POCSO case: 7 ವರ್ಷದ ಬಾಲಕಿ ಮೇಲೆ ಎರಗಿದ ವೃದ್ಧ; 24ರ ಯುವಕನಿಂದ 15 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ - Vistara News

ಹುಬ್ಬಳ್ಳಿ

POCSO case: 7 ವರ್ಷದ ಬಾಲಕಿ ಮೇಲೆ ಎರಗಿದ ವೃದ್ಧ; 24ರ ಯುವಕನಿಂದ 15 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ

POCSO case: ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ವೃದ್ಧನೊಬ್ಬ ಬಾಲಕಿ ಮೇಲೆ ಎರಗಿದ್ದರೆ, ಮತ್ತೊಂದು ಕಡೆ ಯುವಕನೊಬ್ಬ ಬಾಲಕನೇ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಎರಡು ಕಡೆ ಪೋಕ್ಸೋ ಕೇಸ್‌ ದಾಖಲಾಗಿದೆ.

VISTARANEWS.COM


on

POCSO Case
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ‌ ದೌರ್ಜನ್ಯ (POCSO case) ನಡೆದಿದೆ. ಹುಬ್ಬಳ್ಳಿಯ ಮಾಧವ್ ನಗರದಲ್ಲಿ ಘಟನೆ ನಡೆದಿದೆ. 55 ವರ್ಷದ ನೂರ್ ಅಹಮದ್ ಎಂಬಾತನಿಂದ ಈ ದುಷ್ಕೃತ್ಯ ನಡೆದಿದೆ. ಬಾಲಕಿಯನ್ನು ಆಟವಾಡಿಸುವ ನೆಪದಲ್ಲಿ ಕರೆದೊಯ್ದ ನೂರ್‌ ಅಹಮದ್‌ ಕ್ರೌರ್ಯ ಮೆರೆದಿದ್ದಾನೆ. ಅಶೋಕ ನಗರ ಪೊಲೀಸ್ ಠಾಣಾಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಾಮುಕ ನೂರ್‌ಅಹ್ಮದ್‌ನನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಬಾಲಕನ ಮೇಲೆ ಅತ್ಯಾಚಾರ

ಹುಬ್ಬಳ್ಳಿಯಲ್ಲಿ 15 ವರ್ಷದ ಬಾಲಕನ ಮೇಲೆಯೇ ಅತ್ಯಾಚಾರ ನಡೆದಿದೆ. 24 ವರ್ಷದ ಯುವಕ ಮಾಸುಮ್ ಹುಲಮನಿ ಎಂಬಾತನಿಂದ ಕೃತ್ಯ ನಡೆದಿದೆ. ಪೇಂಟಿಂಗ್ ಕೆಲಸ ಮಾಡುತ್ತಿದ್ದ ಮಾಸುಮ್ ಹುಲಮನಿ, ಮೊಬೈಲ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಬಾಲಕನ ಮೇಲೆ ಅತ್ಯಾಚಾರವೆಸಗಿದ್ದಾನೆ. ಪೊಲೀಸರು ಮಾಸುಮ್ ಹಲುಮನಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: POCSO case: ಮೂಡುಬಿದಿರೆ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ತಂದೆಯ ಬಂಧನ

ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

ಚಿಕ್ಕೋಡಿ: ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ (Physical Abuse) ಯತ್ನಿಸಿದ ಕಾಮುಕನನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಯಬಾಗ ಪಟ್ಟಣದ ಕೈರಕೋಡಿ ನಿವಾಸಿ ಸುನೀಲ್ ದೀಪಾಳೆ ಎಂಬಾತನಿಂದ ಕೃತ್ಯ ನಡೆದಿದೆ.

ಸುನೀಲ್ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಪಟ್ಟಣದ ಕಂಚರವಾಡಿ ರೋಡ್ ಕಡೆಯಿಂದ ತೆರಳುತ್ತಿದ್ದಳು. ಈ ವೇಳೆ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಮೇಲೆ ಕೂರಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶದ ಕಡೆಗೆ ಕರೆದ್ಯೊಯಲು ಯತ್ನಿಸಿದ್ದಾನೆ. ಇದರಿಂದ ಗಾಬರಿಗೊಂಡ ಬಾಲಕಿ ಗಾಡಿ ನಿಲ್ಲಿಸಲು ಹೇಳಿದ್ದಾಳೆ. ಆದರೆ ನಿಲ್ಲಸದೇ ಇದ್ದಾಗ ಬಾಲಕಿ ಕಿರುಚಾಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ಸ್ಥಳಕ್ಕೆ ಸ್ಥಳೀಯರು ದೌಡಾಯಿಸಿದ್ದಾರೆ.

ಕೂಡಲೇ ಸುನೀಲ್‌ನನ್ನು ಹಿಡಿದುಕೊಂಡ ಸ್ಥಳೀಯರು ಅತ್ಯಾಚಾರಕ್ಕೆ ಯತ್ನಿಸಿದ್ದು ತಿಳಿಯುತ್ತಿದ್ದಂತೆ ಧರ್ಮದೇಟು ನೀಡಿ ರಾಯಬಾಗ ಪೊಲೀಸ್‌ರಿಗೆ ಒಪ್ಪಿಸಿದ್ದಾರೆ. ಆರೋಪಿಗೆ ರಾಯಬಾಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

Karnataka Weather Forecast : ಗುರುವಾರ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ (Rain News) ಜನರು ಪರದಾಡಿದರು. ಉಡುಪಿ ಜಿಲ್ಲೆಯ ಮೀನುಗಾರರಿಗೂ ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ಉಡುಪಿ: ಪೂರ್ವ ಅರಬ್ಬೀ ಸಮುದ್ರದಲ್ಲಿ ಟ್ರಫ್ ಎದ್ದಿದ್ದು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ.ಇದರ ಪ್ರಭಾವದಿಂದಾಗಿ ಗುರುವಾರ ರಾಜ್ಯದ ಹಲವೆಡೆ ಮಳೆ (Rain News) ಅಬ್ಬರಿಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಮಳೆಯು ಗುರುವಾರ (Karnataka Weather Forecast) ಗರ್ಜಿಸಿತ್ತು.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೋಡ ಕವಿದು ಗುಡುಗು ಸಹಿತ ಭರ್ಜರಿ ಮಳೆಯಾಗಿತ್ತು. ದಿಢೀರ್‌ ಮಳೆಗೆ ಕೋರಮಂಗಲ, ಆಡುಗೋಡಿ, ಮಡಿವಾಳ, ಬನ್ನೇರುಘಟ್ಟ, ಮೆಜೆಸ್ಟಿಕ್‌, ಶಿವಾಜಿನಗರ, ವಿಧಾನಸೌಧ ಸೇರಿದಂತೆ ಹಲವೆಡೆ ಮಳೆಯಾಗಿದೆ.

ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡಿ, ಬಸ್ ನಿಲ್ದಾಣವನ್ನು ಆಶ್ರಯ ಪಡೆದರು. ಕೆಲವೆಡೆ ರಸ್ತೆ ಮೇಲೆ ನೀರು ನಿಂತ ಕಾರಣ ಸವಾರರು ಸಂಕಷ್ಟ ಎದುರಿಸಿದರು. ಫ್ರೀಡಂ ಪಾರ್ಕ್‌ನಿಂದ ಆನಂದ್‌ ರಾವ್ ಸರ್ಕಲ್‌ಗೆ ಸಂಪರ್ಕಿಸುವ ರಸ್ತೆಯಲ್ಲಿ ನೀರು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಲೋಕಾಯುಕ್ತ ಕಚೇರಿಯ ಮುಂಭಾಗ ಸಂಪೂರ್ಣ ಕೆರೆಯಂತಾಗಿತ್ತು. ಮಳೆ ನೀರಲ್ಲಿ ರಸ್ತೆ ದಾಟಲು ಜನರು ಪರದಾಡಿದರು.

ಇನ್ನು ಬೆಂಗಳೂರಿನಲ್ಲಿ ಭಾರಿ ಮಳೆಗೆ ಚಿಕ್ಕಪೇಟೆಯಲ್ಲಿರುವ ಸುಲ್ತಾನ್ ಪೇಟೆ ಜಲಾವೃತಗೊಂಡಿತ್ತು. ಜವಳಿ ಅಂಗಡಿಗಳ ಪ್ರಮುಖ ಕೇಂದ್ರವಾಗಿರುವ ಸುಲ್ತಾನ್ ಪೇಟೆಯ ಬಹುತೇಕ ಗಲ್ಲಿಗಳಿಗೆ, ಅಂಗಡಿಗಳಿಗೂ ಮೋರಿ ನೀರು ನುಗ್ಗಿತ್ತು. ನೀರು ತೆರವು ಮಾಡಲು ಅಂಗಡಿ ಸಿಬ್ಬಂದಿ ಪರದಾಡಿದರು.

ಇದನ್ನೂ ಓದಿ: CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

ಮುಂದಿನ ಐದು ದಿನಗಳಿಗೆ ಮಳೆ ಅಲರ್ಟ್

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಎರಡೂ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆಗಸ್ಟ್ 29 ರಿಂದ ಆಗಸ್ಟ್ 31ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಆಗಸ್ಟ್ 29 ರಿಂದ 30ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ ಆಗಸ್ಟ್ 29ರಿಂದ ಸೆಪ್ಟೆಂಬರ್1ರ ವರೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಆಳಸಮುದ್ರ ಮೀನುಗಾರಿಕೆಗೆ ತೆರಳಿದವರಿಗೆ ಕಟ್ಟೆಚ್ಚರ

ಕರಾವಳಿಯ ಉಡುಪಿಗೆ ಆರೆಂಜ್ ಹಾಗೂ ರೆಡ್ ಅಲರ್ಟ್ ನೀಡಲಾಗಿದೆ. ಗಾಳಿ ಜತೆಗೆ ಮಳೆಯಾಗಲಿದ್ದು, ಕಡಲಿಗಿಳಿಯುವ ಮೀನುಗಾರರಿಗೆ ಎಚ್ಚರಿಕೆ ಸಂದೇಶ ನೀಡಿದೆ. ಆಳಸಮುದ್ರ ಮೀನುಗಾರಿಕೆಗೆ ತೆರಳಿದವರಿಗೆ ಕಟ್ಟೆಚ್ಚರ ನೀಡಿದೆ. ಹವಾಮಾನ ಇಲಾಖೆ ಮನ್ಸೂಚನೆ ಮೇರೆಗೆ ಕೆಲ ಬೋಟ್‌ಗಳು ವಾಪಸ್ ಆಗಿವೆ. ಐಎಂಡಿ ಆಗಸ್ಟ್ 30 ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಆಗಸ್ಟ್ 31 ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

Road Accident : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್‌ ಸವಾರನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸವಾರನ ತಲೆಯೇ ನಜ್ಜುಗುಜ್ಜಾಗಿದೆ.

VISTARANEWS.COM


on

By

Road Accident
Koo

ಬೆಂಗಳೂರು: ಸೈಕಲ್ ಸವಾರನಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ದಾರುಣವಾಗಿ (Road Accident) ಮೃತಪಟ್ಟಿದ್ದಾರೆ. ಬೆಂಗಳೂರಿನ ಚಾಲುಕ್ಯ ಸರ್ಕಲ್‌ನಲ್ಲಿ ದುರ್ಘಟನೆ ನಡೆದಿದೆ. ಮೃತ ಸೈಕಲ್ ಸವಾರ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಈ ಅಪಘಾತ ಸಂಭವಿಸಿದೆ.

ಮೃತ ಸೈಕಲ್ ಸವಾರ ರಾಜಸ್ಥಾನ ಮೂಲದವನು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹೈಗ್ರೌಂಡ್ ಸಂಚಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಯಲ್ಲಿ ಸವಾರನ ತಲೆಯೇ ನಜ್ಜುಗುಜ್ಜಾಗಿತ್ತು. ಕೂಡಲೇ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಘಟನೆ ಸಂಬಂದ ಹೈಗ್ರೌಂಡ್ ಸಂಚಾರಿ ಪೊಲೀಸರು ಲಾರಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಮೃತನ ಗುರುತು ಪತ್ತೆಗಾಗಿ ತನಿಖೆಯನ್ನು ಕೈಕೊಂಡಿದ್ದಾರೆ.

ಚಲಿಸುತ್ತಿದ್ದಾಗಲೇ ತುಂಡಾಗಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಚಕ್ರ

ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ನ ಮುಂಬದಿ ಚಕ್ರವೊಂದು ರಸ್ತೆ ಮಧ್ಯೆ ತುಂಡಾಗಿದೆ. ಕೂದಲೆಳೆ ಅಂತರದಲ್ಲಿ ಬಸ್ಸ್‌ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಸಮೀಪ ಅನಾಹುತವೊಂದು ತಪ್ಪಿದೆ. ಬಾಚಹಳ್ಳಿ ಮಾರ್ಗವಾಗಿ ಗುಂಡ್ಲುಪೇಟೆಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗುಂಡ್ಲುಪೇಟೆ ಘಟಕದ ಅಧಿಕಾರಿಗಳು ಬಸ್‌ಗಳ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದ್ದಾರೆ. ಕೋಡಹಳ್ಳಿ ಸಮೀಪ ತುಂಡಾಗಿ ಬಿದ್ದ ಬಸ್ಸಿನ ಮುಂಭಾಗದ ಚಕ್ರ ಕಂಡು ಚಲಾಯಿಸಲು ಯೋಗ್ಯವಲ್ಲದ ಬಸ್ಸುಗಳನ್ನು ಗ್ರಾಮಾಂತರ ಪ್ರದೇಶಕ್ಕೆ ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತಕ್ಕೆ ಅಪ್ಪ-ಅಮ್ಮನೊಟ್ಟಿಗೆ ಮಗನೂ ಸಾವು

ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನ ದಂಡುಪಾಳ್ಯ ಗೇಟ್ ಬಳಿ ಕಾರು ಮತ್ತು ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.ದಂಪತಿಯಾದ ಶ್ರೀನಿವಾಸಲು (50), ಪುಷ್ಪ (45), ಪುತ್ರ ಶ್ರೀಕಾಂತ (30) ಮೃತ ದುರ್ದೈವಿಗಳು. ಈ ಕುಟುಂಬಸ್ಥರು ಕಾರಿನಲ್ಲಿ ಮದುವೆಗೆಂದು ಬೆಂಗಳೂರಿನಿಂದ ಆಂಧ್ರದ ನೆಲ್ಲೂರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಇತ್ತ ಟಿಟಿ ವಾಹನದಲ್ಲಿದ್ದ ಹನ್ನೆರಡು ಮಂದಿ ಎಲೆಕ್ಟ್ರಾನಿಕ್ ಸಿಟಿಯಿಂದ ಬೋಯಕೊಂಡ ಕ್ಷೇತ್ರಕ್ಕೆ ಹೋಗಿಬರುತಿದ್ದಾಗ ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿದ್ದ ಹನ್ನೆರಡು ಜನರಗೆ ಗಂಭೀರ ಗಾಯಗಳಾಗಿದ್ದು, ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಟಾ ಏಸ್‌ ವಾಹನಕ್ಕೆ ಲಾರಿ ಡಿಕ್ಕಿ; ಮಹಿಳೆ ಸಾವು

ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟರೆ, ಐವರ ಸ್ಥಿತಿ ಗಂಭೀರವಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿಯ ತಡಸ ಕ್ರಾಸ್ ಬಳಿ ಘಟನೆ ನಡೆದಿದೆ. ಮಹಿಳೆಯರು ಗಾರ್ಮೆಂಟ್ಸ್‌ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿಯೊಂದು ಟಾಟಾ ಏಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟರೆ, ಉಳಿದವರ ಸ್ಥಿತಿಯೂ ಗಂಭೀರವಾಗಿದೆ. ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

karnataka Weather Forecast : ಇಂದು ರಾಜಧಾನಿ ಬೆಂಗಳೂರಿನಲ್ಲಿ ಘಳಿಗೆಗೊಂದು ವಾತಾವರಣ ಇರಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ಕರಾವಳಿ ಸುತ್ತಮುತ್ತ ಗುಡುಗು ಸಹಿತ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಮಲೆನಾಡಿನಲ್ಲಿ ಸಾಧಾರಣ ಮಳೆಯಾದರೆ (Rain News) ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕೋಲಾರ-ಬೆಳಗಾವಿಯಲ್ಲಿ ಮಳೆ ಅಬ್ಬರ

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಾದ ಧಾರವಾಡ, ಬಾಗಲಕೋಟೆ, ಬೀದರ್‌, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಬಿಸಿಲಿನ ಜತೆಗೆ ಮೋಡ ಕವಿದ ವಾತಾವರಣ ಇರಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

Karnataka Weather Forecast : ಉತ್ತರಕನ್ನಡದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಘಟ್ಟಪ್ರದೇಶದಲ್ಲಿ ಮಳೆ ಅಬ್ಬರಕ್ಕೆ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಬಂದ್ ಆಗಿದೆ. ದಾವಣಗೆರೆಯಲ್ಲಿ ತುಂಗಾ ನಾಲೆ ಒಡೆದು ಸಾವಿರಾರು ಎಕರೆ ಬೆಳೆ ನಾಶವಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರಾವಳಿಯ ಉತ್ತರಕನ್ನಡದಲ್ಲಿ ನಿರಂತರ ಮಳೆಯಿಂದಾಗಿ (Karnataka Weather Forecast) ಮನೆ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು (Rain News) ಗಂಭೀರಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಹೊನ್ನಿಕೊಪ್ಪದಲ್ಲಿ ಘಟನೆ ನಡೆದಿದೆ. ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆ ಇದಾಗಿದೆ. ಪಕ್ಕದ ಮನೆಯ ಸಾತವ್ವ ಭೀಮಣ್ಣ(50) ಎಂಬುವವರಿಗೆ ಗಾಯವಾಗಿದೆ. ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ‌ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕಂದಾಯ ಹಾಗೂ ಪೊಲೀಸ್‌ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಬಂದ್

ಚಿಕ್ಕೋಡಿ: ಮಹಾರಾಷ್ಟ್ರ ಹಾಗೂ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿದ್ದ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಬಂದ್ ಆಗಿದೆ. ಎರಡನೇ ಬಾರಿಗೆ ಕುಡಚಿ ಉಗಾರಖುರ್ದ್ ಮಧ್ಯದ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಸೇತುವೆ ಇದಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಸಂಪರ್ಕ ಕೊಂಡಿಯಾಗಿರೋ ಸೇತುವೆಯಲ್ಲಿ ನಿತ್ಯ ನೂರಾರು ಬಸ್ ಹಾಗೂ ವಾಹನಗಳು ಓಡಾಡುವ ಪ್ರಮುಖ ರಾಜ್ಯ ಹೆದ್ದಾರಿ ಇದಾಗಿದೆ. ಬಾಗಲಕೋಟೆ, ಜಮಖಂಡಿಯಿಂದ ಮಹಾರಾಷ್ಟ್ರಕ್ಕೆ ಸಂಪರ್ಕಿಸಲಿದೆ. ಕುಡಚಿ ಠಾಣಾ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಸೇತುವೆಗೆ ಬ್ಯಾರಿಕೇಡ್‌ ಅಳವಡಿಸಿದ್ದಾರೆ.

ಯಲ್ಲಮ್ಮ ದೇವಸ್ಥಾನ ಜಲಾವೃತ

ಮಹಾರಾಷ್ಟ್ರದ ಪುಣೆಯಲ್ಲಿ ಭಾರಿ ‌ಮಳೆಯಿಂದಾಗಿ ಮಹಾರಾಷ್ಟ್ರದ ಮೀರ್ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ. ಕಲಬುರಗಿಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದ ಯಲ್ಲಮ್ಮ ದೇವಸ್ಥಾನ ಜಲಾವೃತಗೊಂಡಿದೆ. ಸೊನ್ನ ಬ್ಯಾರೆಜ್‌ನಿಂದ ಭೀಮಾನದಿಗೆ 1 ಲಕ್ಷ 20 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ.

ಇತ್ತ ಮಹಾರಾಷ್ಟ್ರದ ಮಹಾಮಳೆಗೆ ಭೀಮಾನದಿಗೆ ನೀರಿನ ಒಳಹರಿವು ಹೆಚ್ಚಳಗೊಂಡಿದೆ. ಭೀಮಾ ನದಿ ಒಡಲು ಅಪಾಯದ ಮಟ್ಟ ಮೀರಿ ಉಕ್ಕಿಹರಿಯುತ್ತಿದೆ. ಭೀಮಾನದಿಗೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್‌ನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಭೀಮಾ ನದಿ ತೀರದ ದೇಗುಲಗಳು ಜಲಾವೃತಗೊಂಡಿದೆ. ವಿರಾಂಜನೇಯ ಹಾಗೂ ಕಂಗಳೇಶ್ವರ ಎರಡು ದೇವಾಲಯಗಳು ಮುಳುಗಡೆಯಾಗಿದೆ. ಇತ್ತ ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದರೂ ಜಿಲ್ಲಾಡಳಿತದ ಆದೇಶಕ್ಕೆ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಬ್ಯಾರೇಜ್ ಮುಂಭಾಗದ ಭೀಮಾ ನದಿ ತೀರದಲ್ಲಿಯೇ ಮೀನು ಹಿಡಿಯುವ ಹುಚ್ಚು ಸಾಹಸ ಮಾಡುತ್ತಿದ್ದಾರೆ.

ದಾವಣಗೆರೆಯಲ್ಲಿ ತುಂಗಾ ನಾಲೆ ಒಡೆದು ಸಾವಿರಾರು ಎಕರೆ ಬೆಳೆ ನಾಶ

ದಾವಣಗೆರೆಯಲ್ಲಿ ತುಂಗಾ ನಾಲೆ ಒಡೆದು ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಬೆಳೆ ನೀರು ಪಾಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಕಳೆದುಕೊಂಡ ರೈತರು ಆತಂಕದಲ್ಲಿದ್ದಾರೆ. ನ್ಯಾಮತಿ ತಾಲೂಕಿನ ಬಸವನಹಳ್ಳಿಯಲ್ಲಿನ ತುಂಗಾ ಕಾಲುವೆ ಒಡೆದ ಪರಿಣಾಮ ಬೆಳೆಗಳು ಜಲಾವೃತಗೊಂಡಿದೆ. ತುಂಗಾ ಮೇಲ್ದಂಡೆ ನಾಲೆ ಒಡೆದು ಸಾವಿರಾರು ಎಕರೆ ಜಮೀನು ಜಲಾವೃತ ಪರಿಣಾಮ ರೈತರಲ್ಲಿ ಆತಂಕ ಹೆಚ್ಚಿದೆ. ಮಣ್ಣು ಸಮೇತ ಜಮೀನುಗಳಿಗೆ ಕಾಲುವೆ ನೀರು ನುಗ್ಗಿ, ಅಡಿಕೆ, ತೆಂಗು, ಭತ್ತ, ಹತ್ತಿ ಸೇರಿದಂತೆ ಅನೇಕ ತರಕಾರಿ ಬೆಳೆ ಕಳೆದುಕೊಂಡಿದ್ದಾರೆ.

ಕರಾವಳಿಗೆ ಭಾರಿ ಮಳೆ ಎಚ್ಚರಿಕೆ

ಆಗಸ್ಟ್‌ 29ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಬೆಳಗಾವಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಸಂಭವಿಸುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ಬರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kannada New Movie
ಸಿನಿಮಾ27 seconds ago

Kannada New Movie: ‘ಸರ್ವೇ ನಂಬರ್ 45’ ಚಿತ್ರೀಕರಣಕ್ಕೆ ಚಾಲನೆ

Spectrum Dress Fashion
ಫ್ಯಾಷನ್5 mins ago

Spectrum Dress Fashion: ಮಳೆಗಾಲದ ಫ್ಯಾಷನ್‌ಗೆ ಕಾಲಿಟ್ಟಿವೆ ಗ್ಲಾಮರಸ್‌ ಸಿಕ್ವೀನ್ಸ್ ರೆಟ್ರೊ ಸ್ಪೆಕ್ಟ್ರಮ್‌ ಡ್ರೆಸ್

Bomb Threat
ಕ್ರೈಂ23 mins ago

Bomb Threat: ನಗರದಲ್ಲಿ ಮತ್ತೆ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

Actor Darshan
ಬೆಂಗಳೂರು44 mins ago

Actor Darshan: ನಟ ದರ್ಶನ್ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಬೆಂಗಾವಲು ಪಡೆಗೆ ನೋಟಿಸ್!

Karwar Jail
ಕ್ರೈಂ52 mins ago

Karwar Jail: ನಟ ದರ್ಶನ್‌ಗೆ ಐಷಾರಾಮಿ ಸವಲತ್ತು! ಕಾರವಾರ ಜೈಲಿನಲ್ಲಿ ತಂಬಾಕಿಗೆ ಬೇಡಿಕೆ ಇಟ್ಟ ಖೈದಿಗಳಿಂದ ಗಲಾಟೆ

Shalini Rajaneesh
ಫ್ಯಾಷನ್57 mins ago

Shalini Rajaneesh: ಸೀರೆ, ಹಣೆಗೆ ಅಗಲವಾದ ರೆಡ್ ಬಿಂದಿ ಎಂದಿಗೂ ಬದಲಾಗದ ನನ್ನ ಯೂನಿಕ್ ಫ್ಯಾಷನ್ ಸ್ಟೇಟ್ಮೆಂಟ್!

karnataka Weather Forecast
ಮಳೆ1 hour ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

Namratha Gowda
ಕಿರುತೆರೆ1 hour ago

Namratha Gowda: ಕಪ್ಪು ಸೀರೆಯುಟ್ಟು ನೋಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ನಮ್ರತಾ ಗೌಡ

DK Shivakumar
ರಾಜಕೀಯ2 hours ago

DK Shivakumar: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ; ಸಿಬಿಐ, ಯತ್ನಾಳ್ ಅರ್ಜಿ ವಜಾ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

Viral News
ವೈರಲ್ ನ್ಯೂಸ್2 hours ago

Viral News: ಯುಪಿ ಸರ್ಕಾರದ ಆಫರ್‌; ಇದು ಕಾನೂನುಬದ್ಧ ಲಂಚ ಎಂದು ಪರ-ವಿರೋಧದ ಜಗಳಕ್ಕಿಳಿದ ಯೂಟ್ಯೂಬರ್ಸ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್9 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌