Mann Ki Baat: ಚಂದ್ರಯಾನ-3ರ ಯಶಸ್ಸನ್ನು ದೇಶ ಮರೆಯಲು ಸಾಧ್ಯವೇ ಇಲ್ಲ: ʼಮನ್​ ಕಿ ಬಾತ್​ʼನಲ್ಲಿ ಮೋದಿ ಬಣ್ಣನೆ - Vistara News

ದೇಶ

Mann Ki Baat: ಚಂದ್ರಯಾನ-3ರ ಯಶಸ್ಸನ್ನು ದೇಶ ಮರೆಯಲು ಸಾಧ್ಯವೇ ಇಲ್ಲ: ʼಮನ್​ ಕಿ ಬಾತ್​ʼನಲ್ಲಿ ಮೋದಿ ಬಣ್ಣನೆ

Mann Ki Baat: ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು, ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಐತಿಹಾಸಿಕ ಕ್ಷಣವನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ʼಮನ್​ ಕಿ ಬಾತ್​ʼ ನ 113ನೇ ಸಂಚಿಕೆಯಲ್ಲಿ ಬಣ್ಣಿಸಿದರು. 21ನೇ ಶತಮಾನದಲ್ಲಿ ಭಾರತದಲ್ಲಿ ಬಹಳಷ್ಟು ಅತ್ಯುತ್ತಮ ಕಾರ್ಯಗಳು ನಡೆಯುತ್ತಿವೆ. ಇವು ಅಭಿವೃದ್ಧಿ ಹೊಂದಿದ ರಾಷ್ಟ್ರ ನಿರ್ಮಾಣದ ಗುರಿಯನ್ನು ಇನ್ನಷ್ಟು ಬಲಪಡಿಸುತ್ತಿದೆ ಎಂದು ಪ್ರಧಾನಿ ಹೇಳಿದರು.

VISTARANEWS.COM


on

Mann Ki Baat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು, ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಐತಿಹಾಸಿಕ ಕ್ಷಣವನ್ನು ಮರೆಯಲು ಸಾಧ್ಯವೇ ಇಲ್ಲ. ಚಂದ್ರಯಾನ-3ರ ಯಶಸ್ಸನ್ನು ದೇಶ ಎಂದಿಗೂ ಸ್ಮರಿಸಿಕೊಳ್ಳುತ್ತದೆ. ಜನರ ಸಾಮೂಹಿಕ ಪ್ರಯತ್ನಗಳಿಂದಾಗಿ ವೈಜ್ಞಾನಿಕ ಬೆಳವಣಿಗೆ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಣ್ಣಿಸಿದರು. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ʼಮನ್​ ಕಿ ಬಾತ್​ʼ (Mann Ki Baat)ನ 113ನೇ ಸಂಚಿಕೆಯನ್ನುದ್ದೇಶಿಸಿ ಅವರು ಮಾತನಾಡಿದರು.

21ನೇ ಶತಮಾನದಲ್ಲಿ ಭಾರತದಲ್ಲಿ ಬಹಳಷ್ಟು ಅತ್ಯುತ್ತಮ ಕಾರ್ಯಗಳು ನಡೆಯುತ್ತಿವೆ. ಇವು ಅಭಿವೃದ್ಧಿ ಹೊಂದಿದ ರಾಷ್ಟ್ರ ನಿರ್ಮಾಣದ ಗುರಿಯನ್ನು ಇನ್ನಷ್ಟು ಬಲಪಡಿಸುತ್ತಿದೆ ಎಂದು ಪ್ರಧಾನಿ ಹೇಳಿದರು. “ಉದಾಹರಣೆಗೆ ಆಗಸ್ಟ್ 23ರಂದು ದೇಶವು ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿತು. ನೀವೆಲ್ಲರೂ ಈ ದಿನವನ್ನು ಆಚರಿಸಿದ್ದೀರಿ ಎನ್ನುವ ನಂಬಿಕೆ ನನಗಿದೆ. ಮತ್ತೊಮ್ಮೆ ನೀವೆಲ್ಲರೂ ಚಂದ್ರಯಾನ -3ರ ಯಶಸ್ಸನ್ನು ನೆನಪಿಸಿಕೊಳ್ಳಬೇಕು. ಕಳೆದ ವರ್ಷ ಆಗಸ್ಟ್ 23ರಂದು ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಇಳಿಯಿತು. ಈ ಸಾಧನೆ ಮಾಡಿದ ವಿಶ್ವದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ” ಎಂದು ಪ್ರಧಾನಿ ಮೋದಿ ಅಭಿಮಾನದಿಂದ ನುಡಿದರು.

ಯುವಜನತೆಗೆ ಕರೆ

ʼʼಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಅಭಿವೃದ್ಧಿ ಹೊಂದಿದ ಭಾರತ ಹಾಗೂ ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಒಂದು ಲಕ್ಷದಷ್ಟು ಯುವಜನತೆ ರಾಜಕೀಯಕ್ಕೆ ಪ್ರವೇಶಿಸಲು ಕರೆ ನೀಡಿದ್ದೆ. ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ದೊರಕುತ್ತಿದೆʼʼ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ʼʼದೊಡ್ಡ ಸಂಖ್ಯೆಯಲ್ಲಿ ಯುವಜನತೆ ರಾಜಕೀಯಕ್ಕೆ ಸೇರಲು ಸಿದ್ಧರಿದ್ದಾರೆ. ಅವರಿಗೆ ಸರಿಯಾದ ಅವಕಾಶ ಹಾಗೂ ಮಾರ್ಗದರ್ಶನದ ಅಗತ್ಯವಿದೆʼʼ ಎಂದು ಅಭಿಪ್ರಾಯಪಟ್ಟರು.

ʼʼಸ್ವಾತಂತ್ರ್ಯ ಚಳುವಳಿಯಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದವರು, ಸಮಾಜದ ಎಲ್ಲ ವರ್ಗದ ಅಸಂಖ್ಯಾತ ಜನರು ಭಾಗವಹಿಸಿದ್ದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮೆಲ್ಲವನ್ನು ಅರ್ಪಿಸಿಕೊಂಡಿದ್ದರು. ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸಲು ನಾವು ಶ್ರಮಪಡಬೇಕುʼʼ ಎಂದು ಕರೆ ನೀಡಿದರು.

ಬಾಹ್ಯಾಕಾಶ ಕ್ಷೇತ್ರದಲ್ಲಿನ ಸುಧಾರಣೆಯಿಂದ ದೇಶದ ಯುವ ಜನತೆ ಸಾಕಷ್ಟು ಪ್ರಯೋಜನ ಪಡೆದಿದ್ದಾರೆ ಎಂದು ಮೋದಿ ಹೇಳಿದರು. ಇದೇ ವೇಳೆ ಸ್ಟಾರ್ಟ್ಅಪ್ ಸ್ಪೇಸ್‌ಟೆಕ್‌ ಗ್ಯಾಲಕ್ಸಿ ತಂಡವನ್ನು ಕಟ್ಟಿದ ಐಐಟಿ ಮದ್ರಾಸ್‌ನ ಹಿರಿಯ ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಾದ ನಡೆಸಿದರು.

ಯುವ ವಿಜ್ಞಾನಿಗಳಲ್ಲಿ ಒಬ್ಬರಾದ ಸುಯಾಶ್ ಮಾತನಾಡಿ, “ನಾವೆಲ್ಲರೂ ಐಐಟಿ ಮದ್ರಾಸ್‌ನಲ್ಲಿ ಭೇಟಿಯಾದೆವು. ಆ ಸಮಯದಲ್ಲಿ ‘ಹೈಪರ್ ಲೂಪ್’ ಎಂಬ ಯೋಜನೆ ಹೊಳೆಯಿತು. ಅದರಂತೆ ನಾವು ‘ಅವಿಷ್ಕಾರ್‌ ಹೈಪರ್ ಲೂಪ್’ ಎಂಬ ತಂಡವನ್ನು ಪ್ರಾರಂಭಿಸಿದೆವು. ಆ ಯೋಜನೆಯೊಂದಿಗೆ ಅಮೆರಿಕಕ್ಕೆ ತೆರಳಿದೆವು. ಏಷ್ಯಾದಿಂದ ಅಲ್ಲಿಗೆ ಹೋಗಿ ದೇಶದ ಧ್ವಜವನ್ನು ಹಾರಿಸಿದ ಏಕೈಕ ತಂಡ ನಮ್ಮದುʼʼ ಎಂದು ವಿವರಿಸಿದರು.

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರಕ್ಷಿತ್ ತಮ್ಮ ಸ್ಟಾರ್ಟ್ಅಪ್ ತಂತ್ರಜ್ಞಾನದ ಪ್ರಯೋಜನಗಳ ಬಗ್ಗೆ ಮಾತನಾಡಿದರು. ʼʼನಮ್ಮ ಈ ತಂತ್ರಜ್ಞಾನ (‘ಹೈಪರ್ ಲೂಪ್’)ದಿಂದ ಪ್ರತಿದಿನ ದೇಶದ ಯಾವುದೇ ಮೂಲೆಯ ಸ್ಪಷ್ಟ ಚಿತ್ರವನ್ನು ತೆಗೆದುಕೊಳ್ಳಬಹುದು ಮತ್ತು ನಾವು ಸಂಗ್ರಹಿಸುವ ಡೇಟಾವನ್ನು ಎರಡು ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಬಳಸಲಾಗುತ್ತದೆ. ಮೊದಲನೆಯದು ಗಡಿಗಳು, ಸಾಗರಗಳು ಮತ್ತು ಸಮುದ್ರಗಳನ್ನು ಮೇಲ್ವಿಚಾರಣೆ ಮಾಡುವ ಮೂಲಕ ಭಾರತವನ್ನು ಸಂರಕ್ಷಿಸಲಾಗುತ್ತದೆ. ಜತೆಗೆ ಶತ್ರು ಚಟುವಟಿಕೆಗಳನ್ನು ಪ್ರತಿದಿನ ಗಮನಿಸಲಾಗುತ್ತದೆ. ಎರಡನೆಯದಾಗಿ ಭಾರತದ ರೈತರನ್ನು ಸಬಲೀಕರಣಗೊಳಿಸಲಾಗುತ್ತದೆʼʼ ಎಂದು ತಿಳಿಸಿದರು.

ಇದನ್ನೂ ಓದಿ: Mann Ki Baat: ಪ್ಯಾರಿಸ್ ಒಲಿಂಪಿಕ್ಸ್​: ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ʼಮನ್​ ಕಿ ಬಾತ್​ʼನಲ್ಲಿ ಮೋದಿ ಕರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Delhi News : ಆಟಿಕೆಯೆಂದು ಭಾವಿಸಿ ಅಪ್ಪನ ಪಿಸ್ತೂಲ್‌ ಶಾಲೆಗೆ ತೆಗೆದುಕೊಂಡು ಹೋದ 10 ವರ್ಷದ ಬಾಲಕ

Delhi News : ಪರಿಶೀಲನೆಯ ನಂತರ ಪಿಸ್ತೂಲ್‌‌ನ ಪರವಾನಗಿ ಮಾನ್ಯವೆಂದು ಕಂಡುಬಂದಿದ್ದರಿಂದ ಗುರುತಿಸಬಹುದಾದ ಅಪರಾಧ ನಡೆದಿಲ್ಲ ಎಂದು ಪೊಲೀಸರು ತೀರ್ಮಾನಿಸಿದ್ದಾರೆ. ವಿದ್ಯಾರ್ಥಿಯ ತಾಯಿ ಪಿಸ್ತೂಲ್ ಅನ್ನು ಪೊಲೀಸ್ ಠಾಣೆಯಲ್ಲಿ ಡೆಪಾಸಿಟ್ ಮಾಡಿದ್ದಾರೆ.

VISTARANEWS.COM


on

Delhi News
Koo

ನವದೆಹಲಿ: 10 ವರ್ಷದ ಶಾಲಾ ಬಾಲಕನೊಬ್ಬ ತನ್ನ ಮನೆಯಲ್ಲಿಟ್ಟಿದ್ದ ಪಿಸ್ತೂಲ್ ಅನ್ನು ಆಟಿಕೆಯೆಂದು ತಪ್ಪಾಗಿ ಭಾವಿಸಿ ಅದನ್ನು ತನ್ನ ಶಾಲೆಗೆ ತಂದ ಘಟನೆ ಆಗಸ್ಟ್ 24 ರಂದು ದೆಹಲಿಯಲ್ಲಿ (Delhi News) ನಡೆದಿದೆ. ದೀಪಕ್‌ ವಿಹಾರ್‌ನ ಗ್ರೀನ್ ವ್ಯಾಲಿ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯಿಂದ ಕರೆ ಬಂದ ನಂತರ ಪೊಲೀಸರು ವಿದ್ಯಾರ್ಥಿಯ ಚೀಲದಿಂದ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.

ಆಡಳಿತ ಮಂಡಳಿ ತಕ್ಷಣ ಬಾಲಕನ ತಾಯಿಯನ್ನು ಕರೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಯ ತಾಯಿ, ಪಿಸ್ತೂಲ್‌ ಕೆಲವು ತಿಂಗಳ ಹಿಂದೆ ನಿಧನರಾದ ಬಾಲಕನ ತಂದೆಗೆ ಸೇರಿದ್ದು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂದೂಕಿಗೆ ಪರವಾನಗಿ ಇದೆ ಎಂದು ಅವಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಡೆಪಾಸಿಟ್‌ ಮಾಡಲು ಪಿಸ್ತೂಲ್ ಅನ್ನು ಹೊರಗೆ ಇಟ್ಟಿದ್ದೆ ಎಂದು ತಾಯಿ ಹೇಳಿದ್ದಾರೆ.

ಇದನ್ನೂ ಓದಿ: Shocking Video : ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಪೊಲೀಸ್‌ ವಶಕ್ಕೆ

ಪರಿಶೀಲನೆಯ ನಂತರ ಪಿಸ್ತೂಲ್‌‌ನ ಪರವಾನಗಿ ಮಾನ್ಯವೆಂದು ಕಂಡುಬಂದಿದ್ದರಿಂದ ಗುರುತಿಸಬಹುದಾದ ಅಪರಾಧ ನಡೆದಿಲ್ಲ ಎಂದು ಪೊಲೀಸರು ತೀರ್ಮಾನಿಸಿದ್ದಾರೆ. ವಿದ್ಯಾರ್ಥಿಯ ತಾಯಿ ಪಿಸ್ತೂಲ್ ಅನ್ನು ಪೊಲೀಸ್ ಠಾಣೆಯಲ್ಲಿ ಡೆಪಾಸಿಟ್ ಮಾಡಿದ್ದಾರೆ.

Continue Reading

ವೈರಲ್ ನ್ಯೂಸ್

Shocking Video : ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಪೊಲೀಸ್‌ ವಶಕ್ಕೆ

Shocking Video : ಈ ವಿಡಿಯೋದಲ್ಲಿ ಹೆಣ್ಣು ನಾಯಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಆಘಾತಕಾರಿ ದೃಶ್ಯಗಳಿವೆ. ಸುರೇಂದ್ರ ಸಿಂಗ್‌ ಮುಗ್ಧ ಪ್ರಾಣಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎಂದು ಸುರಭಿ ರಾವತ್ ಎಂಬುವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

VISTARANEWS.COM


on

Shocking Video
Koo

ಗಾಜಿಯಾಬಾದ್: ಕಾಮುಕನೊಬ್ಬ ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಿಂದ ವರದಿಯಾಗಿದೆ. ಹೆಣ್ಣು ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಭಯಾನಕ ವೀಡಿಯೊ (Shocking Video) ಆನ್ ಲೈನ್ ನಲ್ಲಿ ವೈರಲ್ ಆದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. 21 ಸೆಕೆಂಡುಗಳ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿಗಿದೆ. ಕ್ಲಿಪ್‌‌ನಲ್ಲಿರುವ ಆರೋಪಿಯನ್ನು ಸುರೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಗಾಜಿಯಾಬಾದ್‌ನ ಮೋದಿನಗರದಲ್ಲಿ ನಿವಾಸಿ ನಾಯಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವಿಡಿಯೋದಲ್ಲಿ ಹೆಣ್ಣು ನಾಯಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಆಘಾತಕಾರಿ ದೃಶ್ಯಗಳಿವೆ. ಸುರೇಂದ್ರ ಸಿಂಗ್‌ ಮುಗ್ಧ ಪ್ರಾಣಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎಂದು ಸುರಭಿ ರಾವತ್ ಎಂಬುವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇಂತಹ ದುಷ್ಕೃತ್ಯಗಳನ್ನು ಕೇವಲ ಪ್ರಾಣಿಗಳ ಕ್ರೌರ್ಯ ಎಂದು ವರ್ಗೀಕರಿಸಬಾರದು. ಕಠಿಣ ಕಾನೂನು ಕ್ರಮದ ಅಗತ್ಯವಿದೆಯೇ ಎಂದು ಹೇಳಿದ್ದಾರೆ. ಘೋರ ವರ್ತನೆಗಾಗಿ ಆ ವ್ಯಕ್ತಿಯನ್ನು ಜೈಲಿಗೆ ಹಾಕಬೇಕೆಂದು ಅವರು ಒತ್ತಾಯಿಸಿದ್ದಾರೆ.

ಈ ಪೋಸ್ಟ್ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಜೊತೆಗೆ ಗ್ರಾಮೀಣ ಡಿಸಿಪಿ, ಗಾಜಿಯಾಬಾದ್ ಪೊಲೀಸ್ ಮತ್ತು ಯುಪಿ ಪೊಲೀಸರು ಸೇರಿದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ಟ್ಯಾಗ್ ಮಾಡಲಾಗಿದೆ. ಪ್ರಾಣಿಗಳ ಮೇಲಿನ ಇಂತಹ ದೌರ್ಜನ್ಯಗಳ ವಿರುದ್ಧ ಸಮಾಜವು ಧ್ವನಿ ಎತ್ತದಿದ್ದರೆ ಈ ರಾಕ್ಷಸರು ಮುಂದೆ ದುರ್ಬಲ ಮಕ್ಕಳು ಮತ್ತು ಮಹಿಳೆಯರನ್ನು ಗುರಿಯಾಗಿಸಬಹುದು ಎಂದು ರಾವತ್ ಅಭಿಪ್ರಾಯಪಟ್ಟಿದ್ದಾರೆ. ಕ್ರೌರ್ಯದ ಕೃತ್ಯಗಳನ್ನು ಅವರು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Narendra Modi: ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಸಾಧ್ಯವೇ ಇಲ್ಲದ ಪಾಪ; ಪ್ರಧಾನಿ ಮೋದಿ ಗುಡುಗು

ವೀಡಿಯೊ ಬಗ್ಗೆ ನಾಗರಿಕರಿಂದ ಭಾರಿ ವಿರೋಧ ವ್ಯಕ್ತಗೊಂಡಿದೆ. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಎಕ್ಸ್ ಬಳಕೆದಾರರು ಈ ಘಟನೆಯ ಬಗ್ಗೆ ತ್ವರಿತವಾಗಿ ಗಮನ ಹರಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ಇಂತಹ ಕೆಟ್ಟ ಮನಸ್ಥಿತಿ ಹೊಂದಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ . ಕೋಪಗೊಂಡ ನೆಟ್ಟಿಗರು, ಯುಪಿ ಪೊಲೀಸರನ್ನು ಟ್ಯಾಗ್ ಮಾಡಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿದ್ದಾರೆ.

ವೀಡಿಯೊ ಪ್ರಸಾರವಾದ ನಂತರ, ಮೋದಿನಗರ ಪೊಲೀಸರು ಕ್ರಮ ಕೈಗೊಂಡು, ಪ್ರಾಣಿ ಕ್ರೌರ್ಯ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Continue Reading

ದೇಶ

Narendra Modi: ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಸಾಧ್ಯವೇ ಇಲ್ಲದ ಪಾಪ; ಪ್ರಧಾನಿ ಮೋದಿ ಗುಡುಗು

Narendra Modi: ಮಹಾರಾಷ್ಟ್ರದ ಜಲ್ಗಾಂವ್‌ನಲ್ಲಿ ನಡೆದ ಲಕ್‌ಪತಿ ದೀದಿ ಸಮ್ಮೇಳನದಲ್ಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ʼʼಮಹಿಳೆಯರ ಸುರಕ್ಷತೆಗೆ ಭಾರತದಲ್ಲಿ ಅತ್ಯಂತ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಮಹಿಳೆಯರ ವಿರುದ್ಧದ ಅಪರಾಧಗಳು ಕ್ಷಮಿಸಲಾಗದ ಪಾಪʼʼ ಎಂದು ಗುಡುಗಿದ್ದಾರೆ. ʼʼಮಹಿಳೆಯ ಮೇಲೆ ದೌರ್ಜನ್ಯ ಎಸಗುವ ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡಬಾರದುʼʼ ಎಂದು ಸೂಚಿಸಿದ್ದಾರೆ.

VISTARANEWS.COM


on

Narendra Modi
Koo

ಮುಂಬೈ: ʼʼಮಹಿಳೆಯರ ಸುರಕ್ಷತೆಗೆ ಭಾರತದಲ್ಲಿ ಅತ್ಯಂತ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಮಹಿಳೆಯರ ವಿರುದ್ಧದ ಅಪರಾಧಗಳು ಕ್ಷಮಿಸಲಾಗದ ಪಾಪ ಎಂದು ನಾನು ರಾಜ್ಯ ಸರ್ಕಾರಗಳಿಗೆ ಪದೇ ಪದೆ ಹೇಳುತ್ತಿದ್ದೇನೆʼʼ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಜಲ್ಗಾಂವ್‌ನಲ್ಲಿ ನಡೆದ ಲಕ್‌ಪತಿ ದೀದಿ ಸಮ್ಮೇಳನ (Lakhpati Didi Sammelan)ದಲ್ಲಿ ಮಾತನಾಡಿದ ಮೋದಿ, “ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳ ಶಕ್ತಿಯನ್ನು ಹೆಚ್ಚಿಸುವುದರ ಜತೆಗೆ ಅವರ ಸುರಕ್ಷತೆಯ ಬಗ್ಗೆಯೂ ದೇಶ ಗಮನ ಹರಿಸುತ್ತದೆ. ಮಹಿಳೆಯರ ಸುರಕ್ಷತೆ ಬಗ್ಗೆ ನಾನು ಕೆಂಪು ಕೋಟೆಯಿಂದ ಪದೇ ಪದೆ ಹೇಳುತ್ತಿದ್ದೇನೆ. ಇಂದು ದೇಶದ ಯಾವುದೇ ರಾಜ್ಯವಾಗಿರಲಿ ಅಲ್ಲಿನ ನನ್ನ ಸಹೋದರಿಯರು ಮತ್ತು ಹೆಣ್ಣುಮಕ್ಕಳ ನೋವು ಮತ್ತು ಕೋಪವನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಮಹಿಳೆಯರ ಮೇಲಿನ ಅಪರಾಧವು ಕ್ಷಮಿಸಲಾಗದ ಪಾಪ ಎನ್ನುವುದನ್ನು ನಾನು ಮತ್ತೊಮ್ಮೆ ದೇಶದ ಪ್ರತಿಯೊಂದು ರಾಜಕೀಯ ಪಕ್ಷಕ್ಕೆ, ಪ್ರತಿ ರಾಜ್ಯ ಸರ್ಕಾರಕ್ಕೆ ನೆನಪಿಸುತ್ತಿದ್ದೇನೆ” ಎಂದು ಎಚ್ಚರಿಸಿದ್ದಾರೆ.

ʼʼಮಹಿಳೆಯ ಮೇಲೆ ದೌರ್ಜನ್ಯ ಎಸಗುವ ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡಬಾರದು. ಮಾತ್ರವಲ್ಲ ಅವರಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವವರನ್ನೂ ಕ್ಷಮಿಸಬಾರದು. ಆಸ್ಪತ್ರೆ, ಶಾಲೆ, ಸರ್ಕಾರ ಅಥವಾ ಪೊಲೀಸ್ ವ್ಯವಸ್ಥೆಯಾಗಿರಲಿ ಯಾವುದೇ ಮಟ್ಟದಲ್ಲಿನ, ಚಿಕ್ಕ ನಿರ್ಲಕ್ಷ್ಯವನ್ನೂ ಸಹಿಸಲು ಸಾಧ್ಯವಿಲ್ಲ. ಅಪರಾಧದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಬೇಕು. ಈ ಅಪರಾಧ ಕ್ಷಮಿಸಲಾಗದು ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಬೇಕುʼʼ ಎಂದು ಮೋದಿ ಸೂಚಿಸಿದ್ದಾರೆ.

ಪಶ್ಚಿಮ ಬಂಗಾಳದ ಕೋಲ್ಕತ್ತಾ ಆರ್‌.ಜಿ. ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯೊಬ್ಬರು ಅತ್ಯಾಚಾರಕ್ಕೆ ಒಳಗಾಗಿ ಕ್ರೂರವಾಗಿ ಹತ್ಯೆಗೀಡಾದ ಪ್ರಕರಣ ದೇಶಾದ್ಯಂತ ಸಂಸಚಲ ಸೃಷ್ಟಿಸಿದ್ದು ಇದನ್ನು ವಿರೋಧಿಸಿ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮಹಿಳೆಯರ ಸುರಕ್ಷತೆಗೆ ಬಗ್ಗೆ ಭರವಸೆ ನೀಡಿದ್ದಾರೆ.

ಮಹಿಳೆಯರ ಸುರಕ್ಷತೆಗೆ ಒತ್ತು

ತಮ್ಮ ಸರ್ಕಾರ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಲಿ ಜಾರಿಗೊಳಿಸಿರುವ ಹೊಸ ಕಾನೂನುಗಳನ್ನೂ ಮೋದಿ ಈ ವೇಳೆ ವಿವರಿಸಿದ್ದಾರೆ. ʼʼಇಂದು ದೊಡ್ಡ ಸಂಖ್ಯೆಯಲ್ಲಿ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಸೇರಿದ್ದಾರೆ. ನಿಮ್ಮ ಸುರಕ್ಷತೆಗಾಗಿ ನಮ್ಮ ಸರ್ಕಾರ ಕೈಗೊಂಡ ಕೆಲವು ಕ್ರಮಗಳ ಕುರಿತು ಹೇಳಲು ಬಯಸುತ್ತೇನೆ. ಈ ಹಿಂದೆ ಎಫ್ಐಆರ್‌ಗಳನ್ನು ಸಮಯಕ್ಕೆ ಸರಿಯಾಗಿ ದಾಖಲಿಸುತ್ತಿಲ್ಲ, ಸರಿಯಾಗಿ ವಿಚಾರಣೆ ನಡೆಯುತ್ತಿಲ್ಲ ಎಂಬೆಲ್ಲ ದೂರುಗಳು ಬರುತ್ತಿದ್ದವು. ಭಾರತೀಯ ನ್ಯಾಯ ಸಂಹಿತೆಯಲ್ಲಿದ್ದ ಇಂತಹ ಅನೇಕ ಅಡೆತಡೆಗಳನ್ನು ನಾವು ತೆಗೆದು ಹಾಕಿದ್ದೇವೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸಲು ಹೊಸ ಅಧ್ಯಾಯವನ್ನು ರಚಿಸಲಾಗಿದೆ. ಸಂತ್ರಸ್ತ ಮಹಿಳೆಯರು ಪೊಲೀಸ್ ಠಾಣೆಗೆ ಹೋಗಲು ಬಯಸದಿದ್ದರೆ ಅವರು ಮನೆಯಿಂದ ಇ-ಎಫ್ಐಆರ್ ದಾಖಲಿಸಬಹುದು” ಎಂದು ಪ್ರಧಾನಿ ವಿವರಿಸಿದ್ದಾರೆ.

ಏನಿದು ಲಕ್‌ಪತಿ ದೀದಿ ಯೋಜನೆ?

2024ರ ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ ಮಹತ್ವದ ಯೋಜನೆಗಳಲ್ಲಿ ʼಲಕ್‌ಪತಿ ದೀದಿʼಯೂ ಒಂದು. ಸ್ವಸಹಾಯ ಗುಂಪುಗಳಿಗೆ ವರ್ಷಕ್ಕೆ ಒಂದು ಲಕ್ಷ ರೂ.ವರೆಗೆ ಆದಾಯ ಗಳಿಸುವಂತೆ ಮಾಡುವ ಯೋಜನೆ ಇದಾಗಿದೆ. ಆ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಉದ್ದೇಶವನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹೊಂದಿದೆ. ಈ ಯೋಜನೆಯಡಿ, ಮಹಿಳೆಯರಿಗೆ ಪ್ಲಂಬಿಂಗ್, ಎಲ್ಇಡಿ ಬಲ್ಬ್ ತಯಾರಿಕೆ ಮತ್ತು ಡ್ರೋನ್‌ಗಳ ಕಾರ್ಯಾಚರಣೆ ಮತ್ತು ದುರಸ್ತಿಯಂತಹ ಕೌಶಲಗಳ ತರಬೇತಿ ನೀಡಲಾಗುತ್ತದೆ.

ಇದನ್ನೂ ಓದಿ: Mann Ki Baat: ಚಂದ್ರಯಾನ-3ರ ಯಶಸ್ಸನ್ನು ದೇಶ ಮರೆಯಲು ಸಾಧ್ಯವೇ ಇಲ್ಲ: ʼಮನ್​ ಕಿ ಬಾತ್​ʼನಲ್ಲಿ ಮೋದಿ ಬಣ್ಣನೆ

Continue Reading

ವಾಣಿಜ್ಯ

Unified Pension Scheme: ಏಕೀಕೃತ ಪಿಂಚಣಿ ಯೋಜನೆ; ನೌಕರರಿಗೆ ಸಿಗುವ ಟಾಪ್‌ 9 ಪ್ರಯೋಜನಗಳಿವು

ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಏಕೀಕೃತ ಪಿಂಚಣಿ ಯೋಜನೆಯನ್ನು (Unified Pension Scheme) ಅರ್ಥೈಸಿಕೊಳ್ಳಲು ನೆರವಾಗುವ ಕೆಲವು ಪ್ರಮುಖ ಅಂಶಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಹಂಚಿಕೊಂಡಿದ್ದಾರೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

VISTARANEWS.COM


on

By

Unified Pension Scheme
Koo

ನಿವೃತ್ತಿಯ ಬಳಿಕ ಸರ್ಕಾರಿ ನೌಕರರಿಗೆ (central government employees) ಆರ್ಥಿಕ ಭದ್ರತೆ ಮತ್ತು ಸ್ಥಿರತೆಯನ್ನು ಒದಗಿಸುವ ಉದ್ದೇಶದಿಂದ 23 ಲಕ್ಷ ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ʼಏಕೀಕೃತ ಪಿಂಚಣಿ ಯೋಜನೆʼಗೆ (Unified Pension Scheme) ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಯುಪಿಎಸ್‌ ವೈಶಿಷ್ಟ್ಯಗಳೇನು?

1. ಖಚಿತ ಪಿಂಚಣಿ

ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಉದ್ಯೋಗಿಗಳು ನಿವೃತ್ತಿಯ ಹಿಂದಿನ 12 ತಿಂಗಳುಗಳಲ್ಲಿ ಪಡೆದ ಸರಾಸರಿ ಮೂಲ ವೇತನದ ಶೇ. 50ರಷ್ಟು ಖಚಿತವಾದ ಪಿಂಚಣಿಯನ್ನು ಪಡೆಯುತ್ತಾರೆ. 25 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರ ಪಿಂಚಣಿಯು ಅವರ ಅವಧಿಗೆ ಅನುಗುಣವಾಗಿರುತ್ತದೆ. ಕನಿಷ್ಠ ಅರ್ಹತಾ ಸೇವಾ ಅವಧಿಯನ್ನು 10 ವರ್ಷಗಳಿಗೆ ನಿಗದಿಪಡಿಸಲಾಗಿದೆ.

2. ಖಚಿತವಾದ ಕುಟುಂಬ ಪಿಂಚಣಿ

ಅಪಘಾತದಿಂದ ನೌಕರ ಮರಣ ಹೊಂದಿದರೆ ಅವರ ಸಂಗಾತಿಯು ಅಥವಾ ಅವಲಂಬಿತರು ಕುಟುಂಬ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಮರಣದ ಮೊದಲು ಉದ್ಯೋಗಿ ಪಡೆಯುತ್ತಿದ್ದ ಪಿಂಚಣಿಯ ಶೇ. 60ರಷ್ಟು ಅವರ ಸಂಗಾತಿಗೆ ಕುಟುಂಬ ಪಿಂಚಣಿಯಾಗಿ ದೊರೆಯುತ್ತದೆ.

3. ಖಚಿತವಾದ ಕನಿಷ್ಠ ಪಿಂಚಣಿ

ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನೌಕರರಿಗೆ ನಿವೃತ್ತಿಯ ಅನಂತರ ತಿಂಗಳಿಗೆ 10,000 ರೂ. ಕನಿಷ್ಠ ಪಿಂಚಣಿಯ ಖಾತರಿ ಇದೆ.

4. ಹಣದುಬ್ಬರ ಸೂಚ್ಯಂಕ

ಖಚಿತ ಮತ್ತು ಕುಟುಂಬ ಪಿಂಚಣಿ ಎರಡೂ ಹಣದುಬ್ಬರ ಸೂಚ್ಯಂಕಕ್ಕೆ ಒಳಪಟ್ಟಿರುತ್ತವೆ. ಈ ಹೊಂದಾಣಿಕೆಯು ಪಿಂಚಣಿಗಳು ಹಣದುಬ್ಬರಕ್ಕೆ ಅನುಗುಣವಾಗಿರುವುದನ್ನು ಖಚಿತಪಡಿಸುತ್ತದೆ.

5. ದರ ಏರಿಕೆ ಪರಿಹಾರ

ಸೇವೆಯಲ್ಲಿರುವ ಉದ್ಯೋಗಿಗಳಂತೆಯೇ ಯುಪಿಎಸ್ ಅಡಿಯಲ್ಲಿ ನಿವೃತ್ತರಾದ ಕೈಗಾರಿಕಾ ಕಾರ್ಮಿಕರಿಗೆ (AICPI-IW) ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ದರ ಏರಿಕೆ ಪರಿಹಾರವನ್ನು ಪಡೆಯುತ್ತಾರೆ.


6. ನಿವೃತ್ತಿಯ ಮೇಲೆ ಒಟ್ಟು ಮೊತ್ತ

ಗ್ರಾಚ್ಯುಟಿ ಜೊತೆಗೆ ಉದ್ಯೋಗಿಗಳು ನಿವೃತ್ತಿಯ ಸಮಯದಲ್ಲಿ ಒಂದು ದೊಡ್ಡ ಮೊತ್ತದ ಪಾವತಿಯನ್ನು ಸ್ವೀಕರಿಸುತ್ತಾರೆ. ಈ ಪಾವತಿಯು ವೇತನ ಮತ್ತು ತುಟ್ಟಿ ಭತ್ಯೆ ಸೇರಿ ನಿವೃತ್ತಿಯ ದಿನಾಂಕ ಪೂರ್ಣಗೊಂಡ ಪ್ರತಿ ಆರು ತಿಂಗಳ ಸೇವೆಗೆ ಉದ್ಯೋಗಿಯ ಮಾಸಿಕ ವೇತನದ 1/10 ಭಾಗವಾಗಿರುತ್ತದೆ. ಈ ಒಟ್ಟು ಮೊತ್ತದ ಪಾವತಿಯು ಖಚಿತವಾದ ಪಿಂಚಣಿಯ ಪ್ರಮಾಣವನ್ನು ಕಡಿಮೆ ಮಾಡುವುದಿಲ್ಲ.

7. ಸರ್ಕಾರದ ಕೊಡುಗೆ

ಈ ಪಿಂಚಣಿ ಯೋಜನೆಯಡಿ ಸರ್ಕಾರವು ತನ್ನ ಕೊಡುಗೆಯನ್ನು ಶೇ. 14ರಿಂದ ಶೇ.18.5ಕ್ಕೆ ಹೆಚ್ಚಿಸುತ್ತಿದೆ. ಆದರೆ ನೌಕರರ ಕೈಯಿಂದ ಈಗಿರುವ ಪ್ರಮಾಣದಷ್ಟೇ ಹಣ ಈ ಯೋಜನೆಗೆ ಸಂದಾಯವಾಗುತ್ತದೆ. ಹಾಗಾಗಿ ಇದರಿಂದ ನೌಕರರಿಗೆ ಹೆಚ್ಚು ಪ್ರಯೋಜನ ಸಿಗುವಂತಾಗುತ್ತದೆ.


8. ನಿವೃತ್ತಿ ಹೊಂದಿದವರಿಗೂ ಅನ್ವಯ

ಏಕೀಕೃತ ಪಿಂಚಣಿ ಯೋಜನೆಯ ನಿಬಂಧನೆಗಳು ರಾಷ್ಟ್ರೀಯ ಪಿಂಚಣಿ ಯೋಜನೆ ಹೊಂದಿರುವ ಹಿಂದಿನ ನಿವೃತ್ತರಿಗೆ ಅಂದರೆ ಈಗಾಗಲೇ ನಿವೃತ್ತಿ ಹೊಂದಿದವರಿಗೂ ಅನ್ವಯಿಸುತ್ತದೆ. ಹಿಂದಿನ ಅವಧಿಯ ಬಾಕಿಯನ್ನು ಪಿಪಿಎಫ್ ದರಗಳಲ್ಲಿ ಬಡ್ಡಿಯೊಂದಿಗೆ ಪಾವತಿಸಲಾಗುತ್ತದೆ.

ಇದನ್ನೂ ಓದಿ: Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

9. ಏಕೀಕೃತ ಪಿಂಚಣಿ ಯೋಜನೆಗೆ ಸೇರುವ ಆಯ್ಕೆ

ಅಸ್ತಿತ್ವದಲ್ಲಿರುವ ಎನ್‌ಪಿಎಸ್, ವಿಆರ್‌ಎಸ್ ಜೊತೆಗೆ ಎನ್‌ಪಿಎಸ್ ಜೊತೆಗೆ ಭವಿಷ್ಯದ ಉದ್ಯೋಗಿಗಳು ಯುಪಿಎಸ್‌ಗೆ ಸೇರುವ ಆಯ್ಕೆಯನ್ನು ಹೊಂದಿರುತ್ತಾರೆ. ಈ ಆಯ್ಕೆಯನ್ನು ಒಮ್ಮೆ ಮಾಡಿಕೊಂಡರೆ ಅದೇ ಅಂತಿಮವಾಗಿರುತ್ತದೆ. ಕೇಂದ್ರ ಸರ್ಕಾರದಿಂದ ಯುಪಿಎಸ್ ಅನ್ನು ಜಾರಿಗೊಳಿಸಲಾಗುತ್ತಿದೆ. ಇದನ್ನು ರಾಜ್ಯ ಸರ್ಕಾರಗಳೂ ಅಳವಡಿಸಿಕೊಳ್ಳಬಹುದಾಗಿದೆ. ಆದರೆ ಕೇಂದ್ರದಂತೆ ರಾಜ್ಯ ಸರ್ಕಾರವೂ ಹೆಚ್ಚುವರಿ ಮೊತ್ತ ಪಾವತಿಸಬೇಕಾಗುತ್ತದೆ.

Continue Reading
Advertisement
Delhi News
ಪ್ರಮುಖ ಸುದ್ದಿ10 mins ago

Delhi News : ಆಟಿಕೆಯೆಂದು ಭಾವಿಸಿ ಅಪ್ಪನ ಪಿಸ್ತೂಲ್‌ ಶಾಲೆಗೆ ತೆಗೆದುಕೊಂಡು ಹೋದ 10 ವರ್ಷದ ಬಾಲಕ

Basavaraj Bommai
ಕರ್ನಾಟಕ20 mins ago

Basavaraj Bommai: ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ: ಬೊಮ್ಮಾಯಿ ಕಿಡಿ

ಕ್ರೀಡೆ21 mins ago

Fatima Sana: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಾಕ್​; 22 ವರ್ಷದ ಫಾತಿಮಾ ನಾಯಕಿ

Self Harming
ಬೆಂಗಳೂರು24 mins ago

Self Harming: ನೇಣಿಗೆ ಶರಣಾದ ಕ್ಯಾಬ್‌ ಚಾಲಕ; ಮಗನ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದ ತಾಯಿ

Shocking Video
ವೈರಲ್ ನ್ಯೂಸ್40 mins ago

Shocking Video : ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಪೊಲೀಸ್‌ ವಶಕ್ಕೆ

Jindal Steels
ಕರ್ನಾಟಕ51 mins ago

Jindal Steels: ಬಿಜೆಪಿ ಸರ್ಕಾರವೇ ಜಿಂದಾಲ್ ಕಂಪನಿಗೆ ಭೂಮಿ ನೀಡಲು ತೀರ್ಮಾನಿಸಿತ್ತು: ಎಂ.ಬಿ. ಪಾಟೀಲ್

Virat Kohli
ಕ್ರೀಡೆ1 hour ago

Virat Kohli: ಧವನ್‌ ವಿದಾಯದ ಕುರಿತು ವಿರಾಟ್​ ಕೊಹ್ಲಿ ಭಾವನಾತ್ಮಕ ಸಂದೇಶ

ಕರ್ನಾಟಕ1 hour ago

KAS Prelims exam: ಕೆಎಎಸ್‌ ಪರೀಕ್ಷೆ ಮುಂದೂಡಲು ಕೆಲವರಿಂದ ಲಾಬಿ; ಆದರೆ ಮುಂದೂಡುವುದಿಲ್ಲ ಎಂದ ಸರ್ಕಾರ

Nissan Magnite EZ
ಆಟೋಮೊಬೈಲ್1 hour ago

Nissan Magnite : ನಿಸ್ಸಾನ್‌ ಮ್ಯಾಗ್ನೈಟ್‌ ಇಜಡ್‌- ಶಿಫ್ಟ್‌ ಕಾರು ಹೇಗಿದೆ?; ಪವರ್‌, ಫೀಚರ್‌ಗಳು ಹೇಗಿವೆ? ಇಲ್ಲಿದೆ ವಿವರ

Narendra Modi
ದೇಶ1 hour ago

Narendra Modi: ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಸಾಧ್ಯವೇ ಇಲ್ಲದ ಪಾಪ; ಪ್ರಧಾನಿ ಮೋದಿ ಗುಡುಗು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ1 day ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌