Shikhar Dhawan : ನಿವೃತ್ತಿ ಘೋಷಣೆಯ ಮರುದಿನವೇ ಕ್ರಿಕೆಟ್ ಅಂಗಣಕ್ಕೆ ಮರಳುವ ನಿರ್ಧಾರ ಪ್ರಕಟಿಸಿದ ಶಿಖರ್‌ ಧವನ್‌ - Vistara News

ಪ್ರಮುಖ ಸುದ್ದಿ

Shikhar Dhawan : ನಿವೃತ್ತಿ ಘೋಷಣೆಯ ಮರುದಿನವೇ ಕ್ರಿಕೆಟ್ ಅಂಗಣಕ್ಕೆ ಮರಳುವ ನಿರ್ಧಾರ ಪ್ರಕಟಿಸಿದ ಶಿಖರ್‌ ಧವನ್‌

Shikhar Dhawan : ನಿವೃತ್ತಿಯ ಬಳಿಕ ನಿರಾಳವಾಗಿದ್ದೇನೆ. ಆದರೆ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ತಮ್ಮ ಕ್ರಿಕೆಟ್ ಸ್ನೇಹಿತರೊಂದಿಗೆ ಆಡಲು ಎದುರು ನೋಡುತ್ತಿದ್ದೇನೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ. ನನ್ನ ದೇಹವು ಆಟದ ಬೇಡಿಕೆಗಳಿಗೆ ಇನ್ನೂ ಪೂರಕವಾಗಿದೆ. ಕ್ರಿಕೆಟ್ ಮತ್ತು ನಾನು ಬೇರ್ಪಡಿಸಲಾಗದ ಬಂಧವನ್ನು ಹೊಂದಿದ್ದೇನೆ. ಅದು ಎಂದಿಗೂ ನನ್ನಿಂದ ಹೊರಹೋಗುವುದಿಲ್ಲ ಎಂದು ಧವನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

VISTARANEWS.COM


on

Shikhar Dhawan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತದ ಮಾಜಿ ಆರಂಭಿಕ ಬ್ಯಾಟರ್‌‌ ಶಿಖರ್ ಧವನ್ (Shikhar Dhawan) ಅಂತರರಾಷ್ಟ್ರೀಯ ಕ್ರಿಕೆಟ್‌‌ನಿಂದ ನಿವೃತ್ತಿ ಘೋಷಿಸಿದ ಮರು ದಿನವೇ ಲೆಜೆಂಡ್ಸ್ ಲೀಗ್ ಕ್ರಿಕೆಟ್ (ಎಲ್ಎಲ್‌‌ಸಿ) ಗೆ ಸೇರುವ ನಿರ್ಧಾರ ಪ್ರಕಟಿಸಿದ್ದಾರೆ. ತಮ್ಮ ಕೆಲವು ಮಾಜಿ ಸಹ ಆಟಗಾರರಂತೆಯೇ ಅವರು ನಿವೃತ್ತಿಯ ಬಳಿಕ ಲೀಗ್ ಲೀಗ್ ಕ್ರಿಕೆಟ್‌‌ನಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾದ ನಂತರ ಹಿರಿಯ ವೃತ್ತಿಪರರು ಆಡುವ ಟಿ 20 ಪಂದ್ಯಾವಳಿ ಲೆಜೆಂಡ್ಸ್‌ ಕ್ರಿಕೆಟ್‌ ಲೀಗ್‌. 38 ವರ್ಷದ ಮಾಜಿ ಆರಂಭಿಕ ಆಟಗಾರ ಧವನ್ ಅಂತಾರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್‌ನಿಂದ ನಿವೃತ್ತರಾದ ಎರಡು ದಿನಗಳ ಅವರು ಈ ಪ್ರಕಟಣೆ ಹೊರಡಿಸಿದ್ದಾರೆ.

ನಿವೃತ್ತಿಯ ಬಳಿಕ ನಿರಾಳವಾಗಿದ್ದೇನೆ. ಆದರೆ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ತಮ್ಮ ಕ್ರಿಕೆಟ್ ಸ್ನೇಹಿತರೊಂದಿಗೆ ಆಡಲು ಎದುರು ನೋಡುತ್ತಿದ್ದೇನೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ. ನನ್ನ ದೇಹವು ಆಟದ ಬೇಡಿಕೆಗಳಿಗೆ ಇನ್ನೂ ಪೂರಕವಾಗಿದೆ. ಕ್ರಿಕೆಟ್ ಮತ್ತು ನಾನು ಬೇರ್ಪಡಿಸಲಾಗದ ಬಂಧವನ್ನು ಹೊಂದಿದ್ದೇನೆ. ಅದು ಎಂದಿಗೂ ನನ್ನಿಂದ ಹೊರಹೋಗುವುದಿಲ್ಲ ಎಂದು ಧವನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನನ್ನ ಕ್ರಿಕೆಟ್ ಸ್ನೇಹಿತರೊಂದಿಗೆ ಮರು ಸಂಘಟನೆಯಾಗುವೆ. ನಾವು ಒಟ್ಟಿಗೆ ಹೊಸ ನೆನಪುಗಳನ್ನು ಸೃಷ್ಟಿಸುವೆ. ನನ್ನ ಅಭಿಮಾನಿಗಳನ್ನು ರಂಜಿಸುವುದನ್ನು ಮುಂದುವರಿಸಲು ನಾನು ಉತ್ಸುಕನಾಗಿದ್ದೇನೆ, “ಎಂದು ಧವನ್‌ ಹೇಳಿದರು.

ಶಿಖರ್ ಧವನ್ ಶನಿವಾರ ಅಂತಾರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟಿಗನಾಗಿ ತಮ್ಮ ವೃತ್ತಿಜೀವನಕ್ಕೆ ತೆರೆ ಎಳೆಯುತ್ತಿದ್ದಾರೆ ಎಂದು ದೃಢಪಡಿಸಿದರು. ಭಾರತದ ಮಾಜಿ ಆರಂಭಿಕ ಆಟಗಾರ ದೇಶವನ್ನು ಅತ್ಯುನ್ನತ ಮಟ್ಟದಲ್ಲಿ ಪ್ರತಿನಿಧಿಸುವ ಮೂಲಕ ತಮ್ಮ ಕನಸನ್ನು ಬದುಕಿದ್ದಾರೆ ಎಂದು ಹೇಳಿದರು. ಧವನ್ ಭಾರತ ಪರ 34 ಟೆಸ್ಟ್, 167 ಏಕದಿನ ಮತ್ತು 69 ಟಿ 20 ಪಂದ್ಯಗಳನ್ನು ಆಡಿದ್ದಾರೆ. ಅವರು ಆಧುನಿಕ ದಿನದ ಅತ್ಯುತ್ತಮ ಆರಂಭಿಕ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ವಿಶೇಷವಾಗಿ ಆಟದ 50 ಓವರ್‌ಗಳ ಸ್ವರೂಪದಲ್ಲಿ ಅವರು ಹೆಚ್ಚು ಪ್ರಭಾವಿಯಾಗಿದ್ದಾರೆ.

ಇದನ್ನೂ ಓದಿ: Narendra Modi : ಪಾಕಿಸ್ತಾನದ ವಾಯಮಾರ್ಗ ಬಳಸಿ ಪೋಲೆಂಡ್‌ನಿಂದ ಭಾರತಕ್ಕೆ ಮರಳಿದ್ದ ಪ್ರಧಾನಿ ಮೋದಿ

2021 ರಲ್ಲಿ ಸ್ಥಾಪನೆಯಾದ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟಿ 20 ಪಂದ್ಯಾವಳಿಯಲ್ಲಿ ಕ್ರಿಸ್ ಗೇಲ್, ಗೌತಮ್ ಗಂಭೀರ್ ಮತ್ತು ಶೇನ್ ವ್ಯಾಟ್ಸನ್ ಸೇರಿದಂತೆ ಹಲವಾರು ಸೂಪರ್ಸ್ಟಾರ್ ಕ್ರಿಕೆಟಿಗರು ಕಾಣಿಸಿಕೊಂಡಿದ್ದಾರೆ. 2023 ರ ಆವೃತ್ತಿಯು ಭಾರತದ ಐದು ಸ್ಥಳಗಳಲ್ಲಿ ನಡೆದರೆ, ಮುಂಬರುವ ಋತುವಿನಲ್ಲಿ ಕತಾರ್ ಕೂಡ ಒಂದು ಸ್ಥಳವಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

DK Shivakumar: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ; ಸಿಬಿಐ, ಯತ್ನಾಳ್ ಅರ್ಜಿ ವಜಾ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

DK Shivakumar
Koo

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಹಿಂದಿನ ಬಿಜೆಪಿ ಸರ್ಕಾರದಿಂದ ಅನುಮತಿ ನೀಡಲಾಗಿತ್ತು. ಆದರೆ ಹಾಲಿ ಕಾಂಗ್ರೆಸ್ ಸರ್ಕಾರವು ಇದನ್ನು ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಸಿಬಿಐ ರಿಟ್‌ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

ಗುರುವಾರ (ಆ.29) ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಪೀಠವು ಎರಡು ಕಡೆಯ ವಕೀಲರಿಂದ ವಾದ-ಪ್ರತಿವಾದ ಆಲಿಸಲಾಗಿದೆ. ಪಿಸಿ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿಲಾಗಿತ್ತು. ಇದು ಸರ್ಕಾರ ಮತ್ತು ಸಿಬಿಐ ನಡುವಿನ ವಿವಾದವಾಗಿದೆ. ಹೀಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಸುವುದು ಸೂಕ್ತ. ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ವಿವಾದ ಸುಪ್ರೀಂ ಕೋರ್ಟ್ ತೀರ್ಮಾನಿಸಬೇಕು. ಹೈಕೋರ್ಟ್ ತೀರ್ಮಾನಿಸುವುದು ಸೂಕ್ತವಲ್ಲವೆಂದು ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್, ಉಮೇಶ್ ಎಂ.ಅಡಿಗ ಅವರ ಪೀಠ ತೀರ್ಪು ನೀಡಿದೆ. ಇದರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್‌ ಸಿಕ್ಕಿದೆ.

ಇನ್ನು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಾವು ಶ್ರಮ ಪಟ್ಟು ರಾಜಕಾರಣ ಮಾಡುತ್ತಿದ್ದೇವೆ. ಬಿಜೆಪಿ ನಾಯಕರ ಮೇಲೆ ಸಾವಿರಾರು ಕೇಸ್ ಇವೆ. ಯಾವುದನ್ನು ಕೂಡ ತನಿಖೆ ಮಾಡುತ್ತಿಲ್ಲ. ಲೋಕಾಯುಕ್ತ ಕೋರ್ಟ್‌ನಲ್ಲೂ ಕೂಡ ಇವೆ. ಈ ಹಿಂದೆ ಕೇಸ್ ಹಾಕಿ ನನ್ನ ಜೈಲಿಗೆ ಕಳುಹಿಸಿದ್ದರು. ನಾನು ಏನು ತಪ್ಪು ಮಾಡಿಲ್ಲ ನ್ಯಾಯ ಸಿಗುತ್ತೆ ಎಂದು ಅವತ್ತೆ ಹೇಳಿದ್ದೆ, ಇವತ್ತು ಹೇಳುತ್ತೇನೆ. ಸಿಬಿಐಗೆ ಕೊಟ್ಟಿದ್ದು ಸರಿಯಲ್ಲ, ಸಿಬಿಐ ಅರ್ಧ ತನಿಖೆ ಮಾಡಿದ್ದೇವೆ ಎಂದು ಹೇಳಿದರು. ಆದರೆ ಯಾವುದೇ ತನಿಖೆ ಮಾಡಿರಲಿಲ್ಲ. ನಾವು ನ್ಯಾಯುತವಾಗಿ ಆಸ್ತಿ ಮಾಡಿದ್ದೇವೆ. ಯಾರಿಗೂ ತೊಂದರೆ ಕೊಟ್ಟಿಲ್ಲ ಎಂದರು.

Continue Reading

ಬೆಂಗಳೂರು

Finance Commission Meeting: 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಒಟ್ಟು ರೂ.79770 ಕೋಟಿ ನಷ್ಟ: ಸಿದ್ದರಾಮಯ್ಯ

16ನೇ ಹಣಕಾಸು ಆಯೋಗದ ಸಭೆಯಲ್ಲಿ (Finance Commission Meeting) ಆಯೋಗದ ಅಧ್ಯಕ್ಷ ಅರವಿಂದ್ ಪನಗರಿಯಾ ಮತ್ತು ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನೀಡುವ ಪಾಲು 4.713 ಯಿಂದ 3.647 ಗೆ ತಗ್ಗಿದೆ. ಇದರಿಂದಾಗಿ 2021-26 ರ ಐದು ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ರೂ.68,275 ಕೋಟಿ ನಷ್ಟ ಉಂಟಾಗಿದೆ. ಕರ್ನಾಟಕಕ್ಕೆ ದೊರೆತ ಪಾಲಿನಲ್ಲಿ ಉಂಟಾದ ಇಷ್ಟು ದೊಡ್ಡ ಮೊತ್ತದ ಕಡಿತದ ಬಗ್ಗೆ ಹಣಕಾಸು ಆಯೋಗಕ್ಕೆ ಅರಿವಿದ್ದು, ರಾಜ್ಯಕ್ಕೆ ರೂ.11495 ಕೋಟಿ ನಿರ್ದಿಷ್ಟ ಅನುದಾನ ಒದಗಿಸಲು ಶಿಫಾರಸ್ಸು ಮಾಡಿದೆ. ಆದರೆ ಕೇಂದ್ರ ಸರ್ಕಾರ ಆಯೋಗದ ಈ ಶಿಫಾರಸ್ಸನ್ನು ಒಪ್ಪಿಕೊಂಡಿಲ್ಲ. ಆದ್ದರಿಂದ ಕರ್ನಾಟಕ ಈ ಅನುದಾನ ಪಡೆಯುವಲ್ಲಿಯೂ ವಂಚಿತವಾಗಿದೆ. ಈ ಎಲ್ಲಾ ಕಾರಣಗಳಿಂದ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಒಟ್ಟು ರೂ.79770ಕೋಟಿ ನಷ್ಟ ಉಂಟಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Finance Commission Meeting
Koo

ಬೆಂಗಳೂರು: 15ನೇ ಹಣಕಾಸು ಆಯೋಗದ ಅವಧಿಯಲ್ಲಿ (Finance Commission Meeting) ಕರ್ನಾಟಕಕ್ಕೆ ಒಟ್ಟು ರೂ.79770 ಕೋಟಿ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಗುರುವಾರ 16ನೇ ಹಣಕಾಸು ಆಯೋಗದ ಸಭೆಯಲ್ಲಿ, ಆಯೋಗದ ಅಧ್ಯಕ್ಷ ಅರವಿಂದ್ ಪನಗರಿಯಾ ಮತ್ತು ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನೀಡುವ ಪಾಲು 4.713 ಯಿಂದ 3.647 ಗೆ ತಗ್ಗಿದೆ. ಇದರಿಂದಾಗಿ 2021-26 ರ ಐದು ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ರೂ.68,275 ಕೋಟಿ ನಷ್ಟ ಉಂಟಾಗಿದೆ. ಕರ್ನಾಟಕಕ್ಕೆ ದೊರೆತ ಪಾಲಿನಲ್ಲಿ ಉಂಟಾದ ಇಷ್ಟು ದೊಡ್ಡ ಮೊತ್ತದ ಕಡಿತದ ಬಗ್ಗೆ ಹಣಕಾಸು ಆಯೋಗಕ್ಕೆ ಅರಿವಿದ್ದು, ರಾಜ್ಯಕ್ಕೆ ರೂ.11495 ಕೋಟಿ ನಿರ್ದಿಷ್ಟ ಅನುದಾನ ಒದಗಿಸಲು ಶಿಫಾರಸ್ಸು ಮಾಡಿದೆ. ಆದರೆ ಕೇಂದ್ರ ಸರ್ಕಾರ ಆಯೋಗದ ಈ ಶಿಫಾರಸ್ಸನ್ನು ಒಪ್ಪಿಕೊಂಡಿಲ್ಲ. ಆದ್ದರಿಂದ ಕರ್ನಾಟಕ ಈ ಅನುದಾನ ಪಡೆಯುವಲ್ಲಿಯೂ ವಂಚಿತವಾಗಿದೆ. ಈ ಎಲ್ಲಾ ಕಾರಣಗಳಿಂದ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಒಟ್ಟು ರೂ.79770ಕೋಟಿ ನಷ್ಟ ಉಂಟಾಗಿದೆ ಎಂದು ತಿಳಿಸಿದರು.

ಇಂದಿನ ಸಭೆಯಲ್ಲಿ ನಡೆಯುವ ಚರ್ಚೆಗಳಿಂದ ನಾವು ಎದುರಿಸುತ್ತಿರುವ ಹಲವು ಸವಾಲುಗಳಿಗೆ ಉತ್ತರ ಕಂಡು ಕೊಳ್ಳಲು ಹಾಗೂ ದೇಶದ ಪೂರ್ಣ ಸಾಮರ್ಥ್ಯವನ್ನು ಅರಿಯಲು ಸಾಧ್ಯವಾಗಲಿದೆ ಎಂಬ ವಿಶ್ವಾಸ ನನಗಿದೆ. ಪ್ರಧಾನಿಯವರು ತಿಳಿಸಿರುವ ʻಸಹಕಾರಿ ಒಕ್ಕೂಟʼ ವನ್ನು ಉತ್ತೇಜಿಸಲು ನಮ್ಮ ದೇಶದ ಸಂವಿಧಾನದಲ್ಲಿ ಉಲ್ಲೇಖಿಸಿರುವ ಹಣಕಾಸು ಒಕ್ಕೂಟ ಮೂಲವಾಗಿದೆ. ಕೇಂದ್ರ ಹಾಗೂ ರಾಜ್ಯಗಳ ನಡುವೆ ಹಾಗೂ ರಾಜ್ಯ ಮತ್ತು ರಾಜ್ಯಗಳ ನಡುವೆ ತೆರಿಗೆ ಹಂಚಿಕೆ ವಿಷಯದಲ್ಲಿ ಶಿಫಾರಸ್ಸುಗಳನ್ನು ಮಾಡಲು ಹಣಕಾಸು ಆಯೋಗದ ನೇಮಕಾತಿಯನ್ನು ಆರ್ಟಿಕಲ್‌ 280 ಕಡ್ಡಾಯಗೊಳಿಸಿದೆ. ಆಯೋಗ ಈ ವಿಷಯದಲ್ಲಿ ತಜ್ಞ, ಸ್ವತಂತ್ರ ಹಾಗೂ ನಿಷ್ಪಕ್ಷಪಾತ ಸಂಸ್ಥೆಯಾಗಿದೆ. ಆಯೋಗ ನ್ಯಾಯಸಮ್ಮತ ಮತ್ತು ದಕ್ಷ ನಿಲುವುಗಳನ್ನು ಅನುಸರಿಸಿ ಎಲ್ಲಾ ರೀತಿಯ ಅಸಮತೋಲನಗಳ ನಿವಾರಣೆ ಕುರಿತು ಕ್ರಮ ಕೈಗೊಳ್ಳುವ ವಿಶ್ವಾಸ ನಮಗಿದೆ ಎಂದು ಸಿಎಂ ಹೇಳಿದರು.

ಇದನ್ನೂ ಓದಿ: Kannada New Movie: ಪೃಥ್ವಿ ಅಂಬಾರ್, ಪ್ರಮೋದ್ ಅಭಿನಯದ ‘ಭುವನಂ ಗಗನಂ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್‌

ರಾಜ್ಯಗಳ ನಡುವೆ ತೆರಿಗೆ ಮರು ಹಂಚಿಕೆಗೆ ನಮ್ಮ ಸಂವಿಧಾನ ಅವಕಾಶ ನೀಡಿದೆ. ಆದರೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ರಾಜ್ಯಗಳಿಗೆ ನೀಡುವ ಪ್ರೋತ್ಸಾಹಗಳ ಪರಿಣಾಮಗಳನ್ನು ಆಯೋಗ ಸೂಕ್ಷ್ಮವಾಗಿ ಅವಲೋಕಿಸುವ ಅಗತ್ಯವಿದೆ. ಎಲ್ಲಕ್ಕಿಂತ ಹೆಚ್ಚಾಗಿ ಅಂತಹ ರಾಜ್ಯಗಳ ತೆರಿಗೆದಾರರು, ತಮ್ಮ ತೆರಿಗೆಯ ಹಣ ಅವರ ಹಿತಕ್ಕಾಗಿ ಬಳಸುವುದನ್ನು ನಿರೀಕ್ಷಿಸುತ್ತಾರೆ. ಅಂತಹ ಕ್ರಮಗಳು ಸಾರ್ವಜನಿಕರಲ್ಲಿ ವಿಶ್ವಾಸ ಭಾವನೆ ಮೂಡಿಸುತ್ತದೆ. ಆದ್ದರಿಂದ ಆಯೋಗ ನ್ಯಾಯಪರತೆ, ದಕ್ಷತೆ ಮತ್ತು ನಿರ್ವಹಣೆಯ ನಡುವೆ ಅತ್ಯಂತ ಸೂಕ್ಷ್ಮವಾದ ಸಮತೋಲನ ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭಾರತದ ಅಭಿವೃದ್ಧಿ ಕಥನದಲ್ಲಿ ಕರ್ನಾಟಕ ಪ್ರಧಾನ ಪಾತ್ರ ವಹಿಸುತ್ತಿದೆ. ಒಟ್ಟು ಜನಸಂಖ್ಯೆಯ ಶೇ.5 ರಷ್ಟಿದ್ದರೂ, ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಅಂದಾಜು ಶೇ.8.4 ರಷ್ಟು ಪಾಲು ನೀಡುತ್ತಿದೆ. ಇಡೀ ದೇಶದಲ್ಲೇ ಜಿಡಿಪಿ ದೇಣಿಗೆಯಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಪ್ರತಿ ವರ್ಷ ದೇಶದ ಒಟ್ಟು ತೆರಿಗೆ ಆದಾಯಕ್ಕೆ ಕರ್ನಾಟಕ ಸುಮಾರು ರೂ.4 ಲಕ್ಷ ಕೋಟಿಯಷ್ಟು ಪಾಲು ನೀಡುತ್ತಿದ್ದರೂ, ರಾಜ್ಯಕ್ಕೆ ತೆರಿಗೆ ಪಾಲಿನ ರೂಪದಲ್ಲಿ ರೂ.45 ಸಾವಿರ ಕೋಟಿ ಹಾಗೂ ಅನುದಾನದ ರೂಪದಲ್ಲಿ ರೂ.15 ಸಾವಿರ ಕೋಟಿ ದೊರಕುತ್ತಿದೆ. ಅಂದರೆ ಕರ್ನಾಟಕ ನೀಡುವ ಪ್ರತಿ ಒಂದು ರೂಪಾಯಿಗೆ ರಾಜ್ಯ ಕೇವಲ 15 ಪೈಸೆಯನ್ನು ಮಾತ್ರ ಹಿಂದಕ್ಕೆ ಪಡೆಯುತ್ತಿದೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

15ನೇ ಹಣಕಾಸು ಆಯೋಗದ ಅವಧಿಯಲ್ಲಿ ಇತರ ರಾಜ್ಯಗಳಿಗೆ ಪ್ರತಿ ವರ್ಷ ರೂ.35 ಸಾವಿರದಿಂದ 40 ಸಾವಿರ ಕೋಟಿಯಷ್ಟು ಇತರ ರಾಜ್ಯಗಳಿಗೆ ಆದಾಯ ವರ್ಗಾವಣೆ ಮಾಡಿರುವುದನ್ನು ಕರ್ನಾಟಕ ಗಮನಿಸಿದೆ. ಇದು ಜಿಎಸ್‌ಡಿಪಿಯ ಶೇ.1.8ರಷ್ಟಿದೆ. ರಾಜ್ಯದಿಂದ ಹೊರಗೆ ವರ್ಗಾವಣೆಯಾಗುತ್ತಿರುವ ಈ ಮೊತ್ತ ರಾಜ್ಯದ ಒಟ್ಟು ಆದಾಯದ ಶೇ.50ರಿಂದ 55 ರಷ್ಟಾಗಿದೆ. ಈ ರೀತಿ ಪಾಲಿನ ಪರಿಗಣನೆಯಲ್ಲಿನ ಅಸಮತೋಲನದಿಂದಾಗಿ ಆರ್ಥಿಕವಾಗಿ ಹಾಗೂ ಜನಸಂಖ್ಯೆ ನಿಯಂತ್ರಣ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಕರ್ನಾಟಕ ಹಾಗೂ ಈ ರೀತಿಯ ರಾಜ್ಯಗಳು ದಂಡ ಎದುರಿಸುವಂತಾಗಿದೆ ಎಂದು ತಿಳಿಸಿದರು.

ಸೆಸ್‌ ಮತ್ತು ಸರ್ಚಾರ್ಜ್‌ ಕೇಂದ್ರ ಮತ್ತು ರಾಜ್ಯಗಳ ನಡುವೆ ಹಂಚಿಕೊಳ್ಳುವ ಬಾಬ್ತಿನಲ್ಲಿ ಬರುವುದಿಲ್ಲ. ವರ್ಷದಿಂದ ವರ್ಷಕ್ಕೆ ಕೇಂದ್ರ ಸರ್ಕಾರ ಸೆಸ್‌ ಮತ್ತು ಸರ್ಚಾರ್ಜ್‌ ಮೇಲಿನ ಅವಲಂಬನೆಯನ್ನು ನಿರಂತರವಾಗಿ ಹೆಚ್ಚಿಸುತ್ತಾ ಬಂದಿದೆ. ಇದರಿಂದಾಗಿ ಒಟ್ಟು ತೆರಿಗೆ ಆದಾಯಕ್ಕೆ ಅನುಗುಣವಾಗಿ ಕೇಂದ್ರ ಹಾಗೂ ರಾಜ್ಯಗಳ ನಡುವೆ ಹಂಚಿಕೊಳ್ಳಬಹುದಾದ ಬಾಬ್ತಿನ ಪ್ರಮಾಣ ಹೆಚ್ಚಾಗುತ್ತಿಲ್ಲ. ಇದರಿಂದಾಗಿ ರಾಜ್ಯಗಳಿಗೆ ಬಹಳಷ್ಟು ನಷ್ಟ ಉಂಟಾಗುತ್ತಿದೆ. ಹಂಚಿಕೊಳ್ಳಬಹುದಾದ ಬಾಬ್ತಿನಲ್ಲಿ ಸೆಸ್‌ ಮತ್ತು ಸರ್ಚಾರ್ಜ್ ನಿಂದಾಗಿ ರಾಜ್ಯಕ್ಕೆ 2017-18 ರಿಂದ 2024-25 ನೇ ಅವಧಿಯಲ್ಲಿ ರೂ.53,359ಕೋಟಿ ನಷ್ಟ ಉಂಟಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Ranjani Raghavan: ಹಸೆಮಣೆ ಏರಲು ಸಜ್ಜಾದ ನಟಿ ರಂಜನಿ ರಾಘವನ್; ಇವ್ರೇ ನೋಡಿ ಅವ್ರ ಹುಡುಗ

ಮುಂದಿನ ಐದು ವರ್ಷಗಳ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಗೆ ರೂ.55586 ಕೋಟಿ ರೂ. ಬಂಡವಾಳ ಅಗತ್ಯವಿದೆ. ಇದರಲ್ಲಿ ನಾವು ಕೇಂದ್ರದಿಂದ ನಾವು ರೂ.27793 ಕೋಟಿ ಅನುದಾನ ಒದಗಿಸಲು ಮನವಿ ಮಾಡುತ್ತೇವೆ. ಇದೇ ರೀತಿ ಕಲ್ಯಾಣ ಕರ್ನಾಟಕದ ಅಸಮತೋಲನ ನಿವಾರಣೆ ಮಾಡಲು ರಾಜ್ಯ ರೂ. 25 ಸಾವಿರ ಕೋಟಿ ಹೂಡಿಕೆ ಮಾಡುತ್ತಿದ್ದು, ಇದಕ್ಕೆ ಮುಂದಿನ ಐದು ವರ್ಷಗಳ ಅವಧಿಯಲ್ಲಿ 16ನೇ ಹಣಕಾಸು ಆಯೋಗ ರೂ.25 ಸಾವಿರ ಕೋಟಿ ಹೊಂದಾಣಿಕೆ ಅನುದಾನ ಒದಗಿಸಬೇಕು. ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಪಶ್ಚಿಮ ಘಟ್ಟ ವಲಯದಲ್ಲಿ ಪರಿಣಾಮಕಾರಿಯಾಗಿ ವಿಪತ್ತು ನಿರ್ವಹಣೆ ಮತ್ತು ಪರಿಹಾರ ಮತ್ತು ಪುನರ್‌ ವಸತಿಯನ್ನು ಖಾತ್ರಿಪಡಿಸಲು ರೂ. 10 ಸಾವಿರ ಕೋಟಿ ಅನುದಾನ ಒದಗಿಸಲು ಮನವಿ ಮಾಡುತ್ತೇವೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಮಾಡಿದ ಶಿಫಾರಸುಗಳು

ವಿತ್ತೀಯ ಹಂಚಿಕೆ ವಿಷಯದಲ್ಲಿ ಆಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಶಿಫಾರಸ್ಸುಗಳು.

ಹಂಚಿಕೆ ಮಾಡುವ ಬಾಬ್ತಿನಲ್ಲಿ ಕನಿಷ್ಠ ಶೇ 50ರಷ್ಟು ಪಾಲನ್ನು ಸಂಬಂಧಿಸಿದ ರಾಜ್ಯಗಳಿಗೆ ನಿಗದಿಪಡಿಸಬೇಕು. ಸೆಸ್‌ ಮತ್ತು ಸರ್ಚಾರ್ಜ್‌ ಒಟ್ಟು ತೆರಿಗೆ ಆದಾಯದ ಶೇ 5ಕ್ಕೆ ಮಿತಿಗೊಳಿಸಬೇಕು. ಇದಕ್ಕಿಂತ ಹೆಚ್ಚಾಗುವ ಯಾವುದೇ ಮೊತ್ತವನ್ನು ಹಂಚಿಕೊಳ್ಳುವ ಬಾಬ್ತಿಗೆ ಪರಿಗಣಿಸಬೇಕು. ಕೇಂದ್ರ ಸರ್ಕಾರದ ತೆರಿಗೇತರ ಆದಾಯವನ್ನು ಹಂಚಿಕೊಳ್ಳುವ ತೆರಿಗೆ ಬಾಬ್ತಿನ ವ್ಯಾಪ್ತಿಗೆ ತರುವ ಕುರಿತು ಸಂವಿಧಾನಕ್ಕೆ ಅಗತ್ಯ ತಿದ್ದುಪಡಿ ತರಬೇಕು.

ಪಾಲಿನ ಹಂಚಿಕೆ ಸಂದರ್ಭದಲ್ಲಿ ದಕ್ಷತೆ ಮತ್ತು ನಿರ್ವಹಣೆಗೆ ಸೂಕ್ತ ಪುರಸ್ಕಾರ ನೀಡುವ ಬಗ್ಗೆ ಆಯೋಗ ದಿಟ್ಟ ನಿಲುವು ತಳೆಯಬೇಕೆಂದು ನಾವು ಮನವಿ ಮಾಡುತ್ತೇವೆ.

ಇದನ್ನೂ ಓದಿ: Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

ಪಾಲಿನ ಹಂಚಿಕೆ ಸಂದರ್ಭದಲ್ಲಿ ಹಂಚಿಕೊಳ್ಳುವ ಬಾಬ್ತಿನಲ್ಲಿ ರಾಜ್ಯಗಳಿಗೆ ತಮ್ಮ ದೇಣಿಗೆಯ ಶೇ. 60 ರಷ್ಟನ್ನು ನೀಡಬೇಕೆಂದು ಕರ್ನಾಟಕ ಶಿಫಾರಸು ಮಾಡುತ್ತದೆ. ಕೇಂದ್ರ ಮತ್ತು ರಾಜ್ಯಗಳ ನಡುವಣ ಆರ್ಥಿಕ ಸಂಬಂಧ ಅತ್ಯಂತ ಮಹತ್ವವಾಗಿರುವ ಇಂದಿನ ಸಂದರ್ಭದಲ್ಲಿ, 16ನೇ ಹಣಕಾಸು ಆಯೋಗ ಮಾಡುವ ಶಿಫಾರಸ್ಸುಗಳು, ಸುಸ್ಥಿರ ಮತ್ತು ಸಮಗ್ರ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

Continue Reading

ಬೆಂಗಳೂರು

CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

CM Siddaramaiah : ಮುಡಾ ಸಂಕಷ್ಟದಿಂದ (MUDA Scam) ಪಾರಾಗಲು ಸಿಎಂ ಸಿದ್ದರಾಮಯ್ಯ ಘಟಾನುಘಟಿ ವಕೀಲರನ್ನು ಮುಂದಿಟ್ಟುಕೊಂಡು ಕಾನೂನು ಸಮರಕ್ಕೆ ಸಜ್ಜಾಗಿದ್ದಾರೆ. ಗುರುವಾರ ಹೈಕೋರ್ಟ್‌ನಲ್ಲಿ ಹೈ ವೋಲ್ಟೇಜ್‌ ಲೀಗಲ್‌ ಫೈಟ್‌ ಹೇಗಿತ್ತು? ಇಲ್ಲಿದೆ ಸಂಪೂರ್ಣ ಮಾಹಿತಿ..

VISTARANEWS.COM


on

By

Muda scam CM gets temporary relief Hearing adjourned to August 31
Koo

ಬೆಂಗಳೂರು: ಮುಡಾ ಹಗರಣದಲ್ಲಿ (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ (High Court) ಗುರುವಾರ (ಆ.29) ನಡೆದಿದೆ. ಸುದೀರ್ಘ ಎರಡೂವರೆ ಗಂಟೆ ಕಾಲ ಸಿಎಂ ಪರ ವಕೀಲ ವಾದ ಮಂಡಿಸಿದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ವಾದ ಆಲಿಸಿದ ಬಳಿಕ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆಯನ್ನು ಆ.31 ಶನಿವಾರ ಬೆಳಗ್ಗೆ 11:30ಕ್ಕೆ ಮುಂದೂಡಿದರು. ಜತೆಗೆ ಶನಿವಾರದವರೆಗೂ ಕೆಳ ನ್ಯಾಯಾಲಯ ವಿಚಾರಣೆಗೂ ತಡೆನೀಡಿದ್ದರು.

ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ಇನ್ನು ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿಡಿಯೊ ಕಾನ್ಫರೆನ್ಸ್ ಮುಖಾಂತರ ಹಾಜರಾಗಬೇಕಿತ್ತು. ಆದರೆ ಅವರು ಗೈರಾಗಿದ್ದರು.

ಸಿಎಂ ಪರ ಅಭಿಷೇಕ್‌ ಸಿಂಘ್ವಿ ಮಾತಿನ ಚಾಟಿ ಹೇಗಿತ್ತು?

ರಾಜ್ಯಪಾಲರು ಮೊದಲು ದೂರುದಾರನಿಗೆ ದಂಡ ಹಾಕಬೇಕು. ದೂರುದಾರ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವ ಮೊದಲೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೋಗಿದ್ದಾರೆ. ಲೋಕಾಯುಕ್ತ ಪೊಲೀಸರಿಗೂ ದೂರು ಕೊಟ್ಟಿದ್ದಾರೆ. ಸಮಯ ವ್ಯರ್ಥ ಮಾಡಿರುವ ದೂರದಾರನಿಗೆ ಮೊದಲು ದಂಡ ಹಾಕಬೇಕಾಗಿತ್ತು. ನಾನು ಲೋಕಾಯುಕ್ತ ಹಾಗೂ ರಾಜ್ಯಪಾಲರನ್ನು ದೋಷಣೆ ಮಾಡಲ್ಲ. ದೂರು ಕೊಟ್ಟಿದ್ದು ಇವರು, ಪ್ರಾಸಿಕ್ಯೂಷನ್‌ ಅನುಮತಿ ಕೇಳಿದ್ದರು. ಆ ಅರ್ಜಿ ರಾಜ್ಯಪಾಲರ ಬಳಿ ಇರಬೇಕಾದರೆ ಕೆಳ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯಪಾಲರಿಗೆ ದಂಡ ಹಾಕುವ ಅಧಿಕಾರ ಇಲ್ಲ, ಮಾನ್ಯ ನ್ಯಾಯಮೂರ್ತಿಗಳು ದಂಡ ಹಾಕಬೇಕು ಎಂದರು.

ಎರಡು ಕಡೆ ಹೇಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರು ದೂರುದಾರರನ್ನು ಪರಿಶೀಲನೆ ಮಾಡಬೇಕು. ಸೀರಿಯಸ್‌ನೆಸ್‌ ಇಲ್ಲದಿದ್ದರೆ ದಾರಿಹೋಕರು ಕೂಡ ಅರ್ಜಿ ಕೊಡುತ್ತಾರೆ. ಅದಕ್ಕೆ ರಾಜ್ಯಪಾಲರು ಸೀರಿಯಸ್ ಆಗಿ ಇರಬೇಕೆಂದು ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಮಾತಿನ ಚಾಟಿ ಬೀಸಿದರು. ಈ ವೇಳೆ ದೂರುದಾರರ ಪರ ವಕೀಲ ಅಬ್ರಹಾಂ ಮಧ್ಯೆ ಪ್ರವೇಶಿಸಿ ಪ್ರಾಸಿಕ್ಯೂಷನ್‌ಗೆ ಮೊದಲು ಅರ್ಜಿ ಹಾಕಿದ್ದು ಎಂದು ಸಮರ್ಥನೆ ಕೊಟ್ಟರು. ಆಗ ಅಭಿಷೇಕ್‌ ಸಿಂಘ್ವಿ ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್‌ಗೆ (Prosecution) ಅರ್ಜಿ ಸಲ್ಲಿಸಿದ್ದು ಒಬ್ಬರು, ಆದರೆ ಮೂವರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದರು.

ಬಳಿಕ ಅಭಿಷೇಕ್‌ ಸಿಂಘ್ವಿ, ಸಾಯಿಕೃಷ್ಣ ಕನ್ನಡದಲ್ಲಿ ಬರೆದ ದೂರನ್ನು ನನ್ನ ಸ್ನೇಹಿತ ರವಿ ವರ್ಮಕುಮಾರ್ ಓದುತ್ತಾರೆ. ನನಗೆ ಕನ್ನಡ ಓದಲು ಬರುವುದಿಲ್ಲ ಎಂದರು. ಆನಂತರ ಕನ್ನಡದಲ್ಲಿ ಬರೆದ ಅರ್ಜಿಯನ್ನು ರವಿ ಓದಿದರು. ಪ್ರಾಸಿಕ್ಯೂಷನ್‌ ಕೊಡುವಾಗ ರಾಜ್ಯಪಾಲರು ಅರ್ಜಿ ಪರಿಶೀಲನೆ ಮಾಡಿಲ್ಲ. ಅದರ ಮೇಲೆ ಶೋಕಾಸ್ ಮಾಡಿಲ್ಲ, ಇದು ರಾಜ್ಯಪಾಲರಿಗೆ ಅಪ್ಲಿಕೇಷನ್ ಆಫ್ ಮೈಂಡ್ ಇಲ್ಲ ಅನ್ನೋದನ್ನು ತೋರಿಸುತ್ತೆ. 31 ಜುಲೈ ದೂರು ಮಾತ್ರ ನಮ್ಮ ಗಮನಕ್ಕೆ ಬಂತು, ಅದಕ್ಕೂ ಮೊದಲು ಬಂದ ದೂರುಗಳು ಯಾಕೆ ನಮ್ಮ ಗಮನಕ್ಕೆ ಬರಲಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗುತ್ತೆ ಎಂದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌; ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

ಮಧ್ಯೆ ಪ್ರವೇಶಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ 17-A ಅನುಮತಿ ಕೊಡುವಾಗ ಪ್ರೊಸಿಜರ್‌ ಫಾಲೋ ಮಾಡಬೇಕಾ ಎಂದು ಪ್ರಶ್ನಿಸಿದರು. ಆಗ ಪ್ರತ್ಯುತ್ತರ ನೀಡಿದ ಅಭಿಷೇಕ್‌ ಸಿಂಘ್ವಿ ಖಂಡಿತವಾಗಿಬೇಕು. ಇದು ನ್ಯಾಚುರಲ್ ಜೆಸ್ಟಿಸ್ ನಿಯಮವಾಗಿದೆ. ಆರ್ಟಿಕಲ್ 14 ಅಡಿಯಲ್ಲಿ ಅವಕಾಶ ಕೊಡಬೇಕು. ಆಡಳಿತದ ಅತಿ ಉನ್ನತ ಸ್ಥಾನದಲ್ಲಿ ಇರುವವರ ಬಗ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಆಗ ನ್ಯಾಚುರಲ್ ಜೆಸ್ಟಿಸ್ ನಿಯಮ ಪಾಲನೆ ಮಾಡಬೇಕು. ಧರ್ಮಪಾಲ್, ಸತ್ಯಪಾಪ್‌ ಕೇಸ್‌ನಲ್ಲಿ ನೈಸರ್ಗಿಕ ಕಾನೂನು ಪಾಲನೆ ಕಡ್ಡಾಯ ಎಂದು ಹೇಳಿದ್ದಾರೆ. ಮೆನಕಾಗಾಂಧಿ ಕೇಸ್‌ನಲ್ಲೂ ನೈಸರ್ಗಿಕ ಕಾನೂನು ಪಾಲನೆ ಕಡ್ಡಾಯ ಎಂದು ಹೇಳಿದ್ದಾರೆ ಎಂದು ಹಲವು ತೀರ್ಪುಗಳ ನಿದರ್ಶನ ನೀಡಿದರು. ಹೀಗಾಗಿ ಇದನ್ನೂ ನಾವು ಪಾಲನೆ ಮಾಡಬೇಕೆಂದರು.

ಮುಂದುವರಿದು, ಪಿಸಿಆರ್ ಸಲ್ಲಿಕೆ ಬಗ್ಗೆ ಎಲ್ಲೂ ದೂರುದಾರರು ಹೇಳಿಲ್ಲ. ಆಕ್ಷೇಪಣೆ ಪತ್ರದಲ್ಲೂ ಇದನ್ನೂ ಹೇಳಿಲ್ಲ. ಆಗಸ್ಟ್ 8ಕ್ಕೆ ಪಿಸಿಆರ್ ಸಲ್ಲಿಕೆ ಮಾಡಿದ್ದರು, ಜುಲೈ 31ಕ್ಕೆ ಪ್ರಾಸಿಕ್ಯೂಷನ್‌ ಕೇಳಿದ ಬಗ್ಗೆ ಎಲ್ಲೂ ಹೇಳಿಲ್ಲ. ರಾಜ್ಯಪಾಲರು ಯಾವುದೇ ಆಕ್ಷೇಪಣೆ ಸಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಎಚ್ ಡಿ ಕುಮಾರಸ್ವಾಮಿ, ನಿರಾಣಿ ವಿರುದ್ಧ ತನಿಖೆ ಮುಗಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದರೂ ಕೊಡುತ್ತಿಲ್ಲ. ಆದರೆ ಆದರೆ ಇಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ ಎಂದು ಅಭಿಷೇಕ್‌ ಸಿಂಘ್ವಿ ಕೌಂಟರ್‌ ಕೊಟ್ಟರು.

ಈ ಪ್ರಕರಣದಲ್ಲಿ ಒಂದೇ ಒಂದು ಪಾಯಿಂಟ್ ಬಗ್ಗೆ ಸಹ ಕಾನೂನಿನ ಸೂಕ್ಷ್ಮತೆ ಅರಿತಿಲ್ಲ. ಕ್ಯಾಬಿನೆಟ್ ನಿರ್ಣಯ ಪಾಲಿಸಿಲ್ಲ ಎಂದರು. ಈ ವೇಳೆ ನ್ಯಾಯಮೂರ್ತಿ ನಾಗಪ್ರಸನ್ನ, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡುವಾಗ ಪರಮಾಧಿಕಾರ ಇರುತ್ತೆ ಅಲ್ಲವೇ? ಸ್ವಂತ ನಿರ್ಧಾರ ತೆಗೆದುಕೊಳ್ಳಬಹುದಾಲ್ಲವೇ, ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಬಹುದಲ್ಲವೇ ಎಂದರು. ಇದಕ್ಕೆ ಉತ್ತರಿಸಿದ ಅಭಿಷೇಕ್‌ ಸಿಂಘ್ವಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವಾಗ ಮೆರಿಟ್ಸ್, ದಾಖಲೆ ನೋಡಬೇಕು. ಮನ್ಸೂಕ್ ಲಾಲ್ ವಿಠಲ್ ದಾಸ ಕೇಸ್‌ನಲ್ಲಿ ಇದನ್ನೂ ಹೇಳಿದ್ದಾರೆ ಎಂದು ನಿರ್ದಶನ ನೀಡಿದರು. ಸಂವಿಧಾನ ಪೀಠ ಕೊಟ್ಟ ತೀರ್ಪುಗಳನ್ನು ಇದೇ ವೇಳೆ ಉಲ್ಲೇಖ ಮಾಡಿದರು. ರಾಜ್ಯಪಾಲರು ಕೊಟ್ಟ ನಿರ್ಧಾರವನ್ನು ಪುನರ್ ಪರಿಶೀಲನೆ ಮಾಡಬಹುದು ಎಂದರು.

ಅಲ್ಲದೆ, ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಕೇಸ್‌ ಅನ್ನು ಪ್ರಸ್ತಾಪ ಮಾಡಿದರು. ಜನಪ್ರತಿನಿಧಿಗಳಿಂದ ಆಯ್ಕೆ ಆದ ಸರ್ಕಾರದ ನಾಯಕನ ವಿರುದ್ಧ ಪ್ರಾಸಿಕ್ಯೂಷನ್‌ ಕೊಡುವಾಗ ನಿಯಮ ಪಾಲನೆ ಮಾಡಬೇಕು. ಕೊಟ್ಟ ಉತ್ತರವನ್ನು ಟೇಬಲ್ ಕೆಳಗೆ ಹಾಕಿದರೆ ಅದು ನೈಸರ್ಗಿಕ ಕಾನೂನು ಪಾಲನೆ ಆಗಲ್ಲ. ರಾಜ್ಯಪಾಲರ ವಿರುದ್ಧ ಸಹ ಸರ್ಕಾರ ನಿರ್ಣಯ ಮಾಡಬಹುದು. ರಾಜ್ಯಪಾಲರನ್ನು ವಾಪಸ್‌ ಕಳುಹಿಸಬಹುದು. ಆದರೆ ಅದು ನಮ್ಮ ಆಚರಣೆ ಹಾಗೂ ಕಾನೂನಿಗೆ ಮಾರಕವಾಗಲಿದೆ. ಹೀಗಾಗಿ ಸಂಸ್ಥೆಗಳು ಕೆಲಸ ಮಾಡುವಾಗ ಕಾರ್ಯವ್ಯಾಪ್ತಿ ಬಗ್ಗೆ ಸ್ಪಷ್ಟತೆ ಇರಬೇಕು. ಅದರೊಳಗೆ ಕೆಲಸ ಮಾಡಬೇಕು ಎಂದರು. ಪ್ರತಿ ಒಬ್ಬರಿಗೂ ಆರ್ಟಿಕಲ್ 14, 21 ಕೊಡಲೇಬೇಕು. ಅವರ ಮೇಲೆ ಆರೋಪ ಬಂದಾಗ ಅವರ ನಿಲುವು ಹೇಳಲು ಅವಕಾಶ ಕೊಡಬೇಕು. ಎರಡು ಬಾರಿ ಸಿಎಂ ಕಡೆಯಿಂದ ಉತ್ತರ ಬಂದರೂ ಪರಿಗಣಿಸಲಿಲ್ಲ. 218 ಹಾಗೂ 17- A ಕೆಳಗಡೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಲು ಸ್ಪಷ್ಟ ದಾಖಲೆಗಳು ಇರಬೇಕು ಎಂದರು. 55 ಕೋಟಿ ರೂ. ಹಣ ಪಡೆದಿದ್ದಾರೆ ಅಷ್ಟು ನಷ್ಟವಾಗಿದೆ ಎಂದು ಹೇಳಿದ್ದರಲ್ಲ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದಾಗ, ಅದು ಆಸ್ತಿ ಮೌಲ್ಯದ ಬಗ್ಗೆ ಹೇಳಿರಬೇಕು, ದೂರಿನಲ್ಲಿ ಎಲ್ಲೂ 17A ಬಗ್ಗೆ ಹೇಳಿಲ್ಲ ಎಂದು ಸಿಎಂ ಪರ ವಕೀಲ ಸಿಂಗ್ವಿ ಉತ್ತರಿಸಿದರು.

ಬಳಿಕ ಸಿಂಗ್ವಿ ಹಾಗೂ ಮೆಹ್ತಾ ಶನಿವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಿದರು. ಮತ್ತೊಬ್ಬ ಅರ್ಜಿದಾರ ಹೊಸದಾಗಿ ಸೇರ್ಪಡೆ ಆಗಿದ್ದೇನೆ, ಸಿಎಂ ಕೇಸ್‌ನಲ್ಲಿ ನನ್ನನ್ನು ಪರಿಗಣಿಸಿ ಎಂದು ಮನವಿ ಮಾಡಿದರು. ನ್ಯಾಯಮೂರ್ತಿಗಳು ನೀವು ಯಾರು ಎಂದು ಪ್ರಶ್ನಿಸಿದರು. ಆಗ ಕೆಲವರ ಹಕ್ಕಿಗಾಗಿ ಸಮಸ್ಯೆ ಆಗುತ್ತಿದೆ. ಹೀಗಾಗಿ ನಾನು ಸಹ ಅರ್ಜಿದಾರನಾಗಿ ಸೇರ್ಪೆಯಾಗುತ್ತೇನೆ ಎಂದಾಗ ಜಡ್ಜ್‌ ನಿರಾಕರಿಸಿದರು.

ಅರ್ಧ ಗಂಟೆ ಮೊದಲೆ ಬಂದು ಕುಳಿತಿದ್ದ ಕಾಂಗ್ರೆಸ್‌ ನಾಯಕರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಸಂಬಂಧ ವಿಚಾರಣೆ ಹಿನ್ನೆಲೆಯಲ್ಲಿ ಸಲೀಂ ಅಹಮದ್ ಸೇರಿ ಕೆಲ ಕಾಂಗ್ರೆಸ್‌ ನಾಯಕರು ಕೋರ್ಟ್ ಹಾಲ್‌ಗೆ ಅರ್ಧ ಗಂಟೆ ಮೊದಲೆ ಬಂದು ಕುಳಿತಿದ್ದರು. ಅರ್ಜಿದಾರ ಸ್ನೇಹಮಯಿ‌ಕೃಷ್ಣ ಹಾಗೂ ಅರ್ಜಿದಾರರ ಪರವಾಗಿ ಲಕ್ಷ್ಮಿ‌ಅಯ್ಯಂಗಾರ್, ಪ್ರಭುಲಿಂಗ ನಾವದಗಿ, ರಂಗನಾಥ್ ರೆಡ್ಡಿ ಹಾಜರಾಗಿದ್ದರು. ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಕಾನೂನು ಸಲಹೆಗಾರ ಪೊನ್ನಣ್ಣ ಸಹ ಹಾಜರಿದ್ದರು.

ಕೋರ್ಟ್ ಕಲಾಪ ವೀಕ್ಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಕಾವೇರಿ ನಿವಾಸದಿಂದಲೇ ಕೋರ್ಟ್‌ ಕಲಾಪ‌ವನ್ನು ಯೂಟ್ಯೂಬ್ ಮೂಲಕ ಸಿಎಂ ಸಿದ್ದರಾಮಯ್ಯ ವೀಕ್ಷಣೆ ಮಾಡಿದರು. ಸಿಂಘ್ವಿ ವಾದವನ್ನು ಆಲಿಸಿದರು. ಸಿಎಂಗೆ ಸಚಿವ ಜಮೀರ್ ಅಹ್ಮದ್ ಖಾನ್ ಸಾಥ್‌ ನೀಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

DK Shivakumar: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ; ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿ.ಕೆ. ಶಿವಕುಮಾರ್‌

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

DK Shivakumar
Koo

ಸಕಲೇಶಪುರ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಕೇಳಿದಾಗ “ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ” ಎಂದು ತಿಳಿಸಿದರು.

ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ನಂತರ ಸಕಲೇಶಪುರದ ಹೆಬ್ಬನಹಳ್ಳಿ ಬಳಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇದನ್ನೂ ಓದಿ: Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಮೇಲೆ ದೂರು ದಾಖಲಾಗಿರುವ ಬಗ್ಗೆ ಕೇಳಿದಾಗ ” ಸಿಎಂ ಏನು ಮಾಡಿದ್ದಾರೆ ಎಂದು ಅವರ ಮೇಲೆ ಎಲ್ಲಾ ಏಕೆ ಮುಗಿಬೀಳುತ್ತಿದ್ದಾರೋ ನನಗೆ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಆಗುವುದಿಲ್ಲ. ಜಮೀನು ಕಳೆದುಕೊಂಡಿರುವುದಕ್ಕೆ ಪರಿಹಾರವಾಗಿ ಬಿಜೆಪಿಯವರೇ ನಿವೇಶನ ನೀಡಿದ್ದಾರೆ. ಸಿಎಂ ಅವರು ಎಲ್ಲೂ ಪ್ರಭಾವವನ್ನು ಬೀರಿಲ್ಲ, ಸಹಿಯನ್ನು ಮಾಡಿಲ್ಲ ಎಂದರು.

ನಕಲಿಗಲ್ಲ ಅಸಲಿಗೆ ಉತ್ತರ ಕೊಡುತ್ತೇನೆ

ಜಮೀನನ್ನು ಡೀನೋಟಿಫಿಕೇಶನ್ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ” ನಕಲಿಗೆಲ್ಲ ನಾನು ಉತ್ತರ ಕೊಡುವುದಿಲ್ಲ. ಅಸಲಿಗೆ ಮಾತ್ರ ಉತ್ತರ ಕೊಡುತ್ತೇನೆ” ಎಂದು ತಿರುಗೇಟು ನೀಡಿದರು.

75 ಲಕ್ಷ ಜನರಿಗೆ ಎತ್ತಿನಹೊಳೆ ಯೋಜನೆಯಿಂದ ಅನುಕೂಲ

ಬುಧವಾರ ಸಂಜೆ ಎತ್ತಿನಹೊಳೆ ಏತ ನೀರಾವರಿಯ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಾಗಿದೆ. ಈ ಯೋಜನೆಯಿಂದ ತುಮಕೂರು, ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರದ ಸ್ವಲ್ಪ ಭಾಗ ಸೇರಿದಂತೆ ಏಳು ಜಿಲ್ಲೆಗಳ 75 ಲಕ್ಷ ಜನರಿಗೆ ಉಪಯೋಗವಾಗುತ್ತದೆ. ಪ್ರಸ್ತುತ 550 ಕ್ಯೂಸೆಕ್ಸ್ ನೀರನ್ನು ಪಂಪ್ ಮಾಡಲಾಗುತ್ತಿದೆ. ಇದರ ಆರು ಪಟ್ಟು ನೀರನ್ನು ಪಂಪ್ ಮಾಡಲಾಗುವುದು. ಪ್ರಸ್ತುತ ಮೇಲೆತ್ತಿರುವ ನೀರನ್ನು ವಾಣಿವಿಲಾಸ (ಮಾರಿಕಣಿವೆ) ಸಾಗರಕ್ಕೆ ಹರಿಸಲಾಗುತ್ತಿದೆ. ಮಳೆಗಾಲ ಮುಗಿಯುವ ಹೊತ್ತಿಗೆ ಒಂದಷ್ಟು ನೀರನ್ನು ಎತ್ತಬೇಕಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದರು.

ಅಲ್ಲಲ್ಲಿ ಅರಣ್ಯ ಇಲಾಖೆಯ ಭೂಮಿಯ ಸ್ವಾಧೀನ ತೊಂದರೆ ಇದೆ. ಅದನ್ನು ಆದಷ್ಟು ಬೇಗ ಸರಿಪಡಿಸಲಾಗುವುದು. ಈಗಾಗಲೇ ಅನೇಕ ಕಡೆ ಅರಣ್ಯ ಇಲಾಖೆಗೆ ಬದಲಿ ಭೂಮಿ ನೀಡಲಾಗಿದೆ ಎಂದು ಹೇಳಿದರು.

ನಮ್ಮ ಸರ್ಕಾರದ ಮಹತ್ವಕಾಂಕ್ಷಿಯ ಕಾರ್ಯಕ್ರಮ ಇದಾಗಿದ್ದು. ಇದಕ್ಕೆ ಸಂಬಂಧಪಟ್ಟ ಎಲ್ಲಾ ಜಿಲ್ಲೆಯ ಶಾಸಕರನ್ನು, ಜನಪ್ರತಿನಿಧಿಗಳನ್ನು ಕರೆದು ಉದ್ಘಾಟನೆ ಮಾಡಲಾಗುವುದು. ಸಾವಿರಾರು ಜನರು ಬಂದು ವೀಕ್ಷಣೆ ಮಾಡುವಂತೆ ಉದ್ಘಾಟನಾ ಕಾರ್ಯಕ್ರಮ ರೂಪಿಸಲಾಗುವುದು. ಎಲ್ಲರೂ ಒಂದೇ ಕಡೆಗೆ ಬಂದು ಉದ್ಘಾಟನೆ ಮಾಡುವ ಬದಲು ಪ್ರಮುಖವಾದ ಸ್ಥಳಗಳಲ್ಲಿ ಚಾಲನೆ ನೀಡುವಂತೆ ಕಾರ್ಯಕ್ರಮ ಮಾಡಲಾಗುವುದು. ಈ ಕಾರ್ಯಕ್ರಮವನ್ನು ನೇರ ಪ್ರಸಾರದ ಮೂಲಕ ಬಿತ್ತರಗೊಳ್ಳುವಂತೆ ನೋಡಿಕೊಳ್ಳಲಾಗುವುದು. ಈ ಯೋಜನೆ ಬಗ್ಗೆ ಸಾಕಷ್ಟು ಜನ ಟೀಕೆ ಮಾಡಿದರು. ಆದರೆ ಇಂದು, ಟೀಕೆಗಳು ಸತ್ತಿವೆ ಕೆಲಸ ಮಾತ್ರ ಉಳಿದಿದೆ. ಈ ಯೋಜನೆಗೆ ಸಹಕಾರ ನೀಡಿದ ಎಲ್ಲಾ ಇಲಾಖೆ ಹಾಗೂ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದರು.

ಮಣ್ಣು ಅಗೆಯುವ ಕಾರ್ಮಿಕನಿಂದ ಹಿಡಿದು ಎಂಜಿನಿಯರ್‌ಗಳ ತನಕ ಉತ್ತಮ ಕೆಲಸ ಮಾಡಿದ್ದಾರೆ. ಸುಮಾರು ಒಂದುವರೆ ಕಿಲೋಮೀಟರ್ ದೂರ ಸುರಂಗ ಮಾರ್ಗದ ಮೂಲಕವೇ ನೀರು ಹೋಗುತ್ತಿದೆ. ರೈತರು ತಮ್ಮ ಭೂಮಿಯನ್ನು ಕೊಟ್ಟು ಸಹಕಾರ ನೀಡಿದ್ದಾರೆ. ನಾವು ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಬೇಕು. ಮುಖ್ಯಮಂತ್ರಿಗಳ ಬಳಿ ಮಾತನಾಡಿ ಉದ್ಘಾಟನಾ ದಿನಾಂಕವನ್ನು ಅಂತಿಮ ಮಾಡಲಾಗುವುದು ಎಂದು ಹೇಳಿದರು.

ಬುಧವಾರ ಸಂಜೆ ಕತ್ತಲಲ್ಲಿ ವೀಕ್ಷಣೆ ಮಾಡಿದ ಕಾರಣ ಸರಿಯಾಗಿ ಗಮನಿಸಲು ಆಗಿರಲಿಲ್ಲ. ಆದ ಕಾರಣ ಇಲ್ಲಿಯೇ ಉಳಿದುಕೊಂಡು ಮತ್ತೊಮ್ಮೆ ವೀಕ್ಷಣೆ ಮಾಡಿದೆ. ಅಧಿಕಾರಿಗಳಿಗೆ ಒಂದಷ್ಟು ಮಾರ್ಗದರ್ಶನ ನೀಡಿದೆ. ಉದ್ಘಾಟನಾ ಸ್ವರೂಪ, ಎಲ್ಲಿ ಉದ್ಘಾಟನೆ ಮಾಡಬೇಕು ಎಂಬುದನ್ನೂ ಚರ್ಚೆ ಮಾಡಲಾಯಿತು ಎಂದು ತಿಳಿಸಿದರು.

ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಸಂಜೆ ತೀರ್ಪು ಪ್ರಕಟ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ, ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಸಂಜೆ 4.30 ಕ್ಕೆ ಹೈಕೋರ್ಟ್ ವಿಭಾಗೀಯ ಪೀಠವು  ತೀರ್ಪು ಪ್ರಕಟಿಸಲಿದೆ.

ಇದನ್ನೂ ಓದಿ: Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

ಡಿಕೆ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ಸರ್ಕಾರದ ಪರ ಕಪಿಲ್ ಸಿಬಲ್ ವಾದ ಮಂಡಿಸಿದರು. ಯತ್ನಾಳ್ ಪರ ಹಿರಿಯ ವೆಂಕಟೇಶ ದಳವಾಯಿ ವಾದ ಮಂಡಿಸಿದರು. ಸಿಬಿಐ ಪರ ಹಿರಿಯ ವಕೀಲ ಪ್ರಸನ್ನಕುಮಾರ್ ವಾದ ಮಂಡಿಸಿದರು.

Continue Reading
Advertisement
Kannada New Movie
ಸಿನಿಮಾ3 mins ago

Kannada New Movie: ‘ಸರ್ವೇ ನಂಬರ್ 45’ ಚಿತ್ರೀಕರಣಕ್ಕೆ ಚಾಲನೆ

Spectrum Dress Fashion
ಫ್ಯಾಷನ್8 mins ago

Spectrum Dress Fashion: ಮಳೆಗಾಲದ ಫ್ಯಾಷನ್‌ಗೆ ಕಾಲಿಟ್ಟಿವೆ ಗ್ಲಾಮರಸ್‌ ಸಿಕ್ವೀನ್ಸ್ ರೆಟ್ರೊ ಸ್ಪೆಕ್ಟ್ರಮ್‌ ಡ್ರೆಸ್

Bomb Threat
ಕ್ರೈಂ26 mins ago

Bomb Threat: ನಗರದಲ್ಲಿ ಮತ್ತೆ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

Actor Darshan
ಬೆಂಗಳೂರು47 mins ago

Actor Darshan: ನಟ ದರ್ಶನ್ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಬೆಂಗಾವಲು ಪಡೆಗೆ ನೋಟಿಸ್!

Karwar Jail
ಕ್ರೈಂ55 mins ago

Karwar Jail: ನಟ ದರ್ಶನ್‌ಗೆ ಐಷಾರಾಮಿ ಸವಲತ್ತು! ಕಾರವಾರ ಜೈಲಿನಲ್ಲಿ ತಂಬಾಕಿಗೆ ಬೇಡಿಕೆ ಇಟ್ಟ ಖೈದಿಗಳಿಂದ ಗಲಾಟೆ

Shalini Rajaneesh
ಫ್ಯಾಷನ್59 mins ago

Shalini Rajaneesh: ಸೀರೆ, ಹಣೆಗೆ ಅಗಲವಾದ ರೆಡ್ ಬಿಂದಿ ಎಂದಿಗೂ ಬದಲಾಗದ ನನ್ನ ಯೂನಿಕ್ ಫ್ಯಾಷನ್ ಸ್ಟೇಟ್ಮೆಂಟ್!

karnataka Weather Forecast
ಮಳೆ1 hour ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

Namratha Gowda
ಕಿರುತೆರೆ1 hour ago

Namratha Gowda: ಕಪ್ಪು ಸೀರೆಯುಟ್ಟು ನೋಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ನಮ್ರತಾ ಗೌಡ

DK Shivakumar
ರಾಜಕೀಯ2 hours ago

DK Shivakumar: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ; ಸಿಬಿಐ, ಯತ್ನಾಳ್ ಅರ್ಜಿ ವಜಾ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

Viral News
ವೈರಲ್ ನ್ಯೂಸ್3 hours ago

Viral News: ಯುಪಿ ಸರ್ಕಾರದ ಆಫರ್‌; ಇದು ಕಾನೂನುಬದ್ಧ ಲಂಚ ಎಂದು ಪರ-ವಿರೋಧದ ಜಗಳಕ್ಕಿಳಿದ ಯೂಟ್ಯೂಬರ್ಸ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್9 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌