CM Siddaramaiah: ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ; ಸಿಎಂ ಸಿದ್ದರಾಮಯ್ಯ - Vistara News

ಬೆಂಗಳೂರು

CM Siddaramaiah: ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ; ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Mission RHUMI: ದೇಶದ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್‌ ರಾಕೆಟ್‌ನ ಯಶಸ್ವಿ ಉಡಾವಣೆ

ಗಾಂಧೀಜಿ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ.‌ ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಭ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು ಎಂದರು.

ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ ಮಾತನ್ನು ಪ್ರಸ್ತಾಪಿಸಿ, ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕುವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ ಎಂದು ತಿಳಿಸಿದರು.

ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: RRB Recruitment 2024: ಗುಡ್‌ನ್ಯೂಸ್‌; ಬರೋಬ್ಬರಿ 14,298 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ಇಲಾಖೆ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಢ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ.

ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಢ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ನೆಹರೂ ಅವರು ವೈಜ್ಞಾನಿಕ ಮತ್ತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ಧಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು ಎಂದರು.

ಸರ್ವರನ್ನೂ ಒಳಗೊಳ್ಳುವ ಮತ್ತು ಅಹಿಂಸೆ ಗಾಂಧಿಯವರ ಮಾರ್ಗವಾಗಿತ್ತು. ಇದನ್ನು ಯುವಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದು ತಿಳಿಸಿದ ಸಿಎಂ, ಮಹಾತ್ಮಗಾಂಧಿಯವರು‌ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಎಂದರು.

ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ.‌ ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೂ ನಮ್ಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ರಾಮಚಂದ್ರ ರಾಹಿ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Health Tips Kannada: ಮಾರಕ ರೋಗಗಳನ್ನು ದೂರ ಇರಿಸುತ್ತದೆ ಬೂದುಗುಂಬಳದ ರಸ!

ಈ ಸಂದರ್ಭದಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್, ಕಾರ್ಯಾಧ್ಯಕ್ಷ ವಿಶುಕುಮಾರ್, ನವದೆಹಲಿ ಸ್ಮಾರಕ ನಿಧಿ ಅಧ್ಯಕ್ಷ ಸಂಜೋಯ್ ಸಿಂಗ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Actor Darshan : ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ ಬಂಧನವಾಗಿದೆ. ಈ ಮಧ್ಯೆ ನಟನ ಗೆಳತಿ ಪವಿತ್ರಾ (Pavithra Gowda) ಲಾಕ್‌ ಆಗಿದ್ದೆ ರೋಚಕವಾಗಿದೆ. ಇನ್ನೂ ತನ್ನ ಜತೆಗೆ ಇದ್ದ ಹುಡುಗರನ್ನು ನಂಬಿಯೇ ನಾನು ಕೆಟ್ಟಿದ್ದು ಎಂದು ದರ್ಶನ್‌ ಅಳಲು ತೊಡಿಕೊಂಡಿದ್ದಾರೆ. ಇಷ್ಟಕ್ಕೂ ಬಂಧನದ ದಿನ ಏನೆಲ್ಲ ಆಯಿತು ಎಂಬ ಇಂಟರೆಸ್ಟಿಂಗ್‌ ಸ್ಟೋರಿ ಇಲ್ಲಿದೆ.

VISTARANEWS.COM


on

By

Actor darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌(Actor Darshan) ಗ್ಯಾಂಗ್‌ ಜೈಲುಪಾಲಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಪೊಲೀಸರು ಶುರು ಮಾಡಿದ್ದಾರೆ. ಈ ಮಧ್ಯೆ ಪೊಲೀಸರ ಬಳಿ ದರ್ಶನ್‌ ಆಪ್ತೆ ಪವಿತ್ರಾಗೌಡ ಲಾಕ್ ಆಗಿದ್ದೆ ರೋಚಕವಾಗಿದೆ.

ದರ್ಶನ್ ಬಂಧನಕ್ಕೆ ಹೊರಟಿದ್ದ ವೇಳೆಯೇ ಪೊಲೀಸರು ಪವಿತ್ರಾಗೂ ಬಲೆ ಬೀಸಿದ್ದರು. ಜೂನ್ 11ರ ಬೆಳಗ್ಗೆ ದರ್ಶನ್ ಬಂಧಿಸಲು ಮೈಸೂರಿಗೆ ತೆರಳಿದ್ದಾಗ, ಈ ವೇಳೆ ಎರಡು ತಂಡ ರಚಿಸಿ ಪವಿತ್ರಾ ಗೌಡಗೂ ಬಲೆ ಬೀಸಿದ್ದರು. ಆದರೆ ಪೊಲೀಸರ ಎರಡೂ ತಂಡಕ್ಕೂ ಚಾಲಾಕಿ ಪವಿತ್ರಾ ಸಿಕ್ಕಿರಲಿಲ್ಲ.

ಹೀಗಾಗಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದ ಪೊಲೀಸರು ಮೈಸೂರಿನಲ್ಲೇ ದರ್ಶನ್ ಮೂಲಕವೇ ಪವಿತ್ರಾಳನ್ನು ಸಂಪರ್ಕಿಸಿದ್ದರು. ದರ್ಶನ್ ಫೋನ್‌ನಿಂದಲೇ ಪವಿತ್ರಾಗೌಡಗೆ ಫೋನ್ ಮಾಡಿಸಿ ಎಲ್ಲೂ ಹೋಗದಂತೆ ಸೂಚನೆ ನೀಡಲಾಗಿತ್ತು. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಹೋಗು ಎಂದು ದರ್ಶನ್‌ ಪವಿತ್ರಾಗೆ ಹೇಳಿದ್ದರು. ಹೀಗಾಗಿ ದರ್ಶನ್ ಮಾತಿನಂತೆ ಪೊಲೀಸ್ ಠಾಣೆಗೆ ಪವಿತ್ರಾ ಹಾಜರಾಗಿದ್ದರು. ಪವಿತ್ರಾ ಕಾಮಾಕ್ಷಿಪಾಳ್ಯ ಠಾಣೆಯ ಬದಲು ಆರ್ ಆರ್ ನಗರ ಠಾಣೆಗೆ ಹಾಜರಾಗಿದ್ದಳು. ತದನಂತರ ಕಾಮಾಕ್ಷಿಪಾಳ್ಯ ಪೊಲೀಸರು ಕರೆತಂದು ಬಂಧಿಸಿದ್ದರು.

ಇದನ್ನೂ ಓದಿ:Actor Darshan: ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿದ ಹೈಕೋರ್ಟ್

ಠಾಣೆಗೆ ಬಂದ ಕೂಡಲೇ ಪೊಲೀಸರ ಮುಂದೆ ದರ್ಶನ್ ಹೇಳಿದ್ದೇನು?

ಮೈಸೂರಿನಲ್ಲಿ ಬಂಧಿಸಿ ದರ್ಶನ್‌ನನ್ನು ಬೆಂಗಳೂರಿಗೆ ಕರೆತರಲಾಗಿತ್ತು. ಠಾಣೆಗೆ ಬರುತ್ತಿದ್ದಂತೇ ದರ್ಶನ್ ಹೇಳಿದ ಮೊದಲ ಮಾತೇನು ಗೊತ್ತಾ? ನನ್ನ ಜತೆ‌ ಇದ್ದ ಈ ಹುಡುಗರಿಂದ ನಾನು ಹಾಳಾದೆ ಎಂದಿದ್ದರಂತೆ. ಹುಡುಗರನ್ನು ನಂಬಿ ನಾನು ಕೆಟ್ಟೆ ಎಂದು ಹೇಳಿಕೊಂಡಿದ್ದರಂತೆ.

ಚಾರ್ಜ್‌ಶೀಟ್‌ ಸಲ್ಲಿಸಲು ತಯಾರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರಿಂದ ತಯಾರಿ ನಡೆದಿದೆ. ಇಲ್ಲಿಯವರೆಗೆ ಸಾಕ್ಷ್ಯ ಕಲೆ‌ ಹಾಕಿ,ಸ್ಥಳ ಮಹಜರು ನಡೆಸಿ,ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ. ಬರೋಬ್ಬರಿ 52 ಸ್ಥಳ ಮಹಜರು,150 ಜನರ ಹೇಳಿಕೆ ದಾಖಲಿಸಿದ್ದಾರೆ. ಚಿತ್ರದುರ್ಗದ ಕಿಡ್ನ್ಯಾಪ್ ಜಾಗದಿಂದ ಹಿಡಿದು ಮೃತದೇಹ ಎಸೆದಿದ್ದ ಜಾಗದವರೆಗೆ ಮಹಜರ್ ಮಾಡಲಾಗಿದೆ.

ಪಟ್ಟಣಗೆರೆ ಶೆಡ್, ದರ್ಶನ್ ನಿವಾಸ, ಪವಿತ್ರಾ ಗೌಡ ನಿವಾಸ ಸೇರಿದಂತೆ ಸ್ಟೋನಿ ಬ್ರೂಕ್ ಪಬ್, ಮೃತ ದೇಹ ಎಸೆದ ಸತ್ವ ಅಪಾರ್ಟ್ ಮೆಂಟ್ ಎದುರಿನ‌ ಕಾಲುವೆ ಸೇರಿದಂತೆ ಕೊಲೆಯ ನಂತರದ‌ ಮಾತುಕತೆ ಜಾಗಗಳು ಸೇರಿ 52 ಕಡೆ ಸ್ಥಳ ಮಹಜರು ಮಾಡಲಾಗಿದೆ. ಪ್ರಕರಣದಲ್ಲಿ ಸಾಕ್ಷಿಯಾಗಿರುವ 150 ಜನರ‌ ಹೇಳಿಕೆ‌ ದಾಖಲಾಗಿದೆ.

ಘಟನೆ ಸಂಬಂಧಿಸಿದಂತೆ ಆರೋಪಿಗಳು ಎಲ್ಲೆಲ್ಲಿ ತೆರಳಿದ್ದರು. ಯಾರ್ಯಾರ ಸಂಪರ್ಕ ಮಾಡಿದ್ದರು? ಪೆಟ್ರೋಲ್ ಬಂಕ್ ಸಿಬ್ಬಂದಿ‌, ಹೋಟೆಲ್ ಸಿಬ್ಬಂದಿ, ಸಹಚರರ ಹೇಳಿಕೆ ಸೇರಿ ಒಟ್ಟಾರೆಯಾಗಿ ಬರೋಬ್ಬರಿ 150 ಕ್ಕೂ ಹೆಚ್ಚು ಜನರ ಹೇಳಿಕೆ ದಾಖಲಾಗಿದೆ.

ಪುಸ್ತಕದ ಮೊರೆ ಹೋದ ದರ್ಶನ್‌

ನಟ ದರ್ಶನ್ ಜೈಲಿನಲ್ಲಿ ಕಳೆದ 64 ದಿನದಿಂದ ಮಂಕಾಗಿ ಕಾಲ ಕಳೆಯುತ್ತಿದ್ದಾರೆ. ನಿಧಾನವಾಗಿ ಜೈಲಿನ ಪರಿಸರಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ಬೇಜಾರು ಕಳೆಯೋದಕ್ಕೆ ವಾಲಿಬಾಲ್ ಆಟಕ್ಕೆ ಇಳಿದಿದ್ದಾರೆ. ಈಗಾಗಲೇ ಜೈಲೊಳಗಡೆ ಪುಸ್ತಕದ ಮೊರೆ ಹೋಗಿದ್ದು, ಜತೆಗೆ ಬೇಜಾರು ಕಳೆಯಲು ವಾಲಿಬಾಲ್ ಕೂಡ ಆಡುತ್ತಿದ್ದಾರೆ. ಜೈಲಿನ‌ ಇತರೆ ಖೈದಿಗಳ‌ ಜತೆ ಸೇರಿ ವಾಲಿಬಾಲ್ ಆಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿದ; ಚೈನ್ ಸ್ನಾಚಿಂಗ್‌ಗೆ ಇಳಿದು ಸಿಕ್ಕಿಬಿದ್ದ

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟ ಮೈಗೂಡಿಸಿಕೊಂಡು ಮೈತುಂಬ ಸಾಲ ಮಾಡಿಕೊಂಡಿದ್ದವನೊಬ್ಬ ಸಾಲ ತೀರಿಸಲು ಸರಗಳ್ಳತನಕ್ಕೆ ಇಳಿದು ಇದೀಗ ಸಿಕ್ಕಿಬಿದ್ದಿದ್ದಾನೆ. ಕತ್ರಿಗುಪ್ಪೆ ನಿವಾಸಿ ಕುಮಾರ್ ಬಂಧಿತ. ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ಗೇಮ್ ಆಡುತ್ತಿದ್ದ ಆರೋಪಿ ಕುಮಾರ್ ಈ ವೇಳೆ ಸಾಕಷ್ಟು ಹಣ ಕಳೆದುಕೊಂಡಿದ್ದ. ಬೆಟ್ಟಿಂಗ್‌ ಕಾರಣಕ್ಕೆ ಒಂದಲ್ಲ, ಎರಡಲ್ಲ ಬರೋಬ್ಬರಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಸಾಲ ತೋರಿಸಲು ಸರಗಳ್ಳತನಕ್ಕೆ ಇಳಿದಿದ್ದ.

VISTARANEWS.COM


on

Chain snatching Case
Koo

ಬೆಂಗಳೂರು: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದವರು ಹಣಕ್ಕಾಗಿ ಯಾವ ಅಡ್ಡ ದಾರಿಯನ್ನಾದರೂ ಹಿಡಿಯಲು ತಯಾರಿರುತ್ತಾರೆ ಎನ್ನುವುದಕ್ಕೆ ಈತನೇ ಉತ್ತಮ ನಿದರ್ಶನ. ಹೌದು, ಆನ್‌ಲೈನ್‌ ಬೆಟ್ಟಿಂಗ್ ಚಟ ಮೈಗೂಡಿಸಿಕೊಂಡು ಮೈತುಂಬ ಸಾಲ ಮಾಡಿಕೊಂಡಿದ್ದವನೊಬ್ಬ ಮಾಡಿದ ಸಾಲ ತೀರಿಸಲು ಸರಗಳ್ಳತನಕ್ಕೆ (Chain snatching case)  ಇಳಿದು ಇದೀಗ ಸಿಕ್ಕಿಬಿದ್ದಿದ್ದಾನೆ. ಕತ್ರಿಗುಪ್ಪೆ ನಿವಾಸಿ ಕುಮಾರ್ ಬಂಧಿತ ಆರೋಪಿ.

ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ಗೇಮ್ ಆಡುತ್ತಿದ್ದ ಆರೋಪಿ ಕುಮಾರ್ ಈ ವೇಳೆ ಸಾಕಷ್ಟು ಹಣ ಕಳೆದುಕೊಂಡಿದ್ದ. ಬೆಟ್ಟಿಂಗ್‌ ಕಾರಣಕ್ಕೆ ಒಂದಲ್ಲ, ಎರಡಲ್ಲ ಬರೋಬ್ಬರಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಹಣ ಸಾಲ ಕೊಟ್ಟವರು ವಾಪಾಸ್ ನೀಡುವಂತೆ ಕೇಳತೊಡಗಿದಾಗ ಕುಮಾರ್‌ ಸರಗಳ್ಳತನಕ್ಕೆ ಇಳಿದಿದ್ದ.

ವಿಳಾಸ ಕೇಳುವ ನೆಪ

ಸರಗಳ್ಳತನಕ್ಕೆ ಕುಮಾರ್‌ ಖತರ್ನಾಕ್‌ ಯೋಜನೆ ರೂಪಿಸಿದ್ದ. ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರ ಗಮನ ಬೇರೆಡೆ ಸೆಳೆದು ಸರಕಳವು ಮಾಡುತ್ತಿದ್ದ. ಗಿರಿನಗರದ ಬೈರಪ್ಪ ಲೇಔಟ್‌ನಲ್ಲಿ ಕೃತ್ಯ ಎಸಗಿದ್ದ ವೇಳೆ ಸಿಕ್ಕಿಬಿದ್ದಿದ್ದ. ಸದ್ಯ ಕುಮಾರ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಪೊಲೀಸರಿಂದ ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಕುಮಾರ್‌ ಮಾಡಿದ ಸಾಲ ತೀರಿಸಲು ಆಟೋವನ್ನೂ ಅಡವಿಟ್ಟಿದ್ದ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಸಾಲದ ಸಂಗತಿ ಬೆಳೆಕಿಗೆ ಬಂದಿದ್ದು, ತನಿಖೆ ಮುಂದುವರಿದಿದೆ.

ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದವ ಬಂಧನ

ಬೆಂಗಳೂರು: ಸುಲಭವಾಗಿ ಹಣ ಮಾಡಲು ಖತರ್ನಾಕ್ ಪ್ಲ್ಯಾನ್‌ ಮಾಡಿದ್ದ ವಂಚಕನೊಬ್ಬ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದು ಕಾರು ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಜಮೀಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಖತರ್ನಾಕ್ ಪ್ಲ್ಯಾನ್‌?

ಹಾಗಾದರೆ ಈತ ಮಾಡುತ್ತಿದ್ದ ಖತರ್ನಾಕ್ ಕೆಲಸ ಏನು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಕಾರು ಚಾಲಕರೇ ಈತನ ಟಾರ್ಗೆಟ್. ಕಾರಿಗೆ ಬೇಕಂದೇ ಬೈಕ್ ಟಚ್ ಮಾಡಿ ಹಣ ಕೀಳುತ್ತಿದ್ದ. ʼʼಕಾರು ಹೋಗುವಾಗ ಜಮೀಲ್‌ ತನ್ನ ಬೈಕ್‌ ಅನ್ನು ಬೇಕಂತಲೇ ಟಚ್ ಮಾಡುತ್ತಿದ್ದ. ಬಳಿಕ ದೂರು ಕೊಡುತ್ತೇನೆ ಎಂದು ಬೆದರಿಸಿ ಚಾಲಕರಿಂದ ಹಣ ಕೀಳುತ್ತಿದ್ದʼʼ ಎಂದು ಪೊಲೀಸರು ತಿಳಿಸಿದ್ದಾರೆ. ʼʼಕಾರು ಟಚ್ ಅಗಿದೆ ಎಂದು ಮಧ್ಯ ರಸ್ತೆಯಲ್ಲಿ ಅಡ್ಡ ಹಾಕುತ್ತಿದ್ದ. ಡ್ಯಾಮೇಜ್ ಸರಿಪಡಿಸಲು ದುಡ್ಡು ಕೊಡಿ ಎಂದು ಬಲ ಪ್ರಯೋಗ ಮಾಡುತ್ತಿದ್ದ. ದುಡ್ಡು ಕೊಡದೆ ಹೋದ್ರೆ ದೂರು ಕೊಡ್ತೀನಿ ಎಂದು ಹೆದರಿಸುತ್ತಿದ್ದʼʼ ಎಂದು ಹೇಳಿದ್ದಾರೆ.

ಈತನ ಮೇಲೆ ಇದುವರೆಗೆ ಒಟ್ಟು 17 ಪ್ರಕರಣ ದಾಖಲಾಗಿದೆ. ರಾಜ್ಯದ ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ ವಿವಿಧ ಪ್ರಕರಣಗಳಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಕ್ಕಿ ಬಿದ್ದಿದ್ದು ಹೇಗೆ?

ಜಯನಗರ ಠಾಣಾ ವ್ಯಾಪ್ತಿಯಲ್ಲೂ ಕೂಡ ಇದೇ ರೀತಿ ಮಾಡಿ 30,000 ರೂ. ಪಡೆದಿದ್ದ ಜಮೀಲ್‌ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ಜಯನಗರ ಠಾಣೆಗೆ ಕಾರು ಚಾಲಕ ದೂರು ಕೊಟ್ಟಿದ್ದ. ಹೀಗಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Chain snatching Case : ಜಾಬ್‌ಗೆ ಹೋಗುವ ಹೆಣ್ಮಕ್ಕಳೇ ಟಾರ್ಗೆಟ್‌‌ ; ಸರಗಳ್ಳರ ಗ್ಯಾಂಗ್‌ಗೆ ಸಖತ್ ಗೂಸಾಇದನ್ನೂ ಓದಿ:

Continue Reading

ಪ್ರಮುಖ ಸುದ್ದಿ

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Unified pension scheme: ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ಯುಪಿಎಸ್ ಪಿಂಚಣಿ ಯೋಜನೆ ಜಾರಿಗೆ ಶೇಕಡ 50ರಷ್ಟು ಪಿಂಚಣಿ ನೀಡಲು ತೆಗೆದುಕೊಂಡಿರುವ ತೀರ್ಮಾನ ತೃಪ್ತಿ ತಂದಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ. ನಮ್ಮ ಬೇಡಿಕೆ ಹಳೆ ಪಿಂಚಣಿಯ ಮರು ಸ್ಥಾಪನೆ ಮಾತ್ರ ಎಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಹೇಳಿದ್ದಾರೆ.

VISTARANEWS.COM


on

unified pension scheme
Koo


ಬೆಂಗಳೂರು: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಹೊಸ ಯುಪಿಎಸ್ ಪಿಂಚಣಿ ಯೋಜನೆ(Unified pension scheme)ಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ(Karnataka government employees) ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ಈ ನಿರ್ಧಾರ ತೃಪ್ತಿಕರವಲ್ಲ ಎಂದು ಈ ಸಂಘಗಳು ಅಭಿಪ್ರಾಯಪಟ್ಟಿವೆ

ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ಯುಪಿಎಸ್ ಪಿಂಚಣಿ ಯೋಜನೆ ಜಾರಿಗೆ ಶೇಕಡ 50ರಷ್ಟು ಪಿಂಚಣಿ ನೀಡಲು ತೆಗೆದುಕೊಂಡಿರುವ ತೀರ್ಮಾನ ತೃಪ್ತಿ ತಂದಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಮತ್ತೊಮ್ಮೆ ಪುನರ್ ಪರಿಶೀಲಿಸಿ ಶೇಕಡ 100ರಷ್ಟು ಪಿಂಚಣಿ ನೀಡಲು ಆಗ್ರಹಿಸುತ್ತೇವೆ ಎಂದು ಷಡಾಕ್ಷರಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಪೂರ್ಣವಾಗಿ ವಿರೋಧಿಸುತ್ತದೆ ಎಂದು ಈ ಸಂಘದ ಅಧ್ಯಕ್ಷ ಶಾಂತಾರಾಮ್ ಅವರು ಹೇಳಿಕೆ ನೀಡಿದ್ದಾರೆ. ನಮ್ಮ ಬೇಡಿಕೆ ಹಳೆ ಪಿಂಚಣಿಯ ಮರು ಸ್ಥಾಪನೆ ಮಾತ್ರ ಎಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಹೇಳಿದ್ದಾರೆ.

ಏನಿದು ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆ?:

ಇದು ಸರ್ಕಾರಿ ನೌಕರರಿಗೆ ಇತ್ತೀಚಿನ ಪಿಂಚಣಿ ಯೋಜನೆಯಾಗಿದೆ. ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ಮೊತ್ತದ ಭರವಸೆ ನೀಡುವ ಯೋಜನೆ ಇದಾಗಿದೆ. UPS ಅಡಿಯಲ್ಲಿ, ನಿಗದಿತ ಪಿಂಚಣಿಯು ಕಳೆದ 12 ತಿಂಗಳುಗಳ ಅವಧಿಯಲ್ಲಿ ಪಡೆದ ಸರಾಸರಿ ಮೂಲ ವೇತನದ 50 ಪ್ರತಿಶತದಷ್ಟಿರುತ್ತದೆ.ಇದು ಖಚಿತವಾದ ಕುಟುಂಬ ಪಿಂಚಣಿಯನ್ನು ಸಹ ಹೊಂದಿರುತ್ತದೆ, ಇದು ಉದ್ಯೋಗಿಯ ಮೂಲ ವೇತನದ 60 ಪ್ರತಿಶತವಾಗಿದೆ. ನೌಕರನ ಮರಣದ ಸಂದರ್ಭದಲ್ಲಿ ಅದನ್ನು ತಕ್ಷಣವೇ ನೀಡಲಾಗುವುದು. ಕನಿಷ್ಠ 10 ವರ್ಷಗಳ ಸೇವೆಯ ನಂತರ ನಿವೃತ್ತಿಯ ಸಂದರ್ಭದಲ್ಲಿ, UPS ತಿಂಗಳಿಗೆ 10,000 ರೂ.ಗಳ ಖಚಿತವಾದ ಕನಿಷ್ಠ ಪಿಂಚಣಿಯನ್ನು ಒದಗಿಸುತ್ತದೆ.

ಯುಪಿಎಸ್‌ಗೆ ಯಾರು ಸೇರಬಹುದು?

“ಕೇಂದ್ರ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆಯಲ್ಲಿ (ಎನ್‌ಪಿಎಸ್) ಉಳಿಯಲು ಅಥವಾ ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಸೇರಲು ನಿರ್ಧರಿಸುವ ಹಕ್ಕನ್ನು ಹೊಂದಿರುತ್ತಾರೆ” ಎಂದು ವೈಷ್ಣವ್ ಹೇಳಿದರು. ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ ನಿಯೋಜಿತ ಟಿ ವಿ ಸೋಮನಾಥನ್ ಅವರು, “ಇದು ಈಗಾಗಲೇ ಎನ್‌ಪಿಎಸ್ ಅಡಿಯಲ್ಲಿ 2004 ರಿಂದ ನಿವೃತ್ತರಾದ ಎಲ್ಲರಿಗೂ ಅನ್ವಯಿಸುತ್ತದೆ. ಹೊಸ ಯೋಜನೆಯು ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆಯಾದರೂ, NPS ಪ್ರಾರಂಭವಾದ ಸಮಯದಿಂದ ನಿವೃತ್ತರಾದ ಪ್ರತಿಯೊಬ್ಬರೂ ಮತ್ತು ಮಾರ್ಚ್ 31, 2025 ರವರೆಗೆ ನಿವೃತ್ತರಾದವರು ಸೇರಿದಂತೆ, UPS ನ ಈ ಎಲ್ಲಾ ಐದು ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ” ಎಂದಿದ್ದಾರೆ.

ಇದನ್ನೂ ಓದಿ: NPS v/s UPS: ಏಕೀಕೃತ ಪಿಂಚಣಿ ಯೋಜನೆ ಅಂದ್ರೆ ಏನು? ಇದು NPSಗಿಂತ ಹೇಗೆ ಭಿನ್ನ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Continue Reading

ಮಳೆ

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Karnataka Rain : ಕರಾವಳಿಯಲ್ಲಿ ಇಂದಿನಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿಗೂ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Karnataka Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಉತ್ತರ ಒಳನಾಡು, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಹುಡ್ಗಿ ವಿಷ್ಯಕ್ಕೆ ರೂಮ್‌ನಲ್ಲಿ ಕೂಡಿ ಹಾಕಿ ಯುವಕನಿಗೆ ರಕ್ತ ಬರುವಂತೆ ಥಳಿತ; ವಿಡಿಯೊ ವೈರಲ್‌

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ. ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇವೆ.

ಕರಾವಳಿಗೂ ಮಳೆ ಅಲರ್ಟ್‌

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಆಗಸ್ಟ್‌ 27 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೇಲಿನ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಮುಂದಿನ 48 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gold Rate Today
ಚಿನ್ನದ ದರ6 seconds ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬಂಗಾರ ಖರೀದಿಯ ಮುನ್ನ ಬೆಲೆ ಚೆಕ್‌ ಮಾಡಿ

Actor darshan
ಸ್ಯಾಂಡಲ್ ವುಡ್6 mins ago

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Western Ghats
ಕರ್ನಾಟಕ31 mins ago

Western Ghats: ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

Israel vs Hezbollah War
ವಿದೇಶ49 mins ago

Israel vs Hezbollah War: ಹೆಜ್ಬುಲ್ಲಾ ಉಗ್ರರ ಅಟ್ಟಹಾಸ; ಲೆಬನಾನ್‌ ಮೇಲೆ ರಾಕೆಟ್​ ದಾಳಿ ಆರಂಭಿಸಿದ ಇಸ್ರೇಲ್​; ಭಯಾನಕ ವಿಡಿಯೊ ಇಲ್ಲಿದೆ

Dhanya Ramkumar-Vicky Varun starrer Kaalapathar to release on September 13
ಸಿನಿಮಾ1 hour ago

Dhanya Ramkumar: ತೆರೆಗೆ ಸಿದ್ಧವಾಯ್ತು ಕಾಲಾಪತ್ಥರ್‌; ಸೆ.13ಕ್ಕೆ ಧನ್ಯಾ ರಾಮ್‌ಕುಮಾರ್- ವಿಕ್ಕಿ ವರುಣ್‌ ನಟನೆ ಮೋಡಿ

Karkala Shocker
ಕರ್ನಾಟಕ1 hour ago

Karkala Shocker: ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿದ ಅಲ್ತಾಫ್‌ಗೆ ಕಠಿಣ ಶಿಕ್ಷೆಯಾಗಲಿ ಎಂದ ಮುಸ್ಲಿಂ ಒಕ್ಕೂಟ

Pavel Durov Arrest
ವಿದೇಶ1 hour ago

Pavel Durov Arrest: ಟೆಲಿಗ್ರಾಂ ಸಿಇಒ ಪಾವೆಲ್‌‌ ಫ್ರಾನ್ಸ್‌‌ನಲ್ಲಿ ಬಂಧನ; ಕಾರಣ ಏನು?

CBI Raid
ದೇಶ2 hours ago

CBI Raid: ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸದ ಮೇಲೆ ಸಿಬಿಐ ದಾಳಿ

Israel strike
ವಿದೇಶ2 hours ago

Israel strike: ರಾಕೆಟ್ ದಾಳಿ; ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Rohit Sharma
ಕ್ರೀಡೆ3 hours ago

Rohit Sharma: ಪಾರ್ಕ್​ನಲ್ಲಿ ಅಭ್ಯಾಸ ನಡೆಸಿದ ರೋಹಿತ್​; ವಿಡಿಯೊ ವೈರಲ್​

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ21 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌