Kolkata Doctor Murder Case: ಕೋಲ್ಕತಾ ವೈದ್ಯೆಯ ಹಂತಕನಲ್ಲಿ ಕ್ರೂರ ಮೃಗದ ಲಕ್ಷಣ! ಪಶ್ಚಾತ್ತಾಪವೇ ಇಲ್ಲ - Vistara News

ಕ್ರೈಂ

Kolkata Doctor Murder Case: ಕೋಲ್ಕತಾ ವೈದ್ಯೆಯ ಹಂತಕನಲ್ಲಿ ಕ್ರೂರ ಮೃಗದ ಲಕ್ಷಣ! ಪಶ್ಚಾತ್ತಾಪವೇ ಇಲ್ಲ

ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದ ಕೋಲ್ಕತಾ ವೈದ್ಯೆಯ ಕೊಲೆ (Kolkata Doctor Murder Case) ಆರೋಪಿ ಸಂಜಯ್ ರಾಯ್ ವಿಚಾರಣೆ ವೇಳೆ ಯಾವುದೇ ಪಶ್ಚಾತ್ತಾಪವನ್ನು ತೋರಿಸಿಲ್ಲ. ಯಾವುದೇ ಹಿಂಜರಿಕೆಯನ್ನು ಪ್ರದರ್ಶಿಸದೆ ಆತ ಸಂಪೂರ್ಣ ಅಪರಾಧವನ್ನು ತನಿಖಾ ಸಂಸ್ಥೆಗೆ ವಿವರಿಸಿದ್ದಾನೆ. ಆತ ಮಹಾ ಕ್ರೂರಿ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

VISTARANEWS.COM


on

Kolkata Doctor Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾದ ವೈದ್ಯೆಯ ಅತ್ಯಾಚಾರ, ಕೊಲೆ (Kolkata Doctor Murder Case) ಪ್ರಕರಣದ ಆರೋಪಿಯಾಗಿ ಬಂಧಿಸಲ್ಪಟ್ಟಿರುವ ಸಂಜಯ್ ರಾಯ್‌ಗೆ (Sanjay Roy) ತಾನು ಎಸಗಿದ ಈ ಕ್ರೂರ ಕೃತ್ಯದ ಬಗ್ಗೆ ಒಂದಿಷ್ಟೂ ಪಶ್ಚಾತ್ತಾಪವಿಲ್ಲ ಎಂದು ಸಿಬಿಐ (CBI) ಅಧಿಕಾರಿಯೊಬ್ಬರು ಹೇಳಿದ್ದಾರೆ. ಆತನ ಮನಸ್ಥಿತಿಯ ಪರೀಕ್ಷೆ ನಡೆಸಲಾಗಿದ್ದು, ಆತ ವಿಕೃತ ಮತ್ತು ಅಶ್ಲೀಲತೆಯ ತೀವ್ರ ವ್ಯಸನಿ ಎಂಬುದು ತಿಳಿದು ಬಂದಿದೆ ಎಂದು ಅವರು ಹೇಳಿದ್ದಾರೆ.

ಅತ್ಯಾಚಾರಿ ಸಂಜಯ್‌ನಲ್ಲಿ ಕ್ರೂರ ಪ್ರಾಣಿಯ ಪ್ರವೃತ್ತಿ ಇದೆ. ವಿಚಾರಣೆಯ ಸಮಯದಲ್ಲಿ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯೊಳಗೆ ನಡೆದ ಭೀಕರ ಹತ್ಯೆಗೆ ಅವನು ಯಾವುದೇ ಪಶ್ಚಾತ್ತಾಪವನ್ನು ತೋರಿಸಲಿಲ್ಲ ಎಂದು ಅವರು ಹೇಳಿದ್ದಾರೆ. ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದ ಅಪರಾಧಕ್ಕಾಗಿ ಸಂಜಯ್ ರಾಯ್ ಯಾವುದೇ ಪಶ್ಚಾತ್ತಾಪವನ್ನು ತೋರಿಸಿಲ್ಲ. ಯಾವುದೇ ಹಿಂಜರಿಕೆಯನ್ನು ಪ್ರದರ್ಶಿಸದೆ ಆತ ಸಂಪೂರ್ಣ ಅಪರಾಧವನ್ನು ತನಿಖಾ ಸಂಸ್ಥೆಗೆ ವಿವರಿಸಿದ್ದಾನೆ. ಆ ವ್ಯಕ್ತಿ ಯಾವುದೇ ಪಶ್ಚಾತ್ತಾಪವನ್ನು ತೋರಿಸಲಿಲ್ಲ. ಪ್ರತಿ ನಿಮಿಷದ ವಿವರವನ್ನು ಯಾವುದೇ ಟೆನ್ಶನ್‌ ಇಲ್ಲದೆ ಸಂಪೂರ್ಣ ಘಟನೆಯನ್ನು ವಿವರಿಸಿದ್ದಾನೆ. ಅವನಿಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ತೋರುತ್ತಿದೆ ಎಂದು ಸಿಬಿಐ ಅಧಿಕಾರಿ ತಿಳಿಸಿದ್ದಾರೆ.

ಕೋಲ್ಕತ್ತಾ ಆಸ್ಪತ್ರೆಯ ವೈದ್ಯೆ ತಮ್ಮ 36 ಗಂಟೆಗಳ ಸುದೀರ್ಘ ಪಾಳಿಯ ಬಳಿಕ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ವಿಶ್ರಮಿಸಲು ಹೋಗಿದ್ದರು. ಮರಣೋತ್ತರ ಪರೀಕ್ಷೆಯ ವರದಿಯು ಆಕೆಯ ಮೇಲೆ ಅತ್ಯಾಚಾರವೆಸಗಲಾಗಿದೆ ಮತ್ತು ತೀವ್ರವಾಗಿ ಥಳಿಸಲಾಗಿದೆ ಎಂದು ಸೂಚಿಸಿದೆ. ಸಂತ್ರಸ್ತೆಯ ಮೇಲೆ 16 ಬಾಹ್ಯ ಮತ್ತು ಒಂಬತ್ತು ಆಂತರಿಕ ಗಾಯವಾಗಿತ್ತು. ಕತ್ತು ಹಿಸುಕಿದ್ದರಿಂದ ಆಕೆ ಸಾವನ್ನಪ್ಪಿದ್ದಳು.

Kolkata Doctor Murder Case
Kolkata Doctor Murder Case


ಅಪರಾಧ ನಡೆದ ಒಂದು ದಿನದ ಅನಂತರ ಸಂಜಯ್ ರಾಯ್‌ನನ್ನು ಬಂಧಿಸಲಾಗಿದೆ. ಆತ ಅಪರಾಧ ನಡೆದ ಸಮಯದಲ್ಲಿ ಕಟ್ಟಡವನ್ನು ಪ್ರವೇಶಿಸುವುದನ್ನು ಕೆಲವರು ನೋಡಿದ್ದಾರೆ. ಅಲ್ಲದೇ ಆತನ ಬ್ಲೂಟೂತ್ ಹೆಡ್‌ಫೋನ್‌ಗಳು ಅಪರಾಧದ ಸ್ಥಳದ ಬಳಿ ಪತ್ತೆಯಾಗಿದ್ದವು. ಸಂಜಯ್ ರಾಯ್‌ನ ಮೊಬೈಲ್ ಫೋನ್‌ನಲ್ಲಿ ಹಲವಾರು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಅಪರಾಧದ ಸ್ಥಳದಲ್ಲಿ ಆರೋಪಿಯ ಉಪಸ್ಥಿತಿಯನ್ನು ತಾಂತ್ರಿಕ ಮತ್ತು ವೈಜ್ಞಾನಿಕ ಪುರಾವೆಗಳು ಸೂಚಿಸುತ್ತವೆ ಎಂದು ಅಧಿಕಾರಿ ಹೇಳಿದರು.

ಆಗಸ್ಟ್ 8ರಂದು ಬೆಳಗ್ಗೆ 11 ಗಂಟೆಗೆ ಆತ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡು ಬಂದಿದ್ದಾನೆ. ಆಗಸ್ಟ್ 9ರಂದು ಬೆಳಗ್ಗೆ 4 ಗಂಟೆಗೆ ಆತ ಕಟ್ಟಡಕ್ಕೆ ಪ್ರವೇಶಿಸಿರುವುದು ಕೆಮೆರಾದಲ್ಲಿ ಸೆರೆಯಾಗಿದೆ. ಆಗಸ್ಟ್ 9ರಂದು ಬೆಳಗ್ಗೆ 3ರಿಂದ 5 ಗಂಟೆಯ ನಡುವೆ ವೈದ್ಯೆಯನ್ನು ಕೊಲೆ ಮಾಡಲಾಗಿದ್ದು, ಸಂತ್ರಸ್ತೆಯ ಕೊಲೆಗೆ ದೊಡ್ಡ ಸಂಚು ಕಾರಣವೇ ಎಂದು ಸಿಬಿಐ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: Kolkata Doctor Murder Case: ಮಮತಾ ಬ್ಯಾನರ್ಜಿ ಆಡಳಿತದ ಕರಾಳ ಅಧ್ಯಾಯ ತೆರೆದಿಟ್ಟಿದೆ ಕೋಲ್ಕತಾ ವೈದ್ಯೆ ಕೊಲೆ ಪ್ರಕರಣ

ಆರ್‌ ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ. ಸಂದೀಪ್ ಘೋಷ್ ಅವರನ್ನು ಹಲವು ದಿನಗಳಿಂದ ವಿಚಾರಣೆ ನಡೆಸಲಾಗಿದೆ. ಕೋಲ್ಕತ್ತಾ ಪೊಲೀಸರು ಡಾ. ಸಂದೀಪ್ ಘೋಷ್ ವಿರುದ್ಧದ ಹಣಕಾಸಿನ ಅವ್ಯವಹಾರದ ಆರೋಪಗಳ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಸಂದೀಪ್ ಘೋಷ್ ಅವರ ಮಾಜಿ ಸಹೋದ್ಯೋಗಿ ಅಖ್ತರ್ ಅಲಿ “ಮೃತ ದೇಹಗಳ ವ್ಯವಹಾರ”ದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪವೂ ಕೇಳಿ ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assault Case: ಮಾರ್ಕ್ಸ್‌ ಕಡಿಮೆ ಬಂತೆಂದು 4ನೇ ತರಗತಿ ಬಾಲಕನಿಗೆ ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕ

Assault Case: ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಶಿಕ್ಷಕನ ದುರ್ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೈದಾಪುರ ಪಟ್ಟಣದ ಖಾಸಗಿ ಶಾಲಾ ಶಿಕ್ಷಕ ಡೆಲವಿನ್‌ ಎಂಬಾತ ವಿದ್ಯಾರ್ಥಿಗಳ ಮೇಲೆ ಇದೇ ರೀತಿ ಕ್ರೌರ್ಯ ಮೆರೆಯುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಈತ ಕುಮಾರ್‌ ಯುವರಾಜ್‌ ಎಂಬ ಬಾಲಕನನ್ನು ಅಮಾನುಷವಾಗಿ ಥಳಿಸಿದ್ದಾನೆ.

VISTARANEWS.COM


on

assault case
Koo

ಯಾದಗಿರಿ: ಕೆಲವು ದಿನಗಳ ಹಿಂದೆ ವಿಜಯನಗರದಲ್ಲಿ ಹೋಂವರ್ಕ್‌ ಮಾಡದಕ್ಕೆ ವಿದ್ಯಾರ್ಥಿಯನ್ನು ಮುಖ್ಯಶಿಕ್ಷಕಿಯೊಬ್ಬರು ವಿದ್ಯಾರ್ಥಿಯನ್ನು ಮನಸ್ಸೋಇಚ್ಛೆ ಥಳಿಸಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಗಣಿತದಲ್ಲಿ ಕಡಿಮೆ ಅಂಕ ಪಡೆದ ನಾಲ್ಕನೇ ತರಗತಿಯ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಶಿಕ್ಷಕನೋರ್ವ ಬಾರಿಸಿದ್ದಾನೆ(Assault Case).

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಶಿಕ್ಷಕನ ದುರ್ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೈದಾಪುರ ಪಟ್ಟಣದ ಖಾಸಗಿ ಶಾಲಾ ಶಿಕ್ಷಕ ಡೆಲವಿನ್‌ ಎಂಬಾತ ವಿದ್ಯಾರ್ಥಿಗಳ ಮೇಲೆ ಇದೇ ರೀತಿ ಕ್ರೌರ್ಯ ಮೆರೆಯುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಈತ ಕುಮಾರ್‌ ಯುವರಾಜ್‌ ಎಂಬ ಬಾಲಕನನ್ನು ಅಮಾನುಷವಾಗಿ ಥಳಿಸಿದ್ದಾನೆ. ಡೆಲವಿನ್‌ ವಿದ್ಯಾರ್ಥಿಯ ಬೆನ್ನಿಗೆ ಬಾಸುಂಡೆ ಬರುವಂತೆ ಥಳಿಸಿದ್ದಾನೆ ಎನ್ನಲಾಗಿದೆ. ಅಗಸ್ಟ್ 19 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಸೈದಾಪುರ ಠಾಣೆಯಲ್ಲಿ ಶಿಕ್ಷಕ ಡೆಲವಿನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಕೆಲವು ದಿನಗಳ ಹಿಂದೆ ವಿಜಯನಗರಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಹೋಮ್‌ ವರ್ಕ್ (Home Work) ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಾಲು ಊತ ಬರುವಂತೆ ಮುಖ್ಯ ಶಿಕ್ಷಕಿ (Assault Case) ಬಾರಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದಲ್ಲಿರುವ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.

ವಿಜ್ಞಾನ ವಿಷಯದ ಹೋಂ ವರ್ಕ್ ಮಾಡದಿದ್ದಕ್ಕೆ ಮುಖ್ಯ ಶಿಕ್ಷಕಿ ವಾಣಿ ಎಂಬುವವರು ವಿದ್ಯಾರ್ಥಿನಿಗೆ ಮನಬಂದಂತೆ ಹೊಡೆದಿದ್ದಾರೆ. ಮಾನಸ ಎಂಬಾಕೆಗೆ ಈ ಮೊದಲು ಅಪಘಾತ ಆಗಿದ್ದರಿಂದ ಕಾಲಿಗೆ ರಾಡ್ ಅಳವಡಿಸಲಾಗಿತ್ತು. ಮತ್ತೆ ಅದೇ ಕಾಲಿಗೆ ಶಿಕ್ಷಕಿ ವಾಣಿ ಸ್ಕೇಲ್‌ನಿಂದ ಜೋರಾಗಿ ಹೊಡೆದಿದ್ದಾರೆ. ಜೋರಾಗಿ ಹೊಡೆತದಿಂದಾಗಿ ಕಾಲು ಊದಿಕೊಂಡು ಬಾಲಕಿಗೆ ನಡೆದಾಡುವುದಕ್ಕೂ ಸಾಧ್ಯವಾಗಿಲ್ಲ.

ಇನ್ನೂ ಮನಸೋ ಇಚ್ಛೆ ಥಳಿಸಿದ ಶಿಕ್ಷಕಿ ವಾಣಿಯೇ ಬಾಲಕಿಯನ್ನು ಚಿತ್ರದುರ್ಗದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಎಲುಬು ಮತ್ತು ಮೂಳೆ ತಜ್ಞರಿಂದ ತಪಾಸಣೆ ಮಾಡಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಾಲಕಿಯ ಕಾಲಿಗೆ ಬ್ಯಾಂಡೇಜ್ ಹಾಕಿ ಸೂಕ್ತ ಚಿಕಿತ್ಸೆ ನೀಡಿ ವೈದ್ಯರು ಕಳಿಸಿದ್ದಾರೆ. ಇತ್ತ ಬಾಲಕಿಯನ್ನು ನೋಡಲೆಂದು ಪಾಲಕರು ಭಾನುವಾರ ಶಾಲೆಗೆ ಬಂದಿದ್ದಾರೆ. ಆಗಲೇ ಮಗಳ ಕಾಲಿನ ಸ್ಥಿತಿ ನೋಡಿ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಪೋಷಕರು ಬಳಿಕ ಮುಖ್ಯ ಶಿಕ್ಷಕಿ ವಾಣಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Chikkaballapur News: ವಿದ್ಯಾರ್ಥಿಯನ್ನು ಚುಡಾಯಿಸಿದ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ

Continue Reading

ಕರ್ನಾಟಕ

Lorry Accident: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; 16 ಕಾರ್ಮಿಕರಿಗೆ ಗಂಭೀರ ಗಾಯ

Lorry Accident: ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಮಿರಿಯಾಣದ ಸರ್ಕಾರಿ‌ ಆಸ್ಪತ್ರೆ ಸಮೀಪ ಅಪಘಾತ ನಡೆದಿದೆ. ಚಾಲಕ ಮದ್ಯ ಸೇವಿಸಿ ಚಾಲನೆ ಮಾಡಿದ್ದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

VISTARANEWS.COM


on

Lorry Accident
Koo

ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ 16 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Lorry Accident) ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಮಿರಿಯಾಣದ ಸರ್ಕಾರಿ‌ ಆಸ್ಪತ್ರೆ ಸಮೀಪ ನಡೆದಿದೆ. ಮಿರಿಯಾಣದಿಂದ ತಾಂಡೂರ್ ಕಡೆ ಹೊರಟಿದ್ದ ಲಾರಿ ಅಪಘಾತಕ್ಕೀಡಾಗಿದ್ದು, ಸ್ಥಳಕ್ಕೆ ಮಿರಿಯಾಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಲಕ ಕೃಷ್ಣ ಪಾನ‌ಮತ್ತನಾಗಿ ಲಾರಿ ಚಲಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಕಲಬುರಗಿ ಹಾಗೂ ಬೀದರ್ ಸರ್ಕಾರಿ‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅತ್ತೆ ಮನೆಗೆ ಬಂದ ಅಳಿಯನ ಅಟ್ಟಾಡಿಸಿದ ಕಾಡಾನೆ! ಮುಂದೇನಾಯ್ತು

Wild animals Attack
Wild animals Attack

ಹಾಸನ: ಅತ್ತೆ ಮನೆಗೆ ಬಂದ ಅಳಿಯನನ್ನು ಕಾಡಾನೆಯೊಂದು (Wild Animals Attack) ಅಟ್ಟಾಡಿಸಿಕೊಂಡು ಬಂದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಉದೇವಾರ ಗ್ರಾಮದಲ್ಲಿ ಘಟನೆ ನಡೆದಿದೆ.

ಕೋಲಾರ ಮೂಲದ ನಾಗೇಶ್ (35) ಎಂಬುವವರು ಉದೇವಾರ ಗ್ರಾಮದಲ್ಲಿದ್ದ ತಮ್ಮ ಅತ್ತೆ ಮನೆಗೆ ಬಂದಿದ್ದರು. ಊಟಕ್ಕೆ ಮೊಸರು ತರಲೆಂದು ಅಂಗಡಿಗೆ ತೆರಳುತ್ತಿದ್ದರು. ಅದ್ಯಾವ ಕಡೆಯಿಂದಲೋ ಓಡಿ ಬಂದ ಕಾಡಾನೆಯೊಂದು ನಾಗೇಶ್‌ರನ್ನು ಅಡ್ಡಗಟ್ಟಿತ್ತು.

ಕಾಡಾನೆಯಿಂದ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ ನಾಗೇಶ್‌ ಗಾಬರಿಯಲ್ಲಿ ಮುಗ್ಗರಿಸಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಗಾಯಗೊಂಡ ನಾಗೇಶ್‌ ಸಕಲೇಶಪುರ ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಾಯಾಳು ಆರೋಗ್ಯ ವಿಚಾರಣೆಗೆ ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Prabhas: ಶಾರುಖ್, ಸಲ್ಮಾನ್ ಹಿಂದಿಕ್ಕಿ ‘ಅತ್ಯಂತ ಜನಪ್ರಿಯ ಪುರುಷ ತಾರೆ’ಯಾಗಿ ಹೊರಹೊಮ್ಮಿದ ಪ್ರಭಾಸ್!

ಕೊಚ್ಚಿ ಹೋಗುತ್ತಿದ್ದ ಹಸುವನ್ನು ರಕ್ಷಿಸಿದ ಯುವಕರು

ನೋಡ ನೋಡುತ್ತಿದ್ದಂತೆ ರಭಸವಾಗಿ ಹರಿಯುತ್ತಿದ್ದ ಕಾಲುವೆ ನೀರಲ್ಲಿ ಹಸುವೊಂದು ಕೊಚ್ಚಿ ಹೋಗುತ್ತಿತ್ತು. ಇದನ್ನು ಗಮನಿಸಿದ ಯುವಕರು ಪ್ರಾಣವನ್ನು ಲೆಕ್ಕಿಸದೆ ಹಸು ರಕ್ಷಣೆ ಮಾಡಿದ್ದಾರೆ. ವಿಜಯನಗರದ ಹೊಸಪೇಟೆ ಹೊರವಲಯದ ಎಚ್‌ಎಲ್‌ಸಿ ಕಾಲುವೆಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Physical Abuse : 10 ವರ್ಷದ ಅಪ್ರಾಪ್ತೆ ಮೇಲೆ ಎರಗಿದ ಕಾಮುಕ; ಅತ್ಯಾಚಾರದ ವೇಳೆ ಕಿರುಚಾಡಿದ್ದಕ್ಕೆ ಕೊಲೆಗೈದ ಹಂತಕ

31ನೇ ವಾರ್ಡಿನ ಯುವಕ ಕೃಷ್ಣನ ನೇತೃತ್ವದಲ್ಲಿ ರಕ್ಷಣೆ ಮಾಡಲಾಗಿದೆ. ನೀರು ಕುಡಿಯಲು ಹೋದ ಸಂದರ್ಭದಲ್ಲಿ ಹಸುವೊಂದು ಆಯತಪ್ಪಿ ಬಿದ್ದಿತ್ತು. ಅಲ್ಲಿಯೇ ಇದ್ದ ಸ್ಥಳೀಯ ಯುವಕರು ಕೂಡಲೇ ಅಗ್ಗದ ಮೂಲಕ ಹಸು ರಕ್ಷಣೆಗೆ ಮುಂದಾಗಿದ್ದಾರೆ.

Continue Reading

ಕರ್ನಾಟಕ

Self Harming: ಪ್ರಿನ್ಸಿಪಾಲ್ ಬೈದರೆಂದು 3ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

Self Harming: ಪ್ರಾಂಶುಪಾಲರು ಬೈದರು ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಬ್ಯಾಟರಾಯನಪುರ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

VISTARANEWS.COM


on

Self Harming
Koo

ಬೆಂಗಳೂರು: ಖಾಸಗಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಮೂರನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ (Self Harming) ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಪೂಜಿ ನಗರದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಮೇಲಿಂದ ಯುವತಿ ಜಿಗಿಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಖಾಸಗಿ ಶಾಲೆಯಲ್ಲಿ‌ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಮಧ್ಯಾಹ್ನ 3 ಗಂಟೆ ಸುಮಾರಿಗೆ 3ನೇ ಅಂತಸ್ತಿನಿಂದ ಏಕಾಏಕಿ ಜಿಗಿದಿದ್ದಾಳೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಂಶುಪಾಲರು ಬೈದರು ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಬ್ಯಾಟರಾಯನಪುರ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ವಿದ್ಯಾರ್ಥಿನಿ ತಾಯಿ ಸಲ್ಮಾ ಪ್ರತಿಕ್ರಿಯಿಸಿ, ಮಗಳು ಚೆನ್ನಾಗಿ ಓದುತ್ತಾ ಇದ್ದಳು, 9ನೇ ತರಗತಿಯಲ್ಲಿ 99.9 ಪರ್ಸೆಂಟ್ ಬಂದಿತ್ತು. ಡಾಕ್ಟರ್ ಆಗಬೇಕು ಅಂತ ಕನಸು ಕಂಡಿದ್ದಳು ಅಂತ ಕಣ್ಣೀರು ಹಾಕಿದ್ದಾರೆ.

ಬಾಲಕಿಯ ಸಹೋದರ ಶಹಭಾಜ್ ಮಾತನಾಡಿ, ಘಟನೆ ನಡೆದು ಎರಡು ಗಂಟೆ ಆದಮೇಲೆ ನಮಗೆ ಗೊತ್ತಾಯಿತು.
ಹೆಡ್ ಮೇಡಮ್ ಒಂದು ತಿಂಗಳಿನಿಂದ ಕ್ಯಾಮೆರಾದಲ್ಲಿ ಏನೋ ಚೆಕ್ ಮಾಡುತ್ತಿದ್ದರಂತೆ. ಮೂರ್ನಾಲ್ಕು ವಿದ್ಯಾರ್ಥಿನಿಯರ ಕರೆದು ಬೈದಿದ್ದರಂತೆ. ಹೀಗಾಗಿ ಸಹೋದರಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದಿದ್ದಾಳೆ. ಫಸ್ಟ್ ಕ್ಲಾಸ್‌ನಲ್ಲಿ ಓದುತ್ತಿದ್ದಳು, ಈಗ ಎಮರ್ಜೆನ್ಸಿ ವಾರ್ಡ್‌ನಲ್ಲಿ ಇಟ್ಟಿದ್ದಾರೆ. ವೈದ್ಯರು 48 ಗಂಟೆ ಕಳೆಯುವವರೆಗೆ ಏನೂ ಹೇಳಲು ಸಾಧ್ಯವಾಗದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ. ನಮಗೆ ನ್ಯಾಯ ಸಿಗಬೇಕು, ಈ ರೀತಿ ಬೇರೆ ಯಾರಿಗೂ ಆಗಬಾರದು ಎಂದಿದ್ದಾರೆ.

ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

Viral Video
Viral Video


ನವದೆಹಲಿ: ಪೋಷಕರು ಮಕ್ಕಳ ಬಗ್ಗೆ ನಿಗಾ ಇಡಬೇಕು. ಅವರು ಆಟವಾಡುವಾಗ ಅವರ ಪಾಡಿಗೆ ಅವರನ್ನು ಬಿಡುವಂತಹ ತಪ್ಪುಗಳನ್ನು ಮಾಡಬೇಡಿ. ಇದರಿಂದ ಅನಾಹುತಗಳೇ ಸಂಭವಿಸುತ್ತವೆ. ಅಷ್ಟೆ ಅಲ್ಲದೇ ಮಕ್ಕಳನ್ನು ಮನೆಯ ಬಾಲ್ಕನಿಯಲ್ಲಿ ಆಡಲು ಬಿಡುವ ತಾಯಂದಿರು ಅವರು ಸುರಕ್ಷಿತವಾಗಿರುತ್ತಾರೆ ಎಂದು ಭಾವಿಸುತ್ತಾರೆ. ಆದರೆ ಇದು ತುಂಬಾ ಅಪಾಯಕಾರಿ ಎಂಬುದನ್ನು ಮೊದಲು ತಿಳಿಯಿರಿ. ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್‍ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಗು ಇದ್ದಕ್ಕಿದ್ದಂತೆ ಕೆಳಗಿನ ಬೀದಿಗೆ ಬಿದ್ದಿದೆ. ಸ್ವಲ್ಪ ಹೊತ್ತಿನ ನಂತರ, ಮಹಿಳೆಯೊಬ್ಬಳು ರಕ್ತದ ಮಡುವಿನಲ್ಲಿ ಬಿದ್ದ ಮಗುವನ್ನು ಕಂಡು ಭಯಭೀತಳಾಗಿ ಮಗುವಿನ ಬಳಿ ಓಡಿಬರುತ್ತಾಳೆ. ಸ್ವಲ್ಪ ಸಮಯದ ನಂತರ ಬಾಲಕಿಯ ಕುಟುಂಬದವರು ಘಟನಾ ಸ್ಥಳಕ್ಕೆ ಬರುತ್ತಾರೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಮಗು ಸ್ಥಳದಲ್ಲೇ ಸಾವನಪ್ಪಿದೆ ಎಂದು ವೈದ್ಯರು ಕೈ ಚೆಲ್ಲಿದರು.‌

ಬಾಲಕಿ ಮೂರನೇ ಮಹಡಿಯಿಂದ ಬಿದ್ದಿದ್ದು ಹೇಗೆ ಎಂಬುದನ್ನು ಕಂಡುಹಿಡಿಯಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಾಲ್ಕನಿಯಲ್ಲಿ ಒಬ್ಬಂಟಿಯಾಗಿ ಆಡುತ್ತಿದ್ದಾಗ ಬಾಲಕಿ ಆಕಸ್ಮಿಕವಾಗಿ ಬಿದ್ದಿರಬಹುದು. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಪೊಲೀಸರು ಆ ಪ್ರದೇಶದ ಇತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ನೋಯ್ಡಾದಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಮೂರು ವರ್ಷದ ಬಾಲಕಿ ಆಟವಾಡುವಾಗ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಳು.

ಇದನ್ನೂ ಓದಿ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

ಮತ್ತೊಂದು ಘಟನೆಯಲ್ಲಿ, ದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಮನೆಯ ಕಿಟಕಿಯ ಬಳಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿತ್ತು. ಬ್ಯಾಲೆನ್ಸ್‌ ಕಳೆದುಕೊಂಡು ಮಗು ಕೆಳಗೆ ಬಿದ್ದಿತ್ತು. ಮಗುವನ್ನು ಉಳಿಸಲು ವೈದ್ಯರು ಎಲ್ಲ ಪ್ರಯತ್ನಗಳನ್ನು ಮಾಡಿದರೂ ಸಾಧ್ಯವಾಗಿರಲಿಲ್ಲ.

Continue Reading

ರಾಮನಗರ

Bomb Threat : ಉರ್ದು ಭಾಷೆಯಲ್ಲಿ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

Bomb Threat: ರಾಮನಗರದಲ್ಲಿರುವ ವಂಡರ್‌ ಲಾ ಅಮ್ಯೂಸ್ಮೆಂಟ್‌ ಪಾರ್ಕ್‌ಗೆ ಹುಸಿಬಾಂಬ್‌ ಬೆದರಿಕೆ ಬಂದಿದೆ. ವಂಡರ್‌ ಲಾ ಸಿಬ್ಬಂದಿಗೂ ಇಂಗ್ಲೀಷ್‌ ಬಳಸಿ ಉರ್ದು ಭಾಷೆಯಲ್ಲಿ ಬಾಂಬ್‌ ಬೆದರಿಕೆ ಸಂದೇಶ ರವಾನಿಸಲಾಗಿದೆ.

VISTARANEWS.COM


on

By

Bomb threat to Wonderla Amusement Park in Urdu
ಸಾಂದರ್ಭಿಕ ಚಿತ್ರ
Koo

ರಾಮನಗರ: ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ (Bomb Threat) ಬಾಂಬ್ ಬೆದರಿಕೆಯ ಸಂದೇಶ ಬಂದಿದೆ. ಇಂಗ್ಲಿಷ್ ಬಳಸಿ‌ ಉರ್ದು ಭಾಷೆಯಲ್ಲಿ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ.

ವಂಡರ್‌ ಲಾ ಅಮ್ಯೂಸ್ಮೆಂಟ್ ಪಾರ್ಕ್ ಆಡಳಿತ ಹಾಗೂ ಸಿಬ್ಬಂದಿಗೆ ಇ-ಮೇಲ್ ಬಂದಿದೆ. ಸಂಡೇ ನಿನ್ನ ಹಾಗೂ ವಂಡರ್‌ ಲಾ ಪಾರ್ಕ್‌ಗೆ ಮೂರು ಬಾಂಬ್ ಸಿಡಿಸುತ್ತೇವೆ ಇನ್ಶಾಅಲ್ಲಾ..! ಕನ್ನಡದ ಕಾಫೀರರು ಮುಸ್ಲಿಂರ ಮೇಲೆ ಮಾಡುತ್ತಿರುವ ದಬ್ಬಾಳಿಕೆಯ ಶಿಕ್ಷೆ ಸಿಗಲಿದೆ ಎಂದು ಸಂದೇಶ ಕಳಿಸಿದ್ದಾರೆ.

ಕಳೆದ ಆಗಸ್ಟ್ ‌3ರಂದು ಹುಸಿ ಬಾಂಬ್ ಬೆದರಿಕೆ ಬಂದಿದ್ದು, ‌ತಡವಾಗಿ ಬೆಳಕಿಗೆ ಬಂದಿದೆ. ಮೊಹಮ್ಮದ್ ಇರ್ಫಾನ್ ಜಿಹಾದಿ ಎಂಬ ಹೆಸರಿನ‌ ಇ -ಮೇಲ್‌ನಿಂದ ಬಂದಿದೆ. ಬಿಡದಿ ಪೊಲೀಸರು ಇ ಮೇಲ್ ಮಾಡಿದ ಆರೋಪಿಯನ್ನು ಹುಡುಕುತ್ತಿದ್ದಾರೆ. ಬಾಂಬ್ ಬೆದರಿಕೆ ಬಳಿಕ‌ ಇಡೀ ಪಾರ್ಕ್ ಪರಿಶೀಲನೆ ಮಾಡಲಾಗಿದೆ.

ಇದನ್ನೂ ಓದಿ: Wild Animals Attack : ಅತ್ತೆ ಮನೆಗೆ ಬಂದ ಅಳಿಯನ ಅಟ್ಟಾಡಿಸಿದ ಕಾಡಾನೆ! ಮುಂದೇನಾಯ್ತು

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ, ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ತುರ್ತುಸ್ಥಿತಿ

ತಿರುವನಂತಪುರಂ: ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ (Air India) ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ (Bomb Threat) ಹಿನ್ನೆಲೆಯಲ್ಲಿ ಇಂದು ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Thiruvananthapuram Airport) ಸಂಪೂರ್ಣ ತುರ್ತು ಪರಿಸ್ಥಿತಿ (Emergency) ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ವಿಮಾನವು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿಯಿತು ಮತ್ತು ಅದನ್ನು ಪ್ರತ್ಯೇಕ ವಿಭಾಗಕ್ಕೆ ಸ್ಥಳಾಂತರಿಸಲಾಯಿತು. ಪ್ರಯಾಣಿಕರನ್ನು ಶೀಘ್ರವಾಗಿ ವಿಮಾನದಿಂದ ಸ್ಥಳಾಂತರಿಸಲಾಯಿತು. ವಿಮಾನವು ತಿರುವನಂತಪುರಂ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಪೈಲಟ್‌ನಿಂದ ಬಾಂಬ್ ಬೆದರಿಕೆ ಕರೆಯ ಬಗ್ಗೆ ಮಾಹಿತಿ ದೊರೆತಿದೆ.

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಹೊರಟ ಬಳಿಕ ಬಾಂಬ್‌ ಬೆದರಿಕೆ ಗೊತ್ತಾಗಿತ್ತು. ಏರ್ ಇಂಡಿಯಾದ ಮುಂಬೈ-ತಿರುವನಂತಪುರಂ ವಿಮಾನ ನಂ. AI657ರಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದರು. ಬಾಂಬ್ ಬೆದರಿಕೆಯ ಮೂಲದ ವಿವರಗಳನ್ನು ಮತ್ತು ಇತರ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
assault case
ಕರ್ನಾಟಕ6 mins ago

Assault Case: ಮಾರ್ಕ್ಸ್‌ ಕಡಿಮೆ ಬಂತೆಂದು 4ನೇ ತರಗತಿ ಬಾಲಕನಿಗೆ ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕ

pm modi Ukraine Visit
ವಿದೇಶ26 mins ago

PM Modi Ukraine Visit: ಉಕ್ರೇನ್‌ಗೆ ಭೀಷ್ಮ್‌ ಕ್ಯೂಬ್‌ ಉಡುಗೊರೆ ನೀಡಿದ ಪ್ರಧಾನಿ ಮೋದಿ…ಏನಿದರ ವಿಶೇಷತೆ?

Yadgiri News
ಧಾರ್ಮಿಕ58 mins ago

Yadgiri News: ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

viral video
ವೈರಲ್ ನ್ಯೂಸ್2 hours ago

Viral Video: ಮೈಮೇಲೆ ಒಂದಲ್ಲ..ಎರಡಲ್ಲ ಬರೋಬ್ಬರಿ 25ಕೆ.ಜಿ ಚಿನ್ನ; ತಿಮ್ಮಪ್ಪನ ಸನ್ನಿಧಿಗೆ ಬಂದ ವಿಶೇಷ ಭಕ್ತರು ಇವರೇ ನೋಡಿ

Lorry Accident
ಕರ್ನಾಟಕ2 hours ago

Lorry Accident: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; 16 ಕಾರ್ಮಿಕರಿಗೆ ಗಂಭೀರ ಗಾಯ

ಕರ್ನಾಟಕ2 hours ago

Muda Scam: ದೆಹಲಿಯಲ್ಲಿ ರಾಹುಲ್‌ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ; ಕಾನೂನು ಹೋರಾಟದ ಬಗ್ಗೆ ಚರ್ಚೆ

Uttara Kannada News
ಉತ್ತರ ಕನ್ನಡ2 hours ago

Uttara Kannada News: ಹೊಸ ಆಧಾರ್ ನೋಂದಣಿ, ತಿದ್ದುಪಡಿಗೆ ಅವಕಾಶ

Invest Karnataka
ಬೆಂಗಳೂರು2 hours ago

Invest Karnataka: ಇಂಧನ ತಂತ್ರಜ್ಞಾನ; ರಾಜ್ಯದಲ್ಲಿ 8,300 ಕೋಟಿ ರೂ. ಹೂಡಿಕೆ ಮಾಡಲಿರುವ ಷೆರ್ವನ್‌ ಇಂಡಿಯಾ

UPSC Exam calendar
ದೇಶ3 hours ago

UPSC Exam calendar: UPSC ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್‌ ರಿಲೀಸ್‌; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

7th pay commission
ಕರ್ನಾಟಕ3 hours ago

7th pay commission: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನ ಶ್ರೇಣಿ ಪ್ರಕಟ; ಯಾರಿಗೆ ಎಷ್ಟು ಏರಿಕೆ?

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌