Akkineni Nagarjuna: ಟಾಲಿವುಡ್‌ ಸ್ಟಾರ್‌ ನಾಗಾರ್ಜುನಗೆ ಸೇರಿದ ಕನ್ವೆನ್ಷನ್ ಸೆಂಟರ್ ನೆಲಸಮ; ನಿಯಮ ಉಲ್ಲಂಘಿಸಿದ್ರಾ ನಟ? - Vistara News

ಸಿನಿಮಾ

Akkineni Nagarjuna: ಟಾಲಿವುಡ್‌ ಸ್ಟಾರ್‌ ನಾಗಾರ್ಜುನಗೆ ಸೇರಿದ ಕನ್ವೆನ್ಷನ್ ಸೆಂಟರ್ ನೆಲಸಮ; ನಿಯಮ ಉಲ್ಲಂಘಿಸಿದ್ರಾ ನಟ?

Akkineni Nagarjuna: ಖ್ಯಾತ ಟಾಲಿವುಡ್‌ ನಟ ಅಕ್ಕಿನೇನಿ ನಾಗಾರ್ಜುನ ಅವರಿಗೆ ಸೇರಿದ ಎನ್-ಕನ್ವೆನ್ಷನ್ ಸೆಂಟರ್ ಅನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಹೈದರಾಬಾದ್‌ ನಗರದ ಮಾದಾಪುರದ ತಮ್ಮಿಡಿಕುಂಟಾ ಸರೋವರದ ಫುಲ್‌ ಟ್ಯಾಂಕ್ ಲೆವೆಲ್‌ ಪ್ರದೇಶ ಮತ್ತು ಬಫರ್ ವಲಯವನ್ನು ಅತಿಕ್ರಮಿಸಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Akkineni Nagarjuna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಖ್ಯಾತ ಟಾಲಿವುಡ್‌ ನಟ ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಅವರಿಗೆ ಹೈದರಾಬಾದ್‌ ಡಿಸಾಸ್ಟರ್‌ ರೆಸ್ಪಾನ್ಸ್‌ ಆ್ಯಂಡ್‌ ಅಸ್ಸೆಟ್ಸ್‌ ಮಾನಿಟರಿಂಗ್‌ ಆ್ಯಂಡ್‌ ಪ್ರೊಟೆಕ್ಷನ್‌ (HYDRA)ನ ಅಧಿಕಾರಿಗಳು ಬಹುದೊಡ್ಡ ಶಾಕ್‌ ಕೊಟ್ಟಿದ್ದಾರೆ. ನಗರದ ಮಾದಾಪುರದ ತಮ್ಮಿಡಿಕುಂಟಾ ಸರೋವರ (Thammidikunta Lake)ದ ಫುಲ್‌ ಟ್ಯಾಂಕ್ ಲೆವೆಲ್‌ (FTL) ಪ್ರದೇಶ ಮತ್ತು ಬಫರ್ ವಲಯವನ್ನು ಅತಿಕ್ರಮಿಸಿದ ಆರೋಪದ ಮೇಲೆ ನಾಗಾರ್ಜುನ ಅವರ ಎನ್-ಕನ್ವೆನ್ಷನ್ ಸೆಂಟರ್ ಅನ್ನು ನೆಲಸಮಗೊಳಿಸಿದ್ದಾರೆ.

ಜಲಮೂಲಗಳು ಮತ್ತು ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿರುವ ಅಕ್ರಮ ನಿರ್ಮಾಣಗಳನ್ನು ತೆಗೆದುಹಾಕುವ ಕಾರ್ಯಾಚರಣೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್‌-ಕನ್ವೆನ್ಷನ್‌ ಸೆಂಟರ್‌ ಅನ್ನು ಸುಮಾರು 10 ಎಕ್ರೆಯಲ್ಲಿ ನಿರ್ಮಿಸಲಾಗಿದೆ. ಎನ್-ಕನ್ವೆನ್ಷನ್ ಸೆಂಟರ್ ಮದುವೆ, ಕಾರ್ಪೋರೇಟ್‌ ಕೂಟಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳ ಅಯೋಜನೆಗೆ ಜನಪ್ರಿಯ ಸ್ಥಳವಾಗಿ ಗುರುತಿಸಿಕೊಂಡಿದೆ.

ಈ ವರ್ಷದ ಆರಂಭದಲ್ಲಿ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC)ನ ವಲಯ ಆಯುಕ್ತರಿಗೆ ನಗರ ಮತ್ತು ಸುತ್ತಮುತ್ತಲಿನ ಜಲಮೂಲಗಳ ಅತಿಕ್ರಮಣವನ್ನು ತಡೆಗಟ್ಟಲು ಸರೋವರ ಸಂರಕ್ಷಣಾ ಸಮಿತಿಗಳನ್ನು ರಚಿಸುವಂತೆ ಸೂಚಿಸಲಾಗಿತ್ತು. ಇತ್ತೀಚೆಗೆ ಬಿಡುಗಡೆಗೊಂಡ ನ್ಯಾಷನಲ್‌ ರಿಮೋಟ್‌ ಸೆನ್ಸಿಂಗ್‌ ಸೆಂಟರ್‌ (NRSC)ನ ವರದಿಯು 1979 ಮತ್ತು 2024ರ ನಡುವೆ ಹೈದರಾಬಾದ್‌ನ ಸರೋವರಗಳ ವಿಸ್ತಾರವು ಶೇ. 61ರಷ್ಟು ಕಡಿಮೆಯಾಗಿದೆ ಎನ್ನುವ ಅಂಶವನ್ನು ಬಹಿರಂಗಪಡಿಸಿತ್ತು.

ನಾಗಾರ್ಜುನ ಅವರ ಕನ್ವೆನ್ಷನ್ ಸೆಂಟರ್ ಎಫ್‌ಟಿಎಲ್‌ ಪ್ರದೇಶದ 1.12 ಎಕ್ರೆ ಮತ್ತು ಬಫರ್ ವಲಯ ಹೆಚ್ಚುವರಿ 2 ಎಕರೆ ಪ್ರದೇಶದಲ್ಲಿದೆ ವ್ಯಾಪಿಸಿದೆ ಎಂದು ಆರೋಪಿಸಲಾಗಿದೆ. ಅಧಿಕೃತ ಮೂಲಗಳ ಪ್ರಕಾರ, ತಮ್ಮಿಡಿಕುಂಟಾ ಸರೋವರದ ಎಫ್‌ಟಿಎಸ್‌ ಪ್ರದೇಶದ ವ್ಯಾಪ್ತಿ ಸುಮಾರು 29.24 ಎಕ್ರೆ. ನಾಗಾರ್ಜುನ ಅವರಿಗೆ ಸೇರಿದ ಈ ಆಸ್ತಿಯು ಹಲವು ವರ್ಷಗಳಿಂದ ಪರಿಶೀಲನೆಯಲ್ಲಿತ್ತು. ಆದಾಗ್ಯೂ ಜಿಎಚ್ಎಂಸಿ ಅಧಿಕಾರಿಗಳು ಇದುವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ತೆಲಂಗಾಣದ ಸಚಿವ ಕೋಮಟಿರೆಡ್ಡಿ ವೆಂಕಟ್ ರೆಡ್ಡಿ ಅವರು ಕನ್ವೆನ್ಷನ್ ಸೆಂಟರ್ ವಿರುದ್ಧ ಬುಧವಾರ (ಆಗಸ್ಟ್‌ 21) ಹೈಡ್ರಾಗೆ ಅಧಿಕೃತ ದೂರು ನೀಡಿದ್ದರು. ಅವರು ತಮ್ಮ ದೂರಿನೊಂದಿಗೆ ಗೂಗಲ್ ಅರ್ಥ್ ಮ್ಯಾಪ್‌ನೊಂದಿಗೆ ಅತಿಕ್ರಮಣವನ್ನು ಸೂಚಿಸುವ ಎಫ್‌ಟಿಎಸ್‌ನ ಮ್ಯಾಪ್‌ ಅನ್ನೂ ಲಗತ್ತಿಸಿದ್ದರು.

ನಾಗಾರ್ಜುನ ಹೇಳಿದ್ದೇನು?

ಘಟನೆ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ನಾಗಾರ್ಜುನ ಆಘಾತ ವ್ಯಕ್ತಪಡಿಸಿದ್ದಾರೆ. ತಾವು ಯಾವುದೇ ಜಾಗವನ್ನು ಅತಿಕ್ರಮಿಸಿಲ್ಲ ಎಂದೂ ಹೇಳಿದ್ದಾರೆ. “ಇದು ಪಟ್ಟಾ ಭೂಮಿಯಾಗಿದ್ದು, ಕೆರೆಯ ಒಂದು ಇಂಚು ಸಹ ಅತಿಕ್ರಮಣವಾಗಿಲ್ಲ. ಕಾನೂನನ್ನು ಪಾಲಿಸುವ ನಾಗರಿಕನಾಗಿ, ನ್ಯಾಯಾಲಯವು ನನ್ನ ವಿರುದ್ಧ ತೀರ್ಪು ನೀಡಿದ್ದರೆ ನಾನೇ ನೆಲಸಮವನ್ನು ಮಾಡುತ್ತಿದ್ದೆ” ಎಂದು ಅವರು ಬರೆದುಕೊಂಡಿದ್ದಾರೆ. ಜತೆಗೆ ʼʼಕಟ್ಟಡ ನೆಲಸಮಕ್ಕೆ ಮೊದಲು ತನಗೆ ಯಾವುದೇ ನೋಟಿಸ್ ನೀಡಲಾಗಿಲ್ಲ. ಅಧಿಕಾರಿಗಳು ಕೈಗೊಂಡ ತಪ್ಪು ಕ್ರಮಗಳಿಗೆ ಸಂಬಂಧಿಸಿದಂತೆ ನಾವು ನ್ಯಾಯಾಲಯದಿಂದ ಸೂಕ್ತ ಪರಿಹಾರವನ್ನು ಕೋರುತ್ತೇವೆʼʼ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: Bulldozer Action: ಅಯೋಧ್ಯೆಯಲ್ಲಿ ಬುಲ್ಡೋಜರ್‌ ಸದ್ದು; ಅಪ್ರಾಪ್ತೆಯ ಅತ್ಯಾಚಾರ ಆರೋಪಿ ಮೊಯೀದ್‌ ಖಾನ್‌ಗೆ ಸೇರಿದ ಕಟ್ಟಡ ಪುಡಿಪುಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Revathy Sampath: ನಟಿಯ ಮೇಲೆ ಹಿರಿಯ ನಟನಿಂದ ಲೈಂಗಿಕ ದೌರ್ಜನ್ಯ; ಕೇರಳ ಚಿತ್ರರಂಗದಲ್ಲಿ ಮತ್ತೊಂದು ಕರಾಳ ವಿದ್ಯಮಾನ!

ಪಿಯುಸಿ ಮುಗಿದ ಬಳಿಕ ನನಗೆ ಭಯಾನಕ ಅನುಭವವಾಗಿದೆ. ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ನನಗೆ ಫೇಸ್ ಬುಕ್ ನಲ್ಲಿ ಸಂದೇಶ ಕಳುಹಿಸಿದ್ದರು. ಸಿನಿಮಾದ ಚರ್ಚೆಗೆ ಕರೆದಿದ್ದರು. ಚರ್ಚೆಯ ವೇಳೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈಗ ಅವರು ತೋರಿಸುವ ಮುಖ ನಾನು ಅಂದು ನೋಡಿದ ಮುಖವಲ್ಲ ಎಂದು ನಟಿ ರೇವತಿ ಸಂಪತ್ (Revathy Sampath) ಆರೋಪಿಸಿದ್ದಾರೆ.

VISTARANEWS.COM


on

By

Revathy Sampath
Koo

ಮಲಯಾಳಂ ಚಲನಚಿತ್ರ (Malayalam movie) ಕಲಾವಿದರ ಸಂಘದ (AMMA) ಪ್ರಧಾನ ಕಾರ್ಯದರ್ಶಿ ಆಗಿರುವ ಹಿರಿಯ ನಟ ಸಿದ್ದಿಕ್ (Veteran actor Siddique) ತಮ್ಮ ಮೇಲೆ ಲೈಂಗಿಕ ದೌರ್ಜನ್ಯ (Sexual assault) ನಡೆಸಿದ್ದಾರೆ ಎಂದು ನಟಿ ರೇವತಿ ಸಂಪತ್ (Revathy Sampath) ಆರೋಪಿಸಿದ್ದಾರೆ. ತಾವು 21 ವರ್ಷದವಳಿದ್ದಾಗ ಈ ಘಟನೆ ನಡೆದಿರುವುದಾಗಿ ಹೇಳಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ ಸಿದ್ದಿಕ್‌ ರಾಜೀನಾಮೆ ನೀಡಿದ್ದು, ಕೇರಳ ಚಿತ್ರರಂಗದಲ್ಲಿ ಈ ಪ್ರಕರಣದ ಕುರಿತು ಸಂಚಲನ ಉಂಟಾಗಿದೆ.

ಹೇಮಾ ಸಮಿತಿ ವರದಿಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಮಾಧ್ಯಮ ಸಂವಾದದ ವೇಳೆ ಮಾತನಾಡಿದ ಅವರು, ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಸಿದ್ದಿಕ್ ಮೊದಲು ತಮ್ಮನ್ನು ಮೋಲ್ ಎಂದು ಕರೆದರು. ಮೋಲ್ ಎಂಬುದನ್ನು ಕೇರಳದಲ್ಲಿ ಸಾಮಾನ್ಯವಾಗಿ ಚಿಕ್ಕ ಹುಡುಗಿ ಅಥವಾ ಮಗಳನ್ನು ಉಲ್ಲೇಖಿಸಲು ಬಳಸಲಾಗುತ್ತದೆ ಎಂದು ತಿಳಿಸಿದರು.

ಪಿಯುಸಿ ಮುಗಿದ ಬಳಿಕ ನನಗೆ ಈ ಭಯಾನಕ ಅನುಭವವಾಗಿದೆ. ಸಿದ್ದಿಕ್ ನನಗೆ ಫೇಸ್ ಬುಕ್ ನಲ್ಲಿ ಸಂದೇಶ ಕಳುಹಿಸಿದ್ದರು. ಸಿನಿಮಾದ ಚರ್ಚೆಗೆ ಕರೆದಿದ್ದರು. ಚರ್ಚೆಯ ವೇಳೆ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈಗ ಅವರು ತೋರಿಸುವ ಮುಖ ನಾನು ಅಂದು ನೋಡಿದ ಮುಖವಲ್ಲ ಎಂದು ರೇವತಿ ಹೇಳಿದ್ದಾರೆ. ಸಿದ್ದಿಕ್ ಅವರು ʼಅಮ್ಮ ʼ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿರುವುದಾಗಿ ಅಮ್ಮಾ ಉಪಾಧ್ಯಕ್ಷ ಜಯನ್ ಚೇರ್ತಲ ಖಚಿತಪಡಿಸಿದ್ದಾರೆ.


ಸಿದ್ದಿಕ್ ಅವರನ್ನು “ಕ್ರಿಮಿನಲ್” ಎಂದು ಕರೆದ ನಟಿ ರೇವತಿ, ಸಿದ್ದಿಕ್ ತಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ತಮ್ಮ ಮೇಲೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಲ್ಲೆ ನಡೆಸಿದ ಬಳಿಕ ನಾನು ತೀವ್ರ ಮಾನಸಿಕ ಆಘಾತ ಅನುಭವಿಸಿದೆ. ಇದು ನನ್ನ ವೃತ್ತಿ ಜೀವನದ ಮೇಲೂ ಪರಿಣಾಮ ಬೀರಿದೆ. ಯಾವ ವ್ಯವಸ್ಥೆಯೂ ನನ್ನ ಬೆಂಬಲಕ್ಕೆ ನಿಂತಿರಲಿಲ್ಲ. ಮಾತನಾಡಲು ನನಗೆ ಬಹಳ ಸಮಯ ಹಿಡಿಯಿತು. ಘಟನೆಯ ಬಳಿಕ ಸಿದ್ದಿಕ್ ಏನೂ ಆಗಿಲ್ಲ ಎಂಬಂತೆ ವರ್ತಿಸಿ ನನ್ನ ಮುಂದೆ ಸಾಮಾನ್ಯ ಎಂಬಂತೆ ನಿಂತಿದ್ದರು. ಇದು ಸಾಮಾನ್ಯ ಸಂಗತಿ ಎಂಬಂತೆ ಎಲ್ಲರೂ ಪ್ರತಿಕ್ರಿಯಿಸಿದರು. ಅವರೆಲ್ಲರೂ ಇದನ್ನು ತಿಳಿದೇ ಮಾಡಿದ್ದಾರೆ ಎಂದು ಅನಿಸಿತು.

ಪರಿಸ್ಥಿತಿಯಿಂದ ಪಾರಾಗಲು ಓಡಿಹೋದೆ. ಆ ವಯಸ್ಸಿನಲ್ಲಿ ನಾನು ಸಾಧ್ಯವಾದಷ್ಟು ಉತ್ತಮವಾಗಿ ಪ್ರತಿಕ್ರಿಯಿಸಿದೆ. ನಾನು ಏನೂ ಮಾಡಲೂ ಸಾಧ್ಯವಿರಲಿಲ್ಲ. ಓಡಿಹೋಗಿ ಆಟೋ ಹತ್ತಿ ಪರಾರಿಯಾದೆ ಎಂದು ರೇವತಿ ಹೇಳಿದ್ದಾರೆ. ಮಲಯಾಳಂ ಚಲನಚಿತ್ರೋದ್ಯಮದಲ್ಲಿನ ಕೆಲಸದ ಪರಿಸ್ಥಿತಿಗಳು ಮತ್ತು ಲೈಂಗಿಕ ಶೋಷಣೆಯ ಕುರಿತು ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಗೆ ಮಲಯಾಳಂ ಚಲನಚಿತ್ರ ಕಲಾವಿದರ ಸಂಘ (ಅಮ್ಮ) ಶುಕ್ರವಾರ ಪ್ರತಿಕ್ರಿಯಿಸಿದೆ.

ಇದನ್ನೂ ಓದಿ: Pranitha Subhash: 2ನೇ ಮಗುವಿನ ನಿರೀಕ್ಷೆಯಲ್ಲಿರೋ ನಟಿ ಪ್ರಣೀತಾ ಸುಭಾಷ್; ಮತ್ತೆ ಬೇಬಿ ಬಂಪ್ ಫೋಟೋಶೂಟ್

ʼಅಮ್ಮಾʼ ವರದಿಯನ್ನು ಕೆಲವು ಬಣಗಳು ತಿರಸ್ಕರಿಸಿದ್ದು, ಕಾಸ್ಟಿಂಗ್ ಕೌಚ್ ಆರೋಪವನ್ನು ತಳ್ಳಿಹಾಕಿವೆ. ನಾನು ಕಳೆದ ನಾಲ್ಕು ದಶಕಗಳಿಂದ ಉದ್ಯಮದಲ್ಲಿದ್ದೇನೆ. ವರದಿಯಲ್ಲಿ ಉಲ್ಲೇಖಿಸಿರುವಂತೆ ಯಾವುದೇ ಗುಂಪು ಅಸ್ತಿತ್ವದಲ್ಲಿಲ್ಲ. ಏಕೆಂದರೆ ಇದು ಚಲನಚಿತ್ರೋದ್ಯಮ ಮತ್ತು ಅಂತಹ ಯಾವುದೇ ಗುಂಪುಗಳು ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ. ಎಲ್ಲಿಯಾದರೂ ಯಾವುದೇ ಅಪರಾಧ ನಡೆದಿದ್ದರೆ ಅದನ್ನು ತನಿಖೆ ಮಾಡಬೇಕು ಮತ್ತು ತಪ್ಪಿತಸ್ಥರಿದ್ದರೆ ಅವರನ್ನು ಬಂಧಿಸಬೇಕು ಎಂದು ನಾವು ಬಯಸುತ್ತೇವೆ. ಇದರಲ್ಲಿ ನಮಗೆ ಯಾವುದೇ ಸಂಕೋಚವಿಲ್ಲ ಎಂದು ಸಿದ್ದಿಕ್ ಹೇಳಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Actor Darshan : ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ ಬಂಧನವಾಗಿದೆ. ಈ ಮಧ್ಯೆ ನಟನ ಗೆಳತಿ ಪವಿತ್ರಾ (Pavithra Gowda) ಲಾಕ್‌ ಆಗಿದ್ದೆ ರೋಚಕವಾಗಿದೆ. ಇನ್ನೂ ತನ್ನ ಜತೆಗೆ ಇದ್ದ ಹುಡುಗರನ್ನು ನಂಬಿಯೇ ನಾನು ಕೆಟ್ಟಿದ್ದು ಎಂದು ದರ್ಶನ್‌ ಅಳಲು ತೊಡಿಕೊಂಡಿದ್ದಾರೆ. ಇಷ್ಟಕ್ಕೂ ಬಂಧನದ ದಿನ ಏನೆಲ್ಲ ಆಯಿತು ಎಂಬ ಇಂಟರೆಸ್ಟಿಂಗ್‌ ಸ್ಟೋರಿ ಇಲ್ಲಿದೆ.

VISTARANEWS.COM


on

By

Actor darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌(Actor Darshan) ಗ್ಯಾಂಗ್‌ ಜೈಲುಪಾಲಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಪೊಲೀಸರು ಶುರು ಮಾಡಿದ್ದಾರೆ. ಈ ಮಧ್ಯೆ ಪೊಲೀಸರ ಬಳಿ ದರ್ಶನ್‌ ಆಪ್ತೆ ಪವಿತ್ರಾಗೌಡ ಲಾಕ್ ಆಗಿದ್ದೆ ರೋಚಕವಾಗಿದೆ.

ದರ್ಶನ್ ಬಂಧನಕ್ಕೆ ಹೊರಟಿದ್ದ ವೇಳೆಯೇ ಪೊಲೀಸರು ಪವಿತ್ರಾಗೂ ಬಲೆ ಬೀಸಿದ್ದರು. ಜೂನ್ 11ರ ಬೆಳಗ್ಗೆ ದರ್ಶನ್ ಬಂಧಿಸಲು ಮೈಸೂರಿಗೆ ತೆರಳಿದ್ದಾಗ, ಈ ವೇಳೆ ಎರಡು ತಂಡ ರಚಿಸಿ ಪವಿತ್ರಾ ಗೌಡಗೂ ಬಲೆ ಬೀಸಿದ್ದರು. ಆದರೆ ಪೊಲೀಸರ ಎರಡೂ ತಂಡಕ್ಕೂ ಚಾಲಾಕಿ ಪವಿತ್ರಾ ಸಿಕ್ಕಿರಲಿಲ್ಲ.

ಹೀಗಾಗಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದ ಪೊಲೀಸರು ಮೈಸೂರಿನಲ್ಲೇ ದರ್ಶನ್ ಮೂಲಕವೇ ಪವಿತ್ರಾಳನ್ನು ಸಂಪರ್ಕಿಸಿದ್ದರು. ದರ್ಶನ್ ಫೋನ್‌ನಿಂದಲೇ ಪವಿತ್ರಾಗೌಡಗೆ ಫೋನ್ ಮಾಡಿಸಿ ಎಲ್ಲೂ ಹೋಗದಂತೆ ಸೂಚನೆ ನೀಡಲಾಗಿತ್ತು. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಹೋಗು ಎಂದು ದರ್ಶನ್‌ ಪವಿತ್ರಾಗೆ ಹೇಳಿದ್ದರು. ಹೀಗಾಗಿ ದರ್ಶನ್ ಮಾತಿನಂತೆ ಪೊಲೀಸ್ ಠಾಣೆಗೆ ಪವಿತ್ರಾ ಹಾಜರಾಗಿದ್ದರು. ಪವಿತ್ರಾ ಕಾಮಾಕ್ಷಿಪಾಳ್ಯ ಠಾಣೆಯ ಬದಲು ಆರ್ ಆರ್ ನಗರ ಠಾಣೆಗೆ ಹಾಜರಾಗಿದ್ದಳು. ತದನಂತರ ಕಾಮಾಕ್ಷಿಪಾಳ್ಯ ಪೊಲೀಸರು ಕರೆತಂದು ಬಂಧಿಸಿದ್ದರು.

ಇದನ್ನೂ ಓದಿ:Actor Darshan: ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿದ ಹೈಕೋರ್ಟ್

ಠಾಣೆಗೆ ಬಂದ ಕೂಡಲೇ ಪೊಲೀಸರ ಮುಂದೆ ದರ್ಶನ್ ಹೇಳಿದ್ದೇನು?

ಮೈಸೂರಿನಲ್ಲಿ ಬಂಧಿಸಿ ದರ್ಶನ್‌ನನ್ನು ಬೆಂಗಳೂರಿಗೆ ಕರೆತರಲಾಗಿತ್ತು. ಠಾಣೆಗೆ ಬರುತ್ತಿದ್ದಂತೇ ದರ್ಶನ್ ಹೇಳಿದ ಮೊದಲ ಮಾತೇನು ಗೊತ್ತಾ? ನನ್ನ ಜತೆ‌ ಇದ್ದ ಈ ಹುಡುಗರಿಂದ ನಾನು ಹಾಳಾದೆ ಎಂದಿದ್ದರಂತೆ. ಹುಡುಗರನ್ನು ನಂಬಿ ನಾನು ಕೆಟ್ಟೆ ಎಂದು ಹೇಳಿಕೊಂಡಿದ್ದರಂತೆ.

ಚಾರ್ಜ್‌ಶೀಟ್‌ ಸಲ್ಲಿಸಲು ತಯಾರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರಿಂದ ತಯಾರಿ ನಡೆದಿದೆ. ಇಲ್ಲಿಯವರೆಗೆ ಸಾಕ್ಷ್ಯ ಕಲೆ‌ ಹಾಕಿ,ಸ್ಥಳ ಮಹಜರು ನಡೆಸಿ,ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ. ಬರೋಬ್ಬರಿ 52 ಸ್ಥಳ ಮಹಜರು,150 ಜನರ ಹೇಳಿಕೆ ದಾಖಲಿಸಿದ್ದಾರೆ. ಚಿತ್ರದುರ್ಗದ ಕಿಡ್ನ್ಯಾಪ್ ಜಾಗದಿಂದ ಹಿಡಿದು ಮೃತದೇಹ ಎಸೆದಿದ್ದ ಜಾಗದವರೆಗೆ ಮಹಜರ್ ಮಾಡಲಾಗಿದೆ.

ಪಟ್ಟಣಗೆರೆ ಶೆಡ್, ದರ್ಶನ್ ನಿವಾಸ, ಪವಿತ್ರಾ ಗೌಡ ನಿವಾಸ ಸೇರಿದಂತೆ ಸ್ಟೋನಿ ಬ್ರೂಕ್ ಪಬ್, ಮೃತ ದೇಹ ಎಸೆದ ಸತ್ವ ಅಪಾರ್ಟ್ ಮೆಂಟ್ ಎದುರಿನ‌ ಕಾಲುವೆ ಸೇರಿದಂತೆ ಕೊಲೆಯ ನಂತರದ‌ ಮಾತುಕತೆ ಜಾಗಗಳು ಸೇರಿ 52 ಕಡೆ ಸ್ಥಳ ಮಹಜರು ಮಾಡಲಾಗಿದೆ. ಪ್ರಕರಣದಲ್ಲಿ ಸಾಕ್ಷಿಯಾಗಿರುವ 150 ಜನರ‌ ಹೇಳಿಕೆ‌ ದಾಖಲಾಗಿದೆ.

ಘಟನೆ ಸಂಬಂಧಿಸಿದಂತೆ ಆರೋಪಿಗಳು ಎಲ್ಲೆಲ್ಲಿ ತೆರಳಿದ್ದರು. ಯಾರ್ಯಾರ ಸಂಪರ್ಕ ಮಾಡಿದ್ದರು? ಪೆಟ್ರೋಲ್ ಬಂಕ್ ಸಿಬ್ಬಂದಿ‌, ಹೋಟೆಲ್ ಸಿಬ್ಬಂದಿ, ಸಹಚರರ ಹೇಳಿಕೆ ಸೇರಿ ಒಟ್ಟಾರೆಯಾಗಿ ಬರೋಬ್ಬರಿ 150 ಕ್ಕೂ ಹೆಚ್ಚು ಜನರ ಹೇಳಿಕೆ ದಾಖಲಾಗಿದೆ.

ಪುಸ್ತಕದ ಮೊರೆ ಹೋದ ದರ್ಶನ್‌

ನಟ ದರ್ಶನ್ ಜೈಲಿನಲ್ಲಿ ಕಳೆದ 64 ದಿನದಿಂದ ಮಂಕಾಗಿ ಕಾಲ ಕಳೆಯುತ್ತಿದ್ದಾರೆ. ನಿಧಾನವಾಗಿ ಜೈಲಿನ ಪರಿಸರಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ಬೇಜಾರು ಕಳೆಯೋದಕ್ಕೆ ವಾಲಿಬಾಲ್ ಆಟಕ್ಕೆ ಇಳಿದಿದ್ದಾರೆ. ಈಗಾಗಲೇ ಜೈಲೊಳಗಡೆ ಪುಸ್ತಕದ ಮೊರೆ ಹೋಗಿದ್ದು, ಜತೆಗೆ ಬೇಜಾರು ಕಳೆಯಲು ವಾಲಿಬಾಲ್ ಕೂಡ ಆಡುತ್ತಿದ್ದಾರೆ. ಜೈಲಿನ‌ ಇತರೆ ಖೈದಿಗಳ‌ ಜತೆ ಸೇರಿ ವಾಲಿಬಾಲ್ ಆಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Dhanya Ramkumar: ತೆರೆಗೆ ಸಿದ್ಧವಾಯ್ತು ಕಾಲಾಪತ್ಥರ್‌; ಸೆ.13ಕ್ಕೆ ಧನ್ಯಾ ರಾಮ್‌ಕುಮಾರ್- ವಿಕ್ಕಿ ವರುಣ್‌ ನಟನೆ ಮೋಡಿ

Dhanya Ramkumar : ನಟ ಕಂ ನಿರ್ದೇಶಕ ವಿಕ್ಕಿ ವರುಣ್ ಹಾಗೂ ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್” ಚಿತ್ರ ಮುಂದಿನ ಸೆಪ್ಟೆಂಬರ್ 13ರಂದು ಬಿಡುಗಡೆಗೊಳ್ಳಲಿದೆ.

VISTARANEWS.COM


on

By

Dhanya Ramkumar-Vicky Varun starrer Kaalapathar to release on September 13
Koo

ಬೆಂಗಳೂರು: ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ಧನ್ಯಾ ರಾಮ್‌ಕುಮಾರ್ (Dhanya Ramkumar) ನಟನೆ, ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆಯಾಗಲಿದೆ. ಹಿರಿಯ ಪತ್ರಕರ್ತ ಕೆ.ಎಸ್.ವಾಸು ‘ಕಾಲಾಪತ್ಥರ್’ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದರು.

Dhanya Ramkumar-Vicky Varun starrer Kaalapathar to release on September 13

ಚಿತ್ರದ ಕುರಿತು ಮಾತಾನಾಡಿದ ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲನಕೋಟೆ, ಆರಂಭದಿಂದಲೂ ತಾವು ನಮ್ಮ ಚಿತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹಕ್ಕೆ ನಾವು ಆಭಾರಿ. ಈಗ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇನ್ನು ಮುಂದೆ ನಿಮ್ಮ ಪ್ರೋತ್ಸಾಹ ಹೆಚ್ಚು ಬೇಕು ಎಂದರು.

Dhanya Ramkumar-Vicky Varun starrer Kaalapathar to release on September 13

ನನ್ನದು ಈ ಚಿತ್ರದಲ್ಲಿ ಶಿಕ್ಷಕಿಯ ಪಾತ್ರ . ಗಂಗ ನನ್ನ ಪಾತ್ರದ ಹೆಸರು. ನನ್ನ ಪಾತ್ರ ಹಾಗೂ ಚಿತ್ರ ಎರಡು ಚೆನ್ನಾಗಿದೆ ಎಂದು ನಾಯಕಿ ಧನ್ಯ ರಾಮಕುಮಾರ್ ತಿಳಿಸಿದರು. ನನಗೆ ಈಗಷ್ಟೇ ವಿಕ್ಕಿ ಅವರು ಚಿತ್ರದ ತುಣುಕು ತೋರಿಸಿದ್ದರು. ಅದನ್ನು ನೋಡಿದ ಮೇಲೆ ನಾನಂತೂ ಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದೇನೆ ಎಂದರು.

ಇದನ್ನೂ ಓದಿ: Kannada New Movie: ‘ಕಲ್ಕಿ’ ಚಿತ್ರದ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಕನ್ನಡಕ್ಕೆ ಎಂಟ್ರಿ!

ಕಪ್ಪುಕಲ್ಲಿನ ಕಥೆ ಬಿಚ್ಚಿಟ್ಟ ವಿಕ್ಕಿ

ನಾನು ಕನ್ನಡ ಚಿತ್ರರಂಗಕ್ಕೆ ಬಂದು ಹದಿನೈದು ವರ್ಷಗಳಾಯಿತು. ಸೆಪ್ಟೆಂಬರ್‌ಗೆ ಸೂರಿ ಅವರ ನಿರ್ದೇಶನದಲ್ಲಿ ನಾನು ನಾಯಕನಾಗಿ ನಟಿಸಿದ್ದ “ಕೆಂಡಸಂಪಿಗೆ” ಚಿತ್ರ ತೆರೆಕಂಡು ಒಂಭತ್ತು ವರ್ಷಗಳಾಗುತ್ತಿದೆ. ನಾನು ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರ ಕೂಡ ಸೆಪ್ಟೆಂಬರ್‌ನಲ್ಲೇ ಬಿಡುಗಡೆಯಾಗುತ್ತಿರುವುದು ಖುಷಿಯಾಗಿದೆ. “ಕಾಲಾಪತ್ಥರ್”, ಕಪ್ಪುಕಲ್ಲಿಗೆ ಸಂಬಂಧಿಸಿದ ಕಥೆ. ಸತ್ಯಪ್ರಕಾಶ್ ಅವರು ಕಥೆ ಬರೆದಿದ್ದಾರೆ. ವಿಜಾಪುರದ ಬಳಿ ಹೆಚ್ಚು ಚಿತ್ರೀಕರಣವಾಗಿದೆ. ಆಲಮಟ್ಟಿಯ ಹಿನ್ನೀರಿನ ಜೈನಾಪುರ ಎಂಬ ಸ್ಥಳದಲ್ಲಿ ಚಿತ್ರೀಕರಣ ನಡೆದಿದ್ದು, ನಮ್ಮ ಚಿತ್ರದ ಚಿತ್ರೀಕರಣವಾಗಿ ಕೆಲವೇ ತಿಂಗಳಲ್ಲೇ ಈ ಹಳ್ಳಿ ನೀರಿನಲ್ಲಿ ಮುಳುಗಡೆಯಾಗಿದೆ. ನಮ್ಮ ಚಿತ್ರವನ್ನು “ಮಾರ್ಟಿನ್” ಚಿತ್ರದ ನಿರ್ಮಾಪಕರಾದ ಉದಯ್ ಕೆ ಮೆಹ್ತಾ ಅವರು ವಿತರಣೆ ಮಾಡುತ್ತಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ದೇಶಕ ಹಾಗೂ ನಾಯಕ ವಿಕ್ಕಿ ವರುಣ್‌. ಛಾಯಾಗ್ರಾಹಕ ಸಂದೀಪ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Kannada New Movie: ‘ಕಲ್ಕಿ’ ಚಿತ್ರದ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಕನ್ನಡಕ್ಕೆ ಎಂಟ್ರಿ!

“ಆ ದಿನಗಳು” ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್‌ ಪ್ರಭಾಕರ್‌ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರ “ಬಲರಾಮನ ದಿನಗಳು” ಚಿತ್ರಕ್ಕೆ ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ‌. ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಂತೋಷ್ ನಾರಾಯಣನ್ ಅವರನ್ನು “ಬಲರಾಮನ ದಿನಗಳು” ಚಿತ್ರತಂಡ ಅದ್ದೂರಿಯಾಗಿ ಕನ್ನಡಕ್ಕೆ ಬರಮಾಡಿಕೊಂಡರು. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್‌ ಪ್ರಭಾಕರ್‌ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರ “ಬಲರಾಮನ ದಿನಗಳು”. ಕಳೆದ ಕೆಲವು ತಿಂಗಳ ಹಿಂದಷ್ಟೇ ಈ ಚಿತ್ರದ ಘೋಷಣೆಯಾಗಿತ್ತು. ಈಗ ಈ ಚಿತ್ರದ (Kannada New Movie) ಕುರಿತು ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ‌. ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಂತೋಷ್ ನಾರಾಯಣನ್ ಅವರನ್ನು “ಬಲರಾಮನ ದಿನಗಳು” ಚಿತ್ರತಂಡ ಅದ್ದೂರಿಯಾಗಿ ಕನ್ನಡಕ್ಕೆ ಬರಮಾಡಿಕೊಂಡರು. ನಂತರ ಸಂತೋಷ್ ನಾರಾಯಣನ್ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ಪ.ರಂಜಿತ್ ಅವರ “ಅಟ್ಟಕತ್ತಿ” ಚಿತ್ರದ ಮೂಲಕ ಸ್ವತಂತ್ರ ಸಂಗೀತ ನಿರ್ದೇಶಕರಾದ ಇವರು, “ಕಾಲ”, ” ಕಬಾಲಿ”, “ಭೈರವ”, ” ದಸರಾ” ಹಾಗೂ ಇತ್ತೀಚಿಗೆ ತೆರೆಕಂಡ “ಕಲ್ಕಿ” ಸಿನಿಮಾವರೆಗೂ 50 ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಹಲವು ಚಿತ್ರಗಳಲ್ಲಿ ಹಾಡಿದ್ದಾರೆ ಕೂಡ‌.

“ನನ್ನ ತಾಯಿಗೆ ಕನ್ನಡ ಬರುತ್ತದೆ. ಅವರು ನನಗೂ ಸ್ವಲ್ಪ ಕನ್ನಡ ಹೇಳಿಕೊಟ್ಟಿದ್ದಾರೆ. ಬೆಂಗಳೂರಿಗೆ ಆಗಾಗ ಬರುತ್ತಿರುತ್ತೇನೆ. “ಬಲರಾಮನ ದಿನಗಳು” ನನ್ನ 51ನೇ ಚಿತ್ರ ಹಾಗೂ ನಾನು ಸಂಗೀತ ನೀಡುತ್ತಿರುವ ಕನ್ನಡದ ಮೊದಲ ಚಿತ್ರ. ಪದ್ಮಾವತಿ ಫಿಲಂಸ್, ಚೈತನ್ಯ ಹಾಗೂ ವಿನೋದ್ ಪ್ರಭಾಕರ್ ಅವರ ಜತೆಗೆ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ. ಈ ಸಂದರ್ಭದಲ್ಲಿ ಗುರುಗಳಾದ ಇಳಯರಾಜ, ಎ.ಆರ್.ರೆಹಮಾನ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ರಘು ದೀಕ್ಷಿತ್ ಅವರ “ನಿನ್ನ ಪೂಜೆಗೆ ಬಂದೆ ಮಾದೇಶ್ವರ” ಸೇರಿದಂತೆ ಕೆಲವು ಹಾಡುಗಳಿಗೆ ಪ್ರೋಗ್ರಾಮರ್ ಆಗಿ ಕೆಲಸ ಮಾಡಿದ್ದೇನೆ. ಅಜನೀಶ್ ಲೋಕನಾಥ್ ಹಾಗೂ ರವಿ ಬಸ್ರೂರ್ ಅವರ ಸಂಗಿತ ಇಷ್ಟ ಎಂದು ಹೇಳಿದ ಸಂತೋಷ್ ನಾರಾಯಣನ್, ಈ ಚಿತ್ರದಲ್ಲೂ ಒಳ್ಳೆಯ ಹಾಡುಗಳನ್ನು ಕೊಡುವ ಪ್ರಯತ್ನ ಮಾಡುತ್ತೇನೆ ಎಂದರು.

ಇದು ನನ್ನ 25ನೇ ಸಿನಿಮಾ, ಕೆ.ಎಂ. ಚೈತನ್ಯ ನಿರ್ದೇಶನದ 10ನೇ ಸಿನಿಮಾ. “ಬಲರಾಮನ ದಿನಗಳು” ಗೆ ಬಲ ನೀಡುವುದಕ್ಕೆ ಸಂತೋಷ್‍ ನಾರಾಯಣನ್ ಅವರು ಇಲ್ಲಿಗೆ ಬಂದಿದ್ದಾರೆ. ಸಂತೋಷ್‍ ನಾರಾಯಣನ್ ಅವರೇ ಯಾಕೆ? ಎಂಬ ಪ್ರಶ್ನೆ ಬರಬಹುದು. ಅವರ ಕೆಲಸವನ್ನು ನಮ್ಮಲ್ಲಿ ಜನ ಒಪ್ಪಿಕೊಂಡಿದ್ದಾರೆ. ಅವರು ಯಾರು ಎಂದು ಗೊತ್ತಿಲ್ಲದಿರಬಹುದು, ಅವರ ಮುಖ ನೋಡದಿರಬಹುದು. ಆದರೆ, ಗ್ಯಾಂಗ್‍ಸ್ಟರ್ ಸಿನಿಮಾ ಸಂಬಂಧಪಟ್ಟ ಯಾವುದೇ ಪೋಸ್ಟ್ ನೋಡಿ, ಇವರ ಸಿಗ್ನೇಚರ್ ಸಂಗೀತ ಇದ್ದೇ ಇರುತ್ತದೆ. ಹಾಗಾಗಿ, ನಮ್ಮ ಚಿತ್ರತಂಡದವರೆಲ್ಲಾ ನಿರ್ಧಾರ ತೆಗೆದುಕೊಂಡು ಅವರನ್ನು ಕರೆಸಿದ್ದೇವೆ. ಇದೊಂದು ಗ್ಯಾಂಗ್‍ಸ್ಟರ್ & ಕಲ್ಟ್ ಸಿನಿಮಾ ಆಗಿರುವುದರಿಂದ ಅವರೇ ಸೂಕ್ತ ಎಂದನಿಸಿತು. ಅವರು ದೊಡ್ಡ ಸಂಗೀತ ನಿರ್ದೇಶಕ. ಅವರನ್ನು ಕರೆದುಕೊಂಡು ಬರುವುದು ಅಷ್ಟು ಸುಲಭವಾಗಿರಲಿಲ್ಲ. ಬಹಳ ಕಷ್ಟಪಟ್ಟು ಅವರನ್ನು ಕರೆದುಕೊಂಡು ಬಂದಿದ್ದೇವೆ. ‘ಕಲ್ಕಿ’ ಬಿಡುಗಡೆಗೂ ಮೊದಲೇ, ಮೇ ತಿಂಗಳಲ್ಲಿ ಅವರನ್ನು ಮಾತನಾಡಿಸಿದ್ದೆವು. ಅವರಿಗೆ ಚಿತ್ರಕಥೆ ರೀಡಿಂಗ್‍ ಕೊಡುತ್ತಿದ್ದಂತೆಯೇ ಒಪ್ಪಿಕೊಂಡರು. ಚಿತ್ರ ವಿಭಿನ್ನವಾಗಿದೆ, 70-80ರ ಕಾಲಘಟ್ಟದ ಚಿತ್ರವಾಗಿರುವುದರಿಂದ ಸಾಕಷ್ಟು ಪ್ರಯೋಗ ಮಾಡಬಹುದು ಎಂದು ಖುಷಿಪಟ್ಟು ಒಪ್ಪಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕನ್ನಡಕ್ಕೆ ಕರೆದುಕೊಂಡು ಬಂದಿರುವ ಹೆಮ್ಮೆ ಇದೆ. ಚಿತ್ರದ ಕುರಿತು ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದರು ನಾಯಕ ಟೈಗರ್.

ಇದು 90 ರ ದಶಕದ ಕಾಲಘಟ್ಟದ ಭೂಗತಲೋಕದ ಕಥೆ. ಯಾವುದೇ ನೈಜ ಘಟನೆ ಅಥವಾ ವ್ಯಕ್ತಿಯ ಕುರಿತಾದ ಚಿತ್ರವಲ್ಲ. ಕಾಲ್ಪನಿಕ ಕಥೆ. ಟೈಗರ್ ಅವರ ಚಿತ್ರವನ್ನು ನಿರ್ದೇಶಿಸುವ ಆಸೆಯಿತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ. ನಿರ್ಮಾಪಕರಾದ ಪದ್ಮಾವತಿ ಜಯರಾಂ ಮತ್ತು ಶ್ರೇಯಸ್‍ ಗೆ ವಂದನೆಗಳು. ಸಂತೋಷ್ ನಾರಾಯಣ್ ಅವರ ಸಂಗೀತ ನಿರ್ದೇಶನದಲ್ಲಿ ಒಳ್ಳೆಯ ಹಾಡುಗಳು ಬರಲಿದೆ ಎಂದು ನಿರ್ದೇಶಕ ಕೆ.ಎಂ.ಚೈತನ್ಯ ತಿಳಿಸಿದರು.

ಇದನ್ನೂ ಓದಿ: Bengaluru Power Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ!

ನಾನು ಚಿಕ್ಕ ವಯಸ್ಸಿನಿಂದ ಟೈಗರ್ ಅವರ ಅಭಿಮಾನಿ ಎಂದು ಮಾತನಾಡಿದ ನಿರ್ಮಾಪಕ ಶ್ರೇಯಸ್, ಇಂದು ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ನಿರ್ಮಾಣ ಮಾಡುತ್ತಿರುವುದು ಸಂತೋಷವಾಗಿದೆ. ನಮ್ಮ ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾವಿದು. ನಮ್ಮ ಮೊದಲ ಚಿತ್ರಕ್ಕೆ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ ಹಾಗೂ ಕೆ.ಎಂ.ಚೈತನ್ಯ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ನಮ್ಮ ಚಿತ್ರದ ಘೋಷಣೆ ಮಾಡಿದಾಗ ತಾವೆಲ್ಲರು ನೀಡಿದ ಪ್ರೋತ್ಸಾಹಕ್ಕೆ ಚಿರ ಋಣಿ. ನನ್ನ ಕನಸಿಗೆ ಆಸರೆಯಾದ ಅಪ್ಪ ಅಮ್ಮನಿಗೆ ಧನ್ಯವಾದ. ಮುಂದೆ ಕೂಡ ನಿಮ್ಮ ಪ್ರೋತ್ಸಾಹ ಹೀಗೆ ಇರಲಿ ಎಂದರು ನಿರ್ಮಾಪಕ ಶ್ರೇಯಸ್. ನಿರ್ಮಾಪಕಿ ಪದ್ಮಾವತಿ ಜಯರಾಂ ಹಾಗೂ ಜಯರಾಂ ಅವರು ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading
Advertisement
Revathy Sampath
ಸಿನಿಮಾ3 mins ago

Revathy Sampath: ನಟಿಯ ಮೇಲೆ ಹಿರಿಯ ನಟನಿಂದ ಲೈಂಗಿಕ ದೌರ್ಜನ್ಯ; ಕೇರಳ ಚಿತ್ರರಂಗದಲ್ಲಿ ಮತ್ತೊಂದು ಕರಾಳ ವಿದ್ಯಮಾನ!

Health Expenditure
ಪ್ರಮುಖ ಸುದ್ದಿ13 mins ago

MLCs Health Expenditure: ಆರೋಗ್ಯಕ್ಕಾಗಿ ಲಕ್ಷ ಲಕ್ಷ ಕ್ಲೇಮ್; ಅತಿ ಹೆಚ್ಚು ಸರ್ಕಾರದ ಹಣ ಪಡೆದ ಎಂಎಲ್‌ಸಿಗಳು ಇವರೇ ನೋಡಿ!

Industrial City
ಬೆಂಗಳೂರು48 mins ago

Industrial City: ಹೊಸೂರಿನಲ್ಲಿ ಟಾಟಾ ಗ್ರೂಪ್‌ನಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣಕ್ಕೆ ಸಿದ್ಧತೆ; ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು?

Yuvraj Singh
ಕ್ರೀಡೆ55 mins ago

Yuvraj Singh: ಐಪಿಎಲ್​ ಕೋಚಿಂಗ್​ ನಡೆಸಲಿದ್ದಾರೆ ಯುವರಾಜ್​ ಸಿಂಗ್; ಯಾವ ತಂಡ?

Physical abuse attempted rape of school girl The public who beat up the man
ಚಿಕ್ಕೋಡಿ1 hour ago

Physical Abuse : ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

ಬೆಂಗಳೂರು ಗ್ರಾಮಾಂತರ2 hours ago

Love Case : ಪ್ರೀತಿಗೆ ಪೋಷಕರ ವಿರೋಧ; ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣಿಗೆ ಶರಣಾದ ಪ್ರೇಮಿಗಳು

Cricket meets shooting
ಕ್ರೀಡೆ2 hours ago

Cricket Meets Shooting: ವಿಭಿನ್ನ ಶೈಲಿಯಲ್ಲಿ ಫೋಟೊಗೆ ಪೋಸ್​ ಕೊಟ್ಟ ಸೂರ್ಯಕುಮಾರ್​-ಮನು ಭಾಕರ್​

Gold Rate Today
ಚಿನ್ನದ ದರ2 hours ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬಂಗಾರ ಖರೀದಿಯ ಮುನ್ನ ಬೆಲೆ ಚೆಕ್‌ ಮಾಡಿ

Actor darshan
ಸ್ಯಾಂಡಲ್ ವುಡ್2 hours ago

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Western Ghats
ಕರ್ನಾಟಕ2 hours ago

Western Ghats: ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ23 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌