Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು - Vistara News

ಮಳೆ

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

Karnataka Rain news : ಒಂದು ಸಣ್ಣ ಮಳೆ ಬಂದರೂ ಅವಾಂತರವೇ (Karnataka Weather forecast) ಸೃಷ್ಟಿಯಾಗುತ್ತದೆ. ವಿಜಯನಗರದಲ್ಲಿ ಸ್ಮಶಾನಕ್ಕೆ ಮೃತದೇಹವನ್ನು ಸಾಗಿಸಲು ಗ್ರಾಮಸ್ಥರು ಪರದಾಡಿದರೆ ಇತ್ತ ಚಿಕ್ಕಮಗಳೂರಿನಲ್ಲಿ ಕಂದಕ ಸೃಷ್ಟಿಯಾಗಿದ್ದು, ಅಡಿಕೆ ತೋಟಗಳು ಭೂಮಿ ಪಾಲಾಗುತ್ತಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ವಿಜಯನಗರ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ( karnataka Rain news) ಮಳೆಯಿಂದಾಗಿ (Karnataka Weather Forecast) ಹಳ್ಳ – ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೊಸಪೇಟೆ ತಾಲೂಕಿನ ಜಿ.ನಾಗಲಾಪೂರ ಗ್ರಾಮದಲ್ಲಿ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಹೆಣ ಹೂಳಲು ಸಹ ಹೆಣಗಾಡಬೇಕಾಯಿತು.

ಗ್ರಾಮಕ್ಕೆ ಮೀಸಲಿಟ್ಟ ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ. ಅಕ್ಕ – ಪಕ್ಕದವರ ಜಮೀನಿನ ಪಕ್ಕದಲ್ಲಿ ಹೋದರೆ ಕಿರಿಕಿರಿ ಮಾಡುತ್ತಾರೆ. ಹೀಗಾಗಿ ಹರಿಯುವ ಹಳ್ಳದಲ್ಲೇ ಹೆಣ ಹೊತ್ತು ಗ್ರಾಮಸ್ಥರು ಸಾಗಿದ್ದರು. ಹೆಣ ಹೊತ್ತು ಸಾಗುವ ವೇಳೆ ನೀರಿನ ರಭಸ ಹೆಚ್ಚಾದರೆ ಹೆಣ ಸಮೇತ ಕೊಚ್ಚಿಹೋಗುವ ಆತಂಕ ಇದೆ.

ಹೆಣ ಹೂಳುವ ಜಾಗ ಗ್ರಾಮದಿಂದ ಒಂದೂವರೆ ಕಿ.ಮೀ ದೂರದಲ್ಲಿದೆ. ಶವ ಸಂಸ್ಕಾರಕ್ಕೆ ಹೋಗಲು ಸೂಕ್ತ ರಸ್ತೆ ಮಾಡಿಕೊಡದೇ ಜಿಲ್ಲಾಡಳಿತ, ಕಂದಾಯ ಇಲಾಖೆ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಕೆಲವು ದಿನಗಳ ಹಿಂದೆ ಐತಿಹಾಸಿಕ ಒಪ್ಪತ್ತೇಶ್ವರ ರಥೋತ್ಸವ ಇದೇ ಹಳ್ಳದಲ್ಲಿ ಸಾಗಿತ್ತು. ಸ್ಮಶಾನಕ್ಕೆ, ಜಮೀನುಗಳಿಗೆ ಹೋಗಲು ಸೇತುವೆ ನಿರ್ಮಿಸಿ ಕೊಡಲು ಹತ್ತಾರು ಬಾರಿ ಮನವಿ ಮಾಡಿದ್ದಾರೆ. ಆದರೂ ಗ್ರಾಮಸ್ಥರ ಮನವಿಗೆ ಕ್ಯಾರೇ ಎನ್ನದೇ ಶಾಸಕರು, ಸಚಿವರು, ಅಧಿಕಾರಿಗಳ ಧೋರಣೆಗೆ ಕಿಡಿಕಾರಿದ್ದಾರೆ.

ಭಾರಿ ಮಳೆಗೆ ಅಡಿಕೆ ತೋಟದಲ್ಲಿ ಕಂದಕ ಸೃಷ್ಟಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದೆ. ಇದ್ದಕ್ಕಿದ್ದ ಹಾಗೆ ಸ್ವಲ್ಪ ಸ್ವಲ್ಪವೇ ಅಡಿಕೆ ತೋಟ ಕುಸಿಯುತ್ತಿದೆ. ತೋಟದಲ್ಲಿ 10-15 ಅಡಿ ಕಂದಕ ಸೃಷ್ಟಿಯಾಗಿದೆ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ದೂಪದ ಖಾನ್ ಗ್ರಾಮದಲ್ಲಿ ಘಟನೆ ನಡೆದಿದೆ.

ಭೂಮಿ ಕುಸಿತದಿಂದ ನೂರಾರು ಅಡಿಕೆ ಮರಗಳು ನೆಲಕ್ಕುರುಳಿದೆ. ಗ್ರಾಮದ ಆಶಾ ಕೃಷ್ಣ ಎಂಬುವರಿಗೆ ಸೇರಿದ ಅಡಿಕೆ ತೋಟ ನಾಶವಾಗಿದೆ. ಜೀವನಕ್ಕೆ ಆಧಾರವಾಗಿದ್ದ ತೋಟ ನಾಶವಾಗುತ್ತಿರುವುದರಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಮಳೆ ಬೀಳುತ್ತಿದ್ದಂತೆ ಮತ್ತೆ ಮತ್ತೆ ತೋಟ ಕುಸಿಯುತ್ತಿದೆ.

ಇದನ್ನೂ ಓದಿ: KEA : ಕೆಯುಡಬ್ಲ್ಯೂಎಸ್‌ಡಿಬಿ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ಪ್ರಕಟ; ಆ.27ರವರೆಗೆ ಆಕ್ಷೇಪಣೆಗೆ ಅವಕಾಶ

ವಿಕೆಂಡ್‌ ಮಸ್ತಿಗೆ ಮಳೆ ಅಡ್ಡಿ

ನೈರುತ್ಯ ಮಾನ್ಸೂನ್‌ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದ್ದರೆ, ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕಲಬುರಗಿಯ ಚಿಂಚೋಳಿಯಲ್ಲಿ 7 ಸೆಂ.ಮೀ ಮಳೆಯಾಗಿದೆ. ನಾಳೆ ಭಾನುವಾರ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಕೆಲವೊಮ್ಮೆ ಗುಡುಗು ಇರಲಿದೆ. ನಿರಂತರ ಗಾಳಿ ಗಂಟೆಗೆ 40-50 ಕಿ.ಮೀ ತಲುಪಲಿದೆ. ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಗಂಟೆಗೆ 40-50 ಕಿ.ಮೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Karnataka Rain : ಕರಾವಳಿಯಲ್ಲಿ ಇಂದಿನಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿಗೂ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Karnataka Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಉತ್ತರ ಒಳನಾಡು, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಹುಡ್ಗಿ ವಿಷ್ಯಕ್ಕೆ ರೂಮ್‌ನಲ್ಲಿ ಕೂಡಿ ಹಾಕಿ ಯುವಕನಿಗೆ ರಕ್ತ ಬರುವಂತೆ ಥಳಿತ; ವಿಡಿಯೊ ವೈರಲ್‌

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ. ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇವೆ.

ಕರಾವಳಿಗೂ ಮಳೆ ಅಲರ್ಟ್‌

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಆಗಸ್ಟ್‌ 27 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೇಲಿನ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಮುಂದಿನ 48 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ; ಮೀನುಗಾರರಿಗೆ ಎಚ್ಚರಿಕೆ

Karnataka Weather Forecast : ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ರಭಸವಾಗಿ ಗಾಳಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ (karnataka Weather Forecast) ಗುಡುಗು ಸಹಿತ ಸಾಧಾರಣ ಮಳೆಯಾದರೆ, ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ರಾಯಚೂರಿನಲ್ಲಿ ಸಣ್ಣ ಮಳೆ ಬರಬಹುದು.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ಆಗಸ್ಟ್ 27 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೇಲೆ ತಿಳಿಸಿದ ಅವಧಿಯಲ್ಲಿ ಮೀನುಗಾರರು ಮೇಲಿನ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Shreyas Patel: ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್‌

ಟೀನೇಜ್‌ ಹುಡುಗಿಯರ ಮಾನ್ಸೂನ್‌ ಸ್ಟೈಲಿಂಗ್‌‌‌ಗೆ ಸಾಥ್‌ ನೀಡುತ್ತಿರುವ 3 ಫ್ಯಾಷನ್‌ ವೇರ್ಸ್

ಮಳೆಗಾಲದಲ್ಲಿ (Monsoon Fashion) ಟೀನೇಜ್‌ ಹುಡುಗಿಯರ ಸ್ಟೈಲಿಂಗ್‌ ಬದಲಾಗಿದೆ. ಡಿಫರೆಂಟ್‌ ಲುಕ್‌ಗಳ ಪ್ರಯೋಗಾತ್ಮಕ ಸ್ಟೈಲಿಂಗ್‌ಗೆ 3 ಶೈಲಿಯ ಮಾನ್ಸೂನ್‌ ಫ್ಯಾಷನ್‌ವೇರ್‌ಗಳು ಸಾಥ್‌ ನೀಡುತ್ತಿವೆ. “ಈ ಜನರೇಷನ್‌ನ ಟೀನೇಜ್‌ ಹುಡುಗಿಯರ ಫ್ಯಾಷನ್‌ ಕಂಪ್ಲೀಟ್‌ ಡಿಫರೆಂಟ್‌. ಪ್ರತಿಯೊಂದರಲ್ಲೂ ನಯಾ ಲುಕ್‌ ಎದ್ದು ಕಾಣಿಸುತ್ತದೆ. ಮೊದಲೇ ಯಂಗ್‌ ಆಗಿರುವ ಇವರನ್ನು ಮತ್ತಷ್ಟು ಫಂಕಿಯಾಗಿ ಬಿಂಬಿಸುತ್ತವೆ. ಇನ್ನು ಮಾನ್ಸೂನ್‌ ಸೀಸನ್‌ಗೆ ತಕ್ಕಂತೆ ನಾನಾ ಫ್ಯಾಷನ್‌ವೇರ್‌ಗಳು ಆಗಮಿಸಿದ್ದರೂ, ಪ್ರಯೋಗಾತ್ಮಕ ಸ್ಟೈಲಿಂಗ್‌ಗೆ ಇದೀಗ ಹೆಚ್ಚು ಮಾನ್ಯತೆ ದೊರಕಿದೆ. ಹುಡುಗಿರಲ್ಲಿ ಒಬ್ಬೊಬ್ಬರದ್ದು ಒಂದೊಂದು ಬಗೆಯ ಸ್ಟೈಲಿಂಗ್‌! ಆಯಾ ಔಟ್‌ಫಿಟ್‌ಗೆ ತಕ್ಕಂತೆ ಕೊಂಚ ಬದಲಾವಣೆ ಕಾಣಬಹುದಷ್ಟೇ!” ಎನ್ನುತ್ತಾರೆ ಸ್ಟೈಲಿಸ್ಟ್ ಜಯ್‌ ಹಾಗೂ ರಾಣಾ. ಅವರ ಪ್ರಕಾರ, ಪ್ರತಿ ಹುಡುಗಿಯ ಫ್ಯಾಷನ್‌ ಅವರ ಪ್ರತಿ ದಿನಚರಿಯ ಮೇಲೆ ಹಾಗೂ ಅವರ ಪರಿಸರದ ಮೇಲೆ ನಿರ್ಧರಿತವಾಗಿರುತ್ತದೆ ಎನ್ನುತ್ತಾರೆ. ಸದ್ಯ ಟೀನೇಜ್‌ ಹುಡುಗಿಯರ ಕ್ರೇಝಿ ಲಿಸ್ಟ್‌ನಲ್ಲಿರುವ 3 ಫ್ಯಾಷನ್‌ವೇರ್‌ಗಳ ಬಗ್ಗೆ ತಿಳಿಸಿದ್ದಾರೆ.

Monsoon Fashion

ಕಲರ್‌ಫುಲ್‌ ಫಂಕಿ ಲೇಯರ್‌ ಲುಕ್‌

ಈ ಫ್ಯಾಷನ್‌ ಈ ಜನರೇಷನ್‌ನ ಟೀನೇಜ್‌ ಹುಡುಗಿಯರ ವ್ಯಕ್ತಿತ್ವ ಹಾಗೂ ಅವರ ಪ್ರತಿನಿತ್ಯದ ಪರಿಸರಕ್ಕೆ ತಕ್ಕಂತೆ ಹಾಗೂ ಅಭಿರುಚಿಗೆ ತಕ್ಕಂತೆ ಬದಲಾಗುತ್ತಿದೆ. ಉದಾಹರಣೆಗೆ., ಪ್ಯಾಂಟ್‌ ಪ್ರಿಂಟ್ಸ್‌ನದ್ದಾದಲ್ಲಿ, ಇದಕ್ಕೆ ಧರಿಸುವ ಟಾಪ್‌ ಒಂದು ಬಣ್ಣದ್ದು, ಇನ್ನು ಅದರ ಮೇಲೆ ಧರಿಸುವ ಕಾರ್ಡಿಗಾನ್‌, ಜಾಕೆಟ್‌ ಅಥವಾ ಕೇಪ್‌ ಮತ್ತೊಂದು ವರ್ಣದ್ದು. ಹೀಗೆ ಒಂದಕ್ಕೊಂದು ಯಾವುದು ಮ್ಯಾಚ್‌ ಆಗುವುದಿಲ್ಲ! ಬದಲಿಗೆ ಎಲ್ಲವೂ ಮಿಸ್‌ ಮ್ಯಾಚ್‌ ಆಗಿ ಎದ್ದು ಕಾಣುತ್ತವೆ. ಇವು ಈ ಬಾರಿ ಟೀನೇಜ್‌ ಹುಡುಗಿಯರ ಫಂಕಿ ಲುಕ್‌ಗೆ ಸಾಥ್‌ ನೀಡಿವೆ.

ಫುಲ್‌ ಸ್ಲೀವ್‌ ಕಟೌಟ್‌ ಕ್ರಾಪ್‌ ಟಾಪ್‌ ಸ್ಟೈಲಿಂಗ್‌

ಪ್ಯಾಂಟ್‌ಗೆ ಸೊಂಟ ಕಾಣಿಸುವಂತಹ ಕ್ರಾಪ್‌ ಟಾಪ್‌, ಅಲ್ಲಲ್ಲಿ ಕಟೌಟ್‌ ಆದ ಫುಲ್‌ ಸ್ಲೀವ್‌ ಟಾಪ್‌, ಹೆಸರಿಗೆ ಮಾತ್ರ ಈ ಔಟ್‌ಫಿಟ್‌ ಫುಲ್‌ ಸ್ಲೀವ್‌. ಈ ಟಾಪ್‌ ಈ ಮಾನ್ಸೂನ್‌ ಸೀಸನ್‌ನಲ್ಲಿ ಟೀನೇಜ್‌ ಹುಡುಗಿಯರ ಸ್ಟೈಲಿಂಗ್‌ಗೆ ಸಾಥ್‌ ನೀಡುತ್ತಿದೆ.

ಬಿಲೋ ವೇಸ್ಟ್ ಟೊರ್ನ್‌ ಪ್ಯಾಂಟ್‌ ಸ್ಟೈಲಿಂಗ್‌

ಇದುವರೆಗೂ ಹೈ ವೇಸ್ಟ್ ಫ್ಯಾಷನ್‌ನಲ್ಲಿದ್ದ ಟೋರ್ನ್‌ ಪ್ಯಾಂಟ್‌ ಇದೀಗ ಸೊಂಟದ ಕೆಳಗೆ ಕೂರುವಂತಹ ಡಿಸೈನ್‌ನಲ್ಲಿ ಈ ಮಾನ್ಸೂನ್‌ ಫ್ಯಾಷನ್‌ಗೆ ಎಂಟ್ರಿ ನೀಡಿವೆ. ಟೀನೇಜ್‌ ಹುಡುಗಿಯರ ಬಿಂದಾಸ್‌ ಸ್ಟೈಲಿಂಗ್‌ಗೆ ಸಾಥ್‌ ನೀಡುತ್ತಿವೆ. ಪ್ರಯೋಗಾತ್ಮಕ ಸ್ಟೈಲಿಂಗ್‌ನಲ್ಲಿ ಮಿಕ್ಸ್ ಮ್ಯಾಚ್‌ ಆಗುತ್ತಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು; ಹಳ್ಳ ದಾಟಲು ಗ್ರಾಮಸ್ಥರ ಪರದಾಟ

Karnataka Weather Forecast : ಹಾವೇರಿ, ಬಾಗಲಕೋಟೆ, ಬಳ್ಳಾರಿಯಲ್ಲಿ ಭಾರಿ ಮಳೆಯಿಂದಾಗಿ (Rain News) ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಅವಾಂತರವೇ ಸೃಷ್ಟಿಯಾಗಿದೆ. ಹಳ್ಳದ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಜನರು ಜೀವ ಭಯದಲ್ಲೇ ದಾಟುತ್ತಿದ್ದಾರೆ.

VISTARANEWS.COM


on

By

karnataka weather forecast
Koo

ಹಾವೇರಿ: ಭಾರಿ ಮಳೆಗೆ (Rain News) ಕೆರೆ ಕೋಡಿ ಬಿದ್ದು ಗ್ರಾಮದ ಹಲವು ಮನೆಗಳು ಜಲಾವೃತಗೊಂಡಿದೆ. ಸುಮಾರು 30 ಹೆಚ್ಚು ಮನೆಗಳಿಗೆ ಕೆರೆ ನೀರು ನುಗ್ಗಿದೆ. ಹಾವೇರಿಯ ಹಿರೇಕೇರೂರು ತಾಲೂಕಿನ ಕಚವಿ ಗ್ರಾಮವು ಜಲಾವೃತಗೊಂಡಿದೆ. ಕೊಪ್ಪದ ಕೆರೆ ಕೋಡಿ ಬಿದ್ದು ಕಚವಿ ಗ್ರಾಮದತ್ತ ನೀರು (Karnataka Weather Forecast) ನುಗ್ಗಿದೆ.

karnataka Weather Forecast
karnataka weather Forecast

ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಕೊಪ್ಪದ ಕೆರೆ ತುಂಬಿ ಕೋಡಿ ಬಿದ್ದು ಗ್ರಾಮದತ್ತ ಹರಿದು ಬಂದಿದೆ. ಕಚವಿ ಗ್ರಾಮಸ್ಥರ ಬದುಕು ಬೀದಿಗೆ ಬಿದಿದ್ದು, ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದ್ದಾರೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ರಾತ್ರಿ ಪೂರ್ತಿ ನೀರು ಹೊರ ಹಾಕಿದ್ದಾರೆ. ಇಷ್ಟೆಲ್ಲಾ ಸಮಸ್ಯೆ ಆದರೂ ಜಿಲ್ಲಾಡಳಿತ ಕ್ಯಾರೆ ಎನ್ನುತ್ತಿಲ್ಲ. ಗ್ರಾಮದ ವಯೋವೃದ್ದರು, ವಾಹನ ಸವಾರರರು, ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ರಸ್ತೆ ಮೇಲೆ ನೀರು ನದಿಯಂತೆ ಹರಿಯುತ್ತಿದೆ.

karnataka weather Forecast
karnataka weather Forecast

ಬಳ್ಳಾರಿಯಲ್ಲಿ ಭತ್ತದ ಬೆಳೆಗೆ ಹಾನಿ

ಮಳೆಯಿಂದ ಹಳ್ಳಗಳು ತುಂಬಿ ನೀರು ಹರಿದು ಭತ್ತದ ಬೆಳೆಗೆ ಹಾನಿಯಾಗಿದೆ. ಬಳ್ಳಾರಿ ಜಿಲ್ಲೆಯ ಜಾಲಿಹಾಳ್ ಗ್ರಾಮದ ನಾಲ್ಕು ಹಳ್ಳಗಳ ರೈತರು ಜರ್ಜರಿತರಾಗಿದ್ದಾರೆ. ಭಾರಿ ಮಳೆಗೆ ಹಳ್ಳಗಳು ಹರಿದ ಪರಿಣಾಮ 500 ಎಕರೆ ಭತ್ತ ಜಲಾವೃತಗೊಂಡಿದೆ. ಜಾಲಿಹಾಳ್ ಗ್ರಾಮದ ಸುತ್ತ ಕಟ್ರಳ್ಳ, ಕೈಮುರುಕನಹಳ್ಳ, ಗಂಗಮ್ಮನಹಳ್ಳ, ಈರ್ಲಹಳ್ಳಗಳು ಹರಿಯುತ್ತಿದೆ. ಭತ್ತ ನಾಟಿ ಮಾಡಿದ ಕೆಲ ದಿನಗಳಿಂದ ಭರ ಸಿಡಿಲಾಗಿ ಎರಗಿದ ಹಳ್ಳದ ನೀರಿನಿಂದ ಲಕ್ಷಾಂತರ ರೂ.ಗಳು ನಷ್ಟವಾಗಿದೆ.

ರಸ್ತೆಯ ಮೇಲೂ ಹಳ್ಳ ಹರಿದು ಜಾಲಿಹಾಳ್ ಮತ್ತು ಕಾರೇಕಲ್ಲು ಮಧ್ಯದ ರಸ್ತೆ ಕೊಚ್ಚಿ ಹೋಗಿದೆ. ಎಕರೆಗೆ 15 ರಿಂದ 20 ಸಾವಿರ ವೆಚ್ಚ ಮಾಡಿ ಭತ್ತ ನಾಟಿ ಮಾಡಿದ್ದರು. ಕಳೆದ ಐದಾರು ದಿನಗಳಿಂದ ರೈತರ ಗದ್ದೆಯಲ್ಲಿ ನೀರು ಹರಿದಿದ್ದರಿಂದ ಭತ್ತದ ಸಸಿಗಳು ಕೊಳೆತು ಹೋಗಿದೆ.

ಇದನ್ನೂ ಓದಿ: Bomb Threat : ಉರ್ದು ಭಾಷೆಯಲ್ಲಿ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

ತುಂಬಿ ಹರಿಯುತ್ತಿರುವ ಕರಡಿ ಗ್ರಾಮದ ಹಳ್ಳ

ಬಾಗಲಕೋಟೆಯ ಇಳಕಲ್ಲ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಕರಡಿ ಗ್ರಾಮದ ಹಳ್ಳ ತುಂಬಿ ಹರಿದಿದೆ. ರಸ್ತೆ ಮೇಲೆ ಹಳ್ಳದ ನೀರು ಹರಿಯುತ್ತಿರುವ ಪರಿಣಾಮ ಕರಡಿ ಗ್ರಾಮಸ್ಥರ ಸಂಚಾರಕ್ಕೆ ಅಡತಡೆಯಾಗಿದೆ. ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದ ನೀರಲ್ಲೇ ನಡೆದು ಗ್ರಾಮಕ್ಕೆ ಹೋಗುವಂತಾಗಿದೆ. ಪುಟ್ಟ ಮಗು ಹೊತ್ತು ಹಳ್ಳ ದಾಟೋಕೆ ಪರದಾಡುತ್ತಿದ್ದಾರೆ. ಪ್ರತಿ ಬಾರಿ ಮಳೆ ಸುರಿದಾಗ ಕರಡಿ, ದಾಸಬಾಳ , ಪಾಲತಿ , ಕೊಣ್ಣೂರ ಹುನಗುಂದ ಸಂಪರ್ಕ ಕಡಿತಗೊಂಡಿದೆ. ಶೀಘ್ರ ಮೇಲ್ಸೇತುವೆ ಕಾರ್ಯ ಮುಗಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮಳೆ ಅಬ್ಬರದ ಜತೆಗೆ ಭೂ ಕಂಪನದ ಅನುಭವ

ಶುಕ್ರವಾರ ಕೊಡಗು, ಹಾಸನ, ಮೈಸೂರು ಗಡಿಭಾಗದಲ್ಲಿ ಭೂಕಂಪನದ ಅನುಭವವಾಗಿದೆ. ಹೆಬ್ಬಾಲೆ ಸಮೀಪ, ಸೂಳೆಕೋಟೆ, ಅಡಗೂರು‌‌ ಹಾಗೂ ಕಣಗಾಲು ಹಾಗೂ ಕುಶಾಲನಗರ ಜ್ಞಾನಭಾರತಿ ಶಾಲೆ ಹಿಂಭಾಗ, ಭಸವತ್ತೂರು ಸೇರಿ ಹಲವೆಡೆ ಕಂಪನದ ಅನುಭವವಾಗಿದೆ. ಶುಕ್ರವಾರ ಮುಂಜಾನೆ 6.30ರ ಸಮಯಕ್ಕೆ 2ರಿಂದ3 ಸೆಕೆಂಡ್ ಭೂಮಿ ಕಂಪಿಸಿದೆ. ಭೂಕಂಪನ ಹಿನ್ನೆಲೆಯಲ್ಲಿ ಕೆಲಕಾಲ ಜನರು ಆತಂಕಗೊಂಡರು.

ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಯಲ್ಲಿ ರಭಸವಾಗಿ ಬೀಸಲಿದೆ ಗಾಳಿ; ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ಕರಾವಳಿಯ ಸಮುದ್ರ ತೀರದಲ್ಲಿ ಗಾಳಿ ವೇಗ ಹೆಚ್ಚಾಗಿರಲಿದ್ದು, ಮಲೆನಾಡು ಹಾಗೂ ಒಳನಾಡಿನಲ್ಲಿ ಹಗುರದಿಂದ ಸಾಧಾರಣ (Rain News) ಮಳೆಯಾಗಲಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲಿ ಹಗುರದಿಂದ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 , ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Weather: ಅಲೆಗಳ ಅಬ್ಬರಕ್ಕೆ ಅಂಕೋಲಾದಲ್ಲಿ ಕೊಚ್ಚಿ ಹೋದ ಮನೆ; ಭಾರಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬಂಡೆಗಳು

ಯೆಲ್ಲೋ ಅಲರ್ಟ್‌

ಗುಡಗು ಸಹಿತ ಭಾರಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್‌ 24ರಂದು ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rohit Sharma
ಕ್ರೀಡೆ35 mins ago

Rohit Sharma: ಪಾರ್ಕ್​ನಲ್ಲಿ ಅಭ್ಯಾಸ ನಡೆಸಿದ ರೋಹಿತ್​; ವಿಡಿಯೊ ವೈರಲ್​

Chain snatching Case
ಕ್ರೈಂ47 mins ago

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿದ; ಚೈನ್ ಸ್ನಾಚಿಂಗ್‌ಗೆ ಇಳಿದು ಸಿಕ್ಕಿಬಿದ್ದ

Polluted Water
ಕರ್ನಾಟಕ1 hour ago

Polluted Water: ಕಲುಷಿತ ನೀರಿಗೆ ಮತ್ತೊಂದು ಬಲಿ; ಚಿಕಿತ್ಸೆ ಫಲಿಕಾರಿಯಾಗದೆ ಮಹಿಳೆ ಸಾವು

Wild Animals Attack
ಕರ್ನಾಟಕ2 hours ago

Wild Animals Attack: ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

unified pension scheme
ಪ್ರಮುಖ ಸುದ್ದಿ4 hours ago

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Sunita Williams
ದೇಶ4 hours ago

Sunita Williams: ಮುಂದಿನ ವರ್ಷ ಫೆಬ್ರುವರಿಯಲ್ಲಿ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್;‌ ನಾಸಾ ಘೋಷಣೆ

karnataka weather forecast
ಮಳೆ4 hours ago

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯವರ ಬಹು ದಿನಗಳ ಕನಸು ನನಸು; ಕುಟುಂಬದ ಆಪ್ತರಿಂದ ಶುಭ ಸುದ್ದಿ

Rahul Gandhi
ದೇಶ10 hours ago

Rahul Gandhi: ಮಿಸ್‌ ಇಂಡಿಯಾ ಪಟ್ಟಿಯಲ್ಲಿ ದಲಿತ, ಬುಡಕಟ್ಟು, ಒಬಿಸಿ ಮಹಿಳೆಯರು ಇಲ್ಲವೇ ಇಲ್ಲ-ರಾಹುಲ್‌ ಗಾಂಧಿ ಹೊಸ ಆರೋಪ

Sudha Murthy
ಬೆಂಗಳೂರು11 hours ago

Sudha Murthy: ವೈದ್ಯಕೀಯ ಸೇವೆಯಲ್ಲಿ ಬದ್ಧತೆ, ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ19 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌