Prajwal Revanna Case: ಪ್ರಜ್ವಲ್‌ ರೇವಣ್ಣ ವಿರುದ್ಧ 2144 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ - Vistara News

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ವಿರುದ್ಧ 2144 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Prajwal Revanna Case: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು, 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ದೋಷಾರೋಪ ಪಟ್ಟಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದಾರೆ.

VISTARANEWS.COM


on

Prajwal Revanna Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಜ್ವಲ್ ರೇವಣ್ಣ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ತನಿಖಾಧಿಕಾರಿ ಸುಮಾರಾಣಿ ಅವರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 137 ಸಾಕ್ಷಿಗಳ ಹೇಳಿಕೆ ಸೇರಿದಂತೆ 2144 ಪುಟಗಳ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ | Student Missing: ಓದಿಲ್ಲ ಎಂದು ಬೈದದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್‌ಐಆರ್‌ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್ 29ಕ್ಕೆ ಇತ್ತೀಚೆಗೆ ಮುಂದೂಡಿತ್ತು.

ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜುಲೈ 24ರಂದು ವಜಾಗೊಂಡಿತ್ತು. ನಾಲ್ಕನೇ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಇದಕ್ಕೂ ಮೊದಲು ಮೂರು ಅರ್ಜಿಗಳನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿತ್ತು. ಇದರಲ್ಲಿ ಒಂದು ಜಾಮೀನು ಅರ್ಜಿ, ಎರಡು ನಿರೀಕ್ಷಣಾ ಜಾಮೀನು ಅರ್ಜಿ ಸೇರಿವೆ. ಅದೇ ರೀತಿ ಜುಲೈ 24ರಂದು ಮೂರನೇ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕೃತಗೊಂಡಿತ್ತು. ಇದರಿಂದ ನಾಲ್ಕನೇ ಕೇಸ್‌ನಲ್ಲಿಯೂ ಪ್ರಜ್ವಲ್‌ಗೆ ಹಿನ್ನಡೆಯಾಗಿತ್ತು.

ಏನಿದು ಪ್ರಕರಣ?

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸಾದಾಗ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ಚಿತ್ರೀಕರಿಸಿದ ಆರೋಪ ಪ್ರಜ್ವಲ್‌ ವಿರುದ್ದ ಕೇಳಿ ಬಂದಿದೆ. ಆರೋಪಿ ಪ್ರಜ್ವಲ್‌ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಹಾಸನ ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್‌ ಅವರು ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದರು.

ಸಂಸದರಾಗಿ ಶ್ರೇಯಸ್‌ ಎಂ.ಪಟೇಲ್‌ ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಿಲ್ಲ. ಆ ಕುರಿತು ಪ್ರಮಾಣ ಪತ್ರದಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ. ಹಾಗಾಗಿ ಅವರ ನಾಮಪತ್ರ ಕ್ರಮಬದ್ಧವಾಗಿಲ್ಲ ಹಾಗೂ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರ ಡಿ.ಚರಣ್‌ ಕೋರಿದ್ದಾರೆ. ಅರ್ಜಿ ಸಂಬಂಧ ಶ್ರೇಯಸ್‌ ಪಟೇಲ್‌ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Muda Scam: ದೆಹಲಿಯಲ್ಲಿ ರಾಹುಲ್‌ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ; ಕಾನೂನು ಹೋರಾಟದ ಬಗ್ಗೆ ಚರ್ಚೆ

Muda Scam: ಮುಡಾ ಪ್ರಕರಣದಲ್ಲಿ ನಾವು ಎಲ್ಲರೂ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಇದ್ದೇವೆ. ಅವರ ವಿರುದ್ಧ ನಡೆಯುತ್ತಿರುವ ಕುತಂತ್ರದ ಬಗ್ಗೆ ರಾಷ್ಟ್ರಪತಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಹೇಳಿದ್ದಾರೆ.

VISTARANEWS.COM


on

Koo

ನವದೆಹಲಿ: ಮುಡಾ ಹಗರಣದಲ್ಲಿ (Muda Scam) ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಹೈ ಕಮಾಂಡ್‌ ನಾಯಕರಾದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ನವದೆಹಲಿಯಲ್ಲಿ ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ಬಳಿಕ ಮಾಧ್ಯಮಗಳೊಂದಿಗೆ ಕರ್ನಾಟಕ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಮಾತನಾಡಿ, ಸಿಎಂ, ಡಿಸಿಎಂ ಜೊತೆ ಚರ್ಚೆ ಮಾಡಿದ್ದೇವೆ. ಕರ್ನಾಟಕದಲ್ಲಿ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ಆಗಿದ್ದು, ಬಿಜೆಪಿಯವರು ರಾಜ್ಯಪಾಲರನ್ನು ಕೈಗೊಂಬೆಯಾಗಿ ಮಾಡಿಕೊಂಡು ಯಾವ ರೀತಿ ರಾಜಕಾರಣ ಮಾಡುತ್ತಿದ್ದಾರೆ ನೋಡುತ್ತಿದ್ದೇವೆ. ಐದು ಗ್ಯಾರಂಟಿಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ. ಇದು ಸಿಎಂ, ಡಿಸಿಎಂ ಮೇಲಿನ ದಾಳಿ ಅಲ್ಲ, ಇದು ಕರ್ನಾಟಕದ ಜನರ ಮೇಲಿನ ದಾಳಿಯಾಗಿದೆ. ಪ್ರಧಾನಿ, ಗೃಹ ಸಚಿವರು ರಾಜ್ಯಪಾಲರನ್ನು ಬಳಸಿ ಕರ್ನಾಟಕದಲ್ಲಿ ಸರ್ಕಾರ ಅಸ್ಥಿರಗೊಳಿಸಲು ಯತ್ನ ಮಾಡುತ್ತಿದ್ದಾರೆ. ರಾಜ್ಯಪಾಲರು ಬಿಜೆಪಿ, ಜೆಡಿಎಸ್‌ನವರ ಮೇಲಿನ ವರ್ಷಗಳ ಹಿಂದಿನ ಪ್ರಕರಣಗಳ ತನಿಖೆಗೆ ಯಾಕೆ ಆದೇಶ ನೀಡಿಲ್ಲ ಎಂದು ಕಿಡಿಕಾರಿದರು.

ಈ ಪ್ರಕರಣದಲ್ಲಿ ನಾವು ಎಲ್ಲರೂ ಸಿಎಂ ಬೆನ್ನಿಗೆ ಇದ್ದೇವೆ. ಪ್ರಕರಣದಲ್ಲಿ ನಡೆಯುತ್ತಿರುವ ಕುತಂತ್ರದ ಬಗ್ಗೆ ರಾಷ್ಟ್ರಪತಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಇವತ್ತು ನಾವು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದೇವೆ. ನಮ್ಮ ಸರ್ಕಾರ ಅಭದ್ರಗೊಳಿಸಲು ಪ್ರಯತ್ನ ನಡೆಯುತ್ತಿದೆ. ಈ ವಿಚಾರವಾಗಿ ನಾವು‌ ಮನದಟ್ಟು ಮಾಡಿದ್ದೇವೆ. ಬಡವರಿಗಾಗಿ ಹೋರಾಟ ಮಾಡಿ ಅಂತ ಹೈಕಮಾಂಡ್ ಹೇಳಿದೆ. ರಾಷ್ಟ್ರ ಮತ್ತು ರಾಜ್ಯ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಇದೆ ಎಂದು ಹೇಳಿದರು.

ಇದನ್ನೂ ಓದಿ | 7th pay commission : 7ನೇ ವೇತನ ಆಯೋಗ ಜಾರಿ ಬಳಿಕ ನೌಕರರ ಸಂಬಳ ಏರಿಕೆ ಎಷ್ಟು? ಅಧಿಕೃತ ಪಟ್ಟಿ ಬಿಡುಗಡೆ

ಸಿಎಂ ಸಿದ್ದರಾಮಯ್ಯ ಮಾತನಾಡಿ, ಹೈಕಮಾಂಡ್‌ಗೆ ಧನ್ಯವಾದ ತಿಳಿಸುತ್ತೇವೆ. ಅಧ್ಯಕ್ಷರಾದ ಖರ್ಗೆ ಹಾಗೂ ರಾಹುಲ್ ಗಾಂಧಿಗೆ ಧನ್ಯವಾದಗಳು. ನಾವು ನ್ಯಾಯಾಲಯ ಮತ್ತು ಕಾನೂನು ನಂಬಿದ್ದೇವೆ. ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿದರು.

Continue Reading

ಉತ್ತರ ಕನ್ನಡ

Uttara Kannada News: ಹೊಸ ಆಧಾರ್ ನೋಂದಣಿ, ತಿದ್ದುಪಡಿಗೆ ಅವಕಾಶ

ಉತ್ತರ ಕನ್ನಡ ಜಿಲ್ಲೆಯಲ್ಲಿ (Uttara Kannada News) ಒಟ್ಟು 137 ಆಧಾರ್ ಸೇವಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಎಲ್ಲಾ ಕೇಂದ್ರಗಳಲ್ಲಿ ಹೊಸದಾಗಿ ಆಧಾರ್ ನೋಂದಣಿ, ತಿದ್ದುಪಡಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಆಧಾರ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಮತ್ತು ಲಿಂಗ ಬದಲಾವಣೆಗೆ ಕೇವಲ ಒಂದು ಬಾರಿ, ಹೆಸರು ಬದಲಾವಣೆಗೆ 2 ಬಾರಿ ಅವಕಾಶವಿದ್ದು, ವಿಳಾಸ ಬದಲಾವಣೆಗೆ ಯಾವುದೇ ಮಿತಿಯಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

VISTARANEWS.COM


on

Uttara Kannada News
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ (Uttara Kannada News) ಒಟ್ಟು 137 ಆಧಾರ್ ಸೇವಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಎಲ್ಲಾ ಕೇಂದ್ರಗಳಲ್ಲಿ ಹೊಸದಾಗಿ ಆಧಾರ್ ನೋಂದಣಿ, ತಿದ್ದುಪಡಿ ಕಾರ್ಯಗಳನ್ನು ಮಾಡಲಾಗುತ್ತಿದೆ.

ಆಧಾರ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಮತ್ತು ಲಿಂಗ ಬದಲಾವಣೆಗೆ ಕೇವಲ ಒಂದು ಬಾರಿ, ಹೆಸರು ಬದಲಾವಣೆಗೆ 2 ಬಾರಿ ಅವಕಾಶವಿದ್ದು, ವಿಳಾಸ ಬದಲಾವಣೆಗೆ ಯಾವುದೇ ಮಿತಿಯಿರುವುದಿಲ್ಲ.

ಇದನ್ನೂ ಓದಿ: 7th pay commission: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನ ಶ್ರೇಣಿ ಪ್ರಕಟ; ಯಾರಿಗೆ ಎಷ್ಟು ಏರಿಕೆ?

ಜಿಲ್ಲೆಯ 19 ಅಟಲ್ ಜನ ಸ್ನೇಹಿ ಕೇಂದ್ರಗಳು, 41 ಕರ್ನಾಟಕ ಒನ್ ಕೇಂದ್ರಗಳು, 1 ಜಿಲ್ಲಾ ಜನಸ್ಪಂದನ ಕೇಂದ್ರ, 13 ಸಾಮಾನ್ಯ ಸೇವಾ ಕೇಂದ್ರಗಳು, 45 ಭಾರತೀಯ ಅಂಚೆ ಕಚೇರಿಗಳು ಮತ್ತು 11 ಬ್ಯಾಂಕ್ ಗಳಲ್ಲಿ ಸೇರಿದಂತೆ ಒಟ್ಟು 137 ಆಧಾರ್ ಸೇವಾ ಕೇಂದ್ರಗಳಲ್ಲಿ ಆಧಾರ್ ಸಂಬಂಧಿತ ಸಮಸ್ಯೆಗಳನ್ನು ಸರಿಪಡಿಸಲಾಗುತ್ತಿದೆ. ಅಲ್ಲದೇ ಯು.ಐ.ಡಿ.ಐ. ತಂತ್ರಾಂಶದಲ್ಲಿ (ಆನ್‌ಲೈನ್) ಮೂಲಕ ಆಧಾರ ದಾಖಲೆ ನವೀಕರಣ ಅವಕಾಶ ಕೂಡಾ ಇದ್ದು, ಆಧಾರ್ ಕಾರ್ಡ್‌ನಲ್ಲಿ 18 ವರ್ಷ ಮೇಲ್ಪಟ್ಟವರ ಹೆಸರು ಬದಲಾವಣೆ ಇದ್ದಲ್ಲಿ ಸರಿಪಡಿಸಿಕೊಂಡು ಆಧಾರ್ ಕಾರ್ಡ್‌ನಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

ಆಧಾರ್ ಮೊಬೈಲ್ ಅಪ್‌ಡೇಶನ್ ಕುರಿತು ಉತ್ತರ ಕನ್ನಡ ಜಿಲ್ಲೆಯಲ್ಲಿ 16,43,471 ಆಧಾರ್ ಸೃಜಿಸಲಾಗಿದ್ದು, 15,38,406 ಮೊಬೈಲ್ ಸೀಡೆಡ್ ಆಗಿದ್ದು, ಒಟ್ಟು 1,05,065 ಬಾಕಿ ಇರುತ್ತದೆ. ಬಾಕಿ ಇರುವ ಆಧಾರ್ ಕಾರ್ಡ್‌ಗಳನ್ನು ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಅಂಚೆ ಕಛೇರಿ ಕೇಂದ್ರ, ನಾಡಕಛೇರಿಗಳಲ್ಲಿ ನವೀಕರಿಸಿಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಬೆಂಗಳೂರು

Invest Karnataka: ಇಂಧನ ತಂತ್ರಜ್ಞಾನ; ರಾಜ್ಯದಲ್ಲಿ 8,300 ಕೋಟಿ ರೂ. ಹೂಡಿಕೆ ಮಾಡಲಿರುವ ಷೆರ್ವನ್‌ ಇಂಡಿಯಾ

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರ ಜತೆಗೆ ಷೆರ್ವನ್‌ ಇಂಡಿಯಾ ನಿಯೋಗವು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಬೆಂಗಳೂರಿನಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ (ಇಎನ್‌ಜಿಐಎನ್‌ಇ) ಸ್ಥಾಪಿಸಲು 8,300 ಕೋಟಿ ರೂ. ಹೂಡಿಕೆ (Invest Karnataka) ಮಾಡುವುದಾಗಿ ಘೋಷಿಸಿದೆ. ಸಭೆಯಲ್ಲಿ ಷೆರ್ವನ್‌ ಇಂಡಿಯಾ ಮುಖ್ಯಸ್ಥ ಡಾ. ಅಕ್ಷಯ್‌ ಸಾಹ್ನಿ, ಜನರಲ್‌ ಮ್ಯಾನೇಜರ್‌ ಕೇಟ್‌ ಕಲಘನ್‌ ಇದ್ದರು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Invest Karnataka
Koo

ಬೆಂಗಳೂರು: ಇಂಧನ ಪರಿಹಾರಗಳನ್ನು ನೀಡುವಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಷೆರ್ವನ್‌ ಕಂಪನಿಯು ಬೆಂಗಳೂರಿನಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ (ಇಎನ್‌ಜಿಐಎನ್‌ಇ) ಸ್ಥಾಪಿಸಲು 8,300 ಕೋಟಿ ರೂ. ಹೂಡಿಕೆ (Invest Karnataka) ಮಾಡುವುದಾಗಿ ಇಂದು ಇಲ್ಲಿ ಪ್ರಕಟಿಸಿದೆ.

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರ ಜತೆಗೆ ಷೆರ್ವನ್‌ ನಿಯೋಗವು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ಹೂಡಿಕೆ ಘೋಷಿಸಲಾಗಿದೆ. ಸಭೆಯಲ್ಲಿ ಷೆರ್ವನ್‌ ಇಂಡಿಯಾ ಮುಖ್ಯಸ್ಥ ಡಾ. ಅಕ್ಷಯ್‌ ಸಾಹ್ನಿ, ಜನರಲ್‌ ಮ್ಯಾನೇಜರ್‌ ಕೇಟ್‌ ಕಲಘನ್‌ ಅವರು ಉಪಸ್ಥಿತರಿದ್ದರು.

ಇದನ್ನೂ ಓದಿ: Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

ಈ ಬಗ್ಗೆ ಸಚಿವ ಎಂ.ಬಿ.ಪಾಟೀಲ ಮಾತನಾಡಿ, “ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿ ಉತ್ತೇಜಿಸುವಲ್ಲಿ ಕರ್ನಾಟಕವು ನಿರಂತರವಾಗಿ ಮುನ್ನಡೆ ಸಾಧಿಸುತ್ತಿದೆ. ₹8,300 ಕೋಟಿ ಮೊತ್ತದ ಈ ಹೂಡಿಕೆ ಕಾರ್ಯಗತಗೊಳಿಸುವಲ್ಲಿ ರಾಜ್ಯ ಸರ್ಕಾರ ಮತ್ತು ಷೆರ್ವನ್‌ ಕಂಪನಿ ನಡುವಣ ಸಹಯೋಗವು ಕರ್ನಾಟಕದ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಕ್ಷೇತ್ರದಲ್ಲಿನ ಮಹತ್ವದ ಪ್ರಗತಿಗೆ ಸ್ಪಷ್ಟ ನಿದರ್ಶನವಾಗಿದೆ. ನಾವೀನ್ಯತೆ, ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ ಉತ್ತೇಜಿಸಲು ರಾಜ್ಯ ಸರ್ಕಾರವು ಬದ್ಧವಾಗಿದೆʼ ಎಂದು ತಿಳಿಸಿದ್ದಾರೆ.

ಷೆರ್ವನ್‌ ಇಂಡಿಯಾದ ಮುಖ್ಯಸ್ಥ ಅಕ್ಷಯ್ ಸಾಹ್ನಿ ಮಾತನಾಡಿ,”ಕೈಗೆಟುಕುವ, ವಿಶ್ವಾಸಾರ್ಹವಾದ ಶುದ್ಧ ಇಂಧನ ಒದಗಿಸಲು ಭಾರತದ ಅಸಾಧಾರಣ ಪ್ರತಿಭಾನ್ವಿತರು ನಮ್ಮ ಜಾಗತಿಕ ಜಾಲದ ಸಂಪನ್ಮೂಲ ಹಾಗೂ ಪರಿಣತಿ ಜತೆಗೆ ಕೆಲಸ ಮಾಡಲು ಈ ಕೇಂದ್ರವು ಅವಕಾಶ ಒದಗಿಸಲಿದೆʼ ಎಂದು ಹೇಳಿದ್ದಾರೆ.

ಈ ಕೇಂದ್ರದಲ್ಲಿ ಇಂಧನ ವ್ಯವಸ್ಥೆಯ ತಂತ್ರಜ್ಞಾನ ಆವಿಷ್ಕಾರಗಳಿಗೆ ವೇಗ ನೀಡಲು ಎಂಜಿನಿಯರಿಂಗ್‌ ಮತ್ತು ಡಿಜಿಟಲ್‌ ಸೇವೆಗಳಿಗೆ ಸಂಬಂಧಿಸಿದಂತೆ 2025ರ ವೇಳೆಗೆ 600 ತಂತ್ರಜ್ಞರನ್ನು ನೇಮಕ ಮಾಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಆವಿಷ್ಕಾರಕ್ಕೆ ಪೂರಕ ವಾತಾವರಣ ಸೃಷ್ಟಿಸಿರುವ ಪ್ರಗತಿಪರ ನೀತಿಗಳ ಮೂಲಕ ತಾಂತ್ರಿಕ ಪ್ರಗತಿ ಉತ್ತೇಜಿಸಲು ರಾಜ್ಯವು ಅನುಕರಣೀಯ ಕ್ರಮಗಳನ್ನು ತೆಗೆದುಕೊಂಡಿದೆ. ಬೆಂಗಳೂರು ಈಗಾಗಲೇ 500ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (ಜಿಸಿಸಿ) ನೆಲೆಯಾಗಿದ್ದು, ಹಣಕಾಸು, ಆರೋಗ್ಯ, ರಿಟೇಲ್‌ ವ್ಯಾಪಾರ, ತಯಾರಿಕಾ ಮತ್ತಿತರ ವಲಯಗಳು ಸೇರಿದಂತೆ ಭಾರತದ ʼಜಿಸಿಸಿʼಗಳಲ್ಲಿ ಶೇ 30ಕ್ಕಿಂತ ಹೆಚ್ಚು ಪಾಲು ಹೊಂದಿದೆ ಎಂದು ಸಚಿವರು ವಿವರಿಸಿದರು.

ಷೆರ್ವನ್‌ ಶ್ರೇಷ್ಠತಾ ಕೇಂದ್ರವು (ಇಎನ್‌ಜಿಐಎನ್‌ಇ) ಸ್ಥಳೀಯ ವೃತ್ತಿಪರರಿಗೆ ಗಮನಾರ್ಹ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲಿದೆ. ಸದ್ಯದ ಜಾಗತಿಕ ಇಂಧನ ಬೇಡಿಕೆಗಳನ್ನು ಪೂರೈಸುವ ಸವಾಲಿಗೆ ಸ್ಪಂದಿಸಲು ಮತ್ತು ಭವಿಷ್ಯದಲ್ಲಿ ಕಡಿಮೆ ಇಂಗಾಲ ಹೊರಸೂಸುವ ಶುದ್ಧ ಇಂಧನ ತಯಾರಿಸುವುದಕ್ಕೆ ಕೊಡುಗೆ ನೀಡಲು ಅವರಿಗೆ ಅವಕಾಶ ನೀಡಲಿದೆ. ಇಲ್ಲಿ ಕಾರ್ಯನಿರ್ವಹಿಸಲಿರುವ ಷೆರ್ವನ್‌ ತಂಡವು ಅಂತಾರಾಷ್ಟ್ರೀಯ ಭಾಗಿದಾರರ ಸಹಭಾಗಿತ್ವದಲ್ಲಿ ಸಂಕೀರ್ಣ ಸ್ವರೂಪದ ಜಾಗತಿಕ ಕಾರ್ಯಾಚರಣೆಗಳು ಮತ್ತು ಇಂಧನ ಯೋಜನೆಗಳನ್ನು ಕಾರ್ಯಗತಗೊಳಿಸಲಿದೆ ಎಂದು ಸಚಿವ ಎಂ.ಬಿ. ಪಾಟೀಲ ವಿವರಿಸಿದರು.

ಬೆಂಗಳೂರಿನಲ್ಲಿ ಷೆರ್ವನ್‌ ಶ್ರೇಷ್ಠತಾ ಕೇಂದ್ರದ ಸ್ಥಾಪನೆಯು ತಂತ್ರಜ್ಞಾನ, ನಾವೀನ್ಯತೆ ಮತ್ತು ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಆದ್ಯತೆಗಳಿಗೆ ಸೂಕ್ತವಾಗಿ ಹೊಂದಿಕೊಳ್ಳಲಿದೆ. ಈ ಹೂಡಿಕೆಯು ಜಾಗತಿಕ ಕಂಪನಿಗಳ ಪಾಲಿಗೆ ಕರ್ನಾಟಕವು ಪ್ರಮುಖ ತಾಣವಾಗಿರುವುದರ ಮಹತ್ವವನ್ನು ಬಿಂಬಿಸುತ್ತದೆ. ರಾಜ್ಯದ ಅಭಿವೃದ್ಧಿಯಲ್ಲಿ ಉದ್ಯಮ, ನಾವೀನ್ಯತೆ ಮತ್ತು ತಂತ್ರಜ್ಞಾನವನ್ನು ಉತ್ತೇಜಿಸುವ ಕರ್ನಾಟಕ ಸರ್ಕಾರದ ಅಚಲ ಬದ್ಧತೆಗೂ ಇದು ಸಾಕ್ಷಿಯಾಗಿದೆ ಎಂದೂ ಸಚಿವರು ಹೇಳಿದರು.

ಇದನ್ನೂ ಓದಿ: Kannada New Movie: ʼಪೆನ್ ಡ್ರೈವ್ʼ ಚಿತ್ರದಲ್ಲಿ ಮಾಲಾಶ್ರೀ; ಇದು ತನಿಷಾ ಕುಪ್ಪಂಡ ಅಭಿನಯದ ಚಿತ್ರ

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಮತ್ತು ಷೆರ್ವನ್‌ನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

7th pay commission: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನ ಶ್ರೇಣಿ ಪ್ರಕಟ; ಯಾರಿಗೆ ಎಷ್ಟು ಏರಿಕೆ?

7th pay commission: ರಾಜ್ಯ 7ನೇ ವೇತನ ಆಯೋಗದ ಶಿಫಾರಸುಗಳ ಅನ್ವಯ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು 25 ಪರಿಷ್ಕೃತ ಸ್ಥಾಯಿ ವೇತನ ಶ್ರೇಣಿಗಳನ್ನು, ವೇತನ ಸಂಬಂಧಿತ ಭತ್ಯೆಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಿ ಸರ್ಕಾರದ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

VISTARANEWS.COM


on

7th pay commission
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಿಸಲು ರಚನೆ ಮಾಡಿದ್ದ ರಾಜ್ಯ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳನ್ನು ಆ.1ರಿಂದ ಜಾರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಇದೀಗ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು 25 ಪರಿಷ್ಕೃತ ಸ್ಥಾಯಿ ವೇತನ ಶ್ರೇಣಿಗಳನ್ನು, ವೇತನ ಸಂಬಂಧಿತ ಭತ್ಯೆಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಿ ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ.ರೇಜು ಆದೇಶ ಹೊರಡಿಸಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಾಗಲಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

2022ರ ನ.19ರಂದು ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯನ್ನು ಸಲ್ಲಿಸಿತ್ತು. 7ನೇ ರಾಜ್ಯ ವೇತನ ಆಯೋಗವು ಶಿಫಾರಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಜುಲೈ 1ರಿಂದ ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಲಾಗಿದೆ.

1. ಪರಿಷ್ಕೃತ ವೇತನ ಶ್ರೇಣಿಗಳು

ಔದ್ಯಮಿಕ ಕೆಲಸಗಾರರ ಅಖಿಲ ಭಾರತ ಸರಾಸರಿ ಗ್ರಾಹಕ ಬೆಲೆ ಸೂಚ್ಯಂಕ (ಸಾಮಾನ್ಯ) 361.704 (ಆಧಾರ ವರ್ಷ 2001=100) ಅಂಶಗಳ ಸೂಚ್ಯಂಕ ಸರಾಸರಿಯಿಂದ ನಿರೂಪಿಸಲಾದ 2022ರ ಜುಲೈ 1ರ ಜೀವನ ಪರಿಸ್ಥಿತಿ ವೆಚ್ಚಕ್ಕೆ ಪರಿಷ್ಕೃತ ವೇತನ ಶ್ರೇಣಿಗಳು ಹೊಂದಿಕೊಂಡಿರುತ್ತವೆ.

ಪರಿಷ್ಕೃತ ವೇತನ ಶ್ರೇಣಿಗಳು ಮುಖ್ಯ ವೇತನ ಶ್ರೇಣಿ ರೂ.27000-650-29600-725- 32500-800-35700-900-39300-1000-43300-1125-47800-1250-52800-1375-58300- 1500-64300-1650-74200-1900-85600-2300-99400-2700-115600-3100-134200- 3500-155200-4000-179200-4500-206200-5000-2412000 ನಿರ್ದಿಷ್ಟ ಭಾಗಗಳಾಗಿವೆ.

1ನೇ ಜುಲೈ 2012ಕ್ಕೆ ಅನ್ವಯಿಸುವಂತೆ ಹುದ್ದೆಗಳಿಗೆ ಅನ್ವಯವಾಗುವ ಪ್ರಸಕ್ತ ವೇತನ ಶ್ರೇಣಿ ಮತ್ತು ಅದಕ್ಕೆ ಸಂವಾದಿ ಸಮಾನಾಂತರ ಪರಿಷ್ಕೃತ ವೇತನ ಶ್ರೇಣಿಗಳು ಮೇಲಿನ ಕಂಡಿಕೆ 1.1 ರ (2) ಮತ್ತು (3)ನೇ ಅಂಕಣಗಳಲ್ಲಿ ನಿರ್ದಿಷ್ಟಪಡಿಸಿದಂತೆ ಇರತಕ್ಕದ್ದು.

ಜಾರಿಗೆ ಬರುವ ದಿನಾಂಕ:

2024ರ ಪರಿಷ್ಕೃತ ವೇತನ ಶ್ರೇಣಿಗಳು 1ನೇ ಜುಲೈ 2022ರಿಂದ ಜಾರಿಗೆ ಬರುವಂತೆ ಅನ್ವಯವಾಗುತ್ತವೆ. ಪರಿಷ್ಕೃತ ವೇತನ ಶ್ರೇಣಿಗಳ ಅನುಷ್ಠಾನದ ಕಾರಣದಿಂದ ಉಂಟಾಗುವ ವೇತನ ಮತ್ತು ಪಿಂಚಣಿಯ ಆರ್ಥಿಕ ಲಾಭವು ಆಗಸ್ಟ್ 1ರಿಂದ ಲಭ್ಯವಾಗುತ್ತದೆ.

ವೇತನ ಶ್ರೇಣಿಗಳ ಮತ್ತು ಪಿಂಚಣಿಯ ಪರಿಷ್ಕರಣೆಯ ಕಾರಣದಿಂದ ಉಂಟಾಗುವ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿಯ ಮೊತ್ತದಲ್ಲಿನ ಹೆಚ್ಚಳವನ್ನು 1ನೇ ಆಗಸ್ಟ್ 2024 ರಿಂದ ನಗದಾಗಿ ಸಂದಾಯ ಮಾಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Continue Reading
Advertisement
ಕರ್ನಾಟಕ16 mins ago

Muda Scam: ದೆಹಲಿಯಲ್ಲಿ ರಾಹುಲ್‌ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ; ಕಾನೂನು ಹೋರಾಟದ ಬಗ್ಗೆ ಚರ್ಚೆ

Uttara Kannada News
ಉತ್ತರ ಕನ್ನಡ25 mins ago

Uttara Kannada News: ಹೊಸ ಆಧಾರ್ ನೋಂದಣಿ, ತಿದ್ದುಪಡಿಗೆ ಅವಕಾಶ

Invest Karnataka
ಬೆಂಗಳೂರು27 mins ago

Invest Karnataka: ಇಂಧನ ತಂತ್ರಜ್ಞಾನ; ರಾಜ್ಯದಲ್ಲಿ 8,300 ಕೋಟಿ ರೂ. ಹೂಡಿಕೆ ಮಾಡಲಿರುವ ಷೆರ್ವನ್‌ ಇಂಡಿಯಾ

UPSC Exam calendar
ದೇಶ54 mins ago

UPSC Exam calendar: UPSC ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್‌ ರಿಲೀಸ್‌; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

7th pay commission
ಕರ್ನಾಟಕ1 hour ago

7th pay commission: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನ ಶ್ರೇಣಿ ಪ್ರಕಟ; ಯಾರಿಗೆ ಎಷ್ಟು ಏರಿಕೆ?

Viral Video
Latest1 hour ago

Viral Video: ವಿಮಾನ ನಿಲ್ದಾಣದಲ್ಲಿ ಹೃದಯಾಘಾತ; ಸಿಪಿಆರ್ ಮಾಡಿ ಜೀವ ಉಳಿಸಿದ ಅಧಿಕಾರಿಗಳು

Recurring Deposit
ಮನಿ-ಗೈಡ್2 hours ago

Recurring Deposit: ಸಣ್ಣ, ಆರಂಭಿಕ ಹೂಡಿಕೆದಾರರಿಗೆ ಸೂಕ್ತ ಪೋಸ್ಟ್ ಆಫೀಸ್‌ನ ಆರ್‌ಡಿ; ಏನಿದರ ಲಾಭ?

Kannada New Movie
ಬೆಂಗಳೂರು2 hours ago

Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

UPSC Admit Card
ಪ್ರಮುಖ ಸುದ್ದಿ2 hours ago

UPSC Admit Card: NDA ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆಗೊಳಿಸಿದ UPSC; ಎಲ್ಲಿ ಡೌನ್ಲೋಡ್‌ ಮಾಡಬಹುದು?

Non Vegetarian Population
ಆಹಾರ/ಅಡುಗೆ2 hours ago

Non Vegetarian Population: ಜಗತ್ತಿನಲ್ಲಿ ಕುಸಿಯುತ್ತಿದೆ ಮಾಂಸಾಹಾರಿಗಳ ಸಂಖ್ಯೆ! ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌