಬರಕ್ಕೆ ಅಂಕೋಲಾದಲ್ಲಿ ಕೊಚ್ಚಿ ಹೋದ ಮನೆ; ಭಾರಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬಂಡೆಗಳು

Karnataka Weather Forecast: ಕರಾವಳಿಯಲ್ಲಿ ಅಲೆಗಳ ಅಬ್ಬರ ಜೋರಾಗಿದ್ದರೆ, ಇತ್ತ ಮಲೆನಾಡಿನಲ್ಲಿ ಭಾರಿ ಮಳೆಗೆ (Rain News) ಚಾರ್ಮಾಡಿ ಘಾಟ್‌ನಲ್ಲಿ ಬಂಡೆ ಕಲ್ಲುಗಳು ಧರೆಗುರುಳಿವೆ. ವಿಜಯಪುರ, ವಿಜಯನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

Karnataka weather Forecast
Koo

ಕಾರವಾರ: ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಅಲೆಗಳ ಅಬ್ಬರ (Karnataka Weather Forecast) ಜೋರಾಗಿದೆ. ಭಾರೀ ಅಲೆಗಳ ಅಬ್ಬರಕ್ಕೆ (Rain News) ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಹಾರವಾಡದ ತರಂಗಮೇಟ ಪ್ರದೇಶದಲ್ಲಿ ಮನೆಯೊಂದು ಕೊಚ್ಚಿಹೋಗಿದೆ. ಮೀನುಗಾರ ಅಶೋಕ್ ಹರಿಕಂತ್ರ ಎಂಬುವವರ ಮನೆ ಸಮುದ್ರಪಾಲಾಗಿದೆ.

ತರಂಗಮೇಟ ತೀರದ ಸುಮಾರು 200 ಮೀಟರ್ ವ್ಯಾಪ್ತಿಯಲ್ಲಿ ಅಲೆಗಳ ಅಬ್ಬರಕ್ಕೆ ಕಳೆದ ಮೂರು ತಿಂಗಳಿಂದ ಕಡಲಕೊರೆತ ಉಂಟಾಗಿತ್ತು. ಕುಟುಂಬಸ್ಥರು ಎರಡು ತಿಂಗಳ ಹಿಂದೆಯೇ ಮನೆ ಬಿಟ್ಟು ಬೇರೆಡೆ ಉಳಿದುಕೊಂಡಿದ್ದರು. ಇಂದು ಗುರುವಾರ ಅಲೆಗಳ ಅಬ್ಬರಕ್ಕೆ ಮನೆ, ತೆಂಗಿನಮರ ನೀರುಪಾಲಾಗಿದೆ. ಮನೆ, ತೆಂಗಿನಮರ ಕೊಚ್ಚಿಹೋಗುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತರಂಗಮೇಟ ಕಡಲತೀರಕ್ಕೆ ಹೊಂದಿಕೊಂಡು 30ಕ್ಕೂ ಅಧಿಕ ಮೀನುಗಾರರ ಮನೆಗಳು ಇವೆ. ಕಡಲತೀರಕ್ಕೆ ಅಲೆತಡೆಗೋಡೆ ನಿರ್ಮಿಸುವಂತೆ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್‌ನ ತಪ್ಪಲಿನಲ್ಲಿ ಭಾರಿ ಮಳೆಯಾಗಿದೆ. ಧಾರಾಕಾರ ಮಳೆಗೆ ಚಾರ್ಮಾಡಿಯಲ್ಲಿ ಬಂಡೆಗಳು ಧರೆಗುರುಳಿವೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್‌ನ 8 ಮತ್ತು 9ನೇ ತಿರುವಿನಲ್ಲಿ ಘಟನೆ ನಡೆದಿದೆ.

ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಯಲ್ಲೇ ನೀರು ತುಂಬಿ ಹರಿಯುತ್ತಿದೆ. ಮಳೆ ನೀರಿನ ಜತೆ ರಸ್ತೆಗೆ ಕಲ್ಲುಗಳು ತೇಲಿ ಬಂದಿದೆ. ಗುಡ್ಡ ಕುಸಿದು ರಸ್ತೆ ಮೇಲೆ ಬಂಡೆ ಕಲ್ಲುಗಳು ಉರುಳಿವೆ. ಸ್ಥಳಕ್ಕೆ ಚಾರ್ಮಾಡಿ ಘಾಟಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ‌ ಸಂಚಾರ ಎಂದಿನಂತೆ ಇದ್ದು, ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.

ಇನ್ನೂ ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಗ್ರಾಮಸ್ಥರ ಕಣ್ಣೆದುರೆ ಮನೆಗೆ ಸಿಡಿಲು ಬಡಿದು, ಮನೆ ಚಾವಣಿ ಸಂಪೂರ್ಣ ಹಾನಿಯಾಗಿ, ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಮಾಳಿಗನಾಡು ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮದ ಸೀತು ಎಂಬುವವರ ಮನೆಗೆ ಸಂಪೂರ್ಣ ಹಾನಿಯಾಗಿದೆ. ಮನೆಯ ಸದಸ್ಯರು ತೋಟದ ಕೆಲಸಕ್ಕೆ ಹೋಗಿದ್ದರಿಂದ ಅವಘಡ ಸಂಭವಿಸಿದಾಗ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಮನೆಯ ಹೆಂಚುಗಳು, ಬಾಗಿಲು ಕಿಟಕಿ ಸುಟ್ಟ ಸ್ಥಿತಿ ತಲುಪಿದೆ.

ಇದನ್ನೂ ಓದಿ: Belgavi News : ಪರಿಹಾರ ನೀಡಲು ವಿಳಂಬ; ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ರೈತರು!

ವಿಜಯಪುರದಲ್ಲಿ ಉಕ್ಕಿ ಹರಿಯುತ್ತಿರುವ ಹಳ್ಳ

ಇತ್ತ ರೋಣಿಹಾಳ ಹಳ್ಳ ಉಕ್ಕಿ ಹರಿಯುತ್ತಿದ್ದು, ಜನರು ಹಳ್ಳದಲ್ಲೆ ಓಡಾಡುತ್ತಿದ್ದಾರೆ. ನಿನ್ನೆ ಬುಧವಾರ ತಡರಾತ್ರಿ ಸುರಿದ ಮಳೆಗೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ರೋಣಿಹಾಳ. ಗರಸಂಗಿ, ಆಸಂಗಿ ಹಳ್ಳಗಳು ಉಕ್ಕಿ ಹರಿದಿದೆ. ಅಪಾಯದ ನಡುವೆಯೂ ಗ್ರಾಮಸ್ಥರು ಜೀವದ ಹಂಗು ತೊರೆದು ಹಳ್ಳ ದಾಟಲು ಯತ್ನಿಸುತ್ತಿದ್ದಾರೆ. ವಿಜಯಪುರ ತಾಲೂಕಿನ ಲೋಗಾಂವಿ ಗ್ರಾಮದಲ್ಲಿ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ. ರಾಜು ಹುನ್ನೂರ್ ಎಂಬುವವರಿಗೆ ಸೇರಿದ ದ್ರಾಕ್ಷಿ ಬೆಳೆ ಭಾರಿ ಮಳೆಗೆ ಬೆಳೆಯ ಕಂಬಗಳು ಹಾಗೂ ದ್ರಾಕ್ಷಿ ಬೆಳೆ ನೆಲಕ್ಕುರುಳಿವೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ದ್ರಾಕ್ಷಿ ಹಾನಿಯಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ರೈತರ ಮನವಿ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ತಡ ರಾತ್ರಿ ಭರ್ಜರಿ ಮಳೆಗೆ ಬಹುತೇಕ ಕಡೆ ರಸ್ತೆಗಳು ಜಲಾವೃತಗೊಂಡಿದ್ದವು. ದಾವಣಗೆರೆ ನಗರ ಹಾಗೂ ಹೊನ್ನಾಳಿ ಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಸುರಿದ ಮಳೆಯಿಂದಾಗಿ ಜಮೀನಿಗೆ ನೀರು ನುಗ್ಗಿದೆ. ವಿಜಯನಗರ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೈತರ ಜಮೀನಿ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಭಾರಿ ಮಳೆಗೆ ಬೈಲುವದ್ದಿಗೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ಕೆರೆ ಕೋಡಿ ಬಿದ್ದು ಗುಲಾಬಿ ತೋಟ, ಮೆಣಸಿನಕಾಯಿ ತೋಟ, ಹತ್ತಿ, ಹಾಗೂ ಮೆಕ್ಕೆಜೋಳ ಬೆಳೆದಿದ್ದ ಜಮೀನಿಗೆ ನೀರು ನುಗ್ಗಿದೆ. ಹತ್ತಾರು ಸಾವಿರ ಖರ್ಚು ಮಾಡಿದ್ದ ಬೆಳೆ ಮಳೆಗೆ ಮುಕ್ಕಾಲು ಭಾಗ ಹಾನಿಯಾಗಿದೆ. ಬೆಳೆ ಹಾನಿಯಾಗಿದ್ದಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಗುಲಾಬಿ ಬೆಳೆಗಾರ ಕಂಗಾಲಾಗಿದ್ದಾರೆ. ಪರಿಹಾರಕ್ಕಾಗಿ ಹತ್ತಿ, ಮೆಣಸಿನಕಾಯಿ, ಮೆಕ್ಕೆಜೋಳ ಬೆಳೆದ ರೈತರಿಂದ ಆಗ್ರಹಿಸಿದ್ದಾರೆ.

ಬಿರುಗಾಳಿಗೆ ವಾಲಿದ ಸಿಗ್ನಲ್ ಕಂಬ!

ಬಿರುಗಾಳಿಗೆ ಸಿಗ್ನಲ್‌ ಕಂಬ ವಾಲಿದ ಘಟನೆ ಗದಗ ನಗರದ ಮುಳಗುಂದ ನಾಕಾದ ಸಿಗ್ನಲ್‌ನಲ್ಲಿ ಘಟನೆ ನಡೆದಿದೆ. ವಾಹನಗಳ ಓಡಾಡುವ ಸಂದರ್ಭದಲ್ಲಿ ಕಂಬ ವಾಲಿದ್ದು, ಸವಾರರು ಕಕ್ಕಾಬಿಕ್ಕಿಯಾದರು. ತಕ್ಷಣ ಅಲರ್ಟ್ ಟ್ರಾಫಿಕ್ ಪೊಲೀಸರು ಬ್ಯಾರಿಕೆಡ್ ಹಾಕಿ ಪರ್ಯಾಯ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಸ್ಥಳಕ್ಕೆ ಟ್ರಾಫಿಕ್ ಪಿಎಸ್ಐ ಶಕುಂತಲಾ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಾಳೆಗೂ ಇರಲಿದೆ ಮಳೆ ಅಬ್ಬರ

ನಾಳೆ ಶುಕ್ರವಾರ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ನಿರಂತರ ಗಾಳಿಯ ವೇಗ 40-50 ಕಿ.ಮೀ ಬೀಸುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka Weather: ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿ ವಿವಿಧೆಡೆ ಭಾರಿ ಮಳೆ ಸಾಧ್ಯತೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

Karnataka Weather
ಹಾವೇರಿ ನಗರದಲ್ಲಿ ಬುಧವಾರ ಸುರಿದ ಮಹಾ ಮಳೆಗೆ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದವು.
Koo

ಬೆಂಗಳೂರು: ಆ.22ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರಿ ಮಳೆ (Rain News) ಸುರಿಯುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಆ. 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ
ಆ.24ರಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಆ.27ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದೆ.

ಮೀನುಗಾರರಿಗೆ ಎಚ್ಚರಿಕೆ

ಗಾಳಿಯ ವೇಗ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀ ವರೆಗೆ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಚಾಲ್ತಿಯಲ್ಲಿರುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31° C ಮತ್ತು 22° C ಆಗಿರಬಹುದು.

ಇದನ್ನೂ ಓದಿ | Almatti Dam: ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಡೆಂಗ್ಯೂ ಮಧ್ಯೆ ಝಿಕಾ ವೈರಸ್‌ ಆತಂಕ; ಸೋಂಕು ತಡೆಗೆ ಮಾರ್ಗಸೂಚಿ ಪ್ರಕಟ

Zika Virus Case
Zika Virus Case

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳ ಏರಿಕೆಯೊಂದಿಗೆ, ಝಿಕಾ ವೈರಸ್ ಸೋಂಕಿನ ಪ್ರಕರಣಗಳು (Zika Virus Case) ವರದಿಯಾಗುತ್ತಿರುವುದು (7 ಪ್ರಕರಣಗಳು) ಜನರಲ್ಲಿ ಆತಂಕ ಮೂಡಿಸಿದೆ. ಈಡಿಸ್ ಸೊಳ್ಳೆಗಳಲ್ಲಿ ಝಿಕಾ ವೈರಸ್ ಪತ್ತೆಯಾಗಿರುವುದು (2 ಜಿಲ್ಲೆಗಳಲ್ಲಿ) ಆತಂಕದ ವಿಷಯವಾಗಿದೆ. ಈಡಿಸ್ ಲಾರ್ವಾ ನಿರ್ಮೂಲನೆಯು ಸಮರ್ಪಕವಾಗಿ ನಡೆದಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಹಾಗೂ ಝಿಕಾ ವೈರಸ್ ಸೋಂಕು ಹರಡುವಿಕೆ ನಿಯಂತ್ರಿಸಬಹುದು. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್‌ ಅವರು ಸುತ್ತೋಲೆ ಹೊರಡಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಿಗದಿತವಾಗಿ ಮತ್ತು ಪ್ರತಿ ಶುಕ್ರವಾರ ಲಾರ್ವಾ ನಿರ್ಮೂಲನಾ ದಿನವೆಂದು ಘೋಷಿಸಿ, ಸಮರೋಪಾದಿಯಲ್ಲಿ ಲಾರ್ವಾ ನಿರ್ಮೂಲನೆಯನ್ನು ಫಲಿತಾಂಶ ಆಧಾರಿತ ಚಟುವಟಿಕೆಯನ್ನಾಗಿ ಕೈಗೊಳ್ಳಲು ಈಗಾಗಲೇ ಸಲಹಾ ಪತ್ರಗಳು, ಸುತ್ತೋಲೆಗಳು, ನಿರ್ದೇಶನಗಳನ್ನು ನೀಡಿದ್ದರೂ, ಈ ಚಟುವಟಿಕೆಯು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳದ ಹಿನ್ನೆಲೆ ಝಿಕಾ ವೈರಸ್ ಪ್ರಸರಣವೂ ಕಂಡುಬಂದಿದೆ.

ಝಿಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲದಿರುವುದರಿಂದ, ಡೆಂಗ್ಯೂ ಜ್ವರದ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ಹಾಗೂ ನಿರ್ವಹಣೆ ಮಾಡಲಾಗುತ್ತದೆ. ಮುಂದುವರಿದು, ಗರ್ಭಿಣಿಯರು ಝಿಕಾ ವೈರಸ್ ಸೋಂಕಿತರಾದಲ್ಲಿ ಹುಟ್ಟುವ ಮಗುವಿನಲ್ಲಿ ಮೈಕ್ರೋಸೆಫಾಲಿ ಹಾಗೂ ಇನ್ನಿತರ ನರಸಂಬಂಧಿ ಅಂಗವೈಕಲ್ಯ (Neurological Anomalies) ಗಳು ಮತ್ತು ದೃಷ್ಟಿ ದೋಷ ಉಂಟಾಗುವ ಸಾಧ್ಯತೆಯು ಅಧಿಕವಾಗಿರುತ್ತದೆ. ಆದ್ದರಿಂದ, ಝಿಕಾ ವೈರಸ್ ಸೋಂಕಿನ ನಿಯಂತ್ರಣಕ್ಕಾಗಿ ಈ ಕೆಳಕಂಡ ಕ್ರಮಗಳನ್ನು ಆಯಾ ಜಿಲ್ಲಾಡಳಿತದ ಮೇಲ್ವಿಚಾರಣೆಯಲ್ಲಿ, ಕಟ್ಟುನಿಟ್ಟಾಗಿ ಕೈಗೊಳ್ಳಲು ಸೂಚಿಸಿದೆ.

ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಮನವಿ

  • ಸಾರ್ವಜನಿಕರು ಝಿಕಾ ವೈರಸ್ ಸೋಂಕು ಹಾಗೂ ನಿಯಂತ್ರಣದ ಕುರಿತು ಮಾಹಿತಿಯರನ್ನು ಹೊಂದಿರಬೇಕು ಹಾಗೂ ಅನಗತ್ಯ ಭಯದಿಂದ ದೂರವಿದ್ದು, ಈ ಕೆಳಕಂಡ ಕ್ರಮಗಳನ್ನು ಪಾಲಿಸುವುದು ಅಗತ್ಯವಾಗಿದೆ.
  • ಝಿಕಾ ಸೋಂಕಿನ ಲಕ್ಷಣಗಳು ಸಾಮಾನ್ಯವಾಗಿ ಸೌಮ್ಯ ಸ್ವರೂಪದ್ದಾಗಿದ್ದು, ತೀವ್ರ ಸ್ವರೂಪದ ಸೋಂಕಿನ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳು ಹಾಗೂ ಸೋಂಕಿನಿಂದ ಮರಣ ಪ್ರಕರಣಗಳು ಅತಿ ವಿರಳ.
  • ಆದಾಗ್ಯೂ ಜ್ವರ, ಕೆಂಪಾದ ಕಣ್ಣುಗಳು, ತಲೆನೋವು, ಗಂಧೆಗಳು, ಸ್ನಾಯು ಮತ್ತು ಕೀಲುಗಳಲ್ಲಿ ನೋವು, ಈ ಲಕ್ಷಣಗಳನ್ನು ಹೊಂದಿದವರು ಹತ್ತಿರದ ಆರೋಗ್ಯ ಸಂಸ್ಥೆಗೆ ಭೇಟಿ ನೀಡಿ ಅಗತ್ಯ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಸದರಿ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲದಿರುವುದರಿಂದ, ರೋಗ ಲಕ್ಷಣಗಳಿಗನುಗುಣವಾಗಿ ನಿರ್ವಹಣೆ ಮಾಡಲಾಗುವುದು.
  • ಶಂಕಿತ/ ದೃಢ ಝಿಕಾ ಸೋಂಕಿನ ಪ್ರಕರಣಗಳು ಪ್ರತ್ಯೇಕವಾಗಿದ್ದು, ಅಗತ್ಯ ವಿಶ್ರಾಂತಿಯನ್ನು ಪಡೆಯಬೇಕು. ದ್ರವರೂಪದ ಆಹಾರವನ್ನು ಹೆಚ್ಚಿಗೆ ಸೇವಿಸಬೇಕು ಹಾಗೂ ಮಲಗುವಾಗ, ವಿಶ್ರಾಂತಿ ಪಡೆಯುವಾಗ (ಹಗಲು ಹೊತ್ತಿನಲ್ಲಿಯೂ ಸಹ) ಸೊಳ್ಳೆ ಪರದೆಯನ್ನು ಬಳಸಬೇಕು.
  • ಗರ್ಭಿಣಿಯರು ಈಡಿಸ್ ಸೊಳ್ಳೆ ಕಡಿತದಿಂದ ಪಾರಾಗಲು ಸ್ವಯಂ ರಕ್ಷಣಾ ವಿಧಾನಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು.
  • ಕಂಟೋನ್ಮೆಂಟ್ ವಲಯದಲ್ಲಿರುವ ಗರ್ಭಿಣಿಯರು ಸೀರಂ ಮತ್ತು ಮೂತ್ರದ ಮಾದರಿಯನ್ನು ಝಿಕಾ ವೈರಸ್ ಪರೀಕ್ಷೆಗೆ ಸಲ್ಲಿಸಬೇಕು ಹಾಗೂ ಸ್ಕ್ಯಾನಿಂಗ್ ವರದಿಯನ್ನು ತಜ್ಞರಿಂದ ವಿಶ್ಲೇಷಿಸಬೇಕು.
  • ದೇಹವನ್ನು ಸಂಪೂರ್ಣವಾಗಿ ಮುಚ್ಚುವಂತೆ ಬಟ್ಟೆಯನ್ನು ಭರಿಸುವುದು, ಸೊಳ್ಳೆ ವರದೆಯ ಬಳಕೆಯೂ ಸೇರಿದಂತೆ ಇತರ ಸ್ವಯಂ ರಕ್ಷಣಾ ವಿಧಾನಗಳನ್ನು ಸಾರ್ವಜನಿಕರು ಪಾಲಿಸುವುದು ಅಗತ್ಯವಾಗಿದೆ.
  • ಸಾರ್ವಜನಿಕರು ತಮ್ಮ ಮನೆಯ ಹಾಗೂ ಸಿಬ್ಬಂದಿಗಳು ತಮ್ಮ ಕಚೇರಿಗಳ ಒಳಾಂಗಣ ಹಾಗೂ ಸುತ್ತ-ಮುತ್ತಲಿರುವ ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವುದು ಹಾಗೂ ಆರೋಗ್ಯ ಸಿಬ್ಬಂದಿ / ಆಶಾ ನೀಡುವ ಸಲಹೆ-ಸೂಚನೆಗಳನ್ನು ಪಾಲಿಸುವುದು ಅಗತ್ಯವಾಗಿದೆ.

ಇದನ್ನೂ ಓದಿ | Zika Virus : ಆನೇಕಲ್‌ನಲ್ಲಿ ಆರು ಮಂದಿಗೆ ಝಿಕಾ ವೈರಸ್ ಪತ್ತೆ; 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಜೋನ್‌

Continue Reading

ಮಳೆ

Karnataka Weather : 23 ಜಿಲ್ಲೆಗಳಲ್ಲಿ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಸುಮಾರು 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬುಧವಾರ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗಲಿದೆ (Heavy Rain News) ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ಯುವಕನಿಗೆ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ ಸೇರಿದಂತೆ ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಂದುವರಿದ ಮಳೆ ಅವಾಂತರ; ನಾಳೆ ಒಳನಾಡು, ಕರಾವಳಿಯಲ್ಲಿ ಅಬ್ಬರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿದಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಕೊಪ್ಪಳ, ತುಮಕೂರು, ವಿಜಯಪುರ ಸುತ್ತಮುತ್ತ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಮೀನುಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನಾಳೆ ಬುಧವಾರ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಧರೆಗುರುಳಿದ ಮರ

ಇನ್ನೂ ಮಂಗಳವಾರವೂ ಮಳೆ ಅವಾಂತರ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ಹಲವೆಡೆ ಮಳೆಯು ಅಬ್ಬರಿಸಿತ್ತು. ವಿಧಾನಸೌಧ, ಶಿವಾಜಿನಗರ, ಕಬ್ಬನ್‌ಪಾರ್ಕ್‌,ಕಸ್ತೂರಬಾ ರಸ್ತೆ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಮಳೆಯಾಗಿದೆ. ಸದಾಶಿವನಗರ ಪೊಲೀಸ್ ಠಾಣೆ ಮುಂಭಾಗ ಮರವೊಂದು ಧರೆಗುರುಳಿದೆ. ಮರ ಬಿದ್ದ ಪರಿಣಾಮ ರಸ್ತೆಯಲ್ಲಿ ನಿಂತಿದ್ದ ಒಂದು ಕಾರು ಜಖಂಗೊಂಡಿದೆ. ಬಿಬಿಎಂಪಿ ಸಿಬ್ಬಂದಿ ಬರಲು ತಡವಾದ ಹಿನ್ನೆಲೆಯಲ್ಲಿ ಪೊಲೀಸರಿಂದಲೇ ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಬೃಹತ್ ಮರ ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಗ್ರಾಮಕ್ಕೆ ನುಗ್ಗಿದ ಹಳ್ಳದ ನೀರು

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರು ಗ್ರಾಮದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದವು. ಮಾರಾಟವಾಗಬೇಕಿದ್ದ ತರಕಾರಿಗಳು ಕೊಚ್ಚಿಹೋಗಿದ್ದು ಕಂಡು ವ್ಯಾಪಾರಸ್ಥರು ಕಣ್ಣೀರು ಹಾಕಿದರು. ಕೊಪ್ಪಳದ ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದ ಕೊಳ್ಳದ ಅಮರೇಶ್ವರ ದೇವಸ್ಥಾನ ಜಲಾವೃತಗೊಂಡಿತ್ತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದಲ್ಲದೇ ಜುಮಲಾಪುರದ ಸರಕಾರಿ ಪ್ರಾಥಮಿಕ ಶಾಲಾ ಆವರಣ ನದಿಯಂತಾಗಿತ್ತು.

ವಿಜಯನಗರದ ಹಂಪಿಯಲ್ಲೂ ಉತ್ತಮ ಮಳೆಯಾಗಿದೆ. ಹೊಸಪೇಟೆ ತಾಲೂಕಿನ ಹಂಪಿ ಸುತ್ತಮುತ್ತಲಿನ ಪ್ರದೇಶದ ಬಾಳೆ ತೋಟಕ್ಕೆ ಮಳೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಹೊಸಪೇಟೆ ತಾಲೂಕಿನ ಗುಂಡ್ಲಕೇರಿಯ ಬಳಿ ಇರುವ ಕಾಲುವೆಯ ಸೇತುವೆ ಮೇಲೆ ನೀರು ಹರಿದಿದೆ. ಸೀತಾರಾಮ್ ತಾಂಡ- ಕಮಲಾಪುರ ರಸ್ತೆಯ ಮಧ್ಯದ ಸೇತುವೆ, ಹಗರಿಬೊಮ್ಮನ ಹಳ್ಳಿ ತಾಲೂಕಿನ ಮುತ್ಕೂರು- ವಲ್ಲಭಾಪುರ ಸೇತುವೆ ಮುಳುಗಡೆಯಾಗಿದೆ.

ಹೊಸಪೇಟೆ ತಾಲೂಕಿನ ಭಾಗದ ಗ್ರಾಮಗಳಲ್ಲಿ ಭಾರೀ ಮಳೆಗೆ ಹತ್ತಿ, ಮೆಣಸಿನ ಕಾಯಿ ಬೆಳೆಗಳು ನೀರಿಗೆ ಆಹುತಿಯಾಗಿವೆ. ಧರ್ಮಸಾಗರ ಗ್ರಾಮದ ನಾಯಕರ ಹುಲಗಪ್ಪ ಎಂಬವರಿಗೆ ಸೇರಿದ ಜಮೀನಿನಲ್ಲಿ ಬೆಳೆದ ಬೆಳೆಯು ಮಳೆಗೆ ಕೊಚ್ಚಿ ಹೋಗಿದೆ. ರೈತ ನಾಯಕರ ಹುಲಗಪ್ಪ ಸಾಲಸೊಲ ಮಾಡಿ ಬೆಳೆಯನ್ನು ಬೆಳೆದಿದ್ದರು. ಇದೀಗ ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಜಮೀನುಗಳಿಗೆ ನೀರು ನುಗ್ಗಿದೆ.

ಇದನ್ನೂ ಓದಿ: Celina Jaitley: ಮರ್ಮಾಂಗ ತೋರಿಸಿದ ದುಷ್ಟ; ಟೀಕೆಗೆ ಒಳಗಾದದ್ದು ನಾನು: ಕರಾಳ ನೆನಪು ಬಿಚ್ಚಿಟ್ಟ ನಟಿ

ತುಮಕೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಒಂದೇ ದಿನಕ್ಕೆ ಜಯಮಂಗಲಿ ನದಿ ತುಂಬಿ ಹರಿದಿದೆ. ಪರಿಣಾಮ ಮಧುಗಿರಿ ತಾಲ್ಲೂಕಿನ ವೀರೇನಹಳ್ಳಿ -ಕಾಳೇನಹಳ್ಳಿ ರಸ್ತೆ ಜಲಾವೃತಗೊಂಡಿತ್ತು. ತುಮಕೂರಿನ ದೇವರಾಯನದುರ್ಗ ತಪ್ಪಲಲ್ಲಿ ಹುಟ್ಟುವ ಜಯಮಂಗಲಿ ನದಿ, ಕೊರಟಗೆರೆ, ಮಧುಗಿರಿ ಮಾರ್ಗವಾಗಿ ಆಂಧ್ರದ ಪರ್ಗಿ ಕೆರೆಗೆ ಸೇರಲಿದೆ. ಕಳೆದ ಎರಡು ವರ್ಷಗಳ ಹಿಂದೆ ಸುರಿದ ಮಳೆಗೆ ತುಂಬಿ ಹರಿದಿದ್ದ ಜಯಮಂಗಲಿ ನದಿ ಆ ನಂತರ ನೀರು ಖಾಲಿಯಾಗಿತ್ತು. ಇದೀಗ ರಾತ್ರಿ ಸುರಿದ ಧಾರಕಾರ ಮಳೆಗೆ ತುಂಬಿ ಹರಿಯುತ್ತಿದೆ. ಕೊರಟಗೆರೆ ಪಟ್ಟಣದ ಕನಕ ವೃತ್ತ ಬಳಿ 15ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿತ್ತು. ಶಿವಗಂಗಾ ಥಿಯೇಟರ್ ಬಳಿರುವ ಸಿಮೆಂಟ್ ಅಂಗಡಿಗೆ ಮುಳುಗಿ 200 ಹೆಚ್ಚು ಸಿಮೆಂಟ್ ಮೂಟೆಗಳು ನೀರುಪಾಲಾಗಿದ್ದವು.

ವರುಣನ ಆರ್ಭಟಕ್ಕೆ ಬಳ್ಳಾರಿಯ ಕಂಪ್ಲಿಯ ಅನ್ನ ದಾತರು ನಲುಗಿ ಹೋಗಿದ್ದಾರೆ. ಮಳೆ ನೀರು ನುಗ್ಗಿ ಜಮೀನುಗಳು ಹಳ್ಳಗಳಂತೆ ಗೋಚರಿಸುತ್ತಿದೆ. ಕಂಪ್ಲಿ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲೆಡೆ ಬೆಳಗಿನ ಜಾವ ಮಳೆಯಾಗಿದೆ. ಕಂಪ್ಲಿ ಪಟ್ಟಣ, ರಾಮಸಾಗರ, ದೇವಲಾಪುರ, ಮೆಟ್ರಿ, ದೇವಸಮುದ್ರ, ನಂ.10 ಮುದ್ದಾಪುರ, ಸಣಾಪುರ, ಬೆಳಗೋಡ್ ಹಾಳ್ ಸೇರಿ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ಪರಿಣಾಮ ಭತ್ತ, ಹೂ, ಬಾಳೆ, ಕಬ್ಬು, ಸೊಪ್ಪು ಸೇರಿದಂತೆ ನೂರಾರು ಹೆಕ್ಟರ್ ಬೆಳೆ ಜಲಾವೃತ‌ಗೊಂಡು ಹಾಳಾಗಿದೆ. ಲಕ್ಷಾಂತರ ರೂ ವ್ಯಯಿಸಿ ಬಿತ್ತನೆ ಮಾಡಿರುವ ರೈತರಲ್ಲಿ ಬೆಳೆ ನಷ್ಟದ ಆತಂಕ ಹೆಚ್ಚಾಗಿದೆ.

ರಾಜ್ಯ ಹೆದ್ದಾರಿ-29ರ ಮಾರೆಮ್ಮ ದೇವಸ್ಥಾನ ಬಳಿ ನೀರಿನ ರಭಸಕ್ಕೆ ರಸ್ತೆಯ ಕೆಳಭಾಗ ಕೊಚ್ಚಿ ಹೋಗಿದೆ. ಜವುಕು-ಜೀರಿಗನೂರು ಮತ್ತು ಚಿನ್ನಾಪುರ-ಮೆಟ್ರಿ ಸೇತುವೆ ಮೇಲೆ ನೀರು ಹರಿದು ‌ಸಂಪರ್ಕ ಕಡಿತಗೊಂಡಿದೆ. ದೇವಲಾಪುರ ಗ್ರಾಮದ ರಾಜನ ಮಟ್ಟಿಯ ಚರಂಡಿ ಭರ್ತಿಯಾಗಿ ಮನೆಗಳಿಗೆ ನೀರು ನುಗ್ಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
KL Rahul announces retirement?
ಕ್ರೀಡೆ24 mins ago

KL Rahul Retirement: ಕ್ರಿಕೆಟ್​ಗೆ ದಿಢೀರ್​ ನಿವೃತ್ತಿ ಘೋಷಿಸಿದ ಕೆ.ಎಲ್​ ರಾಹುಲ್?; ಇನ್​ಸ್ಟಾಗ್ರಾಮ್​ ಪೋಸ್ಟ್​ ವೈರಲ್​​

raichur double murder case
ಕ್ರೈಂ25 mins ago

Murder Case: ತಾಯಿ, ಹೆಂಡತಿಯನ್ನು ಕೊಂದು ಪರಾರಿಯಾದ ಆಸ್ಪತ್ರೆ ನೌಕರ

Neeraj Chopra
ಕ್ರೀಡೆ1 hour ago

Neeraj Chopra: ಈ ವರ್ಷದ ಅತ್ಯುತ್ತಮ ಎಸೆತದೊಂದಿಗೆ ಡೈಮಂಡ್ ಲೀಗ್​ ಫೈನಲ್​ ಪ್ರವೇಶಿಸಿದ ನೀರಜ್ ಚೋಪ್ರಾ

Monkey Pox
ವಿದೇಶ1 hour ago

Monkey Pox: ಏನಿದು ಡೇಂಜರಸ್ ಮಂಕಿ ಪಾಕ್ಸ್? ಇದು ಹೇಗೆ ಹರಡುತ್ತದೆ? ಪಾರಾಗೋದು ಹೇಗೆ?

drunk driving check
ಬೆಂಗಳೂರು2 hours ago

Drunk Driving: ವಾಹನ ಚಾಲಕರೇ, ಕುಡಿದರೆ ಮನೆಯಲ್ಲೇ ಇರಿ, ರಸ್ತೆಗೆ ಬರಬೇಡಿ!

Namma Metro green Line
ಬೆಂಗಳೂರು2 hours ago

Namma Metro: ಇಂದೂ ಈ ಮಾರ್ಗದಲ್ಲಿ ನಮ್ಮ ಮೆಟ್ರೋ ಇಲ್ಲ, ಪ್ರಯಾಣಿಕರೇ ಗಮನಿಸಿ

Valmiki Corporation Scam
ಪ್ರಮುಖ ಸುದ್ದಿ2 hours ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದ ಚಾರ್ಜ್‌ಶೀಟ್‌ ಸಲ್ಲಿಕೆ, ನಾಗೇಂದ್ರಗೆ ಕ್ಲೀನ್‌ ಚಿಟ್!‌

ರಾಜಮಾರ್ಗ ಅಂಕಣ aruna shanubhag
ಅಂಕಣ3 hours ago

ರಾಜಮಾರ್ಗ ಅಂಕಣ: ನೆನಪಾದಳು ಅರುಣಾ ಶಾನುಭಾಗ್!‌

Eye Care Food
Latest4 hours ago

Eye Care Food: ನೀವು ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಈ ಆಹಾರಗಳನ್ನು ಸೇವಿಸಿ

karnataka weather forecast
ಮಳೆ4 hours ago

Karnataka Weather : ಕರಾವಳಿಯಲ್ಲಿ ರಭಸವಾಗಿ ಬೀಸಲಿದೆ ಗಾಳಿ; ಸಾಧಾರಣ ಮಳೆ ಸಾಧ್ಯತೆ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌