Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ - Vistara News

ಉದ್ಯೋಗ

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

Village Administrative Officer: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿಗೆ ಸಂಬಂಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಪರೀಕ್ಷೆಗಳನ್ನು ನಡೆಸಲಿದ್ದು, ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯ ಸ್ಥಿತಿ ಮತ್ತು ಶುಲ್ಕ ಪಾವತಿ ಸ್ಥಿತಿ ಪರಿಶೀಲಿಸಲು ಕೆಇಎ ಕೆಲವೊಂದು ಸೂಚನೆಗಳನ್ನು ನೀಡಿದೆ. ಅರ್ಜಿ, ಶುಲ್ಕ ಪಾವತಿಯ ಸ್ಟೇಟಸ್‌ ಪರಿಶೀಲಿಸುವ ವಿಧಾನ ಇಲ್ಲಿದೆ.

VISTARANEWS.COM


on

Village Administrative Officer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಯ ನೇಮಕಾತಿಗೆ ಸಂಬಂಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ವು ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಪರೀಕ್ಷೆಗಳನ್ನು ನಡೆಸಲಿದ್ದು, ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯ ಸ್ಥಿತಿ ಮತ್ತು ಶುಲ್ಕ ಪಾವತಿ ಸ್ಥಿತಿ ಪರಿಶೀಲಿಸಲು ಕೆಇಎ ಕೆಲವೊಂದು ಸೂಚನೆಗಳನ್ನು ನೀಡಿದೆ (Job Alert).

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತವಾಗಿರದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಆಗಸ್ಟ್‌ 26ರೊಳಗೆ ಪೂರಕ ದಾಖಲೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಪೂರಕ ದಾಖಲೆಗಳಿಲ್ಲದ ಅರ್ಜಿಗಳು ತಿರಸ್ಕೃತಗೊಳ್ಳಲಿವೆ. ಹೀಗಾಗಿ ಅರ್ಜಿ, ಶುಲ್ಕ ಪಾವತಿಯ ಸ್ಟೇಟಸ್‌ ಪರಿಶೀಲಿಸಿ. ಅದಕ್ಕಾಗಿ ನೀವು ಮಾಡಬೇಕಾಗಿರುವುದು ಇಷ್ಟೇ:

  • ಸ್ಟೇಟಸ್‌ ಪರಿಶೀಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://cetonline.karnataka.gov.in/kea/indexnew)
  • ʼನೇಮಕಾತಿʼ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ʼಗ್ರಾಮ ಆಡಳಿತಾಧಿಕಾರಿ-ಅರ್ಜಿ ಮತ್ತು ಶುಲ್ಕ ಸ್ಥಿತಿ ಲಿಂಕ್‌ʼ ಆಪ್ಶನ್‌ ಆಯ್ಕೆ ಮಾಡಿ.
  • ನಂತರ ತೆರೆಯುವ ಹೊಸ ಪುಟದಲ್ಲಿ ಅಪ್ಲಿಕೇಶನ್‌ ನಂಬರ್, ಜನ್ಮ ದಿನಾಂಕ ಮಾಹಿತಿ, ಕ್ಯಾಪ್ಚಾ ಕೋಡ್‌ ನಮೂದಿಸಿ.
  • ‘Search’ ಎಂದಿರುವಲ್ಲಿ ಕ್ಲಿಕ್ ಮಾಡಿ.
  • ಈಗ ನಿಮ್ಮ ಅರ್ಜಿ ಸ್ಥಿತಿ, ಶುಲ್ಕ ಸ್ಥಿತಿ ಕುರಿತು ಮಾಹಿತಿ ಮೂಡುತ್ತದೆ.

ಪ್ರಕಟಿತ ಲಿಂಕ್‌ನಲ್ಲಿ ಅಭ್ಯರ್ಥಿಗಳ ಅರ್ಜಿಯು ಅಂಗೀಕೃತವಾಗದಿದ್ದಲ್ಲಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ ಶುಲ್ಕ ಪಾವತಿಸಿರುವ ಬಗ್ಗೆ ಪೂರಕ ದಾಖಲೆಗಳನ್ನು ಆಗಸ್ಟ್‌ 26ರೊಳಗೆ ಪ್ರಾಧಿಕಾರಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು. ಗ್ರಾಮ ಆಡಳಿತ ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಲೇಬೇಕು. ಸೆಪ್ಟೆಂಬರ್ 29ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಿ 150 ಅಂಕಗಳಿಗೆ ಕನಿಷ್ಠ 50 ಅಂಕಗಳನ್ನು ಗಳಿಸುವುದು ಕಡ್ಡಾಯ. ಒಂದು ವೇಳೆ ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯದಿದ್ದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ.

ʼʼಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಅಕ್ಟೋಬರ್ 27ರಂದು ಪತ್ರಿಕೆ- 1 ಮತ್ತು ಪತ್ರಿಕೆ-2 ಇವುಗಳನ್ನು ಒಳಗೊಂಡ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆʼʼ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ವಿವರಿಸಿದ್ದಾರೆ.

ಪರೀಕ್ಷೆಯ ವೇಳಾಪಟ್ಟಿ

29-09-2024 ಭಾನುವಾರ ಬೆಳಿಗ್ಗೆ 10-30ರಿಂದ 12-30ರವರೆಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ.
27-10-2024 ಭಾನುವಾರ ಬೆಳಿಗ್ಗೆ 10-30ರಿಂದ 12-30ರವರೆಗೆ ಪತ್ರಿಕೆ -1.
27-10-2024 ಭಾನುವಾರ ಮಧ್ಯಾಹ್ನ 2-30ರಿಂದ 04-30ರವರೆಗೆ ಪತ್ರಿಕೆ -2.

ಪರೀಕ್ಷೆ ವಿಧಾನ

ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ಇದನ್ನೂ ಓದಿ: KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job market: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ; ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಮುಂದಾದ ಶೇ. 72ರಷ್ಟು ಕಂಪನಿಗಳು!

ಭಾರತೀಯ ಉದ್ಯೋಗ ಮಾರುಕಟ್ಟೆಯಲ್ಲಿ (Job market) ಬೆಳವಣಿಗೆಯಾಗುತ್ತಿದ್ದು, ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಶೇ. 72ರಷ್ಟು ಉದ್ಯೋಗದಾತರು ಮುಂದಾಗಿರುವುದಾಗಿ ವರದಿಯೊಂದು ಹೇಳಿದೆ. ಶೇ. 72ರಷ್ಟು ನೇಮಕಾತಿ ಉದ್ದೇಶವು ಈ ವರ್ಷದ ಪ್ರಾರಂಭದಲ್ಲೇ ಕಾಣಿಸಿಕೊಂಡಿತ್ತು. ಕಳೆದ ಸಾಲಿಗೆ ಹೋಲಿಸಿದರೆ ವರ್ಷದ ಮೊದಲಾರ್ಧದಿಂದ ನೇಮಕಾತಿಯಲ್ಲಿ ಶೇ. 4ರಷ್ಟು ಹೆಚ್ಚಳವಾಗಿದೆ.

VISTARANEWS.COM


on

By

Job market
Koo

ಕೋವಿಡ್ ಸಾಂಕ್ರಾಮಿಕದ ಬಳಿಕ ಇದೀಗ ಭಾರತೀಯ ಉದ್ಯೋಗ ಮಾರುಕಟ್ಟೆಯಲ್ಲಿ (Job market) ಬೆಳವಣಿಗೆಯಾಗುತ್ತಿರುವ ಲಕ್ಷಣಗಳು ಕಂಡು ಬರುತ್ತಿವೆ. ಈ ವರ್ಷಾಂತ್ಯದೊಳಗೆ ಶೇ. 72ರಷ್ಟು ಉದ್ಯೋಗದಾತರು (Indian Employers) ಸಂದರ್ಶನ ನಡೆಸಿ ಹೊಸಬರನ್ನು (freshers interview) ನೇಮಿಸಿಕೊಳ್ಳಲು ಉದ್ದೇಶಿಸಿದ್ದಾರೆ. ಈ ನೇಮಕಾತಿ ಪ್ರಕ್ರಿಯೆಯು ಡಿಸೆಂಬರ್‌ನೊಳಗೆ ನಡೆಯಲಿದೆ ಎನ್ನಲಾಗಿದೆ.

ಶೇ. 72ರಷ್ಟು ನೇಮಕಾತಿ ಉದ್ದೇಶವು ಈ ವರ್ಷದ ಪ್ರಾರಂಭದಲ್ಲೇ ಕಾಣಿಸಿಕೊಂಡಿತ್ತು. ವರ್ಷದ ಮೊದಲಾರ್ಧದಿಂದ ನೇಮಕಾತಿಯಲ್ಲಿ ಶೇ. 4ರಷ್ಟು ಹೆಚ್ಚಳವಾಗಿದೆ. 2023ರ ದ್ವಿತೀಯಾರ್ಧಕ್ಕೆ ಹೋಲಿಸಿದರೆ ಶೇ. 7 ಏರಿಕೆಯಾಗಿದೆ. ಇದು ಹೊಸ ಪ್ರತಿಭೆಗಳಿಗೆ ಉದ್ಯೋಗ ಮಾರುಕಟ್ಟೆಯಲ್ಲಿ ಭರವಸೆಯನ್ನು ಮೂಡಿಸಿದೆ. ಟೀಮ್ ಲೀಸ್ ಇಡಿ ಟೆಕ್‌ನ ‘ಕೆರಿಯರ್ ಔಟ್‌ಲುಕ್ʼ ಈ ಕುರಿತು ವರದಿ ಬಿಡುಗಡೆ ಮಾಡಿದ್ದು, ಇದು ಏಪ್ರಿಲ್ ಮತ್ತು ಜೂನ್ 2024ರ ಅವಧಿಯಲ್ಲಿನ ನೇಮಕಾತಿಗೆ ಸಂಬಂಧಿಸಿ ಭಾರತದಾದ್ಯಂತ 603ಕ್ಕೂ ಹೆಚ್ಚು ಕಂಪನಿಗಳ ಸಮೀಕ್ಷೆಯನ್ನು ಆಧರಿಸಿದೆ.

ಫ್ರೆಷರ್‌ಗಳಿಗೆ ನೇಮಕಾತಿ ಉದ್ದೇಶದ ಹೆಚ್ಚಳವು ಉತ್ತೇಜಕ ಸಂಕೇತವಾಗಿದೆ. ಇದು ಉದ್ಯೋಗದಾತರಲ್ಲಿ ಹೆಚ್ಚುತ್ತಿರುವ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಉದ್ಯೋಗಿಗಳಿಗೆ ಪ್ರವೇಶಿಸುವ ಹೊಸ ಪ್ರತಿಭೆಗಳಿಗೆ ಅಮೂಲ್ಯವಾದ ಅವಕಾಶಗಳನ್ನು ಒದಗಿಸುತ್ತದೆ ಎಂದು ಟೀಮ್ ಲೀಸ್ ಇಡಿ ಟೆಕ್‌ನ ಸಂಸ್ಥಾಪಕ ಮತ್ತು ಸಿಇಒ ಶಾಂತನು ರೂಜ್ ತಿಳಿಸಿದ್ದಾರೆ.

ಇ-ಕಾಮರ್ಸ್ ಮತ್ತು ತಂತ್ರಜ್ಞಾನದ ಸ್ಟಾರ್ಟ್-ಅಪ್‌ಗಳು, ಎಂಜಿನಿಯರಿಂಗ್ ಮತ್ತು ಮೂಲಸೌಕರ್ಯ ಮತ್ತು ಚಿಲ್ಲರೆ ವ್ಯಾಪಾರವು ಈ ವರ್ಷದ ದ್ವಿತೀಯಾರ್ಧದಲ್ಲಿ ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಉದ್ದೇಶವನ್ನು ತೋರಿಸುವ ಪ್ರಮುಖ ಮೂರು ಉದ್ಯಮಗಳಾಗಿವೆ ಎಂದು ವರದಿ ತಿಳಿಸಿದೆ.


ಭೌಗೋಳಿಕವಾಗಿ ವಿಶ್ಲೇಷಿರುವ ವರದಿಯು, ಬೆಂಗಳೂರಿನ ಶೇ. 74ರಷ್ಟು ಉದ್ಯೋಗದಾತರು ಫ್ರೆಶರ್‌ಗಳನ್ನು ನೇಮಿಸಿಕೊಳ್ಳಲು ಉದ್ದೇಶಿಸಿದ್ದಾರೆ. ಇದು ಮುಂಬಯಿನಲ್ಲಿ ಶೇ. 60 ಮತ್ತು ಚೆನ್ನೈನಲ್ಲಿ ಶೇ. 54 ರಷ್ಟಿದೆ ಎಂದು ಹೇಳಿದೆ.

ಪೂರ್ಣ ಸ್ಟಾಕ್ ಡೆವಲಪರ್, ಸರ್ಚ್ ಎಂಜಿನ್ ಆಪ್ಟಿಮೈಸೇಶನ್ ಎಕ್ಸಿಕ್ಯೂಟಿವ್, ಡಿಜಿಟಲ್ ಸೇಲ್ಸ್ ಅಸೋಸಿಯೇಟ್ ಮತ್ತು ಯೂಸರ್ ಇಂಟರ್ಫೇಸ್/ಯೂಸರ್ ಎಕ್ಸ್‌ಪೀರಿಯೆನ್ಸ್ ಡಿಸೈನರ್ ಫ್ರೆಶರ್‌ಗಳಿಗೆ ಹೆಚ್ಚು ಬೇಡಿಕೆ ಇದೆ ಎಂದು ವರದಿ ತಿಳಿಸಿದೆ.

ಉದ್ಯೋಗದಾತರು ವಿಶೇಷವಾಗಿ ಸೈಬರ್ ಸೆಕ್ಯುರಿಟಿ, ಕ್ಲೌಡ್ ಕಂಪ್ಯೂಟಿಂಗ್, ಡೇಟಾ ಅನಾಲಿಟಿಕ್ಸ್ ಮತ್ತು ಸರ್ಚ್ ಎಂಜಿನ್ ಆಪ್ಟಿಮೈಸೇಶನ್‌ನಲ್ಲಿ ಕೌಶಲ ಹೊಂದಿರುವ ಅಭ್ಯರ್ಥಿಗಳನ್ನು ಹುಡುಕುತ್ತಿದ್ದಾರೆ ಎಂದು ಅದು ಹೇಳಿದೆ.
ಶೇ. 70ರಷ್ಟು ಉದ್ಯೋಗದಾತರು ಪ್ರಾಯೋಗಿಕ ಕಲಿಕೆಯೊಂದಿಗೆ ಪಠ್ಯಕ್ರಮವನ್ನು ವರ್ಧಿಸಲು ಸಲಹೆ ನೀಡಿದ್ದಾರೆ. ಆದರೆ ಶೇ. 62ರಷ್ಟು ಉದ್ಯಮದ ಅಗತ್ಯತೆಗಳೊಂದಿಗೆ ಶೈಕ್ಷಣಿಕ ತರಬೇತಿಯನ್ನು ಉತ್ತಮವಾಗಿ ಜೋಡಿಸಲು ಉದ್ಯಮ-ಅಕಾಡೆಮಿಯ ಪಾಲುದಾರಿಕೆಯನ್ನು ಪ್ರತಿಪಾದಿಸುತ್ತಾರೆ.

ಉತ್ಪಾದನೆ ವಲಯದಲ್ಲಿ ಶೇ. 25 ಉದ್ಯೋಗದಾತರು ಪದವಿ ಅಪ್ರೆಂಟಿಸ್‌ಗಳನ್ನು ನೇಮಿಸಿಕೊಳ್ಳಲು ಯೋಜಿಸುತ್ತಿದೆ. ಅನಂತರ ಎಂಜಿನಿಯರಿಂಗ್ ಮತ್ತು ಮೂಲಸೌಕರ್ಯವು ಶೇ. 19 ಮತ್ತು ನಿರ್ಮಾಣ ಮತ್ತು ರಿಯಲ್ ಎಸ್ಟೇಟ್ ಶೇ. 11ರಷ್ಟು ಎಂದು ಅದು ಹೇಳಿದೆ.

ಇದನ್ನೂ ಓದಿ: What is Lateral Entry?: ಏನಿದು ಲ್ಯಾಟರಲ್ ಎಂಟ್ರಿ ವಿವಾದ? ಕಾಂಗ್ರೆಸ್‌ ಆರೋಪವೇನು? ಬಿಜೆಪಿಯ ವಾದವೇನು?

ಉದ್ಯಮ ಅಗತ್ಯತೆಗಳೊಂದಿಗೆ ಶೈಕ್ಷಣಿಕ ಕಾರ್ಯಕ್ರಮಗಳನ್ನು ಜೋಡಿಸುವುದು ನಿರ್ಣಾಯಕವಾಗಿದೆ. ಉದ್ಯೋಗ ಮಾರುಕಟ್ಟೆಯು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ತಂತ್ರಜ್ಞಾನ ಮತ್ತು ಡಿಜಿಟಲ್ ಕೌಶಲಗಳು ಪ್ರಮುಖ ವಿಷಯಗಳಾಗುತ್ತಿವೆ ಎಂದು ರೂಜ್ ತಿಳಿಸಿದ್ದಾರೆ.

Continue Reading

ದೇಶ

Cognizant: ವಾರ್ಷಿಕ ಕೇವಲ 2.5 ಲಕ್ಷ ರೂ . ಸಂಬಳ ಪ್ಯಾಕೇಜ್ ಘೋಷಿಸಿ ಟೀಕೆಗೆ ಗುರಿಯಾದ ಕಾಗ್ನಿಜೆಂಟ್!

ಕಾಗ್ನಿಜೆಂಟ್ (Cognizant) ಇತ್ತೀಚೆಗೆ ಹೊಸ ನೇಮಕಾತಿಗಳ ಬಗ್ಗೆ ಸೂಚನೆ ಹೊರಡಿಸಿತ್ತು. ಫ್ರೆಶರ್ ಗಳಿಗೆ ವಾರ್ಷಿಕ ಕೇವಲ 2.5 ಲಕ್ಷ ರೂ. ಗಳನ್ನು ನೀಡುವ ಖಾಲಿ ಹುದ್ದೆಯನ್ನು ಪಟ್ಟಿ ಮಾಡಿ ಬಿಡುಗಡೆ ಮಾಡಿ ಬಳಿಕ ಭಾರೀ ಟೀಕೆಗೆ ಗುರಿಯಾಯಿತು. ಈ ಬಗ್ಗೆ ಕಂಪನಿ ನೀಡಿರುವ ಪ್ರತಿಕ್ರಿಯೆ ಏನು? ಈ ಕುರಿತ ವಿವರಣೆ ಇಲ್ಲಿದೆ.

VISTARANEWS.COM


on

By

Cognizant
Koo

ಕಂಪನಿಗೆ ಹೊಸದಾಗಿ ಸೇರಬಯಸುವವರಿಗೆ ವಾರ್ಷಿಕವಾಗಿ 2.5 ಲಕ್ಷ ರೂ. ವೇತನ ನೀಡುವ ಖಾಲಿ ಹುದ್ದೆಗಳ (vacancy offer) ಬಗ್ಗೆ ಘೋಷಣೆ ಮಾಡಿ ಭಾರೀ ಟೀಕೆಗೆ ಗುರಿಯಾದ ಸಾಫ್ಟ್ ವೇರ್ ಕಂಪನಿ ಕಾಗ್ನಿಜೆಂಟ್ (Cognizant) ಈಗ ಪ್ರತಿಕ್ರಿಯೆಯನ್ನು ನೀಡಿದೆ, ನೇಮಕಾತಿ ಕುರಿತ ಪ್ರಕಟಣೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿಕೊಂಡಿದೆ.

ಕಾಗ್ನಿಜೆಂಟ್ ಇತ್ತೀಚೆಗೆ ಹೊಸ ನೇಮಕಾತಿಗಳ (New recruitment) ಬಗ್ಗೆ ಸೂಚನೆ ಹೊರಡಿಸಿತ್ತು. ಫ್ರೆಶರ್ ಗಳಿಗೆ ವಾರ್ಷಿಕ 2.5 ಲಕ್ಷ ರೂ.ಗಳನ್ನು ನೀಡುವ ಖಾಲಿ ಹುದ್ದೆಯನ್ನು ಪಟ್ಟಿ ಮಾಡಿ ಬಿಡುಗಡೆ ಮಾಡಿ ಬಳಿಕ ಭಾರೀ ಟೀಕೆಗೆ ಗುರಿಯಾಯಿತು.

ಮೆಟ್ರೋ ನಗರದಲ್ಲಿ ಇಂತಹ ಸಂಬಳದಲ್ಲಿ ಹೇಗೆ ಬದುಕಲು ಸಾಧ್ಯ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು.
ಕಳೆದ ವರ್ಷ ಕಂಪೆನಿಯ ಸಿಇಒ 186 ಕೋಟಿ ರೂ. ಗಳನ್ನು ಗಳಿಸಿದ್ದಾರೆ. ಹೀಗಿರುವಾಗ 20 ವರ್ಷಗಳಿಂದ ಪ್ರವೇಶ ಹಂತದವರಿಗೆ ವೇತನಗಳು ಏಕೆ ಇನ್ನೂ ಕೆಳ ಮಟ್ಟದಲ್ಲಿಯೇ ಇದೆ ಎಂದು ಅನೇಕ ಪ್ರಶ್ನಿಸಿದ್ದರು. ಇದೀಗ ಕಾಗ್ನಿಜೆಂಟ್ ಅಂತಿಮವಾಗಿ ತನ್ನ ಮೌನವನ್ನು ಮುರಿದಿದೆ.

ಕಾಗ್ನಿಜೆಂಟ್ ತನ್ನ ವಾರ್ಷಿಕ 2.5 ಲಕ್ಷ ರೂ. ಸಂಬಳದ ಕೊಡುಗೆಯ ಕುರಿತಾದ ವಿವಾದದಕ್ಕೆ ಪ್ರತಿಕ್ರಿಯಿಸಿದ್ದು, ಮಾಹಿತಿಯನ್ನು ತಪ್ಪಾಗಿ ನಿರೂಪಿಸಲಾಗಿದೆ ಎಂದು ಹೇಳಿದೆ.

ಮೂರು ವರ್ಷಗಳ ಪದವಿಪೂರ್ವ, ಪದವಿ ಹೊಂದಿರುವ ಎಂಜಿನಿಯರಿಂಗ್ ಅಲ್ಲದ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಈ ಕಡಿಮೆ ವೇತನ ಪ್ಯಾಕೇಜ್ ಅನ್ನು ನೀಡಲಾಗುತ್ತದೆ ಎಂದು ಕಂಪನಿ ಸ್ಪಷ್ಟಪಡಿಸಿದೆ.

ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕಾಗ್ನಿಜೆಂಟ್ ಈ ಬಗ್ಗೆ ತಿಳಿಸಿದ್ದು, 3 ವರ್ಷಗಳ ಪದವಿಪೂರ್ವ, ಪದವಿಯೊಂದಿಗೆ ಎಂಜಿನಿಯರಿಂಗ್ ಅಲ್ಲದ ಹಿನ್ನೆಲೆಯ ಪ್ರತಿಭೆಗಳಿಗೆ ನಮ್ಮ ಇತ್ತೀಚಿನ ಉದ್ಯೋಗ ಪೋಸ್ಟ್ ಅನ್ನು ಸಂಪೂರ್ಣವಾಗಿ ತಪ್ಪಾಗಿ ನಿರೂಪಿಸಲಾಗಿದೆ. ವಾರ್ಷಿಕ 2.52 ಲಕ್ಷ ರೂ. ವೇತನ ನೀಡುವ ಈ ಉದ್ಯೋಗ ಜಾಹೀರಾತು 3 ವರ್ಷಗಳ ಎಂಜಿನಿಯರಿಂಗ್ ಪದವಿ ಮಾಡದ ಅಭ್ಯರ್ಥಿಗಳಿಗಾಗಿ ಎಂದು ತಿಳಿಸಿದೆ.


ಎಂಜಿನಿಯರಿಂಗ್ ಪದವೀಧರರಿಗೆ ವೇತನವು ಐಟಿ ಉದ್ಯಮದಲ್ಲಿ ಹೆಚ್ಚು ಸ್ಪರ್ಧಾತ್ಮಕವಾಗಿದೆ: ಎಂಜಿನಿಯರಿಂಗ್ ಪದವೀಧರರಿಗೆ ನಾವು ನೀಡುವ ವೇತನವು ಐಟಿ ಸೇವೆಗಳ ಇತರ ಗುಂಪಿನೊಳಗೆ ಹೆಚ್ಚು ಸ್ಪರ್ಧಾತ್ಮಕವಾಗಿದೆ ಎಂದು ಇವಿಪಿ ಮತ್ತು ಕಾಗ್ನಿಜೆಂಟ್ ಅಮೆರಿಕದ ಅಧ್ಯಕ್ಷ ಸೂರ್ಯ ಗುಮ್ಮಡಿ ತಿಳಿಸಿದ್ದಾರೆ.

ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ತನ್ನ ಕೆಲವು ಉದ್ಯೋಗಿಗಳಿಗೆ ವಾರ್ಷಿಕ ವೇತನ ಹೆಚ್ಚಳವನ್ನು ಶೇ. 1 ರಷ್ಟು ಕಡಿಮೆಗೊಳಿಸಿದೆ ಮತ್ತು ಅತ್ಯಧಿಕ ಹೆಚ್ಚಳವು ಕೇವಲ ಶೇ. 5 ಆಗಿದೆ ಎಂಬ ವರದಿಗಳು ವಿವಾದವನ್ನು ಹೆಚ್ಚಿಸಿವೆ.
ಕಂಪೆನಿಯು ಈ ಇನ್‌ಕ್ರಿಮೆಂಟ್‌ಗಳನ್ನು ಅಂತಿಮವಾಗಿ ಹೊರತರುವ ಮೊದಲು ನಾಲ್ಕು ತಿಂಗಳವರೆಗೆ ಮುಂದೂಡಿದ ಹಿನ್ನೆಲೆಯಲ್ಲಿ ಈ ಸುದ್ದಿ ಬಂದಿದೆ.

ಇದನ್ನೂ ಓದಿ: Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ ಉದ್ಯೋಗಾವಕಾಶ; 391 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಕಳಪೆ ಸಂಬಳ ಹೆಚ್ಚಳದ ಬಗ್ಗೆ ಪ್ರತಿಕ್ರಿಯಿಸಿದ ಗುಮ್ಮಡಿ, ವೇತನ ಹೆಚ್ಚಳವು ವೈಯಕ್ತಿಕ ಕಾರ್ಯಕ್ಷಮತೆ ಮತ್ತು ಮ್ಯಾಕ್ರೋ ಉದ್ಯಮದ ಡೈನಾಮಿಕ್ಸ್ ಎರಡಕ್ಕೂ ಸಂಬಂಧ ಹೊಂದಿದೆ. ಈ ವರ್ಷ, ಉದ್ಯೋಗಿಗಳಿಗೆ ಇನ್ಕ್ರಿಮೆಂಟ್ ಮತ್ತು ಬೋನಸ್ ಗಳನ್ನು ವಿತರಿಸಿದ ಕೆಲವು ಐಟಿ ಕಂಪೆನಿಗಳಲ್ಲಿ ನಾವು ಒಂದಾಗಿದ್ದೇವೆ. ಕಳೆದ 3 ವರ್ಷಗಳಲ್ಲಿ ಹೆಚ್ಚಿನ ಕಾಗ್ನಿಜೆಂಟ್‌ನ ಉದ್ಯೋಗಿಗಳು 4ನೇ ಬಾರಿಯಾಗಿ ಈ ಬಾರಿಯೂ ವೇತನ ಹೆಚ್ಚಳದ ಪ್ರಯೋಜನವನ್ನು ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.

Continue Reading

ಕರ್ನಾಟಕ

Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ಇಂದು ಅಂತಿಮ ದಿನ

Banking Recruitment 2024: ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 4455 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಗೆ ಆ.21 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಗೆ ಹೇಗೆ?, ಶುಲ್ಕ, ಪರೀಕ್ಷಾ ವಿಧಾನ ಮತ್ತಿತರ ವಿವರಗಳು ಇಲ್ಲಿವೆ.

VISTARANEWS.COM


on

Job Alert
Koo

| ಆರ್‌.ಕೆ. ಬಾಲಚಂದ್ರ, ಬ್ಯಾಂಕಿಂಗ್, ವ್ಯಕ್ತಿತ್ವ ವಿಕಸನ ಹಾಗೂ ಸಾಪ್ಟ್ ಸ್ಕಿಲ್ ತರಬೇತುದಾರರು, ವೃತ್ತಿ ಮಾರ್ಗದರ್ಶಕರು
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ದೇಶದ (Banking Recruitment 2024) ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿಮಾಡುವ ಪ್ರಕ್ರಿಯೆ ಆರಂಭಿಸಿದೆ. ಈ ವರ್ಷದಲ್ಲಿ ಇಲ್ಲಿಯವರೆಗೆ 20,566ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಂತಾಗಿದೆ. ಪದವೀಧರ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿದೆ. ಈಗ ಮತ್ತೊಂದು ಸುತ್ತಿನ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 4455 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಎಂದಿನಂತೆ, ಪೂರ್ವ ಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಒಟ್ಟು ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ 657, ಪರಿಶಿಷ್ಟ ಪಂಗಡಕ್ಕೆ 332, ಹಿಂದುಳಿದ ವರ್ಗದವರಿಗೆ 1185, ಆರ್ಥಿಕವಾಗಿ ಹಿಂದುಳಿದ ವರ್ಗ ದವರಿಗೆ 435 ಹಾಗೂ ಸಾಮಾನ್ಯ ವರ್ಗದವರಿಗೆ 1,846 ಹುದ್ದೆಗಳನ್ನು ಮೀಸಲಿಡಲಾಗಿದೆ. ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿನ ಒಟ್ಟು 4455 ಹುದ್ದೆಗೆ ಅರ್ಜಿ ಸಲ್ಲಿಸಲು ಆ.21 ಅಂತಿಮ ದಿನವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಗಸ್ಟ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆನ್ಲೈ ನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಆಗಸ್ಟ್ 21, 2024 ಕೊನೆ ದಿನ.

ಯಾವ ಬ್ಯಾಂಕ್, ಎಷ್ಟು ಹುದ್ದೆ?

ಕೆನರಾ ಬ್ಯಾಂಕ್ 750, ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ 360, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2000, ಬ್ಯಾಂಕ್ ಆಫ್ ಇಂಡಿಯಾ 885 ಪಂಜಾಬ್ ನ್ಯಾಷನಲ್ ಬ್ಯಾಂಕ್ 200, ಇಂಡಿಯನ್ ಒವರಸೀಸ್ ಬ್ಯಾಂಕ್ 260, ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಿಸಿವೆ.

ಅರ್ಜಿ ಸಲ್ಲಿಸಲು ಹಾಗೂ ನೋಂದಣಿಗೆ ಈ ಲಿಂಕ್‌ಗಳನ್ನು ನೋಡಬಹುದು: www.ibps.in ಮತ್ತು https://www.ibps.in/index.php/management-trainees-xiv/

ಶೈಕ್ಷಣಿಕ ಅರ್ಹತೆ: (21.08.2024ಕ್ಕೆ ಅನ್ವಯಿಸುವಂತೆ)

ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ.

ವಯೋಮಿತಿ: 01.08.2024 ಕನಿಷ್ಠ 20 ವರ್ಷ ಹಾಗೂ ಗರಿಷ್ಡ 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ ಅಭ್ಯರ್ಥಿಗಳು 02.08.1994 ಕ್ಕಿಂತ ಮುಂಚಿತವಾಗಿ ಮತ್ತು 01.08.2004ರ ನಂತರ ಜನಿಸಿರಬಾರದು. ಸರ್ಕಾರದ ನಿಯಮಾನುಸಾರ ಎಸ್.ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳಷ್ಟು ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ , ಒಬಿಸಿ ಹಾಗೂ ಇತರೆ ಅಭ್ಯರ್ಥಿಗಳಿಗೆ: ₹850. ಪ.ಜಾ, ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಯೋಧರಿಗೆ ₹175. ನೋಂದಣಿ ನಂತರ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕ/ಇಂಟಿಮೇಷನ್ ಶುಲ್ಕಗಳನ್ನು ಹಾಗೂ ಆನ್‌ಲೈನ್ ಪಾವತಿಗಾಗಿ ಬ್ಯಾಂಕ್ ವಹಿವಾಟು ಶುಲ್ಕಗಳನ್ನು ಅಭ್ಯರ್ಥಿಯು ಭರಿಸಬೇಕಾಗುತ್ತದೆ.

ಶುಲ್ಕ ಪಾವತಿ: ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.

ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ, ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಭಾರತ ಸರ್ಕಾರದ ಮಾರ್ಗ ಸೂಚಿಗಳ ಪ್ರಕಾರ ಕೆನೆ ಪದ ರಹಿತ (Non creamy layer) ಷರತ್ತಿನೊಂದಿಗೆ ಇತ್ತೀಚಿನ ಒಬಿಸಿ ಪ್ರಮಾಣಪತ್ರವನ್ನು ಹೊಂದಿರಬೇಕು.

ಪರೀಕ್ಷಾ ಪ್ರಕ್ರಿಯೆ: ಇದೇ ಅಕ್ಟೋಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ, ನವೆಂಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ಎರಡೂ ಪರೀಕ್ಷೆಗಳು ಆನ್‌ಲೈನ್‌ನಲ್ಲಿ ನಡೆಯುಲಿವೆ. ಸಂದರ್ಶನ 2025ರ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆ ಇದೆ. ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವ ಭಾವಿ ಪರೀಕ್ಷೆ ಮತ್ತು 5 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳು

ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್): ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ- ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

ಮುಖ್ಯ ಪರೀಕ್ಷೆ: ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು

ಪೂರ್ವ ಭಾವಿ ಪರೀಕ್ಷೆಗೆ ತರಬೇತಿ: ಐಬಿಪಿಎಸ್ ವತಿಯಿಂದ ಎಸ್.ಸಿ/ಎಸ್.ಟಿ/ಅಲ್ಪ ಸಂಖ್ಯಾತ ವರ್ಗದ ಅಭ್ಯರ್ಥಿಗಳು, ಮಾಜಿ ಸೈನಿಕರು, ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ತರಬೇತಿ ನೀಡಲಾಗುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಕೋರಿಕೆ ಸಲ್ಲಿಸಬೇಕು.  ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ಮತ್ತು ಮೈಸೂರಿನಲ್ಲಿ ಉಚಿತ ಪರೀಕ್ಷಾ ತರಬೇತಿಯನ್ನೂ ಸೆಪ್ಟೆಂಬರ್ ತಿಂಗಳಲ್ಲಿ ನೀಡಲಾಗುತ್ತದೆ. ತರಬೇತಿ ಸ್ಥಳದ ಖರ್ಚು ವೆಚ್ಚ ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸಬೇಕಾಗುತ್ತದೆ.

ಕ್ರೆಡಿಟ್ ಇತಿಹಾಸ

(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (Credit History) ಹೊಂದಿರಬೇಕು. ಬ್ಯಾಂಕ್ ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್ (CIBIL)ಸ್ಕೋರ್ ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ (NOC)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ /ರದ್ದುಗೊಳಿಸಲಾಗುತ್ತದೆ.

ಇದನ್ನೂ ಓದಿ: Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

ಗಮನಿಸಿ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯ ವಿಲ್ಲ.

ಅರ್ಜಿ ಸಲ್ಲಿಸುವಾಗ ಗಮನಿಸಿ:

  • ಅಭ್ಯರ್ಥಿ ಬ್ಯಾಂಕ್ ಆಯ್ಕೆ ಮಾಡಿಕೊಳ್ಳುವುದಕ್ಕೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಬ್ಯಾಂಕ್ ಆದ್ಯ ತೆಯ ಆದೇಶವನ್ನು ಅಳವಡಿಸಲಾಗಿದೆ.
  • ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್‌ಗಳ ಆದ್ಯತೆಯ ಕ್ರಮವನ್ನು ಅಗತ್ಯ ವಾಗಿ ಸೂಚಿಸಬೇಕು.
  • ಯಾವ್ಯಾವ ಬ್ಯಾಂಕ್ ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಹಾಗೂ ನಮ್ಮ ರಾಜ್ಯದಲ್ಲಿ ಶಾಖೆಗಳಿವೆಯಾ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ.
  • ಒಮ್ಮೆ ನೀವು ಆಯ್ಕೆಯಾದರೆ ನಂತರದ ದಿನಗಳಲ್ಲಿ ಬ್ಯಾಂಕ್/ಸ್ಥಳ ಬದಲಾವಣೆಗಾಗಿ ಸಲ್ಲಿಸುವ ವಿನಂತಿಯನ್ನು ಪರಿಗಣಿಸಲಾ ಗುವುದಿಲ್ಲ.
  • ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ ಮೆಂಟ್ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿಸಲ್ಲಿಸುವಾಗ ಬಹಳ ಎಚ್ಚರಿಕೆ ವಹಿಸುವುದು ಒಳಿತು.

ಆಫೀಸರ್ಸ್‌ ಆಯ್ಕೆಗೆ ಮೂರು ಹಂತಗಳ ಪರೀಕ್ಷೆ

ನೇಮಕಾತಿ ಪ್ರಕ್ರಿಯೆ

ಪೂರ್ವ ಭಾವಿ ಪರೀಕ್ಷೆ

ಪೂರ್ವ ಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕು. ಆದರೆ ಒಟ್ಟಾರೆ ಹೆಚ್ಚು ಅಂಕಗಳಿಸುವುದು ಮುಖ್ಯ . ಪೂರ್ವ ಭಾವಿ ಪರೀಕ್ಷೆ ಒಂದು ಗಂಟೆ ಅವಧಿಯದ್ದು (ಪ್ರತಿ ಪತ್ರಿಕೆಗೂ 20 ನಿಮಿಷಗಳು). 100 ಅಂಕಗಳಿರುತ್ತವೆ (ಅಂದರೆ ಪ್ರತಿ ಪ್ರಶ್ನೆಗೆ ಒಂದೊಂದು ಅಂಕ ನಿಗದಿ) ಇದರಲ್ಲಿ ಇಂಗ್ಲಿಷ್ ಭಾಷಾ ಪತ್ರಿಕೆಗೆ 30, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ ಗೆ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕೆಂಬ ನಿಯಮವಿದೆ. ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ.ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ.

ಮುಖ್ಯ ಪರೀಕ್ಷೆ ವಿವರಗಳು

ಕ್ರ. ಸಂವಿಷಯ ಹಾಗೂ ಪತ್ರಿಕೆಪ್ರಶ್ನೆಗಳುಅಂಕಗಳುಅವಧಿ
Iರೀಸನಿಂಗ್ ಮತ್ತು ಕಂಪ್ಯೂಟರ್ ಆಪ್ಟಿಟ್ಯೂಡ್456060 ನಿಮಿಷಗಳು
IIಜನರಲ್/ಎಕಾನಮಿ/ಬ್ಯಾಂಕಿಂಗ್ ಅವೇರ್ನೆ ಸ್404035 ನಿಮಿಷಗಳು
IIIಇಂಗ್ಲಿಷ್ ಭಾಷೆ354040 ನಿಮಿಷಗಳು
IVಡೇಟಾಅನಾಲಿಸಿಸ್ಆ್ಯಂಡ್ ಇಂಟರ್ ಪ್ರಿಟೇಷನ್356045 ನಿಮಿಷಗಳು
 ಒಟ್ಟು1552003 ಗಂಟೆಗಳು
Vಪತ್ರ ಬರವಣಿಗೆ ಮತ್ತು ಪ್ರಬಂಧ022530 ನಿಮಿಷಗಳು

ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇರುತ್ತವೆ. ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯದ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದ 0.25 ಅಂಕ ವನ್ನು ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ. ಪ್ರಶ್ನೆಗೆ ಉತ್ತರ ಗುರುತಿಸಲಾಗಿಲ್ಲದಿದ್ದರೆ ಅಂಕ ಕಳೆಯುವುದಿಲ್ಲ. ಮುಖ್ಯ ಪರೀಕ್ಷೆ ಮುಗಿಯುತ್ತಿದ್ದಂತೆ ಇಂಗ್ಲಿಷ್ ಭಾಷೆಗೆ (Letter Writing & Essay- with two questions) ಸಂಬಂಧಿಸಿದಂತೆ 25 ಅಂಕಗಳಿಗೆ ಡಿಸ್ಸ್ಕ್ರಿಟಿವ್ ಟೆಸ್ಟ್ ನಡೆಸಲಾಗುತ್ತದೆ. ಅವಧಿ 30 ನಿಮಿಷಗಳು. ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿಯೇ ಉತ್ತರ ಬರೆಯಬೇಕು. ಇಂಗ್ಲಿಷ್ ಭಾಷೆಯ ವಿವರಣಾತ್ಮಕ ಪೇಪರ್ (ಪತ್ರ ಬರವಣಿಗೆ ಮತ್ತು ಪ್ರಬಂಧ) ಅನ್ನು ಸ್ವಯಂಚಾಲಿತ ಸ್ಕೋರಿಂಗ್ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ. ಬರವಣಿಗೆಯ ಪ್ರಾವೀಣ್ಯಕ್ಕೆ ಸಂಬಂಧಿಸಿದಂತೆ ವೈಶಿಷ್ಟಗಳನ್ನು ಗುರುತಿಸುವುದು ಇದರ ಕಾರ್ಯ ವಿಧಾನವಾಗಿದೆ. ಆಂಗ್ಲ ಭಾಷೆಯಲ್ಲಿ

ಇದನ್ನೂ ಓದಿ | Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೆನಪಿಡಿ: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ .

ಈ ಎರಡೂ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತ ಸಂದರ್ಶನಕ್ಕೆ ಅರ್ಹರಾಗುತ್ತಾರೆ.

ಹಂತ-III ಸಂದರ್ಶನ.

ಆಯ್ಕೆ ಪಟ್ಟಿ: ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ-II ಮತ್ತು ಹಂತ-III ಎರಡರಲ್ಲೂ ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು. ಸಂದರ್ಶನಕ್ಕೆ ನಿಗದಿ ಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಶೇ 40 (SC/ST/OBC/PWBD ಅಭ್ಯರ್ಥಿಗಳಿಗೆ ಶೇ 35).

ಪರೀಕ್ಷೆ ಕುರಿತು ಇನ್ನಷ್ಟು ವಿವರಗಳಿಗಾಗಿ www.ibps.in ಮತ್ತುhttps://www.ibps.in/index.php/management-trainees-xiv/ ಜಾಲ ತಾಣ ನೋಡಿ.

ಹಾಗೂ ಬರವಣಿಗೆಯಲ್ಲಿ ಪರೀಕ್ಷೆ ಬರೆಯುವವರ ಪ್ರಾವೀಣ್ಯವನ್ನು ವಸ್ತುನಿಷ್ಠ ರೀತಿಯಲ್ಲಿ ಮೌಲ್ಯಮಾಪನ ಮಾಡುವ ವಿಶಿಷ್ಟ ವಿಧಾನವಾಗಿದೆ.

Continue Reading

ವಿದೇಶ

Worlds Oldest Office Worker: ನಿವೃತ್ತಿ ಬಗ್ಗೆ ಇನ್ನೂ ಯೋಚನೆಯನ್ನೇ ಮಾಡಿಲ್ಲವಂತೆ 94ರ ಈ ಅಜ್ಜಿ!

ಜಪಾನಿನ ಯಸುಕೊ ತಮಾಕಿ ಅವರಿಗೆ ವಯಸ್ಸು 94 ಕಳೆದರೂ ಇನ್ನೂ ನಿವೃತ್ತಿ (Worlds Oldest Office Worker: ನಿವೃತ್ತಿಯ ಬಗ್ಗೆ ಇನ್ನೂ ಯೋಚನೆಯನ್ನೇ ಮಾಡಿಲ್ಲವಂತೆ ಈ ಅಜ್ಜಿ) ಬಗ್ಗೆ ಯೋಚಿಸಿಲ್ಲ. ಎರಡನೇ ವಿಶ್ವ ಯುದ್ಧದ ಸಮಯದಿಂದಲೂ ಕೆಲಸ ಮಾಡುತ್ತಿರುವ ಇವರು ಒಸಾಕಾದ ನಿಶಿ ವಾರ್ಡ್‌ನಲ್ಲಿರುವ ಸನ್‌ಕೋ ಇಂಡಸ್ಟ್ರೀಸ್ ನಲ್ಲಿ 68 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ.

VISTARANEWS.COM


on

By

Worlds Oldest Office Worker
Koo

40-50 ವರ್ಷವಾದರೆ ಸಾಕು ನಾವು ಕೆಲಸದಿಂದ ನಿವೃತ್ತಿ (retirement) ಪಡೆದು ಯಾವಾಗ ಮನೆಯಲ್ಲಿ ವಿಶ್ರಾಂತಿಯಲ್ಲಿ ಕಾಲ ಕಳೆಯುವುದು ಎಂದು ಯೋಚಿಸುತ್ತೇವೆ. ಆದರೆ ಈಕೆ ಮಾತ್ರ ವಯಸ್ಸು 94 ಆದರೂ ಇನ್ನೂ ನಿವೃತ್ತಿಯ ಬಗ್ಗೆ ಯೋಚಿಸಿಯೇ (Worlds Oldest Office Worker) ಇಲ್ಲವಂತೆ. ಯುವಕರನ್ನೂ ನಾಚಿಸುವಂತೆ ಈಗಲೂ ಬೆಳಗ್ಗಿನಿಂದ ಸಂಜೆಯವರೆಗೆ ಕಂಪೆನಿಯಲ್ಲಿ ಓಡಾಡುತ್ತಾಳೆ, ತನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿ ಮನೆಗೆ ತೆರಳುತ್ತಾಳೆ.

ಜಪಾನಿನ (japan) ಯಸುಕೊ ತಮಾಕಿ (Yasuko Tamaki) ಅವರ ವಯಸ್ಸಿಗ 94. ಎರಡನೇ ವಿಶ್ವ ಯುದ್ಧದ (2nd world war) ಸಮಯದಿಂದಲೂ ಕೆಲಸ ಮಾಡುತ್ತಿರುವ ಇವರನ್ನು ಜಪಾನಿನ ಕೆಲಸದ ಪ್ರತಿಭೆ ಎಂದು ಕರೆಯಲಾಗುತ್ತದೆ.

1930ರ ಮೇ 15ರಂದು ಜನಿಸಿರುವ ತಮಾಕಿ 1956ರಿಂದ ಒಸಾಕಾದ ನಿಶಿ ವಾರ್ಡ್‌ನಲ್ಲಿರುವ ಸನ್‌ಕೋ ಇಂಡಸ್ಟ್ರೀಸ್ ನಲ್ಲಿ ಸರಿಸುಮಾರು 68 ವರ್ಷಗಳಿಂದ ಕೆಲಸ ಮಾಡುತ್ತಿರುವ ಇವರು ಈಗ ವಿಶ್ವದ ಅತ್ಯಂತ ಹಿರಿಯ ಉದ್ಯೋಗಿಯಾಗಿ ದಾಖಲೆ ಬರೆದಿದ್ದರೆ. ಅಲ್ಲದೇ ಕಂಪೆನಿಯಲ್ಲಿ ಅವರ ಸುದೀರ್ಘ ಸೇವೆಗಾಗಿ ಅವರು ಈಗ ಹಳೆಯ ಕಚೇರಿ ವ್ಯವಸ್ಥಾಪಕರಾಗಿ ಗುರುತಿಸಲ್ಪಟ್ಟಿದ್ದಾರೆ.


ಕಂಪೆನಿಯ ಅಧ್ಯಕ್ಷರೂ ತಮಾಕಿ ಅವರಿಗಿಂತ 12 ವರ್ಷ ಕಿರಿಯರಾಗಿದ್ದಾರೆ. ವಾರದಲ್ಲಿ 5 ದಿನಗಳ ಕಾಲ ಕೆಲಸ ಮಾಡುವ ಇವರು ಪ್ರತಿದಿನ ಬೆಳಗ್ಗೆ 9 ಗಂಟೆಗೆ ಪ್ರಾರಂಭಿಸಿ ಸಂಜೆ 5 ಗಂಟೆಗೆ ಮುಗಿಸುತ್ತಾರೆ.
ಕಂಪ್ಯೂಟರ್ ಕೆಲಸದಲ್ಲಿ ಪರಿಣತಿ ಪಡೆದಿರುವ ಇವರು ಯುವಕರಿಗಿಂತ ವೇಗವಾಗಿ ಕಂಪ್ಯೂಟರ್ ನಲ್ಲಿ ಕೆಲಸವನ್ನು ಮಾಡಿ ಮುಗಿಸುತ್ತಾರೆ.

ತಮಾಕಿ ಅವರಿಗೆ ತಮ್ಮ ಮೇಜಿನ ಬಳಿಯೇ ಸಾಯಬೇಕು ಎನ್ನುವ ಇಚ್ಛೆ ಇದೆ ಎನ್ನುತ್ತಾರೆ ಕಂಪೆನಿಯ ವ್ಯವಹಾರಗಳ ವಿಭಾಗದ ಮುಖ್ಯಸ್ಥ ಹಿರೋಹಿಕೊ ಸಾಟೊ ಹೇಳಿದರು.

ಕಂಪೆನಿಯಲ್ಲಿ ಸುದೀರ್ಘ ವೃತ್ತಿಜೀವನವನ್ನು ನಡೆಸಿರುವ ತಮಾಕಿ ಪ್ರಸ್ತುತ ಹೊಸ ಉದ್ಯೋಗಿಗಳಿಗೆ ತರಬೇತಿ ನೀಡುತ್ತಾರೆ, ಕಂಪೆನಿಯ ಸಾಮಾನ್ಯ ವ್ಯವಹಾರಗಳ ವಿಭಾಗದಲ್ಲಿ ಲೆಕ್ಕಪತ್ರ ನಿರ್ವಹಣೆ ಮತ್ತು ಇತರ ಕ್ಲೆರಿಕಲ್ ಕಾರ್ಯವಿಧಾನಗಳನ್ನು ನಡೆಸುತ್ತಾರೆ. ಕಂಪೆನಿಯಲ್ಲಿ ಈಗ 430 ಕ್ಕೂ ಹೆಚ್ಚು ಉದ್ಯೋಗಿಗಳಿದ್ದು, ತಮಾಕಿ ಅವರು 1956 ರಲ್ಲಿ ವೃತ್ತಿ ಪ್ರಾರಂಭಿಸಿದಾಗ ಕೇವಲ 20 ಮಂದಿಯಷ್ಟೇ ಇದ್ದರು. ಕಂಪೆನಿಯ ಸಂಪೂರ್ಣ ಬೆಳವಣಿಗೆಯನ್ನು ಅವರು ವೀಕ್ಷಿಸಿದ್ದಾರೆ.

40ನೇ ವಯಸ್ಸಿನಲ್ಲಿ ತಮಾಕಿ ಅವರು ವಿಭಾಗದ ಮುಖ್ಯಸ್ಥರಾದರು. ನಿವೃತ್ತಿಯ ವಯಸ್ಸನ್ನು ದಾಟಿದ ಮೇಲೂ ಅವರು ನಿವೃತ್ತಿಯಾಗುವ ಯಾವುದೇ ಯೋಜನೆಯನ್ನು ಹೊಂದಿಲ್ಲ. ಅವರು ತಮ್ಮ ಕೌಶಲವನ್ನು ಬೆಳೆಸಿಕೊಳ್ಳಲು ತರಬೇತಿಯನ್ನು ಪಡೆಯುತ್ತಲೇ ಇರುತ್ತಾರೆ. 67 ನೇ ವಯಸ್ಸಿನಲ್ಲಿ ಕಂಪ್ಯೂಟರ್ ಕಲಿತಿರುವ ಅವರು, 70 ನೇ ವಯಸ್ಸಿನಲ್ಲಿ ಸ್ಕೀ ರೆಸಾರ್ಟ್‌ಗೆ ಹೋಗಿದ್ದರು. 86 ನೇ ವಯಸ್ಸಿನಲ್ಲಿ ತಮ್ಮ ಶಿಕ್ಷಣವನ್ನು ಮುಂದುವರಿಸುವ ನಿರ್ಧಾರ ಕೈಗೊಂಡರು.


ಅಧಿಕೃತ ನಿವೃತ್ತಿ ವಯಸ್ಸು ಎಂದರೆ ಏನೂ ಅಲ್ಲ ಎನ್ನುವ ತಮಾಕಿ, ನನಗೆ ಭವಿಷ್ಯವಿದೆ. ನಾಳೆಗಾಗಿ ನಾನು ವರ್ತಮಾನದಲ್ಲಿ ಬಲವಾಗಿ ಬದುಕುತ್ತೇನೆ ಎನ್ನುತ್ತಾರೆ.


ಗಿನ್ನೆಸ್ ದಾಖಲೆ

90 ನೇ ವಯಸ್ಸಿನಲ್ಲಿ ವಿವಿಧ ಸಾಮಾಜಿಕ ಮಾಧ್ಯಮದ ಮೂಲಕ ಹೆಚ್ಚು ಪ್ರಚಾರ ಪಡೆದ ಅವರನ್ನು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್‌ ಸಂಸ್ಥೆಯು ಗುರುತಿಸಿದೆ. ವಿಶ್ವದ ಅತ್ಯಂತ ಹಳೆಯ ಸಾಮಾನ್ಯ ವ್ಯವಹಾರಗಳ ವಿಭಾಗದ ಉದ್ಯೋಗಿ ಎಂಬ ಪ್ರಮಾಣಪತ್ರವನ್ನು ನೀಡಿ ಗೌರವಿಸಿದೆ.

ಇದನ್ನೂ ಓದಿ: Indian origin family killed: ಟೆಕ್ಸಾಸ್‌ನಲ್ಲಿ ಭೀಕರ ಅಪಘಾತ; ಭಾರತೀಯ ಮೂಲದ ದಂಪತಿ, ಮಗಳು ದುರ್ಮರಣ

ಜೀವನದಲ್ಲಿ ಮದುವೆಯನ್ನೇ ಆಗದ ತಮಾಕಿ ಕಂಪೆನಿಯನ್ನೇ ತನ್ನ ಸಂಗಾತಿಯನ್ನಾಗಿ ಮಾಡಿಕೊಂಡಿದ್ದಾರೆ. ಈ ವಿಶ್ವದಲ್ಲಿ ನಾನೊಬ್ಬನೇ ಎಷ್ಟು ದೂರ ನಡೆಯಲು ಸಾಧ್ಯವೋ ಎಂಬುದನ್ನು ನೋಡಲು ಶ್ರಮಿಸುತ್ತೇನೆ ಎನ್ನುತ್ತಾರೆ ತಮಾಕಿ.

Continue Reading
Advertisement
ಕರ್ನಾಟಕ18 mins ago

Muda Scam: ದೆಹಲಿಯಲ್ಲಿ ರಾಹುಲ್‌ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ; ಕಾನೂನು ಹೋರಾಟದ ಬಗ್ಗೆ ಚರ್ಚೆ

Uttara Kannada News
ಉತ್ತರ ಕನ್ನಡ27 mins ago

Uttara Kannada News: ಹೊಸ ಆಧಾರ್ ನೋಂದಣಿ, ತಿದ್ದುಪಡಿಗೆ ಅವಕಾಶ

Invest Karnataka
ಬೆಂಗಳೂರು29 mins ago

Invest Karnataka: ಇಂಧನ ತಂತ್ರಜ್ಞಾನ; ರಾಜ್ಯದಲ್ಲಿ 8,300 ಕೋಟಿ ರೂ. ಹೂಡಿಕೆ ಮಾಡಲಿರುವ ಷೆರ್ವನ್‌ ಇಂಡಿಯಾ

UPSC Exam calendar
ದೇಶ56 mins ago

UPSC Exam calendar: UPSC ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್‌ ರಿಲೀಸ್‌; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

7th pay commission
ಕರ್ನಾಟಕ1 hour ago

7th pay commission: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನ ಶ್ರೇಣಿ ಪ್ರಕಟ; ಯಾರಿಗೆ ಎಷ್ಟು ಏರಿಕೆ?

Viral Video
Latest1 hour ago

Viral Video: ವಿಮಾನ ನಿಲ್ದಾಣದಲ್ಲಿ ಹೃದಯಾಘಾತ; ಸಿಪಿಆರ್ ಮಾಡಿ ಜೀವ ಉಳಿಸಿದ ಅಧಿಕಾರಿಗಳು

Recurring Deposit
ಮನಿ-ಗೈಡ್2 hours ago

Recurring Deposit: ಸಣ್ಣ, ಆರಂಭಿಕ ಹೂಡಿಕೆದಾರರಿಗೆ ಸೂಕ್ತ ಪೋಸ್ಟ್ ಆಫೀಸ್‌ನ ಆರ್‌ಡಿ; ಏನಿದರ ಲಾಭ?

Kannada New Movie
ಬೆಂಗಳೂರು2 hours ago

Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

UPSC Admit Card
ಪ್ರಮುಖ ಸುದ್ದಿ2 hours ago

UPSC Admit Card: NDA ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆಗೊಳಿಸಿದ UPSC; ಎಲ್ಲಿ ಡೌನ್ಲೋಡ್‌ ಮಾಡಬಹುದು?

Non Vegetarian Population
ಆಹಾರ/ಅಡುಗೆ2 hours ago

Non Vegetarian Population: ಜಗತ್ತಿನಲ್ಲಿ ಕುಸಿಯುತ್ತಿದೆ ಮಾಂಸಾಹಾರಿಗಳ ಸಂಖ್ಯೆ! ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌