Dina Bhavishya : ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತಾಗಬಹುದು - Vistara News

ಭವಿಷ್ಯ

Dina Bhavishya : ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತಾಗಬಹುದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಪಂಚಮಿ / ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಶನಿವಾರವು ವೃಷಭ ರಾಶಿಯನ್ನು ನೆಲಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಆರ್ಥಿಕ ವ್ಯವಹಾರಗಳ ಕುರಿತಾಗಿ ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ, ಅದರಲ್ಲಿಯೂ ಕಣ್ಣಿನ ಬಗೆಗೆ ವಿಶೇಷ ಕಾಳಜಿ ವಹಿಸುವುದು ಸೂಕ್ತ. ಆರ್ಥಿಕವಾಗಿ ಪ್ರಗತಿ ಇರಲಿದೆ. ವ್ಯಾಪಾರ-ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಮಿಥುನ ರಾಶಿಯವರು ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ ಇದೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (24-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 07:51 / ಷಷ್ಠಿ 29:30 ವಾರ: ಶನಿವಾರ
ನಕ್ಷತ್ರ: ಅಶ್ವಿನಿ 18:04 ಯೋಗ: ವೃದ್ಧಿ 27:05
ಕರಣ: ತೈತುಲ 07:51 ಅಮೃತಕಾಲ: ಬೆಳಗ್ಗೆ 11:26 ರಿಂದ 12:55
ದಿನದ ವಿಶೇಷ: ಶ್ರಾವಣ ಶನಿವಾರ

ಸೂರ್ಯೋದಯ : 06:08   ಸೂರ್ಯಾಸ್ತ : 06:36

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕ ವ್ಯವಹಾರಗಳ ಕುರಿತಾಗಿ ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ, ಅದರಲ್ಲಿಯೂ ಕಣ್ಣಿನ ಬಗೆಗೆ ವಿಶೇಷ ಕಾಳಜಿ ವಹಿಸುವುದು ಸೂಕ್ತ. ಆರ್ಥಿಕವಾಗಿ ಪ್ರಗತಿ ಇರಲಿದೆ. ವ್ಯಾಪಾರ-ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು. ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ ಇದೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕುರಿತಾಗಿ ಚರ್ಚೆ ಮಾಡುವಿರಿ. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ತಾಳ್ಮೆಯಿಂದ ಸಹಕರಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ ಮಾಡುವಿರಿ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವುದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ ಇದೆ. ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ಸಮಯ ವ್ಯರ್ಥ ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ. ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಕುಟುಂಬ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ಆತುರದ ಮಾತುಗಳಿಂದ ನೋವು ಆಗಲಿದೆ. ನಿಧಾನಿಸಿ, ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲವಿದು. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ:ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವದು ಬೇಡ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ತಾಳ್ಮೆಯಿಂದ ವರ್ತಿಸಿ. ಆತುರದಿಂದ ಮಾತನಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರ ಬಹು ದಿನಗಳ ಕನಸು ನನಸು; ಕುಟುಂಬದ ಆಪ್ತರಿಂದ ಶುಭ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಷಭ ರಾಶಿಯಿಂದ ಭಾನುವಾರ ರಾತ್ರಿ 11:04ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಸಿಂಹ ರಾಶಿಯವರು ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 27:38 ವಾರ: ಭಾನುವಾರ
ನಕ್ಷತ್ರ: ಭರಣಿ 16:44 ಯೋಗ: ಧ್ರುವ 24:27
ಕರಣ: ವಿಷ್ಟಿ (ಭದ್ರ) 16:30 ಅಮೃತಕಾಲ: ಮಧ್ಯಾಹ್ನ 12:13 ರಿಂದ 01:44
ದಿನದ ವಿಶೇಷ: ಬಾಗೇವಾಡಿ ಜಾತ್ರೆ ತಲಕಾಡು ಬಾಲಕೃಷ್ಣಾನಂದ ವರ್ಧಂತಿ

ಸೂರ್ಯೋದಯ : 06:08   ಸೂರ್ಯಾಸ್ತ : 06:35

ರಾಹುಕಾಲ: ಸಂಜೆ 05:01 ರಿಂದ 06:35
ಗುಳಿಕಕಾಲ: ಮಧ್ಯಾಹ್ನ 03:28
ರಿಂದ 05:01
ಯಮಗಂಡಕಾಲ: ಮಧ್ಯಾಹ್ನ 12:22 ರಿಂದ 01:55

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ, ಯಾವುದೇ ಆತುರದ ಮಾತುಗಳನ್ನಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಲಾಭವಾಗಲಿದೆ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮದಲ್ಲದ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ಕಾರ್ಯ ಮುಂದುಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡ ಉಂಟು ಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಹಾಸ್ಯ ಪ್ರವೃತ್ತಿಯಿಂದ ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದವರು ನಿಮ್ಮ ಬಗೆಗೆ ಹೆಚ್ಚು ಕಾಳಜಿ ವಹಿಸುವರು. ಆರೋಗ್ಯ‌ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Dina Bhavishya: ಇಂದು ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಗುರುವಾರ ಮೇಷ ರಾಶಿಯಲ್ಲೇ ನೆಲೆಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಸಿಂಹ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇನ್ನು ತುಲಾ ರಾಶಿಯವರ ಕಾರ್ಯಗಳನ್ನು ಪ್ರಶಂಸೆ ಸಿಗಲಿದೆ. ಹಣಕಾಸಿನ ಹರಿವು ಹೆಚ್ಚಾಗಲಿದ್ದು, ವ್ಯಾಪಾರ ವ್ಯವಹಾರ ಪ್ರಗತಿ ಕಾಣಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (22-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 13:45 ವಾರ: ಗುರುವಾರ
ನಕ್ಷತ್ರ: ಉತ್ತರ ಭಾದ್ರಪದ 22:04 ಯೋಗ: ಧೃತಿ 13:09
ಕರಣ: ವಿಷ್ಠಿ (ಭದ್ರ) 13:09 ಅಮೃತಕಾಲ: ಸಂಜೆ 05:47 ರಿಂದ 07:13
ದಿನದ ವಿಶೇಷ: ಸಂಕಷ್ಟಹರ ಗಣಪತಿ ವ್ರತ

ಸೂರ್ಯೋದಯ : 06:06   ಸೂರ್ಯಾಸ್ತ : 06:53

ರಾಹುಕಾಲ: ಮಧ್ಯಾಹ್ನ 1:30 ರಿಂದ 03:00
ಗುಳಿಕಕಾಲ: ಬೆಳಗ್ಗೆ 09:00 ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಸಾಧ್ಯತೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನದಿಂದ ನಿಮ್ಮ ಯೋಜಿತ ಕಾರ್ಯ ವಿಳಂಬವಾಗುವ ಸಾಧ್ಯತೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು. ಸಂಬಂಧವಿರದ ವಿಷಯಗಳಿಗೆ ಕಿವಿಗೊಡುವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ. ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ನಿಮ್ಮ ಆಕರ್ಷಕ ಮಾತುಗಳಿಂದ ಇತರರನ್ನು ಆಕರ್ಷಿಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿಯಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಸಂಗಾತಿಯ ಮಾತುಗಳು ಮಧುರವೇನಿಸುವವು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ವಿಚಾರ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕಿಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದೀತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಇರಲಿದ್ದು, ಅತ್ಮೀಯರೊಂದಿಗೆ ಪ್ರಯಾಣಿಸುವ ಸಾಧ್ಯತೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಮೀನ ರಾಶಿಯಿಂದ ಬುಧವಾರ ಮೇಷ ರಾಶಿಯನ್ನು ಸಂಜೆ 07:01ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕಟಕ ರಾಶಿಯವರು ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (21-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಬಿದಿಗೆ 17:06 ವಾರ: ಬುಧವಾರ
ನಕ್ಷತ್ರ: ಪೂರ್ವ ಭಾದ್ರಪದ 24:32 ಯೋಗ: ಸುಕರ್ಮ 16:59
ಕರಣ: ತೈತುಲ 06:49 /ಗರಜ 17:06 ಅಮೃತಕಾಲ: ಸಂಜೆ 05:25ರಿಂದ 06:51
ದಿನದ ವಿಶೇಷ: ರಾಘವೇಂದ್ರ ಸ್ವಾಮಿ ಆರಾಧನೆ

ಸೂರ್ಯೋದಯ : 06:08   ಸೂರ್ಯಾಸ್ತ : 06:37

ರಾಹುಕಾಲ: ಮಧ್ಯಾಹ್ನ 12:23 ರಿಂದ 01:56
ಗುಳಿಕಕಾಲ: ಬೆಳಗ್ಗೆ 10:49 ರಿಂದ 12:23
ಯಮಗಂಡಕಾಲ: ಬೆಳಗ್ಗೆ 07:42 ರಿಂದ 09:15

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಾಗಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆ ವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ. ಜೀವನದಲ್ಲಿ ಅಭದ್ರತೆಯು ಕಾಡಬಹುದು.ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರು-ಪೇರಾಗಲಿದೆ. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯವಸ್ತುಗಳ ಖರೀದಿಯು ಖರ್ಚು ಇರಲಿದೆ. ಅಮೂಲ್ಯ ವಸ್ತುಗಳ ಕುರಿತು ಲಕ್ಷ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳಗೊಳ್ಳಲಿದೆ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಹೊಸ ಒಪ್ಪಂದ ಮಾಡ್ಬೇಡಿ; ಆತುರದಲ್ಲಿ ಯಾವ ತೀರ್ಮಾನವನ್ನೂ ಕೈಗೊಳ್ಳಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮೀನ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ವೃಷಭ ರಾಶಿಯವರು ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ 20:32 ವಾರ: ಮಂಗಳವಾರ
ನಕ್ಷತ್ರ: ಶತಭಿಷಾ 27:08 ಯೋಗ: ಅತಿಗಂಡ 20:54
ಕರಣ: ಬಾಲವ 20:32 ಅಮೃತಕಾಲ: ರಾತ್ರಿ 08:44 ರಿಂದ 10:10
ದಿನದ ವಿಶೇಷ: ಮಂಗಳಗೌರಿ ವ್ರತ, ನಾರಾಯಣಗುರು ಜಯಂತಿ, ಸಿದ್ಧಾರೂಢ ಸ್ವಾಮಿ ಪುಣ್ಯದಿನ

ಸೂರ್ಯೋದಯ : 06:08   ಸೂರ್ಯಾಸ್ತ : 06:38

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳು ಮಾಡಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ, ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು.
ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು ಇರಲಿದೆ, ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಖವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ, ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Actor darshan
ಸ್ಯಾಂಡಲ್ ವುಡ್1 min ago

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Western Ghats
ಕರ್ನಾಟಕ26 mins ago

Western Ghats: ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

Israel vs Hezbollah War
ವಿದೇಶ44 mins ago

Israel vs Hezbollah War: ಹೆಜ್ಬುಲ್ಲಾ ಉಗ್ರರ ಅಟ್ಟಹಾಸ; ಲೆಬನಾನ್‌ ಮೇಲೆ ರಾಕೆಟ್​ ದಾಳಿ ಆರಂಭಿಸಿದ ಇಸ್ರೇಲ್​; ಭಯಾನಕ ವಿಡಿಯೊ ಇಲ್ಲಿದೆ

Dhanya Ramkumar-Vicky Varun starrer Kaalapathar to release on September 13
ಸಿನಿಮಾ1 hour ago

Dhanya Ramkumar: ತೆರೆಗೆ ಸಿದ್ಧವಾಯ್ತು ಕಾಲಾಪತ್ಥರ್‌; ಸೆ.13ಕ್ಕೆ ಧನ್ಯಾ ರಾಮ್‌ಕುಮಾರ್- ವಿಕ್ಕಿ ವರುಣ್‌ ನಟನೆ ಮೋಡಿ

Karkala Shocker
ಕರ್ನಾಟಕ1 hour ago

Karkala Shocker: ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿದ ಅಲ್ತಾಫ್‌ಗೆ ಕಠಿಣ ಶಿಕ್ಷೆಯಾಗಲಿ ಎಂದ ಮುಸ್ಲಿಂ ಒಕ್ಕೂಟ

Pavel Durov Arrest
ವಿದೇಶ1 hour ago

Pavel Durov Arrest: ಟೆಲಿಗ್ರಾಂ ಸಿಇಒ ಪಾವೆಲ್‌‌ ಫ್ರಾನ್ಸ್‌‌ನಲ್ಲಿ ಬಂಧನ; ಕಾರಣ ಏನು?

CBI Raid
ದೇಶ2 hours ago

CBI Raid: ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸದ ಮೇಲೆ ಸಿಬಿಐ ದಾಳಿ

Israel strike
ವಿದೇಶ2 hours ago

Israel strike: ರಾಕೆಟ್ ದಾಳಿ; ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Rohit Sharma
ಕ್ರೀಡೆ2 hours ago

Rohit Sharma: ಪಾರ್ಕ್​ನಲ್ಲಿ ಅಭ್ಯಾಸ ನಡೆಸಿದ ರೋಹಿತ್​; ವಿಡಿಯೊ ವೈರಲ್​

Chain snatching Case
ಕ್ರೈಂ3 hours ago

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿದ; ಚೈನ್ ಸ್ನಾಚಿಂಗ್‌ಗೆ ಇಳಿದು ಸಿಕ್ಕಿಬಿದ್ದ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ21 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌