Prabhas: ಶಾರುಖ್, ಸಲ್ಮಾನ್ ಹಿಂದಿಕ್ಕಿ 'ಅತ್ಯಂತ ಜನಪ್ರಿಯ ಪುರುಷ ತಾರೆ'ಯಾಗಿ ಹೊರಹೊಮ್ಮಿದ ಪ್ರಭಾಸ್! - Vistara News

ಸಿನಿಮಾ

Prabhas: ಶಾರುಖ್, ಸಲ್ಮಾನ್ ಹಿಂದಿಕ್ಕಿ ‘ಅತ್ಯಂತ ಜನಪ್ರಿಯ ಪುರುಷ ತಾರೆ’ಯಾಗಿ ಹೊರಹೊಮ್ಮಿದ ಪ್ರಭಾಸ್!

ನಾಗ್ ಅಶ್ವಿನ್ ನಿರ್ದೇಶನದ (Prabhas) ಚಿತ್ರದಲ್ಲಿ ನಟ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅಭಿನಯಿಸಿದ್ದರು. ಪ್ರಭಾಸ್ ಅವರ ಪಾತ್ರದ ಬಗ್ಗೆ ನಟ ಅರ್ಷದ್ ವಾರ್ಸಿ ಅವರ ನೆಗೆಟಿವ್ ಕಮೆಂಟ್‌ಗಳ ಬೆನ್ನಲ್ಲೇ ಈ ನಟನಿಗೆ ಭಾರತದ ಅತ್ಯಂತ ಜನಪ್ರಿಯ ಪುರುಷ ಚಲನಚಿತ್ರ ತಾರೆ ಎಂಬ ಪಟ್ಟ ಸಿಕ್ಕಿದೆ.

VISTARANEWS.COM


on

Prabhas
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನದ ಬಳಿಕ ಕಲ್ಕಿ 2898ಎಡಿ (Kalki 2898 AD) ಚಿತ್ರದ ನಾಯಕ ಪ್ರಭಾಸ್ (Prabhas) ಭಾರತದ ಅತ್ಯಂತ ಜನಪ್ರಿಯ ಪುರುಷ ಚಲನಚಿತ್ರ ತಾರೆಯಾಗಿ (Most Popular Male Film Star) ಹೊರಹೊಮ್ಮಿದ್ದಾರೆ. ಕಲ್ಕಿ 2898 ಎಡಿ ಜೂನ್ ಅಂತ್ಯದ ವೇಳೆಗೆ ಬಿಡುಗಡೆಯಾಗಿ ಅಪಾರ ಮೆಚ್ಚುಗೆಯನ್ನು ಗಳಿಸಿತ್ತು.

ನಾಗ್ ಅಶ್ವಿನ್ ನಿರ್ದೇಶನದ ಚಿತ್ರದಲ್ಲಿ ನಟ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅಭಿನಯಿಸಿದ್ದರು. ಪ್ರಭಾಸ್ ಅವರ ಪಾತ್ರದ ಬಗ್ಗೆ ಅರ್ಷದ್ ವಾರ್ಸಿ ಅವರ ನೆಗೆಟಿವ್ ಕಾಮೆಂಟ್‌ಗಳ ಬೆನ್ನಲ್ಲೇ ಪ್ರಭಾಸ್ ಅವರಿಗೆ ಭಾರತದ ಅತ್ಯಂತ ಜನಪ್ರಿಯ ಪುರುಷ ಚಲನಚಿತ್ರ ತಾರೆ ಎಂಬ ಪಟ್ಟ ಸಿಕ್ಕಿದೆ.

ಜುಲೈ ತಿಂಗಳ ವರದಿಯ ಪ್ರಕಾರ ಭಾರತದ ಅತ್ಯಂತ ಜನಪ್ರಿಯ ಪುರುಷ ಚಲನಚಿತ್ರ ತಾರೆಯಾಗಿ ಮೊದಲ ಸ್ಥಾನದಲ್ಲಿ ಪ್ರಭಾಸ್ ಗುರುತಿಸಿಕೊಂಡಿದ್ದಾರೆ. ಬಳಿಕ ಕ್ರಮವಾಗಿ ವಿಜಯ್, ಶಾರುಖ್ ಖಾನ್, ಮಹೇಶ್ ಬಾಬು, ಜೂನಿಯರ್ ಎನ್‌ಟಿಆರ್, ಅಕ್ಷಯ್ ಕುಮಾರ್, ಅಲ್ಲು ಅರ್ಜುನ್, ಸಲ್ಮಾನ್ ಖಾನ್, ರಾಮ್ ಚರಣ್, ಅಜಿತ್ ಕುಮಾರ್ ಸ್ಥಾನ ಪಡೆದಿದ್ದಾರೆ.

ಕಲ್ಕಿ 2898 ಎಡಿ ಚಿತ್ರದ ಹಿಂದಿ ಆವೃತ್ತಿಯು ಆರಂಭಿಕ ವಾರಾಂತ್ಯದಲ್ಲಿ 112.15 ಕೋಟಿ ರೂ. ಸಂಗ್ರಹಿಸಿದೆ. ಹಿಂದಿ ಭಾಷೆಯಲ್ಲೇ 294.25 ಕೋಟಿ ರೂ. ಗಳಿಸಿದೆ. ಇತ್ತೀಚೆಗೆ ನೆಟ್‌ಫ್ಲಿಕ್ಸ್ ಮತ್ತು ಪ್ರೈಮ್ ವಿಡಿಯೋದಲ್ಲಿ ಬಹು ಭಾಷೆಗಳಲ್ಲಿ ಬಿಡುಗಡೆಯಾದ ಅನಂತರ ಚಿತ್ರವು ಮತ್ತೆ ಎಲ್ಲರ ಗಮನ ಸೆಳೆದಿದೆ. ಆದರೆ ಹೆಚ್ಚು ಗಮನಾರ್ಹವಾಗಿ ಪ್ರಭಾಸ್ ಪಾತ್ರದ ಬಗ್ಗೆ ಅರ್ಷದ್ ವಾರ್ಸಿ ಅವರ ಟೀಕೆ ವೈರಲ್ ಆದ ಬಳಿಕ ಚಿತ್ರದ ಬಗ್ಗೆ ಮತ್ತೆ ಚರ್ಚೆ ಪ್ರಾರಂಭವಾಗಿದೆ.

ಕಲ್ಕಿ 2898 ಎಡಿಯಲ್ಲಿ ಪ್ರಭಾಸ್ ‘ಜೋಕರ್’ನಂತೆ ಕಾಣುತ್ತಿದ್ದರು ಎಂದು ಇತ್ತೀಚೆಗೆ ಅರ್ಷದ್ ವಾರ್ಸಿ ಹೇಳಿದ್ದಾರೆ. ನಟನಿಗೆ ತಾನು ವೀಕ್ಷಿಸಿದ ಮತ್ತು ಇಷ್ಟವಾಗದ ಇತ್ತೀಚಿನ ಚಲನಚಿತ್ರವನ್ನು ಹೆಸರಿಸಲು ಕೇಳಲಾಯಿತು. ಕಲ್ಕಿ ಒಂದು ಗೋಲ್ಮಾಲ್ ನಕ್ಷತ್ರ ಎಂಬುದಾಗಿ ಅವರು ಕಾಮೆಂಟ್ ಮಾಡಿದ್ದಾರೆ. ಕಲ್ಕಿ 2898ಎಡಿ ನಾಗ್ ಅಶ್ವಿನ್ ನಿರ್ದೇಶನದ ಅಶ್ವತ್ಥಾಮ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರ ಅಭಿನಯ ನನಗೆ ಇಷ್ಟವಾದರೂ ಪ್ರಭಾಸ್ ಅವರು ಪ್ರಭಾವಿತರಾಗಿ ಕಾಣಲಿಲ್ಲ ಎಂದು ಅರ್ಷದ್ ಹೇಳಿದ್ದಾರೆ.


ಪ್ರಭಾಸ್ ಅವರನ್ನು ಮೆಲ್ ಗಿಬ್ಸನ್‌ನಂತೆ ಕಾಣು ಹಾಗೆ ಮಾಡಬೇಕಿತ್ತು ಎಂಬುದು ಅವರ ಅಭಿಮತ. ಈ ಹೇಳಿಕೆಯ ಬೆನ್ನಲ್ಲೇ, ಪ್ರಭಾಸ್ ಅವರ ಪಾತ್ರದ ಬಗ್ಗೆ ಅನೇಕರು ಇದು ಪ್ರಭಾಸ್‌ ಮೇಲಿನ ದಾಳಿ ಎಂದು ಕೋಪಗೊಂಡು ಅರ್ಷದ್ ಅವರನ್ನು ದೂಷಿಸಲು ಪ್ರಾರಂಭಿಸಿದರು.

ಅರ್ಷದ್ ಅವರ ಕಾಮೆಂಟ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ನಾನಿ, ಅದು “ಅಮುಖ್ಯ ವಿಷಯ” ಎಂದು ಅಭಿಪ್ರಾಯಪಟ್ಟಿದ್ದರು. ರಚನಾತ್ಮಕವಾಗಿ ಟೀಕಿಸುವುದು ಸರಿಯೇ. ಆದರೆ ಕೆಟ್ಟದಾಗಿ ಮಾತನಾಡುವುದು ಎಂದಿಗೂ ಸರಿಯಲ್ಲ. ಅರ್ಷದ್ ವಾರ್ಸಿಯಂಥ ನಟನಿಂದ ಈ ರೀತಿ ವೃತ್ತಿಪರತೆಯ ಕೊರತೆಯನ್ನು ಎಂದಿಗೂ ನಿರೀಕ್ಷಿಸಿರಲಿಲ್ಲ. ಸಣ್ಣ ಮನಸ್ಸಿನಿಂದ ಬರುವ ಕಾಮೆಂಟ್‌ಗಳಿಗೆ ಪ್ರಭಾಸ್ ಅವರ ನಿಲುವು ತುಂಬಾ ದೊಡ್ಡದಾಗಿರುತ್ತದೆ ಎಂದು ಮತ್ತೊಬ್ಬ ನಟ ಸುಧೀರ್ ಬಾಬು ಹೇಳಿದ್ದಾರೆ.

ಇದನ್ನೂ ಓದಿ: Shraddha Kapoor- Shreyas Iyer: ಕ್ರಿಕೆಟಿಗ ಅಯ್ಯರ್​ ಜತೆ ಡೇಟಿಂಗ್ ಆರಂಭಿಸಿದ ನಟಿ ಶ್ರದ್ಧಾ ಕಪೂರ್‌; ಫೋಟೊ ವೈರಲ್​

ಇದಕ್ಕೂ ಮೊದಲು, ನಿರ್ದೇಶಕ ಅಜಯ್ ಭೂಪತಿ ಕೂಡ ಪ್ರಭಾಸ್ ಬಗ್ಗೆ ಅರ್ಷದ್ ವಾರ್ಸಿ ಅವರ ಕಾಮೆಂಟ್‌ಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಅವರು ಭಾರತೀಯ ಚಿತ್ರರಂಗಕ್ಕೆ ಪ್ರಭಾಸ್ ಅವರ ಕೊಡುಗೆಗಳ ಬಗ್ಗೆ ಮಾತನಾಡಿದ್ದರು. ʼಬಾಹುಬಲಿʼಯಂಥ ಸೂಪರ್‌ ಹಿಟ್‌ ಚಿತ್ರದಲ್ಲಿ ನಟಿಸಿದ ನಟನ ಬಗ್ಗೆ ವಾರ್ಸಿ ಅಸೂಯೆ ಹೊಂದಿದ್ದಾರೆ ಎಂದು ಅವರು ಆರೋಪಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ಅವರು ನಿರ್ಮಿಸಿರುವ, ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶಿಸಿರುವ ಹಾಗೂ ಯುವ ಕಲಾವಿದರಾದ ವಿಹಾನ್, ಅಂಕಿತ ಅಮರ್ ಮತ್ತು ಮಯೂರಿ ನಟರಾಜ ನಟಿಸಿರುವ ಸುಂದರ ದೃಶ್ಯ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದ (Kannada New Movie) ಟ್ರೇಲರ್ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ಅವರು ನಿರ್ಮಿಸಿರುವ, ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶಿಸಿರುವ ಹಾಗೂ ಯುವ ಕಲಾವಿದರಾದ ವಿಹಾನ್, ಅಂಕಿತ ಅಮರ್ ಮತ್ತು ಮಯೂರಿ ನಟರಾಜ ನಟಿಸಿರುವ ಸುಂದರ ದೃಶ್ಯ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ (Kannada New Movie) ಸೆಪ್ಟೆಂಬರ್ 5ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ಚಿತ್ರದ ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್ ಹಾಗೂ ಹಾಡುಗಳನ್ನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರೇಕ್ಷಕರು ಚಿತ್ರಮಂದಿರಗಳಿಗೂ ಬಂದು ಚಿತ್ರವನ್ನು ನೋಡಿ ಪ್ರೋತ್ಸಾಹಿಸುತ್ತಾರೆ ಎಂಬ ಭರವಸೆ ಚಿತ್ರತಂಡಕ್ಕಿದೆ‌. ಟ್ರೇಲರ್ ಬಿಡುಗಡೆ ಸಮಾರಂಭದ ಆದಿಯಲ್ಲಿ ಚಿತ್ರ ತಂಡ ಪವರ್ ಸ್ಟಾರ್ ಅವರಿಗೆ ಗೌರವ ಸಲ್ಲಿಸುವ ಕಾರಣದಿಂದ ಅವರ ಚಿತ್ರಗಳ ಗೀತೆ ಹಾಡಿ ಅಭಿಮಾನ ಮೆರೆದರು.

ನಂತರ ನಿರ್ಮಾಪಕ ರಕ್ಷಿತ್ ಶೆಟ್ಟಿ ಮಾತನಾಡಿ, ನಿರ್ದೇಶಕ ಚಂದ್ರಜಿತ್ ಅವರು 9 ವರ್ಷಗಳ ಹಿಂದೆ ಬ್ಲಾಗ್‌ನಲ್ಲಿ ಮೆಸೇಜ್ ಮಾಡಿದ್ದರು. ಲಿಂಕ್ ಓಪನ್ ಮಾಡಿದೆ. ಬರವಣಿಗೆ ವಿಶೇಷ ಅನಿಸಿತು. ನಂತರ ಚಂದ್ರಜಿತ್ ಅವರು ಭೇಟಿಯಾದರು‌‌. ಅವರು ಬರೆದ ಕಥೆ ಸಿನಿಮಾವಾಗಿ ರೂಪಾಂತರವಾಯಿತು. ಕನ್ನಡದಲ್ಲಿ ಈ ಕಥೆಯನ್ನು ಹೋಲುವ ಚಿತ್ರಗಳು ಬಂದಿರಬಹುದು.‌ ಆದರೆ ಈ ರೀತಿಯ ನಿರೂಪಣೆಯಿರುವ ಚಿತ್ರ ಬಂದಿಲ್ಲ. ನಾನು ಈಗಾಗಲೇ ಮೂರು ಸಲ ಚಿತ್ರ ನೋಡಿದ್ದೇನೆ. ಟ್ರೇಲರ್ ಹಾಗೂ ಸಿ‌ನಿಮಾ‌‌ ಎರಡು ಬಹಳ ಇಷ್ಟವಾಗಿದೆ. ವಿಹಾನ್ ಹಾಗು ಅಂಕಿತ ಇಬ್ಬರದು ಪ್ರಶಸ್ತಿ ಬರುವಂತಹ ಅಭಿನಯ. ಜತೆಗೆ ಮಯೂರಿ ಕೆಲವೇ ಸನ್ನಿವೇಶದಲ್ಲಿ ಕಾಣಿಸಿಕೊಂಡರೂ ಎಲ್ಲರ ಗಮನ ಸೆಳೆಯುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದು ಟ್ರೇಲರ್ ಬಿಡುಗಡೆಯಾಗಿದೆ. ಸೆಪ್ಟೆಂಬರ್ 5 ಚಿತ್ರ ತೆರೆ ಕಾಣಲಿದೆ. ನಾನು ಯಾವುದಕ್ಕೂ ಬೇಗ ಕಾಂಪ್ರಮೈಸ್ ಆಗುವುದಿಲ್ಲ.‌ ಆದರೆ ನನ್ನ ತಂಡ ಟ್ರೇಲರ್ ಅನ್ನು ಎರಡೇ ದಿನದಲ್ಲಿ‌‌ ಸಿದ್ದ ಮಾಡಿತು. ನನಗೂ ನೋಡಿ ಖುಷಿಯಾಯಿತು. ಇನ್ನು, ನಿರ್ಮಾಪಕ ರಕ್ಷಿತ್ ಶೆಟ್ಟಿ ಸೇರಿದಂತೆ ಇಡೀ ತಂಡದ ಸಹಕಾರದಿಂದ ಚಿತ್ರ ಕೂಡ ಚೆನ್ನಾಗಿ ಮೂಡಿಬಂದಿದೆ. ವಿಹಾನ್, ಅಂಕಿತ ಅಮರ್ ಹಾಗೂ ಮಯೂರಿ ಅವರ ಜತೆಗೆ ಈ ಚಿತದಲ್ಲಿ “ಗೀತಾಂಜಲಿ” ಚಿತ್ರದ ಖ್ಯಾತಿಯ ಗಿರಿಜಾ ಶೆಟ್ಟರ್ ಅಭಿನಯಿಸಿದ್ದಾರೆ. ಇಪ್ಪತ್ತು ವರ್ಷಗಳ ನಂತರ ಅವರು ಮತ್ತೆ ನಮ್ಮ ಚಿತ್ರದಲ್ಲಿ ನಟಿಸಿದ್ದು, ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮ ಸಹಕಾರ, ಪ್ರೋತ್ಸಾಹ ಇರಲಿ ಎಂದರು ಚಂದ್ರಜಿತ್ ಬೆಳ್ಳಿಯಪ್ಪ.

ನಟ ವಿಹಾನ್ ಮಾತನಾಡಿ, ಹಾಡು ಎಲ್ಲರಿಗೂ ಇಷ್ಟವಾಗಿದೆ ಸಿನಿಮಾ ಕೂಡ ಇಷ್ಟವಾಗಲಿದೆ. ಸಿನಿಮಾ ನೋಡಿದವರು ಇನ್ನಷ್ಟು ಜನರನ್ನು ಚಿತ್ರಮಂದಿರಕ್ಕೆ ಕರೆತರುತ್ತಾರೆ ಎಂಬ ಭರವಸೆ ಇದೆ. ನಿರ್ದೇಶಕ ಚಂದ್ರಜಿತ್ ಹೇಳಿದ ಕಥೆ ಆಸಕ್ತಿಕರವಾಗಿತ್ತು. ಪ್ರತಿಭೆ ನೋಡಿ ಆಯ್ಕೆ ಮಾಡಿಕೊಳ್ಳುವಲ್ಲಿ ರಕ್ಷಿತ್ ಶೆಟ್ಟಿ ಕೂಡ ಒಬ್ಬರು. ಸಿನಿಮಾಗೆ ಆಯ್ಕೆಯಾದ ಮೇಲೆ ಅವರಿಗೆ ಮೆಸೇಜ್ ಮಾಡಿ ಧನ್ಯವಾದ ಹೇಳಿದ್ದೆ ಎಂದರು.

ಇದನ್ನೂ ಓದಿ: Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

ನಟಿ ಅಂಕಿತ ಅಮರ್ ಮಾತನಾಡಿ, ಪ್ರತಿಯೊಬ್ಬರಿಗೂ ಸಾಕಷ್ಟು ಕನಸುಗಳಿವೆ. ಕನಸು, ಹೊಂಬಿಸಲಾಗಿ ಬಂದ ಚಿತ್ರ ಇಬ್ಬನಿ‌ ತಬ್ಬಿದ ಇಳೆಯಲಿ ಚಿತ್ರ. ಒಂದು ರೀತಿ ಮ್ಯಾಜಿಕ್ ಕ್ರಿಯೇಟ್ ಮಾಡಿದೆ “ಇಬ್ಬನಿ ತಬ್ಬಿದ ಇಳೆಯಲಿ”. ಈ ಚಿತ್ರದಲ್ಲಿ ಸಂದರ್ಭ ಖಳನಾಯಕ. ಸಂದರ್ಭದ ಅನುಸಾರ ಪಾತ್ರಗಳ ಪರಿಚಯ ಮಾಡಿಸಿದ್ದಾರೆ. ಕಲಾವಿದರಿಗೆ ನಿರ್ದೇಶಕ ಎನ್ನುವ ರೋಲ್ ಬಹು ಮುಖ್ಯ. ಪ್ರತಿಯೊಂದು ನಿರ್ದೇಶಕ ಚಂದ್ರಜಿತ್ ಅವರಿಂದ ಆಗಿರುವುದು. ಪ್ರೀತಿಯ ಆಚರಣೆಯನ್ನು ಸಂಗೀತ ಮತ್ತು ವಿಶ್ಯುಯಲ್ ಮೂಲಕ ಕಟ್ಟಿಕೊಡಲಾಗಿದೆ. ಈ ಆಚರಣೆಗೆ ಮತ್ತಷ್ಟು ಕಳೆ ಬರಬೇಕಾದರೆ ಚಿತ್ರಮಂದಿರಕ್ಕೆ ಬಂದು ಎಲ್ಲರೂ ಸಿನಿಮಾ‌ ನೋಡಿ ಹೊಸ ಕಲಾವಿದರು ಹಾಗೂ ತಂತ್ರಜ್ಞರಿಗೆ ಪ್ರೋತ್ಸಾಹ ನೀಡಿ ಎಂದು ಕೇಳಿಕೊಂಡರು.

ನಟಿ ಮಯೂರಿ ನಟರಾಜ್ ಮಾತನಾಡಿ, ಟ್ರೇಲರ್ ಬಿಡುಗಡೆಯಾಗಿರುವುದು ಖುಷಿ ಆಗಿದೆ. ಕಣ್ಣಲ್ಲೇ ಅಭಿನಯಿಸಬೇಕು ಎನ್ನುವುದು ಸವಾಲಾಗಿತ್ತು. ಸಿನಿಮಾ ನೋಡಿ ತಿಳಿಸಿ. ಹೊಸಬರು ಇರುವ ಚಿತ್ರವನ್ನು ಈ‌ ಮಟ್ಟವನ್ನು ತೆರೆಗೆ ತರುವುದು ದೊಡ್ಡ ವಿಷಯ. ಹೊಸಬರಿಗೂ ದೊಡ್ಡಮಟ್ಟದಲ್ಲಿ ಸಿನಿಮಾ ಮಾಡಲಿ ಎಂದು ಹಾರೈಸಿದರು.

ಪರಂವಃ ಸಂಸ್ಥೆಯ ಸಿಇಓ ಶ್ರೀನಿಶ್ ಶೆಟ್ಟಿ, ಚಿತ್ರ ಕನ್ನಡದಲ್ಲಿ ಮತ್ತೊಂದು ಬ್ಲಾಕ್ ಬ್ಲಸ್ಟರ್ ಚಿತ್ರವಾಗಲಿದೆ. ಚಿತ್ರ ನೋಡಿದ ತಂಡ ನಿರ್ದೇಶಕ ಚಂದ್ರಜಿತ್ ಅವರನ್ನು ತಬ್ಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದೇವೆ ಎಂದರು.

ಚಾರ್ಲಿ 777 ನಿರ್ದೇಶಕ ಕಿರಣ್ ರಾಜ್ ಮಾತನಾಡಿ, ಟ್ರೈಲರ್ ಚೆನ್ನಾಗಿ ಮೂಡಿಬಂದಿದೆ. ನಿರ್ದೇಶಕ ಚಂದ್ರಜಿತ್ ನಾನು ಕಿರಿಕ್ ಪಾರ್ಟಿಯಿಂದ ಜತೆಯಾಗಿ ಕೆಲಸ ಮಾಡಿದ್ದೇವೆ ಎಂದ ಅವರು, ಗೆಲ್ಲಲು ಎಲ್ಲಾ ಅರ್ಹತೆ ಇರುವ ಸಿನಿಮಾ. ಚಿತ್ರದಲ್ಲಿ ನನ್ನಗೊಂದು ಪಾತ್ರ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Vande Bharat Express: ಇನ್ನು ಮುಂದೆ ತುಮಕೂರಿನಲ್ಲೂ ನಿಲ್ಲಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು; ಟಿಕೆಟ್‌ ದರ ಎಷ್ಟು?

ಸಂಗೀತ ನಿರ್ದೇಶಕ ಗಗನ್ ಬಡೇರಿಯಾ, ಛಾಯಾಗ್ರಾಹಕ ಶ್ರೀವತ್ಸನ್ ಸೆಲ್ವರಾಜನ್, ಸಂಕಲನಕಾರ ರಕ್ಷಿತ್ ಕಾಪು ಮತ್ತಿತರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

Continue Reading

ಬೆಂಗಳೂರು

Kannada New Movie: ʼಪೆನ್ ಡ್ರೈವ್ʼ ಚಿತ್ರದಲ್ಲಿ ಮಾಲಾಶ್ರೀ; ಇದು ತನಿಷಾ ಕುಪ್ಪಂಡ ಅಭಿನಯದ ಚಿತ್ರ

ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ “ಪೆನ್ ಡ್ರೈವ್” ಚಿತ್ರದ (Kannada New Movie) ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದ ನಿಮಿಷಾಂಬ ದೇವಸ್ಥಾನದಲ್ಲಿ ನೆರವೇರಿತು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಆರ್‌ ಎಚ್ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಎನ್. ಹನುಮಂತರಾಜು ಹಾಗೂ ಲಯನ್ ಎಸ್. ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ “ಪೆನ್ ಡ್ರೈವ್” ಚಿತ್ರದ (Kannada New Movie) ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಅಭಿನಯಿಸುತ್ತಿದ್ದಾರೆ.

“ಚಾಮುಂಡಿ”, “ದುರ್ಗಿ” ಮುಂತಾದ ಆಕ್ಷನ್ ಚಿತ್ರಗಳಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಆಕ್ಷನ್ ಕ್ವೀನ್ ಎಂದು ಜನಪ್ರಿಯರಾಗಿರುವ ಮಾಲಾಶ್ರೀ ಹಾಗೂ “ಬಿಗ್ ಬಾಸ್” ನಂತರ ಬೆಂಕಿ ಅಂತಲೇ ಕರೆಯಲ್ಪಡುವ ತನಿಷಾ ಕುಪ್ಪಂಡ ಇಬ್ಬರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹಾಗಾಗಿ ಅಭಿಮಾನಿ ವಲಯದಲ್ಲಿ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹಾಗೂ ಕುತೂಹಲ ಇದೆ.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದ ನಿಮಿಷಾಂಬ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇ ಗೌಡ ಆರಂಭ ಫಲಕ ತೋರಿದರು. ಹಿರಿಯ ವಕೀಲ ರೇವಣ್ಣ ಸಿದ್ದಯ್ಯ ಕ್ಯಾಮೆರಾ ಚಾಲನೆ ಮಾಡಿದರು. ಮಾಲಾಶ್ರೀ ಅವರು ಅಧ್ಯಕ್ಷತೆ ವಹಿಸಿದ್ದರು. ಆನಂತರ ಚಿತ್ರತಂಡದವರು ಹಾಗೂ ಗಣ್ಯರು ಸೇರಿ ಅಲ್ಲಿ ಉಪಸ್ಥಿತರಿದ್ದ ಮಹಿಳೆಯರಿಗೆ ಮಂಗಳದ್ರವ್ಯ ಸಮೇತ ಸೀರೆ ನೀಡಿದರು.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಈಗಾಗಲೇ ಹದಿನೈದು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿರುವ ಸೆಬಾಸ್ಟಿನ್ ಡೇವಿಡ್ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮಾಲಾಶ್ರೀ, ತನಿಷಾ ಕುಪ್ಪಂಡ, ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

ಡಾ.ವಿ.ನಾಗೇಂದ್ರ ಪ್ರಸಾದ್ ಗೀತರಚನೆ ಹಾಗೂ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಾಗೇಶ್ ಅವರು ಸಂಕಲನ ಕಾರ್ಯದೊಂದಿಗೆ ಸಂಭಾಷಣೆಯನ್ನು ಬರೆಯುತ್ತಿದ್ದಾರೆ‌.

Continue Reading

ಬೆಂಗಳೂರು

Kannada New Movie: ಪ್ರಜ್ವಲ್ ದೇವರಾಜ್-ಅದಿತಿ‌ ಪ್ರಭುದೇವ ಅಭಿನಯದ ʼಮಾಫಿಯಾʼ ಚಿತ್ರ ಸದ್ಯದಲ್ಲೇ ತೆರೆಗೆ

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಎಚ್. ನಿರ್ದೇಶಿಸಿರುವ ಬಹು ನಿರೀಕ್ಷಿತ “ಮಾಫಿಯಾ” ಚಿತ್ರ (Kannada New Movie) ಸದ್ಯದಲ್ಲೇ ಬಿಡುಗಡೆಯಾಗಲಿದೆ. ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆದಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಎಚ್. ನಿರ್ದೇಶಿಸಿರುವ ಬಹು ನಿರೀಕ್ಷಿತ “ಮಾಫಿಯಾ” ಚಿತ್ರವನ್ನು (Kannada New Movie) ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ಅಥವಾ ಮ್ಯೂಟ್ ಹೇಳದೆ ಯು\ಎ ಪ್ರಮಾಣಪತ್ರ ನೀಡಿದೆ. ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ “ಮಾಫಿಯಾ” ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸುವುದಾಗಿ ನಿರ್ಮಾಪಕ ಕುಮಾರ್ ತಿಳಿಸಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಬಿಡುಗಡೆಗೆ ಪ್ರಜ್ವಲ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ದೇವರಾಜ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗೋಲ್ಡನ್‌ ಟೈಮ್‌; ಚಿನ್ನದ ದರ ಇಂದು ಕೂಡ ಇಳಿಮುಖ

ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಭಡೇರಿಯಾ ಸಂಗೀತ ನೀಡಿದ್ದಾರೆ. ಎಸ್. ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

Continue Reading

ಬೆಂಗಳೂರು

Kannada New Movie: ಐವರು ನಿರ್ದೇಶಕರ 5 ಕಥೆಗಳ ʼಬಿಟಿಎಸ್ʼ ಚಿತ್ರದ ಟ್ರೇಲರ್ ರಿಲೀಸ್‌; ಹೊಸ ಪ್ರಯತ್ನಕ್ಕೆ ರಾಜ್ ಬಿ ಶೆಟ್ಟಿ ಸಾಥ್‌

ಐವರು ನಿರ್ದೇಶಕರು, ಐದು ಕಥೆಗಳನ್ನಿಟ್ಟುಕೊಂಡು “ಬಿಟಿಎಸ್” ಎಂಬ ಸಿನಿಮಾ (Kannada New Movie) ಮಾಡಿದ್ದಾರೆ. ಆಸಕ್ತಿಕರ ವಿಷಯಗಳನ್ನಿಟ್ಟುಕೊಂಡು ಜನರ ಮನಸ್ಸು ಗೆಲ್ಲಲ್ಲು ಮುಂದಾಗಿದ್ದಾರೆ‌. ಯುವ ಪ್ರತಿಭಾನ್ವಿತರ ತಂಡಕ್ಕೆ ನಟ ರಾಜ್ ಬಿ ಶೆಟ್ಟಿ ಸಾಥ್ ನೀಡಿ, ಪ್ರಯತ್ನ ಯಶಸ್ವಿ ಆಗಲಿ ಎಂದು ಹಾರೈಸಿದ್ದಾರೆ. ಟ್ರೇಲರ್ ಅನ್ನು “ಭೀಮ” ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಬಿಡುಗಡೆ ಮಾಡಿದ್ದಾರೆ. ಬಿಟಿಎಸ್ (ಬಿಹೈಂಡ್ ದಿ ಸ್ಕ್ರೀನ್) ಚಿತ್ರವನ್ನು ಪ್ರಜ್ಚಲ್ ರಾಜು, ಸಾಯಿ ಶ್ರೀನಿಧಿ, ಕುಲದೀಪ್ ಕಾರಿಯಪ್ಪ, ರಾಜೇಶ್ ಎನ್ ಶಂಕದ್, ಅಪೂರ್ವ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಒಂದು ಚಿತ್ರವನ್ನು ಇಬ್ಬರು ನಿರ್ದೇಶಕರು ಸೇರಿ ನಿರ್ದೇಶಿಸಿರುವ ಉದಾಹರಣೆ ಸಾಕಷ್ಟಿದೆ. ಆದರೆ ಐದು ಜನ ನಿರ್ದೇಶಕರು, ಐದು ಕಥೆಗಳನ್ನಿಟ್ಟುಕೊಂಡು “ಬಿಟಿಎಸ್” ಎಂಬ ಸಿನಿಮಾ (Kannada New Movie) ಮಾಡಿದ್ದಾರೆ. ಆಸಕ್ತಿಕರ ವಿಷಯಗಳನ್ನಿಟ್ಟುಕೊಂಡು ಜನರ ಮನಸ್ಸು ಗೆಲ್ಲಲು ಮುಂದಾಗಿದ್ದಾರೆ‌. ಯುವ ಪ್ರತಿಭಾನ್ವಿತರ ತಂಡಕ್ಕೆ ನಟ ರಾಜ್ ಬಿ ಶೆಟ್ಟಿ ಸಾಥ್ ನೀಡಿ, ಪ್ರಯತ್ನ ಯಶಸ್ವಿ ಆಗಲಿ ಎಂದು ಹಾರೈಸಿದ್ದಾರೆ. ಟ್ರೇಲರ್ ಅನ್ನು “ಭೀಮ” ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಬಿಡುಗಡೆ ಮಾಡಿದ್ದಾರೆ.

ಬಿಟಿಎಸ್ (ಬಿಹೈಂಡ್ ದಿ ಸ್ಕ್ರೀನ್) ಚಿತ್ರವನ್ನು ಪ್ರಜ್ಚಲ್ ರಾಜು, ಸಾಯಿ ಶ್ರೀನಿಧಿ, ಕುಲದೀಪ್ ಕಾರಿಯಪ್ಪ, ರಾಜೇಶ್ ಎನ್ ಶಂಕದ್, ಅಪೂರ್ವ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ.

ತೆರೆಯ ಹಿಂದಿನ ವಿಷಯಗಳನ್ನು ಐವರು ನಿರ್ದೇಶಕರು ತೆರೆಯ ಮೇಲೆ ತರುವ ಮೂಲಕ ಹೊಸ ಪ್ರಯತ್ನ ಮಾಡಿದ್ದಾರೆ. ಚಿತ್ರದ ಟ್ರೇಲರ್ ಬಿಡುಗಡೆ ಚೆನ್ನಾಗಿದೆ. ಚಿತ್ರತಂಡಕ್ಕೆ ಶುಭವಾಗಲಿ ಎಂದು ಭೀಮ ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ತಂಡಕ್ಕೆ ಒಳ್ಳೆಯದಾಗಲಿ ಎಂದರು.

ಈ ವೇಳೆ ನಿರ್ದೇಶಕರಲ್ಲಿ ಒಬ್ಬರಾದ ಕುಲದೀಪ್ ಕಾರಿಯಪ್ಪ ಮಾತನಾಡಿ, ಜೀವನದಲ್ಲಿ ಸಾಧನೆ ಮಾಡಲು ಮುಂದಾದಾಗ ನಮ್ಮನ್ನು ಯಾರು ಬೆಂಬಲಿಸುವುದಿಲ್ಲ ಎಂದು ಸಮಾಜವನ್ನು ಬಯ್ಯುವುದಕ್ಕೆ ಮುಂದಾಗುತ್ತೇವೆ. ಸಾಧನೆ ಮಾಡಲು ಮುಂದಾದಾಗ ಏನೆಲ್ಲಾ ಸಮಸ್ಯೆ ಎದುರಾಗುತ್ತದೆ ಎನ್ನುವುದು ಕಥೆಯ ತಿರುಳು. ನನ್ನ ಕಥೆಯ ಹೆಸರು “ಹೀರೋ” ಅಪರೂಪದ ವಿಷಯಗಳನ್ನು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ ಎಂದು ವಿವರಿಸಿದರು.

ಮತ್ತೊಬ್ಬ ನಿರ್ದೇಶಕ ಸಾಯಿ ಶ್ರೀನಿಧಿ ಮಾತನಾಡಿ, ಸಾಲ ಮಾಡಿಯಾದರೂ ಚಿತ್ರ ಮಾಡಬೇಕು ಎನ್ನುವ ಆಸೆ ನನಗೆ. ನನ್ನ ಆಸೆಗೆ ನಿರ್ಮಾಪಕ ಮುರುಳಿ ಕೃಷ್ಣ ನೆರವಾದರು. ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ‌. ಕಾಫಿ, ಸಿಗರೆಟ್ ಮತ್ತು ಲೈನ್ ಎನ್ನುವುದು ನನ್ನ ಕಥೆಯ ಭಾಗ ಎಂದರು.

ಪ್ರಜ್ವಲ್ ರಾಜ್, “ಬಾನಿಗೊಂದು ಎಲ್ಲೆ ಎಲ್ಲಿದೆ” ಎನ್ನುವುದು ನಾನು ನಿರ್ದೇಶನ ಮಾಡಿರುವ ಕಥೆಯ ಭಾಗ ಎಂದು ಹೇಳಿಕೊಂಡರು.

ಇದನ್ನೂ ಓದಿ: Ganesh Chaturthi 2024: ಪಿಒಪಿ ಗಣೇಶ ಮೂರ್ತಿಗೆ ನಿಷೇಧ; ಹಬ್ಬ ಆಚರಣೆಗೆ ಏನೆಲ್ಲಾ ನಿಯಮಗಳು? ಇಲ್ಲಿದೆ ವಿವರ

ನಿರ್ದೇಶಕಿ ಅಪೂರ್ವ ಭಾರದ್ವಾಜ್ ಮಾತನಾಡಿ, ಇಷ್ಟು ವರ್ಷ ನಟಿಯಾಗಿ ಕಾಣಿಸಿಕೊಂಡಿದ್ದೆ. ಈಗ ನಿರ್ದೇಶಕಿಯಾಗಿದ್ದೇನೆ. ಐದು ನಿರ್ದೇಶಕರು ಐದು ಕಥೆ ಹೇಳುವುದು ಎನ್ನುವ ವಿಷಯ ಆಸಕ್ತಿಕರವಾದದ್ದು, ಹೀಗಾಗಿ ಒಂದು ಕಥೆಯನ್ನು ನಿರ್ದೇಶನ ಮಾಡಲು ಒಪ್ಪಿಕೊಂಡೆ. ಮಹದೇವ ಪ್ರಸಾದ್ ಮತ್ತು ಶ್ರೀಪ್ರಿಯಾ ನನ್ನ ಕಥೆಯಲ್ಲಿ ಕಾಣಿಸಿಕೊಂಡಿದ್ದಾರೆ.‌‌ ಮೇಕಪ್ ಕುರಿತ ಕಥೆ. ಮೇಕಪ್ ಮ್ಯಾನ್ ಮತ್ತು ಟಚ್ಚಪ್ ಬಾಯ್‌ಗೆ ಚಿತ್ರ ಅರ್ಪಿಸುವೆ ಎಂದು ಮಾಹಿತಿ ಹಂಚಿಕೊಂಡರು.

ಕಥೆ ಹೇಳುವಾಗ ಬಹಳಷ್ಟು ನಿರ್ದೇಶಕರು ನಿರ್ಮಾಪಕರ ಮನಸ್ಸು ಗೆದ್ದು ಬಿಡ್ತಾರೆ. ಆದರೆ ಅದು ಸಿನಿಮಾದಲ್ಲಿ ಯಶಸ್ಸು ಗಳಿಸಲು ವಿಫಲರಾಗುತ್ತಾರೆ. ಅದ್ಯಾಕೋ ಗೊತ್ತಿಲ್ಲ. ಕನ್ನಡದಲ್ಲಿ ಬಹಳಷ್ಟು ಕಥೆಗಾರರು ಇದ್ದಾರೆ. ಆದರೆ ಯಶಸ್ಸು ಮಾತ್ರ ಕಡಿಮೆ ಎಂದರು ನಟ ಮೂಗು ಸುರೇಶ್.

ನಿರ್ಮಾಪಕ ಮುರುಳಿ ಕೃಷ್ಣ ಮಾತನಾಡಿ, ಐದು ಜನ ನಿರ್ದೇಶಕರ ಐದು ಕಥೆಗಳು ಸೇರಿ “ಬಿಟಿಎಸ್” ಚಿತ್ರವಾಗಿದೆ. ಐದು ಮಂದಿ‌ ನಿರ್ದೇಶಕರು ಅವರೇ ಚಿತ್ರದ ಆಧಾರ ಸ್ತಂಭ. ಚಿತ್ರ ಎಲ್ಲರಿಗೂ ಇಷ್ಟವಾಗಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದಲ್ಲಿ ನಟಿಸಿರುವ ವಿಜಯ್ ಕೃಷ್ಣ, ಮಹದೇವ ಪ್ರಸಾದ್, ಶ್ರೀಪ್ರಿಯ, ಕೌಶಿಕ್, ಚಂದನ, ವಿಜಯ್ ಕೃಷ್ಣ ಸೇರಿದಂತೆ ಮತ್ತಿತರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗೋಲ್ಡನ್‌ ಟೈಮ್‌; ಚಿನ್ನದ ದರ ಇಂದು ಕೂಡ ಇಳಿಮುಖ

“ಬಿಟಿಎಸ್” ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಿರ್ದೇಶಕರಾದ ರಾಮೇನಹಳ್ಳಿ ಜಗನ್ನಾಥ್, ವಿನಯ್ ಪ್ರೀತಂ, ಗುರುರಾಜ ಕುಲಕರ್ಣಿ, ಶ್ರೀಧರ್ ಶಿಕಾರಿಪುರ, ಜೈಶಂಕರ್, ದೇವನೂರು ಚಂದ್ರು, ಚೇತನ್ ಕೇಶವ್, ಇಸ್ಲಾವುದ್ದೀನ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Continue Reading
Advertisement
UPSC Exam calendar
ದೇಶ4 mins ago

UPSC Exam calendar: UPSC ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್‌ ರಿಲೀಸ್‌; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

7th pay commission
ಕರ್ನಾಟಕ12 mins ago

7th pay commission: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನ ಶ್ರೇಣಿ ಪ್ರಕಟ; ಯಾರಿಗೆ ಎಷ್ಟು ಏರಿಕೆ?

Viral Video
Latest23 mins ago

Viral Video: ವಿಮಾನ ನಿಲ್ದಾಣದಲ್ಲಿ ಹೃದಯಾಘಾತ; ಸಿಪಿಆರ್ ಮಾಡಿ ಜೀವ ಉಳಿಸಿದ ಅಧಿಕಾರಿಗಳು

Recurring Deposit
ಮನಿ-ಗೈಡ್40 mins ago

Recurring Deposit: ಸಣ್ಣ, ಆರಂಭಿಕ ಹೂಡಿಕೆದಾರರಿಗೆ ಸೂಕ್ತ ಪೋಸ್ಟ್ ಆಫೀಸ್‌ನ ಆರ್‌ಡಿ; ಏನಿದರ ಲಾಭ?

Kannada New Movie
ಬೆಂಗಳೂರು57 mins ago

Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

UPSC Admit Card
ಪ್ರಮುಖ ಸುದ್ದಿ60 mins ago

UPSC Admit Card: NDA ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆಗೊಳಿಸಿದ UPSC; ಎಲ್ಲಿ ಡೌನ್ಲೋಡ್‌ ಮಾಡಬಹುದು?

Non Vegetarian Population
ಆಹಾರ/ಅಡುಗೆ1 hour ago

Non Vegetarian Population: ಜಗತ್ತಿನಲ್ಲಿ ಕುಸಿಯುತ್ತಿದೆ ಮಾಂಸಾಹಾರಿಗಳ ಸಂಖ್ಯೆ! ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1

Cheapest Currency
ವಾಣಿಜ್ಯ1 hour ago

Cheapest Currency: ವಿಶ್ವದಲ್ಲೇ ಅಗ್ಗದ ಕರೆನ್ಸಿ ಹೊಂದಿರುವ ದೇಶಗಳಲ್ಲಿ ಭಾರತದ 1 ರೂ.ನ ಮೌಲ್ಯ ಎಷ್ಟಾಗುತ್ತೆ ನೋಡಿ!

ಪ್ರಮುಖ ಸುದ್ದಿ2 hours ago

Vande Bharat Express: ಇನ್ನು ಮುಂದೆ ತುಮಕೂರಿನಲ್ಲೂ ನಿಲ್ಲಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು; ಟಿಕೆಟ್‌ ದರ ಎಷ್ಟು?

Health Tips
ಆರೋಗ್ಯ2 hours ago

Health Tips: ಮಲಗುವ ಮುನ್ನ ಹಾಲು, ಬೆಲ್ಲ ಸೇವಿಸಿದರೆ ಹಲವು ಸಮಸ್ಯೆಗಳಿಗೆ ಪರಿಹಾರ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌