Viral Video: ಸೈಕಲ್‌ ಮೇಲೆ ಶಾಲೆಗೆ ಹೋಗುತ್ತಿದ್ದ ಮಕ್ಕಳಿಬ್ಬರಿಗೆ ವಿದ್ಯುತ್‌ ಶಾಕ್‌; ಕ್ಯಾಮೆರಾದಲ್ಲಿ ಸೆರೆಯಾಯ್ತು ಘೋರ ದೃಶ್ಯ - Vistara News

Latest

Viral Video: ಸೈಕಲ್‌ ಮೇಲೆ ಶಾಲೆಗೆ ಹೋಗುತ್ತಿದ್ದ ಮಕ್ಕಳಿಬ್ಬರಿಗೆ ವಿದ್ಯುತ್‌ ಶಾಕ್‌; ಕ್ಯಾಮೆರಾದಲ್ಲಿ ಸೆರೆಯಾಯ್ತು ಘೋರ ದೃಶ್ಯ

ಬೀದಿಯಲ್ಲಿ ಜನರ ಕಣ್ಣ ಮುಂದೆಯೇ (Viral Video) ಈ ಘೋರ ದುರಂತ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ (Viral Video) ಆಗಿದೆ. ವಿದ್ಯಾರ್ಥಿಗಳಿಬ್ಬರು ವಿದ್ಯಾಸಾಗರ್ ಶಾಲೆಯಲ್ಲಿ 10 ಮತ್ತು 8ನೇ ತರಗತಿಯಲ್ಲಿ ಓದುತ್ತಿದ್ದು, ಬೆಳಗ್ಗೆ ಒಂದೇ ಸೈಕಲ್‍ನಲ್ಲಿ ಶಾಲೆಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇದರಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಆಂಧ್ರಪ್ರದೇಶದ ಕಡಪದಲ್ಲಿ ಬುಧವಾರ ಬೆಳಗ್ಗೆ ಸೈಕಲ್‌ ಮೇಲೆ ಶಾಲೆಗೆ ತೆರಳುತ್ತಿದ್ದ ಇಬ್ಬರು ಪುಟ್ಟ ವಿದ್ಯಾರ್ಥಿಗಳು ವಿದ್ಯುತ್‌ ತಂತಿ ಸ್ಪರ್ಶಕ್ಕೆ ಒಳಗಾಗಿದ್ದಾರೆ. ಒಬ್ಬ ವಿದ್ಯಾರ್ಥಿ ಕೆಲವೇ ಕ್ಷಣಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಇಂಟರ್ನ್ಯಾಷನಲ್ ವೆಲ್ಫೇರ್ ಮಂಟಪಂ ಬಳಿಯ ಅಂಗಡಿ ಬೀದಿಯಲ್ಲಿ ಜನರ ಕಣ್ಣ ಮುಂದೆಯೇ ಈ ಘೋರ ದುರಂತ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ (Viral Video) ಆಗಿದೆ. ವಿದ್ಯಾರ್ಥಿಗಳಿಬ್ಬರು ವಿದ್ಯಾಸಾಗರ್ ಶಾಲೆಯಲ್ಲಿ 10 ಮತ್ತು 8ನೇ ತರಗತಿಯಲ್ಲಿ ಓದುತ್ತಿದ್ದು, ಬೆಳಗ್ಗೆ ಒಂದೇ ಸೈಕಲ್‍ನಲ್ಲಿ ಶಾಲೆಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇದರಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಇಬ್ಬರು ಹುಡುಗರು ಸೈಕಲ್‍ನಲ್ಲಿ ಬರುತ್ತಿರುವಾಗ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದು, ತಕ್ಷಣವೇ ಸೈಕಲ್‍ನಿಂದ ಕೆಳಗೆ ಬಿದ್ದಿದ್ದಾರೆ. ಕೆಲವು ಕ್ಷಣಗಳ ನಂತರ, ಒಬ್ಬ ವಿದ್ಯಾರ್ಥಿಯ ದೇಹಕ್ಕೆ ಮತ್ತು ಸೈಕಲ್ ಗೆ ಬೆಂಕಿ ಹೊತ್ತಿಕೊಂಡಿತು ಮತ್ತು ಇನ್ನೊಬ್ಬ ಹುಡುಗ ಅವನ ಪಕ್ಕದಲ್ಲಿ ಚಲನೆಯಿಲ್ಲದೆ ಬಿದ್ದಿದ್ದ.
ವರದಿಗಳ ಪ್ರಕಾರ, ವಿದ್ಯಾರ್ಥಿಗಳಲ್ಲಿ ಒಬ್ಬನನ್ನು ತನ್ವೀರ್ ಎಂದು ಗುರುತಿಸಲಾಗಿದ್ದು, ಆತ ತೀವ್ರ ಸುಟ್ಟಗಾಯಗಳಿಂದ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಅವನನ್ನು ಸ್ಥಳೀಯರು ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಈ ಭಯಾನಕ ಘಟನೆಯ ವಿಡಿಯೊವನ್ನು ನಬಿಲಾ ಜಮಾಲ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಕಾಮೆಂಟ್ ವಿಭಾಗದಲ್ಲಿ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆಯೊಂದಿಗೆ ಆ ವಿಡಿಯೊಗೆ ಬೇಸರದಿಂದ , ಕೋಪದಿಂದ, ಅಳುತ್ತಾ ಕಾಮೆಂಟ್ ಮಾಡಿದ್ದಾರೆ, “ನೀವು ಮನೆಯಿಂದ ಹೊರಗೆ ಬರದಿದ್ದರೆ ಇಂತಹ ದುರಂತ ನಡೆಯದೆ ಸುರಕ್ಷಿತವಾಗಿರುತ್ತಿದ್ದೀರಿʼʼ ಎಂದು ವೀಕ್ಷಕರೊಬ್ಬರು ದುಃಖಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲದ ಕಾರಣ ಅವರು ಇಂತಹ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ. ಮತ್ತೊಂದು ಕಾಮೆಂಟ್‌ನಲ್ಲಿ ಒಬ್ಬರು ನಿರ್ಲಕ್ಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ” ಇದು ತುಂಬಾ ದುಃಖಕರವಾಗಿದೆ. ಇಂಥ ದುರಂತ ಸಂಭವಿಸುವ ಮೊದಲು ಸುತ್ತಮುತ್ತಲಿನ ಜನ ವಿದ್ಯುತ್ ಇಲಾಖೆಗೆ ದೂರು ನೀಡಲು ಸಾಧ್ಯವಾಗಲಿಲ್ಲ ಏಕೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ:ಹೆಣ್ಣಿನ ಮೇಲೆ ಆಸೆಯಾದರೆ ನಮ್ಮ ಬಳಿ ಬನ್ನಿ; ಕಾಮುಕರಿಗೆ ಯುವತಿಯ ಮುಕ್ತ ಆಹ್ವಾನ!

ಈ ಘಟನೆಯು ಸಾರ್ವಜನಿಕ ಸುರಕ್ಷತೆ ಮತ್ತು ಮೂಲಸೌಕರ್ಯ ನಿರ್ವಹಣೆಯ ಬಗ್ಗೆ ಗಂಭೀರ ವಿಷಯವನ್ನು ಬೆಳಕಿಗೆ ತರುತ್ತದೆ. ಅಂತಹ ಜನನಿಬಿಡ ಸ್ಥಳಗಳಲ್ಲಿ ಕರೆಂಟ್ ತಂತಿ ಬಿದ್ದಿರುವುದು ಸ್ಥಳೀಯ ಅಧಿಕಾರಿಗಳು ಸರಿಯಾದ ಸಮಯದಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬುದನ್ನು ಸೂಚಿಸುತ್ತದೆ. ಇಂತಹ ದುರಂತಗಳನ್ನು ತಪ್ಪಿಸಲು ಜಾಗರೂಕತೆ ಮತ್ತು ತ್ವರಿತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಇಂತಹ ಸ್ಥಳಗಳಲ್ಲಿ ನಿಯಮಿತವಾಗಿ ಅಧಿಕಾರಿಗಳು ಕೆಲಸ ನಿರ್ವಹಿಸುವುದು ಮತ್ತು ತಪಾಸಣೆ ಮಾಡುತ್ತಿರುಬೇಕು ಎಂಬುದನ್ನು ತಿಳಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Pralhad Joshi: ಮುಂಬೈ, ಕೋಲ್ಕತಾದಲ್ಲಿ ಇವಿ ಬ್ಯಾಟರಿ ಚಾರ್ಜರ್ ಘಟಕಕ್ಕೆ ಬೆಂಗಳೂರು ಮಾದರಿ

ಬೆಂಗಳೂರಿನ ಜಕ್ಕೂರಿನಲ್ಲಿರುವ NTH-RRSL ಕ್ಯಾಂಪಸ್‌ನಲ್ಲಿ ಇಂದು (Pralhad Joshi) ಬಹು ನಿರೀಕ್ಷಿತ EV ಬ್ಯಾಟರಿ ಮತ್ತು ಚಾರ್ಜರ್ ಪರೀಕ್ಷಾ ಘಟಕಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶಂಕುಸ್ಥಾಪನೆ ನೆರವೇರಿಸಿದರು. ಇವಿ ಉದ್ಯಮದಲ್ಲಿ ಸುಸ್ಥಿರ ಮತ್ತು ನವೀನ ಬದಲಾವಣೆ ತರುವಲ್ಲಿ ಭಾರತ ಬದ್ಧತೆ ಪ್ರದರ್ಶಿಸಿ, ಗಮನಾರ್ಹ ಪ್ರಗತಿ ಸಾಧಿಸುತ್ತಿದೆ ಎಂದು ಸಚಿವರು ತಿಳಿಸಿದರು.

VISTARANEWS.COM


on

Pralhad Joshi
Koo

ಬೆಂಗಳೂರು: ಬೆಂಗಳೂರು ಮಾದರಿಯಲ್ಲಿ ಮುಂಬೈ ಮತ್ತು ಕೊಲ್ಕತಾದಲ್ಲಿ ಸಹ ಶೀಘ್ರದಲ್ಲೇ ಇವಿ (EV) ಬ್ಯಾಟರಿ ಚಾರ್ಜರ್ ಮತ್ತು ಪರೀಕ್ಷಾ ಘಟಕ ಸ್ಥಾಪಿಸಲು ನ್ಯಾಷನಲ್ ಟೆಸ್ಟ್ ಹೌಸ್ (NTH) ಸಜ್ಜಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದರು.

ಬೆಂಗಳೂರಿನ ಜಕ್ಕೂರಿನಲ್ಲಿರುವ NTH-RRSL ಕ್ಯಾಂಪಸ್‌ನಲ್ಲಿ ಇಂದು ಬಹು ನಿರೀಕ್ಷಿತ EV ಬ್ಯಾಟರಿ ಮತ್ತು ಚಾರ್ಜರ್ ಪರೀಕ್ಷಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಎಲೆಕ್ಟ್ರಿಕ್ ವೆಹಿಕಲ್ (ಇವಿ) ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. EV ಬ್ಯಾಟರಿ ಮತ್ತು ಚಾರ್ಜರ್ ತಯಾರಿಕಾ ವಲಯವನ್ನು ನಿರ್ಮಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Fixed Deposits: ಪೋಸ್ಟ್ ಆಫೀಸ್ ಎಫ್‌ಡಿ; ಬಡ್ಡಿ ದರ ಎಷ್ಟು, ಏನೆಲ್ಲ ಲಾಭ?

ಇವಿ ಉದ್ಯಮದಲ್ಲಿ ಸುಸ್ಥಿರ ಮತ್ತು ನವೀನ ಬದಲಾವಣೆ ತರುವಲ್ಲಿ ಭಾರತ ಬದ್ಧತೆ ಪ್ರದರ್ಶಿಸಿ, ಗಮನಾರ್ಹ ಪ್ರಗತಿ ಸಾಧಿಸುತ್ತಿದೆ ಎಂದು ಸಚಿವರು ತಿಳಿಸಿದರು.

ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ಇವಿ ಉದ್ಯಮ ವೇಗವಾಗಿ ಬೆಳೆಯುತ್ತಿದ್ದು, ಇದಕ್ಕೆ ಸಾಥ್ ನೀಡುವಂತೆ ಇವಿ ಬ್ಯಾಟರಿ ಮತ್ತು ಚಾರ್ಜರ್ ತಯಾರಿಕಾ ವಲಯಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಇವಿ ಚಾರ್ಜರ್ ಮತ್ತು ಪರೀಕ್ಷಾ ಘಟಕವು ಪರದೇಶಗಳನ್ನು ಅವಲಂಬಿಸದೆ ಸ್ಥಳೀಯವಾಗಿ ನಿರ್ಣಾಯಕ ಪರೀಕ್ಷೆಗಳನ್ನು ನಡೆಸಲು ಅನುವು ಮಾಡಿಕೊಡಲಿದೆ ಎಂದರು.

ಪಂಬನ್ ಸೇತುವೆ, ಮೆಟ್ರೋ ರೈಲು ಯೋಜನೆಗಳು, ಬುಲೆಟ್ ರೈಲು ಯೋಜನೆ, ಜಲ ಜೀವನ್ ಮಿಷನ್, ಡ್ರೋನ್ ಪ್ರಮಾಣೀಕರಣ ಮತ್ತಿತರ ಪ್ರಮುಖ ಯೋಜನೆಗಳಲ್ಲಿ ಇವಿ ನಿರ್ಣಾಯಕ ಪಾತ್ರ ವಹಿಸಿದೆ ಎಂದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ತಯಾರಕರಿಗೆ ಗಮನಾರ್ಹ ಬೇಡಿಕೆ ಇದೆ. ನಮ್ಮ ಉತ್ಪನ್ನಗಳು ಜಾಗತಿಕ ಗುಣಮಟ್ಟವನ್ನು ತಲುಪುತ್ತಿದ್ದು, ರಫ್ತಿಗೆ ಉತ್ತಮವಾಗಿದೆ ಎಂದು ಹೇಳಿದರು.

500 GW ವಿದ್ಯುತ್ ಉತ್ಪಾದನೆ ಗುರಿ

ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆ ಜತೆಗೆ 2030 ರ ವೇಳೆಗೆ 500 GW ವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಿದೆ ಎಂದು ಸಚಿವ ಜೋಶಿ ತಿಳಿಸಿದರು.

ಸರ್ಕಾರಿ ವಲಯದಲ್ಲಿ ಇವಿ ಬ್ಯಾಟರಿ ಪರೀಕ್ಷಾ ಸೌಲಭ್ಯವುಳ್ಳ ಘಟಕ ಸ್ಥಾಪನೆ ಭವಿಷ್ಯದಲ್ಲಿ ಮಹತ್ವದ ಮೈಲಿಗಲ್ಲು ಎಂದು ಹೇಳಿದರು.

ಇದನ್ನೂ ಓದಿ: Kannada New Movie: ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಟೀಸರ್ ರಿಲೀಸ್‌

ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ, ಎನ್‌ಟಿಎಚ್‌ ಮಹಾನಿರ್ದೇಶಕರು ಹಾಗೂ ಇವಿ ಬ್ಯಾಟರಿ ಮತ್ತು ಚಾರ್ಜರ್ ಉತ್ಪಾದನಾ ಉದ್ಯಮದ ಪ್ರಮುಖರು ಇದ್ದರು.

Continue Reading

ದೇಶ

Richest Village: ಗುಜರಾತ್‌ನಲ್ಲಿದೆ ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ! ಇಲ್ಲಿಯ ಜನ ಇಟ್ಟಿರುವ ಫಿಕ್ಸೆಡ್‌ ಡಿಪಾಸಿಟ್‌ ಮೌಲ್ಯ 7,000 ಕೋಟಿ ರೂ!

ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮವೊಂದು (Richest Village) ಗುಜರಾತ್‌ನಲ್ಲಿದೆ. ಅದರ ಸಮೃದ್ಧಿಯ ಹಿಂದಿನ ಕಾರಣ ಅಚ್ಚರಿಯನ್ನು ಉಂಟು ಮಾಡುತ್ತದೆ. ಇಲ್ಲಿನ ನಿವಾಸಿಗಳು ಕನಿಷ್ಠ 7,000 ಕೋಟಿ ರೂ. ಮೌಲ್ಯದ ಸ್ಥಿರ ಠೇವಣಿಗಳನ್ನು ಹೊಂದಿದ್ದಾರೆ. ಇದು ಅವರು ಎಷ್ಟು ಶ್ರೀಮಂತರು ಎಂಬುದರ ಒಂದು ಸಣ್ಣ ನೋಟವಷ್ಟೇ! ಈ ಕುರಿತ ಕುತೂಹಲಕರ ವರದಿ ಇಲ್ಲಿದೆ.

VISTARANEWS.COM


on

By

Richest Village
Koo

ಗುಜರಾತ್ (Gujarat) ಭಾರತದ ಪ್ರಮುಖ ವ್ಯಾಪಾರ ತಾಣಗಳಲ್ಲಿ ಒಂದಾಗಿದ್ದು, ಇದು ದೇಶಕ್ಕೆ ಕೆಲವು ಉನ್ನತ ಕೈಗಾರಿಕೋದ್ಯಮಿಗಳನ್ನು ನೀಡಿದೆ. ಆದರೆ ಸಮೃದ್ಧಿ ಕೇವಲ ನಗರಗಳಿಗೆ ಸೀಮಿತವಾಗಿಲ್ಲ. ಇಲ್ಲಿರುವ ಪುಟ್ಟ ಗ್ರಾಮವೊಂದು ಏಷ್ಯಾದ ಶ್ರೀಮಂತ (richest village in Asia) ಗ್ರಾಮವಾಗಿ (Richest Village) ಗುರುತಿಸಿಕೊಂಡಿದೆ.

ಕಛ್‌ನಲ್ಲಿರುವ ಮಾಧಾಪರ್ ಅನ್ನು ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ ಎಂದು ಕರೆಯಲಾಗುತ್ತದೆ. ಯಾಕೆಂದರೆ ಇಲ್ಲಿ ಆರ್ಥಿಕ ಸಮೃದ್ಧಿಗೇನೂ ಕೊರತೆಯಿಲ್ಲ. ಭುಜ್‌ನ ಹೊರವಲಯದಲ್ಲಿರುವ ಈ ಗ್ರಾಮದ ನಿವಾಸಿಗಳು 7,000 ಕೋಟಿ ರೂ. ಮೌಲ್ಯದ ಸ್ಥಿರ ಠೇವಣಿಗಳನ್ನು ಹೊಂದಿದ್ದಾರೆ. ಇದು ಅವರು ಎಷ್ಟು ಶ್ರೀಮಂತರು ಎಂಬುದನ್ನು ಹೇಳುತ್ತದೆ.

ಮಾಧಾಪರ್‌ನಲ್ಲಿ ಪಟೇಲ್ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಇವರ ಜನಸಂಖ್ಯೆಯು ಸುಮಾರು 32,000 ಎಂದು ಅಂದಾಜಿಸಲಾಗಿದೆ. ಇದು 2011 ರಲ್ಲಿ 17,000 ಆಗಿತ್ತು.

ಈ ಹಳ್ಳಿಯು ಹೆಚ್ ಡಿಎಫ್ ಸಿ ಬ್ಯಾಂಕ್, ಎಸ್‌ಬಿಐ, ಪಿಎನ್‌ಬಿ, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಮುಂತಾದ ಪ್ರಮುಖ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳನ್ನು ಒಳಗೊಂಡಂತೆ 17 ಬ್ಯಾಂಕ್‌ಗಳನ್ನು ಹೊಂದಿದೆ. ಇದು ಒಂದೇ ಹಳ್ಳಿಗೆ ಅಸಾಮಾನ್ಯವಾಗಿದೆ. ಅದರ ಹೊರತಾಗಿಯೂ ಹೆಚ್ಚಿನ ಬ್ಯಾಂಕ್‌ಗಳು ಇಲ್ಲಿ ತಮ್ಮ ಶಾಖೆಗಳನ್ನು ತೆರೆಯಲು ಆಸಕ್ತಿ ಹೊಂದಿವೆ.


ಗ್ರಾಮದ ಈ ಏಳಿಗೆಯ ಹಿಂದಿನ ಕಾರಣವೆಂದರೆ ಅನಿವಾಸಿ ಭಾರತೀಯ ಕುಟುಂಬಗಳು. ಅವರು ಸ್ಥಳೀಯ ಬ್ಯಾಂಕು ಮತ್ತು ಅಂಚೆ ಕಚೇರಿಗಳಲ್ಲಿ ಪ್ರತಿ ವರ್ಷ ಕೋಟಿ ರೂ. ಗಳನ್ನು ಠೇವಣಿ ಮಾಡುತ್ತಾರೆ. ಗ್ರಾಮವು ಸುಮಾರು 20,000 ಮನೆಗಳನ್ನು ಹೊಂದಿದೆ. ಆದರೆ ಸುಮಾರು 1,200 ಕುಟುಂಬಗಳು ವಿದೇಶದಲ್ಲಿ ಅದರಲ್ಲೂ ಹೆಚ್ಚಾಗಿ ಆಫ್ರಿಕನ್ ದೇಶಗಳಲ್ಲಿ ವಾಸಿಸುತ್ತಿವೆ.

ಮಧ್ಯ ಆಫ್ರಿಕಾದಲ್ಲಿನ ನಿರ್ಮಾಣ ವ್ಯವಹಾರಗಳಲ್ಲಿ ಗುಜರಾತಿಗಳು ಹೆಚ್ಚು ಪ್ರಾಬಲ್ಯ ಹೊಂದಿದ್ದಾರೆ. ಈ ಪ್ರದೇಶ ದೊಡ್ಡ ವಲಸಿಗ ಜನಸಂಖ್ಯೆಯ ಭಾಗವಾಗಿದೆ. ಅನೇಕರು ಯುಕೆ, ಆಸ್ಟ್ರೇಲಿಯಾ, ಅಮೆರಿಕ ಮತ್ತು ನ್ಯೂಜಿಲೆಂಡ್‌ನಲ್ಲಿಯೂ ವಾಸಿಸುತ್ತಿದ್ದಾರೆ.

ಅನೇಕ ಗ್ರಾಮಸ್ಥರು ವಿದೇಶದಲ್ಲಿ ವಾಸಿಸುತ್ತಿದ್ದರೂ, ಅಲ್ಲೇ ಕೆಲಸ ಮಾಡಿಕೊಂಡಿದ್ದರೂ ಅವರು ತಮ್ಮ ಗ್ರಾಮದೊಂದಿಗೆ ನಂಟು ಹೊಂದಿದ್ದಾರೆ ಮತ್ತು ಅವರು ವಾಸಿಸುವ ಸ್ಥಳಕ್ಕಿಂತ ಹೆಚ್ಚಾಗಿ ತಮ್ಮ ಹಣವನ್ನು ಇಲ್ಲಿನ ಬ್ಯಾಂಕ್‌ಗಳಲ್ಲಿ ಇಡಲು ಬಯಸುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪಾರುಲ್ಬೆನ್ ಕಾರ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: Job market: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ; ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಮುಂದಾದ ಶೇ. 72ರಷ್ಟು ಕಂಪನಿಗಳು!

ಗ್ರಾಮದ ಬ್ಯಾಂಕ್ ಗಳಲ್ಲಿ ಅಪಾರ ಠೇವಣಿ ಇಡುವುದರಿಂದ ಗ್ರಾಮ ಸಮೃದ್ಧಿಯಾಗಿದೆ. ನೀರು, ನೈರ್ಮಲ್ಯ ಮತ್ತು ರಸ್ತೆಯಂತಹ ಎಲ್ಲಾ ಮೂಲ ಸೌಕರ್ಯಗಳನ್ನು ಹೊಂದಿದೆ. ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳು, ಕೆರೆಗಳು ಮತ್ತು ದೇವಾಲಯಗಳು ಬಂಗಲೆಗಳಿವೆ ಎನ್ನುತ್ತಾರೆ ಗ್ರಾಮದ ರಾಷ್ಟ್ರೀಕೃತ ಬ್ಯಾಂಕ್‌ನ ಸ್ಥಳೀಯ ಶಾಖಾ ವ್ಯವಸ್ಥಾಪಕರು.

Continue Reading

ಕರ್ನಾಟಕ

Cabinet Meeting: ಕುಮಾರಸ್ವಾಮಿ, ಇತರ ಮೂವರ ವಿರುದ್ಧದ ಪ್ರಕರಣ; ಪ್ರಾಸಿಕ್ಯೂಷನ್‌ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಂಪುಟ ಸಲಹೆ

ರಾಜ್ಯಪಾಲರ ಬಳಿ ಎಚ್.ಡಿ.ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಮತ್ತು ಮುರುಗೇಶ ನಿರಾಣಿ ಅವರ ಕುರಿತಾಗಿ ಅನುಮೋದನೆಗಾಗಿ ಬಾಕಿಯಿರುವ ವಿಷಯಗಳಲ್ಲಿ ಶೀಘ್ರ ತೀರ್ಮಾನ ಕೈಗೊಳ್ಳಲು ಹಾಗೂ ನ್ಯಾಯದ ಪ್ರಕ್ರಿಯೆಯನ್ನು ಸುಗಮಗೊಳಿಸಲು ರಾಜ್ಯಪಾಲರಿಗೆ ಸಂವಿಧಾನದ 163 ನೇ ವಿಧಿಯನ್ವಯ ನೆರವು ಮತ್ತು ಸಲಹೆ ನೀಡಲು ಇಂದು ನಡೆದ ಸಚಿವ ಸಂಪುಟ (Cabinet Meeting) ತನ್ನ ಅನುಮೋದನೆ ನೀಡಿದೆ ಎಂದು ಕಾನೂನು ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌ ತಿಳಿಸಿದ್ದಾರೆ.

VISTARANEWS.COM


on

Cabinet Meeting
Koo

ಬೆಂಗಳೂರು: ರಾಜ್ಯಪಾಲರ ಬಳಿ ಎಚ್.ಡಿ.ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ಮತ್ತು ಮುರುಗೇಶ ನಿರಾಣಿ ಅವರ ಕುರಿತಾಗಿ ಅನುಮೋದನೆಗಾಗಿ ಬಾಕಿಯಿರುವ ವಿಷಯಗಳಲ್ಲಿ ಶೀಘ್ರ ತೀರ್ಮಾನ ಕೈಗೊಳ್ಳಲು ಹಾಗೂ ನ್ಯಾಯದ ಪ್ರಕ್ರಿಯೆಯನ್ನು ಸುಗಮಗೊಳಿಸಲು ರಾಜ್ಯಪಾಲರಿಗೆ ಸಂವಿಧಾನದ 163ನೇ ವಿಧಿಯನ್ವಯ ನೆರವು ಮತ್ತು ಸಲಹೆ ನೀಡಲು ಇಂದು ನಡೆದ ಸಚಿವ ಸಂಪುಟ (Cabinet Meeting) ಅನುಮೋದನೆ ನೀಡಿದೆ. ಕಾನೂನು ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌ ಅವರು ಈ ವಿಷಯ ತಿಳಿಸಿದರು.

ಸಂವಿಧಾನದ 163ನೇ ವಿಧಿ ಅನ್ವಯ ವಿಧಿ, ರಾಜ್ಯಪಾಲರಿಗೆ ನೆರವು ಮತ್ತು ಸಲಹೆ ನೀಡಲು ಸಚಿವ ಸಂಪುಟಕ್ಕೆ ಅವಕಾಶವಿದೆ. ಅದರಂತೆ ಈ ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಸಲಹೆಗಳನ್ನು ರಾಜ್ಯಪಾಲರಿಗೆ ಸಲ್ಲಿಸಲಾಗುವುದು. ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿರುವ ಹಲವು ಅನುಮೋದನಾ ಅರ್ಜಿಗಳು ರಾಜ್ಯಪಾಲರ ಬಳಿ ಬಾಕಿ ಉಳಿದಿದೆ. ಈ ಅರ್ಜಿಗಳ ತನಿಖೆ ಬಳಿಕ ಕೆಲವು ಪ್ರಕರಣಗಳಲ್ಲಿ ಆರೋಪ ಪಟ್ಟಿಗಳನ್ನು ಸಲ್ಲಿಸಲಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ ಪಿಸಿ ಆಕ್ಟ್‌ ಸೆಕ್ಷನ್‌ ಹಾಗೂ ವಿವಿಧ ಕಾಯ್ದೆಗಳ ಅಡಿಯಲ್ಲಿ ಅನುಮೋದನೆಗಾಗಿ ಕೋರಲಾಗಿದೆ. ಕೆಲವು ಅರ್ಜಿಗಳು ಪಿಸಿ ಆಕ್ಟ್‌ ಸೆಕ್ಷನ್‌ 17 ಎ ಅಡಿಯಲ್ಲಿ ಪೂರ್ವಾನುಮೋದನೆಗಾಗಿ ರಾಜ್ಯಪಾಲರ ಬಳಿ ಬಾಕಿಯಿದೆ ಎಂದು ಎಚ್‌ ಕೆ ಪಾಟೀಲ್‌ ಹೇಳಿದರು.

ಇದನ್ನೂ ಓದಿ: CM Siddaramaiah: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿದ್ದರಾಮಯ್ಯ ಸೂಚನೆ

ಶಶಿಕಲಾ ಜೊಲ್ಲೆ ಅವರ ಪ್ರಕರಣದಲ್ಲಿ ಡಿಸೆಂಬರ್‌ 9 2021ರಂದು ಲೋಕಾಯುಕ್ತ ಪೊಲೀಸರು ಪಿಸಿ ಆಕ್ಟ್‌ 17 ಎ ಅಡಿಯಲ್ಲಿ ಪೂರ್ವಾನುಮೋದನೆಯನ್ನು ಕೋರಿದ್ದರು. ಮುರುಗೇಶ್‌ ನಿರಾಣಿ ಪ್ರಕರಣದಲ್ಲಿ ಸಹ ಇದೇ ಕಾಯ್ದೆಯಡಿಯಲ್ಲಿ ಫೆ. 26 2024ರಂದು ಪೂರ್ವಾನುಮೋದನೆ ಕೋರಲಾಗಿದೆ. ಎಚ್.ಡಿ.ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ನ.21 2023 ರಂದು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್‌ 19 ಮತ್ತು ಸಿಆರ್‌ಪಿಸಿ 197 ಅಡಿಯಲ್ಲಿ ಅನುಮೋದನೆ ಕೋರಲಾಗಿತ್ತು. ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ ಸಲ್ಲಿಸಿದ ಆರೋಪ ಪಟ್ಟಿ ಕುರಿತು ರಾಜ್ಯಪಾಲರು ಜು.29 2024ರಂದು ಸ್ಪಷ್ಟೀಕರಣ ಕೇಳಿದ್ದರು. ಇದಕ್ಕೆ ಎಸ್‌ಐಟಿ ಆ.16 2024 ರಂದು ರಾಜ್ಯಪಾಲರಿಗೆ ಅಗತ್ಯ ಸ್ಪಷ್ಟೀಕರಣ ನೀಡಿದೆ. ಜನಾರ್ಧನ ರೆಡ್ಡಿ ಪ್ರಕರಣದಲ್ಲಿ ಮೇ 13 2024 ರಂದು ಅನುಮೋದನೆಗಾಗಿ ಸಲ್ಲಿಸಲಾಗಿದೆ. ಕುಮಾರಸ್ವಾಮಿ ಮತ್ತು ಜನಾರ್ಧನ ರೆಡ್ಡಿ ಪ್ರಕರಣಗಳಲ್ಲಿ ಆರೋಪ ಪಟ್ಟಿಯನ್ನು ಸಹ ಸಲ್ಲಿಸಲಾಗಿದೆ ಎಂದರು.

ರಾಜ್ಯಪಾಲರು ಸಚಿವ ಸಂಪುಟದ ಸಲಹೆಯನ್ನು ಸ್ವೀಕರಿಸಲು ಬಾಧ್ಯಸ್ಥರಾಗಿದ್ದು, ಈ ವಿಷಯದಲ್ಲಿ ರಾಜ್ಯಪಾಲರು ತಮ್ಮ ವಿವೇಚನೆಯನ್ನು ನ್ಯಾಯಯುತವಾಗಿ ಬಳಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದರು. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ವ್ಯಕ್ತಿ ರಾಜ್ಯಪಾಲರಿಗೆ ದೂರು ನೀಡಿದ್ದು, ತರಾತುರಿಯಲ್ಲಿ ಸಂಜೆಯೊಳಗಾಗಿ ಶೋಕಾಸು ನೋಟೀಸು ನೀಡಲಾಗಿದೆ. ಆದರೆ ಈ ನಾಲ್ಕು ಪ್ರಕರಣಗಳು ಭಿನ್ನವಾಗಿದ್ದು, ಎಲ್ಲಾ ಪ್ರಕ್ರಿಯೆಗಳು ಮುಗಿದರೂ ರಾಜ್ಯಪಾಲರು ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಸಾರ್ವಜನಿಕರ ದೃಷ್ಟಿಯಲ್ಲಿ ರಾಜ್ಯಪಾಲರ ಕಚೇರಿ ಬಗ್ಗೆ ತಪ್ಪು ಭಾವನೆ ಬರಬಾರದು ಮತ್ತು ಯಾವುದೇ ಗೊಂದಲ ಆಗಬಾರದೆಂದು ಸಚಿವ ಸಂಪುಟ ನೆರವು ಮತ್ತು ಸಲಹೆ ನೀಡಲು ನಿರ್ಧರಿಸಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Water Price Hike: ಎಷ್ಟೇ ವಿರೋಧ ಬಂದರೂ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಖಚಿತ; ಡಿ.ಕೆ.ಶಿವಕುಮಾರ್

ಸಂಪುಟದ ಇತರ ತೀರ್ಮಾನಗಳು ಹೀಗಿವೆ:

ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವ ʻಹೊಂಬೆಳಕುʼ ಯೋಜನೆಯಡಿ ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸಲು, ರೂ.25 ಕೋಟಿ ಅನುದಾನಕ್ಕೆ ತಾತ್ವಿಕ ಅನುಮೋದನೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ 250 ಮೀಟರ್‌ ಎತ್ತರದ ಆಕಾಶ ಗೋಪುರ (ಸ್ಕೈಡೆಕ್) ನಿರ್ಮಿಸಲು‌ ತಾಂತ್ರಿಕ ಅನುಮೋದನೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂಧನ ವೆಚ್ಚ ಉಳಿತಾಯವಾಗುವ ಮೊತ್ತದಲ್ಲಿ, ಸಾಂಪ್ರದಾಯಿಕ ವಿದ್ಯುತ್‌ ಬೀದಿ ದೀಪಗಳನ್ನು ತೆರವುಗೊಳಿಸಿ ಎಲ್.ಇ.ಡಿ ಬೀದಿ ದೀಪಗಳನ್ನು ಇ.ಎಂ.ಐ/ವಾರ್ಷಿಕ ಪಾವತಿ ಯೋಜನೆಯಡಿ ಮುಂದಿನ 7 ವರ್ಷಗಳ ಅವಧಿಗೆ ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಹೆಬ್ಬಾಳ ಮೇಲು ಸೇತುವೆ ಎಸ್ಟೀಮ್‌ ಮಾಲ್‌ ಹತ್ತಿರದಿಂದ ಹೊಸೂರು ರಸ್ತೆಯ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನ ಮೇಲ್ಸೇತುವೆ ತನಕ 12690 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಭೂಗತ ವಾಹನ ಸುರಂಗ ಮಾರ್ಗವನ್ನು ಟ್ವಿನ್ ‌ ಟ್ಯೂಬ್‌ ಮಾದರಿಯಲ್ಲಿ ನಿರ್ಮಿಸಲು ಸಚಿವ ಸಂಪುಟ ತಾತ್ವಿಕ ಅನುಮೋದನೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 52 ಇಂದಿರಾ ಕ್ಯಾಂಟೀನ್‌ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಇದಕ್ಕೆ ತಗಲುವ ರೂ.20 ಕೋಟಿ ಅನುದಾನ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಟಿಡಿಆರ್‌ ಯೋಜನೆಯಡಿ ಸ್ವಾಧೀನಪಡಿಸುವ ಪ್ರಕ್ರಿಯೆಗಳಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಸೂಚನೆಯನ್ವಯ ಸಾರ್ವಜನಿಕರಿಗೆ ಭೂಪರಿಹಾರ ನೀಡಲು ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: DK Shivakumar: ನನಗೆ ಸಿಬಿಐಗಿಂತ ಲೋಕಾಯುಕ್ತದಿಂದಲೇ ಹೆಚ್ಚಿನ ಹಿಂಸೆ; ಡಿ.ಕೆ.ಶಿವಕುಮಾರ್ ಆರೋಪ!

ಆಯವ್ಯಯದಲ್ಲಿ ಘೋಷಿಸಿರುವಂತೆ 85 ಕೋಟಿ ರೂ. ಅನುದಾನದಲ್ಲಿ 592 ಅಂಗನವಾಡಿಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿದೆ.

ಕರ್ನಾಟಕ ಸ್ಟೇಟ್‌ ಮಿನರಲ್ಸ್‌ ಕಾರ್ಪೊರೇಷನ್‌ ಸಂಸ್ಥೆಯ ಗ್ರೂಪ್‌ ಎ ಮತ್ತು ಬಿ ವೃಂದದ ಅಧಿಕಾರಿಗಳಿಗೆ 4ನೇ ವೇತನ ಆಯೋಗದ ಶಿಫಾರಸ್ಸಿನ ಅನುಸಾರ ದಿನಾಂಕ 01-04-1998 ರಿಂದ 30-09-2005ರ ವರೆಗಿನ ವೇತನ ಬಾಕಿ, ಬಡ್ಡಿ ಇತ್ಯಾದಿಗಳನ್ನು ಪಾವತಿಸಲು ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಣಯಿಸಿದೆ.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಕೇಂದ್ರ ಸರ್ಕಾರದ ಕಾರ್ಯಕ್ರಮವನ್ನು ರಾಜ್ಯದಲ್ಲಿ 147.87 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಮತ್ತು ಕುರೇಕುಪ್ಪ ಗ್ರಾಮಗಳಲ್ಲಿನ 2 ಸಾವಿರ ಎಕರೆ ಜಮೀನನ್ನು ಪ್ರತಿ ಎಕರೆಗೆ 1.22 ಲಕ್ಷ ರೂ. ಅಂತಿಮ ಬೆಲೆ ನಿಗದಿಪಡಿಸಿ ಹಾಗೂ ಸಂಡೂರು ತಾಲೂಕಿನ ತೋರಗಣಲ್ಲು, ಮುಸೇನಾಯಕನಹಳ್ಳಿ ಮತ್ತು ಯರಬನಹಳ್ಳಿ ಗ್ರಾಮಗಳಲ್ಲಿನ 1666.73 ಎಕರೆ ಜಮೀನನ್ನು ಪ್ರತಿ ಎಕರೆಗೆ ರೂ. 1.50 ಲಕ್ಷ ಅಂತಿಮ ಬೆಲೆ ನಿಗದಿಪಡಿಸಿ ಜೆ.ಎಸ್.ಡಬ್ಲ್ಯೂ ಸ್ಟೀಲ್‌ ಪರವಾಗಿ ನೀಡಲು ನಿರ್ಧರಿಸಲಾಗಿದೆ.

ಕೆ.ಎ.ಎಸ್‌ ಅಧಿಕಾರಿ ರಾಜಮ್ಮ ಎ. ಚೌಡರೆಡ್ಡಿ ಅವರ ವಿರುದ್ಧ ಲೋಕಾಯುಕ್ತ ಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆಯಲ್ಲಿ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತರ ಶಿಫಾರಸ್ಸಿನಂತೆ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಲು ಅನುಮೋದನೆ ನೀಡಲಾಗಿದೆ.

ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಹೆಲ್ತ್‌ ಮಿಷನ್‌ ಹಾಗೂ ಆರೋಗ್ಯ ಇಲಾಖೆಯ ಇತರ ಎಲ್ಲಾ ಆರೋಗ್ಯ ಸಂಬಂಧಿತ ಡಿಜಿಟಲ್‌ ಉಪಕ್ರಮಗಳ ಅನುಷ್ಠಾನಕ್ಕಾಗಿ ಕರ್ನಾಟಕ ಡಿಜಿಟಲ್‌ ಹೆಲ್ತ್‌ ಸೊಸೈಟಿ ಸ್ಥಾಪಿಸಿ ನೋಂದಣಿ ಮಾಡಲು ನಿರ್ಧರಿಸಲಾಗಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕ್ಕಲಪರ್ವಿ ಗ್ರಾಮದ ಹತ್ತಿರ ತುಂಗಾಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್‌ ಕಂ ಬ್ಯಾರೇಜ್ ರೂ.397.50 ಕೋಟಿ ಅಂದಾಜು ಮೊತ್ತದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ಮತಕ್ಷೇತ್ರದ ತಾಳಿಕೋಟೆ ಪಟ್ಟಣಕ್ಕೆ ಸಂಪರ್ಕಿಸುವ ಮನಗೂಳಿ-ಬಿಜ್ಜಳ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ಪುನರ್‌ ನಿರ್ಮಾಣ ಕಾಮಗಾರಿಯನ್ನು ರೂ.28ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ: Kannada New Movie: ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಟೀಸರ್ ರಿಲೀಸ್‌

2023-24ನೇ ಸಾಲಿನ ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿಯಡಿ ರೂ.1385.60 ಕೋಟಿ ಮೊತ್ತದ 295 ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಸಚಿವ ಎಚ್‌.ಕೆ. ಪಾಟೀಲ್‌ ಮಾಹಿತಿ ನೀಡಿದರು.

Continue Reading

ಕರ್ನಾಟಕ

CM Siddaramaiah: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿದ್ದರಾಮಯ್ಯ ಸೂಚನೆ

CM Siddaramaiah: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ, ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದಿಸಿ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದಿಸಿ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: CLP Meeting: ಮುಡಾ ಹಗರಣ; ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಪರ ನಿಂತ ಶಾಸಕರು

ವಾಲ್ಮೀಕಿ ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ 84.63 ಕೋಟಿ ಅನುದಾನದಲ್ಲಿ 50 ಕೋಟಿಯನ್ನು ಎಸ್‌ಐಟಿ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲೇ ಫ್ರೀಜ್ ಮಾಡಿಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗಿರುವ ಸುಮಾರು 30 ಕೋಟಿಯಷ್ಟು ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಪ್ರಯತ್ನ ಮುಂದುವರೆದಿದೆ. ಸದ್ಯದಲ್ಲೇ ಪೂರ್ತಿ ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಅಲ್ಲಿಯವರೆಗೂ ವಾಲ್ಮೀಕಿ ಸಮುದಾಯದ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ನಿಗಮಕ್ಕೆ ತಕ್ಷಣವೇ ಹೆಚ್ಚುವರಿ ಅನುದಾನ ಬಿಡುಗಡೆಗೆ ಸೂಚನೆ ನೀಡಿದರು.

ಪ್ರಕರಣ ಪೂರ್ತಿ ಇತ್ಯರ್ಥ ಆಗುವವರೆಗೂ ನಿಗಮದ ಮತ್ತು ಸಮುದಾಯದ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವುದು ನಮ್ಮ ಆದ್ಯತೆಯಾಗಿದೆ. ಹೀಗಾಗಿ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ನಿಯೋಗಕ್ಕೆ ಸ್ಪಷ್ಟಪಡಿಸಿದರು.

ಇದನ್ನೂ ಓದಿ: Job market: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ; ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಮುಂದಾದ ಶೇ. 72ರಷ್ಟು ಕಂಪನಿಗಳು!

ಈ ವೇಳೆ ಶಾಸಕರಾದ ಕಂಪ್ಲಿ ಗಣೇಶ್, ರಘುಮೂರ್ತಿ, ಕೋನರೆಡ್ಡಿ, ಸಮುದಾಯದ ಮುಖಂಡರಾದ ನಿವೃತ್ತ ಕೆಎಎಸ್‌ ಅಧಿಕಾರಿ ಮೃತ್ಯುಂಜಯಪ್ಪ ಸೇರಿ ಸಮಾಜದ ಹಲವು ಹಿರಿಯರು ಉಪಸ್ಥಿತರಿದ್ದರು.

Continue Reading
Advertisement
Bengaluru News
ಬೆಂಗಳೂರು7 mins ago

Bengaluru News: ಬೆಂಗಳೂರಿನಲ್ಲಿ ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆ

Al-Qaeda terror module
ದೇಶ31 mins ago

Al-Qaeda Terror module: ಮೂರು ರಾಜ್ಯಗಳಲ್ಲಿ ಭರ್ಜರಿ ಉಗ್ರರ ಬೇಟೆ; 11ಶಂಕಿತರು ಅರೆಸ್ಟ್‌

Pralhad Joshi
ಬೆಂಗಳೂರು57 mins ago

Pralhad Joshi: ಮುಂಬೈ, ಕೋಲ್ಕತಾದಲ್ಲಿ ಇವಿ ಬ್ಯಾಟರಿ ಚಾರ್ಜರ್ ಘಟಕಕ್ಕೆ ಬೆಂಗಳೂರು ಮಾದರಿ

Richest Village
ದೇಶ1 hour ago

Richest Village: ಗುಜರಾತ್‌ನಲ್ಲಿದೆ ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ! ಇಲ್ಲಿಯ ಜನ ಇಟ್ಟಿರುವ ಫಿಕ್ಸೆಡ್‌ ಡಿಪಾಸಿಟ್‌ ಮೌಲ್ಯ 7,000 ಕೋಟಿ ರೂ!

Cabinet Meeting
ಕರ್ನಾಟಕ1 hour ago

Cabinet Meeting: ಕುಮಾರಸ್ವಾಮಿ, ಇತರ ಮೂವರ ವಿರುದ್ಧದ ಪ್ರಕರಣ; ಪ್ರಾಸಿಕ್ಯೂಷನ್‌ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಂಪುಟ ಸಲಹೆ

Yogi Adityanath
ದೇಶ1 hour ago

Yogi Adityanath: ಯೋಗಿ ಆದೇಶ ಪಾಲಿಸದ 13 ಲಕ್ಷ ಸರ್ಕಾರಿ ನೌಕರರು ವೇತನ ಕಳೆದುಕೊಳ್ಳೋದು ಗ್ಯಾರಂಟಿ! ಏನಿದು ಹೊಸ ನಿಯಮ?

CM Siddaramaiah
ಕರ್ನಾಟಕ2 hours ago

CM Siddaramaiah: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿದ್ದರಾಮಯ್ಯ ಸೂಚನೆ

Fixed Deposits
ಮನಿ-ಗೈಡ್2 hours ago

Fixed Deposits: ಪೋಸ್ಟ್ ಆಫೀಸ್ ಎಫ್‌ಡಿ; ಬಡ್ಡಿ ದರ ಎಷ್ಟು, ಏನೆಲ್ಲ ಲಾಭ?

Water Price hike
ಬೆಂಗಳೂರು2 hours ago

Water Price Hike: ಎಷ್ಟೇ ವಿರೋಧ ಬಂದರೂ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಖಚಿತ; ಡಿ.ಕೆ.ಶಿವಕುಮಾರ್

DK Shivakumar
ಬೆಂಗಳೂರು3 hours ago

DK Shivakumar: ನನಗೆ ಸಿಬಿಐಗಿಂತ ಲೋಕಾಯುಕ್ತದಿಂದಲೇ ಹೆಚ್ಚಿನ ಹಿಂಸೆ; ಡಿ.ಕೆ.ಶಿವಕುಮಾರ್ ಆರೋಪ!

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌