Kolkata Doctor Murder Case: ಬರೋಬ್ಬರಿ 11ದಿನಗಳ ಬಳಿಕ ಮುಷ್ಕರ ಹಿಂಪಡೆದ ವೈದ್ಯರು - Vistara News

ದೇಶ

Kolkata Doctor Murder Case: ಬರೋಬ್ಬರಿ 11ದಿನಗಳ ಬಳಿಕ ಮುಷ್ಕರ ಹಿಂಪಡೆದ ವೈದ್ಯರು

Kolkata Doctor Murder Case: ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿರುವ ಡಾ.ಆರ್‌.ಎಂ.ಎಲ್.ಆಸ್ಪತ್ರೆ ವೈದ್ಯರ ಸಂಘವು, ಸುಪ್ರೀಂಕೋರ್ಟ್​ ತಮ್ಮ ಬೇಡಿಕೆಗಳು ಮತ್ತು ಕಾಳಜಿಯನ್ನು ಅರ್ಥ ಮಾಡಿಕೊಂಡಿದೆ. ಕೋರ್ಟ್​ನ ಮೇಲಿನ ನಂಬಿಕೆಯಿಂದಾಗಿ ಮುಷ್ಕರ ಅಂತ್ಯಗೊಳಿಸುತ್ತಿದ್ದೇವೆ. ವೈದ್ಯರು ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. 11 ದಿನಗಳ ಮುಷ್ಕರ ಅಂತ್ಯವಾಗಲಿದೆ ಎಂದು ತಿಳಿಸಿದೆ.

VISTARANEWS.COM


on

kolkata Doctor murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೊಲ್ಕತ್ತಾ ಟ್ರೈನಿ ವೈದ್ಯೆ ಕೊಲೆ ಅತ್ಯಾಚಾರ ಕೊಲೆ ಪ್ರಕರಣ(Kolkata Doctor Murder Case) ಖಂಡಿಸಿ ದೇಶವ್ಯಾಪಿ ವೈದ್ಯರು ಕಳೆದ 11 ದಿನಗಳಿಂದ ನಡೆಸುತ್ತಿರುವ ಮುಷ್ಕರವನ್ನು ಹಿಂಪಡೆದಿದ್ದಾರೆ(Doctors Strike Called Off). ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಸುಪ್ರೀಂಕೋರ್ಟ್‌(Supreme Court) ಭರವಸೆ ನೀಡಿರುವ ಬೆನ್ನಲ್ಲೇ ವೈದ್ಯರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ. ಅಲ್ಲದೇ ಆಗಸ್ಟ್ 23ರಂದು ಅಂದರೆ ನಾಳೆ ಬೆಳಿಗ್ಗೆ 8 ಗಂಟೆಯಿಂದ ಸೇವೆಯನ್ನು ಮರು ಆರಂಭಿಸಲಾಗುವುದು ಎಂದು ವೈದ್ಯಕೀಯ ಸಂಘ ತಿಳಿಸಿದೆ.

ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿರುವ ಡಾ.ಆರ್‌.ಎಂ.ಎಲ್.ಆಸ್ಪತ್ರೆ ವೈದ್ಯರ ಸಂಘವು, ಸುಪ್ರೀಂಕೋರ್ಟ್​ ತಮ್ಮ ಬೇಡಿಕೆಗಳು ಮತ್ತು ಕಾಳಜಿಯನ್ನು ಅರ್ಥ ಮಾಡಿಕೊಂಡಿದೆ. ಕೋರ್ಟ್​ನ ಮೇಲಿನ ನಂಬಿಕೆಯಿಂದಾಗಿ ಮುಷ್ಕರ ಅಂತ್ಯಗೊಳಿಸುತ್ತಿದ್ದೇವೆ. ವೈದ್ಯರು ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. 11 ದಿನಗಳ ಮುಷ್ಕರ ಅಂತ್ಯವಾಗಲಿದೆ ಎಂದು ತಿಳಿಸಿದೆ.

ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವ ಮೂಲಕ ಕೋಲ್ಕತ್ತಾ ಹೈಕೋರ್ಟ್‌ ನಮ್ಮ ಮೊದಲ ಬೇಡಿಕೆಯನ್ನು ಈಡೇರಿಸಿದೆ. ಬಳಿಕ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಕೊಲೆ ಕೇಸ್​ ಅನ್ನು ತನಿಖೆ ನಡೆಸುತ್ತಿದೆ. ಹೀಗಾಗಿ ವೈದ್ಯರ ಮುಷ್ಕರವನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ದೆಹಲಿಯ ಏಮ್ಸ್​ ಆಸ್ಪತ್ರೆಯ ಜನರಲ್​ ಸೆಕ್ರೆಟರಿ ರಘುನಂದನ್​​ ದೀಕ್ಷಿತ್​ ಅವರು ಹೇಳಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆ ಕೊಲೆ ಪ್ರಕರಣ- ಪ್ರಧಾನಿ ಮೋದಿಗೆ ದಿಢೀರ್‌ ಪತ್ರ ಬರೆದ ಮಮತಾ ಬ್ಯಾನರ್ಜಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kapil Sibal: ವೈದ್ಯೆ ಕೊಲೆ ಕೇಸ್‌- ಸುಪ್ರೀಂಕೋರ್ಟ್‌ ವಿಚಾರಣೆ ವೇಳೆ ಎಲ್ಲರೆದುರು ಜೋರಾಗಿ ನಕ್ಕ ಕಪಿಲ್‌ ಸಿಬಲ್‌-ಭಾರೀ ಆಕ್ರೋಶ ವ್ಯಕ್ತ

Kapil Sibal:ಕೋಲ್ಕತ್ತಾ ವೈದ್ಯೆ ಕೊಲೆ ಪ್ರಕರಣದ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್‌ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯುತ್ತಿತ್ತು. ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಷನ್ (SCBA) ಅಧ್ಯಕ್ಷ ಸಿಬಲ್ ಮತ್ತು ತುಷಾರ್ ಮೆಹ್ತಾ ನಡುವೆ ವಾದ ನಡೆಯುತ್ತಿರುವಾಗ ಹಿರಿಯ ವಕೀಲರು ನಕ್ಕಿದ್ದಾರೆ. ಸರ್ಕಾರಿ ವಕೀಲರು ಪೊಲೀಸರಿಂದ ಎಫ್‌ಐಆರ್‌ನ ದಾಖಲಾತಿಯಲ್ಲಿನ ವ್ಯತ್ಯಾಸವನ್ನು ಪ್ರಸ್ತಾಪಿಸಿ ಅದನ್ನು ಎತ್ತಿ ತೋರಿಸುತ್ತಿದ್ದ ಸಂದರ್ಭದಲ್ಲಿ ಕಪಿಲ್‌ ಸಿಬಲ್‌ ಬಹಳ ನಿರ್ಲಕ್ಷ್ಯವಾಗಿ, ಬೆಜವಾಬ್ದಾರಿಯುವಾಗಿ ನಕ್ಕಿದ್ದಾರೆ.

VISTARANEWS.COM


on

Kapil sibal
Koo

ಕೋಲ್ಕತ್ತಾ: ಟೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ(Kolkata Doctor Murder Case) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌(Supreme Court) ವಿಚಾರಣೆ ನಡೆಯಿತು. ಈ ವೇಳೆ ಹಿರಿಯ ವಕೀಲ, ಮಾಜಿ ಕೇಂದ್ರ ಸಚಿವ ಕಪಿಲ್‌ ಸಿಬಲ್‌(Kapil Sibal) ತಮ್ಮ ಬೇಜವಾಬ್ದಾರಿಯುವ ನಡೆಯಿಂದಾಗಿ ವಿವಾದಕ್ಕೀಡಾಗಿದ್ದಾರೆ. ವಿಚಾರಣೆ ವೇಳೆ ಕಪಿಲ್‌ ಸಿಬಲ್‌ ನಗುವ ಮೂಲಕ ವಿಲಕ್ಷಣ ವರ್ತನೆ ತೋರಿದ್ದು, ಅವರ ವರ್ತನೆಗೆ ಸಾಲಿಸಿಟರ್‌ ಜನರಲ್‌ ಗರಂ ಆಗಿದ್ದಾರೆ.

ಏನಿದು ಘಟನೆ?

ಕೋಲ್ಕತ್ತಾ ವೈದ್ಯೆ ಕೊಲೆ ಪ್ರಕರಣದ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್‌ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯುತ್ತಿತ್ತು. ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಷನ್ (SCBA) ಅಧ್ಯಕ್ಷ ಸಿಬಲ್ ಮತ್ತು ತುಷಾರ್ ಮೆಹ್ತಾ ನಡುವೆ ವಾದ ನಡೆಯುತ್ತಿರುವಾಗ ಹಿರಿಯ ವಕೀಲರು ನಕ್ಕಿದ್ದಾರೆ. ಸರ್ಕಾರಿ ವಕೀಲರು ಪೊಲೀಸರಿಂದ ಎಫ್‌ಐಆರ್‌ನ ದಾಖಲಾತಿಯಲ್ಲಿನ ವ್ಯತ್ಯಾಸವನ್ನು ಪ್ರಸ್ತಾಪಿಸಿ ಅದನ್ನು ಎತ್ತಿ ತೋರಿಸುತ್ತಿದ್ದ ಸಂದರ್ಭದಲ್ಲಿ ಕಪಿಲ್‌ ಸಿಬಲ್‌ ಬಹಳ ನಿರ್ಲಕ್ಷ್ಯವಾಗಿ, ಬೆಜವಾಬ್ದಾರಿಯುವಾಗಿ ನಕ್ಕಿದ್ದಾರೆ.

ಇದಕ್ಕೆ ಸಿಟ್ಟುಗೊಂಡ ಮೆಹ್ತಾ, ಒಂದು ಹುಡುಗಿ ತನ್ನ ಪ್ರಾಣವನ್ನು ಅತ್ಯಂತ ಅಮಾನವೀಯ ರೀತಿಯಲ್ಲಿ ಕಳೆದುಕೊಂಡಿದ್ದಾಳೆ. ಯಾರೋ ಸತ್ತಿದ್ದಾರೆ. ಇದು ನಗುವಂತಹ ವಿಚಾರವಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ. ಇನ್ನು ಈ ಘಟನೆಯ ವಿಡಿಯೊವನ್ನು ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಭಾರೀ ವೈರಲ್‌ ಆಗುತ್ತಿದೆ. 32 ಸೆಕೆಂಡ್ ಅವಧಿಯ ಕ್ಲಿಪ್ ಅನ್ನು ಹಂಚಿಕೊಂಡ ಬಿಜೆಪಿಯ ಅಮಿತ್ ಮಾಳವಿಯಾ, ಸಿಬಲ್ ಅವರ ವರ್ತನೆಯನ್ನು ಟೀಕಿಸಿದ್ದಾರೆ.

ಮಾಳವಿಯಾ ಅವರು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಕೇಂದ್ರ ಸಚಿವ ಕಪಿಲ್‌ ಸಿಬಲ್‌ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಂತೆ ಕೋಲ್ಕತ್ತಾ ವೈದ್ಯೆ ಹತ್ಯೆ ಬಗ್ಗೆ ಕಿಂಚಿತ್ತೂ ನೋವಿಲ್ಲ. ಹೀಗಾಗಿಯೇ ಕೋರ್ಟ್‌ನಲ್ಲಿ ವಿಚಾರಣೆ ವೇಳೆ ನಗಬೇಡಿ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕಪಿಲ್ ಸಿಬಲ್ ಅವರಿಗೆ ನೆನಪಿಸಬೇಕಾದ ಸ್ಥಿತಿ ನಿರ್ಮಾಣವಾಗಿತ್ತು ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಬರೋಬ್ಬರಿ 11ದಿನಗಳ ಬಳಿಕ ಮುಷ್ಕರ ಹಿಂಪಡೆದ ವೈದ್ಯರು

Continue Reading

ದೇಶ

Al-Qaeda Terror module: ಮೂರು ರಾಜ್ಯಗಳಲ್ಲಿ ಭರ್ಜರಿ ಉಗ್ರರ ಬೇಟೆ; 11ಶಂಕಿತರು ಅರೆಸ್ಟ್‌

Al-Qaeda terror module: ಈ ಮೂರು ರಾಜ್ಯಗಳ ಸ್ಥಳೀಯ ಪೊಲೀಸರ ಸಹಯೋಗದೊಂದಿಗೆ ದೆಹಲಿ ಪೊಲೀಸ್‌ನ ಮೂರು ವಿಶೇಷ ತಂಡ ಗುರುವಾರ ಜಂಟೀ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಬರೋಬ್ಬರಿ 15ಸ್ಥಳಗಳಲ್ಲಿ ದಾಳಿಸಿ ನಡೆಸಿ 11ಮಂದಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Al-Qaeda terror module
Koo

ನವದೆಹಲಿ: ದೆಹಲಿ ಪೊಲೀಸರು ಗುರುವಾರ ಭರ್ಜರಿ ಕಾರ್ಯಾಚರಣೆ ನಡೆಸಿ ಅಲ್‌ಖೈದಾ(Al-Qaeda terror module) ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ 11ಜನ ಶಂಕಿತರನ್ನು ಅರೆಸ್ಟ್‌ ಮಾಡಿದ್ದಾರೆ. ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಾದ್ಯಂತ ದೆಹಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಮೂರು ರಾಜ್ಯಗಳ ಸ್ಥಳೀಯ ಪೊಲೀಸರ ಸಹಯೋಗದೊಂದಿಗೆ ದೆಹಲಿ ಪೊಲೀಸ್‌ನ ಮೂರು ವಿಶೇಷ ತಂಡ ಗುರುವಾರ ಜಂಟೀ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಬರೋಬ್ಬರಿ 15ಸ್ಥಳಗಳಲ್ಲಿ ದಾಳಿಸಿ ನಡೆಸಿ 11ಮಂದಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಬಂಧಿತರಿಂದ ಒಂದು AK-47 ರೈಫಲ್, .38 ಬೋರ್ ರಿವಾಲ್ವರ್, .38 ಬೋರ್‌ನ ಆರು ಲೈವ್ ಕಾರ್ಟ್ರಿಡ್ಜ್‌ಗಳು, .32 ಬೋರ್‌ನ 30 ಲೈವ್ ಕಾರ್ಟ್ರಿಡ್ಜ್‌ಗಳು ಮತ್ತು AK-47 ಗಾಗಿ 30 ಲೈವ್ ಕಾರ್ಟ್ರಿಡ್ಜ್‌ಗಳು ಸೇರಿದಂತೆ ಭಾರೀ ಸಶ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಇನ್ನು ಪೊಲೀಸರು ಡಮ್ಮಿ ಇನ್ಸಾಸ್ ರೈಫಲ್, ಏರ್ ರೈಫಲ್ ಮತ್ತು ಕಬ್ಬಿಣದ ಮೊಣಕೈ ಪೈಪ್, ಹ್ಯಾಂಡ್‌ ಗ್ರೆನೇಡ್, ಕೀ ರಿಮೋಟ್ ಕಂಟ್ರೋಲ್ ಯಾಂತ್ರಿಕ ವ್ಯವಸ್ಥೆ, ಕೆಲವು ತಂತಿಗಳು, 1.5-ವೋಲ್ಟ್ ಎಎ ಬ್ಯಾಟರಿ, ಟೇಬಲ್ ವಾಚ್, ನಾಲ್ಕು ನೆಲದ ಹಾಳೆಗಳು, ಗುರಿ, ಕ್ಯಾಂಪಿಂಗ್ ಟೆಂಟ್ ಮತ್ತು ವಿವಿಧ ಆಹಾರ ಪದಾರ್ಥಗಳಾದ ಬಿಸ್ಕತ್ತುಗಳು, ಪ್ಯಾಕೆಟ್ ಚಿಪ್ಸ್, ಮತ್ತು ನೀರಿನ ಬಾಟಲ್ ಮೊದಲಾದವುಗಳನ್ನು ಸೀಜ್‌ ಮಾಡಿದ್ದಾರೆ.

ರಾಜಸ್ಥಾನದ ಭಿವಾಡಿಯಲ್ಲಿ ಶಸ್ತ್ರಾಸ್ತ್ರ ತರಬೇತಿ ಪಡೆಯುತ್ತಿದ್ದ ಆರು ಜನರನ್ನು ಬಂಧಿಸಲಾಗಿದೆ. ಜಾರ್ಖಂಡ್ ನಿವಾಸಿಗಳಾದ ಹಸನ್ ಅನ್ಸಾರಿ, ಇನಾಮುಲ್ ಅನ್ಸಾರಿ, ಅಲ್ತಾಫ್ ಅನ್ಸಾರಿ, ಅರ್ಷದ್ ಖಾನ್, ಉಮರ್ ಫಾರೂಕ್ ಮತ್ತು ಶಹಬಾಜ್ ಅನ್ಸಾರಿ ಬಂಧಿತರು. ಅವರು ಕಳೆದ ಕೆಲವು ದಿನಗಳಿಂದ ರಾಜಸ್ಥಾನದಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಇವರ ಬಂಧನದ ನಂತರ ಜಾರ್ಖಂಡ್‌ನ ರಾಂಚಿಯಲ್ಲಿ ಇನ್ನೂ ಐವರನ್ನು ಬಂಧಿಸಲಾಗಿದೆ. ಹೆಚ್ಚುವರಿ ಶಂಕಿತರನ್ನು ಇಶ್ತಿಯಾಕ್ ಅಹ್ಮದ್, ಮೋತಿಯುರ್, ರಿಜ್ವಾನ್, ಮುಫ್ತಿ ರಹಮತುಲ್ಲಾ ಮತ್ತು ಫೈಜಾನ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಭಯೋತ್ಪಾದನಾ ಘಟಕದ ಸದಸ್ಯರು ರಾಜಸ್ಥಾನದ ಅರಾವಳಿ ಬೆಟ್ಟಗಳ ಕಾಡುಗಳಂತಹ ವಿವಿಧ ಸ್ಥಳಗಳಲ್ಲಿ ಶಸ್ತ್ರಾಸ್ತ್ರ ನಿರ್ವಹಣೆ ಸೇರಿದಂತೆ ತರಬೇತಿಯನ್ನು ಪಡೆದಿದ್ದರು ಎಂದು ಇನ್ನೊಬ್ಬ ಅಧಿಕಾರಿ ತಿಳಿಸಿದ್ದಾರೆ. ಶಂಕಿತರನ್ನು ಬಂಧಿಸಲು ಈ ಗುಡ್ಡಗಾಡು ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಕಾರ್ಯಾಚರಣೆ ನಡೆಸಲಾಯಿತು.
ಉತ್ತರ ಪ್ರದೇಶದ ಅಲಿಗಢದಿಂದ ಮೂವರು ಶಂಕಿತ ಉಗ್ರರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ದೆಹಲಿ ಪೊಲೀಸರು ವರದಿ ಮಾಡಿದ್ದಾರೆ.

ಇದನ್ನೂ ಓದಿ: Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

Continue Reading

ದೇಶ

Richest Village: ಗುಜರಾತ್‌ನಲ್ಲಿದೆ ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ! ಇಲ್ಲಿಯ ಜನ ಇಟ್ಟಿರುವ ಫಿಕ್ಸೆಡ್‌ ಡಿಪಾಸಿಟ್‌ ಮೌಲ್ಯ 7,000 ಕೋಟಿ ರೂ!

ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮವೊಂದು (Richest Village) ಗುಜರಾತ್‌ನಲ್ಲಿದೆ. ಅದರ ಸಮೃದ್ಧಿಯ ಹಿಂದಿನ ಕಾರಣ ಅಚ್ಚರಿಯನ್ನು ಉಂಟು ಮಾಡುತ್ತದೆ. ಇಲ್ಲಿನ ನಿವಾಸಿಗಳು ಕನಿಷ್ಠ 7,000 ಕೋಟಿ ರೂ. ಮೌಲ್ಯದ ಸ್ಥಿರ ಠೇವಣಿಗಳನ್ನು ಹೊಂದಿದ್ದಾರೆ. ಇದು ಅವರು ಎಷ್ಟು ಶ್ರೀಮಂತರು ಎಂಬುದರ ಒಂದು ಸಣ್ಣ ನೋಟವಷ್ಟೇ! ಈ ಕುರಿತ ಕುತೂಹಲಕರ ವರದಿ ಇಲ್ಲಿದೆ.

VISTARANEWS.COM


on

By

Richest Village
Koo

ಗುಜರಾತ್ (Gujarat) ಭಾರತದ ಪ್ರಮುಖ ವ್ಯಾಪಾರ ತಾಣಗಳಲ್ಲಿ ಒಂದಾಗಿದ್ದು, ಇದು ದೇಶಕ್ಕೆ ಕೆಲವು ಉನ್ನತ ಕೈಗಾರಿಕೋದ್ಯಮಿಗಳನ್ನು ನೀಡಿದೆ. ಆದರೆ ಸಮೃದ್ಧಿ ಕೇವಲ ನಗರಗಳಿಗೆ ಸೀಮಿತವಾಗಿಲ್ಲ. ಇಲ್ಲಿರುವ ಪುಟ್ಟ ಗ್ರಾಮವೊಂದು ಏಷ್ಯಾದ ಶ್ರೀಮಂತ (richest village in Asia) ಗ್ರಾಮವಾಗಿ (Richest Village) ಗುರುತಿಸಿಕೊಂಡಿದೆ.

ಕಛ್‌ನಲ್ಲಿರುವ ಮಾಧಾಪರ್ ಅನ್ನು ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ ಎಂದು ಕರೆಯಲಾಗುತ್ತದೆ. ಯಾಕೆಂದರೆ ಇಲ್ಲಿ ಆರ್ಥಿಕ ಸಮೃದ್ಧಿಗೇನೂ ಕೊರತೆಯಿಲ್ಲ. ಭುಜ್‌ನ ಹೊರವಲಯದಲ್ಲಿರುವ ಈ ಗ್ರಾಮದ ನಿವಾಸಿಗಳು 7,000 ಕೋಟಿ ರೂ. ಮೌಲ್ಯದ ಸ್ಥಿರ ಠೇವಣಿಗಳನ್ನು ಹೊಂದಿದ್ದಾರೆ. ಇದು ಅವರು ಎಷ್ಟು ಶ್ರೀಮಂತರು ಎಂಬುದನ್ನು ಹೇಳುತ್ತದೆ.

ಮಾಧಾಪರ್‌ನಲ್ಲಿ ಪಟೇಲ್ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಇವರ ಜನಸಂಖ್ಯೆಯು ಸುಮಾರು 32,000 ಎಂದು ಅಂದಾಜಿಸಲಾಗಿದೆ. ಇದು 2011 ರಲ್ಲಿ 17,000 ಆಗಿತ್ತು.

ಈ ಹಳ್ಳಿಯು ಹೆಚ್ ಡಿಎಫ್ ಸಿ ಬ್ಯಾಂಕ್, ಎಸ್‌ಬಿಐ, ಪಿಎನ್‌ಬಿ, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಮುಂತಾದ ಪ್ರಮುಖ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳನ್ನು ಒಳಗೊಂಡಂತೆ 17 ಬ್ಯಾಂಕ್‌ಗಳನ್ನು ಹೊಂದಿದೆ. ಇದು ಒಂದೇ ಹಳ್ಳಿಗೆ ಅಸಾಮಾನ್ಯವಾಗಿದೆ. ಅದರ ಹೊರತಾಗಿಯೂ ಹೆಚ್ಚಿನ ಬ್ಯಾಂಕ್‌ಗಳು ಇಲ್ಲಿ ತಮ್ಮ ಶಾಖೆಗಳನ್ನು ತೆರೆಯಲು ಆಸಕ್ತಿ ಹೊಂದಿವೆ.


ಗ್ರಾಮದ ಈ ಏಳಿಗೆಯ ಹಿಂದಿನ ಕಾರಣವೆಂದರೆ ಅನಿವಾಸಿ ಭಾರತೀಯ ಕುಟುಂಬಗಳು. ಅವರು ಸ್ಥಳೀಯ ಬ್ಯಾಂಕು ಮತ್ತು ಅಂಚೆ ಕಚೇರಿಗಳಲ್ಲಿ ಪ್ರತಿ ವರ್ಷ ಕೋಟಿ ರೂ. ಗಳನ್ನು ಠೇವಣಿ ಮಾಡುತ್ತಾರೆ. ಗ್ರಾಮವು ಸುಮಾರು 20,000 ಮನೆಗಳನ್ನು ಹೊಂದಿದೆ. ಆದರೆ ಸುಮಾರು 1,200 ಕುಟುಂಬಗಳು ವಿದೇಶದಲ್ಲಿ ಅದರಲ್ಲೂ ಹೆಚ್ಚಾಗಿ ಆಫ್ರಿಕನ್ ದೇಶಗಳಲ್ಲಿ ವಾಸಿಸುತ್ತಿವೆ.

ಮಧ್ಯ ಆಫ್ರಿಕಾದಲ್ಲಿನ ನಿರ್ಮಾಣ ವ್ಯವಹಾರಗಳಲ್ಲಿ ಗುಜರಾತಿಗಳು ಹೆಚ್ಚು ಪ್ರಾಬಲ್ಯ ಹೊಂದಿದ್ದಾರೆ. ಈ ಪ್ರದೇಶ ದೊಡ್ಡ ವಲಸಿಗ ಜನಸಂಖ್ಯೆಯ ಭಾಗವಾಗಿದೆ. ಅನೇಕರು ಯುಕೆ, ಆಸ್ಟ್ರೇಲಿಯಾ, ಅಮೆರಿಕ ಮತ್ತು ನ್ಯೂಜಿಲೆಂಡ್‌ನಲ್ಲಿಯೂ ವಾಸಿಸುತ್ತಿದ್ದಾರೆ.

ಅನೇಕ ಗ್ರಾಮಸ್ಥರು ವಿದೇಶದಲ್ಲಿ ವಾಸಿಸುತ್ತಿದ್ದರೂ, ಅಲ್ಲೇ ಕೆಲಸ ಮಾಡಿಕೊಂಡಿದ್ದರೂ ಅವರು ತಮ್ಮ ಗ್ರಾಮದೊಂದಿಗೆ ನಂಟು ಹೊಂದಿದ್ದಾರೆ ಮತ್ತು ಅವರು ವಾಸಿಸುವ ಸ್ಥಳಕ್ಕಿಂತ ಹೆಚ್ಚಾಗಿ ತಮ್ಮ ಹಣವನ್ನು ಇಲ್ಲಿನ ಬ್ಯಾಂಕ್‌ಗಳಲ್ಲಿ ಇಡಲು ಬಯಸುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪಾರುಲ್ಬೆನ್ ಕಾರ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: Job market: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ; ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಮುಂದಾದ ಶೇ. 72ರಷ್ಟು ಕಂಪನಿಗಳು!

ಗ್ರಾಮದ ಬ್ಯಾಂಕ್ ಗಳಲ್ಲಿ ಅಪಾರ ಠೇವಣಿ ಇಡುವುದರಿಂದ ಗ್ರಾಮ ಸಮೃದ್ಧಿಯಾಗಿದೆ. ನೀರು, ನೈರ್ಮಲ್ಯ ಮತ್ತು ರಸ್ತೆಯಂತಹ ಎಲ್ಲಾ ಮೂಲ ಸೌಕರ್ಯಗಳನ್ನು ಹೊಂದಿದೆ. ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳು, ಕೆರೆಗಳು ಮತ್ತು ದೇವಾಲಯಗಳು ಬಂಗಲೆಗಳಿವೆ ಎನ್ನುತ್ತಾರೆ ಗ್ರಾಮದ ರಾಷ್ಟ್ರೀಕೃತ ಬ್ಯಾಂಕ್‌ನ ಸ್ಥಳೀಯ ಶಾಖಾ ವ್ಯವಸ್ಥಾಪಕರು.

Continue Reading

ದೇಶ

Yogi Adityanath: ಯೋಗಿ ಆದೇಶ ಪಾಲಿಸದ 13 ಲಕ್ಷ ಸರ್ಕಾರಿ ನೌಕರರು ವೇತನ ಕಳೆದುಕೊಳ್ಳೋದು ಗ್ಯಾರಂಟಿ! ಏನಿದು ಹೊಸ ನಿಯಮ?

Yogi Adityanath: ಕಳೆದ ವರ್ಷ ಆಗಸ್ಟ್‌ನಲ್ಲಿ ನೀಡಲಾದ ಆದೇಶದ ಆರಂಭಿಕ ಗಡುವು ಡಿಸೆಂಬರ್ 31 ಆಗಿತ್ತು. ಅದರ ನಂತರ ಗಡುವನ್ನು ಹಲವು ಬಾರಿ ವಿಸ್ತರಿಸಲಾಯಿತು. ಜೂನ್ 30 ಮತ್ತು ನಂತರ ಜುಲೈ 31 ರವರೆಗೆ ವಿಸ್ತರಿಸಲಾಯಿತು. ಆದರೆ ಕೇವಲ 26 ಪ್ರತಿಶತ ಸರ್ಕಾರಿ ನೌಕರರು ಈ ನಿಯಮ ಪಾಲಿಸಿದ್ದಾರೆ. ಇದೀಗ ಈ ಗಡುವನ್ನು ಆಗಸ್ಟ್ 31ಕ್ಕೆ ಮುಂದೂಡಲಾಗಿದೆ.

VISTARANEWS.COM


on

Yogi Adityanath
Koo

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್(Yogi Adityanath) ಸರ್ಕಾರದ ಆದೇಶವನ್ನು ಪಾಲಿಸದಿದ್ದರೆ 13 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು(Government Employees) ತಮ್ಮ ಸಂಬಳವನ್ನು ಕಳೆದುಕೊಳ್ಳುವ ಅಪಾಯವಿದೆ. ಸರ್ಕಾರಿ ನೌಕರರು ತಮ್ಮ ಚರ ಮತ್ತು ಸ್ಥಿರ ಆಸ್ತಿಗಳನ್ನು ಸರ್ಕಾರಿ ಪೋರ್ಟಲ್ ‘ಮಾನವ ಸಂಪದ’ದಲ್ಲಿ ಆಗಸ್ಟ್ 31 ರೊಳಗೆ ಘೋಷಿಸಲು ಸೂಚಿಸಲಾಗಿದೆ. ಇಲ್ಲದಿದ್ದರೆ ಅವರಿಗೆ ಈ ತಿಂಗಳ ಸಂಬಳವನ್ನು ನೀಡಲಾಗುವುದಿಲ್ಲ. ಪಾಲಿಸದಿರುವುದು ಬಡ್ತಿಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ನೀಡಲಾದ ಆದೇಶದ ಆರಂಭಿಕ ಗಡುವು ಡಿಸೆಂಬರ್ 31 ಆಗಿತ್ತು. ಅದರ ನಂತರ ಗಡುವನ್ನು ಹಲವು ಬಾರಿ ವಿಸ್ತರಿಸಲಾಯಿತು. ಜೂನ್ 30 ಮತ್ತು ನಂತರ ಜುಲೈ 31 ರವರೆಗೆ ವಿಸ್ತರಿಸಲಾಯಿತು. ಆದರೆ ಕೇವಲ 26 ಪ್ರತಿಶತ ಸರ್ಕಾರಿ ನೌಕರರು ಈ ನಿಯಮ ಪಾಲಿಸಿದ್ದಾರೆ. ಇದೀಗ ಈ ಗಡುವನ್ನು ಆಗಸ್ಟ್ 31ಕ್ಕೆ ಮುಂದೂಡಲಾಗಿದೆ.

ಸದ್ಯ ಉತ್ತರ ಪ್ರದೇಶದಲ್ಲಿ 17 ಲಕ್ಷ 88 ಸಾವಿರದ 429 ಸರ್ಕಾರಿ ನೌಕರರಿದ್ದಾರೆ. ಈ ಪೈಕಿ ಶೇ 26ರಷ್ಟು ನೌಕರರು ಮಾತ್ರ ತಮ್ಮ ಆಸ್ತಿ ವಿವರ ನೀಡಿದ್ದಾರೆ. ಅಂದರೆ, 13 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಇನ್ನೂ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಬೇಕಾಗಿದೆ. ಈ ಹಿಂದೆ ಹಲವು ಬಾರಿ ಗಡುವನ್ನು ವಿಸ್ತರಿಸಲಾಗಿದ್ದರೂ, ವಿವರಗಳನ್ನು ಸಲ್ಲಿಸಲು ವಿಫಲರಾದವರಿಗೆ ಇತ್ತೀಚಿನ ನಿರ್ದೇಶನವು ಅಂತಿಮ ಗಡುವಾಗಿದೆ.

ಆಗಸ್ಟ್ 31 ರೊಳಗೆ ಆಸ್ತಿ ವಿವರಗಳನ್ನು ನೀಡುವವರಿಗೆ ಮಾತ್ರ ಆಗಸ್ಟ್ ತಿಂಗಳ ಪಾವತಿಯನ್ನು ನೀಡಲಾಗುವುದು ಮತ್ತು ಉಳಿದವರ ಸಂಬಳವನ್ನು ನಿಲ್ಲಿಸಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಸ್ಪಷ್ಟವಾಗಿ ಹೇಳಿದ್ದಾರೆ. ಈ ಕ್ರಮವು ಸರ್ಕಾರದೊಳಗೆ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಯನ್ನು ಹೊಂದಿದ್ದೇವೆ” ಎಂದು ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಹೇಳಿದ್ದಾರೆ.

ಪ್ರತಿಪಕ್ಷವು ಈ ಕ್ರಮವನ್ನು ಟೀಕಿಸಿದ್ದು, ರಾಜ್ಯ ಸರ್ಕಾರವು ತನ್ನ ಆದೇಶವನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ ಎಂದು ಅನೇಕ ಗಡುವು ವಿಸ್ತರಣೆಗಳು ತೋರಿಸುತ್ತವೆ ಎಂದು ಹೇಳಿದರು.

ಇದನ್ನೂ ಓದಿ: Yogi Adityanath: ಪಾಕ್‌ ಭಾರತದ ಜೊತೆ ವಿಲೀನವಾಗುತ್ತೆ…ಇಲ್ಲದಿದ್ದರೆ ಅಸ್ತಿತ್ವದಲ್ಲೇ ಇರಲ್ಲ- ಯೋಗಿ ಆದಿತ್ಯನಾಥ್‌

Continue Reading
Advertisement
Kapil sibal
ದೇಶ2 hours ago

Kapil Sibal: ವೈದ್ಯೆ ಕೊಲೆ ಕೇಸ್‌- ಸುಪ್ರೀಂಕೋರ್ಟ್‌ ವಿಚಾರಣೆ ವೇಳೆ ಎಲ್ಲರೆದುರು ಜೋರಾಗಿ ನಕ್ಕ ಕಪಿಲ್‌ ಸಿಬಲ್‌-ಭಾರೀ ಆಕ್ರೋಶ ವ್ಯಕ್ತ

Bengaluru News
ಬೆಂಗಳೂರು2 hours ago

Bengaluru News: ಬೆಂಗಳೂರಿನಲ್ಲಿ ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆ

Al-Qaeda terror module
ದೇಶ3 hours ago

Al-Qaeda Terror module: ಮೂರು ರಾಜ್ಯಗಳಲ್ಲಿ ಭರ್ಜರಿ ಉಗ್ರರ ಬೇಟೆ; 11ಶಂಕಿತರು ಅರೆಸ್ಟ್‌

Pralhad Joshi
ಬೆಂಗಳೂರು3 hours ago

Pralhad Joshi: ಮುಂಬೈ, ಕೋಲ್ಕತಾದಲ್ಲಿ ಇವಿ ಬ್ಯಾಟರಿ ಚಾರ್ಜರ್ ಘಟಕಕ್ಕೆ ಬೆಂಗಳೂರು ಮಾದರಿ

Richest Village
ದೇಶ3 hours ago

Richest Village: ಗುಜರಾತ್‌ನಲ್ಲಿದೆ ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ! ಇಲ್ಲಿಯ ಜನ ಇಟ್ಟಿರುವ ಫಿಕ್ಸೆಡ್‌ ಡಿಪಾಸಿಟ್‌ ಮೌಲ್ಯ 7,000 ಕೋಟಿ ರೂ!

Cabinet Meeting
ಕರ್ನಾಟಕ3 hours ago

Cabinet Meeting: ಕುಮಾರಸ್ವಾಮಿ, ಇತರ ಮೂವರ ವಿರುದ್ಧದ ಪ್ರಕರಣ; ಪ್ರಾಸಿಕ್ಯೂಷನ್‌ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಂಪುಟ ಸಲಹೆ

Yogi Adityanath
ದೇಶ3 hours ago

Yogi Adityanath: ಯೋಗಿ ಆದೇಶ ಪಾಲಿಸದ 13 ಲಕ್ಷ ಸರ್ಕಾರಿ ನೌಕರರು ವೇತನ ಕಳೆದುಕೊಳ್ಳೋದು ಗ್ಯಾರಂಟಿ! ಏನಿದು ಹೊಸ ನಿಯಮ?

CM Siddaramaiah
ಕರ್ನಾಟಕ4 hours ago

CM Siddaramaiah: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿದ್ದರಾಮಯ್ಯ ಸೂಚನೆ

Fixed Deposits
ಮನಿ-ಗೈಡ್4 hours ago

Fixed Deposits: ಪೋಸ್ಟ್ ಆಫೀಸ್ ಎಫ್‌ಡಿ; ಬಡ್ಡಿ ದರ ಎಷ್ಟು, ಏನೆಲ್ಲ ಲಾಭ?

Water Price hike
ಬೆಂಗಳೂರು5 hours ago

Water Price Hike: ಎಷ್ಟೇ ವಿರೋಧ ಬಂದರೂ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಖಚಿತ; ಡಿ.ಕೆ.ಶಿವಕುಮಾರ್

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌