Cricket Meets Shooting: ವಿಭಿನ್ನ ಶೈಲಿಯಲ್ಲಿ ಫೋಟೊಗೆ ಪೋಸ್​ ಕೊಟ್ಟ ಸೂರ್ಯಕುಮಾರ್​-ಮನು ಭಾಕರ್​ - Vistara News

ಕ್ರೀಡೆ

Cricket Meets Shooting: ವಿಭಿನ್ನ ಶೈಲಿಯಲ್ಲಿ ಫೋಟೊಗೆ ಪೋಸ್​ ಕೊಟ್ಟ ಸೂರ್ಯಕುಮಾರ್​-ಮನು ಭಾಕರ್​

Cricket Meets Shooting: ಮನು ಭಾಕರ್​ ಅವರು ಈ ಫೋಟೊವನ್ನು ತಮ್ಮ ಟ್ವಿಟರ್ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, “ಟೀಮ್​ ಇಂಡಿಯಾದ ಮಿಸ್ಟರ್ 360 ಅವರೊಂದಿಗೆ ಹೊಸ ಕ್ರೀಡೆಯ ಕಲಿಕೆಯ ತಂತ್ರಗಳು!” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Cricket meets shooting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಪ್ಯಾರಿಸ್​ ಒಲಿಂಪಿಕ್ಸ್​ ಶೂಟಿಂಗ್​ನಲ್ಲಿ ಅವಳಿ ಪದಕ ಗೆದ್ದ ಮನು ಭಾಕರ್(Manu Bhaker)​ ಅವರು ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್​ ಯಾದವ್(Suryakumar Yadav)​ ಅವರನ್ನು ಮುಂಬೈಯಲ್ಲಿ ಭೇಟಿಯಾಗಿದ್ದಾರೆ. ಉಭಯ ಕ್ರೀಡಾಪಟುಗಳು ವಿಭಿನ್ನ ಶೈಲಿಯಲ್ಲಿ ಫೋಟೊಗೆ ಪೋಸ್​​ ಕೊಟ್ಟಿರುವುದು ನೆಟ್ಟಿಗರ ಗಮನಸೆಳೆದಿದೆ. ‘ಕ್ರಿಕೆಟ್ ಮೀಟ್ಸ್ ಶೂಟಿಂಗ್!'(Cricket Meets Shooting) ಎಂದು ನೆಟ್ಟಿಗರು ಈ ಫೋಟೊಗೆ ಕಮೆಂಟ್​ ಮಾಡಿದ್ದಾರೆ.

ಒಲಿಂಪಿಕ್ಸ್​ ಪದಕ ಗೆದ್ದ ಬಳಿಕ ಮೂರು ತಿಂಗಳ ವಿಶ್ರಾಂತಿ ಬಯಸಿರುವ ಮನು ಭಾಕರ್​ ತಮ್ಮ ನೆಚ್ಚಿನ ಕಾರ್ಯ ಚಟುವಟಿಯಲ್ಲಿ ತೊಡಗಿಕೊಂಡಿದ್ದಾರೆ. ಮುಂಬೈಗೆ ಆಗಮಿಸಿದ್ದ ವೇಳೆ ಕ್ರಿಕೆಟಿಗ ಸೂರ್ಯಕುಮಾರ್​ ಭೇಟಿಯಾಗಿದ್ದಾರೆ. ಈ ವೇಳೆ ಸೂರ್ಯಕುಮಾರ್​ ಗನ್​ ಹಿಡಿದಂತೆ, ಮನು ಭಾಕರ್​ ಬ್ಯಾಟ್​ ಬೀಸಿದಂತೆ ನಗುಮುಗದಿಂದಲೇ ಫೋಟೊ ತೆಗೆಸಿಕೊಂಡಿದ್ದಾರೆ.

ಮನು ಭಾಕರ್​ ಅವರು ಈ ಫೋಟೊವನ್ನು ತಮ್ಮ ಟ್ವಿಟರ್ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, “ಟೀಮ್​ ಇಂಡಿಯಾದ ಮಿಸ್ಟರ್ 360 ಅವರೊಂದಿಗೆ ಹೊಸ ಕ್ರೀಡೆಯ ಕಲಿಕೆಯ ತಂತ್ರಗಳು!” ಎಂದು ಬರೆದುಕೊಂಡಿದ್ದಾರೆ. ಒಲಿಂಪಿಕ್ಸ್​ ಪದಕ ಗೆದ್ದಾಗ ಮನು ಭಾಕರ್​ಗೆ ಸೂರ್ಯಕುಮಾರ್​ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದರು.

ಇದನ್ನೂ ಓದಿ Manu Bhaker: ನಟ ವಿಜಯ್​ ಗೊತ್ತು, ಸಿಎಂ ಸ್ಟಾಲಿನ್‌ ಗೊತ್ತಿಲ್ಲ ಎಂದು ನಕ್ಕ ಮನು ಭಾಕರ್; ವಿಡಿಯೊ ವೈರಲ್​​

ರೋಹಿತ್ ಶರ್ಮ ಅವರು ಟಿ20 ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಕಾರಣ ಭಾರತ ತಂಡದ ಟಿ20 ನಾಯಕತ್ವ ಸೂರ್ಯಕುಮಾರ್​ ಹೆಗಲೇರಿದೆ. ಅವರ ಪೂರ್ಣ ಪ್ರಮಾಣದ ನಾಯಕತ್ವದಲ್ಲಿ ಆಡಿದ್ದ ಕಳೆದ ಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 3-0 ಅಂತರದಿಂದ ಗೆದ್ದು ಬೀಗಿತ್ತು. ಸದ್ಯ ದೇಶೀಯ ಕ್ರಿಕೆಟ್​ ಆಡಲಿರುವ ಸೂರ್ಯಕುಮಾರ್​ ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಸರಣಿಯಲ್ಲಿಯೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಸೂರ್ಯಕುಮಾರ್‌ ಯಾದವ್‌ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಆಗಸ್ಟ್​ 27ರಂದು ನಡೆಯುವ “ಬುಚ್ಚಿಬಾಬು ಟ್ರೋಫಿ’ ಆಹ್ವಾನಿತ(Buchi Babu Tournament) ಪಂದ್ಯಾವಳಿಯಲ್ಲಿ ಆಡಲಿದ್ದಾರೆ. ಇದಾದ ಬಳಿಕ ದುಲೀಪ್​ ಟ್ರೋಫಿ ಆಡಲಿದ್ದಾರೆ.

 22 ವರ್ಷದ ಮನು ಭಾಕರ್ ಪ್ಯಾರಿಸ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆಪಾತ್ರರಾಗಿದ್ದರು. ಜತೆಗೆ 12 ವರ್ಷಗಳ ಬಳಿಕ ಒಲಿಂಪಿಕ್​ ಶೂಟಿಂಗ್​ನಲ್ಲಿ ದೇಶಕ್ಕೆ ಪದಕ ಗೆದ್ದ ಸಾಧನೆ ಮಾಡಿದ್ದರು.

ಪದಕ ಗೆದ್ದ ಬಳಿಕ ಭಾಕರ್(Manu Bhaker)​ ಅವರ ಜಾಹೀರಾತು ಮೌಲ್ಯದಲ್ಲಿ ಭಾರೀ ಏರಿಕೆ ಕಂಡಿದೆ. ಮನು ಅವರ ಬ್ರ್ಯಾಂಡ್​ ಮೌಲ್ಯ ಈಗ 1.5 ರೂ. ಆಗಿದೆ. ಅವರು ಪ್ರತಿ ಡಿಜಿಟಲ್​ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಒಲಿಂಪಿಕ್ಸ್​ ಪದಕ ಗೆಲ್ಲುವ ಮೊದಲು ಮನು ಪ್ರತಿ ಒಪ್ಪಂದವನ್ನು 20-25 ಲಕ್ಷ ರೂ.ಗೆ ಮಾಡಿಕೊಳ್ಳುತ್ತಿದ್ದರು. ಸದ್ಯ ಮನು ಪಾಮ್ಯಾಕ್ಸ್​ ಆಕ್ಟಿವ್​ವೇರ್​ಗೆ ಮಾತ್ರ ಪ್ರಚಾರ ರಾಯಭಾರಿಯಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli: ಧವನ್‌ ವಿದಾಯದ ಕುರಿತು ವಿರಾಟ್​ ಕೊಹ್ಲಿ ಭಾವನಾತ್ಮಕ ಸಂದೇಶ

Virat Kohli: ಧವನ್​ ಐಸಿಸಿ ಟೂರ್ನಿಗಳಲ್ಲಿ ಸದಾ ಭಾರತಕ್ಕೆ ಶ್ರೇಷ್ಠ ಇನ್ನಿಂಗ್ಸ್​ ಒದಗಿಸುತ್ತಿದ್ದರು. ಇದೇ ಕಾರಣಕ್ಕೆ ಅವರನ್ನು ಮಿಸ್ಟರ್​ ಐಸಿಸಿ ಎಂದು ಕರೆಯಲಾಗುತ್ತದೆ.

VISTARANEWS.COM


on

Virat Kohli
Koo

ಮುಂಬಯಿ: ಶನಿವಾರವಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿದ್ದ ಟೀಮ್​ ಇಂಡಿಯಾದ ಎಡಗೈ ಆರಂಭಿಕ ಬ್ಯಾಟರ್​ ಶಿಖರ್​ ಧವನ್​ಗೆ(shikhar dhawan) ಸಹ ಆಟಗಾರ ವಿರಾಟ್​ ಕೊಹ್ಲಿ(Virat Kohli) ಭಾವನಾತ್ಮಕ ಸಂದೇಶದ ಮೂಲಕ ನಿವೃತ್ತ ಜೀವನಕ್ಕೆ ಶುಭ ಹಾರೈಸಿದ್ದಾರೆ.

ಟ್ವಿಟರ್​ ಎಕ್ಸ್​ನಲ್ಲಿ ಶಿಖರ್​ ಧವನ್​ ಬಗ್ಗೆ ಬರೆದುಕೊಂಡಿರುವ ಕೊಹ್ಲಿ, ‘ನೀವು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದಾಗಿನಿಂದಲೂ ಭಯಮುಕ್ತ ಪ್ರದರ್ಶನ ನೀಡಿದ್ದೀರಿ. ಇದೇ ಕಾರಣಕ್ಕೆ ಭಾರತದ ಅತ್ಯಂತ ವಿಶ್ವಾಸಾರ್ಹ ಓಪನರ್‌ಗಳಲ್ಲಿ ಒಬ್ಬರಾಗಲು ಸಾಧ್ಯವಾಯಿತು. ನೀವು ನಮಗೆ ಪಾಲಿಸಲು ಲೆಕ್ಕವಿಲ್ಲದಷ್ಟು ನೆನಪುಗಳನ್ನು ನೀಡಿದ್ದೀರಿ. ಆಟದ ಮೇಲಿನ ನಿಮ್ಮ ಉತ್ಸಾಹ, ನಿಮ್ಮ ಕ್ರೀಡಾ ಮನೋಭಾವ ಮತ್ತು ನಿಮ್ಮ ಟ್ರೇಡ್‌ಮಾರ್ಕ್ ಸ್ಮೈಲ್ ತಪ್ಪಿಹೋಗುತ್ತದೆ. ಆದರೆ, ನಿಮ್ಮ ಪರಂಪರೆಯು ಜೀವಿಸುತ್ತದೆ. ನೆನಪುಗಳು, ಮರೆಯಲಾಗದ ಪ್ರದರ್ಶನಗಳು ಮತ್ತು ಯಾವಾಗಲೂ ನಿಮ್ಮ ಹೃದಯದಿಂದ ಮುನ್ನಡೆಸಿದ್ದಕ್ಕಾಗಿ ಧನ್ಯವಾದಗಳು ಗಬ್ಬರ್. ಮೈದಾನದ ಹೊರಗೆ ನಿಮ್ಮ ಮುಂದಿನ ಇನ್ನಿಂಗ್ಸ್​ಗೆ ನಿಮಗೆ ಶುಭ ಹಾರೈಸುತ್ತೇನೆ!” ಎಂದು ಕೊಹ್ಲಿ ಭಾವನಾತ್ಮವಾಗಿ ಬರೆದುಕೊಂಡಿದ್ದಾರೆ. ಅಂಕಿ-ಅಂಶಗಳ ಪ್ರಕಾರ 2013ರ ಜೂನ್​ನಿಂದ 2019ರವರೆಗೆ ಧವನ್​ (23), ಕೊಹ್ಲಿ (49) ಮತ್ತು ರೋಹಿತ್​ (30) ಒಟ್ಟು 102 ಶತಕ ಸಿಡಿಸಿದ್ದರು.

2013ರಲ್ಲಿ ಆಸ್ಟ್ರೆಲಿಯಾ ವಿರುದ್ಧ ಮೊಹಾಲಿ ಟೆಸ್ಟ್​ ಕ್ರಿಕೆಟ್​ನಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸುವ ಮೂಲಕ ಶಿಖರ್​ ಧವನ್​ ಭಾರತದ ಕ್ರಿಕೆಟ್​ಗೆ ಹೆಚ್ಚು ಪರಿಚಿತರಾದರು. ದಿಗ್ಗಜ ಸಚಿನ್​ ತೆಂಡೂಲ್ಕರ್​ ಅವರಿಂದ ಟೆಸ್ಟ್​ ಕ್ಯಾಪ್​ ಪಡೆದುಕೊಂಡಿದ್ದ ಧವನ್​, 174 ಎಸೆತಗಳಲ್ಲಿ 33 ಬೌಂಡರಿ, 2 ಸಿಕ್ಸರ್​ ಸಹಿತ 187 ರನ್​ ಸಿಡಿಸಿದ್ದರು. 85 ಎಸೆತಗಳಲ್ಲೇ ಶತಕ ಪೂರೈಸುವ ಮೂಲಕ ಪದಾರ್ಪಣೆಯ ಟೆಸ್ಟ್​ನಲ್ಲಿ ಅತಿವೇಗದ ಶತಕ ಸಿಡಿಸಿದ ಸಾಧಕ ಎನಿಸಿದ್ದರು. ಅಲ್ಲದೆ ಪದಾರ್ಪಣೆಯ ಟೆಸ್ಟ್​ನಲ್ಲಿ ಭಾರತ ಪರ ಗರಿಷ್ಠ ರನ್​ ಸ್ಕೋರರ್​ ಎನಿಸಿದ್ದರು.

ಇದನ್ನೂ ಓದಿ Shikhar Dhawan: ಶಿಖರ ಸಾಧನೆಯ ವೀರ ಈ ಶಿಖರ್​ ಧವನ್​; ದಾಖಲೆ ಪಟ್ಟಿ ಹೀಗಿದೆ

38 ವರ್ಷದ ಧವನ್​ ಶನಿವಾರ ಬೆಳಗ್ಗೆಯೇ ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದರು. ಧವನ್​ ಐಸಿಸಿ ಟೂರ್ನಿಗಳಲ್ಲಿ ಸದಾ ಭಾರತಕ್ಕೆ ಶ್ರೇಷ್ಠ ಇನ್ನಿಂಗ್ಸ್​ ಒದಗಿಸುತ್ತಿದ್ದರು. ಇದೇ ಕಾರಣಕ್ಕೆ ಅವರನ್ನು ಮಿಸ್ಟರ್​ ಐಸಿಸಿ ಎಂದು ಕರೆಯಲಾಗುತ್ತದೆ. ಐಸಿಸಿ ಚಾಂಪಿಯನ್ಸ್​ ಟ್ರೋಫಿ ಧವನ್​ ಪಾಲಿಗೆ ನೆಚ್ಚಿನ ಟೂರ್ನಿಯಾಗಿತ್ತು. 2013ರ ಚಾಂಪಿಯನ್ಸ್​ ಟ್ರೋಫಿಯಲ್ಲಿ ಗರಿಷ್ಠ 363 ರನ್​ ಸಿಡಿಸಿ ಭಾರತದ ಪ್ರಶಸ್ತಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಸರಣಿಶ್ರೇಷ್ಠರಾಗಿದ್ದರು. 2017ರ ಆವೃತ್ತಿಯಲ್ಲೂ ಗರಿಷ್ಠ 338 ರನ್​ ಸಿಡಿಸಿದ್ದರು.

Continue Reading

ಕ್ರೀಡೆ

PAK vs BNG: ಪಾಕ್​ಗೆ ತವರಿನಲ್ಲೇ 10 ವಿಕೆಟ್​ ಹೀನಾಯ ಸೋಲು; ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾ

PAK vs BNG: ಬಾಂಗ್ಲಾದೇಶ ಪಾಕಿಸ್ತಾನದಲ್ಲಿ ಇದುವರೆಗೆ 13 ಟೆಸ್ಟ್​ ಪಂದ್ಯಗಳನ್ನು ಆಡಿತ್ತಾದರೂ ಒಂದೇ ಒಂದು ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ. ಇದೀಗ 14 ನೇ ಪ್ರಯತ್ನದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿದೆ

VISTARANEWS.COM


on

PAK vs BNG
Koo

ರಾವಲ್ಪಿಂಡಿ: ತಾನು ತೋಡಿದ ಹಳ್ಳಕ್ಕೆ ತಾನೇ ಬಿದ್ದ ಎನ್ನುವ ನಾಣ್ಣುಡಿಯಂತೆ ಪಾಕಿಸ್ತಾನ(PAK vs BNG) ತಂಡ ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್​(PAK vs BNG 1st Test) ಪಂದ್ಯದಲ್ಲಿ ಹೀನಾಯ 10 ವಿಕೆಟ್​ಗಳ ಸೋಲು ಕಂಡಿದೆ. ಬಾಂಗ್ಲಾದೇಶ ತಂಡ ಪಾಕ್​ ನೆಲದಲ್ಲಿ ಇದೇ ಮೊದಲ ಗೆಲುವು ಸಾಧಿಸಿ ಐತಿಹಾಸಿಕ ಸಾಧನೆ ಮಾಡಿದೆ.

ರಾವಲ್ಪಿಂಡಿಯಲ್ಲಿ ನಡೆದ ಈ ಟೆಸ್ಟ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಪಾಕಿಸ್ತಾನ 6 ವಿಕೆಟ್​ಗೆ 448 ರನ್‌ ಗಳಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 565 ರನ್‌ ಪೇರಿಸಿತು. ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಪಾಕಿಸ್ತಾನ ಅಂತಿಮ ದಿನದಾಟದಲ್ಲಿ ಕೇವಲ 146 ರನ್​ಗೆ ಸರ್ವ ಪತನ ಕಂಡಿತು. ಗೆಲುವಿಗೆ 28 ರನ್​ ಗುರಿ ಪಡೆದ ಬಾಂಗ್ಲಾದೇಶ ವಿಕೆಟ್​ ನಷ್ಟವಿಲ್ಲದೆ 30 ರನ್​ ಬಾರಿಸಿ ಗೆಲುವಿನ ನಗೆ ಬೀರಿತು. ಅತಿಯಾದ ಆತ್ಮವಿಶ್ವಾಸವೇ ಪಾಕ್​ ತಂಡದ ಸೋಲಿಗೆ ಕಾರಣವಾಯಿತು. ಮೊದಲ ಇನಿಂಗ್ಸ್​ನಲ್ಲಿ ಡಿಕ್ಲೇರ್‌ ಮಾಡದೇ ಇರುತ್ತಿದ್ದರೆ ಕನಿಷ್ಠ ಪಂದ್ಯವನ್ನು ಡ್ರಾ ಮಾಡುವ ಅವಕಾಶ ದೊರಕುತ್ತಿತ್ತು. ಇದೀಗ ಸೋಲು ಕಂಡು ಪೇಚಿಗೆ ಸಿಲುಕಿದೆ.

ಐತಿಹಾಸಿಕ ಗೆಲುವು


ಬಾಂಗ್ಲಾದೇಶ ಪಾಕಿಸ್ತಾನ ನೆಲದಲ್ಲಿ ಸಾಧಿಸಿದ ಮೊದಲ ಗೆಲುವು ಇದಾಗಿದೆ. ಇದುವರೆಗೆ 13 ಟೆಸ್ಟ್​ ಪಂದ್ಯಗಳನ್ನು ಆಡಿತ್ತಾದರೂ ಒಂದೇ ಒಂದು ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ. ಇದೀಗ 14 ನೇ ಪ್ರಯತ್ನದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಸಾಧನೆ ಮಾಡಿದೆ.

ಬಾಂಗ್ಲಾ ಪರ ದ್ವಿತೀಯ ಇನಿಂಗ್ಸ್​ನಲ್ಲಿ ಮಾರಕ ಬೌಲಿಂಗ್​ ದಾಳಿ ನಡೆಸಿದ ಮೆಹಿದಿ ಹಸನ್ ಮಿರಾಜ್ 21 ರನ್​ಗೆ 4 ವಿಕೆಟ್​ ಉಡಾಯಿಸಿದರೆ, ಅನುಭವಿ ಶಕಿಬ್​ ಅಲ್​ ಹಸನ್​, 3 ವಿಕೆಟ್​ ಕಡೆವಿದರು. ಬ್ಯಾಟಿಂಗ್​ನಲ್ಲಿ ಮೊದಲ ಇನಿಂಗ್ಸ್​ನಲ್ಲಿ ಪಾಕ್‌ ಬೌಲರ್‌ಗಳ ಮೇಲೆ ಸವಾರಿ ಮಾಡಿದ್ದ ಅನುಭವಿ ಆಟಗಾರ ಮುಶ್ಫಿಕರ್‌ ರಹೀಂ 191 ರನ್‌ ಬಾರಿಸಿದ್ದರು. ಅವರ ಈ ಭರ್ಜರಿ ಆಟ ಬಾಂಗ್ಲಾ ತಂಡಕ್ಕೆ ಮೇಲುಗೈ ಸಾಧಿಸುವಂತೆ ಮಾಡಿತು. ಉಳಿದಂತೆ ಮೆಹಿದಿ ಹಸನ್ 77, ಶಾದ್ಮನ್ ಇಸ್ಲಾಂ 93 ರನ್​ ಬಾರಿಸಿದ್ದರು.

ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿಯೂ ಪ್ರಗತಿ ಸಾಧಿಸಿದ ಬಾಂಗ್ಲಾ


ಪಾಕಿಸ್ತಾನದ ವಿರುದ್ಧದ ಮೊದಲ ಟೆಸ್ಟ್ ಗೆಲುವು ಸಾಧಿಸಿದ ಬಾಂಗ್ಲಾದೇಶ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2023-25 ​​ಅಂಕಗಳ ಪಟ್ಟಿಯಲ್ಲಿ ಜಂಟಿ-ಐದನೇ ಸ್ಥಾನಕ್ಕೆ ಏರಿತು. ಮತ್ತೊಂದೆಡೆ, ಶಾನ್ ಮಸೂದ್ ನಾಯಕತ್ವದಲ್ಲಿ ಆಡಿದ ಎಲ್ಲಾ ನಾಲ್ಕು ಟೆಸ್ಟ್ ಪಂದ್ಯಗಳನ್ನು ಕಳೆದುಕೊಂಡಿರುವ ಪಾಕಿಸ್ತಾನ ಇದೀಗ ಎರಡನೇ-ಕೊನೆಯ ಸ್ಥಾನಕ್ಕೆ ಕುಸಿದಿದೆ. ಬಾಂಗ್ಲಾದೇಶ 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಅಂತಿಮ ಟೆಸ್ಟ್​ ಆಗಸ್ಟ್​ 30ರಿಂದ ಆರಂಭಗೊಳ್ಳಲಿದೆ. ಈ ಪಂದ್ಯವನ್ನು ಸೋತರೆ ಪಾಕ್​ ತವರಿನಲ್ಲಿ ಸರಣಿ ಸೋಲಿನ ಮುಖಭಂಗ ಎದುರಿಸಲಿದೆ.

Continue Reading

ಕ್ರೀಡೆ

Shakib Al Hasan: ಚೆಂಡೆಸೆದು ಪಾಕ್​ ಆಟಗಾರ ರಿಜ್ವಾನ್​ ಕೆಣಕಿದ ಶಕಿಬ್​ ಅಲ್​ ಹಸನ್; ವಿಡಿಯೊ ವೈರಲ್​

VISTARANEWS.COM


on

Shakib Al Hasan
Koo

ರಾವಲ್ಪಿಂಡಿ: ಬಾಂಗ್ಲಾದೇಶದ(Pakistan vs Bangladesh) ಹಿರಿಯ ಕ್ರಿಕೆಟ್​ ಆಟಗಾರ ಶಕಿಬ್​ ಅಲ್​ ಹಸನ್​(Shakib Al Hasan) ಮೈದಾನದಲ್ಲಿ ಅತಿರೇಕದ ವರ್ತನೆ​ ತೋರುವು ಅವರ ಸಾಮಾನ್ಯ ಗುಣ. ಹಲವು ಬಾರಿ ಅವರು ಈ ರೀತಿಯ ವರ್ತನೆ ತೋರಿ ಟೀಕಿಗೆ ಗುರಿಯಾಗಿದ್ದರು. ಇದೀಗ ಪಾಕಿಸ್ತಾನ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿಯೂ ಶಕಿಬ್​ ತಾಳ್ಮೆ ಕಳೆದುಕೊಂಡ(Angry Shakib Al Hasan) ಘಟನೆ ನಡೆದಿದೆ.

ಪಾಕಿಸ್ತಾನದ ಬ್ಯಾಟರ್​ ಮೊಹಮ್ಮದ್​ ರಿಜ್ವಾನ್(Mohammad Rizwan)​ ಕ್ರೀಸ್​ನಲ್ಲಿ ಬ್ಯಾಟಿಂಗ್​ ನಡೆಸುತ್ತಿದ್ದರು. ಶಕಿಬ್​ ಬೌಲಿಂಗ್​ ನಡೆಸಲು ಮುಂದಾದ ವೇಳೆ ರಿಜ್ವಾನ್​ ಏಕಾಏಕಿ ಹಿಂದಕ್ಕೆ ತಿರುಗಿ ಫೀಲ್ಡರ್​ಗೆ ಏನೋ ಸನ್ನೆ ಮಾಡಿ ಬ್ಯಾಟಿಂಗ್​ ನಡೆಸಲು ಸಿದ್ಧರಾಗಲಿಲ್ಲ. ಸಿಟ್ಟಿಗೆದ್ದ ಶಕಿಬ್​​ ಚೆಂಡನ್ನು ನೇರವಾಗಿ ರಿಜ್ವಾನ್ ಕಡೆ ಎಸೆದರು. ಚೆಂಡು ರಿಜ್ವಾನ್ ತೆಲೆಯ ಪಕ್ಕಾದಲ್ಲೇ ಸಾಗಿ ಕೀಪರ್ ಕೈ ಸೇರಿತು. ಈ ವೇಳೆ ಅಂಪೈರ್​ ರಿಚರ್ಡ್‌ ಕೆಟಲ್‌ಬರೋ ಮಧ್ಯ ಪ್ರವೇಶಿಸಿ ಶಬಿಕ್​ಗೆ ವಾರ್ನಿಂಗ್​ ನೀಡಿದರು. ಸದ್ಯ ಈ ವಿಡಿಯೊ ವೈರಲ್(viral video)​ ಆಗಿದೆ.

2 ವಾರಗಳ ಹಿಂದೆ ಗ್ಲೋಬಲ್ ಟಿ20 ಲೀಗ್ ಟೂರ್ನಿಯಲ್ಲಿ ಸೂಪರ್ ಓವರ್(Shakib Al Hasan super over) ಆಡಲು ನಿರಾಕರಿಸಿದ ವಿವಾರವಾಗಿ ಶಕಿಬ್​ ಸುದ್ದಿಯಾಗಿದ್ದರು. ಇವರ ಈ ಕೆಟ್ಟ ನಿರ್ಧಾರದಿಂದ ತಂಡ ಟೂರ್ನಿಯಿಂದಲೇ ಹೊರಬಿದ್ದಿತ್ತು.

ಎಲಿಮಿನೇಟರ್ ಪಂದ್ಯವಾದ ಬಾಂಗ್ಲಾ ಟೈಗರ್ಸ್ ಮತ್ತು ಟೊರೊಂಟೊ ನ್ಯಾಷನಲ್ಸ್ ನಡುವಣ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಫಲಿತಾಂಶ ನಿರ್ಧರಿಸಲು ಆಯೋಜಕರು ಸೂಪರ್ ಓವರ್ ಆಡಲು ನಿರ್ಧರಿಸಿದ್ದರು. ಆದರೆ ಬಾಂಗ್ಲಾ ಟೈಗರ್ಸ್ ತಂಡದ ನಾಯಕ ಶಕಿಬ್‌ ಇದಕ್ಕೆ ಒಪ್ಪಿಗೆ ಸೂಚಿಸಲಿಲ್ಲ. ಕನಿಷ್ಟ 5 ಓವರ್‌ ಆಡಿಸಬೇಕು ಎಂದು ಹಠ ಹಿಡಿದರು. ಇದಕ್ಕೆ ಒಪ್ಪದ ಆಯೋಜಕರು ಪಂದ್ಯವನ್ನೇ ರದ್ದುಗೊಳಿಸಿದರು. ಈ ಪರಿಣಾಮ ಬಾಂಗ್ಲಾ ಟಗರ್ಸ್‌ ತಂಡ ಟೂನಿಯಿಂದಲೇ ಹೊರಬಿದ್ದಿತ್ತು.

ಇದನ್ನೂ ಓದಿ Shakib Al Hasan: ಬಾಂಗ್ಲಾ ತಂಡದ ನಾಯಕ ಶಕಿಬ್​ ವಿರುದ್ಧ ಕೊಲೆ ಪ್ರಕರಣ ದಾಖಲು

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಕಣ್ಣಿನ ದೃಷ್ಟಿ ಸಮಸ್ಯೆಗೆ ಒಳಗಾಗಿದ್ದ ಶಕೀಬ್​ ಶಸ್ತ್ರಚಿಕಿತ್ಸೆಗೆ ಒಳಗಾಗಿ ಬಹುದಿನಗಳ ವಿಶ್ರಾಂತಿ ಪಡೆದಿದ್ದರು. ಇದೇ ಜೂನ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಆಡುವ ಸಲುವಾಗಿ ಢಾಕಾ ಪ್ರೀಮಿಯರ್ ಲೀಗ್​ನಲ್ಲಿ ಆಡಲಿಳಿದು ವಿಶ್ವಕಪ್‌ ಆಡಿದ್ದರು.

ಶಕಿಬ್​ ವಿರುದ್ಧ ಕೊಲೆ ಪ್ರಕರಣ ದಾಖಲು

ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದ ಸಮಯದಲ್ಲಿ ಆಪಾದಿತ ಕೊಲೆಗೆ ಸಂಬಂಧಿಸಿದಂತೆ 147 ಜನರಲ್ಲಿ ಶಕಿಬ್​ ಕೂಡ ಸೇರಿದ್ದಾರೆ ಎಂದು ಅವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ರಫೀಕುಲ್ ಇಸ್ಲಾಂ ಎನ್ನುವ ವ್ಯಕ್ತಿ ಪ್ರಕರಣ ದಾಖಲಿಸಿದ್ದು, ಢಾಕಾದಲ್ಲಿ ನಡೆದ ಪ್ರತಿಭಟನೆಯ ವೇಳೆ ತನ್ನ ತಂದೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಢಾಕಾದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಶಕಿಬ್​ ಅಲ್ ಹಸನ್ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಕಿಬ್ ಮಾತ್ರವಲ್ಲ, ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ಒಟ್ಟು 500 ಮಂದಿಯನ್ನು ಇದರಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ.

Continue Reading

ಕ್ರಿಕೆಟ್

IPL 2025: ಮುಂಬೈ ಇಂಡಿಯನ್ಸ್​ಗೆ ಶ್ರೇಯಸ್​ ಅಯ್ಯರ್​, ಕೆಕೆಆರ್​ಗೆ ಸೂರ್ಯಕುಮಾರ್​ ನಾಯಕ!​

IPL 2025: ಸೂರ್ಯಕುಮಾರ್​ ಯಾದವ್​ ಅವರು ಮುಂಬೈ ತಂಡ ಸೇರುವ ಮುನ್ನ ಕೆಕೆಆರ್​ ಪರ ಆಡುತ್ತಿದ್ದರು. 2014 ರ ಐಪಿಎಲ್ ಹರಾಜಿನಲ್ಲಿ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಖರೀದಿಸಿತ್ತು.

VISTARANEWS.COM


on

IPL 2025
Koo

ಮುಂಬಯಿ: ಐಪಿಎಲ್(IPL 2025)​ ಆಟಗಾರ ಮೆಗಾ ಹರಾಜು(ipl 2025 mega auction) ಪ್ರಕ್ರಿಯೆ ನಡೆಯುವ ಮುನ್ನವೇ ಕೆಲ ಫ್ರಾಂಚೈಸಿಗಳು ಸ್ಟಾರ್​ ಆಟಗಾರರನ್ನು ತಮ್ಮ ತಂಡದತ್ತ ಸೆಳೆಯಲು ತೆರೆ ಮರೆಯಲ್ಲಿ ಭಾರೀ ಕಸರತ್ತು ಆರಂಭಿಸಿದೆ. ಹೌದು, ಇದೀಗ ವರದಿಯಾದ ಪ್ರಕಾರ ಭಾರತ ಟಿ20 ತಂಡದ ನಾಯಕ, ಪ್ರಸ್ತುತ ಮುಂಬೈ ಇಂಡಿಯನ್ಸ್(mumbai indians) ತಂಡದ ಆಟಗಾರ ಸೂರ್ಯಕುಮಾರ್​ ಯಾದವ್​ಗೆ ಹಾಲಿ ಚಾಂಪಿಯನ್​ ಕೆಕೆಆರ್(KKR)​ ತಂಡದಿಂದ ನಾಯಕತ್ವದ ಆಫರ್​ ಬಂದಿದೆ ಎಂದು ವರದಿಯಾಗಿದೆ.

ಮುಂಬೈ ಇಂಡಿಯನ್ಸ್​ ಕೂಡ ತನ್ನ ನಾಯಕತ್ವದಲ್ಲಿ ಬದಲಾವಣೆಗೆ ಮುಂದಾಗಿದ್ದು, ತಂಡದ ಆಟಗಾರ ಸೂರ್ಯಕುಮಾರ್​ ಅವರನ್ನು ಕೆಕೆಆರ್​ ತಂಡಕ್ಕೆ ಬಿಟ್ಟುಕೊಟ್ಟು ಕೆಕೆಆರ್​ ತಂಡದ ನಾಯಕ ಶ್ರೇಯಸ್​ ಅಯ್ಯರ್​ ಅವರನ್ನು ಖರೀದಿಸಿ ನಾಯಕತ್ವ ನೀಡಲು ಮುಂಬೈ ಇಂಡಿಯನ್ಸ್​ ನಿರ್ಧರಿಸಿದೆ ಎನ್ನಲಾಗಿದೆ. ಟ್ರೇಡಿಂಗ್​ ಮೂಲಕ ಉಭಯ ಆಟಗಾರರನ್ನು ಪರಸ್ಪರ ಬದಲಾವಣೆ ಮಾಡಿಕೊಳ್ಳಲು ಎರಡು ಫ್ರಾಂಚೈಸಿಗಳು ಯೋಜನೆ ನಡೆಸಿವೆ ಎಂದು ವರದಿಯಾಗಿದೆ. ಈ ಸುದ್ದಿ ಕೇಳಿ ಬಂದ ತಕ್ಷಣ ನೆಟ್ಟಿಗರು ಸೂರ್ಯಕುಮಾರ್​ಗೆ ಕೆಕೆಆರ್​ ಜೆರ್ಸಿ, ಶ್ರೇಯಸ್​ ಅಯ್ಯರ್​ಗೆ ಮುಂಬೈ ಜೆರ್ಸಿ ತೊಡಿಸಿದ ಎಡಿಟೆಡ್​ ಫೋಟೊವನ್ನು ಶೇರ್​ ಮಾಡಲಾರಂಭಿಸಿದ್ದಾರೆ.

ಇದನ್ನೂ ಓದಿ IPL 2025: ಗೆಳೆಯ ಕೆ.ಎಲ್​ ರಾಹುಲ್​ರನ್ನು ಮತ್ತೆ ಆರ್​ಸಿಬಿಗೆ ಕರೆತರಲು ಮುಂದಾದ ಕೊಹ್ಲಿ

ಮುಂಬೈ ತಂಡ ಕಳೆದ ಬಾರಿ ಹಾರ್ದಿಕ್​ ಪಾಂಡ್ಯ ಅವರನ್ನು ಗುಜರಾತ್​ ತಂಡದಿಂದ ಟ್ರೇಡಿಂಗ್​ ಮೂಲಕ ಖರೀದಿಸಿ ತಂಡದ ನಾಯಕತ್ವ ನೀಡಿತ್ತು. 5 ಬಾರಿ ತಂಡವನ್ನು ಚಾಂಪಿಯನ್​ ಮಾಡಿದ್ದ ನಾಯಕ ರೋಹಿತ್​ ಅವರನ್ನು ನಾಯಕತ್ವದಿಂದ ಕೆಳಗಿಳಿಸಿತ್ತು. ಇದೀಗ ಕೆಕೆಆರ್​ ತಂಡವನ್ನು ಚಾಂಪಿಯನ್​ ಮಾಡಿರುವ, ಮುಂಬೈ ಮೂಲದವರೇ ಆದ ಶ್ರೇಯಸ್​ ಅಯ್ಯರ್​ ಅವರನ್ನು ತಂಡಕ್ಕೆ ಸೇರಿಸಲು ಮುಂದಾಗಿದೆ ಎಂದು ವರದಿಯಾಗಿದೆ.

ಸೂರ್ಯಕುಮಾರ್​ ಯಾದವ್​ ಅವರು ಮುಂಬೈ ತಂಡ ಸೇರುವ ಮುನ್ನ ಕೆಕೆಆರ್​ ಪರ ಆಡುತ್ತಿದ್ದರು. 2014 ರ ಐಪಿಎಲ್ ಹರಾಜಿನಲ್ಲಿ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಖರೀದಿಸಿತ್ತು. ಇದೇ ಆವೃತ್ತಿಯಲ್ಲಿ ಕೆಕೆಆರ್​ ಚಾಂಪಿಯನ್​ ಕೂಡ ಆಗಿತ್ತು. ಗೌತಮ್​ ಗಂಭೀರ್​ ತಂಡದ ನಾಯಕನಾಗಿದ್ದರು. ಸೂರ್ಯಕುಮಾರ್​ ಕೆಕೆಆರ್​ ಪರ ನಾಲ್ಕು ಋತುಗಳಲ್ಲಿ 54 ಪಂದ್ಯಗಳನ್ನಾಡಿ 608 ರನ್​ ಬಾರಿಸಿದ್ದರು. 2018ರಲ್ಲಿ ಸೂರ್ಯ ಮುಂಬೈ ತಂಡ ಸೇರಿದ್ದರು.

ಸೂರ್ಯಕುಮಾರ್​ ಇದುವರೆಗೆ 150 ಐಪಿಎಲ್ ಪಂದ್ಯಗಳಿಂದ 3594 ರನ್​ ಬಾರಿಸಿದ್ದಾರೆ. ಇದರಲ್ಲಿ 2 ಶತಕ ಮತ್ತು 24 ಅರ್ಧಶತಕ ಒಳಗೊಂಡಿದೆ. ರೋಹಿತ್ ಶರ್ಮ ಅವರು ಟಿ20 ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಕಾರಣ ಭಾರತ ತಂಡದ ಟಿ20 ನಾಯಕತ್ವ ಸೂರ್ಯಕುಮಾರ್​ ಹೆಗಲೇರಿದೆ. ಅವರ ಪೂರ್ಣ ಪ್ರಮಾಣದ ನಾಯಕತ್ವದಲ್ಲಿ ಆಡಿದ್ದ ಕಳೆದ ಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 3-0 ಅಂತರದಿಂದ ಗೆದ್ದು ಬೀಗಿತ್ತು.

ಶ್ರೇಯಸ್​ ಅಯ್ಯರ್​ ‘ಸಿಯೆಟ್ ಅವಾರ್ಡ್ಸ್'(CEAT Cricket Awards)ನಲ್ಲಿ ವರ್ಷದ T20 ನಾಯಕತ್ವ ಪ್ರಶಸ್ತಿಯನ್ನು ಗೆದಿದ್ದರು. ಐಪಿಎಲ್ ಟೂರ್ನಿಯಲ್ಲಿ ನಾಯಕನಾಗಿ ತಂಡವನ್ನು 2 ಬಾರಿ ಫೈನಲ್‌ ತಲುಪಿಸಿದ ಸಾಧನೆಗೆ ಈ ಪ್ರಶಸ್ತಿ ಲಭಿಸಿತ್ತು. ಶ್ರೇಯಸ್​ ಅಯ್ಯರ್​ ಅವರು ಐಪಿಎಲ್​ನಲ್ಲಿ ಡೆಲ್ಲಿ ತಂಡದ ನಾಯಕನಾಗಿ ತಂಡವನ್ನು ಒಮ್ಮೆ ಫೈನಲ್​ ತಲುಪಿಸಿದ್ದರು. ಅಲ್ಲಿ ಮುಂಬೈ ವಿರುದ್ಧ ತಂಡ ಸೋಲು ಕಂಡು ರನ್ನರ್​ ಅಪ್​ ಪ್ರಶಸ್ತಿ ಪಡೆದಿತ್ತು. ಈ ಬಾರಿಯ ಆವೃತ್ತಿಯಲ್ಲಿ ಕೆಕೆಆರ್​ ತಂಡದ ನಾಯಕನಾಗಿ ಟ್ರೋಫಿ ಗೆದ್ದ ಸಾಧನೆ ಮಾಡಿದ್ದರು. 

ಅಯ್ಯರ್​ ಇದುವೆರೆಗೆ 115 ಐಪಿಎಲ್​ ಪಂದ್ಯವನ್ನಾಡಿ 3127 ರನ್​ ಬಾರಿಸಿದ್ದಾರೆ. ಇದರಲ್ಲಿ 21 ಅರ್ಧಶತಕ ಒಳಗೊಂಡಿದೆ. 96 ಗರಿಷ್ಠ ವೈಯಕ್ತಿ ಮೊತ್ತವಾಗಿದೆ. ಭಾರತ ತಂಡದ ಪರ 51 ಟಿ20, 62 ಏಕದಿನ ಮತ್ತು 14 ಟೆಸ್ಟ್​ ಪಂದ್ಯಗಳನ್ನಾಡಿ ಒಟ್ಟು 4,336 ರನ್​ ಗಳಿಸಿದ್ದಾರೆ. ಟೆಸ್ಟ್​ನಲ್ಲಿ 1, ಏಕದಿನದಲ್ಲಿ 5 ಶತಕ ಬಾರಿಸಿದ್ದಾರೆ.

Continue Reading
Advertisement
Virat Kohli
ಕ್ರೀಡೆ6 mins ago

Virat Kohli: ಧವನ್‌ ವಿದಾಯದ ಕುರಿತು ವಿರಾಟ್​ ಕೊಹ್ಲಿ ಭಾವನಾತ್ಮಕ ಸಂದೇಶ

ಕರ್ನಾಟಕ31 mins ago

KAS Prelims exam: ಕೆಎಎಸ್‌ ಪರೀಕ್ಷೆ ಮುಂದೂಡಲು ಕೆಲವರಿಂದ ಲಾಬಿ; ಆದರೆ ಮುಂದೂಡುವುದಿಲ್ಲ ಎಂದ ಸರ್ಕಾರ

Nissan Magnite EZ
ಆಟೋಮೊಬೈಲ್34 mins ago

Nissan Magnite : ನಿಸ್ಸಾನ್‌ ಮ್ಯಾಗ್ನೈಟ್‌ ಇಜಡ್‌- ಶಿಫ್ಟ್‌ ಕಾರು ಹೇಗಿದೆ?; ಪವರ್‌, ಫೀಚರ್‌ಗಳು ಹೇಗಿವೆ? ಇಲ್ಲಿದೆ ವಿವರ

Narendra Modi
ದೇಶ34 mins ago

Narendra Modi: ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಸಾಧ್ಯವೇ ಇಲ್ಲದ ಪಾಪ; ಪ್ರಧಾನಿ ಮೋದಿ ಗುಡುಗು

Unified Pension Scheme
ವಾಣಿಜ್ಯ39 mins ago

Unified Pension Scheme: ಏಕೀಕೃತ ಪಿಂಚಣಿ ಯೋಜನೆ; ನೌಕರರಿಗೆ ಸಿಗುವ ಟಾಪ್‌ 9 ಪ್ರಯೋಜನಗಳಿವು

Actor Darshan Bindass in jail smoking cigarettes with rowdy-sheeters
ಸ್ಯಾಂಡಲ್ ವುಡ್40 mins ago

Actor Darshan : ರೌಡಿಶೀಟರ್‌ಗಳ ಜತೆಗೆ ಸಿಗರೇಟ್‌ ಸೇದುತ್ತಾ ಜೈಲಿನಲ್ಲಿ ನಟ ದರ್ಶನ್‌ ಬಿಂದಾಸ್‌ ಲೈಫ್!‌ ವೈರಲ್‌ ಆಯ್ತು ಫೋಟೊ

PAK vs BNG
ಕ್ರೀಡೆ56 mins ago

PAK vs BNG: ಪಾಕ್​ಗೆ ತವರಿನಲ್ಲೇ 10 ವಿಕೆಟ್​ ಹೀನಾಯ ಸೋಲು; ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾ

ಕರ್ನಾಟಕ1 hour ago

Price Support Scheme: ರೈತರಿಗೆ ಕೇಂದ್ರದಿಂದ ಗುಡ್‌ ನ್ಯೂಸ್; ಬೆಂಬಲ ಬೆಲೆಯಲ್ಲಿ ಹೆಸರು, ಸೂರ್ಯಕಾಂತಿ ಖರೀದಿಸಲು ರಾಜ್ಯಕ್ಕೆ ಸೂಚನೆ

Physical Abuse
ಕಲಬುರಗಿ1 hour ago

Physical Abuse : ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಎಸ್ಕೇಪ್; ಆತ್ಮಹತ್ಯೆಗೆ ಯತ್ನಿಸಿದ ಯುವತಿ

Viral News
ವೈರಲ್ ನ್ಯೂಸ್1 hour ago

ಸೋಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಬೆಂಗಳೂರು ಮೂಲದ ಯುವತಿಯ ಬೈಸೆಪ್ಸ್ ಫೋಟೊ; ಜಾತೀಯತೆಯ ಚರ್ಚೆಗೆ ಕಾರಣವೇನು?

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ1 day ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌